Tag: UNSC

  • ಪಿಓಕೆಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ – ವಿಶ್ವಸಂಸ್ಥೆಯಲ್ಲಿ ಪಾಕ್ ಕುಟುಕಿದ ಭಾರತ

    ಪಿಓಕೆಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ – ವಿಶ್ವಸಂಸ್ಥೆಯಲ್ಲಿ ಪಾಕ್ ಕುಟುಕಿದ ಭಾರತ

    ನವದೆಹಲಿ: ಪಾಕಿಸ್ತಾನ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಪ್ರದೇಶದಲ್ಲಿ ಸೇನೆಯ ವಿರುದ್ಧ ತೀವ್ರ ಪ್ರತಿಭಟನೆಗಳು ನಡೆಯುತ್ತಿದ್ದು, ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ (Human Rights Violation) ಎಂದು ಭಾರತ (India) ಖಂಡಿಸಿದೆ. ವಿಶ್ವಸಂಸ್ಥೆಯಲ್ಲಿ ಮಾತನಾಡಿದ ಭಾರತದ ಖಾಯಂ ಪ್ರತಿನಿಧಿ ಪರ್ವತನೇನಿ ಹರೀಶ್ (Parvathaneni Harish), ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (POK) ಕ್ರೌರ್ಯವನ್ನು ಕೊನೆಗೊಳಿಸಬೇಕೆಂದು ಕರೆ ನೀಡಿದರು.

    80ನೇ ವಿಶ್ವಸಂಸ್ಥೆಯ ದಿನದಂದು ಆಯೋಜಿಸಲಾದ ಮುಕ್ತ ಚರ್ಚೆಯ ಸಂದರ್ಭದಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯನ್ನು ಉದ್ದೇಶಿಸಿ ಮಾತನಾಡಿದ ಹರೀಶ್, ಪಾಕಿಸ್ತಾನವು ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಪ್ರದೇಶಗಳಲ್ಲಿ ನಡೆಯುತ್ತಿರುವ ಗಂಭೀರ ಮತ್ತು ನಡೆಯುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಕೊನೆಗೊಳಿಸಬೇಕೆಂದು ನಾವು ಪಾಕಿಸ್ತಾನವನ್ನು ಒತ್ತಾಯಿಸುತ್ತೇವೆ. ಪಾಕಿಸ್ತಾನದ ಮಿಲಿಟರಿ ಆಕ್ರಮಣ, ದಬ್ಬಾಳಿಕೆ, ಕ್ರೂರತೆ ಮತ್ತು ಸಂಪನ್ಮೂಲಗಳ ಅಕ್ರಮ ಶೋಷಣೆಯ ವಿರುದ್ಧ ಜನಸಂಖ್ಯೆಯು ಬಹಿರಂಗ ದಂಗೆಯಲ್ಲಿ ತೊಡಗಿದೆ ಎಂದರು. ಇದನ್ನೂ ಓದಿ: ಶಬರಿಮಲೆಯಲ್ಲಿ ಚಿನ್ನ ನಾಪತ್ತೆ ಪ್ರಕರಣಕ್ಕೆ ಬೆಂಗಳೂರು ಲಿಂಕ್‌ – ಬಳ್ಳಾರಿಯಲ್ಲಿ ಚಿನ್ನ ಮಾರಾಟ ಮಾಡಿರೋ ಶಂಕೆ

    ಜಮ್ಮು ಮತ್ತು ಕಾಶ್ಮೀರವು ಯಾವಾಗಲೂ ಭಾರತದ ಅವಿಭಾಜ್ಯ ಮತ್ತು ಬೇರ್ಪಡಿಸಲಾಗದ ಭಾಗವಾಗಿ ಉಳಿಯುತ್ತದೆ ಮತ್ತು ಇಲ್ಲಿನ ಜನರು ತಮ್ಮ ಮೂಲಭೂತ ಹಕ್ಕುಗಳನ್ನು ಆನಂದಿಸುತ್ತಾರೆ. ಅಂತಹ ಸ್ವಾತಂತ್ರ‍್ಯಗಳು ಪಾಕಿಸ್ತಾನದಲ್ಲಿ ಪರಕೀಯ ಎಂದು ಹೇಳಿದರು. ಇದನ್ನೂ ಓದಿ: ಬೆಂಗಳೂರು | ಸಿಲಿಂಡರ್‌ ಸ್ಫೋಟ – ಮನೆಯೇ ನೆಲಸಮ, ಓರ್ವ ಸಾವು

    ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವು ಭಾರತದ ಅವಿಭಾಜ್ಯ ಮತ್ತು ಬೇರ್ಪಡಿಸಲಾಗದ ಭಾಗವಾಗಿದೆ ಮತ್ತು ಯಾವಾಗಲೂ ಇರುತ್ತದೆ. ಜಮ್ಮು ಮತ್ತು ಕಾಶ್ಮೀರದ ಜನರು ಭಾರತದ ಕಾಲ-ಪರೀಕ್ಷಿತ ಪ್ರಜಾಪ್ರಭುತ್ವ ಸಂಪ್ರದಾಯಗಳು ಮತ್ತು ಸಾಂವಿಧಾನಿಕ ಚೌಕಟ್ಟಿನ ಅನುಸಾರವಾಗಿ ತಮ್ಮ ಮೂಲಭೂತ ಹಕ್ಕುಗಳನ್ನು ಚಲಾಯಿಸುತ್ತಾರೆ. ಇವು ಪಾಕಿಸ್ತಾನಕ್ಕೆ ಅನ್ಯವಾದ ಪರಿಕಲ್ಪನೆಗಳು ಎಂದು ನಮಗೆ ತಿಳಿದಿದೆ ಎಂದರು. ಇದನ್ನೂ ಓದಿ: ‌ಒಳ ಉಡುಪಿನಲ್ಲಿಟ್ಟುಕೊಂಡು ಚಿನ್ನ ಸಾಗಾಟ – ದೆಹಲಿ ಏರ್‌ಪೋರ್ಟ್‌ನಲ್ಲಿ ಮಹಿಳೆಯಿಂದ 1 ಕೆಜಿ ಗೋಲ್ಡ್‌ ಬಿಸ್ಕೆಟ್ ವಶಕ್ಕೆ

    ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಪ್ರತಿಭಟನಾಕಾರರ ಮೇಲೆ ಪಾಕಿಸ್ತಾನಿ ಸೇನೆ ಗುಂಡು ಹಾರಿಸಿದ ನಂತರ ಹಲವಾರು ನಾಗರಿಕರು ಸಾವನ್ನಪ್ಪಿದರು. ಜನರ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಫಲವಾದ ನಂತರ ಅಶಾಂತಿ ಭುಗಿಲೆದ್ದಿತು. ಜಂಟಿ ಅವಾಮಿ ಕ್ರಿಯಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆಗಳು ನಡೆದವು. ಮಾರುಕಟ್ಟೆಗಳು, ಅಂಗಡಿಗಳು ಮತ್ತು ಸಾರಿಗೆ ಸೇವೆಗಳು ಹಲವಾರು ದಿನಗಳವರೆಗೆ ಈ ಪ್ರದೇಶದಾದ್ಯಂತ ಮುಚ್ಚಲ್ಪಟ್ಟವು. ಇದನ್ನೂ ಓದಿ: ಪರೀಕ್ಷೆಯಲ್ಲಿ ಕಳಪೆ ಅಂಕ ಬಂತೆಂದು MBBS ವಿದ್ಯಾರ್ಥಿನಿ ಆತ್ಮಹತ್ಯೆ

  • ಪಹಲ್ಗಾಮ್ ದಾಳಿ ಹೊಣೆಯನ್ನ ಟಿಆರ್‌ಎಫ್ 2 ಬಾರಿ ಹೊತ್ತುಕೊಂಡಿದೆ: ವಿಶ್ವಸಂಸ್ಥೆ

    ಪಹಲ್ಗಾಮ್ ದಾಳಿ ಹೊಣೆಯನ್ನ ಟಿಆರ್‌ಎಫ್ 2 ಬಾರಿ ಹೊತ್ತುಕೊಂಡಿದೆ: ವಿಶ್ವಸಂಸ್ಥೆ

    – ಲಷ್ಕರ್ ಉಗ್ರ ಸಂಘಟನೆ ಬೆಂಬಲವಿಲ್ಲದೇ ಇದೆಲ್ಲ ಸಾಧ್ಯವೇ ಇಲ್ಲವೆಂದ ಭದ್ರತಾ ಮಂಡಳಿ

    ನವದೆಹಲಿ: ವಿಶ್ವಸಂಸ್ಥೆಯ ಭದ್ರತಾ ಮಂಡಳಿ (UNSC – ಯುನೈಟೆಡ್ ನೇಷನ್ಸ್ ಸೆಕ್ಯುರಿಟಿ ಕೌನ್ಸಿಲ್) ಬಿಡುಗಡೆ ಮಾಡಿರುವ ಇತ್ತೀಚಿನ ವರದಿಯೊಂದು, ಪಹಲ್ಗಾಮ್‌ ಭಯೋತ್ಪಾದಕ ದಾಳಿಯ (Pahalgam Attack) ಹೊಣೆಯನ್ನ ಉಗ್ರ ಸಂಘಟನೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (TRF) ಎರಡು ಬಾರಿ ಹೊತ್ತುಕೊಂಡಿದೆ ಎಂದು ಬಹಿರಂಗಪಡಿಸಲಾಗಿದೆ.

    ಈ ದಾಳಿಯ ಸ್ಥಳದ ಛಾಯಾಚಿತ್ರಗಳನ್ನ ಟಿಆರ್‌ಎಫ್‌ ತನ್ನ ಸೋಷಿಯಲ್‌ ಮೀಡಿಯಾಗಳಲ್ಲಿ ಪ್ರಕಟಿಸಿದ್ದು, ಈ ಕೃತ್ಯವನ್ನ ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ ಬೆಂಬಲ ಇಲ್ಲದೇ ಮಾಡಲು ಸಾಧ್ಯವಿಲ್ಲ ಎಂದು ವರದಿ ತಿಳಿಸಿದೆ. ಅಲ್ಲದೇ ಟಿಆರ್‌ಎಫ್‌ನ ಕಾರ್ಯತಂತ್ರದ ಬಗ್ಗೆಯೂ ವರದಿಯಲ್ಲಿ ವಿವರವಾಗಿ ತಿಳಿಸಲಾಗಿದೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ – ಪಹಲ್ಗಾಮ್‌ ಪಾತಕಿ ಬೆನ್ನಲ್ಲೇ ಮತ್ತಿಬ್ಬರು ಉಗ್ರರು ಎನ್‌ಕೌಂಟರ್‌

    ಸಂಘಟನೆಯು ದಾಳಿಯ ಫೋಟೊಗಳನ್ನು ಪ್ರಕಟಿಸುವ ಮೂಲಕ ತನ್ನ ಉಪಸ್ಥಿತಿಯನ್ನ ಖಚಿತಪಡಿಸಲ ಮತ್ತು ಭಯದ ವಾತಾವರಣ ಸೃಷ್ಟಿಸಲು ಯತ್ನಿಸಿದೆ. ಈ ದಾಳಿಯ ಜವಾಬ್ದಾರಿಯನ್ನ ಎರಡು ಬಾರಿ ಹೇಳಿಕೊಂಡಿರುವುದು, ಸಂಘಟನೆಯ ಉದ್ದೇಶಿತ ಯೋಜನೆಯ ಭಾಗವಾಗಿದೆ ಎಂಬ ಅಂಶವನ್ನು ಯುಎನ್‌ಎಸ್‌ಸಿ ಗಮನಿಸಿದೆ. ಇದರೊಂದಿಗೆ ಟಿಆರ್‌ಎಫ್‌ನ ಈ ಕೃತ್ಯವು ಸ್ಥಳೀಯ ಜನತೆ ಮತ್ತು ಪ್ರವಾಸಿಗರಲ್ಲಿ ಭಯ ಹುಟ್ಟಿಸುವ ಉದ್ದೇಶ ಹೊಂದಿತ್ತು ಎಂಬುದು ಸ್ಪಷ್ಟವಾಗಿದೆ ಎಂಬುದಾಗಿ ತಿಳಿದುಬಂದಿದೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ – ಪಹಲ್ಗಾಮ್‌ ಪಾತಕಿ ಬೆನ್ನಲ್ಲೇ ಮತ್ತಿಬ್ಬರು ಉಗ್ರರು ಎನ್‌ಕೌಂಟರ್‌

    ಯುಎನ್‌ಎಸ್‌ಸಿ ತನ್ನ ವರದಿಯಲ್ಲಿ, ಭಯೋತ್ಪಾದಕ ಸಂಘಟನೆಗಳ ವಿರುದ್ಧ ಅಂತಾರಾಷ್ಟ್ರೀಯ ಸಹಕಾರವನ್ನ ಬಲಪಡಿಸುವ ಅಗತ್ಯವನ್ನು ಒತ್ತಿಹೇಳಿದೆ. ಟಿಆರ್‌ಎಫ್‌ ನಂತಹ ಗುಂಪುಗಳು ಗಡಿಯಾಚೆಗಿನ ಭಯೋತ್ಪಾದನೆಯನ್ನು ಉತ್ತೇಜಿಸುತ್ತಿರುವುದರಿಂದ, ಇದನ್ನು ತಡೆಗಟ್ಟಲು ಸದಸ್ಯ ರಾಷ್ಟ್ರಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕೆಂದು ವರದಿಯು ಸೂಚಿಸಿದೆ. ಜೊತೆಗೆ, ಭಯೋತ್ಪಾದಕ ಗುಂಪುಗಳಿಗೆ ಆರ್ಥಿಕ ಸಹಾಯ, ಶಸ್ತ್ರಾಸ್ತ್ರ ಸರಬರಾಜು ಮತ್ತು ತರಬೇತಿಯನ್ನು ತಡೆಯಲು ಕಠಿಣ ಕಾನೂನುಗಳನ್ನು ಜಾರಿಗೊಳಿಸಬೇಕೆಂದು ಯುಎನ್‌ಎಸ್‌ಸಿ ಒತ್ತಾಯಿಸಿದೆ. ಇದನ್ನೂ ಓದಿ: ಇಂದಿರಾಗಾಂಧಿಯ ಅರ್ಧದಷ್ಟು ಧೈರ್ಯ ಇದ್ರೆ ಟ್ರಂಪ್‌ ಸುಳ್ಳುಗಾರ ಎಂದು ಮೋದಿ ಹೇಳಲಿ: ರಾಹುಲ್‌ ಗಾಂಧಿ ಸವಾಲ್‌

  • ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಖಾಯಂ ಸದಸ್ಯರಾಗಿ ಭಾರತವನ್ನು ಸೇರಿಸಿ: ಫ್ರಾನ್ಸ್ ಅಧ್ಯಕ್ಷ ಒತ್ತಾಯ

    ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಖಾಯಂ ಸದಸ್ಯರಾಗಿ ಭಾರತವನ್ನು ಸೇರಿಸಿ: ಫ್ರಾನ್ಸ್ ಅಧ್ಯಕ್ಷ ಒತ್ತಾಯ

    ನವದೆಹಲಿ: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಖಾಯಂ ಸದಸ್ಯರಾಗಿ ಭಾರತವನ್ನು ಸೇರಿಸುವಂತೆ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ (Emmanuel Macron) ಒತ್ತಾಯಿಸಿದ್ದಾರೆ. ಯುಎನ್‌ಎಸ್‌ಸಿಯನ್ನು (UNSC) ಹೆಚ್ಚು ಒಳಗೊಳ್ಳಲು ಮತ್ತು ಪ್ರತಿನಿಧಿಸಲು ಬ್ರೆಜಿಲ್, ಜಪಾನ್, ಜರ್ಮನಿ ಮತ್ತು ಆಫ್ರಿಕಾದ ಎರಡು ದೇಶಗಳ ಉಮೇದುವಾರಿಕೆಯನ್ನು ಬೆಂಬಲಿಸಬೇಕು ಎಂದು ಹೇಳಿದರು.

    ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಯುಎನ್ ಅನ್ನು ಇನ್ನಷ್ಟು ಹೆಚ್ಚು ಪರಿಣಾಮಕಾರಿಯಾಗಿ ಮಾಡಬೇಕಿದೆ. ಅದಕ್ಕಾಗಿಯೇ ಫ್ರಾನ್ಸ್, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯನ್ನು ವಿಸ್ತರಿಸುವ ಪರವಾಗಿದೆ. ಜರ್ಮನಿ, ಜಪಾನ್, ಭಾರತ (India) ಮತ್ತು ಬ್ರೆಜಿಲ್ ಖಾಯಂ ಸದಸ್ಯರಾಗಿರಬೇಕು. ಜೊತೆಗೆ ಆಫ್ರಿಕಾ ನಿರ್ಧರಿಸುವ ಎರಡು ದೇಶಗಳು ಅವರನ್ನು ಪ್ರತಿನಿಧಿಸಲು ಅವಕಾಶ ನೀಡಬೇಕು ಎಂದರು. ಇದನ್ನೂ ಓದಿ: ಇಸ್ರೇಲ್ ವೈಮಾನಿಕ ದಾಳಿ – ಹಿಬ್ಜುಲ್ಲಾ ಡ್ರೋನ್ ಘಟಕದ ಮುಖ್ಯಸ್ಥನ ಹತ್ಯೆ

    ಸದ್ಯ ಅಮೆರಿಕ, ಚೀನಾ, ರಷ್ಯಾ, ಫ್ರಾನ್ಸ್ ಮತ್ತು ಬ್ರಿಟನ್ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನವನ್ನು ಹೊಂದಿವೆ. ಅಮೆರಿಕಾ ಮತ್ತು ಫ್ರಾನ್ಸ್ ಸೇರಿದಂತೆ ಹಲವಾರು ದೇಶಗಳು ಭಾರತವನ್ನು ಈ ಪ್ರಬಲ ಗುಂಪಿನ ಭಾಗವಾಗಬೇಕೆಂದು ಪ್ರತಿಪಾದಿಸಿವೆ. ಆದರೆ, ಚೀನಾ ಇದಕ್ಕೆ ವಿರೋಧ ವ್ಯಕ್ತಪಡಿಸಿದೆ.

    ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಇದೇ ರೀತಿಯ ಭಾವನೆಯನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕ, ಭಾರತ, ಆಸ್ಟ್ರೇಲಿಯಾ ಮತ್ತು ಜಪಾನ್‌ನ ನಾಯಕರು ವಿಶ್ವಸಂಸ್ಥೆಯನ್ನು ಹೆಚ್ಚು ಪ್ರತಿನಿಧಿಸಲು ಸುಧಾರಣೆಯ ಅಗತ್ಯವಿದೆ ಎಂದು ಹೇಳಿದರು. ಶೃಂಗಸಭೆಯ ನಂತರ ನೀಡಿದ ಜಂಟಿ ಹೇಳಿಕೆಯಲ್ಲಿ ಹೆಚ್ಚಿನ ದೇಶಗಳ ಪ್ರಾತಿನಿಧ್ಯವನ್ನು ಸೇರಿಸಲು ಅದರ ವಿಸ್ತರಣೆಗೆ ಕರೆ ನೀಡಿದರು. ಇದನ್ನೂ ಓದಿ: ಕದನ ವಿರಾಮಕ್ಕೆ ಕ್ಯಾರೇ ಎನ್ನದ ಇಸ್ರೇಲ್‌ – ಪೂರ್ಣಪ್ರಮಾಣದ ಯುದ್ಧಕ್ಕೆ ಬೆಂಜಮಿನ್ ನೆತನ್ಯಾಹು ಕರೆ

    ಆಫ್ರಿಕಾ ಮತ್ತು ಲ್ಯಾಟಿನ್ ಅಮೆರಿಕದ ಸಂಪೂರ್ಣ ಖಂಡಗಳನ್ನು ನಿರ್ಲಕ್ಷಿಸಿದಾಗ ನಾವು ಅದನ್ನು ಜಾಗತಿಕ ದೇಹದ ಪ್ರಾಥಮಿಕ ಅಂಗವೆಂದು ಹೇಗೆ ಮಾತನಾಡಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಈ ಹಿಂದೆ ಪ್ರಶ್ನಿಸಿದ್ದರು. ಪ್ರಮುಖ ಪ್ರದೇಶಗಳನ್ನು ಕೈ ಬಿಟ್ಟು ಪ್ರಪಂಚದ ಪರವಾಗಿ ಮಾತನಾಡಲು ಹೇಗೆ ಸಾಧ್ಯ ಎಂದು ಕೇಳಿದ್ದರು. ಭಾರತವು ಎಂಟು ಬಾರಿ ಯುಎನ್ ಸೆಕ್ಯುರಿಟಿ ಕೌನ್ಸಿಲ್‌ನ ಶಾಶ್ವತವಲ್ಲದ ಸದಸ್ಯರಾಗಿ ಆಯ್ಕೆಯಾಗಿದೆ.

  • ಅಫ್ಘಾನ್ ಮಹಿಳೆಯರ ಮೇಲೆ ಕಠಿಣ ಕ್ರಮ – ವಿಶ್ವಸಂಸ್ಥೆಯ ಕರೆಗೆ ಕ್ಯಾರೇ ಅನ್ನದ ತಾಲಿಬಾನ್

    ಅಫ್ಘಾನ್ ಮಹಿಳೆಯರ ಮೇಲೆ ಕಠಿಣ ಕ್ರಮ – ವಿಶ್ವಸಂಸ್ಥೆಯ ಕರೆಗೆ ಕ್ಯಾರೇ ಅನ್ನದ ತಾಲಿಬಾನ್

    ವಾಷಿಂಗ್ಟನ್: ಅಫ್ಘಾನಿಸ್ತಾನದ ಮಹಿಳೆಯರ ಮೇಲೆ ತಾಲಿಬಾನ್ ವಿಧಿಸುತ್ತಿರುವ ಕಠಿಣ ನಿಯಮಗಳನ್ನು ತೆಗೆದು ಹಾಕಬೇಕೆಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿ(ಯುಎನ್‌ಎಸ್‌ಸಿ) ಕರೆಯನ್ನು ತಾಲಿಬನ್ ತಿರಸ್ಕರಿಸಿದೆ

    ಅಫ್ಘಾನಿಸ್ತಾನದ ಮಹಿಳೆಯರ ಮೇಲೆ ತಾಲಿಬಾನ್ ವಿಧಿಸುತ್ತಿರುವ ಕಟ್ಟುನಿಟ್ಟಿನ ಕ್ರಮಗಳಿಗೆ ಯುಎನ್‌ಎಸ್‌ಸಿ ಕಳವಳ ವ್ಯಕ್ತಪಡಿಸಿದ್ದು, ಇದನ್ನು ತಾಲಿಬಾನ್‌ನ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿರಸ್ಕರಿಸಿದೆ ಎಂದು ವರದಿಯಾಗಿದೆ.

    ಅಫ್ಘಾನಿಸ್ತಾನದ ಜನರು ಪ್ರಧಾನವಾಗಿ ಮುಸ್ಲಿಮರಾಗಿರುವುದರಿಂದ ನಮ್ಮ ಸರ್ಕಾರ ಇಸ್ಲಾಮಿಕ್ ಹಿಜಬ್ ಅನ್ನು ಸಮಾಜದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಆಚರಣೆಗಳಿಗೆ ಅನುಗುಣವಾಗಿ ಪರಿಗಣಿಸುತ್ತದೆ ಎಂದು ತಾಲಿಬಾನ್ ವಿದೇಶಾಂಗ ಸಚಿವಾಲಯದ ವಕ್ತಾರ ಅಬ್ದುಲ್ ಕಹರ್ ಬಾಲ್ಖಿ ಹೇಳಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದಿಂದ ಬಂದ ಶೇ.87 ಮಂದಿಗೆ ಭಾರತದ ಪೌರತ್ವ

    ಇತ್ತೀಚೆಗೆ ಭದ್ರತಾ ಮಂಡಳಿ ಅಫ್ಘಾನಿಸ್ತಾನದಲ್ಲಿ ಮಹಿಳೆಯರು ಹಾಗೂ ಹೆಣ್ಣು ಮಕ್ಕಳ ಮೂಲಭೂತ ಹಕ್ಕುಗಳನ್ನು ನಿರ್ಬಂಧಿಸುವ ನೀತಿಗಳನ್ನು ತಕ್ಷಣವೇ ತೆಗೆದುಹಾಕುವಂತೆ ತಾಲಿಬಾನ್‌ಗೆ ಸೂಚಿಸಿತ್ತು.

    ಅಫ್ಘಾನ್ ಮಹಿಳೆಯರ ಶಿಕ್ಷಣ, ಉದ್ಯೋಗ, ಚಳುವಳಿಯ ಸ್ವಾತಂತ್ರ್ಯ ಹಾಗೂ ಸಾರ್ವಜನಿಕ ಜೀವನದಲ್ಲಿ ಮಹಿಳೆಯರ ಭಾಗವಹಿಸುವಿಕೆಯ ಮೇಲೆ ತಾಲಿಬಾನ್ ವಿಧಿಸಿರುವ ನಿರ್ಬಂಧಗಳನ್ನು ಅನುಸರಿಸಿ ಅಲ್ಲಿನ ಹುಡುಗಿಯರು ಹಾಗೂ ಮಹಿಳೆಯರ ಬಗ್ಗೆ ಆಳವಾಗಿ ಕಳವಳ ವ್ಯಕ್ತಪಡಿಸಿರುವುದಾಗಿ ತಿಳಿಸಿತ್ತು. ಇದನ್ನೂ ಓದಿ: 1991ರ ಕಾಯಿದೆ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸುಪ್ರೀಂಕೋರ್ಟ್‍ಗೆ ಮತ್ತೊಂದು ಅರ್ಜಿ

    ಇತ್ತೀಚೆಗೆ ತಾಲಿಬಾನ್ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಹೇರಿದ ನಿರ್ಬಂಧ, ಕಟ್ಟುನಿಟ್ಟಿನ ಹಿಜಬ್ ಜಾರಿ ಹಾಗೂ ರಾಜಕೀಯರಂಗದಿಂದ ಮಹಿಳೆಯರನ್ನು ದೂರ ಉಳಿಸಿದ ಸಂದರ್ಭದಲ್ಲಿ ಭದ್ರತಾ ಮಂಡಳಿ ತಕ್ಷಣವೇ ವಿದ್ಯಾರ್ಥಿನಿಯರಿಗೆ ಶಾಲೆಗಳನ್ನು ತೆರೆಯಲು ಸೂಚನೆ ನೀಡಿತ್ತು.

  • ಉಕ್ರೇನ್ ವಿರುದ್ಧ ರಷ್ಯಾ ಯುದ್ಧ – ದಕ್ಷಿಣ ಏಷ್ಯಾ ರಾಷ್ಟ್ರಗಳು ಯಾರ ಪರ?

    ಉಕ್ರೇನ್ ವಿರುದ್ಧ ರಷ್ಯಾ ಯುದ್ಧ – ದಕ್ಷಿಣ ಏಷ್ಯಾ ರಾಷ್ಟ್ರಗಳು ಯಾರ ಪರ?

    ನವದೆಹಲಿ: ವಿಶ್ವಸಂಸ್ಥೆಯ ಸಾಮಾನ್ಯ ಅಧಿವೇಶನ(ಯುಎನ್‌ಜಿಎ)ದಲ್ಲಿ ಉಕ್ರೇನ್ ವಿರುದ್ಧ ರಷ್ಯಾ ನಡೆಸುತ್ತಿರುವ ಯುದ್ಧ ಖಂಡಿಸುವ ನಿರ್ಣಯದಿಂದ ಮತ್ತೆ ಭಾರತ ದೂರ ಉಳಿದಿದ್ದರೆ ಅಫ್ಘಾನಿಸ್ತಾನ, ನೇಪಾಳ ನಿರ್ಣಯದ ಪರವಾಗಿ ಮತವನ್ನು ಚಲಾಯಿಸಿವೆ.

    ರಷ್ಯಾ ವಿರುದ್ಧದ ನಿರ್ಣಯಕ್ಕೆ ಸಂಬಂಧಿಸಿದಂತೆ ಭಾರತ ಸೇರಿದಂತೆ 35 ರಾಷ್ಟ್ರಗಳು ತಟಸ್ಥ ಧೋರಣೆಯನ್ನು ಅನುಸರಿಸಿವೆ. ನಿರ್ಣಯದ ಪರವಾಗಿ 141 ದೇಶಗಳು ಇದ್ದರೆ, ವಿರುದ್ಧವಾಗಿ 5 ರಾಷ್ಟ್ರಗಳು ಮತ ಚಲಾಯಿಸಿವೆ. ನಿರ್ಣಯ ಮಂಡನೆಯಲ್ಲಿ 193 ಸದಸ್ಯ ರಾಷ್ಟ್ರಗಳು ಪಾಲ್ಗೊಂಡಿದ್ದವು. ತನ್ನ ಪರಮಾಣು ಪಡೆಗಳ ಸನ್ನದ್ಧತೆಯನ್ನು ಹೆಚ್ಚಿಸುವ ರಷ್ಯಾದ ನಿರ್ಧಾರವನ್ನು ಸಭೆಯಲ್ಲಿ ಖಂಡಿಸಲಾಯಿತು. ಇದನ್ನೂ ಓದಿ: ಪುಟಿನ್‍ನನ್ನು ಬಂಧಿಸಿದವರಿಗೆ 7.5 ಕೋಟಿ – ರಷ್ಯನ್ ಉದ್ಯಮಿ ಘೋಷಣೆ!

    ರಾಜಕೀಯ ಮಾತುಕತೆ, ಮಧ್ಯಸ್ಥಿಕೆ ಮತ್ತು ಇತರ ಶಾಂತಿಯುತ ವಿಧಾನಗಳ ಮೂಲಕ ರಷ್ಯಾ ಮತ್ತು ಉಕ್ರೇನ್ ನಡುವಿನ ಸಂಘರ್ಷ ತಕ್ಷಣದ ಶಾಂತಿಯುತ ಅಗತ್ಯ ಎಂದು ನಿರ್ಣಯದ ಪರವಾಗಿದ್ದ ರಾಷ್ಟ್ರಗಳು ಒತ್ತಿ ಹೇಳಿವೆ.

    ಕೆನಡಾ, ಫ್ರಾನ್ಸ್, ಜರ್ಮನಿ, ಜರ್ಮನಿ, ಐರ್ಲ್ಯಾಂಡ್, ಕುವೈತ್, ಸಿಂಗಾಪೂರ್, ಟರ್ಕಿ, ಉಕ್ರೇನ್, ಯುನೈಟೆಡ್ ಕಿಂಗ್‌ಡಮ್, ಯುನೈಟೆಡ್ ಸ್ಟೇಟ್ಸ್ ಸೇರಿದಂತೆ 141 ದೇಶಗಳು ರಷ್ಯಾ ವಿರುದ್ಧದ ಖಂಡನ ನಿರ್ಣಯದ ಪರವಾಗಿ ಮತ ಚಲಾಯಿಸಿದೆ. ಈ ರಾಷ್ಟ್ರಗಳ ಜೊತೆ ಭೂತನ್, ಅಫ್ಘಾನಿಸ್ತಾನ, ನೇಪಾಳ ನಿರ್ಣಯದ ಪರವಾಗಿ ಮತ ಚಲಾಯಿಸಿದೆ. ಭಾರತ, ಬಾಂಗ್ಲಾದೇಶ, ಪಾಕಿಸ್ತಾನ, ಶ್ರೀಲಂಕಾ, ಚೀನಾ ಸೇರಿದಂತೆ 35 ರಾಷ್ಟ್ರಗಳು ಮತವನ್ನು ಚಲಾಯಿಸದೇ ನಿರ್ಣಯದಿಂದ ದೂರ ಉಳಿದಿವೆ. ಇದನ್ನೂ ಓದಿ: ಯುದ್ಧ ವಿರೋಧಿ ರಷ್ಯನ್ನರ ಬಂಧನ- ಪುಟಿನ್‌ ರಷ್ಯಾದವನಲ್ಲ ಎಂದ ನಾವೆಲ್ನಿ

    ಕಳೆದ ಶುಕ್ರವಾರ ಇದೇ ರೀತಿ ನಿರ್ಣಯ ಮಂಡಿಸ ಭಾರತ ತಟಸ್ಥ ಧೋರಣೆ ಅನುಸರಿಸಿತ್ತು. ಈ ವೇಳೆ ನಿರ್ಣಯದ ಪರವಾಗಿ 11 ರಾಷ್ಟ್ರಗಳು ಮತ ಚಲಾಯಿಸಿದ್ದವು. ಆದರೆ ಭಾರತ, ಚೀನಾ ಸೇರಿದಂತೆ 3 ರಾಷ್ಟ್ರಗಳು ನಿರ್ಣಯದಿಂದ ದೂರ ಉಳಿದಿದ್ದವು.

  • ಈಗಲೂ ತಟಸ್ಥ ನೀತಿ ಸರಿಯಲ್ಲ: ಭಾರತದ ನಡೆಗೆ ಮನೀಶ್‌ ತಿವಾರಿ ಆಕ್ಷೇಪ

    ಈಗಲೂ ತಟಸ್ಥ ನೀತಿ ಸರಿಯಲ್ಲ: ಭಾರತದ ನಡೆಗೆ ಮನೀಶ್‌ ತಿವಾರಿ ಆಕ್ಷೇಪ

    ನವದೆಹಲಿ: ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆಯಲ್ಲಿ ರಷ್ಯಾ ವಿರುದ್ಧ ಮತ ಚಲಾಯಿಸದೇ ಭಾರತ ತಟಸ್ಥ ನೀತಿಯನ್ನು ಅನುಸರಿಸಿದ್ದಕ್ಕೆ ಕಾಂಗ್ರೆಸ್‌ ಮುಖಂಡ ಮನೀಶ್‌ ತಿವಾರಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ನಮ್ಮ ಕಷ್ಟಗಳಲ್ಲಿ ರಷ್ಯಾ ನಮ್ಮ ಬೆಂಬಲಕ್ಕೆ ನಿಂತಿದೆ. ಆದರೆ ಸ್ನೇಹಿತ ತಪ್ಪು ಮಾಡಿದರೆ, ನಾವು ಆತನನ್ನು ಸರಿಪಡಿಸಬೇಕು. ಒಂದು ಕಡೆ ಪ್ರಜಾಪ್ರಭುತ್ವವನ್ನು ಪ್ರತಿಪಾದಿಸುವ ರಾಷ್ಟ್ರಗಳು ಮತ್ತು ಇತರರು ನಿರಂಕುಶ ಮಾರ್ಗವನ್ನು ಬೆಂಬಲಿಸುವ ಸಂದರ್ಭದಲ್ಲಿ ಭಾರತ ತನ್ನ ಪಕ್ಷವನ್ನು ಆರಿಸಿಕೊಳ್ಳಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: Russia-Ukraine War – ಏನಿದು ರಷ್ಯಾ ಟ್ಯಾಂಕರ್‌ಗಳ ಮೇಲೆ Z ಮಾರ್ಕ್?

    ಭಾರತದ ಅಲಿಪ್ತ ಆಂದೋಲನ (NAM) ನೀತಿ 1991 ರಿಂದ ಕ್ರಮೇಣ ಕೊನೆಗೊಂಡಿದೆ. ಈಗಲೂ ಭಾರತವು ಅದೇ ನೀತಿಗೆ ಮರಳಲು ಯೋಚಿಸಿದರೆ ಅದು ತಪ್ಪಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನಿನ್ನೆ ಮದುವೆಯಾಗಿ ಇಂದು ದೇಶ ಸೇವೆಗೆ ಗನ್‌ ಹಿಡಿದ ದಂಪತಿ

    ಉಕ್ರೇನ್ ಮೇಲೆ ರಷ್ಯಾ ದಾಳಿಯನ್ನು ಖಂಡಿಸಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತೀಯ ಕಾಲಮಾನ ಶನಿವಾರ ನಸುಕಿನ ಜಾವ ಸಭೆ ಆಯೋಜಿಸಲಾಗಿತ್ತು. ಅಮೆರಿಕ ಮತ್ತು ಆಲ್ಬೇನಿಯಾ ಸಂಯುಕ್ತವಾಗಿ ಮಂಡಿಸಿದ ನಿರ್ಣಯದ ಮೇಲೆ ಮತದಾನ ನಡೆದಿತ್ತು.

    ಭಾರತ, ಚೀನಾ, ಯುಎಇ ದೇಶಗಳು ಮತದಾನದಿಂದ ದೂರ ಉಳಿದಿದ್ದರೆ ಪೋಲೆಂಡ್, ಇಟಲಿ, ನ್ಯೂಜಿಲೆಂಡ್ ಸೇರಿ 11 ದೇಶಗಳು ನಿರ್ಣಯದ ಪರವಾಗಿ ಮತ ಹಾಕಿವೆ. ರಷ್ಯಾ ದೇಶ ಊಹಿಸಿದಂತೆಯೇ ವಿಟೋ ಅಧಿಕಾರ ಚಲಾಯಿಸಿ, ನಿರ್ಣಯ ಪಾಸ್ ಆಗದಂತೆ ತಡೆದಿದೆ. ಈ ಬಗ್ಗೆ ಅಮೆರಿಕ ಆಕ್ರೋಶ ಹೊರಹಾಕಿದೆ. ಈ ವಿಚಾರವನ್ನು ಸಾಮಾನ್ಯ ಸಭೆಗೆ ಕೊಂಡೊಯ್ಯುವುದಾಗಿ ಘೋಷಿಸಿದೆ.

    ಈ ಬಿಕ್ಕಟ್ಟಿನ ಬಗ್ಗೆ ಮಾತನಾಡಿದ ಭಾರತದ ಶಾಶ್ವತ ರಾಯಭಾರಿ ತಿರುಮೂರ್ತಿ, ವಿವಾದ ಇತ್ಯರ್ಥಕ್ಕೆ ಚರ್ಚೆಯೊಂದೇ ಸಮಾಧಾನ. ಆದರೆ ಈ ಕ್ಷಣದಲ್ಲಿ ಅದು ಸಾಧ್ಯವಾಗಿಲ್ಲ. ಎರಡು ದೇಶಗಳು ರಾಜತಾಂತ್ರಿಕ ಮಾರ್ಗವನ್ನು ಕೈಬಿಟ್ಟಿದ್ದಕ್ಕೆ ವಿಷಾದವಿದೆ. ಸದ್ಯಕ್ಕೆ ಈ ಖಂಡನಾ ನಿರ್ಣಯದಿಂದ ದೂರ ಇರಲು ಭಾರತ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

  • ರಷ್ಯಾ ವಿರುದ್ಧದ UNSC ನಿರ್ಣಯದಿಂದ ದೂರ ಉಳಿದ ಭಾರತ – ಧನ್ಯವಾದ ತಿಳಿಸಿದ ರಷ್ಯಾ

    ರಷ್ಯಾ ವಿರುದ್ಧದ UNSC ನಿರ್ಣಯದಿಂದ ದೂರ ಉಳಿದ ಭಾರತ – ಧನ್ಯವಾದ ತಿಳಿಸಿದ ರಷ್ಯಾ

    ನವದೆಹಲಿ: ಉಕ್ರೇನ್‌ ವಿರುದ್ಧದ ರಷ್ಯಾ ಆಕ್ರಮಣವನ್ನು ಖಂಡಿಸುವ ಯುಎನ್‌ಎಸ್‌ಸಿ ನಿರ್ಣಯದಿಂದ ಭಾರತ ದೂರ ಉಳಿದಿದೆ. ರಷ್ಯಾ ವಿರುದ್ಧ 11 ರಾಷ್ಟ್ರಗಳು ನಿರ್ಣಯಕ್ಕೆ ಒಪ್ಪಿಗೆ ಸೂಚಿಸಿದರೆ, ಭಾರತ ಸೇರಿ ಮೂರು ರಾಷ್ಟ್ರಗಳು ನಿರ್ಣಯದಿಂದ ದೂರ ಉಳಿದು ತಟಸ್ಥ ನೀತಿ ಅನುಸರಿಸಿವೆ.

    ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ನಿರ್ಣಯ ಮಂಡಿಸಲಾಗಿತ್ತು. ಭಾರತ, ಚೀನಾ, ಯುಎಇ ಈ ಮೂರು ರಾಷ್ಟ್ರಗಳು ಯುಎನ್‌ಎಸ್‌ಸಿ ನಿರ್ಣಯದಿಂದ ದೂರ ಉಳಿದಿವೆ. ಆದರೆ 11 ರಾಷ್ಟ್ರಗಳು ರಷ್ಯಾ ವಿರುದ್ಧ ಮತ ಚಲಾಯಿಸಿವೆ. ಈ ವೇಳೆ ರಷ್ಯಾ ತನ್ನ ವಿಟೋ ಅಧಿಕಾರವನ್ನು ಬಳಸಿದೆ. ಇದನ್ನೂ ಓದಿ: ರಷ್ಯಾದ ಇಬ್ಬರು ಸೈನಿಕರನ್ನು ಸೆರೆ ಹಿಡಿದ ಉಕ್ರೇನ್‌ ಸೇನೆ

    ಅಮೆರಿಕ, ಅಲ್ಬೇನಿಯಾ ಸೇರಿದಂತೆ ಪೋಲ್ಯಾಂಡ್‌, ಇಟಲಿ, ಜರ್ಮನಿ, ಎಸ್ಟೋನಿಯಾ, ಲಕ್ಸೆಂಬರ್ಗ್‌, ಜರ್ಮನಿ ಸೇರಿದಂತೆ 11 ರಾಷ್ಟ್ರಗಳು ರಷ್ಯಾ ಆಕ್ರಮಣ ಖಂಡಿಸುವ ನಿರ್ಣಯಕ್ಕೆ ಒಪ್ಪಿಗೆ ಸೂಚಿಸಿವೆ.

    ಉಕ್ರೇನ್‌ನಲ್ಲಿನ ಇತ್ತೀಚಿನ ಬೆಳವಣಿಗೆಗಳಿಂದ ಭಾರತವು ವಿಚಲಿತವಾಗಿದೆ. ಹಿಂಸಾಚಾರ ಮತ್ತು ಹಗೆತನವನ್ನು ತಕ್ಷಣವೇ ನಿಲ್ಲಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಬೇಕೆಂದು ನಾವು ಒತ್ತಾಯಿಸುತ್ತೇವೆ. ಕೇವಲ ಪರಿಹಾರಗಳಿಂದಾಗಿ ನಾವು ಮನುಷ್ಯ ಜೀವಗಳಿಗೆ ಬೆಲೆ ಕೊಡಲು ಸಾಧ್ಯವಿಲ್ಲ ಎಂದು UN ರಾಯಭಾರದ ಭಾರತದ ಖಾಯಂ ಪ್ರತಿನಿಧಿ ಟಿ.ಎಸ್.ತಿರುಮೂರ್ತಿ ತಿಳಿಸಿದ್ದಾರೆ. ಇದನ್ನೂ ಓದಿ: ವಿಶ್ವವೇ ನಮ್ಮೊಂದಿಗಿದೆ, ಜಯ ನಮ್ಮದೆ: ಉಕ್ರೇನ್ ಅಧ್ಯಕ್ಷ

    ರಾಜತಾಂತ್ರಿಕತೆಯ ಹಾದಿ ಕೈಬಿಟ್ಟಿರುವುದು ವಿಷಾದದ ಸಂಗತಿ. ನಾವು ಮತ್ತೆ ಅದಕ್ಕೆ ಹಿಂತಿರುಗಬೇಕು. ಈ ಎಲ್ಲಾ ಕಾರಣಗಳಿಗಾಗಿ, ಭಾರತವು ಈ ನಿರ್ಣಯದಿಂದ ದೂರವಿರಲು ನಿರ್ಧರಿಸಿದೆ ಎಂದು ಸ್ಪಷ್ಟಪಡಿಸಿದ್ದಾರೆ.

    ಭಾರತವು ಎಲ್ಲಾ ಸದಸ್ಯ ರಾಷ್ಟ್ರಗಳಿಗೆ ಅಂತರರಾಷ್ಟ್ರೀಯ ಕಾನೂನು ಮತ್ತು ಯುಎನ್‌ ಚಾರ್ಟರ್‌ನ ತತ್ವಗಳನ್ನು ಗೌರವಿಸಲು ಕರೆ ನೀಡಿದೆ. ಭಾರತೀಯ ಸಮುದಾಯದ ಭದ್ರತೆ, ಉಕ್ರೇನ್‌ನಲ್ಲಿ ಸಿಕ್ಕಿರುವ ವಿದ್ಯಾರ್ಥಿಗಳನ್ನು ಅಲ್ಲಿಂದ ಸ್ಥಳಾಂತರಿಸುವುದು ತಕ್ಷಣದ ಆದ್ಯತೆಯಾಗಿದೆ. ಇದನ್ನೂ ಓದಿ: ಉಕ್ರೇನ್‌ ಯುದ್ಧ ಭೀಕರತೆ ನಡುವೆಯೂ ಹಸೆಮಣೆ ಏರಿ ಜೋಡಿ ಸಂಭ್ರಮ

    ಭಾರತಕ್ಕೆ ರಷ್ಯಾ ಧನ್ಯವಾದ
    ಯುಎನ್‌ಎಸ್‌ಸಿ ನಿರ್ಣಯದಿಂದ ದೂರ ಉಳಿದ ಭಾರತ ಸೇರಿ ಮೂರು ರಾಷ್ಟ್ರಗಳಿಗೆ ರಷ್ಯಾ ಧನ್ಯವಾದ ತಿಳಿಸಿದೆ. ರಷ್ಯಾ ವಿರುದ್ಧದ ಮತದಾನದಿಂದ ಭಾರತ, ಚೀನಾ, ಯುಎಇ ದೂರ ಉಳಿದಿದ್ದು, ತಟಸ್ಥವಾಗಿವೆ. ಹೀಗಾಗಿ ರಷ್ಯಾ ಕೃತಜ್ಞತೆ ಸಲ್ಲಿಸಿದೆ.

  • ಭದ್ರತಾ ಮಂಡಳಿ ಜೊತೆ ಎನ್‍ಎಸ್‍ಜಿಯಲ್ಲೂ ಭಾರತ ಇರಬೇಕು: ಬೈಡನ್

    ಭದ್ರತಾ ಮಂಡಳಿ ಜೊತೆ ಎನ್‍ಎಸ್‍ಜಿಯಲ್ಲೂ ಭಾರತ ಇರಬೇಕು: ಬೈಡನ್

    ವಾಷಿಂಗ್ಟನ್: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ(ಯುಎನ್‍ಎಸ್‍ಸಿ) ಭಾರತಕ್ಕೆ ಖಾಯಂ ಸದಸ್ಯತ್ವ ಕಲ್ಪಿಸಬೇಕು ಎಂಬ ಭಾರತದ ಬೇಡಿಕೆಗೆ ಈಗ ಮತ್ತಷ್ಟು ಬಲ ಬಂದಿದ್ದು ಅಮೆರಿಕ ಮತ್ತೆ ಬೆಂಬಲ ಘೋಷಿಸಿದೆ.

    ಆಗಸ್ಟ್‌ನಲ್ಲಿ ಯುಎನ್‍ಎಸ್‍ಸಿ ಅಧ್ಯಕ್ಷತೆ ವಹಿಸಿದ್ದ ಭಾರತ, ಅಫ್ಘಾನ್ ಬಿಕ್ಕಟ್ಟಿನ ಸಂದರ್ಭದಲ್ಲಿ ಸಮರ್ಥವಾಗಿ ಕೆಲಸ ಮಾಡಿದೆ. ಈ ಹಿನ್ನೆಲೆಯಲ್ಲಿ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಶಾಶ್ವತ ಸದಸ್ಯತ್ವ ನೀಡಬೇಕು ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ.

    ನರೇಂದ್ರ ಮೋದಿಯವರೊಂದಿಗಿನ ಮೊದಲ ವೈಯಕ್ತಿಕ ದ್ವಿಪಕ್ಷೀಯ ಸಭೆಯ ಬಳಿಕ ಶ್ವೇತ ಭವನ ಹೇಳಿಕೆ ಬಿಡುಗಡೆ ಮಾಡಿದೆ. ಭಾರತದ ಬಲವಾದ ನಾಯಕತ್ವವನ್ನು ಶ್ಲಾಘಿಸಿದ ಬೈಡನ್ ಪರಮಾಣು ಪೂರೈಕೆದಾರರ ಗುಂಪಿಗೂ(ಎನ್‍ಎಸ್‍ಜಿ) ಸೇರಲು ಬಯಸುತ್ತೇನೆ ಎಂದು ಹೇಳಿದ್ದಾರೆ.

    ಭದ್ರತಾ ಮಂಡಳಿಯ ತುರ್ತು ದೀರ್ಘಾವಧಿಯ ಬಾಕಿ ಇರುವ ಸುಧಾರಣೆಗೆ ಭಾರತ ಮೊದಲಿನಿಂದಲೂ ಆಗ್ರಹಿಸುತ್ತಿದೆ. ಪ್ರಸ್ತುತ ಈಗ ಅಮೆರಿಕ, ಚೀನಾ, ರಷ್ಯಾ, ಇಂಗ್ಲೆಂಡ್, ಫ್ರಾನ್ಸ್ ಸದಸ್ಯ ರಾಷ್ಟ್ರಗಳಾಗಿದ್ದು ವಿಶೇಷ ವಿಟೋ ಅಧಿಕಾರವನ್ನು ಹೊಂದಿದೆ. ಇದನ್ನೂ ಓದಿ: ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನಕ್ಕೆ ಪರೋಕ್ಷ ಎಚ್ಚರಿಕೆ ನೀಡಿದ ಪ್ರಧಾನಿ ಮೋದಿ 

    ಇಂದು ಜಗತ್ತು ಬದಲಾಗುತ್ತಿರುವ ಹಿನ್ನೆಲೆಯಲ್ಲಿ 5 ರಾಷ್ಟ್ರಗಳ ಜೊತೆ ಬಲಾಢ್ಯ ರಾಷ್ಟ್ರಗಳಿಗೂ ಸದಸ್ಯ ಸ್ಥಾನ ನೀಡಬೇಕೆಂಬ ಆಗ್ರಹ ಕೇಳಿಬಂದಿದೆ. ಭಾರತ ಅಲ್ಲದೇ ಜಪಾನ್, ಬ್ರೆಜೆಲ್, ಜರ್ಮನಿಯೂ ತಮಗೆ ಸ್ಥಾನ ನೀಡಬೇಕೆಂದು ಬೇಡಿಕೆ ಇಟ್ಟಿದೆ.

  • ವಿಶ್ವಸಂಸ್ಥೆಯಲ್ಲಿ ಪಾಕ್‍ಗೆ ಭಾರೀ ಮುಖಭಂಗ – ಅಕ್ಬರುದ್ದೀನ್ ಉತ್ತರಕ್ಕೆ ಪಾಕ್ ಪತ್ರಕರ್ತರು ಕಕ್ಕಾಬಿಕ್ಕಿ

    ವಿಶ್ವಸಂಸ್ಥೆಯಲ್ಲಿ ಪಾಕ್‍ಗೆ ಭಾರೀ ಮುಖಭಂಗ – ಅಕ್ಬರುದ್ದೀನ್ ಉತ್ತರಕ್ಕೆ ಪಾಕ್ ಪತ್ರಕರ್ತರು ಕಕ್ಕಾಬಿಕ್ಕಿ

    ನ್ಯೂಯಾರ್ಕ್: ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿದ ಭಾರತದ ಕ್ರಮವನ್ನು ವಿರೋಧಿಸಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ದೂರು ಸಲ್ಲಿಸಿದ್ದ ಪಾಕಿಸ್ತಾನಕ್ಕೆ ಭಾರೀ ಮುಖಭಂಗವಾಗಿದೆ.

    ಜಮ್ಮು-ಕಾಶ್ಮೀರ ವಿಚಾರದಲ್ಲಿ ಭಾರತದ ಸರ್ಕಾರ ಕೈಗೊಂಡ ನಿರ್ಧಾರದ ಕುರಿತು ಚರ್ಚಿಸಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶುಕ್ರವಾರ ಗೌಪ್ಯ ಸಭೆ ನಡೆಸಲಾಯಿತು. ಶಿಷ್ಟಾಚಾರದಂತೆ ಹಾರ್ಸ್ ಶೂ ಟೇಬಲ್‍ನಲ್ಲಿ ಸಭೆಯನ್ನು ನಡೆಸಬೇಕು. ಆದರೆ ಈ ಸಭೆಯು ಭದ್ರತಾ ಮಂಡಳಿಯ ಸಮಾಲೋಚನಾ ಕೊಠಡಿಯಲ್ಲಿ ಅನೌಪಚಾರಿಕವಾಗಿ ನಡೆಯಿತು.

    ಕಾಶ್ಮೀರ ಕಣಿವೆಯಲ್ಲಿ ಮಾನವಹಕ್ಕುಗಳ ದಮನವಾಗುತ್ತಿದೆ. ಆ ಪ್ರದೇಶದಲ್ಲಿನ ಉದ್ವಿಗ್ನ ಪರಿಸ್ಥಿತಿ ತುಂಬಾ ಅಪಾಯಕಾರಿ ಎಂದು ಚೀನಾ ಸಭೆಯಲ್ಲಿ ಆತಂಕ ವ್ಯಕ್ತಪಡಿಸುವ ಮೂಲಕ ಪಾಕ್ ಪರ ಬ್ಯಾಟ್ ಬೀಸಿತ್ತು.

    ಭಾರತ ಉಪಖಂಡದಲ್ಲಿ ಯುದ್ಧದ ಪರಿಸ್ಥಿತಿ ನಿರ್ಮಾಣವಾಗದಂತೆ ಎಚ್ಚರವಹಿಸಿ. ಮಾತುಕತೆ ಮೂಲಕ ಜಮ್ಮು-ಕಾಶ್ಮೀರ ವಿವಾದವನ್ನು ಬಗೆಹರಿಸಿಕೊಳ್ಳಿ ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸದಸ್ಯ ರಾಷ್ಟ್ರಗಳು ಭಾರತ ಮತ್ತು ಪಾಕಿಸ್ತಾನಕ್ಕೆ ಸಲಹೆ ನೀಡಿವೆ. ಜೊತೆಗೆ ಈ ಸಭೆಯಲ್ಲಿ ಪಾಕಿಸ್ತಾನದ ಬೆಂಬಲಕ್ಕೆ ಕೇವಲ ಚೀನಾ ಮಾತ್ರ ನಿಂತಿತ್ತು. ಆದರೆ ಭಾರತದ ಪರ ರಷ್ಯಾ, ಫ್ರಾನ್ಸ್, ಇಂಗ್ಲೆಂಡ್, ಅಮೆರಿಕ ನಿಂತಿತ್ತು.

    ಈ ಸಭೆಗೆ ತೆರಳುವ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ರಷ್ಯಾದ ಉಪ ಶಾಶ್ವತ ಪ್ರತಿನಿಧಿ ಡಿಮಿಟ್ರಿ ಪೋಲ್ಯಾನ್‍ಸ್ಕಿ ಅವರು, ಕಾಶ್ಮೀರ ವಿಷಯ ಭಾರತ ಮತ್ತು ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸಮಸ್ಯೆ. ಅದನ್ನು ಎರಡು ರಾಷ್ಟ್ರಗಳು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಹೇಳಿದ್ದರು.

    ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿರುವುದು ಭಾರತದ ಆಂತರಿಕ ವಿಷಯ. ಆ ಪ್ರದೇಶಗಳ ಅಭಿವೃದ್ಧಿಗೆ ಪೂರಕವಾಗಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಇದರಿಂದ ಯಾವುದೇ ಪರಿಣಾಮ ಉಂಟಾಗುವುದಿಲ್ಲ. ಆದರೂ ಚೀನಾ ಈ ವಿಚಾರವನ್ನು ಜಾಗತಿಕ ಮಟ್ಟದಲ್ಲಿ ಪ್ರಸ್ತಾಪಿಸುತ್ತಿದೆ. ಚೀನಾ ಅಭಿಪ್ರಾಯವು ಜಾಗತಿಕ ಅಭಿಪ್ರಾಯವಲ್ಲ ಎಂದು ವಿಶ್ವಸಂಸ್ಥೆಯಲ್ಲಿನ ಭಾರತದ ಶಾಶ್ವತ ಪ್ರತಿನಿಧಿ ರಾಯಭಾರಿ ಸೈಯದ್ ಅಕ್ಬರುದ್ದೀನ್ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಒಟ್ಟು 5 ಪ್ರಶ್ನೆಗಳಿಗೆ ಉತ್ತರಿಸಿದ ಅಕ್ಬರುದ್ದೀನ್ ಅವರ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅದರಲ್ಲೂ ಪಾಕ್ ಪತ್ರಕರ್ತ ರಿಗೆ ಶೇಕ್ ಹ್ಯಾಂಡ್ ಮಾಡಿ ವ್ಯಂಗ್ಯವಾಗಿ ಕುಟುಕಿದ ವಿಡಿಯೋಗೆ ಭಾರತೀಯರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

    50 ವರ್ಷಗಳಲ್ಲಿಯೇ ಇದೇ ಮೊದಲ ಬಾರಿಗೆ ಕಾಶ್ಮೀರಕ್ಕೆ ಸಂಬಂಧಿಸಿದಂತೆ ಈ ರೀತಿಯ ಸಭೆ ನಡೆದಿತ್ತು‌.