Tag: uttar pradesh

  • ಉತ್ತರ ಪ್ರದೇಶ| ದೋಣಿ ಮಗುಚಿ ಮಹಿಳೆ ಸಾವು; 5 ಮಕ್ಕಳು ಸೇರಿದಂತೆ 8 ಮಂದಿ ನಾಪತ್ತೆ

    ಉತ್ತರ ಪ್ರದೇಶ| ದೋಣಿ ಮಗುಚಿ ಮಹಿಳೆ ಸಾವು; 5 ಮಕ್ಕಳು ಸೇರಿದಂತೆ 8 ಮಂದಿ ನಾಪತ್ತೆ

    ಉತ್ತರ ಪ್ರದೇಶ: ಬಹ್ರೈಚ್ ಜಿಲ್ಲೆಯ ಕೌಡಿಯಾಲ ನದಿಯಲ್ಲಿ ದೋಣಿ ಮಗುಚಿ ಬಿದ್ದು, ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಎಂಟು ಮಂದಿ ನಾಪತ್ತೆಯಾಗಿದ್ದಾರೆ.

    ಎಸ್‌ಡಿಆರ್‌ಎಫ್ ತಂಡ ಸ್ಥಳಕ್ಕೆ ಧಾವಿಸಿದ್ದು, ಪೊಲೀಸರು ಕಾಣೆಯಾದ ವ್ಯಕ್ತಿಗಳನ್ನು ಪತ್ತೆಹಚ್ಚಲು ಸ್ಥಳೀಯ ಡೈವರ್‌ಗಳನ್ನು ಬಳಸಿಕೊಂಡಿದ್ದಾರೆ. ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದೆ. ಉಳಿದವರಿಗಾಗಿ ಹುಡುಕಾಟ ನಡೆಯುತ್ತಿದೆ. ಇದನ್ನೂ ಓದಿ: ಟಿಪ್ಪರ್‌, ಇನ್ನೋವಾ ನಡುವೆ ಡಿಕ್ಕಿ – ಚಾಲಕ ಸಜೀವ ದಹನ

    22 ಜನರನ್ನು ಹೊತ್ತು ಭರತಪುರಕ್ಕೆ ದೋಣಿ ಪ್ರಯಾಣಿಸುತ್ತಿದ್ದಾಗ ಅವಘಡ ಸಂಭವಿಸಿದೆ. ನದಿಯ ಬಲವಾದ ಪ್ರವಾಹದಿಂದಾಗಿ ದೋಣಿ ಪಲ್ಟಿಯಾಗಿದೆ. ಘಟನೆಯಲ್ಲಿ 60 ವರ್ಷದ ಮಹಿಳೆಯೊಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಐದು ಮಕ್ಕಳು ಸೇರಿದಂತೆ ಎಂಟು ಜನರು ನಾಪತ್ತೆಯಾಗಿದ್ದಾರೆ. ಬಾಕಿ ಜನರು ಈಜಿ ದಡ ಸೇರಿದ್ದಾರೆ.

    ಭರ್ತಾಪುರ ಗ್ರಾಮದ ಪುರುಷರು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 22 ನಿವಾಸಿಗಳು ನದಿ ಪಕ್ಕದ ಲಖಿಂಪುರ ಖೇರಿ ಜಿಲ್ಲೆಯ ಮಾರುಕಟ್ಟೆಗೆ ಹೋಗಿದ್ದರು. ಈ ಗ್ರಾಮವು ಕತರ್ನಿಯಾ ಘಾಟ್ ವನ್ಯಜೀವಿ ಅಭಯಾರಣ್ಯದಲ್ಲಿ ನದಿಯ ಒಂದು ಬದಿಯಲ್ಲಿರುವ ದ್ವೀಪದಂತಿದೆ. ದೋಣಿಯಲ್ಲಿ ವಾಪಸ್‌ ಬರುವಾಗ ಘಟನೆ ನಡೆದಿದೆ. ಇದನ್ನೂ ಓದಿ: 5 ಕೋಟಿಯ ಆಸ್ತಿ ಬರೆದುಕೊಟ್ಟು ಮಗಳಂತೆ ಸಾಕಿದ್ರು – ಅನ್ನ ಕೊಟ್ಟ ಮನೆಗೆ ಕನ್ನ ಹಾಕಿದ ಮನೆಗೆಲಸದಾಕೆ ಬಂಧನ

  • ಲವ್ವರ್‌ ನೋಡಲು ಬಂದ ಯುವಕನಿಗೆ ಥಳಿಸಿ ಹತ್ಯೆ; ಮನನೊಂದು ಕತ್ತು ಕೊಯ್ದುಕೊಂಡ ಪ್ರೇಯಸಿ

    ಲವ್ವರ್‌ ನೋಡಲು ಬಂದ ಯುವಕನಿಗೆ ಥಳಿಸಿ ಹತ್ಯೆ; ಮನನೊಂದು ಕತ್ತು ಕೊಯ್ದುಕೊಂಡ ಪ್ರೇಯಸಿ

    – ಆಘಾತಕ್ಕೆ ಒಳಗಾಗಿ ಆತ್ಮಹತ್ಯೆಗೆ ಯತ್ನಿಸಿದ ಹುಡುಗಿ ಚಿಕ್ಕಪ್ಪ

    ಲಕ್ನೋ: ತನ್ನ ಪ್ರೇಯಸಿಯನ್ನು ಆಕೆಯ ಮನೆಯವರು ಬಲವಂತವಾಗಿ ಮದುವೆ ಮಾಡುತ್ತಿದ್ದಾರೆಂದು ಸ್ಥಳಕ್ಕೆ ಧಾವಿಸಿದ ವ್ಯಕ್ತಿಯನ್ನು ಹೊಡೆದು ಕೊಂದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

    ರವಿ (35) ಹತ್ಯೆಯಾದ ವ್ಯಕ್ತಿ. ಆತನ ಪ್ರೇಯಸಿ ಮನಿಷಾಳಿಗೆ ಬಲವಂತವಾಗಿ ಮದುವೆ ಮಾಡಲಾಗುತ್ತಿದೆ ಎಂದು ತಿಳಿದು, ಆಕೆಯನ್ನು ಭೇಟಿಯಾಗಲು ಹೋಗಿದ್ದ. ಆದರೆ, ಹುಡುಗಿ ಮನೆಯವರು ಆತನನ್ನು ಹಿಡಿದು ಕಂಬಕ್ಕೆ ಕಟ್ಟಿಹಾಕಿ ಥಳಿಸಿದ್ದಾರೆ. ಇದನ್ನೂ ಓದಿ: ಚಿಕ್ಕಮಗಳೂರು | ಮಗುವಿನ ಎದುರೇ ಪತ್ನಿಯನ್ನು ಥಳಿಸಿ ಕೊಂದ ಪತಿ

    ಹುಡುಗಿ ಮನೆಯವರು ಮತ್ತು ಗ್ರಾಮಸ್ಥರು ಸೇರಿಕೊಂಡು ಹೊಡೆದಿದ್ದರಿಂದ ಗಂಭೀರ ಗಾಯಗೊಂಡ ರವಿ ಕುಡಿಯಲು ನೀರು ಕೇಳಿದ್ದಾನೆ. ಆದರೆ, ಯಾರು ಸಹ ನೀರು ಕೊಡಲಿಲ್ಲ. ನಂತರ ಆತ ಮೃತಪಟ್ಟಿದ್ದಾನೆ. ಅವನು ಸತ್ತ ನಂತರ ಹಲ್ಲೆ ನಡೆಸಿದವರಿಗೆ ಪರಿಸ್ಥಿತಿಯ ಗಂಭೀರತೆ ಅರಿವಾಗಿದೆ.

    ಹುಡುಗಿಯ ಚಿಕ್ಕಪ್ಪ ಪಿಂಟು ಕೊಲೆ ಆರೋಪದಿಂದ ತಪ್ಪಿಸಿಕೊಳ್ಳಲು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ನಂತರ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಪೊಲೀಸರು ರವಿ ಮತ್ತು ಪಿಂಟು ಅವರನ್ನು ಮೌದಾಹದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದರು. ಅಲ್ಲಿ ವೈದ್ಯರು ರವಿ ಮೃತಪಟ್ಟಿದ್ದಾನೆ ಎಂದು ತಿಳಿಸಿದ್ದಾರೆ. ಚಿಕಿತ್ಸೆಗಾಗಿ ಪಿಂಟುನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

    ರವಿ ಮೃತಪಟ್ಟ ಸುದ್ದಿ ತಿಳಿದು ಪ್ರೇಯಸಿ ಮನಿಷಾ ಕೂಡ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಹುಡುಗಿ ಮತ್ತು ಆಕೆಯ ಚಿಕ್ಕಪ್ಪ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ಪೊಲೀಸರು ಆಕೆಯನ್ನು ಮೌದಹಾ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ. ಇದನ್ನೂ ಓದಿ: Mysuru | ವಿದ್ಯುತ್ ತಂತಿ ತಗುಲಿ ತಾಯಿ-ಮಗ ದುರ್ಮರಣ

    ಮೊದಲು ರವಿ ನಮ್ಮ ಮನೆಗೆ ಬಂದು ಕೋಪದಲ್ಲಿ ಕೂಗಾಡಿದ. ಬಾಗಿಲು ತೆರೆದಾಗ ನನ್ನ ಪತಿಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ. ಇದು ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಸಿತು ಎಂದು ಗಂಭೀರ ಗಾಯಗೊಂಡಿರುವ ಪಿಂಟು ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ.

    ಪರ್ಚ್ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಜಗಳ ನಡೆದಿದ್ದು, ಒಬ್ಬ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೊಬ್ಬ ಗಾಯಗೊಂಡಿದ್ದಾನೆ ಎಂದು ಹಮೀರ್‌ಪುರದ ಪೊಲೀಸ್ ವರಿಷ್ಠಾಧಿಕಾರಿ ದೀಕ್ಷಾ ಶರ್ಮಾ ತಿಳಿಸಿದ್ದಾರೆ. ಹುಡುಗಿ ಕೂಡ ಗಾಯಗೊಂಡಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಹೇಳಿದ್ದಾರೆ.

  • 10 ಮುಸ್ಲಿಂ ಯುವತಿಯರನ್ನು ಕರೆತಂದು ಹಿಂದೂ ಯುವಕರು ಮದುವೆಯಾಗಿ: ಬಿಜೆಪಿ ಮಾಜಿ ಶಾಸಕ ವಿವಾದಾತ್ಮಕ ಹೇಳಿಕೆ

    10 ಮುಸ್ಲಿಂ ಯುವತಿಯರನ್ನು ಕರೆತಂದು ಹಿಂದೂ ಯುವಕರು ಮದುವೆಯಾಗಿ: ಬಿಜೆಪಿ ಮಾಜಿ ಶಾಸಕ ವಿವಾದಾತ್ಮಕ ಹೇಳಿಕೆ

    ಲಕ್ನೋ: ಹಿಂದೂ ಯುವಕರು ಕನಿಷ್ಠ 10 ಮುಸ್ಲಿಂ ಯುವತಿಯರನ್ನು ಕರೆದುಕೊಂಡು ಬಂದು ಮದುವೆಯಾಗಿ ಎಂದು ಬಿಜೆಪಿ ಮಾಜಿ ಶಾಸಕ ರಾಘವೇಂದ್ರ ಪ್ರತಾಪ್ ಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಮುಸ್ಲಿಂ ಯುವತಿಯರೊಂದಿಗೆ ಓಡಿಹೋದ ಯಾವುದೇ ಹಿಂದೂ ಯುವಕರಿಗೆ ಉದ್ಯೋಗ ವ್ಯವಸ್ಥೆ ಮಾಡಲಾಗುವುದು. ರಾಜ್ಯದಲ್ಲಿ ಹಿಂದೂಗಳು ಯಾವುದೇ ಭಯವಿಲ್ಲದೆ ಏನು ಬೇಕಾದರೂ ಮಾಡಬಹುದು ಎಂದು ಉತ್ತರ ಪ್ರದೇಶದ ಮಾಜಿ ಶಾಸಕ ನಾಲಿಗೆ ಹರಿಬಿಟ್ಟಿದ್ದಾರೆ. ಇದನ್ನೂ ಓದಿ: ಅತ್ಯಾಚಾರ ಕೇಸ್‌ – ಸ್ವಯಂ ಘೋಷಿತ ದೇವಮಾನವ ಅಸರಾಂಗೆ ಮಧ್ಯಂತರ ಜಾಮೀನು

    ಸಿದ್ಧಾರ್ಥನಗರ ಜಿಲ್ಲೆಯ ದುಮಾರಿಯಾಗಂಜ್‌ನ ಮಾಜಿ ಬಿಜೆಪಿ ಶಾಸಕ ರಾಘವೇಂದ್ರ ಪ್ರತಾಪ್ ಸಿಂಗ್, ಕ್ಷೇತ್ರದ ಧಂಖರ್‌ಪುರ ಗ್ರಾಮಕ್ಕೆ ಹೋಗಿದ್ದರು. ಅಲ್ಲಿ ಇಬ್ಬರು ಹಿಂದೂ ಮಹಿಳೆಯರನ್ನು ಮುಸ್ಲಿಂ ಪುರುಷರೊಂದಿಗೆ ಬಲವಂತವಾಗಿ ಮದುವೆಯಾಗಿಸಿ ಮತಾಂತರಿಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಮಾಜಿ ಶಾಸಕ ಹೇಳಿಕೆ ನೀಡಿದ್ದಾರೆ.

    ಮುಸ್ಲಿಂ ಹುಡುಗಿಯೊಂದಿಗೆ ಓಡಿಹೋದ ಯಾವುದೇ ಹಿಂದೂವಿನ ಮದುವೆಯನ್ನು ನಾನು ಮುಂದೆ ನಿಂತು ಮಾಡಿಸುತ್ತೇನೆ. ಅವರಿಗೆ ಉದ್ಯೋಗ ವ್ಯವಸ್ಥೆಯನ್ನೂ ಮಾಡುತ್ತೇನೆ ಎಂದು ಸಿಂಗ್‌ ತಿಳಿಸಿದ್ದಾರೆ.

    ಈಗ ಅಖಿಲೇಶ್‌ ಯಾದವ್‌ ಅವರ ಆಡಳಿತ ಇಲ್ಲ. ಭಯಪಡುವ ಅಗತ್ಯವಿಲ್ಲ. ನಾವು ನಿಮ್ಮೊಂದಿಗಿದ್ದೇವೆ. ಮುಸ್ಲಿಂ ಹುಡುಗರು ಇಬ್ಬರು ಹಿಂದೂ ಹುಡುಗಿಯರನ್ನು ಮದುವೆಯಾಗಿರುವ ವಿಚಾರ ಅಲ್ಲಿಗೆ ನಿಲ್ಲುವುದಿಲ್ಲ. ಹಿಂದೂ ಯುವಕರು ಕನಿಷ್ಠ 10 ಮುಸ್ಲಿಂ ಹುಡುಗಿಯರನ್ನು ಕರೆತಂದು ಮದುವೆಯಾಗಬೇಕು. ಉಳಿದದ್ದನ್ನು ನಾನು ನೋಡಿಕೊಳ್ಳುತ್ತೇನೆ ಎಂದು ಮಾತನಾಡಿದ್ದಾರೆ. ಇದನ್ನೂ ಓದಿ: 25 ರಿಂದ 35 ಲಕ್ಷಕ್ಕೆ ಸರ್ಕಾರಿ ಹುದ್ದೆ ಮಾರಾಟ: ತನಿಖೆ ನಡೆಸಲು ತ.ನಾಡು ಪೊಲೀಸರಿಗೆ ಇಡಿ ಪತ್ರ

    ದುಮಾರಿಯಾಗಂಜ್ ಪ್ರದೇಶವನ್ನು ಮಿನಿ ಪಾಕಿಸ್ತಾನ ಎಂದು ಕರೆಯಲಾಗುತ್ತಿತ್ತು. ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶದ ಮುಖ್ಯಮಂತ್ರಿಯಾದಾಗಿನಿಂದ, ಇಲ್ಲಿನ ಜನರ ಭಯಕ್ಕೆ ಕಡಿವಾಣ ಬಿದ್ದಿದೆ. ಇಲ್ಲದಿದ್ದರೆ, ಹಿಂದೂಗಳು ಭಯದಿಂದ ವಾಸಿಸುತ್ತಿದ್ದ ಹಲವಾರು ಹಳ್ಳಿಗಳಿದ್ದವು. ಅವರ ಹೆಣ್ಣುಮಕ್ಕಳು ಮತ್ತು ಸೊಸೆಯಂದಿರು ಸುರಕ್ಷಿತವಾಗಿರಲಿಲ್ಲ. ಧಂಖರ್‌ಪುರ ಗ್ರಾಮದಲ್ಲಿ ಮುಸ್ಲಿಂ ಬಹುಸಂಖ್ಯಾತರಿದ್ದು, ಒಂದು ವಾರದಲ್ಲಿ ಇಬ್ಬರು ಹಿಂದೂಗಳನ್ನು ಆಮಿಷವೊಡ್ಡಿ ಇಸ್ಲಾಂಗೆ ಮತಾಂತರಗೊಳಿಸಲಾಯಿತು ಎಂದು ಆರೋಪಿಸಿದ್ದಾರೆ.

    ಬಿಜೆಪಿ ಮಾಜಿ ಶಾಸಕನ ಹೇಳಿಕೆಗಳನ್ನು ಸಮಾಜವಾದಿ ಪಕ್ಷ ಖಂಡಿಸಿದೆ. ಕೋಮು ಸಾಮರಸ್ಯವನ್ನು ಕದಡಲು ಪದೇ ಪದೇ ಪ್ರಯತ್ನಗಳು ನಡೆಯುತ್ತಿವೆ. ಮುಸ್ಲಿಮರನ್ನು ನಿರಂತರವಾಗಿ ಅವಮಾನಿಸಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದೆ.

  • ಮೊರಾದಾಬಾದ್ ರೆಸ್ಟೋರೆಂಟ್‌ನಲ್ಲಿ ಅಗ್ನಿ ಅವಘಡ – ಓರ್ವ ಮಹಿಳೆ ಸಾವು, ಆರು ಮಂದಿಗೆ ಗಾಯ

    ಮೊರಾದಾಬಾದ್ ರೆಸ್ಟೋರೆಂಟ್‌ನಲ್ಲಿ ಅಗ್ನಿ ಅವಘಡ – ಓರ್ವ ಮಹಿಳೆ ಸಾವು, ಆರು ಮಂದಿಗೆ ಗಾಯ

    ಲಕ್ನೋ: ಉತ್ತರಪ್ರದೇಶದ ಮೊರಾದಾಬಾದ್‌ನ (Moradabad) ರೆಸ್ಟೋರೆಂಟ್‌ನಲ್ಲಿ ಭಾರೀ ಅಗ್ನಿ (Fire) ಅವಘಡ ಸಂಭವಿಸಿ, ಓರ್ವ ಮಹಿಳೆ ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

    ಮಾಯಾ (56) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಮೊರಾದಾಬಾದ್‌ನ ಶ್ರೀರಾಂಪುರ ರೋಡ್ ಬಳಿಯಿರುವ 5 ಅಂತಸ್ತಿನ ರೆಸ್ಟೋರೆಂಟ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ನೆಲ ಮಹಡಿಯಲ್ಲಿರುವ ರೆಸ್ಟೋರೆಂಟ್‌ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿತು. ಪರಿಣಾಮ 4 ಸಿಲಿಂಡರ್‌ಗಳು ಸ್ಫೋಟಗೊಂಡು ಬೆಂಕಿಯ ಕೆನ್ನಾಲಿಗೆಯು ಇತರ ಇತರ ಮಹಡಿಗಳಿಗೆ ಹರಡಿತ್ತು. ಇದನ್ನೂ ಓದಿ: CJI ಗವಾಯಿ ಮೇಲೆ ಶೂ ಎಸೆದ ಕೇಸ್ – ಆರೋಪಿ ರಾಕೇಶ್‌ಗೆ ನೋಟಿಸ್ ನೀಡಲು ನಿರಾಕರಿಸಿದ ಸುಪ್ರೀಂ

    ಈ ಬಗ್ಗೆ ಮೊರಾದಾಬಾದ್ ಸಿಎಫ್‌ಒ ರಾಜೀವ್ ಕುಮಾರ್ ಪಾಂಡೆ ಮಾತನಾಡಿ, ರಾತ್ರಿ 10 ಗಂಟೆಗೆ ರೆಸ್ಟೋರೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಬಗ್ಗೆ ಕರೆ ಬಂದಿತ್ತು. ಬೆಂಕಿಯ ತೀವ್ರಗೆ ಸುಮಾರು ನಾಲ್ಕು ಗ್ಯಾಸ್ ಸಿಲಿಂಡರ್‌ಗಳು ಸ್ಫೋಟಗೊಂಡಿತ್ತು. ರೆಸ್ಟೋರೆಂಟ್‌ನಲ್ಲಿದ್ದ ಸುಮಾರು 16 ಜನರನ್ನು ರಕ್ಷಿಸಿದ್ದೇವೆ. ಇದರಲ್ಲಿ ನಾಲ್ಕು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿ, ಒಂದು ನಾಯಿಯ ರಕ್ಷಣೆ ಮಾಡಿದ್ದೇವೆ. ಬೆಂಕಿಯ ನಿಖರ ಕಾರಣ ತಿಳಿದುಬಂದಿಲ್ಲ ಎಂದಿದ್ದಾರೆ.

    ಮೊರಾದಾಬಾದ್ ಜಿಲ್ಲಾ ಆಸ್ಪತ್ರೆಯ ತುರ್ತು ವೈದ್ಯಕೀಯ ಅಧಿಕಾರಿ ಡಾ. ಜುನೈದ್ ಅಸಾರಿ ಅವರು ಮಾತನಾಡಿ, ಒಟ್ಟು ಏಳು ರೋಗಿಗಳನ್ನು ಆಸ್ಪತ್ರೆಗೆ ಕರೆತರಲಾಗಿತ್ತು. ಅವರಲ್ಲಿ ಒಬ್ಬರಾದ 56 ವರ್ಷ ವಯಸ್ಸಿನ ಮಾಯಾ ಮೃತಪಟ್ಟಿದ್ದಾರೆ. ಉಳಿದ ರೋಗಿಗಳು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ.

  • ಪ್ರಯಾಗ್‌ರಾಜ್‌ನಲ್ಲಿ ಪತ್ರಕರ್ತನ ಬರ್ಬರ ಹತ್ಯೆ

    ಪ್ರಯಾಗ್‌ರಾಜ್‌ನಲ್ಲಿ ಪತ್ರಕರ್ತನ ಬರ್ಬರ ಹತ್ಯೆ

    ಲಕ್ನೋ: ಪ್ರಯಾಗ್‌ರಾಜ್‌ನಲ್ಲಿ (Prayagraj) ಪತ್ರಕರ್ತರೊಬ್ಬರ (Journalist) ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

    ಹತ್ಯೆಗೀಡಾದ ವ್ಯಕ್ತಿಯನ್ನು ಲಕ್ಷ್ಮಿ ನಾರಾಯಣ್ ಸಿಂಗ್ ಅಲಿಯಾಸ್ ಪಪ್ಪು (54) ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಅವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಸ್ವರೂಪ್ ರಾಣಿ ನೆಹರು ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಲ್ಲಿ ವೈದ್ಯರು ಮೃತಪಟ್ಟಿದ್ದಾಗಿ ಖಚಿತಪಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು | ಕೋಲ್ಕತ್ತಾ ಮೂಲದ ಮಹಿಳೆ ಮೇಲೆ ಗ್ಯಾಂಗ್ ರೇಪ್ – ಆರು ಮಂದಿ ಅರೆಸ್ಟ್

    ಕೊಲೆಯಾದ ಪಪ್ಪು ಹೈಕೋರ್ಟ್ ಬಾರ್ ಅಸೋಸಿಯೇಷನ್‌ನ ಮಾಜಿ ​​ಅಧ್ಯಕ್ಷ ಅಶೋಕ್ ಸಿಂಗ್ ಅವರ ಸೋದರಳಿಯ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ (ಎಡಿಸಿಪಿ) ಪುಷ್ಕರ್ ವರ್ಮಾ ತಿಳಿಸಿದ್ದಾರೆ.

    ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ದುಷ್ಕರ್ಮಿಗಳನ್ನು ಗುರುತಿಸಲು ಪೊಲೀಸರ ತಂಡಗಳು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿವೆ. ಆರೋಪಿಗಳ ಬಂಧನಕ್ಕೆ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪ್ರೀತಿಸಿ, ಮದುವೆಯಾಗ್ತೀನಿ ಅಂತ ನಂಬಿಸಿ ಸೆಕ್ಸ್ – ಹಿಂದೂ ಹುಡುಗಿಗೆ ವಂಚಿಸಿ ಮುಸ್ಲಿಂ ಯುವತಿ ಜೊತೆ ಎಂಗೇಜ್

  • ಉದ್ಯಮಿ ಕೊಲೆ ಪ್ರಕರಣ ಹಿಂದೂ ಮಹಾಸಭಾ ನಾಯಕಿ ಪೂಜಾ ಪಾಂಡೆ ಅರೆಸ್ಟ್‌

    ಉದ್ಯಮಿ ಕೊಲೆ ಪ್ರಕರಣ ಹಿಂದೂ ಮಹಾಸಭಾ ನಾಯಕಿ ಪೂಜಾ ಪಾಂಡೆ ಅರೆಸ್ಟ್‌

    ಜೈಪುರ್‌: ಉತ್ತರ ಪ್ರದೇಶದ (Uttar Pradesh) ಉದ್ಯಮಿ ಅಭಿಷೇಕ್ ಗುಪ್ತಾ ಅವರ ಕೊಲೆ ಪ್ರಕರಣದಲ್ಲಿ ಹಿಂದೂ ಮಹಾಸಭಾ (Hindu Mahasabha) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪೂಜಾ ಶಕುನ್ ಪಾಂಡೆಯನ್ನು ಪೊಲೀಸರು ಬಂಧಿಸಿದ್ದಾರೆ.

    ರಾಜಸ್ಥಾನದ (Rajasthan) ಭರತ್‌ಪುರ ಜಿಲ್ಲೆಯ ಆಗ್ರಾ-ಜೈಪುರ ಹೆದ್ದಾರಿಯ ಲೋಧಾ ಬೈಪಾಸ್ ಬಳಿ ಶುಕ್ರವಾರ ತಡರಾತ್ರಿ ಪಾಂಡೆ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಸೆಪ್ಟೆಂಬರ್ 26 ರಂದು ಅಲಿಗಢ ನಗರದ ಹೊರವಲಯದಲ್ಲಿ ಬಸ್ ಹತ್ತುತ್ತಿದ್ದಾಗ ಅಭಿಷೇಕ್ ಗುಪ್ತಾ ಅವರಿಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೂಜಾ ಅವರ ಪತಿ ಅಶೋಕ್ ಪಾಂಡೆ ಮತ್ತು ಶಾರ್ಪ್ ಶೂಟರ್‌ ಮೊಹಮ್ಮದ್ ಫಜಲ್ ಮತ್ತು ಆಸಿಫ್ ಎಂಬವರನ್ನು ಪೊಲೀಸರು ಬಂಧಿಸಿದ್ದರು. ವಿಚಾರಣೆ ವೇಳೆ ಪೂಜಾ ದಂಪತಿ ಸೂಚನೆಯ ಮೇರೆಗೆ ಹತ್ಯೆ ಮಾಡಿದ್ದಾಗಿ ಶಾರ್ಪ್‌ ಶೂಟರ್‌ಗಳು ತಿಳಿಸಿದ್ದರು. ಈ ಮಾಹಿತಿ ಆಧಾರದ ಮೇಲೆ ಅವರನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ – ಮೂವರು ಅರೆಸ್ಟ್‌

    ಬಹಳ ಸಮಯದಿಂದ ಉದ್ಯಮಿಗೆ ದಂಪತಿ ಕಿರುಕುಳ ನೀಡುತ್ತಿದ್ದರು. ಅವರ ಜೊತೆ ಹಣಕಾಸಿನ ವಿವಾದದಿಂದ ಪಾಂಡೆ ದಂಪತಿ ಕೊಲೆಗೆ ಸುಪಾರಿ ನೀಡಿದ್ದರು. ಇನ್ನೂ ಶೂಟರ್‌ಗಳಿಬ್ಬರೂ ಪಾಂಡೆ ದಂಪತಿಗೆ ಪರಿಚಿತರಾದ್ದು, ಆಗಾಗ ಅವರ ಮನೆಗೆ ಭೇಟಿ ನೀಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

    ಪೂಜಾ ಪಾಂಡೆ ಬಂಧನಕ್ಕೆ 50,000 ರೂ. ಬಹುಮಾನ ಘೋಷಿಸಲಾಗಿತ್ತು. ಅವರನ್ನು ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಿ ಜೈಲಿಗೆ ಕಳುಹಿಸಲಾಗಿದೆ. ಇದನ್ನೂ ಓದಿ: ಶಿವಮೊಗ್ಗ ಜೈಲಿಗೆ ಬಿಸ್ಕೆಟ್​ ಪ್ಯಾಕ್​ನಲ್ಲಿ ಗಾಂಜಾ ಸಾಗಾಟ – ಇಬ್ಬರು ಅರೆಸ್ಟ್‌

  • ಟೇಕಾಫ್‌ ಆದ ಕೆಲವೇ ಹೊತ್ತಲ್ಲಿ ಸ್ಕಿಡ್‌ ಆಗಿ ಹುಲ್ಲಿನ ಮೇಲೆ ಬಿದ್ದ ಪ್ರೈವೆಟ್ ಜೆಟ್‌

    ಟೇಕಾಫ್‌ ಆದ ಕೆಲವೇ ಹೊತ್ತಲ್ಲಿ ಸ್ಕಿಡ್‌ ಆಗಿ ಹುಲ್ಲಿನ ಮೇಲೆ ಬಿದ್ದ ಪ್ರೈವೆಟ್ ಜೆಟ್‌

    ಲಕ್ನೋ: ಉತ್ತರ ಪ್ರದೇಶದ (Uttara Pradesh) ಫರೂಕಾಬಾದ್‌ನ ವಾಯುನೆಲೆಯಿಂದ ಭೋಪಾಲ್‌ಗೆ ಹೊರಟಿದ್ದ ಖಾಸಗಿ ಜೆಟ್ (Private Jet) ವಿಮಾನವು ರನ್‌ವೇಯಿಂದ ಟೇಕಾಫ್‌ ಆದ ಕೆಲವೇ ಸೆಕೆಂಡುಗಳಲ್ಲಿ ಸ್ಕಿಡ್‌ ಆಗಿ ಹುಲ್ಲಿನ ಮೇಲೆ ಬಿದ್ದ ಘಟನೆ ನಡೆದಿದೆ.

    ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಖಾಸಗಿ ಆಹಾರ ಸಂಸ್ಕರಣಾ ಕಂಪನಿಯ ಉನ್ನತ ಸದಸ್ಯರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಇದನ್ನೂ ಓದಿ: ಸ್ಪೆಷಲ್‌ ರಾವಲ್ಪಿಂಡಿ ಚಿಕನ್ ಟಿಕ್ಕಾ ಮಸಾಲಾ, ಬಾಲಕೋಟ್ ತಿರಮಿಸು ತಿಂದ ಭಾರತೀಯ ವಾಯುಸೇನೆ

    ಈ ಘಟನೆ ಮೊಹಮ್ಮದಾಬಾದ್ ವಾಯುನೆಲೆಯಲ್ಲಿ ನಡೆದಿದೆ. ಅವಘಡ ಸಂಬಂಧ ವಿವರವಾದ ತನಿಖೆ ನಡೆಯುತ್ತಿದೆ. ವಿಮಾನದ ಟೈರ್‌ಗಳಲ್ಲಿ ಕಡಿಮೆ ಗಾಳಿಯ ಒತ್ತಡವು ಘಟನೆಗೆ ಕಾರಣವಾಗಿರಬಹುದು ಎನ್ನಲಾಗಿದೆ.

    ವುಡ್‌ಪೆಕರ್ ಗ್ರೀನ್‌ಗ್ರಿ ನ್ಯೂಟ್ರಿಯಂಟ್ಸ್ ಪ್ರೈವೇಟ್ ಲಿಮಿಟೆಡ್‌ನ ಸದಸ್ಯರು, ಉಪ ವ್ಯವಸ್ಥಾಪಕ ನಿರ್ದೇಶಕ ಅಜಯ್ ಅರೋರಾ, ಎಸ್‌ಬಿಐ ಮುಖ್ಯಸ್ಥ ಸುಮಿತ್ ಶರ್ಮಾ, ಬಿಪಿಒ ರಾಕೇಶ್ ಟಿಕು – ಕ್ಯಾಪ್ಟನ್ ನಸೀಬ್ ಬಮಲ್ ಮತ್ತು ಕ್ಯಾಪ್ಟನ್ ಪ್ರತೀಕ್ ಫರ್ನಾಂಡಿಸ್ ಜೆಟ್‌ನಲ್ಲಿ ಇದ್ದರು. ಇದನ್ನೂ ಓದಿ: ನಿಯಂತ್ರಣ ತಪ್ಪಿ 6 ಕಾರುಗಳಿಗೆ ಡಿಕ್ಕಿ ಹೊಡೆದ ಲ್ಯಾಂಡ್ ರೋವರ್ ಡಿಫೆಂಡರ್ – ಚಾಲಕ ವಶಕ್ಕೆ

  • 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಮೈತ್ರಿ ಇಲ್ಲ, ಬಿಎಸ್‌ಪಿ ಏಕಾಂಗಿ ಸ್ಪರ್ಧೆ: ಮಾಯಾವತಿ

    2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಮೈತ್ರಿ ಇಲ್ಲ, ಬಿಎಸ್‌ಪಿ ಏಕಾಂಗಿ ಸ್ಪರ್ಧೆ: ಮಾಯಾವತಿ

    ಲಕ್ನೋ: 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ (BSP) ಏಕಾಂಗಿಯಾಗಿ ಸ್ಪರ್ಧಿಸಲಿದ್ದು, ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಪಕ್ಷದ ಮುಖ್ಯಸ್ಥೆ ಮಾಯಾವತಿ (Mayawati) ಸ್ಪಷ್ಟಪಡಿಸಿದ್ದಾರೆ.

    ಲಕ್ನೋದಲ್ಲಿ ಕಾನ್ಶಿರಾಮ್ ಅವರ ಪುಣ್ಯತಿಥಿಯಂದು ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯ ಅಥವಾ ದೇಶದ ಇತರ ಭಾಗಗಳಲ್ಲಿ ಮೈತ್ರಿ ಮಾಡಿಕೊಂಡು ಚುನಾವಣೆಯಲ್ಲಿ ಸ್ಪರ್ಧಿಸುವುದರಿಂದ ಪಕ್ಷಕ್ಕೆ ಯಾವುದೇ ಪ್ರಯೋಜನವಾಗಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಸಂಪುಟ ವಿಸ್ತರಣೆ ವೇಳೆ ನನಗೆ ಸಚಿವ ಸ್ಥಾನ ಸಿಗಲಿದೆ: ನಾರಾಯಣಸ್ವಾಮಿ

    ನಮ್ಮ ಮತಗಳು ವರ್ಗಾವಣೆಯಾಗುತ್ತವೆ, ಆದರೆ ಇನ್ನೊಂದು ಪಕ್ಷವು ನಮಗೆ ಮತಗಳನ್ನು ವರ್ಗಾಯಿಸುವುದಿಲ್ಲ. ಇದು ನಮ್ಮ ಮತಗಳ ಪಾಲನ್ನು ಕಡಿಮೆ ಮಾಡುತ್ತದೆ. ಮೈತ್ರಿಕೂಟಗಳು ಸರ್ಕಾರ ರಚಿಸಿದಾಗಲೂ ಅವು ಹೆಚ್ಚು ಕಾಲ ಉಳಿಯುವುದಿಲ್ಲ ಎಂದರು. ಇದನ್ನೂ ಓದಿ: ಸ್ಪೆಷಲ್‌ ರಾವಲ್ಪಿಂಡಿ ಚಿಕನ್ ಟಿಕ್ಕಾ ಮಸಾಲಾ, ಬಾಲಕೋಟ್ ತಿರಮಿಸು ತಿಂದ ಭಾರತೀಯ ವಾಯುಸೇನೆ

    ಹಿಂದಿನ ಚುನಾವಣೆಗಳನ್ನು ನೆನಪಿಸಿಕೊಂಡ ಅವರು, ಬಿಎಸ್ಪಿ ಮುಖ್ಯಸ್ಥರು ಹಿಂದೆ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದಾಗ ಪಕ್ಷವು ಕೇವಲ 67 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಯಿತು. ನಮ್ಮದೇ ಬಲದಿಂದ, ನಾವು 2007ರಲ್ಲಿ ಬಹುಮತದ ಸರ್ಕಾರವನ್ನು ರಚಿಸಲು ಸಾಧ್ಯವಾಯಿತು ಎಂದು ಹೇಳಿದರು. ಇದನ್ನೂ ಓದಿ: ಶಾಸ್ತ್ರೋಕ್ತವಾಗಿ ತೆರೆದ ಹಾಸನಾಂಬೆ ಗರ್ಭಗುಡಿ ಬಾಗಿಲು – ಉರಿಯುತ್ತಿದ್ದ ದೀಪ, ಬಾಡದ ಹೂವು, ಹಳಸದ ನೈವೇದ್ಯ

    ಎಸ್ಪಿ ನಾಯಕ ಅಜಂ ಖಾನ್ ಬಿಎಸ್ಪಿ ಸೇರ್ಪಡೆಯಾಗುವ ಬಗ್ಗೆ ಮಾತನಾಡಿದ ಅವರು, ಅವರ ಹೆಸರನ್ನು ನೇರವಾಗಿ ಉಲ್ಲೇಖಿಸದೆ, ಇತರ ಪಕ್ಷಗಳ ನಾಯಕರು ಬಿಎಸ್ಪಿಗೆ ಸೇರುತ್ತಿದ್ದಾರೆ ಮತ್ತು ದೆಹಲಿ ಮತ್ತು ಲಕ್ನೋದಲ್ಲಿ ಅವರನ್ನು ಭೇಟಿ ಮಾಡಿದ್ದಾರೆ ಎಂದು ಕಳೆದ ತಿಂಗಳು ಸುಳ್ಳು ವರದಿಗಳು ಹರಡಲು ಪ್ರಾರಂಭಿಸಿವೆ ಎಂದು ಹೇಳಿದರು. ನಾನು ಯಾರನ್ನೂ ಭೇಟಿಯಾಗಿಲ್ಲ. ನಾನು ಯಾರನ್ನೂ ರಹಸ್ಯವಾಗಿ ಭೇಟಿಯಾಗುವುದಿಲ್ಲ ಎಂದು ಮಾಯಾವತಿ ಸ್ಪಷ್ಟಪಡಿಸಿದರು. ಇದನ್ನೂ ಓದಿ: ಜಾತಿಗಣತಿಗೆ ಹೋದ ಶಿಕ್ಷಕಿಯನ್ನೇ ಕೂಡಿ ಹಾಕಿದ ವ್ಯಕ್ತಿ!

  • ನಿಯಂತ್ರಣ ತಪ್ಪಿ 6 ಕಾರುಗಳಿಗೆ ಡಿಕ್ಕಿ ಹೊಡೆದ ಲ್ಯಾಂಡ್ ರೋವರ್ ಡಿಫೆಂಡರ್ – ಚಾಲಕ ವಶಕ್ಕೆ

    ನಿಯಂತ್ರಣ ತಪ್ಪಿ 6 ಕಾರುಗಳಿಗೆ ಡಿಕ್ಕಿ ಹೊಡೆದ ಲ್ಯಾಂಡ್ ರೋವರ್ ಡಿಫೆಂಡರ್ – ಚಾಲಕ ವಶಕ್ಕೆ

    ಲಕ್ನೋ: ವೇಗವಾಗಿ ಬಂದ ಲ್ಯಾಂಡ್ ರೋವರ್ ಡಿಫೆಂಡರ್ (Land Rover Defender) ಕಾರು ಚಾಲಕನ ನಿಯಂತ್ರಣ ತಪ್ಪಿ ಕನಿಷ್ಟ 6 ಕಾರುಗಳಿಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ ಘಟನೆ ನೋಯ್ಡಾ (Noida) ಮಾಲ್ ಬಳಿ ನಡೆದಿದೆ.

    ಬುಧವಾರ ರಾತ್ರಿ ನೋಯ್ಡಾದ ಮಾಲ್ ಬಳಿ ವೇಗವಾಗಿ ಬಂದ ಲ್ಯಾಂಡ್ ರೋವರ್ ಡಿಫೆಂಡರ್ ನಿಯಂತ್ರಣ ತಪ್ಪಿ ಕನಿಷ್ಠ ಆರು ವಾಹನಗಳಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ಲ್ಯಾಂಡ್ ರೋವರ್ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ಇದನ್ನೂ ಓದಿ: ಬಿಹಾರ ಎಲೆಕ್ಷನ್ ತನಕ ಸುಮ್ಮನಿದ್ದುಬಿಡಿ: ರಾಜಣ್ಣ ಮಾರ್ಮಿಕ ನುಡಿ

    ಸೆಕ್ಟರ್ 129ರ ಗುಲ್ಶನ್ ಒನ್29 ಮಾಲ್ ಹೊರಗೆ ಈ ಘಟನೆ ನಡೆದಿದೆ. ವೇಗವಾಗಿ ಬಂದ ಲ್ಯಾಂಡ್ ರೋವರ್ ಕಾರು 5 ನಾಲ್ಕು ಚಕ್ರದ ವಾಹನಗಳು ಮತ್ತು ಒಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದಿದೆ. ಕಾರು ಚಾಲಕನನ್ನು ಸೆಕ್ಟರ್ 100ರ ನಿವಾಸಿ ಸುನೀಲ್ ಎಂದು ಗುರುತಿಸಲಾಗಿದ್ದು, ಕಾರು 1111 ಎಂಬ ವಿವಿಐಪಿ ನಂಬರ್ ಪ್ಲೇಟ್ ಹೊಂದಿದೆ. ಇದನ್ನೂ ಓದಿ: ಭಾರತಕ್ಕೆ ಆಗಮಿಸಿದ ತಾಲಿಬಾನ್‌ ವಿದೇಶಾಂಗ ಸಚಿವ

    ಘಟನೆಯ ಮಾಹಿತಿ ತಿಳಿದ ತಕ್ಷಣ ಎಕ್ಸ್‌ಪ್ರೆಸ್‌ವೇ ಪೊಲೀಸ್ ಠಾಣೆಯ ಪೊಲೀಸರ ತಂಡ ಸ್ಥಳಕ್ಕೆ ಧಾವಿಸಿ ಚಾಲಕನನ್ನು ವಶಕ್ಕೆ ಪಡೆದಿದೆ ಎಂದು ನೋಯ್ಡಾ ಪೊಲೀಸ್ ಕಮಿಷನರೇಟ್ ತಿಳಿಸಿದೆ. ಅಲ್ಲದೇ ಇತರೆ ಕಾರುಗಳಿಗೆ ಡಿಕ್ಕಿ ಹೊಡೆದ ಲ್ಯಾಂಡ್ ರೋವರ್ ಕಾರನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕೆಮ್ಮಿನ ಸಿರಪ್ ಸೇವಿಸಿ 20ಕ್ಕೂ ಹೆಚ್ಚು ಮಕ್ಕಳ ಸಾವು – ಫಾರ್ಮಾ ಕಂಪನಿ ಮಾಲೀಕ ಅರೆಸ್ಟ್

  • ಅನಧಿಕೃತ ಮಸೀದಿಯನ್ನು ಜೆಸಿಬಿಯಿಂದ ಕೆಡವಿದ UP ಮುಸ್ಲಿಮರು!

    ಅನಧಿಕೃತ ಮಸೀದಿಯನ್ನು ಜೆಸಿಬಿಯಿಂದ ಕೆಡವಿದ UP ಮುಸ್ಲಿಮರು!

    ಲಕ್ನೋ: ಉತ್ತರ ಪ್ರದೇಶದಲ್ಲಿ (Uttar Pradesh) ಈಗ ಮುಸ್ಲಿಮರೇ ಅಕ್ರಮವಾಗಿ ನಿರ್ಮಾಣಗೊಂಡ ಮಸೀದಿಯನ್ನು (Mosque) ಜೆಸಿಬಿಯಿಂದ ಕೆಡವಿದ್ದಾರೆ. ಸಂಭಾಲ್‌ (Sambhal) ಜಿಲ್ಲೆಯ ಅಸ್ಮೋಲಿ ಪೊಲೀಸ್ ಠಾಣೆ ವ್ಯಾಪ್ತಿಯ ರಾಯಾ ಬುಜುರ್ಗ್ ಗ್ರಾಮದಲ್ಲಿ ಮುಸ್ಲಿಮರು ಭಾನುವಾರ ಗೌಸುಲ್ಬರಾ ಮಸೀದಿಯನ್ನು ನೆಲಸಮ ಮಾಡಿದ್ದಾರೆ.

    ಅನಧಿಕೃತವಾಗಿ  ನಿರ್ಮಾಣಗೊಂಡಿದ್ದ ಮಸೀದಿಯನ್ನು ತೆಗೆಯುವಂತೆ ಜಿಲ್ಲಾಡಳಿತ 4 ದಿನಗಳ ಡೆಡ್‌ಲೈನ್‌ ನೀಡಿತ್ತು. ಈ ಗಡುವು ಮುಗಿಯುತ್ತಿದ್ದಂತೆ ಮುಸ್ಲಿಮರೇ ಮಸೀದಿಯನ್ನು ಕೆಡವಿದ್ದಾರೆ.

    ಗೌಸುಲ್ಬರಾ ಮಸೀದಿಯನ್ನು ಕೆಡವಲು ಜಿಲ್ಲಾಡಳಿತ ಮುಂದಾಗಿತ್ತು. ಆದರೆ ಮಸೀದಿ ಸಮಿತಿಯ ಸದಸ್ಯರು ನಾವೇ ಈ ಮಸೀದಿಯನ್ನು ಕೆಡವುತ್ತೇವೆ. 4 ದಿನಗಳ ಸಮಯ ನೀಡಿ ಎಂದು ವಿನಂತಿಸಿದ್ದರು. ಇದನ್ನೂ ಓದಿ:  ದುರ್ಗಾ ವಿಗ್ರಹ ವಿಸರ್ಜನೆ ವೇಳೆ ಕಲ್ಲು ತೂರಾಟ – ಇಂಟರ್ನೆಟ್ ಸ್ಥಗಿತ, 36 ಗಂಟೆಗಳ ಕಾಲ ಕರ್ಫ್ಯೂ

    ಅಕ್ಟೋಬರ್ 2 ರಂದು ಈ ಪ್ರದೇಶದಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಮದುವೆ ಮಂಟಪವನ್ನು ಪೊಲೀಸರ ಸಮ್ಮುಖದಲ್ಲಿ ಅಧಿಕಾರಿಗಳು ಕೆಡವಿ ಹಾಕಿದ್ದರು.