Tag: Uttar Pradesh Police

  • ಬಿಷ್ಣೋಯ್ ಗ್ಯಾಂಗ್‌ನ ಶಾರ್ಪ್‌ಶೂಟರ್‌ ನವೀನ್ ಕುಮಾರ್ ಎನ್‌ಕೌಂಟರ್

    ಬಿಷ್ಣೋಯ್ ಗ್ಯಾಂಗ್‌ನ ಶಾರ್ಪ್‌ಶೂಟರ್‌ ನವೀನ್ ಕುಮಾರ್ ಎನ್‌ಕೌಂಟರ್

    ಲಕ್ನೋ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಶಾರ್ಪ್‌ಶೂಟರ್‌ ನವೀನ್ ಕುಮಾರ್‌ನನ್ನು ಉತ್ತರಪ್ರದೇಶ (Uttar Pradesh) ಪೊಲೀಸರು ಎನ್‌ಕೌಂಟರ್ ಮಾಡಿದ್ದಾರೆ.

    ಬಿಷ್ಣೋಯ್ ಗ್ಯಾಂಗ್‌ನ (Bishnoi Gang) ಪ್ರಮುಖ ಸದಸ್ಯ, ಗಾಜಿಯಾಬಾದ್‌ನ ಲೋನಿ ನಿವಾಸಿ ನವೀನ್ ಕುಮಾರ್‌ನನ್ನು ಬುಧವಾರ ತಡರಾತ್ರಿ ಹಾಪುರ್‌ನ ಥಾನಾ ಕೊಟ್ವಾಲಿ ಪ್ರದೇಶದಲ್ಲಿ ಉತ್ತರಪ್ರದೇಶ ಪೊಲೀಸರು ಎನ್‌ಕೌಂಟರ್ ಮಾಡಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಇಬ್ಬರು ಕನ್ನಡಿಗರು ಸೇರಿ 26 ಮೃತ ಪ್ರವಾಸಿಗರ ನೆನಪಿಗೆ ಪಹಲ್ಗಾಮ್‌ನಲ್ಲಿ ಸ್ಮಾರಕ – ಒಮರ್ ಅಬ್ದುಲ್ಲಾ

    ಕೊತ್ವಾಲಿಯಲ್ಲಿ ಬಿಷ್ಣೋಯ್ ಗ್ಯಾಂಗ್ ಇರುವ ಖಚಿತ ಮಾಹಿತಿಯನ್ನಾಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಬಿಷ್ಣೋಯ್ ಗ್ಯಾಂಗ್ ಪೊಲೀಸರ ಮೇಲೆ ಪ್ರತಿದಾಳಿ ಮಾಡಿದ್ದರು. ಇದರಲ್ಲಿ ಗ್ಯಾಂಗ್‌ನ ಶಾರ್ಪ್‌ಶೂಟರ್‌ ನವೀನ್ ಕುಮಾರ್‌ಗೆ ಗಂಭೀರ ಗಾಯಗಳಾಗಿದದವು. ಆತನ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಟ್ರಂಪ್‌ ನೀತಿಯನ್ನು ಟೀಕಿಸಿದ ಬೆನ್ನಲ್ಲೇ DOGE ಮುಖ್ಯಸ್ಥ ಪಟ್ಟದಿಂದ ಇಳಿದ ಮಸ್ಕ್‌

    ನವೀನ್ ಮೇಲೆ ದೆಹಲಿಯ ಥಾನಾ ಫರ್ಶ್ ಬಜಾರ್‌ನಲ್ಲಿ ಕೊಲೆ ಸೇರಿ 20ಕ್ಕೂ ಪ್ರಕರಣ ದಾಖಲಾಗಿದ್ದವು. ಈ ಹಿಂದೆ ದೆಹಲಿಯಲ್ಲಿ ಪ್ರಕರಣದಲ್ಲಿ ನವೀನ್ ಜೈಲು ಶಿಕ್ಷೆ ಅನುಭವಿಸಿದ್ದ. ಉತ್ತರ ಪ್ರದೇಶ ವಿಶೇಷ ಕಾರ್ಯಪಡೆ, ನೋಯ್ಡಾ ಘಟಕ ಮತ್ತು ದೆಹಲಿ ಪೊಲೀಸರ ವಿಶೇಷ ಘಟಕದ ಜಂಟಿ ತಂಡಗಳು ಸೇರಿ ಕಾರ್ಯಾಚರಣೆ ಮಾಡಿದೆ.

  • ಟ್ವಿಟರ್ ಇಂಡಿಯಾ ಎಂಡಿಗೆ ರಿಲೀಫ್ – ಯುಪಿ ಪೊಲೀಸರ ನೋಟಿಸ್ ರದ್ದುಗೊಳಿಸಿದ ಕರ್ನಾಟಕ ಹೈ ಕೋರ್ಟ್

    ಟ್ವಿಟರ್ ಇಂಡಿಯಾ ಎಂಡಿಗೆ ರಿಲೀಫ್ – ಯುಪಿ ಪೊಲೀಸರ ನೋಟಿಸ್ ರದ್ದುಗೊಳಿಸಿದ ಕರ್ನಾಟಕ ಹೈ ಕೋರ್ಟ್

    ಬೆಂಗಳೂರು: ಗಾಜಿಯಾಬಾದ್ ವೃದ್ಧನೋರ್ವನ ವೀಡಿಯೋಗೆ ಸಂಬಂಧಿಸಿದಂತೆ ಟ್ವಟರ್ ಇಂಡಿಯಾ ಎಂಡಿ ಮನೀಷ್ ಮಹೇಶ್ವರಿಗೆ ಕರ್ನಾಟಕ ಹೈಕೋರ್ಟ್ ರಿಲೀಫ್ ನೀಡಿದೆ. ಇಂದು ಕರ್ನಾಟಕದ ಹೈಕೋರ್ಟ್ ಉತ್ತರ ಪ್ರದೇಶದ ಪೊಲೀಸರು ನೀಡಿದ ನೋಟಿಸ್ ನ್ನು ವಜಾಗೊಳಿಸಿ ಆದೇಶಿಸಿದ್ದು, ಮನೀಷ್ ಮಹೇಶ್ವರಿಗೆ ತನಿಖೆಗೆ ಸಹಕರಿಸುವಂತೆ ನ್ಯಾಯಮೂರ್ತಿ ಜಿ ನರೇಂದರ್ ನೇತೃತ್ವದ ಏಕಸದಸ್ಯ ಪೀಠ ಸೂಚನೆ ಸಹ ನೀಡಿದೆ.

    ವೃದ್ಧನ ವೀಡಿಯೋಗೆ ಸಂಬಂಧಿಸಿದಂತೆ ಮನೀಷ್ ಮಹೇಶ್ವರಿ ಸೇರಿದಂತೆ ಹಲವರನ್ನು ಉತ್ತರ ಪ್ರದೇಶದ ಪೊಲೀಸರು ಆರೋಪಿ ಸ್ಥಾನದಲ್ಲಿರಿಸಿತ್ತು. ಕೆಲ ದಿನಗಳ ಹಿಂದೆ ಉತ್ತರ ಪ್ರದೇಶದ ಪೊಲೀಸರು ವರ್ಚುವಲ್ ಮಾಧ್ಯಮ ಅಥವಾ ನೇರವಾಗಿ ಬಂದು ಹೇಳಿಕೆ ದಾಖಲಿಸುವಂತೆ ಹೈಕೋರ್ಟ್ ಸೂಚನೆ ನೀಡಿತ್ತು.

    ವೃದ್ಧನೋರ್ವ ವೀಡಿಯೋ ವೈರಲ್ ಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಪೊಲೀಸರು ಮನೀಷ್ ಮಹೇಶ್ವರಿ ಅವರಿಗೆ ಠಾಣೆಗೆ ಬಂದು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದ್ದರು. ಈ ಸಂಬಂಧ ಮನೀಷ್ ಮಹೇಶ್ವರಿ ಕರ್ನಾಟಕದ ಉಚ್ಛ ನ್ಯಾಯಾಲಯದ ಮೊರೆ ಹೋಗಿದ್ದರು. ಇದನ್ನೂ ಓದಿ: ಟೋಕಿಯೋ ಒಲಿಂಪಿಕ್ಸ್-21ನೇ ಕ್ರಮಾಂಕದಲ್ಲಿ ಧ್ವಜ ಹಿಡಿದು ಆಗಮಿಸಿದ ಭಾರತ ತಂಡ

    ಮೊದಲಿಗೆ ಸಿಆರ್‍ಪಿಸಿ ಸೆಕ್ಷನ್ 160ರ ಅಡಿ ನೋಟಿಸ್ ನೀಡಲಾಗಿತ್ತು. ಆದ್ರೆ ಮನೀಷ್ ಮಹೇಶ್ವರಿ ಪ್ರತಿಕ್ರಿಯಿಸದ ಹಿನ್ನೆಲೆ ಸೆಕ್ಷನ್ 41ಎ ಅಡಿಯಲ್ಲಿ ನೋಟಿಸ್ ಜಾರಿಗೊಳಿಸಲಾಗಿದೆ. ಶಾಸನಬದ್ಧ ನಿಬಂಧನೆಗಳನ್ನು ಬೆದರಿಕೆ ಅಸ್ತ್ರವನ್ನಾಗಿ ಬಳಸಿಕೊಳ್ಳಲು ಅನುಮತಿ ನೀಡಲಾಗುವುದು. ಉತ್ತರ ಪ್ರದೇಶದ ಪೊಲೀಸರು ಅರ್ಜಿದಾರರು ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ಯಾವುದೇ ದಾಖಲೆಗಳನ್ನು ನೀಡಿಲ್ಲ ಎಂದು ನ್ಯಾಯಾಲಯ ಹೇಳಿದೆ.

  • ಅಯೋಧ್ಯೆ ತೀರ್ಪಿನ ನಂತ್ರ ಆಕ್ಷೇಪಾರ್ಹ ಪೋಸ್ಟ್- 99 ಮಂದಿಯ ಬಂಧನ

    ಅಯೋಧ್ಯೆ ತೀರ್ಪಿನ ನಂತ್ರ ಆಕ್ಷೇಪಾರ್ಹ ಪೋಸ್ಟ್- 99 ಮಂದಿಯ ಬಂಧನ

    ಲಕ್ನೋ: ಅಯೋಧ್ಯೆ ಪ್ರಕರಣದ ಸುಪ್ರೀಂ ಕೋರ್ಟ್ ತೀರ್ಪಿನ ಕುರಿತು ಇಷ್ಟೆಲ್ಲ ಮುನ್ನೆಚ್ಚರಿಕೆ ಹಾಗೂ ಕಟ್ಟೆಚ್ಚರ ವಹಿಸಿದರೂ ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಪುಂಡಾಟ ಮೆರೆದಿದ್ದು, ಅಂತಹವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಜೈಲಿಗಟ್ಟಿದ್ದಾರೆ.

    ಅಯೋಧ್ಯೆ ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್ ಗಳನ್ನು ಹಾಕಿದ್ದಕ್ಕೆ 99 ಜನರನ್ನು ಬಂಧಿಸಲಾಗಿದೆ. ಅಲ್ಲದೆ ಮಂಗಳವಾರದ ವರೆಗೆ ಒಟ್ಟು 65 ಪ್ರಕರಣಗಳನ್ನು ದಾಖಲಿಸಲಾಗಿದೆ. ಇಂತಹ ಪೋಸ್ಟ್ ಗಳನ್ನು ಡಿಲೀಟ್ ಮಾಡುವುದು ಹಾಗೂ ವರದಿ ಮಾಡಿಕೊಳ್ಳುವುದು ಸೇರಿದಂತೆ ಸಾಮಾಜಿಕ ಜಾಲತಾಣಗಳ 13,016 ಪೋಸ್ಟ್ ಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಉತ್ತರ ಪ್ರದೇಶದ ಪೊಲೀಸ್ ಮಹಾನಿರ್ದೇಶಕ(ಡಿಜಿಪಿ) ಕಚೇರಿ ಮಾಹಿತಿ ನೀಡಿದೆ.

    ದೇವಾಲಯ ನಿರ್ಮಾಣಕ್ಕಾಗಿ ಅಯೋಧ್ಯೆಯಲ್ಲಿನ ರಾಮ ಜನ್ಮಭೂಮಿಯನ್ನು ಹಿಂದೂ ಸಂಘಟನೆಗಳಿಗೆ ಹಸ್ತಾಂತರಿಸುವಂತೆ ಸುಪ್ರೀಂ ಕೋರ್ಟ್ ಶನಿವಾರ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿದೆ. ಅಲ್ಲದೆ ಮಸೀದಿ ನಿರ್ಮಾಣಕ್ಕಾಗಿ 5 ಎಕರೆ ಭೂಮಿಯನ್ನು ಸುನ್ನಿ ವಕ್ಫ್ ಮಂಡಳಿಗೆ ನೀಡುವಂತೆ ಸುಪ್ರೀಂ ಕೋರ್ಟ್ ಸರ್ಕಾರಕ್ಕೆ ಸೂಚಿಸಿದೆ.

    2022ಕ್ಕೆ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ 75 ವರ್ಷಗಳಾಗುತ್ತವೆ. ಇದಕ್ಕೂ ಮೊದಲೇ ಸುಪ್ರೀಂ ಕೋರ್ಟ್ ಈ ವಿವಾದ ಇತ್ಯರ್ಥಪಡಿಸಿರುವುದು ಸಂತಸಕ್ಕೆ ಕಾರಣವಾಗಿದೆ. ಇದೀಗ ರಾಮಜನ್ಮ ಭೂಮಿಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣದ ಕಾರ್ಯವು ಭರದಿಂದ ಸಾಗಿದೆ.

    ದೇವಾಲಯ ಪೂರ್ಣಗೊಂಡ ನಂತರ ಹೇಗಿರಲಿದೆ ಎಂಬ ಚಿತ್ರಣದ ಮಾದರಿಯನ್ನು ಸಹ ಉತ್ತರ ಪ್ರದೇಶ ಸರ್ಕಾರ ಬಿಡುಗಡೆ ಮಾಡಿದೆ. ಮೂಲಗಳ ಪ್ರಕಾರ ರಾಮನ ವಿಗ್ರಹ ಪೂರ್ಣಗೊಳ್ಳಲು ಮೂರು ವರ್ಷಗಳನ್ನು ತೆಗೆದುಕೊಳ್ಳುತ್ತದೆ ಎಂದು ತಿಳಿದು ಬಂದಿದೆ.

    ಈ ತೀರ್ಪನ್ನು ಬಿಜೆಪಿ ಹಾಗೂ ಕಾಂಗ್ರೆಸ್ ಸ್ವಾಗತಿಸಿದರೆ, ಅಖಿಲ ಭಾರತ ಮಜ್ಲಿಸ್-ಎ-ಇಟ್ಟೇಹದುಲ್ ಮುಸ್ಲೀಮೀನ್ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಸತ್ಯಕ್ಕಿಂತ ನಂಬಿಕೆ ಮೇಲಿನ ವಿಜಯ ಎಂದು ಕರೆದಿದ್ದಾರೆ. ಅಲ್ಲದೆ ಸುಪ್ರೀಂ ಕೋರ್ಟ್ ಸರ್ವೋಚ್ಛ ಆದರೆ ದೋಷರಹಿತವಲ್ಲ ಎಂದಿದ್ದಾರೆ.

    ಅಲ್ಲದೆ ಈ ಪಟ್ಟಿಗೆ ಮಥುರಾ, ಕಾಶಿ ಹಾಗೂ ಲಕ್ನೋದಲ್ಲಿ ದೇವಾಲಯಗಳ ಮೇಲೆ ಮಸೀದಿಗಳಿವೆ ಎಂದು ಸಂಘ ಪರಿವಾರ ಸೇರಿಸಲಿದೆ. ಈ ತೀರ್ಪನ್ನು ಇತರ ಮಸೀದಿಗಳ ಮೇಲೆ ಹಕ್ಕು ಸಾಧಿಸಲು ಬಳಸಲಿದೆ. ದೇಶವು ಹಿಂದೂ ರಾಷ್ಟ್ರದ ಹಾದಿಯಲ್ಲಿ ಸಾಗುತ್ತಿದೆ ಎಂದು ಓವೈಸಿ ಆತಂಕ ವ್ಯಕ್ತಪಡಿಸಿದ್ದಾರೆ.

    ಸಂಘ ಪರಿವಾರ ಮತ್ತು ಬಿಜೆಪಿ ಹಿಂದೂ ರಾಷ್ಟ್ರದ ಹಾದಿ ಅಯೋಧ್ಯೆಯಿಂದ ಪ್ರಾರಂಭವಾಗುತ್ತಿದೆ. ಈಗ ಅವರು ಎನ್‍ಆರ್ ಸಿ ಹಾಗೂ ಪೌರತ್ವ ತಿದ್ದುಪಡಿ ಮಸೂದೆಯನ್ನು ತರಲು ಬಯಸಿದ್ದಾರೆ. ಈ ಮೂಲಕ ಮೋದಿ 2.0 ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡುವುದಾಗಿದೆ ಎಂದು ಆರೋಪಿಸಿದ್ದಾರೆ.