Tag: uttar pradesh

  • ಮಹಾ ಕುಂಭಮೇಳದಲ್ಲಿ ಕಾಲ್ತುಳಿತ – ಮೃತರ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ ಘೋಷಿಸಿದ ಸಿಎಂ ಯೋಗಿ

    ಮಹಾ ಕುಂಭಮೇಳದಲ್ಲಿ ಕಾಲ್ತುಳಿತ – ಮೃತರ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ ಘೋಷಿಸಿದ ಸಿಎಂ ಯೋಗಿ

    – ನ್ಯಾಯಾಂಗ ತನಿಖೆಗೆ ಆದೇಶ

    ಪ್ರಯಾಗ್‌ರಾಜ್‌: ಮಹಾ ಕುಂಭ ಮೇಳದಲ್ಲಿ ಕಾಲ್ತುಳಿತದಲ್ಲಿ (Maha Kumbh Stampede) ಮೃತಪಟ್ಟವರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರವನ್ನು ಸಿಎಂ ಯೋಗಿ ಆದಿತ್ಯನಾಥ್‌ (Yogi Adityanath) ಘೋಷಿಸಿದ್ದಾರೆ.

    ಕಾಲ್ತುಳಿತದಿಂದ ಸುಮಾರು 30 ಸಾವುಗಳು ಸಂಭವಿಸಿವೆ. ಈ ಘಟನೆಯಿಂದ ನನಗೆ ತುಂಬಾ ದುಃಖವಾಗಿದೆ. ಕಾಲ್ತುಳಿತ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಈ ಸಮಯದಲ್ಲಿ ಅವರು ತುಂಬಾ ಭಾವುಕರಾಗಿ ಕಾಣುತ್ತಿದ್ದರು.

    ಘಟನೆಯ ನ್ಯಾಯಾಂಗ ತನಿಖೆಗಾಗಿ ನಾವು ಮೂವರು ಸದಸ್ಯರ ಸಮಿತಿಯನ್ನು ರಚಿಸಿದ್ದೇವೆ. ಇದರಲ್ಲಿ ನ್ಯಾಯಮೂರ್ತಿ ಹರ್ಷ ಕುಮಾರ್, ಮಾಜಿ ಡಿಜಿ ವಿಕೆ ಗುಪ್ತಾ ಮತ್ತು ನಿವೃತ್ತ ಐಎಎಸ್ ಡಿಕೆ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಆಯೋಗವನ್ನು ರಚಿಸಲಾಗಿದೆ. ನ್ಯಾಯಾಂಗ ಆಯೋಗವು ಒಂದು ತಿಂಗಳೊಳಗೆ ತನ್ನ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಲಿದೆ. ಈ ನಿಟ್ಟಿನಲ್ಲಿ, ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿ ಸ್ವತಃ ಪ್ರಯಾಗ್‌ರಾಜ್‌ಗೆ ಭೇಟಿ ನೀಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

    ಪ್ರಯಾಗ್‌ರಾಜ್‌ನ (Prayagraj) ಆಸ್ಪತ್ರೆಯಲ್ಲಿ 36 ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಅಖಾರ ರಸ್ತೆಯಲ್ಲಿ ಜನಸಮೂಹ ಬ್ಯಾರಿಕೇಡ್‌ಗಳನ್ನು ಮುರಿದ ಕಾರಣ ಕಾಲ್ತುಳಿತ ಸಂಭವಿಸಿದೆ. ಪೊಲೀಸರು, ಎನ್‌ಡಿಆರ್‌ಎಫ್ ಮತ್ತು ರಕ್ಷಣಾ ಸಿಬ್ಬಂದಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದರು ಎಂದು ತಿಳಿಸಿದ್ದಾರೆ.

    ಮೌನಿ ಅಮಾವಾಸ್ಯೆಯಂದು ಪವಿತ್ರ ಸ್ನಾನ ಮಾಡಲು ಮಂಗಳವಾರ ಸಂಜೆ 7 ಗಂಟೆಯಿಂದಲೇ ಪ್ರಯಾಗ್‌ರಾಜ್‌ನಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದ್ದರು. ಭಕ್ತರ ಆಗಮನಕ್ಕಾಗಿ ನಾವು ಸಾಕಷ್ಟು ವ್ಯವಸ್ಥೆಗಳನ್ನು ಮಾಡಿದ್ದೆವು. ನಾವು ಅದನ್ನು ಪೊಲೀಸರ ಮೂಲಕ ಪ್ರತ್ಯೇಕವಾಗಿ ತನಿಖೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

    ಇಂದು ಪ್ರಯಾಗ್‌ರಾಜ್‌ಗೆ 8 ಕೋಟಿ ಜನ ಬಂದಿದ್ದರು. ಹತ್ತಿರದ ಜಿಲ್ಲೆಗಳ ಜನರು ಇಲ್ಲಿಗೆ ಬರುವುದನ್ನು ಸಹ ತಡೆಯಲಾಯಿತು. ಇಷ್ಟೊಂದು ಭಾರೀ ಒತ್ತಡ ಇದೇ ಮೊದಲ ಬಾರಿಗೆ ಕಂಡುಬಂದಿದೆ ಎಂದು ಅವರು ತಿಳಿಸಿದ್ದಾರೆ.

  • ದಟ್ಟ ಮಂಜಿನಿಂದ ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ 50 ವಾಹನಗಳ ನಡುವೆ ಅಪಘಾತ!

    ದಟ್ಟ ಮಂಜಿನಿಂದ ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ 50 ವಾಹನಗಳ ನಡುವೆ ಅಪಘಾತ!

    – 6 ಕ್ಕೂ ಹೆಚ್ಚು ಮಂದಿಗೆ ಗಾಯ

    ಲಕ್ನೋ: ದೆಹಲಿ ಮೀರತ್ ಎಕ್ಸ್‌ಪ್ರೆಸ್‌ವೇನಲ್ಲಿ (Delhi-Meerut Expressway) ದಟ್ಟ ಮಂಜು ಕವಿದ ಪರಿಣಾಮ 50 ವಾಹನಗಳ ನಡುವೆ ಸರಣಿ ಅಪಘಾತ (Accident ) ಸಂಭವಿಸಿದ್ದು, ಆರಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಅಪಘಾತದಿಂದಾಗಿ ಸಂಚಾರ ದಟ್ಟಣೆ ಉಂಟಾಗಿದ್ದು, ವಿಡಿಯೋ ವೈರಲ್‌ ಆಗಿದೆ.

    ಪೊಲೀಸರು ಸಂಚಾರ ದಟ್ಟಣೆಯನ್ನು ತೆರವುಗೊಳಿಸಿ, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.

    ಭೋಜ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್, ಈ ಅಪಘಾತದಲ್ಲಿ ಯಾವುದೇ ಸಾವುನೋವುಗಳು ಸಂಭವಿಸಿಲ್ಲ.

    ದಟ್ಟವಾದ ಮಂಜಿನಿಂದಾಗಿ ಈ ಅಪಘಾತ ಸಂಭವಿಸಿದೆ. ಇದರಿಂದಾಗಿ ಸಂಚಾರ ದಟ್ಟಣೆ ಉಂಟಾಗಿತ್ತು. ಅಪಘಾತಕ್ಕೊಳಗಾದ ವಾಹನಗಳನ್ನು ತೆರವುಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

  • ಮಹಾ ಕುಂಭಮೇಳದಲ್ಲಿ ಕಾಲ್ತುಳಿತ | ಕನ್ನಡಿಗರ ಸಾವಿನ ಬಗ್ಗೆ ಯುಪಿ ಸರ್ಕಾರದಿಂದ ಅಧಿಕೃತ ಮಾಹಿತಿ ಇಲ್ಲ: ಕೃಷ್ಣ ಬೈರೇಗೌಡ

    ಮಹಾ ಕುಂಭಮೇಳದಲ್ಲಿ ಕಾಲ್ತುಳಿತ | ಕನ್ನಡಿಗರ ಸಾವಿನ ಬಗ್ಗೆ ಯುಪಿ ಸರ್ಕಾರದಿಂದ ಅಧಿಕೃತ ಮಾಹಿತಿ ಇಲ್ಲ: ಕೃಷ್ಣ ಬೈರೇಗೌಡ

    ಬೆಂಗಳೂರು: ಪ್ರಯಾಗ್‌ರಾಜ್ (Prayagraj) ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ದುರಂತದಲ್ಲಿ (Maha Kumbh Stampede) ಕರ್ನಾಟಕದವರಿಗೆ ಏನಾದರೂ ಪ್ರಾಣಾಪಾಯ ಆಗಿದೆಯೇ ಎಂದು ಉತ್ತರ ಪ್ರದೇಶ (Uttar Pradesh) ಸರ್ಕಾರದ ಮಾಹಿತಿ ಕೇಳಿದ್ದೇವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byre Gowda) ಹೇಳಿದ್ದಾರೆ.

    ನಗರದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಉತ್ತರ ಪ್ರದೇಶದ ಸರ್ಕಾರದ ಪ್ರಕೃತಿ ವಿಕೋಪ ನಿರ್ವಹಣಾ ವಿಭಾಗದ ಜೊತೆ ಸಂಪರ್ಕದಲ್ಲಿ ಇದ್ದೇವೆ. ಕಂದಾಯ ಇಲಾಖೆಯ ಎಸಿಎಸ್ ರಶ್ಮಿಯವರು ಈಗಾಗಲೇ ಯುಪಿ ಸರ್ಕಾರದ ಜೊತೆ ಮಾತನಾಡಿದ್ದಾರೆ. ಒಂದಿಬ್ಬರಿಗೆ ಗಾಯ ಆಗಿದೆ ಎಂಬ ಮಾಹಿತಿ ಇದೆ. ಯುಪಿ ಸರ್ಕಾರದಿಂದ ಇಲ್ಲಿಯ ತನಕ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ಯುಪಿ ಸರ್ಕಾರದಿಂದ ಅಧಿಕೃತ ಮಾಹಿತಿಗೆ ಎದುರು ನೋಡುತ್ತಿದ್ದೇವೆ. ಕನ್ನಡಿಗರಿಗೆ ಏನಾದರೂ ತೊಂದರೆ ಆಗಿರುವ ಮಾಹಿತಿ ಬಂದರೆ, ಅವಶ್ಯಕತೆ ಇದ್ದರೆ ಅಧಿಕಾರಿಗಳ ತಂಡವನ್ನ ಪ್ರಯಾಗ್‌ರಾಜ್‌ಗೆ ಕಳುಹಿಸುತ್ತೇವೆ. ನಮ್ಮಲ್ಲೂ ವಿಪತ್ತು ‌ನಿರ್ವಹಣಾ ಸೆಲ್ ಇದೆ. ಮಾನಿಟರ್ ಮಾಡುತ್ತಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

  • ಮಹಾ ಕುಂಭಮೇಳದಲ್ಲಿ ಕಾಲ್ತುಳಿತ – ತಾಯಿ, ಮಗಳು ಸೇರಿ ಬೆಳಗಾವಿಯ ನಾಲ್ವರ ದುರ್ಮರಣ

    ಮಹಾ ಕುಂಭಮೇಳದಲ್ಲಿ ಕಾಲ್ತುಳಿತ – ತಾಯಿ, ಮಗಳು ಸೇರಿ ಬೆಳಗಾವಿಯ ನಾಲ್ವರ ದುರ್ಮರಣ

    ಬೆಳಗಾವಿ: ಮಹಾ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ (Maha Kumbh Stampede) ಬೆಳಗಾವಿಯ (Belagavi) ತಾಯಿ-ಮಗಳು ಸೇರಿದಂತೆ ನಾಲ್ವರು ಸಾವಿಗೀಡಾಗಿದ್ದಾರೆ.

    ಮೃತರನ್ನು ವಡಗಾವಿ ನಿವಾಸಿ ಜ್ಯೋತಿ ಹತ್ತರವಾಠ್ (50) ಮೇಘಾ ಹತ್ತರವಾಠ್, ಅರುಣ್ ಕೋಪರ್ಡೆ ಹಾಗೂ ಮಹಾದೇವಿ ಎಂದು ಗುರುತಿಸಲಾಗಿದೆ. ಕುಂಬಮೇಳದಲ್ಲಿ ಕಾಲ್ತುಳಿತದ ಬಳಿಕ ನಾಲ್ವರನ್ನು ಪ್ರಯಾಗ್‍ರಾಜ್‍ನ (Prayagraj) ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ.

    ಬೆಳಗಾವಿಯಲ್ಲಿರುವ ಕುಟುಂಬಸ್ಥರಿಗೆ ಇಂದು (ಬುಧವಾರ) ಬೆಳಗ್ಗೆಯಿಂದ ಇಬ್ಬರು ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಫೋನ್‌ ರಿಂಗ್ ಆಗುತ್ತಿದ್ದರೂ, ರಿಸೀವ್ ಮಾಡದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆತಂಕದಲ್ಲಿದ್ದರು.

    ಮೂರು ದಿನಗಳ ಹಿಂದೆ ಸಾಯಿರಥ ಟ್ರಾವೆಲ್ ಏಜೆನ್ಸಿ ಮೂಲಕ 13 ಜನರ ತಂಡದಲ್ಲಿ ಅವರು ತೆರಳಿದ್ದರು ಎಂದು ತಿಳಿದು ಬಂದಿದೆ. ಕಾಲ್ತುಳಿತದಲ್ಲಿ ಸರೋಜಿನಿ ನಡುವಿನಹಳ್ಳಿ, ಕಾಂಚನ್ ಕೋಪಾರ್ಡೆ ಸೇರಿದಂತೆ ಇನ್ನೂ ಕೆಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

  • Uttar Pradesh| ಧಾರ್ಮಿಕ ಉತ್ಸವದಲ್ಲಿ ವೇದಿಕೆ ಕುಸಿದು ಐವರು ಸಾವು – 40 ಮಂದಿಗೆ ಗಾಯ

    Uttar Pradesh| ಧಾರ್ಮಿಕ ಉತ್ಸವದಲ್ಲಿ ವೇದಿಕೆ ಕುಸಿದು ಐವರು ಸಾವು – 40 ಮಂದಿಗೆ ಗಾಯ

    ಲಕ್ನೋ: ಜೈನ ನಿರ್ವಾಣ ಉತ್ಸವದಲ್ಲಿ ವೇದಿಕೆ ಕುಸಿದು 5 ಮಂದಿ ಸಾವನ್ನಪ್ಪಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 40 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಬಾಗ್‌ಪತ್‌ನಲ್ಲಿ (Baghpat) ನಡೆದಿದೆ.

    ಬಾಗ್‌ಪತ್‌ನ ಬಾಗೌರ್‌ನಲ್ಲಿ ನಡೆದ ಲಡ್ಡೂ ಸಮಾರಂಭದ (Nirvana Laddu Parv) ವೇಳೆ ಬಿದಿರು ಮತ್ತು ಮರದಿಂದ ಮಾಡಲಾಗಿದ್ದ ತಾತ್ಕಾಲಿಕ ವೇದಿಕೆ ಕುಸಿದು ಬಿದ್ದು ಈ ಘಟನೆ ನಡೆದಿದೆ. ಇದನ್ನೂ ಓದಿ: ಮದ್ವೆಯಾಗಿ 12 ವರ್ಷದ ಬಳಿಕ ಗರ್ಭವತಿ – ಮಗುವಿಗೆ ಜನ್ಮ ನೀಡಿದ ಬಳಿಕ ಬಾಣಂತಿ ಸಾವು

    ಪೊಲೀಸ್ ಅಧಿಕಾರಿಗಳ ಪ್ರಕಾರ, ಜೈನ ಸನ್ಯಾಸಿಗಳ ಸಮ್ಮುಖದಲ್ಲಿ ಭಗವಾನ್ ಆದಿನಾಥನಿಗೆ ಲಡ್ಡೂಗಳನ್ನು ಅರ್ಪಿಸಲು ನೂರಾರು ಭಕ್ತರು ಇಂದು ಬೆಳಗ್ಗೆ ಸ್ಥಳಕ್ಕೆ ತಲುಪಿದರು. ಭಕ್ತರಿಗಾಗಿ ಸಿದ್ಧಪಡಿಸಲಾದ ತಾತ್ಕಾಲಿಕ ವೇದಿಕೆಯು ಅತಿಯಾದ ಭಾರದಿಂದ ಕುಸಿದಿದ್ದು, ಹತ್ತಾರು ಜನರು ಅದರ ಕೆಳಗೆ ಸಿಕ್ಕಿಬಿದ್ದಿದ್ದಾರೆ. ಇದನ್ನೂ ಓದಿ: Microfinance | ಮನೆ, ಶಾಲೆಗೆ ಬಂದು ಟಾರ್ಚರ್‌ – ಶಿಕ್ಷಕಿಯ ಶವ ಎರಡು ದಿನದ ನಂತರ ಪತ್ತೆ

    ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಅಧಿಕಾರಿಗಳು ಹೆಚ್ಚಿನ ಪೊಲೀಸ್ ಬಂದೋಬಸ್ತ್‌ನೊಂದಿಗೆ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು. ಜಿಲ್ಲಾಸ್ಪತ್ರೆಯ ಅಧಿಕಾರಿಗಳ ಪ್ರಕಾರ, ಸ್ಥಳದಲ್ಲಿ ಈಗಾಗಲೇ ಅಂಬುಲೆನ್ಸ್ ಇದ್ದ ಕಾರಣ ಗಾಯಾಳುಗಳನ್ನು ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಇದನ್ನೂ ಓದಿ: Tumakuru| 4.66 ಲಕ್ಷಕ್ಕೆ 7.20 ಲಕ್ಷ ಬಡ್ಡಿ – ಹೃದಯಾಘಾತದಿಂದ ವ್ಯಕ್ತಿ ಸಾವು

    ಸುಮಾರು 30 ವರ್ಷಗಳಿಂದ ಈ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಘಟನೆಯಲ್ಲಿ ಕನಿಷ್ಠ 40 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಥಮ ಚಿಕಿತ್ಸೆ ನೀಡಿದ ನಂತರ ಇಪ್ಪತ್ತು ಜನರನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದು ಬಾಗ್‌ಪತ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಸ್ಮಿತಾ ಲಾಲ್ ಹೇಳಿದ್ದಾರೆ. ಇದನ್ನೂ ಓದಿ: MUDA Scam| ನನ್ನ, ಸಿಎಂ ಪತ್ನಿಯ ಪಾತ್ರ ಸೊನ್ನೆ: ಬೈರತಿ ಸುರೇಶ್

    ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಭಕ್ತರಿಗೆ ಚಿಕಿತ್ಸೆ ನೀಡುವಾಗ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಜಿಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಇದನ್ನೂ ಓದಿ: Kolar| ಮೊಬೈಲ್‌ನಲ್ಲಿ ರೀಲ್ಸ್ ನೋಡುತ್ತಾ ಸರ್ಕಾರಿ ಬಸ್ ಚಾಲನೆ – ವೀಡಿಯೋ ವೈರಲ್

  • ಮಹಾ ಕುಂಭಮೇಳದಲ್ಲಿ ನಡೆಯುವ ಅಮೃತ ಸ್ನಾನದ ವಿಶೇಷತೆ, ಹಿನ್ನೆಲೆ ಏನು?

    ಮಹಾ ಕುಂಭಮೇಳದಲ್ಲಿ ನಡೆಯುವ ಅಮೃತ ಸ್ನಾನದ ವಿಶೇಷತೆ, ಹಿನ್ನೆಲೆ ಏನು?

    ಕುಂಭಮೇಳವು ಪ್ರತಿ ಮೂರು ವರ್ಷಗಳಿಗೊಮ್ಮೆ ನಾಲ್ಕು ವಿಭಿನ್ನ ಸ್ಥಳಗಳಲ್ಲಿ ನಡೆಯುತ್ತದೆ. ಪ್ರತಿ 12 ವರ್ಷಗಳಿಗೊಮ್ಮೆ ಪ್ರಯಾಗರಾಜ್‌ನಲ್ಲಿ (Prayag Raj) ಮಹಾಕುಂಭವನ್ನು (Maha Kumbh Mela) ಆಯೋಜಿಸಲಾಗುತ್ತದೆ. ಆದರೆ ಈ ಬಾರಿಯ ಮಹಾಕುಂಭಮೇಳ ಬಹಳ ವಿಶೇಷವಾಗಿದ್ದು, 144 ವರ್ಷಗಳ ಬಳಿಕ ಈ ಕುಂಭಮೇಳ ನಡೆಯುತ್ತಿದೆ.

    ಈ ಬಾರಿ ಪ್ರಯಾಗರಾಜ್‌ದಲ್ಲಿ ಜನವರಿ 13 ರಿಂದ ಫೆಬ್ರವರಿ 26 ರವರೆಗೆ ಮಹಾಕುಂಭಮೇಳ ನಡೆಯುತ್ತಿದ್ದು, ದೇಶ ವಿದೇಶಗಳಿಂದ ಲಕ್ಷಾಂತರ ಆಗಮಿಸುತ್ತಿದ್ದಾರೆ. ಮಹಾಕುಂಭಮೇಳ ಕೇವಲ ಉತ್ಸವ ಮಾತ್ರವಲ್ಲ, ಸಾವಿರಾರು ವರ್ಷಗಳ ಐತಿಹ್ಯ, ಪುರಾತನ ಇತಿಹಾಸ ಹೊಂದಿರುವ ಉತ್ಸಾಹಭರಿತ ಸಾಂಸ್ಕೃತಿಕ ಕಾರ್ಯಕ್ರಮವಾಗಿದೆ. ಈ ಉತ್ಸವವು ಪ್ರಾಚೀನ ಹಿಂದೂ ಪುರಾಣ ಮತ್ತು ಭಾರತದ ಶ್ರೀಮಂತ ಧಾರ್ಮಿಕ ಪರಂಪರೆಯ ಸಾಕ್ಷಿಯಾಗಿದೆ.

    ಫೆಬ್ರವರಿ 26ರಮಹಾ ಶಿವರಾತ್ರಿವರೆಗೂ ನಡೆಯಿರುವ ಮಹಾಕುಂಭ ಮೇಳದ ಒಟ್ಟು 40 ಕೋಟಿಗೂ ಅಧಿಕ ಜನರು ಭಾಗಿಯಾಗುವ ನಿರೀಕ್ಷೆಯಿದೆ. ಇನ್ನೂ ಗಂಗಾ, ಯಮುನಾ, ಸರಸ್ವತಿ ನದಿಗಳ ಸಂಗಮದಲ್ಲಿ ಪುಣ್ಯ ಸ್ನಾನ ನಡೆಯುತ್ತಿದ್ದು, ಕೆಲವು ಪ್ರಮುಖ ದಿನಗಳಲ್ಲಿ ಪವಿತ್ರ ಸ್ನಾನಗಳು ನಡೆಯುತ್ತಿವೆ. ಈಗಾಗಲೇ ಮೂರು ದಿನಗಳ ಪೂರ್ನಗೊಂಡಿದ್ದು, ಇನ್ನೂ ಮೂರು ರೀತಿಯ ಪುಣ್ಯ ಸ್ನಾನಗಳು ಬಾಕಿಯಿವೆ.

    ಸಂಗಮದಲ್ಲಿ ಶಾಹಿಸ್ನಾನ:
    ಜನವರಿ 13-ಪೌಷ ಪೂರ್ಣಿಮಾ ಸ್ನಾನ (ಉದ್ಘಾಟನಾ ದಿನ)
    ಜನವರಿ 15 -ಮಕರ ಸಂಕ್ರಾಂತಿ ಸ್ನಾನ
    ಜನವರಿ 29 -ಮೌನಿ ಅಮಾವಾಸ್ಯೆ ಸ್ನಾನ (ರಾಜ ಸ್ನಾನ/ಶಾಹಿ ಸ್ನಾನ)
    ಫೆಬ್ರವರಿ 3 – ವಸಂತ ಪಂಚಮಿ ಸ್ನಾನ (ರಾಜ ಸ್ನಾನ/ಶಾಹಿ ಸ್ನಾನ)
    ಫೆಬ್ರವರಿ 12- ಮಾಘಿ ಪೂರ್ಣಿಮಾ ಸ್ನಾನ
    ಫೆಬ್ರವರಿ 26- ಮಹಾ ಶಿವರಾತ್ರಿ ಸ್ನಾನ (ಸಮಾಪ್ತಿಯ ದಿನ)

    ಕೊನೆಯ ದಿನ ಫೆ.26 ರಂದು ನಡೆಯಲಿರುವ ಅಮೃತ ಸ್ನಾನದಲ್ಲಿ ಕೋಟ್ಯಂತರ ಜನರು ಭಾಗಿಯಾಗುವ ನೀರಿಕ್ಷೆಯಿದೆ. ಏಕೆಂದರೆ ಇದು ಕುಂಭಮೇಳದ ಕೊನೆಯ ದಿನ ಆಗಿರಲಿದ್ದು, ಜೊತೆಗೆ ಈ ದಿನ ಸ್ನಾನ ಮಾಡುವುದು ವಿಭಿನ್ನ ಹಾಗೂ ವಿಶೇಷವಾಗಿಲಿದೆ. ಹೀಗಾಗಿ ಹೆಚ್ಚಿನ ಜನ ಈ ದಿನ ಅಮೃತ ಸ್ನಾನದಲ್ಲಿ ಭಾಗಿಯಾಗಲಿದ್ದಾರೆ.

     

     

    ಅಮೃತ ಸ್ನಾನ ಹೆಸರಿಗೆ ಕಾರಣ:
    ಮಹಾಕುಂಭ ಮೇಳದ ಇತಿಹಾಸವು ಸಮುದ್ರ ಮಂಥನ ಹಿಂದೂ ಪುರಾಣವನ್ನು ಉಲ್ಲೇಖಿಸುತ್ತದೆ. ಪುರಾಣ ಪ್ರಕಾರ, ಸಮುದ್ರ ಮಾಂಥನ ವೇಳೆ ದೊರೆತ ಅಮೃತವನ್ನು ವಿಷ್ಣು, ಮೋಹಿನಿ ರೂಪತಾಳಿ ಅಸುರರ ಕಣ್ಣು ತಪ್ಪಿಸಿ ಕೊಂಡೊಯ್ಯುವಾಗ ಕುಂಭದಿಂದ ನಾಲ್ಕು ಹನಿಯು ಪ್ರಯಾಗರಾಜ್, ಹರಿದ್ವಾರ, ನಾಸಿಕ್ ಮತ್ತು ಉಜ್ಜಯಿನಿಯಲ್ಲಿ ಬಿದ್ದಿತು. ಅದೇ ಜಾಗದಲ್ಲಿ ಮೇಳ ಆಚರಿಸಲಾಗುತ್ತದೆ. ಬೇರೊಂದು ಕಥೆ ಪ್ರಕಾರ, ಇಂದ್ರನ ಮಗ ಜಯಂತ ಕುಂಭ ಪಡೆದುಕೊಂಡು ಓಡು­ವಾಗ ರಾಕ್ಷ­ಸ­ರರು ಬೆನ್ನಟ್ಟಿರುತ್ತಾರೆ. ಜಯಂತನ ಸುರಕ್ಷೆಗೆ ಸೂರ್ಯ, ಚಂದ್ರ, ಶನಿ, ಬೃಹಸ್ಪತಿ ಗ್ರಹ ನಿಲ್ಲುತ್ತಾರೆ. 12 ದಿನ ಓಡುತ್ತಲೇ ಇದ್ದ ಜಯಂತ ಈ ನಡುವೆ 4 ಸ್ಥಳಗಳಲ್ಲಿ ಕುಂಭ ಕೆಳ ಗಿಟ್ಟಿದ್ದನಂತೆ. ಆ 4 ಸ್ಥಳಗಳಲ್ಲೇ ಗ್ರಹಗಳು ವಿಶಿಷ್ಟ ರಾಶಿಗಳಲ್ಲಿ ನಿಂತು ಕುಂಭ ರಕ್ಷಿಸಿದ್ದರಂತೆ ಆ ಸ್ಥಳಗಳಲ್ಲಿ ಇದೀಗ ಕುಂಭಮೇಳ ನಡೆಯುತ್ತದೆ. ಹೀಗೆ ಈ ನಾಲ್ಕು ಸ್ಥಳಗಳು ಪವಿತ್ರ ತೀರ್ಥಸ್ಥಳಗಳಾದವು. ಈ ತೀರ್ಥಸ್ಥಳಗಳ ಮೂಲಕ ಹರಿಯುವ ನದಿಗಳಲ್ಲಿ ಸ್ನಾನ ಮಾಡುವುದರಿಂದ ಮೋಕ್ಷ ಸಿಗುತ್ತದೆ. ಹೀಗಾಗಿ ಅಮೃತ ಸ್ನಾನವೆಂದು ಕರೆಯಲಾಗುತ್ತದೆ ಎಂದು ನಂಬಲಾಗಿದೆ.

    ಮಹಾ ಕುಂಭ ಮೇಳವು ಮುಖ್ಯವಾಗಿ ಈ ಪವಿತ್ರ ಸಂಗಮದಲ್ಲಿ ಸ್ನಾನ ಮಾಡುವ ಪ್ರಾಮುಖ್ಯತೆಯನ್ನು ಹೆಚ್ಚಿಸುತ್ತದೆ. ಪ್ರತಿ ಸ್ನಾನವು ಪಾಪಗಳನ್ನು ಕಳೆಯುವುದರ ಜೊತೆಗೆ ಮೋಕ್ಷ ನೀಡುತ್ತದೆ ಎಂಬ ನಂಬಿಕೆಯಿದೆ. ವಿಮೋಚನೆಗಾಗಿ ಪವಿತ್ರ ಸ್ನಾನದಲ್ಲಿ ತೊಡಗುವುದು ಮುಖ್ಯ ಎಂದು ಜನರು ನಂಬುತ್ತಾರೆ. ಅಮೃತ ಸ್ನಾನವನ್ನು ಹಿಂದೆ ಶಾಹಿ ಸ್ನಾನ ಎಂದು ಕರೆಯಲಾಗುತ್ತಿತ್ತು. ಎಂದರೆ `ಮಕರಂದ ಸ್ನಾನ’. ಕುಂಭಮೇಳದ ಸಮಯದಲ್ಲಿ ಭಕ್ತರು ಪವಿತ್ರ ನೀರಿನಲ್ಲಿ ಮುಳುಗುವ ಆಚರಣೆಯಾಗಿದೆ.

    ಜುನಾ ಅಖಾಡದ ಪೀಠಾಧೀಶ್ವರ ಆಚಾರ್ಯ ಸ್ವಾಮಿ ಅವಧೇಶಾನಂದ ಗಿರಿ ಮಹಾರಾಜರ ಪ್ರಕಾರ, ಗುರುವು ವೃಷಭ ರಾಶಿಯನ್ನು ಪ್ರವೇಶಿಸಿದಾಗ ಅಮೃತ ಸ್ನಾನ ಸಂಭವಿಸುತ್ತದೆ ಮತ್ತು ಸೂರ್ಯ ಮತ್ತು ಚಂದ್ರರು ಮಕರ ರಾಶಿಯಲ್ಲಿ ಒಟ್ಟುಗೂಡುತ್ತಾರೆ. ಇದನ್ನು `ಅಮೃತ್ ಯೋಗ’ ಎಂದು ಕರೆಯುತ್ತಾರೆ.
    ಇದು 12 ವರ್ಷಗಳಿಗೊಮ್ಮೆ ಮಾತ್ರ ಸಂಭವಿಸುತ್ತದೆ.

    ಅಮೃತ ಸ್ನಾನವು ಹಿಂದೂಗಳಿಗೆ ಮುಖ್ಯವಾಗಿದೆ. ಯಾಕೆಂದರೆ ಮಕರ ಸಂಕ್ರಾಂತಿ ಯ ಬಳಿಕ ಸೂರ್ಯ ಉತ್ತರಕ್ಕೆ ಚಲಿಸುತ್ತಾನೆ. ಇದನ್ನು ಉತ್ತರಾಯಣ ಎಂದು ಕರೆಯುತ್ತಾರೆ. ಹೀಗಾಗಿ ಉತ್ತರಾಯಣದಲ್ಲಿ ಪವಿತ್ರ ಸ್ನಾನದಲ್ಲಿ ತೊಡಗುವುದರಿಂದ ಒಳ್ಳೆಯದಾಗುತ್ತದೆ ಎಂದು ನಂಬಲಾಗುತ್ತದೆ. ಪ್ರತಿಯೊಂದು ಸ್ನಾನಕ್ಕೂ ಧಾರ್ಮಿಕ ನಿಯಮಗಳಿದ್ದು, ಫೆಬ್ರವರಿ 26ರಂದು ನಡೆಯುವ ಅಮೃತ ಸ್ನಾನ ಪವಿತ್ರ ಸ್ನಾನಗಳ ಕೊನೆಯ ದಿನವಾಗಿದೆ. ಮಹಾಶಿವರಾತ್ರಿಯನ್ನು ಶಿವನ ಮಹಾನ್ ರಾತ್ರಿ ಎಂದು ಪರಿಗಣಿಸಲಾಗುತ್ತದೆ. ಹೀಗಾಗಿ ಈ ದಿನ ಸ್ನಾನದಲ್ಲಿ ತೊಡಗುವುದರಿಂದ ಶಿವನ ಶಕ್ತಿ ದೊರೆಯುತ್ತದೆ. ಜೀವನದಿಂದ ಎಲ್ಲಾ ರೀತಿಯ ಅಜ್ಞಾನಗಳು ದೂರವಾಗುತ್ತದೆ.

  • ಯುಪಿ ಕಾಲುವೆಯೊಂದರಲ್ಲಿ ವ್ಯಕ್ತಿಯ ಶವ ಪತ್ತೆ – ಆತ್ಮಹತ್ಯೆಗೆ ಒಳ್ಳೆಯ ಜಾಗ ಯಾವ್ದು ಅಂತ ಸರ್ಚ್‌ ಮಾಡಿದ್ದ ಭೂಪ!

    ಯುಪಿ ಕಾಲುವೆಯೊಂದರಲ್ಲಿ ವ್ಯಕ್ತಿಯ ಶವ ಪತ್ತೆ – ಆತ್ಮಹತ್ಯೆಗೆ ಒಳ್ಳೆಯ ಜಾಗ ಯಾವ್ದು ಅಂತ ಸರ್ಚ್‌ ಮಾಡಿದ್ದ ಭೂಪ!

    ಲಕ್ನೋ: ಉತ್ತರ ಪ್ರದೇಶದ (Uttar Pradesh) ಗುರುಗ್ರಾಮ್‌ನ (Gurugram) ವ್ಯಕ್ತಿಯೊಬ್ಬನ ಕೊಳೆತ ಶವ ಗಾಜಿಯಾಬಾದ್‌ನ ಕಾಲುವೆ ಒಂದರಲ್ಲಿ ಪತ್ತೆಯಾಗಿದೆ. ಆತ ಮನೆಯಿಂದ ಒಂದು ವಾರದ ಹಿಂದೆ ನಾಪತ್ತೆಯಾಗಿದ್ದ ಎಂದು ಪೊಲೀಸರು (Police) ತಿಳಿಸಿದ್ದಾರೆ.

    ಸಾವಿಗೀಡಾದ ವ್ಯಕ್ತಿಯನ್ನು ಪ್ರಿನ್ಸ್ ರಾಣಾ ಎಂದು ಗುರುತಿಸಲಾಗಿದೆ. ಆತ ಉತ್ತರ ಪ್ರದೇಶದ ಬಿಜ್ನೋರ್‌ನವನು. ಗುರುಗ್ರಾಮ್‌ನಲ್ಲಿ ಆ್ಯಪ್ ಅಗ್ರಿಗೇಟರ್‌ನಲ್ಲಿ ಯೋಜನಾ ವ್ಯವಸ್ಥಾಪಕನಾಗಿ ಕೆಲಸ ಮಾಡುತ್ತಿದ್ದ.

    ಕಳೆದ ಬುಧವಾರ, ಪ್ರಿನ್ಸ್ ತಾನು ಎಲ್ಲಿಗೆ ಹೋಗುತ್ತಿದ್ದೇನೆಂದು ತಿಳಿಸದೆ ಮನೆಯಿಂದ ಹೊರಗೆ ಹೋಗಿದ್ದ. ತಮ್ಮ ಫೋನ್‌ನ್ನು ಸಹ ಬಿಟ್ಟು ಹೋಗಿದ್ದ. ಮರುದಿನ ಆತನ ಪತ್ನಿ ಪೊಲೀಸರನ್ನು ಸಂಪರ್ಕಿಸಿ, ಕಾಣೆಯಾದ ಬಗ್ಗೆ ದೂರು ದಾಖಲಿಸಿದ್ದರು. ಬಳಿಕ ಪ್ರಿನ್ಸ್‌ ಫೋನ್‌ನ ಬ್ರೌಸಿಂಗ್ ಹಿಸ್ಟರಿ  (Search History) ಪರಿಶೀಲಿಸಿದಾಗ ಆತ ಆತ್ಮಹತ್ಯೆಗೆ ಸೂಕ್ತ ಜಾಗದ ಬಗ್ಗೆ ಹುಡುಕಿದ್ದ ಎಂದು ತಿಳಿದು ಬಂದಿದೆ.

    ಮಂಗಳವಾರ ಸಂಜೆ ಗಾಜಿಯಾಬಾದ್‌ನ ಗಂಗನಹರ್ ಕಾಲುವೆಯ ಬಳಿ ಶವ ಪತ್ತೆಯಾಗಿದೆ. ಪೊಲೀಸರು ಕೊಳೆತ ಶವವನ್ನು ವಶಕ್ಕೆ ಪಡೆದಾಗ ಪ್ರಿನ್ಸ್‌ನ ಆಧಾರ್ ಕಾರ್ಡ್ ಇರುವ ಕೈಚೀಲ ಸಿಕ್ಕಿತು. ನಂತರ, ಆತನ ಕುಟುಂಬದ ಸದಸ್ಯರು ಗುರುತನ್ನು ದೃಢಪಡಿಸಿದರು. ಶವಪರೀಕ್ಷೆಯು ಸಾವಿಗೆ ಕಾರಣವನ್ನು ಬಹಿರಂಗಪಡಿಸುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

  • ಹಿಂದೂ ದೇವಾಲಯಕ್ಕೆ ಮುಸ್ಲಿಂ ವ್ಯಕ್ತಿ ಉಸ್ತುವಾರಿ – ದೇವಿ ಕನಸಲ್ಲಿ ಬಂದು ಮೊಹಮ್ಮದ್‌ ಅಲಿಗೆ ಹೇಳಿದ್ದೇನು?

    ಹಿಂದೂ ದೇವಾಲಯಕ್ಕೆ ಮುಸ್ಲಿಂ ವ್ಯಕ್ತಿ ಉಸ್ತುವಾರಿ – ದೇವಿ ಕನಸಲ್ಲಿ ಬಂದು ಮೊಹಮ್ಮದ್‌ ಅಲಿಗೆ ಹೇಳಿದ್ದೇನು?

    ಲಕ್ನೋ: ಇತ್ತೀಚೆಗೆ ಕೋಮು ಉದ್ವಿಗ್ನತೆ ಮತ್ತು ತೋಳಗಳ ದಾಳಿಯಿಂದ ಸುದ್ದಿಯಾಗಿದ್ದ ಉತ್ತರ ಪ್ರದೇಶದ ಬಹರಿಚ್‌ ಜಿಲ್ಲೆಯಿಂದ ಕೋಮು ಸಾಮರಸ್ಯದ ಹೃದಯಸ್ಪರ್ಶಿ ಕಥೆಯೊಂದು ಹೊರಹೊಮ್ಮಿದೆ.

    ಧರ್ಮನಿಷ್ಠ ಮುಸ್ಲಿಂ ಆಗಿರುವ ಮೊಹಮ್ಮದ್ ಅಲಿ, ಹಿಂದೂ ದೇವಾಲಯವನ್ನು ನಿರ್ವಹಿಸುವ ಟ್ರಸ್ಟ್‌ನ ಉಸ್ತುವಾರಿ ಮತ್ತು ಅಧ್ಯಕ್ಷರಾಗಿ 18 ವರ್ಷಗಳ ಸುದೀರ್ಘ ಸೇವೆಯ ಮೂಲಕ ಏಕತೆಯ ಸಂಕೇತವಾಗಿದ್ದಾರೆ.

    ಬಹರಿಚ್‌ ಜಿಲ್ಲಾ ಕೇಂದ್ರದಿಂದ 27 ಕಿಲೋಮೀಟರ್ ದೂರದಲ್ಲಿರುವ ಜೈತಾಪುರ ಬಜಾರ್‌ನಲ್ಲಿ, ಅಲಿ ವೃದ್ಧ್ ಮಾತೇಶ್ವರಿ ಮಾತಾ ಘುರ್ದೇವಿ ದೇವಾಲಯದ ಮೇಲ್ವಿಚಾರಣೆಯನ್ನು ಮೊಹಮ್ಮದ್‌ ಅಲಿ ಮಾಡುತ್ತಿದ್ದಾರೆ. ಈ ಸ್ಥಳದಲ್ಲಿ ಮುಸ್ಲಿಮರೂ ಪೂಜೆ ಸಲ್ಲಿಸುತ್ತಾರೆ.

    ರೋಜಾ ಮತ್ತು ನಮಾಜ್‌ನಂತಹ ಇಸ್ಲಾಮಿಕ್ ಸಂಪ್ರದಾಯಗಳನ್ನು ಪಾಲಿಸುತ್ತಾ 58 ವರ್ಷದ ಅಲಿ, ಘುರ್ದೇವಿ ದೇವತೆ ಮತ್ತು ಹನುಮಂತನ ಆರಾಧನೆಗೆ ತನ್ನನ್ನು ತಾನು ಸಮರ್ಪಿಸಿಕೊಂಡಿದ್ದಾರೆ.

    ‘ನಾನು ಏಳು ವರ್ಷದವನಿದ್ದಾಗ, ನನಗೆ ಲ್ಯುಕೋಡರ್ಮಾ ಬಂದಿತ್ತು. ನನ್ನ ಕಣ್ಣುಗಳು ಬಿಳಿಯಾಗಿದ್ದವು. ನನಗೆ ಕೊಡಿಸಿದ್ದ ಯಾವ ಚಿಕಿತ್ಸೆಯೂ ಫಲಕಾರಿಯಾಗಲಿಲ್ಲ. ಆಗ ನನ್ನ ತಾಯಿ ನನ್ನನ್ನು ಘುರ್ದೇವಿ ದೇವಸ್ಥಾನಕ್ಕೆ ಕರೆದೊಯ್ದರು. ಅದಾದ ನಂತರ ನನ್ನ ಕಾಯಿಲೆ ವಾಸವಾಯಿತು. 2007 ರಲ್ಲಿ ದೇವಿಯು ನನ್ನ ಕನಸಿನಲ್ಲಿ ಬಂದು ದೇವಾಲಯವನ್ನು ನೋಡಿಕೊಳ್ಳುವಂತೆ ಹೇಳಿದರು. ಅಲ್ಲಿಂದ ನನ್ನ ಸೇವೆ ಪ್ರಾರಂಭಿಸಿದೆ’ ಎಂದು ಮೊಹಮ್ಮದ್‌ ಅಲಿ ತಿಳಿಸಿದ್ದಾರೆ.

    ಅಲಿ ಅವರ ನಾಯಕತ್ವದಲ್ಲಿ ದೇವಾಲಯವು ಅಭಿವೃದ್ಧಿ ಹೊಂದಿದೆ. ಸುಗ್ಗಿಯ ಋತುಗಳಲ್ಲಿ ಧಾನ್ಯ ಸಂಗ್ರಹಣೆ ಹಾಗೂ ನಿಧಿ ಸಂಗ್ರಹಣೆಯಂತಹ ಕಾರ್ಯಗಳಿಂದ ದೇವಾಲಯಕ್ಕೆ ಗಮನಾರ್ಹ ಸಂಪನ್ಮೂಲ ಹರಿದುಬಂದಿದೆ. ಈ ವರ್ಷವಷ್ಟೇ ದೇವಾಲಯದ ಅಭಿವೃದ್ಧಿಗಾಗಿ 2.7 ಲಕ್ಷ ರೂ.ಗಳನ್ನು ಸಂಗ್ರಹಿಸಲಾಗಿದೆ.

    ಸಾರ್ವಜನಿಕ ಕೊಡುಗೆಗಳು ಮತ್ತು ಸರ್ಕಾರದ ಬೆಂಬಲವು ದೇವಾಲಯದ ನವೀಕರಣಕ್ಕೆ ಸಹಾಯ ಮಾಡಿದೆ. ದೇವಾಲಯ ನಿರ್ಮಾಣ ಮತ್ತು ನಿರ್ವಹಣೆಗಾಗಿ 30ರಿಂದ 40 ಲಕ್ಷಕ್ಕೂ ಹೆಚ್ಚು ಹಣ ಬಳಕೆಯಾಗಿದೆ.

  • ಪ್ರೀತಿಸಿದ ಹುಡುಗಿಗಾಗಿ ಹಿಂದೂ ಧರ್ಮಕ್ಕೆ ಮುಸ್ಲಿಂ ವ್ಯಕ್ತಿ ಮತಾಂತರ – ದೇವಾಲಯದಲ್ಲಿ ವಿವಾಹ

    ಪ್ರೀತಿಸಿದ ಹುಡುಗಿಗಾಗಿ ಹಿಂದೂ ಧರ್ಮಕ್ಕೆ ಮುಸ್ಲಿಂ ವ್ಯಕ್ತಿ ಮತಾಂತರ – ದೇವಾಲಯದಲ್ಲಿ ವಿವಾಹ

    ಲಕ್ನೋ: ಕಳೆದ 10 ವರ್ಷಗಳಿಂದ ಪ್ರೀತಿಸಿದ ಗೆಳತಿಯನ್ನು ಮದುವೆಯಾಗಲು 34 ವರ್ಷದ ಮುಸ್ಲಿಂ ವ್ಯಕ್ತಿಯೊಬ್ಬ ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದಾನೆ. ಸದ್ದಾಂ ತನ್ನ ಹೆಸರನ್ನು ಶಿವಶಂಕರ್ ಎಂದು ಬದಲಾಯಿಸಿಕೊಂಡಿದ್ದಾನೆ.

    ಮೂರು ದಿನಗಳ ಹಿಂದೆ ಯುವತಿ, ಸದ್ದಾಂ ಮತ್ತು ಆತನ ಕುಟುಂಬ ಸದಸ್ಯರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಗರ್ಭಪಾತ ಮಾಡಿಸಿಕೊಳ್ಳುವಂತೆ ಒತ್ತಾಯಿಸಿ, ಮದುವೆಯ ನೆಪದಲ್ಲಿ ಅತ್ಯಾಚಾರ ಮತ್ತು ಕೊಲೆ ಬೆದರಿಕೆ ಹಾಕಿದ್ದಾರೆಂದು ದೂರಿದ್ದರು. ಆದರೆ, ಈಗ ಇಬ್ಬರೂ ಸ್ವಇಚ್ಛೆಯಿಂದ ಮದುವೆಯಾಗಿದ್ದಾರೆ ಎಂದು ಕೊತ್ವಾಲಿ ಪೊಲೀಸ್ ಠಾಣೆಯ ಎಸ್‌ಹೆಚ್‌ಒ ದೇವೇಂದ್ರ ಸಿಂಗ್ ತಿಳಿಸಿದ್ದಾರೆ.

    ನಗರ ಬಜಾರ್ ನಿವಾಸಿ ಸದ್ದಾಂ ಹುಸೇನ್, ಅದೇ ಗ್ರಾಮದ ಯುವತಿ (30 ವರ್ಷ) ಜೊತೆ ಸುಮಾರು 10 ವರ್ಷಗಳಿಂದ ಪ್ರೇಮ ಸಂಬಂಧ ಹೊಂದಿದ್ದ. ಇಬ್ಬರೂ ಬೇರೆ ಬೇರೆ ಧರ್ಮಗಳಿಗೆ ಸೇರಿದವರಾಗಿದ್ದರಿಂದ ಮದುವೆ ಸಾಧ್ಯವಾಗಿರಲಿಲ್ಲ. ಯುವತಿ ಸದ್ದಾಂ ಮೇಲೆ ಹಲವು ಬಾರಿ ಒತ್ತಡ ಹೇರಿದ್ದಳು. ಆದರೆ ಸದ್ದಾಂ ಕುಟುಂಬ ಅವಳನ್ನು ಒಪ್ಪಿಕೊಳ್ಳಲು ಸಿದ್ಧರಿರಲಿಲ್ಲ.

    ಇದರಿಂದ ತೊಂದರೆಗೀಡಾದ ಯುವತಿ ಮೂರು ದಿನಗಳ ಹಿಂದೆ ಬಸ್ತಿ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿ, ಯುವಕ ಸದ್ದಾಂ ಮೇಲೆ ಅತ್ಯಾಚಾರ, ಗರ್ಭಪಾತಕ್ಕೆ ಒತ್ತಾಯಿಸುವುದು ಮತ್ತು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿದ್ದಳು.

    ಎಸ್‌ಪಿ ಆದೇಶದ ಮೇರೆಗೆ ಪೊಲೀಸರು ಸದ್ದಾಂ ಮತ್ತು ಆತನ ಕುಟುಂಬದವರ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದಾದ ಬಳಿಕ, ಸದ್ದಾಂ ಮತ್ತು ಯುವತಿ ನಗರದ ಮಾರುಕಟ್ಟೆಯಲ್ಲಿರುವ ದೇವಸ್ಥಾನದಲ್ಲಿ ಹಿಂದೂ ಪದ್ಧತಿಗಳ ಪ್ರಕಾರ ವಿವಾಹವಾಗಿದ್ದಾರೆ. ಸದ್ದಾಂ ತನ್ನ ಹೆಸರನ್ನು ಶಿವಶಂಕರ್ ಸೋನಿ ಎಂದು ಬದಲಾಯಿಸಿಕೊಂಡಿದ್ದಾನೆ.

  • ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ – ಇಬ್ಬರು ಮಕ್ಕಳು ಸೇರಿ ನಾಲ್ವರು ಸಜೀವ ದಹನ

    ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ – ಇಬ್ಬರು ಮಕ್ಕಳು ಸೇರಿ ನಾಲ್ವರು ಸಜೀವ ದಹನ

    ಲಕ್ನೋ: ಶಾರ್ಟ್ ಸರ್ಕ್ಯೂಟ್‌ನಿಂದ (Short Circuit) ಮನೆಗೆ ಬೆಂಕಿ ಹೊತ್ತಿಕೊಂಡು ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸಜೀವ ದಹನವಾದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ (Ghaziabad) ನಡೆದಿದೆ.

    ಭಾನುವಾರ ಮುಂಜಾನೆ ಕುಟುಂಬಸ್ಥರು ಮಲಗಿದ್ದ ಸಂದರ್ಭ ಅಗ್ನಿ ಅವಘಡ ಉಂಟಾಗಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿ ಒಟ್ಟು ನಾಲ್ವರು ಮೃತಪಟ್ಟಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಇದನ್ನೂ ಓದಿ: ವಿಜಯೇಂದ್ರ ಸಿಎಂ ಆಗೋದನ್ನ ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ – ಕೆ.ಶಿವನಗೌಡ ನಾಯಕ್

    ಮೃತರನ್ನು ಗುಲ್ಬಹರ್ (32) ಹಾಗೂ ಆಕೆಯ ಇಬ್ಬರು ಅಪ್ರಾಪ್ತ ಪುತ್ರರು ಎಂದು ಗುರುತಿಸಲಾಗಿದೆ. ಅದೇ ಮನೆಯಲ್ಲಿ ವಾಸಿಸುತ್ತಿದ್ದ ಸಂಬಂಧಿಕರ ಮಗ ಕೂಡ ಘಟನೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮಹಿಳೆಯ ಪತಿ ಶಹನವಾಜ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ:  ವಿಶೇಷ ಕಾರ್ಯಾಚರಣೆ – ರಾತ್ರಿ ಕುಡುಕರಿಗೆ ಚಳಿ ಬಿಡಿಸಿದ ಗದಗ ಎಸ್‌ಪಿ