Tag: Usire Usire

  • ಸುದೀಪ್ ಅತಿಥಿ ಪಾತ್ರ ಮಾಡಿರುವ ‘ಉಸಿರೇ ಉಸಿರೇ’ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್

    ಸುದೀಪ್ ಅತಿಥಿ ಪಾತ್ರ ಮಾಡಿರುವ ‘ಉಸಿರೇ ಉಸಿರೇ’ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್

    ಪ್ರದೀಪ್ ಯಾದವ್ ನಿರ್ಮಾಣದ, ಸಿ.ಎಂ.ವಿಜಯ್ ನಿರ್ದೇಶನದ ಹಾಗೂ ಬಿಗ್ ಬಾಸ್ ಖ್ಯಾತಿಯ ರಾಜೀವ್ (Rajeev) ಹನು ನಾಯಕರಾಗಿ ನಟಿಸಿರುವ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Sudeep) ವಿಶೇಷಪಾತ್ರದಲ್ಲಿ ಕಾಣಸಿಕೊಂಡಿರುವ ‘ಉಸಿರೇ ಉಸಿರೇ’ (Usire Usire) ಚಿತ್ರ ಮೇ 3 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲೇ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಜನರ ಮನ ಗೆದ್ದಿದೆ.

    ನಾನು ಈ ಚಿತ್ರಕ್ಕಾಗಿ ಐದು ವರ್ಷಗಳ ಕಾಲ ಶ್ರಮಪಟ್ಟಿದ್ದೇನೆ. ಈ ಸಮಯದಲ್ಲಿ ಬೇರೆ ಯಾವ ಚಿತ್ರಗಳನ್ನು ಒಪ್ಪಿಕೊಂಡಿಲ್ಲ. ಈಗ ಬಿಡುಗಡೆ ದಿನಾಂಕ ನಿಗದಿಯಾಗಿದೆ. ಮೇ 3 ರಂದು ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ. ನನ್ನ ಅಣ್ಣನ ಸ್ಥಾನದಲ್ಲಿರುವ ಕಿಚ್ಚ ಸುದೀಪ್ ಅವರು ಈ ಚಿತ್ರದ ವಿಶೇಷಪಾತ್ರದಲ್ಲಿ ಕಾಣಿಸಿಕೊಳ್ಳುವುದರ ಮೂಲಕ ನಮಗೆ ಪ್ರೋತ್ಸಾಹ ನೀಡಿದ್ದಾರೆ. ಅವರಿಗೆ ವಿಶೇಷ ಧನ್ಯವಾದ. ಇದೊಂದು ನೈಜ ಘಟನೆ ಆಧಾರಿತ ಚಿತ್ರವಾಗಿದ್ದು, ಚಿತ್ರ ಚೆನ್ನಾಗಿ ಮೂಡಿಬಂದಿದೆ. ಚಿತ್ರಕ್ಕೆ ಬಂಡವಾಳ ಹೂಡಿರುವ ನಿರ್ಮಾಪಕ ಪ್ರದೀಪ್ ಯಾದವ್ ಅವರಿಗೆ ಒಳ್ಳೆಯದಾಗಲಿ. ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂ ರಾಜೀವ್ ಹನು.

    ನನಗೆ ಚಿತ್ರರಂಗ ಹೊಸತು. ನಿರ್ದೇಶಕ ವಿಜಯ್ ಅವರು ಈ ಚಿತ್ರದ ಕಥೆ ಹೇಳಿ ನಿರ್ಮಾಣಕ್ಕೆ ಕರೆತಂದರು. ಕಿಚ್ಚ ಸುದೀಪ್ ಅವರು ಆರಂಭದಿಂದಲೂ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ನಾಯಕ ರಾಜೀವ್ ಹಾಗೂ ಚಿತ್ರತಂಡದ ಸಹಕಾರವನ್ನು ಈ ಸಮಯದಲ್ಲಿ ನೆನಪಿಸಿಕೊಳ್ಳುತ್ತೇನೆ. ಚಿತ್ರ ಮೇ 3 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಚಂದನ್ ಫಿಲಂಸ್ ಅವರು ನಮ್ಮ ಚಿತ್ರದ ವಿತರಕರು ಎಂದು ತಿಳಿಸಿದ ನಿರ್ಮಾಪಕ ಪ್ರದೀಪ್ ಯಾದವ್, ಈ ಸಮಯದಲ್ಲಿ ಇನ್ನೊಂದು ವಿಷಯ ಹೇಳುತ್ತೇನೆ. ನಮ್ಮ ಚಿತ್ರದ ನಿರ್ದೇಶಕ ಸಿ.ಎಂ.ವಿಜಯ್ ಕೆಲವು ತಿಂಗಳು ಗಳಿಂದ ನಮ್ಮ ಸಂಪರ್ಕದಲ್ಲಿಲ್ಲ. ಫೋನ್ ಕರೆ ಸ್ವೀಕರಿಸುತ್ತಿಲ್ಲ. ಅವರಿಂದ ನನಗೆ ಬಹಳ ನಷ್ಟವಾಗಿದೆ. ಚಿತ್ರ ಬಿಡುಗಡೆಯ ಸಮಯದಲ್ಲಿ ನಮ್ಮ ಜೊತೆ ಅವರು ನಿಂತಿಲ್ಲ. ಹೇಳಿದ ದುಡ್ಡಿಗಿಂತ ಹೆಚ್ಚು ಖರ್ಚು ಮಾಡಿಸಿದ್ದಾರೆ. ಅದರಿಂದ ನನಗೆ ತುಂಬಾ ಅನಾನುಕೂಲವಾಗಿದೆ. ಯಾವ ಹೊಸ ನಿರ್ಮಾಪಕರಿಗೂ ಈ ರೀತಿ ಆಗಬಾರದು. ಎಚ್ಚರವಹಿಸಿ. ನನ್ನ ತಾಯಿ ಹಾಗೂ ನನ್ನ ಅನೇಕ ಸ್ನೇಹಿತರ ಸಹಾಯದಿಂದ ಚಿತ್ರವನ್ನು ಮೇ 3 ರಂದು ಬಿಡುಗಡೆ ಮಾಡುತ್ತಿದ್ದೇನೆ. ಚಿತ್ರ ಚೆನ್ನಾಗಿ ಬಂದಿದೆ. ಎಲ್ಕರೂ ನೋಡಿ ಪ್ರೋತ್ಸಾಹಿಸಿ ಎಂದರು.

    ಚಿತ್ರದಲ್ಲಿ ನಾಯಕಿ ಶ್ರೀಜಿತ ಘೋಶ್, ನಟ ಸೀತಾರಾಮ್, ನಟಿ ಪ್ರೀತಿ ಗೌಡ, ಸಹ ನಿರ್ಮಾಪಕರಾದ ಮಂಜುನಾಥ್ ಕಪೂರ್,  ಚಂದ್ರಶೇಖರ್ ರೆಡ್ಡಿ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ಕುರಿತು ಮಾತನಾಡಿದರು. ರಾಜೀವ್ ಹನು, ಶ್ರೀಜಿತ ಘೋಶ್,  ಡೈನಾಮಿಕ್ ಸ್ಟಾರ್ ದೇವರಾಜ್, ತಾರಾ, ಸುಚೇಂದ್ರ ಪ್ರಸಾದ್, ಬ್ರಹ್ಮಾನಂದಂ, ಅಲಿ, ಸಾಧುಕೋಕಿಲ, ಮಂಜು ಪಾವಗಡ, ಶೈನಿಂಗ್ ಸೀತರಾಮ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

  • ‘ಉಸಿರೇ ಉಸಿರೇ’ ಚಿತ್ರದ ಟ್ರೈಲರ್ ರಿಲೀಸ್ ಮಾಡಿದ ಕಿಚ್ಚ ಸುದೀಪ್

    ‘ಉಸಿರೇ ಉಸಿರೇ’ ಚಿತ್ರದ ಟ್ರೈಲರ್ ರಿಲೀಸ್ ಮಾಡಿದ ಕಿಚ್ಚ ಸುದೀಪ್

    ಪ್ರದೀಪ್ ಯಾದವ್ ನಿರ್ಮಾಣದ, ಸಿ.ಎಂ.ವಿಜಯ್ ನಿರ್ದೇಶನದ ಹಾಗೂ ಬಿಗ್ ಬಾಸ್ ಖ್ಯಾತಿಯ ರಾಜೀವ್ (Rajeev) ಹನು ನಾಯಕನಾಗಿ ನಟಿಸಿರುವ ‘ಉಸಿರೇ ಉಸಿರೇ’ (Usire Usire) ಚಿತ್ರದ ಟ್ರೈಲರ್ (Trailer) ಇತ್ತೀಚಿಗೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Sudeep) ಅವರಿಂದ ಅನಾವರಣವಾಯಿತು.

    ಟ್ರೈಲರ್ ಬಿಡುಗಡೆ ಮಾಡಿ ಮಾತನಾಡಿದ ಕಿಚ್ಚ ಸುದೀಪ್, ಉಸಿರೇ ಉಸಿರೇ ನನ್ನ ಗೆಳೆಯ ರಾಜೀವ್ ನಾಯಕನಾಗಿ ನಟಿಸಿರುವ ಚಿತ್ರ. ಟ್ರೈಲರ್ ಚೆನ್ನಾಗಿದೆ. ದೇವರಾಜ್, ತಾರಾ, ಬ್ರಹ್ಮಾನಂದಂ, ಅಲಿ ಮುಂತಾದ ಹಿರಿಯ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ‌. ನಾನು ಕೂಡ ಈ ಚಿತ್ರದಲ್ಲಿ ನಾನು ಕೂಡ ಅಭಿನಯಿಸಿದ್ದೇನೆ. ನಿರ್ಮಾಪಕ ಪ್ರದೀಪ್ ಯಾದವ್, ನಿರ್ದೇಶಕ ಸಿ.ಎಂ.ವಿಜಯ್ ಹಾಗೂ ನಾಯಕ ರಾಜೀವ್ ಸಾಕಷ್ಟು ಶ್ರಮಪಟ್ಟು ಉತ್ತಮವಾದ ಚಿತ್ರ ಮಾಡಿದ್ದಾರೆ. ಸದ್ಯದಲ್ಲೇ ಬಿಡುಗಡೆಯಾಗಲಿರುವ ಈ ಚಿತ್ರವನ್ನು ತಾವೆಲ್ಲ ನೋಡಿ ಪ್ರೋತ್ಸಾಹಿಸಿ ಎಂದರು.

    ನಮ್ಮ ಚಿತ್ರದ ಹೆಸರು ಉಸಿರೇ ಉಸಿರೇ. ನನ್ನ ಉಸಿರು ಸುದೀಪ್ ಸರ್. ಅವರ ಕಂಡರೆ ನನಗೆ ಅಷ್ಟು ಪ್ರೀತಿ. ಅವರು ನನಗೆ ನೀಡುತ್ತಿರುವ ಸಹಕಾರಕ್ಕೆ ನಾನು ಆಬಾರಿ. ಇಡೀ ಚಿತ್ರತಂಡದ ಶ್ರಮದಿಂದ ಒಂದೊಳ್ಳೆ ಚಿತ್ರ ನಿರ್ಮಾಣವಾಗಿದೆ. ಇಂದು ಟ್ರೇಲರ್ ಬಿಡುಗಡೆಯಾಗಿದೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ ಎನ್ನುತ್ತಾರೆ ನಾಯಕ ರಾಜೀವ್. ನನಗೆ ಬಾಲಿವುಡ್ ನಲ್ಲಿ ಶಾರುಖ್ ಖಾನ್‌ ಪರಿಚಯ. ಸ್ಯಾಂಡಲ್ ವುಡ್ ನಲ್ಲಿ ಕಿಚ್ಚ ಸುದೀಪ್ ಪರಿಚಯ ಎಂದು ಮಾತನಾಡಿದ ಹಿರಿಯ ನಟ ಅಲಿ, ಈ ಚಿತ್ರದಲ್ಲಿ ನನ್ನ, ಬ್ರಹ್ಮಾನಂದಂ, ಸಾಧುಕೋಕಿಲ ಹಾಗೂ ಮಂಜು ಪಾವಗಡ ಅವರ ಕಾಂಬಿನೇಶನ್ ನಲ್ಲಿ ಹಾಸ್ಯ ಸನಿವೇಶಗಳು ಚೆನ್ನಾಗಿ ಬಂದಿದೆ ಎಂದು ತಿಳಿಸಿದರು.

    ನಮ್ಮ ಚಿತ್ರದ ಆರಂಭದ ದಿನದಿಂದಲೂ ಸುದೀಪ್ ಅವರು ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ವಿಶೇಷ ಪಾತ್ರದಲ್ಲಿ ಅಭಿನಯ ಕೂಡ ಮಾಡಿದ್ದಾರೆ. ಅವರಿಗೆ ಧನ್ಯವಾದ. ಮೊದಲ ಬಾರಿಗೆ ಕನ್ನಡದಲ್ಲಿ ಖ್ಯಾತ ನಟರಾದ ಬ್ರಹ್ಮಾನಂದಂ ಹಾಗೂ ಅಲಿ ಅವರು ಒಟ್ಟಾಗಿ ಅಭಿನಯಿಸಿದ್ದಾರೆ. ರಾಜೀವ್, ಶ್ರೀಜಿತ ಘೋಶ್,  ಡೈನಾಮಿಕ್ ಸ್ಟಾರ್ ದೇವರಾಜ್, ತಾರಾ, ಸುಚೇಂದ್ರ ಪ್ರಸಾದ್, ಸಾಧುಕೋಕಿಲ, ಮಂಜು ಪಾವಗಡ, ಶೈನಿಂಗ್ ಸೀತರಾಮ್ ಮುಂತಾದವರು ನಮ್ಮ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಸದ್ಯದಲ್ಲೇ ಚಿತ್ರದ ಬಿಡುಗಡೆ ದಿನಾಂಕವನ್ನು ತಿಳಿಸುವುದಾಗಿ ನಿರ್ಮಾಪಕ ಪ್ರದೀಪ್ ಯಾದವ್ ಹೇಳಿದರು.

    ಸುದೀಪ್ ಸರ್ ಅವರ‌ ಮುಂದೆ ನನಗೆ ಮಾತೇ ಬರುತ್ತಿಲ್ಲ. ಇಡೀ ತಂಡದ ಸಹಕಾರದಿಂದ ಉಸಿರೇ ಉಸಿರೇ ಉತ್ತಮವಾಗಿ ಮೂಡಿಬಂದಿದೆ ಎಂದರು ನಿರ್ದೇಶಕ ಸಿ.ಎಂ.ವಿಜಯ್.ಚಿತ್ರದಲ್ಲಿ ನನ್ನ ಪಾತ್ರ ಚೆನ್ನಾಗಿದೆ ಎಂದರು ನಾಯಕಿ ಶ್ರೀಜಿತ ಘೋಶ್. ಜಗಮಗಿಸುವ ವೇದಿಕೆಯಲ್ಲಿ ನಡೆದ ವರ್ಣರಂಜಿತ ಈ ಸಮಾರಂಭಕ್ಕೆ ಸಾಕಷ್ಟು ಸಂಖ್ಯೆಯ ಗಣ್ಯರು ಹಾಗೂ ಅಭಿಮಾನಿಗಳು ಸಾಕ್ಷಿಯಾದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬ್ಯುಸಿ ನಡುವೆಯೂ ‘ಉಸಿರೇ ಉಸಿರೇ’ ಚಿತ್ರದ ಡಬ್ಬಿಂಗ್ ಮುಗಿಸಿದ ಕಿಚ್ಚ

    ಬ್ಯುಸಿ ನಡುವೆಯೂ ‘ಉಸಿರೇ ಉಸಿರೇ’ ಚಿತ್ರದ ಡಬ್ಬಿಂಗ್ ಮುಗಿಸಿದ ಕಿಚ್ಚ

    ಸಿರೇ ಉಸಿರೇ (Usire Usire) ಚಿತ್ರದ ಪ್ರಮುಖಪಾತ್ರದಲ್ಲಿ ಅಭಿನಯಿಸಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kiccha Sudeep) ತಮ್ಮ ಹುಟ್ಟು ಹಬ್ಬದ ಹಿಂದಿನ ದಿನವೇ ಈ ಚಿತ್ರದ ಡಬ್ಬಿಂಗ್ (Dubbing) ಮುಗಿಸಿಕೊಟ್ಟಿದ್ದಾರೆ. ಇದೊಂದು ನವೀರದ ಪ್ರೇಮಕಥೆ ಎನ್ನುವ ನಿರ್ಮಾಪಕ ಪ್ರದೀಪ್ ಯಾದವ್,  ಇದು ನನ್ನ ಮೊದಲ ನಿರ್ಮಾಣದ ಚಿತ್ರ.‌ ನಾನು ಚಿತ್ರ ನಿರ್ಮಾಣ ಮಾಡಲು ಕಿಚ್ಚ ಸುದೀಪ್ ಅವರೆ ಸ್ಫೂರ್ತಿ. ಅವರು ನನ್ನ ಬೆನ್ನೆಲುಬಾಗಿ ನಿಂತರು ಹಾಗೂ ಪ್ರಮುಖಪಾತ್ರದಲ್ಲಿ ಅಭಿನಯ ಕೂಡ ಮಾಡಿದ್ದಾರೆ. ಸುದೀಪ್ ಅವರಿಗೆ ಹಾಗೂ ನನ್ನ ಇಡೀ ತಂಡಕ್ಕೆ ಧನ್ಯವಾದ ತಿಳಿಸುತ್ತಾರೆ.

    ಚಿತ್ರದ ಚಿತ್ರೀಕರಣ ಮುಕ್ತಾಯವಾಗಿ, ಪೋಸ್ಟ್ ಪ್ರೊಡಕ್ಷನ್ ವರ್ಕ್ ನಡೆಯುತ್ತಿದೆ. ಎಲ್ಲಾ ಅಂದುಕೊಂಡಂತೆ ನಡೆದರೆ ಅಕ್ಟೋಬರ್ ನಲ್ಲಿ ತೆರೆಗೆ ಬರುವ ಸಾಧ್ಯತೆಗಳಿವೆ.  ಉಸಿರೇ ಉಸಿರೇ ಚಿತ್ರದಲ್ಲಿ ಕಲಾವಿದರ ದಂಡೇ ಇದೆ. ರಾಜೀವ್ (Rajeev) ಅವರಿಗೆ ನಾಯಕಿಯಾಗಿ ಶ್ರೀಜಿತ ನಟಿಸಿದ್ದಾರೆ. ಕಿಚ್ಚ ಸುದೀಪ್ ವಿಶೇಷಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ:Bigg Boss Kannada 10 ಆರಂಭ- ಈ 3 ಸೀರಿಯಲ್‌ಗೆ ಗೇಟ್ ಪಾಸ್

    ತೆಲುಗಿನ ಖ್ಯಾತ ನಟರಾದ ಆಲಿ ಹಾಗೂ ಪದ್ಮಭೂಷಣ ಪ್ರಶಸ್ತಿ ವಿಜೇತರು, ಅತೀ ಹೆಚ್ಚು ಸಿನಿಮಾಗಳಲ್ಲಿ ನಟಿಸಿ  ಗಿನ್ನಿಸ್ ರೆಕಾರ್ಡ್ ಮಾಡಿರುವ ಬ್ರಹ್ಮಾನಂದಂ ಮೊದಲ ಬಾರಿಗೆ ಈ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಡೈನಾಮಿಕ್ ಸ್ಟಾರ್ ದೇವರಾಜ್, ಸಾಧುಕೋಕಿಲ, ಮಂಜು ಪಾವಗಡ, ತಾರಾ, ಸುಚೇಂದ್ರ ಪ್ರಸಾದ್, ರಾಜೇಶ್ ನಟರಂಗ, ಶೈನಿಂಗ್ ಸೀತಾರಾಮು,ಜಗಪ್ಪ, ಸುಶ್ಮಿತಾ  ಮುಂತಾದವರ ತಾರಾಬಳಗವಿದೆ.

     

    ಸಿ.ಎಂ.ವಿಜಯ್ (C.M. Vijay) ಅವರ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬಂದಿದ್ದು,  ಮನು ಛಾಯಾಗ್ರಹಣ, ಕೆ ಎಂ ಪ್ರಕಾಶ್ ಸಂಕಲನ, ಟೈಗರ್ ಶಿವು ಸಾಹಸ ನಿರ್ದೇಶನ ಹಾಗೂ ಮೋಹನ್ ಮತ್ತು ಹೈಟ್ ಮಂಜು ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದ್ದು, ವಿವೇಕ್ ಚಕ್ರವರ್ತಿ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಜೀವ್ ಅಭಿನಯದ ‘ಉಸಿರೇ ಉಸಿರೇ ಚಿತ್ರದ ಫಸ್ಟ್ ಸಾಂಗ್ ರಿಲೀಸ್

    ರಾಜೀವ್ ಅಭಿನಯದ ‘ಉಸಿರೇ ಉಸಿರೇ ಚಿತ್ರದ ಫಸ್ಟ್ ಸಾಂಗ್ ರಿಲೀಸ್

    ಬಿಗ್ ಬಾಸ್ ಖ್ಯಾತಿಯ ನಟ ರಾಜೀವ್ (Rajeev) ನಾಯಕರಾಗಿ ನಟಿಸಿರುವ  ‘ಉಸಿರೇ ಉಸಿರೇ’ (Usire Usire) ಚಿತ್ರಕ್ಕಾಗಿ ಪ್ರೇಮಕವಿ ಕೆ.ಕಲ್ಯಾಣ್ ಬರೆದಿರುವ ಉಸಿರೇ ನನ್ನ ಉಸಿರೇ ಎಂಬ ಚಿತ್ರದ ಮೊದಲ ಹಾಡು (Song) ಇತ್ತೀಚೆಗೆ ಬಿಡುಗಡೆಯಾಯಿತು. ವಿವೇಕ್ ಚಕ್ರವರ್ತಿ ಸಂಗೀತ ನೀಡಿರುವ ಹಾಗೂ ವಾಸುಕಿ ವೈಭವ್ ಹಾಡಿರುವ ಈ ಹಾಡನ್ನು  ಖ್ಯಾತ ಸಂಗೀತ ನಿರ್ದೇಶಕ, ಗಾಯಕ ಗುರುಕಿರಣ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ ಹರೀಶ್ ಹಾಗೂ ವಿಷ್ಣು ಭಟ್ ಬಿಡುಗಡೆ ಮಾಡಿದರು.

    ಇದೊಂದು ನವೀರದ ಪ್ರೇಮಕಥೆ. ಪ್ರೀತಿಗೆ ಜಾತಿಯಿಲ್ಲ ಎಂದು ಸಾರುವ ಕಥೆ ಎಂದು ಮಾತು ಪ್ರಾರಂಭಿಸಿದ ನಾಯಕ ರಾಜೀವ್, ಉಸಿರೇ ಉಸಿರೇ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ‌. ಇತ್ತೀಚೆಗೆ ಬಳ್ಳಾರಿಯ ರೇಣುಕಾಂಬ ಜಾತ್ರೆಯಲ್ಲಿ ಹಾಗೂ ಮಂತ್ರಾಲಯದ ಗುರು ಸಾರ್ವಭೌಮರ ಸನ್ನಿಧಿಯಲ್ಲಿ ಚಿತ್ರದ ಟೀಸರ್ ಬಿಡುಗಡೆ‌ ಮಾಡಿದ್ದೆವು. ಇಂದು ಮೊದಲ ಹಾಡು ಬಿಡುಗಡೆಯಾಗಿದೆ. ಎಲ್ಲರೂ ಸಾಮಾನ್ಯವಾಗಿ ಮೊದಲು ಡ್ಯುಯೆಟ್ ಸಾಂಗ್ ಬಿಡುಗಡೆ ಮಾಡುತ್ತಾರೆ. ಆದರೆ ನಾವು ಪ್ಯಾಥೋ ಸಾಂಗ್ ಬಿಡುಗಡೆ ಮಾಡಿದ್ದೇವೆ. ಈ ಹಾಡನ್ನು ಮೊದಲು ಬಿಡುಗಡೆ ಮಾಡಲು ಕಾರಣವೆಂದರೆ, ಈ ಹಾಡಿನಲ್ಲಿ ಇಡೀ ಚಿತ್ರದ ಕಥೆಯಿದೆ. ಹಾಡನ್ನು ಗಮನವಿಟ್ಟು ಕೇಳಿದಾಗ ನಮ್ಮ ಚಿತ್ರದ ಕಥೆ ಅರ್ಥವಾಗುತ್ತದೆ. ಈ ಹಾಡನ್ನು ಬಿಡುಗಡೆ ಮಾಡಿಕೊಟ್ಟ ಗುರುಕಿರಣ್, ಭಾ.ಮ.ಹರೀಶ್ ಹಾಗೂ ವಿಷ್ಣು ಭಟ್ ಅವರಿಗೆ ಧನ್ಯವಾದ ತಿಳಿಸಿದರು.

    ಇದು ನನ್ನ ಮೊದಲ ನಿರ್ಮಾಣದ ಚಿತ್ರ.‌ ನಾನು ಚಿತ್ರ ನಿರ್ಮಾಣ ಮಾಡಲು ಕಿಚ್ಚ ಸುದೀಪ್ (Kiccha Sudeep)ಅವರೆ ಸ್ಫೂರ್ತಿ. ಅವರು ನನ್ನ ಬೆನ್ನೆಲುಬಾಗಿ ನಿಂತರು ಹಾಗೂ ಪ್ರಮುಖಪಾತ್ರದಲ್ಲಿ ಅಭಿನಯ ಕೂಡ ಮಾಡಿದ್ದಾರೆ. ಕ್ಲೈಮ್ಯಾಕ್ಸ್ ನಲ್ಲಿ ಸುದೀಪ್ ಅವರ ಅಭಿನಯದ ಸನ್ನಿವೇಶಗಳು ಸುಮಾರು 18 ನಿಮಿಷಗಳು ಬರುತ್ತದೆ‌. ಸುದೀಪ್ ಅವರಿಗೆ ಹಾಗೂ ನನ್ನ ಇಡೀ ತಂಡಕ್ಕೆ ಧನ್ಯವಾದ ಎಂದರು ನಿರ್ಮಾಪಕ ಪ್ರದೀಪ್ ಯಾದವ್. ಇದನ್ನೂ ಓದಿ:ದಕ್ಷಿಣದ ಸಿನಿಮಾಗಳಲ್ಲಿ ಸಂಜಯ್ ದತ್ ಬ್ಯುಸಿ

    ನಮ್ಮ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿ, ಪೋಸ್ಟ್ ಪ್ರೊಡಕ್ಷನ್ ವರ್ಕ್ ನಡೆಯುತ್ತಿದೆ. ಸೆಪ್ಟೆಂಬರ್ ನಲ್ಲಿ ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ. ರಾಜೀವ್ ಅವರಿಗೆ ನಾಯಕಿಯಾಗಿ ಶ್ರೀಜಿತ ನಟಿಸಿದ್ದಾರೆ. ಕಿಚ್ಚ ಸುದೀಪ್ ವಿಶೇಷಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ತೆಲುಗಿನ ಖ್ಯಾತ ನಟರಾದ ಆಲಿ ಹಾಗೂ ಪದ್ಮಭೂಷಣ ಪ್ರಶಸ್ತಿ ವಿಜೇತರು, ಅತೀ ಹೆಚ್ಚು ಸಿನಿಮಾಗಳಲ್ಲಿ ನಟಿಸಿ  ಗಿನ್ನಿಸ್ ರೆಕಾರ್ಡ್ ಮಾಡಿರುವ ಬ್ರಹ್ಮಾನಂದಂ ಮೊದಲ ಬಾರಿಗೆ ನಮ್ಮ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದಾರೆ.

     

    ಡೈನಾಮಿಕ್ ಸ್ಟಾರ್ ದೇವರಾಜ್, ಸಾಧುಕೋಕಿಲ, ಮಂಜು ಪಾವಗಡ, ತಾರಾ, ಸುಚೇಂದ್ರ ಪ್ರಸಾದ್, ರಾಜೇಶ್ ನಟರಂಗ, ಶೈನಿಂಗ್ ಸೀತಾರಾಮು, ಜಗಪ್ಪ, ಸುಶ್ಮಿತಾ ಇನ್ನೂ ಮುಂತಾದವರ ತಾರಾಬಳಗವಿದೆ. ಇಂದು ಮೊದಲ ಹಾಡು ಬಿಡುಗಡೆಯಾಗಿದೆ. ಮುಂದೆ  ಉಳಿದ ಹಾಡುಗಳು ಹಾಗೂ ಟ್ರೇಲರ್ ಸಹ ಬಿಡುಗಡೆಯಾಗಲಿದೆ ಎಂದು ನಿರ್ದೇಶಕ ಸಿ.ಎಂ.ವಿಜಯ್ (CM Vijay)ತಿಳಿಸಿದರು. ನಾಯಕಿ ಶ್ರೀಜಿತ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಹಾಡುಗಳ ಕುರಿತು ವಿವೇಕ್ ಚಕ್ರವರ್ತಿ ಮಾಹಿತಿ ನೀಡಿದರು. ನಿರ್ಮಾಪಕರ ತಾಯಿ ಪ್ರಮಿಳಾ ಅವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಯರ ಸನ್ನಿಧಿಯಲ್ಲಿ ‘ಉಸಿರೇ ಉಸಿರೇ’ ಚಿತ್ರದ ಟೀಸರ್ ರಿಲೀಸ್

    ರಾಯರ ಸನ್ನಿಧಿಯಲ್ಲಿ ‘ಉಸಿರೇ ಉಸಿರೇ’ ಚಿತ್ರದ ಟೀಸರ್ ರಿಲೀಸ್

    ಸಿರೇ.. ಉಸಿರೇ… (Usire Usire) ಸದ್ಯ ಹಲವಾರು ವಿಶೇಷತೆಗಳಿಂದ  ಸದ್ದು ಮಾಡುತ್ತಾ ಪ್ರೇಕ್ಷಕರ ಕುತೂಹಲ ಮುಡಿಸುತ್ತಿರುವ ಚಿತ್ರ. ಎನ್.ಗೊಂಬೆ ಲಾಂಛನದಲ್ಲಿ ಪ್ರದೀಪ್ ಯಾದವ್ ನಿರ್ಮಾಣದ ಸಿ.ಎಂ. ವಿಜಯ್ ನಿರ್ದೇಶನದ ಈ ಚಿತ್ರಕ್ಕೆ ಕಿಚ್ಚ ಸುದೀಪ್ (Sudeep) ಎಂಟ್ರಿಯಾಗುತ್ತಲೇ ಚಿತ್ರಕ್ಕೆ ಹೈ ವೋಲ್ಟೇಜ್ ಸಿಕ್ಕಿತ್ತು. ಈಗಾಗಲೇ ಉಸಿರೇ ಉಸಿರೇ ಚಿತ್ರದ ಟೀಸರ್ (Teaser) ಒಂದನ್ನು ಬಿಡುಗಡೆ ಮಾಡಿ ಪ್ರೇಕ್ಷಕರ ಹೃದಯ ಬಡಿತವನ್ನು ಹೆಚ್ಚು ಮಾಡಿದೆ.

    ಇತ್ತೀಚೆಗೆ ಈ ಚಿತ್ರದ ಟೀಸರ್ ಬಳ್ಳಾರಿ ಶ್ರೀ ರೇಣುಕಾ ಎಲ್ಲಮ್ಮ ಜಾತ್ರೆಯಲ್ಲಿ‌‌ ಸುಮಾರು ಹತ್ತು ಸಾವಿರಕ್ಕೂ ಅಧಿಕ ಜನರ ಸಮ್ಮುಖದಲ್ಲಿ ಸದ್ಗುರು ಜುಮಾರಿ ತಾತಾಯ್ಯ ಅವರು ಈ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಅಂದು ಸಂಜೆ ಮಂತ್ರಾಲಯದ ಗುರು ಸಾರ್ವಭೌಮರ ಸನ್ನಿಧಿಯಲ್ಲಿ ಸುಬುಧೇಂದ್ರ ತೀರ್ಥರು ಟೀಸರ್ ಬಿಡುಗಡೆ ಮಾಡಿ ಆಶೀರ್ವಾದಿಸಿದ್ದಾರೆ. ನಾಯಕ ಬಿಗ್ ಬಾಸ್ ಖ್ಯಾತಿಯ ರಾಜೀವ್ (Rajeev), ನಾಯಕಿ ಶ್ರೀಜಿತ ಹಾಗೂ ನಿರ್ದೇಶಕ ಸಿ.ಎಂ.ವಿಜಯ್ ಮುಂತಾದ ಚಿತ್ರತಂಡದ ಸದಸ್ಯರು ಉಪಸ್ಥಿತರಿದ್ದರು. ಟೀಸರ್ ಬಿಡುಗಡೆಯಾಗಿ ಎರಡು ದಿನಗಳಲ್ಲಿ ಒಂದು ಮಿಲಿಯನ್ ಗೂ ಅಧಿಕ ವೀಕ್ಷಣೆಯಾಗಿ, ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಇದನ್ನೂ ಓದಿ:ಗಂಡು ಮಗುವಿಗೆ ಜನ್ಮ ನೀಡಿದ ರಾಧಿಕಾ ರಾವ್

    ಈಗಾಗಲೇ ಟೀಸರ್ ನಲ್ಲಿರುವ ಸಂಗೀತ, ಹೀರೊ ಎಂಟ್ರಿ ಆಲಿ ಬ್ರಹ್ಮನಂದಂ ಕಾಮಿಡಿ ದೇವರಾಜ್ ಅವರ ಪಾತ್ರ ಹಾಗೂ ಸಂಭಾಷಣೆ ಪ್ರೇಕ್ಷಕರ ಮನಸನ್ನು ದೋಚಿ ಒಂದೇ ದಿನದಲ್ಲಿ ಒಂದು ಮಿಲಿಯನ್ ಗೂ ಹೆಚ್ಚು ವೀಕ್ಷಣೆ ಪಡೆದಿದೆ.  ಬಿಗ್ ಬಾಸ್ ಖ್ಯಾತಿಯ ರಾಜೀವ್ (Rajeev) ಈ ಚಿತ್ರದ ನಾಯಕ. ಶ್ರೀಜಿತ  (Sreejith) ನಾಯಕಿ.

    ತಾರಾ, ಸುಚೇಂದ್ರ ಪ್ರಸಾದ್, ರಾಜೇಶ್ ನಟರಂಗ, ಆಲಿ, ಬ್ರಹ್ಮಾನಂದಂ,ಸಾಧುಕೋಕಿಲ, ದೇವರಾಜ್, ಮಂಜು ಪಾವಗಡ, ಜಗಪ್ಪ, ಶಿವು, ಸುಶ್ಮಿತಾ ಹಾಗೂ ಕಿಚ್ಚ ಸುದೀಪ ಮುಂತಾದವರು ತಾರಾಬಳಗದಲ್ಲಿದ್ದಾರೆ.  ಸಿ.ಎಂ.ವಿಜಯ್ ನಿರ್ದೇಶನದ ಈ ಚಿತ್ರಕ್ಕೆ  ಮನು ಬಿ ಕೆ ಛಾಯಾಗ್ರಹಣ, ಕೆ ಎಂ ಪ್ರಕಾಶ್ ಸಂಕಲನ, ಟೈಗರ್ ಶಿವು ಸಾಹಸ ನಿರ್ದೇಶನ ಹಾಗೂ ಮೋಹನ್ ಮತ್ತು ಹೈಟ್ ಮಂಜು ಅವರ ನೃತ್ಯ ನಿರ್ದೇಶನವಿದೆ ವಿವೇಕ್ ಚಕ್ರವರ್ತಿಯ ಸಂಗೀತವಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚುನಾವಣೆ ಗದ್ದಲದ ನಡುವೆ ಸೈಲೆಂಟ್ ಆಗಿ ಶೂಟಿಂಗ್ ನಲ್ಲಿ ಭಾಗಿಯಾದ ಕಿಚ್ಚ ಸುದೀಪ್

    ಚುನಾವಣೆ ಗದ್ದಲದ ನಡುವೆ ಸೈಲೆಂಟ್ ಆಗಿ ಶೂಟಿಂಗ್ ನಲ್ಲಿ ಭಾಗಿಯಾದ ಕಿಚ್ಚ ಸುದೀಪ್

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರ ಪ್ರಚಾರ ಮಾಡುವುದಾಗಿ ರಾಜಕೀಯ ಕಣಕ್ಕೆ ಇಳಿದಿರುವ ಸುದೀಪ್ (Kiccha Sudeep), ಅನೇಕರಿಂದ ಟೀಕೆಗಳನ್ನು ಎದುರಿಸುತ್ತಿದ್ದಾರೆ. ಮತ್ತೊಂದು ಕಡೆ ಖಾಸಗಿ ವಿಡಿಯೋ ಹರಿಬಿಡುವುದಾಗಿ ಬೆದರಿಕೆ. ಈ ಎಲ್ಲದರ ನಡುವೆ ಸುದೀಪ್ ತಣ್ಣಗೆ ಚಿತ್ರೀಕರಣ (Shooting) ಸ್ಥಳಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಪ್ರದೀಪ್ ಯಾದವ್ ನಿರ್ಮಾಣದ ಹಾಗೂ ಸಿ.ಎಂ ವಿಜಯ್ ನಿರ್ದೇಶನದ ‘ಉಸಿರೇ ಉಸಿರೇ’ (Usire Usire) ಚಿತ್ರದಲ್ಲಿ ಕಿಚ್ಚ ಸುದೀಪ್ ಅಭಿನಯಿಸುತ್ತಿದ್ದಾರೆ.

    ಈಗಾಗಲೇ ‘ಉಸಿರೇ ಉಸಿರೇ’ ಚಿತ್ರದ ಕೊನೆಯ ಹಂತದ ಚಿತ್ರೀಕರಣ ನಡೆಯುತ್ತಿದ್ದು, ಚಿತ್ರದ ಪ್ರಮುಖ ಪಾತ್ರವೊಂದರಲ್ಲಿ ಕಿಚ್ಚ ಸುದೀಪ್ ನಟಿಸುತ್ತಿದ್ದಾರೆ. ಕೊನೆಯ ಹಂತದ ಚಿತ್ರೀಕರಣದಲ್ಲಿ ಅವರು ಭಾಗಿಯಾಗಿ ತಮ್ಮ ಭಾಗದ ಚಿತ್ರೀಕರಣವನ್ನು ಮುಗಿಸಲಿದ್ದಾರೆ. ಇದನ್ನೂ ಓದಿ: ‘ವಿಷ್ಣುಪ್ರಿಯಾ’ಗಾಗಿ ಕೇರಳದಿಂದ ಹಾರಿಬಂದ ಕಣ್ಸನ್ನೆ ಬೆಡಗಿ ಪ್ರಿಯಾ

    ಬಿಗ್ ಬಾಸ್ ಖ್ಯಾತಿಯ ರಾಜೀವ್ (Rajeev) ಈ ಚಿತ್ರದ ನಾಯಕ. ಶ್ರೀಜಿತ ನಾಯಕಿ. ತಾರಾ, ಸುಚೇಂದ್ರ ಪ್ರಸಾದ್, ರಾಜೇಶ್ ನಟರಂಗ,ಆಲಿ, ಬ್ರಹ್ಮಾನಂದಂ, ಸಾಧುಕೋಕಿಲ, ದೇವರಾಜ್, ಮಂಜು ಪಾವಗಡ, ಜಗಪ್ಪ, ಶಿವು, ಸುಶ್ಮಿತಾ  ಮುಂತಾದವರು ತಾರಾಬಳಗದಲ್ಲಿದ್ದಾರೆ. ಕಿಚ್ಚ ಸುದೀಪ್ ಪ್ರಮುಖಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.

    ಸಿ.ಎಂ.ವಿಜಯ್ ನಿರ್ದೇಶನದ ಈ ಚಿತ್ರಕ್ಕೆ ಮನು ಬಿ ಕೆ ಛಾಯಾಗ್ರಹಣ, ಕೆ ಎಂ ಪ್ರಕಾಶ್ ಸಂಕಲನ, ಟೈಗರ್ ಶಿವು ಸಾಹಸ ನಿರ್ದೇಶನ ಹಾಗೂ ಮೋಹನ್ ಮತ್ತು ಹೈಟ್ ಮಂಜು ಅವರ ನೃತ್ಯ ನಿರ್ದೇಶನವಿದೆ ವಿವೇಕ್ ಚಕ್ರವರ್ತಿ ಅವರ ಸಂಗೀತ ನಿರ್ದೇಶನ ‘ಉಸಿರೇ ಉಸಿರೇ’ ಚಿತ್ರಕ್ಕಿದೆ.

  • ‘ಉಸಿರೇ ಉಸಿರೇ’ ಸಿನಿಮಾದಲ್ಲಿ ನಟಿಸಲಿದ್ದಾರೆ ಕಿಚ್ಚ ಸುದೀಪ್

    ‘ಉಸಿರೇ ಉಸಿರೇ’ ಸಿನಿಮಾದಲ್ಲಿ ನಟಿಸಲಿದ್ದಾರೆ ಕಿಚ್ಚ ಸುದೀಪ್

    ಭಿಮಾನಿಗಳಿಗೆ ಕಿಚ್ಚ ಸುದೀಪ್ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ರಾಜೀವ್ ನಾಯಕನಾಗಿ ನಟಿಸುತ್ತಿರುವ ‘ಉಸಿರೇ ಉಸಿರೇ’ ಚಿತ್ರದಲ್ಲಿ ಅವರು ವಿಶೇಷ ಪಾತ್ರವೊಂದನ್ನು ಮಾಡಲಿದ್ದಾರೆ. ಸದ್ಯ ಈಗಾಗಲೇ ಈ ಚಿತ್ರವು ಕೊನೆಯ ಹಂತದ ಚಿತ್ರೀಕರಣದಲ್ಲಿದ್ದು ಚಿತ್ರದ ಪ್ರಮುಖ ಪಾತ್ರವೊಂದರಲ್ಲಿ ಕಿಚ್ಚ ಸುದೀಪ್ ಚಿತ್ರತಂಡಕ್ಕೆ ಪಾಲ್ಗೊಳ್ಳಲಿದ್ದಾರೆ ಎಂದು ಚಿತ್ರತಂಡ ಹೇಳಿದೆ. ಚಿತ್ರತಂಡವು ಈಗಾಗಲೇ ಅಭಿನಯ ಚಕ್ರವರ್ತಿಯನ್ನು ಭೇಟಿಯಾಗಿದ್ದು ಕಿಚ್ಚ ಕೂಡಾ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

    ‘ಬಿಗ್ ಬಾಸ್’ ಖ್ಯಾತಿಯ ರಾಜೀವ್ ಈ ಚಿತ್ರದ ನಾಯಕ. ಈ ಸಿನಿಮಾದಲ್ಲಿ ಅವರದ್ದು ವಿಭಿನ್ನ ಪಾತ್ರವಂತೆ. ಹೊಸ ರೀತಿಯ ಕಥೆಯನ್ನು ಈ ಸಿನಿಮಾದಲ್ಲಿ ಹೇಳಲಿದ್ದಾರೆ ರಾಜೀವ್. ಈ ಸಿನಿಮಾಗೆ ಶ್ರೀಜಿತ ನಾಯಕಿ. ತಾರಾ, ಸುಚೇಂದ್ರ ಪ್ರಸಾದ್, ರಾಜೇಶ್ ನಟರಂಗ, ಆಲಿ,ಬ್ರಹ್ಮಾನಂದಮ್,ಸಾಧುಕೋಕಿಲ, ದೇವರಾಜ್, ಮಂಜು ಪಾವಗಡ, ಜಗಪ್ಪ, ಶಿವು, ಸುಶ್ಮಿತಾ ಮುಂತಾದವರು ತಾರಾಬಳಗದಲ್ಲಿದ್ದಾರೆ. ಇದನ್ನೂ ಓದಿ: ಬಿಗ್ ಬಾಸ್ ಹೋಸ್ಟ್ ಸ್ಥಾನಕ್ಕೆ ವಿದಾಯ ಹೇಳಿದ ನಟ ನಾಗಾರ್ಜುನ್

    ಸಿ.ಎಂ.ವಿಜಯ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದು,  ಈ ಚಿತ್ರಕ್ಕೆ  ಮನು ಛಾಯಾಗ್ರಹಣ, ಕೆ ಎಂ ಪ್ರಕಾಶ್ ಸಂಕಲನ, ಟೈಗರ್ ಶಿವು ಸಾಹಸ ನಿರ್ದೇಶನ ಹಾಗೂ ಮೋಹನ್ ಮತ್ತು ಹೈಟ್ ಮಂಜು ಅವರ ನೃತ್ಯ ನಿರ್ದೇಶನವಿದೆ ವಿವೇಕ್ ಚಕ್ರವರ್ತಿಯ ಸಂಗೀತವಿದೆ. ಸದ್ಯದಲ್ಲೇ ಕಿಚ್ಚ ಸುದೀಪ್ ಅವರು ಚಿತ್ರೀಕರಣದಲ್ಲೂ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಡೈನಾಮಿಕ್ ಸ್ಟಾರ್ ದೇವರಾಜ್ ಹುಟ್ಟುಹಬ್ಬವನ್ನು ವಿಶಿಷ್ಟ್ಯವಾಗಿ ಆಚರಿಸಿದ ‘ಉಸಿರೇ ಉಸಿರೇ’ ಟೀಮ್

    ಡೈನಾಮಿಕ್ ಸ್ಟಾರ್ ದೇವರಾಜ್ ಹುಟ್ಟುಹಬ್ಬವನ್ನು ವಿಶಿಷ್ಟ್ಯವಾಗಿ ಆಚರಿಸಿದ ‘ಉಸಿರೇ ಉಸಿರೇ’ ಟೀಮ್

    ಪ್ರದೀಪ್ ಯಾದವ್ ನಿರ್ಮಾಣದ “ಉಸಿರೇ ಉಸಿರೇ” (Usire Usire) ಚಿತ್ರದಲ್ಲಿ  ಡೈನಾಮಿಕ್ ಸ್ಟಾರ್ ದೇವರಾಜ್ (Devraj) ಅಭಿನಯಿಸುತ್ತಿದ್ದಾರೆ.  “ಉಸಿರೇ ಉಸಿರೇ” ಚಿತ್ರತಂಡದಿಂದ ದೇವರಾಜ್ ಅವರ ಹುಟ್ಟುಹಬ್ಬವನ್ನು (birthday) ಆಚರಿಸಲಾಯಿತು. ಇದೇ ಸಂದರ್ಭದಲ್ಲಿ “ಉಸಿರೇ ಉಸಿರೇ” ಚಿತ್ರದಲ್ಲಿನ ದೇವರಾಜ್ ರವರ ವಿಭಿನ್ನ ಪಾತ್ರದಲ್ಲಿನ ಪೋಸ್ಟರ್ ಮತ್ತು ಮೇಕಿಂಗ್ ವಿಡಿಯೋ ಒಂದನ್ನು ಬಿಡುಗಡೆ ಮಾಡಲಾಯಿತು.

    “ಬಿಗ್ ಬಾಸ್” ಖ್ಯಾತಿಯ ರಾಜೀವ್ (Rajeev) ಈ ಚಿತ್ರದ ನಾಯಕ. ಶ್ರೀಜಿತ ನಾಯಕಿ. ತಾರಾ, ಸುಚೇಂದ್ರ ಪ್ರಸಾದ್, ರಾಜೇಶ್ ನಟರಂಗ, ಆಲಿ,ಬ್ರಹ್ಮಾನಂದಮ್,ಸಾಧುಕೋಕಿಲ, ದೇವರಾಜ್, ಮಂಜು ಪಾವಗಡ, ಜಗಪ್ಪ, ಶಿವು, ಸುಶ್ಮಿತಾ ಮುಂತಾದವರು ತಾರಾಬಳಗದಲ್ಲಿದ್ದಾರೆ. ಇದನ್ನೂ ಓದಿ:ನೆಗೆಟಿವ್ ಕಾಮೆಂಟ್ ಗೆ ಹೆದರಲ್ಲ, ತುಂಬಾ ಜನ ನನ್ನನ್ನು ಪ್ರೀತಿಸ್ತಾರೆ ಎಂದ ಸೋನು ಶ್ರೀನಿವಾಸ್ ಗೌಡ

    ಸಿ.ಎಂ.ವಿಜಯ್ (Vijay) ನಿರ್ದೇಶನದ ಈ ಚಿತ್ರಕ್ಕೆ  ಮನು ಛಾಯಾಗ್ರಹಣ, ಕೆ ಎಂ ಪ್ರಕಾಶ್ ಸಂಕಲನ, ಟೈಗರ್ ಶಿವು ಸಾಹಸ ನಿರ್ದೇಶನ ಹಾಗೂ ಮೋಹನ್ ಮತ್ತು ಹೈಟ್ ಮಂಜು ಅವರ ನೃತ್ಯ ನಿರ್ದೇಶನವಿದೆ ವಿವೇಕ್ ಚಕ್ರವರ್ತಿ ಈ ಚಿತ್ರದ ಸಂಗೀತ ನಿರ್ದೇಶಕರು.

    Live Tv
    [brid partner=56869869 player=32851 video=960834 autoplay=true]