Tag: uttar pradesh

  • 13 ರಾಜ್ಯಗಳ 95 ಕ್ಷೇತ್ರಗಳ ಮತದಾನ ಅಂತ್ಯ

    13 ರಾಜ್ಯಗಳ 95 ಕ್ಷೇತ್ರಗಳ ಮತದಾನ ಅಂತ್ಯ

    ಬೆಂಗಳೂರು: 2019ರ ಲೋಕಸಭಾ ಚುನಾವಣೆಯ 2ನೇ ಹಂತದ ಮತದಾನದ ಅಂತ್ಯಗೊಂಡಿದೆ. 2ನೇ ಹಂತದಲ್ಲಿ 13 ರಾಜ್ಯಗಳ 95 ಲೋಕಸಭಾ ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ನಡೆಯಿತು.

    ಎಲ್ಲೆಲ್ಲಿ ಎಷ್ಟು ಮತದಾನ?
    ತಮಿಳುನಾಡಿನ 38 ಲೋಕಸಭಾ ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ನಡೆದಿದ್ದು, ಶೇ. 61.52 ರಷ್ಟು ಮತದಾನ ಆಗಿದೆ. ಪ್ರಮುಖವಾಗಿ ಕಾಂಗ್ರೆಸ್ ಪಕ್ಷದ ಮಾಜಿ ಸಚಿವ ಪಿ. ಚಿದಂಬರಂ ಅವರು ಸ್ಪರ್ಧೆ ಮಾಡಿರುವ ಶಿವಗಂಗಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಎಚ್ ರಾಜಾ ಸ್ಪರ್ಧೆ ಮಾಡಿದ್ದಾರೆ. ಚೆನ್ನೈ ಕ್ಷೇತ್ರದಲ್ಲಿ ಡಿಎಂಕೆ ಮುಖಂಡ ದಯಾನಿಧಿ ಮಾರನ್ ವಿರುದ್ಧ ಪಿಎಂಕೆ ಪಕ್ಷದ ಸ್ಯಾಮ್ ಪಾಲ್ ಕಣಕ್ಕೆ ಇಳಿದಿದ್ದಾರೆ. ಬಿಜೆಪಿಯ ಪೊನ್ ರಾಧಾಕೃಷ್ಣನ್ ಕನ್ಯಾ ಕುಮಾರಿಯಿಂದ ಕಾಂಗ್ರೆಸ್ ಪಕ್ಷದ ಎಚ್. ವಸಂತಕುಮಾರ್ ಅವರ ವಿರುದ್ಧ ಸ್ಪರ್ಧೆ ನಡೆಸಿದ್ದಾರೆ. ತೂತುಕುಡಿ ಯಿಂದ ಡಿಎಂಕೆ ನಾಯಕಿ ಕನಿಮೋಳಿ ಕಣಕ್ಕೆ ಇಳಿದ್ದು, ಬಿಜೆಪಿಯ ತಮಿಳ್‍ಸಾಯಿ ಸುಂದರರಾಜನ್ ಬಿಜೆಪಿಯಿಂದ ಸ್ಪರ್ಧೆ ನಡೆಸಿದ್ದಾರೆ. ನೀಲ್‍ಗಿರೀಸ್ ಕ್ಷೇತ್ರದಿಂದ ಡಿಎಂಕೆ ನಾಯಕ ಎ.ರಾಜಾ ಕಣಕ್ಕೆ ಇಳಿದಿದ್ದರೆ ಎಐಡಿಎಂಕೆ ಪಕ್ಷದಿಂದ ತ್ಯಾಗರಾಜನ್ ಕಣದಲ್ಲಿದ್ದಾರೆ. ಎಲ್ಲಾ ಅಭ್ಯರ್ಥಿಗಳ ಭವಿಷ್ಯ ಮತ ಯಂತ್ರಗಳಲ್ಲಿ ಭದ್ರವಾಗಿದ್ದು, 23 ರಂದು ನಡೆಯುವ ಮತ ಎಣಿಕೆವರೆಗೂ ಫಲಿತಾಶಂಕ್ಕಾಗಿ ಕಾಯಬೇಕಿದೆ.

    ದೇಶದಲ್ಲಿ ಅತಿಹೆಚ್ಚು ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ಉತ್ತರಪ್ರದೇಶದಲ್ಲಿ ಇಂದು 8 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಿತು. ಇಲ್ಲಿ ಶೇ. 58.12 ರಷ್ಟು ಮತದಾನ ನಡೆದಿದೆ. ಪ್ರಮುಖವಾಗಿ ನಟಿ ಹೇಮಾ ಮಾಲಿನಿ ಬಿಜೆಪಿಯಿಂದ ಸ್ಪರ್ಧೆ ಮಾಡಿರುವ ಮಥುರಾದಲ್ಲಿ ಕಾಂಗ್ರೆಸ್ ಪಕ್ಷದ ಮಹೇಶ್ ಪಾಠಕ್ ಹಾಗೂ ಆರ್ ಎಲ್‍ಡಿ ಯಿಂದ ಕಣಕ್ಕೆ ಇಳಿದಿರುವ ಖುನ್ವರ್ ನರೇಂದ್ರ ಸಿಂಗ್ ಅವರ ನಡುವೆ ತ್ರಿಕೋನ ಸ್ಪರ್ಧೆ ಇದೆ. ಅಲ್ಲದೇ ಕಾಂಗ್ರೆಸ್ ಪಕ್ಷದ ರಾಜ್‍ಬಬ್ಬರ್ ಸ್ಪರ್ಧೆ ಮಾಡಿರುವ ಫತೇಪುರ್ ಸಿಕ್ರಿ ಕ್ಷೇತ್ರದಲ್ಲಿ ಬಿಜೆಪಿಯಿಂದ ರಾಜಕುಮಾರ್ ಚಹಾರ್ ಹಾಗೂ ಬಿಎಸ್‍ಪಿಯಿಂದ ಭಗವಾನ್ ಶರ್ಮಾ ಕಣದಲ್ಲಿ ಇದ್ದಾರೆ. ಡ್ಯಾನಿಶ್ ಅಲಿ ಅವರು ಅಮ್ರೋಹಾ ಕ್ಷೇತ್ರದಿಂದ ಬಿಜೆಪಿಯ ಕನ್ವರ್ ಸಿಂಗ್ ಅವರ ವಿರುದ್ಧ ಸ್ಪರ್ಧೆ ನಡೆಸಿದ್ದಾರೆ.

    ಜಮ್ಮು ಕಾಶ್ಮೀರ ಶ್ರೀನಗರದಲ್ಲಿ ಎನ್‍ಸಿ ಪಕ್ಷದಿಂದ ಫಾರೂಕ್ ಅಬ್ದುಲ್ಲಾ ಹಾಗೂ ಬಿಜೆಪಿಯಿಂದ ಖಲೀದ್ ಜಹಾಂಗೀರ್ ಕಣದಲ್ಲಿದ್ದಾರೆ. ಇನ್ನು ಉಧಾಂಪುರ ಕ್ಷೇತ್ರದಲ್ಲಿ ಬಿಜೆಪಿಯಿಂದ ಡಾ.ಜಿತೇಂದ್ರ ಸಿಂಗ್ ಮತ್ತು ಕಾಂಗ್ರೆಸ್ ನಿಂದ ವಿಕ್ರಮಾಧಿತ್ಯ ಸಿಂಗ್ ಸ್ಪರ್ಧೆ ನಡೆಸಿದ್ದಾರೆ. 2 ಕ್ಷೇತ್ರಗಳಲ್ಲಿ ಶೇ. 43.37 ಮತದಾನ ನಡೆದಿದೆ.

    ಉಳಿದಂತೆ ಆಸ್ಸಾಂನ 5 ಕ್ಷೇತ್ರಗಳಲ್ಲಿ ಮತದಾನ ನಡೆದಿದ್ದು, 2ನೇ ಹಂತದ ಮತದಾನದಲ್ಲಿ ಅಧಿಕ ಅಂದರೆ ಶೇ. 73.30 ರಷ್ಟು ಮತದಾನ ನಡೆದಿದೆ. ಉಳಿದಂತೆ ಮಹಾರಾಷ್ಟ್ರ 10 ಕ್ಷೇತ್ರಗಳಲ್ಲಿ ಶೇ. 55.37, ಒಡಿಶಾ 5 ಕ್ಷೇತ್ರಗಳಲ್ಲಿ ಶೇ. 57.40, ಚತ್ತೀಸ್‍ಗಢ 3 ಕ್ಷೇತ್ರದಲ್ಲಿ 68.70 ಹಾಗೂ ಪಶ್ಚಿಮ ಬಂಗಾಳದ 3 ಕ್ಷೇತ್ರಗಳಲ್ಲಿ ಶೇ.75.27 ರಷ್ಟು ಮತದಾನ ದಾಖಲಾಗಿದೆ. ಇನ್ನು ಮಣಿಪುರದಲ್ಲಿ ಶೇ. 74.69 ಹಾಗೂ ಪಾಂಡಿಚೇರಿಯಲ್ಲಿ 72.40 ರಷ್ಟು ಮತದಾನ ಆಗಿದೆ.

  • ಬಿಜೆಪಿ ಶಾಲ್ ಹಾಕಿಕೊಂಡು ಮತಗಟ್ಟೆಗೆ ಬಂದ ಸಂಸದರಿಗೆ ಗೃಹ ಬಂಧನ

    ಬಿಜೆಪಿ ಶಾಲ್ ಹಾಕಿಕೊಂಡು ಮತಗಟ್ಟೆಗೆ ಬಂದ ಸಂಸದರಿಗೆ ಗೃಹ ಬಂಧನ

    ಲಕ್ನೋ: ಬಿಜೆಪಿ ಚಿಹ್ನೆಯ ಶಾಲ್ ಹಾಕಿಕೊಂಡು ಮತಗಟ್ಟೆಗೆ ಆಗಮಿಸಿದ್ದ ಅಭ್ಯರ್ಥಿ, ಹಾಲಿ ಸಂಸದರನ್ನು ಚುನಾವಣಾ ಆಯೋಗದ ಅಧಿಕಾರಿಗಳು ಗೃಹಬಂಧನಲ್ಲಿ ಇರಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

    ಬುಲಂದ್‍ಶಹರ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ, ಹಾಲಿ ಸಂಸದ ಭೋಲಾ ಸಿಂಗ್ ಅವರು ಬಿಜೆಪಿ ಚಿಹ್ನೆ ಇರುವ ಕೇಸರಿ ಶಾಲ್ ಹಾಕಿಕೊಂಡು ಮತ ಚಲಾಯಿಸಲು ಮತಗಟ್ಟೆಗೆ ಆಗಮಿಸಿದ್ದರು. ಪಕ್ಷದ ಚಿಹ್ನೆಯೊಂದಿಗೆ ಮತಗಟ್ಟೆಗೆ ಬಂದು ಮತ ಚಲಾಯಿಸಿರುವುದು ನೀತಿಸಂಹಿತೆ ಉಲ್ಲಂಘನೆಯಾಗಿತ್ತು. ಇದರಿಂದಾಗಿ ಚುನಾವಣಾ ಅಧಿಕಾರಿಗಳು ಕೆಲ ಹೊತ್ತು ಗೃಹ ಬಂಧನದಲ್ಲಿ ಇರುವಂತೆ ಸಂಸದರಿಗೆ ಆದೇಶಿಸಿದರು.

    ಮತಗಟ್ಟೆಯಲ್ಲಿದ್ದ ಭದ್ರತಾ ಸಿಬ್ಬಂದಿ ಸಂಸದರನ್ನು ಕೆಲ ಹೊತ್ತು ಗೃಹ ಬಂಧನದಲ್ಲಿ ಇರಿಸಿದರು. ಸ್ಥಳದಲ್ಲಿದ್ದ ಕೆಲವರು ಈ ದೃಶ್ಯವನ್ನು ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ. ನಂತರ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಭೋಲಾ ಸಿಂಗ್ ಅವರು 2014ರ ಲೋಕಸಭಾ ಚುನಾವಣೆಯಲ್ಲಿ ಬಿಎಸ್‍ಪಿಯ ಪ್ರದೀಪ್ ಕುಮಾರ್ ಜಾದವ್ ಅವರ ವಿರುದ್ಧ 4,21,973 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದರು. ಈ ಬಾರಿ ಭೋಲಾ ಸಿಂಗ್ ಕಾಂಗ್ರೆಸ್ ಅಭ್ಯರ್ಥಿ ಬನ್ಸಿ ಲಾಲ್ ಪಹಾಡಿಯ ಮತ್ತು ಎಸ್‍ಪಿ – ಬಿಎಸ್‍ಪಿ ಮೈತ್ರಿ ಅಭ್ಯರ್ಥಿ ಯೋಗೇಶ್ ವರ್ಮ ಅವರ ವಿರುದ್ಧ ಕಣಕ್ಕೆ ಇಳಿದಿದ್ದಾರೆ.

  • ಯೋಗಿ ಮೇಲೆ ಏಕೆ ಅನುಕಂಪ: ಚುನಾವಣಾ ಆಯೋಗಕ್ಕೆ ಮಾಯಾವತಿ ಪ್ರಶ್ನೆ

    ಯೋಗಿ ಮೇಲೆ ಏಕೆ ಅನುಕಂಪ: ಚುನಾವಣಾ ಆಯೋಗಕ್ಕೆ ಮಾಯಾವತಿ ಪ್ರಶ್ನೆ

    ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಚುನಾವಣಾ ಆಯೋಗ ವಿಧಿಸಿರುವ ಪ್ರಚಾರ ನಿಷೇಧ ಆದೇಶವನ್ನು ಉಲ್ಲಂಘಿಸಿದ್ದಾರೆ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್‍ಪಿ) ನಾಯಕಿ ಮಾಯಾವತಿ ಆರೋಪಿಸಿದ್ದಾರೆ. ಆದರೆ ಯೋಗಿ ಆದಿತ್ಯನಾಥ್ ಅವರ ಮಾಧ್ಯಮ ಸಲಹೆಗಾರರು ಮಾಯಾವತಿ ಆರೋಪವನ್ನು ತಳ್ಳಿಹಾಕಿದ್ದಾರೆ.

    ಮಾಯಾವತಿ ಅವರು ಸರಣಿ ಟ್ವೀಟ್‍ಗಳ ಬಿಜೆಪಿ ಹಾಗೂ ಚುನಾವಣಾ ಆಯೋಗದ ವಿರುದ್ಧ ಅಸಮಾಧಾನವನ್ನು ಹೊರಹಾಕಿದ್ದಾರೆ. ಯೋಗಿ ಆದಿತ್ಯನಾಥ್ ಅವರು ದೇವಸ್ಥಾನಗಳನ್ನು ಭೇಟಿ ಮಾಡುತ್ತಿದ್ದಾರೆ. ದಲಿತರ ಮನೆಗಳಲ್ಲಿ ಆಹಾರವನ್ನು ಸೇವಿಸುವ ಮೂಲಕ ಚುನಾವಣಾ ಆಯೋಗದ ಆದೇಶವನ್ನು ಉಲ್ಲಂಘಿಸಿದ್ದಾರೆ. ಮತದಾರರನ್ನು ಸೆಳೆಯಲು ಮಾಧ್ಯಮ ವೇದಿಕೆಯನ್ನಾಗಿಸಿಕೊಂಡಿದ್ದಾರೆ. ಚುನಾವಣಾ ಆಯೋಗವು ಅವರ ಮೇಲೆ ಯಾಕೆ ಇಷ್ಟು ಅನುಕಂಪ ತೋರುತ್ತಿದೆ ಎಂದು ಪ್ರಶ್ನಿಸಿದ್ದಾರೆ.

    ಚುನಾವಣಾ ಆಯೋಗದ ಈ ರೀತಿಯ ತಾರತಮ್ಯವು ಮುಂದುವರಿದರೆ ಮುಕ್ತ ಮತ್ತು ನ್ಯಾಯೋಚಿತವಾಗಲು ಅಸಾಧ್ಯ. ಈ ಸಂದರ್ಭಗಳಲ್ಲಿ ಸಾರ್ವಜನಿಕ ಪರಿಸ್ಥಿತಿ ಹೇಗೆ ಎಂದು ಮಾಯಾವತಿ ಟ್ವೀಟ್ ಮಾಡಿದ್ದಾರೆ.

    ಮಾಯಾವತಿ ಅವರ ಆರೋಪಗಳಿಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಮಾಧ್ಯಮ ಸಲಹೆಗಾರ ಮೃತ್ಯಂಜಯ್ ಕುಮಾರ್ ಅವರು, ಆಮಂತ್ರಣ ಬಂದಿದ್ದರಿಂದ ಯೋಗಿ ಆದಿತ್ಯನಾಥ್ ಹಾಜರಿದ್ದರು ಎಂದು ತಿಳಿಸಿದ್ದಾರೆ.

    ಆಮಂತ್ರಣ ನೀಡಿದವರ ಮನೆಯಲ್ಲಿ ಊಟ ಮಾಡುವುದು ಅಥವಾ ಪ್ರಾರ್ಥನೆ ಸಲ್ಲಿಸುವುದು ವೈಯಕ್ತಿಕ ವಿಚಾರ. ಅಷ್ಟೇ ಅಲ್ಲದೆ ದೇವಾಲಯಗಳಿಗೆ ಭೇಟಿ ನೀಡುವುದು ಹೇಗೆ ಚುನಾವಣಾ ಆದೇಶ ಉಲ್ಲಂಘನೆಯಾಗುತ್ತದೆ ಎಂದು ಮೃತ್ಯಂಜಯ್ ಕುಮಾರ್ ಪ್ರಶ್ನಿಸಿದ್ದಾರೆ.

    ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಮತ್ತು ಬಿಎಸ್‍ಪಿ ನಾಯಕಿ ಮಯಾವತಿ ಅವರಿಗೆ ಚುನಾವಣಾ ಆಯೋಗವು ಇಬ್ಬರಿಗೂ ಏಪ್ರಿಲ್ 15ರಂದು ನೋಟಿಸ್ ಜಾರಿ ಮಾಡಿತ್ತು. ಈ ಮೂಲಕ ಏಪ್ರಿಲ್ 16ರಿಂದ ಯೋಗಿ ಆದಿತ್ಯನಾಥ್ ಅವರಿಗೆ 72 ಗಂಟೆ ಮತ್ತು ಮಯಾವತಿ ಅವರಿಗೆ 48 ಗಂಟೆಗಳ ಕಾಲ ಬಹಿರಂಗ ಪ್ರಚಾರಕ್ಕೆ ನಿಷೇಧ ಹೇರಿತ್ತು.

    ಆದಿತ್ಯನಾಥ್ ಹೇಳಿದ್ದೇನು?
    ಉತ್ತರ ಪ್ರದೇಶದ ಮೀರತ್‍ನಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದ್ದ ಯೋಗಿ ಆದಿತ್ಯನಾಥ್ ಅವರು, ಭಾರತೀಯ ಸೈನ್ಯ `ಮೋದಿ ಸೈನ್ಯ’, ಮುಸ್ಲಿಂ ಲೀಗ್ `ವೈರಸ್’ ಎಂದು ಹೇಳಿದ್ದರು. ಅಲ್ಲದೇ ಕಾಂಗ್ರೆಸ್, ಸಮಾಜವಾದಿ ಪಕ್ಷ (ಎಸ್‍ಪಿ) ಹಾಗೂ ಬಹುಜನ ಸಮಾಜ ಪಕ್ಷ (ಬಿಎಸ್‍ಪಿ) ಅಲಿ ಮೇಲೆ ನಂಬಿಕೆ ಹೊಂದಿದ್ದಾರೆ. ಆದರೆ ನಾವು ಭಜರಂಗಬಲಿ ಮೇಲೆ ನಂಬಿಕೆ ಇಟ್ಟುಕೊಂಡಿದ್ದೇವೆ. ಹೀಗಾಗಿ ಅವರು ಅಲಿಯನ್ನು ಹೊಂದಿದ್ದರೆ, ನಾವು ಭಜರಂಗಬಲಿಯನ್ನು ಹೊಂದಿದ್ದೇವೆ ಎಂದಿದ್ದರು.

    ಮಯಾವತಿ ಹೇಳಿದ್ದೇನು?
    ಯೋಗಿ ಆದಿತ್ಯನಾಥ್ ಅವರ ಹೇಳಿಕೆಗೂ ಕೆಲ ದಿನಗಳ ಮುನ್ನ ಉತ್ತರ ಪ್ರದೇಶದ ದಿಯೋಬಂದ್‍ನಲ್ಲಿ ನಡೆದಿದ್ದ ಸಮಾಜವಾದಿ ಪಕ್ಷ (ಎಸ್‍ಪಿ) ಹಾಗೂ ಬಿಎಸ್‍ಪಿ ಜಂಟಿ ಸಮಾವೇಶದಲ್ಲಿ ಮಾತನಾಡಿದ್ದ ಮಾಯಾವತಿ ಅವರು ಮುಸ್ಲಿಂ ಸಮುದಾಯದ ಬಳಿ ಮತಯಾಚನೆ ಮಾಡಿದ್ದರು. ಈ ವೇಳೆ ಕಾಂಗ್ರೆಸ್ಸಿಗೆ ಮುಸ್ಲಿಮರು ಮತ ಹಾಕಬೇಡಿ. ಬಿಜೆಪಿಗೆ ಅನುಕೂಲ ಕಲ್ಪಿಸಲು ಕಾಂಗ್ರೆಸ್ ಕೆಲವೆಡೆ ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಮುಸ್ಲಿಮರು ಕಾಂಗ್ರೆಸ್‍ಗೆ ಮತ ಹಾಕಿದರೆ ಮತ ವಿಭಜನೆಯಾಗಿ ಬಿಜೆಪಿಗೆ ಅನುಕೂಲವಾಗಲಿದೆ ಎಂದು ಮನವಿ ಮಾಡಿಕೊಂಡಿದ್ದರು. ಅಲ್ಲದೇ ಕೇಂದ್ರದ ಬಿಜೆಪಿ ಸರ್ಕಾರವು ಜನರಲ್ಲಿ ದ್ವೇಷದ ಬೀಜ ಬಿತ್ತುತ್ತಿದೆ. ಹೀಗಾಗಿ ಈ ಬಾರಿ ಬಿಜೆಪಿ ಅಧಿಕಾರ ಕಳೆದುಕೊಳ್ಳಲಿದೆ. ಕಾಂಗ್ರೆಸ್‍ಗೆ ಮತ ನೀಡುವ ಮೂಲಕ ಮುಸ್ಲಿಮರು ಪರೋಕ್ಷವಾಗಿ ಬಿಜೆಪಿ ಪರವಾಗಿ ನಿಲ್ಲದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದ್ದರು.

    ಮಯಾವತಿ ಅವರ ಈ ಹೇಳಿಕೆಗೆ ತಿರುಗೇಟು ನೀಡಲು ಸಿಎಂ ಯೋಗಿ ಆದಿತ್ಯನಾಥ್ ಅವರು ಅಲಿ, ಭಜರಂಗ ಬಲಿ ಹೇಳಿಕೆಯನ್ನು ನೀಡಿದ್ದರು.

  • ಪತಿ ಕಪ್ಪಗಿದ್ದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತ್ನಿ!

    ಪತಿ ಕಪ್ಪಗಿದ್ದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತ್ನಿ!

    ಲಕ್ನೋ: ಪತಿ ನೋಡಲು ಕಪ್ಪಗಿದ್ದ ಎಂದು ಸಹಿಸಲಾಗದ ಪತ್ನಿ ಆತ ಮಲಗಿದ್ದ ವೇಳೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ.

    ಬರೇಲಿ ನಿವಾಸಿಯಾಗಿದ್ದ ಸತ್ಯವೀರ್ ಸಿಂಗ್ ಮೃತ ದುರ್ದೈವಿ. ಪ್ರೇಮಶ್ರೀ(22) ಪತಿಯನ್ನು ಸುಟ್ಟು ಕೊಲೆ ಮಾಡಿದ್ದಾಳೆ. ಕಳೆದ ಎರಡು ವರ್ಷದ ಹಿಂದೆ ಸತ್ಯವೀರ್ ಹಾಗೂ ಪ್ರೇಮಶ್ರೀ ವಿವಾಹವಾಗಿದ್ದರು. ಅವರಿಗೆ ಐದು ತಿಂಗಳ ಪುಟ್ಟ ಮಗು ಕೂಡ ಇತ್ತು. ಆದ್ರೆ ಪ್ರೇಮಶ್ರೀಗೆ ತನ್ನ ಪತಿಯನ್ನು ಕಂಡರೆ ಇಷ್ಟವಿರಲಿಲ್ಲ. ಆತ ಕಪ್ಪಗಿದ್ದ ಎಂದು ಪತ್ನಿ ಪತಿಯನ್ನು ದ್ವೇಷಿಸುತ್ತಿದ್ದಳು. ಆದ್ದರಿಂದ ಸೋಮವಾರ ಬೆಳಗಿನ ಜಾವ ಸುಮಾರು 5:45ರ ಸಮಯಕ್ಕೆ ಪತಿ ಮಲಗಿದ್ದ ವೇಳೆ ಆತನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾಳೆ. ಈ ವೇಳೆ ಆಕೆಗೂ ಸುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

    ಅಣ್ಣ ಸತ್ಯವೀರ್ ಸಿಂಗ್ ಕಪ್ಪಗಿದ್ದಕ್ಕೆ ಅತ್ತಿಗೆ ಪ್ರೇಮ್‍ಶ್ರೀ ಇಷ್ಟ ಪಡುತ್ತಿರಲಿಲ್ಲ. ಯಾವಾಗಲು ಈ ಬಗ್ಗೆ ದೂರುತ್ತಿದ್ದಳು. ಆದರೆ ಅವರು ಈ ರೀತಿ ಮಾಡುತ್ತಾರೆ ಅಂದುಕೊಂಡಿರಲಿಲ್ಲ ಎಂದು ಸಹೋದರ ಹರಿವೀರ್ ಸಿಂಗ್ ಪೊಲೀಸರ ಬಳಿ ಹೇಳಿದ್ದಾರೆ.

    ಮೊದಲು ಆರೋಪಿ ಮೇಲೆ ಐಪಿಸಿ ಸೆಕ್ಷನ್ 304ರ ಕೊಲೆ ಯತ್ನದ ಅಡಿ ಪ್ರಕರಣ ದಾಖಲಿಸಲಾಗಿತ್ತು. ಆದ್ರೆ ಬಳಿಕ ಸತ್ಯವೀರ್ ಸಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಬಳಿಕ ಐಪಿಸಿ ಸೆಕ್ಷನ್ 304ರ ಅಡಿಯಲ್ಲಿ ಕೊಲೆ ಪ್ರಕರಣ ದಾಖಲು ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿ ಸ್ಪಷ್ಟಪಡಿಸಿದ್ದಾರೆ.

  • ಪ್ರಚಾರಕ್ಕೆ ನಿಷೇಧ – ಯೋಗಿ ಆದಿತ್ಯನಾಥ್, ಮಯಾವತಿಗೆ ಚಾಟಿ ಬೀಸಿದ ಚುನಾವಣಾ ಆಯೋಗ

    ಪ್ರಚಾರಕ್ಕೆ ನಿಷೇಧ – ಯೋಗಿ ಆದಿತ್ಯನಾಥ್, ಮಯಾವತಿಗೆ ಚಾಟಿ ಬೀಸಿದ ಚುನಾವಣಾ ಆಯೋಗ

    ನವದೆಹಲಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಮತ್ತು ಬಿಎಸ್‍ಪಿ ನಾಯಕಿ ಮಯಾವತಿ ಅವರಿಗೆ ಚುನಾವಣಾ ಆಯೋಗ ಚಾಟಿ ಬೀಸಿದೆ.

    ಆಯೋಗ ಇಬ್ಬರಿಗೂ ನೋಟಿಸ್ ಜಾರಿ ಮಾಡಿದ್ದು, ಯೋಗಿ ಆದಿತ್ಯನಾಥ್ ಅವರಿಗೆ 72 ಗಂಟೆ ಮತ್ತು ಮಯಾವತಿ ಅವರಿಗೆ 48 ಗಂಟೆಗಳ ಕಾಲ ಪ್ರಚಾರಕ್ಕೆ ನಿಷೇಧ ಹೇರಿದೆ. ನಾಳೆ ಬೆಳಗ್ಗೆ 6 ಗಂಟೆಯಿಂದ ಈ ನಿಷೇಧ ಜಾರಿಗೆ ಬರಲಿದೆ.

    ಚುನಾವಣಾ ಪ್ರಚಾರ ಭಾಷಣ ಮಾಡುವ ವೇಳೆ ಇಬ್ಬರು ಕೂಡ ಆಕ್ಷೇಪರ್ಹ ಹೇಳಿಕೆ ನೀಡಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದರು. ಈ ಕುರಿತಂತೆ ಕ್ರಮಕೈಗೊಳ್ಳದ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು. ಈ ವೇಳೆ ಇಂತಹ ಪ್ರಕರಣಗಳಿಗೆ ನಾವು ನೋಟಿಸ್ ನೀಡಿ ಕ್ರಮಕ್ಕೆ ಮುಂದಾಬಹುದು ಅಷ್ಟೇ. ಆದರೆ ಅಭ್ಯರ್ಥಿಯನ್ನ ಚುನಾವಣಾ ಕಣದಿಂದ ಹಿಂದೆ ಸರಿಯುವಂತೆ ಮಾಡಲು ಅಧಿಕಾರ ಇಲ್ಲ ಎಂದು ತಿಳಿಸಿತ್ತು. ಆದರೆ ಆಯೋಗ ಉತ್ತರಕ್ಕೆ ನ್ಯಾಯಾಲಯ ಅಸಮ್ಮತಿ ಸೂಚಿಸಿ ಕ್ರಮಕೈಗೊಳ್ಳಲು ಸೂಚನೆ ನೀಡಿತ್ತು. ಇದರ ಬೆನ್ನಲ್ಲೇ ಸದ್ಯ ಆಯೋಗ ಕಟ್ಟು ನಿಟ್ಟಿನ ಕ್ರಮಕೈಗೊಂಡಿದೆ.

    ಆದಿತ್ಯನಾಥ್ ಹೇಳಿದ್ದೇನು?
    ಉತ್ತರ ಪ್ರದೇಶದ ಮೀರತ್‍ನಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದ್ದ ಯೋಗಿ ಆದಿತ್ಯನಾಥ್ ಅವರು, ಭಾರತೀಯ ಸೈನ್ಯ `ಮೋದಿ ಸೈನ್ಯ’, ಮುಸ್ಲಿಂ ಲೀಗ್ `ವೈರಸ್’ ಎಂದು ಹೇಳಿದ್ದರು. ಅಲ್ಲದೇ ಕಾಂಗ್ರೆಸ್, ಸಮಾಜವಾದಿ ಪಕ್ಷ (ಎಸ್‍ಪಿ) ಹಾಗೂ ಬಹುಜನ ಸಮಾಜ ಪಕ್ಷ (ಬಿಎಸ್‍ಪಿ) ಅಲಿ ಮೇಲೆ ನಂಬಿಕೆ ಹೊಂದಿದ್ದಾರೆ. ಆದರೆ ನಾವು ಭಜರಂಗಬಲಿ ಮೇಲೆ ನಂಬಿಕೆ ಇಟ್ಟುಕೊಂಡಿದ್ದೇವೆ. ಹೀಗಾಗಿ ಅವರು ಅಲಿಯನ್ನು ಹೊಂದಿದ್ದರೆ, ನಾವು ಭಜರಂಗಬಲಿಯನ್ನು ಹೊಂದಿದ್ದೇವೆ ಎಂದಿದ್ದರು.

    ಮಯಾವತಿ ಹೇಳಿದ್ದೇನು?
    ಯೋಗಿ ಆದಿತ್ಯನಾಥ್ ಅವರ ಹೇಳಿಕೆಗೂ ಕೆಲ ದಿನಗಳ ಮುನ್ನ ಉತ್ತರ ಪ್ರದೇಶದ ದಿಯೋಬಂದ್‍ನಲ್ಲಿ ನಡೆದಿದ್ದ ಸಮಾಜವಾದಿ ಪಕ್ಷ (ಎಸ್‍ಪಿ) ಹಾಗೂ ಬಿಎಸ್‍ಪಿ ಜಂಟಿ ಸಮಾವೇಶದಲ್ಲಿ ಮಾತನಾಡಿದ್ದ ಮಾಯಾವತಿ ಅವರು ಮುಸ್ಲಿಂ ಸಮುದಾಯದ ಬಳಿ ಮತಯಾಚನೆ ಮಾಡಿದ್ದರು. ಈ ವೇಳೆ ಕಾಂಗ್ರೆಸ್ಸಿಗೆ ಮುಸ್ಲಿಮರು ಮತ ಹಾಕಬೇಡಿ. ಬಿಜೆಪಿಗೆ ಅನುಕೂಲ ಕಲ್ಪಿಸಲು ಕಾಂಗ್ರೆಸ್ ಕೆಲವೆಡೆ ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಮುಸ್ಲಿಮರು ಕಾಂಗ್ರೆಸ್‍ಗೆ ಮತ ಹಾಕಿದರೆ ಮತ ವಿಭಜನೆಯಾಗಿ ಬಿಜೆಪಿಗೆ ಅನುಕೂಲವಾಗಲಿದೆ ಎಂದು ಮನವಿ ಮಾಡಿಕೊಂಡಿದ್ದರು. ಅಲ್ಲದೇ ಕೇಂದ್ರದ ಬಿಜೆಪಿ ಸರ್ಕಾರವು ಜನರಲ್ಲಿ ದ್ವೇಷದ ಬೀಜ ಬಿತ್ತುತ್ತಿದೆ. ಹೀಗಾಗಿ ಈ ಬಾರಿ ಬಿಜೆಪಿ ಅಧಿಕಾರ ಕಳೆದುಕೊಳ್ಳಲಿದೆ. ಕಾಂಗ್ರೆಸ್‍ಗೆ ಮತ ನೀಡುವ ಮೂಲಕ ಮುಸ್ಲಿಮರು ಪರೋಕ್ಷವಾಗಿ ಬಿಜೆಪಿ ಪರವಾಗಿ ನಿಲ್ಲದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದ್ದರು.

    ಮಯಾವತಿ ಅವರ ಈ ಹೇಳಿಕೆಗೆ ತಿರುಗೇಟು ನೀಡಲು ಸಿಎಂ ಯೋಗಿ ಆದಿತ್ಯನಾಥ್ ಅವರು ಅಲಿ, ಭಜರಂಗ ಬಲಿ ಹೇಳಿಕೆಯನ್ನು ನೀಡಿದ್ದರು.

  • ನನ್ನ ಹಣ ಕೊಡಿ ಎಂದಿದ್ದಕ್ಕೆ ನಿವೃತ್ತ ಪೊಲೀಸ್ ಅಧಿಕಾರಿಯ ಪುತ್ರಿಯ ಮೇಲೆ ಗ್ಯಾಂಗ್ ರೇಪ್

    ನನ್ನ ಹಣ ಕೊಡಿ ಎಂದಿದ್ದಕ್ಕೆ ನಿವೃತ್ತ ಪೊಲೀಸ್ ಅಧಿಕಾರಿಯ ಪುತ್ರಿಯ ಮೇಲೆ ಗ್ಯಾಂಗ್ ರೇಪ್

    – ಸಂತ್ರಸ್ತೆಯನ್ನ ರಸ್ತೆ ಬದಿ ಎಸೆದ ಕಾಮುಕರು

    ಲಕ್ನೋ: ನನ್ನ ಹಣ ವಾಪಸ್ ಕೊಡಿ ಎಂದು ಕೇಳಲು ಹೋಗಿದ್ದ ನಿವೃತ್ತ ಪೊಲೀಸ್ ಅಧಿಕಾರಿಯ ಪುತ್ರಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

    ಅತ್ಯಾಚಾರ ಸಂತ್ರಸ್ತೆಯ ಮಲಿಹಾಬಾನ್ ನಿವಾಸಿಯಾಗಿದ್ದು, ಪೊಲೀಸ್ ಅಧಿಕಾರಿ 2013ರಲ್ಲಿ ನಿವೃತ್ತರಾಗಿದ್ದಾರೆ. ಬಬ್ಲೂ, ಕಾಶಿರಾಮ್, ಜೆಕೆ ಗುಪ್ತಾ ಮತ್ತು ಹರೀಶ್ ಅತ್ಯಾಚಾರ ಎಸಗಿದ ಕಾಮುಕರು.

    ಆಗಿದ್ದೇನು?:
    ಆರೋಪಿಗಳಾದ ಬಬ್ಲೂ ಹಾಗೂ ಕಾಶಿರಾಮ್ ಅತ್ಯಾಚಾರ ಸಂತ್ರಸ್ತೆಗೆ ಉದ್ಯೋಗ ಕೊಡಿಸುವುದಾಗಿ ಹೇಳಿ 50 ಸಾವಿರ ರೂ. ಪಡೆದಿದ್ದರು. ಹಣ ಪಡೆದು ಒಂದು ವರ್ಷ ಕಳೆದರೂ ಉದ್ಯೋಗ ಕೊಡಿಸಿರಲಿಲ್ಲ. ಹೀಗಾಗಿ ಹಣ ವಾಪಸ್ ನೀಡುವಂತೆ ಒತ್ತಾಯಿಸಿದ್ದಳು.

    ನೀನು ಲಕ್ನೋ ಸಮೀಪದ ವಿಭೂತಿ ಖಾಂಡ್‍ಗೆ ಬಂದರೆ ಹಣ ನೀಡುತ್ತೇವೆ ಎಂದು ಬಬ್ಲೂ ಹಾಗೂ ಕಾಶಿರಾಮ್ ಹೇಳಿದ್ದರು. ಅವರ ಮಾತಿನಂತೆ ಗುರುವಾರ ನಾನು ಅಲ್ಲಿಗೆ ಹೋಗಿದ್ದೆ. ಈ ವೇಳೆ ಬಬ್ಲೂ ಹಾಗೂ ಕಾಶಿರಾಮ್ ಕಾರಿನಲ್ಲಿ ಕೂರುವಂತೆ ತಿಳಿಸಿದ್ದರು. ನಾನು ಕಾರಿನಲ್ಲಿ ಕೂರುತ್ತಿದ್ದಂತೆ ಅವರ ಇಬ್ಬರು ಸ್ನೇಹಿತರು ಕಾರಿನಲ್ಲಿ ಬಂದು ಕುಳಿತರು. ಬಳಿಕ ಚಲಿಸುತ್ತಿದ್ದ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಸುಮಾರು ಒಂದು ಗಂಟೆಯ ಬಳಿಕ ತಾಲಿಬಾಘ್ ರಸ್ತೆಯ ಮೇಲೆ ಎಸೆದು ಪರಾರಿಯಾದರು ಎಂದು ಸಂತ್ರಸ್ತೆ ದೂರಿದ್ದಾಳೆ.

    ಈ ಸಂಬಂಧ ಲಕ್ನೋ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅತ್ಯಾಚಾರ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಇತ್ತ ಪೊಲೀಸರು ತನಿಖೆ ಆರಂಭಿಸಿದ್ದಾರೆ.

  • ರಾಹುಲ್ ತಲೆಯ ಮೇಲೆ ಬಿದ್ದಿದ್ದು ಛಾಯಾಗ್ರಾಹಕ ಬಳಕೆ ಮಾಡಿದ್ದ ಮೊಬೈಲ್ ಲೈಟ್!

    ರಾಹುಲ್ ತಲೆಯ ಮೇಲೆ ಬಿದ್ದಿದ್ದು ಛಾಯಾಗ್ರಾಹಕ ಬಳಕೆ ಮಾಡಿದ್ದ ಮೊಬೈಲ್ ಲೈಟ್!

    – ಅಮೇಥಿ ರ್ಯಾಲಿ ಮೇಲೆ ಭದ್ರತಾ ಲೋಪ – ಕಾಂಗ್ರೆಸ್ ಆರೋಪ
    – ಕಾಂಗ್ರೆಸ್ಸಿನಿಂದ ಯಾವುದೇ ಪತ್ರ ಬಂದಿಲ್ಲ
    – ಮಾಧ್ಯಮಗಳ ವರದಿ ಆಧಾರಿಸಿ ಗೃಹ ಸಚಿವಾಲಯದಿಂದ ಸ್ಪಷ್ಟನೆ

    ನವದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಉತ್ತರ ಪ್ರದೇಶದ ಅಮೇಥಿಯಲ್ಲಿ ಅಪಾಯವಿದ್ದು, ರ್ಯಾಲಿ ವೇಳೆ ಅವರ ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂದು ಕಾಂಗ್ರೆಸ್ ಬರೆದ ಪತ್ರಕ್ಕೆ ಕೇಂದ್ರ ಗೃಹ ಸಚಿವಾಲಯ ಸ್ಪಷ್ಟನೆ ನೀಡಿದೆ.

    ರಾಹುಲ್ ಗಾಂಧಿಗೆ ನೀಡಲಾದ ಭದ್ರತೆಯಲ್ಲಿ ಲೋಪವಾಗಿದೆ ಎಂದು ಆರೋಪಿಸಿ ನಮಗೆ ಕಾಂಗ್ರೆಸ್ಸಿನಿಂದ ಯಾವುದೇ ಪತ್ರ ಬಂದಿಲ್ಲ. ಆದರೂ ಮಾಧ್ಯಮಗಳಲ್ಲಿ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ ಮಾಡಿ ಬಳಿಕ ಮಾತನಾಡುತ್ತಿದ್ದ ಸಂದರ್ಭದಲ್ಲಿ 7 ಬಾರಿ ಅವರ ಮೇಲೆ ಲೇಸರ್ ಗ್ರೀನ್ ಲೈಟ್ ಬಿದ್ದಿದೆ ಎಂದು ವರದಿಯಾಗಿದೆ. ಆದರೆ ಈ ಲೇಸರ್ ಲೈಟ್ ಎಐಸಿಸಿಯ ಛಾಯಾಗ್ರಾಹಕ ಬಳಕೆ ಮಾಡಿದ್ದ ಮೊಬೈಲ್ ಕ್ಯಾಮೆರಾದ ಬೆಳಕು ಎಂದು ಗೃಹ ಸಚಿವಾಲಯ ಸ್ಪಷ್ಟಪಡಿಸಿದೆ.

    ಕಾಂಗ್ರೆಸ್ ಮಾಡಿದ ಆರೋಪದಂತೆ ರಕ್ಷಣೆ ನೀಡುವಲ್ಲಿ ಯಾವುದೇ ರೀತಿಯ ಲೋಪ ಆಗಿಲ್ಲ. ಸೂಕ್ತ ವ್ಯವಸ್ಥೆಗಳನ್ನೇ ಸಿದ್ಧಪಡಿಸಿಕೊಂಡೇ ಎಲ್ಲಾ ರೀತಿಯ ಕ್ರಮಕೈಗೊಳ್ಳಲಾಗಿತ್ತು. ವಿಡಿಯೋವನ್ನು ಕೂಲಂಕಷವಾಗಿ ಪರಿಶೀಲನೆ ನಡೆಸಿದ ವೇಳೆ ಅದು ಮೊಬೈಲ್ ಕ್ಯಾಮೆರಾ ಬೆಳಕು ಎಂಬುವುದು ತಿಳಿದು ಬಂದಿದೆ. ಎಐಸಿಸಿ ಛಾಯಾಗ್ರಾಹಕ ಮೊಬೈಲ್ ಫೋನ್ ಬಳಿಸಿ ಶೂಟ್ ನಡೆಸುತ್ತಿದ್ದದ್ದು ಖಚಿತವಾಗಿದ್ದು ವಿಶೇಷ ರಕ್ಷಣಾ ಪಡೆಯ ನಿರ್ದೇಶಕರು ಕೂಡ ಈ ವಿಚಾರವನ್ನು ತಿಳಿಸಿದ್ದಾರೆ ಸಚಿವಾಲಯ ಸ್ಪಷ್ಟನೆ ನೀಡಿದೆ.

    ಕಾಂಗ್ರೆಸ್ ಪತ್ರದಲ್ಲಿ ಏನಿತ್ತು?
    ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಉತ್ತರ ಪ್ರದೇಶದ ಅಮೇಥಿಯಲ್ಲಿ ಅಪಾಯವಿದ್ದು, ರ್ಯಾಲಿ ವೇಳೆ ಅವರ ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂದು ಕಾಂಗ್ರೆಸ್ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದೆ ಎಂದು ವರದಿಯಾಗಿತ್ತು.

    ಕಾಂಗ್ರೆಸ್ ಬರೆದಿರುವ ಪತ್ರದಲ್ಲಿ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ ಮಾಡಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ಸಂದರ್ಭದಲ್ಲಿ 7 ಬಾರಿ ಅವರ ಮೇಲೆ ಲೇಸರ್ ಗ್ರೀನ್ ಲೈಟ್ ಬಿದ್ದಿದೆ ಎಂದು ಉಲ್ಲೇಖಿಸಿತ್ತು. ಈ ಬಗ್ಗೆ ತನಿಖೆ ನಡೆಸಬೇಕು ಹಾಗೂ ರಾಹುಲ್ ಅವರಿಗೆ ಸೂಕ್ತ ಭದ್ರತೆ ನೀಡಬೇಕು ಎಂದು ತಿಳಿಸಿತ್ತು.

    ಲೇಸರ್ ಗ್ರೀನ್ ಲೈಟ್ ರಾಹುಲ್ ಗಾಂಧಿ ಅವರ ತಲೆ ಮೇಲೆ ಸುಮಾರು 7 ಬಾರಿ ಅತಿ ಕಡಿಮೆ ಅವಧಿಯಲ್ಲಿ ಬಿದ್ದಿರುವುದು ದೃಢವಾಗಿದೆ. ಅಲ್ಲದೇ ದೇವಾಲಯದ ಭೇಟಿ ಸಂದರ್ಭದಲ್ಲಿ ಅವರ ಎಡಭಾಗದ ತಲೆ ಮೇಲೆ 2 ಬಾರಿ ಲೇಸರ್ ಬೆಳಕು ಕಾಣಿಸಿತ್ತು ಎಂದು ವಿವರಿಸಲಾಗಿದೆ. ಈ ಪತ್ರದಲ್ಲಿ ಅಹ್ಮದ್ ಪಟೇಲ್, ಜೈರಾಮ್ ರಮೇಶ್, ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಸಹಿ ಇತ್ತು.

  • ಕಾಂಗ್ರೆಸ್, ಎಸ್‍ಪಿ, ಬಿಎಸ್‍ಪಿ ಅಲಿ ಹೊಂದಿದ್ರೆ, ನಾವು ಭಜರಂಗಬಲಿ ಹೊಂದಿದ್ದೇವೆ: ಯೋಗಿ ಆದಿತ್ಯನಾಥ್

    ಕಾಂಗ್ರೆಸ್, ಎಸ್‍ಪಿ, ಬಿಎಸ್‍ಪಿ ಅಲಿ ಹೊಂದಿದ್ರೆ, ನಾವು ಭಜರಂಗಬಲಿ ಹೊಂದಿದ್ದೇವೆ: ಯೋಗಿ ಆದಿತ್ಯನಾಥ್

    ಲಕ್ನೋ: ವಿವಾದಾತ್ಮಕ ಹೇಳಿಕೆ ಮೂಲಕ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸುದ್ದಿಯಾಗುತ್ತಿದ್ದಾರೆ. ಭಾರತೀಯ ಸೈನ್ಯ ‘ಮೋದಿ ಸೈನ್ಯ’, ಮುಸ್ಲಿಂ ಲೀಗ್ ‘ವೈರಸ್’ ಎಂದು ಹೇಳಿದ್ದ ಅವರು ಈಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಉತ್ತರ ಪ್ರದೇಶದ ಮೀರತ್‍ನಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್, ಸಮಾಜವಾದಿ ಪಕ್ಷ (ಎಸ್‍ಪಿ) ಹಾಗೂ ಬಹುಜನ ಸಮಾಜ ಪಕ್ಷ (ಬಿಎಸ್‍ಪಿ) ಅಲಿ ಮೇಲೆ ನಂಬಿಕೆ ಹೊಂದಿದ್ದಾರೆ. ಆದರೆ ನಾವು ಭಜರಂಗಬಲಿ ಮೇಲೆ ನಂಬಿಕೆ ಇಟ್ಟುಕೊಂಡಿದ್ದೇವೆ. ಹೀಗಾಗಿ ಅವರು ಅಲಿಯನ್ನು ಹೊಂದಿದ್ದರೆ, ನಾವು ಭಜರಂಗಬಲಿಯನ್ನು ಹೊಂದಿದ್ದೇವೆ ಎಂದು ಹೇಳಿದ್ದಾರೆ. ಇದನ್ನು ಓದಿ: ಯೋಗಿ ಆದಿತ್ಯನಾಥ್‍ಗೆ ಚುನಾವಣಾ ಆಯೋಗ ಎಚ್ಚರಿಕೆ

    ಹಿಂದೂ ಧರ್ಮದಲ್ಲಿ ಭಜರಂಗಬಲಿ ಅಂದ್ರೆ ಹನುಮಂತ. ಮುಸ್ಲಿಂ ಧರ್ಮದಲ್ಲಿ ಅಲಿ ಅಂದ್ರೆ ಅಲ್ಲಾ. ಬಿಎಸ್‍ಪಿ ನಾಯಕಿ ಮಾಯಾವತಿ ಅವರು ಕಳೆದ ಎರಡು ಹಿಂದಷ್ಟೇ, ಮುಸ್ಲಿಂ ಸಮುದಾಯದ ಬಳಿ ಮತಯಾಚನೆ ಮಾಡಿದ್ದರು. ಈ ವೇಳೆ ನೀಡಿದ ಹೇಳಿಕೆಯಿಂದ ಮಾಯಾವತಿ ಅವರು, ನೀತಿ ಸಂಹಿತೆ ಉಲ್ಲಂಘನೆ ಆರೋಪ ಎದುರಿಸುತ್ತಿದ್ದಾರೆ. ಮಾಯಾವತಿ ಅವರು ಮುಸ್ಲಿಮರ ಬಳಿ ಮತಯಾಚನೆ ಮಾಡಿದ್ದರಿಂದಾಗಿ ಯೋಗಿ ಆದಿತ್ಯನಾಥ್ ತಿರುಗೇಟು ಕೊಟ್ಟಿದ್ದಾರೆ ಎನ್ನಲಾಗುತ್ತಿದೆ. ಇದನ್ನು ಓದಿ: ರಾಹುಲ್ ಗಾಂಧಿಗೆ ಮುಸ್ಲಿಂ ಲೀಗ್ ವೈರಸ್ ತಗುಲಿದೆ: ಯೋಗಿ ಆದಿತ್ಯನಾಥ್

    ಮಾಯಾವತಿ ಹೇಳಿದ್ದೇನು?:
    ಉತ್ತರ ಪ್ರದೇಶದ ದಿಯೋಬಂದ್‍ನಲ್ಲಿ ಭಾನುವಾರ ನಡೆದಿದ್ದ ಸಮಾಜವಾದಿ ಪಕ್ಷ (ಎಸ್‍ಪಿ) ಹಾಗೂ ಬಿಎಸ್‍ಪಿ ಜಂಟಿ ಸಮಾವೇಶದಲ್ಲಿ ಮಾತನಾಡಿದ್ದ ಮಾಯಾವತಿ ಅವರು, ಕಾಂಗ್ರೆಸ್ಸಿಗೆ ಮುಸ್ಲಿಮರು ಮತ ಹಾಕಬೇಡಿ. ಬಿಜೆಪಿಗೆ ಅನುಕೂಲ ಕಲ್ಪಿಸಲು ಕಾಂಗ್ರೆಸ್ ಕೆಲವೆಡೆ ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಮುಸ್ಲಿಮರು ಕಾಂಗ್ರೆಸ್‍ಗೆ ಮತ ಹಾಕಿದರೆ ಮತ ವಿಭಜನೆಯಾಗಿ ಬಿಜೆಪಿಗೆ ಅನುಕೂಲವಾಗಲಿದೆ ಎಂದು ಮನವಿ ಮಾಡಿಕೊಂಡಿದ್ದರು.

    ಕೇಂದ್ರದ ಬಿಜೆಪಿ ಸರ್ಕಾರವು ಜನರಲ್ಲಿ ದ್ವೇಷದ ಬೀಜ ಬಿತ್ತುತ್ತಿದೆ. ಹೀಗಾಗಿ ಈ ಬಾರಿ ಬಿಜೆಪಿ ಅಧಿಕಾರ ಕಳೆದುಕೊಳ್ಳಲಿದೆ. ಕಾಂಗ್ರೆಸ್‍ಗೆ ಮತ ನೀಡುವ ಮೂಲಕ ಮುಸ್ಲಿಮರು ಪರೋಕ್ಷವಾಗಿ ಬಿಜೆಪಿ ಪರವಾಗಿ ನಿಲ್ಲದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದ್ದರು.

  • ಬಿರಿಯಾನಿಗಾಗಿ ಬಡಿದಾಡಿಕೊಂಡ ಕೈ ಕಾರ್ಯಕರ್ತರು- 9 ಮಂದಿ ಅರೆಸ್ಟ್

    ಬಿರಿಯಾನಿಗಾಗಿ ಬಡಿದಾಡಿಕೊಂಡ ಕೈ ಕಾರ್ಯಕರ್ತರು- 9 ಮಂದಿ ಅರೆಸ್ಟ್

    ಲಕ್ನೋ: ಬಿರಿಯಾನಿ ಹಂಚುವ ವಿಚಾರವಾಗಿ ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಹೊಡೆದಾಡಿಕೊಂಡ ಘಟನೆ ಉತ್ತರ ಪ್ರದೇಶದ ಮುಜಾಫುರ್ ನಗರದಲ್ಲಿ ನಡೆದಿದೆ.

    ಬಿಜ್ನೋರ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ನಾಸಿರ್ ಉದ್ದಿನ್ ಸಿದ್ದಿಕಿ ಅವರ ಪರ ಪ್ರಚಾರ ಮಾಡುವ ನಿಟ್ಟಿನಲ್ಲಿ ನಡೆದಿದ್ದ ಸಭೆಯಲ್ಲಿ ಈ ಘಟನೆ ನಡೆದಿದೆ. ಕಾರ್ಯಕರ್ತರ ಮಧ್ಯೆ ಮಾರಾಮಾರಿ ಆಗಿದ್ದು, ಅನೇಕರು ಗಾಯಗೊಂಡಿದ್ದಾರೆ. ಘಟನೆಯ ಸಂಬಂಧ 9 ಜನರನ್ನು ಪೊಲೀಸರು ಬಂಧಿಸಿದ್ದಾರೆ.

    ಆಗಿದ್ದೇನು?:
    ಮಾಜಿ ಶಾಸಕ ಮೌಲಾನ ಜಮೀಲ್ ಅವರು, ಕೆಲ ದಿನಗಳ ಹಿಂದಷ್ಟೇ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಹೀಗಾಗಿ ಬಿಜ್ನೋರ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ನಾಸಿರ್ ಉದ್ದಿನ್ ಸಿದ್ದಿಕಿ ಪರ ಪ್ರಚಾರ ಮಾಡುವ ಕುರಿತಾಗಿ ಕಾರ್ಯಕರ್ತರ ಸಭೆ ಕರೆದಿದ್ದರು. ಸಭೆಯ ಬಳಿಕ ಬಿರಿಯಾನಿ ವ್ಯವಸ್ಥೆ ಕೂಡ ಮಾಡಿದ್ದರು.

    ಬಿರಿಯಾನಿ ಹಂಚುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ವಾಗ್ದಾಳಿ ನಡೆದಿದೆ. ಬಳಿಕ ಪರಸ್ಪರ ಕೈ ಕೈ ಮಿಲಾಯಿಸಿದ್ದು, ಪರಿಸ್ಥಿತಿ ಕೈಮಿರಿತ್ತು. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಎರಡೂ ಗುಂಪನ್ನು ಚದುರಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ ಎಂದು ವರದಿಯಾಗಿದೆ.

    ಮಾಜಿ ಶಾಸಕ ಮೌಲಾನ ಜಮೀಲ್ ಹಾಗೂ ಪುತ್ರ ಸೇರಿದಂತೆ 34 ಜನರ ಮೇಲೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ. ಈ ಸಂಬಂಧ 9 ಜನರನ್ನು ಬಂಧಿಸಿರುವ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.

    ಮೀರಾಪುರ ವಿಧಾನಸಭಾ ಕ್ಷೇತ್ರದಿಂದ 2012ರ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷದಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದರು. ಆದರೆ ಕಳೆದ ವಾರ ಬಿಎಸ್‍ಪಿ ತೊರೆದು ಕಾಂಗ್ರೆಸ್ ಸೇರಿಕೊಂಡಿದ್ದರು.

  • ರಾಹುಲ್ ಗಾಂಧಿಗೆ ಮುಸ್ಲಿಂ ಲೀಗ್ ವೈರಸ್ ತಗುಲಿದೆ: ಯೋಗಿ ಆದಿತ್ಯನಾಥ್

    ರಾಹುಲ್ ಗಾಂಧಿಗೆ ಮುಸ್ಲಿಂ ಲೀಗ್ ವೈರಸ್ ತಗುಲಿದೆ: ಯೋಗಿ ಆದಿತ್ಯನಾಥ್

    ಲಕ್ನೋ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಮುಸ್ಲಿಂ ಲೀಗ್ ‘ವೈರಸ್’ ತಗುಲಿದ್ದು, ಅವರು ಹೆಚ್ಚು ಕಾಲ ಉಳಿಯುವುದಿಲ್ಲ ಎಂದು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

    ಟ್ವೀಟ್ ಮೂಲಕ ರಾಹುಲ್ ಗಾಂಧಿ ವಿರುದ್ಧ ಯೋಗಿ ಆದಿತ್ಯನಾಥ್ ವ್ಯಂಗ್ಯವಾಡಿದ್ದು, ಮುಸ್ಲಿಂ ಲೀಗ್ ವೈರಸ್ ಇದ್ದಂತೆ. ಈ ಸೋಂಕು ತಗಲಿದವರು ಯಾರೂ ಉಳಿದಿಲ್ಲ. ಕಾಂಗ್ರೆಸ್‍ಗೆ ಈಗಾಗಲೇ ಮುಸ್ಲಿಂ ಲೀಗ್ ಸೋಂಕು ತಗುಲಿದೆ. ಮುಸ್ಲಿಂ ಲೀಗ್ ವೈರಸ್ ತಗುಲಿದ ರಾಹುಲ್ ಗಾಂಧಿ ಅವರು ಗೆಲುವು ಸಾಧಿಸಿದರೆ ದೇಶದ ಪರಿಸ್ಥಿತಿ ಏನಾಗುತ್ತದೆ. ಈ ವೈರಸ್ ದೇಶಾದ್ಯಂತ ಹರಡುತ್ತದೆ ಎಂದು ದೂರಿದ್ದಾರೆ.

    ‘1857ರ ಸ್ವಾತಂತ್ರ್ಯ ಸಂಗ್ರಾಮದಲ್ಲಿ ದೇಶ ಜನರು ಮಂಗಲ್ ಪಾಂಡೆ ಅವರ ಜೊತೆಗೆ ಸೇರಿ ಬ್ರಿಟಿಷರ ವಿರುದ್ಧ ಹೋರಾಡಿದ್ದರು. ಆದರೆ ಆಗ ಹುಟ್ಟಿಕೊಂಡ ಈ ಮುಸ್ಲಿಂ ಲೀಗ್ ವೈರಸ್ ದೇಶಾದ್ಯಂತ ಹರಡಿ ರಾಷ್ಟ್ರ ವಿಭಜನೆಗೆ ಕಾರಣವಾಯಿತು ಎಂದು ಹೇಳಿದ್ದಾರೆ.

    ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಉಗ್ರರಿಗೆ ಬಿರಿಯಾನಿ ಕೊಡುತ್ತಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಉಗ್ರರಿಗೆ ಬಾಂಬ್, ಬುಲೆಟ್ ತಿನಿಸುತ್ತಿದೆ ಎಂದು ಹೇಳಿದರು.

    ರಾಹುಲ್ ಗಾಂಧಿ ಅವರು ಕೇರಳದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ. ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್‍ಗೆ ಮುಸ್ಲಿಂ ಲೀಗ್ ಸಾಂಪ್ರದಾಯಿಕ ಮಿತ್ರ ಪಕ್ಷವಾಗಿದೆ. ಹೀಗಾಗಿ ಮುಸ್ಲಿಂ ಲೀಗ್ ಕಾರ್ಯಕರ್ತರು ರಾಹುಲ್ ಗಾಂಧಿ ನಾಮಪತ್ರದ ದಿನದಂದು ನಡೆದ ಬೃಹತ್ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಜೊತೆಗೆ ತಮ್ಮ ಪಕ್ಷದ ಹಸಿರು ಬಾವುಟಗಳನ್ನು ಹಿಡಿದು ಸಂಭ್ರಮಿಸಿದ್ದರು.