Tag: Urea

  • ಕಾಳಸಂತೆಯಲ್ಲಿ ರಸಗೊಬ್ಬರ ಮಾರಾಟ ವ್ಯವಸ್ಥೆ ಸರಿಪಡಿಸಲು ಕರ್ನಾಟಕ ಸಿಎಸ್‌ಗೆ ಸೂಚಿಸಿ – ಕೇಂದ್ರಕ್ಕೆ ಡಾ.ಕೆ.ಸುಧಾಕರ್ ಆಗ್ರಹ

    ಕಾಳಸಂತೆಯಲ್ಲಿ ರಸಗೊಬ್ಬರ ಮಾರಾಟ ವ್ಯವಸ್ಥೆ ಸರಿಪಡಿಸಲು ಕರ್ನಾಟಕ ಸಿಎಸ್‌ಗೆ ಸೂಚಿಸಿ – ಕೇಂದ್ರಕ್ಕೆ ಡಾ.ಕೆ.ಸುಧಾಕರ್ ಆಗ್ರಹ

    ನವದೆಹಲಿ: ಕರ್ನಾಟಕದಲ್ಲಿ (Karnataka) ದುರಾಡಳಿತ ನಡೆಸುತ್ತಿರುವ ಕಾಂಗ್ರೆಸ್ (Congress) ಸರ್ಕಾರ ರೈತರಿಗೆ ಸರಿಯಾಗಿ ರಸಗೊಬ್ಬರ ಪೂರೈಸಿಲ್ಲ. ಆದ್ದರಿಂದ ಕಾಳಸಂತೆಯಲ್ಲಿರುವ ಹಾಗೂ ದಾಸ್ತಾನುಗಳಲ್ಲಿರುವ ರಸಗೊಬ್ಬರವನ್ನು ರೈತರಿಗೆ ತಲುಪುವಂತೆ ಮಾಡಲು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಬೇಕೆಂದು ಸಂಸದ ಡಾ.ಕೆ.ಸುಧಾಕರ್ (K Sudhakar) ಕೇಂದ್ರ ಸರ್ಕಾರಕ್ಕೆ (Central Government) ಆಗ್ರಹಿಸಿದ್ದಾರೆ.

    ಲೋಕಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಕನ್ನಡದಲ್ಲಿ ಮಾತನಾಡಿದ ಅವರು, ಮುಂಗಾರು ಖಾರಿಫ್ ಋತುಮಾನವು ಕೃಷಿಗೆ ನಿರ್ಣಾಯಕ ಅವಧಿಯಾಗಿದೆ. ಈ ಸಮಯದಲ್ಲಿ ರೈತರು ಭತ್ತ, ಜೋಳ, ನೆಲಗಡಲೆ, ಸೋಯಾಬೀನ್, ದ್ವಿದಳ ಧಾನ್ಯಗಳನ್ನು ಬೆಳೆಯುತ್ತಾರೆ. ದುರದೃಷ್ಟವಶಾತ್ ಜಾಗತಿಕ ಮಟ್ಟದಲ್ಲಿ ದೇಶಗಳ ನಡುವೆ ಸಂಘರ್ಷ ನಡೆಯುತ್ತಿದೆ. ಆದರೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ 8.13 ಲಕ್ಷ ಟನ್‌ಗಳಷ್ಟು ಯೂರಿಯಾವನ್ನು ಕರ್ನಾಟಕ ರಾಜ್ಯಕ್ಕೆ ಕಳುಹಿಸಿಕೊಟ್ಟಿದೆ.ಇದನ್ನೂ ಓದಿ: ಧರ್ಮಸ್ಥಳ ಫೈಲ್ಸ್‌| ಎರಡನೇ ಜಾಗದಲ್ಲಿ ಸಿಗಲಿಲ್ಲ ಯಾವುದೇ ಕಳೇಬರ

    ಭ್ರಷ್ಟಾಚಾರದಲ್ಲಿ ಮುಳುಗಿರುವ, ಸೊರಗಿ ಹೋಗಿರುವ, ದುರಾಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ಅಸಮರ್ಪಕ ಆಡಳಿತದಿಂದಾಗಿ ದಾಸ್ತಾನುಗಳಲ್ಲಿರುವ ರಸಗೊಬ್ಬರವನ್ನು ಸರಿಯಾಗಿ ಹಂಚಿಕೆ ಮಾಡಲು ಸಾಧ್ಯವಾಗಿಲ್ಲ. ಈ ಮೂಲಕ ರಾಜ್ಯ ಸರ್ಕಾರ ರೈತರಿಗೆ ಅನ್ಯಾಯ ಮಾಡಿದೆ ಎಂದು ದೂರಿದ್ದಾರೆ.

    ಕರ್ನಾಟಕದಲ್ಲಿ 258 ರೂ.ಗೆ ಸಬ್ಸಿಡಿ ದರದಲ್ಲಿ ಯೂರಿಯಾ ಸಿಗಬೇಕಿದ್ದರೂ, ಕಾಳಸಂತೆಯಲ್ಲಿ 500 ರೂ.ಗೆ ದೊರೆಯುತ್ತಿದೆ. ಡಿಎಪಿ 1,200 ರೂ. ಸಿಗಬೇಕಿದ್ದರೂ, 2,000 ರೂ.ಗೆ ಸಿಗುತ್ತಿದೆ. ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿಯವರ ನೇತೃತ್ವದಲ್ಲಿ ಎಲ್ಲ ಸಂಸದರು ಹಾಗೂ ರಾಜ್ಯಸಭಾ ಸದಸ್ಯರ ನಿಯೋಗದೊಂದಿಗೆ ರಸಗೊಬ್ಬರ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ಈ ಸಮಸ್ಯೆ ಬಗ್ಗೆ ಚರ್ಚಿಸಿದ್ದೇವೆ. ಆದ್ದರಿಂದ ಈಗಾಗಲೇ ಕಾಳಸಂತೆಯಲ್ಲಿರುವ ಹಾಗೂ ದಾಸ್ತಾನುಗಳಲ್ಲಿರುವ ರಸಗೊಬ್ಬರ ಸರಿಯಾದ ದರದಲ್ಲಿ ಸಮರ್ಪಕವಾಗಿ ರೈತರನ್ನು ತಲುಪುವಂತೆ ಮಾಡಬೇಕಿದೆ. ಅದಕ್ಕಾಗಿ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಕೇಂದ್ರ ಸರ್ಕಾರದಿಂದ ಮಾಹಿತಿ ಹಾಗೂ ಸೂಚನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.ಇದನ್ನೂ ಓದಿ: ಅನುಭವ ಮಂಟಪ ಕಾಮಗಾರಿ ಒಂದು ವರ್ಷದಲ್ಲಿ ಮುಗಿಸಲು ಸಿಎಂ ಸೂಚನೆ – ಈಶ್ವರ್ ಖಂಡ್ರೆ

  • ಬಿಜೆಪಿಯವರಿಗೆ ಧಮ್ಮು-ತಾಕತಿದ್ರೆ ಕೇಂದ್ರದಿಂದ ಯೂರಿಯಾ ಕೊಡಿಸಲಿ – ಚಲುವರಾಯಸ್ವಾಮಿ

    ಬಿಜೆಪಿಯವರಿಗೆ ಧಮ್ಮು-ತಾಕತಿದ್ರೆ ಕೇಂದ್ರದಿಂದ ಯೂರಿಯಾ ಕೊಡಿಸಲಿ – ಚಲುವರಾಯಸ್ವಾಮಿ

    ಬೆಂಗಳೂರು: ರಾಜ್ಯದಲ್ಲಿ ಯೂರಿಯಾ ಕೊರತೆ ಆಗದಂತೆ ಸರ್ಕಾರ ಕ್ರಮ ತೆಗೆದುಕೊಳ್ಳುತ್ತಿದೆ. ಬಿಜೆಪಿಯವರು ರಾಜಕೀಯ ಮಾಡೋದು ಬಿಟ್ಟು ಧೈರ್ಯವಿದ್ದರೆ ಕೇಂದ್ರ ಸರ್ಕಾರದಿಂದ (Central Govt) ಯೂರಿಯಾ ಕೊಡಿಸಲಿ ಎಂದು ಬಿಜೆಪಿ (BJP) ನಾಯಕರ ವಿರುದ್ಧ ಕೃಷಿ ಸಚಿವ ಚಲುವರಾಯಸ್ವಾಮಿ (Chaluvarayaswamy) ವಾಗ್ದಾಳಿ ನಡೆಸಿದರು.

    ರಾಜ್ಯದಲ್ಲಿ ಯೂರಿಯಾ ಕೊರತೆ ಅಂತ ಬಿಜೆಪಿ ಪ್ರತಿಭಟನೆ ಮಾಡ್ತಿರೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಬಹಳ ಸ್ಪಷ್ಟವಾಗಿ ಎಲ್ಲೆಲ್ಲಿ ಯೂರಿಯಾ ಸರಬರಾಜು ಆಗಿದೆ ಎಂದು ಹೇಳಿದ್ದೇನೆ. ಡಿಸಿ, ಸೆಕ್ರೆಟರಿ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದೇವೆ. ಬಿಜೆಪಿಯವರಿಗೆ ಮಾತಡೋಕೆ ಬೇರೆ ವಿಷಯ ಇಲ್ಲ ಅದಕ್ಕೆ ಪ್ರತಿಭಟನೆ ಅಂತಿದ್ದಾರೆ. ಇವರಿಗೆ ಕೇಂದ್ರಕ್ಕೆ ಹೋಗಿ ಹೇಳೋ ಧಮ್ ಇಲ್ಲ. ನಾನು ಎಲ್ಲ ಎಂಪಿಗಳಿಗೆ ಹಾಗೂ ಕೇಂದ್ರ ಮಂತ್ರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದೇನೆ. ಸಿಎಂ ಅವರು ಕೂಡ ಪತ್ರ ಬರೆದಿದ್ದಾರೆ. ಇನ್ನೂ ಏನು ಮಾಡಬೇಕಂತೆ ವಿಜಯೇಂದ್ರ, ಅಶೋಕ್‌ಗೆ ತಿರುಗೇಟು ನೀಡಿದರು.ಇದನ್ನೂ ಓದಿ:ಚೆಸ್‌ ವಿಶ್ವಕಪ್‌ | ಅನುಭವಿ ಕೊನೆರು ಹಂಪಿಗೆ ಸೋಲು, 19ರ ದಿವ್ಯಾ ದೇಶಮುಖ್‌ ಚಾಂಪಿಯನ್‌

    ಕೇಂದ್ರವೇ ನಮಗೆ ಯೂರಿಯಾ ಒದಗಿಸುತ್ತದೆ. ಹೀಗಾಗಿ ನಾವು ಇದರಲ್ಲಿ ರಾಜಕೀಯ ಮಾಡಲು ಹೋಗಿರಲಿಲ್ಲ. ಇವರು ರಾಜಕೀಯವಾಗಿ ಮಾತಾಡಿದ್ರೆ ನಾವೇನು ಮಾಡೋಕೆ ಆಗಲ್ಲ. ರಾಜ್ಯದ ಒಬ್ಬ ಮಂತ್ರಿಗಾದರೂ ಕೇಂದ್ರಕ್ಕೆ ಪತ್ರ ಬರೆಯುವ ಧಮ್ ಇದ್ಯಾ? ರಾಜ್ಯದ ರೈತರಿಗೆ ರಸಗೊಬ್ಬರ ಕೊಡುತ್ತಿದ್ದೇವೆ. ಕೊಪ್ಪಳದ ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಜೊತೆಗೆ ಮಾತಾಡಿದ್ದೇನೆ. ಸಮಸ್ಯೆಗಳ ಬಗ್ಗೆ ಅಧಿಕಾರಿಗಳು ನೋಡಿಕೊಳ್ಳುತ್ತಿದ್ದಾರೆ. ರೈತರ ಸಮಸ್ಯೆಗಳ ಮೇಲೆಯೂ ರಾಜಕಾರಣ ಮಾಡ್ತಿದ್ದಾರೆ. ಇದಕ್ಕೆ ಏನೂ ಮಾಡಲು ಆಗಲ್ಲ. ರೈತರ ಪರ ನಾವಿದ್ದೇವೆ. ಕೇಂದ್ರದಿಂದ ಬರಬೇಕಾದ ಬಾಕಿ ಯೂರಿಯಾ ಬರಲು ಎಲ್ಲಾ ಪ್ರಯತ್ನ ಮಾಡ್ತಿದ್ದೇವೆ. ಬಿಜೆಪಿಯವರಿಗೆ ಧಮ್ಮು, ತಾಕತ್ತಿದ್ರೆ ಕೇಂದ್ರದ ಮೇಲೆ ಒತ್ತಡ ಹಾಕಲಿ ಅಂತ ಕಿಡಿಕಾರಿದರು.

    ಕಾಳಸಂತೆಯಲ್ಲಿ ರಸಗೊಬ್ಬರ ಮಾರಾಟ ಆಗ್ತಿದೆ ಎಂಬ ಬಿಜೆಪಿ ಅರೋಪಕ್ಕೆ ತಿರುಗೇಟು ಕೊಟ್ಟ ಅವರು, ಇಲ್ಲದೆ ಇರೋದನ್ನ ಹೇಳಿದ್ರೆ ನಾವು ಏನು ಮಾಡೋಕೆ ಆಗಲ್ಲ. ವಿಜಿಲೆನ್ಸ್ ಇದೆ, ಸಾವಿರಾರು ರೀಟೈಲ್ ಸೆಂಟರ್ ಇವೆ. ಇಂತಹದ್ದು ಕಂಡು ಬಂದ್ರೆ ಬ್ಲಾಕ್ ಲಿಸ್ಟ್ಗೆ ಸೇರಿಸಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

    ಕೇಂದ್ರ ಸರ್ಕಾರ ಎಂಟು ಮೆಟ್ರಿಕ್ ಟನ್ ಯೂರಿಯಾ ಕೊಟ್ಟಿದೆ. ಆರು ಮೆಟ್ರಿಕ್ ಟನ್ ಎಲ್ಲಿ ಹೋಯ್ತು ಎಂಬ ವಿಜಯೇಂದ್ರ ಆರೋಪಕ್ಕೆ ತಿರುಗೇಟು ಕೊಟ್ಟ ಅವರು, ವಿಜಯೇಂದ್ರಗೆ ಬುದ್ಧಿ ಇದ್ಯಾ? ಹಳೆಯ ಬ್ಯಾಲೆನ್ಸ್ ಯಾವುದು ಇದೆ ಅಂತ ವಿಜಯೇಂದ್ರಗೆ ಗೊತ್ತಿಲ್ಲ. ಪಾಪ ಅವರಿಗೆ ಅನುಭವದ ಕೊರತೆ ಇದೆ. ನಮ್ಮ ಅಶೋಕಣ್ಣನಿಗೆ ಎಲ್ಲಾ ಗೊತ್ತಿದೆ. ಅಧಿಕಾರ ಮಾಡಿದ ಅನುಭವ ಇದೆ. ಪಾಪ ಅವರಿಗೆ ಮಾತಾಡೋಕೆ ಬರಲ್ಲ. ಎಂಟೂವರೇ ಲಕ್ಷದಲ್ಲಿ ಆರು ಲಕ್ಷ ಯೂರಿಯಾ ಬಂದಿದೆ. ಇನ್ನೂ ಒಂದೂವರೇ ಲಕ್ಷ ಯೂರಿಯಾ ಬರಬೇಕಿದೆ. ನಾನು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಜೊತೆ ಮಾತಾಡಿದ್ದೇನೆ. ಇಲ್ಲಿ ಇರೋರಿಗೆ ಅದರ ಬಗ್ಗೆ ಗೊತ್ತಿಲ್ಲ. ಕೇಂದ್ರದ ಜೊತೆ ಮಾತನಾಡಿ ಬಾಕಿ ಇರುವ ಯೂರಿಯಾವನ್ನ ಕೊಡಿಸಲಿ ಎಂದು ವಿಜಯೇಂದ್ರಗೆ ಸವಾಲ್ ಹಾಕಿದರು.ಇದನ್ನೂ ಓದಿ: ಮಜಾವಾದಿ ಸಿದ್ದರಾಮಯ್ಯ ಕೊಟ್ಟಿದ್ದಕ್ಕಿಂತ ಕಿತ್ತುಕೊಂಡಿದ್ದೇ ಹೆಚ್ಚು – ಜೆಡಿಎಸ್

  • ರೈತರಿಗೆ ಸಮರ್ಪಕ ಗೊಬ್ಬರ ವಿತರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ – ಬೊಮ್ಮಾಯಿ

    ರೈತರಿಗೆ ಸಮರ್ಪಕ ಗೊಬ್ಬರ ವಿತರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ – ಬೊಮ್ಮಾಯಿ

    ಗದಗ: ರಾಜ್ಯದಲ್ಲಿ ರೈತರಿಗೆ ಯೂರಿಯಾ ಗೊಬ್ಬರ ಕೊರತೆ ಎದುರಾಗಿದ್ದು, ಸರ್ಕಾರ ಮುಂಚಿತವಾಗಿ ಸ್ಟಾಕ್ ಮಾಡಬೇಕಿತ್ತು. ರೈತರಿಗೆ ಸಮರ್ಪಕ ಗೊಬ್ಬರ ವಿತರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.

    ಜಿಲ್ಲೆಯ ಸೊರಟೂರ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಹೆಚ್ಚಿನ ಗೊಬ್ಬರ ಬೇಕು ಎಂದು ಕೇಂದ್ರ ಸರ್ಕಾರಕ್ಕೆ ಕೇಳಿದೆ. ಕೇಂದ್ರ ಕೃಷಿ ಸಚಿವರ ಜೊತೆ ಮಾತನಾಡಿ ಕೊಡಿಸುವಂತಹ ಪ್ರಯತ್ನ ಮಾಡುತ್ತೇನೆ. ರಾಜ್ಯದಲ್ಲಿದ್ದ ಗೊಬ್ಬರವನ್ನು ರೈತರಿಗೆ ಸಮರ್ಪಕವಾಗಿ ಸರ್ಕಾರ ಪೂರೈಕೆ ಮಾಡಲಿ ಎಂದರು.ಇದನ್ನೂ ಓದಿ: ಕಠಿಣ ಸಂದರ್ಭದಲ್ಲೂ ಅಭಿವೃದ್ಧಿಯ ದೀಪ ಬೆಳಗಿಸಬಹುದು – ಮಾಜಿ ಮಾವೋವಾದಿಗಳ ಮೀನು ಕೃಷಿಗೆ ಮೋದಿ ಶ್ಲಾಘನೆ

    ಇನ್ನೂ ನಾಲ್ವಡಿ ಕೃಷ್ಣರಾಜ ಒಡೆಯರಿಗಿಂತ ಹೆಚ್ಚು ಅಭಿವೃದ್ಧಿ ಕೆಲಸ ಸಿದ್ದರಾಮಯ್ಯ ಮಾಡಿದ್ದಾರೆ ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ಇದು ಹೋಲಿಕೆಗೆ ಅಸಾಧ್ಯವಾದದ್ದು. ಅವರ ತಂದೆ ಬಹಳ ಕೆಲಸ ಮಾಡಿದ್ದಾರೆಂದು ತೋರಿಸಲು ಹೋಲಿಕೆ ಮಾಡ್ತಿದ್ದಾರೆ. ಸೂರ್ಯನ ಜೊತೆಗೆ ಯಾವುದಾದರೂ ಸಣ್ಣ ಬೆಳಕನ್ನು ಹೋಲಿಕೆ ಮಾಡಲು ಸಾಧ್ಯನಾ? ಸಾಧ್ಯನೇ ಇಲ್ಲ. ಸೂರ್ಯ ಸೂರ್ಯನೇ ಎಂದು ಹೇಳಿದರು.

    ಮಹದಾಯಿ ವಿಚಾರವಾಗಿ ಮಾತನಾಡಿ, ಮಹದಾಯಿ ಏನಾದ್ರು ಪ್ರಗತಿಯಾಗಿದ್ರೆ ಅದಕ್ಕೆ ಕಾರಣ ಬಿಜೆಪಿ. ಮೋದಿ ಸರ್ಕಾರ ಬಂದ್ಮೇಲೆ ಮಹದಾಯಿ ಆದೇಶ ಹೊರಡಿಸಿದ್ದರು. ಮಾಡಿಸಿದ್ದ ಡಿಪಿಆರ್‌ನ್ನು ಎನ್‌ಡಿಎ ಸರ್ಕಾರ ಕೇಂದ್ರದಲ್ಲಿ ಒಪ್ಪಿಗೆ ಪಡೆಯಿತು. ಕಾಂಗ್ರೆಸ್ ಏನು ಮಾಡಲಿಲ್ಲ. ಬರೀ ನಾವು ಮಾಡಿದ ಕೆಲಸಕ್ಕೆ ಅಡ್ಡಗೋಡೆ ಕಟ್ಟಿದ್ದಾರೆ. ಮಹದಾಯಿ ಮಲಪ್ರಭಾಗೆ ಹರಿಯಬಾರದು ಅಂತ ಗೋಡೆ ಕಟ್ಟಿದರು. ರಾಜ್ಯದ ವಿಷಯದಲ್ಲಿ ರಾಜಕಾರಣ ಬೇಡ. ನ್ಯಾಯ ಸಮ್ಮತವಾಗಿ ಕಾಂಗ್ರೆಸ್ ಸರ್ಕಾರ ನಡೆಯಲಿ. ಗೋವಾ ಸಿಎಂ ಹೇಳಿಕೆಯನ್ನು ನಾನು ಸಹ ಖಂಡಿಸುತ್ತೇನೆ. ಕಾಂಗ್ರೆಸ್‌ಗೆ ಮಹದಾಯಿ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ. ಸೋನಿಯಾ ಗಾಂಧಿ ಗೋವಾ ಚುನಾವಣೆಯಲ್ಲಿ ಹನಿ ನೀರು ಮಹದಾಯಿಂದ ಮಲಪ್ರಭಾಗೆ ಕೊಡಲ್ಲ ಎಂದಿದ್ದರು. ಹೀಗಾಗಿ ಕಾಂಗ್ರೆಸ್‌ಗೆ ಯಾವ ನೈತಿಕ ಹಕ್ಕಿದೆ ಎಂದು ಕಿಡಿಕಾರಿದರು.

    ಈ ವೇಳೆ ವಿಧಾನ ಪರಿಷತ್ ಸದಸ್ಯ ಎಸ್.ವಿ ಸಂಕನೂರ, ಶಿರಹಟ್ಟಿ ಶಾಸಕ ಡಾ ಚಂದ್ರು ಲಮಾಣಿ, ಬಿಜೆಪಿ ಜಿಲ್ಲಾಧ್ಯಕ್ಷ ರಾಜುಕುರುಡಗಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.ಇದನ್ನೂ ಓದಿ: Explained| ಬದಲಾದ ಮಾಲ್ಡೀವ್ಸ್‌ – ಇಂಡಿಯಾ ಔಟ್‌ ಹೇಳಿ ಈಗ ಮೋದಿಯನ್ನು ಆಹ್ವಾನಿಸಿದ್ದು ಯಾಕೆ?

  • ರಾಜ್ಯದ ಬೇಡಿಕೆಗಿಂತ ಹೆಚ್ಚು ರಸಗೊಬ್ಬರ ಪೂರೈಕೆಯಾಗಿದೆ, ಸಿಎಂ ಬರೀ ಸುಳ್ಳು ಹೇಳ್ತಿದ್ದಾರೆ – ಜೋಶಿ ಕಿಡಿ

    ರಾಜ್ಯದ ಬೇಡಿಕೆಗಿಂತ ಹೆಚ್ಚು ರಸಗೊಬ್ಬರ ಪೂರೈಕೆಯಾಗಿದೆ, ಸಿಎಂ ಬರೀ ಸುಳ್ಳು ಹೇಳ್ತಿದ್ದಾರೆ – ಜೋಶಿ ಕಿಡಿ

    -ರೈತರ ಹಿತದೃಷ್ಟಿಯಿಂದ 8.73 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಪೂರೈಕೆ

    ನವದೆಹಲಿ: ಕರ್ನಾಟಕಕ್ಕೆ (Karnataka) ರಸಗೊಬ್ಬರ ಪೂರೈಕೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಬರೀ ಸುಳ್ಳು ಹೇಳುತ್ತಾ, ರಾಜ್ಯದ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ (Prahlad Joshi) ಕಿಡಿಕಾರಿದ್ದಾರೆ.

    ರಾಜ್ಯದಲ್ಲಿ ಮುಂಗಾರು ಹಂಗಾಮಿಗಾಗಿ 6.30 ಲಕ್ಷ ಮೆಟ್ರಿಕ್ ಟನ್ ಯೂರಿಯಾದ ಅವಶ್ಯಕತೆಯಿದೆ ಎಂದು ರಾಜ್ಯ ಸರ್ಕಾರ ಬೇಡಿಕೆ ಇಟ್ಟಿತ್ತು. ಆದರೆ, ಕೇಂದ್ರ ರಸಗೊಬ್ಬರ ಇಲಾಖೆ ರಾಜ್ಯದ ರೈತರ ಹಿತದೃಷ್ಟಿಯಿಂದ ಸಕಾಲಿಕವಾಗಿ 8.73 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಪೂರೈಕೆ ಮಾಡಿದೆ ಎಂದು ಸ್ಪಷ್ಟಪಡಿಸಿದ್ದಾರೆ.ಇದನ್ನೂ ಓದಿ: ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ – ಸೂಲಿಬೆಲೆ ವಿರುದ್ಧ ದಾಖಲಾದ ಕೇಸ್‌ ರದ್ದು

    ರಾಜ್ಯದಲ್ಲಿ ಪ್ರಸ್ತುತ 7.08 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಮಾರಾಟ ದಾಖಲಾಗಿದೆ. ಕೇಂದ್ರ ಸರ್ಕಾರ ಸಕಾಲಕ್ಕೆ ಸಮರ್ಪಕವಾಗಿ ರಸಗೊಬ್ಬರ ಪೂರೈಸಿದ್ದರಿಂದಲೇ ಇಷ್ಟೊಂದು ಪ್ರಮಾಣದಲ್ಲಿ ರಸಗೊಬ್ಬರ ವಹಿವಾಟು ನಡೆದಿದೆ. ವಾಸ್ತವ ಹೀಗಿರುವಾಗ ಸಿಎಂ ಸಿದ್ದರಾಮಯ್ಯ ಅವರು ವಿನಾಕಾರಣ ಕೇಂದ್ರದ ಮೇಲೆ ವೃಥಾ ಆರೋಪ ಮಾಡುತ್ತಿರುವುದು ನಿಜಕ್ಕೂ ಶೋಚನೀಯ ಎಂದು ಖಂಡಿಸಿದ್ದಾರೆ.

    ಸಿಎಂಗೆ ಸುಳ್ಳು ಹೇಳೋದೇ ಕಾಯಕವಾಗಿದೆ:
    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೀ ಸುಳ್ಳು ಹೇಳುವುದೇ ಒಂದು ಕಾಯಕವಾಗಿ ಬಿಟ್ಟಿದೆ. ಯಾವತ್ತೂ ಮಾತಿಗೆ ಮೊದಲು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವುದನ್ನೇ ಚಟವಾಗಿಸಿಕೊಂಡಿದ್ದಾರೆ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

    ಯೂರಿಯಾ ಅಭಾವವಿಲ್ಲ ಎಂದಿದ್ದಾರೆ ಚಲುವರಾಯಸ್ವಾಮಿ:
    ರಾಜ್ಯದಲ್ಲಿ ಯೂರಿಯಾ ಅಭಾವವಿಲ್ಲ. ಹೆಚ್ಚಿನ ಸಂಗ್ರಹಣೆಯಿದೆ ಎಂದು ಖುದ್ದು ಕೃಷಿ ಸಚಿವ ಚಲುವರಾಯಸ್ವಾಮಿ ಅವರೇ ಸ್ಪಷ್ಟಪಡಿಸಿದ್ದಾರೆ. ಹೀಗಿರುವಾಗ ಸಿಎಂ ಸಿದ್ದರಾಮಯ್ಯ ಅವರು ಸುಳ್ಳು ಹೇಳುತ್ತ ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಸಿಎಂ ಆರೋಪ ಅಕ್ಷಮ್ಯ:
    ರಸಗೊಬ್ಬರ ಪೂರೈಕೆ, ದಾಸ್ತಾನು ವಿಷಯದಲ್ಲಿ ಕೃಷಿ ಸಚಿವರೇ ಸತ್ಯ ಒಪ್ಪಿಕೊಂಡಿದ್ದಾರೆ. ಅಲ್ಲದೇ, ಹೇಳಿಕೆ ನೀಡಿ ಸ್ಪಷ್ಟಪಡಿಸಿದ್ದಾರೆ. ಆದರೆ, ಸಿಎಂ ಮಾತ್ರ ಅವಾಸ್ತವಿಕ ಹೇಳಿಕೆ ನೀಡುತ್ತಿದ್ದಾರೆ. ತಮ್ಮ ಕುರ್ಚಿ ಗಲಾಟೆ, ಹದಗೆಟ್ಟ ರಾಜ್ಯದ ಆರ್ಥಿಕ ಸ್ಥಿತಿ ಮತ್ತು ತಮ್ಮ ಸರ್ಕಾರದ ದುರಾಡಳಿತವನ್ನೆಲ್ಲ ಮರೆಮಾಚಲು ಹೀಗೆ ಕೇಂದ್ರ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುತ್ತಿರುವುದು ಅಕ್ಷಮ್ಯ ವಾಗ್ದಾಳಿ ನಡೆಸಿದ್ದಾರೆ.ಇದನ್ನೂ ಓದಿ: ಪ್ರಥಮ ಪಿಯುಸಿ ದಾಖಲಾತಿ ದಿನಾಂಕ ವಿಸ್ತರಣೆ

  • ರಾಜ್ಯಕ್ಕೆ ಕೊಡಬೇಕಾದ ಯೂರಿಯಾ ಕೂಡಲೇ ಬಿಡುಗಡೆ ಮಾಡಿ – ಕೇಂದ್ರ ಸಚಿವರಿಗೆ ಸಿಎಂ ಪತ್ರ

    ರಾಜ್ಯಕ್ಕೆ ಕೊಡಬೇಕಾದ ಯೂರಿಯಾ ಕೂಡಲೇ ಬಿಡುಗಡೆ ಮಾಡಿ – ಕೇಂದ್ರ ಸಚಿವರಿಗೆ ಸಿಎಂ ಪತ್ರ

    ಬೆಂಗಳೂರು: ರಾಜ್ಯದಲ್ಲಿ ಉಂಟಾಗುತ್ತಿರುವ ಯೂರಿಯಾ (Urea) ಕೊರತೆ ಹಿನ್ನಲೆಯಲ್ಲಿ ರಾಜ್ಯಕ್ಕೆ ಕೊಡಬೇಕಾದ ಯೂರಿಯಾವನ್ನು ಕೂಡಲೇ ಬಿಡುಗಡೆಗೊಳಿಸುವಂತೆ ಕೇಂದ್ರ ಸಚಿವ ಜೆ.ಪಿ.ನಡ್ಡಾ (JP Nadda) ಅವರಿಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಪತ್ರದ ಮೂಲಕ ಆಗ್ರಹಿಸಿದ್ದಾರೆ.ಇದನ್ನೂ ಓದಿ: Ullu, ALTT ಬಾಲಾಜಿ ಸೇರಿದಂತೆ 25 OTT ಪ್ಲಾಟ್‌ಫಾರಂಗಳು ಬ್ಯಾನ್‌

    ಪತ್ರದಲ್ಲಿ, ರಾಜ್ಯಕ್ಕೆ ಒಟ್ಟು 11.17 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಕೊಡಬೇಕಿತ್ತು. ಇಲ್ಲಿಯವರೆಗೆ 5.16 ಲಕ್ಷ ಮೆಟ್ರಿಕ್ ಟನ್ ಮಾತ್ರ ಕೊಡಲಾಗಿದೆ. ರಾಜ್ಯಕ್ಕೆ ಇನ್ನೂ 6.80 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಬರಬೇಕಿದೆ. ಆದರೆ ಕೆಲ ಫರ್ಟಿಲೈಸರ್ ಕಂಪನಿಗಳು ಕೊರತೆಯ ಕಾರಣ ಹೇಳಿ ಯೂರಿಯಾ ಒದಗಿಸುತ್ತಿಲ್ಲ. ಹೀಗಾಗಿ ಕೂಡಲೇ ಯೂರಿಯಾ ಕೊಡುವಂತೆ ಒತ್ತಾಯಿಸಿದ್ದಾರೆ.

    ಕಳೆದ ವರ್ಷಕ್ಕಿಂತ ಈ ಬಾರಿ ಮುಂಗಾರು ಮಳೆ ಹೆಚ್ಚಾಗಿದೆ. ಕಾವೇರಿ, ತುಂಗಭದ್ರಾ, ಕೃಷ್ಣಾದಿಂದ ನೀರು ಬಿಡುಗಡೆಯಾಗಿದೆ. ಇದರಿಂದ ರೈತರು ಕೃಷಿ ಚಟುವಟಿಕೆಗಳನ್ನ ಪ್ರಾರಂಭ ಮಾಡಿದ್ದಾರೆ. ಕಳೆದ ವರ್ಷಕ್ಕಿಂತ ಎರಡು ಲಕ್ಷ ಹೆಕ್ಟೇರ್‌ಗಳಲ್ಲಿ ಕೃಷಿ ಚಟುವಟಿಕೆಗಳು ಹೆಚ್ಚಾಗಿದೆ. ಹೀಗಾಗಿ ಕೂಡಲೇ ಯೂರಿಯಾ ಒದಗಿಸುವಂತೆ ಮನವಿ ಮಾಡಿದ್ದಾರೆ.ಇದನ್ನೂ ಓದಿ: ಟಿ.ನರಸೀಪುರ ಪುರಸಭೆಯಲ್ಲಿ 40 ಕೋಟಿ ತೆರಿಗೆ ವಂಚನೆ ಆರೋಪ – ಆಡಿಯೋ ಸ್ಫೋಟ

  • ರಸಗೊಬ್ಬರಕ್ಕಾಗಿ ಹಗಲು ರಾತ್ರಿ ಕ್ಯೂನಲ್ಲಿ ನಿಲ್ಲುತ್ತಿರುವ ರೈತರು

    ರಸಗೊಬ್ಬರಕ್ಕಾಗಿ ಹಗಲು ರಾತ್ರಿ ಕ್ಯೂನಲ್ಲಿ ನಿಲ್ಲುತ್ತಿರುವ ರೈತರು

    -ಗೊಬ್ಬರದ ಅಭಾವದಿಂದ ರೈತರ ಸುಲಿಗೆಗೆ ನಿಂತ ವಿತರಕರು

    ಚಿಕ್ಕಬಳ್ಳಾಪುರ: ಇತ್ತೀಚೆಗೆ ಮಳೆಯಾದ ಪರಿಣಾಮ ಬಯಲು ಸೀಮೆ ಭಾಗದ ಕೆಲವು ಜಿಲ್ಲೆಗಳಲ್ಲಿ ಒಣಗಿ ಹೋಗುತ್ತಿದ್ದ ಬೆಳೆಗಳು ನಳನಳಿಸುತ್ತಿವೆ. ಇರೋ ಬೆಳೆಯ ಉತ್ತಮ ಫಸಲು ಪಡೆಯಲು ಮುಂದಾಗಿರುವ ರೈತರು, ಮಳೆ ನಿಂತ ಮೇಲೆ ಗೊಬ್ಬರ ಹಾಕಲು ಯೂರಿಯಾ ಮೊರೆ ಹೋಗಿದ್ದು, ಯೂರಿಯಾಗೆ ಈಗ ಎಲ್ಲಿಲ್ಲದ ಡಿಮ್ಯಾಂಡ್ ಹೆಚ್ಚಾಗಿದೆ.

    ಇದರಿಂದ ಚಿಕ್ಕಬಳ್ಳಾಪುರದಲ್ಲಿ ರೈತರು ದಿನವಿಡೀ ಸರದಿ ಸಾಲಿನಲ್ಲಿ ನಿಂತು ಮೂಟೆ ಗೊಬ್ಬರ ಪಡೆಯೋಕೆ ಕಷ್ಟಪಡುತ್ತಿದ್ದಾರೆ. ಸರದಿ ಸಾಲಿನಲ್ಲಿ ನಿಂತು ನನಗೂ ಒಂದು ಮೂಟೆ ಯೂರಿಯಾ ಗೊಬ್ಬರ ಕೊಡಿ ಸ್ವಾಮಿ ಎಂದು ರೈತರು, ಅಧಿಕಾರಿಗಳ ಬಳಿ ಮನವಿ ಮಾಡುತ್ತಿದ್ದಾರೆ. ಕಳೆದ ವಾರ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿದ ಕಾರಣ ಬಿತ್ತನೆ ಮಾಡಿದ ರಾಗಿ, ಜೋಳ, ತೊಗರಿ, ಶೇಂಗಾ ಬೆಳೆಗಳು ನಳನಳಿಸುತ್ತಿವೆ. ಇದರಿಂದ ಉತ್ತಮ ಫಸಲು ಪಡೆಯಲು ಮುಂದಾಗಿರುವ ರೈತರು, ಯೂರಿಯಾ ಗೊಬ್ಬರದ ಮೊರೆ ಹೋಗಿದ್ದಾರೆ.

    ಆದರೆ ಯೂರಿಯಾ ಗೊಬ್ಬರದ ಅಭಾವ ಇದ್ದು, ಹತ್ತು ಮೂಟೆ ಗೊಬ್ಬರ ಬೇಕಾಗಿದ್ದರೆ ಸಹಕಾರ ಸಂಘದ ಕಚೇರಿಗಳಲ್ಲಿ ಒಂದೊ ಎರಡೊ ಮೂಟೆ ಗೊಬ್ಬರ ಮಾತ್ರ ಕೊಡುತ್ತಿದ್ದಾರೆ. ಅದಕ್ಕೂ ದಿನವಿಡಿ ಸರದಿ ಸಾಲಿನಲ್ಲಿ ನಿಂತು ಗೊಬ್ಬರ ಪಡೆಯಬೇಕಾದ ಪರಿಸ್ಥಿತಿ ಎದುರಾಗಿದೆ.

    ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಯೂರಿಯಾ ಗೊಬ್ಬರ ವಿತರಣೆ ಮಾಡಲು ಹಾಪ್ ಕಾಮ್ಸ್‍ಗೆ ಅನುಮತಿ ನೀಡಲಾಗಿದೆ. ತಾಲೂಕು ವ್ಯವಸಾಯೋತ್ಪನ್ನ ಸಹಕಾರ ಸಂಘ ಅವಶ್ಯಕತೆಗೆ ಅನುಗುಣವಾಗಿ ಗೊಬ್ಬರ ತರಿಸಿ ಅದನ್ನು ಹಾಪ್ ಕಾಮ್ಸ್ ಹಾಗೂ ವಿಎಸ್‍ಎಸ್‍ಎನ್ ಸಹಕಾರ ಸಂಘಗಳಿಗೆ ನೀಡುತ್ತಾರೆ. ಹಾಪ್ ಕಾಮ್ಸ್ ಹಾಗೂ ವಿಎಸ್‍ಎಸ್‍ಎನ್ ರೈತರಿಗೆ ಗೊಬ್ಬರ ವಿತರಣೆ ಮಾಡುತ್ತಾರೆ. ಆದರೆ ಇವರು 266 ರೂಪಾಯಿ ಬೆಲೆ ಇರುವ ಗೊಬ್ಬರವನ್ನು, 270 ರೂಪಾಯಿ ಜೊತೆಗೆ ಹತ್ತು ರೂಪಾಯಿ ಕೂಲಿ ಸೇರಿಸಿ 280 ರೂಪಾಯಿಗೆ ರೈತರಿಗೆ ಗೊಬ್ಬರ ಮಾರಾಟ ಮಾಡುತ್ತಿದ್ದಾರೆ. ಹೀಗೆ ಕೆಲವರು ರೈತರಿಂದ ಹೆಚ್ಚಿಗೆ ಹಣ ವಸೂಲಿ ಮಾಡುತ್ತಿದ್ದಾರೆ ಅನ್ನೊ ಆರೋಪ ಕೂಡ ಕೇಳಿ ಬರುತ್ತಿದೆ.

    ಇಷ್ಟು ದಿನ ಗೊಬ್ಬರ ಕೇಳೋರಿರಲಿಲ್ಲ. ಆದರೆ ಈಗ ಇದ್ದಕ್ಕಿದ್ದ ಹಾಗೆ ಮಳೆರಾಯ ಕರುಣೆ ತೋರಿದ ಕಾರಣ ಬೆಳೆಗಳು ಹಚ್ಚ ಹಸಿರಿನಿಂದ ಕಂಗೊಳಿಸುತ್ತಿವೆ. ಭೂಮಿ ಹಸಿಯಾಗಿರುವಾಗಲೇ ಗೊಬ್ಬರ ಹಾಕಬೇಕಾದ ಕಾರಣ ಎಲ್ಲಾ ರೈತರು ಒಂದೇ ಸಮಯದಲ್ಲಿ ಗೊಬ್ಬರಕ್ಕೆ ಬೇಡಿಕೆ ಇಟ್ಟಿದ್ದಾರೆ. ಆದರೆ ರೈತರಿಗೆ ಬೆಳೆಗಳಿಗೆ ಬೇಕಾದಷ್ಟು ಗೊಬ್ಬರ ದೊರೆಯದೆ ರೈತರು ಪರದಾಡುತ್ತಿದ್ದಾರೆ. ಮಳೆ ಇಲ್ಲದಿದ್ದರೆ ಬೆಳೆ ಹಾಳು, ಮಳೆ ಬಂದರೆ ಈ ಪಾಡು ಎಂದು ರೈತರು ಕಂಗಾಲಾಗಿದ್ದಾರೆ.

  • ಭಾರತೀಯರ ಮೂತ್ರವನ್ನು ಸಂಗ್ರಹಿಸಿದರೆ ದೇಶ ಯೂರಿಯಾ ಆಮದನ್ನು ನಿಲ್ಲಿಸಬಹುದು: ಗಡ್ಕರಿ

    ಭಾರತೀಯರ ಮೂತ್ರವನ್ನು ಸಂಗ್ರಹಿಸಿದರೆ ದೇಶ ಯೂರಿಯಾ ಆಮದನ್ನು ನಿಲ್ಲಿಸಬಹುದು: ಗಡ್ಕರಿ

    ನಾಗ್ಪುರ: ಭಾರತೀಯರ ಮೂತ್ರ ಪೂರ್ಣ ಪ್ರಮಾಣದಲ್ಲಿ ಸಂಗ್ರಹವಾದರೆ ನಾವು ವಿದೇಶದಿಂದ ರಸಗೊಬ್ಬರ ಆಮದನ್ನು ತರುವ ಅಗತ್ಯವೇ ಇಲ್ಲ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

    ಕಾರ್ಯಕ್ರಮಲ್ಲಿ ಮಾತನಾಡಿದ ಅವರು, ಈಗ ಹೇಗೆ ಜೈವಿಕ ತ್ಯಾಜ್ಯಗಳನ್ನು ಬಳಸಿ ಇಂಧನವನ್ನು ಉತ್ಪಾದಿಸಲಾಗುತ್ತದೋ ಅದೇ ರೀತಿಯಾಗಿ ಮಾನವನ ಮೂತ್ರವನ್ನು ಬಳಸಿ ಜೈವಿಕ ಇಂಧನವನ್ನು ತಯಾರಿಸಬಹುದು. ಯೂರಿಯಾ ರಸಗೊಬ್ಬರವನ್ನು ತಯಾರಿಸಬಹುದು ಎಂದು ಸಲಹೆ ನೀಡಿದರು.

     

    ನಾನು ವಿಮಾನ ನಿಲ್ದಾಣದಲ್ಲಿ ಮೂತ್ರವನ್ನು ಸಂಗ್ರಹಿಸಬೇಕು ಎಂದು ಹೇಳಿದ್ದೆ. ಆದರೆ ಈ ಮಾತನ್ನು ಯಾರು ಕೇಳಿಸಿಕೊಳ್ಳಲಿಲ್ಲ. ಮೂತ್ರದಲ್ಲಿ ಒಂದು ವಿಶೇಷ ಶಕ್ತಿ ಇದ್ದು ಸಂಗ್ರಹಿಸಿದರೆ ವ್ಯರ್ಥವಾಗುವುದನ್ನು ತಡೆಯಬಹುದು. ದೇಶದಲ್ಲಿರುವ ಅಷ್ಟೂ ಭಾರತೀಯರ ಮೂತ್ರವನ್ನು ಸಂಗ್ರಹಿಸಿದರೆ ನಾವು ಯೂರಿಯಾವನ್ನು ಆಮದು ಮಾಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ನನ್ನ ಕಲ್ಪನೆಗಳು ಅದ್ಭುತವಾಗಿರುತ್ತದೆ. ಆದರೆ ಉಳಿದ ಜನಗಳು ಕಲ್ಪನೆಯ ಜಾರಿಗೆ ಸಹಕಾರ ನೀಡುವುದಿಲ್ಲ ಎಂದು ತಮ್ಮ ಅಸಮಾಧಾನವನ್ನು ಹೊರಹಾಕಿದರು.

    ಈ ವೇಳೆ ಮಾನವನ ತಲೆಕೂದಲು ಬಳಸಿ ಅಮೈನೊ ಆ್ಯಸಿಡ್ ಉತ್ಪಾದನೆಯ ವಿಚಾರವನ್ನು ಪ್ರಸ್ತಾಪಿಸಿದರು. ನಾಗ್ಪುರದಲ್ಲಿ ಜಾಸ್ತಿ ಪ್ರಮಾಣದಲ್ಲಿ ತಲೆಕೂದಲು ಸಿಗದ ಕಾರಣ ನಾವು ಪ್ರತಿ ತಿಂಗಳು ತಿರುಪತಿಯಿಂದ 5 ಟ್ರಕ್ ತಲೆಕೂದಲನ್ನು ತರುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ:5 ಪೈಸೆಗೆ 1 ಲೀಟರ್ ಕುಡಿಯುವ ನೀರು: ಗಡ್ಕರಿ

    ತಲೆಕೂದಲಿನ ಪ್ರಯೋಗ ಯಶಸ್ವಿಯಾದ ಬಳಿಕ ಅಮೈನೊ ಆ್ಯಸಿಡ್ ಉತ್ಪಾದನೆ ಶೇ.25 ರಷ್ಟು ಹೆಚ್ಚಾಗಿದೆ. ನಾವು ಈಗ ವಿದೇಶಕ್ಕೆ ಅಮೈನೊ ಆ್ಯಸಿಡ್ ಮಾರಾಟ ಮಾಡುತ್ತೇವೆ. ದುಬೈ ಸರ್ಕಾರ 180 ಕಂಟೈನರ್ ಬಯೋ ಗೊಬ್ಬರಕ್ಕೆ ಆರ್ಡರ್ ಮಾಡಿದೆ ಎಂದು ತಿಳಿಸಿದರು.

    ಈ ಹಿಂದೆ ಗಡ್ಕರಿ ದೆಹಲಿಯ ನಿವಾಸದಲ್ಲಿ ಗಿಡಗಳಿಗೆ ಹಾಕಲು ತಮ್ಮ ಮೂತ್ರವನ್ನು ತೆಗೆದು ಇರಿಸುತ್ತಿದ್ದೆ ಎಂದು ಹೇಳಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಯೂರಿಯಾ ಮಿಶ್ರಿತ ಹಾಲು ಕುಡಿದ ವಿದ್ಯಾರ್ಥಿಗಳು ಅಸ್ವಸ್ಥ!

    ಯೂರಿಯಾ ಮಿಶ್ರಿತ ಹಾಲು ಕುಡಿದ ವಿದ್ಯಾರ್ಥಿಗಳು ಅಸ್ವಸ್ಥ!

    ಚಿಕ್ಕಮಗಳೂರು: ಸರ್ಕಾರಿ ಶಾಲೆಯಲ್ಲಿ ಅಡುಗೆಯವರ ಎಡವಟ್ಟಿನಿಂದಾಗಿ ಯೂರಿಯಾ ಹಾಲು ಕುಡಿದ 19 ಮಕ್ಕಳು ಅಸ್ವಸ್ಥಗೊಂಡ ಘಟನೆ ಕೊಪ್ಪ ತಾಲೂಕು ಹರಹರಿಪುರ ಸಮೀಪದ ನಿಲುವಾಗಿಲು ಗ್ರಾಮದಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

    ಮಕ್ಕಳು ಸದ್ಯ ಹರಿಹರಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಚೇತರಿಕೆಗೊಂಡ ಬಳಿಕ ಸಂಜೆ ಮನೆಗೆ ತೆರಳಿದ್ದಾರೆ. ಕೊಪ್ಪ ಕ್ಷೇತ್ರ ಶಿಕ್ಷಣಾಧಿಕಾರಿ ನಿಲುವಾಗಿಲು ಮುಖ್ಯಶಿಕ್ಷಕ ಅಶೋಕ, ಹಿರಿಯ ಅಡುಗೆಯವರಾದ ಯಶೋದಮ್ಮ, ಅಡುಗೆ ಸಹಾಯಕರಾದ ಶಾರದಾ ಹಾಗೂ ಗುಲಾಬಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

    ನಡೆದದ್ದು ಏನು?
    ನಿಲುವಾಗಿಲು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಎಂದಿನಂತೆ ಶನಿವಾರ ವಿದ್ಯಾರ್ಥಿಗಳಿಗೆ ಹಾಲು ವಿತರಣೆ ಮಾಡಲಾಗಿದೆ. ಹಾಲು ಕುಡಿಯುತ್ತಿದ್ದಂತೆ ಮಕ್ಕಳು ಹಾಲು ಕಹಿಯಾಗಿದೆ ಎಂದು ಶಿಕ್ಷಕರಿಗೆ ತಿಳಿಸಿದ್ದಾರೆ. ತಕ್ಷಣವೇ ಜಾಗೃತಗೊಂಡ ದೈಹಿಕ ಶಿಕ್ಷಣ ಶಿಕ್ಷಕರು ತಾವು ಸ್ಪಲ್ಪ ಹಾಲು ಕುಡಿದಿದ್ದಾರೆ. ಹಾಲು ವಿಷವಾಗಿದೆ ಅಂತ ಗೊತ್ತಾಗುತ್ತಿದ್ದಂತೆ ಮಕ್ಕಳಿಗೆ ಹಾಲು ಕುಡಿಯದಂತೆ ಸೂಚಿಸಿ, ಮುಖ್ಯಶಿಕ್ಷಕರಿಗೆ ಆ ವೇಳೆಗಾಗಲೇ ಮುಖ್ಯೋಪಾಧ್ಯಾಯರ ಗಮನಕ್ಕೆ ತಂದಿದ್ದಾರೆ. ಅದರೆ ಅಷ್ಟೊತ್ತಿಗಾಗಲೇ ಶಾಲೆಯ 19 ಮಕ್ಕಳು ಹಾಲನ್ನು ಸೇವಿಸಿಯಾಗಿತ್ತು.

    ಹಾಲು ಕುಡಿದ 19 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ವೇಳೆ ಹಾಲಿನಲ್ಲಿ ವಿಷಕಾರಿ ಯೂರಿಯಾ ಸೇರಿರುವುದು ಪತ್ತೆಯಾಗಿದೆ. ಹಾಲಿನಲ್ಲಿ ಯಾರು ಯೂರಿಯಾ ಬೆರೆಸಿದ್ದು ಹಾಗೂ ಶಾಲೆಗೆ ಅದು ಹೇಗೆ ಬಂತು ಎನ್ನವುದು ಅನುಮಾನ ವ್ಯಕ್ತವಾಗಿದೆ.

    ಯಶೋಧಮ್ಮ ಅವರು ಇಂದು ರಜೆ ಇದ್ದರು. ಹೀಗಾಗಿ ಶುಕ್ರವಾರವೇ ಹಾಲಿಗೆ ಬೇಕಾಗಿದ್ದ ಸಕ್ಕರೆ ಪ್ಯಾಕೇಟ್ ನೀಡಿ ಹೋಗಿದ್ದರು. ಅದನ್ನು ಪರಿಶೀಲನೆ ಮಾಡದೇ ಹಾಲಿಗೆ ಹಾಕಿದ್ದೇವೆ ಎಂದು ಸಹಾಯಕಿಯರಾದ ಗುಲಾಬಿ ಹಾಗೂ ಶಾರದಾ ತಿಳಿಸಿದ್ದಾರೆ.

    ಕಳೆದ ಕೆಲವು ದಿನಗಳಿಂದ ಯಶೋಧಮ್ಮ ಹಾಗೂ ಅಡುಗೆ ಸಹಾಯಕರ ನಡುವೆ ಜಗಳವಾಗಿತ್ತು. ಒಬ್ಬರ ಮೇಲೆ ಮತ್ತೊಬ್ಬರು ಗೂಬೆ ಕೂರಿಸಲು ಮಕ್ಕಳ ಜೀವನದ ಜೊತೆಗೆ ಆಟವಾಡಿದ್ದಾರೆ. ಇನ್ನು ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಿದ್ದಾರೆ.

    ಅಶೋಕ ಅವರು ನಿಲುವಾಗಿಲು ಸರ್ಕಾರಿ ಶಾಲೆಯ ಮುಖ್ಯಶಿಕ್ಷಕರಾಗಿ ಬಂದ ಮೇಲೆ ಅನೇಕ ಬದಲಾವಣೆ ತಂದಿದ್ದರು. ಖಾಸಗಿ ಶಾಲೆಯಂತೆ ನರ್ಸರಿ ತರಗತಿಗಳನ್ನು ಪ್ರಾರಂಭಿಸಿದ್ದರು. ಇದರಿಂದಾಗಿ ಅನೇಕ ಬಡ ಕುಟುಂಬದ ವಿದ್ಯಾರ್ಥಿಗಳಿಗೆ ಅನುಕೂಲವಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಲೀಟರ್ ಮೂತ್ರಕ್ಕೆ 1 ರೂ. ಕೊಡ್ತಾರಂತೆ- ಮೂತ್ರ ಬ್ಯಾಂಕ್ ಸ್ಥಾಪನೆಗೆ ಮುಂದಾದ ಕೇಂದ್ರ ಸರ್ಕಾರ

    ಲೀಟರ್ ಮೂತ್ರಕ್ಕೆ 1 ರೂ. ಕೊಡ್ತಾರಂತೆ- ಮೂತ್ರ ಬ್ಯಾಂಕ್ ಸ್ಥಾಪನೆಗೆ ಮುಂದಾದ ಕೇಂದ್ರ ಸರ್ಕಾರ

    ನವದೆಹಲಿ: ಯೂರಿಯಾ ಉತ್ಪಾದಿಸಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಪ್ರತಿಯೊಂದು ತಾಲೂಕು ಕೇಂದ್ರದಲ್ಲಿ ಮೂತ್ರ ಬ್ಯಾಂಕ್ ಸ್ಥಾಪಿಸಲು ಮುಂದಾಗಿದ್ದು, ಆ ಮೂಲಕ ಯೂರಿಯಾ ಆಮದು ಅವಲಂಬನೆಯನ್ನು ಕಡಿಮೆ ಮಾಡಲು ಹೊರಟಿದ್ದಾರೆ.

    ಮನುಷ್ಯನ ಮೂತ್ರದಲ್ಲಿ ಸಾಕಷ್ಟು ನೈಟ್ರೋಜನ್ ಇದೆ. ಆದರೆ ಇದನ್ನು ವ್ಯರ್ಥ ಮಾಡುತ್ತಿದ್ದೇವೆ. ಕಸದಿಂದ ರಸ ತೆಗೆಯೋದು ನನ್ನ ಪ್ಯಾಶನ್. ಇದನ್ನ ಪ್ರಯತ್ನಿಸೋದ್ರಲ್ಲಿ ಯಾವುದೇ ಹಾನಿ ಇಲ್ಲ. ಈಗಾಗಲೇ ಫಾಸ್ಫರಸ್ ಮತ್ತ ಪೊಟಾಷಿಯಂಗೆ ಬದಲಿ ಸಾವಯವ ಇದೆ. ನೈಟ್ರೋಜನ್ ಕೂಡ ಸೇರಿಸಿದರೆ ಇನ್ನೂ ಹೆಚ್ಚು ಸಹಾಯಕವಾಗುತ್ತದೆ ಎಂದು ಗಡ್ಕರಿ ಪತ್ರಿಕೆಯೊಂದಕ್ಕೆ ಹೇಳಿದ್ದಾರೆ .

    ಈ ಯೋಜನೆ ಇನ್ನೂ ಪ್ರಾಥಮಿಕ ಹಂತದ ಪ್ರಸ್ತಾಪವಾಗಿದೆ. ಇದನ್ನ ವಾಸ್ತಚಿಕವಾಗಿ ಜಾರಿಗೆ ತರಲು ಸ್ವೀಡನ್ ವಿಜ್ಞಾನಿಗಳೊಂದಿಗೆ ಮಾತುಕತೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

    ಈ ಯೋಜನೆಯನ್ನು ಪ್ರಯೋಗಿಕವಾಗಿ ಗ್ರಾಮೀಣ ಭಾಗದಲ್ಲಿ ಆರಂಭ ಮಾಡಲಾಗುತ್ತದೆ. ಒಂದು ಬಾರಿಗೆ ಪ್ಲಾಸ್ಟಿಕ್ ಕ್ಯಾನ್ ನಲ್ಲಿ ಸಂಗ್ರಹಿಸಿದ 10 ಲೀಟರ್ ಮೂತ್ರ ತರಬೇಕು. ಪ್ರತಿ ಲೀಟರ್ ಮೂತ್ರಕ್ಕೆ 1 ರೂ. ನೀಡಲಾಗುತ್ತೆ. ಸರ್ಕಾರದಿಂದಲೇ ಪ್ಲಾಸ್ಟಿಕ್ ಕ್ಯಾನ್ ನೀಡುವ ವ್ಯವಸ್ಥೆ ಮಾಡಲಾಗುತ್ತದೆ. ನಂತರ ಮೂತ್ರವನ್ನ ಶುದ್ಧೀಕರಣ ಮಾಡಿ ಸಾವಯವ ಗೊಬ್ಬರ ತಯಾರು ಮಾಡಲಾಗುತ್ತದೆ ಎಂದು ವಿವರಿಸಿದರು.

    ಈ ಯೋಜನೆಗೆ ತಗಲುವ ಆರ್ಥಿಕ ವೆಚ್ಚದ ಕುರಿತು ಮತ್ತು ಯೋಜನೆಯ ಕಾರ್ಯಸಾಧ್ಯತೆಯ ಬಗ್ಗೆ ಖಚಿತವಾಗಿಲ್ಲ. ಈ ಕುರಿತು ನಾಗ್ಪುರದ ಸಮೀಪದ ಧಪೇವಾಡಾ ಗ್ರಾಮದ ಪ್ರಯೋಗಲಯದಲ್ಲಿ ಆರಂಭಿಕ ಪರೀಕ್ಷೆಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.

  • ಕುಡಿಯೋ ಹಾಲಿಗೆ ಬೆರೆಸ್ತಾರೆ ಎಣ್ಣೆ, ಯೂರಿಯಾ – ಅಥಣಿ, ರಾಯಬಾಗದಲ್ಲಿ ಭಾರೀ ದಂಧೆ

    ಬೆಳಗಾವಿ: ಹಾಲು ಕುಡಿದವರೇ ಬದಕಲ್ಲ, ಇನ್ನು ವಿಷ ಕುಡಿದವರು ಬದುಕ್ತಾರಾ? ಅನ್ನೋ ಗಾದೆ ಮಾತಿದೆ. ಬೆಳಗಾವಿ ಜಿಲ್ಲೆಯ ನಗರ ಪ್ರದೇಶದ ಜನ ಹಾಲಿನ ಹೆಸರಲ್ಲಿ ವಿಷವನ್ನೇ ಕುಡೀತಿದ್ದಾರೆ.

    ಜನರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿರೋ ಹಾಲಿಗೆ ರಾಸಾಯನಿಕ ಬೆರೆಸುತ್ತಿದ್ದು, ಬೆಳಗಾವಿಯ ಅಥಣಿ ಮತ್ತು ರಾಯಬಾಗ ತಾಲೂಕಿನ ಹಾಲಿನ ದಂಧೆಯ ಬಗ್ಗೆ ಜನರಿಗೆ ಆತಂಕ ಶುರುವಾಗಿದೆ. ಇದ್ರಿಂದ ಭಯಾನಕ ರೋಗಗಳ ಭೀತಿನೂ ಎದುರಾಗಿದೆ.

    ರೈತರಿಂದ ಹಾಲು ಪಡೆಯೋ ಡೈರಿಯವರು, ಹಾಲಿನ ಫ್ಯಾಟ್ ಹಾಗೂ ಡಿಗ್ರಿ ಹೆಚ್ಚಳ ಮಾಡೋಕೆ ಇಂಥ ಅಕ್ರಮ ಹಾದಿ ಹಿಡಿದಿದ್ದಾರೆ. 50 ಲೀಟರ್ ಹಾಲಿಗೆ ಎಣ್ಣೆ, ಯೂರಿಯಾ ಸೇರಿದಂತೆ ವಿಷಪೂರಿತ ಕೆಮಿಕಲ್ ಮಿಕ್ಸ್ ಮಾಡಿ ಅದನ್ನ 100 ಲೀಟರ್‍ಗೆ ಹೆಚ್ಚಿಸ್ತಾರೆ. ಬಳಿಕ ಗ್ರಾಹಕರಿಗೆ ಹಾಲನ್ನ ಮಾರಾಟ ಮಾಡ್ತಿದ್ದಾರೆ. ಈ ಹಾಲಾಹಲದ ದಂಧೆ ಹಿಂದೆ ಭ್ರಷ್ಟ ಅಧಿಕಾರಿಗಳ ಕುಮ್ಮಕ್ಕೂ ಇದೆ ಅಂತ ಸ್ಥಳೀಯರು ಆರೋಪಿಸಿದ್ದಾರೆ.

    ಶುಭ್ರ, ಶುದ್ಧ ಹಾಲಿನಲ್ಲಿ ಪಾತಕಿಗಳು ವಿಷ ತುಂಬಿ ಅಕ್ರಮವಾಗಿ ಲಾಭ ಪಡೀತಿದ್ದಾರೆ. ಈ ಮಿಲ್ಕ್ ಮಾಫಿಯಾ ಹೀಗೆ ಮುಂದುವರಿದ್ರೆ ನಗರದ ಜನ ಆಸ್ಪತ್ರೆಗಳಲ್ಲಿ ಸಾಲು ನಿಲ್ಲೋದು ತಪ್ಪಲ್ಲ.