Tag: Urban Development

  • ತ್ಯಾಜ್ಯ ವಿಲೇವಾರಿಯಲ್ಲಿ ಎಡವಟ್ಟು – ಮಮತಾ ಸರ್ಕಾರಕ್ಕೆ 3,500 ಕೋಟಿ ದಂಡ

    ತ್ಯಾಜ್ಯ ವಿಲೇವಾರಿಯಲ್ಲಿ ಎಡವಟ್ಟು – ಮಮತಾ ಸರ್ಕಾರಕ್ಕೆ 3,500 ಕೋಟಿ ದಂಡ

    ಕೋಲ್ಕತ್ತಾ: ಘನ ಹಾಗೂ ದ್ರವ ತ್ಯಾಜ್ಯದ ಉತ್ಪಾದನೆ ಹಾಗೂ ಸಂಸ್ಕರಣೆಯನ್ನು ಸೂಕ್ತವಾಗಿ ನಿರ್ವಹಣೆ ಮಾಡದೇ ಇರುವುದರಿಂದ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರಕ್ಕೆ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ 3,500 ಕೋಟಿ ರೂ. ದಂಡ ವಿಧಿಸಿದೆ.

    2022-23ರ ಬಜೆಟ್ ಪ್ರಕಾರ ನಗರಾಭಿವೃದ್ಧಿ ಹಾಗೂ ಪುರಸಭೆಗಳ ವ್ಯವಹಾರದ ಭಾಗವಾಗಿ 12,818 ಕೋಟಿ ಅನುದಾನವಿದ್ದರೂ ರಾಜ್ಯ ಸರ್ಕಾರ ಒಳಚರಂಡಿ ಹಾಗೂ ಘನತ್ಯಾಜ್ಯ ನಿರ್ವಹಣೆಗೆ ಸೌಲಭ್ಯಗಳನ್ನು ಕಲ್ಪಿಸಲು ಆದ್ಯತೆ ನೀಡುತ್ತಿಲ್ಲ ಎಂದು ಹಸಿರು ನ್ಯಾಯಪೀಠ ಹೇಳಿದೆ. ಇದನ್ನೂ ಓದಿ: ಹಿರಿಯ ಖ್ಯಾತ ವೈದ್ಯ, ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ಗುರುರಾಜ್ ಹೆಬ್ಬಾರ್ ನಿಧನ

    ಭವಿಷ್ಯದಲ್ಲಿ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ಗಮನಿಸಿ ಎನ್‌ಜಿಟಿ ಅಧ್ಯಕ್ಷ ನ್ಯಾಯಮೂತಿ ಎ.ಕೆ.ಗೋಯೆಲ್ ನೇತೃತ್ವದ ಪೀಠವು ಜನರಿಗಾಗಿ ಮಾಲಿನ್ಯ ಮುಕ್ತ ವಾತಾವರಣ ಕಲ್ಪಿಸುವುದು ಸರ್ಕಾರದ ಸಾಂವಿಧಾನಿಕ ಜವಾಬ್ದಾರಿಯಾಗಿದೆ ಎಂಬುದನ್ನು ಒತ್ತಿ ಹೇಳಿದೆ. ಇದನ್ನೂ ಓದಿ: ನಾಯಿಯ ಹಲ್ಲನ್ನು ಸ್ವಚ್ಛಗೊಳಿಸಲು 4 ಲಕ್ಷ ರೂ. ಖರ್ಚು!

    ನಗರ ಪ್ರದೇಶಗಳಲ್ಲಿ ದಿನಕ್ಕೆ 2,758 ಮಿಲಿಯನ್ ಲೀಟರ್ ಕೊಳಚೆ ಉತ್ಪಾದನೆಯಾಗುತ್ತಿದೆ. ಈ ಪೈಕಿ 1,505 ಮಿಲಿಯನ್ ಲೀಟರ್‌ನಷ್ಟು ಕೊಳಚೆ ಸಂಸ್ಕರಿಸುವ ಸಾಮರ್ಥ್ಯವಿದೆ. ಆದರೂ ದಿನಕ್ಕೆ 1,268 ಲೀಟರ್ ನಷ್ಟು ತ್ಯಾಜ್ಯವನ್ನು ಮಾತ್ರವೇ ಸಂಸ್ಕರಿಸಲಾಗುತ್ತಿದ್ದು, ಉಳಿದ 1,490 ಮಿಲಿಯನ್ ಲೀಟರ್ ನಷ್ಟು ತ್ಯಾಜ್ಯ ಹಾಗೆಯೇ ಉಳಿಸುತ್ತಿದೆ ಎಂದು ಎನ್‌ಜಿಟಿ ತಿಳಿಸಿದೆ.

    ಇದರಿಂದ ಪರಿಸರಕ್ಕೆ ಉಂಟಾಗುವ ಹಾನಿಯನ್ನು ಗಮನಿಸಿ ರಾಜ್ಯದಿಂದ 2 ತಿಂಗಳ ಒಳಗೆ ದಂಡ ಪಾವತಿ ಮಾಡಬೇಕು ಎನ್‌ಜಿಟಿ ತಾಕೀತು ಮಾಡಿದೆ.

    Live Tv
    [brid partner=56869869 player=32851 video=960834 autoplay=true]

  • BBMP: ವಾರ್ಡ್‌ವಾರು ಮೀಸಲಾತಿ ಅಂತಿಮ ಅಧಿಸೂಚನೆ ಪ್ರಕಟ

    BBMP: ವಾರ್ಡ್‌ವಾರು ಮೀಸಲಾತಿ ಅಂತಿಮ ಅಧಿಸೂಚನೆ ಪ್ರಕಟ

    ಬೆಂಗಳೂರು: ಬಿಬಿಎಂಪಿ ವಾರ್ಡ್‌ವಾರು ಕ್ಷೇತ್ರಗಳನ್ನು ಪುನರ್ ವಿಂಗಡಣೆ ಮಾಡಲಾಗಿದ್ದು, ಮೀಸಲಾತಿಯ ಅಂತಿಮ ಅಧಿಸೂಚನೆ ಪ್ರಕಟಿಸಲಾಗಿದೆ.

    2011ರ ಜನಗಣತಿಯ ಆಧಾರದ ಮೇರೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 243 ವಾರ್ಡ್‌ವಾರು ಮೀಸಲಾತಿಯನ್ನು ಅಂತಿಮಗೊಳಿಸಿದೆ. 243 ವಾರ್ಡ್ ಗಳ ಮೀಸಲಾತಿಯಲ್ಲಿ ಯಾವುದೇ ಬದಲಾವಣೆ ಮಾಡದೇ ಆದೇಶ ಹೊರಬಿದ್ದಿದೆ. ಇದನ್ನೂ ಓದಿ: ಕೊರೊನಾದಿಂದ US ಅಧ್ಯಕ್ಷ ಜೋ ಬೈಡನ್ ಗುಣಮುಖ – ಪತ್ನಿಗೆ ಸೋಂಕು

    ಇದರ ಕರಡು ಅಧಿಸೂಚನೆಯನ್ನು ಆಗಸ್ಟ್ 3 ರಂದು ಪ್ರಕಟಿಸಿ, ಆಕ್ಷೇಪಣೆ ಸಲ್ಲಿಸಲು ಒಂದು ವಾರ ಕಾಲಾವಕಾಶ ನೀಡಲಾಗಿತ್ತು. ಬಂದ ಆಕ್ಷೇಪಣಿಗಳನ್ನು ಪರಿಶೀಲಿಸಿ ಈಗ ಅಂತಿಮ ಅಧಿಸೂಚನೆ ಪ್ರಕಟಿಸಲಾಗಿದೆ.

    ಬಿಬಿಎಂಪಿ ಚುನಾವಣೆ ಸಂಬಂಧ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್, ಈ ಹಿಂದೆ 8 ವಾರಗಳಲ್ಲಿ ಚುನಾವಣೆ ನಡೆಸಲು ಸೂಚನೆ ನೀಡಿತ್ತು. ಇದನ್ನು ಪಾಲಿಸದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಅಲ್ಲದೆ ಒಂದು ವಾರದ ಒಳಗೆ ಮೀಸಲಾತಿ ಪ್ರಕಟಿಸುವಂತೆ ಸೂಚಿಸಿತ್ತು. ಹೀಗಾಗಿ ಆಗಸ್ಟ್ 3ರ ಬುಧವಾರ ಸಂಜೆ ಈ ಮೀಸಲಾತಿಯ ಕರಡು ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಇದರಿಂದಾಗಿ ಚುನಾವಣಾ ಆಯೋಗಕ್ಕೆ ಇದ್ದ ಅಡ್ಡಿ ನಿವಾರಣೆಯಾಗಿತ್ತು. ಇದನ್ನೂ ಓದಿ: 500 ರೂ.ಗಾಗಿ ಸ್ನೇಹಿತನ ಶಿರಚ್ಛೇದ- ತಲೆಯನ್ನು ಪೊಲೀಸ್ ಠಾಣೆಗೆ ತೆಗೆದೊಯ್ದ

    ಅಂತೆಯೇ ಈಗ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಪರಿಶೀಲನಾ ಸಮಿತಿಯು ಮಾಡಿರುವ ಶಿಫಾರಸುಗಳನ್ನು ಸರ್ಕಾರ ಒಪ್ಪಿಕೊಂಡಿದೆ. ಬಿಬಿಎಂಪಿ ಅಧಿನಿಯಮ 2020 ಕಲಂ 8(3)ರಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ, 2011ರ ಜನಗಣತಿಯ ಆಧಾರದ ಮೇರೆಗೆ ಬಿಬಿಎಂಪಿ ವಾರ್ಡ್‌ವಾರು ಮೀಸಲಾತಿಯನ್ನು ಅಂತಿಮಗೊಳಿಸಿ ಅಧಿಸೂಚನೆ ಹೊರಡಿಸಿದೆ.

    Live Tv
    [brid partner=56869869 player=32851 video=960834 autoplay=true]

  • ನಗರಾಭಿವೃದ್ಧಿ ಖಾತೆಗೆ ಮನವಿ ಮಾಡಿದ್ದೇನೆ: ಬೈರತಿ ಬಸವರಾಜ್

    ನಗರಾಭಿವೃದ್ಧಿ ಖಾತೆಗೆ ಮನವಿ ಮಾಡಿದ್ದೇನೆ: ಬೈರತಿ ಬಸವರಾಜ್

    ಬೆಂಗಳೂರು: ಸಚಿವ ಸಂಪುಟದಲ್ಲಿ ನಗರಾಭಿವೃದ್ಧಿ ಖಾತೆ ಕೊಡಿ ಎಂದು ಮನವಿ ಮಾಡಿದ್ದೇನೆ ಎಂದು ಕೆ.ಆರ್ ಪುರಂ ಶಾಸಕ ಬೈರತಿ ಬಸವರಾಜ್ ತಿಳಿಸಿದ್ದಾರೆ.

    ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆ ದಿನದಿಂದ ದಿನಕ್ಕೆ ಸಾಕಷ್ಟು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಸಚಿವ ಸಂಪುಟದ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ಸಿಕ್ಕ ಹಿನ್ನೆಲೆ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ನನಗೆ ನಗರಾಭಿವೃದ್ಧಿ ಖಾತೆ ಬೇಕೆಂದು ಮನವಿ ಮಾಡಿದ್ದೇನೆ ಎಂದು ಬೈರತಿ ಬಸವರಾಜು ಹೇಳಿದ್ದಾರೆ.

    ಕೆ.ಆರ್ ಪುರಂನ ತಮ್ಮ ನಿವಾಸದ ಬಳಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿದ ಅವರು, ಸಚಿವ ಸ್ಥಾನ, ಖಾತೆ ನೀಡುವುದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟ ವಿಚಾರವಾಗಿದ್ದು, ಅವರ ಬಳಿ ನಗರಾಭಿವೃದ್ಧಿ ಖಾತೆ ಕೇಳಿರುವುದು ನಿಜ ಎಂದು ಒಪ್ಪಿಕೊಂಡಿದ್ದಾರೆ. ನನಗೆ ನಗರಗಳ ಅಭಿವೃದ್ಧಿ ಮಾಡಬೇಕೆಂಬ ಆಸಕ್ತಿ ಇದೆ. ಹಾಗಾಗಿ ನಗರಾಭಿವೃದ್ಧಿ ಖಾತೆಗೆ ಮನವಿ ಮಾಡಿದ್ದೇನೆ. ಜೊತೆಗೆ ನನಗೆ ಯಾವ ಖಾತೆಯನ್ನು ನೀಡಿದರು ಸಹ ನಿಭಾಯಿಸಲು ಸಿದ್ಧನಿದ್ದೇನೆ ಎಂದರು.