Tag: Upahar movie theater

  • 1997ರಲ್ಲಿ 59 ಮಂದಿ ಬಲಿ ಪಡೆದಿದ್ದ, ದೆಹಲಿ ಉಪಹಾರ್ ಥಿಯೇಟರ್‌ನಲ್ಲಿ ಮತ್ತೆ ಬೆಂಕಿ

    1997ರಲ್ಲಿ 59 ಮಂದಿ ಬಲಿ ಪಡೆದಿದ್ದ, ದೆಹಲಿ ಉಪಹಾರ್ ಥಿಯೇಟರ್‌ನಲ್ಲಿ ಮತ್ತೆ ಬೆಂಕಿ

    ನವದೆಹಲಿ: 1997ರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 59 ಮಂದಿ ಸಾವನ್ನಪ್ಪಿದ್ದ ದೆಹಲಿಯ ಉಪಹಾರ್ ಚಿತ್ರಮಂದಿರದಲ್ಲಿ ಇಂದು ಮತ್ತೆ ಅಗ್ನಿ ಅವಘಡ ಸಂಭವಿಸಿದೆ.

    1997ರ ಅಗ್ನಿ ದುರಂತದ ನಂತರ ಸಿನಿಮಾ ಥಿಯೇಟರ್‌ನನ್ನು ಮುಚ್ಚಲಾಗಿತ್ತು. ಆದರೆ ಇಂದು ಬೆಳಗ್ಗೆ ಮತ್ತೆ ಅಗ್ನಿ ಅವಘಡ ಸಂಭವಿಸಿದ್ದು, ಸಿನಿಮಾ ಹಾಲ್‍ನಲ್ಲಿದ್ದ ಕೆಲವು ಆಸನಗಳು, ಪೀಠೋಪಕರಣಗಳು ಮತ್ತು ತ್ಯಾಜ್ಯಕ್ಕೆ ಬೆಂಕಿ ಹೊತ್ತಿಕೊಂಡಿದೆ. ಇದನ್ನೂ ಓದಿ: ಬುಲ್ಡೋಜರ್ ಬಾಬಾ ರಾಜ್ಯವನ್ನು ತಪ್ಪು ದಾರಿಯಲ್ಲಿ ನಡೆಸುತ್ತಿದ್ದಾರೆ: ಅಖಿಲೇಶ್ ಯಾದವ್

    Uphaar Cinema

    ಥಿಯೇಟರ್‌ನ ಬಾಲ್ಕನಿ ಮತ್ತು ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ನಂದಿಸಲು ಸ್ಥಳಕ್ಕೆ ಒಂಬತ್ತು ಅಗ್ನಿಶಾಮಕ ವಾಹನಗಳನ್ನು ಕರೆಸಲಾಯಿತು. ಬೆಳಗಿನ ಜಾವ 4:46ಕ್ಕೆ ಬೆಂಕಿ ಕಾಣಿಸಿಕೊಂಡಿದ್ದು, 7:20ರ ಸುಮಾರಿಗೆ ಬೆಂಕಿಯನ್ನು ನಂದಿಸಿ ಪರಿಸ್ಥಿತಿಯನ್ನು ಹತೋಟಿಗೆ ತರಲಾಯಿತು. ಅದೃಷ್ಟವಶಾತ್ ಘಟನೆ ವೇಳೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಕಿ ಹೊತ್ತಿಕೊಳ್ಳಲು ಕಾರಣ ಏನು ಎಂಬುವುದು ಇನ್ನೂ ಸ್ಪಷ್ಟವಾಗಿ ತಿಳಿದುಬಂದಿಲ್ಲ ಎಂದು ದೆಹಲಿ ಅಗ್ನಿಶಾಮಕ ಸೇವಾ ನಿರ್ದೇಶಕ ಅತುಲ್ ಗಾರ್ಗ್ ಹೇಳಿದ್ದಾರೆ.

    ದೆಹಲಿಯ ಗ್ರೀನ್ ಪಾರ್ಕ್ ಪ್ರದೇಶದಲ್ಲಿರುವ ಉಪಹಾರ್ ಚಿತ್ರಮಂದಿರದಲ್ಲಿ 1997ರ ಜೂನ್ 13 ರಂದು ಭಾರೀ ಬೆಂಕಿ ಅನಾಹುತ ಸಂಭವಿತ್ತು. ಈ ಘಟನೆಯಲ್ಲಿ 59 ಮಂದಿ ಸಾವನ್ನಪ್ಪಿದರು ಮತ್ತು 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ರಿಯಲ್ ಎಸ್ಟೇಟ್ ಉದ್ಯಮಿಗಳಾಗಿರುವ ಥಿಯೇಟರ್ ಮಾಲೀಕರಾದ ಗೋಪಾಲ್ ಅನ್ಸಾಲ್ ಮತ್ತು ಸುಶೀಲ್ ಅನ್ಸಾಲ್ ಅವರ ನಿರ್ಲಕ್ಷ್ಯದಿಂದ ಈ ಘಟನೆ ಸಂಭವಿಸಿ, ಅನೇಕ ಮಂದಿ ಸಾವನ್ನಪ್ಪಿದ್ದರು. ಇದನ್ನೂ ಓದಿ: ಬಿಜೆಪಿ ಬೆಂಬಲದೊಂದಿಗೆ ಹೊಸ ಹಿಂದೂ ಓವೈಸಿ ಉದಯ : ರಾಜ್ ಠಾಕ್ರೆ ವಿರುದ್ಧ ಸಂಜಯ್ ರಾವತ್ ವಾಗ್ದಾಳಿ