ಲಕ್ನೋ: ಉತ್ತರ ಪ್ರದೇಶದಲ್ಲಿ ‘ಐ ಲವ್ ಮುಹಮ್ಮದ್’ (I Love Muhammad) ಉಲ್ಬಣಗೊಂಡಿದೆ. ರಾಯಬರೇಲಿಯಲ್ಲಿ (Bareilly) ಪ್ರತಿಭಟನೆ ವೇಳೆ ಕಲ್ಲೆಸೆತವಾಗಿದ್ದು, ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ.
ಶುಕ್ರವಾರದ ಪ್ರಾರ್ಥನೆ ಬಳಿಕ ಪ್ರತಿಭಟನೆ ಶುರುವಾಗಿದೆ. ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದಾಗ ಲಾಠಿಚಾರ್ಜ್ ಮಾಡಲಾಗಿದೆ. ಪರಿಸ್ಥಿತಿ ಉದ್ವಿಗ್ನವಾದ ಹಿನ್ನೆಲೆ ಭದ್ರತೆ ಆರ್‌ಎಎಫ್ ಮತ್ತು ಪಿಎಸಿ ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ: ಸೆಕ್ಷನ್ 498 ಎ ಅತ್ಯಂತ ಕಠಿಣ ಸೆಕ್ಷನ್, ಹಲವು ಸುಳ್ಳು ಕೇಸ್‌ಗಳನ್ನು ರದ್ದು ಮಾಡಿದ್ದೇವೆ: ಸುಪ್ರೀಂ
ಸೆ.4 ರಂದು ‘ಐ ಲವ್ ಮುಹಮ್ಮದ್’ ಪೋಸ್ಟರ್ ಹೊಂದಿರುವ ಟೆಂಟ್ ಅನ್ನು ಪೊಲೀಸರು ತೆಗೆಸಿದ್ದರು. ನಂತರ ಕಾನ್ಪುರದಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಧ್ವನಿ ಎತ್ತಲು ಮತ್ತು ಜ್ಞಾಪಕ ಪತ್ರವನ್ನು ಸಲ್ಲಿಸಲು ಧರ್ಮಗುರುವೊಬ್ಬರು ಕರೆ ನೀಡಿದ್ದರು. ಶುಕ್ರವಾರದ ಪ್ರಾರ್ಥನೆಯ ನಂತರ ಬರೇಲಿಯ ಇಸ್ಲಾಮಿಯಾ ಮೈದಾನದ ಬಳಿ ಭಾರಿ ಜನಸಮೂಹ ಜಮಾಯಿಸಿತ್ತು.
ಕೆಲವರು ಆಕ್ಷೇಪಾರ್ಹ ಘೋಷಣೆಗಳನ್ನು ಕೂಗುತ್ತಿದ್ದಂತೆ ಜನಸಮೂಹ ಹೆಚ್ಚುತ್ತಲೇ ಇತ್ತು. ಕೆಲವು ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ನಂತರ, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿಪ್ರಹಾರ ನಡೆಸಿದರು.
ಉನ್ನತ ಅಧಿಕಾರಿಗಳು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಬರೇಲಿಯಲ್ಲಿ ಸಾಮಾನ್ಯ ಸ್ಥಿತಿಗೆ ಅಡ್ಡಿಪಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬರೇಲಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಇದನ್ನೂ ಓದಿ: ಭಾರತದ 38 ಬ್ಯಾಂಕುಗಳ ಮೂರು ಲಕ್ಷ ವಹಿವಾಟುಗಳ ದತ್ತಾಂಶ ಲೀಕ್?
ಸೆ.4 ರಂದು ಕಾನ್ಪುರದಲ್ಲಿ ಈದ್-ಎ-ಮಿಲಾದ್-ಉನ್-ನಬಿ ಮೆರವಣಿಗೆಯ ಸಂದರ್ಭದಲ್ಲಿ, ಮಾರ್ಗದುದ್ದಕ್ಕೂ ಟೆಂಟ್‌ನಲ್ಲಿ ‘ಐ ಲವ್ ಮುಹಮ್ಮದ್’ ಪೋಸ್ಟರ್ ಹಾಕಲಾಗಿತ್ತು. ಇದು ಗಲಾಟೆಗೆ ಕಾರಣವಾಗಿದೆ.

















