ಬೆಂಗಳೂರು: ಪ್ರತಿ ಬಾರಿ ತೆರಿಗೆ ಹಣ ಕಡಿತ ಮಾಡುತ್ತಿದ್ದಾರೆ. ನಮ್ಮ ಹಣವನ್ನ ಉತ್ತರ ಭಾರತಕ್ಕೆ (North India) ನೀಡುತ್ತಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾಡಿದ್ದಾರೆ.
ತೆರಿಗೆ (Tax) ಕಡಿತ ವಿಚಾರವಾಗಿ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಹಣ ಉತ್ತರ ಭಾರತಕ್ಕೆ ನೀಡುತ್ತಿದ್ದಾರೆ. ಪ್ರತಿ ಬಾರಿ ರಾಜ್ಯಕ್ಕೆ ತೆರಿಗೆ ಕಡಿತ ಮಾಡುತ್ತಿದ್ದಾರೆ. ಇದರ ವಿರುದ್ಧ ಹೋರಾಟ ಮಾಡಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಡಿಕೆಶಿ ಶಿವರಾತ್ರಿಗೆ ಹೋದ್ರೆ ಪಕ್ಷದ ವಿರುದ್ಧ ಆಗುತ್ತಾ? : ಎಂ.ಬಿ ಪಾಟೀಲ್
ಡಿಕೆಶಿ ಸಾಫ್ಟ್ ಹಿಂದೂತ್ವ ವಿಚಾರ ಕುರಿತು ಪ್ರತಿಕ್ರಿಯಿಸಿ, ಡಿಕೆ ಶಿವಕುಮಾರ್ ಈ ಹಿಂದಿನಿಂದಲೂ ದೇವಸ್ಥಾನಗಳಿಗೆ ಹೋಗುತ್ತಿದ್ದಾರೆ. ಅದರಲ್ಲೇನೂ ಹೊಸದಿಲ್ಲ. ಇನ್ನೂ ಸದ್ಗುರು ಬಗ್ಗೆ ರಾಹುಲ್ ಗಾಂಧಿ ಅವರು ಮಾತನಾಡಿರುವುದು ನನಗೆ ಗೊತ್ತಿಲ್ಲ. ಹಾಗೇನಾದ್ರೂ ಮಾತನಾಡಿದ್ದರೆ, ಹೈಕಮಾಂಡ್ ಗಮನಿಸುತ್ತೆ ಎಂದು ಹೇಳಿದ್ದಾರೆ.
ಇದೇ ವೇಳೆ ಮಾರ್ಚ್ 22ರಂದು ಕರ್ನಾಟಕ ಬಂದ್ ವಿಚಾರ ಕುರಿತು ಮಾತನಾಡಿ, ಮುಖ್ಯಮಂತ್ರಿಗಳು ಶಾಂತಿಯುವಾಗಿ ಪರಿಹರಿಸಲು ಕೆಲಸ ಮಾಡುತ್ತಿದ್ದಾರೆ. ಬೆಂಗಳೂರು ಮಟ್ಟದಲ್ಲಿ ಕೂಡ ಮಾತುಕತೆ ನಡೆಯುತ್ತಿದೆ, ಎಲ್ಲವೂ ಸರಿ ಹೋಗಲಿದೆ ಎಂದಿದ್ದಾರೆ. ಇದನ್ನೂ ಓದಿ: ಮಾ.22 ಕರ್ನಾಟಕ ಬಂದ್ – ಪರೀಕ್ಷೆ ಮುಂದೂಡಿಕೆ ಇಲ್ಲ: ಮಧು ಬಂಗಾರಪ್ಪ
ನಮ್ಮ ಮೇಲೆ ಆರೋಪ ಮಾಡಬಹುದು, ಆದ್ರೆ ಇದು ಪೊಲೀಸ್ ಅಧಿಕಾರಿ ಮಾಡಿದ ತಪ್ಪು. ನಮ್ಮ ಜವಾಬ್ದಾರಿ ಅಲ್ಲ ಅದು ಪೊಲೀಸ್ ಜವಾಬ್ದಾರಿ. ನಾವು ಮಾಡಿದ ತಪ್ಪಿಲ್ಲ, ಕಂಡಕ್ಟರ್ ಮೇಲೆ ಹಾಕಿದ ಕೇಸ್‌ಗೆ ಇಷ್ಟು ದೊಡ್ಡದಾಗಿದೆ. ಈಗಾಗಲೇ ಪೊಲೀಸ್ ಅಧಿಕಾರಿ ವರ್ಗಾವಣೆ ಆಗಿದೆ. ಪೊಲೀಸ್ ನಮ್ಮ ಅಡಿಯಲ್ಲಿ ಕೆಲಸ ಮಾಡಬೇಕು ಅಂದಿಲ್ಲ, ಅಡಿಷನಲ್ ಕೇಸ್ ಹಾಕಿದ್ದು ತಪ್ಪು. ಮೇಲಿನ ಅಧಿಕಾರಿಗಳ ಮಾತು ಕೇಳಬೇಕಿತ್ತು. ಸದ್ಯ ಶಾಂತವಾಗಿದೆ, ಮತ್ತೆ ಕದಡಿಸುವುದು ಬೇಡ. ಬಂದ್ ಮಾಡಿದ್ರೆ ಬೆಳಗಾವಿ ನಗರಕ್ಕೆ ತೊಂದರೆ ಆಗುತ್ತೆ ಎಂದು ಸಚಿವರು ಹೇಳಿದ್ದಾರೆ.
ಇನ್ನೂ ಕೇಂದ್ರ ಸರ್ಕಾರ ಕ್ಷೇತ್ರಗಳ ಪುನರ್‌ವಿಂಗಡಣೆ ಕುರಿತು ಮಾತನಾಡಿ, ಕ್ಷೇತ್ರ ಪುನರ್‌ವಿಂಗಡಣೆಯಿಂದ ದಕ್ಷಿಣ ಭಾರತದಲ್ಲಿ ಕ್ಷೇತ್ರ ಕಡಿಮೆಯಾಗಲಿವೆ. ಅದರ ಬಗ್ಗೆ ಪ್ರತಿಭಟನೆ ಮಾಡಬೇಕಿದೆ. ನಮಗೆ ಕ್ಷೇತ್ರಗಳು ಹೆಚ್ಚಾಗಬೇಕು ಎಂದು ಆಗ್ರಹಿಸಿದ್ದಾರೆ.
ಲಕ್ನೋ: ಟಿಸಿಎಸ್ ಟೆಕ್ಕಿ (Techie) ಆತ್ಮಹತ್ಯೆ ಪ್ರಕರಣಕ್ಕೆ ಟಿಸ್ಟ್ ಸಿಕ್ಕಿದೆ. ಮಾನವ್ ಶರ್ಮಾ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಪತ್ನಿ ಈಗ ವಿಡಿಯೋ ಮಾಡಿ ಪತಿ ವಿರುದ್ಧವೇ ಗಂಭೀರ ಆರೋಪ ಮಾಡಿದ್ದಾರೆ.
ಪತ್ನಿ ನಿಕಿತಾ ಈಗ ಮಾನವ್ ಶರ್ಮಾನೇ ನನ್ನನ್ನು ಹೊಡೆಯುತ್ತಿದ್ದ ಎಂದು ಆರೋಪಿಸಿ ವಿಡಿಯೋ ಮಾಡಿದ್ದಾರೆ. ಇದನ್ನೂ ಓದಿ: ದಯವಿಟ್ಟು ಗಂಡಸರ ಬಗ್ಗೆ ಯೋಚಿಸಿ: ಪತ್ನಿ ದೌರ್ಜನ್ಯಕ್ಕೆ ಬೇಸತ್ತು ಟೆಕ್ಕಿ ಆತ್ಮಹತ್ಯೆ
ಮಾನವ್ ಶರ್ಮಾ ಆತ್ಮಹತ್ಯೆ ಮಾಡಿಕೊಂಡ ದಿನ ನನ್ನನ್ನು ನನ್ನ ತಾಯಿಯ ಮನೆಗೆ ಬಿಟ್ಟಿದ್ದರು. ಅವರು ನನ್ನ ಬಗ್ಗೆ ಆರೋಪ ಮಾಡಿರುವುದೆಲ್ಲಾ ನನ್ನ ಹಿಂದಿನ ವಿಷಯಗಳು. ಈ ಹೇಳಿಕೆಗಳು ಮದುವೆಯ ನಂತರದ ಜೀವನಕ್ಕೆ ಸಂಬಂಧಿಸಿಲ್ಲ. ಅವರು ಈ ಹಿಂದೆ ಹಲವು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದರು. ನಾನು ಮೂರು ಬಾರಿ ಅವರನ್ನು ತಡೆದಿದ್ದೇನೆ. ಅವರು ಮದ್ಯಪಾನ ಮಾಡಿ ನನ್ನನ್ನು ಹೊಡೆಯುತ್ತಿದ್ದರು. ಈ ಬಗ್ಗೆ ಮಾನವ್ ಅಪ್ಪ ಅಮ್ಮನಿಗೂ ತಿಳಿಸಿದ್ದೇನೆ ಎಂದು ನಿಕಿತಾ ವಿಡಿಯೋ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ: ಕಾಪು ಶ್ರೀಹೊಸ ಮಾರಿಗುಡಿ ಕಂಡು ನಿಬ್ಬೆರಗಾದ ನಟಿ ಶಿಲ್ಪಾ ಶೆಟ್ಟಿ
ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS)ನಲ್ಲಿ ಉದ್ಯೋಗಿಯಾಗಿದ್ದ ಮಾನವ್ ಶರ್ಮಾ ಫೆ.24ರಂದು ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನ ಮಾನವ್ ಶರ್ಮಾ ಪತ್ನಿ ನಿಕಿತಾ ವಿರುದ್ಧ ವಿಡಿಯೋ ಮೂಲಕ ಆರೋಪ ಮಾಡಿದ್ದರು. ಇದನ್ನೂ ಓದಿ: ಸಿಎಂ, ಕಾಂಗ್ರೆಸ್ ಹೆದರಿಸಲು ಡಿಕೆಶಿ ಹಿಂದುತ್ವದ ವೇಷ ಹಾಕಿದ್ದಾರೆ: ಮುನಿರತ್ನ
ಸದರ್ ಬಜಾರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
– ಅತುಲ್ ಸುಭಾಷ್ ಕೇಸ್ ಬಳಿಕ ಆಗ್ರಾದಲ್ಲಿ ಮತ್ತೊಂದು ಪ್ರಕರಣ
ಲಕ್ನೋ: ಟೆಕ್ಕಿ ಅತುಲ್ ಸುಭಾಷ್ ಬಳಿಕ ಆಗ್ರಾದಲ್ಲಿ ಮತ್ತೊಂದು ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ತನ್ನ ಪತ್ನಿ ವಿರುದ್ಧ ಗಂಭೀರ ಆರೋಪ ಮಾಡಿ ಟಿಸಿಎಸ್ ಉದ್ಯೋಗಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.
ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್)ನಲ್ಲಿ ಉದ್ಯೋಗಿಯಾಗಿದ್ದ ಮಾನವ್ ಶರ್ಮಾ ಫೆ.24 ರಂದು ತಮ್ಮ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆತ್ಮಹತ್ಯೆಗೂ ಮುನ್ನ ವೀಡಿಯೋ ಮಾಡಿಟ್ಟು ಪತ್ನಿ ವಿರುದ್ಧ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತ – ಜನಜೀವನ ಅಸ್ತವ್ಯಸ್ಥ
ಕುತ್ತಿಗೆಗೆ ಕುಣಿಕೆ ಬಿಗಿದಿದ್ದ ಶರ್ಮಾ ಸುಮಾರು ಏಳು ನಿಮಿಷಗಳ ಕಾಲದ ಒಂದು ಭಯಾನಕ ವೀಡಿಯೊವನ್ನು ಮಾಡಿದ್ದಾರೆ. ಅದರಲ್ಲಿ ಅವರು ತಮ್ಮ ಪತ್ನಿ ಇನ್ನೊಬ್ಬ ಪುರುಷನೊಂದಿಗೆ ಪ್ರೇಮ ಸಂಬಂಧ ಹೊಂದಿದ್ದಾಳೆಂದು ಆರೋಪಿಸಿದ್ದಾರೆ.
ಕಾನೂನು ಪುರುಷರನ್ನು ರಕ್ಷಿಸಬೇಕು. ಇಲ್ಲದಿದ್ದರೆ ದೂಷಿಸಲು ಪುರುಷರೇ ಇಲ್ಲದ ಸಮಯ ಬರುತ್ತದೆ. ನನ್ನ ಹೆಂಡತಿ ಇನ್ನೊಬ್ಬ ಪುರುಷನೊಂದಿಗೆ ಸಂಬಂಧ ಹೊಂದಿದ್ದಳು. ಹೀಗಿದ್ದಾಗ, ನಾನು ಏನು ಮಾಡಬಹುದು ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಉತ್ತರಾಖಂಡದಲ್ಲಿ ಹಿಮಪಾತ – 50 ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರುವ ಶಂಕೆ
ನನಗೆ ಸಾಯುವುದರಲ್ಲಿ ಯಾವುದೇ ಸಮಸ್ಯೆ ಇಲ್ಲ. ನಾನು ಹೋಗಬೇಕು. ದಯವಿಟ್ಟು ಗಂಡಸರ ಬಗ್ಗೆ ಯೋಚಿಸಿ. ಕ್ಷಮಿಸಿ, ಎಲ್ಲರೂ. ದಯವಿಟ್ಟು ಯಾರಾದರೂ ಪುರುಷರ ಬಗ್ಗೆ ಮಾತನಾಡಬೇಕು. ಅವರು ಒಂಟಿಯಾಗುತ್ತಾರೆ. ನಾನು ಹೋದ ನಂತರ ಎಲ್ಲವೂ ಸರಿಯಾಗುತ್ತದೆ. ನಾನು ಈ ಹಿಂದೆಯೂ ಆತ್ಮಹತ್ಯೆಗೆ ಪ್ರಯತ್ನಿಸಿದ್ದೆ ಎಂದು ವೀಡಿಯೋದಲ್ಲಿ ಹೇಳಿಕೊಂಡಿದ್ದಾರೆ.
– ಸನಾತನದ ಧ್ವಜ ಎಂದಿಗೂ ಕೆಳಗೆ ಇಳಿಯಲು ಬಿಡಲ್ಲ
– ಪ್ರತಿ ಪಕ್ಷಗಳ ಸುಳ್ಳಿಗೆ ಭಕ್ತರು ಬಲಿಯಾಗಲಿಲ್ಲ
– ಎಲ್ಲಾ ಆರೋಗ್ಯ ಕಾರ್ಯಕರ್ತರಿಗೆ 10 ಸಾವಿರ ರೂ. ಬೋನಸ್
ಪ್ರಯಾಗ್‌ರಾಜ್: ಪ್ರತಿಪಕ್ಷಗಳು ಎಷ್ಟೇ ಸುಳ್ಳಿನ ಮಾಹಿತಿ ಹರಡಿದರೂ ಕೋಟ್ಯಂತರ ಜನರು ಕುಂಭಮೇಳದಲ್ಲಿ (Kumbh Mela) ಭಾಗವಹಿಸುವ ಮೂಲಕ ಅವರಿಗೆ ತಕ್ಕ ಉತ್ತರ ನೀಡಿದ್ದಾರೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ( CM Yogi Adityanath) ಹೇಳಿದ್ದಾರೆ.
ಮಹಾ ಕುಂಭಮೇಳ ಯಶಸ್ವಿಯಾದ ಬೆನ್ನಲ್ಲೇ ಇಂದು ಯೋಗಿ ಪ್ರಯಾಗ್‌ರಾಜ್‌ಗೆ (Prayagraj) ಆಗಮಿಸಿದ್ದರು. ಮಧ್ಯಾಹ್ನ ಯೋಗಿ ಅವರು ಪ್ರಯಾಗ್‌ರಾಜ್‌ನ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗಿಯಾದವರ ಜೊತೆ ಮಧ್ಯಾಹ್ನ ಭೋಜನ ಮಾಡಿದರು.
ನಂತರ ಈ ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದವರನ್ನು ಉದ್ದೇಶಿಸಿ ಮಾತನಾಡಿದ ಅವರು, ತಪ್ಪು ಮಾಹಿತಿಗೆ ನಾವು ಬಲಿಯಾಗುವುದಿಲ್ಲ ಮತ್ತು ಸನಾತನದ ಧ್ವಜ ಎಂದಿಗೂ ಕೆಳಗೆ ಇಳಿಯಲು ಬಿಡುವುದಿಲ್ಲ ಎಂಬ ಸಂದೇಶವನ್ನು ಕೋಟ್ಯಂತರ ಭಕ್ತರು ಪ್ರತಿಪಕ್ಷಗಳಿಗೆ ರವಾನಿಸಿದ್ದಾರೆ ಎಂದು ಹೇಳಿದರು.
#WATCH | Prayagraj: Uttar Pradesh CM Yogi Adityanath says “Our government has decided to provide Rs 10,000 bonus to the sanitation and health workers at the Maha Kumbh in Prayagraj. We are going to ensure that from April, a minimum wage of Rs 16,000 will be provided to the… pic.twitter.com/QwywAUsD2S
ನಗರದಲ್ಲಿ 20-25 ಲಕ್ಷ ಜನಸಂಖ್ಯೆ ಇದೆ. ಒಂದೇ ಬಾರಿಗೆ ಕೋಟ್ಯಂತರ ಜನ ಬಂದಾಗ ಪರಿಸ್ಥಿತಿ ಏನಾಗಬಹುದು ಎನ್ನುವುದು ನನಗೆ ತಿಳಿದಿದೆ. ಕಳೆದ ಎರಡು ತಿಂಗಳುಗಳಿಂದ ಈ ಕಾರ್ಯಕ್ರಮವನ್ನು ತಮ್ಮ ಮನೆಯ ಕಾರ್ಯಕ್ರಮವಾಗಿ ಸ್ವೀಕರಿಸಿದ ಪ್ರಯಾಗ್‌ರಾಜ್ ಜನತೆಗೆ ನಾನು ಧನ್ಯವಾದ ಹೇಳುತ್ತೇನೆ ಎಂದು ತಿಳಿಸಿದರು.
ಸುಮಾರು 66.30 ಕೋಟಿ ಭಕ್ತರು ಭಾಗವಹಿಸಿದ ಬೃಹತ್ ಕಾರ್ಯಕ್ರಮ ಜಗತ್ತಿನ ಎಲ್ಲಿಯೂ ನಡೆದಿಲ್ಲ. ಅಪಹರಣ, ಲೂಟಿ ಅಥವಾ ಅಂತಹ ಯಾವುದೇ ಘಟನೆ ನಡೆದಿಲ್ಲ. ಪ್ರತಿಪಕ್ಷಗಳು ಬೈನಾಕ್ಯುಲರ್ ಮತ್ತು ಸೂಕ್ಷ್ಮದರ್ಶಕವನ್ನು ಬಳಸಿ ಹುಡುಕಿದರೂ ಅವರಿಗೆ ಸಿಗಲಿಲ್ಲ ಎಂದರು.
#WATCH | Uttar Pradesh CM Yogi Adityanath, Deputy CMs Brajesh Pathak, KP Maurya and other ministers of the cabinet have lunch with sanitation workers in Prayagraj. pic.twitter.com/TqEyxvpEgV
ಈ ರೀತಿಯ ದೊಡ್ಡ ಕಾರ್ಯಕ್ರಮ ಮಾಡಿದ್ದನ್ನು ಸಹಿಸದ ಪ್ರತಿಪಕ್ಷಗಳು ಸುಳ್ಳು ಮಾಹಿತಿಯನ್ನು ಹರಡಿದವು. ಮೌನಿ ಅಮವಾಸ್ಯೆಯಂದು 8 ಕೋಟಿ ಭಕ್ತರು ಸ್ನಾನ ಮಾಡಿದ್ದರು. ಪ್ರತಿಪಕ್ಷಗಳು ಕಠ್ಮಂಡುವಿನ ವೀಡಿಯೋ ಬಳಸಿಕೊಂಡು ಮತ್ತು ಅದನ್ನು ಪ್ರಯಾಗ್‌ರಾಜ್‌ನಿಂದ ಎಂದು ಬಿಂಬಿಸುವ ಮೂಲಕ ತಪ್ಪು ಮಾಹಿತಿಯನ್ನು ಹರಡಿದ್ದರು. ಬೇರೆಡೆಯಿಂದ ಕೆಲವು ವೀಡಿಯೊಗಳನ್ನು ತೋರಿಸುವ ಮೂಲಕ ಪ್ರಯಾಗ್‌ರಾಜ್ ಅನ್ನು ನಿಂದಿಸುತ್ತಿದ್ದರು ಎಂದು ವಾಗ್ದಾಳಿ ನಡೆಸಿದರು.
ಮೌನಿ ಅಮವಾಸ್ಯೆ ರಾತ್ರಿ ದು:ಖಕರ ಘಟನೆ ನಡೆಯಿತು. ಕಾಲ್ತುಳಿತದಲ್ಲಿ ಮೃತಪಟ್ಟ ವ್ಯಕ್ತಿಗಳ ಕುಟುಂಬಗಳ ಬಗ್ಗೆ ನಮಗೆ ಸಹಾನುಭೂತಿಯಿದೆ. ಪ್ರತಿ ಪಕ್ಷಗಳು ಈ ವಿಚಾರವನ್ನು ದೊಡ್ಡದು ಮಾಡಿದ್ದವು. ಆದರೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಮೂಲಕ ಅವರಿಗೆ ಉತ್ತರ ನೀಡಿದರು ಎಂದರು.
#WATCH | Prayagraj | Uttar Pradesh CM Yogi Adityanath says, “Such huge gathering never happened anywhere in the world. 66.30 crore devotees took part in it – no incident of kidnapping, loot or any such incident occurred. The opposition couldn’t reveal any such incident even by… pic.twitter.com/SWoFU7dVXd
ಪ್ರಯಾಗರಾಜ್‌ನಲ್ಲಿ ನಡೆಯುವ ಮಹಾ ಕುಂಭದಲ್ಲಿ ನೈರ್ಮಲ್ಯ ಮತ್ತು ಆರೋಗ್ಯ ಕಾರ್ಯಕರ್ತರಿಗೆ 10,000 ರೂ. ಬೋನಸ್ ನೀಡಲು ನಮ್ಮ ಸರ್ಕಾರ ನಿರ್ಧರಿಸಿದೆ. ಏಪ್ರಿಲ್‌ನಿಂದ ನೈರ್ಮಲ್ಯ ಕಾರ್ಮಿಕರಿಗೆ ಕನಿಷ್ಠ ವೇತನ 16,000 ರೂ.ಗಳನ್ನು ಒದಗಿಸಲಾಗುವುದು. ತಾತ್ಕಾಲಿಕ ಆರೋಗ್ಯ ಕಾರ್ಯಕರ್ತರಿಗೆ ನೇರ ಬ್ಯಾಂಕ್ ಮೂಲಕ ಹಣವನ್ನು ವರ್ಗಾವಣೆ ಮಾಡಲಾಗುವುದು. ಎಲ್ಲಾ ಆರೋಗ್ಯ ಕಾರ್ಯಕರ್ತರ ಆರೋಗ್ಯ ರಕ್ಷಣೆಗಾಗಿ ಆಯುಷ್ಮಾನ್ ಭಾರತ್ ಯೋಜನೆಗೆ ಲಿಂಕ್ ಮಾಡಲಾಗುವುದು ಎಂದು ಈ ವೇಳೆ ಘೋಷಣೆ ಮಾಡಿದರು.
ಪ್ರಯಾಗ್‌ರಾಜ್: ವಿಶ್ವದ ಅತಿದೊಡ್ಡ ಧಾರ್ಮಿಕ ಸಮಾವೇಶ ಮಹಾ ಕುಂಭಮೇಳ ಇಂದು ಅಂತ್ಯವಾಗಲಿದೆ. ಜನವರಿ 13 ರಿಂದ ಆರಂಭವಾಗಿದ್ದ ಈ ಧಾರ್ಮಿಕ ಹಬ್ಬ ಇಂದು ಶಿವರಾತ್ರಿಯೊಂದಿಗೆ (Maha Shivaratri) ಅಂತ್ಯವಾಗಲಿದೆ. ಈವರೆಗೂ 64 ಕೋಟಿ ಜನರು ತ್ರಿವೇಣಿ ಸಂಗಮದಲ್ಲಿ ಮಿಂದೆದ್ದಿದ್ದಾರೆ. ಹಲವು ಅಡೆತಡೆಗಳ ನಡುವೆ ಮಹಾ ಕುಂಭಮೇಳ (Maha Kumbh Mela) ಹೊಸ ದಾಖಲೆ ಸೃಷ್ಟಿಸಿದೆ.
144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭಮೇಳ ಇಂದು ಮುಕ್ತಾಯವಾಗಲಿದೆ. ಪ್ರಪಂಚದಲ್ಲೇ ಇದೇ ಮೊದಲ ಬಾರಿಗೆ ಇಷ್ಟು ಜನ ಸೇರಿ ಹೊಸ ದಾಖಲೆ ನಿರ್ಮಾಣವಾಗಿದೆ. ಜೊತೆಗೆ ಶತಮಾನದಲ್ಲೇ ಅತ್ಯಂತ ಅಪರೂಪದ ಧಾರ್ಮಿಕ ಘಟನೆಯಾಗಿದ್ದು, ಇಂದು ಮಹಾಶಿವರಾತ್ರಿಯ ಅಂತಿಮ ಪುಣ್ಯ ಸ್ನಾನ ನಡೆಯುತ್ತಿದೆ. ಇದನ್ನೂ ಓದಿ: ಅಮೆರಿಕ | ಲಿವರ್‌ಮೋರ್‌ನ ಶಿವ-ವಿಷ್ಣು ದೇವಾಲಯದಲ್ಲಿ ನಿತ್ಯ ಆರಾಧನೆ
ಪ್ರಯಾಗರಾಜ್‌ನ ತ್ರಿವೇಣಿ ಸಂಗಮದಲ್ಲಿ ಮಹಾಶಿವರಾತ್ರಿಯ ಶುಭದಿನವಾದ ಇಂದು ಕೋಟ್ಯಂತರ ಭಕ್ತರು ಇಂದು ಪುಣ್ಯಸ್ನಾನ ಮಾಡುತ್ತಿದ್ದಾರೆ. ಈ ಬಾರಿ ಮಹಾಶಿವರಾತ್ರಿಯ ಶುಭ ಸಮಯದಲ್ಲಿ ಭಕ್ತರು ಸಂಗಮದಲ್ಲಿ ಪವಿತ್ರ ಸ್ನಾನ ಶುರು ಮಾಡಿದ್ದಾರೆ. ಮಕರ ರಾಶಿಯಲ್ಲಿ ಚಂದ್ರನ ಸಂಚಾರದೊಂದಿಗೆ ಶಿವ ಭಕ್ತರು ಪರಿಘ ಯೋಗದ ಸಮಯದಲ್ಲಿ ಸಂಗಮದಲ್ಲಿ ಸ್ನಾನ ಮಾಡುವ ಮೂಲಕ ಕೊನೆಯ ಸ್ನಾನ ಮಹೋತ್ಸವದ ಪುಣ್ಯ ಗಳಿಸುತ್ತಿದ್ದಾರೆ. ಇದನ್ನೂ ಓದಿ: ಶಿವರಾತ್ರಿ ವಿಶೇಷ: ಹಿಂದೂಗಳ ಆದ್ಯ ತೀರ್ಥಕ್ಷೇತ್ರ – ಮಾರಿಷಸ್‌ನ ಮಂಗಲ ಮಹಾದೇವ ಶಿವಾಲಯ!
ಪಂಚಾಂಗದ ಪ್ರಕಾರ ಫಾಲ್ಗುಣ ಮಾಸದ ಕೃಷ್ಣ ಪಕ್ಷದ ಚತುರ್ದಶಿ ಇಂದು ಬೆಳಗ್ಗೆ 11:08ಕ್ಕೆ ಪ್ರಾರಂಭವಾಗಿ ಗುರುವಾರ ಬೆಳಗ್ಗೆ 08:54ರವರೆಗೆ ಇರಲಿದೆ. ಮಹಾಶಿವರಾತ್ರಿಯಂದು ಸ್ನಾನ ಮಾಡಲು ಶುಭ ಸಮಯ ನಾಳೆ ಬೆಳಗ್ಗೆ 9 ಗಂಟೆಯವರೆಗೆ ಇರಲಿದೆ. ಇಂದು ಮಹಾಶಿವರಾತ್ರಿಯ ದಿನದಂದು ಬ್ರಹ್ಮ ಮುಹೂರ್ತವು ಬೆಳಗ್ಗೆ 05:09ಕ್ಕೆ ಪ್ರಾರಂಭವಾಗಿದ್ದು ಸಂಜೆ 5:59ಕ್ಕೆ ಕೊನೆಗೊಳ್ಳುತ್ತದೆ. ಇಂದು ಮಹಾ ಕುಂಭಮೇಳದ ಕೊನೆಯ ಸ್ನಾನವು ಮಹಾ ಶಿವರಾತ್ರಿಯ ದಿನದಂದು ಬ್ರಹ್ಮ ಮುಹೂರ್ತದಲ್ಲಿ ಪ್ರಾರಂಭವಾಗಿದ್ದು, ಬ್ರಹ್ಮ ಮುಹೂರ್ತದ ಸಮಯದಲ್ಲಿ ಸಂಗಮ ಸ್ನಾನ ಮಾಡುವುದು ವಿಶೇಷವಾಗಿ ಫಲಪ್ರದವಾಗಿದೆ. ಈ ದಿನದಂದು ಪೂಜೆ ಮಾಡುವುದರಿಂದ ಶಿವನ ವಿಶೇಷ ಆಶೀರ್ವಾದ ಸಿಗುತ್ತದೆ ಎಂಬ ನಂಬಿಕೆ ಇದೆ. ಇದನ್ನೂ ಓದಿ: ಮಹಾ ಶಿವರಾತ್ರಿ: ಆಡಂಬರವಿಲ್ಲ, ಅಲಂಕಾರ ಪ್ರಿಯನಲ್ಲ.. ಭಕ್ತಿಯಿಂದ ಭಜಿಸಿ ಶಿವನ
ಅತಿದೊಡ್ಡ ಧಾರ್ಮಿಕ ಸಭೆಯ ಭಾಗವಾಗಲು ಪ್ರಯಾಗ್‌ರಾಜ್‌ಗೆ ಭಕ್ತರ ದಂಡೇ ಹರಿದು ಬರುತ್ತಿದೆ. ರೈಲುಗಳು, ವಿಮಾನಗಳು ಮತ್ತು ರಸ್ತೆ ಮಾರ್ಗಗಳು ತುಂಬಿ ತುಳುಕುತ್ತಿವೆ. ಶಿವರಾತ್ರಿಯ ದಿನದಂದು ಪವಿತ್ರ ಸ್ನಾನ ಮಾಡಲು ಭಕ್ತರ ಅನುಕೂಲಕ್ಕಾಗಿ ಮಾಡಲಾದ ವಿಶೇಷ ವ್ಯವಸ್ಥೆಗಳ ಭಾಗವಾಗಿ, ಅಧಿಕಾರಿಗಳು ಲಕ್ನೋ ಮತ್ತು ಪ್ರತಾಪ್‌ಗಢದಿಂದ ಬರುವ ಯಾತ್ರಾರ್ಥಿಗಳಿಗೆ ಫಾಫಮೌ ಘಾಟ್ ಅನ್ನು ಗೊತ್ತುಪಡಿಸಿದ್ದಾರೆ. ಆದರೆ ಅರೈಲ್ ಘಾಟ್ ಅನ್ನು ರೇವಾನ್, ಬಂದಾ, ಚಿತ್ರಕೂಟ ಮತ್ತು ಮಿರ್ಜಾಪುರದ ಜನರಿಗೆ ಕಾಯ್ದಿರಿಸಲಾಗಿದೆ. ಕೌಶಂಬಿಯಿಂದ ಬರುವ ಭಕ್ತರಿಗಾಗಿ ಸಂಗಮ್ ಘಾಟ್ ಅನ್ನು ಗೊತ್ತುಪಡಿಸಲಾಗಿದೆ. ಇದನ್ನೂ ಓದಿ: ಶಿವನ ಕಣ್ಣೀರಿಂದಲೇ ಶಿವಾಲಯವಾದ ಕಥೆ – ಪಾಕಿಸ್ತಾನದ ಕಟಾಸ್ ರಾಜ್‌ಬಗ್ಗೆ ನಿಮಗೆಷ್ಟು ಗೊತ್ತು?
ಭದ್ರತಾ ವ್ಯವಸ್ಥೆಗಳ ವಿಷಯದಲ್ಲಿ, ಇಡೀ ಮೇಳ ಪ್ರದೇಶದಲ್ಲಿ ಯಾವುದೇ ವಾಹನಗಳನ್ನು ಅನುಮತಿಸಲಾಗುತ್ತಿಲ್ಲ. ಆದರೆ ಪಾಸ್‌ಗಳನ್ನು ಹೊಂದಿರುವ ವಾಹನಗಳಿಗೆ ಮಾತ್ರ ಗೊತ್ತುಪಡಿಸಿದ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲುಗಡೆ ಮಾಡಲು ಅವಕಾಶವಿರುತ್ತದೆ. ಪ್ರಯಾಗ್‌ರಾಜ್‌ಗೆ ಹೋಗುವ ಎಲ್ಲಾ ಪ್ರಮುಖ ಹೆದ್ದಾರಿಗಳು ಮತ್ತು ಮಾರ್ಗಗಳಲ್ಲಿ ಮೋಟಾರ್ ಬೈಕ್‌ಗಳಲ್ಲಿ ಪೊಲೀಸರ 40 ತಂಡಗಳನ್ನು ನಿಯೋಜಿಸಲಾಗಿದೆ. ಸುಗಮ ಮತ್ತು ಸುರಕ್ಷಿತ ಸಂಚಾರಕ್ಕಾಗಿ, ಮಾರ್ಗ ಬದಲಾವಣೆಗಳನ್ನು ರಚಿಸಲಾಗಿದೆ. ಇದನ್ನೂ ಓದಿ: ಪಂಚಾಯತ್ ದುಡ್ಡಲ್ಲಿ ಗ್ರಾ.ಪಂ ಸದಸ್ಯರ ಮಹಾ ಕುಂಭಮೇಳ ಟ್ರಿಪ್ ಆರೋಪ – ಪ್ರವಾಸದ ಮಧ್ಯೆ ಉಪಾಧ್ಯಕ್ಷೆ ಪುತ್ರನ ಸಾವು
ಪ್ರಯಾಗ್‌ರಾಜ್ ಅನ್ನು ಸಂಪರ್ಕಿಸುವ ಏಳು ರಸ್ತೆ ಮಾರ್ಗಗಳಲ್ಲಿ ಹೆಚ್ಚುವರಿ ಮಹಾನಿರ್ದೇಶಕರು ಮತ್ತು ಮಹಾನಿರೀಕ್ಷಕರ ಮಟ್ಟದ ಅಧಿಕಾರಿಗಳು ಕಾರ್ಯನಿರ್ವಹಿಸಲಿದ್ದಾರೆ. ಕುಂಭಮೇಳದ ಕೊನೆಯ ದಿನ ಮಹಾಶಿವರಾತ್ರಿಯೊಂದಿಗೆ ಹೊಂದಿಕೆಯಾಗುವುದರಿಂದ, ನಗರದ ಎಲ್ಲಾ ಶಿವ ದೇವಾಲಯಗಳಿಗೆ ಭಕ್ತರಿಗೆ ಭೇಟಿ ನೀಡಲು ಅವಕಾಶ ನೀಡಲಾಗುತ್ತಿದೆ. ಅಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಈಗಾಗಲೇ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ರಾಷ್ಟ್ರೀಯ ವಿಜ್ಞಾನ ದಿನಾಚರಣೆ| ಶಾಲಾ, ಕಾಲೇಜು, ಸರ್ಕಾರಿ ಕಚೇರಿಗಳಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ: ಎನ್.ಎಸ್ ಭೋಸರಾಜು
ಮಹಾಕುಂಭದಲ್ಲಿ ಕಾಲ್ತುಳಿತ ಸಂಭವಿಸಿ 30 ಮಂದಿ ಸಾವನ್ನಪ್ಪಿದ್ದು ಮತ್ತು ಮೂರು ಬಾರಿ ಅಗ್ನಿ ಅವಘಡಗಳು ಸಂಭವಿಸಿದ್ದು ಹೊರತುಪಡಿಸಿ 45 ದಿನಗಳ ಮಹಾ ಕುಂಭ ಸಾಂಗಾವಾಗಿ ನಡೆದಿದೆ. ಇದನ್ನೂ ಓದಿ: ಮಹಾ ಶಿವರಾತ್ರಿಯಂದು ಉಪವಾಸ ಮಾಡುವುದ್ಯಾಕೆ?
ಪ್ರಯಾಗ್‌ರಾಜ್: ವಿಶ್ವದ ಅತಿದೊಡ್ಡ ಧಾರ್ಮಿಕ ಸಭೆ ಮಹಾ ಕುಂಭಮೇಳಕ್ಕೆ (Maha Kumbh Mela) ಬುಧವಾರ ಒಂದು ಕೋಟಿಗೂ ಅಧಿಕ ಜನರು ಭೇಟಿ ನೀಡುವ ನಿರೀಕ್ಷೆ ಇದೆ. ಶಿವರಾತ್ರಿ ಹಿನ್ನೆಲೆ ಕಡೆಯ ಅಮೃತಸ್ನಾನ (Amrit Snan) ನಡೆಯಲಿದ್ದು, ಇದಕ್ಕಾಗಿ ಜಿಲ್ಲಾಡಳಿತದಿಂದ ಹೆಚ್ಚಿನ ಭದ್ರತಾ ವ್ಯವಸ್ಥೆ ಮಾಡಲಾಗಿದೆ.
ಜನವರಿ 13 ರಂದು ಮಹಾ ಕುಂಭಮೇಳ ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೆ ಸುಮಾರು 64 ಕೋಟಿ ಭಕ್ತರು ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಸಂಗಮವಾದ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ಜನವರಿ 13, 14, 29, ಫೆಬ್ರವರಿ 3 ಮತ್ತು 12 ಸೇರಿ ಒಟ್ಟು ಐದು ಅಮೃತಸ್ನಾನಗಳು ನಡೆದಿವೆ. ಇದನ್ನೂ ಓದಿ: ಸಿಎಂ ವಿರುದ್ಧದ ಮುಡಾ ಹಗರಣ – ಆಗಿನ ಮೈಸೂರು ಡಿಸಿ, ಹಾಲಿ ಸಂಸದ ಕುಮಾರ್ ನಾಯಕ್ ಲೋಪ
ಅತಿದೊಡ್ಡ ಧಾರ್ಮಿಕ ಸಭೆಯ ಭಾಗವಾಗಲು ಪ್ರಯಾಗ್‌ರಾಜ್‌ಗೆ (Prayagraj) ಭಕ್ತರ ದಂಡೇ ಹರಿದು ಬರುತ್ತಿದೆ. ರೈಲುಗಳು, ವಿಮಾನಗಳು ಮತ್ತು ರಸ್ತೆ ಮಾರ್ಗಗಳು ತುಂಬಿ ತುಳುಕುತ್ತಿವೆ. ಶಿವರಾತ್ರಿಯ ದಿನದಂದು ಪವಿತ್ರ ಸ್ನಾನ ಮಾಡಲು ಭಕ್ತರ ಅನುಕೂಲಕ್ಕಾಗಿ ಮಾಡಲಾದ ವಿಶೇಷ ವ್ಯವಸ್ಥೆಗಳ ಭಾಗವಾಗಿ, ಅಧಿಕಾರಿಗಳು ಲಕ್ನೋ ಮತ್ತು ಪ್ರತಾಪ್‌ಗಢದಿಂದ ಬರುವ ಯಾತ್ರಾರ್ಥಿಗಳಿಗೆ ಫಾಫಮೌ ಘಾಟ್ ಅನ್ನು ಗೊತ್ತುಪಡಿಸಿದ್ದಾರೆ. ಆದರೆ ಅರೈಲ್ ಘಾಟ್ ಅನ್ನು ರೇವಾನ್, ಬಂದಾ, ಚಿತ್ರಕೂಟ ಮತ್ತು ಮಿರ್ಜಾಪುರದ ಜನರಿಗೆ ಕಾಯ್ದಿರಿಸಲಾಗಿದೆ. ಕೌಶಂಬಿಯಿಂದ ಬರುವ ಭಕ್ತರಿಗಾಗಿ ಸಂಗಮ್ ಘಾಟ್ ಅನ್ನು ಗೊತ್ತುಪಡಿಸಲಾಗಿದೆ. ಇದನ್ನೂ ಓದಿ: ಬೀದರ್‌ನಲ್ಲಿ ಭೀಕರ ರಸ್ತೆ ಅಪಘಾತ – ಸ್ಥಳದಲ್ಲೇ ವೈದ್ಯ ಸಾವು
ಭದ್ರತಾ ವ್ಯವಸ್ಥೆಗಳ ವಿಷಯದಲ್ಲಿ, ಇಡೀ ಮೇಳ ಪ್ರದೇಶದಲ್ಲಿ ಯಾವುದೇ ವಾಹನಗಳನ್ನು ಅನುಮತಿಸಲಾಗುವುದಿಲ್ಲ. ಆದರೆ ಪಾಸ್‌ಗಳನ್ನು ಹೊಂದಿರುವ ವಾಹನಗಳಿಗೆ ಮಾತ್ರ ಗೊತ್ತುಪಡಿಸಿದ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲುಗಡೆ ಮಾಡಲು ಅವಕಾಶವಿರುತ್ತದೆ. ಪ್ರಯಾಗ್‌ರಾಜ್‌ಗೆ ಹೋಗುವ ಎಲ್ಲಾ ಪ್ರಮುಖ ಹೆದ್ದಾರಿಗಳು ಮತ್ತು ಮಾರ್ಗಗಳಲ್ಲಿ ಮೋಟಾರ್‌ಬೈಕ್‌ಗಳಲ್ಲಿ ಪೊಲೀಸರ 40 ತಂಡಗಳನ್ನು ನಿಯೋಜಿಸಲಾಗಿದೆ. ಸುಗಮ ಮತ್ತು ಸುರಕ್ಷಿತ ಸಂಚಾರಕ್ಕಾಗಿ, ಮಾರ್ಗ ಬದಲಾವಣೆಗಳನ್ನು ರಚಿಸಲಾಗಿದೆ. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್ – ದರ್ಶನ್ & ಗ್ಯಾಂಗ್ ವಿಚಾರಣೆ ಏ.8 ಕ್ಕೆ ಮುಂದೂಡಿಕೆ
ಪ್ರಯಾಗ್‌ರಾಜ್ ಅನ್ನು ಸಂಪರ್ಕಿಸುವ ಏಳು ರಸ್ತೆ ಮಾರ್ಗಗಳಲ್ಲಿ ಹೆಚ್ಚುವರಿ ಮಹಾನಿರ್ದೇಶಕರು ಮತ್ತು ಮಹಾನಿರೀಕ್ಷಕರ ಮಟ್ಟದ ಅಧಿಕಾರಿಗಳು ಕಾರ್ಯನಿರ್ವಹಿಸಲಿದ್ದಾರೆ. ಕುಂಭಮೇಳದ ಕೊನೆಯ ದಿನ ಮಹಾಶಿವರಾತ್ರಿಯೊಂದಿಗೆ (Maha Shivaratri) ಹೊಂದಿಕೆಯಾಗುವುದರಿಂದ, ನಗರದ ಎಲ್ಲಾ ಶಿವ ದೇವಾಲಯಗಳಿಗೆ ಭಕ್ತರಿಗೆ ಭೇಟಿ ನೀಡಲು ಅವಕಾಶ ನೀಡಲಾಗುವುದು. ಅಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಈಗಾಗಲೇ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ಪ್ರಯಾಗ್‌ರಾಜ್‌ಗೆ ತೆರಳುತ್ತಿದ್ದಾಗ ಅಪಘಾತ – ವಿಜಯಪುರದ ಇಬ್ಬರು ಸ್ಥಳದಲ್ಲೇ ಸಾವು
ಮಹಾ ಕುಂಭಮೇಳದ ಆರಂಭದಲ್ಲಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಕಾರ್ಯಕ್ರಮಕ್ಕೆ 45 ಕೋಟಿಗೂ ಹೆಚ್ಚು ಭಕ್ತರು ಆಗಮಿಸುತ್ತಾರೆ ಎಂದು ಅಂದಾಜಿಸಿದ್ದರು. ಫೆಬ್ರವರಿ 11 ರ ವೇಳೆಗೆ ಈ ಮೈಲಿಗಲ್ಲು ಸಾಧಿಸಲಾಯಿತು. ಮುಂದಿನ ಮೂರು ದಿನಗಳಲ್ಲಿ ಆ ಸಂಖ್ಯೆ 50 ಕೋಟಿ ದಾಟಿತು. ಈಗ ಶಿವರಾತ್ರಿ ವೇಳೆಗೆ 65 ಕೋಟಿ ಜನರು ಭೇಟಿ ನೀಡಬಹುದು ಎಂದು ಅಂದಾಜಿಸಲಾಗಿದೆ. ಇದನ್ನೂ ಓದಿ: ಪ್ರಯಾಗ್‌ರಾಜ್ ಮಹಾ ಕುಂಭಮೇಳ: ಶಿವರಾತ್ರಿ ಹಿನ್ನೆಲೆ ನಾಳೆ ಕೊನೆ ಪುಣ್ಯಸ್ನಾನ
ಪ್ರಯಾಗ್‌ರಾಜ್: 144 ವರ್ಷಗಳ ಬಳಿಕ ಪ್ರಯಾಗ್‌ರಾಜ್‌ನಲ್ಲಿ (Prayagraj) ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ (Maha Kumbh Mela) ನಾಳೆ ತೆರೆಬೀಳಲಿದೆ. ನಾಳೆ ಶಿವರಾತ್ರಿ ಹಿನ್ನೆಲೆ ಕೊನೆಯ ಪುಣ್ಯಸ್ನಾನಕ್ಕೆ ಸ್ಥಳೀಯ ಆಡಳಿತ ತಯಾರಿ ನಡೆಸುತ್ತಿದೆ.
ಕೊನೆಯ ಪುಣ್ಯಸ್ನಾನದ ಹಿನ್ನೆಲೆ ತ್ರಿವೇಣಿ ಸಂಗಮವನ್ನು ನೋ ವೆಹಿಕಲ್ ಝೋನ್ ಎಂದು ಘೋಷಿಸಲಾಗಿದೆ. ಇಂದು ಮತ್ತು ನಾಳೆ ಖಾಸಗಿ ವಾಹನಗಳಿಗೆ ಪ್ರವೇಶ ಇರುವುದಿಲ್ಲ. ಸ್ಥಳೀಯ ಆಡಳಿತ ಮತ್ತು ವೈದ್ಯಕೀಯ ತುರ್ತು ಸೇವೆಗಳ ವಾಹನಗಳಿಗೆ ಮಾತ್ರ ಪ್ರವೇಶವಿರುವುದು ಎಂದು ಸ್ಥಳೀಯ ಆಡಳಿತ ತಿಳಿಸಿದೆ. ಇದನ್ನೂ ಓದಿ: Exclusive| ಬೆಳಗಾವಿ ಕಂಡಕ್ಟರ್ ಮೇಲೆ ದಾಖಲಿಸಿದ್ದ ಪೋಕ್ಸೋ ಕೇಸ್ ಹಿಂಪಡೆದ ದೂರುದಾರೆ
ಈವರೆಗೂ 63 ಕೋಟಿ ಜನರು ತ್ರಿವೇಣಿ ಸಂಗಮದಲ್ಲಿ ಅಮೃತಸ್ನಾನ ಮಾಡಿದ್ದು, ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ವಿಶ್ವದಾದ್ಯಂತ ಕೋಟ್ಯಂತರ ಭಕ್ತರು ಭೇಟಿ ನೀಡಿದ್ದಾರೆ. ವಿಶ್ವವಿಖ್ಯಾತ ಮಹಾ ಕುಂಭಮೇಳ ಫೆ.26 ರಂದು ಅಂತ್ಯಗೊಳ್ಳಲಿದೆ. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್ – ಇಂದು ಕೋರ್ಟ್‌ಗೆ ಹಾಜರಾಗಲಿರುವ ದರ್ಶನ್ & ಗ್ಯಾಂಗ್
ಬೀದರ್: ಉತ್ತರ ಪ್ರದೇಶದಲ್ಲಿ (Uttar Pradesh) ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಬೀದರ್‌ನ (Bidar) 6 ಮಂದಿಯ ಪಾರ್ಥೀವ ಶರೀರ ಇಂದು ತವರಿಗೆ ಮರಳಲಿದೆ. 6 ಮಂದಿಯ ಮೃತದೇಹಗಳು 3 ಅಂಬುಲೆನ್ಸ್‌ಗಳ ಮೂಲಕ ಕೆಲವೇ ಗಂಟೆಗಳಲ್ಲಿ ಬೀದರ್ ತಲುಪಲಿದೆ.
ಹಾಸನ: ಕುಂಭಮೇಳಕ್ಕೆ(Maha Kumbh Mela) ತೆರಳುತ್ತಿದ್ದಾಗ ಅಪಘಾತದಲ್ಲಿ ಹಾಸನ(Hassan) ಮೂಲದ ಯುವಕ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿ(Varanasi) ಬಳಿ ನಡೆದಿದೆ.
ಲಕ್ನೋ: ಮಗಳು ಬಿಡಿಸಿದ ಚಿತ್ರದಿಂದ (Drawing) ತಾಯಿಯ ಕೊಲೆ (Murder) ರಹಸ್ಯ ಬಯಲಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ (Uttar Pradesh) ನಡೆದಿದೆ. ಅಪ್ಪನೇ ಅಮ್ಮನನ್ನು ಕೊಲೆ ಮಾಡಿದ್ದು ಎಂದು ಪೊಲೀಸರ ಮುಂದೆ 4 ವರ್ಷದ ಮಗಳು (daughter) ಪೊಲೀಸರ ಮುಂದೆ ಸಾಕ್ಷಿ ಹೇಳಿದ್ದಾಳೆ.
27 ವರ್ಷದ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಘಟನೆ ಉತ್ತರ ಪ್ರದೇಶದ ಶಿವ ಪರಿವಾರ್ ಕಾಲೋನಿಯ ಝಾನ್ಸಿ ಬಳಿಯ ಕೊಟ್ವಾಲಿ ಪ್ರದೇಶದಲ್ಲಿ ನಡೆದಿತ್ತು. ಮಹಿಳೆಯ 4 ವರ್ಷದ ಮಗಳು ಚಿತ್ರ ಬಿಡಿಸಿ ಆಕೆಯ ತಂದೆಯೆ ಕೊಲೆ ಮಾಡಿದ್ದಾನೆ ಎಂದು ಆರೋಪಿಸುವ ಮೂಲಕ ಕೊಲೆ ಪ್ರಕರಣಕ್ಕೆ ಮಹತ್ವದ ಸಾಕ್ಷಿ ನೀಡಿದ್ದಾಳೆ. ಇದನ್ನೂ ಓದಿ : ಎಲಾನ್ ಮಸ್ಕ್-ಮೋದಿ ಭೇಟಿ ಬೆನ್ನಲ್ಲೇ ಟೆಸ್ಲಾದಿಂದ ಭಾರತದಲ್ಲಿ ನೇಮಕಾತಿ ಶುರು
2019ರಲ್ಲಿ ಝಾನ್ಸಿ ನಿವಾಸಿಯಾದ ಸಂದೀಪ್ ಬುದೋಲಿನನ್ನು ಮೃತ ಮಹಿಳೆ ವಿವಾಹವಾಗಿದ್ದರು. ಮದುವೆಯ ಸಂದರ್ಭದಲ್ಲಿ 20 ಲಕ್ಷ ರೂ. ಹಣ ಹಾಗೂ ಇನ್ನಿತರ ಉಡುಗೊರೆಗಳನ್ನು ವರದಕ್ಷಿಣೆ ರೂಪದಲ್ಲಿ ಸಂದೀಪ್‌ಗೆ ನೀಡಲಾಗಿತ್ತು. ಸಂದೀಪ್ ಹಾಗೂ ಆತನ ಕುಟುಂಬಸ್ಥರು ವರದಕ್ಷಿಣೆ ರೂಪದಲ್ಲಿ ಕಾರು ನೀಡುವಂತೆ ಒತ್ತಾಯಿಸುತ್ತಿದ್ದರು ಎಂದು ಮೃತ ಮಹಿಳೆಯ ತಂದೆ ಸಂಜಯ್ ತ್ರಿಪಾಠಿ ದೂರಿದ್ದಾರೆ. ಇದನ್ನೂ ಓದಿ : ಮಹಿಳಾ ಕೂಲಿ ಕಾರ್ಮಿಕರಿಗೆ ವಿಮಾನ ಪ್ರಯಾಣ ಮಾಡಿಸಿದ ರೈತ
ಅವರ ಬೇಡಿಕೆಯನ್ನು ಪೂರೈಸದಿದ್ದಾಗ ಆಕೆಗೆ ದೈಹಿಕ ಹಾಗೂ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದರು. ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದ್ದೆ. ಆ ಸಂದರ್ಭದಲ್ಲಿ ರಾಜಿ ಸಂದಾಯದ ಮೂಲಕ ಇತ್ಯರ್ಥವಾಗಿತ್ತು. ನಂತರ ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದಳು. ಗಂಡು ಮಗುವಿಗೆ ಜನ್ಮ ನೀಡಿಲ್ಲ ಎಂದು ಸಂದೀಪ್ ಕುಟುಂಬಸ್ಥರು ಆಕೆಗೆ ಹಿಂಸೆ ನೀಡಲು ಪ್ರಾರಂಭಿಸಿದ್ದರು. ಹೆರಿಗೆಯ ಸಂದರ್ಭದಲ್ಲೂ ಸಂದೀಪ್ ಹಾಗೂ ಆತನ ಕುಟುಂಬಸ್ಥರು ಆಕೆಯನ್ನು ಆಸ್ಪತ್ರೆಯಲ್ಲೇ ಬಿಟ್ಟು ತೆರಳಿದ್ದರು. ಬಳಿಕ ನಾನು ಆಸ್ಪತ್ರೆಯ ಬಿಲ್ ಪಾವತಿಸಿ ಮಗು ಹಾಗೂ ಆಕೆಯನ್ನು ಮನೆಗೆ ಕರೆದುಕೊಂಡು ಹೋದೆ ಎಂದು ಸಂಜಯ್ ಹೇಳಿದ್ದಾರೆ. ಇದಾದ ಬಳಿಕ ಮಹಿಳೆಯ ಕೊಲೆಯಾಗಿದೆ. ಇದನ್ನೂ ಓದಿ : ಡಬಲ್ ಟ್ಯಾಕ್ಸ್ ಕಟ್ಟಿ ಬಿ-ಖಾತಾ ಪಡೆಯಿರಿ: ಸಿಎಂ ಸಭೆಯಲ್ಲಿ ಮಹತ್ವದ ನಿರ್ಧಾರ
ಅಪ್ಪ, ಅಮ್ಮನಿಗೆ ಹೊಡೆದು ನಂತರ ನೇಣಿಗೆ ಹಾಕಿದ್ದಾರೆ. ಅಮ್ಮನ ತಲೆಗೆ ಕಲ್ಲಿನಿಂದ ಹೊಡೆದು ಚೀಲದಲ್ಲಿ ಹಾಕಿ ಎಸೆದಿದ್ದಾನೆ. ಅಪ್ಪ ಅಮ್ಮನಿಗೆ ಹೊಡೆಯುತ್ತಿದ್ದರು. ಅಮ್ಮನಿಗೆ ಹೊಡೆದರೆ ನಿಮ್ಮ ಕೈ ಮುರಿಯುತ್ತೇನೆ ಎಂದಿದ್ದೆ. ಅಮ್ಮನಿಗೆ ಹೊಡೆದು ಆಕೆಯನ್ನು ಕೊಂದಿದ್ದಾರೆ. ನನಗೂ ಸಹ ಹೊಡೆಯುತ್ತಿದ್ದರು ಎಂದು ಮಗು ಪೊಲೀಸರ ಬಳಿ ಹೇಳಿದ್ದಾಳೆ. ಇದನ್ನೂ ಓದಿ : ಅಧಿಕಾರ ಹಂಚಿಕೆ – ಹೈಕಮಾಂಡ್ ತೀರ್ಮಾನಕ್ಕೆ ಎಲ್ಲರೂ ಬದ್ಧವಾಗಿ ಇರಬೇಕು: ಸಿದ್ದರಾಮಯ್ಯ
ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದು, ಮಹಿಳೆಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪತಿ ಸಂದೀಪ್‌ನನ್ನು ಬಂಧಿಸಿದ್ದು, ಇನ್ನುಳಿದ ಆರೋಪಿಗಳಿಗಾಗಿ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ. ಇದನ್ನೂ ಓದಿ : ಮಹಾಕುಂಭದಲ್ಲಿ ಸಚಿವ ಪ್ರಹ್ಲಾದ್ ಜೋಶಿ ಕುಟುಂಬ ಪುಣ್ಯಸ್ನಾನ