ಲಕ್ನೋ: ಸಮೋಸಾ ತರದಿದ್ದಕ್ಕೆ ಪತ್ನಿ ಮತ್ತು ಆಕೆಯ ಸಂಬಂಧಿಕರು ವ್ಯಕ್ತಿಯೊಬ್ಬನನ್ನು ಥಳಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಕೊಲೆ ಯತ್ನದ ಆರೋಪದ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಆನಂದಪುರದ ನಿವಾಸಿ ಶಿವಂ ಮೇಲೆ ಆತನ ಪತ್ನಿ ಸಂಗೀತಾ, ಆಕೆಯ ಪೋಷಕರು ಉಷಾ, ರಾಮ್‌ಲಡೈಟ್ ಮತ್ತು ಮಾವ ರಾಮೋತಾರ್ ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ಶಿವಂ ತಾಯಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಸಂಗೀತಾ ತನ್ನ ಪತಿಗೆ ಸಮೋಸಾ ತರಲು ಹೇಳಿದ್ದಾಳೆ. ಆದರೆ, ಪತಿ ತರುವುದಕ್ಕೆ ನಿರಾಕರಿಸಿದ್ದಾನೆ. ಇದರಿಂದ ಕೋಪಗೊಂಡ ಪತ್ನಿ ತನ್ನ ಕುಟುಂಬದವರಿಗೆ ಕರೆ ಮಾಡಿ ಮನೆಗೆ ಕರೆಸಿಕೊಂಡಿದ್ದಾಳೆ. ಮಾರನೇ ದಿನ ಪತಿ-ಪತ್ನಿ ನಡುವೆ ರಾಜಿ ಪಂಚಾಯಿತಿ ವೇಳೆ ಹಲ್ಲೆ ನಡೆಸಲಾಗಿದೆ.
ಘಟನೆಯ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆ ಮಾಡಿದವರನ್ನು ಬಂಧಿಸಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಯುತ್ತಿದೆ.
ಹಲ್ಲೆಗೊಳಗಾದ ವ್ಯಕ್ತಿಯ ತಾಯಿ ವಿಜಯ್ ಕುಮಾರಿ ನೀಡಿದ ದೂರಿನ ಆಧಾರದ ಮೇಲೆ, ಕೊಲೆ ಯತ್ನ ಸೇರಿದಂತೆ ಬಿಎನ್‌ಎಸ್ ಅಡಿಯಲ್ಲಿ ನಾಲ್ವರು ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ವೃತ್ತ ಅಧಿಕಾರಿ (ಸಿಒ) ಪುರನ್‌ಪುರ ಪ್ರತೀಕ್ ದಹಿಯಾ ತಿಳಿಸಿದ್ದಾರೆ.
ಲಕ್ನೋ: ಇಲ್ಲಿನ ಗುಡಂಬಾ (Gudamba) ಪ್ರದೇಶದ ಮನೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಟಾಕಿ ಕಾರ್ಖಾನೆಯಲ್ಲಿ (Firecracker Factory) ಸ್ಫೋಟ (Blast) ಸಂಭವಿಸಿದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ.
ಗುಡಂಬಾದ ಬೆಹ್ತಾ (Behta) ಪ್ರದೇಶದಲ್ಲಿ ಭಾನುವಾರಮಧ್ಯಾಹ್ನ 12 ಗಂಟೆಯ ಸುಮಾರಿಗೆ ಸ್ಫೋಟ ಸಂಭವಿಸಿದೆ. ಸ್ಫೋಟದ ಪರಿಣಾಮ ಅಕ್ಕಪಕ್ಕದ ಮನೆಗಳಿಗೂ ಹಾನಿಯಾಗಿದೆ. ಪಟಾಕಿ ಕಾರ್ಖಾನೆ ಕಾರ್ಯನಿರ್ವಹಿಸುತ್ತಿದ್ದ ಮನೆಯಲ್ಲಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಕೆಲವರು ಗಾಯಗೊಂಡಿದ್ದಾರೆ ಎಂದು ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಅನಿಂದ್ಯ ವಿಕರಂ ಸಿಂಗ್ ತಿಳಿಸಿದ್ದಾರೆ. ಇದನ್ನೂ ಓದಿ: ಗಣೇಶ ವಿಸರ್ಜನೆ ವೇಳೆ ಡ್ಯಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತ – ವ್ಯಕ್ತಿ ಸಾವು
ಸ್ಫೋಟದ ನಂತರ ಛಾವಣಿಯ ಒಂದು ಭಾಗ ಕುಸಿದಿದ್ದು, ಐವರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದರು. ಅವರನ್ನು ಅವಶೇಷಗಳಿಂದ ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಮ್ಯಾಜಿಸ್ಟ್ರೇಟ್ ವಿಶಾಕ್ ಜಿ, ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಉಳಿದ ಮೂವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಚೀನಾ ಕಮ್ಯುನಿಸ್ಟ್ ಪಕ್ಷದ ಪ್ರಬಲ ನಾಯಕ, ಜಿನ್‌ಪಿಂಗ್ ಆಪ್ತಮಿತ್ರನನ್ನ ಭೇಟಿಯಾದ ಮೋದಿ
ಘಟನೆ ಕುರಿತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಪರಿಹಾರ ಮತ್ತು ರಕ್ಷಣಾ ಕಾರ್ಯಗಳನ್ನು ತ್ವರಿತಗೊಳಿಸಲು ತಕ್ಷಣವೇ ಸ್ಥಳಕ್ಕೆ ತೆರಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಮಸೀದಿಯಲ್ಲಿ ಗಣೇಶನ ಪ್ರತಿಷ್ಠಾಪನೆ; ಭಾವೈಕ್ಯತೆ ಮೆರೆದ ಗ್ರಾಮಸ್ಥರು
ಲಕ್ನೋ: ನೊಯ್ಡಾದಲ್ಲಿ ಇತ್ತೀಚೆಗೆ ವರದಕ್ಷಿಣೆ ಕಿರುಕುಳ ನೀಡಿ ಬೆಂಕಿ ಹಚ್ಚಿ ಮಹಿಳೆಯೊಬ್ಬಳನ್ನು ಹತ್ಯೆ ಮಾಡಲಾಗಿತ್ತು. ಆ ಘಟನೆ ಮಾಸುವ ಮುನ್ನವೇ ಉತ್ತರ ಪ್ರದೇಶದಲ್ಲಿ (Uttar Pradesh) ಮತ್ತೊಂದು ಭಯಾನಕ ವರದಕ್ಷಿಣೆ ಕ್ರೌರ್ಯದ (Dowry case) ವರದಿಯಾಗಿದೆ. ಅಮ್ರೋಹಾ ಜಿಲ್ಲೆಯ ಕಲಖೇಡ ಎಂಬಲ್ಲಿ ಅತ್ತೆ ಹಾಗೂ ಮಾವ ಸೇರಿ 23 ವರ್ಷದ ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿ ಆಸಿಡ್ ಕುಡಿಸಿ ಹತ್ಯೆ ಮಾಡಿದ್ದಾರೆ.
ಗುಲ್ಫಿಜಾ ಹತ್ಯೆಯಾದ ಮಹಿಳೆಯಾಗಿದ್ದಾಳೆ. ಆಕೆ ಒಂದು ವರ್ಷದ ಹಿಂದೆ ದಿದೌಲಿ ಪೊಲೀಸ್ ಠಾಣೆ ವ್ಯಾಪ್ತಿಯ ಕಲಖೇಡ ಗ್ರಾಮದ ಪರ್ವೇಜ್ ಎಂಬವನನ್ನು ಮದುವೆ ಆಗಿದ್ದಳು. ಆಕೆಯ ಅತ್ತೆ-ಮಾವ 10 ಲಕ್ಷ ರೂ. ನಗದು ಮತ್ತು ಕಾರನ್ನು ನೀಡುವಂತೆ ಒತ್ತಾಯಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಪತ್ನಿಗೆ ಬೆಂಕಿ ಹಚ್ಚಿ ಕೊಂದವನ ಕಾಲಿಗೆ ಗುಂಡೇಟು – ನನಗ್ಯಾವ ಪಶ್ಚಾತ್ತಾಪ ಇಲ್ಲ ಎಂದ ಪಾಪಿ!
ಆ.11 ರಂದು ಗಲ್ಫಿಜಾಗೆ ಬಲವಂತವಾಗಿ ಆಸಿಡ್ ಕುಡಿಸಿದ್ದಾರೆ. ಆಕೆಯನ್ನು ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. 17 ದಿನಗಳ ಕಾಲ ಜೀವನ್ಮರಣ ಹೋರಾಟದ ನಂತರ ಆಕೆ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಿಳೆಯ ತಂದೆ ಫರ್ಕಾನ್ ನೀಡಿದ ದೂರಿನ ಮೇರೆಗೆ, ಪರ್ವೇಜ್, ಅಸಿಮ್, ಗುಲಿಸ್ತಾ, ಮೋನಿಶ್, ಸೈಫ್, ಡಾ. ಭೂರಾ ಮತ್ತು ಬಬ್ಬು ಎಂಬ ಏಳು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ, ಎಲ್ಲಾ ಆರೋಪಿಗಳನ್ನು ಬಂಧಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗ್ರೇಟರ್ ನೋಯ್ಡಾದಲ್ಲಿ ಇತ್ತೀಚೆಗೆ ನಡೆದ ವರದಕ್ಷಿಣೆ ಸಾವಿನ ಪ್ರಕರಣದ ಬೆನ್ನಲ್ಲೇ ಈ ಘಟನೆ ನಡೆದಿದೆ. ಆ ಪ್ರಕರಣದಲ್ಲಿ ಸಿರ್ಸಾ ಗ್ರಾಮದ ನಿಕ್ಕಿ ಎಂಬ 26 ವರ್ಷದ ಮಹಿಳೆಯನ್ನು ಬೆಂಕಿ ಹಚ್ಚಿ ಹತ್ಯೆ ಮಾಡಲಾಗಿತ್ತು. ಹಲ್ಲೆ ಹಾಗೂ ಬೆಂಕಿ ಹೊತ್ತಿ ಉರಿದಿದ್ದ ಮಹಿಳೆಯ ವಿಡಿಯೋ ಸಹ ವೈರಲ್ ಆಗಿತ್ತು. ಈ ಸಂಬಂಧ ಮಹಿಳೆಯ ಪತಿ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ನೋಯ್ಡಾ ವರದಕ್ಷಿಣೆ ಹತ್ಯೆ ಕೇಸ್ | ಪ್ರಿಯತಮೆ ಜೊತೆಗಿದ್ದಾಗಲೇ ಪತಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದ ಪತ್ನಿ
ಲಕ್ನೋ: ಸಾಲ ಬಾಧೆಯಿಂದ ಬಳಲುತ್ತಿದ್ದ ದಂಪತಿಯು ತಮ್ಮ 4 ತಿಂಗಳ ಮಗುವಿಗೆ ವಿಶಪ್ರಾಶನ ಮಾಡಿ ಕೊನೆಗೆ ತಾವೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ನಡೆದಿದೆ.
ಬುಧವಾರ ಬೆಳಗ್ಗೆ ಮೂವರ ಶವಗಳು ಪ್ರತ್ಯೇಕ ಕೋಣೆಗಳಲ್ಲಿ ಕಂಡುಬಂದಿವೆ. ಕೈಮಗ್ಗ ಉದ್ಯಮಿ ಸಚಿನ್ ಗ್ರೋವರ್ (30) ಮತ್ತು ಅವರ ಪತ್ನಿ ಶಿವಾನಿ (28) ಸಾಲದ ಸುಳಿಯಲ್ಲಿ ಸಿಲುಕಿದ್ದರು. ಈ ದಂಪತಿಗೆ ನಾಲ್ಕು ತಿಂಗಳ ಗಂಡು ಮಗು ಫತೇಹ್ ಇದ್ದ.
ಸ್ಥಳದಲ್ಲಿ ಡೆತ್‌ನೋಟ್ ಪತ್ತೆಯಾಗಿದೆ. ಅದರಲ್ಲಿ ಸಚಿನ್ ಸಾಲದ ಹೊರೆ ಮತ್ತು ಆದಾಯದ ಕೊರತೆಯಿಂದ ತೀವ್ರ ನೊಂದಿರುವುದಾಗಿ ಬರೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ‘ದಯವಿಟ್ಟು ನಮ್ಮ ಕಾರು ಮತ್ತು ಮನೆಯನ್ನು ಮಾರಾಟ ಮಾಡಿ ಸಾಲವನ್ನು ತೀರಿಸಬೇಡಿ. ಸಾಲ ಕೊಟ್ಟವರು ನೊಂದುಕೊಳ್ಳಬಾರದು ಎಂದು ಸಚಿನ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ದಂಪತಿ ಮಂಗಳವಾರ ರಾತ್ರಿ ಸೀಲಿಂಗ್ ಫ್ಯಾನ್‌ಗಳಿಗೆ ನೇಣು ಹಾಕಿಕೊಂಡಿದ್ದರು. ಮಗುವಿನ ಶವ ಮತ್ತೊಂದು ಕೋಣೆಯಲ್ಲಿ ಪತ್ತೆಯಾಗಿದೆ. ದಂಪತಿ ಆತ್ಮಹತ್ಯೆಗೂ ಮುನ್ನ ತಮ್ಮ ಮಗನಿಗೆ ವಿಷಪ್ರಾಶನ ಮಾಡಿದ್ದಾರೆ.
ಕುಟುಂಬವು ಅವರ ಮನೆಯ ಎರಡನೇ ಮಹಡಿಯಲ್ಲಿ ವಾಸಿಸುತ್ತಿತ್ತು. ನೆಲಮಹಡಿಯಲ್ಲಿ ವಾಸಿಸುವ ಅವರ ಸಂಬಂಧಿಕರು ಶವಗಳನ್ನು ಪತ್ತೆ ಮಾಡಿದ್ದಾರೆ. ‘ಮಂಗಳವಾರ ಸಂಜೆ ತನ್ನ ಮಗ ಬ್ಯಾಂಕಿನಲ್ಲಿ 5 ಲಕ್ಷ ರೂಪಾಯಿ ಠೇವಣಿ ಇಡಬೇಕೆಂದು ಹೇಳಿದ್ದ. ಆದರೆ 3 ಲಕ್ಷ ರೂಪಾಯಿ ಹೊಂದಿಸಿದ್ದ. ಅದಕ್ಕಾಗಿ ಅವನು ಸಂಕಷ್ಟದಲ್ಲಿದ್ದ’ ಎಂದು ಸಚಿನ್ ತಾಯಿ ಪೊಲೀಸರಿಗೆ ತಿಳಿಸಿದ್ದಾರೆ.
– ಗ್ರೇಟರ್ ನೋಯ್ಡಾದಲ್ಲಿ ಮಹಿಳೆ ಭೀಕರ ಸಾವು ಪ್ರಕರಣ ಮಾಸುವ ಮುನ್ನವೇ ಮತ್ತೊಂದು ದೌರ್ಜನ್ಯ
ಲಕ್ನೋ: ಗ್ರೇಟರ್ ನೋಯ್ಡಾದಲ್ಲಿ 26 ವರ್ಷದ ನಿಕ್ಕಿ ಭಾಟಿಯ ಭೀಕರ ಸಾವಿನ ನಂತರ, ಉತ್ತರ ಪ್ರದೇಶದಲ್ಲಿ ಮತ್ತೊಂದು ವರದಕ್ಷಿಣೆ ಸಂಬಂಧಿತ ಹಿಂಸಾಚಾರ ಪ್ರಕರಣ ಬೆಳಕಿಗೆ ಬಂದಿದೆ.
ಅಮ್ರೋಹಾ ಜಿಲ್ಲೆಯ ಪೊಲೀಸ್ ಕಾನ್‌ಸ್ಟೇಬಲ್‌ವೊಬ್ಬರು ತಮ್ಮ ಪತ್ನಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ವೃತ್ತಿಯಲ್ಲಿ ನರ್ಸ್ ಆಗಿರುವ ಪಾರುಲ್ (32) ಗಂಭೀರ ಗಾಯಗೊಂಡು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಪೊಲೀಸ್ ಕಾನ್‌ಸ್ಟೇಬಲ್ ಸೇರಿದಂತೆ ಒಂದೇ ಕುಟುಂಬದ ಆರು ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಉತ್ತರ ಪ್ರದೇಶ ಪೊಲೀಸ್ ಇಲಾಖೆಯಲ್ಲಿ ಕಾನ್‌ಸ್ಟೇಬಲ್ ಆಗಿರುವ ಪಾರುಲ್ ಅವರ ಪತಿ ದೇವೇಂದ್ರ ಇತ್ತೀಚೆಗೆ ರಾಂಪುರದಿಂದ ಬರೇಲಿಗೆ ವರ್ಗಾವಣೆಗೊಂಡು ರಜೆಯ ಮೇಲೆ ಮನೆಯಲ್ಲಿದ್ದ. ವರದಕ್ಷಿಣೆ ಕಿರುಕುಳ ನೀಡಿ ಆಕೆಗೆ ಬೆಂಕಿ ಇಟ್ಟು, ಜೀವಂತವಾಗಿ ಸುಟ್ಟುಹಾಕಲು ಯತ್ನಿಸಿದ್ದಾರೆ ಎನ್ನಲಾಗಿದೆ.
ಪಾರುಲ್ ಸಹೋದರ ದೂರು ದಾಖಲಿಸಿದ್ದು, ಆಕೆಯ ಪತಿ ದೇವೇಂದ್ರ, ಆತನ ತಾಯಿ ಮತ್ತು ಸೋನು, ಗಜೇಶ್, ಜಿತೇಂದ್ರ, ಸಂತೋಷ್ ಎಂಬ ನಾಲ್ವರು ಪುರುಷ ಸಂಬಂಧಿಕರ ವಿರುದ್ಧ ಆರೋಪ ಹೊರಿಸಲಾಗಿದೆ. ಕೌಟುಂಬಿಕ ಹಿಂಸೆ ಮತ್ತು ಕೊಲೆಯತ್ನದ ಗಂಭೀರ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ದೃಢಪಡಿಸಿದ್ದಾರೆ.
ಆರು ಆರೋಪಿಗಳು ನಾಪತ್ತೆಯಾಗಿದ್ದಾರೆ. ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಮುಂಜಾನೆ ನೆರೆಹೊರೆಯವರು ತಮಗೆ ಮಾಹಿತಿ ನೀಡಿದ್ದರು ಎಂದು ಪಾರುಲ್ ತಾಯಿ ಅನಿತಾ ವಿವರಿಸಿದ್ದಾರೆ.
ನಾನು ಸ್ಥಳಕ್ಕೆ ತಲುಪಿದಾಗ, ನನ್ನ ಮಗಳು ನೋವಿನಿಂದ ನರಳುತ್ತಿದ್ದಳು. ತೀವ್ರವಾಗಿ ಸುಟ್ಟು ಹೋಗಿದ್ದಳು. ಅವಳನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಆಕೆಯ ಸ್ಥಿತಿ ಗಂಭೀರವಾದ ಕಾರಣ ದೆಹಲಿಗೆ ಕರೆದೊಯ್ಯಬೇಕಾಯಿತು. ಅವಳು ಜೀವನ್ಮರಣ ಹೋರಾಟ ನಡೆಸುತ್ತಿದ್ದಾಳೆ ಎಂದು ತಾಯಿ ಕಣ್ಣೀರಿಟ್ಟಿದ್ದಾರೆ.
ಲಕ್ನೋ: ಗ್ರೇಟರ್ ನೋಯ್ಡಾದಲ್ಲಿ (Greater Noida) ಇತ್ತೀಚೆಗೆ ಪತ್ನಿಗೆ ವರದಕ್ಷಿಣೆ ಕಿರುಕುಳ (Dowry Case) ನೀಡಿ ಬೆಂಕಿ ಹಚ್ಚಿ ಕೊಲೆಗೈದ ವಿಪಿನ್ ಈ ಹಿಂದೆ ಪ್ರಿಯತಮೆ ಜೊತೆಗಿದ್ದಾಗ ಸಿಕ್ಕಿಬಿದ್ದಿದ್ದ. ಈ ವೇಳೆ ಆತ ತನ್ನ ಸ್ನೇಕಿತನ ಜೊತೆ ಸೇರಿ ಪ್ರಿಯತಮೆ ಮೇಲೆ ಹಲ್ಲೆ ನಡೆಸಿದ್ದ ಎಂಬ ವಿಚಾರ ತಿಳಿದುಬಂದಿದೆ.
ಆ.23 ರಂದು ನಿಕ್ಕಿ (26) ಎಂಬ ಮಹಿಳೆಯನ್ನು ಆಕೆಯ ಪತಿ, ಅತ್ತೆ ಮಾವ ಬೆಂಕಿ ಹಚ್ಚಿ ಕೊಲೆ ಮಾಡಿದ್ದರು. ಮಹಿಳೆಯ ಪತಿ ಮತ್ತು ಆಕೆಯ ಅತ್ತೆ, ಮಹಿಳೆಯ ತಲೆ ಕೂದಲನ್ನು ಹಿಡಿದು ಥಳಿಸುತ್ತಿರುವ ವೀಡಿಯೊದಲ್ಲಿ ವೈರಲ್ ಆಗಿತ್ತು. ಅಲ್ಲದೇ ಬಳಿಕ ಬೆಂಕಿ ಹೊತ್ತಿ ಉರಿಯುವಾಗ ಆಕೆ ಮೆಟ್ಟಿಲಿನಿಂದ ಇಳಿದು, ನೆಲದ ಮೇಲೆ ಕುಳಿತಿರುವುದು ವೀಡಿಯೋದಲ್ಲಿ ಸೆರೆಯಾಗಿದೆ. ಆಕೆಯನ್ನು ನೆರೆಹೊರೆಯವರ ಸಹಾಯದಿಂದ ಫೋರ್ಟಿಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಬಳಿಕ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ರವಾನಿಸುವ ವೇಳೆ ಮಾರ್ಗ ಮಧ್ಯೆಯೇ ನಿಕ್ಕಿ ಸಾವನ್ನಪ್ಪಿದ್ದಳು. ಇದನ್ನೂ ಓದಿ: ವರದಕ್ಷಿಣೆ ಕಿರುಕುಳ; ಬೆಂಕಿ ಹಚ್ಚಿ ಮಹಿಳೆ ಕೊಂದ ಪತಿ, ಅತ್ತೆ-ಮಾವ
ಮಹಿಳೆಯ ಹತ್ಯೆಯ ಭಯಾನಕ ದೃಶ್ಯ ಕಂಡ ಆಕೆಯ ಪುಟ್ಟ ಮಗ, ಮಾಧ್ಯಮಗಳ ಮುಂದೆ ತಂದೆ, ಅಜ್ಜ ಹಾಗೂ ಅಜ್ಜಿಯ ಕ್ರೌರ್ಯವನ್ನು ಬಿಚ್ಚಿಟ್ಟಿದ್ದ. ಮಾಧ್ಯಮಗಳ ಮುಂದೆ, ಅಪ್ಪ, ಅಜ್ಜ ಮತ್ತು ಅಜ್ಜಿ ಸೇರಿ ಅಮ್ಮನ ಕೆನ್ನೆಗೆ ಹೊಡೆದ್ರೂ, ಆಮೇಲೆ ಅಮ್ಮನ ಮೇಲೆ ಏನೋ ಹಾಕಿ ಬೆಂಕಿ ಹಚ್ಚಿದ್ರೂ ಎಂದು ಬಾಲಕ ಹೇಳಿದ್ದ. ಈ ಸಂಬಂಧ ನಿಕ್ಕಿಯ ಸಹೋದರಿ ನೀಡಿದ ದೂರಿನ ಮೇರೆಗೆ, ಕಸ್ನಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿತ್ತು.
ಬಂಧನದಲ್ಲಿದ್ದ ವಿಪಿನ್ ಸ್ಥಳಮಹಜರಿಗೆ ಕರೆದೊಯ್ಯುವಾಗ ಪರಾರಿಯಾಗಲು ಯತ್ನಿಸಿದ್ದ. ಅಲ್ಲದೇ ಪೊಲೀಸರಿಂದ ಪಿಸ್ತೂಲ್ ಕಸಿದುಕೊಳ್ಳಲು ಯತ್ನಿಸಿದ್ದ. ಈ ವೇಳೆ ಆತನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದರು. ಇನ್ನೂ ಆಸ್ಪತ್ರೆಯಲ್ಲಿದ್ದಾಗ, ನಿಕ್ಕಿಯೇ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ್ದಾಳೆ. ನನಗೆ ಯಾವ ಪಶ್ಚಾತ್ತಾಪವೂ ಇಲ್ಲ ಎಂದಿದ್ದ. ಇದನ್ನೂ ಓದಿ: ಅಮ್ಮನ ಕೆನ್ನೆಗೆ ಹೊಡೆದು ಬೆಂಕಿ ಹಚ್ಚಿದ್ರು – ವರದಕ್ಷಿಣೆ ಕೊಲೆಗೆ ಸಾಕ್ಷಿಯಾದ ಪುಟ್ಟ ಕಂದ
ಲಕ್ನೋ: ಯಾತ್ರಿಕರನ್ನು (Pilgrims) ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿಗೆ (Tractor-Trolley) ಟ್ರಕ್ (Truck) ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ಯಾತ್ರಿಕರು ಸಾವನ್ನಪ್ಪಿದ್ದು, 43 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಬುಲಂದ್‌ಶಹರ್ (Bulandshahr) ಜಿಲ್ಲೆಯಲ್ಲಿ ನಡೆದಿದೆ.
ಅರ್ನಿಯಾ ಬೈಪಾಸ್ ಬಳಿಯ ಬುಲಂದ್‌ಶಹರ್-ಅಲಿಗಢ ಗಡಿಯಲ್ಲಿ ಸೋಮವಾರ ನಸುಕಿನ ಜಾವ 2:10ರ ಸುಮಾರಿಗೆ ಅಪಘಾತ ಸಂಭವಿಸಿದೆ. ಮೃತರಲ್ಲಿ ಇಬ್ಬರು ಮಕ್ಕಳು ಸೇರಿದ್ದಾರೆ. ಗಾಯಗೊಂಡಿರುವ ಯಾತ್ರಿಕರ ಪೈಕಿ 12 ಮಂದಿ ಅಪ್ರಾಪ್ತರಾಗಿದ್ದಾರೆ. ಕ್ಯಾಂಟರ್ ಟ್ರಕ್ ಹಿಂದಿನಿಂದ ಟ್ರ‍್ಯಾಕ್ಟರ್ ಟ್ರಾಲಿಗೆ ಡಿಕ್ಕಿ ಹೊಡೆದ ಪರಿಣಾಮ ಅದು ಪಲ್ಟಿಯಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ದಿನೇಶ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಇದನ್ನೂ ಓದಿ: Shivamogga | ತಾನೇ ಜನ್ಮ ನೀಡಿದ ನವಜಾತ ಶಿಶುವಿನ ಕತ್ತು ಕೊಯ್ದು ಕೊಂದಿದ್ದ ಲೇಡಿ ಅರೆಸ್ಟ್
ಟ್ರಾಕ್ಟರ್ ಟ್ರಾಲಿಯಲ್ಲಿ 61 ಜನರು ಇದ್ದರು. ಯಾತ್ರಿಕರು ಕಾಸ್ಗಂಜ್ ಜಿಲ್ಲೆಯ ರಫತ್‌ಪುರ ಗ್ರಾಮದಿಂದ ರಾಜಸ್ಥಾನದ ಜಹರ್‌ಪೀರ್‌ಗೆ ತೀರ್ಥಯಾತ್ರೆಗಾಗಿ ಪ್ರಯಾಣಿಸುತ್ತಿದ್ದರು. 10 ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. 10 ಮಂದಿ ಗಾಯಾಳುಗಳನ್ನು ಅಲಿಘರ್ ವೈದ್ಯಕೀಯ ಕಾಲೇಜಿಗೆ, ಇನ್ನೂ 10 ಜನರನ್ನು ಬುಲಂದ್‌ಶಹರ್ ಜಿಲ್ಲಾ ಆಸ್ಪತ್ರೆಗೆ ಮತ್ತು 23 ಮಂದಿಯನ್ನು ಖುರ್ಜಾದ ಕೈಲಾಶ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬೆಳಗಾವಿ| ದೇವಸ್ಥಾನದ ಜಾಗಕ್ಕಾಗಿ ಕೊಲೆ – ಐವರಿಗೆ ಜೀವಾವಧಿ ಶಿಕ್ಷೆ ಪ್ರಕಟ
ಮೃತರನ್ನು ಟ್ರ‍್ಯಾಕ್ಟರ್ ಚಾಲಕ ಇ.ಯು. ಬಾಬು (40), ರಾಂಬೆಟಿ (65), ಚಾಂದನಿ (12), ಘನಿರಾಮ್ (40), ಮೋಕ್ಷಿ (40), ಶಿವಾಂಶ್ (6), ಯೋಗೇಶ್ (50) ಮತ್ತು ವಿನೋದ್ (45) ಎಂದು ಗುರುತಿಸಲಾಗಿದ್ದು, ಎಲ್ಲರೂ ಕಾಸ್ಗಂಜ್ ಜಿಲ್ಲೆಯ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಶ್ರುತಿ, ಎಸ್‌ಎಸ್‌ಪಿ ಸಿಂಗ್ ಮತ್ತು ಇತರ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆಸ್ಪತ್ರೆಯಲ್ಲಿರುವ ಗಾಯಾಳುಗಳನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳದ ಅಪಪ್ರಚಾರಕ್ಕೆ ಫಂಡಿಂಗ್ – ಸಮೀರ್ ವಿರುದ್ಧ ಐಟಿಗೆ ದೂರು ನೀಡಲು ಚಿಂತನೆ
ಲಕ್ನೋ: 12 ದಿನಗಳ ಹಿಂದೆ ಮಧ್ಯಪ್ರದೇಶದ ರೈಲಿನಿಂದ ನಾಪತ್ತೆಯಾಗಿದ್ದ ಮಹಿಳಾ ತರಬೇತಿ ವಕೀಲೆ ಅರ್ಚನಾ ತಿವಾರಿ (Archana Tiwari) ಉತ್ತರ ಪ್ರದೇಶದ ಲಿಂಖಿಂಪುರ ಖೇರಿ ನಗರದಲ್ಲಿ (Lakhimpur Kheri City) ಪತ್ತೆಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭೋಪಾಲ್‌ನ (Bhopal) ಸರ್ಕಾರಿ ರೈಲ್ವೆ ಪೊಲೀಸರು (GRP) ಅರ್ಚನಾರನ್ನ ನೇಪಾಳ ಗಡಿಯಲ್ಲಿ ಪತ್ತೆಹಚ್ಚಿದ್ದು, ಭೋಪಾಲ್‌ಗೆ ಕರೆದೊಯ್ದು ವಿಚಾರಣೆ ನಡೆಸುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಕೇಂದ್ರದಿಂದ `ಆನ್‌ಲೈನ್ ಗೇಮಿಂಗ್ ತಡೆ’ ಮಸೂದೆಗೆ ಅನುಮೋದನೆ
ರಕ್ಷಾಬಂಧನ ಹಬ್ಬಕ್ಕಾಗಿ ಇದೇ ಆಗಸ್ಟ್ 7-8ರ ತಡರಾತ್ರಿ ಅರ್ಚನಾ ಇಂದೋರ್‌ನಿಂದ ಕಟ್ನೆಗೆ ರೈಲಿನಲ್ಲಿ ಹೊರಟಿದ್ದರು. ಆದ್ರೆ ತಮ್ಮ ನಿಗದಿತ ಸ್ಥಾನ ತಲುಪದಿದ್ದಾಗ ನಾಪತ್ತೆಯಾಗಿರುವುದು ಗೊತ್ತಾಯಿತು. ಇದನ್ನೂ ಓದಿ: ಪ್ರಧಾನಿ ಮೋದಿ ಭೇಟಿಯಾದ ಚೀನಾ ವಿದೇಶಾಂಗ ಸಚಿವ ವಾಂಗ್ ಯಿ
ವಿಚಾರಣೆ ಬಳಿಕ ಹೊರ ಬರಬೇಕಿದೆ ಸತ್ಯ
ಕಳೆದ 12 ದಿನಗಳಿಂದ ಹುಡುಕಾಟ ನಡೆಸುತ್ತಿದ್ದ ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಸಿಬ್ಬಂದಿ ಕೊನೆಗೂ ಅರ್ಚನಾರನ್ನ ಭಾರತ-ನೇಪಾಳ ಗಡಿಯಲ್ಲಿ ಪತ್ತೆಹಚ್ಚಿದ್ದಾರೆ ಎಂದು ರೈಲ್ವೆ ಎಸ್ಪಿ ರಾಹುಲ್ ಕುಮಾರ್ ಲೋಧಾ ಹೇಳಿದ್ದಾರೆ. ಪೊಲೀಸರು ಅರ್ಚನಾರನ್ನ ಭೋಪಾಲ್‌ಗೆ ಕರೆತರುತ್ತಿದ್ದು, ಹೇಳಿಕೆ ದಾಖಲಿಸಿದ ಬಳಿಕವೇ ಇಡೀ ಘಟನಾ ವಿವರ ತಿಳಿಯಲಿದೆ ಎಂದು ತಿಳಿಸಿದ್ದಾರೆ.
ರಕ್ಷಣಾ ಬಂಧನ ಹಬ್ಬಕ್ಕೆ ನರ್ಮದಾ ಎಕ್ಸ್‌ಪ್ರೆಸ್ ರೈಲಿನಲ್ಲಿ ಹೊರಟಿದ್ದ ಅರ್ಚನಾ ಇಂದೊರ್‌ನಿಂದ ಹೊರಟಿದ್ದರು, ಕೊನೆಯದಾಗಿ ಇಟಾರ್ಸಿ ರೈಲು ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದರು. ಆ ಬಳಿಕ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಹಾಗಾಗಿ ಸಂಪರ್ಕ ಸಾಧ್ಯವಾಗಿರಲಿಲ್ಲ.
ಲಕ್ನೋ: ಉತ್ತರ ಪ್ರದೇಶದ (Uttar Pradesh) ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ಅವರನ್ನು ಸದನದಲ್ಲೇ ಹೊಗಳಿದ್ದಕ್ಕೆ ಸಮಾಜವಾದಿ ಪಕ್ಷದ ಶಾಸಕಿ ಪೂಜಾ ಪಾಲ್ (Pooja Pal) ಅವರನ್ನು ಅಖಿಲೇಶ್ ಯಾದವ್ ಪಕ್ಷದಿಂದಲೇ ಹೊರಹಾಕಿದ್ದಾರೆ.
ನೀವು ಪಕ್ಷ ವಿರೋಧಿ ಚಟುವಟಿಕೆಗಳನ್ನು ನಡೆಸಿದ್ದೀರಿ. ಎಚ್ಚರಿಕೆ ನೀಡಿದ ನಂತರವೂ ನೀವು ಈ ಚಟುವಟಿಕೆಗಳನ್ನು ಮುಂದುವರಿಸಿದ್ದೀರಿ. ನೀವು ಮಾಡಿದ ಕೆಲಸ ಪಕ್ಷ ವಿರೋಧಿ ಮತ್ತು ಗಂಭೀರ ಅಶಿಸ್ತಿನ ಕೃತ್ಯವಾಗಿದೆ. ಆದ್ದರಿಂದ ನಿಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಮಾಜವಾದಿ ಪಕ್ಷದಿಂದ (SP) ಉಚ್ಚಾಟಿಸಲಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಪಕ್ಷದಿಂದ ಉಚ್ಚಾಟಿಸಿದ ಬಳಿಕವೂ ಪೂಜಾ ಪಾಲ್ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಯೋಗಿ ಸರ್ಕಾರ ಬಂದ ನಂತರ ರಾಜ್ಯದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸುಧಾರಣೆಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
#WATCH | Lucknow, UP | Addressing during the 24-hour marathon discussion on ‘Vision Document 2047’ in the UP Assembly, Samajwadi Party MLA Pooja Pal says, “… Chief Minister Yogi Adityanath gave justice to many women like me by bringing in policies such as zero tolerance that… pic.twitter.com/fN0Agp2nka
ಪ್ರಯಾಗ್‌ರಾಜ್‌ನಲ್ಲಿ ನನಗಿಂತ ಹೆಚ್ಚು ನೋವನ್ನು ಅನುಭವಿಸಿದ ಮಹಿಳೆಯರ ಧ್ವನಿಯನ್ನು ನೀವು ಕೇಳಲು ಸಾಧ್ಯವಾಗದಿರಬಹುದು. ಆದರೆ ನಾನು ಅವರ ಧ್ವನಿ. ನನ್ನನ್ನು ಶಾಸಕಿಯಾಗಿ ಆಯ್ಕೆ ಮಾಡಿ ವಿಧಾನಸಭೆಗೆ ಕಳುಹಿಸಲಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ತಾಯಂದಿರು ಮತ್ತು ಸಹೋದರಿಯರ ಧ್ವನಿ ನಾನು. ಪ್ರಯಾಗ್‌ರಾಜ್‌ನಲ್ಲಿರುವ ಪೂಜಾ ಪಾಲ್‌ಗೆ ಮಾತ್ರವಲ್ಲದೆ ಅತಿಕ್ ಅಹ್ಮದ್‌ನಿಂದ ತೊಂದರೆಗೊಳಗಾದ ಎಲ್ಲಾ ಜನರಿಗೆ ಮುಖ್ಯಮಂತ್ರಿಗಳು ನ್ಯಾಯ ಒದಗಿಸಿದ್ದಾರೆ. ನಾನು ಪಕ್ಷದಲ್ಲಿ ಇದ್ದರೂ ಮೊದಲ ದಿನದಿಂದಲೇ ಇದನ್ನೇ ಹೇಳುತ್ತಿದ್ದೇನೆ ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇದನ್ನೂಓದಿ: ಗ್ಯಾಂಗ್ಸ್ಟರ್ ಅತೀಕ್ ಅಹ್ಮದ್ ತಲೆಗೆ 1, ದೇಹಕ್ಕೆ 8 ಗುಂಡೇಟು
#WATCH | Expelled SP MLA Pooja Pal says, “…Perhaps you could not hear the women in Prayagraj who were even more worried than me. But I am their voice, I have been elected as an MLA and sent to the Assembly. I am the voice of mothers and sisters who have lost their loved ones.… https://t.co/cnE7hzb0Pepic.twitter.com/8MaF0iWtZR
ಪೂಜಾ ಪಾಲ್ ಯಾರು?
ಪೂಜಾ ಪಾಲ್ ಅಲಹಾಬಾದ್ ನಗರದ ಪಶ್ಚಿಮ ಕ್ಷೇತ್ರದ ಬಿಎಸ್‌ಪಿ ಶಾಸಕ ರಾಜು ಪಾಲ್ ಅವರ ಪತ್ನಿ. 2005 ರಲ್ಲಿ ಪೂಜಾ ಪಾಲ್ ಮದುವೆಯಾದ 10 ದಿನದಲ್ಲೇ ರಾಜು ಪಾಲ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಮಾಫಿಯಾ ಡಾನ್ ಅತಿಕ್ ಅಹ್ಮದ್ (Atiq Ahmed) ಸಹೋದರ ಅಶ್ರಫ್ ಮೇಲೆ ಈ ಹತ್ಯೆ ಮಾಡಿದ ಆರೋಪ ಬಂದಿತ್ತು. ನಂತರ ಈ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಅತಿಕ್ ಅಹ್ಮದ್ ಸಹೋದರ ಖಾಲಿದ್ ಅಜೀಮ್ ವಿರುದ್ಧ ಬಿಎಸ್‌ಪಿಯಿಂದ ಪೂಜಾ ಪಾಲ್ ಸ್ಪರ್ಧಿಸಿದ್ದರು. ಆದರೆ ಈ ಚುನಾವಣೆಯಲ್ಲಿ ಪೂಜಾ ಸೋತಿದ್ದರು. ನಂತರ 2007 ಮತ್ತು 2012 ರ ಚುನಾವಣೆಯಲ್ಲಿ ಪೂಜಾ ಪಾಲ್ ಈ ಕ್ಷೇತ್ರದಿಂದ ಜಯಗಳಿಸಿದ್ದರು.
ಈ ಮಧ್ಯೆ ಬಿಜೆಪಿ ನಾಯಕ ಮತ್ತು ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರನ್ನು ಭೇಟಿಯಾಗಿದ್ದಕ್ಕೆ ಫೆಬ್ರವರಿ 2018 ರಲ್ಲಿ ಬಿಎಸ್‌ಪಿಯಿಂದ ಉಚ್ಚಾಟಿಸಲಾಗಿತ್ತು. 2019 ರಲ್ಲಿ ಸಮಾಜವಾದಿ ಪಕ್ಷವನ್ನು ಸೇರಿದ್ದ ಪೂಜಾ ಪಾಲ್ ಕೌಶಂಬಿ ಜಿಲ್ಲೆಯ ಚೈಲ್ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕಿಯಾಗಿ ಆಯ್ಕೆಯಾಗಿದ್ದರು.
ಪೂಜಾ ಪಾಲ್ ಹೇಳಿದ್ದೇನು?
ನನ್ನ ಪತಿಯನ್ನು ಹತ್ಯೆ ಮಾಡಿದವರು ಯಾರು ಎನ್ನುವುದು ಎಲ್ಲರಿಗೂ ಗೊತ್ತಿತ್ತು. ಯಾರಿಂದಲೂ ನ್ಯಾಯ ಸಿಗದೇ ಇದ್ದಾಗ ನನ್ನ ಮಾತು ಕೇಳಿ ನನಗೆ ನ್ಯಾಯ ಒದಗಿಸಿದ್ದಕ್ಕೆ ಯೋಗಿ ಆದಿತ್ಯನಾಥ್ ಅವರಿಗೆ ಧನ್ಯವಾದಗಳು. ಅಪರಾಧಿಗಳ ವಿರುದ್ಧ ಶೂನ್ಯ ಸಹಿಷ್ಣುತೆ ನೀತಿಗಳನ್ನು ತರುವ ಮೂಲಕ ಮುಖ್ಯಮಂತ್ರಿ ಪ್ರಯಾಗ್‌ರಾಜ್‌ನಲ್ಲಿ ನನ್ನಂತಹ ಅನೇಕ ಇತರ ಮಹಿಳೆಯರಿಗೆ ನ್ಯಾಯ ಒದಗಿಸಿದ್ದಾರೆ. ಇಂದು ಇಡೀ ರಾಜ್ಯವೇ ಸಿಎಂ ಅವರನ್ನು ವಿಶ್ವಾಸದಿಂದ ನೋಡುತ್ತಿದೆ. ಮುಖ್ಯಮಂತ್ರಿಗಳು ನನ್ನ ಪತಿಯ ಕೊಲೆಗಾರ ಅತಿಕ್ ಅಹ್ಮದ್‌ನನ್ನು ಸಮಾಧಿ ಮಾಡಿದ್ದಾರೆ ಎಂದು ಶ್ಲಾಘಿಸಿದ್ದರು.
ಗುಂಡಿಕ್ಕಿ ಹತ್ಯೆ:
ರಾಜು ಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್ ಪಾಲ್ ಅವರನ್ನು ಫೆಬ್ರವರಿ 2023 ರಲ್ಲಿ ಪ್ರಯಾಗ್‌ರಾಜ್‌ನ ಸುಲೇಮ್ ಸರಾಯ್ ಪ್ರದೇಶದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.
ಈ ಪ್ರಕರಣದ ಪ್ರಮುಖ ಆರೋಪಿಗಳಾದ ಅತಿಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ಅಹ್ಮದ್‌ನನ್ನು ಪೊಲೀಸರು ಬಂಧಿಸಿದ್ದರು. ಏಪ್ರಿಲ್ 15, 2023 ರಂದು ಇಬ್ಬರನ್ನು ಪ್ರಯಾಗ್‌ರಾಜ್‌ನಲ್ಲಿ ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯುತ್ತಿದ್ದರು. ಈ ವೇಳೆ ಪತ್ರಕರ್ತರಂತೆ ನಟಿಸಿದ್ದ ಇಬ್ಬರು ಇವರ ಮೇಲೆ ಗುಂಡಿನ ದಾಳಿ ನಡೆಸಿ ಅಣ್ಣ, ತಮ್ಮನನ್ನು ಹತ್ಯೆ ಮಾಡಿದ್ದರು.
ಲಕ್ನೋ: ಕಿವುಡ ಮತ್ತು ಮೂಕ ಮಹಿಳೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ ದುರುಳರಿಗೆ 24 ಗಂಟೆಯೊಳಗೆ ಪೊಲೀಸರು ಗುಂಡೇಟು ನೀಡಿದ್ದಾರೆ.
ಉತ್ತರ ಪ್ರದೇಶದಲ್ಲಿ ಸೋಮವಾರ ಮನೆಗೆ ಹಿಂದಿರುಗುತ್ತಿದ್ದಾಗ ವಿಶೇಷಚೇತನ ಮಹಿಳೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಜಿಲ್ಲೆಯ ಉನ್ನತ ಅಧಿಕಾರಿಗಳ ಮನೆಗಳಿಂದ ಕೆಲವು ಮೀಟರ್ ದೂರದಲ್ಲಿ ಈ ಘಟನೆ ನಡೆದಿದ್ದು, ಅಲ್ಲಿ ಸಿಸಿಟಿವಿ ಕ್ಯಾಮೆರಾಗಳು ಆಫ್ ಆಗಿರುವುದು ಕಂಡುಬಂದಿದೆ. ಘಟನೆ ನಡೆದ 24 ಗಂಟೆಗಳ ಒಳಗೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಮಹಿಳೆ ತನ್ನ ಮಾವನ ಮನೆಯಿಂದ ಬಲರಾಂಪುರ ಜಿಲ್ಲೆಯ ಮನೆಗೆ ಹೋಗುತ್ತಿದ್ದಾಗ, ಆಕೆಯನ್ನು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಇಬ್ಬರು ಪುರುಷರು ಅತ್ಯಾಚಾರ ಎಸಗಿದ್ದಾರೆ. ಮೂಕಿಯಾಗಿದ್ದರಿಂದ ಮಹಿಳೆ ಸಹಾಯಕ್ಕೆ ಕೂಗಿಕೊಳ್ಳಲು ಸಾಧ್ಯವಾಗಲಿಲ್ಲ.
ಒಂದು ಗಂಟೆಯ ನಂತರವೂ ಮಹಿಳೆ ಮನೆಗೆ ಹಿಂತಿರುಗದಿದ್ದಾಗ, ಕುಟುಂಬದವರು ಆಕೆಯನ್ನು ಹುಡುಕಲು ಪ್ರಾರಂಭಿಸಿದಾಗ ಪೊಲೀಸ್ ಠಾಣೆಯ ಬಳಿಯ ಹೊಲದಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ಆಕೆ ಪತ್ತೆಯಾಗಿದ್ದಾಳೆ. ಮಹಿಳೆಯನ್ನು ಜಿಲ್ಲಾ ಮಹಿಳಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಮಹಿಳೆಯ ಸಹೋದರ ತನ್ನ ಸಹೋದರಿಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿ ದೂರು ದಾಖಲಿಸಿದ ನಂತರ, ಪೊಲೀಸರು ತನಿಖೆ ಆರಂಭಿಸಿ 24 ಗಂಟೆಗಳ ಒಳಗೆ ಇಬ್ಬರು ಆರೋಪಿಗಳಾದ ಅಂಕುರ್ ವರ್ಮಾ ಮತ್ತು ಹರ್ಷಿತ್ ಪಾಂಡೆ ಅವರನ್ನು ಬಂಧಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಆಪರೇಷನ್ ತ್ರಿನೇತ್ರ ಅಡಿಯಲ್ಲಿ, ಕಣ್ಗಾವಲು ಹೆಚ್ಚಿಸಲು, ಕಾನೂನು ಮತ್ತು ಸುವ್ಯವಸ್ಥೆಯನ್ನು ಸುಧಾರಿಸಲು ಜಿಲ್ಲೆಗಳಾದ್ಯಂತ ನೂರಾರು ಸಿಸಿಟಿವಿ ಕ್ಯಾಮೆರಾಗಳನ್ನು ಸ್ಥಾಪಿಸಲಾಗಿದೆ. ಈ ಸಿಸಿಟಿವಿ ಕ್ಯಾಮೆರಾಗಳು ಸಾರ್ವಜನಿಕ ಸ್ಥಳಗಳನ್ನು ಮೇಲ್ವಿಚಾರಣೆ ಮಾಡುತ್ತಿವೆ.