Tag: uttar kannada

  • ಮಳೆ ಅಬ್ಬರ – ಮುರುಡೇಶ್ವರದಲ್ಲಿ ಕಡಲ ತೀರಕ್ಕೆ ನಿಷೇಧ

    ಮಳೆ ಅಬ್ಬರ – ಮುರುಡೇಶ್ವರದಲ್ಲಿ ಕಡಲ ತೀರಕ್ಕೆ ನಿಷೇಧ

    – ಮುಟ್ಟಳ್ಳಿಯಲ್ಲಿ 8 ಕುಟುಂಬಗಳ ಸ್ಥಳಾಂತರಕ್ಕೆ ನೋಟಿಸ್

    ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಮಳೆಯ (Rain) ಅಬ್ಬರ ಮುಂದುವರಿದಿದ್ದು, ಜೂ.26ರವರೆಗೂ ಕರಾವಳಿಯಲ್ಲಿ ಹೆಚ್ಚಿನ ಮಳೆಯಾಗುವ ಸೂಚನೆ ನೀಡಿದೆ. ಹಲವು ಕಡೆ ಭೂ ಕುಸಿತವಾಗುವ ಸಾಧ್ಯತೆ ಹಿನ್ನೆಲೆ ಜನವಸತಿ ಪ್ರದೇಶಗಳಲ್ಲಿ ಜನರ ಸ್ಥಳಾಂತರಕ್ಕೆ ಜಿಲ್ಲಾಡಳಿತ ಮುಂದಾಗಿದೆ.

    8 ಕುಟುಂಬಗಳಿಗೆ ಸ್ಥಳಾಂತರ ನೋಟಿಸ್:
    ಭಟ್ಕಳದ (Bhatkal) ಮುಟ್ಟಳ್ಳಿ ಗ್ರಾಮದಲ್ಲಿ ಭೂಕುಸಿತದ ಅಪಾಯ ಹೆಚ್ಚಿದ್ದು, ಬೆಟ್ಟದಂಚಿನ 8 ಕುಟುಂಬಗಳಿಗೆ ಸುರಕ್ಷಿತ ಜಾಗಕ್ಕೆ ಸ್ಥಳಾಂತರಗೊಳ್ಳುವಂತೆ ನೋಟಿಸ್ ಜಾರಿ ಮಾಡಲಾಗಿದೆ. ಮುಟ್ಟಳ್ಳಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ರಾಜೇಶ್ವರಿ ಚಂದಾವರ ನೋಟಿಸ್ ಜಾರಿ ಮಾಡಿದ್ದಾರೆ. ಪ್ರದೇಶವು ವಾಸಕ್ಕೆ ಯೋಗ್ಯವಲ್ಲ ಎಂಬ ವರದಿಯ ಹಿನ್ನೆಲೆ ನೋಟಿಸ್ ನೀಡಲಾಗಿದೆ. ಆದರೆ ಪರ್ಯಾಯ ವ್ಯವಸ್ಥೆಗಳಿಲ್ಲದೆ ಎಲ್ಲಿಗೆ ಹೋಗಬೇಕು ಎಂದು ಸ್ಥಳೀಯ ನಿವಾಸಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ನೋಟಿಸ್ ನೀಡಿದ್ದರಿಂದ ಇದೀಗ ಜನರು ತಮ್ಮ ಸಂಬಂಧಿಗಳ ಮನೆಗೆ ಸ್ಥಳಾಂತರಗೊಳ್ಳುತಿದ್ದು, ಮಳೆ ಮುಗಿಯುವವರೆಗಾದರೂ ಜಿಲ್ಲಾಡಳಿತ ಪರ್ಯಾಯ ವ್ಯವಸ್ಥೆ ಮಾಡುವಂತೆ ಸ್ಥಳೀಯರು ಕೇಳಿಕೊಂಡಿದ್ದಾರೆ. ಇದನ್ನೂ ಓದಿ: ಆಧುನಿಕ ಕರ್ನಾಟಕ ನಿರ್ಮಾಣಕ್ಕೆ ವೀರಶೈವ ಲಿಂಗಾಯತರ ಕೊಡುಗೆ ಅಪಾರ: ಈಶ್ವರ್ ಖಂಡ್ರೆ

    ಮುರುಡೇಶ್ವರ ಕಡಲ ತೀರಕ್ಕೆ ಪ್ರವಾಸಿಗರಿಗೆ ನಿಷೇಧ:
    ಮಳೆಗಾಲ ಪ್ರಾರಂಭದಲ್ಲೇ ಜಿಲ್ಲೆಯ ಪ್ರವಾಸಿ ಸ್ಥಳಗಳಲ್ಲಿ ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿತ್ತು. ಆದರೇ ಭಟ್ಕಳದ ಮುರುಡೇಶ್ವರದಲ್ಲಿ (Murudeshwara) ಪ್ರವಾಸಿಗರು ಹೆಚ್ಚು ಬರುತಿದ್ದು ನಿರ್ಬಂಧವಿದ್ದರೂ ಕಡಲಿಗಿಳಿಯುತಿದ್ದರು. ಈ ಹಿನ್ನೆಲೆ ಜಿಲ್ಲಾಡಳಿತದ ನಿರ್ದೇಶನದ ಮೇರೆಗೆ ಪ್ರವಾಸೋದ್ಯಮ ಇಲಾಖೆ ಮತ್ತು ಗ್ರಾಮ ಪಂಚಾಯತ್ ಮಾವಳ್ಳಿ ಇವರ ಸಹಯೋಗದೊಂದಿಗೆ ಕಡಲ ತೀರದಲ್ಲಿ ಸೂಚನಾ ಫಲಕ ಅಳವಡಿಸಲಾಯಿತು. ಸೆಪ್ಟೆಂಬರ್ ಅಂತ್ಯದವರೆಗೂ ಕಡಲತೀರದಲ್ಲಿ ನಿಷೇಧ ಮುಂದುವರೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದ್ದು, ಕಡಲ ತೀರದಲ್ಲಿ ಪೊಲೀಸರನ್ನು ಸಹ ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ: ಮಕ್ಕಳ ಕಾಲೇಜು ಫೀಸ್‌ಗೆ ಸಾಲ ಮಾಡಿ ತಂದಿಟ್ಟ ಹಣವನ್ನೇ ದೋಚಿದ ಖದೀಮರು

    ಭಟ್ಕಳ ತಾಲೂಕಿನಲ್ಲಿ ಜೋರಾಗಿ ಬೀಸಿದ ಮಳೆಗಾಳಿಯ ರಭಸಕ್ಕೆ ವ್ಯಾಪಕ ಹಾನಿಯಾಗಿದೆ ಎಂದು ಹೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಮೂರ್ನಾಲ್ಕು ದಿನದಿಂದ ಭೀಕರ ಬಿರುಗಾಳಿಯಿಂದಾಗಿ 18ಕ್ಕೂ ಅಧಿಕ ವಿದ್ಯುತ್ ಕಂಬಗಳು ಧರೆಗೆ ಉರುಳಿದ್ದು, ಸುಮಾರು 8 ಲಕ್ಷ ರೂಪಾಯಿಗೂ ಹೆಚ್ಚಿನ ಆರ್ಥಿಕ ನಷ್ಟ ಸಂಭವಿಸಿದೆ. ವಿದ್ಯುತ್ ಕಂಬಗಳು ಮುರಿದು ಬಿದ್ದ ಪರಿಣಾಮ ಹಲವೆಡೆ ವಿದ್ಯುತ್ ಕಡಿತಗೊಂಡಿದ್ದು, ಸ್ಥಳೀಯರಿಗೆ ತೊಂದರೆಯಾಗಿದೆ. ಕಂಬಗಳನ್ನು ಸರಿಪಡಿಸುವ ಕಾರ್ಯ ಚಾಲ್ತಿಯಲ್ಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹೊಸ ದಾಖಲೆಗೆ ಸಿದ್ಧವಾಗ್ತಿದೆ ಕೆಆರ್‌ಎಸ್ – ಡ್ಯಾಂ ಸಂಪೂರ್ಣ ಭರ್ತಿಗೆ 5 ಅಡಿ ಬಾಕಿ

  • ಕಾರವಾರ ಬಂದರು, ನೌಕಾನೆಲೆಯಲ್ಲಿ ಹೈ ಅಲರ್ಟ್ – ಕ್ರೂಶಿಪ್‌ನಲ್ಲಿ ಚೀನಾ, ಪಾಕಿಸ್ತಾನ ಸಿಬ್ಬಂದಿಗೆ ನಿರ್ಬಂಧ

    ಕಾರವಾರ ಬಂದರು, ನೌಕಾನೆಲೆಯಲ್ಲಿ ಹೈ ಅಲರ್ಟ್ – ಕ್ರೂಶಿಪ್‌ನಲ್ಲಿ ಚೀನಾ, ಪಾಕಿಸ್ತಾನ ಸಿಬ್ಬಂದಿಗೆ ನಿರ್ಬಂಧ

    ಕಾರವಾರ: ಪಾಕಿಸ್ತಾನದ ಉಗ್ರರ ನೆಲೆಯ ಮೇಲೆ ಭಾರತ ಆಪರೇಷನ್ ಸಿಂಧೂರ (Operation Sindoor) ಕಾರ್ಯಾಚರಣೆ ಬೆನ್ನಲ್ಲೇ ಕಾರವಾರದಲ್ಲಿ (Karwar) ಕದಂಬ ನೌಕಾನೆಲೆ (Kadamba Naval Base) ಹಾಗೂ ಬಂದರಿನಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

    ಭಾರತೀಯ ತಟರಕ್ಷಕ ದಳ ಕೂಡ ಅರಬ್ಬಿ ಸಮುದ್ರದಲ್ಲಿ ಕೂಂಬಿಗ್ ಕಾರ್ಯಾಚರಣೆ ಹೆಚ್ಚಿಸಿದ್ದು, ಕಾರವಾರದ ಬಂದರಿಗೆ ಬರುವ ಅನ್ಯ ದೇಶದ ಕ್ರೂಶಿಪ್‌ನಲ್ಲಿ ಪಾಕಿಸ್ತಾನ, ಚೀನಾ ದೇಶದ ಸಿಬ್ಬಂದಿಗಳಿದ್ದರೆ ಅಂತಹ ಹಡಗುಗಳಿಗೂ ನಿರ್ಬಂಧ ವಿಧಿಸಲಾಗಿದೆ. ಇದನ್ನೂ ಓದಿ: ರಾಷ್ಟ್ರಪತಿ ಭೇಟಿಯಾಗಿ ‘ಆಪರೇಷನ್‌ ಸಿಂಧೂರ’ ಬಗ್ಗೆ ವಿವರಿಸಿದ ಮೋದಿ

    ಕರಾವಳಿ ಕಾವಲು ಪಡೆ ಪೊಲೀಸರು ಬಂದರಿಗೆ ಬಂದ ಹಡಗಿನಲ್ಲಿ ತೀವ್ರ ತಪಾಸಣೆ ನಡೆಸುತ್ತಿದ್ದಾರೆ. ಅಲ್ಲದೇ ಮೀನುಗಾರಿಕಾ ಬೋಟ್‌ಗಳನ್ನು ಸಹ ತಪಾಸಣೆ ಮಾಡಲಾಗುತ್ತಿದೆ. 12 ನಾಟಿಕಲ್ ಮೈಲೂ ದೂರದಿಂದ ಹೊರ ಹೋಗದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ. 12 ನಾಟಿಕಲ್ ಮೈಲು ದೂರದಲ್ಲೇ ಮೀನುಗಾರಿಕೆ ನಡೆಸಲು ಮೀನುಗಾರಿಕಾ ಇಲಾಖೆ ಸೂಚನೆ ನೀಡಿದ್ದು, ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ಕೊಟ್ಟಿದೆ. ಇದನ್ನೂ ಓದಿ: ಭಾರತದ ವಿರುದ್ಧ ಪ್ರತಿದಾಳಿಗೆ ಪಾಕ್‌ ಕುತಂತ್ರ – ಸೇನೆಗೆ ಪರಮಾಧಿಕಾರ ನೀಡಿದ ಪ್ರಧಾನಿ ಶೆಹಬಾಜ್ ಶರೀಫ್

  • ಗರ್ಭಧರಿಸಿದ್ದ ಗೋವಿನ ಹತ್ಯೆಗೈದು ದುರುಳರ ವಿಕೃತಿ

    ಗರ್ಭಧರಿಸಿದ್ದ ಗೋವಿನ ಹತ್ಯೆಗೈದು ದುರುಳರ ವಿಕೃತಿ

    – ಬೀದಿ ನಾಯಿಯೊಂದು ಚೀಲವನ್ನು ಎಳೆದುತಂದಾಗ ಘಟನೆ ಬೆಳಕಿಗೆ

    ಕಾರವಾರ: ಗರ್ಭಧರಿಸಿದ್ದ ಗೋವನ್ನು ಹತ್ಯೆಗೈದು ಮಾಂಸ ಸಾಗಾಟ ಮಾಡಿ ವಿಕೃತಿ ಮೆರೆದಿರುವ ಘಟನೆ ಉತ್ತರ ಕನ್ನಡ (Uttar Kannada) ಜಿಲ್ಲೆಯ ಭಟ್ಕಳ (Bhatkal) ಬಳಿಯ ಕುಕನೀರ್ ವೆಂಕಟಾಪುರ ಹೊಳೆಯ ದಂಡೆಯ ಬಳಿ ನಡೆದಿದೆ.ಇದನ್ನೂ ಓದಿ: ರಾಯಚೂರು | ಭೀಕರ ಅಪಘಾತಕ್ಕೆ ನಾಲ್ವರು ಬಲಿ

    ಮಾಂಸಕ್ಕಾಗಿ ದನವನ್ನು ವಧೆ ಮಾಡಿ ಕರುವಿನ ಭ್ರೂಣ ಹಾಗೂ ಅಂಗಾಂಗಗಳನ್ನು ಗೋಣಿ ಚೀಲದಲ್ಲಿ ಸುತ್ತಿ ಎಸೆದು ಹೋಗಿದ್ದಾರೆ. ಬೀದಿ ನಾಯಿಯೊಂದು ಚೀಲವನ್ನು ಎಳೆದುತಂದಾಗ ಘಟನೆ ಬೆಳಕಿಗೆ ಬಂದಿದೆ.

    ಸ್ಥಳಕ್ಕೆ ಭಟ್ಕಳ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಹಿಂದೆ ಹೊನ್ನಾವರದಲ್ಲಿ ಇಂತದ್ದೇ ಪ್ರಕರಣ ದಾಖಲಾಗಿತ್ತು. ಪೊಲೀಸರು ಆರೋಪಿಗಳನ್ನು ಹಿಡಿದು ಕಾಲಿಗೆ ಗುಂಡುಹಾರಿಸಿ ಬಂಧಿಸಿದ್ದರು. ಆ ಘಟನೆ ಮಾಸುವ ಮುನ್ನವೇ ಭಟ್ಕಳದಲ್ಲಿ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.ಇದನ್ನೂ ಓದಿ: ಸಿಇಟಿ ಪರೀಕ್ಷೆಯಲ್ಲಿ ಅಮಾನವೀಯ ಘಟನೆ – ಜನಿವಾರ ಹಾಕಿದ್ದಕ್ಕೆ ಪರೀಕ್ಷೆಗೆ ಅವಕಾಶ ಕೊಡದ ಸಿಬ್ಬಂದಿ!

  • ಸೀಬರ್ಡ್ ನಿರಾಶ್ರಿತರಿಗೆ 10.47 ಕೋಟಿ ಪರಿಹಾರ ಮಂಜೂರು: ವಿಶ್ವೇಶ್ವರ ಹೆಗಡೆ ಕಾಗೇರಿ

    ಸೀಬರ್ಡ್ ನಿರಾಶ್ರಿತರಿಗೆ 10.47 ಕೋಟಿ ಪರಿಹಾರ ಮಂಜೂರು: ವಿಶ್ವೇಶ್ವರ ಹೆಗಡೆ ಕಾಗೇರಿ

    ಕಾರವಾರ: ಇಲ್ಲಿನ ಸೀಬರ್ಡ್ ನಿರಾಶ್ರಿತರಿಗೆ ಯುಗಾದಿಯ ಸಂದರ್ಭದಲ್ಲಿ ಶುಭ ಸುದ್ದಿಯಾಗಿ 2008-09ರಿಂದ ಬಾಕಿ ಉಳಿದಿದ್ದ 28/ಎ ಕೇಸ್‌ನಲ್ಲಿ 10.47 ಕೋಟಿ ರೂ. ಪರಿಹಾರ ಮಂಜೂರಾಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwara Hegde Kageri) ತಿಳಿಸಿದರು.

    ಸೀಬರ್ಡ್ ಯೋಜನೆ ಅಡಿಯಲ್ಲಿ ಸೇನಾ ನೆಲೆ ನಿರ್ಮಾಣಕ್ಕಾಗಿ ನೂರಾರು ಕುಟುಂಬಗಳನ್ನು ಸ್ಥಳಾಂತರಿಸಲಾಗಿತ್ತು. ಈ ಸ್ಥಳಾಂತರಕ್ಕೆ ಸೂಕ್ತ ಪರಿಹಾರ ನೀಡುವ ಪ್ರಕ್ರಿಯೆ ವಿಳಂಬವಾಗಿತ್ತು. ಇದರಿಂದಾಗಿ ಅನೇಕ ಕುಟುಂಬಗಳು ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದವು ಎಂದರು. ಇದನ್ನೂ ಓದಿ: ನೀರಿನ ಸಮಸ್ಯೆ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಿ: ಶರಣಪ್ರಕಾಶ್ ಪಾಟೀಲ್

    ಈ ಪ್ರಕರಣಗಳು ಅನೇಕ ವರ್ಷಗಳಿಂದ ಬಾಕಿ ಉಳಿದಿದ್ದು, ಅದನ್ನು ಸಂಸದನಾಗಿ ಆಯ್ಕೆ ಆದ ಮೇಲೆ ಈ ಕುರಿತು ತಕ್ಷಣ ನೌಕಾ ನೆಲೆ ಅಧಿಕಾರಿಗಳು, ಜಿಲ್ಲಾ ಅಧಿಕಾರಿಗಳು, ಸಂಬಂಧಿಸಿದ ಅಧಿಕಾರಿಗಳು ಹಾಗೂ ಸ್ಥಳೀಯರೊಂದಿಗೆ ಸಭೆ ನಡೆಸಿ ಅವರ ಸಮಸ್ಯೆಗಳನ್ನು ಕೇಂದ್ರ ರಕ್ಷಣಾಮಂತ್ರಿಗಳ ಗಮನಕ್ಕೆ ತಂದು, ನಿರಂತರ ಪ್ರಯತ್ನದಿಂದ 57 ಪ್ರಕರಣಗಳಿಗೆ ಪರಿಹಾರ ದೊರಕಿದೆ ಎಂದು ಹೇಳಿದರು. ಇದನ್ನೂ ಓದಿ: ಬರೋಬ್ಬರಿ 1.15 ಲಕ್ಷಕ್ಕೆ ಕೋಣ ಮಾರಾಟ

    ಅಮದಳ್ಳಿ (Amadalli), ಕೊಡರ, ಹಟ್ಟಿಕೇರಿ, ಬಿಣಗ, ಚೆಂಡಿಯಾ, ಬಿರಾಡೆ ಈ ಗ್ರಾಮಗಳ ಕೆಲವು ನಿರಾಶ್ರಿತರ ಪ್ರಕರಣಗಳು ಅನೇಕ ವರ್ಷಗಳಿಂದ ಪರಿಹಾರಕ್ಕಾಗಿ ನಿರಂತರವಾಗಿ ಸರ್ಕಾರದ ಬಾಗಿಲು ತಟ್ಟುತ್ತಾ ಬಂದಿದ್ದರು. ಕೇಂದ್ರ ಸರ್ಕಾರದ ಈ ಆದೇಶದಿಂದ ಈಗ 10.47 ಕೋಟಿ ರೂ. ಪರಿಹಾರ ನಿಧಿಯ ಮಂಜೂರಾತಿಯಿಂದ ಸಂಕಷ್ಟದಲ್ಲಿದ್ದ ಕುಟುಂಬಗಳು ದೀರ್ಘಕಾಲದ ನಿರೀಕ್ಷೆಯಿಂದ ಮುಕ್ತಿಗೊಳ್ಳಲಿದೆ ಎಂದು ನುಡಿದರು. ಇದನ್ನೂ ಓದಿ: ನಮ್ಮ ಪಕ್ಷದ ಗಾಡಿ ಫುಲ್ ಇದೆ: ಸತೀಶ್‌ ಜಾರಕಿಹೊಳಿ

    ಕೆಲವೇ ದಿನಗಳಲ್ಲಿ ಈ 57 ಪ್ರಕರಣಗಳಿಗೆ ಪರಿಹಾರ ಅವರ ಖಾತೆಗಳಿಗೆ ಜಮಾ ಆಗಲಿದೆ. ಉಳಿದ ಪ್ರಕರಣಗಳಲ್ಲಿ ಹಂತ ಹಂತವಾಗಿ ಪರಿಹಾರವನ್ನು ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಈ ಆದೇಶಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi), ಕೇಂದ್ರ ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ (Rajnath Singh) ಅವರನ್ನು ಮತ್ತು ಜಿಲ್ಲಾಡಳಿತ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಅಭಿನಂದಿಸುತ್ತೇನೆ ಎಂದರು.

  • ದೇಹದ ಮೇಲೆ ತರಕಾರಿ ಬಿದ್ದಿತ್ತು, 1 ಗಂಟೆ ನಂತ್ರ ಜನ ಇರೋದು ಗೊತ್ತಾಯ್ತು- 9 ಮಂದಿ ಉಸಿರುಗಟ್ಟಿ ಸಾವನ್ನಪ್ಪಿದ್ರು: ಎಸ್‌ಪಿ

    ದೇಹದ ಮೇಲೆ ತರಕಾರಿ ಬಿದ್ದಿತ್ತು, 1 ಗಂಟೆ ನಂತ್ರ ಜನ ಇರೋದು ಗೊತ್ತಾಯ್ತು- 9 ಮಂದಿ ಉಸಿರುಗಟ್ಟಿ ಸಾವನ್ನಪ್ಪಿದ್ರು: ಎಸ್‌ಪಿ

    ಕಾರವಾರ: 28 ಜನ ಪ್ರಯಾಣಿಸುತ್ತಿದ್ದ ಲಾರಿಯಲ್ಲಿ ಹಣ್ಣು, ತರಕಾರಿ ತುಂಬಿತ್ತು. ಅಪಘಾತ ಸಂಭವಿಸಿದಾಗ ಹಣ್ಣು, ತರಕಾರಿ ದೇಹದ ಮೇಲೆ ಬಿದ್ದಿತ್ತು. 1 ಗಂಟೆ ಬಳಿಕ ಕ್ರೇನ್ ತಂದು ಲಾರಿ ಮೇಲೆತ್ತಿದಾಗ ಜನ ಇರೋದು ಗೊತ್ತಾಯ್ತು. ಅಷ್ಟರಲ್ಲಾಗಲೇ 9 ಮಂದಿ ಉಸಿರುಗಟ್ಟಿ ಸ್ಥಳದಲ್ಲೇ ಸಾವನ್ನಪ್ಪಿದ್ದರು ಎಂದು ಉತ್ತರಕನ್ನಡ (Uttara Kannada) ಜಿಲ್ಲೆಯ ಎಸ್ಪಿ ನಾರಾಯಣ್‌ ಯಲ್ಲಾಪುರ ಅಪಘಾತದ (Yellapur Accident) ಕುರಿತು ಮಾಹಿತಿ ನೀಡಿದ್ದಾರೆ.

    ಘಟನೆ ಬಳಿಕ ಯಲ್ಲಾಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಟ್ಟ ಮಂಜು ಇದ್ದ ಕಾರಣ ಅಪಘಾತ ಸಂಭವಿಸಿದೆ. ಮಂಜು ಮುಸುಕಿದ್ದರಿಂದ ಎದುರಿಗೆ ಬರುತಿದ್ದ ವಾಹನಕ್ಕೆ ಸೈಡ್ ಕೊಡಲು ಹೋಗಿ ವಿದ್ಯುತ್ ಕಂಬಕ್ಕೆ‌ ಡಿಕ್ಕಿ ಹೊಡೆದಿದೆ. ಇದರಿಂದ ಲಾರಿ ಪಲ್ಟಿಯಾಗಿದೆ. ವಾಹನದಲ್ಲಿ ಹಣ್ಣು, ತರಕಾರಿಗಳಿತ್ತು, 28 ಜನ ಪ್ರಯಾಣಿಸುತಿದ್ದರು. ಲಾರಿ ಪಲ್ಟಿಯಾದ ಕಾರಣ ಜನರ ಮೇಲೆ ತರಕಾರಿ ಬಿದ್ದು ಉಸಿರುಗಟ್ಟಿ 9 ಜನ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.

    ಲಾರಿ ಅಪಘಾತವಾಗಿ 1 ಗಂಟೆ ನಂತರ ಮಾಹಿತಿ ದೊರೆತಿದೆ. ಅಲ್ಲಿಯವರೆಗೂ ಲಾರಿಯಲ್ಲಿ ಜನರಿರುವ ಬಗ್ಗೆ ಮಾಹಿತಿಯೇ ಇರಲಿಲ್ಲ. ಕ್ರೇನ್ ತಂದು ಲಾರಿ ಮೇಲೆತ್ತಿದಾಗ ಜನರಿರುವುದು ಗೊತ್ತಾಯ್ತು. ಆಗಲೇ 9 ಜನ ಸ್ಥಳದಲ್ಲೇ ಸಾವು ಕಂಡಿದ್ದರು. ತಕ್ಷಣ ಉಳಿದವರನ್ನ ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಗಂಭೀರ ಗಾಯವಾದವರನ್ನ ಹುಬ್ಬಳ್ಳಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಒಟ್ಟು 10 ಜನ ಸಾವನ್ನಪ್ಪಿದ್ದು, 16 ಮಂದಿ ಗಾಯಗೊಂಡಿದ್ದಾರೆಂದು ಎಸ್ಪಿ ತಿಳಿಸಿದ್ದಾರೆ. ಇದನ್ನೂ ಓದಿ: ದೆಹಲಿ ಚುನಾವಣೆ ದಿನದಂದೇ ಮಹಾ ಕುಂಭಮೇಳದಲ್ಲಿ ಮೋದಿ ಪುಣ್ಯಸ್ನಾನ

    ಆಸ್ಪತ್ರೆಗೆ ಶಿವರಾಮ್‌ ಹೆಬ್ಬಾರ್‌ ಭೇಟಿ:
    ಇನ್ನೂ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಗೆ ಸ್ಥಳೀಯ ಶಾಸಕ ಶಿವರಾಮ್‌ ಹೆಬ್ಬಾರ್‌ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೇ ಘಟನೆಯಲ್ಲಿ ಮೃತದೇಹಳನ್ನ ಆದಷ್ಟು ಶೀಘ್ರವೇ ಮೃತರ ಕುಟುಂಬಗಳಿಗೆ ತಲುಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಯಲ್ಲಾಪುರ ಅಪಘಾತ| ಸಾವಿನ ಸಂಖ್ಯೆ 10ಕ್ಕೆ ಏರಿಕೆ – ಮೃತರು ಯಾರು? ವಯಸ್ಸು ಎಷ್ಟು?

    ಏನಿದು ಕೇಸ್‌?
    ಹಣ್ಣು, ತರಕಾರಿ ತುಂಬಿದ ಲಾರಿ ಪಲ್ಟಿಯಾಗಿ 10 ಜನರು ಸಾವನ್ನಪ್ಪಿದ್ದು, 16 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಭಾಗದಲ್ಲಿ ಬೆಳಗಿನ ಜಾವ ನಡೆದಿದೆ. ಹಾವೇರಿಯಿಂದ ಕುಮಟಾದ ಕಡೆ ಹಣ್ಣು-ತರಕಾರಿ ತುಂಬಿದ್ದ ಲಾರಿ ರಾಷ್ಟ್ರೀಯ ಹೆದ್ದಾರಿ 63ರ ಗುಳ್ಳಾಪುರ ಭಾಗಕ್ಕೆ ಬರುತಿದ್ದಂತೆ ಚಾಲಕನ ನಿರ್ಲಕ್ಷ್ಯದಿಂದ ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಸ್ಥಳದಲ್ಲೇ 9 ಜನರ ಸಾವಾಗಿದ್ದು 16 ಜನ ಗಂಭೀರ ಗಾಯಗೊಂಡಿದ್ದಾರೆ. ಬಳಿಕ ಮತ್ತೋರ್ವ ನಂತರ ಸಾವನ್ನಪ್ಪಿದ್ದಾರೆ.

    ಫಯಾಜ್ ಜಮಖಂಡಿ (45), ವಾಸೀಂ ಮುಡಗೇರಿ (35), ಇಜಾಜ್ ಮುಲ್ಲಾ (20), ಸಾದೀಕ್ ಭಾಷ್ (30), ಗುಲಾಮ್ ಹುಸೇನ್ ಜವಳಿ (40), ಇಮ್ತಿಯಾಜ್ ಮುಳಕೇರಿ (36), ಅಲ್ಪಾಜ್ ಜಾಫರ್ ಮಂಡಕ್ಕಿ (25), ಜೀಲಾನಿ ಅಬ್ದುಲ್ ಜಖಾತಿ (25), ಅಸ್ಲಂ ಬಾಬುಲಿ ಬೆಣ್ಣಿ (24), ಜಲಾಲ್ ತಾರಾ (30) ಮೃತರು. ಇದನ್ನೂ ಓದಿ: ಟರ್ಕಿ ರೆಸಾರ್ಟ್‌ನಲ್ಲಿ ಅಗ್ನಿ ದುರಂತ – ಸಾವಿನ ಸಂಖ್ಯೆ 76ಕ್ಕೆ ಏರಿಕೆ

    ಗಾಯಗೊಂಡವರನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದು, ಶವಗಳನ್ನು ಯಲ್ಲಾಪುರ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ. ಗಾಯಗೊಂಡವರು ಹಾಗೂ ಮೃತರಾದವರು ಹಾವೇರಿಯ ಸವಣೂರು ಮೂಲದವರಾಗಿದ್ದು, ಕುಮಟಾದಲ್ಲಿ ನಡೆಯುವ ಸಂತೆಗೆ ಹಣ್ಣು, ತರಕಾರಿ ಒಯ್ಯುತಿದ್ದರು. ಘಟನೆ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಯಲ್ಲಾಪುರದಲ್ಲಿ ಭೀಕರ ಅಪಘಾತ – 9 ಮಂದಿ ದಾರುಣ ಸಾವು

    ಯಲ್ಲಾಪುರದಲ್ಲಿ ಭೀಕರ ಅಪಘಾತ – 9 ಮಂದಿ ದಾರುಣ ಸಾವು

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ಭೀಕರ ಅಪಘಾತವೊಂದು (Yellapur Accident) ಸಂಭವಿಸಿದೆ. ತರಕಾರಿ ತುಂಬಿದ ಲಾರಿ ಪಲ್ಟಿಯಾಗಿ 9 ಮಂದಿ ದಾರುಣ ಸಾವನ್ನಪ್ಪಿರುವ ಘಟನೆ ನಡೆದಿದೆ.

    ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಗುಳ್ಳಾಪುರ ಘಟ್ಟ ಭಾಗದಲ್ಲಿ ತಡರಾತ್ರಿ ಘಟನೆ ನಡೆದಿದ್ದು, ಸುಮಾರು 17 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಹಾವೇರಿ (Haveri) ಜಿಲ್ಲೆಯ ಸವಣೂರಿನವರು ಎನ್ನಲಾಗಿದೆ. ಇದನ್ನೂ ಓದಿ: ಫ್ಯಾಮಿಲಿ ಪ್ಲ್ಯಾನಿಂಗ್‌ ಚಿಕಿತ್ಸೆಗೆ ದಾಖಲಾಗಿದ್ದ ಬಾಣಂತಿ ಅಸ್ವಸ್ಥಗೊಂಡು ಸಾವು

    ತರಕಾರಿ ತುಂಬಿದ್ದ ಹಾವೇರಿಯಿಂದ ಅಂಕೋಲದ ಕಡೆ ಹೊರಟಿತ್ತು, ಲಾರಿಯಲ್ಲಿ 30 ಮಂದಿ ಕುಳಿತಿದ್ದರು. ವೇಗವಾಗಿ ಬರುತ್ತಿದ್ದ ವೇಳೆ ಲಾರಿ ಪಲ್ಟಿಯಾಗಿ ದುರಂತ ಸಂಭವಿಸಿದೆ. ಇದನ್ನೂ ಓದಿ: ಲಾಸ್‌ ಏಂಜಲೀಸ್‌ನಲ್ಲಿ ಕಾಡ್ಗಿಚ್ಚು ನಂದಿಸಲು‌ ಪಿಂಕ್‌ ಪೌಡರ್, ಸೂಪರ್‌ ಸ್ಕೂಪರ್ಸ್‌ ವಿಮಾನಗಳ ಬಳಕೆ- ವಿಶೇಷತೆ ಏನು?

    ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಯಲ್ಲಾಪುರ ಪೊಲೀಸರು 9 ಜನರ ಶವಗಳನ್ನ ಹೊರತೆಗೆದಿದ್ದಾರೆ. ಈ ಸಂಬಂಧ ತನಿಖೆ ಮುಂದುವರಿದಿದೆ. ಇದನ್ನೂ ಓದಿ: ಮಗನ ಎದುರೇ ಪತ್ನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತಿ

  • ಮುರುಡೇಶ್ವರದಲ್ಲಿ ಮೃತಪಟ್ಟ ವಿದ್ಯಾರ್ಥಿನಿಯರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

    ಮುರುಡೇಶ್ವರದಲ್ಲಿ ಮೃತಪಟ್ಟ ವಿದ್ಯಾರ್ಥಿನಿಯರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

    ಕಾರವಾರ: ಮುರುಡೇಶ್ವರದಲ್ಲಿ (Murudeshwar) ಸಮುದ್ರ ಪಾಲಾಗಿದ್ದ ನಾಲ್ವರು ವಿದ್ಯಾರ್ಥಿನಿಯರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ (CM Siddaramaiah) 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

    ಈ ಕುರಿತು ಸಿಎಂ ತಮ್ಮ ಎಕ್ಸ್ (X) ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಕೋಲಾರ (Kolar) ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿಯರಾದ ದೀಕ್ಷಾ, ಲಾವಣ್ಯ, ವಂದನಾ ಹಾಗೂ ಶ್ರಾವಂತಿ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿ, ಸಂತಾಪ ಸೂಚಿಸಿದ್ದಾರೆ.ಇದನ್ನೂ ಓದಿ: ಮುರುಡೇಶ್ವರದಲ್ಲಿ ಮೃತಪಟ್ಟ ವಿದ್ಯಾರ್ಥಿನಿಯರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

    ಟ್ವೀಟ್‌ನಲ್ಲೇನಿದೆ?
    ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಹೋದ ಸಂದರ್ಭದಲ್ಲಿ ಮುರುಡೇಶ್ವರ ಬಳಿಯ ಸಮುದ್ರದಲ್ಲಿ ನೀರುಪಾಲಾದ ಸುದ್ದಿ ತಿಳಿದು ಆಘಾತವಾಯಿತು. ಮೃತ ಮಕ್ಕಳ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮಕ್ಕಳ ದುಃಖತಪ್ತ ಪೋಷಕರಿಗೆ ನನ್ನ ಸಂತಾಪಗಳು.

    ಈ ದುರ್ಘಟನೆಯಲ್ಲಿ ಮಡಿದ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮೃತದೇಹಗಳನ್ನು ಹುಟ್ಟೂರಿಗೆ ತಲುಪಿಸುವ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದೇನೆ.

    ಪ್ರವಾಸದ ಸಂದರ್ಭದಲ್ಲಿ ಶಿಕ್ಷಕರು ಮಕ್ಕಳ ಬಗ್ಗೆ ಹೆಚ್ಚು ಜಾಗೃತೆ ವಹಿಸಬೇಕು. ಅಪಾಯಕಾರಿ ಸ್ಥಳಗಳಿಗೆ ಭೇಟಿನೀಡುವಾಗ ಮಕ್ಕಳ ಮೇಲೆ ನಿಗಾ ಇಡಬೇಕು. ಮಕ್ಕಳನ್ನು ಕಳೆದುಕೊಂಡ ಹೆತ್ತವರ ನೋವು ಸಂಕಟವನ್ನು ನಾನು ಅರ್ಥೈಸಿಕೊಳ್ಳಬಲ್ಲೆ, ಇಂತಹ ಅವಘಡಗಳು ಮತ್ತೆಂದೂ ಸಂಭವಿಸದಿರಲಿ ಎಂದು ಪ್ರಾರ್ಥಿಸುತ್ತೇನೆ.

    ಘಟನೆ ಏನು?
    ಕೊತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸೇರಿ ಒಟ್ಟು 57 ಮಂದಿ ಸೇರಿ ಮುರುಡೇಶ್ವರ ಪ್ರವಾಸಕ್ಕೆ ಬಂದಿದ್ದರು. ಮಂಗಳವಾರ (ಡಿ.10) ಸಮುದ್ರದಲ್ಲಿ ಆಟ ಆಡುವಾಗ ಅಲೆಯ ಹೊಡೆತದಿಂದ ವಿದ್ಯಾರ್ಥಿನಿಯರು ಕೊಚ್ಚಿ ಹೋಗಿದ್ದರು. ಈ ವೇಳೆ ಒಟ್ಟು ಏಳು ವಿದ್ಯಾರ್ಥಿನಿಯರು ನೀರು ಪಾಲಾಗಿದ್ದರು. ಆ ಪೈಕಿ ಮೂವರನ್ನು ಲೈಫ್ ಗಾರ್ಡ್ಸ್ ಸಿಬ್ಬಂದಿ ರಕ್ಷಣೆ ಮಾಡಿದ್ರೆ, ಶ್ರಾವಂತಿ ಎಂಬಾಕೆ ಸಾವನ್ನಪ್ಪಿದ್ದಳು. ಇಂದು (ಡಿ.11) ಮೂವರು ವಿದ್ಯಾರ್ಥಿನಿಯರ ಮೃತದೇಹ ಪತ್ತೆಯಾಗಿದೆ.ಇದನ್ನೂ ಓದಿ: ಮುರುಡೇಶ್ವರದಲ್ಲಿ ಸಮುದ್ರ ಪಾಲಾಗಿದ್ದ ಮೂವರು ವಿದ್ಯಾರ್ಥಿನಿಯರ ಮೃತದೇಹ ಪತ್ತೆ

  • ಶಿರಸಿ ಮಾರಿಕಾಂಬಾ ದರ್ಶನಕ್ಕೆ ವಸ್ತ್ರಸಂಹಿತೆ ಜಾರಿ

    ಶಿರಸಿ ಮಾರಿಕಾಂಬಾ ದರ್ಶನಕ್ಕೆ ವಸ್ತ್ರಸಂಹಿತೆ ಜಾರಿ

    – ಭಾರತೀಯ ಸಂಸ್ಕೃತಿಯ ಉಡುಗೆ ಧರಿಸಿ ಬರುವಂತೆ ಸೂಚನೆ

    ಕಾರವಾರ: ದಕ್ಷಿಣ ಭಾರತದ ಶಕ್ತಿ ಪೀಠಗಳಲ್ಲಿ ಒಂದಾದ ಉತ್ತರ ಕನ್ನಡ (Uttar Kannada) ಜಿಲ್ಲೆಯ ಶಿರಸಿಯ (Sirsi) ಮಾರಿಕಾಂಬ ದೇವಸ್ಥಾನದಲ್ಲಿ ಆಡಳಿತ ಕಮಿಟಿ ವಸ್ತ್ರಸಂಹಿತೆಯನ್ನು ಜಾರಿ ಮಾಡಿದೆ.

    ಭಾರತೀಯ ಸಂಸ್ಕೃತಿಗೆ ಅನುಗುಣವಾಗಿ ಉಡುಗೆಗಳನ್ನು ಧರಿಸಿ ಬರುವಂತೆ ಸೂಚನೆ ನೀಡಲಾಗಿದ್ದು, ಈ ಸಂಬಂಧ ದೇವಸ್ಥಾನದ ಮುಖ್ಯ ದ್ವಾರದಲ್ಲಿ ಫಲಕ ಅಳವಡಿಸಲಾಗಿದೆ. ಈ ಹಿಂದೆ ಗೋಕರ್ಣ, ಮಹಾಬಲೇಶ್ವರ ದೇವಸ್ಥಾನದಲ್ಲಿ ಸಹ ವಸ್ತ್ರಸಂಹಿತೆ ಜಾರಿ ಮಾಡಲಾಗಿದ್ದು, ಇದೀಗ ಮಾರಿಕಾಂಬಾ ದೇವಸ್ಥಾನದಲ್ಲಿ ಸಹ ವಸ್ತ್ರಸಂಹಿತೆ ಜಾರಿ ಮಾಡಲಾಗಿದೆ.ಇದನ್ನೂ ಓದಿ: ಮೈಸೂರಿನಿಂದ ದರ್ಭಾಂಗ್‌ಗೆ ತೆರಳುತ್ತಿದ್ದ ಎಕ್ಸ್‌ಪ್ರೆಸ್, ಗೂಡ್ಸ್ ರೈಲಿಗೆ ಡಿಕ್ಕಿ – ಹೊತ್ತಿ ಉರಿದ ಬೋಗಿಗಳು

    ದೇಗುಲಗಳಲ್ಲಿ ಸಾಂಪ್ರದಾಯಿಕ ಉಡುಗೆ ತೊಟ್ಟು ದೇವರ ದರ್ಶನ ಪಡೆಯಬೇಕೆಂದು ಮುಜರಾಯಿ ಇಲಾಖೆ ಆದೇಶ ಮಾಡಿತ್ತು. ಇದರ ಬೆನ್ನಲ್ಲೇ ರಾಜ್ಯದ ವಿವಿಧ ದೇಗುಲಗಳ ಜೊತೆ ಶಿರಸಿಯಲ್ಲಿಯೂ ವಸ್ತ್ರಸಂಹಿತೆ ಕಡ್ಡಾಯ ಮಾಡಲಾಗಿದೆ. ನವರಾತ್ರಿಯ ಸಂದರ್ಭದಲ್ಲಿ ಭಕ್ತರು ಹೆಚ್ಚು ಬರುತಿದ್ದು, ಈ ಸಂದರ್ಭದಲ್ಲಿ ಕ್ಷೇತ್ರದ ವತಿಯಿಂದ ಪ್ರವೇಶ ದ್ವಾರದ ಬಳಿ ಬೋರ್ಡ್ ಅಳವಡಿಕೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಭಾರತೀಯ ಸಂಸ್ಕೃತಿಯ ಉಡುಗೆ ತೊಡುಗೆಗಳನ್ನು ಕಡ್ಡಾಯ ಮಾಡುವ ಉದ್ದೇಶವಿದೆ.

    ಇದಕ್ಕೆ ಸಂಬಂಧಿಸಿದಂತೆ ಶಿರಸಿ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಆರ್.ಜಿ.ನಾಯ್ಕ್ ಮಾತನಾಡಿದ್ದು, ದೇವಸ್ಥಾನಕ್ಕೆ ಹೋಗುವಾಗ ಸಂಪ್ರದಾಯ ಪಾಲನೆ ಮಾಡಬೇಕೆಂಬ ಉದ್ದೇಶದಿಂದ ಈ ಆದೇಶ ಮಾಡಲಾಗಿದೆ. ಭಕ್ತರ ಸ್ಪಂದನೆ ಕೂಡಾ ಪರಿಗಣಿಸಿ ಮುಂದಿನ ಹೆಜ್ಜೆ ಇಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.ಇದನ್ನೂ ಓದಿ: ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ಎಡಿಜಿಪಿ ಚಂದ್ರಶೇಖರ್‌ ದೂರು – ಎನ್‌ಸಿಆರ್‌ ದಾಖಲು

  • ಶಿರೂರು ಗುಡ್ಡ ಕುಸಿತ ಪ್ರಕರಣ – ಕಾರ್ಯಾಚರಣೆ ಸ್ಥಗಿತಗೊಳಿಸಿದ ಜಿಲ್ಲಾಡಳಿತ

    ಶಿರೂರು ಗುಡ್ಡ ಕುಸಿತ ಪ್ರಕರಣ – ಕಾರ್ಯಾಚರಣೆ ಸ್ಥಗಿತಗೊಳಿಸಿದ ಜಿಲ್ಲಾಡಳಿತ

    ಕಾರವಾರ: ಶಿರೂರು ಗುಡ್ಡ ಕುಸಿತ (Shirur Landslide) ಪ್ರಕರಣಕ್ಕೆ ಸಂಬಂಧಿಸಿದಂತೆ ಮುಳುಗು ತಜ್ಞರ ತಂಡ ಎಷ್ಟೇ ಹುಡುಕಿದರೂ ಲಾರಿ ಹಾಗೂ ನಾಪತ್ತೆಯಾದ ಮೂವರ ಮೃತದೇಹ ಸಿಗದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದೆ.

    ಗಂಗಾವಳಿ ನದಿ (Gangavali River) ನೀರಿನ ವೇಗ ಹೆಚ್ಚಿದೆ. ಅಲ್ಲದೇ ನದಿಯ ಒಳಗೆ ಮಣ್ಣು, ಕಲ್ಲು ಬಂಡೆ ಹಾಗೂ ಮರದ ದಿಮ್ಮಿ ಇರುವ ಹಿನ್ನೆಲೆ ಕಾರ್ಯಾಚರಣೆಯಲ್ಲಿ ಲಾರಿ ಮೇಲಕ್ಕೆ ಎತ್ತಲು ಜಿಲ್ಲಾಡಳಿತ ಯಶಸ್ವಿಯಾಗಲಿಲ್ಲ. ಆದ್ದರಿಂದ ಕಾರ್ಯಾಚರಣೆಯನ್ನು ಸಂಪೂರ್ಣ ಸ್ಥಗಿತಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕೋಚಿಂಗ್ ಸೆಂಟರ್‌ಗೆ ಮಳೆ ನೀರು ನುಗ್ಗಿ ಮೂವರು UPSC ಆಕಾಂಕ್ಷಿಗಳು ಸಾವು – ಮಾಲೀಕ ಸೇರಿ ಇಬ್ಬರು ಅರೆಸ್ಟ್‌

    ಭೂ ಕುಸಿತದಿಂದ ಕಾಣೆಯಾದ ಕೇರಳ ಮೂಲದ ಅರ್ಜುನ್, ಶಿರೂರಿನ ಜಗನ್ನಾಥ ನಾಯ್ಕ, ಗಂಗೆ ಕೊಳ್ಳದ ಲೋಕೇಶ್‌ಗಾಗಿ ಗಂಗಾವಳಿ ನದಿಗೆ ಮುಳುಗು ತಜ್ಞರ ತಂಡ ಇಳಿದಿತ್ತು. ನೌಕಾದಳ, ಭೂಸೇನೆ, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಅಗ್ನಿಶಾಮಕ ದಳ, ಹೆಸ್ಕಾಂ ಹಾಗೂ ಈಶ್ವರ್ ಮಲ್ಪೆ ಅವರ ತಂಡ ಗಂಗಾವಳಿ ನದಿಯಲ್ಲಿ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ಆಲದ ಮರದ ದಿಮ್ಮಿ, ವಿದ್ಯುತ್ ಕಂಬ, ತಂತಿಗಳನ್ನು ಮುಳುಗು ತಜ್ಞರು ಪತ್ತೆಹಚ್ಚಿದ್ದಾರೆ. ಆದರೆ ಲಾರಿ ಹಾಗೂ ಕಾಣೆಯಾದವರ ಮೃತದೇಹಗಳು ಪತ್ತೆಯಾಗಿಲ್ಲ ಎಂದು ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: Paris Olympics 2024: ಭಾರತಕ್ಕೆ ಮೊದಲ ಪದಕ – ಐತಿಹಾಸಿಕ ಗೆಲುವಿನೊಂದಿಗೆ ಕಂಚು ಗೆದ್ದ ಮನು ಭಾಕರ್‌

    ಕಾರ್ಯಾಚರಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಈಜು ತಜ್ಞ ಈಶ್ವರ್ ಮಲ್ಪೆ, ನಾನು ಈ ಹಿಂದೆ ಮಾಡಿದ ಬಹಳಷ್ಟು ಕಾರ್ಯಾಚರಣೆ ಯಶಸ್ವಿ ಆಗಿದೆ. ಆದರೆ ಇವತ್ತಿನ ಕಾರ್ಯಾಚರಣೆಯಲ್ಲಿ ಯಶಸ್ಸು ಸಿಗದೇ ಇರುವ ದುಃಖ ನನಗಿದೆ. ನಿರಂತರ ಮಳೆಯಿಂದ ಗಂಗಾವಳಿ ನದಿಯಲ್ಲಿ ನೀರಿನ ಪ್ರಮಾಣ ಜಾಸ್ತಿ ಆಗುತ್ತಲೇ ಇದೆ. ನದಿಯ ನೀರಿನ ವೇಗ ಮತ್ತು ಕೆಸರು ನೀರಿನಿಂದ ಕಾರ್ಯಾಚರಣೆಯಲ್ಲಿ ಯಶಸ್ಸು ಕಾಣುವುದಕ್ಕೆ ಆಗಲಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬೆಂಗಳೂರಿಗೆ ಬಂದಿದ್ದು ನಾಯಿ ಮಾಂಸ ಅಲ್ಲ, ಮೇಕೆ ಮಾಂಸ – ಪರಮೇಶ್ವರ್

    ನಾನು ಶನಿವಾರ ನದಿಗೆ ಇಳಿದಾಗ ಅಲ್ಲಿ ಬಂಡೆಕಲ್ಲು ಹಾಗೂ ಮಣ್ಣು ಹೊರತುಪಡಿಸಿ ಬೇರೆ ಏನು ಕಾಣಲಿಲ್ಲ. ಭಾನುವಾರ ಕಾರ್ಯಾಚರಣೆ ಮಾಡಿದ ಪಾಯಿಂಟ್‌ನಲ್ಲಿ ಆಲದ ಮರ ಕಾಣಿಸಿತ್ತು. ಮರದ ಸುತ್ತ ಏನಿದೆ ಎಂಬುವುದನ್ನು ನೋಡಲು ಪ್ರಯತ್ನಿಸಿದೆ. ಆದರೆ ನದಿಯ ನೀರಿನ ವೇಗ ಜಾಸ್ತಿ ಇರುವ ಹಿನ್ನೆಲೆ ಅಲ್ಲಿ ಇರಲಾಗಲಿಲ್ಲ. ಕೆಸರು ನೀರು ಇರೋತನಕ ಕಾರ್ಯಾಚರಣೆ ಮಾಡುವುದು ಕಷ್ಟ. ನಾನು ನದಿಯ ಒಳಗೆ ಎಷ್ಟೆ ಇಳಿದರೂ ಸರಿಯಾಗಿ ಏನೂ ಕಾಣಲಿಲ್ಲ. ನದಿಯ ನೀರು ಕೆಸರು ಮಿಶ್ರಿತ ಆಗಿರುವುದರಿಂದ ಏನೂ ಸರಿಯಾಗಿ ಕಾಣುತ್ತಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಎನ್‌ಡಿಎ ಅವಧಿಯಲ್ಲಿ 2,95,817 ಕೋಟಿ ರೂ. ತೆರಿಗೆ ಹಂಚಿಕೆ: ರಾಜ್ಯ ಸರ್ಕಾರಕ್ಕೆ ನಿರ್ಮಲಾ ತಿರುಗೇಟು

  • ಚುನಾವಣೆಯಿಂದ ದೂರ – ಮೋದಿ ಕಾರ್ಯಕ್ರಮದಲ್ಲಿ ಹೆಗಡೆ ಭಾಗಿಯಾಗ್ತಾರಾ?

    ಚುನಾವಣೆಯಿಂದ ದೂರ – ಮೋದಿ ಕಾರ್ಯಕ್ರಮದಲ್ಲಿ ಹೆಗಡೆ ಭಾಗಿಯಾಗ್ತಾರಾ?

    ಕಾರವಾರ: ಬಿಜೆಪಿಯ ಫೈರ್‌ ಬ್ರಾಂಡ್ ಸಂಸದ, ಪ್ರಖಂಡ ಹಿಂದುತ್ವವಾದಿ ಅನಂತ್‌ಕುಮಾರ್ ಹೆಗಡೆಗೆ (Ananth Kumar Hegde) ಈ ಬಾರಿ ಉತ್ತರ ಕನ್ನಡ (Uttar Kannada) ಟಿಕೆಟ್ ಮಿಸ್ ಆಗಿದೆ. ಟಿಕೆಟ್ ಕೈತಪ್ಪಿದ್ದಕ್ಕೆ ಮುನಿಸಿಕೊಂಡು ಬಿಜೆಪಿ (BJP) ಅಭ್ಯರ್ಥಿ ಪರ ಚುನಾವಣಾ ಪ್ರಚಾರಕ್ಕೆ ಬಾರದೇ ದೂರ ಸರಿದಿದ್ದಾರೆ. ಇದೇ ಹೊತ್ತಲ್ಲಿ ಏಪ್ರಿಲ್ 28ಕ್ಕೆ ಪ್ರಧಾನಿ ಮೋದಿ (PM Modi) ಜಿಲ್ಲೆಗೆ ಪ್ರಚಾರಕ್ಕಾಗಿ ಆಗಮಿಸುತ್ತಿದ್ದು, ಮುನಿಸು ಮರೆತು ಸಮಾವೇಶದಲ್ಲಿ ಭಾಗಿಯಾಗ್ತಾರಾ ಅನ್ನೋ ಕುತೂಹಲ ಮೂಡಿಸಿದೆ.

    ಕಾಂಗ್ರೆಸ್ ವಿರುದ್ಧ ಬೆಂಕಿ ಉಗುಳುವ ಬಿಜೆಪಿಯ ಫೈರ್‌ಬ್ರಾಂಡ್ ಅನಂತ್‌ಕುಮಾರ್ ಹೆಗಡೆ ಕಳೆದ 30 ವರ್ಷಗಳಿಂದ ಸೋಲು ಕಾಣದೇ ಸಂಸದರಾಗಿದ್ದವರು. ಸೋಲಿಲ್ಲದ ಸರದಾರ ಅನಂತ್‌ಕುಮಾರ್ ಹೆಡೆಗೆ ಈ ಬಾರಿ ಟಿಕೆಟ್ ಕೈತಪ್ಪಿದೆ. ಲೋಕಸಭಾ ಚುನಾವಣೆ ಹತ್ತಿರವಾಗ್ತಿದ್ದಂತೆ ದಿಢೀರ್‌ ಆಗಿ ಕಾಣಿಸಿಕೊಂಡು ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದ ಹೆಗಡೆ, ಟಿಕೆಟ್ ಕೈತಪ್ಪುತ್ತಿದ್ದಂತೆ ಮತ್ತೆ ಮಾಯವಾಗಿದ್ದಾರೆ. ವಿಶ್ವೇಶ್ವರ ಹೆಗಡೆ ಕಾಗೇರಿಗೆ (Vishweshwar Hegde Kageri) ಟಿಕೆಟ್ ಘೋಷಣೆ ಬಳಿಕ ಅನಂತ್‌ಕುಮಾರ್ ಹೆಗಡೆ ಎಲ್ಲೂ ಕಾಣಿಸಿಕೊಳ್ಳುತ್ತಿಲ್ಲ. ಪ್ರಚಾರಕ್ಕೂ ಬಾರದೇ ನಾಯಕರ ಕರೆಯನ್ನೂ ಸ್ವೀಕರಿಸದೇ ಪಕ್ಷದಿಂದಲೇ ಅಂತರ ಕಾಪಾಡಿಕೊಂಡಿದ್ದಾರೆ. ಇದನ್ನೂ ಓದಿ: ಮಲೇರಿಯಾದಿಂದ ಮಕ್ಕಳನ್ನು ರಕ್ಷಿಸಲು ಈ ಮುನ್ನೆಚ್ಚರಿಕೆಗಳಿರಲಿ

    ಖುದ್ದು ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿ ಮಾಡಿ ಪ್ರಚಾರಕ್ಕೆ ಕರೆತರುವ ನಿರಂತರ ಪ್ರಯತ್ನ ಮಾಡುತ್ತಲೇ ಇದ್ದರೂ ಸಫಲವಾಗಿಲ್ಲ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ, ಅಮಿತ್ ಶಾ ಸಹ ಕರೆ ಮಾಡಿದರೂ ಕರೆ ಸ್ವೀಕರಿಸದೇ ದೂರ ಉಳಿದಿದ್ದಾರೆ. ಇದನ್ನೂ ಓದಿ: ನಟಿ ಅಮೂಲ್ಯ ಮಾವ, ಬಿಜೆಪಿ ಮುಖಂಡ ರಾಮಚಂದ್ರ ಮನೆ ಮೇಲೆ ಚುನಾವಣಾಧಿಕಾರಿಗಳ ದಾಳಿ

    ಹೆಗಡೆ ಮುನಿಸಿನ ನಡುವೆ ಪ್ರಧಾನಿ ನರೇಂದ್ರ ಮೋದಿ ಉತ್ತರ ಕನ್ನಡಕ್ಕೆ ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ. ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಮತ ಯಾಚಿಸಲಿದ್ದಾರೆ. ಪ್ರಧಾನಿ ಮೋದಿ ಪ್ರಚಾರ ಸಭೆಗಾದರೂ ಅಸಮಾಧಾನಿತ ಅನಂತಕುಮಾರ್ ಹೆಗಡೆ ತಮ್ಮ ಮುನಿಸು ಬದಿಗೊತ್ತಿ ಭಾಗಿಯಾಗ್ತಾರಾ ಅನ್ನೋದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.

     

    ಅನಂತ್‌ಕುಮಾರ್‌ ಹೆಗಡೆ ಮುನಿಸು ಇಂದು ನಿನ್ನೆಯದಲ್ಲ. ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ತಾನು ಸೂಚಿಸಿದ ವ್ಯಕ್ತಿಗಳಿಗೆ ಟಿಕೆಟ್ ನೀಡಲಿಲ್ಲ ಎಂಬ ಕಾರಣದಿಂದ ಪಕ್ಷದ ಪ್ರಚಾರಕ್ಕೂ ಬಾರದೇ ದೂರ ಉಳಿದರೆ ಅಂಕೋಲದಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮಕ್ಕೂ ಗೈರಾಗಿ ಮೌನಕ್ಕೆ ಶರಣಾಗಿದ್ದರು. ಇದರ ಪ್ರತಿಫಲವಾಗಿ ಭಟ್ಕಳ, ಕಾರವಾರ, ಶಿರಸಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಹೆಗಡೆ ಬೆಂಬಲಿಗರ ಬಂಡಾಯದಿಂದ ಅಲ್ಪ ಮತದಲ್ಲಿ ಸೋಲು ಕಾಣಬೇಕಾಯ್ತು. ಇದೀಗ ತಮಗೇ ಟಿಕೆಟ್ ಮಿಸ್ ಆಗಿರೋದು ಅಸಮಾಧಾನ ದುಪ್ಪಟ್ಟಾಗಿದೆ.

    ಕೆಲವು ಮೂಲಗಳ ಪ್ರಕಾರ ಹೆಗಡೆ ರಾಜ್ಯ ರಾಜಕಾರಣಕ್ಕೆ ಬರಲಿದ್ದಾರೆ ಎಂಬ ಸುದ್ದಿಗಳಿವೆ. ಹೀಗಾಗಿ ಮೋದಿ ಕಾರ್ಯಕ್ರಮಕ್ಕೆ ಹೆಗಡೆ ಭಾಗವಹಿಸಬಹುದು ಎಂಬ ನಿರೀಕ್ಷೆಯನ್ನು ಸ್ಥಳೀಯ ನಾಯಕರು ಇಟ್ಟುಕೊಂಡಿದ್ದಾರೆ.