Tag: USA

  • ಅಮೆರಿಕ ಸೇನೆ ವಿರುದ್ಧ ಮಿಯಾ ಕಲಿಫಾ ಅಪಹಾಸ್ಯ; ಮಾಜಿ ನೀಲಿ ತಾರೆಗೆ ನೆಟ್ಟಿಗರಿಂದ ಫುಲ್‌ ಕ್ಲಾಸ್‌

    ಅಮೆರಿಕ ಸೇನೆ ವಿರುದ್ಧ ಮಿಯಾ ಕಲಿಫಾ ಅಪಹಾಸ್ಯ; ಮಾಜಿ ನೀಲಿ ತಾರೆಗೆ ನೆಟ್ಟಿಗರಿಂದ ಫುಲ್‌ ಕ್ಲಾಸ್‌

    ಬೈರೂತ್‌: ಇತ್ತೀಚೆಗಷ್ಟೇ ಪ್ಯಾಲೆಸ್ತೀನ್‌ (Palestin) ಪರ ಬ್ಯಾಟ್‌ ಬೀಸಿದ್ದ ಮಾಜಿ ನೀಲಿ ತಾರೆ ಮಿಯಾ ಕಲಿಫಾ (Mia Khalifa) ಅವರು ಇದೀಗ ಅಮೆರಿಕ ಸೇನೆಯನ್ನ ಗುರಿಯಾಗಿಸಿ ಟೀಕಿಸಿದ್ದಾರೆ.

    ಮಾಜಿ ನೀಲಿ ತಾರೆ ಈ ಹಿಂದೆಯೂ ಸಾಕಷ್ಟು ಬಾರಿ ಪ್ಯಾಲೆಸ್ತೀನ್‌ ಪರವಾಗಿ ಜಾಲತಾಣದಲ್ಲಿ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ. ಇದೀಗ ಅಮೆರಿಕದಲ್ಲಿ (USA) ನೆಲೆಸಿದ್ದರೂ ಸೇನೆಯ ವಿರುದ್ಧ ವ್ಯಂಗ್ಯವಾಡಿದ್ದಾರೆ. ತಮ್ಮ ಎಕ್ಸ್‌ ಖಾತೆಯಲ್ಲಿ ವೀಡಿಯೋವೊಂದನ್ನು ಹಂಚಿಕೊಂಡಿರುವ ಮಿಯಾ ಕಲೀಫಾ ಅಮೆರಿಕ ಸೇನೆಯನ್ನು ಅಣುಕಿಸಿ, ಸೋಶಿಯಲ್‌ ಮೀಡಿಯಾದಲ್ಲಿ ಟೀಕೆಗೆ ಗುರಿಯಾಗಿದ್ದಾರೆ. ಇದನ್ನೂ ಓದಿ: ಭಾರತದ ಜೊತೆ ಚೇಷ್ಟೆ – ಶೀಘ್ರವೇ ಜಸ್ಟಿನ್‌ ಟ್ರುಡೋ ರಾಜೀನಾಮೆ?

    ತನ್ನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾದ ವೀಡಿಯೋನಲ್ಲಿ, ಇಸ್ರೇಲ್‌, ಲೆಬನಾನ್‌ (Lebanon), ಗಾಜಾದಲ್ಲಿ ನಡೆಯುತ್ತಿರುವ ಸಂಘರ್ಷವನ್ನು ಉಲ್ಲೇಖಿಸಿ ಅಮೆರಿಕ ಸೇನೆ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಮನೆಯಲ್ಲಿ ಕುಳಿತು ತಮಗೆ ಸೇರದ ಮಣ್ಣಿನಲ್ಲಿ, ತಮ್ಮ ಬಗ್ಗೆ ಕಾಳಜಿ ವಹಿಸದ ದೇಶಕ್ಕಾಗಿ ಯುದ್ಧ ಮಾಡುವ ಪ್ರತಿಯೊಬ್ಬರಿಗೂ ಶುಭೋದಯ ಎಂದಿದ್ದಾರೆ.

    ನೀವು ಅಲ್ಲಿಗೆ ಹೋಗಿ ಯುದ್ಧ ಮಾಡಿದ್ದೀರಿ, ಮತ್ತೆ ನಿಮ್ಮ ದೇಶಕ್ಕೆ ಹಿಂತಿರುಗಿ, ಆಗ ಯುನೈಟೆಡ್‌ ಸ್ಟೇಟ್ಸ್‌ ನಿಮ್ಮ ಬಗ್ಗೆ ಎಷ್ಟು ಕಾಳಜಿ ವಹಿಸುತ್ತದೆ ಎಂದು ನೋಡಿ ಎಂದು ಮಕ್ಕಳ ದನಿಯಲ್ಲಿ ಅಪಹಾಸ್ಯ ಮಾಡಿದ್ದಾರೆ. ಅಲ್ಲದೇ ಓಹ್‌.. ನಾನು ತುಂಬಾ ದುಃಖಿತಳಾಗಿದ್ದೇನೆ ಎಂದು ಅಪಹಾಸ್ಯ ಮಾಡಿದ್ದಾರೆ. ಇದನ್ನೂ ಓದಿ: 5 ವರ್ಷಗಳ ಬಳಿಕ ಮುಖಾಮುಖಿ; ರಷ್ಯಾದಲ್ಲಿ ಮೋದಿ-ಜಿನ್‌ಪಿಂಗ್ ನಡ್ವೆ ದ್ವಿಪಕ್ಷೀಯ ಮಾತುಕತೆ

    ಕಳೆದ ವರ್ಷ ಇಸ್ರೇಲ್‌-ಹಮಾಸ್‌ ಯುದ್ಧದ ಸಂದರ್ಭದಲ್ಲಿ ಮಿಯಾ ಕಲಿಫಾ ಪ್ಯಾಲೆಸ್ತೀನ್ ಪರವಾಗಿ ಮಾತನಾಡಿದ್ದು, ಭಾರೀ ವಿರೋಧಕ್ಕೆ ಕಾರಣವಾಗಿತ್ತು. ಜೊತೆಗೆ ಮಿಯಾ ಅವರನ್ನು ಕೆಲಸದಿಂದಲೂ ವಜಾ ಮಾಡಲಾಗಿತ್ತು. ಮಿಯಾ ಅಮೆರಿಕಾದಲ್ಲಿ ವಾಸವಿದ್ದು, ಅಲ್ಲಿ ಖಾಸಗಿ ಕಂಪನಿಯ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದರು.

    ಇದಕ್ಕೂ ಮುನ್ನ ಮಿಯಾ ಕಲಿಫಾ ನೀಲಿಚಿತ್ರವೊಂದರಲ್ಲಿ ಹಿಜಬ್‌ ಧರಿಸಿದ್ದಕ್ಕಾಗಿ ಐಎಸ್‌ಐಎಸ್‌ನಿಂದ ಬೆದರಿಕೆಗಳು ಬಂದಿತ್ತು. ಆ ಬಳಿಕ ಇಸ್ರೇಲ್‌ ವರ್ಣಭೇದ ನೀತಿ ಹೊಂದಿರುವ ದೇಶ ಎಂದು ಹೇಳಿ ಟೀಕೆಗೆ ಗುರಿಯಾಗಿದ್ದರು. ಇದನ್ನೂ ಓದಿ: ಏರೋಸ್ಪೇಸ್‌ ಕಚೇರಿ ದಾಳಿಗೆ ಪ್ರತೀಕಾರ – ಇರಾಕ್‌, ಸಿರಿಯಾದಲ್ಲಿರುವ ಉಗ್ರರ ನೆಲೆ ಮೇಲೆ ಟರ್ಕಿ ಏರ್‌ಸ್ಟ್ರೈಕ್‌

  • ಸಾರ್ವಜನಿಕ-ಖಾಸಗಿ ಭದ್ರತಾ ಸಹಕಾರಕ್ಕೆ ಉತ್ತೇಜನ – OSAC ಇಂಡಿಯಾದ ವಾರ್ಷಿಕ ಸಾಮಾನ್ಯ ಸಭೆ ಉದ್ಘಾಟನೆ

    ಸಾರ್ವಜನಿಕ-ಖಾಸಗಿ ಭದ್ರತಾ ಸಹಕಾರಕ್ಕೆ ಉತ್ತೇಜನ – OSAC ಇಂಡಿಯಾದ ವಾರ್ಷಿಕ ಸಾಮಾನ್ಯ ಸಭೆ ಉದ್ಘಾಟನೆ

    ಚೆನ್ನೈ: ಅಮೆರಿಕ ಸರ್ಕಾರ (USA Govermnt) ಮತ್ತು ಖಾಸಗಿ ವಲಯದ ಭದ್ರತಾ ತಜ್ಞರ ನಡುವಿನ ಸಹಕಾರವನ್ನು ಹೆಚ್ಚಿಸುವ ಸಲುವಾಗಿ ಆಯೋಜಿಸಿದ್ದ ಒಸಾಕ್‌ (OSAC) ಇಂಡಿಯಾ ವಾರ್ಷಿಕ ಸಾಮಾನ್ಯ ಸಭೆಯನ್ನು ಯು.ಎಸ್‌. ಕಾನ್ಸುಲ್‌ ಜನರಲ್‌ ಕ್ರಿಸ್‌ ಹಾಡ್ಜಸ್‌ ಮತ್ತು ತಮಿಳುನಾಡು ಮಾಹಿತಿ ತಂತ್ರಜ್ಞಾನ ಮತ್ತು ಡಿಜಿಟಲ್ ಸೇವೆಗಳ ಸಚಿವ ಡಾ. ಪಳನಿವೇಲ್ ತ್ಯಾಗರಾಜನ್‌ ಅವರು ಚೆನ್ನೈಯಲ್ಲಿ ಉದ್ಘಾಟಿಸಿದರು.

    ಒಸಾಕ್‌ (ಒಎಸ್‌ಎಸಿ), ಅಮೇರಿಕದ ಡಿಪಾರ್ಟ್‌ಮೆಂಟ್‌ ಆಫ್‌ ಸ್ಟೇಟ್‌ನ ಡಿಪ್ಲೊಮ್ಯಾಟಿಕ್‌ ಸೆಕ್ಯುರಿಟಿ ಸರ್ವೀಸ್‌ (ಡಿಎಸ್‌ಎಸ್‌) ಮತ್ತು ವಿದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಮೆರಿಕನ್‌ ಸಂಸ್ಥೆಗಳ ಭದ್ರತಾ ತಜ್ಞರ ಸಾರ್ವಜನಿಕ -ಖಾಸಗಿ ಸಹಭಾಗಿತ್ವವಾಗಿದೆ. ವಿದೇಶಗಳಲ್ಲಿ ಅಮೆರಿಕನ್‌ ಹಿತಾಸಕ್ತಿ ರಕ್ಷಿಸಲು ಸಕಾಲದಲ್ಲಿ ಭದ್ರತಾ ಮಾಹಿತಿಯ ವಿನಿಮಯ ಮತ್ತು ನಿಕಟ ಸಂಬಂಧವನ್ನು ಒಸಾಕ್‌ ಸದಸ್ಯರು ಹೊಂದಿರುತ್ತಾರೆ.

    ಚೆನ್ನೈನಲ್ಲಿನ ಅಮೇರಿಕ ದೂತಾವಾಸ ಹಾಗೂ ಭಾರತದಾದ್ಯಂತ ಇರುವ ಡಿಪ್ಲೊಮ್ಯಾಟಿಕ್‌ ಮತ್ತು ಕಾರ್ಪೊರೇಟ್‌ ವಲಯದ ಭದ್ರತಾ ತಜ್ಞರು, ಅಮೇರಿಕ ಮತ್ತು ಭಾರತೀಯ ಖಾಸಗಿ ವಲಯದ ಪಾಲುದಾರರೊಂದಿಗೆ ತರಬೇತಿ, ಸಮಾಲೋಚನೆ, ಕಾರ್ಯಕ್ರಮಗಳು, ಭದ್ರತಾ ಎಚ್ಚರಿಕೆಗಳು, ಮತ್ತು ಭದ್ರತಾ ವಿಷಯದ ಬಗೆಗಿನ ವಿಶ್ಲೇಷಣೆ ಮಾಡಲು ಈ ಸಮಾವೇಶವನ್ನು ಬಳಸಿಕೊಂಡರು. ಇದನ್ನೂ ಓದಿ: ಭಾರತದ ಜೊತೆ ಚೇಷ್ಟೆ – ಶೀಘ್ರವೇ ಜಸ್ಟಿನ್‌ ಟ್ರುಡೋ ರಾಜೀನಾಮೆ?

    ಚೆನ್ನೈನಲ್ಲಿನ ಅಮೇರಿಕ ದೂತಾವಾಸದ ಡಿಪ್ಲೊಮ್ಯಾಟಿಕ್‌ ಸೆಕ್ಯುರಿಟಿ ರೀಜನ್‌ ಸೆಕ್ಯುರಿಟಿ ಆಫೀಸರ್‌ ಸ್ಕಾಟ್‌ ಸ್ಕೌನರ್‌, “ಭದ್ರತಾ ತಜ್ಞರು ಮತ್ತು ಪಾಲುದಾರರಾಗಿ ನಾವು ಭಾರತೀಯ ಖಾಸಗಿ ವಲಯದ ಸಹಭಾಗಿಗಳೊಂದಿಗೆ ಜತೆಗೂಡಿ ಲಿಂಗ ಸಮಾನತೆಯ ಮಾದರಿ, ಅಪಾಯಗಳನ್ನು ಗುರುತಿಸುವುದು ಹಾಗೂ ಅವುಗಳ ಮೇಲೆ ಸತತ ನಿಗಾ ಇಡುವುದೂ ಸೇರಿದಂತೆ ಸಂಭವನೀಯ ಭದ್ರತಾ ಸಮಸ್ಯೆಗಳನ್ನು ನಿರೀಕ್ಷಿಸುವ ಸಾಮರ್ಥ್ಯವನ್ನು ಉತ್ತಮ ಪಡಿಸಿ ವಿಶ್ವಾಸಾರ್ಹತೆ ಹೆಚ್ಚಿಸುವ ಉದ್ದೇಶ ನಮ್ಮದು ಎಂದರು.

    ತಮಿಳುನಾಡು ಐಟಿ ಸಚಿವ ಡಾ. ಪಳನಿವೇಲ್‌ ತ್ಯಾಗರಾಜನ್‌ ಈ ಐತಿಹಾಸಿಕ ಸಭೆ ಚೆನ್ನೈನಲ್ಲಿ ನಡೆಯುತ್ತಿರುವುದು ಸಂತಸ ತಂದಿದೆ. ವೈವಿಧ್ಯ, ನೇರ‍್ಮೆ, ಒಳಗೊಳ್ಳುವಿಕೆ ಮತ್ತು ಲಭ್ಯತೆ (DEIA) ತಮಿಳುನಾಡಿನ ಡಿಎನ್ ಎ ದಲ್ಲಿದೆ. OSAC ಕೂಡ ಇದನ್ನೇ ಅನುಸರಿಸುತ್ತಿರುವುದನ್ನು ನೋಡಲು ಸಂತಸವಾಗುತಿದೆ. ಇಂದಿನ ಕಾರ್ಯಕ್ರಮದ ಗಾತ್ರವು, ವಾಣಿಜ್ಯ ಹಾಗೂ ವ್ಯೂಹಾತ್ಮಕವಾಗಿರುವ ಅಮೇರಿಕ-ಭಾರತದ ಸಂಬಂಧದ ಪ್ರತಿಬಿಂಬವಾಗಿದೆ. ಉದ್ದೇಶಪೂರ್ವಕ ಬೆದರಿಕೆಗಳ ಈ ಯುಗದಲ್ಲಿ, ನಮ್ಮನ್ನು ನಾವು ಸುರಕ್ಷಿತವಾಗಿರಿಸಿಕೊಳ್ಳಲು ಪ್ರತಿದಿನ ಕಲಿಯುತ್ತಿರಬೇಕು. OSAC ಖಾಸಗಿ-ಸಾರ್ವಜನಿಕ ಪಾಲುದಾರಿಕೆಯ ಉತ್ತಮ ಮಾದರಿಯಾಗಿದೆ ಎಂದು ಹೇಳಿದರು.

    ದೆಹಲಿಯಲ್ಲಿರುವ ಅಮೇರಿಕ ರಾಯಭಾರ ಕಚೇರಿ ಡಿಪ್ಲೊಮ್ಯಾಟಿಕ್‌ ಸೆಕ್ಯುರಿಟಿ ಸೀನಿಯರ್‌ ರೀಜನಲ್‌ ಸೆಕ್ಯುರಿಟಿ ಆಫೀಸರ್‌ ಕ್ರಿಸ್ಟೊಫರ್‌ ಗಿಲ್ಸ್‌ ಅವರು, “ಅತ್ಯಂತ ಸುರಕ್ಷಿತ ಕಾರ್ಯಾಚರಣೆ ಪರಿಸರವನ್ನು ಖಾತ್ರಿಪಡಿಸುವುದು ಈ ಸಮಾವೇಶದ ಪ್ರಮುಖ ಉದ್ದೇಶವಾಗಿದ್ದು, ಸಂಪರ್ಕದ ಮಹತ್ವವನ್ನು ಸಾರುತ್ತದೆ. ಅಮೆರಿಕ ಸರ್ಕಾರ ಮತ್ತು ಖಾಸಗಿ ವಲಯಗಳು ಈ ಸಮಾವೇಶವನ್ನು ಆಯೋಜಿಸಿವೆ,” ಎಂದರು.

    ಒಸಾಕ್‌ ಬೆಂಗಳೂರು ಚಾಪ್ಟರ್‌: ಚೆನ್ನೈನಲ್ಲಿನ ಅಮೆರಿಕ ದೂತಾವಾಸದ ರೀಜನಲ್‌ ಸೆಕ್ಯುರಿಟಿ ಆಫೀಸರ್‌ ಸ್ಕೌನರ್‌ ಮತ್ತು ಸೆಕ್ಯುರಿಟಿ ಅಂಡ್‌ ರಿಸೆಲಿಯನ್ಸಿ ಆರ್ಗನೈಸೇಶನ್‌ನಲ್ಲಿ ರೀಜನಲ್‌ ಸೆಕ್ಯುರಿಟಿ ಲೀಡ್‌ ಆಗಿರುವ ಡೆಲ್‌ ಟೆಕ್ನಾಲಜೀಸ್‌ನ ಅನುಭವ್‌ ಮಿಶ್ರಾ ಅವರು ಒಸಾಕ್‌ ಬೆಂಗಳೂರು ಚಾಪ್ಟರ್‌ನ ಸಹ ಅಧ್ಯಕ್ಷರಾಗಿದ್ದಾರೆ. ಬೆಂಗಳೂರು ಚಾಪ್ಟರ್‌ ಭಾರತದಲ್ಲೇ ಅತ್ಯಂತ ಹೆಚ್ಚು ಸದಸ್ಯರನ್ನು ಹೊಂದಿರುವ ಚಾಪ್ಟರ್‌ ಇದಾಗಿದೆ.

     

  • ಉಗ್ರ ಪನ್ನು ಹತ್ಯೆಗೆ ಸಂಚು – ಭಾರತದ ಮಾಜಿ ʻರಾʼ ಅಧಿಕಾರಿ ಮೋಸ್ಟ್‌ ವಾಂಟೆಡ್‌ ಎಂದು ಘೋಷಿಸಿದ FBI

    ಉಗ್ರ ಪನ್ನು ಹತ್ಯೆಗೆ ಸಂಚು – ಭಾರತದ ಮಾಜಿ ʻರಾʼ ಅಧಿಕಾರಿ ಮೋಸ್ಟ್‌ ವಾಂಟೆಡ್‌ ಎಂದು ಘೋಷಿಸಿದ FBI

    ವಾಷಿಂಗ್ಟನ್‌: ಪ್ರತ್ಯೇಕತಾವಾದಿ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನು (Gurpatwant Singh Pannun) ಹತ್ಯೆಗೆ ‌ಸಂಚು ರೂಪಿಸಿದ ಪ್ರಕರಣ ಸಂಬಂಧ ಭಾರತದ ನಿವೃತ್ತ ಗುಪ್ತಚರ ಅಧಿಕಾರಿಯೊಬ್ಬರನ್ನ (RAW Officer) ಮೋಸ್ಟ್‌ ವಾಂಟೆಡ್‌ ಎಂದು ಅಮೆರಿಕದ ಎಫ್‌ಬಿಐ (FBI) ಆಪಾದಿಸಿದೆ.

    ಈ ಪ್ರಕರಣದಲ್ಲಿ ಭಾರತದ ನಿವೃತ್ತ ʻರಾʼ ಅಧಿಕಾರಿ ವಿಕಾಸ್‌ ಯಾದವ್‌ನನ್ನ (39) ಮೋಸ್ಟ್‌ ವಾಂಟೆಡ್‌ (Most Wanted) ಎಂದು ಹೆಸರಿಸಿದೆ. ಅಲ್ಲದೇ ವಿಕಾಸ್‌ ಯಾದವ್‌ನ ಮೂರು ಚಿತ್ರಗಳನ್ನ ಮೋಸ್ಟ್‌ ವಾಂಟೆಡ್‌ ಎನ್ನುವ ಪೋಸ್ಟರ್‌ ಸಹ ಬಿಡುಗಡೆ ಮಾಡಿದ್ದು, ಇದೇ ತಿಂಗಳ ಅಕ್ಟೋಬರ್‌ 10 ರಂದು ಬಂಧನದ ವಾರಂಟ್‌ ಜಾರಿಗೊಳಿಸಿದೆ.

    ಅಮೆರಿಕ (USA) ಹಾಗೂ ಕೆನಡಾದ ದ್ವಿಪೌರತ್ವ ಹೊಂದಿರುವ ಗುರುಪತ್ವಂತ್ ಸಿಂಗ್ ಪನ್ನು ಹತ್ಯೆ ಮಾಡಲು ಈ ನಿವೃತ್ತ ಅಧಿಕಾರಿ ಹಣ ನೀಡಿ ಹಂತಕರನ್ನು ನಿಯೋಜಿಸಿದ್ದರು ಎಂದು ಎಫ್‌ಬಿಐ ಆಪಾದಿಸಿದೆ. ಜೊತೆಗೆ ವಿಕಾಸ್‌ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನೂ ದಾಖಲು ಮಾಡಿದೆ. ಈ ಕುರಿತು ಯುಎಸ್ ಡಿಪಾರ್ಟ್ಮೆಂಟ್ ಆಫ್ ಜಸ್ಟೀಸ್ (DOJ) ಸಲ್ಲಿಸಿದ ದೋಷಾರೋಪ ಪಟ್ಟಿಯಲ್ಲಿ ಕ್ರಿಮಿನಲ್ ಆರೋಪಗಳನ್ನು ಪ್ರಕಟಿಸಿದೆ.

    ಈ ಬಗ್ಗೆ ಮಾಹಿತಿ ನೀಡಿರುವ ಎಫ್‌ಬಿಐ ನಿರ್ದೇಶಕ ಕ್ರಿಸ್ಟೋಫರ್ ವ್ರೇ (Christopher Wray) ಅವರು, ಅಮೆರಿಕ ನೆಲದಲ್ಲಿ ಈ ರೀತಿಯ ಕೃತ್ಯ ಎಸಗುವ ಪ್ರಯತ್ನವನ್ನ ಎಫ್‌ಬಿಐ ಸಹಿಸೋದಿಲ್ಲ ಎಂದಿದ್ದಾರೆ. ನಮ್ಮ ಪ್ರಜೆಗಳಿಗೆ ಸಂವಿಧಾನ ನೀಡಿರುವ ಹಕ್ಕುಗಳನ್ನು ರಕ್ಷಿಸಲು ನಾವು ಸರ್ವ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದ್ದಾರೆ.

    ಅಲ್ಲದೇ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಸಹವರ್ತಿ ನಿಖಿಲ್ ಗುಪ್ತಾ ಎಂಬಾತನನ್ನ ಜೆಕ್ ರಿಪಬ್ಲಿಕ್‌ನಲ್ಲಿ ಬಂಧಿಸಲಾಗಿದೆ ಎಂದು ಸಹ ಕ್ರಿಸ್ಟೋಫರ್‌ ತಿಳಿಸಿದ್ದಾರೆ. ಇದನ್ನೂ ಓದಿ: ಇಸ್ರೇಲ್‌, ಜಗತ್ತಿಗೆ ಇದು ಒಳ್ಳೆಯ ದಿನ: ಹಮಾಸ್‌ ಮುಖ್ಯಸ್ಥನ ಹತ್ಯೆಗೆ ಅಮೆರಿಕ ಸಂತಸ

    ಅಮೆರಿಕ ಎಫ್‌ಬಿಐ ಆಪಾದನೆಗೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್‌ ಜೈಸ್ವಾಲ್‌ ಪ್ರತಿಕ್ರಿಯೆ ನೀಡಿದ್ದು, ವಿಕಾಸ್‌ ಯಾದವ್‌ ಎಂಬವರು ಭಾರತ ಸರ್ಕಾರದ ಉದ್ಯೋಗಿಯಲ್ಲ ಎಂದು ಖಚಿತಪಡಿಸಿದ್ದಾರೆ. ಇದನ್ನೂ ಓದಿ: ಹಮಾಸ್ ಮುಖ್ಯಸ್ಥನ ಕೊನೆ ಕ್ಷಣಗಳ ಡ್ರೋನ್ ದೃಶ್ಯ ಬಿಡುಗಡೆ ಮಾಡಿದ ಇಸ್ರೇಲ್

    ಏನಿದು ಪ್ರಕರಣ?
    ಅಮೆರಿಕದ ನ್ಯೂಯಾರ್ಕ್‌ ನಗರದಲ್ಲಿ ನೆಲೆಸಿರುವ ಗುರುಪತ್ವಂತ್ ಸಿಂಗ್ ಪನ್ನು ಹತ್ಯೆಗೆ ಕಳೆದ ವರ್ಷ ಯತ್ನ ನಡೆದಿತ್ತು. ಈ ಪ್ರಕರಣದಲ್ಲಿ ಭಾರತ ಸರ್ಕಾರದ ನಿವೃತ್ತ ರಾ ಉದ್ಯೋಗಿಯನ್ನು ವಿಕಾಸ್‌ನನ್ನ ಸಿಸಿ-1 (ಸಹ ಸಂಚುಕೋರ) ಆರೋಪಿ ಎಂದು ಹೆಸರಿಸಲಾಗಿದೆ.

    18 ಪುಟಗಳ ದೋಷಾರೋಪ ಪಟ್ಟಿಯಲ್ಲಿ ಹಲವು ಸಾಕ್ಷ್ಯಗಳನ್ನು ಉಲ್ಲೇಖಿಸಲಾಗಿದೆ. ನ್ಯೂಯಾರ್ಕ್‌ನಲ್ಲಿ ಕಾರಿನಲ್ಲಿ ಇಬ್ಬರು ವ್ಯಕ್ತಿಗಳು ಡಾಲರ್‌ಗಳನ್ನು ವಿನಿಮಯ ಮಾಡಿಕೊಳ್ಳುತ್ತಿರುವ ಚಿತ್ರವನ್ನೂ ಸಹ ನಮೂದಿಸಲಾಗಿದೆ. ಇದು ಆರೋಪಿ ನಿಖಿಲ್ ಗುಪ್ತಾ ಮತ್ತು ವಿಕಾಸ್ ಯಾದವ್ ಅವರ ಪರವಾಗಿ ಕೊಲೆಗಾರನಿಗೆ ಹತ್ಯೆ ಮಾಡಲು ವ್ಯಕ್ತಿಯೊಬ್ಬರು ಪಾವತಿಸುತ್ತಿದ್ದಾರೆ ಎಂದು ಫೆಡರಲ್ ಪ್ರಾಸಿಕ್ಯೂಟರ್‌ಗಳು ಹೇಳಿದ್ದಾರೆ. ಇದನ್ನೂ ಓದಿ: ಹಮಾಸ್‌ ಈ ಕೆಲಸ ಮಾಡಿದ್ರೆ ನಾಳೆಯೇ ಯುದ್ಧ ಕೊನೆಗೊಳ್ಳುತ್ತದೆ – ಇಸ್ರೇಲ್‌ ಪ್ರಧಾನಿ ಎಚ್ಚರಿಕೆ

  • ಮೂರು ದಿನಗಳ ಅಮೆರಿಕ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಮೋದಿ

    ಮೂರು ದಿನಗಳ ಅಮೆರಿಕ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಮೋದಿ

    ನವದೆಹಲಿ: ಮೂರು ದಿನಗಳ ಕಾಲ ಅಮೇರಿಕ ಪ್ರವಾಸ ಮುಗಿಸಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಮಂಗಳವಾರ ಭಾರತಕ್ಕೆ ಮರಳಿದ್ದಾರೆ. ಭಾರತಕ್ಕೆ ಹೊರಡುವ ಮುನ್ನ ಇಸ್ರೇಲ್-ಹಮಾಸ್ ಯುದ್ಧ ಮತ್ತು ಉಕ್ರೇನ್ (Ukraine) ಬಿಕ್ಕಟ್ಟು ಸೇರಿದಂತೆ ಜಾಗತಿಕ ಸಂಘರ್ಷಗಳ ಹಿನ್ನೆಲೆ ಯುಎನ್‌ನ (UN) ಭವಿಷ್ಯದ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದರು.

    ಯಾವ ದಿನ ಏನು?
    ಮೊದಲ ದಿನ ಅಮೇರಿಕಾದ (America) ಡೆಲವೇರ್‌ನ ವಿಲ್ಮಿಂಗ್ಟನ್‌ನಲ್ಲಿ ನಡೆದ ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಭಾಗವಹಿಸಿದರು.ಇದನ್ನೂ ಓದಿ: ಅತ್ಯಾಚಾರ ವಿರೋಧಿಸಿದ್ದಕ್ಕಾಗಿ ಪ್ರಾಂಶುಪಾಲನಿಂದ 6 ವರ್ಷದ ಬಾಲಕಿಯ ಕೊಲೆ

    ಎರಡನೇ ದಿನ ಶನಿವಾರ ನ್ಯೂಯಾರ್ಕ್‌ಗೆ ಆಗಮಿಸಿ ಯುಎಸ್ ಅಧ್ಯಕ್ಷ ಜೋ ಬೈಡೆನ್ ಅವರೊಂದಿಗೆ ದ್ವಿಪಕ್ಷೀಯ ಚರ್ಚೆಗಳನ್ನು ನಡೆಸಿದರು.

    ಮೂರನೇ ದಿನ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮತ್ತು ಅರ್ಮೇನಿಯಾ ಪ್ರಧಾನಿ ನಿಕೋಲ್ ಪಶಿನ್ಯಾನ್ ಮತ್ತು ಇತರ ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಿದರು.

    ಅಧ್ಯಕ್ಷ ಝೆಲೆನ್ಸ್ಕಿಯೊಂದಿಗೆ ಸಭೆಯಲ್ಲಿ, ಉಕ್ರೇನ್‌ನಲ್ಲಿನ ಸಂಘರ್ಷವನ್ನು ಶೀಘ್ರವಾಗಿ ಪರಿಹರಿಸಲು ಮತ್ತು ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯ ಮರುಸ್ಥಾಪನೆಗೆ ಭಾರತದ ಬದ್ಧತೆಯನ್ನು ಕಾಪಾಡಿಕೊಳ್ಳುವ ಬಗ್ಗೆ ತಿಳಿಸಿದರು.

    ಮೂರು ತಿಂಗಳ ಅವಧಿಯಲ್ಲಿ ಉಭಯ ನಾಯಕರ ನಡುವಿನ ಮೂರನೇ ಸಭೆ ಇದಾಗಿದೆ. ಮೋದಿ ಕೊನೆಯ ಬಾರಿಗೆ ಉಕ್ರೇನ್ ರಾಜಧಾನಿ ಕೀನಲ್ಲಿ ಆ.23 ರಂದು ಭೇಟಿ ನೀಡಿದ್ದರು. ಜೂನ್‌ನಲ್ಲಿ ಇಟಲಿಯಲ್ಲಿ ನಡೆದ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಮೋದಿ ಅವರು ಝೆಲೆನ್ಸ್ಕಿ ಅವರೊಂದಿಗೆ ಮಾತುಕತೆ ನಡೆಸಿದ್ದರು.ಇದನ್ನೂ ಓದಿ: ರಾಜೀನಾಮೆ ಯಾಕೆ ಕೊಡಬೇಕು? ತನಿಖೆಗೆ ಮಾತ್ರ ಮಾತ್ರ ಅನುಮತಿ, ಪ್ರಾಸಿಕ್ಯೂಷನ್‌ಗೆ ಅಲ್ಲ: ಸಿದ್ದರಾಮಯ್ಯ

  • ನ್ಯೂಯಾರ್ಕ್‌ನಲ್ಲಿ ಝೆಲೆನ್ಸ್ಕಿ ಭೇಟಿಯಾದ ಮೋದಿ – ಶಾಂತಿಮಂತ್ರ ಪಠಿಸಿದ ಪ್ರಧಾನಿ

    ನ್ಯೂಯಾರ್ಕ್‌ನಲ್ಲಿ ಝೆಲೆನ್ಸ್ಕಿ ಭೇಟಿಯಾದ ಮೋದಿ – ಶಾಂತಿಮಂತ್ರ ಪಠಿಸಿದ ಪ್ರಧಾನಿ

    ವಾಷಿಂಗ್ಟನ್‌: ವಿಶ್ವಸಂಸ್ಥೆಯ ಶೃಂಗಸಭೆ (UNGN) ಹಿನ್ನೆಲೆ ಅಮೆರಿಕಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನ್ಯೂಯಾರ್ಕ್‌ನಲ್ಲಿ ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ (Volodymyr Zelenskyy) ಅವರನ್ನ ಭೇಟಿಯಾಗಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಇದು ಮೋದಿ-ಝಲೆನ್ಸ್ಕಿ ನಡುವಿನ 3ನೇ ಭೇಟಿಯಾಗಿದೆ.

    ಸದ್ಯ ಶೃಂಗ ಸಭೆಯಲ್ಲಿ ವಿದೇಶಾಂಗ ಸಚಿವ ಎಸ್.ಜೈಶಂಕರ್ ಕೂಡ ಉಪಸ್ಥಿತರಿದ್ದು, ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಮಾರ್ಗಗಳ ಕುರಿತು ವಿಸ್ತೃತ ಚರ್ಚೆ ನಡೆಸಲಾಗುತ್ತಿದೆ. ಇದೇ ವೇಳೆ ಉಕ್ರೇನ್‌ನಲ್ಲಿ (Ukraine) ನಡೆಯುತ್ತಿರುವ ಸಂಘರ್ಷವನ್ನು ಆದಷ್ಟು ಬೇಗನೇ ಇತ್ಯರ್ಥಗೊಳಿಸಲು, ಪ್ರದೇಶದಲ್ಲಿ ಶಾಂತಿ ನೆಲೆಸಲು ಮತ್ತು ಸ್ಥಿರತೆ ಕಾಪಾಡಲು ಮಾಡುತ್ತಿರುವ ಭಾರತದ ಪ್ರಯತ್ನಗಳನ್ನು ಝಲೆನ್ಸ್ಕಿ ಶ್ಲಾಘಿಸಿದ್ದಾರೆ.

    ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿರುವ ಪ್ರಧಾನಿ ಮೋದಿ, ನ್ಯೂಯಾರ್ಕ್‌ನಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿ‌ರ್ ಝಲೆನ್‌ಸ್ಕಿ ಅವರನ್ನು ಭೇಟಿಯಾಗಿದ್ದೇನೆ. ಉಭಯ ದೇಶಗಳ ನಡುವಣ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಕಳೆದ ತಿಂಗಳ ಉಕ್ರೇನ್ ಭೇಟಿಯ ವೇಳೆ ನಡೆದ ಮಾತುಕತೆಯನ್ನು ಫಲಪ್ರದವಾಗಿ ಜಾರಿಗೊಳಿಸಲು ಬದ್ಧರಾಗಿದ್ದೇವೆ. ಉಕ್ರೇನ್‌ನಲ್ಲಿ ಸಂಘರ್ಷಕ್ಕೆ ಆದಷ್ಟು ಬೇಗನೇ ಪರಿಹಾರ ಕಂಡುಕೊಳ್ಳುವುದು ಮತ್ತು ಶಾಂತಿ ಹಾಗೂ ಸ್ಥಿರತೆಯ ಮರುಸ್ಥಾಪನೆಗೆ ಭಾರತದ ಬೆಂಬಲವನ್ನು ಪುನರುಚ್ಚರಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.

    ಉಕ್ರೇನ್ ಸಂಘರ್ಷಕ್ಕೆ ಶಾಶ್ವತ ಮತ್ತು ಶಾಂತಿಯುತ ಪರಿಹಾರಕ್ಕೆ ನೆರವಾಗಲು ಬೇಕಾದ ಎಲ್ಲ ನೆರವು ನೀಡಲು ಭಾರತ ತನ್ನ ಪ್ರಯತ್ನಿಸುತ್ತಿದೆ. ಸಂಘರ್ಷವನ್ನು ಮಾತುಕತೆಯ ಮೂಲಕ ಶಾಂತಿಯುತವಾಗಿ ಬಗೆಹರಿಸುವ ನಿಟ್ಟಿನಲ್ಲಿ ಸ್ಪಷ್ಟ, ಸ್ಥಿರ ಮತ್ತು ರಚನಾತ್ಮಕ ನಿಲುವನ್ನು ಭಾರತ ಪುನರುಚ್ಛರಿಸಿದೆ. ಮತ್ತೊಂದೆಡೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಝಲೆನ್‌ಸ್ಕಿ, ಭಾರತ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಈ ವರ್ಷ 3ನೇ ಬಾರಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದೇನೆ. ಉಭಯ ದೇಶಗಳ ನಡುವಣ ಬಾಂಧವ್ಯವನ್ನು ಸಕ್ರಿಯವಾಗಿ ವೃದ್ಧಿಗೊಳಿಸಲಾಗುತ್ತಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಹಕಾರವನ್ನು ಗಟ್ಟಿಗೊಳಿಸಲು ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

    ಕಳೆದ ಆಗಸ್ಟ್‌ 23ರಂದು ಪ್ರಧಾನಿ ಮೋದಿ ಉಕ್ರೇನ್‌ಗೆ ಭೇಟಿ ನೀಡಿದ್ದರು. 1992 ರಲ್ಲಿ ಉಭಯ ದೇಶಗಳ ನಡುವೆ ರಾಜತಾಂತ್ರಿಕ ಸಂಬಂಧಗಳನ್ನು ಸ್ಥಾಪಿಸಿದ ನಂತರ ಉಕ್ರೇನ್‌ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದರು. ಅಲ್ಲಿಯೂ ಸಹ ಶಾಂತಿಯುತ ಮಾತುಕತೆ ಮೂಲಕ ಸಂಘರ್ಷ ಬಗೆಹರಿಸುವ ಪ್ರಯತ್ನಗಳ ಬಗ್ಗೆ ಚರ್ಚಿಸಿದ್ದರು.

  • Quad Summit | ಮೋದಿ ದ್ವಿಪಕ್ಷೀಯ ಮಾತುಕತೆ – MQ-9B ಡ್ರೋನ್ ಖರೀದಿ, ರಕ್ಷಣಾತ್ಮಕ ವಿಚಾರಗಳ ಕುರಿತು ಚರ್ಚೆ

    Quad Summit | ಮೋದಿ ದ್ವಿಪಕ್ಷೀಯ ಮಾತುಕತೆ – MQ-9B ಡ್ರೋನ್ ಖರೀದಿ, ರಕ್ಷಣಾತ್ಮಕ ವಿಚಾರಗಳ ಕುರಿತು ಚರ್ಚೆ

    ವಾಷಿಂಗ್ಟನ್‌: ಸದ್ಯ ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕ್ವಾಡ್ ಶೃಂಗಸಭೆಯಲ್ಲಿ (Quad Summit) ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಪನೀಸ್ ಮತ್ತು ಜಪಾನ್‌ನ ಪ್ರಧಾನಿ ಫುಮಿಯೊ ಕಿಶಿಡಾ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಮಾಹಿತಿಯನ್ನೂ ಹಂಚಿಕೊಂಡಿದ್ದಾರೆ.

    ದ್ವಿಪಕ್ಷೀಯ ಮಾತುಕತೆಯಲ್ಲಿ ಉಭಯ ರಾಷ್ಟ್ರಗಳೊಂದಿಗೆ ಪರಸ್ಪರ ಹಿತಾಸಕ್ತಿಯ ಕ್ಷೇತ್ರಗಳಲ್ಲಿ ಯುಎಸ್-ಭಾರತದ (India – USA) ದ್ವಿಪಕ್ಷೀಯ ಪಾಲುದಾರಿಕೆಯನ್ನು ಸುಧಾರಿಸುವ ಬಗ್ಗೆ ಚರ್ಚಿಸಿದ್ದಾರೆ. ಜೊತೆಗೆ ಇಂಡೋ-ಪೆಸಿಫಿಕ್ ಗಡಿ ಭಾಗದ ಬಗ್ಗೆಯೂ ಉಭಯ ನಾಯಕರು ತಮ್ಮ ಅಭಿಪ್ರಾಯಗಳನ್ನ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಲೆಬನಾನ್ ಪೇಜರ್ ಸ್ಫೋಟದ ಹಿಂದೆ ಟ್ಯಾಲೆಂಟೆಡ್ ಬ್ಯೂಟಿ!

    ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಪನೀಸ್ ಅವರೊಂದಿಗೆ ಮೋದಿ ವಿಸ್ತ್ರತ ಚರ್ಚೆ ನಡೆಸಿದ್ದಾರೆ. ವ್ಯಾಪಾರ, ಭದ್ರತೆ, ಬಾಹ್ಯಾಕಾಶ ಮತ್ತು ಸಂಸ್ಕೃತಿಯಂತಹ ಕ್ಷೇತ್ರಗಳಲ್ಲಿ ಇನ್ನಷ್ಟು ಗತಿ ಪಡೆಯಲು ಪರಿಶ್ರಮಿಸುತ್ತೇವೆ. ಆಸ್ಟ್ರೇಲಿಯಾದೊಂದಿಗಿನ ಬಾಂಧವ್ಯವನ್ನು ಭಾರತ ಸದಾ ಗೌರವಿಸುತ್ತದೆ ಎಂದು ಇದೇ ವೇಳೆ ಮೋದಿ ಹೇಳಿದ್ದಾರೆ. ಇದನ್ನೂ ಓದಿ: ಪೇಜರ್‌ ಬ್ಲಾಸ್ಟ್‌ ಕೇಸ್‌ನಲ್ಲಿ ಟ್ಟಿಸ್ಟ್‌ – ಘಟನೆ ಹಿಂದೆ ಭಾರತೀಯ ಮೂಲದ ಉದ್ಯಮಿಯ ಕೈವಾಡ ಇರೋದು ನಿಜವೇ?

    ಮಗದೊಂದು ಪೋಸ್ಟ್‌ನಲ್ಲಿ ಜಪಾನ್ ಪ್ರಧಾನಿ ಫುಮಿಯೊ ಕಿಶಿಡಾ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿರುವುದು ಕಂಡುಬಂದಿದೆ. ಮೂಲಸೌಕರ್ಯ, ಸೆಮಿಕಂಡಕ್ಟರ್, ರಕ್ಷಣಾ ವಲಯ, ಗ್ರೀನ್ ಎನರ್ಜಿ ಮತ್ತು ಇತರೆ ವಿಷಯಗಳಲ್ಲಿ ಉಭಯ ದೇಶಗಳ ಸಹಕಾರದ ಕುರಿತು ಚರ್ಚಿಸಲಾಯಿತು. ಭಾರತ-ಜಪಾನ್ ನಡುವಣ ಗಟ್ಟಿ ಬಾಂಧವ್ಯವು ಜಾಗತಿಕ ಏಳಿಗೆಗೆ ಪೂರಕವಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

    ಕ್ವಾಡ್ ಶೃಂಗದಲ್ಲಿ ಭಾಗಿಯಾಗಲು ಶನಿವಾರವಷ್ಟೇ ಪ್ರಧಾನಿ ಮೋದಿ ಅಮೆರಿಕಕ್ಕೆ ಭೇಟಿ ನೀಡಿದ್ದರು. ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಡೆಲವೇರ್‌ನ ವಿಮ್ಮಿಂಗ್ಟನ್‌ನಲ್ಲಿರುವ ಬೈಡನ್ ಅವರ ನಿವಾಸದಲ್ಲಿ ಉಭಯ ನಾಯಕರು ಭಾರತ-ಅಮೆರಿಕ ಬಾಂಧವ್ಯವನ್ನು ಇನ್ನಷ್ಟು ಗಟ್ಟಿಗೊಳಿಸುವ ಸಂಬಂಧ ಚರ್ಚಿಸಿದ್ದರು. ಇದನ್ನೂ ಓದಿ: ಗಾಜಾದಲ್ಲಿ ಹಮಾಸ್ ಉಗ್ರರ ಮೇಲೆ ಇಸ್ರೇಲ್ ದಾಳಿ – 13 ಮಕ್ಕಳು ಸೇರಿ 22 ಮಂದಿ ಸಾವು

    ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದ ಡೆಲವೇರ್ ರಾಜ್ಯದಲ್ಲಿರುವ ಅಮೆರಿಕದ ಅಧ್ಯಕ್ಷ ಜೋ ಬಿಡನ್ ಅವರ ನಿವಾಸದಲ್ಲಿ ಕ್ವಾಡ್ ಶೃಂಗಸಭೆಯ ಸಂದರ್ಭದಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ MQ-9B ಸ್ಕೈ ಗಾರ್ಡಿಯನ್ ಮತ್ತು ಸೀ ಗಾರ್ಡಿಯನ್ ಡ್ರೋನ್ ಒಪ್ಪಂದ ಮತ್ತು ಕೋಲ್ಕತ್ತಾದಲ್ಲಿ ಸೆಮಿಕಂಡಕ್ಟರ್ ಪ್ಲಾಂಟ್ ಸ್ಥಾಪನೆ ಸೇರಿದಂತೆ ಹಲವು ವಿಷಯಗಳನ್ನು ನಾಯಕರು ಚರ್ಚಿಸಿದ್ದಾರೆ .

    ಭಾರತದ ಸಶಸ್ತ್ರ ಪಡೆಗಳ ಗುಪ್ತಚರ, ಕಣ್ಗಾವಲು ಮತ್ತು ವಿಚಕ್ಷಣ (ISR) ಸಾಮರ್ಥ್ಯಗಳನ್ನು ಹೆಚ್ಚಿಸುವ 31 ಜನರಲ್ ಅಟಾಮಿಕ್ಸ್ MQ-9B (16 ಸ್ಕೈ ಗಾರ್ಡಿಯನ್ ಮತ್ತು 15 ಸೀ ಗಾರ್ಡಿಯನ್) ಡ್ರೋನ್‌ಗಳ ಖರೀದಿ ಬಗ್ಗೆ ಮಾತುಕತೆ ನಡೆಸಿದ್ದಾರೆ. ಇದಕ್ಕೆ ಬೈಡನ್‌ ಅವರಿಂದ ಗ್ರೀನ್‌ ಸಿಗ್ನಲ್‌ ಸಹ ಸಿಕ್ಕಿದೆ ಎನ್ನಲಾಗಿದೆ, ಅಧಿಕೃತ ಮಾಹಿತಿ ಇನ್ನಷ್ಟೇ ಹೊರಬೀಳಬೇಕಿದೆ.

  • ಅಮೆರಿಕದಲ್ಲಿ ಭಾರತ ಮೂಲದ ಧ್ರುವಿ ಪಟೇಲ್‌ಗೆ ಮಿಸ್ ಇಂಡಿಯಾ ವರ್ಲ್ಡ್‌ವೈಡ್ ಕಿರೀಟ!

    ಅಮೆರಿಕದಲ್ಲಿ ಭಾರತ ಮೂಲದ ಧ್ರುವಿ ಪಟೇಲ್‌ಗೆ ಮಿಸ್ ಇಂಡಿಯಾ ವರ್ಲ್ಡ್‌ವೈಡ್ ಕಿರೀಟ!

    ವಾಷಿಂಗ್ಟನ್‌: ಅಮೆರಿಕದಲ್ಲಿ ನೆಲೆಸಿರುವ ಭಾರತ ಮೂಲದ ಧ್ರುವಿ ಪಟೇಲ್ ಅವರು ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024ರ (Miss India Worldwide 2024) ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

    ಇತ್ತೀಚೆಗೆ ನ್ಯೂಜೆರ್ಸಿಯ ಎಡಿಸನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜೇತರನ್ನು ಘೋಷಿಸಲಾಯಿತು. ಇದರಲ್ಲಿ ಧ್ರವಿ ಮಿಸ್‌ ಇಂಡಿಯಾ ವರ್ಲ್ಡ್‌ವೈಡ್‌ ಕಿರೀಟ ಮುಡಿಗೇರಿಸಿಕೊಂಡರೆ, ನೆದರ್ಲೆಂಡ್ಸ್‌ನ ಶ್ರೇಯಾ ಸಿಂಗ್ ಮತ್ತು ಸುರಿನಾಮ್‌ನ ಶ್ರಧಾ ಟೆಡ್ಜೋ ಮೊದಲ ಮತ್ತು ಎರಡನೇ ರನ್ನರ್ ಅಪ್ ಎಂದು ಘೋಷಿಸಲಾಯಿತು.

    ಪ್ರಶಸ್ತಿ ಬಳಿಕ ಮಾತನಾಡಿರುವ ಧ್ರುವಿ, ತನಗೆ ಬಾಲಿವುಡ್ ನಟಿ ಮತ್ತು UNICEF ರಾಯಭಾರಿಯಾಗುವ ಆಸೆಯಿದೆ ಎಂದು ಹೇಳಿಕೊಂಡಿದ್ದಾರೆ. ಅಲ್ಲದೇ ಇದು ನನಗೆ ಜಾಗತಿಕವಾಗಿ ಸಿಕ್ಕ ಮನ್ನಣೆ. ಮಿಸ್ ಇಂಡಿಯಾ ವರ್ಲ್ಡ್ ವೈಡ್‌ ಗೆಲ್ಲುವುದು ಅತ್ಯಂತ ಗೌರವವಾಗಿದೆ. ಇದು ‌ಮಿಸ್ ವರ್ಲ್ಡ್‌ಗಿಂತಲೂ ಹೆಚ್ಚಿನ ಗೌರವ ಅನಿಸಿದೆ ಎಂದಿದ್ದಾರೆ.

    ಗುಜರಾತ್ ಮೂಲದ ಧ್ರುವಿ ಪಟೇಲ್ ಅವರು ಅಮೆರಿಕದಲ್ಲಿ ಕಂಪ್ಯೂಟರ್ ಇನ್ಫರ್ಮೇಷನ್ ಸಿಸ್ಟಂ ಪದವಿ ಓದುತ್ತಿದ್ದಾರೆ.

    ನ್ಯೂಯಾರ್ಕ್‌ನಲ್ಲಿ ನೆಲೆಸಿರುವ ಇಂಡಿಯನ್ ಫೆಸ್ಟಿವಲ್ ಕಮೀಟಿ ಮಿಸ್ ಇಂಡಿಯಾ ವರ್ಲ್ಡ್ ವೈಡ್ ಸ್ಪರ್ಧೆ ಆಯೋಜಿಸುತ್ತದೆ. ಭಾರತೀಯ-ಅಮೆರಿಕನ್ನರಾದ ನೀಲಂ ಮತ್ತು ಧರ್ಮಾತ್ಮ ಸರನ್ ನೇತೃತ್ವ ವಹಿಸಿದ್ದಾರೆ. ಈ ಪ್ರಶಸ್ತಿಯು ಪ್ರಸಕ್ತ ವರ್ಷ ತನ್ನ 31ನೇ ವಾರ್ಷಿಕೋತ್ಸವ ಆಚರಿಸುತ್ತಿದೆ.

  • ಅತಿ ವೇಗವಾಗಿ ಹರಡುವ ಕೋವಿಡ್‌ ಹೊಸ ತಳಿ ಪತ್ತೆ – ಯುಕೆ, ಯುಎಸ್‌, ಉಕ್ರೇನ್‌ ಸೇರಿ 27 ದೇಶಗಳಿಗೆ XEC ಆತಂಕ

    ಅತಿ ವೇಗವಾಗಿ ಹರಡುವ ಕೋವಿಡ್‌ ಹೊಸ ತಳಿ ಪತ್ತೆ – ಯುಕೆ, ಯುಎಸ್‌, ಉಕ್ರೇನ್‌ ಸೇರಿ 27 ದೇಶಗಳಿಗೆ XEC ಆತಂಕ

    ವಾಷಿಂಗ್ಟನ್‌: 2020ರಲ್ಲಿ ಕಾಣಿಸಿಕೊಂಡು ವಿಶ್ವದಾದ್ಯಂತ ಲಕ್ಷಾಂತರ ಜನರನ್ನು ಬಲಿ ಪಡೆದುಕೊಂಡಿದ್ದ ಕೊರೊನಾ ವೈರಸ್‌  ಇದೀಗ ಮತ್ತೊಂದು ಹೊಸ ರೂಪ (Covid New Variant) ಪಡೆದುಕೊಂಡಿದೆ.

    ಎಕ್ಸ್‌ಇಸಿ (XEC) ಎಂಬ ಹೆಸರಿನ ಕೋವಿಡ್‌ ರೂಪಾಂತರ ಯುರೋಪ್‌ ದೇಶಗಳಲ್ಲಿ (Europe Countries) ಪತ್ತೆಯಾಗಿದ್ದು, ಸುಮಾರು 27 ದೇಶಗಳಿಗೆ ಭಾರಿ ಆತಂಕ ಹುಟ್ಟಿಸಿದೆ. ಇದು ಅತ್ಯಂತ ವೇಗವಾಗಿ ಹರಡುವ ಸಾಧ್ಯತೆಗಳಿವೆ ಎಂದು ವಿಜ್ಞಾನಿಗಳು ಎಚ್ಚರಿಸಿರುವುದಾಗಿ ವರದಿಯಾಗಿದೆ. ಇದನ್ನೂ ಓದಿ: ಜನರ ಹಸಿವು ನೀಗಿಸಲು 200 ಆನೆಗಳ ಹತ್ಯೆಗೆ ಮುಂದಾದ ಜಿಂಬಾಬ್ವೆ!

    ಮೂಲಗಳ ಪ್ರಕಾರ, ಒಮಿಕ್ರಾನ್‌ ಉಪತಳಿಯಾಗಿರುವ ಎಕ್ಸ್‌ಇಸಿ ರೂಪಾಂತರವನ್ನು ಕಳೆದ ಜೂನ್‌ನಲ್ಲಿ ಜರ್ಮನಿಯಲ್ಲಿ ಗುರುತಿಸಲಾಯಿತು. ಬಳಿಕ ಯುಕೆ, ಯುಎಸ್‌ (USA), ಡೆನ್ಮಾರ್ಕ್‌, ಪೋಲೆಂಡ್, ನಾರ್ವೆ, ಲಕ್ಸೆಂಬರ್ಗ್, ಉಕ್ರೇನ್ (Ukraine), ಪೋರ್ಚುಗಲ್ ಸೇರಿದಂತೆ ಸುಮಾರು 27 ದೇಶಗಳಲ್ಲಿ 500 ಮಾದರಿಗಳು ಕಾಣಿಸಿಕೊಂಡಿವೆ.

    ಇದು ಅತ್ಯಂತ ವೇಗವಾಗಿ ಹರಡುವ ಸಾಧ್ಯತೆಗಳಿವೆ. ಅದರಲ್ಲಿ ಜರ್ಮನಿ, ಡೆನ್ಮಾರ್ಕ್‌ನಂತಹ ದೇಶಗಳಲ್ಲಿ ಮಾರಣಾಂತಿಕ ಪ್ರಮಾಣದಲ್ಲಿ ವೈರಸ್‌ ಹರಡುತ್ತಿವೆ. ಎಚ್ಚೆತ್ತು ಆದಷ್ಟು ಬೇಕ ಲಸಿಕೆ ಪಡೆದುಕೊಂಡರೇ ಕನಿಷ್ಠ ಮರಣದಿಂದ ತಪ್ಪಿಸಿಕೊಳ್ಳಬಹುದು ಎಂದು ಲಂಡನ್‌ನಲ್ಲಿರುವ ಜೆನೆಟಿಕ್ಸ್ ಇನ್‌ಸ್ಟಿಟ್ಯೂಟ್‌ನ ನಿರ್ದೇಶಕ ಪ್ರೊಫೆಸರ್ ಫ್ರಾಂಕೋಯಿಸ್ ಬಲೂಕ್ಸ್ ತಿಳಿಸಿದ್ದಾರೆ. ಇದನ್ನೂ ಓದಿ: PublicTV Explainer: ಹೊಸ ವರ್ಷದ ಹೊತ್ತಲ್ಲೇ ದೇಶಕ್ಕೆ ಕಾಲಿಟ್ಟ ಕೊರೊನಾ ಹೊಸ ತಳಿ; ಏನಿದು ಜೆಎನ್‌.1? ಇದು ಅಪಾಯಕಾರಿಯೇ?

    XEC ರೂಪಾಂತರದ ಲಕ್ಷಣಗಳೇನು?
    * ಜ್ವರ
    * ಗಂಟಲು ನೋವು
    * ಕೆಮ್ಮು
    * ವಾಸನೆ ಗ್ರಹಿಕೆ ಕಳೆದುಕೊಳ್ಳುವುದು
    * ಹಸಿವಾಗದೇ ಇರುವುದು
    * ಮೈ-ಕೈ ನೋವು ಸೇರಿದಂತೆ ಹಿಂದಿನ ಕೋವಿಡ್‌ ಲಕ್ಷಣಗಳು

    ಪರಿಹಾರ ಏನು?
    * ಲಕ್ಷಣಗಳು ಕಂಡುಬಂದ ಕೂಡಲೇ ತಪಾಸಣೆಗೆ ಒಳಗಾಗಿ ಲಸಿಕೆ ಪಡೆದುಕೊಳ್ಳುವುದು
    * ಶುದ್ಧ ಗಾಳಿ, ನೀರು ಸೇವನೆಯೊಂದಿಗೆ ಸುತ್ತಮುತ್ತಲಿನ ವಾತಾವರಣ ಸ್ವಚ್ಛವಾಗಿಟ್ಟುಕೊಳ್ಳುವುದು
    * ರೋಗ ಲಕ್ಷಣಗಳ ಬಗ್ಗೆ ತಿಳಿಯಲು ಮುಜಾಗ್ರತಾ ಕ್ರಮವಾಗಿ ತಪಾಸಣೆಗೆ ಒಳಗಾಗುವುದು

  • ಟ್ರಂಪ್‌ ಮೇಲೆ ಮತ್ತೆ ಗುಂಡಿನ ದಾಳಿ – ಆತಂಕ ಹೆಚ್ಚಿಸಿದ ಆ ಒಂದು ರೈಫಲ್‌, ದಾಳಿಕೋರ ಸಿಕ್ಕಿದ್ದು ಹೇಗೆ?

    ಟ್ರಂಪ್‌ ಮೇಲೆ ಮತ್ತೆ ಗುಂಡಿನ ದಾಳಿ – ಆತಂಕ ಹೆಚ್ಚಿಸಿದ ಆ ಒಂದು ರೈಫಲ್‌, ದಾಳಿಕೋರ ಸಿಕ್ಕಿದ್ದು ಹೇಗೆ?

    ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷೀಯ ಚುನಾವಣಾ ಅಭ್ಯರ್ಥಿತಾಗಿರುವ ಡೊನಾಲ್ಡ್ ಟ್ರಂಪ್ (Donald Trump) ಅವರ ಮೇಲೆ ಮತ್ತೆ ಗುಂಡಿನ ದಾಳಿ ನಡೆದಿದೆ. ಫ್ಲೋರಿಡಾದ (Florida) ಗಾಲ್ಫ್ ಕ್ಲಬ್ ನಲ್ಲಿದ್ದ ಟ್ರಂಪ್ ಮೇಲೆ ಅಜ್ಞಾತ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ. ಆದರೆ, ಟ್ರಂಪ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಇದೇ ವರ್ಷ ಜುಲೈ 13ರಂದು ಅವರ ಮೇಲೆ ಅಮೆರಿಕದ (USA) ಪೆನ್ಸಿಲ್ವೇನಿಯಾದಲ್ಲಿರುವ ಬಟ್ಲರ್ ಎಂಬಲ್ಲಿ ಗುಂಡಿನ ದಾಳಿಯಾಗಿತ್ತು. ಅಂದು ಚುನಾವಣಾ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದ ಟ್ರಂಪ್ ಅವರ ಮೇಲೆ ಸುಮಾರು 442 ಅಡಿಗಷ್ಟು ದೂರದಿಂದ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದ. ಅಂದು ಹಾರಿದ ಗುಂಡು ಅವರ ಬಲಕಿವಿಯ ತುದಿಗೆ ತಾಕಿ ರಕ್ತ ಸೋರಿಕೆಯಾಗಿತ್ತು, ಕೂದಲೆಳೆ ಅಂತರದಲ್ಲಿ ಟ್ರಂಪ್‌ ಪಾರಾಗಿದ್ದರು. ಇದಾದ ಕೆಲವೇ ದಿನಗಳ ಅಂತರದಲ್ಲಿ ಮತ್ತೊಂದು ಗುಂಡಿನ ದಾಳಿ ನಡೆದಿರುವುದು ಟ್ರಂಪ್‌ ಬೆಂಬಲಿಗರ ಆತಂಕಕ್ಕೆ ಕಾರಣವಾಗಿದೆ.

    ದಾಳಿ ನಡೆದಿದ್ದು ಎಲ್ಲಿ? ಹೇಗೆ?
    ಫ್ಲೋರಿಡಾದ ಸ್ಥಳೀಯ ಕಾಲಮಾನ ಸೆ. 15ರಂದು ಸಂಜೆಯಲ್ಲಿ ಫ್ಲೋರಿಡಾದಲ್ಲಿರುವ ವೆಸ್ಟ್ ಪಾಮ್ ಬೀಚ್ ನಲ್ಲಿರುವ ತಮ್ಮದೇ ಗಾಲ್ಫ್ ಕ್ಲಬ್ ಆದ ಟ್ರಂಪ್ ಇಂಟರ್ ನ್ಯಾಷನಲ್ ಗಾಲ್ಫ್ ಕ್ಲಬ್‌ಗೆ (Golf Club) ಟ್ರಂಪ್ ಆಗಮಿಸಿದ್ದರು. ವಾರಾಂತ್ಯದಲ್ಲಿ ಗಾಲ್ಫ್ ಆಡುವುದು ಅವರ ಅಚ್ಚುಮೆಚ್ಚಿನ ಹವ್ಯಾಸವಾಗಿದ್ದರಿಂದ ಅವರು ಎಲ್ಲಿರುತ್ತಾರೋ ಅವರಿರುವ ಹತ್ತಿರದ ಯಾವುದೇ ಗಾಲ್ಫ್ ಕ್ಲಬ್ ಗೆ ಅವರು ಹೋಗುತ್ತಾರೆ. ಸೆ.15ರಂದು ಅವರು ಫ್ಲೋರಿಡಾದಲ್ಲೇ ಇದ್ದಿದ್ದರಿಂದ ತಮ್ಮ ಸ್ವಂತ ಗಾಲ್ಫ್ ಕ್ಲಬ್‌ಗೆ ಹೋಗಿದ್ದರು. ಗಾಲ್ಫ್ ಆಟ ಮುಗಿಸಿ ಇನ್ನೇನು ಮನೆಗೆ ಹೊರಡಬೇಕು ಎನ್ನುವಷ್ಟರಲ್ಲಿ ಅವರ ಮೇಲೆ ಗುಂಡಿನ ದಾಳಿ ನಡೆದಿದೆ.

    AK-47 ರೈಫಲ್‌ ಪತ್ತೆ:
    ಫ್ಲೋರಿಡಾದ ಗಾಲ್ಫ್ ಕ್ಲಬ್‌ನ ಅಕ್ಕಪಕ್ಕದಲ್ಲಿ ಒಂದು ಎಕೆ-47 ರೈಫಲ್, ಟ್ರೆಕ್ಕಿಂಗ್ ಮಾಡುವವರು ಅಥವಾ ವ್ಲಾಗರ್‌ಗಳು ಬಳಸುವ ಗೋ ಪ್ರೋ ಕ್ಯಾಮೆರಾ, ಎರಡು ಬ್ಯಾಕ್ ಪ್ಯಾಕ್ (ಬ್ಯಾಗ್) ಸಿಕ್ಕಿವೆ. ಇದಲ್ಲದೇ, ಗಾಲ್ಫ್ ಕ್ಲಬ್ ನಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯೊಬ್ಬ ಟ್ರಂಪ್ ಕಾರಿನ ಫೋಟೋ ತೆಗೆದುಕೊಳ್ಳುತ್ತಿದ್ದುದನ್ನು ತಾವು ನೋಡಿದ್ದಾಗಿ ತಿಳಿಸಿದ್ದಾರೆ. ಇಷ್ಟು ಮಾಹಿತಿ ಸಂಗ್ರಹಿಸಿದ ಎಫ್‌ಬಿಐ ಏಜೆಂಟ್‌ಗಳು ಶಂಕಿತ ದಾಳಿಕೋರನನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

    ಶಂಕಿತ ದಾಳಿಕೋರನ ಸೆರೆ:
    ಗುಂಡಿನ ದಾಳಿ ನಡೆಸಿ ಓಡಿಹೋಗಿದ್ದ ವ್ಯಕ್ತಿಯನ್ನು ಇಂಟರ್ ಸ್ಟೇಟ್ ಹೈವೇ 75ರಲ್ಲಿ ಹಿಡಿಯಲಾಗಿದೆ ಎಂದು ಫ್ಲೋರಿಡಾದ ನಗರಾಡಳಿತದ ಮುಖ್ಯಸ್ಥರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಘಟನೆ ನಡೆದ ಕೂಡಲೇ ಗಾಲ್ಫ್ ಕ್ಲಬ್ ಗೆ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳನ್ನು ಬಂದ್ ಮಾಡಿದ್ದ ಎಪ್‌ಬಿಐ ಸಿಬ್ಬಂದಿ, ಎಲ್ಲಾ ವಾಹನಗಳನ್ನು ತಪಾಸಣೆ ನಡೆಸಲಾರಂಭಿಸಿದ್ದರು. ಇದೇ ವೇಳೆ, ರಾಜ್ಯ ಹೆದ್ದಾರಿ 714ರ ಬಳಿಯೇ ಸಾಗುವ ಇಂಟರ್ ಸ್ಟೇಟ್ ಹೆದ್ದಾರಿ 75ರಲ್ಲಿ ವೇಗವಾಗಿ ಬರುತ್ತಿದ್ದ ಕಾರನ್ನು ತಡೆದು ಪರಿಶೀಲಿಸಿದಾಗ ಶಂಕಿತ ದಾಳಿಕೋರ ಅದರಲ್ಲಿದ್ದುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್, ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ನಮ್ಮ ದೇಶದಲ್ಲಿ ರಾಜಕೀಯ ಹಿಂಸಾಚಾರ ಅಥವಾ ಯಾವುದೇ ಹಿಂಸಾಚಾರಕ್ಕೆ ಯಾವುದೇ ಸ್ಥಳವಿಲ್ಲ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ತಿಳಿಸಿದ್ದಾರೆ.

  • ರಾಹುಲ್ ಗಾಂಧಿಯನ್ನು ಕೋರ್ಟ್‌ಗೆಳೆಯುತ್ತೇವೆ; ಸಿಖ್ ಸಮುದಾಯದ ಬಗ್ಗೆ ಹೇಳಿಕೆಗೆ ಎಚ್ಚರಿಕೆ ನೀಡಿ ಕೇಂದ್ರ ಸಚಿವ ಪುರಿ

    ರಾಹುಲ್ ಗಾಂಧಿಯನ್ನು ಕೋರ್ಟ್‌ಗೆಳೆಯುತ್ತೇವೆ; ಸಿಖ್ ಸಮುದಾಯದ ಬಗ್ಗೆ ಹೇಳಿಕೆಗೆ ಎಚ್ಚರಿಕೆ ನೀಡಿ ಕೇಂದ್ರ ಸಚಿವ ಪುರಿ

    ವಾಷಿಂಗ್ಟನ್‌: ಒಂದು ಕಡೆ ಮೀಸಲಾತಿ ಬಗ್ಗೆ ಹೇಳಿಕೆ ಕೊಟ್ಟು ತೀವ್ರ ಟೀಕೆಗೆ ಗುರಿಯಾಗಿರೋ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi), ಸಿಖ್ ಧರ್ಮವನ್ನು ಉಲ್ಲೇಖಿಸಿ, ಭಾರತದಲ್ಲಿ ರಾಜಕೀಯಕ್ಕಿಂತ ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆಯೇ ಹೆಚ್ಚು ಹೋರಾಟಗಳು ನಡೆಯುತ್ತವೆ ಅಂದಿರೋದು ವಿವಾದಕ್ಕೆ ಕಾರಣವಾಗಿದೆ.

    ಭಾರತದ ಕೆಲ ವರ್ಗ, ಭಾಷೆ, ಧರ್ಮಗಳಲ್ಲಿ ಆರ್‌ಎಸ್‌ಎಸ್ ಅಭದ್ರತೆಯ ಭಾವನೆ ಮೂಡಿಸಿದೆ. ಉದಾಹರಣೆಗೆ ಸಿಖ್ಖರು (Sikhs) ಟರ್ಬನ್, ಖಡಗ ಧರಿಸೋದಕ್ಕೆ ಹೆದರುವಂತಾಗಿದೆ. ಇದು ಒಬ್ಬ ವ್ಯಕ್ತಿ ಮತ್ತು ಒಂದು ಧರ್ಮಕ್ಕೆ ಸೀಮಿತವಾಗಿಲ್ಲ. ಎಲ್ಲಾ ಧರ್ಮಗಳಲ್ಲೂ ಇಂತಹ ಸ್ಥಿತಿ ಇದೆ ಎಂದು ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ ಅನುದಾನವನ್ನು ಕೇಂದ್ರ ತಕ್ಷಣವೇ ಬಿಡುಗಡೆಗೊಳಿಸಲಿ : ಎಚ್.ಕೆ ಪಾಟೀಲ್

    ಇದೇ ವೇಳೆ ರಾಹುಲ್‌ ಗಾಂಧಿ ಅವರು, ಇಂದಿರಾ ಗಾಂಧಿಯವರ ಹತ್ಯೆಯ ನಂತರ 1984 ರ ಸಿಖ್ ವಿರೋಧಿ ದಂಗೆಯನ್ನು ಉಲ್ಲೇಖಿಸಿ ಮಾತನಾಡಿದರು. ಸ್ವಾತಂತ್ರ್ಯಾನಂತರದ ಇತಿಹಾಸದಲ್ಲಿ, ಸಿಖ್‌ ಸಮುದಾಯದ ಮೇಲೆ ಹತ್ಯಾಕಾಂಡ ನಡೆದ ಸಂದರ್ಭವಿತ್ತು. ಆಗ 3,000 ಅಮಾಯಕ ಸಿಖ್ಖರನ್ನು ಕೊಲ್ಲಲಾಯಿತು. ಆ ಸಂದರ್ಭದಲ್ಲಿ ನನ್ನ ಕೆಲವು ಸಹೋದರರು ಪೇಟ ಧರಿಸುವುದನ್ನೇ ಬಿಟ್ಟರು ಎಂದು ಹೇಳಿದ್ದರು.

    ರಾಹುಲ್‌ ಗಾಂಧಿ ಅವರು ಅಮೆರಿಕದ ವೇದಿಕೆಯಲ್ಲಿ ನೀಡಿದ ಹೇಳಿಕೆಯನ್ನು ಬಿಜೆಪಿಯಲ್ಲಿರುವ ಸಿಖ್‌ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ. ಕೇಂದ್ರ ಸಚಿವ ಹರ್ದೀಪ್ ಪುರಿ, ಬಿಜೆಪಿ ಹಿರಿಯ ಮುಖಂಡ ಆರ್‌.ಪಿ ಸಿಂಗ್‌ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ದೀಪಿಕಾ – ರಣ್‌ವೀರ್‌ ಸಿಂಗ್ ಮಗಳ ನೋಡಲು ಬಂದ ಮುಕೇಶ್ ಅಂಬಾನಿ

    ರಾಹುಲ್‌ ಗಾಂಧಿ ಅವರು ಅಪಾಯಕಾರಿ ಸಂಗತಿಗಳನ್ನು ಹರಡುತ್ತಿದ್ದಾರೆ. ವಿರೋಧಪಕ್ಷದ ನಾಯಕನ ಹುದ್ದೆಯಲ್ಲಿರುವಾಗ ವಿದೇಶದಲ್ಲಿ ನಿಂತು ಭಾರತ ಸರ್ಕಾರವನ್ನು ಟೀಕಿಸುವುದು ಎಷ್ಟು ಸರಿ? ಅಮೆರಿಕದಲ್ಲಿ ನನ್ನ ಸಮುದಾಯದ ಜನ ಇದ್ದಾರೆ. ಅವರು ಭಾರತದೊಂದಿಗೆ ಹೆಚ್ಚು ಬಲವಾದ ಸಂಪರ್ಕವನ್ನು ಹೊಂದಿಲ್ಲ. ರಾಹುಲ್‌ ಗಾಂದಿ ಅವರಿಗೆ ಸುಳ್ಳು ಸುದ್ದಿ ಹರಡುತ್ತಿದ್ದಾರೆ. ಅವರನ್ನು ಕೋರ್ಟ್‌ಗೆ ಎಳೆಯುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

    ಅಲ್ಲಲ್ಲಿ ಪ್ರತಿಭಟನೆಗಳು ಶುರುವಾಗಿವೆ. ಈ ಮಧ್ಯೆ, ಪ್ರಧಾನಿ ಮೋದಿ ಬಗ್ಗೆಯೂ ಪ್ರಸ್ತಾಪಿಸಿರೋ ರಾಹುಲ್ ಗಾಂಧಿ, ಮೋದಿ ಮೇಲೆ ನನಗೆ ಯಾವುದೇ ದ್ವೇಷ ಇಲ್ಲ. ನಮ್ಮಿಬ್ಬರದ್ದೂ ಭಿನ್ನ ವ್ಯಕ್ತಿತ್ವ. ಅವರನ್ನು ಶತ್ರುವಿನ ರೀತಿ ನೋಡಿಲ್ಲ ಎಂದು ರಾಹುಲ್ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಹಿರಿಯ ಅಧಿಕಾರಿ ವಿರುದ್ಧ IAF ಫ್ಲೈಯಿಂಗ್‌ ಸ್ಕ್ವಾಡ್‌ ಮಹಿಳಾಧಿಕಾರಿಯಿಂದ ಅತ್ಯಾಚಾರ ಆರೋಪ – ಕೇಸ್‌ ದಾಖಲು

    ಇನ್ನೂ ಲೋಕಸಭೆ ಚುನಾವಣೆಯ ಪ್ರಕ್ರಿಯೆಯನ್ನು ರಾಹುಲ್ ಗಾಂಧಿ ಟೀಕೆ ಮಾಡಿದ್ದಾರೆ. ಲೋಕಸಭೆ ಚುನಾವಣೆ ಪಾರದರ್ಶಕವಾಗಿ ನಡೆದಿದ್ರೆ ಬಿಜೆಪಿಗೆ 240 ಸೀಟ್ ಕೂಡ ಬರ್ತಿರಲಿಲ್ಲ. ಬಿಜೆಪಿಗೆ ಆರ್ಥಿಕ ಬಲ ಇದೆ. ಚುನಾವಣಾ ಆಯೋಗ ಅವರಿಗೆ ಅನುಕೂಲವಾಗಿ ಕೆಲಸ ಮಾಡಿತು ಎಂದು ಅಮೆರಿಕಲ್ಲಿ ಆರೋಪಿಸಿದ್ದಾರೆ.