Tag: US Dollar

  • ಅಮೆರಿಕದ ಡಾಲರ್‌ ಎದುರು ರೂಪಾಯಿ ಮೌಲ್ಯ ಏರಿಕೆ

    ಅಮೆರಿಕದ ಡಾಲರ್‌ ಎದುರು ರೂಪಾಯಿ ಮೌಲ್ಯ ಏರಿಕೆ

    ಮುಂಬೈ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಸೋಮವಾರ (ಇಂದು) ನಡೆದ ವಹಿವಾಟಿನಲ್ಲಿ ಅಮೆರಿಕದ ಡಾಲರ್‌ (US Dollar) ಎದುರು ರೂಪಾಯಿ (Indian Rupee) ಮೌಲ್ಯ 9 ಪೈಸೆಗಳಷ್ಟು ಏರಿಕೆ ಕಂಡಿದೆ. ಹೀಗಾಗಿ ರೂಪಾಯಿ ಮೌಲ್ಯವು ಡಾಲರ್‌ ಎದುರು 87.93 ರೂ.ಗೆ ತಲುಪಿದೆ.

    ವಿದೇಶಿ ಬಂಡವಾಳ (Foreign Fund) ಒಳಹರಿವು, ಕಚ್ಚಾತೈಲ ಬೆಲೆ ಇಳಿಕೆ ಹಾಗೂ ದೇಶಿಯ ಷೇರುಪೇಟೆ ಸೂಚ್ಯಂಕದಲ್ಲಿ ಏರಿಕೆ ಕಂಡಿರುವ ಕಾರಣಗಳ ಹಿನ್ನೆಲೆ ರೂಪಾಯಿ ಮೌಲ್ಯವು 9 ಪೈಸೆಯಷ್ಟು ಏರಿಕೆ ಕಂಡಿದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ. ಇದನ್ನೂ ಓದಿ: ರಷ್ಯಾದಿಂದ ತೈಲ ಖರೀದಿ ನಿಲ್ಲಿಸದಿದ್ದರೆ ಭಾರೀ ಸುಂಕ ಹಾಕ್ತೇವೆ: ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

    ಶುಕ್ರವಾರದ ಅಂತ್ಯದ ವೇಳೆಗೆ ಡಾಲರ್‌ ಎದುರು ರೂಪಾಯಿ ಮೌಲ್ಯ 88.02 ರೂ. ಆಗಿತ್ತು. ಆದ್ರೆ ಸೋಮವಾರ ಮಾರುಕಟ್ಟೆ ಅಂತ್ಯದ ವೇಳೆಗೆ 87.93 ರೂ.ಗೆ ತಲುಪಿದೆ. ಇದನ್ನೂ ಓದಿ: PublicTv Explainer: ಬೆಳ್ಳಿಗೂ ಬಂತು ಬಂಗಾರದ ಹೊಳಪು – ದಿಢೀರ್‌ ಏರಿಕೆ ಯಾಕೆ?

    ವಿದೇಶಿ ಬ್ಯಾಂಕ್‌ ಬ್ಯಾಂಕ್‌ ವಿನಿಮಯದಲ್ಲಿ ರೂಪಾಯಿ 87.94 ರೂ.ನಿಂದ ಶುರುವಾಗಿ, 87.74 – 87.94 ರೂ.ಗಳಲ್ಲಿ ವಹಿವಾಟು ನಡೆಸಿತು. ನಂತರ ಶುಕ್ರವಾರದ 88.02 ರೂ.ಗಿಂತ ಹೆಚ್ಚಾಗಿ 87.93 ರೂ.ಗೆ ಕೊನೆಗೊಂಡಿತು. ಇದನ್ನೂ ಓದಿ: ಮಂಡ್ಯ ಭತ್ತಕ್ಕೆ ಫಿಲಿಪೈನ್ಸ್ ನಂಟು – ಹೊಸ ತಳಿ ಸಂಶೋಧನೆಗೆ ಸಂಬಂಧಿಸಿದ ಒಪ್ಪಂದಕ್ಕೆ ಸಹಿ

  • 2026ರ ಕಾಮನ್‌ವೆಲ್ತ್‌ ಕ್ರೀಡಾಕೂಟ ಆತಿಥ್ಯದಿಂದ ಹಿಂದೆ ಸರಿದ ಆಸ್ಟ್ರೇಲಿಯಾ

    2026ರ ಕಾಮನ್‌ವೆಲ್ತ್‌ ಕ್ರೀಡಾಕೂಟ ಆತಿಥ್ಯದಿಂದ ಹಿಂದೆ ಸರಿದ ಆಸ್ಟ್ರೇಲಿಯಾ

    ಮೆಲ್ಬರ್ನ್‌: 2026ರ ಕಾಮನ್‌ವೆಲ್ತ್‌ ಕ್ರೀಡಾಕೂಟ (Commonwealth Games 2026) ಆಥಿತ್ಯದಿಂದ ಆಸ್ಟ್ರೇಲಿಯಾದ ವಿಕ್ಟೋರಿಯಾ ರಾಜ್ಯವು (Victoria State)  ಹಿಂದೆ ಸರಿದಿದೆ.

    ಕ್ರೀಡಾಕೂಡ ಆಯೋಜನೆಗೆ ಕನಿಷ್ಠ 2 ಶತಕೋಟಿ ಆಸ್ಟ್ರೇಲಿಯನ್‌ ಡಾಲರ್‌ (1.36 ಶತಕೋಟಿ ಯುಎಸ್‌ ಡಾಲರ್‌), ಅತ್ಯದ್ಭುತವಾಗಿ ನಡೆಸುತ್ತೇವೆ ಅಂದ್ರೆ ಸುಮಾರು 7 ಶತಕೋಟಿ ಡಾಲರ್‌ನಷ್ಟು ಹಣ ಬೇಕಾಗುತ್ತದೆ. ಅದಕ್ಕಾಗಿ ವಿಕ್ಟೋರಿಯಾ ಆತಿಥ್ಯದಿಂದ ಹಿಂದೆ ಸರಿದೆ ಎಂದು ಮೆಲ್ಬರ್ನ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ರಾಜ್ಯದ ಪ್ರಧಾನ ಅಧಿಕಾರಿ ಡೇನಿಯಲ್‌ ಆಂಡ್ರ್ಯೂಸ್‌ (Daniel Andrews0 ತಿಳಿಸಿದ್ದಾರೆ. ಇದನ್ನೂ ಓದಿ: ಅಲ್ಕರಾಝ್‌ಗೆ ಚೊಚ್ಚಲ ವಿಂಬಲ್ಡನ್‌ ಕಿರೀಟ – ಸೋಲಿಸಿದ ಆಟಗಾರನನ್ನೇ ಬಾಯ್ತುಂಬ ಹೊಗಳಿದ ದಿಗ್ಗಜ ಜೊಕೊವಿಕ್!

    ಕಳೆದ ಬಾರಿ ಮಂಡಿಸಿದ ವಾರ್ಷಿಕ ಬಜೆಟ್‌ಗಿಂತಲೂ ಮೂರು ಪಟ್ಟು ಹೆಚ್ಚಿನ ಹಣ ಈ ಕಾರ್ಯಕ್ರಮಕ್ಕೆ ಬೇಕಾಗುತ್ತದೆ. ಅದಕ್ಕಾಗಿ ಆಸ್ಪತ್ರೆ ಮತ್ತು ಶಾಲೆಗಳಿಗೆ ಮೀಸಲಾದ ಹಣವನ್ನ ತೆಗೆಯಲಾಗುವುದಿಲ್ಲ. ಆದ್ದರಿಂದ 2026ರಲ್ಲಿ ವಿಕ್ಟೋರಿಯಾದಲ್ಲಿ ಕಾಮನ್‌ವೆಲ್ತ್‌ ಕ್ರೀಡಾಕೂಟ ಆಯೋಜನೆ ಮಾಡುವುದಿಲ್ಲ. ಈ ಒಪ್ಪಂದವನ್ನು ಅಂತ್ಯಗೊಳಿಸುವಂತೆ ಕಾಮನ್‌ವೆಲ್ತ್‌ ಕ್ರೀಡಾಕೂಡಕ್ಕೆ ತಿಳಿಸಲು ಅಧಿಕಾರಿಗಳಿಗೆ ಹೇಳಿದ್ದೇವೆ ಎಂದು ಆಂಡ್ರ್ಯೂಸ್‌ ತಿಳಿಸಿದ್ದಾರೆ. ಇದನ್ನೂ ಓದಿ: RCB ಏಕೆ ಐಪಿಎಲ್‌ ಟ್ರೋಫಿ ಗೆದ್ದಿಲ್ಲ – ತಂಡದಿಂದ ಕೈಬಿಟ್ಟ ಮೇಲೆ ಪ್ರಾಮಾಣಿಕ ಉತ್ತರ ಕೊಟ್ಟ ಚಾಹಲ್‌

    ಕಾಮನ್‌ ವೆಲ್ತ್‌ ಕ್ರೀಡಾಕೂಟವು 20 ಕ್ರೀಡೆಗಳು ಮತ್ತು 26 ವಿಭಾಗಗಳನ್ನ ಒಳಗೊಂಡಿರುತ್ತದೆ. ವಿಕ್ಟೋರಿಯಾದಲ್ಲಿ ಕಾಮನ್‌ವೆಲ್ತ್‌ ಕ್ರೀಡಾಕೂಟ ನಡೆಸಲು ಗೀಲಾಂಗ್, ಬಲ್ಲರಾಟ್, ಬೆಂಡಿಗೊ, ಗಿಪ್ಸ್‌ಲ್ಯಾಂಡ್ ಮತ್ತು ಶೆಪ್ಪರ್ಟನ್ ಪ್ರಾದೇಶಿಕ ಕೇಂದ್ರಗಳನ್ನು ಒಳಗೊಂಡಿದೆ. ಆಂಡ್ರ್ಯೂಸ್‌ ಆತಿಥ್ಯ ನಿರಾಕರಿಸಲು ನಿರ್ಧಾರ ಪ್ರಕಟಿಸಿದ ನಂತರ ಆಸೀಸ್‌ ರಾಜಧಾನಿ ಮೇಲ್ಬರ್ನ್‌ನಲ್ಲಿ ಕ್ರೀಡಾಕೂಟ ಆಯೋಜಿಸಲು ನಿರ್ಧರಿಸಲಾಯಿತು. ಅದು ಸಾಧ್ಯವಾಗದ ನಂತರ 2 ಶತಕೋಟಿ ಡಾಲರ್‌ಗಳ ಕಡಿಮೆ ವೆಚ್ಚದ ಪ್ಯಾಕೇಜ್‌ ಘೋಷಣೆ ಮಾಡಲಾಗಿದೆ. ಈ ಬಗ್ಗೆ ವಿಕ್ಟೋರಿಯಾ ರಾಜ್ಯದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಅದ್ಯ ಮಾತುಕತೆ ಮುಂದುವರಿದಿದೆ.

    ಈ ನಡುವೆ ವಿಕ್ಟೋರಿಯಾ ಕ್ರೀಡಾ ಇಲಾಖೆ ವಿರುದ್ಧ ಆಕ್ಷೇಪಗಳು ಕೇಳಿಬರುತ್ತಿವೆ. ಕ್ರೀಡಾಕೂಟ ಆಯೋಜನೆ ಮಾಡೋದಿಲ್ಲ ಎನ್ನುತ್ತಿರುವುದು ವಿಕ್ಟೋರಿಯಾ ರಾಣಿಗೆ ಮಾಡುತ್ತಿರುವ ಅವಮಾನ, ಕಾಮನ್‌ವೆಲ್ತ್‌ ಕ್ರೀಡಾಕೂಟ ಸಮಿತಿಗೂ ಇದರಿಂದ ನಿರಾಶೆಯಾಗಿದೆ ಎಂಬ ಆಕ್ಷೇಪ ಕೇಳಿಬಂದಿದೆ. ಕಳೆದ ಬಾರಿ ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ನಲ್ಲಿ ಕಾಮನ್‌ವೆಲ್ತ್‌ ಕ್ರೀಡಾಕೂಟ ನಡೆದಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದಿವಾಳಿ ಪಾಕಿಸ್ತಾನ ರೂಪಾಯಿ ಮೌಲ್ಯ ಪಾತಾಳಕ್ಕೆ- ಆಹಾರ ಪದಾರ್ಥಗಳ ಬೆಲೆ ಮತ್ತಷ್ಟೂ ದುಬಾರಿ.!

    ದಿವಾಳಿ ಪಾಕಿಸ್ತಾನ ರೂಪಾಯಿ ಮೌಲ್ಯ ಪಾತಾಳಕ್ಕೆ- ಆಹಾರ ಪದಾರ್ಥಗಳ ಬೆಲೆ ಮತ್ತಷ್ಟೂ ದುಬಾರಿ.!

    ಇಸ್ಲಾಮಾಬಾದ್: ದಿವಾಳಿ ಪಾಕಿಸ್ತಾನದ (Pakistan) ರೂಪಾಯಿ ಮೌಲ್ಯ ಈಗ ಡಾಲರ್ (US Dollar) ಎದುರು ಸಾರ್ವಕಾಲಿಕ 255 ರೂ.ಗೆ ಕುಸಿತ ಕಂಡಿದೆ.

    ಗುರುವಾರ ಮಧ್ಯಾಹ್ನ 1 ಗಂಟೆ ವೇಳೆಗೆ ಒಂದೇ ದಿನ ಡಾಲರ್ ಎದುರು 24 ರೂ. ಕುಸಿತ ಕಂಡಿದ್ದು 255 ರೂ.ಗೆ ತಲುಪಿದೆ. ಕಳೆದ ಜನವರಿಯಲ್ಲಿ ಡಾಲರ್ ಎದುರು 175 ರೂ.ನಷ್ಟಿತ್ತು. ಇದೀಗ 255 ರೂ.ಗೆ ತಲುಪಿದೆ. ಈ ನಡುವೆ ಮಾರುಕಟ್ಟೆ ಶಕ್ತಿಗಳಿಗೆ ತಮ್ಮ ಕರೆನ್ಸಿ ದರವನ್ನು ನಿರ್ಧರಿಸಲು ಅವಕಾಶ ನೀಡುವಂತೆ ಪಾಕ್ ಸರ್ಕಾರಕ್ಕೆ ಷರತ್ತು ವಿಧಿಸಿದೆ. ಈ ಷರತ್ತನ್ನು ಪಾಕ್ ಸರ್ಕಾರ ಸಹ ಒಪ್ಪಿಕೊಂಡಿದೆ.

    PublicTV Explainer: ಆಹಾರಕ್ಕಾಗಿ ಹೊಡೆದಾಟ.. ಟ್ರಕ್‌ ಹಿಂದೆ ಓಟ - ಪಾಕ್‌ನಲ್ಲಿ ತುತ್ತು ಕೂಳಿಗೂ ತತ್ವಾರ

    ಏಕೆಂದರೆ ಪಾಕಿಸ್ತಾನ (Pakistan) ತನ್ನ ಸ್ಥಿರತೆ ಕಾಯ್ದುಕೊಳ್ಳಲು 6.5 ಬಿಲಿಯನ್ ಡಾಲರ್ ನೆರವು ಪಡೆಯಲು ಹವಣಿಸುತ್ತಿದೆ. ಅದಕ್ಕಾಗಿ ಜಾಗತಿಕ ಸಂಸ್ಥೆಯ ಅನುಮೋದನೆ ಪಡೆಯಲು ಎದುರು ನೋಡುತ್ತಿದೆ. ಇದನ್ನೂ ಓದಿ: PublicTV Explainer: ಆಹಾರಕ್ಕಾಗಿ ಹೊಡೆದಾಟ.. ಟ್ರಕ್‌ ಹಿಂದೆ ಓಟ – ಪಾಕ್‌ನಲ್ಲಿ ತುತ್ತು ಕೂಳಿಗೂ ತತ್ವಾರ

    PublicTV Explainer: ಆಹಾರಕ್ಕಾಗಿ ಹೊಡೆದಾಟ.. ಟ್ರಕ್‌ ಹಿಂದೆ ಓಟ - ಪಾಕ್‌ನಲ್ಲಿ ತುತ್ತು ಕೂಳಿಗೂ ತತ್ವಾರ

    ಈಗಾಗಲೇ ಪಾಕಿಸ್ತಾನದಲ್ಲಿ ಆಹಾರ ಪದಾರ್ಥಗಳ ಬೆಲೆ ಗಗನಕ್ಕೇರಿದ್ದು, ಒಂದು ಪ್ಯಾಕೆಟ್ ಗೋಧಿ ಹಿಟ್ಟಿನ ಬೆಲೆ 3 ಸಾವಿರಕ್ಕೆ ಮಾರಾಟವಾಗುತ್ತಿದೆ. ವಿದ್ಯುತ್ ನಿರಂತರವಾಗಿ ಕೈಕೊಡುತ್ತಿರುವುದರಿಂದ ಇಡೀ ಪಾಕ್ ಕಗ್ಗತ್ತಲಲ್ಲಿ ಮುಳುಗಿದೆ. ಇದನ್ನೂ ಓದಿ: ಕಾರು ಗ್ಯಾರೇಜ್‍ನಲ್ಲಿ ನೋಡನೋಡ್ತಿದ್ದಂತೆ 3ಕ್ಕೂ ಹೆಚ್ಚು ವಾಹನಗಳು ಧಗಧಗ

    PublicTV Explainer: ಆಹಾರಕ್ಕಾಗಿ ಹೊಡೆದಾಟ.. ಟ್ರಕ್‌ ಹಿಂದೆ ಓಟ - ಪಾಕ್‌ನಲ್ಲಿ ತುತ್ತು ಕೂಳಿಗೂ ತತ್ವಾರ

    ಪಾಕಿಸ್ತಾನದಲ್ಲಿ ಆರ್ಥಿಕ ಬಿಕ್ಕಟ್ಟು (Pakistan Economic Crisis), ಹಣದುಬ್ಬರ ಉಂಟಾಗಿದೆ. ಪರಿಣಾಮವಾಗಿ ಆಹಾರ ಪದಾರ್ಥಗಳ ಬೆಲೆಯೂ ಗಗನಕ್ಕೇರಿದೆ. ಶ್ರೀಲಂಕಾ ಅನುಭವಿಸಿದ ಸಂಕಷ್ಟದ ಪರಿಸ್ಥಿತಿಯೇ ಪಾಕಿಸ್ತಾನಕ್ಕೂ ಎದುರಾಗಿದೆ. ವಿದೇಶಗಳಿಂದ ವಸ್ತು, ಪದಾರ್ಥಗಳನ್ನು ಆಮದು ಮಾಡಿಕೊಳ್ಳಲು ಡಾಲರ್ ಕೊರತೆಯೂ ದೇಶದಲ್ಲಿ ಅನೇಕ ಸಮಸ್ಯೆಗಳನ್ನು ಉಂಟು ಮಾಡಿದೆ. ಆಹಾರ ಬಿಕ್ಕಟ್ಟು ಪಾಕಿಸ್ತಾನವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಸರ್ಕಾರದ ವಿರುದ್ಧ ಜನ ದಂಗೆ ಏಳುವ ಪರಿಸ್ಥಿತಿ ನಿರ್ಮಾಣವಾಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಭಾರತೀಯ ರೂಪಾಯಿ, ಏಮ್ಸ್ ಯೋಜನೆ ಬಗ್ಗೆ ಟೀಕೆ – ಬಿಜೆಪಿ ವಿರುದ್ಧ ಉದಯನಿಧಿ ಸ್ಟಾಲಿನ್ ವಾಗ್ದಾಳಿ

    ಭಾರತೀಯ ರೂಪಾಯಿ, ಏಮ್ಸ್ ಯೋಜನೆ ಬಗ್ಗೆ ಟೀಕೆ – ಬಿಜೆಪಿ ವಿರುದ್ಧ ಉದಯನಿಧಿ ಸ್ಟಾಲಿನ್ ವಾಗ್ದಾಳಿ

    ಚೆನ್ನೈ: ಅಮೆರಿಕ ಡಾಲರ್ ವಿರುದ್ಧ ಭಾರತೀಯ ರೂಪಾಯಿ ಕುಸಿತಗೊಂಡಿರುವ ಮತ್ತು ಮಧುರೈನ AIIMS ಯೋಜನೆ (AIIMS Project) ಬಗ್ಗೆ ಸುಳ್ಳು ಹೇಳಿಕೆಗಳನ್ನು ನೀಡುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ದ್ರಾವಿಡ ಮುನ್ನೇತ್ರ ಕಳಗಂ(Dravida Munnetra Kazhagam) (ಡಿಎಂಕೆ) ಶಾಸಕ ಉದಯನಿಧಿ ಸ್ಟಾಲಿನ್ (Udhayanidhi Stalin) ವಾಗ್ದಾಳಿ ನಡೆಸಿದ್ದಾರೆ.

    ಅಕ್ಟೋಬರ್ 27 ರಂದು ಪಕ್ಷದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನಿರ್ಮಲಾ ಸೀತಾರಾಮನ್‍ಗೆ (Nirmala Sitharaman) ಪ್ರಶ್ನೆ ಕೇಳಿದರೆ ಅವರು ನೀಡುವ ಉತ್ತರ ಕೇಳದರೆ ಯಾರನ್ನಾದರೂ ಬೆಚ್ಚಿ ಬೀಳಿಸುತ್ತದೆ. ಇತ್ತೀಚೆಗೆ ಅಮೆರಿಕಾ ಡಾಲರ್ (US Dollar) ಎದುರು ಭಾರತೀಯ ರೂಪಾಯಿ (Indian rupee) ಹೇಗೆ ಕುಸಿಯುತ್ತಿದೆ ಎಂದು ಅವರನ್ನು ಕೇಳಿದರೆ, ನೀವು ಅದನ್ನು ಏಕೆ ನೆಗೆಟಿವ್ ಆಗಿ ನೋಡುತ್ತಿದ್ದೀರಾ, ಅಮೆರಿಕಾ ಡಾಲರ್ ಬಲಗೊಳ್ಳುತ್ತಿರುವುದನ್ನು ಪಾಸಿಟಿವ್ ಆಗಿ ನೋಡಿ ಎಂದಿದ್ದರು. ನಮಗೆ ಎಂತಹ ಹಣಕಾಸು ಮಂತ್ರಿ ಸಿಕ್ಕಿದ್ದಾರೆ ನೋಡಿ. ಮೋದಿ ಹೇಗೆ ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೋ, ಅದೇ ರೀತಿ ಬಿಜೆಪಿಯ ಬಹುತೇಕ ನಾಯಕರು ಮಾಡುತ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ.

    ಇದೇ ವೇಳೆ ಮಧುರೈನಲ್ಲಿ (Madurai) ಸ್ಥಾಪಿಸಲಾಗುತ್ತಿರುವ ಏಮ್ಸ್ ಯೋಜನೆಯ ಬಗ್ಗೆ ಮಾತನಾಡಿದ ಅವರು, ಯೋಜನೆಯ ಫಲಿತಾಂಶವನ್ನು ಬಿಜೆಪಿ ನಾಯಕರು ತೋರಿಸಬೇಕು. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ (JP Nadda) ಅವರು, ಶೇ 95 ರಷ್ಟು ಕಾಮಗಾರಿ ಪೂರ್ಣಗೊಂಡಿದೆ ಎಂದು ಹೇಳಿದರು. ಆದರೆ ಅವರು ಒಂದೇ ಒಂದು ಕಲ್ಲು ಕೂಡ ಹಾಕಿಲ್ಲ. ಬಿಜೆಪಿಯವರು ಕೇವಲ ಸುಳ್ಳುಗಳನ್ನು ಹಬ್ಬಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಪತ್ನಿಯ ಶವ ತರಲು ಹಣವಿಲ್ಲದೇ ಪರದಾಟ – ಸಹಾಯ ಮಾಡಿ ಮಾನವೀಯತೆ ಮೆರೆದ ಅಪ್ಪು ಅಭಿಮಾನಿಗಳು

    Live Tv
    [brid partner=56869869 player=32851 video=960834 autoplay=true]

  • ಕರ್ನಾಟಕದಿಂದ 1 ಟ್ರಿಲಿಯನ್ ಡಾಲರ್ ಆರ್ಥಿಕ ಕೊಡುಗೆ ಗುರಿ – ಮೇಲ್ವಿಚಾರಣೆಗೆ ವಿಶೇಷ ತಂಡ ರಚನೆ

    ಕರ್ನಾಟಕದಿಂದ 1 ಟ್ರಿಲಿಯನ್ ಡಾಲರ್ ಆರ್ಥಿಕ ಕೊಡುಗೆ ಗುರಿ – ಮೇಲ್ವಿಚಾರಣೆಗೆ ವಿಶೇಷ ತಂಡ ರಚನೆ

    ಬೆಂಗಳೂರು: ದೇಶದ 5 ಟ್ರಿಲಿಯನ್ ಡಾಲರ್ (US Dollar) ಆರ್ಥಿಕತೆಗೆ ಕರ್ನಾಟಕ ರಾಜ್ಯದಿಂದ 1 ಟ್ರಿಲಿಯನ್ ಡಾಲರ್ ಕೊಡುಗೆ ನೀಡುವ ಗುರಿ ಹೊಂದಿದೆ. ಅದಕ್ಕಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದ ತಂಡ ರಚಿಸಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದ್ದಾರೆ.

    ಯೋಜನಾ ಇಲಾಖೆಯ ((Karnataka Planning Commission) ಕರ್ನಾಟಕ ಆರ್ಥಿಕ ಸಮೀಕ್ಷೆ 2021-22ರ ಆಧಾರದ ಮೇಲೆ ಹೆಚ್ಚಿನ ವಿಶ್ಲೇಷಣೆಯೊಂದಿಗೆ ಮೋಹನ್ ದಾಸ್ ಪೈ ಮತ್ತು ನಿಶಾ ಹೊಳ್ಳ ಅವರು ರಚಿಸಿರುವ ʻKarnataka: A $1 Trillion GDP Visionʼ ಎಂಬ ವರದಿಯನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು. ಇದನ್ನೂ ಓದಿ: ಪ್ರೆಗ್ನೆಂಟ್ ಅಂತ ತಿಳಿದ 48 ಗಂಟೆಯಲ್ಲೇ ಮಗುವನ್ನು ಹೆತ್ತ ತಾಯಿ

    ಕರ್ನಾಟಕದಿಂದ 1 ಟ್ರಿಲಿಯನ್ ಡಾಲರ್ ಕೊಡುಗೆ ನೀಡಲು ಸರ್ಕಾರದ ಮುಖ್ಯಕಾರ್ಯದರ್ಶಿ, ಯೋಜನಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ, ಮೋಹನ್ ದಾಸ್ ಪೈ, ಎಫ್‌ಐಸಿಸಿಐ ಹಾಗೂ ಮೆಕೆನ್ಸಿಯ ಪ್ರತಿನಿಧಿಗಳನ್ನು ಒಳಗೊಂಡ ವಿಶೇಷ ತಂಡ ರಚಿಸಲಾಗುವುದು ಎಂದು ತಿಳಿಸಿದರು.

    2025ರ ವೇಳೆಗೆ 1 ಟ್ರಿಲಿಯನ್ ಯುಎಸ್ ಡಾಲರ್ (Trillion US Dollar) ಆರ್ಥಿಕತೆಯನ್ನು ಸಾಧಿಸುವ ಗುರಿಯೊಂದಿಗೆ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸುವುದು, ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಮಾಡುವ ಕೆಲಸವನ್ನು ಈ ತಂಡ ಮಾಡಲಿದೆ. ಈ ಕ್ರಿಯಾ ಯೋಜನೆಯ ಪ್ರಗತಿಯ ಮೇಲ್ವಿಚಾರಣೆಯನ್ನು ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಮಾಡಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಮೋದಿ ಅತ್ಯಾಚಾರಿಗಳ ಪರವಾಗಿದ್ದಾರೆ – ರಾಹುಲ್ ಗಾಂಧಿ ಕಿಡಿ

    ಫಲಿತಾಂಶ ಆಧಾರಿತ ಉದ್ದೇಶಿತ ಬಜೆಟ್‌ಗೆ ಅನುಕೂಲವಾಗುವಂತೆ ಡಿಸೆಂಬರ್ 2022ರ ಒಳಗೆ ಕ್ರಿಯಾ ಯೋಜನೆ ಸಿದ್ಧವಾಗಲಿದೆ. ಕರ್ನಾಟಕದಿಂದ ಒಂದು ಟ್ರಿಲಿಯನ್ ಯುಎಸ್ ಡಾಲರ್ ಕೊಡುಗೆಯೊಂದಿಗೆ 5 ಟ್ರಿಲಿಯನ್ ಭಾರತದ ಗುರಿಯೊಂದಿಗೆ ನಾವು ಹೊಂದಿಕೊಳ್ಳಬೇಕು. ಬೆಳವಣಿಗೆಯ ದರಗಳನ್ನು ಹೆಚ್ಚಿಸಲು ಯೋಜನೆ ರೂಪಿಸಬೇಕು. ಕರಾವಳಿ ಕಾರಿಡಾರ್ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವುದರ ಮೂಲಕ ರಫ್ತನ್ನು ಹೆಚ್ಚಿಸಬಹುದಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

    ಮೂಲಸೌಕರ್ಯ ಅಭಿವೃದ್ಧಿಯನ್ನು ಉತ್ತೇಜಿಸಲು ಮೂಲಸೌಕರ್ಯ ವೆಚ್ಚವನ್ನು ಕಡಿಮೆ ಮಾಡುವ ಅಗತ್ಯವಿದೆ. ಜೊತೆಗೆ ಅಭಿವೃದ್ಧಿ ಉತ್ತೇಜಿಸಲು ಜನರ ಆರ್ಥಿಕ ಸಾಮರ್ಥ್ಯಗಳನ್ನು ಹೆಚ್ಚಿಸಬೇಕಾಗಿದೆ. ಕೈಗಾರಿಕಾ, ಕೃಷಿ (Agriculture) ಮತ್ತು ಸೇವಾ ಕ್ಷೇತ್ರಗಳಲ್ಲಿ ಉದ್ಯೋಗ (Employment) ಮತ್ತು ಬೆಳವಣಿಗೆ ಉತ್ತೇಜಿಸಲು ಕೈಗಾರಿಕಾ ವಲಯದ ಸಾಮರ್ಥ್ಯ ಹೆಚ್ಚಿಸುವುದರ ಮೂಲಕ ಕೃಷಿ ಮತ್ತು ಸೇವಾ ವಲಯದ ಬೆಳವಣಿಗೆ ಕಾಣಬಹುದಾಗಿದೆ. ಹಾಗಾಗಿ ಕೈಗಾರಿಕೆ ಮತ್ತು ಖಾಸಗಿ ವಲಯಗಳೆರಡೂ ಬೆಳವಣಿಗೆಯ ವೇಗವನ್ನು ಹೆಚ್ಚಿಸಲು ಪರಿಹಾರಗಳನ್ನು ಕಂಡುಹಿಡಿಯಬೇಕು ಎಂದು ಸಲಹೆ ನೀಡಿದ್ದಾರೆ.

    ಕಾರ್ಯಕ್ರಮದಲ್ಲಿ ಕೃತಿಯ ಲೇಖಕರಾದ ಟಿ.ವಿ. ಮೋಹನ್ ದಾಸ್ ಪೈ, ನಿಶಾ ಹೊಳ್ಳ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಯೋಜನಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಇನ್ನಿತರರು ಉಪಸ್ಥಿತರಿದ್ದರು.

    Live Tv
    [brid partner=56869869 player=32851 video=960834 autoplay=true]

  • ಸಂಕಷ್ಟದಲ್ಲಿರುವ ಲಂಕಾಕ್ಕೆ ಭಾರತದಿಂದ ಪೆಟ್ರೋಲ್

    ಸಂಕಷ್ಟದಲ್ಲಿರುವ ಲಂಕಾಕ್ಕೆ ಭಾರತದಿಂದ ಪೆಟ್ರೋಲ್

    ಕೊಲಂಬೊ: ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾಕ್ಕೆ ಭಾರತದಿಂದ ಪೆಟ್ರೋಲ್ ಸರಬರಾಜು ಮಾಡಲಾಗುತ್ತಿದ್ದು, ಸದ್ಯ ಲಂಕಾ ಬಿಕ್ಕಟ್ಟಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ

    ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಪೆಟ್ರೋಲ್ ಖಾಲಿಯಾಗಿದೆ. ಕೇವಲ ಒಂದು ದಿನಕ್ಕೆ ಸಾಕಾಗುವಷ್ಟು ಪೆಟ್ರೋಲ್ ಸ್ಟಾಕ್ ಇದೆ ಎಂದು ಲಂಕಾದ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಹೇಳಿದ್ದರು. ಇದನ್ನೂ ಓದಿ: ದಂಪತಿಯನ್ನು ಮಾರಕಾಸ್ತ್ರಗಳಿಂದ ಬೆದರಿಸಿ ಮಾಂಗಲ್ಯ, ಹಣ ಸುಲಿಗೆ ಮಾಡಿ ಪರಾರಿ

    ಇದೀಗ ಭಾರತದಿಂದ 2 ಹಂತಗಳಲ್ಲಿ ಪೆಟ್ರೋಲ್ ಸರಬರಾಜು ಮಾಡಲಾಗುತ್ತಿದೆ. ಈ ಕುರಿತು ಟ್ವೀಟ್ ಮಾಡಿರುವ ವಿಕ್ರಮ ಸಿಂಘೆ, ದೇಶದಲ್ಲಿ ಕೇವಲ ಒಂದು ದಿನದ ಪೆಟ್ರೋಲ್ ಸ್ಟಾಕ್ ಮಾತ್ರ ಉಳಿದಿತ್ತು. ಆದರೆ, ಭಾರತೀಯ ಕ್ರೆಡಿಟ್ ಲೈನ್ ಅಡಿಯಲ್ಲಿ ಮೇ 18 ಮತ್ತು 29 ರಂದು ಬರಲಿದೆ. ಜೂನ್ 1 ರಂದು 2ನೇ ಹಂತವಾಗಿ 2 ಶಿಪ್‌ಮೆಂಟ್ ಪೆಟ್ರೋಲ್ ರಫ್ತಾಗಲಿದೆ. ಇದರಿಂದಾಗಿ ತಾತ್ಕಾಲಿಕವಾಗಿ ಸಮಸ್ಯೆ ಬಗೆಹರಿಯಲಿದೆ ಎಂದು ಹೇಳಿದ್ದಾರೆ.

    ದೇಶದ ಪರಿಸ್ಥಿತಿ ಸರಿದೂಗಿಸಲು ಸುಮಾರು 75 ಮಿಲಿಯನ್ ಯುಎಸ್ ಡಾಲರ್ ಅವಶ್ಯವಿದೆ. ಹಾಗಾಗಿ ನಾವು ಮುಕ್ತ ಮಾರುಕಟ್ಟೆಯ ಡಾಲರ್‌ಗಳನ್ನು ಪಡೆಯಲು ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ:  ಪಠ್ಯಕ್ರಮದಲ್ಲಿ RSS ಸಂಸ್ಥಾಪಕ ಹೆಡ್ಗೆವಾರ್ ಭಾಷಣ ಸೇರ್ಪಡೆ – ಶೀಘ್ರವೇ ಹಿಂತೆಗೆಯಲು ಕ್ಯಾಂಪಸ್ ಫ್ರಂಟ್ ಒತ್ತಾಯ

    ಹಿನ್ನೆಲೆ ಏನು? – ತೀವ್ರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಶ್ರೀಲಂಕಾ ದೇಶದಲ್ಲಿ ಪೆಟ್ರೋಲ್ ಖಾಲಿಯಾಗಿದೆ. ಅಗತ್ಯ ವಸ್ತುಗಳ ಆಮದಿಗೆ ನಮ್ಮಲ್ಲಿ ಡಾಲರ್ ಕೊರತೆಯಿದೆ ಎಂದು ರಾನಿಲ್ ವಿಕ್ರಮಸಿಂಘೆ ನಿನ್ನೆ ತಿಳಿಸಿದ್ದರು.

    ನಮ್ಮಲ್ಲಿ ಪೆಟ್ರೋಲ್ ಖಾಲಿಯಾಗಿದೆ. ಸದ್ಯ ಕೇವಲ ಒಂದು ದಿನಕ್ಕೆ ಸಾಕಾಗುವಷ್ಟು ಪೆಟ್ರೋಲ್ ಸ್ಟಾಕ್ ಇದೆ. ಮುಂದಿನ ತಿಂಗಳಲ್ಲಿ ದೇಶದ ಆರ್ಥಿಕ ಬಿಕ್ಕಟ್ಟು ಇನ್ನಷ್ಟು ತೀವ್ರಗತಿಗೆ ಮುಂದುವರಿಯುವ ಸಾಧ್ಯತೆ ಎಂದೂ ಎಚ್ಚರಿಕೆ ನೀಡಿದ್ದರು.