ಮುಂಬೈ: ಬಾಲಿವುಡ್ ನಟಿ ಊರ್ವಶಿ ರೌಟೇಲಾ (Urvashi Rautela) ಇದೀಗ ರಿಷಭ್ ಪಂತ್ ವಿಚಾರಕ್ಕೆ ಮತ್ತೆ ಸುದ್ದಿಯಲ್ಲಿದ್ದಾರೆ. ಪಂತ್ ಅವರೊಂದಿಗೆ ಮದುವೆ ವಿಚಾರಕ್ಕೆ ನಟಿ ಕೊಟ್ಟ ಪ್ರತಿಕ್ರಿಯೆ ಮತ್ತೆ ಸೋಶಿಯಲ್ ಮೀಡಿಯಾದಲ್ಲಿ ಕಾಲೆಳೆಯುವಂತೆ ಮಾಡಿದೆ.
ಹೌದು. ಪಾಡ್‌ಕಾಸ್ಟ್‌ವೊಂದಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ಅಭಿಮಾನಿಗಳು ಸೋಶಿಯಲ್ ಮೀಡಿಯಾಗಳಲ್ಲಿ ಕೇಳಲಾದ ಪ್ರಶ್ನೆಗಳಿಗೆ ರೌಟೆಲಾ ಉತ್ತರ ನೀಡುತ್ತಿದ್ದರು. ಇದೇ ವೇಳೆ ಆಂಕರ್, ʻರಿಷಭ್ ಪಂತ್ (Rishabh Pant) ನಿಮ್ಮನ್ನು ತುಂಬಾ ಗೌರವಿಸುತ್ತಾರೆ, ತುಂಬಾ ಚೆನ್ನಾಗಿಯೂ ನೋಡಿಕೊಳ್ಳುತ್ತಾರೆ, ನೀವು ಅವರನ್ನು ಮದುವೆಯಾಗಬೇಕು ಅನ್ನೋದು ನಮ್ಮ ಬಯಕೆ, ಇದಕ್ಕೆ ಏನಂತೀರಾ?ʼ ಎಂದು ನೆಟ್ಟಿಗನ ಪ್ರಶ್ನೆಯೊಂದನ್ನು ಪ್ರಸ್ತಾಪಿಸಿದರು. ಆದ್ರೆ ಊರ್ವಶಿ ಇದಕ್ಕೆ ನೋ ಕಾಮೆಂಟ್ಸ್ ಎನ್ನುತ ಮುಂದಿನ ಪ್ರಶ್ನೆಗೆ ಸಾಗಿದರು.

ಇದೇ ವೇಳೆ ಪಾಕಿಸ್ತಾನ ತಂಡದ ಸ್ಟಾರ್ ಬೌಲರ್ ನಸೀಮ್ ಶಾ (Naseem Shah) ಬಗ್ಗೆ ಕೇಳಿದಾಗ, ಖುಷಿಯಿಂದಲೇ ಉತ್ತರಿಸಿದ ಊರ್ವಶಿ ಹ್ಯಾಶ್‌ಟ್ಯಾಗ್ (ಟ್ರೆಂಡಿಂಗ್) ಬೌಲರ್ ಎಂದು ಹೇಳಿದರು. ಮುಂದುವರಿದು, ನಸೀಮ್ ಒಳ್ಳೆಯ ಬೌಲರ್ ಭಾರತ ಮತ್ತು ಪಾಕಿಸ್ತಾನ ಪಂದ್ಯಗಳಲ್ಲಂತೂ ಹೆಚ್ಚು ಜನಪ್ರಿಯರಾಗಿದ್ದಾರೆ ಎಂದು ಹೇಳಿದ್ದಾರೆ. ಸದ್ಯ ನಟಿ ನೀಡಿರುವ ಪ್ರತಿಕ್ರಿಯೆಗೆ ಸೋಶಿಯಲ್ ಮೀಡಿಯಾದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವರು ನಟಿಯ ಕಾಲೆಳೆದಿದ್ದಾರೆ. ಇದನ್ನೂ ಓದಿ: ಕಿಚ್ಚನಿಗೆ ವಿಶೇಷ ಉಡುಗೊರೆ ಕೊಟ್ಟ ರಾಜಸ್ಥಾನ್ ರಾಯಲ್ಸ್ – ಧನ್ಯವಾದ ಹೇಳಿದ ಸುದೀಪ್

ಹಿಂದೆಯೂ ಹಿಗ್ಗಾಮುಗ್ಗಾ ಟ್ರೋಲ್:
2022ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಬೌಲಿಂಗ್ ಮಾಡುತ್ತಿದ್ದ ವೇಳೆ ನಸೀಮ್ ಶಾ, ಸಣ್ಣ ನಗೆ ಬೀರಿದ್ದ ವೀಡಿಯೋವನ್ನ ಊರ್ವಶಿ ರೌಟೇಲಾ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡು ಟ್ರೋಲ್‌ಗೆ ಗುರಿಯಾಗಿದ್ದರು. ಸಂದರ್ಶನದ ವೇಳೆ ಆಕೆ ಯಾರೂ ಅಂತಾನೇ ನನಗೆ ಗೊತ್ತಿಲ್ಲ ಎಂದು ನಸೀಮ್ ಶಾ ಊಹಾಪೋಹಗಳಿಗೆ ಬ್ರೇಕ್ ಹಾಕಿದ್ದರು. ಇದನ್ನೂ ಓದಿ: ಪಾಕಿಸ್ತಾನಕ್ಕೆ ಸಪೋರ್ಟ್ ಮಾಡ್ತಿದ್ದಾರೆ ʻಐರಾವತʼಬೆಡಗಿ – ಊರ್ವಶಿ ರೌಟೇಲಾ ಕಾಲೆಳೆದ ಟ್ರೋಲ್ ಗೆಳೆಯರು
ಊರ್ವಶಿಗೆ ಪಂತ್ ಜೊತೆ ಪ್ರೀತಿಯಿತ್ತಾ?
ರಿಷಬ್ ಪಂತ್ ಜೊತೆ ಊರ್ವಶಿ ಈ ಮೊದಲು ಡೇಟಿಂಗ್ ಮಾಡುತ್ತಿದ್ದರು ಎಂಬ ಸುದ್ದಿ ಹರಿದಾಡುತ್ತಲೇ ಇತ್ತು. ಆದ್ರೆ ಇಬ್ಬರೂ ಅದನ್ನ ಒಪ್ಪಿಕೊಂಡಿರಲಿಲ್ಲ. ಈ ಮಧ್ಯೆ ಇಬ್ಬರ ನಡುವೆ ಬ್ರೇಕಪ್ ಆಗಿದೆ ಎಂಬ ಊಹಾಪೋಹಗಳು ಹರಿದಾಡಿದ್ದವು. ಆದ್ರೆ ನಟಿ ಊರ್ವಶಿ ಈ ಹಿಂದೆ ಅವರು ಮಾಧ್ಯಮವೊಂದಕ್ಕೆ ಹೇಳಿಕೆ ನೀಡುವಾಗ ರಿಷಭ್ ಪಂತ್ ನನ್ನ ಭೇಟಿ ಮಾಡಲು ಹಲವು ಗಂಟೆ ಕಾದಿದ್ದರು ಎಂದಿದ್ದರು. ಇದು ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿತ್ತು. ಈ ಬಗ್ಗೆ ಕ್ರಿಕೆಟಿಗ ರಿಷಭ್ ಕೂಡ ನಟಿಗೆ ಖಡಕ್ ಆಗಿ ತಿರುಗೇಟು ನೀಡಿದ್ದರು.
14 ತಿಂಗಳ ಹಿಂದೆ ರಿಷಭ್ ಕಾರು ಅಪಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾಗ. ಅವರಿಗೆ ಚಿಕಿತ್ಸೆ ನೀಡುವ ಕೆಲಸ ಆಗುತ್ತಿತ್ತು. ಆಗಲೂ ಊರ್ವಶಿ ಅವರು ರಿಷಭ್ ಅವರನ್ನು ಹಿಂಬಾಲಿಸಿದ್ದರು. ರಿಷಬ್‌ಗೆ ಅಪಘಾತದ ವಿಚಾರ ತಿಳಿದಾಗ ʻಪ್ರಾರ್ಥನೆʼ (Prayer) ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ಇದು ಪಂತ್‌ಗಾಗಿ ಹೇಳಿದ ಮಾತು ಎನ್ನಲಾಗಿತ್ತು.