Tag: uttar pradesh

  • ಹರಿದ್ವಾರದಿಂದ ಮುಸ್ಲಿಂರನ್ನು ಬಹಿಷ್ಕರಿಸಿ: ಸಾಧ್ವಿ ಪ್ರಾಚಿ

    ಹರಿದ್ವಾರದಿಂದ ಮುಸ್ಲಿಂರನ್ನು ಬಹಿಷ್ಕರಿಸಿ: ಸಾಧ್ವಿ ಪ್ರಾಚಿ

    ಲಕ್ನೋ: ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುವ ವಿಶ್ವ ಹಿಂದೂ ಪರಿಷತ್ ನಾಯಕಿ ಸಾಧ್ವಿ ಪ್ರಾಚಿ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಹರಿದ್ವಾರದಲ್ಲಿರುವ ಮುಸ್ಲಿಂರನ್ನು ಬಹಿಷ್ಕರಿಸಿ ಎಂದು ಸಾಧ್ವಿ ಪ್ರಾಚಿ ಹೇಳಿದ್ದು, ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದಾರೆ.

    ಕೈರನಾ ಶಾಸಕ ನಾಹಿದ್ ಹಸನ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಾಧ್ವಿ ಪ್ರಾಚಿ, ಶಾಸಕರು ಮುಸ್ಲಿಂರಿಗೆ ಹಿಂದೂಗಳ ಅಂಗಡಿಯಿಂದ ವಸ್ತುಗಳನ್ನು ಖರೀದಿಸದಂತೆ ಹೇಳುತ್ತಾರೆ. ನಾನು ಹರಿದ್ವಾರದ ಎಲ್ಲ ಹಿಂದೂಗಳಲ್ಲಿ ಮುಸ್ಲಿಂರು ತಯಾರಿಸುವ ಕಾಂವಡಾ(ಪೂಜಾ ಸಾಮಾಗ್ರಿ) ಖರೀದಿಸಬಾರದು ಎಂದು ಮನವಿ ಮಾಡಿಕೊಳ್ಳುತ್ತೇನೆ ಎಂದು ಸಾರ್ವಜನಿಕ ಸಮಾರಂಭದಲ್ಲಿ ಹೇಳಿದ್ದಾರೆ.

    ಹರಿದ್ವಾರದಲ್ಲಿರುವ ಶೇ.99ರಷ್ಟು ಮುಸ್ಲಿಂರು ಹಿಂದೂಗಳ ಪೂಜೆಗೆ ಬೇಕಾಗುವ ಕಾಂವಡಾ ತಯಾರಿಸುತ್ತಾರೆ. ಮುಸ್ಲಿಂರನ್ನು ಹರಿದ್ವಾರದ ಕಳುಹಿಸಲು ಅವರು ತಯಾರಿಸುವ ವಸ್ತುಗಳನ್ನು ಖರೀದಿಸಬೇಡಿ. ಹರಿದ್ವಾರದಲ್ಲಿರುವ ಹಿಂದೂಗಳಿಗೂ ದಿನಗೂಲಿ ಸಿಗಬೇಕೆಂದ್ರೆ ಮುಸ್ಲಿಂರನ್ನು ಬಹಿಷ್ಕರಿಸಿ ಎಂದು ಒತ್ತಾಯಿಸಿದ್ದಾರೆ.

    ಎಲ್ಲಿ ಮುಸ್ಲಿಂರ ಸಂಖ್ಯೆ ಹೆಚ್ಚಾಗಿರುತ್ತೋ ಅಲ್ಲಿ ವಿವಾದ ಹುಟ್ಟಿಕೊಳ್ಳುತ್ತದೆ. ಈ ಮೊದಲು ಕೈರನಾದಿಂದ ಹಿಂದೂಗಳ ಮನೆಯನ್ನು ಖಾಲಿ ಮಾಡಿಸಲಾಯ್ತು. ಇದೀಗ ಹಿಂದೂಗಳ ಅಂಗಡಿಗಳಿಂದ ವಸ್ತುಗಳನ್ನು ಖರೀದಿಸಬಾರದು ಶಾಸಕ ಹಸನ್ ಹೇಳುತ್ತಾರೆ. ನೀವು ಮುಸ್ಲಿಂರು ತಯಾರಿಸುವ ಕಾಂವಡಾ ಖರೀದಿಸಬೇಡಿ. ನಾವುಗಳು ಹಿಂದೂ, ಹಿಂದೂಸ್ಥಾನ್ ನಮ್ಮದು. ಮಾನವೀಯತೆ ದೃಷ್ಟಿಯಿಂದ ಭಾರತದಲ್ಲಿ ಮುಸ್ಲಿಂರು ವಾಸಿಸುತ್ತಿದ್ದಾರೆ. ಇಲ್ಲಿ ಕಳ್ಳತನ, ಸುಲಿಗೆ ಮಾಡಿದ್ರೆ ಸುಮ್ಮನೆ ಕುಳಿತುಕೊಳ್ಳಲು ನಾವು ಮಹಾತ್ಮ ಗಾಂಧೀಜಿ ಅಲ್ಲ. ಮುಸ್ಲಿಂರೇ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಜೈ ಶ್ರೀರಾಮ ಹೇಳದಿದ್ದರೆ ಚೆನ್ನಾಗಿರಲ್ಲ ಎಂದು ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಶಾಸಕ ನಾಹಿದ್ ಹಸನ್ ಹೇಳಿದ್ದೇನು?
    ಕೈರನಾ ಮತ್ತು ಸುತ್ತಮುತ್ತಲಿನ ಗ್ರಾಮದ ನೀವು ಇಲ್ಲಿಯ ಬಿಜೆಪಿ ಬೆಂಬಲಿತರ ಅಂಗಡಿಯಲ್ಲಿ ಯಾವ ವಸ್ತುವನ್ನು ಖರೀದಿಸಬೇಡಿ ಎಂದು ನಾಹಿದ್ ಹಸನ್ ವಿವಾವಾದತ್ಮಕ ಹೇಳಿಕೆ ನೀಡಿದ್ದರು. ಹತ್ತು ಅಥವಾ ಒಂದು ತಿಂಗಳು ಕಷ್ಟವಾದರೂ ಪರವಾಗಿಲ್ಲ ಪಾಣಿಪತ್ ಗೆ ತೆರಳಿ ವಸ್ತುಗಳನ್ನು ಖರೀದಿಸಿ. ಮುಂದಿನ ಒಳ್ಳೆಯ ದಿನಕ್ಕಾಗಿ ಸ್ವಲ್ಪ ಕಷ್ಟ ಅನುಭವಿಸಬೇಕಿದೆ ಎಂದು ಶಾಸಕ ಹಸನ್ ತಮ್ಮ ಕ್ಷೇತ್ರದ ಮುಸ್ಲಿಂ ಜನತೆಯಲ್ಲಿ ಕೈ ಮುಗಿದು ನಿಮ್ಮಲ್ಲಿ ಮನವಿ ಮಾಡಿಕೊಂಡಿದ್ದರು.

  • ನಾನು ಅವನಲ್ಲ, ಅವಳು – ರೈಲ್ವೇ ಅಧಿಕಾರಿಗಳಲ್ಲಿ ಭಿನ್ನ ಮನವಿ

    ನಾನು ಅವನಲ್ಲ, ಅವಳು – ರೈಲ್ವೇ ಅಧಿಕಾರಿಗಳಲ್ಲಿ ಭಿನ್ನ ಮನವಿ

    ಲಕ್ನೋ: ತನ್ನ ದಾಖಲೆಗಳಲ್ಲಿ ಲಿಂಗ ಬದಲಾವಣೆ ಮಾಡುವಂತೆ ರೈಲ್ವೇ ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿರುವ ಪ್ರಸಂಗವೊಂದು ಉತ್ತರ ಪ್ರದೇಶದಲ್ಲಿ ನಡೆದಿದೆ.

    35 ವರ್ಷದ ರಾಜೇಶ್ ಪಾಂಡೆ ಎಂಬಾತ ಈ ಮನವಿ ಸಲ್ಲಿಸಿದ್ದಾರೆ. ರೈಲ್ವೇ ಉದ್ಯೋಗಿಯಾಗಿದ್ದ ರಾಜೇಶ್ ತಂದೆ 2003ರಲ್ಲಿ ಸಾವನ್ನಪ್ಪಿದ ಪರಿಣಾಮ ಅನುಕಂಪ ಆಧಾರದಲ್ಲಿ ಈತನಿಗೆ ರೈಲ್ವೇ ಉದ್ಯೋಗ ನೀಡಲಾಗಿತ್ತು.

    ರಾಜೇಶ್ ಪಾಂಡೆಗೆ ನಾಲ್ವರು ಸಹೋದರಿಯರು ಇದ್ದು ಇಡೀ ಕುಟುಂಬಕ್ಕೆ ರಾಜೇಶ್ ಒಬ್ಬರೇ ಗಂಡು ಮಗನಾಗಿದ್ದರು. ಆದರೆ ಚಿಕ್ಕದಿನಿಂದಲೂ ಹೆಣ್ಣಿನಂತೆ ಇರಲು ಬಯಸಿದ್ದ ರಾಜೇಶ್, 2017 ರಲ್ಲಿ ಲಿಂಗ ಪರಿವರ್ತನೆಗೆ ಒಳಗಾಗಿ ಸಾನಿಯಾ ಪಾಂಡೆ ಎಂದು ಹೆಸರು ಬದಲಿಸಿಕೊಂಡಿದ್ದರು. ಆದರೆ ರೈಲ್ವೇ ದಾಖಲೆಗಳಲ್ಲಿ ಮಾತ್ರ ಪುರುಷನಾಗಿಯೇ ಇತ್ತು. ಸದ್ಯ ಈಶಾನ್ಯ ರೈಲ್ವೇ ಅಧಿಕಾರಿಗಳಿಗೆ ತನ್ನ ದಾಖಲೆಗಳಲ್ಲಿ ತನ್ನ ಲಿಂಗ ಬದಲಾವಣೆ ಮಾಡುವಂತೆ ರಾಜೇಶ್ ಅಲಿಯಾಸ್ ಸಾನಿಯಾ ಪಾಂಡೆ ಮನವಿ ಮಾಡಿದ್ದಾರೆ.

    ಇತ್ತ ರಾಜೇಶ್ ಲಿಂಗ ಪರಿವರ್ತನೆ ಮಾಡಿಕೊಳ್ಳುವ ಮುನ್ನವೇ ಮದುವೆ ಕೂಡ ಆಗಿದ್ದು, ವಿಷಯ ತಿಳಿದ ಪತ್ನಿ ವಿಚ್ಛೇದನವನ್ನು ನೀಡಿದ್ದಾರೆ. ಇತ್ತ ಲಿಂಗ ಪರಿರ್ತನೆ ಆದ ಬಳಿಕ ತಾನು ಮಹಿಳೆಯಾಗಿ ಸಂತೋಷದಿಂದಲೇ ಜೀವನ ನಡೆಸುತ್ತಿದ್ದಾಗಿ ರಾಜೇಶ್ ಅಭಿಪ್ರಾಯ ಪಟ್ಟಿದ್ದಾರೆ.

  • ಬಿಜೆಪಿ ಬೆಂಬಲಿತರ ಅಂಗಡಿಯಲ್ಲಿ ಖರೀದಿ ಬೇಡ: ಮುಸ್ಲಿಂರಲ್ಲಿ ಶಾಸಕ ಮನವಿ

    ಬಿಜೆಪಿ ಬೆಂಬಲಿತರ ಅಂಗಡಿಯಲ್ಲಿ ಖರೀದಿ ಬೇಡ: ಮುಸ್ಲಿಂರಲ್ಲಿ ಶಾಸಕ ಮನವಿ

    ಲಕ್ನೋ: ಬಿಜೆಪಿ ಬೆಂಬಲಿತರ ಅಂಗಡಿಯಲ್ಲಿ ಯಾವ ವಸ್ತುವನ್ನು ಖರೀದಿಸಬೇಡಿ ಎಂದು ಕೈರನಾ ಕ್ಷೇತ್ರದ ಸಮಾಜವಾದಿ ಪಕ್ಷದ ಶಾಸಕ ನಾಹಿದ್ ಹಸನ್ ಮುಸ್ಲಿಂರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಶಾಸಕರು ಮನವಿ ಮಾಡಿಕೊಂಡಿರುವ ವಿಡಿಯೋ ವೈರಲ್ ಆಗಿದೆ.

    ತಮ್ಮ ಕ್ಷೇತ್ರದ ಅತಿ ಹೆಚ್ಚು ಮುಸ್ಲಿಂ ಸಮುದಾಯದ ಜನರು ವಾಸವಾಗಿರುವ ಸ್ಥಳದಲ್ಲಿ ಶಾಸಕರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬಿಜೆಪಿ ಬೆಂಬಲಿತರ ಅಂಗಡಿಗಳಲ್ಲಿ ನಾವು ಖರೀದಿ ಮಾಡುವುದರಿಂದ ಅವರ ಜೀವನ ನಡೆಯುತ್ತದೆ ಎಂಬುದನ್ನು ನೀವು ಅರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ.

    ಕೈರನಾ ಮತ್ತು ಸುತ್ತಮುತ್ತಲಿನ ಗ್ರಾಮದ ನೀವು ಇಲ್ಲಿಯ ಬಿಜೆಪಿ ಬೆಂಬಲಿತರ ಅಂಗಡಿಯಲ್ಲಿ ಯಾವ ವಸ್ತುವನ್ನು ಖರೀದಿಸಬೇಡಿ ಎಂದು ಕೈ ಮುಗಿದು ನಿಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ಹತ್ತು ಅಥವಾ ಒಂದು ತಿಂಗಳು ಕಷ್ಟವಾದರೂ ಪರವಾಗಿಲ್ಲ ಪಾಣಿಪತ್ ಗೆ ತೆರಳಿ ವಸ್ತುಗಳನ್ನು ಖರೀದಿಸಿ. ಮುಂದಿನ ಒಳ್ಳೆಯ ದಿನಕ್ಕಾಗಿ ಸ್ವಲ್ಪ ಕಷ್ಟ ಅನುಭವಿಸಬೇಕಿದೆ ಎಂದು ಶಾಸಕ ಹಸನ್ ಹೇಳಿದ್ದಾರೆ.

    ಬೇರೆ ಕಡೆಯಿಂದ ನಿಮಗೆ ಬೇಕಾದ ವಸ್ತುಗಳನ್ನು ಖರೀದಿಸುವದರಿಂದ ಬಿಜೆಪಿ ಅವರ ಆರೋಗ್ಯವೂ ಸುಧಾರಣೆ ಆಗಲಿದೆ. ನಾವು ಅವರ ಅಂಗಡಿಯಲ್ಲಿ ವಸ್ತುಗಳನ್ನು ಖರೀದಿ ಮಾಡುವದರಿಂದಲೇ ಬಿಜೆಪಿ ಬೆಂಬಲಿತರ ಮನೆ ನಡೆಯುತ್ತದೆ ಎಂಬುವುದು ಅರ್ಥವಾಗುತ್ತದೆ. ಇವರ ಮನೆಯ ನಡೆಯಲು ಕಾರಣವಾದ ನಮ್ಮ ಮೇಲೆಯೇ ಶೂ ಎಸೆಯಲು ಮುಂದಾಗುತ್ತಿದ್ದಾರೆ ಎಂದು ಆರೋಪಿಸಿದರು.

  • ಸಂತ್ರಸ್ತರನ್ನು ತಬ್ಬಿಕೊಂಡು ಸಾಂತ್ವನ ಹೇಳಿದ ಪ್ರಿಯಾಂಕ ಗಾಂಧಿ: ವಿಡಿಯೋ

    ಸಂತ್ರಸ್ತರನ್ನು ತಬ್ಬಿಕೊಂಡು ಸಾಂತ್ವನ ಹೇಳಿದ ಪ್ರಿಯಾಂಕ ಗಾಂಧಿ: ವಿಡಿಯೋ

    – ಕಾಂಗ್ರೆಸ್‍ನಿಂದ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ

    ಲಕ್ನೋ: ಜಮೀನು ವಿವಾದದ ಗಲಾಟೆಯಲ್ಲಿ ಸಾವನ್ನಪ್ಪಿದ 10 ಜನರ ಕುಟುಂಬದ ಸದಸ್ಯರಿಗೆ ಉತ್ತರ ಪ್ರದೇಶದ ಪೂರ್ವ ಕಾಂಗ್ರೆಸ್ ಉಸ್ತುವಾರಿ ಪ್ರಿಯಾಂಕ ಗಾಂಧಿ ಸಾಂತ್ವನ ಹೇಳಿದ್ದಾರೆ.

    ಉತ್ತರ ಪ್ರದೇಶದ ಸೋನ್‍ಭದ್ರಾ ಎಂಬಲ್ಲಿ ಜಮೀನು ವಿದಾದ ಗಲಾಟೆಯಲ್ಲಿ ಗ್ರಾಮದ ಮುಖ್ಯಸ್ಥನಾಗಿದ್ದ ಯಾಗ್ಯ ದತ್ ಬೆಂಬಲಿಗರು ಆದಿವಾಸಿ ಕುಟುಂಬಗಳ ಮೇಲೆ ಗುಂಡು ಹಾರಿಸಿದ್ದರು. ಗುಂಡೇಟಿಗೆ 10 ಜನರು ಮೃತಪಟ್ಟಿದ್ದು, 19 ಜನರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನಾ ಪ್ರದೇಶದ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದ್ದು, ಸಂತ್ರಸ್ತರನ್ನು ಭೇಟಿಯಾಗಲು ಶುಕ್ರವಾರ ಬಂದಿದ್ದ ಪ್ರಿಯಾಂಕ ಗಾಂಧಿ ಅವರನ್ನು ಪೊಲೀಸರು ತಡೆದು ವಶಕ್ಕೆ ಪಡೆದಿದ್ದರು.

    ಮೃತ ಕುಟುಂಬದ 15 ಜನ ಸದಸ್ಯರು ಪ್ರಿಯಾಂಕ ಗಾಂಧಿ ಅವರನ್ನು ಭೇಟಿ ಮಾಡಲು ಬಂದಿದ್ದರು. ಆದರೆ ಪೊಲೀಸರು ಅವರನ್ನು ತಡೆದಿದ್ದರು. ಹೀಗಾಗಿ ಪ್ರಿಯಾಂಕ ಗಾಂಧಿ ಅವರು ಸಂತ್ರಸ್ತರನ್ನು ಭೇಟಿಯಾಗಬೇಕು ಎಂದು ಪಟ್ಟು ಹಿಡಿದು, ಶನಿವಾರವೂ ಧರಣಿ ನಡೆಸಿದರು. ಇದಕ್ಕೆ ಮಣಿದ ಪೊಲೀಸರು ಭೇಟಿಗೆ ಅವಕಾಶ ಮಾಡಿಕೊಟ್ಟರು.

    ಸಂತ್ರಸ್ತರನ್ನು ಭೇಟಿಯಾಗದೇ ಹಿಂತಿರುಗುವ ಮಾತೇ ಇಲ್ಲ. ಅಧಿಕಾರಿಗಳು ಇದಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರು. ಸ್ವಲ್ಪ ಸಮಯದ ನಂತರ ಧರಣಿ ಸ್ಥಳಕ್ಕೆ ಸಂತ್ರಸ್ತ ಪುರುಷರು ಹಾಗೂ ಮಹಿಳೆಯರು ಆಗಮಿಸಿದರು. ಪಕ್ಕದಲ್ಲಿ ಕುಳಿತು ಕಣ್ಣೀರು ಹಾಕುತ್ತಿದ್ದ ಮಹಿಳೆಯರನ್ನು ಪ್ರಿಯಾಂಕ ಗಾಂಧಿ ಅವರು ಅಪ್ಪಿಕೊಂಡು ಸಾಂತ್ವನ ಹೇಳಿದ್ದಾರೆ.

    ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಾನಿನ್ನೂ ಬಂಧನದಲ್ಲಿ ಇದ್ದೇನೆಯೇ? ಆಡಳಿತ ಏನು ಹೇಳುತ್ತದೆ ಎಂದು ರಾಜ್ಯ ಸರ್ಕಾರವನ್ನು ಕುಟುಕಿದರು. ಇದೇ ವೇಳೆ ಕಾಂಗ್ರೆಸ್ ಪಕ್ಷದಿಂದ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ ಎಂದು ಭರವಸೆ ನೀಡಿದರು.

    ಏನಿದು ಪ್ರಕರಣ?:
    ಯಾಗ್ಯ ದತ್ ಉಭಾ ಗ್ರಾಮದ ಸಮೀಪದ ಘೋರ್‍ವಾಲ್‍ನಲ್ಲಿ ಎರಡು ವರ್ಷಗಳ ಹಿಂದೆ 36 ಎಕರೆ ಕೃಷಿ ಭೂಮಿಯನ್ನು ಖರೀದಿಸಿದ್ದ. ಆದರೆ ಯಾಗ್ಯ ದತ್ ತನ್ನ ಸಹವರ್ತಿಗಳ ಜೊತೆಗೆ ಬುಧವಾರ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಹೋಗಿದ್ದ. ಇದಕ್ಕೆ ಗ್ರಾಮಸ್ಥರು ಭಾರೀ ವಿರೋಧಿಸಿದ್ದರು. ಇದರಿಂದಾಗಿ ಗಲಾಟೆ ಆರಂಭವಾಗುತ್ತಿದ್ದಂತೆ ಯಾಗ್ಯ ದತ್ ಕಡೆಯ ವ್ಯಕ್ತಿಯೊಬ್ಬ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾನೆ. ಗುಂಡು ತಗುಲಿ 10 ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, 19 ಜನರ ಸ್ಥಿತಿ ಗಂಭೀರವಾಗಿದೆ.

    ಈ ಕೃತ್ಯದ ಕುರಿತು ವ್ಯಾಪಕ ಟೀಕೆ ವ್ಯಕ್ತವಾಗಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕೂಡ ಘಟನೆಯನ್ನು ಖಂಡಿಸಿದ್ದು, ಮೃತರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದಾರೆ. ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ 19 ಜನರಿಗೆ ಅಗತ್ಯ ವೈದ್ಯಕೀಯ ನೆರವು ನೀಡುವಂತೆ ಜಿಲ್ಲಾಡಳಿತಕ್ಕೆ ಆದೇಶ ಹೊರಡಿಸಿದ್ದಾರೆ.

  • ಸಂತ್ರಸ್ತರ ಭೇಟಿಗೆ ತೆರಳಿದ ಪ್ರಿಯಾಂಕಗೆ ಪೊಲೀಸ್ ತಡೆ, ರಾಹುಲ್ ಗಾಂಧಿ ಖಂಡನೆ

    ಸಂತ್ರಸ್ತರ ಭೇಟಿಗೆ ತೆರಳಿದ ಪ್ರಿಯಾಂಕಗೆ ಪೊಲೀಸ್ ತಡೆ, ರಾಹುಲ್ ಗಾಂಧಿ ಖಂಡನೆ

    ಲಕ್ನೋ: ಜಮೀನು ವಿವಾದದ ಗಲಾಟೆಯಲ್ಲಿ ಸಾವನ್ನಪ್ಪಿದ ಕುಟುಂಬದರನ್ನು ಭೇಟಿಯಾಗಲು ತೆರಳುತ್ತಿದ್ದ ಕಾಂಗ್ರೆಸ್‍ನ ಮುಖಂಡೆ ಪ್ರಿಯಾಂಕ ಗಾಂಧಿಯವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಸ್ವಲ್ಪ ಸಮಯದ ಬಳಿಕ ಬಿಡುಗಡೆ ಮಾಡಿದ್ದಾರೆ.

    ಉತ್ತರ ಪ್ರದೇಶದ ಸೋನ್‍ಭದ್ರಾ ಎಂಬಲ್ಲಿ ಜಮೀನು ವಿದಾದ ಗಲಾಟೆಯಲ್ಲಿ ಗ್ರಾಮದ ಮುಖ್ಯಸ್ಥನಾಗಿದ್ದ ಯಾಗ್ಯ ದತ್ ಬೆಂಬಲಿಗರು ಆದಿವಾಸಿ ಕುಟುಂಬಗಳ ಮೇಲೆ ಗುಂಡು ಹಾರಿಸಿದ್ದರು. ಗುಂಡೇಟಿಗೆ 10 ಜನರು ಮೃತಪಟ್ಟಿದ್ದು, 19 ಜನರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನಾ ಪ್ರದೇಶದ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ ಮಾಡಿದ್ದರು. ಇದೀಗ ಸಂತ್ರಸ್ತರನ್ನು ಭೇಟಿ ಮಾಡಲು ಪ್ರಿಯಾಂಕ ಗಾಂಧಿ ತೆರಳಿದ್ದು, ಪೊಲೀಸರು ತಡೆಯೋಡ್ಡಿದ್ದಾರೆ.

    ಪ್ರಿಯಾಂಕ ಗಾಂಧಿ ಅವರು ಇಂದು ಆದಿವಾಸಿ ಕುಟುಂಬದನ್ನು ಭೇಟಿ ಮಾಡಲು ಹೋಗಿದ್ದರು. ಗುಂಡಿನ ದಾಳಿ ಖಂಡಿಸಿ ಶಾಂತಿಯುತ ಪ್ರತಿಭಟನೆಗೆ ಮುಂದಾದಾಗ, ಪ್ರಿಯಾಂಕ ಅವರನ್ನು ನಾರಾಯಣಪುರ ಪೊಲೀಸರು ವಶಕ್ಕೆ ಪಡೆದು, ಸ್ವಲ್ಪ ಸಮಯದ ಬಳಿಕ ಬಿಟ್ಟು ಕಳುಹಿಸಿದ್ದಾರೆ.

    ಈ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಿಯಾಂಕ ಗಾಂಧಿ ಅವರು, ಸೋನ್‍ಭದ್ರಾದ ಆದಿವಾಸಿ ಸಂತ್ರಸ್ತರ ಭೇಟಿ ಮಾಡಬೇಕಿತ್ತು. ಹೀಗಾಗಿ ನಾಲ್ಕು ಜನರ ತಂಡದೊಂದಿಗೆ ಇಲ್ಲಿಗೆ ಬಂದಿದ್ದೆವು. ಆದರೆ ಪೊಲೀಸರು ಅಲ್ಲಿಗೆ ಹೋಗಲು ಅವಕಾಶ ನೀಡದೆ, ನಮ್ಮನ್ನು ವಶಕ್ಕೆ ಪಡೆದಿದ್ದಾರೆ. ಶಾಂತಯುತವಾಗಿ ಪ್ರತಿಭಟನೆ ಮಾಡಲು ನಿರ್ಧರಿಸಿದ್ದೇವೆ. ಇದಕ್ಕೆ ಅವಕಾಶ ನೀಡದೆ ವಶಕ್ಕೆ ಪಡೆದಿದ್ದಾರೆ ಎಂದು ಹೇಳಿದರು.

    ಈ ಘಟನೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಖಂಡಿಸಿದ್ದಾರೆ. ಜೊತೆಗೆ ಸಹೋದರಿ ಪ್ರಿಯಾಂಕ ಗಾಂಧಿ ಅವರೊಂದಿಗೆ ಹೋರಾಟಕ್ಕೆ ನಿಲ್ಲುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

    ಆಗಿದ್ದೇನು?:
    ಯಾಗ್ಯ ದತ್ ಉಭಾ ಗ್ರಾಮದ ಸಮೀಪದ ಘೋರ್‍ವಾಲ್‍ನಲ್ಲಿ ಎರಡು ವರ್ಷಗಳ ಹಿಂದೆ 36 ಎಕರೆ ಕೃಷಿ ಭೂಮಿಯನ್ನು ಖರೀದಿಸಿದ್ದ. ಆದರೆ ಯಾಗ್ಯ ದತ್ ತನ್ನ ಸಹವರ್ತಿಗಳ ಜೊತೆಗೆ ಬುಧವಾರ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಹೋಗಿದ್ದ. ಇದಕ್ಕೆ ಗ್ರಾಮಸ್ಥರು ಭಾರೀ ವಿರೋಧಿಸಿದ್ದರು. ಇದರಿಂದಾಗಿ ಗಲಾಟೆ ಆರಂಭವಾಗುತ್ತಿದ್ದಂತೆ ಯಾಗ್ಯ ದತ್ ಕಡೆಯ ವ್ಯಕ್ತಿಯೊಬ್ಬ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾನೆ. ಗುಂಡು ತಗುಲಿ 10ಸ ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, 19 ಜನರ ಸ್ಥಿತಿ ಗಂಭೀರವಾಗಿದೆ.

    ಈ ಕೃತ್ಯದ ಕುರಿತು ವ್ಯಾಪಕ ಟೀಕೆ ವ್ಯಕ್ತವಾಗಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕೂಡ ಘಟನೆಯನ್ನು ಖಂಡಿಸಿದ್ದು, ಮೃತರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದಾರೆ. ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ 19 ಜನರಿಗೆ ಅಗತ್ಯ ವೈದ್ಯಕೀಯ ನೆರವು ನೀಡುವಂತೆ ಜಿಲ್ಲಾಡಳಿತಕ್ಕೆ ಆದೇಶ ಹೊರಡಿಸಿದ್ದಾರೆ.

  • ಗೆಳತಿಯನ್ನು ಭೇಟಿಯಾಗಲು ರಾತ್ರಿ ಊರಿಗೆ ಬಂದಿದ್ದ ಯುವಕನಿಗೆ ಗ್ರಾಮಸ್ಥರಿಂದ ಗೂಸಾ

    ಗೆಳತಿಯನ್ನು ಭೇಟಿಯಾಗಲು ರಾತ್ರಿ ಊರಿಗೆ ಬಂದಿದ್ದ ಯುವಕನಿಗೆ ಗ್ರಾಮಸ್ಥರಿಂದ ಗೂಸಾ

    – ಮಗನನ್ನು ಕರೆತರಲು ಬಂದಿದ್ದ ಅಪ್ಪನನ್ನೂ ಕಟ್ಟಿ ಹಾಕಿದ ಗ್ರಾಮಸ್ಥರು

    ಲಕ್ನೋ: ಗೆಳತಿಯನ್ನು ಭೇಟಿಯಾಗಲು ಆಕೆಯ ಊರಿಗೆ ಹೋಗಿದ್ದ ಯುವಕನಿಗೆ ಗ್ರಾಮಸ್ಥರು ಗೂಸಾ ಕೊಟ್ಟ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

    ಮೇಜಾ ಗ್ರಾಮದ ಪವಣ್ ಹಲ್ಲೆಗೆ ಒಳಗಾದ ಯುವಕ. ಈ ಘಟನೆಯಲ್ಲಿ ಪವಣ್ ತಂದೆಗೂ ಗ್ರಾಮಸ್ಥರು ಥಳಿಸಿದ್ದಾರೆ. ಹಲ್ಲೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವ್ಯಾಪಕ ಟೀಕೆ ವ್ಯಕ್ತವಾಗಿದೆ.

    ಆಗಿದ್ದೇನು?:
    ಪವಣ್ ತನ್ನ ಸ್ನೇಹಿತ ವಿನಯ್ ಜೊತೆಗೆ ಸೇರಿ ಗೆಳತಿಯನ್ನು ಭೇಟಿಯಾಗಲು ಮೇಜಾ ಸಮೀಪದ ಔತಾ ಗ್ರಾಮಕ್ಕೆ ಜುಲೈ 17ರಂದು ರಾತ್ರಿ ತೆರಳಿದ್ದ. ಯುವತಿಯ ಕುಟುಂಬದವರ ಕೈಗೆ ಸಿಕ್ಕಿಬಿಳ್ಳುತ್ತಿದ್ದಂತೆ ವಿನಯ್ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ. ಪವಣ್‍ಗೆ ಹಿಗ್ಗಾಮುಗ್ಗಾ ಥಳಿಸಿ ಕೂಡಿ ಹಾಕಲಾಗಿತ್ತು. ಈ ವಿಚಾರ ತಿಳಿದು ಬೆಳಗ್ಗೆ ಗ್ರಾಮಕ್ಕೆ ಆಗಮಿಸಿದ ಪವಣ್ ತಂದೆಯನ್ನು ಕೂಡ ಕಟ್ಟಿ ಗ್ರಾಮಸ್ಥರು ಗೂಸಾ ಕೊಟ್ಟಿದ್ದಾರೆ. ಈ ದೃಶ್ಯವನ್ನು ಸ್ಥಳಲ್ಲಿದ್ದ ಕೆಲವರು ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

    ಈ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ. ವಿಷಯ ತಿಳಿದ ತಕ್ಷಣವೇ ಯುಮುನಾಪುರದ ಪೊಲೀಸ್ ವರಿಷ್ಠಾಧಿಕಾರಿ ದೀಪೇಂದ್ರನಾಥ್ ಚೌಧರಿ ಅವರು ಸಂಬಂಧಪಟ್ಟ ಅಧಿಕಾರಿಗಳನ್ನು ಘಟನಾ ಸ್ಥಳಕ್ಕೆ ಕಳುಹಿಸಿ, ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ.

  • ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ತಾಯಿ ಆತ್ಮಹತ್ಯೆ

    ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ತಾಯಿ ಆತ್ಮಹತ್ಯೆ

    ಲಕ್ನೋ: ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಘಜಿಯಾಬಾದ್‍ನ ಮುರಾದ್ ನಗರದಲ್ಲಿ ನಡೆದಿದೆ.

    ಮೃತ ತಾಯಿಯನ್ನು ಮುರಾದ್ ನಗರದ ಪ್ರೀತ್ ವಿಹಾರ್ ಕಾಲೋನಿ ನಿವಾಸಿ 32 ವರ್ಷದ ದೀಪಾ ಎಂದು ಗುರುತಿಸಲಾಗಿದೆ. ದೀಪಾ ಮಕ್ಕಳಾದ 8 ವರ್ಷದ ರೀನಾ ಮತ್ತು 5 ವರ್ಷದ ಗಂಡು ಮಗು ಲಲಿತ್ ಮೇಲೂ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಇದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ತೀವ್ರವಾಗಿ ಗಾಯಗೊಂಡಿದ್ದ ಮೂವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಿದ್ದು, ತಾಯಿ ದೀಪಾ ಮತ್ತು ಮಗಳು ರೀನಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಆದರೆ ಮಗ ಲಲಿತ್ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸ್ ಅಧಿಕಾರಿ ನರೇಶ್ ಕುಮಾರ್ ಜಾಡಾನ್ ತಿಳಿಸಿದ್ದಾರೆ.

    ಈ ಘಟನೆಯ ಬಗ್ಗೆ ಮಾತನಾಡಿರುವ ನರೇಶ್ ಕುಮಾರ್, ಘಟನಾ ಸ್ಥಳದಲ್ಲಿ ಸಂಪೂರ್ಣ ಅವ್ಯವಸ್ಥೆ ಇದೆ. ಈ ಪ್ರಕರಣವು ಕೌಟುಂಬಿಕ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ತೋರುತ್ತದೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.

  • ಜಮೀನಿನ ವಿವಾದಕ್ಕೆ ಗುಂಡಿನ ಮಳೆ- ಮೂವರು ಮಹಿಳೆಯರು ಸೇರಿ 9 ಜನರ ಹತ್ಯೆ

    ಜಮೀನಿನ ವಿವಾದಕ್ಕೆ ಗುಂಡಿನ ಮಳೆ- ಮೂವರು ಮಹಿಳೆಯರು ಸೇರಿ 9 ಜನರ ಹತ್ಯೆ

    ಲಕ್ನೋ: ಜಮೀನು ವಿಚಾರವಾಗಿ ನಡೆದ ಗಲಾಟೆಯಲ್ಲಿ ಮೂವರು ಮಹಿಳೆಯರು ಸೇರಿದಂತೆ ಒಂಬತ್ತು ಜನರನ್ನು ಗುಂಡಿಕ್ಕಿ ಕೊಲೆಗೈದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

    ಶೋನ್‍ಭಂದ್ರಾ ಜಿಲ್ಲೆಯ ಉಭಾ ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮದ ಮುಖ್ಯಸ್ಥನಾಗಿದ್ದ ಯಾಗ್ಯ ದತ್ ಬೆಂಬಲಿಗರು ಗುಂಡು ಹಾರಿಸಿದ್ದಾರೆ. ಗುಂಡೇಟಿಗೆ 19 ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

    ಆಗಿದ್ದೇನು?:
    ಯಾಗ್ಯ ದತ್ ಉಭಾ ಗ್ರಾಮದ ಸಮೀಪದ ಘೋರ್‍ವಾಲ್‍ನಲ್ಲಿ ಎರಡು ವರ್ಷಗಳ ಹಿಂದೆ 36 ಎಕರೆ ಕೃಷಿ ಭೂಮಿಯನ್ನು ಖರೀದಿಸಿದ್ದ. ಆದರೆ ಯಾಗ್ಯ ದತ್ ತನ್ನ ಸಹವರ್ತಿಗಳ ಜೊತೆಗೆ ಬುಧವಾರ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಹೋಗಿದ್ದ. ಇದಕ್ಕೆ ಗ್ರಾಮಸ್ಥರು ಭಾರೀ ವಿರೋಧಿಸಿದ್ದರು. ಇದರಿಂದಾಗಿ ಗಲಾಟೆ ಆರಂಭವಾಗುತ್ತಿದ್ದಂತೆ ಯಾಗ್ಯ ದತ್ ಕಡೆಯ ವ್ಯಕ್ತಿಯೊಬ್ಬ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾನೆ. ಗುಂಡು ತಗುಲಿ 9 ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, 19 ಜನರ ಸ್ಥಿತಿ ಗಂಭೀರವಾಗಿದೆ.

    ಈ ಕೃತ್ಯದ ಕುರಿತು ವ್ಯಾಪಕ ಟೀಕೆ ವ್ಯಕ್ತವಾಗಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕೂಡ ಘಟನೆಯನ್ನು ಖಂಡಿಸಿದ್ದು, ಮೃತರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದಾರೆ. ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ 19 ಜನರಿಗೆ ಅಗತ್ಯ ವೈದ್ಯಕೀಯ ನೆರವು ನೀಡುವಂತೆ ಜಿಲ್ಲಾಡಳಿತಕ್ಕೆ ಆದೇಶ ಹೊರಡಿಸಿದ್ದಾರೆ.

  • ರಸ್ತೆಯಲ್ಲಿ ನಮಾಜ್ ವಿರೋಧಿಸಿ ಒಂದು ಗಂಟೆ ಹನುಮಾನ್ ಚಾಲಿಸಾ ಪಠಣ

    ರಸ್ತೆಯಲ್ಲಿ ನಮಾಜ್ ವಿರೋಧಿಸಿ ಒಂದು ಗಂಟೆ ಹನುಮಾನ್ ಚಾಲಿಸಾ ಪಠಣ

    ಲಕ್ನೋ: ರಸ್ತೆಯಲ್ಲಿ ನಮಾಜ್ ಮಾಡುವುದನ್ನು ವಿರೋಧಿಸಿ ಹಿಂದೂ ಯುವ ವಾಹಿನಿ (ಎಚ್‍ವೈವಿ) ಕಾರ್ಯಕರ್ತರು ರಸ್ತೆಯಲ್ಲಿಯೇ ಹನುಮಾನ್ ಚಾಲಿಸಾ ಪಠಣ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

    ಹತ್ರಾಸ್ ಜಿಲ್ಲೆಯ ಸಿಂಕರಾ ರಾವ್ ಪಟ್ಟಣದಲ್ಲಿರುವ ಹನುಮಾನ್ ದೇವಸ್ಥಾನದ ಬಳಿ ಮಂಗಳವಾರ ಎಚ್‍ವೈವಿಯ ನೂರಾರು ಕಾರ್ಯಕರ್ತರು ಸೇರಿದ್ದರು. ರಸ್ತೆಯಲ್ಲಿಯೇ ನಿಂತು ಒಂದು ಗಂಟೆಗೂ ಹೆಚ್ಚು ಕಾಲ ಹನುಮಾನ್ ಚಾಲಿಸಾ ಪಠಣ ಮಾಡಿದ್ದಾರೆ. ಇದರಿಂದಾಗಿ ಸಂಚಾರ ಅಸ್ತವ್ಯಸ್ತವಾಗಿತ್ತು.

    ವಿಶೇಷ ಪ್ರತಿಭಟನೆ ಕುರಿತು ಪ್ರತಿಕ್ರಿಯೆ ನೀಡಿದ ಎಚ್‍ವೈವಿ ಕಾರ್ಯಕರ್ತರು, ಮುಸ್ಲಿಂ ಬಾಂಧವರು ಪ್ರತಿ ಶುಕ್ರವಾರ ರಸ್ತೆಯಲ್ಲಿ ನಮಾಜ್ ಮಾಡುತ್ತಾರೆ. ರಸ್ತೆಯಲ್ಲಿ ನಮಾಜ್ ಮಾಡುವುದನ್ನು ನಿಲ್ಲಿಸುವವರೆಗೂ ನಾವು ಪ್ರತಿ ಮಂಗಳವಾರ ರಸ್ತೆಯಲ್ಲಿ ಹನುಮಾನ್ ಚಾಲಿಸಾ ಪಠಣ ಮಾಡುತ್ತೇವೆ ಎಂದು ಹೇಳಿದ್ದಾರೆ.

    ಎಚ್‍ವೈವಿ ಕಾರ್ಯಕರ್ತ ರವೀಂದ್ರ ಕುಮಾರ್ ಸಿಂಗ್ ಅವರು ಪ್ರತಿಕ್ರಿಯೆ ನೀಡಿ, ರಸ್ತೆಯಲ್ಲಿ ನಮಾಜ್ ಮಾಡುವುದರಿಂದ ಸಂಚಾರ ಅಸ್ತವ್ಯಸ್ತವಾಗುತ್ತಿದೆ. ಹೀಗಾಗಿ ಅವರು ರಸ್ತೆಯಲ್ಲಿ ನಮಾಜ್ ಮಾಡುವುದನ್ನು ನಿಲ್ಲಿಸಿದರೆ ನಾವು ಕೂಡ ಹನುಮಾನ್ ಚಾಲಿಸಾ ಪಠಣ ನಿಲ್ಲಿಸುತ್ತೇವೆ ಎಂದು ತಿಳಿಸಿದರು.

    ಈ ಘಟನೆಯ ವಿಚಾರದಲ್ಲಿ ಪೊಲೀಸರು ಮೌನವಾಗಿ ಉಳಿದಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ನಡು ರಸ್ತೆಯಲ್ಲಿ ನಮಾಜ್ ಮಾಡುವುದರಿಂದ ತೊಂದರೆಯಾಗಿದೆ ಅಂತ ಯಾರೂ ದೂರು ನೀಡಿಲ್ಲ. ಆದ್ದರಿಂದ ಈ ವಿಚಾರದಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಹೇಳಿದ್ದಾರೆ.

    ಈ ಹಿಂದೆ ಪಶ್ಚಿಮ ಬಂಗಾಳದಲ್ಲಿ ಪ್ರತೀ ಶುಕ್ರವಾರ ಮುಸ್ಲಿಮರು ಪ್ರಾರ್ಥನೆ (ನಮಾಜ್) ಸಲ್ಲಿಸುವ ವೇಳೆ ರೋಡ್ ಬಂದ್ ಆಗುತ್ತಿರುವುದನ್ನು ಖಂಡಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಹನುಮಾನ್ ಚಾಲಿಸಾ ಪಠಿಸಿ ಪ್ರತಿಭಟನೆ ನಡೆಸಿದ್ದರು.

    ಪ್ರತಿ ಶುಕ್ರವಾರದ ನಮಾಜ್ ಸಮಯದಲ್ಲಿ ಮಸೀದಿ ಮುಂಭಾಗದ ರಸ್ತೆ ಸಂಚಾರ ನಿಷೇಧಿಸಲಾಗುತ್ತಿದೆ. ಇದರಿಂದ ವಾಹನ ಚಲಿಸುವವರಿಗೆ ತೊಂದರೆಯಾಗುತ್ತದೆ ಎಂದು ಹೇಳಿ ಬಿಜೆಪಿ ಯುವ ಮೋರ್ಚಾದವರು ಹೌರ ನಗರದ ಜಿ.ಟಿ ರಸ್ತೆಯಲ್ಲಿ ಕುಳಿತು ಹನುಮಾನ್ ಚಾಲಿಸಾ ಪಠಣ ಮಾಡುವ ಮೂಲಕ ಪ್ರತಿಭಟಿಸಿದ್ದರು.

    ಈ ವಿಚಾರವಾಗಿ ಮಾತನಾಡಿದ್ದ ಹೌರ ಜಿಲ್ಲಾ ಯುವ ಮೋರ್ಚಾದ ಕಾರ್ಯಕರ್ತ ಒ.ಪಿ ಸಿಂಗ್ ಅವರು, ಮಮತಾ ಬ್ಯಾನರ್ಜಿ ಅವರ ಆಡಳಿತದಲ್ಲಿ ಗ್ರ್ಯಾಂಡ್ ಟ್ರಾಂಕ್ ರಸ್ತೆ ಮತ್ತು ಇತರ ಮುಖ್ಯ ರಸ್ತೆಗಳಲ್ಲಿ ಶುಕ್ರವಾರ ಸಂಚಾರ ನಿಷೇಧಿಸಲಾಗಿದೆ. ಇದರಿಂದ ಸರಿಯಾದ ಸಮಯಕ್ಕೆ ರೋಗಿಗಳು ಆಸ್ಪತ್ರೆಗೆ ಹೋಗಲು ಆಗದೇ ಮೃತಪಡುತ್ತಿದ್ದಾರೆ. ಉದ್ಯೋಗಸ್ಥರು ಶುಕ್ರವಾರ ಸರಿಯಾದ ಸಮಯಕ್ಕೆ ಕಚೇರಿಗೆ ಹೋಗಲು ಆಗುತ್ತಿಲ್ಲ. ನಮಾಜ್ ವೇಳೆ ರಸ್ತೆಗಳ ನಿಷೇಧವನ್ನು ಎಲ್ಲಿಯವರೆಗೆ ಮುಂದುವರಿಸುತ್ತಾರೋ ಅಲ್ಲಿಯವರೆಗೆ ನಾವೂ ಹನುಮಾನ್ ಮಂದಿರಗಳ ಮುಂದೆ ಎಲ್ಲಾ ರಸ್ತೆಗಳನ್ನು ತಡೆದು ಹನುಮಾನ್ ಚಾಲಿಸಾವನ್ನು ಪಠಣ ಮಾಡುತ್ತೇವೆ ಎಂದು ಹೇಳಿದ್ದರು.

  • ಅಧಿಕಾರಿಯನ್ನು ಭ್ರಷ್ಟ ಎಂದ ಬಿಜೆಪಿ ಮೇಯರ್ ವಿರುದ್ಧ ಕೇಸ್

    ಅಧಿಕಾರಿಯನ್ನು ಭ್ರಷ್ಟ ಎಂದ ಬಿಜೆಪಿ ಮೇಯರ್ ವಿರುದ್ಧ ಕೇಸ್

    ಲಕ್ನೋ: ಅಧಿಕಾರಿಯನ್ನು ಭ್ರಷ್ಟ ಎಂದು ಕರೆದಿದ್ದಕ್ಕೆ ಉತ್ತರ ಪ್ರದೇಶದ ಬರೇಲಿಯ ಮೇಯರ್ ವಿರುದ್ಧ ಕೇಸ್ ದಾಖಲಾಗಿದೆ.

    ಬರೇಲಿಯ ಬಿಜೆಪಿ ಮೇಯರ್ ಉಮೇಶ್ ಗೌತಮ್ ಅವರು, ನಗರ ಆರೋಗ್ಯ ಅಧಿಕಾರಿ ಸಂಜೀವ್ ಪ್ರಾದ್ ಅವರಿಗೆ ಬಾಯಿಗೆ ಬಂದಂತೆ ಬೈದು, ಭ್ರಷ್ಟ ಎಂದು ಕರೆದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಕುರಿತು ಅಧಿಕಾರಿ ಸಂಜೀವ್ ಪ್ರಾದ್ ಅವರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಮೇಯರ್ ಸೇರಿದಂತೆ 50 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

    ಬರೇಲಿಯ ಆಯುಕ್ತ ಕಚೇರಿಗೆ ಮೇಯರ್ ಉಮೇಶ್ ಗೌತಮ್ ಸೋಮವಾರ ಆಗಮಿಸಿದ್ದರು. ಈ ವೇಳೆ ಆಯುಕ್ತರ ಎದುರೇ, ನೀವು ಎಷ್ಟು ಹಣವನ್ನು ಪಡದಿದ್ದೀರಾ? ಏನು ನೋಡುತ್ತಿದ್ದೀರಾ ಎಂದು ಸಂಜೀವ್ ಪ್ರಾದ್ ಅವರಿಗೆ ಕೇಳಿದರು. ಆಗ ಆಯುಕ್ತರು ಮಧ್ಯಪ್ರವೇಶಿಸಿ ಉತ್ತರ ನೀಡುತ್ತಿದ್ದರೂ ಆಲಿಸದ ಮೇಯರ್, ಸಂಜೀವ್ ಪ್ರಾದ್ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ನಾವು ನೀವು ಕೂಡಿ ಇಂತಹ ಅಧಿಕಾರಿಗೆ ಭ್ರಷ್ಟಾಚಾರ ನಡೆಸಲು ದಾರಿ ಮಾಡಿಕೊಡಬೇಕೆ ಎಂದು ಆಯುಕ್ತರನ್ನು ಪ್ರಶ್ನಿಸಿದರು.

    ಇಂತಹ ಅಧಿಕಾರಿಗಳು ಸೇರಿ ಬರೇಲಿಯನ್ನು ಹಾಳು ಮಾಡುತ್ತಿದ್ದಾರೆ. ಏನು ಮಾಡಬೇಕು, ಏನು ಮಾಡಬಾರದು ಎನ್ನುವ ನಿರ್ಧಾರ ಕೈಗೊಳ್ಳಲು ಜನರು ನನಗೆ ಮತ ಹಾಕಿ ಕಳುಹಿಸಿದ್ದಾರೆ ಎಂದು ಹೇಳಿ ಸಂಜೀವ್ ಅವರ ಕೈ ಹಿಡಿದು ಎಳೆದಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಮೇಯರ್ ವಿರುದ್ಧ ಟೀಕೆ ವ್ಯಕ್ತವಾಗಿದೆ.

    ಈ ಘಟನೆಯ ಕುರಿತು ಅಧಿಕಾರು ಸಂಜೀವ್ ಪ್ರಾದ್ ಅವರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.

    ಕೆಲ ದಿನಗಳ ಹಿಂದಷ್ಟೇ ಬಿಜೆಪಿ ಹಿರಿಯ ಮುಖಂಡ ಕೈಲಾಶ್ ವಿಜಯ್‍ವರ್ಗೀಯ ಅವರ ಪುತ್ರ, ಶಾಸಕ ಆಕಾಶ್ ವಿಜಯ್‍ವರ್ಗಿಯ ಅವರು ಅಧಿಕಾರಿಯ ಮೇಲೆ ಬ್ಯಾಟ್‍ನಿಂದ ಹಲ್ಲೆ ಮಾಡಿದ್ದರು.