Tag: uttar karnataka

  • ಮತ್ತೊಮ್ಮೆ ಪರಿಷತ್ ಸಭಾಪತಿ ಹುದ್ದೆಗೆ ಬಸವರಾಜ ಹೊರಟ್ಟಿ ಅಭ್ಯರ್ಥಿ

    ಮತ್ತೊಮ್ಮೆ ಪರಿಷತ್ ಸಭಾಪತಿ ಹುದ್ದೆಗೆ ಬಸವರಾಜ ಹೊರಟ್ಟಿ ಅಭ್ಯರ್ಥಿ

    ಧಾರವಾಡ: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಇದೇ 21 ರಂದು ಚುನಾವಣೆ ನಡೆಯಲಿದ್ದು, ಬಿಜೆಪಿ (BJP) ಅಭ್ಯರ್ಥಿಯಾಗಿ ಬಸವರಾಜ ಹೊರಟ್ಟಿ (Basavaraj Horatti) ಆಯ್ಕೆ ಬಹುತೇಕ ಖಚಿತವಾಗಿದೆ. ಹೊರಟ್ಟಿಯವರನ್ನು ಅಭ್ಯರ್ಥಿ ಎಂದು ಇಂದು ಸಂಜೆಯೇ ಅಂತಿಮವಾಗಿ ಬಿಜೆಪಿ ಘೋಷಿಸುವ ಸಾಧ್ಯತೆ ಇದೆ.

    ಚುನಾವಣೆಯಲ್ಲಿ (Election) ಹೊರಟ್ಟಿ ಅವರು ಸ್ಪರ್ಧಿಸಲು ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ. ಹೀಗಾಗಿ ಇಂದು ಸಂಜೆ ಅವರ ಹೆಸರನ್ನು ಅಂತಿಮ ಘೋಷಣೆ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಸತೀಶ್ ಜಾರಕಿಹೊಳಿ ಕ್ಷೇತ್ರದಲ್ಲಿ ಮತ್ತೆ ಮುನ್ನೆಲೆಗೆ ಬಂದ ‘ಹಿಂದೂ’ ವರ್ಡ್ ವಾರ್

    ಧಾರವಾಡದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಹೊರಟ್ಟಿ ಅವರು, ಇಂದು ಬೆಳಿಗ್ಗೆ ರವಿಕುಮಾರ್ ಅವರು ನನಗೆ ದೂರವಾಣಿ ಕರೆ ಮಾಡಿ ನೀವು ಅಭ್ಯರ್ಥಿಗಳಾಗಿದ್ದೀರಿ, ಅಧಿಕೃತವಾಗಿ ಘೋಷಣೆ ಮಾಡುತ್ತೇನೆ ಅಂದಿದ್ದಾರೆ. ಅವರಿಗೆ ಧನ್ಯವಾದ ಹೇಳುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಹನಿಮೂನ್‌ನಿಂದ ಬರುವಾಗ ಟೆಕ್ಕಿ ದಂಪತಿಗೆ ಅಪಘಾತ – ಪತಿಯನ್ನು ಕಳೆದುಕೊಂಡ ನವವಿವಾಹಿತೆ

    v

    ಬೆಳಗಾವಿಯಲ್ಲಿ (Belagavi) ಅಧಿವೇಶನ ನಡೆಯುವಾಗ, ಅಧಿವೇಶನದಲ್ಲಿ ಧರಣಿ ಮಾಡೋದು ಬೇಡ ಎಂದು ನಾನು ಪ್ರತಿ ಬಾರಿಯೂ ಹೇಳುತ್ತಾ ಬಂದಿದ್ದೇನೆ. ನಾನು ಸಭಾಪತಿಯಾಗಿದ್ದಾಗ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲೆಂದೇ ಎರಡು ದಿನ ಮೀಸಲಿಟ್ಟಿದ್ದೆ ಎಂದು ಹೇಳಿದ್ದಾರೆ.

    ಈ ಭಾಗದ ಸಮಸ್ಯೆಗಳಿಗೆ ಪ್ರತಿಫಲ ಸಿಗಬೇಕು. ನಮ್ಮದು ಸಮಗ್ರ ಕರ್ನಾಟಕ. ಈ ಬಗ್ಗೆ ಬೇರೆ ಮಾತೇ ಇಲ್ಲ. ಆದರೆ ಪ್ರಮುಖವಾಗಿ ಉತ್ತರ ಕರ್ನಾಟಕ (Uttar Karnataka) ಭಾಗದ ಸಮಸ್ಯೆಗಳ ಬಗ್ಗೆ ಸ್ಪಂದಿಸಲು ಸರ್ಕಾರ, ಸದಸ್ಯರು ಮುಂದಾಗಬೇಕು. ಬರುವ ಡಿ.19 ರಿಂದ 30ರ ವರೆಗೆ ನಡೆಯುವ ಸದನದಲ್ಲಿ ಈ ಭಾಗದ ಸಮಸ್ಯೆ ಬಗ್ಗೆ ಚರ್ಚೆ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

    ಮೀಸಲಾತಿ (Reservation) ವಿಚಾರಕ್ಕೆ ಹಲವರು ಹೋರಾಟ ಮಾಡುತ್ತಾರೆ. ಹೋರಾಟ ಮಾಡುವುದು ಅವರ ಹಕ್ಕು. ಆದರೆ ಹೋರಾಟವನ್ನು ಶಾಂತಿಯುತವಾಗಿ ಮಾಡಬೇಕು ಎಂದು ಹೊರಟ್ಟಿ ಮನವಿ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಉತ್ತರ ಕರ್ನಾಟಕದಲ್ಲಿ ಪ್ರವಾಹ- ಬಿಎಸ್‍ವೈಯಿಂದ ವೈಮಾನಿಕ ಸಮೀಕ್ಷೆ

    ಉತ್ತರ ಕರ್ನಾಟಕದಲ್ಲಿ ಪ್ರವಾಹ- ಬಿಎಸ್‍ವೈಯಿಂದ ವೈಮಾನಿಕ ಸಮೀಕ್ಷೆ

    ಬಳ್ಳಾರಿ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇಂದು ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು.

    ನೆರೆ ಹಾನಿಗೀಡಾದ ಪ್ರದೇಶಗಳ ವೀಕ್ಷಣೆ ನಡೆಸಲು ಬಳ್ಳಾರಿಯ ತೋರಣಗಲ್ಲುವಿನ ಜಿಂದಾಲ್ ಏರ್ ಸ್ಟ್ರೀಪ್ ಗೆ ಆಗಮಿಸಿದ್ದ ಮುಖ್ಯಮಂತ್ರಿಗಳಿಗೆ ಶಾಸಕ ಸೋಮಶೇಖರ್ ರೆಡ್ಡಿ ಮನವಿ ಮಾಡಿದರು.

    ಮನವಿಯೇನು?
    ತುಂಗಾಭದ್ರಾ- ಕೃಷ್ಣೆ ಜೋಡಿಸಲು ಸಿಎಂ ಬಿಎಸ್‍ವೈಗೆ ಶಾಸಕ ಸೋಮಶೇಖರ್ ರೆಡ್ಡಿ ಮನವಿ ಮಾಡಿದ್ದು, ಈ ಮೂಲಕ ತ್ರೀವಳಿ ಜಿಲ್ಲೆಗಳ ನೀರಾವರಿ ಮತ್ತು ಕುಡಿಯುವ ನೀರಿನ ಸಮಸ್ಯೆ ನೀಗಿಸಿದಂತಾಗುತ್ತದೆ ಎಂದು ಅವರು ತಮ್ಮ ಮನವಿಯಲ್ಲಿ ವಿವರಿಸಿದ್ದಾರೆ.

    ಶಾಸಕ ಸೋಮಶೇಖರ್ ರೆಡ್ಡಿ ಅವರ ಮನವಿಯನ್ನು ಅತ್ಯಂತ ಸಮಾಧಾನದಿಂದ ಆಲಿಸಿದ ಸಿಎಂ ಬಿಎಸ್‍ವೈ, ಇದಕ್ಕೆ ಸಂಬಂಧಿಸಿದ ವಿಸ್ತೃತ ಯೋಜನಾ ವರದಿಯೊಂದನ್ನು ನೀಡಿ ಮುಂದಿನ ಬಜೆಟ್ ನಲ್ಲಿ ಘೋಷಿಸಿ ಅನುಷ್ಠಾನಗೊಳಿಸೋಣ ಎಂದಿದ್ದಾರೆ ಎನ್ನಲಾಗಿದೆ.

    ನಂತರ ಶಾಸಕ ಸೋಮಶೇಖರ್ ರೆಡ್ಡಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ತ್ರಿವಳಿ ಜಿಲ್ಲೆಗಳ ಹಾಗೂ ನೆರೆಯ ರಾಜ್ಯದ ಜೀವನಾಡಿಯಾಗಿರುವ ತುಂಗಾಭದ್ರಾ ಜಲಾಶಯ ಇದುವರೆಗೂ ತುಂಬಿಲ್ಲ. ಕೇವಲ 30 ಟಿಎಂಸಿ ನೀರು ಮಾತ್ರ ಇದೆ. ಇನ್ನೂ 70 ಟಿಎಂಸಿ ನೀರಿನ ಅಗತ್ಯ ಇದೆ ಎಂದರು.

    4 ಲಕ್ಷ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಯಿಂದ ಹರಿಬಿಡಲಾಗುತ್ತಿದ್ದು, ಅದು ವ್ಯರ್ಥವಾಗಿ ಸಮುದ್ರದ ಪಾಲಾಗುತ್ತಿದೆ. ಕೃಷ್ಣೆಯನ್ನು ನಮ್ಮ ಜಲಾಶಯಕ್ಕೆ ಕನೆಕ್ಷನ್ ಕೊಡಿಸಿದರೇ ನೀರು ಸದ್ಭಳಕೆಯಾಗುತ್ತದೆ ಎಂದರು.

    3 ಜಿಲ್ಲೆಗಳ ನಿಯೋಗವನ್ನು ಕರೆದುಕೊಂಡು ಹೋಗಿ ಮುಖ್ಯಮಂತ್ರಿಗಳಿಗೆ ವಿಸ್ತೃತ ಯೋಜನೆ ವಿವರಿಸಿ ಅನುಷ್ಠಾನಕ್ಕೆ ಪ್ರಯತ್ನಿಸಲಾಗುವುದು. ಬಿಎಸ್ ವೈ ಮತ್ತು ಶ್ರೀರಾಮುಲು ಅವರ ನೇತೃತ್ವದಲ್ಲಿ ಇದು ಸಾಕಾರಗೊಂಡರೇ ರೈತರ ಬದುಕು ಬಂಗಾರವಾಗಲಿದೆ ಮತ್ತು ಕುಡಿಯುವ ನೀರಿನ ಸಮಸ್ಯೆಯೂ ಉದ್ಭವಿಸಿವುದಿಲ್ಲ ಎಂದು ಅವರು ತಿಳಿಸಿದರು.

  • ಹೈದ್ರಾಬಾದ್ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕು- ಸಹಿ ಸಂಗ್ರಹಕ್ಕೆ ಮುನ್ನವೇ ಹೋರಾಟಗಾರರು ವಶಕ್ಕೆ

    ಹೈದ್ರಾಬಾದ್ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕು- ಸಹಿ ಸಂಗ್ರಹಕ್ಕೆ ಮುನ್ನವೇ ಹೋರಾಟಗಾರರು ವಶಕ್ಕೆ

    ಕಲಬುರಗಿ: ಹೈದ್ರಾಬಾದ್ ಕರ್ನಾಟಕದಲ್ಲಿ ಪ್ರತ್ಯೇಕ ರಾಜ್ಯ ಬೇಕು ಅಂತ ಆಗ್ರಹಿಸಿ ಕಲಬುರಗಿಯಲ್ಲಿ ಸಹಿ ಸಂಗ್ರಹಕ್ಕೂ ಮುನ್ನ ಮುಂಜಾಗ್ರತಾ ಕ್ರಮವಾಗಿ 30ಕ್ಕೂ ಹೆಚ್ಚು ಮಂದಿ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಹೊಸ ದಕ್ಷಿಣ ಕರ್ನಾಟಕವೂ ಬೇಡ. ಮುಂಬೈ ಕರ್ನಾಟಕವೂ ಬೇಡ. ನಮಗೆ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಬೇಕು ಅಂತ ಇಂದು ಲಕ್ಷ ಲಕ್ಷ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಲು ಮುಂದಾಗಿದ್ದರು. ಈಗ ಹೋರಾಟಗಾರರನ್ನು ವಶಕ್ಕೆ ಪಡೆಯುವ ಮೂಲಕ ಪೊಲೀಸರು ಪ್ರತಿಭಟನೆಗೆ ಅವಕಾಶ ನೀಡಲಿಲ್ಲ.

    ಕಲಬುರಗಿಯ ಸರ್ಧಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಎಮ್ ಎಸ್ ಪಾಟೀಲ್ ನೇತೃತ್ವದಲ್ಲಿ ಮಠಾಧೀಶರು, ವಕೀಲರು, ವೈದ್ಯರು ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ಹೋರಾಟಕ್ಕೆ ಚಾಲನೆ ನೀಡಲಾಯಿತು.

    ಉತ್ತರ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ಬಂದ್‍ಗೆ ಯಾವುದೇ ಸಂಘಟನೆಗಳ ಬೆಂಬಲ ನೀಡಲಿಲ್ಲ. ಎಂದಿನಂತೆ ಸಾರಿಗೆ ಸಂಚಾರ, ಜನಜೀವನ, ಅಂಗಡಿ ಮುಂಗಟ್ಟುಗಳನ್ನ ವ್ಯಾಪಾರಸ್ಥರು ತೆರೆದಿದ್ದಾರೆ. ಸರ್ಕಾರಿ ಹಾಗೂ ಖಾಸಗಿ ಶಾಲೆಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ.

  • ರಾಜಧಾನಿಗೆ ಕಾಲಿಟ್ಟ ಮಹದಾಯಿ ಹೋರಾಟ – ಬೆಳ್ಳಂಬೆಳಗ್ಗೆ ಹುಬ್ಬಳ್ಳಿಯಿಂದ ಬೆಂಗ್ಳೂರಿಗೆ ರೈತರ ದಂಡು

    ರಾಜಧಾನಿಗೆ ಕಾಲಿಟ್ಟ ಮಹದಾಯಿ ಹೋರಾಟ – ಬೆಳ್ಳಂಬೆಳಗ್ಗೆ ಹುಬ್ಬಳ್ಳಿಯಿಂದ ಬೆಂಗ್ಳೂರಿಗೆ ರೈತರ ದಂಡು

    ಬೆಂಗಳೂರು: ಮಹದಾಯಿ ಹೋರಾಟಗಾರರ ದಂಡು ಇದೀಗ ರಾಜಧಾನಿಗೆ ಕಾಲಿಟ್ಟಿದೆ. ಸಮಸ್ಯೆ ಬಗೆಹರಿಸುವಲ್ಲಿ ಬಿಜೆಪಿ ವಿಫಲವಾಗಿದ್ದಕ್ಕೆ ಆಕ್ರೋಶಗೊಂಡಿರೋ ರೈತರು ಬೆಳ್ಳಂಬೆಳಗ್ಗೆ ಬೆಂಗಳೂರಿಗೆ ಬಂದಿಳಿದಿದ್ದಾರೆ.

    ಮಹದಾಯಿ ಹೋರಾಟಗಾರ ವೀರೇಶ್ ಸೊಬರದ್ ಮಠ ನೇತೃತ್ವದಲ್ಲಿ ಹುಬ್ಬಳ್ಳಿಯಿಂದ ಆಗಮಿಸಿರುವ 500ಕ್ಕೂ ಹೆಚ್ಚು ಜನ ರೈತರು ಬೆಂಗಳೂರು ಚಲೋ ನಡೆಸಿ ಮಲ್ಲೇಶ್ವರಂನ ಬಿಜೆಪಿ ಕಚೇರಿ ಎದುರು ಧರಣಿ ಕೂತಿದ್ದಾರೆ. ಇದನ್ನೂ ಓದಿ: ಇಂದಿನಿಂದ ಮಹದಾಯಿ ನೀರಿನ ಚಿಂತೆಯನ್ನು ಬಿಟ್ಟು ಬಿಡಿ: ಬಿಎಸ್‍ವೈ

    ಯಾವುದೇ ಕ್ಷಣದಲ್ಲಾದ್ರೂ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕುವ ಸಾಧ್ಯತೆ ಇದೆ. ಹೀಗಾಗಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಹುಬ್ಬಳ್ಳಿಯಲ್ಲಿ ಗುರುವಾರ ನಡೆದ ಪರಿವರ್ತನಾ ಯಾತ್ರೆಯಲ್ಲಿ ವಿವಾದ ಬಗೆಹರಿಸುವುದಾಗಿ ಬಿಜೆಪಿ ನಾಯಕರು ಹೇಳಿದ್ದರು. ಆದ್ರೆ, ಉತ್ತರ ಕರ್ನಾಟಕ ಭಾಗದ ಜನರಿಗೆ ಮತ್ತೆ ಅನ್ಯಾಯವಾಗಿದೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮಹದಾಯಿ ವಿಚಾರದಲ್ಲಿ ಗೋವಾ ಪ್ರಜೆಗಳು ಹೆದರುವ ಅಗತ್ಯವಿಲ್ಲ: ಪರಿಕ್ಕರ್