ಬೆಂಗಳೂರು: ಪತಿಯೊಂದಿಗೆ ಗಲಾಟೆ ಹಿನ್ನೆಲೆ ಮನನೊಂದು ಗೃಹಿಣಿ (Housewife) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ಲಗ್ಗೇರೆಯ (Laggere) ಮುನೇಶ್ವರ ಬ್ಲಾಕ್‌ನಲ್ಲಿ ನಡೆದಿದೆ.
ರಕ್ಷಿತಾ (26) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ರಕ್ಷಿತಾ ನಾಲ್ಕು ವರ್ಷದ ಹಿಂದೆ ರವೀಶ್‌ನನ್ನು ಮದುವೆಯಾಗಿದ್ದರು. ಕಳೆದ ಮೂರು ವರ್ಷದಿಂದ ರವೀಶ್ ಪತ್ನಿಯೊಂದಿಗೆ ಗಲಾಟೆ ಮಾಡುತ್ತಿದ್ದ. ರವೀಶ್ ಜೊತೆ ಸಹೋದರ ಲೋಕೇಶ್ ಕೂಡ ರಕ್ಷಿತಾ ಜೊತೆ ಗಲಾಟೆ ಮಾಡುತ್ತಿದ್ದ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಲೋಕೇಶ್ ರವೀಶ್ ಮನೆಯಲ್ಲೇ ವಾಸವಾಗಿದ್ದ. ಭಾನುವಾರ ರಾತ್ರಿ ಕೂಡ ರಕ್ಷಿತಾ ಜೊತೆ ರವೀಶ್ ಹಾಗೂ ಲೋಕೇಶ್ ಗಲಾಟೆ ಮಾಡಿದ್ದಾರೆ. ಇದರಿಂದ ಮನನೊಂದು ರಕ್ಷಿತಾ ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ದೇಶದಲ್ಲೇ ಪ್ರಮುಖ ಪ್ರಕರಣಗಳ ಪಟ್ಟಿಯಲ್ಲಿ ರೇಣುಕಾಸ್ವಾಮಿ ಕೇಸ್‌ಗೆ 2ನೇ ಸ್ಥಾನ
ರವೀಶ್ ಬ್ಯಾಂಕ್‌ನಲ್ಲಿ ಮ್ಯಾನೇಜರ್ ಆಗಿದ್ದ. ಗಂಡನೇ ರಕ್ಷಿತಾಳನ್ನು ಕೊಲೆ ಮಾಡಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಮೂರು ವರ್ಷದ ಹೆಣ್ಣು ಮಗುವಿನ ಮೇಲೂ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಘಟನೆ ಸಂಬಂಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಕ್ರಿಮಿನಾಶಕ ಸಿಂಪಡಿಸಿದ್ದ ಆಹಾರ ಸೇವನೆ ಶಂಕೆ – 60ಕ್ಕೂ ಹೆಚ್ಚು ಕುರಿಗಳು ಸಾವು
ಮಂಗಳೂರು: ನ್ಯೂ ಇಯರ್ (New Year) ಪಾರ್ಟಿಯಲ್ಲಿ (Party) ಗಲಾಟೆ ನಡೆದ ಹಿನ್ನೆಲೆ ಯುವಕನ ಮೂಗನ್ನು (Nose) ಮತ್ತೊಬ್ಬ ಯುವಕ ಕಚ್ಚಿ ಹೊರೆತೆಗೆದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬೆಳ್ತಂಗಡಿ (Belthangady) ತಾಲೂಕಿನ ಪಿಲ್ಯ ಗ್ರಾಮದಲ್ಲಿ ನಡೆದಿದೆ.
ಉಲ್ಪೆ ಗ್ರಾಮದ ನಿವಾಸಿ ದೀಕ್ಷಿತ್ (28) ಮೂಗಿನ ಒಂದು ಭಾಗವನ್ನು ಕಳೆದುಕೊಂಡ ಯುವಕ. ಮೂಡಿಗೆರೆ ಮೂಲದ ರಾಕೇಶ್ ಮೂಗನ್ನು ಕಚ್ಚಿಕಿತ್ತ ಆರೋಪಿ. ರಾಕೇಶ್ ಹಾಗೂ ದೀಕ್ಷಿತ್ ಇಬ್ಬರೂ ಇಯರ್ ಎಂಡ್ ಪಾರ್ಟಿಯೊಂದಕ್ಕೆ ತೆರಳಿದ್ದು, ಪಾರ್ಟಿಯಲ್ಲಿ ಮದ್ಯಸೇವನೆ ಮಾಡಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಯುವಕನ ಬರ್ಬರ ಹತ್ಯೆ
ಚಿಕ್ಕಬಳ್ಳಾಪುರ: ಗ್ರಾಮದ ಮಧ್ಯದಲ್ಲೇ ಯುವಕನೋರ್ವನನ್ನು (Youth) ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಬಾಗೇಪಲ್ಲಿ (Bagepalli) ತಾಲೂಕಿನ ಯಲ್ಲಂಪಲ್ಲಿ ಗ್ರಾಮದಲ್ಲಿ ನಡೆದಿದೆ.
ಗಜೇಂದ್ರ (28) ಕೊಲೆಯಾದ ಯುವಕ. ಈತ ವೃತ್ತಿಯಲ್ಲಿ ಚಾಲಕನಾಗಿದ್ದ ಎಂದು ತಿಳಿದುಬಂದಿದೆ. ಬುಧಾವಾರ ರಾತ್ರಿ ಗ್ರಾಮದ ಎಂಎಸ್‌ಐಎಲ್ ಮದ್ಯದಂಗಡಿ ಬಳಿ ಯುವಕರ ನಡುವೆ ಗಲಾಟೆ ನಡೆದಿದೆ ಎನ್ನಲಾಗಿದೆ. ಆದರೆ ಯಾವ ವಿಚಾರಕ್ಕೆ ಗಲಾಟೆ ನಡೆದಿದೆ ಎಂದು ತಿಳಿದುಬಂದಿಲ್ಲ. ಇಂದು ಬೆಳಗ್ಗೆ ನಡುರಸ್ತೆಯಲ್ಲಿ ಗಜೇಂದ್ರ ರಕ್ತಸಿಕ್ತವಾಗಿ ಪತ್ತೆಯಾಗಿದ್ದು, ರಕ್ತದ ಮಡುವಿನಲ್ಲಿ ಬಿದ್ದು ಸಾವನ್ನಪ್ಪಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಇದನ್ನೂ ಓದಿ: ಮುಲ್ಕಿಯಲ್ಲಿ ಲಾರಿ ಡ್ರೈವರ್ ಅವಾಂತರ- ಬೈಕ್, ಆಟೋರಿಕ್ಷಾ, ಪೊಲೀಸ್ ಸಿಬ್ಬಂದಿಗೆ ಡಿಕ್ಕಿ
ಬೆಳಗ್ಗೆ ಎಂದಿನಂತೆ ಜನ ಎದ್ದು ಬಂದಾಗ ನಡುರಸ್ತೆಯಲ್ಲಿ ಮೃತದೇಹ ಕಂಡು ಬೆಚ್ಚಿ ಬಿದ್ದಿದ್ದಾರೆ. ಬಾಗೇಪಲ್ಲಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಈ ಕುರಿತು ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಓವರ್‌ಟೇಕ್ ಭರದಲ್ಲಿ ಮರಕ್ಕೆ ಬಸ್ ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು
ರಾಯಚೂರು: ಟಿಶ್ಯೂ ಪೇಪರ್ (Tissue Paper) ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಪಾನ್ ಶಾಪ್ (Pan Shop) ಮಾಲೀಕ ಇಬ್ಬರು ಯುವಕರಿಗೆ ಚಾಕು ಇರಿದ ಘಟನೆ ರಾಯಚೂರು (Raichur) ಜಿಲ್ಲೆಯ ಮಾನ್ವಿ (Manvi) ಪಟ್ಟಣದಲ್ಲಿ ನಡೆದಿದೆ.
ವೀರೇಶ್ ಚಾಕು ಇರಿದ ಪಾನ್ ಶಾಪ್ ಮಾಲೀಕ. ಕ್ಷುಲ್ಲಕ ಕಾರಣಕ್ಕೆ ಇಬ್ಬರು ಯುವಕರನ್ನು ಅಟ್ಟಾಡಿಸಿ ವೀರೇಶ್ ಚಾಕು ಇರಿದಿದ್ದಾನೆ. ಗಲಾಟೆಯಲ್ಲಿ ರಮೇಶ್ ಮತ್ತು ಸತ್ತರ್ ಎಂಬವರಿಗೆ ಗಂಭೀರ ಗಾಯಗಳಾಗಿವೆ. ರಮೇಶ್ ಹಾಗೂ ಸತ್ತರ್ ಸ್ನೇಹಿತರ ಜೊತೆ ಡಾಬಾದಲ್ಲಿ ಊಟ ಮಾಡುತ್ತಿದ್ದರು. ಈ ವೇಳೆ ಡಾಬಾದ ಒಳಗಡೆ ಬಂದಿದ್ದ ಪಾನ್ ಶಾಪ್ ಮಾಲೀಕ ವಿರೇಶ್‌ನನ್ನು ಕಂಡು ವೇಟರ್ ಟಿಶ್ಯೂ ಪೇಪರ್ ಕೊಡು ಎಂದು ಸತ್ತರ್ ಕೇಳಿದ್ದಾನೆ. ಇದರಿಂದ ಗಲಾಟೆ ಆರಂಭಗೊಂಡಿದ್ದು, ಈರುಳ್ಳಿ ಕತ್ತರಿಸಲು ಇಟ್ಟಿದ್ದ ಚಾಕುವಿನಿಂದ ವೀರೇಶ್ ಯುವಕರಿಗೆ ಇರಿದಿದ್ದಾನೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಬಿಎಂಟಿಸಿಗೆ ಇಬ್ಬರು ಬಲಿ
ಗಲಾಟೆ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಗಾಯಾಳುಗಳಿಗೆ ಮಾನ್ವಿ ಹಾಗೂ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿ ವಿರೇಶ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರಾಜ್ಯೋತ್ಸವಕ್ಕೆ ಧ್ವಜಸ್ತಂಭ ನಿಲ್ಲಿಸುವ ವೇಳೆ ವಿದ್ಯುತ್ ಪ್ರವಹಿಸಿ ಯುವಕ ಸಾವು
ಮಡಿಕೇರಿ: ಹಳೇ ದ್ವೇಷದ ಹಿನ್ನೆಲೆ ಯುವಕನ ಮರ್ಮಾಂಗಕ್ಕೆ ಹೊಡೆದು ಹತ್ಯೆ ಮಾಡಿರುವ ಘಟನೆ ಕೊಡಗು (Kodagu) ಜಿಲ್ಲೆಯ ವಿರಾಜಪೇಟೆ (Virajpet) ತಾಲೂಕಿನ ಸಿದ್ದಾಪುರ ಗ್ರಾಮದ ಪಾಲಿಬೆಟ್ಟ ರಸ್ತೆಯಲ್ಲಿ ನಡೆದಿದೆ.
ಕ್ರಿಸ್ಟಲ್ (28) ಹತ್ಯೆಯಾದ ದುರ್ದೈವಿ. ಗುರುವಾರ ರಾತ್ರಿ ಸಿದ್ದಾಪುರ ಗ್ರಾಮದ ಪಾಲಿಬೆಟ್ಟ ರಸ್ತೆಯಲ್ಲಿರುವ ಬಾರ್‌ವೊಂದರಲ್ಲಿ (Bar) ಕ್ರಿಸ್ಟಲ್ ಸ್ನೇಹಿತರು ಹಾಗೂ ರಂಜಿತ್ ಸ್ನೇಹಿತರು ಇಬ್ಬರು ಒಂದೇ ಬಾರಿನಲ್ಲಿ ಮದ್ಯಪಾನ ಮಾಡುತ್ತಿದ್ದ ಸಂದರ್ಭ ರಂಜಿತ್ ಹಾಗೂ ಕ್ರಿಸ್ಟಲ್ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ. ಇದನ್ನೂ ಓದಿ: ಮಕ್ಕಳಿಗೆ ಜಾಮೂನಿನಲ್ಲಿ ವಿಷ ಹಾಕಿದ ತಂದೆ – ಬಳಿಕ ತಾನೂ ಆತ್ಮಹತ್ಯೆಗೆ ಯತ್ನ
ಗಲಾಟೆಯನ್ನು ಗಮನಿಸಿದ ಬಾರ್ ಮ್ಯಾನೇಜರ್ ಸಿದ್ದಾಪುರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸ್ ಸ್ಥಳಕ್ಕೆ ಆಗಮಿಸುವ ವೇಳೆ ಕ್ರಿಸ್ಟಲ್ ತಂಡ ಹಾಗೂ ರಂಜಿತ್ ತಂಡದ ಯುವಕರು ಬಾರ್ ಒಳಗೆ ನುಗ್ಗಿ ಇನ್ನಷ್ಟು ಗಲಾಟೆ ಮಾಡಿಕೊಂಡು ಬಾರ್‌ನ ಶೌಚಾಲಯದ ಬಾಗಿಲು ಮುರಿದಿದ್ದಾರೆ. ಬಳಿಕ ಪೊಲೀಸರು ಕ್ರಿಸ್ಟಲ್‌ನ ಜೊತೆ ಇದ್ದ ಮೈಕೆಲ್ ಹಾಗೂ ಮತ್ತೊಬ್ಬರನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಕೂರಿಸಿದ್ದಾರೆ. ಆದರೆ ಗಲಾಟೆ ಮಾಡಿದ ರಂಜಿತ್ ಹಾಗೂ ಕ್ರಿಸ್ಟಲ್ ಇಬ್ಬರಿಗೂ ಸ್ಥಳದಲ್ಲೇ ಬುದ್ದಿವಾದ ಹೇಳಿ ಮನೆಗೆ ಹೋಗುವಂತೆ ತಿಳಿಸಿದ್ದರು. ಇದನ್ನೂ ಓದಿ: ಕೊಂಬಿನಿಂದ ತಿವಿದು ಬಾಲಕಿಯನ್ನು ಬಿಸಾಕಿದ ಹಸು- ತಮಿಳುನಾಡಿನ ದೃಶ್ಯ ಭಾರೀ ವೈರಲ್
ಶುಕ್ರವಾರ ಬೆಳಗ್ಗೆ ಬಾರ್‌ನಲ್ಲಿ ಗಲಾಟೆ ಮಾಡಿಕೊಂಡಿದ್ದ ಕ್ರಿಸ್ಟಲ್ (28) ಮೃತದೇಹ ಪಾಲಿಬೆಟ್ಟ ರಸ್ತೆಯಲ್ಲಿ ಗೋಚರಿಸಿದೆ. ಯುವಕನ ಮರ್ಮಾಂಗಕ್ಕೆ ಹೊಡೆದು ಹತ್ಯೆ ಮಾಡಲಾಗಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಸಿದ್ದಾಪುರ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಅಹಮದಾಬಾದ್‍ನಲ್ಲಿ ಭೀಕರ ಅಪಘಾತ – ಹತ್ತು ಮಂದಿ ಸಾವು
ಘಟನೆಯ ವಿವರ:
ಕಳೆದ ಎರಡು ಮೂರು ತಿಂಗಳ ಹಿಂದೆ ಕ್ರಿಸ್ಟಲ್ ಹಾಗೂ ರಂಜಿತ್ ತಂಡದ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಏರ್ಪಟ್ಟಿದ್ದು, ಇಬ್ಬರ ನಡುವೆ ನಡೆದ ಗಲಾಟೆ ನ್ಯಾಯಾಲಯದ ಮೆಟ್ಟಿಲೇರಿತ್ತು. ಗುರುವಾರವೂ ಹಳೆಯ ಗಲಾಟೆಗೆ ಸಂಬಂಧಿಸಿದಂತೆ ಕೋರ್ಟ್‌ನಲ್ಲಿ ವಿಚಾರಣೆಯನ್ನು ಮುಗಿಸಿಕೊಂಡು ಬಂದ ಇಬ್ಬರೂ ತಮ್ಮ ಸ್ನೇಹಿತರೊಂದಿಗೆ ರಾತ್ರಿ ಬಾರ್‌ನಲ್ಲಿ ಮುಖಾಮುಖಿ ಭೇಟಿಯಾಗಿ ಮತ್ತೊಮ್ಮೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಮಾಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಲಸಿಕೆ ಹಾಕ್ತಿದ್ದಾಗಲೇ ಕುಸಿದ ಅಂಗನವಾಡಿಯ ಮೇಲ್ಛಾವಣಿ- ಮಗುವಿನ ತಲೆಗೆ ಗಾಯ
ನಂತರ ಪೊಲೀಸರು ಬಂದು ಕ್ರಿಸ್ಟಲ್‌ನ ಜೊತೆಯಲ್ಲಿದ್ದ ಯುವಕರನ್ನು ಕರೆದುಕೊಂಡು ಹೋಗಿ ಕ್ರಿಸ್ಟಲ್‌ನನ್ನು ಮನೆಗೆ ಹೋಗುವಂತೆ ಹೇಳಿ ಹೋಗಿದ್ದಾರೆ. ಆದರೆ ಇಬ್ಬರ ನಡುವೆ ಗಲಾಟೆ ನಡೆದಿದ್ದು ಗೊತ್ತಾಗಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗದೆ ಪೊಲೀಸರು ಬಿಟ್ಟು ಹೋಗಿದ್ದರಿಂದ ರಾತ್ರಿ ಮತ್ತೊಮ್ಮೆ ರಸ್ತೆ ಮಧ್ಯದಲ್ಲೇ ಗಲಾಟೆ ನಡೆದು ಹತ್ಯೆ ಮಾಡಲಾಗಿದೆ. ಸಿದ್ದಾಪುರ ಪೊಲೀಸರ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಕ್ರಿಸ್ಟಲ್ ಕುಟುಂಬಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ: ಮಲಗಿದ್ದಲ್ಲೇ ಹೃದಯಾಘಾತ – ಪೊಲೀಸ್ ಕಾನ್ಸ್‌ಟೇಬಲ್ ನಿಧನ
ಶಿವಮೊಗ್ಗ: ವಾಸದ ಮನೆಯ ವಿಷಯಕ್ಕೆ ಕುಡಿದ ಮತ್ತಿನಲ್ಲಿ ನಡೆದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಶಿವಮೊಗ್ಗದ (Shivamogga) ವಿದ್ಯಾನಗರದಲ್ಲಿ (Vidyanagar) ನಡೆದಿದೆ.
ಕೊಲೆಯಾದ ವ್ಯಕ್ತಿಯನ್ನು ಸುಭಾಷ್ ನಗರದ ನಿವಾಸಿ ಜ್ಞಾನೇಶ್ವರ್ (45) ಎಂದು ಗುರುತಿಸಲಾಗಿದೆ. ವಿದ್ಯಾನಗರ ಬಡಾವಣೆಯಲ್ಲಿ ಜ್ಞಾನೇಶ್ವರ್ ಅವರ ಪತ್ನಿ, ತಾಯಿಗೆ ಸೇರಿದ ಮನೆ (Home) ಇದೆ. ಈ ಮನೆಯ ವಿಚಾರಕ್ಕೆ ಜ್ಞಾನೇಶ್ವರ್ ಹಾಗೂ ಪತ್ನಿಯ ಸೋದರಮಾವ ನಾಗರಾಜನ ನಡುವೆ ಶನಿವಾರ ಜಗಳ ನಡೆದಿದೆ. ಇದನ್ನೂ ಓದಿ: ಗ್ರೆನೇಡ್ ಮೇಲಿನ ಮೇಡ್ ಇನ್ ವಿವರವನ್ನೇ ಅಳಿಸಿ ಹಾಕಿರುವ ಶಂಕಿತ ಉಗ್ರರು
ಶನಿವಾರ ರಾತ್ರಿ ಇಬ್ಬರು ಮದ್ಯ ಸೇವಿಸಿ ಜಗಳವಾಡಿಕೊಂಡಿದ್ದಾರೆ. ಈ ವೇಳೆ ನಾಗರಾಜ್, ಜ್ಞಾನೇಶ್ವರ್‌ನನ್ನು ಬಲವಾಗಿ ನೆಲಕ್ಕೆ ತಳ್ಳಿದ್ದಾನೆ. ಜ್ಞಾನೇಶ್ವರ್ ನೆಲಕ್ಕೆ ಬಿದ್ದ ಪರಿಣಾಮ ತಲೆಗೆ ಪೆಟ್ಟು ಬಿದ್ದಿದೆ. ತಲೆಗೆ ತೀವ್ರ ಪೆಟ್ಟು ಬಿದ್ದ ಪರಿಣಾಮ ಜ್ಞಾನೇಶ್ವರ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಇದನ್ನೂ ಓದಿ: ಬೆಂಗ್ಳೂರಿನ 2 ಮನೆಗಳಲ್ಲಿ ಕೆಜಿಗಟ್ಟಲೆ ಸ್ಫೋಟಕ ಪತ್ತೆ
ಬೆಂಗಳೂರು: ಖಾಸಗಿ ಕಾರ್ಯಕ್ರಮವೊಂದರ ವೀಡಿಯೋ ವಾಟ್ಸಪ್‌ನಲ್ಲಿ ಹಂಚಿಕೊಂಡ ಕುರಿತಾಗಿ ಕೋಚ್ ಪತ್ನಿ ಮತ್ತು ಅಥ್ಲಿಟ್ (Athlete) ಮಧ್ಯೆ ವಾಗ್ವಾದ ಶುರುವಾಗಿದ್ದು, ಕೋಚ್ (Coach) ಪತ್ನಿ ಅಥ್ಲಿಟ್ ಮೇಲೆ ಹಲ್ಲೆ ಮಾಡಿರುವ ವೀಡಿಯೋ ಎಲ್ಲೆಡೆ ವೈರಲ್ ಆಗಿದೆ.
ಬೆಂಗಳೂರಿನ (Bengaluru) ಕಂಠೀರವ ಮೈದಾನದಲ್ಲಿ (Kanteerava Stadium) ಘಟನೆ ನಡೆದಿದ್ದು, ಬಿಂದುರಾಣಿ ಎಂಬ ಅಥ್ಲಿಟ್ ಬೆಳಗ್ಗೆ ಪ್ರಾಕ್ಟಿಸ್‌ಗೆಂದು ಹೋದ ವೇಳೆ ಶ್ವೇತಾ ಎಂಬ ಮಹಿಳೆ ಆಕೆಯನ್ನು ನಿಂದನೆ ಮಾಡಿ ಹಲ್ಲೆಗೆ ಯತ್ನಿಸಿದ್ದಾರೆ. ಈ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅಥ್ಲಿಟ್ ಬಿಂದುರಾಣಿ, ಖಾಸಗಿ ಕಾರ್ಯಕ್ರಮವೊಂದರ ವೀಡಿಯೋವೊಂದನ್ನು ಕೋಚ್‌ಗಳ ವಾಟ್ಸಪ್ ಗ್ರೂಪ್‌ನಲ್ಲಿ ಶೇರ್ ಮಾಡಿದ್ದೆ. ಆ ವಿಡಿಯೋದಲ್ಲಿ ತಪ್ಪು ಮಾಹಿತಿ ನೀಡಿದ್ದೀಯಾ ಎಂದು ಕೋಚ್ ಯತೀಶ್ ಎಂಬವರ ಪತ್ನಿ ಹಲ್ಲೆಗೆ ಯತ್ನಿಸಿದ್ದಾರೆ ಎಂದರು. ಇದನ್ನೂ ಓದಿ: ಶಾಸಕ ಸತೀಶ್ ರೆಡ್ಡಿಗೆ ಮಾತೃವಿಯೋಗ
ತಪ್ಪು ಮಾಹಿತಿ ನೀಡಿದ್ದೀಯಾ ಎಂದು ಕೋಚ್ ಗ್ರೂಪ್‌ನಲ್ಲಿ ಪ್ರಶ್ನೆ ಮಾಡಿದ್ದರು. ಈ ಕುರಿತು ಗ್ರೂಪ್‌ನಲ್ಲಿ ಸ್ಪಷ್ಟನೆ ಕೊಡದೆ ನೇರವಾಗಿ ಕಾಲ್ ಮಾಡಿದೆ. ಕೆಲವೇ ನಿಮಿಷದಲ್ಲಿ ಕಾಲ್ ಕಟ್ ಆಯಿತು. ನಾನು ಅಲ್ಲಿಗೆ ಸುಮ್ಮನಾದೆ. ಆ ಘಟನೆ ಆದ ಬಳಿಕ ಇಂದು ಬೆಳಗ್ಗೆ ಕೋಚ್ ಯತೀಶ್ ಅವರ ಪತ್ನಿ ಬಂದು ಗಲಾಟೆ ಮಾಡಿದ್ದಾರೆ. ನಾನು ವಿಷಯ ದೊಡ್ಡದು ಮಾಡುವುದು ಬೇಡವೆಂದು ಸುಮ್ಮನಾದೆ. ಘಟನೆಯ ಸಂಬಂಧ ಅಥ್ಲೆಟಿಕ್ ಅಸೋಸಿಯೇಷನ್‌ಗೆ ದೂರು ನೀಡುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: 20 ಬಾಕ್ಸ್ ಟೊಮೆಟೋ 58 ಸಾವಿರಕ್ಕೆ ಮಾರಾಟ- ರೈತ ಫುಲ್ ಖುಷ್
ಬಿಂದುರಾಣಿ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾದ ಶ್ವೇತಾ ಜಿ.ಕೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದು, ಖೇಲ್‌ರತ್ನ ಪ್ರಶಸ್ತಿ ಸಂಬಂಧ ಪೋಸ್ಟ್ ಮಾಡಿಕೊಂಡಿದ್ದಕ್ಕೆ ನನ್ನ ಗಂಡ ಯತೀಶ್ ಬಿಂದುಗೆ ಗ್ರೂಪ್‌ನಲ್ಲಿಯೇ ಪ್ರಶ್ನೆ ಮಾಡಿದ್ದರು. ಕೋಚ್‌ಗ್ರೂಪ್‌ನಲ್ಲಿ ಉತ್ತರ ಕೊಡಬೇಕಿದ್ದ ಬಿಂದುರಾಣಿ, ರಾತ್ರಿ 10 ಗಂಟೆಗೆ ಆಕೆಯ ಗಂಡನ ಕಡೆಯಿಂದ ನನ್ನ ಪತಿ ಯತೀಶ್‌ಗೆ ಕಾಲ್ ಮಾಡಿಸಿ ಬೆದರಿಕೆ ಹಾಕಿಸಿದ್ದಾಳೆ. ನನ್ನ ಪತಿ ಕಾಲ್ ಕಟ್ ಮಾಡಿದ ನಂತರ ಕಾಲು ಗಂಟೆಯಲ್ಲಿ ಮತ್ತೊಮ್ಮೆ ಕರೆ ಮಾಡಿದ್ದಾರೆ. ಈ ವೇಳೆ ನಾನು ಕಾಲ್ ರಿಸೀವ್ ಮಾಡಿ ಮಾತನಾಡುವಾಗ, ನನಗೆ ದೊಡ್ಡವರು ಗೊತ್ತು. ನಿಮ್ಮನ್ನು ಸ್ಟೇಡಿಯಂನಿಂದಲೇ ಹೊರಹಾಕಿಸುತ್ತೇನೆ ಎಂದು ಹೇಳಿದ್ದಾಳೆ. ಆ ಕಾರಣಕ್ಕಾಗಿ ಶನಿವಾರವೇ ಹೋಗಿದ್ದೆ. ಆದರೆ ಸಿಗಲಿಲ್ಲ. ಹಾಗಾಗಿ ಇವತ್ತು ಹೋಗಿ ಮಾತನಾಡಿದೆ ಎಂದರು. ಇದನ್ನೂ ಓದಿ: ಡಿಪೋ ಆವರಣದಲ್ಲಿ ನೇಣಿಗೆ ಶರಣಾದ ಸಾರಿಗೆ ನೌಕರ
ಬಿಂದು ನಾನು ಮೊದಲಿನಿಂದಲೇ ಒಟ್ಟಿಗೆ ಅಭ್ಯಾಸ ಮಾಡಿದ ಪರಿಚಯ ಇದ್ದ ಕಾರಣ ಏರುಧ್ವನಿಯಲ್ಲಿ ಮಾತನಾಡಿದ್ದು ನಿಜ. ಬಿಂದುರಾಣಿ ಗಂಡನ ಕಡೆಯಿಂದ ಕಾಲ್ ಮಾಡಿಸಿದ್ದಕ್ಕೆ ನಾನು ನನ್ನ ಗಂಡನ ಪರವಾಗಿ ಹೋಗಿ ಮಾತನಾಡಿದ್ದೇನೆ. ಬಿಂದುರಾಣಿ ಈ ಹಿಂದೆ ನಮ್ಮ ಬಾಕ್ಸ್‌ನಿಂದ ಒಂದು ಲಕ್ಷ ಕಳ್ಳತನ ಮಾಡಿದ್ದಳು. ಹಿರಿಯರು ಮಧ್ಯಪ್ರವೇಶ ಮಾಡಿದ್ದರಿಂದ ದೂರು ಕೊಟ್ಟಿರಲಿಲ್ಲ. ಅವಳು ಕಾನೂನಾತ್ಮಕವಾಗಿ ಹೋದರೆ ನಾನೂ ಕಾನೂನಾತ್ಮಕವಾಗಿ ಹೋಗುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಎಲ್ಲಾ ರೀತಿಯಲ್ಲೂ ಬಳಸಿಕೊಂಡು ಮದುವೆ ನಿರಾಕರಣೆ- ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ದುರ್ಮರಣ
ಹಾಸನ: ಜಗಳ (Uproar) ಬಿಡಿಸಲು ಹೋದ ಪೊಲೀಸ್ ಪೇದೆ (Police Constable) ಮೇಲೆ ಕಲ್ಲು ಹಾಗೂ ಲಾಂಗ್‌ನಿಂದ ಮಾರಣಾಂತಿಕ ಹಲ್ಲೆ (Attack) ನಡೆಸಿರುವ ಘಟನೆ ಹಾಸನ (Hassan) ಜಿಲ್ಲೆಯ ಹೊಳೆನರಸೀಪುರ (Holenarasipura) ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಮಳಲಿ ದೇವಸ್ಥಾನದಲ್ಲಿ ಘಟನೆ ನಡೆದಿದ್ದು, ಯಸಳೂರು ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಶರತ್ ಹಲ್ಲೆಗೊಳಗಾಗಿದ್ದಾರೆ. ಶರತ್ ಹೊಳೆನರಸೀಪುರ ತಾಲೂಕಿನ ಕುಂದೂರು ಹೋಬಳಿಯ ಎಸ್.ಹೊನ್ನೇನಹಳ್ಳಿ ಗ್ರಾಮದವರಾಗಿದ್ದು, ಜೂ.15ರಂದು ಸಾಂದರ್ಭಿಕ ರಜೆ ಪಡೆದು ತಮ್ಮ ಗ್ರಾಮದ ದೀಪಕ್ ಎಂಬವರ ಮಗಳ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ಮಳಲಿ ದೇವಸ್ಥಾನಕ್ಕೆ ಬಂದಿದ್ದರು. ಈ ವೇಳೆ ದೇವಸ್ಥಾನದ ಬಳಿಯಿರುವ ಸೋನಾ ಶ್ರೇಯ ಕನ್ವೆನ್ಷನ್ ಹಾಲ್ ಮುಂಭಾಗ ಚೇತನ್ ಎಂಬ ಯುವಕನಿಗೆ ಶರತ್ ಅವರ ಗ್ರಾಮಕ್ಕೆ ಸೇರಿದ ಯುವಕರ ಗುಂಪೊಂದು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ಮಾಡುತ್ತಿದ್ದರು. ಇದನ್ನೂ ಓದಿ: ಚಿಪ್ಸ್ ಕರೆಯುವ ಎಣ್ಣೆ ಬಾಣಲೆಗೆ ಬಿದ್ದಿದ್ದ 25 ರ ಯುವಕ ಸಾವು
ಈ ಸಂದರ್ಭ ಶರತ್ ಜಗಳ ಬಿಡಿಸಲು ಹೋಗಿದ್ದು, ಮಿಥುನ್, ಲೋಹಿತ್, ನಟರಾಜ ಹಾಗೂ ಇತರರು ಶರತ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ. ನಟರಾಜ ಎಂಬ ಆರೋಪಿ ಶರತ್ ತಲೆಗೆ ಕಲ್ಲಿನಿಂದ ಹೊಡೆದು ಕಾರಿನಿಂದ ಲಾಂಗ್ ತಂದಿದ್ದು, ಇದನ್ನು ನೋಡಿದ ಶರತ್ ಕನ್ವೆನ್ಷನ್ ಹಾಲ್ ಒಳಗೆ ಓಡಿದ್ದಾರೆ. ಈ ವೇಳೆ ಪುಂಡರೂ ಸಹ ಕನ್ವೆನ್ಷನ್ ಹಾಲ್ ಒಳಗೆ ನುಗ್ಗಿ ಶರತ್ ಮೇಲೆ ಮನಬಂದಂತೆ ಲಾಂಗ್‌ನಿಂದ ಹಲ್ಲೆ ನಡೆಸಿದ್ದಾರೆ. ಇದನ್ನೂ ಓದಿ: ಕೋಮು ಸಂಘರ್ಷದಲ್ಲಿ ಬಲಿಯಾದ ನಾಲ್ವರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ
ಹಲ್ಲೆಯಿಂದಾಗಿ ಶರತ್ ಹಾಲ್‌ನಲ್ಲೇ ಕುಸಿದು ಬಿದ್ದಿದ್ದಾರೆ. ಈ ಕುರಿತು ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಶರತ್ ಮೇಲೆ ಲಾಂಗ್‌ನಿಂದ ಹಲ್ಲೆ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರಯಾಗಿದ್ದು, ಸದ್ಯ ಗಾಯಾಳು ಶರತ್ ಹಾಸನದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಊರಿಗೆ ಹೋಗೋಣವೆಂದು ಕರ್ಕೊಂಡು ಬಂದು ಮಕ್ಕಳೆದುರೇ ದಾರಿ ಮಧ್ಯೆ ಪತ್ನಿಯನ್ನ ಹೊಡೆದು ಕೊಂದ!
ಕೋಲಾರ: ಕ್ಷುಲ್ಲಕ ಕಾರಣಕ್ಕೆ ಕಾಂಗ್ರೆಸ್ (Congress) ಹಾಗೂ ಜೆಡಿಎಸ್ (JDS) ಮುಖಂಡರ ನಡುವೆ ಗಲಾಟೆ ನಡೆದಿದ್ದು, ಜೆಡಿಎಸ್ ಮುಖಂಡ ಕಾಂಗ್ರೆಸ್ ಮುಖಂಡನಿಗೆ ಚಾಕು ಹಾಕಿದ ಘಟನೆ ಕೋಲಾರದ (Kolar) ಶ್ರೀನಿವಾಸಪುರದಲ್ಲಿ (Shrinivasapura) ನಡೆದಿದೆ.
ಪಟ್ಟಣದ ಚಿಂತಾಮಣಿ ಸರ್ಕಲ್‌ನಲ್ಲಿ ಈ ಘಟನೆ ನಡೆದಿದ್ದು, ಕಾಂಗ್ರೆಸ್ ಮುಖಂಡ, ಶಾಸಕ ರಮೇಶ್ ಕುಮಾರ್ ಬೆಂಬಲಿಗ ತಜಮುಲ್ ಹಲ್ಲೆಗೊಳಗಾದ ವ್ಯಕ್ತಿ. ಹಳೇ ದ್ವೇಷ ಹಿನ್ನೆಲೆ ಈ ಕೃತ್ಯ ನಡೆಸಿದ್ದು, ಜೆಡಿಎಸ್ ಮುಖಂಡ, ಮಾಜಿ ಶಾಸಕ ವೆಂಕಟಾಶಿವಾರೆಡ್ಡಿ ಬೆಂಬಲಿಗ ಸಾಧಿಕ್ ತಮ್ಮ ಆರಿಫ್ ಸೇರಿದಂತೆ ಮತ್ತಿಬ್ಬರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಮತ್ತೆ ಕರ್ನಾಟಕದಲ್ಲಿ ರೆಸಾರ್ಟ್ ರಾಜಕೀಯ? – ಶಾಸಕರು, ಪಕ್ಷೇತರರನ್ನು ಹಿಡಿದಿಟ್ಟುಕೊಳ್ಳಲು ಕಾಂಗ್ರೆಸ್ ತಂತ್ರ
ಹಿಂದಿನಿಂದ ಬಂದು ಬೆನ್ನಿಗೆ ಚೂರಿ ಹಾಕಿದ್ದು, ಹಲ್ಲೆಗೊಳಗಾದ ಮುಖಂಡನನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ. ಅಲ್ಲದೇ ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಆಸ್ಪತ್ರೆಯ ಬಳಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಆಸ್ಪತ್ರೆಯ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್‌ಗೆ ಜೆಡಿಎಸ್ ಬೆಂಬಲ ಕೊಟ್ರೆ ಒಳ್ಳೆಯದಾಗುತ್ತೆ: ಸತೀಶ್ ಜಾರಕಿಹೊಳಿ
ಮೇ 10ರಂದು ನಡೆದ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಪಟ್ಟಣದ ಚಿಂತಾಮಣಿ ಸರ್ಕಲ್‌ನ ಬೂತ್ ನಂಬರ್ 148ರಲ್ಲಿ ವಾಹನ ನಿಲ್ಲಿಸುವ ವಿಚಾರವಾಗಿ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದು ಗಲಾಟೆಯಾಗಿತ್ತು. ಈ ಹಿನ್ನೆಲೆ ಚಾಕು ಹಾಕಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಇದನ್ನೂ ಓದಿ: ಕಪ್ ಈಗ್ಲೂ ಅವರದ್ದೇ, ಮುಂದಕ್ಕೆ ನಮ್ಮದು: ಡಿ.ಕೆ ಸುರೇಶ್ ವ್ಯಂಗ್ಯ
ಕನ್ನಡದ ಖ್ಯಾತ ನಟ ಧ್ರುವ ಸರ್ಜಾ (Dhruva Sarja) ಇಂದು ತ್ಯಾಗರಾಜನಗರದ ಶಾರದಾ ಹೊಲಿಗೆ ಕೇಂದ್ರದಲ್ಲಿ ಬೂತ್ ಗೆ ಬಂದು ಮತದಾನ (Voting) ಮಾಡಿದರು. ಪತ್ನಿ ಪ್ರೇರಣಾ ಹಾಗೂ ತಂದೆ-ತಾಯಿ ಜೊತೆ ಆಗಮಿಸಿದ್ದ ಅವರು ಮತದಾನ ಮಾಡಿ ಇತರರಿಗೆ ಪ್ರೇರಣೆಯಾದರು. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಎಲ್ಲರೂ ಮತ ಹಾಕುವಂತೆ ಮನವಿ ಮಾಡಿದರು.
‘ಮತದಾನ ನಮ್ಮ ಹಕ್ಕು ಹಾಗೂ ನಮ್ಮ ಕರ್ತವ್ಯ ಕೂಡ. ಮತದಾನವನ್ನು ಎಲ್ಲರೂ ಮಾಡಬೇಕು. ಯುವಕರು ಮತದಾನದ ಬಗ್ಗೆ ಹೆಚ್ಚು ಜವಾಬ್ಧಾರಿ ವಹಿಸಿಕೊಳ್ಳಬೇಕು. ಯಾರೂ ಮತದಾನದಿಂದ ತಪ್ಪಿಸಿಕೊಳ್ಳಬಾರದು’ ಎಂದರು ಪ್ರಿನ್ಸ್ ಧ್ರುವ ಸರ್ಜಾ. ಇದನ್ನೂ ಓದಿ:ಶಾಹಿದ್ ಕಪೂರ್ ಜೊತೆ ಪೂಜಾ ಹೆಗ್ಡೆ ರೊಮ್ಯಾನ್ಸ್
ಪದ್ಮನಾಭನಗರ (Padmanabhanagar) ಮತದಾನ ಕೇಂದ್ರದಲ್ಲಿ ನಡೆದ ಗಲಾಟೆ ವಿಚಾರದ ಕುರಿತು ಮಾಧ್ಯಮಗಳ ಪ್ರಶ್ನೆ ಮಾಡಿದಾಗ, ‘ಕಿಡಿಗೇಡಿಗಳು ಗಲಾಟೆ ಮಾಡಿದ್ರೆ ಅಂತವರನ್ನು ಸುಮ್ನನೆ ಬಿಡಬಾರದು. ಅದರಲ್ಲೂ ಹೆಣ್ಣುಮಕ್ಕಳ ಮೇಲೆ ಹಲ್ಲೆ ಮಾಡಿದ್ರೆ ಅಂಥವರಿಗೆ ಬೂಟ್ ತೆಗೆದುಕೊಂಡು ಹೊಡೆಯಬೇಕು’ ಎಂದು ಆಕ್ರೋಶದಿಂದಲೇ ಮಾತನಾಡಿದರು. ಶಾಂತಿಯುತ ಮತದಾನಕ್ಕೆ ಇದೇ ಸಂದರ್ಭದಲ್ಲಿ ಅವರು ಕರೆ ನೀಡಿದರು.