Tag: Uttar Pradesh Government

  • ತೆರಿಗೆ, ನೀರಿನ ಬಿಲ್ ಪಾವತಿಸಿ – ತಾಜ್ ಮಹಲ್‍ಗೆ ನೋಟಿಸ್

    ತೆರಿಗೆ, ನೀರಿನ ಬಿಲ್ ಪಾವತಿಸಿ – ತಾಜ್ ಮಹಲ್‍ಗೆ ನೋಟಿಸ್

    ಲಕ್ನೋ: ಪ್ರತಿವರ್ಷ ಲಕ್ಷಾಂತರ ಪ್ರವಾಸಿಗರನ್ನು ಭಾರತಕ್ಕೆ ಸೆಳೆಯುವ ಆಗ್ರಾದ ತಾಜ್ ಮಹಲ್ (Taj Mahal) ಕಟ್ಟಡಕ್ಕೆ ಆಸ್ತಿ ತೆರಿಗೆ (Property Tax) ಹಾಗೂ ನೀರಿನ ಬಿಲ್‍ಗಳನ್ನು (Water Bill) ಪಾವತಿಸುವಂತೆ ಮೊದಲ ಬಾರಿಗೆ ಯುಪಿ ಸರ್ಕಾರ (Uttar Pradesh Government) ನೋಟಿಸ್ ನೀಡಿದೆ.

    ಯೋಗಿ ಆದಿತ್ಯನಾಥ್ (Yogi Adityanath) ನೇತೃತ್ವದ ಉತ್ತರ ಪ್ರದೇಶ ಸರ್ಕಾರದ ವಿವಿಧ ಘಟಕಗಳು 320 ವರ್ಷಗಳ ಇತಿಹಾಸ ಇರುವ ಆಗ್ರಾದ ತಾಜ್ ಮಹಲ್ ಹಾಗೂ ಆಗ್ರಾ ಕೋಟೆ ಎರಡಕ್ಕೂ ಬಾಕಿ ಬಿಲ್‍ಗಳನ್ನು ಪಾವತಿಸುವಂತೆ ನೋಟಿಸ್ ನೀಡಿದೆ. ಬಿಲ್‍ಗಳ ಮೊತ್ತ 1 ಕೋಟಿಗೂ ಹೆಚ್ಚು ಬಾಕಿ ಇದೆ ಎಂದು ಎಎಸ್‍ಐಗೆ ತಿಳಿಸಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‍ಐ) ಅಧಿಕಾರಿಗಳು ಇದು, ತಪ್ಪು, ಶೀಘ್ರದಲ್ಲೇ ಸರಿಪಡಿಸಲಾಗುವುದು ಎಂದು ತಿಳಿಸಿದರು.

    ಈ ಬಗ್ಗೆ ಆಗ್ರಾದ ಎಎಸ್‍ಐನ ಅಧೀಕ್ಷಕ ಪುರಾತತ್ವ ಶಾಸ್ತ್ರಜ್ಞ ರಾಜ್‍ಕುಮಾರ್ ಪಟೇಲ್ ಮಾತನಾಡಿ, ಇಲ್ಲಿಯವರೆಗೆ 3 ನೋಟಿಸ್‍ಗಳು ಬಂದಿದ್ದು, ತಾಜ್‍ಮಹಲ್‍ಗೆ ಎರಡು ಮತ್ತು ಆಗ್ರಾ ಕೋಟೆಗೆ ಒಂದು ಎಂದು ದೃಢಪಡಿಸಿದ್ದಾರೆ.

    ತಾಜ್ ಮಹಲ್‍ಗೆ ಸಂಬಂಧಿಸಿದಂತೆ, ನಮಗೆ ಎರಡು ನೋಟಿಸ್‍ಗಳು ಬಂದಿವೆ. ಒಂದು ಆಸ್ತಿ ತೆರಿಗೆ ಮತ್ತು ಇನ್ನೊಂದು ನೀರು ಸರಬರಾಜು ಇಲಾಖೆಯಿಂದಾಗಿದೆ. ಒಟ್ಟು 1 ಕೋಟಿಗೂ ಅಧಿಕ ರೂ.ಗಳನ್ನು ಎಎಸ್‍ಐನಿಂದ ಬೇಡಿಕೆಯಿಡಲಾಗಿದೆ. ಆದರೆ ಅಂತಹ ತೆರಿಗೆಗಳು ಸ್ಮಾರಕಗಳಿಗೆ ಅನ್ವಯಿಸುವುದಿಲ್ಲವಾದ್ದರಿಂದ ಇದು ತಪ್ಪಾಗಿರಬಹುದು ಎಂದು ಹೇಳಿದರು. ಇದನ್ನೂ ಓದಿ: ಡಿಕೆಶಿ ಮನೆಯಲ್ಲಿಯೇ ED, CBI ಕಚೇರಿ ಓಪನ್‌ ಮಾಡಿ: ರಣದೀಪ್ ಸಿಂಗ್ ಸುರ್ಜೇವಾಲಾ

    ಮೊದಲನೆಯದಾಗಿ, ಸ್ಮಾರಕದ ಆವರಣಗಳಿಗೆ ಆಸ್ತಿ ತೆರಿಗೆ ಅಥವಾ ಮನೆ ತೆರಿಗೆ ಅನ್ವಯಿಸುವುದಿಲ್ಲ. ಉತ್ತರ ಪ್ರದೇಶದಲ್ಲೂ ಈ ಕಾನೂನು ಇದೆ. ಜೊತೆಗೆ ನಾವು ಯಾವುದೇ ವಾಣಿಜ್ಯ ಉದ್ದೇಶಗಳಿಗಾಗಿ ನೀರನ್ನು ಬಳಸುತ್ತಿಲ್ಲ. ಬದಲಿಗೆ ತಾಜ್ ಸಂಕೀರ್ಣದ ಒಳಗೆ, ಹುಲ್ಲುಹಾಸುಗಳಿಗಾಗಿ, ಸಾರ್ವಜನಿಕ ಸೇವೆಗಾಗಿ ಬಳಸುತ್ತಿದ್ದೇವೆ. ಇದರಿಂದಾಗಿ ಬಾಕಿಯ ಪ್ರಶ್ನೆಯೇ ಇಲ್ಲ ಎಂದು ಉತ್ತರ ನೀಡಿದ್ದಾರೆ. ಇದನ್ನೂ ಓದಿ: ಗಡಿ ವಿವಾದ – ಮಹಾರಾಷ್ಟ್ರ ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆಯಿಲ್ಲ: ದೇವೇಂದ್ರ ಫಡ್ನವಿಸ್

    Live Tv
    [brid partner=56869869 player=32851 video=960834 autoplay=true]

  • ಶಿವ ಭಕ್ತರ ಮೇಲೆ ಹೂಮಳೆ ಸುರಿಸುತ್ತೀರಿ, ಮುಸ್ಲಿಮರ ಮನೆಗಳಿಗೆ ಬುಲ್ಡೋಜರ್‌ ಬಿಡ್ತೀರಿ: ಯುಪಿ ಸರ್ಕಾರದ ವಿರುದ್ಧ ಓವೈಸಿ ಕಿಡಿ

    ಶಿವ ಭಕ್ತರ ಮೇಲೆ ಹೂಮಳೆ ಸುರಿಸುತ್ತೀರಿ, ಮುಸ್ಲಿಮರ ಮನೆಗಳಿಗೆ ಬುಲ್ಡೋಜರ್‌ ಬಿಡ್ತೀರಿ: ಯುಪಿ ಸರ್ಕಾರದ ವಿರುದ್ಧ ಓವೈಸಿ ಕಿಡಿ

    ನವದೆಹಲಿ: ಶಿವ ಭಕ್ತರ (ಕನ್ವಾರಿಯಾಗಳಿಗೆ) ಮೇಲೆ ಹೆಲಿಕಾಪ್ಟರ್‌ಗಳಿಂದ ಹೂಮಳೆ ಸುರಿಸುತ್ತೀರಿ. ಆದರೆ ಬುಲ್ಡೋಜರ್‌ಗಳ ಮೂಲಕ ಮುಸ್ಲಿಮರ ಮನೆ ಕೆಡವುತ್ತೀರಿ ಎಂದು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್‌ ನೇತೃತ್ವದ ಸರ್ಕಾರದ ವಿರುದ್ಧ ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್‌ ಓವೈಸಿ ಕಿಡಿಕಾರಿದ್ದಾರೆ.

    ಸಂಸತ್‌ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಲಿಕಾಪ್ಟರ್‌ನಿಂದ ಪುಷ್ಪವೃಷ್ಟಿ ಮಾಡಲು ತೆರಿಗೆದಾರರ ಹಣವನ್ನು ಬಳಸುತ್ತಿದ್ದೀರಿ. ತುಂಬಾ ಒಳ್ಳೆಯದು. ನಮ್ಮ ಮೇಲೂ ಸ್ವಲ್ಪ ಕರುಣೆ ತೋರಿ, ನಮ್ಮನ್ನೂ ಸಮಾನವಾಗಿ ಕಾಣಿ ಎಂದು ಹೇಳುತ್ತಿದ್ದೇವೆ. ಅವರ ಮೇಲೆ ಪುಷ್ಪವೃಷ್ಟಿ ಮಾಡುತ್ತೀರಿ. ನಮ್ಮ ಮನೆಗಳನ್ನು ಧ್ವಂಸ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಪಿಎಂಎಲ್‌ಎ ಅಡಿ ಬಂಧನ ಮಾಡಬಹುದು – ಇಡಿಗೆ ಸುಪ್ರೀಂನಿಂದ ಸಿಕ್ತು ಪರಮಾಧಿಕಾರ

    ಮೀರತ್‌ನ ಪೊಲೀಸ್ ಮುಖ್ಯಸ್ಥರು ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರು ಶಿವ ಭಕ್ತರ ಮೇಲೆ ಹೂವಿನ ದಳಗಳನ್ನು ಸುರಿಸುವ ದೃಶ್ಯ ಹಾಗೂ ಹಾಪುರ್‌ನಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಒಬ್ಬರು ಕನ್ವಾರಿಯಾದ (ಶಿವ ಭಕ್ತರು) ಕಾಲುಗಳಿಗೆ ನೋವು ನಿವಾರಕ ತೈಲ ಹಚ್ಚುತ್ತಿರುವ ವೈರಲ್‌ ದೃಶ್ಯಗಳ ಬಗ್ಗೆ ಈ ವೇಳೆ ಓವೈಸಿ ಮಾತನಾಡಿದರು.

    ನೀವು ಅವರ ಪಾದಗಳಿಗೆ ಮಸಾಜ್ ಮಾಡುತ್ತಿರುವುದು ಒಳ್ಳೆಯದು. ಆದರೆ ನೀವು ಸಹರಾನ್‌ಪುರದಲ್ಲಿ ಮುಸ್ಲಿಂ ಯುವಕನನ್ನು ಕರೆದುಕೊಂಡು ಹೋಗಿ ಹೊಡೆಯುತ್ತೀರಿ. ತಾರತಮ್ಯ ಮಾಡಬೇಡಿ. ಸಂವಿಧಾನ ಅದಕ್ಕೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಮೂವರು ಸಹೋದರಿಯರು ಸಾವು

    Live Tv
    [brid partner=56869869 player=32851 video=960834 autoplay=true]

  • ಯುಪಿ ಸರ್ಕಾರಕ್ಕೆ 600 ಕೋಟಿ ಆಸ್ತಿ ದಾನ ಮಾಡಿದ ವೈದ್ಯ

    ಯುಪಿ ಸರ್ಕಾರಕ್ಕೆ 600 ಕೋಟಿ ಆಸ್ತಿ ದಾನ ಮಾಡಿದ ವೈದ್ಯ

    ಲಕ್ನೋ: ಮೊರಾದಾಬಾದ್‍ನ ವೈದ್ಯ ಅರವಿಂದ್ ಗೋಯಲ್ ಅವರು ಬಡವರಿಗೆ ಸಹಾಯ ಮಾಡಲು ಉತ್ತರ ಪ್ರದೇಶ ಸರ್ಕಾರಕ್ಕೆ ತಮ್ಮ ಸಂಪೂರ್ಣ 600 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ದಾನ ಮಾಡಿದ್ದಾರೆ.

    ಕಳೆದ 50 ವರ್ಷಗಳಿಂದ ಅರವಿಂದ್ ಗೋಯಲ್ ಅವರು ವೈದ್ಯರಾಗಿ ಕೆಲಸ ಮಾಡುತ್ತಿದ್ದಾರೆ. ಸುಮಾರು 25 ವರ್ಷಗಳ ಹಿಂದೆಯೇ ಆಸ್ತಿಯನ್ನು ದಾನ ಮಾಡುವ ಬಗ್ಗೆ ನಿರ್ಧಾರ ತೆಗೆದುಕೊಂಡಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಬ್ಯಾಂಕ್ ಮುಂದೆ ಪ್ರತಿಭಟನೆ – ಜನರನ್ನು ಚದುರಿಸಲು ಯುದ್ಧ ಟ್ಯಾಂಕರ್ ನಿಲ್ಲಿಸಿದ ಚೀನಾ

    ಲಾಕ್‍ಡೌನ್ ವೇಳೆ ಮೊರಾದಾಬಾದ್‍ನ 50 ಹಳ್ಳಿಗಳನ್ನು ದತ್ತು ತೆಗೆದುಕೊಂಡು ಅರವಿಂದ್ ಕುಮಾರ್ ಗೋಯಲ್ ಅವರು, ಜನರಿಗೆ ಉಚಿತವಾಗಿ ಚಿಕಿತ್ಸೆ ನೀಡಿದ್ದರು. ಅಲ್ಲದೇ ರಾಜ್ಯದಲ್ಲಿ ಬಡವರಿಗೆ ಉಚಿತ ಶಿಕ್ಷಣ ಮತ್ತು ಉತ್ತಮ ಚಿಕಿತ್ಸೆಯನ್ನು ಸಹ ಆಯೋಜಿಸಿದ್ದರು. ಇದನ್ನೂ ಓದಿ: ಡಿಕೆಶಿಗೆ ಜಮೀರ್ ಡಿಚ್ಚಿ – ಸಿದ್ದರಾಮಯ್ಯಗೆ ಜಮೀರ್ ಜಿಂದಾಬಾದ್

    ರಾಷ್ಟ್ರಪತಿ ರಾಮನಾಥ್ ಕೋವಿಂದ್, ಮಾಜಿ ರಾಷ್ಟ್ರಪತಿಗಳಾದ ಪ್ರಣಬ್ ಮುಖರ್ಜಿ, ಪ್ರತಿಭಾ ದೇವಿ ಪಾಟೀಲ್, ಡಾ. ಎಪಿಜೆ ಅಬ್ದುಲ್ ಕಲಾಂ ಅವರು, ಡಾ. ಅರವಿಂದ್ ಗೋಯಲ್ ಅವರಿಗೆ ನಾಲ್ಕು ಬಾರಿ ಗೌರವ ಪ್ರಶಸ್ತಿಯನ್ನು ನೀಡಿದ್ದಾರೆ. ಅರವಿಂದ್ ಗೋಯಲ್ ಅವರಿಗೆ ರೇಣು ಗೋಯಲ್ ಎಂಬ ಪತ್ನಿ ಇದ್ದು, ಇಬ್ಬರು ಪುತ್ರರು ಮತ್ತು ಪುತ್ರಿ ಇದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸಿಎಎ ವಿರೋಧಿ ಪ್ರತಿಭಟನಾಕಾರರಿಗೆ ನೀಡಿರೋ ನೋಟಿಸ್‌ ಹಿಂತೆಗೆದುಕೊಳ್ಳಿ – ಯುಪಿ ಸರ್ಕಾರಕ್ಕೆ ಸುಪ್ರೀಂ ಸೂಚನೆ

    ಸಿಎಎ ವಿರೋಧಿ ಪ್ರತಿಭಟನಾಕಾರರಿಗೆ ನೀಡಿರೋ ನೋಟಿಸ್‌ ಹಿಂತೆಗೆದುಕೊಳ್ಳಿ – ಯುಪಿ ಸರ್ಕಾರಕ್ಕೆ ಸುಪ್ರೀಂ ಸೂಚನೆ

    ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಪ್ರತಿಭಟನೆ ವೇಳೆ ಸಾರ್ವಜನಿಕ ಆಸ್ತಿ ನಾಶಗೊಳಿಸಿರುವುದಕ್ಕೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ಉತ್ತರ ಪ್ರದೇಶ ಸರ್ಕಾರ ಕೈಗೊಂಡಿರುವ ಕ್ರಮವನ್ನು ಸುಪ್ರೀಂ ಕೋರ್ಟ್‌ ಪ್ರಶ್ನಿಸಿದೆ.

    ಸಾರ್ವಜನಿಕ ಆಸ್ತಿ ನಾಶದ ನಷ್ಟ ವಸೂಲಾತಿಗಾಗಿ ಪ್ರತಿಭಟನಾಕಾರರಿಗೆ ನೀಡಿರುವ ನೋಟಿಸ್‌ನ್ನು ಸರ್ಕಾರ ಹಿಂತೆಗೆದುಕೊಳ್ಳಬೇಕು. ಇಲ್ಲವೇ ನಾವೇ ರದ್ದುಗೊಳಿಸುತ್ತೇವೆ ಎಂದು ಯೋಗಿ ನೇತೃತ್ವದ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್‌ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಹಿಜಬ್‌ ನಿಷೇಧ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ: ಅಮೆರಿಕ

    ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್‌ ಹಾಗೂ ಸೂರ್ಯ ಕಾಂತ ಅವರಿದ್ದ ನ್ಯಾಯಪೀಠ, ವಸೂಲಾತಿಗೆ ಸಂಬಂಧಿಸಿದಂತೆ ನೀಡಿರುವ ನೋಟಿಸ್‌ ಅನ್ನು ಸರ್ಕಾರ ಹಿಂತೆಗೆದುಕೊಳ್ಳಲು ಕೊನೆಯ ಅವಕಾಶ ನೀಡಲಾಗಿದೆ. ಇಲ್ಲವಾದಲ್ಲಿ ಕಾನೂನು ಉಲ್ಲಂಘನೆ ಎಂದು ನಾವೇ ರದ್ದುಗೊಳಿಸುತ್ತೇವೆ ಎಂದು ತಿಳಿಸಿದೆ.

    ಉತ್ತರ ಪ್ರದೇಶ ಸರ್ಕಾರವು ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆಯನ್ನು ನಡೆಸುವಲ್ಲಿ ಸ್ವತಃ ದೂರುದಾರ, ತೀರ್ಪುಗಾರ ಮತ್ತು ಪ್ರಾಸಿಕ್ಯೂಟರ್‌ನಂತೆ ವರ್ತಿಸಿದೆ ಎಂದು ಪೀಠವು ತರಾಟೆಗೆ ತೆಗೆದುಕೊಂಡಿದೆ. ಇದನ್ನೂ ಓದಿ: ಜೈಪುರಕ್ಕೆ ಕಾಲಿಟ್ಟ ಹಿಜಬ್ ವಿವಾದ – ಬುರ್ಕಾ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ನೋ ಎಂಟ್ರಿ ಎಂದ ಕಾಲೇಜ್

    ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕ ಆಸ್ತಿಗಳಿಗೆ ಉಂಟಾದ ಹಾನಿಯನ್ನು ವಸೂಲಿ ಮಾಡಲು ಉತ್ತರ ಪ್ರದೇಶ ಸರ್ಕಾರವು ಹೊರಡಿಸಿದ ವಸೂಲಾತಿ ನೋಟಿಸ್‌ಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸುತ್ತಿದೆ.

    ಉತ್ತರ ಪ್ರದೇಶದಲ್ಲಿ ಸಿಎಎ-ಎನ್‌ಆರ್‌ಸಿ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಸಂಭವಿಸಿದ ಘಟನೆಗಳ ಬಗ್ಗೆ ತನಿಖೆ ನಡೆಸಲು ಸ್ವತಂತ್ರ ನ್ಯಾಯಾಂಗ ತನಿಖೆಯನ್ನು ಸ್ಥಾಪಿಸಲು ನಿರ್ದೇಶನ ನೀಡುವಂತೆ ಕೋರಿ ವಕೀಲ ಪರ್ವೇಜ್‌ ಆರಿಫ್‌ ಟಿಟು ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: ನಿಮ್ಮ ಮನೆ ಬಾಗಿಲಿಗೆ ಬರಲಿದೆ ಪಬ್ಲಿಕ್ ಟಿವಿಯ ತೇರು ʼದಶʼರಥ

    ಯುಪಿ ಸರ್ಕಾರದ ಪರವಾಗಿ ವಾದ ಮಂಡಿಸಿದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಗರಿಮಾ ಪ್ರಸಾದ್‌ ಅವರು, ರಾಜ್ಯದಲ್ಲಿ 833 ಗಲಭೆಕೋರರ ವಿರುದ್ಧ 106 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. 274 ವಸೂಲಾತಿ ನೋಟಿಸ್‌ಗಳನ್ನು ನೀಡಲಾಗಿದೆ ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದರು.

  • ಯುಪಿ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ದುರ್ಗಾ ಶಂಕರ್ ಮಿಶ್ರಾ ನೇಮಕ

    ಯುಪಿ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ದುರ್ಗಾ ಶಂಕರ್ ಮಿಶ್ರಾ ನೇಮಕ

    ಲಕ್ನೋ: ವಸತಿ ಮತ್ತು ನಗರ ವ್ಯವಹಾರಗಳ ಕಾರ್ಯದರ್ಶಿ ದುರ್ಗಾ ಶಂಕರ್ ಮಿಶ್ರಾ ಅವರನ್ನು ಉತ್ತರ ಪ್ರದೇಶ ಸರ್ಕಾರದ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.

    ಉತ್ತರ ಪ್ರದೇಶ ಕೇಡರ್‌ನ 1984ನೇ ಬ್ಯಾಚ್‍ನ ಐಎಎಸ್ ಅಧಿಕಾರಿ ದುರ್ಗಾ ಶಂಕರ್ ಮಿಶ್ರಾ ಅವರು ಶುಕ್ರವಾರ ನಿವೃತ್ತಿ ಹೊಂದಬೇಕಿತ್ತು. ಆದರೆ ಉತ್ತರ ಪ್ರದೇಶ ರಾಜ್ಯ ಸರ್ಕಾರ ಅವರನ್ನು ಮುಖ್ಯ ಕಾರ್ಯದರ್ಶಿಯಾಗಿ ನೇಮಕಗೊಳಿಸಲು ಸಂಪುಟದ ನೇಮಕಾತಿ ಸಮಿತಿಯು ಅನುಮೋದಿಸಿದೆ ಎಂದು ತಿಳಿಸಿದೆ.

    Durga Shanker Mishra

    1985 ರ ಬ್ಯಾಚ್ ಐಎಎಸ್ ಅಧಿಕಾರಿ ರಾಜೇಂದ್ರ ಕುಮಾರ್ ತಿವಾರಿ ಅವರು ಪ್ರಸ್ತುತ ಉತ್ತರ ಪ್ರದೇಶದ ಮುಖ್ಯ ಕಾರ್ಯದರ್ಶಿಯಾಗಿದ್ದಾರೆ. ರಾಜೇಂದ್ರ ಕುಮಾರ್ ತಿವಾರಿ ಅವರು ಫೆಬ್ರವರಿ 2023 ರಲ್ಲಿ ನಿವೃತ್ತರಾಗಲಿದ್ದಾರೆ. ಇದನ್ನೂ ಓದಿ: ಇಂದು 566 ಪ್ರಕರಣ – ಬೆಂಗಳೂರಿನಲ್ಲಿ 400 ಕೇಸ್, 4 ಸಾವು

    ಸೋಮವಾರ ಸಿಬ್ಬಂದಿ ಸಚಿವಾಲಯ ಮನೋಜ್ ಜೋಶಿ ಅವರನ್ನು ನೂತನ ವಸತಿ ಮತ್ತು ನಗರ ವ್ಯವಹಾರಗಳ ಕಾರ್ಯದರ್ಶಿಯಾಗಿ ದುರ್ಗಾ ಶಂಕರ್ ಮಿಶ್ರಾ ಅವರ ಸ್ಥಾನದಲ್ಲಿ ನೇಮಿಸಿದೆ. ಮನೋಜ್ ಜೋಶಿ ಅವರು 1989ರ ಬ್ಯಾಚ್ ಕೇರಳ ಕೇಡರ್ ಐಎಎಸ್ ಅಧಿಕಾರಿ, ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದಲ್ಲಿ ವಿಶೇಷ ಕರ್ತವ್ಯ ಅಧಿಕಾರಿಯಾಗಿ ನೇಮಕಗೊಂಡಿದ್ದರು.

  • ಪಾಕ್‌ ಕೈಗಾರಿಕೆಗಳ ಬ್ಯಾನ್‌ ಮಾಡ್ಬೇಕೆ: ದಿಲ್ಲಿ ವಾಯುಮಾಲಿನ್ಯಕ್ಕೆ ಪಾಕ್‌ ಕಾರಣ ಎಂದ ಯುಪಿ ಸರ್ಕಾರಕ್ಕೆ ಸುಪ್ರೀಂ ಪ್ರಶ್ನೆ

    ಪಾಕ್‌ ಕೈಗಾರಿಕೆಗಳ ಬ್ಯಾನ್‌ ಮಾಡ್ಬೇಕೆ: ದಿಲ್ಲಿ ವಾಯುಮಾಲಿನ್ಯಕ್ಕೆ ಪಾಕ್‌ ಕಾರಣ ಎಂದ ಯುಪಿ ಸರ್ಕಾರಕ್ಕೆ ಸುಪ್ರೀಂ ಪ್ರಶ್ನೆ

    ನವದೆಹಲಿ: ಭಾರತದ ರಾಜಧಾನಿ ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯಕ್ಕೆ ಪಾಕಿಸ್ತಾನ ಕಾರಣ ಎಂದು ಆಪಾದಿಸಿದ ಉತ್ತರ ಪ್ರದೇಶ ಸರ್ಕಾರವನ್ನು ಸುಪ್ರೀಂ ಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ. ಪಾಕಿಸ್ತಾನ ಕೈಗಾರಿಕೆಗಳ ನಿಷೇಧವನ್ನು ನೀವು ಬಯಸುತ್ತೀರಾ ಎಂದು ಯುಪಿ ಸರ್ಕಾರವನ್ನು ಸುಪ್ರೀಂ ಪ್ರಶ್ನಿಸಿದೆ.

    ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಪ್ರಮಾಣ ಹೆಚ್ಚಳಕ್ಕೆ ಉತ್ತರ ಪ್ರದೇಶದ ಕೈಗಾರಿಕೆಗಳು ಕಾರಣವಲ್ಲ. ಪಾಕಿಸ್ತಾನದಿಂದ ಬರುತ್ತಿರುವ ಕಲುಷಿತ ಗಾಳಿಯಿಂದ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಾಗುತ್ತಿದೆ ಎಂದು ಉತ್ತರ ಪ್ರದೇಶ ಸರ್ಕಾರ ಹೇಳಿತ್ತು. ಈ ಸಂಬಂಧ ವಿಚಾರಣೆ ನಡೆಸಿದ ಸುಪ್ರೀಂ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ನೇತೃತ್ವದ ಪೀಠವು, ಯುಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಹಾಗಾದರೆ ನೀವು, ಪಾಕಿಸ್ತಾನದ ಕೈಗಾರಿಕೆಗಳ ನಿಷೇಧವನ್ನು ಬಯಸುತ್ತೀರಾ ಎಂದು ಖಾರವಾಗಿ ಪ್ರಶ್ನಿಸಿದೆ. ಇದನ್ನೂ ಓದಿ: ಡಿ.4 ರಂದು ಆಂಧ್ರಪ್ರದೇಶ, ಒಡಿಶಾಗೆ ಅಪ್ಪಳಿಸಲಿರುವ ಜವಾದ್ ಚಂಡಮಾರುತ

    ಯುಪಿ ಸರ್ಕಾರದ ಪರವಾಗಿ ಹಿರಿಯ ವಕೀಲ ರಂಜಿತ್‌ ಕುಮಾರ್‌ ವಾದ ಮಂಡಿಸಿ, ಪಾಕಿಸ್ತಾನದಿಂದ ಬರುತ್ತಿರುವ ಮಾಲಿನ್ಯಕಾರಕ ಗಾಳಿಯು ದೆಹಲಿಯ ವಾಯು ಗುಣಮಟ್ಟದ ಮೇಲೆ ಪರಿಣಾಮ ಬೀರುತ್ತಿದೆ. ಆದರೆ ಉತ್ತರ ಪ್ರದೇಶದಲ್ಲಿ ನಡೆಸಿದ 8 ಗಂಟೆಗಳ ಕಾರ್ಯಾಚರಣೆಯಿಂದ ಕಬ್ಬು ಮತ್ತು ಹಾಲಿನ ಉದ್ಯಮಗಳ ಮೇಲೆ ಪರಿಣಾಮ ಉಂಟಾಗಿದೆ ಎಂದು ಪ್ರತಿಪಾದಿಸಿದ್ದರು. ಈ ವೇಳೆ ವಕೀಲರ ವಿರುದ್ಧ ಗರಂ ಆದ ಸಿಜೆಐ ಎನ್‌.ವಿ.ರಮಣ ನೇತೃತ್ವದ ಪೀಠ, ಮೊದಲು ಆಯೋಗದ ಮೊರೆ ಹೋಗಿ, ವಾಯುಮಾಲಿನ್ಯದ ಪ್ರಮುಖ ಸಮಸ್ಯೆಗಳ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲು ಹೇಳಿ ಎಂದು ಸೂಚಿಸಿತು.

    ವಾಯುಗುಣಮಟ್ಟ ನಿರ್ವಹಣೆ ಆಯೋಗವು ರಾಜಧಾನಿಯಲ್ಲಿನ ವಾಯುಮಾಲಿನ್ಯ ಪರಿಸ್ಥಿತಿಯನ್ನು ಪರಿಶೀಲಿಸಲು ಕಾರ್ಯಪಡೆಯೊಂದನ್ನು ರಚಿಸಿದೆ. ಈ ಹಿನ್ನೆಲೆಯಲ್ಲಿ, ಹೆಚ್ಚುತ್ತಿರುವ ಮಾಲಿನ್ಯದ ಮಟ್ಟವನ್ನು ನಿಯಂತ್ರಿಸಲು ಕೆಲವು ಕ್ರಮಗಳನ್ನು ಕೈಗೊಳ್ಳುವಂತೆ ಆಯೋಗಕ್ಕೆ ಸುಪ್ರೀಂ ಕೋರ್ಟ್‌ 24 ಗಂಟೆಗಳ ಗಡುವು ನೀಡಿದೆ. ಇದನ್ನೂ ಓದಿ: ಕೇರಳ ವಿದ್ಯಾರ್ಥಿಗಳ ಬೀದಿರಂಪಾಟ – ಪೊಲೀಸರ ಮೇಲೆ ಹಲ್ಲೆ

    ಪರಿಸರ ಹೋರಾಟಗಾರ ಆದಿತ್ಯ ದುಬೆ ಮತ್ತು ಕಾನೂನು ವಿದ್ಯಾರ್ಥಿ ಅಮನ್‌ ಬಂಕಾ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸುತ್ತಿದೆ. ಸಣ್ಣ ಮತ್ತು ಅತಿ ಸಣ್ಣ ಕೃಷಿ ವಲಯದ ರೈತರಿಗೆ ಹುಲ್ಲು ತೆಗೆಯುವ ಯಂತ್ರಗಳನ್ನು ಉಚಿತವಾಗಿ ಒದಗಿಸಲು ನಿರ್ದೇಶನ ನೀಡುವಂತೆ ಕೋರಿ ದುಬೆ ಅವರು ಸುಪ್ರೀಂಗೆ ಮನವಿ ಮಾಡಿದ್ದಾರೆ.

  • ‘ಕೇಮ್ ಚೋ ಟ್ರಂಪ್’ ಕಾರ್ಯಕ್ರಮ – ಯಮುನೆಯ ಕೊಳಕನ್ನು ಮರೆಮಾಚಲು 500 ಕ್ಯೂಸೆಕ್ ನೀರು ಹರಿಸಿದ ಸರ್ಕಾರ

    ‘ಕೇಮ್ ಚೋ ಟ್ರಂಪ್’ ಕಾರ್ಯಕ್ರಮ – ಯಮುನೆಯ ಕೊಳಕನ್ನು ಮರೆಮಾಚಲು 500 ಕ್ಯೂಸೆಕ್ ನೀರು ಹರಿಸಿದ ಸರ್ಕಾರ

    ಲಕ್ನೋ: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆ ನಗರ ಸುಂದರವಾಗಿ ಕಂಗೊಳಿಸಲು ಯುಪಿ ಸರ್ಕಾರ ನಾನಾ ಕಸರತ್ತು ಮಾಡ್ತಿದ್ದು, ಕಲುಷಿತಗೊಂಡು ದುರ್ವಾಸನೆ ಬೀರುತ್ತಿರುವ ಯಮುನಾ ನದಿಯ ಸೌಂದರ್ಯ ಹೆಚ್ಚಿಸಲು ಸರ್ಕಾರ ನದಿಗೆ ನೀರು ಹರಿಸಿದೆ.

    ಗುಜರಾತಿನ ಅಹಮದಾಬಾದಿನಲ್ಲಿ ವಿಶ್ವದ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂ ಉದ್ಘಾಟನೆ, ಭಾರತದ ಜೊತೆ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಲು ಡೊನಾಲ್ಡ್ ಟ್ರಂಪ್ ಭಾರತಕ್ಕೆ ಬರುತ್ತಿದ್ದಾರೆ. ಟ್ರಂಪ್ ಭೇಟಿ ವೇಳೆ ನದಿಯ ಪರಿಸರ ಸುಂದರವಾಗಿ ಕಾಣಬೇಕು ಎನ್ನುವ ಉದ್ದೇಶದಿಂದ ಉತ್ತರಪ್ರದೇಶದ ನೀರಾವರಿ ಇಲಾಖೆಯು ಯಮುನಾ ನದಿಗೆ 500 ಕ್ಯೂಸೆಕ್ ನೀರನ್ನು ಹರಿಸಿದೆ.ಇದನ್ನೂ ಓದಿ: ಭಾರತಕ್ಕೆ ಬರಲಿರುವ ಟ್ರಂಪ್ ಏನು ತಿನ್ನುತ್ತಾರೆ? ಫೇವರೇಟ್ ಆಹಾರ ಏನು?

    ಆಗ್ರಾಗೆ ಟ್ರಂಪ್ ಭೇಟಿ ನೀಡುತ್ತಾರೆಂಬ ಮಾಹಿತಿ ಇರುವ ಹಿನ್ನೆಲೆ ನದಿಗೆ 500 ಕ್ಯೂಸೆಕ್ ನೀರನ್ನು ಹರಿಬಿಡಲಾಗುತ್ತಿದೆ. ಫೆಬ್ರವರಿ 20ರಂದು ಮಥುರಾದ ಯಮುನಾ ನದಿಗೆ ಹರಿಬಿಟ್ಟಿರುವ ನೀರು ಸೇರಲಿದ್ದು, ಬಳಿಕ ಫೆಬ್ರವರಿ 21ರಂದು ನೀರು ಆಗ್ರಾ ತಲುಪಲಿದೆ. ನದಿಗೆ ನೀರು ಹರಿಸಿರುವುದರಿಂದ ಅಲ್ಲಿ ಬರುತ್ತಿದ್ದ ದುರ್ನಾತ ಸ್ವಲ್ಪ ಮಟ್ಟಿಗೆ ಕಡಿಮೆಯಾಗುತ್ತೆ. ನದಿಯ ಪರಿಸರವೂ ಕೂಡ ಮತ್ತಷ್ಟು ಸುಂದರವಾಗುತ್ತೆ ಎಂದು ಅಧಿಕಾರಿ ಧರ್ಮೇಂದರ್ ಸಿಂಗ್ ಫೋಗಟ್ ತಿಳಿಸಿದ್ದಾರೆ. ಇದನ್ನೂ ಓದಿ: ಟ್ರಂಪ್ ಜೊತೆಗೆ ಭಾರತಕ್ಕೆ ಬರುತ್ತಿದೆ ದಿ ಬೀಸ್ಟ್ ಕಾರ್- ಕಾರಿನ ವಿಶೇಷತೆ ಏನು? ಮೈಲೇಜ್ ಎಷ್ಟು?

    ಅಲ್ಲದೇ ಮಾಲಿನ್ಯವನ್ನು ನಿಯಂತ್ರಿಸಲು 500 ಕ್ಯೂಸೆಕ್ ನೀರನ್ನು ಯಮುನಾ ನದಿಗೆ ಹರಿಬಿಡಲಾಗುತ್ತಿದೆ. ಇದು ನದಿ ಮೇಲೆ ಕೆಲ ಪರಿಣಾಮ ಬೀರಲಿದೆ. ಇದರಿಂದ ಮಥುರಾ ಹಾಗೂ ಆಗ್ರಾದಲ್ಲಿ ಹರಿಯುವ ಯುವನಾ ನದಿ ಆಮ್ಲಜನಕವನ್ನು ಹೆಚ್ಚಿಸುತ್ತದೆ. ನೀರು ಹರಿಸಿದ ಮಾತ್ರಕ್ಕೆ ಈ ನದಿ ನೀರು ಕುಡಿಯಲು ಯೋಗ್ಯವಾಗಲ್ಲ ಆದರೆ ನದಿಯ ದುರ್ವಾಸನೆ ದೂರವಾಗುತ್ತೆ ಎಂದು ಅಧಿಕಾರಿ ಹೇಳಿದ್ದಾರೆ.

    ಅಮೆರಿಕದ ಅನಿವಾಸಿ ಭಾರತೀಯರು ಹೂಸ್ಟನ್‍ನಲ್ಲಿ ಆಯೋಜಿಸಿದ್ದ `ಹೌಡಿ ಮೋದಿ’ ಕಾರ್ಯಕ್ರಮದಲ್ಲಿ ಟ್ರಂಪ್ ಭಾಗವಹಿಸಿದ್ದರು. ಅಲ್ಲಿನ ಅನಿವಾಸಿ ಭಾರತೀಯರ ಜೊತೆಗೆ ಕೆಲ ವಿಚಾರಗಳನ್ನು ಹಂಚಿಕೊಳ್ಳಲು ಪ್ರಧಾನಿ ಮೋದಿ ಅವರಿಗೆ ಸಹಾಯಕವಾಗಿತ್ತು. ಹೀಗಾಗಿ ಭಾರತಕ್ಕೆ ಆಗಮಿಸುತ್ತಿರುವ ಟ್ರಂಪ್ ಅವರಿಗೆ ಇಂತಹದ್ದೇ ವೇದಿಕೆ ಕಲ್ಪಿಸಿಕೊಡಲು `ಕೇಮ್ ಚೋ ಟ್ರಂಪ್’ ಸಾರ್ವಜನಿಕ ಸಭೆಗೆ ಭಾರೀ ಸಿದ್ಧತೆ ನಡೆದಿದೆ.

    ಡೊನಾಲ್ಡ್ ಟ್ರಂಪ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಫೆಬ್ರವರಿ 24 ಹಾಗೂ 25 ರಂದು ಎರಡು ದಿನಗಳ ಭಾರತ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಅಮೆರಿಕ ಫಸ್ಟ್ ಲೇಡಿ ಮೆಲಾನಿಯಾ ಟ್ರಂಪ್ ಕೂಡ ಭಾರತಕ್ಕೆ ಆಗಮಿಸುತ್ತಿದ್ದಾರೆ. ನವದೆಹಲಿಗೆ ಆಗಮಿಸಲಿರುವ ಡೊನಾಲ್ಡ್ ಟ್ರಂಪ್ ಅವರು ಫೆಬ್ರವರಿ 25 ರಂದು ಗುಜರಾತ್‍ನ ಅಹಮದಾಬಾದ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಜಂಟಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

  • ತಾಜ್‍ಮಹಲ್ ಧ್ವಂಸಗೊಳಿಸಿದರೆ ನಾನು ಉತ್ತರ ಪ್ರದೇಶ ಸರ್ಕಾರಕ್ಕೆ ಬೆಂಬಲ ನೀಡುತ್ತೇನೆ: ಅಜಂ ಖಾನ್

    ತಾಜ್‍ಮಹಲ್ ಧ್ವಂಸಗೊಳಿಸಿದರೆ ನಾನು ಉತ್ತರ ಪ್ರದೇಶ ಸರ್ಕಾರಕ್ಕೆ ಬೆಂಬಲ ನೀಡುತ್ತೇನೆ: ಅಜಂ ಖಾನ್

    ನವದೆಹಲಿ: ತಾಜ್‍ಮಹಲ್ ನಾಶಮಾಡಿದರೆ ನಾನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿನಾಥ್ ಅವರ ಸರ್ಕಾರಕ್ಕೆ ಬೆಂಬಲ ನೀಡುತ್ತೇನೆ ಎಂದು ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಶಾಕಿಂಗ್ ಹೇಳಿಕೆಯನ್ನು ನೀಡಿದ್ದಾರೆ.

    ತಾಜ್ ಮಹಲ್, ಕೆಂಪು ಕೋಟೆ, ಸಂಸತ್ ಭವನಗಳು ಹಾಗೂ ಕುತುಬ್ ಮಿನಾರ್ ಮುಂತಾದ ಸ್ಮಾರಕಗಳು ಗುಲಾಮಗಿರಿಯ ಸಂಕೇತವಾಗಿವೆ. ಈ ವಾದ-ವಿವಾದಗಳು ಕಳೆದ ಕೆಲವು ದಶಕಗಳಿಂದ ನಡೆಯುತ್ತಿದೆ. ಒಂದು ವೇಳೆ ಸರ್ಕಾರ ತಾಜ್‍ಮಹಲ್ ಅನ್ನು ಧ್ವಂಸಗೊಳಿಸುವ ನಿರ್ಧಾರ ತೆಗೆದುಕೊಂಡರೆ ನಾನು ಆ ನಿರ್ಧಾರವನ್ನು ಬೆಂಬಲಿಸುತ್ತೇನೆ ಎಂದಿದ್ದಾರೆ.

    ಪ್ರವಾಸೋದ್ಯಮ ಇಲಾಖೆ 32 ಪುಟಗಳುಳ್ಳ `ಉತ್ತರ ಪ್ರದೇಶದ ಪ್ಯಾರ್ಯಟನ್- ಅಪಾರ ಸಂಭವನೀಯೆನ್’ ಶೀರ್ಷಿಕೆ ಅಡಿಯಲ್ಲಿ ಒಂದು ಕೈಪಿಡಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ರಾಜ್ಯದ ಸಾಂಸ್ಕøತಿಕ ಮತ್ತು ಪರಂಪರೆಯ ತಾಣಗಳ ಬಗ್ಗೆ ಮಾಹಿತಿಯನ್ನು ಹೊಂದಿದೆ. ಆದರೆ ಈ ಕೈಪಿಡಿಯಲ್ಲಿ ವಿಶ್ವದ ಏಳು ಅದ್ಭುತ ತಾಣಗಳಲ್ಲಿ ಒಂದಾಗಿರುವ ತಾಜ್‍ಮಹಲ್ ಬಗ್ಗೆ ಯಾವುದೇ ಉಲ್ಲೇಖವನ್ನು ಮಾಡಿಲ್ಲ.

    ಈ ಕೈಪಿಡಿಯನ್ನು ರಾಜ್ಯ ಪ್ರವಾಸೋದ್ಯಮ ಸಚಿವೆ ರೀಟಾ ಬಹುಗುಣ ಅವರು ಬಿಡುಗಡೆ ಮಾಡಿದ್ದು, ಇದರಲ್ಲಿ ವಾರಣಾಸಿಯಲ್ಲಿರುವ ಗಂಗಾ ಆರತಿಯ ಚಿತ್ರವು ಮುಖಪುಟದಲ್ಲಿದೆ. ಜೊತೆಗೆ ಸಿಎಂ ಆದಿತ್ಯನಾಥ್ ಮತ್ತು ಬಹುಗುಣ ಅವರ ಸಾಂಪ್ರದಾಯಿಕ ದೀಪವು ಪುಸ್ತಕದ ಒಳಗಡೆ ಇದೆ. ಈ ಕೈಪಿಡಿ ಬಿಡುಗಡೆ ಮಾಡಿದ ಕೆಲವು ಗಂಟೆಗಳಲ್ಲಿ ಅಜಂ ಖಾನ್ ವಿವಾದಾತ್ಮಕ ಪ್ರತಿಕ್ರಿಯೆಯನ್ನು ನೀಡಿದ್ದಾರೆ.

    ಇವರ ಪ್ರತಿಕ್ರಿಯೆಗೆ ಬಹುಗುಣ ಅವರು, ತಾಜ್‍ಮಹಲ್ ವಿಶ್ವ ಪರಂಪರೆಯ ಮತ್ತು ಪ್ರಖ್ಯಾತ ಪ್ರವಾಸಿಗರ ಆಕರ್ಷಣೆಯ ಸ್ಥಳವಾಗಿದೆ. ಇದರ ಸುತ್ತಲಿನ ಸೌಕರ್ಯಗಳ ಸುಧಾರಣೆಗಾಗಿ ನಾವು 156 ಕೋಟಿ ರೂ.ಗಳನ್ನು ನೀಡಿದ್ದೇವೆ ಎಂದು ಹೇಳಿದರು.

    ಹೊಸದಾಗಿ ಬಿಡುಗಡೆಯಾದ ಕೈಪಿಡಿಯಲ್ಲಿ ಪ್ರೀತಿಯ ಸಂಕೇತವಾದ, ಸಾಂಪ್ರದಾಯಿಕ ಸ್ಮಾರಕವಾದ ತಾಜ್‍ಮಹಲ್ ಹೆಸರನ್ನು ಬಿಟ್ಟಿರುವುದರಿಂದ ಕಾಂಗ್ರೆಸ್ ಉಪಾಧ್ಯಾಕ್ಷ ರಾಹುಲ್ ಗಾಂಧಿ ಅವರು ಕೂಡ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದರು.

    ದೀಪದ ಬೆಳಕಿನಿಂದ ಸೂರ್ಯನೇನೂ ಸುಂದರವಾಗಿ ಕಾಣಿಸುವುದಿಲ್ಲ. ಹೀಗಾಗಿ ಕವಿ ಭರತೇಂದು ಒಂದು ಮಾತನ್ನು ಹೇಳ್ತಾರೆ, `ಕತ್ತಲೆಯ ರಾಜ್ಯ, ಹುಚ್ಚು ದೊರೆ’ ಎಂದು ವ್ಯಂಗ್ಯವಾಗಿ ಟೀಕೆ ಮಾಡಿದ್ದಾರೆ.