Tag: upset

  • ದಿ ಕಾಶ್ಮೀರ್ ಫೈಲ್ಸ್: ರಾಷ್ಟ್ರ ಪ್ರಶಸ್ತಿ ಬಗ್ಗೆ ಅಸಮಾಧಾನ ಹೊರ ಹಾಕಿದ ಅನುಪಮ್ ಖೇರ್

    ದಿ ಕಾಶ್ಮೀರ್ ಫೈಲ್ಸ್: ರಾಷ್ಟ್ರ ಪ್ರಶಸ್ತಿ ಬಗ್ಗೆ ಅಸಮಾಧಾನ ಹೊರ ಹಾಕಿದ ಅನುಪಮ್ ಖೇರ್

    ಮೊನ್ನೆಯಷ್ಟೇ ಕೇಂದ್ರ ಸರಕಾರ 69ನೇ ಚಲನಚಿತ್ರ ರಾಷ್ಟ್ರ ಪ್ರಶಸ್ತಿಗಳನ್ನು ಘೋಷಣೆ ಮಾಡಿತ್ತು. ಈ ಪ್ರಶಸ್ತಿಗಳ ಬಗ್ಗೆ ಬಾಲಿವುಡ್ ನಟ ಅನುಪಮ್ ಖೇರ್ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ದಿ ಕಾಶ್ಮೀರ್ ಫೈಲ್ಸ್ (The Kashmir Files) ಚಿತ್ರದ ನಟನೆಗಾಗಿ ತಮಗೆ ರಾಷ್ಟ್ರ ಪ್ರಶಸ್ತಿ (National Award) ಬರಬೇಕಿತ್ತು ಎಂದು ಅವರು ಅಸಮಾಧಾನ ಹೊರಹಾಕಿದ್ದಾರೆ.

    ದಿ ಕಾಶ್ಮೀರ್ ಫೈಲ್ಸ್ ಚಿತ್ರಕ್ಕೆ ಎರಡು ರಾಷ್ಟ್ರ ಪ್ರಶಸ್ತಿಗಳು ಘೋಷಣೆಯಾಗಿವೆ. ಚಿತ್ರಕ್ಕೆ ರಾಷ್ಟ್ರೀಯ ಭಾವೈಕ್ಯತಾ ಪ್ರಶಸ್ತಿ ಸಂದಿದ್ದರೆ, ಈ ಸಿನಿಮಾದ ನಟನೆಗಾಗಿ ಅತ್ಯುತ್ತಮ ಪೋಷಕಿ ನಟಿ ಪ್ರಶಸ್ತಿ ಕೂಡ ಚಿತ್ರ ಪಡೆದುಕೊಂಡಿದೆ. ಆದರೆ, ಅನುಪಮ್ ಖೇರ್ (Anupam Kher) ಅವರಿಗೆ ಈ ಸಿನಿಮಾದ ನಟನೆಗಾಗಿ ಪ್ರಶಸ್ತಿ ಬರಬೇಕಿತ್ತು ಎನ್ನುವುದು ನಟನ ವಾದ.

     

    ದಿ ಕಾಶ್ಮೀರ್ ಫೈಲ್ಸ್  ಸಿನಿಮಾಗೆ ರಾಷ್ಟ್ರೀಯ ಭಾವೈಕ್ಯತಾ ಪ್ರಶಸ್ತಿ ಬಂದಿರುವುದಕ್ಕೆ ತಮಿಳು ನಾಡು ಮುಖ್ಯಮಂತ್ರಿ ಸ್ಟಾಲಿನ್  ಟೀಕೆ ಮಾಡಿದ್ದರು. ಭಾವೈಕ್ಯತೆಯನ್ನು ಹಾಳು ಮಾಡುವ ಚಿತ್ರಕ್ಕೆ ಅಂಥದ್ದೊಂದು ಪ್ರಶಸ್ತಿ ಕೊಟ್ಟಿರುವುದಕ್ಕೆ ಅವರು ಆಕ್ಷೇಪ ವ್ಯಕ್ತ ಪಡಿಸಿದ್ದರು. ಅಲ್ಲದೇ, ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಕೂಡ ಅಸಮಾಧಾನ ಹೊರ ಹಾಕಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಮಂತ ಪಾತ್ರಕ್ಕೆ ಡಬ್ ಮಾಡಲಾರೆ ಎಂದು ಘೋಷಿಸಿದ ಗಾಯಕಿ ಚಿನ್ಮಯಿ ಶ್ರೀಪಾದ್

    ಸಮಂತ ಪಾತ್ರಕ್ಕೆ ಡಬ್ ಮಾಡಲಾರೆ ಎಂದು ಘೋಷಿಸಿದ ಗಾಯಕಿ ಚಿನ್ಮಯಿ ಶ್ರೀಪಾದ್

    ಮಿಳು ಸಿನಿಮಾ ರಂಗದ ಖ್ಯಾತ ಗಾಯಕಿ, ಡಬ್ಬಿಂಗ್ ಕಲಾವಿದ ಚಿನ್ಮಯಿ ಶ್ರೀಪಾದ್, ತಮಿಳು ಸಿನಿಮಾ ರಂಗದಲ್ಲಿ ಮತ್ತೊಮ್ಮೆ ಬಿರುಗಾಳಿ ಎಬ್ಬಿಸಿದ್ದಾರೆ. ಈ ಹಿಂದೆ ಸ್ಟಾರ್ ನಟ ನಟಿಯರ ಖಾಸಗಿ ಸಂಗತಿಗಳನ್ನು ಆಚೆ ಹಾಕಿ, ಸಿನಿಮಾ ರಂಗದಲ್ಲೇ ಅಲ್ಲೋಲ ಕಲ್ಲೋಲ ಎಬ್ಬಿಸಿದ್ದ ಚಿನ್ಮಯಿ ಹಲವು ದಿನಗಳಿಂದ ಸಮಂತಾ ಜೊತೆಗೆ ಮುಸುಕಿನ ಗುದ್ದಾಟ ನಡೆಸಿದ್ದರು. ಇದೀಗ ಶಾಶ್ವತವಾದ ಸಂಬಂಧವನ್ನು ಕಳೆದುಕೊಳ್ಳಲು ಅವರು ನಿರ್ಧಾರಿಸಿದ್ದಾರೆ.

    ಸಮಂತಾ ಶರೀರವಾದರೆ, ಚಿನ್ಮಯಿ ಶ್ರೀಪಾದ್ ಶಾರೀರದಂತಿದ್ದರು. ಸಮಂತಾ ಅವರ ಬಹುತೇಕ ಪಾತ್ರಗಳಿಗೆ ಚಿನ್ಮಯಿ ಅವರೇ ಡಬ್ ಮಾಡುತ್ತಿದ್ದರು. ಹಾಗಾಗಿ ಸಮಂತಾ ಪಾತ್ರಗಳಿಗೆ ಬೇರೆಯದ್ದೇ ತೂಕ ಇರುತ್ತಿತ್ತು. ಇದೀಗ ಚಿನ್ಮಯಿ ಅವರು ಸಮಂತಾ ಮೇಲೆ ಕೋಪ ಮಾಡಿಕೊಂಡಿದ್ದು, ಇನ್ಮುಂದೆ ಸಮಂತಾ ಪಾತ್ರಕ್ಕೆ ತಾವು ಡಬ್ ಮಾಡುವುದಿಲ್ಲಿ ಎಂದು ಘೋಷಿಸಿದ್ದಾರೆ. ಅಲ್ಲದೇ, ಇನ್ಮುಂದೆ ಯಾವುದೇ ರೀತಿಯ ಕಾಂಟ್ಯಾಕ್ಟ್ ಕೂಡ ಇಟ್ಟುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ ಬಿಕ್ಕಿ ಬಿಕ್ಕಿ ಅತ್ತ ಜಯಶ್ರೀ ಆರಾಧ್ಯ

    ಹಲವು ತಿಂಗಳುಗಳಿಂದ ಸಮಂತಾ ಮತ್ತು ಚಿನ್ಮಯಿ ಹಲವು ಕಾರಣಗಳಿಂದಾಗಿ ಮನಸ್ತಾಪ ಮಾಡಿಕೊಂಡಿದ್ದರಂತೆ. ಅದು ಮತ್ತೆ ಸರಿ ಹೊಂದದ ಹಾಗೆ ಆಗಿದೆಯಂತೆ. ಹಾಗಾಗಿ ಚಿನ್ಮಯಿ ಇಂಥದ್ದೊಂದು ಖಡಕ್ ನಿರ್ಧಾರ ತಗೆದುಕೊಂಡಿದ್ದಾರೆ. ಯಾವುದೇ ಕಾರಣಕ್ಕೂ ಸಮಂತಾ ಸಿನಿಮಾದಲ್ಲಿ ಕೆಲಸ ಮಾಡಲಾರೆ ಎಂದು ಚಿನ್ಮಯಿ ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಶೆಟ್ಟರ್ ಹೇಳಿಕೆಯನ್ನು ಒಪ್ಪುತ್ತೇನೆ ಎಂದ ರಾಘವೇಂದ್ರ

    ಶೆಟ್ಟರ್ ಹೇಳಿಕೆಯನ್ನು ಒಪ್ಪುತ್ತೇನೆ ಎಂದ ರಾಘವೇಂದ್ರ

    ಬೆಂಗಳೂರು: ಉಪ ಮುಖ್ಯಮಂತ್ರಿ ಹುದ್ದೆ ಸಾಂವಿಧಾನಿಕ ಹುದ್ದೆಯಲ್ಲ ಎನ್ನುವುದು ನಿಜ. ಒಂದು ಗೌರವಯುತ ಹುದ್ದೆ ಎಂಬ ಜಗದೀಶ್ ಶಟ್ಟರ್ ಅವರ ಹೇಳಿಕೆಯನ್ನು ನಾನು ಒಪ್ಪುತ್ತೇನೆ ಎಂದು ಬಿ.ವೈ.ರಾಘವೇಂದ್ರ ಅವರು ಶೆಟ್ಟರ್ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

    ಇಂದು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಇಡೀ ದೇಶದಲ್ಲಿ ಎಲ್ಲೂ ಉಪಮುಖ್ಯಮಂತ್ರಿ ಹುದ್ದೆ ಸಾಂವಿಧಾನಿಕ ಬದ್ಧ ಸ್ಥಾನವಲ್ಲ. ಮೂರು ಡಿಸಿಎಂ ಮಾಡಿರುವುದು ಇದೇ ಮೊದಲಲ್ಲ. ಹಿಂದೆ ಉತ್ತರ ಪ್ರದೇಶ ಹಾಗೂ ಇತರೇ ರಾಜ್ಯಗಳಲ್ಲೂ ಮೂರು ಡಿಸಿಎಂ ಮಾಡಿದ್ದಾರೆ. ಹೀಗಾಗಿ ಇದರಲ್ಲಿ ವಿಶೇಷವೇನೂ ಇಲ್ಲ. ಮುಂದಿನ ಉತ್ತರಾಧಿಕಾರಿಗಳು ಎಂಬ ದೃಷ್ಟಿಯಿಂದ ಈ ರೀತಿ ಮಾಡಿದ್ದಲ್ಲ. ಆಯಾ ಸಂದರ್ಭಕ್ಕೆ ತಕ್ಕಂತೆ ಹೈ ಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ ಎಂದು ತಿಳಿಸಿದ್ದಾರೆ.

    ಸಂಘಟನೆಯ ದೂರದೃಷ್ಟಿಯಿಂದ ಈ ರೀತಿ ತೀರ್ಮಾನ ಕೈಗೊಂಡಿದ್ದಾರೆ. ಲಕ್ಷ್ಮಣ ಸವದಿಯವರನ್ನು ಡಿಸಿಎಂ ಮಾಡಿರುವ ಕುರಿತು ಪಕ್ಷದಲ್ಲಿ ಯಾರಿಗೂ ಅಸಮಾಧಾನವಿಲ್ಲ. ಮಾಧ್ಯಮಗಳಲ್ಲಿ ಈ ಕುರಿತು ಬಂದಿರುವುದು ಬಿಟ್ಟರೆ, ಪಕ್ಷದ ನಾಯಕರಲ್ಲಿ ಯಾವುದೇ ಅಸಮಾಧಾನವಿಲ್ಲ. ಇದೀಗ ಸಿಎಂ ಜೊತೆಯಲ್ಲೇ ಸಿ.ಟಿ.ರವಿ ಅವರು ಚಿಕ್ಕಮಗಳೂರು ಪ್ರವಾಸಕ್ಕೆ ತೆರಳಿದ್ದಾರೆ ಎಂದು ಸ್ಪಷ್ಟಪಡಿಸಿದರು.

    ನಿಮ್ಮ ಮಕ್ಕಳನ್ನು ಹಿಡಿತದಲ್ಲಿಟ್ಟುಕೊಳ್ಳಿ ವರ್ಗಾವಣೆ ದಂಧೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಕುಮಾರಸ್ವಾಮಿ ಅವರ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು, ಅಂತಹ ಸಂಕಷ್ಟ ಎದುರಾದರೆ ಅವರ ಮಗನಿಂದಲೇ ಬರಬಹುದು. ಈ ಕುರಿತು ಅವರಿಗೆ ಕನಸು ಬಿದ್ದಿರಬೇಕು ಇಲ್ಲವೇ ಅವರ ಅನುಭವ ಆ ರೀತಿ ಇರಬಹುದು ಹೀಗಾಗಿ ನಮ್ಮ ಮೇಲೆ ಆರೋಪ ಮಾಡಿದ್ದಾರೆ. ನಾನು ಸಂಸದನಾಗಿ ಶಿವಮೊಗ್ಗ ಕ್ಷೇತ್ರದ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿದ್ದೇನೆ. ಅನಾವಶ್ಯಕವಾಗಿ ಮೂಗು ತೂರಿಸುವ ಕೆಲಸವನ್ನು ಮಾಡಿಲ್ಲ, ವರ್ಗಾವಣೆ ದಂಧೆಯಲ್ಲಿ ಭಾಗಿಯಾಗಿಲ್ಲ. ಇತರೆ ವಿಷಯಗಳ ಕುರಿತು ತಲೆ ಕೆಡಿಸಿಕೊಂಡಿಲ್ಲ. ಮುಖ್ಯಮಂತ್ರಿಗಳು ಅಧಿಕಾರಿಗಳೊಣಂದಿಗೆ ಚರ್ಚಿಸಿ ವರ್ಗಾವಣೆ ತೀರ್ಮಾನ ಕೈಗೊಳ್ಳುತ್ತಾರೆ. ನಮ್ಮೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.

    ಗೂಳಿಹಟ್ಟಿ ಶೇಖರ್ ಅವರೂ ಯಾಕೆ ಈ ರೀತಿ ಮಾತನಾಡಿದ್ದಾರೋ ಗೊತ್ತಿಲ್ಲ. ಅವರಿಗೂ ಸಹ ಈ ಕುರಿತು ತಪ್ಪು ಕಲ್ಪನೆ ಮೂಡಿರಬಹುದು. ನಾನೇ ಖುದ್ದು ಕರೆ ಮಾಡಿ ಅವರೊಂದಿಗೆ ಮಾತನಾಡುತ್ತೇನೆ ಎಂದು ತಿಳಿಸಿದರು.

    ನಮ್ಮ ಸಂಘಟನೆಯಲ್ಲಿ ವಯಸ್ಸು ಮೀರಿ ಜವಾಬ್ದಾರಿಗೆ ಗೌರವ ಕೊಟ್ಟುಕೊಂಡು ಬಂದಿದ್ದೇವೆ. ಸಂತೋಷ್ ಅವರು ಸಂಘಟನಾ ಕಾರ್ಯದರ್ಶಿಯಾಗಿದ್ದು ಪಕ್ಷದ ಸಂಘಟನೆ ದೃಷ್ಟಿಯಿಂದ ಇಡೀ ದೇಶ ಹಾಗೂ ಪಕ್ಷ ಅವರ ಮಾರ್ಗದರ್ಶನದಲ್ಲಿ ನಡೆಯುತ್ತಿದೆ. ಯಡಿಯೂರಪ್ಪನವರು ವಯಸ್ಸಿನಲ್ಲಿ ಹಿರಿಯರಿರಬಹುದು. ಆದರೆ, ಸಂಘಟನೆ ದೃಷ್ಟಿಯಿಂದ ಉನ್ನತ ಸ್ಥಾನದಲ್ಲಿರುವವರ ಮಾರ್ಗದರ್ಶನದಲ್ಲಿ ಕೆಲಸ ಮಾಡುವುದು ನಮ್ಮ ಕರ್ತವ್ಯ. ಒಟ್ಟಾಗಿ ನಾವು ತೆಗೆದುಕೊಂಡು ಹೋಗುತ್ತೇವೆ ಎಂದು ಸ್ಪಷ್ಟಪಡಿಸಿದರು.

  • ಎಚ್‍ಡಿಕೆಯನ್ನು ಹಳೆ ಮೈಸೂರು ಸಿಎಂ ಎಂದಿದ್ದ ಇವರನ್ನು ಏನಂತ ಕರೆಯಬೇಕು – ಸಾ.ರಾ. ಮಹೇಶ್ ಕಿಡಿ

    ಎಚ್‍ಡಿಕೆಯನ್ನು ಹಳೆ ಮೈಸೂರು ಸಿಎಂ ಎಂದಿದ್ದ ಇವರನ್ನು ಏನಂತ ಕರೆಯಬೇಕು – ಸಾ.ರಾ. ಮಹೇಶ್ ಕಿಡಿ

    ಮೈಸೂರು: ಕೊನೆಗೂ ಮಂತ್ರಿ ಮಂಡಲದ ಗಜ ಪ್ರಸವ ಆಗಿದೆ. ಆದರೆ, ಬಿಜೆಪಿ ಸರ್ಕಾರದಲ್ಲಿ ಹಳೇ ಮೈಸೂರು ಭಾಗವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ವಾಗ್ದಾಳಿ ನಡೆಸಿದ್ದಾರೆ.

    ಈ ಕುರಿತು ಪತ್ರಿಕಾ ಹೇಳಿಕೆಯಲ್ಲಿ ಅಸಮಾಧಾನ ಹೊರ ಹಾಕಿರುವ ಅವರು, ಮಂತ್ರಿ ಮಂಡಲದ ಗಜ ಪ್ರಸವ ಏನೋ ಆಗಿದೆ, ಕೊನೆಗೂ 17 ಜನ ಮಂತ್ರಿಗಳಾಗಿದ್ದಾರೆ. ಆದರೆ, ಈಗ ಆಗಿರುವ ಮಂತ್ರಿ ಮಂಡಲ ನೋಡಿದರೆ ರಾಜ್ಯದ ಸಮಗ್ರ ಅಭಿವೃದ್ಧಿ ಸಾಧ್ಯವಿಲ್ಲ. ಪ್ರಾಂತ್ಯವಾರು ಸ್ಥಾನಮಾನ ನೀಡುವಲ್ಲಿ ಯಡಿಯೂರಪ್ಪ ಸರ್ಕಾರ ವಿಫಲವಾಗಿದೆ. ಹಳೇ ಮೈಸೂರು ಭಾಗವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ತಿಳಿಸಿದ್ದಾರೆ.

    ಮೈಸೂರು, ಹಾಸನ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಯ ಯಾರೊಬ್ಬರಿಗೂ ಅವಕಾಶ ನೀಡಿಲ್ಲ, ಇದನ್ನು ನಾನು ಖಂಡಿಸುತ್ತೇನೆ. ಕುಮಾರಸ್ವಾಮಿಯವರನ್ನು ಹಳೆ ಮೈಸೂರು ಭಾಗದ ಸಿಎಂ ಎಂದು ಯಡಿಯೂರಪ್ಪ ಹಾಗೂ ಬಿಜೆಪಿಯವರು ಬ್ರ್ಯಾಂಡ್ ಮಾಡಿದ್ದರು. ಈಗ ಯಡಿಯೂರಪ್ಪ ಅವರನ್ನು ಏನಂತ ಕರೆಯಬೇಕು? ಕನಿಷ್ಠ ಕೊಡಗು ಜಿಲ್ಲೆಗೆ ಆದ್ಯತೆ ನೀಡಬೇಕಿತ್ತು. ಪ್ರಕೃತಿ ವಿಕೋಪದಿಂದ ಕೊಡಗು ಜಿಲ್ಲೆ ನಲುಗಿ ಹೋಗಿದೆ. ಕೊಡಗು ಜಿಲ್ಲೆಯಲ್ಲೇ ಬಿಜೆಪಿಯ ಇಬ್ಬರು ಶಾಸಕರು, ಸಂಸದರು ಇದ್ದಾರೆ. ಆದರೂ ಅವಕಾಶ ನೀಡಿಲ್ಲ. ಇದು ಜನರ ನಂಬಿಕೆಗೆ ಮಾಡಿರುವ ದ್ರೋಹ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ನಡೆಯಲಿದೆ. ಇದನ್ನು ನಿರ್ವಹಿಸಲಿಕ್ಕಾದರೂ ಇಲ್ಲಿನ ಸ್ಥಳೀಯ ನಾಯಕರನ್ನು ಮಂತ್ರಿ ಮಾಡಬೇಕಿತ್ತು. ಅಲ್ಲದೆ, ಮೈಸೂರು ಚಾಮರಾಜನಗರದಲ್ಲೂ ಪ್ರವಾಹದಿಂದ ಹಾನಿಯಾಗಿದೆ. ಇದನ್ನೆಲ್ಲ ಗಮನಿಸಿದರೆ ಯಡಿಯೂರಪ್ಪ ಅವರು ರಬ್ಬರ್ ಸ್ಟ್ಯಾಂಪ್ ಸಿಎಂ ರೀತಿ ಗೋಚರಿಸುತ್ತಿದ್ದಾರೆ ಎಂದು ಹರಿಹಾಯ್ದರು.

  • ಟಿಪ್ಪು ಜಯಂತಿ ರದ್ದಿಗೆ ಬಿಜೆಪಿಯಲ್ಲೇ ಅಪಸ್ವರ

    ಟಿಪ್ಪು ಜಯಂತಿ ರದ್ದಿಗೆ ಬಿಜೆಪಿಯಲ್ಲೇ ಅಪಸ್ವರ

    ಬೆಂಗಳೂರು: ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ವಿವಾದ ಮತ್ತೆ ಭಾರೀ ಸದ್ದು ಮಾಡುತ್ತಿದೆ. ಸರ್ಕಾರದ ನಿರ್ಧಾರಕ್ಕೆ ಬಿಜೆಪಿಯಲ್ಲೇ ಅಸಮಾಧಾನ ವ್ಯಕ್ತವಾಗಿದೆ.

    ಟಿಪ್ಪು ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸಬಾರದು ಎಂದು ಸರ್ಕಾರ ರದ್ದು ಮಾಡಿದೆ. ಆದರೆ ಇತ್ತ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಅಬ್ದುಲ್ ಅಜೀಂ ಸಹ ಪರೋಕ್ಷವಾಗಿ ಬೇಸರ ಹೊರಹಾಕಿದ್ದಾರೆ.

    ಟಿಪ್ಪು ಸುಲ್ತಾನ್ ಒಬ್ಬ ರಾಜ, ಬ್ರಿಟಿಷ್ ವಿರುದ್ಧ ಹೋರಾಡಿದ ರಾಜ ಎಂದು ಅಭಿಪ್ರಾಯಿಸಿ ಖಾಸಗಿಯಾಗಿ ಟಿಪ್ಪು ಜಯಂತಿ ಆಚರಿಸೋದು ಸ್ವಾಗತ. ಆದರೆ ಶಾಂತಿ ಕದಡುತ್ತೆ ಎಂದು ಸರ್ಕಾರ ಟಿಪ್ಪು ಜಯಂತಿ ಆಚರಣೆ ರದ್ದು ಮಾಡಿದೆ ಎಂದು ಪರೋಕ್ಷವಾಗಿ ಬೇಸರ ವ್ಯಕ್ತಪಡಿಸಿದ್ದಾರೆ.

    ಇತ್ತ ಸರ್ಕಾರದ ನಿರ್ಧಾರಕ್ಕೆ ಸೆಡ್ಡು ಹೊಡೆಯಲು ಮುಸ್ಲಿಂ ಕಾರ್ಪೋರೇಟರ್‍ ಗಳು ಸಜ್ಜಾಗಿದ್ದು, ಖಾಸಗಿಯಾಗಿ ಟಿಪ್ಪು ಜಯಂತಿಯನ್ನು ಅದ್ಧೂರಿಯಾಗಿ ಆಚರಿಸುವುದಾಗಿ ತಿಳಿಸಿದ್ದಾರೆ.

  • ಬಿಎಸ್‍ಎನ್‍ಎಲ್ ಸೇವೆಗೋಸ್ಕರ ಭಿಕ್ಷೆ ಬೇಡಿದ ಗ್ರಾಮಸ್ಥರು

    ಬಿಎಸ್‍ಎನ್‍ಎಲ್ ಸೇವೆಗೋಸ್ಕರ ಭಿಕ್ಷೆ ಬೇಡಿದ ಗ್ರಾಮಸ್ಥರು

    ಮಡಿಕೇರಿ: ಭಾರೀ ಭೂ ಕುಸಿತ ಮತ್ತು ಪ್ರವಾಹದಿಂದ ತತ್ತರಿಸಿದ್ದ ಕೊಡಗಿನ ಮಂದಿ ಇದೀಗ ಮತ್ತೊಂದು ಸಮಸ್ಯೆಯಿಂದ ಹೈರಾಣಾಗಿ ಹೋಗಿದ್ದಾರೆ. ಬಹುತೇಕ ಮಡಿಕೇರಿ ಜಿಲ್ಲೆಯ ಜನತೆ ಮೊಬೈಲ್ ನೆಟ್‍ವರ್ಕ್‍ಗಾಗಿ ಬಿಎಸ್‍ಎನ್‍ಎಲ್ ಸೇವೆಯನ್ನೇ ನಂಬಿಕೊಂಡಿದ್ದಾರೆ.

    ಕಳೆದ ಕೆಲ ದಿನಗಳಿಂದ ಇಲ್ಲಿ ಬಿಎಸ್‍ಎನ್‍ಎಲ್ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಇದರಿಂದ ಏನಾದರೂ ತೊಂದರೆ ಆದರೆ ತಕ್ಷಣ ಸಹಾಯಕ್ಕಾಗಿ ಯಾರನ್ನು ಸಂಪರ್ಕ ಮಾಡಲು ಆಗುತ್ತಿಲ್ಲ ಎಂದು ಕೊಡಗಿನ ಜನತೆ ವಿನೂತನ ಪ್ರತಿಭಟನೆ ನಡೆಸುವ ಮೂಲಕ ಬಿಎಸ್‍ಎನ್‍ಎಲ್ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

    ಕರೆಂಟ್ ಹೋದಾಗ ಬಿಎಸ್‍ಎನ್‍ಎಲ್ ಸೇವೆ ಸ್ಥಗಿತಗೊಳ್ಳುತ್ತಿದೆ. ಜನರೇಟರ್‍ ಗೆ ಡೀಸೆಲ್ ಹಾಕಲು ಬಿಎಸ್‍ಎನ್‍ಎಲ್ ಅಧಿಕಾರಿಗಳು ಹಣ ನೀಡುತ್ತಿಲ್ಲ. ಹಾಗಾಗಿ ಕಳೆದ ಕೆಲವು ದಿನಗಳಿಂದ ಹಲವು ಗ್ರಾಮಗಳಲ್ಲಿ ಬಿಎಸ್‍ಎನ್‍ಎಲ್ ಮತ್ತು ಏರ್‍ ಟೆಲ್ ಸೇರಿದಂತೆ ಯಾವುದೇ ಮೊಬೈಲ್ ಸೇವೆ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಇದರಿಂದ ಅಸಮಾಧಾನಗೊಂಡ ಗ್ರಾಮಸ್ಥರು ಎಲ್ಲರೂ ಸೇರಿ ಭಿಕ್ಷೆ ಬೇಡಿ ಹಣ ಸಂಗ್ರಹಿಸಿ ಅದರಿಂದ 35 ಲೀಟರ್ ಡೀಸೆಲ್ ಖರೀದಿಸಿ ಮೊಬೈಲ್ ಕಂಪನಿಗೆ ನೀಡಿದ್ದಾರೆ.

    ಜೋರಾಗಿ ಮಳೆ ಬಂದು ಏನಾದರೂ ಹೆಚ್ಚು ಕಡಿಮೆ ಆದರೆ ಕರೆ ಮಾಡಿ ವಿಷಯ ತಿಳಿಸೋಣ ಎಂದರೆ ಬಿಎಸ್‍ಎನ್‍ಎಲ್ ಕೆಲಸವೇ ಮಾಡುತ್ತಿಲ್ಲ. ಹಾಗಾಗಿ ಮಡಿಕೇರಿ ತಾಲೂಕಿನ ಮರಗೋಡು ಗ್ರಾಮದ ಜನರು ಬಿಎಸ್‍ಎನ್‍ಎಲ್‍ಗಾಗಿ ಗ್ರಾಮಸ್ಥರು ಮನೆ ಮನೆ ತೆರಳಿ ಭಿಕ್ಷೆ ಬೇಡಿದ್ದಾರೆ. ನಂತರ ಬಂದ ಹಣದಲ್ಲಿ ಡೀಸೆಲ್ ಖರೀದಿಸಿ ಮೊಬೈಲ್ ಕಂಪನಿಗೆ ನೀಡಿದ್ದಾರೆ.

    ಭಿಕ್ಷೆ ಬೇಡಿದ ಹಣದಿಂದ ಡೀಸೆಲ್ ಖರೀದಿಸಿ ಕಂಪನಿಗೆ ನೀಡಿ ಈ ಮೂಲಕ ಅಲ್ಲಿನ ಅಧಿಕಾರಿಗಳಿಗೆ ಸರಿಯಾಗಿ ಬಿಸಿ ಮುಟ್ಟಿಸಿದ್ದಾರೆ.