ವಡೋದರಾ: ಕೊನೆವರೆಗೂ ರೋಚಕತೆಯಿಂದ ಕೂಡಿದ್ದ ಪಂದ್ಯದಲ್ಲಿ ಯುಪಿ ವಾರಿಯರ್ಸ್ (UP Warriors) ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡ 7 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ.
ಟಾಸ್ ಗೆದ್ದ ಡೆಲ್ಲಿ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್‌ಗೆ ಇಳಿದ ಯುಪಿ ವಾರಿಯರ್ಸ್ ತಂಡ 7 ವಿಕೆಟ್ ನಷ್ಟಕ್ಕೆ 166 ರನ್ ಗಳಿಸಿ, ಡೆಲ್ಲಿಗೆ 167 ರನ್‌ಗಳ ಟಾರ್ಗೆಟ್ ನೀಡಿತು. ಇದನ್ನೂ ಓದಿ: ಕೊಪ್ಪಳ| ನದಿಯಲ್ಲಿ ಈಜಲು ಹೋಗಿ ಹೈದರಾಬಾದ್‌ನ ವೈದ್ಯೆ ಸಾವು
ಯುಪಿ ವಾರಿಯರ್ಸ್ ನೀಡಿದ ಗುರಿ ಬೆನ್ನಟ್ಟಿದ ಡೆಲ್ಲಿ ಟೀಂ ಕೇವಲ ಒಂದು ಬಾಲ್ ಬಾಕಿ ಇರುವಾಗಲೇ ಗುರಿ ತಲುಪಿತು. ತಂಡದ ನಾಯಕಿ ಮೆಗ್ ಲ್ಯಾನಿಂಗ್ 12 ಫೋರ್ ಬಾರಿಸುವ ಮೂಲಕ 49 ಬಾಲ್‌ಗೆ 69 ರನ್ ಗಳಿಸಿದರು. ಲ್ಯಾನಿಂಗ್ ಮತ್ತು ಶೆಫಾಲಿ ವರ್ಮಾ 42 ಬಾಲ್‌ಗೆ 65 ರನ್‌ಗಳ ಜೊತೆಯಾಟವಾಡಿ ತಂಡದ ಗೆಲುವಿಗೆ ಅಡಿಪಾಯ ಹಾಕಿದರು. ಸದರ್ಲ್ಯಾಂಡ್ 35 ಎಸೆತಕ್ಕೆ 42 ರನ್ ಬಾರಿಸಿದರೆ, ಕಾಪ್ 17 ಬಾಲ್‌ಗೆ 29 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಇದನ್ನೂ ಓದಿ: ಲಾಥಮ್ – ಯಂಗ್ ಶತಕಗಳ ಅಬ್ಬರಕ್ಕೆ ಪಾಕ್ ಪಂಚರ್; ನ್ಯೂಜಿಲೆಂಡ್‌ಗೆ 60 ರನ್‌ಗಳ ಭರ್ಜರಿ ಜಯ
ಮೊದಲು ಬ್ಯಾಟಿಂಗ್ ಮಾಡಿದ ಯುಪಿ ತಂಡದ ಕಿರಣ್ ನವ್ಗಿರೆ 6 ಫೋರ್ ಹಾಗೂ 3 ಸಿಕ್ಸ್ ಬಾರಿಸಿ 27 ಎಸೆತಕ್ಕೆ 51 ರನ್ ಗಳಿಸಿ ಗಮನ ಸೆಳೆದಿದ್ದರು. ದಿನೇಶ್ ವೃಂದ 16 ರನ್ ಕಲೆ ಹಾಕಿದರೆ, ನಾಯಕಿ ದೀಪ್ತಿ ಶರ್ಮಾ ಕೇವಲ 7 ರನ್ ಗಳಿಸಿ ಪೆವಿಲಿಯನ್ ಪೆರೇಡ್ ನಡೆಸಿ ನಿರಾಸೆ ಮೂಡಿಸಿದರು. ಶ್ವೇತಾ ಸೆಹ್ರಾವತ್ 37 ಹಾಗೂ ಚಿನೆಲ್ಲೆ ಹೆನ್ರಿ 33 ರನ್ ಗಳಿಸಿ ತಂಡದ ಮೊತ್ತವನ್ನು 166 ಕ್ಕೇರಿಸಿದರು. ಇದನ್ನೂ ಓದಿ: ಹೆತ್ತ ತಾಯಿಯ ಮೇಲೆ ಹಲ್ಲೆ ಆರೋಪ – ಸಬ್ ಇನ್ಸ್‌ಪೆಕ್ಟರ್ ವಿರುದ್ಧ ಎಫ್‌ಐಆರ್ ದಾಖಲು
ವಡೋದರಾ: ಇಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್‌ನ (WPL) 3ನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ (Gujarat Giants) ತಂಡ ಯುಪಿ ವಾರಿಯರ್ಸ್ (UP Warriorz) ತಂಡದ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯಗಳಿಸಿತು.
ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಜೈಂಟ್ಸ್ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಂಟಿಂಗ್‌ಗೆ ಇಳಿದ ಯುಪಿ ವಾರಿಯರ್ಸ್ ತಂಡ 9 ವಿಕೆಟ್ ನಷ್ಟಕ್ಕೆ 143 ರನ್ ಗಳಿಸಿ ಗುಜರಾತ್ ತಂಡಕ್ಕೆ 144 ರನ್ ಗಳ ಗುರಿ ನೀಡಿತು.
144 ರನ್‌ಗಳ ಗುರಿ ಬೆನ್ನಟ್ಟಿದ ಗುಜರಾತ್ ತಂಡ 4 ವಿಕೆಟ್ ನಷ್ಟಕ್ಕೆ 144 ರನ್ ಗಳಿಸಿ ಗೆಲುವು ಕಂಡಿತು. ಗುಜರಾತ್ ತಂಡದ ನಾಯಕಿ ಆಶ್ಲೇ ಗಾರ್ಡ್ನರ್ 5 ಫೋರ್ ಹಾಗೂ 3 ಸಿಕ್ಸ್ ಸಿಡಿಸುವ ಮೂಲಕ 29 ಎಸೆತಗಳಿಗೆ ಅರ್ಧಶತಕ ಬಾರಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಒಟ್ಟು 32 ಎಸೆತಗಳಿಗೆ 52 ರನ್ ಗಳಿಸಿ ಆಶ್ಲೇ ಗಾರ್ಡ್ನರ್ ವಿಕೆಟ್ ಒಪ್ಪಿಸಿದರು. ಕೊನೆಯಲ್ಲಿ ಹರ್ಲಿನ್ ಡಿಯೋಲ್ ಅಯೇಜ 34 ರನ್, ಡಿಯಾಂಡ್ರ ಡಾಟಿನ್ ಅಜೇಯ 33 ರನ್ ಜವಾಬ್ದಾರಿಯುತ ಬ್ಯಾಟಿಂಗ್‌ನೊಂದಿಗೆ ತಂಡವನ್ನು ಗೆಲ್ಲಿಸುವಲ್ಲಿ ಯಶಸ್ವಿಯಾದರು.
ಇದಕ್ಕೂ ಮುನ್ನ ಬ್ಯಾಟಿಂಗ್ ಆಡಿದ ಯುಪಿ ವಾರಿಯರ್ಸ್ ತಂಡದ ನಾಯಕಿ ದೀಪ್ತಿ ಶರ್ಮ ಆರು ಫೋರ್ ಸಿಡಿಸಿ ತಂಡವನ್ನು ಮುನ್ನಡೆಸಿದರು. ಈ ಮೂಲಕ 27 ಎಸೆತಗಳಿಗೆ 39 ರನ್ ಗಳಿಸಿ ದೀಪ್ತಿ ವಿಕೆಟ್ ಒಪ್ಪಿಸಿದರು. ಉಮಾ ಚೇಟ್ರಿ 4 ಫೋರ್ ಸಿಡಿಸಿ 27 ಎಸೆತಗಳಿಗೆ 24 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರು. ಅಲಾನ ಕಿಂಗ್ 14 ಬಾಲ್‌ಗಳಿಗೆ 19 ರನ್‌ಗಳಿಸಿ ಔಟಾಗದೇ 20 ಓವರ್ ಮುಗಿಸಿದರು.
– ಬ್ಯಾಟಿಂಗ್‌ನಲ್ಲಿ ಕೈಕೊಟ್ಟ ಮಂಧಾನ, ಸೋಭಾನ ಆಶಾ ಸ್ಪಿನ್ ಜಾದು
ಬೆಂಗಳೂರು: ಸೋಭಾನ ಆಶಾ (Sobhana Asha) ಸ್ಪಿನ್ ಜಾದು ಹಾಗೂ ರಿಚಾ ಘೋಷ್, ಮೇಘನಾ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಯುಪಿ ವಾರಿಯರ್ಸ್ (UP Warriorz) ವಿರುದ್ಧ 2 ರನ್‌ಗಳ ರೋಚಕ ಜಯ ಸಾಧಿಸಿತು. ಮೊದಲ ಆವೃತ್ತಿಯ ಆರಂಭಿಕ ಪಂದ್ಯಗಳಲ್ಲಿ ಫ್ಲಾಪ್ ಪ್ರದರ್ಶನ ನೀಡಿದ್ದ ಆರ್‌ಸಿಬಿ (RCB) ತಂಡ ಈ ಬಾರಿ ಆರಂಭಿಕ ಪಂದ್ಯದಲ್ಲೇ ಗೆಲುವು ಸಾಧಿಸಿ, ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟಿದೆ.
ಕೊನೆಯ ಓವರ್‌ನಲ್ಲಿ ಯುಪಿ ವಾರಿಯರ್ಸ್ ಗೆಲುವಿಗೆ 11 ರನ್‌ಗಳ ಅಗತ್ಯವಿತ್ತು. ಕ್ರೀಸ್‌ನಲ್ಲಿದ್ದ ಸೋಫಿ ಎಕ್ಲೆಸ್ಟೋನ್ ಹಾಗೂ ದೀಪ್ತಿ ಶರ್ಮಾ ಜೋಡಿ ಮೊದಲ 4 ಎಸೆತಗಳಲ್ಲಿ ಕೇವಲ 2 ರನ್ ಕಲೆಹಾಕಿತು. 5ನೇ ಎಸೆತದಲ್ಲಿ ದೀಪ್ತಿ ಶರ್ಮಾ ಬೌಂಡರಿ ಬಾರಿಸಿದರು. ಕೊನೇ ಎಸೆತದಲ್ಲಿ 5 ರನ್ ಅಗತ್ಯವಿದ್ದಾಗ ಸೂಪರ್ ಓವರ್ ನಿರೀಕ್ಷಿಸಲಾಗಿತ್ತು. ಆದ್ರೆ ಬೌಲಿಂಗ್‌ನಲ್ಲಿದ್ದ ಸೋಫಿ ಮೊಲಿನೆಕ್ಸ್ 2 ರನ್ ಮಾತ್ರ ಬಿಟ್ಟುಕೊಟ್ಟಿದ್ದರಿಂದ ಆರ್‌ಸಿಬಿ 2 ರನ್‌ಗಳ ರೋಚಕ ಜಯ ಸಾಧಿಸಿತು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 157 ರನ್ ಗಳಿಸಿತ್ತು. 158 ರನ್‌ಗಳ ಗುರಿ ಬೆನ್ನತ್ತಿದ ಯುಪಿ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 155 ರನ್ ಗಳಿಸಿ ಸೋಲೊಪ್ಪಿಕೊಂಡಿತು. ಸಾಧಾರಣ ಮೊತ್ತದ ಚೇಸಿಂಗ್ ಆರಂಭಿಸಿದ ಯುಪಿ ವಾರಿಯರ್ಸ್ ನಿಧಾನಗತಿಯಲ್ಲೇ ಬ್ಯಾಟಿಂಗ್ ಆರಂಭಿಸಿತ್ತಲ್ಲದೇ 8.3 ಓವರ್‌ಗಳಲ್ಲೇ 49 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಆದ್ರೆ ಮಧ್ಯಮ ಕ್ರಮಾಂಕದಲ್ಲಿ ಜೊತೆಗೂಡಿದ ಗ್ರೇಸ್ ಹ್ಯಾರಿಸ್, ಶ್ವೇತಾ ಸೆಹ್ರಾವತ್ ಜೋಡಿ 46 ಎಸೆತಗಳಲ್ಲಿ 77 ರನ್‌ಗಳ ಜೊತೆಯಾಟ ನೀಡಿತ್ತು. ಈ ವೇಳೆ ಸ್ಪಿನ್ ದಾಳಿ ನಡೆಸಿದ ಸೋಭಾನ ಆಶಾ ಇವರಿಬ್ಬರ ಆಟಕ್ಕೆ ಬ್ರೇಕ್ ಹಾಕಿದ್ರು. ಗ್ರೇಸ್ ಹ್ಯಾರಿಸ್ 38 ರನ್ ಗಳಿಸಿ ಪೆವಿಲಿಯನ್‌ಗೆ ಮರಳುತ್ತಿದ್ದಂತೆ, ಸೆಹ್ರಾವತ್ ಸಹ ವಿಕೆಟ್ ಕೈಚೆಲ್ಲಿದರು. ಆ ನಂತರ ಗೆಲುವು ಆರ್‌ಸಿಬಿಯತ್ತ ವಾಲಿತು.
ಅಲಿಸ್ಸಾ ಹೀಲಿ 5 ರನ್, ದಿನೇಶ್ ವೃಂದಾ 18 ರನ್, ತಹ್ಲಿಯಾ ಮೆಕ್‌ಗ್ರಾತ್ 22, ಕಿರಾನ್ ನವಗಿರೆ 1, ಪೂನಂ ಖೇಮ್ನಾರ್ 14 ರನ್, ದೀಪ್ತಿ ಶರ್ಮಾ 13 ರನ್ ಗಳಿಸಿದ್ರೆ ಸೋಫಿ ಎಕ್ಲೆಸ್ಟೋನ್ 1 ರನ್ ಗಳಿಸಿ ಕ್ರೀಸ್‌ನಲ್ಲಿ ಉಳಿದರು. ಆರ್‌ಸಿಬಿ ಪರ ಸೋಭಾನಾ ಆಶಾ 4 ಓವರ್‌ಗಳಲ್ಲಿ 22 ರನ್ ಬಿಟ್ಟುಕೊಟ್ಟು 5 ವಿಕೆಟ್ ಕಿತ್ತರೆ, ಸೋಫಿ ಮೊಲಿನೆಕ್ಸ್, ಜಾರ್ಜಿಯಾ ವೇರ್ಹ್ಯಾಮ್ ತಲಾ ಒಂದೊಂದು ವಿಕೆಟ್ ಪಡೆದರು.
ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣ ಇಂದು ಆರ್‌ಸಿಬಿ ಅಭಿಮಾನಿಗಳಿಗೆ ಹಬ್ಬವಾಗಿತ್ತು. ಪುರುಷ ಕ್ರೀಡಾಕೂಟಕ್ಕೂ ಕಮ್ಮಿಇಲ್ಲವೆನ್ನುವಂತೆ ಅಭಿಮಾನಿಗಳು ಮೈದಾನದಲ್ಲಿ ತುಂಬಿ ತುಳುಕಿದ್ದರು. ಪ್ರತಿಯೊಂದು ಕ್ಷಣದಲ್ಲೂ ಆರ್‌ಸಿಬಿ, ಆರ್‌ಸಿಬಿ ಉದ್ಘೋಷ ಕೂಗುತ್ತಾ ಕಣದಲ್ಲಿದ್ದ ಆಟಗಾರ್ತಿಯರನ್ನು ಹುರಿದುಂಬಿಸಿದರು.
ಟಾಸ್ ಸೋತು ಮೊದಲು ಕ್ರೀಸ್‌ಗಿಳಿದ ಆರ್‌ಸಿಬಿ ಆರಂಭದಲ್ಲೇ ಹಿನ್ನಡೆ ಅನುಭವಿಸಿತು. ನಿಧಾನಗತಿ ಬ್ಯಾಟಿಂಗ್ ಆರಂಭಿಸುವ ಜೊತೆಗೆ 75. ಓವರ್‌ಗಳಲ್ಲಿ 54 ರನ್‌ಗಳಿಗೆ ಪ್ರಮುಖ 3 ವಿಕೆಟ್ ಕಳೆದುಕೊಂಡಿತ್ತು. ಆದ್ರೆ ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ರಿಚಾ ಘೋಷ್ ಹಾಗೂ ಸಬ್ಬಿನೇನಿ ಮೇಘನಾ 50 ಎಸೆತಗಳಲ್ಲಿ 71 ರನ್‌ಗಳ ಜೊತೆಯಾಟ ನೀಡುವ ಮೂಲಕ ತಂಡಕ್ಕೆ ಆಸರೆಯಾದರು.
ಸ್ಫೋಟಕ ಬ್ಯಾಟಿಂಗ್ ಮಾಡಿರ ರಿಚಾ ಘೋಷ್ 37 ಎಸೆತಗಳಲ್ಲಿ 12 ಬೌಂಡರಿಗಳೊಂದಿಗೆ 62 ರನ್ ಬಾರಿಸಿದ್ರೆ, ಮೇಘನಾ 44 ಎಸೆತಗಳಲ್ಲಿ 7 ಬೌಂಡರಿ, 1 ಸಿಕ್ಸರ್‌ನೊಂದಿಗೆ 53 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು. ಇನ್ನುಳಿದಂತೆ ಸೋಫಿ ಡಿವೈನ್ 1 ರನ್, ಸ್ಮೃತಿ ಮಂಧಾನ 13 ರನ್, ಎಲ್ಲಿಸ್ ಪೆರ್ರಿ 8 ರನ್, ಫಿ ಮೊಲಿನೆಕ್ಸ್ 9 ರನ್ ಹಾಗೂ ಶ್ರೇಯಾಂಕ ಪಾಟೀಲ್ 8 ರನ್ ಗಳಿಸಿದರು.
ಯುಪಿ ವಾರಿಯರ್ಸ್ ಪರ ರಾಜೇಶ್ವರಿ ಗಾಯಕ್ವಾಡ್ 2 ವಿಕೆಟ್ ಕಿತ್ತರೆ, ಗ್ರೇಸ್ ಹ್ಯಾರಿಸ್, ತಹ್ಲಿಯಾ ಮೆಕ್‌ಗ್ರಾತ್, ಸೋಫಿ ಎಕ್ಲೆಸ್ಟೋನ್ ಹಾಗೂ ದೀಪ್ತಿ ಶರ್ಮಾ ತಲಾ ಒಂದೊಂದು ವಿಕೆಟ್ ಪಡೆದು ಮಿಂಚಿದರು.