Tag: Urban Development Authority

  • ಸಮಗ್ರ ಅಭಿವೃದ್ಧಿ ಯೋಜನೆ ನಕ್ಷೆ ತಯಾರಿಸಿ: ಬೈರತಿ ಬಸವರಾಜ

    ಸಮಗ್ರ ಅಭಿವೃದ್ಧಿ ಯೋಜನೆ ನಕ್ಷೆ ತಯಾರಿಸಿ: ಬೈರತಿ ಬಸವರಾಜ

    ಬೆಂಗಳೂರು: ರಾಜ್ಯದ ಎಲ್ಲಾ ನಗರಾಭಿವೃದ್ಧಿ ಪ್ರಾಧಿಕಾರಗಳು ಸಮಗ್ರ ಅಭಿವೃದ್ಧಿ ಯೋಜನೆ ನಕ್ಷೆ (Comprehensive Development Plan) ತಯಾರಿಸಲು ಆಯುಕ್ತರುಗಳಿಗೆ ನಗರಾಭಿವೃದ್ಧಿ ಸಚಿವರಾದ ಬಿ.ಎ.ಬಸವರಾಜ ಅವರು ಸೂಚಿಸಿದ್ದಾರೆ.

    ರಾಜ್ಯದ ಎಲ್ಲಾ ನಗರಾಭಿವೃದ್ಧಿ ಪ್ರಾಧಿಕಾರದ ಅಯುಕ್ತರ ಸಭೆ ವಿಕಾಸ ಸೌಧದಲ್ಲಿ ಇಂದು ಮಧ್ಯಾಹ್ನ ನಗರಾಭಿವೃದ್ಧಿ ಸಚಿವರಾದ ಬಸವರಾಜ ಅವರ ಅಧ್ಯಕ್ಷತೆಯಲ್ಲಿ ಜರುಗಿತು ಸಭೆಯಲ್ಲಿ ಆಯುಕ್ತರು ಗಳನ್ನು ಉದ್ದೇಶಿಸಿ ಮಾತನಾಡಿದ ಬಸವರಾಜ ಅವರು, 2021 ಸೆಪ್ಟೆಂಬರ್ 30 ರೊಳಗೆ ಎಲ್ಲಾ ನಗರಾಭಿವೃದ್ಧಿ ಪ್ರಾಧಿಕಾರಗಳು ತಮ್ಮ ವ್ಯಾಪ್ತಿಗೆ ಬರುವ ಬಡಾವಣೆ ಅಭಿವೃದ್ಧಿ, ನಗರ ಅಭಿವೃದ್ಧಿ, ಕೆರೆ ಅಭಿವೃದ್ಧಿ ಸೇರಿದಂತೆ ಇತರೆ ಯೋಜನೆಗಳ ಅಭಿವೃದ್ದಿಗೆ ಸಂಬಂಧಿಸಿದಂತೆ ಸಿಡಿಪಿ ಯನ್ನು ನಗರಾಭಿವೃದ್ಧಿ ಇಲಾಖೆ ಮತ್ತು ನಗರ ಹಾಗೂ ಗ್ರಾಮಾಂತರ ಯೋಜನಾ ನಿರ್ದೇಶನಾಲಯಕ್ಕೆ ಸಲ್ಲಿಸಬೇಕು ಎಂದು ಗಡುವು ನೀಡಿದರು.

    ಕೆಲ ಪ್ರಾಧಿಕಾರದ ಅಭಿವೃದ್ಧಿ ಯೋಜನೆ ವಿಚಾರದಲ್ಲಿ ಪ್ರಕರಣಗಳು ಇರುವುದರಿಂದ ಅಂತಹ ಪ್ರಾಧಿಕಾಗಳಿಗೆ ಅಕ್ಟೋಬರ್ ಮತ್ತು ನವೆಂಬರ್ 30 ರೊಳಗೆ ಸಲ್ಲಿಸಲು ಅವಕಾಶ ನೀಡಿದ್ದಾರೆ. ಕೆಲ ಪ್ರಾಧಿಕಾರದ ಸುಪರ್ದಿಯಲ್ಲಿ ಇರುವ ಮೂಲೆ ಮತ್ತು ಮಧ್ಯಂತರ ನಿವೇಶನಗಳನ್ನು ಹರಾಜು ಪ್ರಕ್ರಿಯೆಯಲ್ಲಿ ಮಾರಾಟ ಮಾಡಲು ಸೂಚಿಸಿದರು. ಇದರಿಂದ ಪ್ರಾಧಿಕಾರಕ್ಕೆ ಆದಾಯ ಬರುತ್ತದೆ ಎಂದರು.

    ಅಲ್ಲದೇ ಹೊಸ ಬಡಾವಣೆ ನಿರ್ಮಾಣಕ್ಕೆ ಒತ್ತು ನೀಡುವ ಮೂಲಕ ನಗರಾಭಿವೃದ್ಧಿ ಪ್ರಾಧಿಕಾರಗಳ ಸಂಪನ್ಮೂಲ ಹೆಚ್ಚಿಸಬಹುದು ಮತ್ತು ಪ್ರಾಧಿಕಾರದ ನಿರ್ವಹಣೆಗೆ ಅನುಕೂಲವಾಗುತ್ತದೆ ಎಂದು ಹೇಳಿದರು. ಕಾನೂನು ತೊಡಕು ಇದ್ದಲ್ಲಿ ಅದನ್ನು ಇಲಾಖೆಯ ಕಾರ್ಯದರ್ಶಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತಂದು ನಿವಾರಿಸಿಕೊಳ್ಳಲು ಮುಂದಾಗಬೇಕು ಎಂದು ಆಯುಕ್ತರು ಗಳಿಗೆ ಸೂಚಿಸಿದರು. ಇದನ್ನೂ ಓದಿ: ಮೂರು ದಿನದಿಂದ ರಸ್ತೆ ಮಧ್ಯದಲ್ಲೇ ಕೆಟ್ಟು ನಿಂತ ಬಸ್ – ವಾಹನ ಸವಾರರ ಪರದಾಟ

    ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಎಂ.ಎನ್. ಅಜಯ್ ನಾಗಭೂಷಣ, ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶನಾಲಯದ ನಿರ್ದೇಶಕ ಎಲ್.ಶಶಿಕುಮಾರ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ಬಲಿಷ್ಠ ಸಮುದಾಯವನ್ನು ಪ್ರವರ್ಗ 2ಎ ಗೆ ಸೇರಿಸದಂತೆ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಆಗ್ರಹ

  • ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ದಮ್ಮೂರು ಶೇಖರ್ ಮರು ನೇಮಕ

    ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ದಮ್ಮೂರು ಶೇಖರ್ ಮರು ನೇಮಕ

    – ಮತ್ತೆ ವಿವಾದಕ್ಕೆ ಕಾರಣವಾಗುತ್ತಾ ಬುಡಾ ಅಧ್ಯಕ್ಷರ ನೇಮಕ?
    – ಲಾಕ್‍ಡೌನ್ ಹಿನ್ನಲೆಯಲ್ಲಿ ರೆಡ್ಡಿ ಸಹೋದರರ ಪ್ರಾಬಲ್ಯ ಹೆಚ್ಚಳ

    ಬಳ್ಳಾರಿ: ಲಾಕ್‍ಡೌನ್ ನಡುವೆಯೂ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ದಮ್ಮೂರು ಶೇಖರ್ ಅವರನ್ನು ಮರು ನೇಮಕಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ್ದು, ಈ ಆದೇಶದಿಂದ ಬಳ್ಳಾರಿ ಬಿಜೆಪಿಯಲ್ಲಿ ಮತ್ತೆ ವಿವಾದ ಸೃಷ್ಟಿಯಾಗುವ ಸಾಧ್ಯತೆ ದಟ್ಟವಾಗಿದೆ.

    ರಾಜ್ಯ ಸರ್ಕಾರ ಈ ಹಿಂದೆ ರೆಡ್ಡಿ ಸಹೋದರರ ಪರಮಾಪ್ತರಾಗಿದ್ದ ದಮ್ಮೂರು ಶೇಖರ್ ಅವರನ್ನು ಬುಡಾ ಅಧ್ಯಕ್ಷರಾಗಿ ನೇಮಕಗೊಳಿಸಿತ್ತು. ಆದರೆ ಆ ವೇಳೆ ಜಿಲ್ಲೆಯ ಬಿಜೆಪಿಗರ ಪಾಳಯದಲ್ಲಿ ಭಾರೀ ಅಸಮಾಧಾನಕ್ಕೆ ಕಾರಣವಾಗಿತ್ತು. ಬಿಜೆಪಿಯ ಜಿಲ್ಲಾ ಅಧ್ಯಕ್ಷರಾದಿಯಾಗಿ ಪದಾಧಿಕಾರಿಗಳು ಸಮೂಹಿಕ ರಾಜೀನಾಮೆ ನೀಡುವ ಪ್ರಹಸನಕ್ಕೂ ಸಾಕ್ಷಿಯಾಗಿತ್ತು. ಇದರಿಂದ ಗಲಿಬಿಲಿಗೊಂಡಿದ್ದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕೂಡಲೇ ಬುಡಾ ಅಧ್ಯಕ್ಷರ ನೇಮಕಗೊಳಿಸಿದ ಆದೇಶವನ್ನ ರದ್ದು ಪಡಿಸಿದ್ದರು.

    ಇದೀಗ ಮತ್ತೊಮ್ಮೆ ದಮ್ಮೂರು ಶೇಖರ್ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ದಮ್ಮೂರು ಶೇಖರ್, ಸಚಿವ ಶ್ರೀರಾಮುಲು ಹಾಗೂ ಸೋಮಶೇಖರ ರೆಡ್ಡಿ ಪರಮಾಪ್ತರೆಂದು ಹೇಳಲಾಗುತ್ತೆ. ಈ ಹಿಂದೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ದಮ್ಮೂರು ಶೇಖರ್ ಅವರನ್ನು ನೇಮಕ ಮಾಡಿದ್ದ ಸರ್ಕಾರ, ಜಿಲ್ಲಾ ಕಾರ್ಯಕರ್ತರಿಂದ ನೇಮಕಕ್ಕೆ ವಿರೋಧ ವ್ಯಕ್ತವಾದ ಪರಿಣಾಮ ನೇಮಕಾತಿ ಆದೇಶವನ್ನು ವಾಪಾಸ್ ಪಡೆದಿತ್ತು. ಅಂದು ದಮ್ಮೂರು ಶೇಖರ್ ನೇಮಕ ವಿರೋಧಿಸಿ ಪ್ರತಿಕಾಗೋಷ್ಠಿ ನಡೆಸಿದ್ದ ಜಿಲ್ಲಾ ಬಿಜೆಪಿ ಪದಾಧಿಕಾರಿಗಳು, ಜಿಲ್ಲೆಯ 20 ಕ್ಕೂ ಹೆಚ್ಚು ಬಿಜೆಪಿ ಪದಾಧಿಕಾರಿಗಳು ರಾಜೀನಾಮೆ ನೀಡುತ್ತೇವೆ ಎಂದು ತಿಳಿಸಿದ್ದರು. ಅಲ್ಲದೇ ಜಿಲ್ಲಾಧ್ಯಕ್ಷರಾಗಿದ್ದ ಚನ್ನಬಸವನಗೌಡ ಅವರು ರಾಜೀನಾಮೆ ಸ್ವೀಕಾರ ಮಾಡಿದ್ದರು. ಬಿಜೆಪಿ ನಾಯಕರ ಕಲಹ ಬಹಿರಂಗವಾಗುತ್ತಿದಂತೆ ಎಚ್ಚೆತ್ತಿದ್ದ ಸಿಎಂ ಬಿಎಸ್‍ವೈ ಅವರು, ನೇಮಕಾತಿ ಆದೇಶವನ್ನು ವಾಪಾಸ್ ಪಡೆದು, ಜಿಲ್ಲಾ ನಾಯಕರೊಂದಿಗೆ ಚರ್ಚೆ ನಡೆಸುತ್ತೇನೆ ಎಂದಿದ್ದರು.

    ಆದೇಶ ಹೀಗಿದೆ: ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯಿದೆ, 1987ರ ಕಲಂ 3(3) ಎ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ದಮ್ಮೂರು ಶೇಖರ್ ಅವರನ್ನ ಈ ತತ್‍ಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ 3 ವರ್ಷದ ಅವಧಿಯವರೆಗೆ ಅಥವಾ ಮುಂದಿನ ಆದೇಶದವರೆಗೆ, ಇವುಗಳಲ್ಲಿ ಯಾವುದು ಮೊದಲು ಅಲ್ಲಿಯವರೆಗೆ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.