Tag: Upper Bhadra Project

  • ಪೆನ್ನಾರ್ ನದಿ ನೀರು ವಿವಾದ, ಭದ್ರಾ ಮೇಲ್ದಂಡೆ ಯೋಜನೆ – ಕೇಂದ್ರ ಸಚಿವ ಸೋಮಣ್ಣ ಜೊತೆ ಡಿಕೆಶಿ ಚರ್ಚೆ

    ಪೆನ್ನಾರ್ ನದಿ ನೀರು ವಿವಾದ, ಭದ್ರಾ ಮೇಲ್ದಂಡೆ ಯೋಜನೆ – ಕೇಂದ್ರ ಸಚಿವ ಸೋಮಣ್ಣ ಜೊತೆ ಡಿಕೆಶಿ ಚರ್ಚೆ

    – ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದ ಅನುದಾನ ಕಡಿತ ಸಂಭವ

    ನವದೆಹಲಿ: ಭದ್ರಾ ಮೇಲ್ದಂಡೆ ಯೋಜನೆಗೆ (Upper Bhadra Project) ಈ ಹಿಂದೆ ಘೋಷಣೆ ಮಾಡಿದ್ದ 5,300 ಕೋಟಿ ರೂ. ಅನುದಾನ ಬಿಡುಗಡೆ ಸೇರಿದಂತೆ ಕರ್ನಾಟಕದ ನೀರಾವರಿ ಯೋಜನೆಗಳು ಹಾಗೂ ಪೆನ್ನಾರ್ ನದಿಯ ಉಪನದಿ ಮಾರ್ಕಂಡೇಯ ನದಿಗೆ ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ಎತ್ತಿರುವ ತಕರಾರಿನ ಕುರಿತು ಕೇಂದ್ರ ಸಚಿವ ವಿ.ಸೋಮಣ್ಣ ಅವರ ಜತೆ ಚರ್ಚೆ ನಡೆಸಲಾಯಿತು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ತಿಳಿಸಿದರು.

    ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ.ಸೋಮಣ್ಣ (V.Somanna) ಅವರ ಭೇಟಿ ಬಳಿಕ ದೆಹಲಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಶಿವಕುಮಾರ್ ಅವರು ಮಂಗಳವಾರ ಉತ್ತರಿಸಿದರು. ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಣೆ ಮಾಡಿದ್ದ ಹಣವನ್ನು ಕಡಿತಗೊಳಿಸಲಾಗುವುದು ಎನ್ನುವ ಸುದ್ದಿಯಿದೆ. ಇದರ ಬಗ್ಗೆ ಇನ್ನೂ ಸ್ಪಷ್ಟವಾದ ಮಾಹಿತಿಯಿಲ್ಲ. ಅನುದಾನ ಕೊಡುತ್ತೇವೆ ಎಂದು ಹೇಳುತ್ತಿದ್ದಾರೆ. ಯೋಜನೆಯ ವಿವರಗಳನ್ನು ಕಳುಹಿಸಲಾಗಿದ್ದು, ಇದರ ಬಗ್ಗೆ ಹೆಚ್ಚಿನ ಗಮನ ಹರಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಭಾರತ್‌ಪೋಲ್ ಪೋರ್ಟಲ್ ಲೋಕಾರ್ಪಣೆ ಮಾಡಿದ ಅಮಿತ್ ಶಾ

    ತಮಿಳುನಾಡಿನವರು ಪೆನ್ನಾರ್ ನದಿ ನೀರಿನ ವಿಚಾರವಾಗಿ ಕಳೆದ 2ನೇ ತಾರೀಕಿನಂದು ಅಫಿಡವಿಟ್ ಸಲ್ಲಿಸಿದ್ದಾರೆ. ಮೂರು ವಾರದಲ್ಲಿ ತೀರ್ಮಾನ ಮಾಡಬೇಕಿರುವ ಕಾರಣಕ್ಕೆ ಅಫಿಡವಿಟ್ ಸಲ್ಲಿಕೆ ಮಾಡಲು ತಿಳಿಸಿದ್ದರು. ವಿಧಾನಸಭೆ ಚಳಿಗಾಲದ ಅಧಿವೇಶನವಿದ್ದ ಕಾರಣಕ್ಕೆ ನಮ್ಮಿಂದ ವಿಳಂಬವಾಯಿತು. ನಾವು ದಿನಾಂಕ ವಿಸ್ತರಣೆ ಮಾಡಿ ಎಂದು ಮನವಿ ಮಾಡಿದ್ದೇವೆ ಎಂದರು.

    ಎರಡು ರಾಜ್ಯಗಳ ಪ್ರತಿನಿಧಿಗಳನ್ನು ಸೇರಿಸಿ ಮಾತುಕತೆ ನಡೆಸಬೇಕಿರುವ ಕಾರಣಕ್ಕೆ ಶೀಘ್ರದಲ್ಲೇ ಸಭೆಗೆ ಒಂದು ದಿನಾಂಕವನ್ನು ಅಂತಿಮಗೊಳಿಸುವುದಾಗಿ ಹೇಳಿದ್ದಾರೆ. ಪೆನ್ನಾರ್ ನದಿ ನೀರಿನ ವಿಚಾರವಾಗಿ ನಿಮ್ಮಲ್ಲೇ ಚರ್ಚೆ ನಡೆಸಿ ಬಗೆಹರಿಸಿಕೊಳ್ಳಿ ಎನ್ನುವ ಸುಪ್ರೀಂ ಕೋರ್ಟ್ ನಿರ್ದೇಶನವಿದೆ ಎಂದರು.

    ಈ ನದಿ ನೀರಿನ ವಿಚಾರದಲ್ಲಿ ತಮಿಳುನಾಡಿಗೆ ಯಾವುದೇ ತೊಂದರೆಯಾಗುವುದಿಲ್ಲ. ಅಲ್ಲದೇ ಕೋಲಾರದ ನೀರಿನ ಸಮಸ್ಯೆ ಬಗ್ಗೆ ಎಲ್ಲರಿಗೂ ಅರಿವಿದೆ. ಕೋಲಾರದ ಕೆರೆಗಳಿಗೆ ವೃಷಭಾವತಿ ಸೇರಿದಂತೆ ಕೆ.ಸಿ ವ್ಯಾಲಿ ಯೋಜನೆಯಿಂದ ಬಳಕೆಯಾದ ನೀರನ್ನು ಶುದ್ದೀಕರಿಸಿ ತುಂಬಿಸಲಾಗುತ್ತಿದೆ. ಈ ಯೋಜನೆಯ ಬಗ್ಗೆ ಈ ಹಿಂದೆ ಕೇಂದ್ರ ಸರ್ಕಾರವೂ ಮೆಚ್ಚುಗೆ ವ್ಯಕ್ತಪಡಿಸಿತ್ತು ಎಂದರು.

    ಪೆನ್ನಾರ್ ನದಿ ನೀರಿನ ವಿವಾದ ಕುರಿತು ಟ್ರಿಬ್ಯೂನಲ್ ಮೂಲಕ ಹೋದರೆ ತಡವಾಗುತ್ತದೆ ಹಾಗೂ ಕೋರ್ಟ್ ಮತ್ತು ವಕೀಲರ ವೆಚ್ಚ ದುಬಾರಿಯಾಗುತ್ತದೆ. ಆದ ಕಾರಣಕ್ಕೆ ಸರ್ಕಾರದ ಮಟ್ಟದಲ್ಲೇ ಬಗೆಹರಿಸಿಕೊಳ್ಳಲು ನಾವು ನೋಡುತ್ತಿದ್ದೇವೆ. ಈಗಾಗಲೇ ಅರಣ್ಯ ಇಲಾಖೆಯವರು ಅನುಮತಿ ನೀಡುತ್ತೇವೆ ಎಂದು ಹೇಳಿದ್ದಾರೆ. ಈ ವಿಚಾರವಾಗಿ ಮಾತನಾಡಲು ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗಬೇಕಿತ್ತು. ಅವರು ಲಭ್ಯವಿಲ್ಲ. ಇದರ ನಡುವೆ ಇತರೇ ಸಚಿವರನ್ನು ಇನ್ನೊಮ್ಮೆ ಬಂದು ಭೇಟಿಯಾಗುವೆ. ಇಲಾಖೆಯ ಬಜೆಟ್ ಕೆಲಸವಿರುವ ಕಾರಣಕ್ಕೆ ಕೇಂದ್ರ ಜಲಶಕ್ತಿ ಸಚಿವರೂ ಭೇಟಿಗೆ ಸಿಗಲಿಲ್ಲ ಎಂದು ಹೇಳಿದರು.

    ಕರ್ನಾಟಕಕ್ಕೆ ಸಂಬಂಧಿಸಿದ ನೀರಾವರಿ ಕೆಲಸಗಳು ಹಾಗೂ ಕಡತಗಳು ಸಚಿವರಾದ ವಿ.ಸೋಮಣ್ಣ ಅವರ ಗಮನಕ್ಕೆ ತರಬೇಕು ಎನ್ನುವ ನಿರ್ದೇಶನವಿರುವ ಕಾರಣಕ್ಕೆ ಅವರನ್ನು ಭೇಟಿ ಮಾಡಿ ರಾಜ್ಯದ ನೀರಾವರಿ ಕೆಲಸಗಳ ಬಗ್ಗೆ ವಿವರಣೆ ನೀಡಿದೆ ಎಂದು ತಿಳಿಸಿದರು. ಮೇಕೆದಾಟು ವಿಚಾರ ಚರ್ಚೆಯಾಯಿತೆ ಎಂದು ಕೇಳಿದಾಗ, ‘ಅದರ ಬಗ್ಗೆ ಮಾಹಿತಿ ಬಹಿರಂಗಗೊಳಿಸಲು ಆಗುವುದಿಲ್ಲ’ ಎಂದರು.

    ಸುಮಾರು 5-6 ಸಾವಿರ ಉಳಿತಾಯ
    ದೆಹಲಿಯಲ್ಲಿ ಘೋಷಣೆ ಮಾಡಿರುವ ಪ್ಯಾರಿ ದೀದಿ ಯೋಜನೆ ಮೂಲಕ ಮಹಿಳೆಯರಿಗೆ 2,500 ನೀಡಲಾಗುವುದು ಎಂದು ಹೇಳಲಾಗಿದೆ. ಕಾಂಗ್ರೆಸ್ ಅಧಿಕಾರದಲ್ಲಿ ಇರುವ ರಾಜ್ಯದಲ್ಲಿ ಕೇವಲ 2 ಸಾವಿರ ನೀಡಲಾಗುತ್ತಿದೆ ಎನ್ನುವ ಚರ್ಚೆಯ ಬಗ್ಗೆ ಕೇಳಿದಾಗ, 2 ಸಾವಿರ ಎನ್ನವುದು ಕೇವಲವೇ? ದೆಹಲಿ ಹಾಗೂ ಕರ್ನಾಟಕದ ಆರ್ಥಿಕ ಪರಿಸ್ಥಿತಿ ಬೇರೆ, ಬೇರೆಯಿರುತ್ತದೆ. ದೆಹಲಿಯಲ್ಲಿ ಖರ್ಚು ಹೆಚ್ಚು, ಕರ್ನಾಟಕದಲ್ಲಿ ಕಡಿಮೆಯಿದೆ. ಅಲ್ಲದೇ ಕರ್ನಾಟಕದಲ್ಲಿ ಐದು ಗ್ಯಾರಂಟಿಗಳ ಮೂಲಕ ಸುಮಾರು 5-6 ಸಾವಿರ ಉಳಿತಾಯ ಪ್ರತಿ ಕುಟುಂಬಕ್ಕೆ ಆಗುತ್ತಿದೆ ಎಂದರು.

    ಡಿನ್ನರ್ ರಾಜಕೀಯ ಮತ್ತು ಒಬ್ಬೊಬ್ಬರೇ ಸಚಿವರು ಔತಣಕೂಟ ಏರ್ಪಡಿಸುತ್ತಿರುವ ಬಗ್ಗೆ ಹಾಗೂ ಗೃಹಸಚಿವ ಪರಮೇಶ್ವರ್ ಅವರು ಬುಧವಾರ ಸಭೆ ಕರೆದಿರುವ ಬಗ್ಗೆ ಕೇಳಿದಾಗ, ‘ನಾನು ಹೊರದೇಶದಲ್ಲಿದ್ದ ಕಾರಣಕ್ಕೆ ನನಗೆ ಇದರ ಬಗ್ಗೆ ಮಾಹಿತಿಯಿಲ್ಲ. ಬೆಂಗಳೂರಿಗೆ ಹೋದ ನಂತರ ಇದರ ಬಗ್ಗೆ ತಿಳಿದುಕೊಳ್ಳಲು ನಾನು ಪ್ರಯತ್ನಿಸುತ್ತೇನೆ. ಪಕ್ಷದ ಕೆಲಸವಿದ್ದ ಕಾರಣಕ್ಕೆ ಹಾಗೂ ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸೋಮವಾರದಂದು ಕರ್ನಾಟಕದ ಗೃಹಲಕ್ಷ್ಮೀ ಯೋಜನೆ ಮಾದರಿಯ ಪ್ಯಾರಿ ದೀದಿ ಯೋಜನೆ ಪ್ರಕಟಣೆಗಾಗಿ ಬಂದಿದ್ದೆ’ ಎಂದು ಹೇಳಿದರು.

    ಕುಮಾರಸ್ವಾಮಿ ಭಂಡಾರದಲ್ಲಿ ಏನೇನಿದೆ?
    60 ಪರ್ಸೆಂಟ್ ಸರ್ಕಾರ ಎನ್ನುವ ಕುಮಾರಸ್ವಾಮಿ ಆರೋಪದ ಬಗ್ಗೆ ಕೇಳಿದಾಗ, ‘ಕುಮಾರಸ್ವಾಮಿ ಅವರ ಭಂಡಾರದಲ್ಲಿ ಏನೇನಿದೆ ಎನ್ನುವ ಬಗ್ಗೆ ಆನಂತರ ಮಾತನಾಡೋಣ. ಈಗ ಚರ್ಚೆ ಮಾಡುವುದು ಬೇಡ’ ಎಂದರು.

    ಐಶ್ವರ್ಯ ಗೌಡ ವಂಚನೆ ಪ್ರಕರಣದಲ್ಲಿ ನನ್ನ ಹೆಸರನ್ನು ತಳುಕು ಹಾಕಿಸಿರುವುದರ ಹಿಂದೆ ಯಾರಿದ್ದಾರೆ ಎನ್ನುವುದು ತಿಳಿದಿದೆ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, ನನಗೆ ಯಾವ ಐಶ್ವರ್ಯ ಗೌಡನೂ ಗೊತ್ತಿಲ್ಲ. ನನಗೆ ಸಂಬಂಧವಿಲ್ಲದ್ದು ಹಾಗೂ ಗೊತ್ತಿಲ್ಲದೇ ಇರುವ ಬಗ್ಗೆ ಮಾತನಾಡುವುದಿಲ್ಲ. ನನ್ನ ತಮ್ಮ ಡಿ.ಕೆ.ಸುರೇಶ್ ಅವರನ್ನು ಕೂಡ ಭೇಟಿಯಾಗಿಲ್ಲ. ಇದರ ಬಗ್ಗೆ ಕೇವಲ ಮಾಧ್ಯಮಗಳಲ್ಲಿ ಮಾತ್ರ ನೋಡಿದ್ದೇನೆ. ನನ್ನ ತಮ್ಮ ಇದರ ಬಗ್ಗೆ ನಿರ್ಲಕ್ಷ್ಯವಹಿಸಬೇಕಾಗಿತ್ತು. ಆತ ಕೂಡ ವಿದೇಶಕ್ಕೆ ಹೋಗಿದ್ದ ಕಾರಣಕ್ಕೆ ನಾನು ಮಾತನಾಡಲು ಸಾಧ್ಯವಾಗಿಲ್ಲ ಎಂದರು.

  • ಚಿಕ್ಕಮಗಳೂರು | ಸೇತುವೆ ಕುಸಿದು 6 ಹಳ್ಳಿಗಳ ಸಂಪರ್ಕ ಕಡಿತ

    ಚಿಕ್ಕಮಗಳೂರು | ಸೇತುವೆ ಕುಸಿದು 6 ಹಳ್ಳಿಗಳ ಸಂಪರ್ಕ ಕಡಿತ

    ಚಿಕ್ಕಮಗಳೂರು: ಭದ್ರಾ ಮೇಲ್ದಂಡೆ ಯೋಜನೆಯ (Upper Bhadra Project) ನೀರಿನ ರಭಸಕ್ಕೆ ಅಜ್ಜಂಪುರ (Ajjampura) ತಾಲೂಕಿನ ಅಬ್ಬಿನಹೊಳಲು ಗ್ರಾಮದ ಸೇತುವೆ ಮುರಿದು ಬಿದ್ದಿದೆ. ಪರಿಣಾಮ ಐದಾರು ಹಳ್ಳಿಗಳ ಸಂಪರ್ಕ ಕಡಿತಗೊಂಡಿದೆ.

    ಸೇತುವೆ ಕುಸಿತದಿಂದ ಅಬ್ಬಿನಹೊಳಲು, ಮೆಣಸಿನಕಾಯಿ ಹೊಸಳ್ಳಿ, ಭಕ್ತನಕಟ್ಟೆ ಮತ್ತು ಶಿವನಿ ಸುತ್ತಮುತ್ತಲಿನ ಜನರು ಮತ್ತು ವಾಹನಗಳ ಸಂಚಾರ ಸಾಧ್ಯವಿಲ್ಲದಂತಾಗಿದೆ. ಈ ಸೇತುವೆ ಬಹಳ ಹಳೆಯ ಸೇತುವೆಯಾಗಿದೆ. ಸೇತುವೆ ಬಗ್ಗೆ ಗಮನ ಹರಿಸದೆ ಇಂಜಿನಿಯರ್‌ಗಳು ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದ ನೀರು ಹರಿಸುತ್ತಿದ್ದಾರೆ. ಪರಿಣಾಮ ಜನರು ಪರದಾಡುವಂತಾಗಿದೆ ಎಂದು ಗ್ರಾಮಗಳ ಜನರು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

    ಮಕ್ಕಳು ಶಾಲಾ-ಕಾಲೇಜಿಗೆ ಹೋಗಲು ಸಾಧ್ಯವಾಗದೆ, ರೈತರು ಹೊಲ-ಗದ್ದೆ, ತೋಟ, ಮನೆಗಳಿಗೆ ಹೋಗಿ ಬಾರದಂತಹ ಸ್ಥಿತಿ ನಿರ್ಮಾಣವಾಗಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ಸ್ಥಳಕ್ಕೆ ಭೇಟಿ ಕೊಟ್ಟು ಒಂದು ವರ್ಷ ತುಂಬಿಲ್ಲ. ಈಗಲೇ ಇಂತಹ ಅನಾಹುತ ನಡೆದಿದೆ ಎಂದು ಸ್ಥಳೀಯರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

    ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ತಕ್ಷಣವೇ ಇತ್ತ ಗಮನಹರಿಸಿ ಸೂಕ್ತ ಕ್ರಮ ಕೈಗೊಂಡು ಜನರಿಗಾಗಿರುವ ತೊಂದರೆ ನಿವಾರಿಸಬೇಕು ಎಂದು ಹಳ್ಳಿಗರು ಆಗ್ರಹಿಸಿದ್ದಾರೆ.

  • ದೆಹಲಿಯಲ್ಲಿ ಮೋದಿ ಭೇಟಿಯಾದ ಸಿಎಂ – ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಬಿಡುಗಡೆಗೆ ಮನವಿ

    ದೆಹಲಿಯಲ್ಲಿ ಮೋದಿ ಭೇಟಿಯಾದ ಸಿಎಂ – ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಬಿಡುಗಡೆಗೆ ಮನವಿ

    – 4 ತಿಂಗಳ ಅಂತರದಲ್ಲಿ 2ನೇ ಬಾರಿ ಪ್ರಧಾನಿ ಭೇಟಿ‌; ಮಹತ್ವದ ವಿಚಾರಗಳ ಚರ್ಚೆ

    ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಭೇಟಿ ಮಾಡಿದ್ದಾರೆ.

    ಕಳೆದ 4 ತಿಂಗಳ ಅಂತರದಲ್ಲಿ ಇದು ಅವರ 2ನೇ ಭೇಟಿಯಾಗಿದ್ದು, ಭದ್ರಾ ಮೇಲ್ದಂಡೆ ಯೋಜನೆ (Upper Bhadra Project), ನರ್ಬಾಡ್ (NABARD) ಅಡಿ ಅನುದಾನ ಕಡಿತ, ರಾಜ್ಯದ ತೆರಿಗೆ ಪಾಲು ಹೆಚ್ಚಳ ಸೇರಿದಂತೆ ಹಲವು ಮಹತ್ವದ ವಿಚಾರ ಕುರಿತು ಚರ್ಚೆ ನಡೆಸಿದ್ದಾರೆ. ಪ್ರಧಾನಿ ಮೋದಿ ಅವರೊಂದಿಗೆ ಮಾತುಕತೆ ಮುಗಿದ ಬಳಿಕ ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸಭೆಯಲ್ಲಿ ಸಿಎಂ ಭಾಗಿಯಾಗಲಿದ್ದಾರೆ. ಇದನ್ನೂ ಓದಿ: 19ರ ಯುವತಿ ಮೇಲೆ ಅತ್ಯಾಚಾರ, ಕೊಲೆ – ಕರ್ನಾಟಕ ಸೇರಿ 4 ರಾಜ್ಯಗಳಿಗೆ ಬೇಕಿದ್ದ ಸರಣಿ ಹಂತಕ ಅರೆಸ್ಟ್‌

    ಅನುದಾನ ಬಿಡುಗಡೆಗೆ ಮನವಿ:
    ಪ್ರಧಾನಿಗಳನ್ನು ಭೇಟಿಯಾಗಿರುವ ಸಿದ್ದರಾಮಯ್ಯ ಅವರು, ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಹಣ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ಅಲ್ಲದೇ ನಬಾಡ್‌ ಸಾಲದ ಪ್ರಮಾಣದಲ್ಲಿ 58% ಕಡಿತಗೊಳಿಸಿದ್ದು, ಪೂರ್ಣ ಪ್ರಮಾಣದ ಸಾಲ ನೀಡಬೇಕು. ನಬಾರ್ಡ್ ನಿಂದ 2023-24ರಲ್ಲಿ 5,600 ಕೋಟಿ ರೂ. ಕೃಷಿ ಸಾಲ ನೀಡಿತ್ತು. ಆದ್ರೆ 2024-25ರಲ್ಲಿ 2,340 ಕೋಟಿ ರೂ. ಕೃಷಿ ಸಾಲ ಮಾತ್ರ ನೀಡಿದೆ ಎಂದು ಗಮನಕ್ಕೆ ತಂದರಲ್ಲದೇ ಜೊತೆಗೆ ಕಳಸಾ ಬಂಡೂರಿ ಯೋಜನೆ, ಮೇಕೆದಾಟು ಯೋಜನೆಗೆ ಕ್ಲಿಯರೆನ್ಸ್‌ಗೆ ಮನವಿ ಮಾಡಿದ್ದಾರೆ.

    ಸಿಎಂ ಮನವಿ ಪತ್ರದಲ್ಲಿ ಏನಿದೆ?
    ಆತ್ಮೀಯ ಪ್ರಧಾನಮಂತ್ರಿ‌ಗಳೇ ನಿಮ್ಮನ್ನು ಭೇಟಿಯಾಗಲು ಸಮಯ ನೀಡಿದ್ದಕ್ಕಾಗಿ ಧನ್ಯವಾದ ತಿಳಿಸುತ್ತೇನೆ. ನಮ್ಮ ರಾಜ್ಯದ ನಿರ್ಣಾಯಕ ಸಮಸ್ಯೆಗಳನ್ನು ನಿಮ್ಮ ಮುಂದಿಡಲು ಬಯಸುತ್ತೇನೆ. ಇದನ್ನೂ ಓದಿ: 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್‌ ಮೀಡಿಯಾ ಬ್ಯಾನ್‌ – ಆಸ್ಟ್ರೇಲಿಯಾದಲ್ಲಿ ಮಸೂದೆ ಅಂಗೀಕಾರ

    ನಬಾರ್ಡ್‌ನಿಂದ ಕರ್ನಾಟಕಕ್ಕೆ ಅಲ್ಪಾವಧಿಯ ಕೃಷಿ ಸಾಲ ಮಿತಿಯನ್ನು ತೀವ್ರವಾಗಿ ಕಡಿತಗೊಳಿಸಿರುವುದು ರಾಜ್ಯದ ರೈತರಲ್ಲಿ ಆತಂಕ ಸೃಷ್ಟಿಸಿದೆ. 2023-24ರಲ್ಲಿ ಮಂಜೂರಾದ 5,600 ಕೋಟಿ ರೂ. ಮಿತಿಯಂತೆ, ನಬಾರ್ಡ್ ಪ್ರಸಕ್ತ ವರ್ಷಕ್ಕೆ (2024-25) 2,340 ಕೋಟಿ ರೂ.ಗಳನ್ನು ಮಾತ್ರ ಮಂಜೂರು ಮಾಡಿದೆ. ಇದರಿಂದ 58% ಅನುದಾನ ಕಡಿತವಾಗಿದ್ದು, ರೈತರ ಹಣಕಾಸು ವೆಚ್ಚದ ಮೇಲೆ ಪರಿಣಾಮ ಬೀರುತ್ತದೆ. ಹೆಚ್ಚುವರಿ ಬಡ್ಡಿ ರಿಯಾಯಿತಿ ಒದಗಿಸಲು ಮುಂದಾಗದಿದ್ದರೆ ನಮ್ಮ ಹಣಕಾಸಿನ ಮೇಲೆ ತೀವ್ರ ಪರಿಣಾಮ ಬೀರುತ್ತದೆ. ಈ ನಿಟ್ಟಿನಲ್ಲಿ ನಾನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ನಮ್ಮ ಸಮಸ್ಯೆಗಳ ಬಗ್ಗೆ ತಿಳಿಸಿದ್ದೇನೆ. ಕರ್ನಾಟಕದ ರೈತರು ಕೃಷಿ ಸಾಲ ಪಡೆಯುವುದಕ್ಕಾಗಿ ಈ ಸಮಸ್ಯೆ ಸರಿಪಡಿಸಲು ಹಣಕಾಸು ಸಚಿವಾಲಯಕ್ಕೆ ನಿರ್ದೇಶಿಸಬೇಕೆಂದು ವಿನಂತಿಸುತ್ತೇನೆ.

    ಎರಡನೆಯದಾಗಿ, ನಾನು ಈ ಹಿಂದೆ ನಿಮ್ಮಲ್ಲಿ ವಿನಂತಿಸಿದಂತೆ, 2023-24 ರ ಕೇಂದ್ರ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ.ಗಳನ್ನು ಒದಗಿಸುವುದಾಗಿ ಹಣಕಾಸು ಸಚಿವರು ನೀಡಿದ ಭರವಸೆಯನ್ನು ಈಡೇರಿಸಬೇಕಾಗಿದೆ. ಇದನ್ನೂ ಓದಿ: ಹಾಸನದಲ್ಲಿ ಹಮ್ಮಿಕೊಂಡಿರುವ ಸಿದ್ದರಾಮಯ್ಯ ಸ್ವಾಭಿಮಾನಿ ಸಮಾವೇಶದ ವಿರುದ್ಧ ಎಐಸಿಸಿಗೆ ದೂರು

    ಮೂರನೆಯದಾಗಿ, ಕರ್ನಾಟಕವು ಶುಷ್ಕ ರಾಜ್ಯವಾಗಿದೆ ಮತ್ತು ನೀರಾವರಿ ಸಾಮರ್ಥ್ಯದ ಅಭಿವೃದ್ಧಿಯ ಅಗತ್ಯವಿದೆ. ಹಾಗಾಗಿ ಜಲ ಶಕ್ತಿ ಸಚಿವಾಲಯ ಹಾಗೂ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದಿಂದ ಬಾಕಿ ಉಳಿದಿರುವ ಯೋಜನೆಗಳ ಅನುಮತಿಗಳು ನಮ್ಮ ಯೋಜನೆಗಳನ್ನು ವಿಳಂಬಗೊಳಿಸುತ್ತಿವೆ. ಕಾವೇರಿ ನದಿಯ ಮೇಕೆದಾಟು ಸಮತೋಲನ ಜಲಾಶಯ ಮತ್ತು ಮಹದಾಯಿ ನದಿಯ ಕಳಸಾ ಬಂಡೂರಿ ಯೋಜನೆಗಳ ಎರಡು ಯೋಜನೆಗಳು ನಿಮ್ಮ ತುರ್ತು ಗಮನದ ಅಗತ್ಯವಿದೆ. ಮೊದಲಿನವು ಜಲ ಶಕ್ತಿ ಸಚಿವಾಲಯದ ಅನುಮೋದನೆ ಮತ್ತು ಪರಿಸರ ಅನುಮತಿಯ ಅಗತ್ಯವಿದೆ. ಎರಡನೆಯದು ವನ್ಯಜೀವಿ ತೆರವಿಗೆ ಮುಂದುವರಿದ ಹಂತದಲ್ಲಿದೆ. ಈ ಯೋಜನೆಗಳಿಗೆ ಶೀಘ್ರವಾಗಿ ಅನುಮತಿ ನೀಡುವಂತೆ ಎರಡು ಸಚಿವಾಲಯಗಳಿಗೆ ನಿರ್ದೇಶನ ನೀಡಬೇಕೆಂದು ಮನವಿ ಮಾಡುತ್ತೇನೆ.

    ನಾಲ್ಕನೆಯದಾಗಿ, ಬೆಂಗಳೂರು ದೇಶದ ಟೆಕ್ ಮತ್ತು ಇನ್ನೋವೇಶನ್ ರಾಜಧಾನಿಯಾಗಿ ಹೊರಹೊಮ್ಮಿದೆ ಮತ್ತು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದಾಗಿದೆ. ಹಾಗಾಗಿ ಬೆಂಗಳೂರಿಗೆ ನಗರ ಸಾರಿಗೆ ಮತ್ತು ಸಾರ್ವಜನಿಕ ಸಾರಿಗೆಯಲ್ಲಿ ಹೂಡಿಕೆ ಮಾಡಲು ಅನುವು ಮಾಡಿಕೊಡಲು ವಿಶೇಷ ನೆರವು ನೀಡಲು ನಿರ್ದೇಶಿಸಬೇಕು ಎಂದು ಮನವಿ ಮಾಡಿದ್ದಾರೆ.

  • Union Budget 2023 – ಮಧ್ಯ ಕರ್ನಾಟಕ, ಮಲೆನಾಡು, ಹಳೇ ಮೈಸೂರು ಮತಗಳ ಮೇಲೆ ಬಿಜೆಪಿ ಕಣ್ಣು

    Union Budget 2023 – ಮಧ್ಯ ಕರ್ನಾಟಕ, ಮಲೆನಾಡು, ಹಳೇ ಮೈಸೂರು ಮತಗಳ ಮೇಲೆ ಬಿಜೆಪಿ ಕಣ್ಣು

    ಬೆಂಗಳೂರು: ಕೇಂದ್ರ ಬಜೆಟ್‌ನಲ್ಲಿ (Union Budget 2023) ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಮೀಸಲಿಡುವ ಮೂಲಕ ಮಧ್ಯ ಕರ್ನಾಟಕದ 7, ಮಲೆನಾಡಿನ 2, ಹಳೇ ಮೈಸೂರು ಭಾಗದ ಮೂರು ತಾಲೂಕುಗಳ ಮತಗಳ ಮೇಲೆ ಬಿಜೆಪಿ ಕಣ್ಣಿಟ್ಟಿದೆ.

    ಕರ್ನಾಟಕ ಚುನಾವಣೆಯಲ್ಲಿ ಹಿಂದುತ್ವ + ಅಭಿವೃದ್ಧಿ ಅಸ್ತ್ರ ಪ್ರಯೋಗಿಸುತ್ತಿರುವ ಬಿಜೆಪಿ ಈಗ ಭದ್ರಾ ಮೇಲ್ದಂಡೆ ಯೋಜನೆ (Upper Bhadra Project) ವಿಚಾರವನ್ನು ಮುಂದಿಟ್ಟುಕೊಂಡು ಈ ಭಾಗದಲ್ಲಿ ಪ್ರಚಾರ ನಡೆಸುವ ಸಾಧ್ಯತೆಯಿದೆ.

    787 ಹಳ್ಳಿಗಳಿಗೆ ಅನುಕೂಲ ಆಗುವ ಯೋಜನೆಯನ್ನು ಮುಂದಿಟ್ಟುಕೊಂಡು ಬಿಜೆಪಿ (BJP) ಮತಬೇಟೆಗೆ ಸಿದ್ಧವಾಗಿದೆ ಎಂಬ ಮಾತುಗಳು ಈಗ ಕೇಳಿ ಬಂದಿದೆ. ಈಗಾಗಲೇ ಮಧ್ಯಕರ್ನಾಟಕ ಭಾಗದಲ್ಲಿ ಜೆ.ಪಿ.ನಡ್ಡಾ ಮಠಯಾತ್ರೆ ನಡೆಸಿದರೆ, ಹಳೇ ಮೈಸೂರು ಭಾಗದಲ್ಲಿ ಅಮಿತ್ ಶಾ ಪ್ರವಾಸ ಮಾಡಿದ್ದಾರೆ. ಈಗ ನಾಲ್ಕು ಜಿಲ್ಲೆಗಳಲ್ಲಿ ಭದ್ರಾ ಮೇಲ್ದಂಡೆ ಯೋಜನೆಯನ್ನೇ ಅಸ್ತ್ರವನ್ನಾಗಿ ಮಾಡಿಕೊಳ್ಳಲು ಬಿಜೆಪಿ ಮೆಗಾ ಪ್ಲ್ಯಾನ್‌ ಮಾಡಿದೆ. ಇದನ್ನೂ ಓದಿ: ಧಾರವಾಡದ ಕಸೂತಿ ಕಲೆಯಿರುವ ಸೀರೆಯುಟ್ಟು ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮ

    ಏನಿದು ಭದ್ರಾ ಮೇಲ್ದಂಡೆ ಯೋಜನೆ?
    ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳ ವ್ಯಾಪ್ತಿಯ 5,57,022 ಎಕರೆ ಪ್ರದೇಶದ ವ್ಯಾಪ್ತಿಯಲ್ಲಿರಯವ 367 ಕೆರೆಗಳಿಗೆ ನೀರನ್ನು ತುಂಬಿಸುವ ಯೋಜನೆ ಇದಾಗಿದೆ.

    29.9 ಟಿಎಂಸಿ ನೀರು ಬಳಕೆಗೆ ಯೋಜನೆಗೆ ಅನುಮತಿ ಸಿಕ್ಕಿದ್ದು ಚಿಕ್ಕಮಗಳೂರಿನ ತರೀಕೆರೆ, ಕಡೂರು, ಚಿತ್ರದುರ್ಗದ ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು, ಚಿತ್ರದುರ್ಗ ಚಳ್ಳಕೆರೆ, ಮೊಳಕಾಲ್ಮೂರು, ದಾವಣಗೆರೆಯ ಶಿರಾ, ಜಗಳೂರು, ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ, ಪಾವಗಡ ತಾಲೂಕು ಸೇರಿದಂತೆ ಒಟ್ಟು 787 ಗ್ರಾಮಗಳ 74.26 ಲಕ್ಷ ಜನರಿಗೆ ಅನುಕೂಲವಾಗಲು ಈ ಯೋಜನೆ ರೂಪಿಸಲಾಗಿದೆ.

    2020-21 ರಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಪರಿಷ್ಕೃತ ಅಂದಾಜು ಮೊತ್ತ 21,473 ಕೋಟಿ ರೂ.ಗೆ ಏರಿಕೆಯಾಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡಿದ್ದು ಬಹಳ ಅನುಕೂಲಕರ: ಬೊಮ್ಮಾಯಿ

    ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡಿದ್ದು ಬಹಳ ಅನುಕೂಲಕರ: ಬೊಮ್ಮಾಯಿ

    ಹಾವೇರಿ: ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ (Union Budget 2023) ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ (Upper Bhadra Project) 5,300 ಕೋಟಿ ರೂ. ಘೋಷಣೆ ಮಾಡಿದ್ದಾರೆ. ಅದನ್ನು ನಾನು ಸ್ವಾಗತ ಮಾಡುತ್ತಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಹರ್ಷ ವ್ಯಕ್ತಪಡಿಸಿದರು.

    ಬೆಂಗಳೂರಿನಿಂದ ಬ್ಯಾಡಗಿ ತಾಲೂಕಿನ ಶಿಡೇನೂರು ಗ್ರಾಮಕ್ಕೆ ಆಗಮಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಪ್ರಮುಖ ನೀರಾವರಿ ಯೋಜನೆಯಾಗಿದೆ. ಮಧ್ಯ ಕರ್ನಾಟಕದ ಬರಗಾಲ ಪೀಡಿತ, ಬಿಸಿಲು ಪ್ರದೇಶದ ನಾಡಿಗೆ ಒಂದು ಲಕ್ಷಕ್ಕಿಂತ ಹೆಚ್ಚು ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ, ಕುಡಿಯುವ ನೀರಿನ ಮಹತ್ವದ ಯೋಜನೆ ಇದಾಗಿದ್ದು, ಇದರಿಂದ ಬಹಳ ಅನುಕೂಲವಾಗಲಿದೆ. ರಾಷ್ಟ್ರೀಯ ಯೋಜನೆಯಾಗಿ ಮಾಡುವಂತೆ ಮೊದಲೇ ಪ್ರಸ್ತಾವನೆ ಕಳಿಸಿದ್ದೆವು. ಹೀಗಾಗಿ 5,300 ಕೋಟಿ ರೂ. ನೀಡಿದ್ದು ಸ್ವಾಗತಾರ್ಹ ಎಂದರು.

    ಕರ್ನಾಟಕದ (Karnataka) ಹಲವಾರು ಯೋಜನೆಗಳಲ್ಲಿ ಇದು ಮೊದಲು ರಾಷ್ಟ್ರೀಯ ಯೋಜನೆಯಾಗಿದೆ. ಈ ಯೋಜನೆಗೆ ಇಷ್ಟು ದೊಡ್ಡ ಪ್ರಮಾಣದ ಅನುದಾನ ಘೋಷಣೆ ಮಾಡಿದ್ದು, ಸಂತಸದ ಸಂಗತಿಯಾಗಿದೆ ಎಂದು ಹೇಳಿದರು. ಇದನ್ನೂ ಓದಿ: ದೂರ ದೃಷ್ಟಿಯ ಜನಸ್ನೇಹಿ ಬಜೆಟ್: ಎಂಟಿಬಿ ನಾಗರಾಜು

    ರೈತರ ಫಲವತ್ತಾದ ಭೂಮಿಯಲ್ಲಿ ಕಾರಿಡಾರ್ ಬೇಡ: ಬ್ಯಾಡಗಿ ಇಂಡಸ್ಟ್ರಿಯಲ್ ಕಾರಿಡಾರ್ ಭೂಸ್ವಾಧೀನಕ್ಕೆ ರೈತರ ವಿರೋಧ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಫಲವತ್ತಾದ ಭೂಮಿ ಇರುವ ಕಾರಣ ರೈತರು ವಿರೋಧ ಮಾಡಿದ್ದಾರೆ. ಎಲ್ಲಿ ಫಲವತ್ತಾದ ಭೂಮಿ ಇರುತ್ತದೆ. ಅದನ್ನು ತೆಗೆದುಕೊಳ್ಳದೆ ಬಂಜರು ಭೂಮಿ ತಗೊಂಡು ಕೈಗಾರಿಕಾ ಕಾರಿಡಾರ್ ಮಾಡಬೇಕು ಅಂತ ನಿರ್ಧಾರ ಮಾಡಿದ್ದೇವೆ. ಅದಕ್ಕಾಗಿಯೇ ಬ್ಯಾಡಗಿ ಇಂಡಸ್ಟ್ರಿಯಲ್ ಕಾರಿಡಾರ್‌ಗೆ ಭೂಸ್ವಾಧೀನ ಪ್ರಕ್ರಿಯೆ ಆದೇಶ ಹಿಂಪಡೆದಿದ್ದೇವೆ. ಹಾವೇರಿ ಜಿಲ್ಲೆಯಲ್ಲಿ ಬೇರೆ ಕಡೆ ಎಲ್ಲಿ ಕಾರಿಡಾರ್ ಮಾಡಬೇಕು ಎಂಬುದರ ಬಗ್ಗೆ ಜಮೀನು ಹುಡುಕಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು. ಇದನ್ನೂ ಓದಿ: Union Budget 2023: ಚಿನ್ನ, ಬೆಳ್ಳಿ ಮತ್ತಷ್ಟು ದುಬಾರಿ – ಯಾವುದು ಇಳಿಕೆ? ಯಾವುದು ಏರಿಕೆ?

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕರ್ನಾಟಕಕ್ಕೆ ಗಿಫ್ಟ್‌ : ಭದ್ರಾ ಮೇಲ್ದಂಡೆ ಇನ್ನು ಮುಂದೆ ರಾಷ್ಟ್ರೀಯ ಯೋಜನೆ – 5,300 ಕೋಟಿ ರೂ. ಅನುದಾನ

    ಕರ್ನಾಟಕಕ್ಕೆ ಗಿಫ್ಟ್‌ : ಭದ್ರಾ ಮೇಲ್ದಂಡೆ ಇನ್ನು ಮುಂದೆ ರಾಷ್ಟ್ರೀಯ ಯೋಜನೆ – 5,300 ಕೋಟಿ ರೂ. ಅನುದಾನ

    ನವದೆಹಲಿ: ಬಜೆಟ್‌ನಲ್ಲಿ ಕರ್ನಾಟಕಕ್ಕೆ ಭರ್ಜರಿ ಗಿಫ್ಟ್‌ ಸಿಕ್ಕಿದ್ದು ಭದ್ರಾ ಮೇಲ್ದಂಡೆ ಯೋಜನೆಯನ್ನು (Upper Bhadra Project) ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡಲಾಗಿದೆ. ಈ ಮೂಲಕ ಭದ್ರಾ ಮೇಲ್ದಂಡೆ ಯೋಜನೆ ರಾಜ್ಯದ ಪ್ರಥಮ ರಾಷ್ಟ್ರೀಯ ನೀರಾವರಿ ಯೋಜನೆಯಾಗಿ ಹೊರಹೊಮ್ಮಿದೆ.

    ಬಜೆಟ್‌ ಭಾಷಣದಲ್ಲಿ (Union Budget 2023) ನಿರ್ಮಲಾ ಸೀತಾರಾಮನ್‌ (Nirmala Sitaraman) ಈ ಯೋಜನೆಗೆ 5,300 ಕೋಟಿ ರೂ. ಹಣವನ್ನು ಮೀಸಲಿಡಲಾಗಿದೆ ಎಂದು ಪ್ರಕಟಿಸಿದರು. ಇದನ್ನೂ ಓದಿ: 1 ವರ್ಷ ಉಚಿತ ಆಹಾರ, ಕೇಂದ್ರವೇ ಸಂಪೂರ್ಣ ವೆಚ್ಚ ಭರಿಸಲಿದೆ: ನಿರ್ಮಲಾ ಸೀತಾರಾಮನ್‌

    ಈ ಹಿಂದೆ ರಾಜ್ಯದ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಪ್ರತಿಕ್ರಿಯಿಸಿ, ‘‘ಯೋಜನೆಗೆ 23,000 ಕೋಟಿ ರೂ. ವೆಚ್ಚವಾಗಲಿದ್ದು, ಸದ್ಯ 16,000 ಕೋಟಿ ರೂ. ವೆಚ್ಚದ ಕೆಲಸ ಬಾಕಿ ಇದೆ. ರಾಷ್ಟ್ರೀಯ ಯೋಜನೆ ಘೋಷಣೆ ನಂತರ ಯೋಜನೆಯಡಿ ಬಾಕಿಯಿರುವ ಮೊತ್ತದಲ್ಲಿಶೇ. 60ರಷ್ಟನ್ನು ಕೇಂದ್ರ ಭರಿಸಲಿದೆ. ಅದರಂತೆ ಕೇಂದ್ರದಿಂದ ಯೋಜನೆಗೆ 5,300 ಕೋಟಿ ರೂ. ಸಿಗುವ ನಿರೀಕ್ಷೆ ಇದೆ,’’ ಎಂದು ತಿಳಿಸಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಭದ್ರಾ ಮೇಲ್ದಂಡೆ, ಎತ್ತಿನಹೊಳೆ ಯೋಜನೆಗಳ ಪ್ರಗತಿ ಪರಿಶೀಲಿಸಿದ ಸಿಎಂ

    ಭದ್ರಾ ಮೇಲ್ದಂಡೆ, ಎತ್ತಿನಹೊಳೆ ಯೋಜನೆಗಳ ಪ್ರಗತಿ ಪರಿಶೀಲಿಸಿದ ಸಿಎಂ

    ಬೆಂಗಳೂರು: ಎತ್ತಿನಹೊಳೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಕಾಮಗಾರಿಗಳನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದರು.

    ಎತ್ತಿನಹೊಳೆ ಯೋಜನೆಯಲ್ಲಿ ಈ ವರೆಗೆ 9003.86 ಕೋಟಿ ರೂ. ವೆಚ್ಚವಾಗಿದ್ದು, ಮೊದಲ ಹಂತದಲ್ಲಿ ಜುಲೈ ಅಂತ್ಯದೊಳಗೆ ವೇದಾವತಿ ವ್ಯಾಲಿಗೆ ನೀರು ಹರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದರು. ಅಲ್ಲದೆ ಎತ್ತಿನಹೊಳೆ ಯೋಜನೆಯು ಏಳು ಜಿಲ್ಲೆಯ 29 ತಾಲೂಕುಗಳ 6,557 ಗ್ರಾಮಗಳ 68 ಲಕ್ಷಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರು ಒದಗಿಸಲಿದೆ ಎಂದು ವಿವರಿಸಿದರು.

    ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡುವ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಕೇಂದ್ರ ಸಚಿವ ಸಂಪುಟದ ಅನುಮೋದನೆ ಬಾಕಿ ಇದೆ. ಈ ಬಗ್ಗೆ ಕೇಂದ್ರ ಸಚಿವರೊಂದಿಗೆ ದೂರವಾಣಿ ಮೂಲಕ ಚರ್ಚಿಸಲಾಗಿದ್ದು, ಶೀಘ್ರ ಅನುಮೋದನೆ ನೀಡಲು ಕೋರಲಾಗಿದೆ. ಅಗತ್ಯ ಬಿದ್ದರೆ ಕೇಂದ್ರ ಸಚಿವರನ್ನು ಖುದ್ದು ಭೇಟಿ ಮಾಡಿ ಮಂಜೂರಾತಿಗೆ ಒತ್ತಾಯಿಸಲಾಗುವುದು ಎಂದು ತಿಳಿಸಿದರು.

    ಈ ಯೋಜನೆಯಡಿ ಕಳೆದೆರಡು ವರ್ಷಗಳಲ್ಲಿ 2362.62 ಕೋಟಿ ರೂ.ಗಳ ಆರ್ಥಿಕ ಪ್ರಗತಿಯನ್ನು ಸಾಧಿಸಲಾಗಿದ್ದು, ಯೋಜನೆಯಿಂದ ತುಮಕೂರು, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳಿಗೆ ಅನುಕೂಲವಾಗಲಿದೆ. ನೀರಾವರಿ ಯೋಜನೆಗಳನ್ನು ಯಾವುದೇ ಲೋಪವಿಲ್ಲದಂತೆ ಅನುಷ್ಠಾನಗೊಳಿಸಬೇಕು. ಯಾವುದೇ ಲೋಪದೋಷಗಳು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಇದೇ ವೇಳೆ ಸಿಎಂ ಎಚ್ಚರಿಸಿದರು.

    ಸಭೆಯಲ್ಲಿ ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್, ಜಲ ಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.