Tag: uttar pradesh

  • ಮದುವೆ ದಿಬ್ಬಣಕ್ಕೆ ಹೊರಟಿದ್ದ ಕಾರು ಭೀಕರ ಅಪಘಾತ – ವರ ಸೇರಿ 8 ಮಂದಿ ದುರ್ಮರಣ

    ಮದುವೆ ದಿಬ್ಬಣಕ್ಕೆ ಹೊರಟಿದ್ದ ಕಾರು ಭೀಕರ ಅಪಘಾತ – ವರ ಸೇರಿ 8 ಮಂದಿ ದುರ್ಮರಣ

    ಲಕ್ನೋ: ಮದುವೆ ದಿಬ್ಬಣಕ್ಕೆ ಹೊರಟಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ವರ ಸೇರಿದಂತೆ 8 ಮಂದಿ ದಾರುಣ ಸಾವಿಗೀಡಾಗಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಸಂಭಾಲ್‌ ಜಿಲ್ಲೆಯಲ್ಲಿ ನಡೆದಿದೆ.

    ಬೊಲೆರೊ ಎಸ್‌ಯುವಿ ಕಾರು ಕಾಲೇಜಿನ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ 24 ವರ್ಷದ ವರ ಸೇರಿದಂತೆ ಒಂದೇ ಕುಟುಂಬದ ಎಂಟು ಸದಸ್ಯರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಲೇಡಿಸ್ ಬಾರ್‌ಗಳಲ್ಲಿ ನಿಯಮ ಉಲ್ಲಂಘನೆ – ಪ್ರತಿದಿನ ಸಿಸಿಟಿವಿ ಫೂಟೇಜ್ ಕೊಡುವಂತೆ ಸಿಸಿಬಿ ರೂಲ್ಸ್

    ಬೆಳಗ್ಗೆ 6:30 ರ ಸುಮಾರಿಗೆ ಜೇವಾನೈ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಜನತಾ ಇಂಟರ್ ಕಾಲೇಜು ಬಳಿ ಚಾಲಕನ ನಿಯಂತ್ರಣ ತಪ್ಪಿದಾಗ ಬೊಲೆರೊ ಕಾರು ಅತಿ ವೇಗದಲ್ಲಿ ಚಲಿಸುತ್ತಿತ್ತು ಎಂದು ವರದಿಯಾಗಿದೆ. ವಾಹನವು ಗೋಡೆಗೆ ಡಿಕ್ಕಿ ಹೊಡೆದು ನಂತರ ಪಲ್ಟಿಯಾಗಿದೆ.

    ವಾಹನದಲ್ಲಿ ಹತ್ತು ಜನರು ಇದ್ದರು. ಅವರೆಲ್ಲರೂ ಒಂದೇ ಕುಟುಂಬದ ಸದಸ್ಯರು. ಮದುವೆ ಸಮಾರಂಭಕ್ಕೆ ಹೋಗುತ್ತಿದ್ದರು. ಸ್ಥಳದಲ್ಲೇ ಮೃತಪಟ್ಟವರಲ್ಲಿ ವರ ಸೂರಜ್ ಕೂಡ ಸೇರಿದ್ದಾರೆ. ಸಂಭಾಲ್‌ನ ಹರ್ ಗೋವಿಂದಪುರ ಗ್ರಾಮದಿಂದ ನೆರೆಯ ಬುಡೌನ್ ಜಿಲ್ಲೆಯ ಸಿರ್ತೌಲ್‌ನಲ್ಲಿರುವ ವಧುವಿನ ಗ್ರಾಮಕ್ಕೆ ಪ್ರಯಾಣಿಸುತ್ತಿದ್ದರು. ಇದನ್ನೂ ಓದಿ: ಬಿಹಾರದಲ್ಲಿ ಬಿಜೆಪಿ ನಾಯಕನನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

    ಅಪಘಾತದ ತೀವ್ರತೆಗೆ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರ ಗಾಯಗೊಂಡಿದ್ದ ಇತರ ಮೂವರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಬದುಕುಳಿದ ಇಬ್ಬರು ಗಂಭೀರ ಸ್ಥಿತಿಯಲ್ಲಿದ್ದಾರೆ. ಅವರನ್ನು ಅಲಿಘರ್‌ನ ಉನ್ನತ ವೈದ್ಯಕೀಯ ಕೇಂದ್ರಕ್ಕೆ ರವಾನಿಸಲಾಗಿದೆ.

    ವರ ಸೂರಜ್ (24), ವರನ ಅತ್ತಿಗೆ ಆಶಾ (26), ಆಶಾ ಅವರ ಮಗಳು ಐಶ್ವರ್ಯ (2), ಮನೋಜ್ ಅವರ ಮಗ ವಿಷ್ಣು (6), ಮತ್ತು ವರನ ಚಿಕ್ಕಮ್ಮ ಸೇರಿ ಒಟ್ಟು 8 ಮಂದಿ ಮೃತಪಟ್ಟಿದ್ದಾರೆ.

  • ಢಾಬಾದಲ್ಲಿ ಬ್ಲಾಂಕೆಟ್ ಸುತ್ತಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆ – ಬಾಯ್‌ಫ್ರೆಂಡ್‌ ಅರೆಸ್ಟ್‌

    ಢಾಬಾದಲ್ಲಿ ಬ್ಲಾಂಕೆಟ್ ಸುತ್ತಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆ – ಬಾಯ್‌ಫ್ರೆಂಡ್‌ ಅರೆಸ್ಟ್‌

    ಲಕ್ನೋ: ಉತ್ತರ ಪ್ರದೇಶದ (Uttar Pradesh) ಮಿರ್ಜಾಮುರಾದ್ ಪ್ರದೇಶದ ಢಾಬಾ ಒಂದರಲ್ಲಿ ಯುವತಿಯೊಬ್ಬಳ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಪ್ರಿಯಕರನನ್ನು ಪೊಲೀಸರು (Police) ಬಂಧಿಸಿದ್ದಾರೆ.

    ಢಾಬಾದಲ್ಲಿ ಎಂಎಸ್ಸಿ ವಿದ್ಯಾರ್ಥಿನಿ (Student) ಅಲ್ಕಾ ಬಿಂದ್ (22) ಮೃತದೇಹ ಗಂಟಲು ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಕಾಲೇಜಿಗೆ ತೆರಳಿದ್ದ ನಾಪತ್ತೆಯಾದ ವರದಿಯಾದ ಕೆಲವೇ ಗಂಟೆಗಳ ಆಕೆಯ ಶವ ಪತ್ತೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಭದೋಹಿಯಲ್ಲಿರುವ ತನ್ನ ಸಹೋದರಿಯ ಮನೆಯಿಂದ ಆರೋಪಿ ಸಹಾಬ್ ಬಿಂದ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಗುತ್ತಿಗೆದಾರನ ಹತ್ಯೆ ಆರೋಪಿ ಮನೆಗೆ ಬೆಂಕಿ – 6 ಜನ ಅರೆಸ್ಟ್‌

    ಯುವತಿಯ ಮೊಬೈಲ್‌ ಕರೆ ದಾಖಲೆಗಳು ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆತನನ್ನು ಬಂಧಿಸಲಾಗಿದೆ . ಬಂಧಿಸುವ ವೇಳೆ, ಪೊಲೀಸರಿಂದ ಗನ್ ಕಸಿದುಕೊಂಡು ಗುಂಡು ಹಾರಿಸಲು ಪ್ರಯತ್ನಿಸಿದ್ದ. ತಕ್ಷಣ ಅವನ ಕಾಲಿಗೆ ಗುಂಡು ಹಾರಿಸಿ, ಪೊಲೀಸರು ಬಂಧಿಸಿದ್ದಾರೆ.

    ಆರೋಪಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮದುವೆಯ ಒತ್ತಡ ಮತ್ತು ಪದೇ ಪದೇ ಹಣಕ್ಕಾಗಿ ಬೇಡಿಕೆ ಇಟ್ಟ ಕಾರಣ ಯುವತಿಯನ್ನು ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕೊರಿಯರ್‌ ಕೊಡುವ ನೆಪದಲ್ಲಿ ಬಂದು ಟೆಕ್ಕಿ ಮೇಲೆ ಅತ್ಯಾಚಾರ – ಮುಖಕ್ಕೆ ಸ್ಪ್ರೇ ಮಾಡಿ ಪ್ರಜ್ಞೆ ತಪ್ಪಿಸಿ ಕುಕೃತ್ಯ

  • UP | ರಾಂಗ್ ರೂಟ್‌ಲ್ಲಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದ ಟ್ರಕ್ – ತಂದೆ, 4 ಮಕ್ಕಳು ಸೇರಿ ಐವರು ದುರ್ಮರಣ

    UP | ರಾಂಗ್ ರೂಟ್‌ಲ್ಲಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದ ಟ್ರಕ್ – ತಂದೆ, 4 ಮಕ್ಕಳು ಸೇರಿ ಐವರು ದುರ್ಮರಣ

    ಲಕ್ನೋ: ರಾಂಗ್ ರೂಟ್‌ಲ್ಲಿ ವೇಗವಾಗಿ ಬಂದ ಟ್ರಕ್‌ವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 4 ಮಕ್ಕಳು ಸೇರಿ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಬುಲಂದ್ ಶಹರ್ ರಸ್ತೆಯ ಮಿನಿಲ್ಯಾಂಡ್ (Miniland) ಶಾಲೆ ಬಳಿ ನಡೆದಿದೆ.

    ಮೃತರನ್ನು ರಫೀಕ್ ನಗರದ ನಿವಾಸಿ ಡ್ಯಾನಿಶ್ (40), ಅವರ ಇಬ್ಬರು ಮಕ್ಕಳು ಹಾಗೂ ಸಹೋದರನ ಮಕ್ಕಳು ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ ಸ್ನೇಹಿತನ ತೋಟದಲ್ಲಿರುವ ಈಜುಕೊಳದಿಂದ ಬೈಕ್‌ನಲ್ಲಿ ಹಿಂದಿರುಗುವಾಗ ಈ ಘಟನೆ ಸಂಭವಿಸಿದೆ.ಇದನ್ನೂ ಓದಿ:ಬೈಕ್‌ ಅಪಘಾತ – ವಚನಾನಂದ ಶ್ರೀ ಸಹೋದರ ಸಾವು

    ಟ್ರಕ್ ಡಿಕ್ಕಿಯಾದ ರಭಸಕ್ಕೆ ಬೈಕ್ ಸಂಪೂರ್ಣವಾಗಿ ಜಖಂಗೊಂಡಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಡಿಕ್ಕಿ ಹೊಡೆದ ಟ್ರಕ್‌ನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.ಇದನ್ನೂ ಓದಿ: ಕೈಕೊಟ್ಟು ಬೇರೆ ಮದುವೆಯಾಗಲು ನಿರ್ಧರಿಸಿದ ಪ್ರೇಯಸಿ – ಲಾಡ್ಜ್‌ಗೆ ಕರೆಸಿ 20 ಬಾರಿ ಇರಿದು ಕೊಂದ ಪಾಗಲ್‌ ಪ್ರೇಮಿ

  • ಆಸ್ತಿ ಇದ್ರೂ ಮದುವೆಯಾಗಿಲ್ಲ ಎಂದ ವಿಡಿಯೋ ವೈರಲ್‌ – 18 ಎಕರೆ ಆಸ್ತಿಗಾಗಿ ಎಂಟ್ರಿ ಕೊಟ್ಟ ಕಿಲ್ಲರ್‌ ಬ್ಯೂಟಿ!

    ಆಸ್ತಿ ಇದ್ರೂ ಮದುವೆಯಾಗಿಲ್ಲ ಎಂದ ವಿಡಿಯೋ ವೈರಲ್‌ – 18 ಎಕರೆ ಆಸ್ತಿಗಾಗಿ ಎಂಟ್ರಿ ಕೊಟ್ಟ ಕಿಲ್ಲರ್‌ ಬ್ಯೂಟಿ!

    ಲಕ್ನೋ: ಮಹಿಳೆಯೊಬ್ಬಳು (Woman) 18 ಎಕರೆ ಆಸ್ತಿಗಾಗಿ ವ್ಯಕ್ತಿಯೊಬ್ಬನನ್ನು ಮದುವೆಯಾಗಿ, ಕೆಲವೇ ದಿನಗಳಲ್ಲಿ ಆತನನ್ನು ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ (Uttar Pradesh) ನಡೆದಿದೆ.

    ಹತ್ಯೆಯಾದ ವ್ಯಕ್ತಿಯನ್ನು ಮಧ್ಯಪ್ರದೇಶದ (Madhya Pradesh) ಜಬಲ್ಪುರ ಜಿಲ್ಲೆಯ ಪಡ್ವಾರ್ (ಖಿಟೋಲಾ) ಗ್ರಾಮದ ಇಂದ್ರಕುಮಾರ್ ತಿವಾರಿ (45) ಎಂದು ಗುರುತಿಸಲಾಗಿದೆ. ಹತ್ಯೆ ಆರೋಪಿಯನ್ನು ಸಾಹಿಬಾ ಬಾನೋ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಭಯಾನಕ ಹತ್ಯೆ – ಮಹಿಳೆಯ ಕೊಲೆ ಮಾಡಿ ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ಎಸ್ಕೇಪ್!

    ಇಂದ್ರಕುಮಾರ್ ತಿವಾರಿ, ಅರೆಕಾಲಿಕ ಶಿಕ್ಷಕ ಮತ್ತು ರೈತನಾಗಿದ್ದರು. ಕಳೆದ ತಿಂಗಳು ಪ್ರಸಿದ್ಧ ಗುರು ಅನಿರುದ್ಧಾಚಾರ್ಯ ಮಹಾರಾಜ್ ಅವರ ಆಧ್ಯಾತ್ಮಿಕ ಪ್ರವಚನದ ಸಂದರ್ಭದಲ್ಲಿ ವಧು ಸಿಗದ ಬಗ್ಗೆ ತಮ್ಮ ಹತಾಶೆಯನ್ನು ಅವರು ವ್ಯಕ್ತಪಡಿಸಿದ್ದರು. ಈ ವಿಡಿಯೋ ವೈರಲ್‌ ಆಗಿತ್ತು. ವೈರಲ್ ಆಗಿರುವ ವಿಡಿಯೋದಲ್ಲಿ ಇಂದ್ರಕುಮಾರ್, ಗುರು ಅನಿರುದ್ಧಾಚಾರ್ಯರಿಗೆ 18 ಎಕರೆ ಭೂಮಿ ಹೊಂದಿದ್ದೇನೆ. ಆದರೆ ತನ್ನ ಆಸ್ತಿಯನ್ನು ನೋಡಿಕೊಳ್ಳಲು ಯಾರೂ ಇಲ್ಲ ಎಂದು ಹೇಳಿದ್ದರು.

    ಈ ವಿಡಿಯೋ ಗಮನಿಸಿದ ಸಾಹಿಬಾ ಬಾನೋ ಹಾಗೂ ಅವಳ ಸಹಚರರು ಆಸ್ತಿಗಾಗಿ ಸಂಚು ರೂಪಿಸಿದ್ದರು. ಸಾಹಿಬಾ ನಕಲಿ ಆದಾರ್‌ ಕಾರ್ಡ್‌ ಮಾಡಿಸಿ, ಕುಶಿ ತಿವಾರಿ ಎಂದು ಹೆಸರು ಬದಲಿಸಿಕೊಂಡು, ಸಾಮಾಜಿಕ ಜಾಲತಾಣದ ಮೂಲಕ ಇಂದ್ರಕುಮಾರ್ ಅವರನ್ನು ಸಂಪರ್ಕಿಸಿದ್ದಳು. ಬಳಿಕ ಅವರನ್ನು ಉತ್ತರ ಪ್ರದೇಶದ ಗೋರಖ್‌ಪುರಕ್ಕೆ ಕರೆಸಿ, ಮದುವೆ ಪ್ರಸ್ತಾಪ ಮಾಡಿದ್ದಳು. ಈ ವೇಳೆ ಇಂದ್ರಕುಮಾರ್‌ ಮದುವೆಗೆ ಒಪ್ಪಿಕೊಂಡರು. ಈ ವಿಚಾರವನ್ನು ಕುಟುಂಬಕ್ಕೂ ತಿಳಿಸಿದ್ದರು.

    ಗೋರಖ್‌ಪುರದಲ್ಲಿ ಇಬ್ಬರೂ ಮದುವೆಯಾಗಿದ್ದರು. ಇದಾದ ಕೆಲವು ದಿನಗಳ ನಂತರ ಇಂದ್ರಕುಮಾರ್‌ ಅವರ ಶವ ಕುಶಿನಗರದ ಹತಾ ಕೊತ್ವಾಲಿ ಪ್ರದೇಶದ ಸುಕರೌಲಿಯಲ್ಲಿ ಪತ್ತೆಯಾಗಿತ್ತು. ಶವದ ಪತ್ತೆಯಾದಾಗ ಕತ್ತಿನಲ್ಲಿ ಚಾಕು ಸಿಲುಕಿಕೊಂಡಿತ್ತು.

    ಪ್ರಕರಣದ ಪ್ರಮುಖ ಆರೋಪಿ ಸಾಹಿಬಾಳನ್ನು ಬಂಧಿಸಲಾಗಿದೆ. ಆಕೆಯ ಸಹಚರರ ಬಂಧನಕ್ಕೆ ಬಲೆ ಬೀಸಲಾಗಿದೆ. ಈ ಸಂಬಂಧ ಮಧ್ಯಪ್ರದೇಶದ ಪೊಲೀಸರು ಮತ್ತು ಉತ್ತರ ಪ್ರದೇಶದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: Tumakuru | ಟೈಯರ್ ಬ್ಲಾಸ್ಟ್ ಆಗಿ ಮನೆಗೆ ನುಗ್ಗಿದ KSRTC ಬಸ್

  • ಆರ್‌ಸಿಬಿ ಸ್ಟಾರ್‌ ವೇಗಿ ಯಶ್‌ ದಯಾಳ್‌ ವಿರುದ್ಧ ಲೈಂಗಿಕ ಕಿರುಕುಳ ಆರೋಪ – FIR ದಾಖಲು

    ಆರ್‌ಸಿಬಿ ಸ್ಟಾರ್‌ ವೇಗಿ ಯಶ್‌ ದಯಾಳ್‌ ವಿರುದ್ಧ ಲೈಂಗಿಕ ಕಿರುಕುಳ ಆರೋಪ – FIR ದಾಖಲು

    – ಮದ್ವೆಯಾಗೋದಾಗಿ ನಂಬಿಸಿ ಮೋಸ – ಸಿಎಂ ಯೋಗಿಗೂ ಅಧಿಕೃತ ದೂರು ನೀಡಿದ ಯುವತಿ

    ಲಕ್ನೋ: ಐಪಿಎಲ್‌ನಲ್ಲಿ ರಿಂಕು ಸಿಂಗ್‌ನಿಂದ 5 ಸಿಕ್ಸರ್‌ ಹೊಡೆಸಿಕೊಂಡು ಕುಖ್ಯಾತಿ ಪಡೆದಿದ್ದ ಹಾಗೂ 2025ರ ಆವೃತ್ತಿಯಲ್ಲಿ ಆರ್‌ಸಿಬಿ ತಂಡವನ್ನ ಚಾಂಪಿಯನ್‌ ಪಟ್ಟಕ್ಕೇರಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಸ್ಟಾರ್‌ ವೇಗಿ ಯಶ್‌ ದಯಾಳ್‌ (Yash Dayal) ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.

    ದಯಾಳ್ ಅವರ ಮೇಲೆ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ, ಹಿಂಸೆ ಮತ್ತು ವಂಚನೆ ಆರೋಪ ಹೊರಿಸಿದ್ದಾರೆ. ಹಾಗೆಯೇ ಯಶ್ ದಯಾಳ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಂತ್ರಸ್ತ ಮಹಿಳೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು, ನ್ಯಾಯಕ್ಕಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ರಾಜ್ಯ ಪೊಲೀಸರಿಗೂ ಮನವಿ ಕೂಡ ಮಾಡಿದ್ದಾರೆ. ಇದನ್ನೂ ಓದಿ: ಭಾರತ, ಪಾಕ್‌ ಮಧ್ಯೆ ಜುಲೈ 20 ರಂದು ಹೈವೋಲ್ಟೇಜ್‌ ಮ್ಯಾಚ್‌

    ಭಾವಿ ಸೊಸೆ ಎಂದು ಪರಿಚಯಿಸಿದ್ರು
    ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆ ಸಿಎಂ ಹೆಲ್ಪ್‌ಲೈನ್ ಪೋರ್ಟಲ್‌ನಲ್ಲಿ ದೂರು ದಾಖಲಿಸಿದ್ದು, ಅದರ ಸ್ಕ್ರೀನ್‌ಶಾಟ್‌ಗಳನ್ನು ಸಾಮಾಜಿಕ ಜಾಲತಾಣಾದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್‌ನಲ್ಲಿ ಮಹಿಳೆ ದಯಾಳ್ ಜೊತೆಗಿನ ತನ್ನ ಫೋಟೋ ಸಹ ಹಂಚಿಕೊಂಡಿದ್ದಾರೆ. ಕಳೆದ 5 ವರ್ಷಗಳಿಂದ ದಯಾಳ್ ಜೊತೆ ಸಂಬಂಧ ಹೊಂದಿದ್ದು, ದಯಾಳ್ ಮದುವೆಯಾಗುವುದಾಗಿ ನಂಬಿಸಿ ಭಾವನಾತ್ಮಕವಾಗಿ, ಮಾನಸಿಕವಾಗಿ ಮತ್ತು ದೈಹಿಕವಾಗಿ ತನ್ನನ್ನು ಶೋಷಿಸಿದ್ದಾರೆ. ಅಲ್ಲದೇ ದಯಾಳ್ ನನ್ನನ್ನು ನಿಮ್ಮ ಭಾವಿ ಸೊಸೆ ಎಂದು ಅವರ ಕುಟುಂಬಕ್ಕೆ ಪರಿಚಯಿಸಿ, ಆ ಬಳಿಕ ನನಗೆ ವಂಚಿಸಿದ್ದಾರೆ ಎಂದು ಮಹಿಳೆ ತನ್ನ ದೂರಿನಲ್ಲಿ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: 1st Test: ಮಿಂಚಿದ ಡಕೆಟ್- ಭಾರತದ ವಿರುದ್ಧ ಇಂಗ್ಲೆಂಡ್‌ಗೆ 5 ವಿಕೆಟ್‌ಗಳ ಜಯ

    ಅನೇಕ ಮಹಿಳೆಯರೊಟ್ಟಿಗೆ ಸಂಬಂಧ
    ದಯಾಳ್ ತನಗೆ ಮೋಸ ಮಾಡುತ್ತಿದ್ದಾನೆಂದು ತಿಳಿದ ತಕ್ಷಣ ನಾನು ಇದನ್ನು ಪ್ರತಿಭಟಿಸಿದೆ. ಇದರಿಂದ ನಾನು ದೈಹಿಕ ಹಿಂಸೆ ಮತ್ತು ಮಾನಸಿಕ ಕಿರುಕುಳವನ್ನು ಎದುರಿಸಬೇಕಾಯಿತು. ದಯಾಳ್ ನನ್ನೊಂದಿಗೆ ಮಾತ್ರವಲ್ಲದೆ ಅನೇಕ ಮಹಿಳೆಯರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ದೂರುದಾರೆ ಆರೋಪಿಸಿದ್ದಾರೆ. ಈ ಬಗ್ಗೆ ನಾನು ಜೂನ್ 14 ರಂದು ಮಹಿಳಾ ಸಹಾಯವಾಣಿಗೆ ಪ್ರಕರಣದ ಬಗ್ಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಸಂತ್ರಸ್ತೆ ಪೊಲೀಸರ ವಿರುದ್ಧವೂ ಆರೋಪ ಹೊರಿಸಿದ್ದಾರೆ. ಇದನ್ನೂ ಓದಿ: ಆಂಗ್ಲರ ನೆಲದಲ್ಲಿ ಶತಕ ಸಿಡಿಸಿ ಮೆರೆದಾಡಿದ ರಾಹುಲ್‌ – ಇದು ತುಂಬಾ ಸ್ಪೆಷಲ್‌ ಅಂದ್ರು ಅಥಿಯಾ ಶೆಟ್ಟಿ

  • Uttar Pradesh | ರೀಲ್ಸ್ ಮಾಡೋಕೆ ಐಫೋನ್‌ಗಾಗಿ ಬೆಂಗಳೂರು ಯುವಕನ ಕೊಲೆ

    Uttar Pradesh | ರೀಲ್ಸ್ ಮಾಡೋಕೆ ಐಫೋನ್‌ಗಾಗಿ ಬೆಂಗಳೂರು ಯುವಕನ ಕೊಲೆ

    ಲಕ್ನೋ: ರೀಲ್ಸ್ ಮಾಡಲು ಐಫೋನ್‌ಗಾಗಿ ಬೆಂಗಳೂರು (Bengaluru) ಯುವಕನ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಬಹ್ರೈಚ್‌ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಮೃತ ವ್ಯಕ್ತಿಯನ್ನು ಬೆಂಗಳೂರು ಮೂಲದ ಶಾದಾಬ್ (19) ಎಂದು ಗುರುತಿಸಲಾಗಿದೆ. ಮಾವನ ಮದುವೆಗಾಗಿ ಉತ್ತರ ಪ್ರದೇಶಕ್ಕೆ ತೆರಳಿದ್ದಾಗ ಈ ಅವಘಡ ಸಂಭವಿಸಿದೆ.ಇದನ್ನೂ ಓದಿ: ಅರೇರೇ ಯಾರೋ ಇವಳು ಅಂತಿದ್ದಾರೆ ವಿನಯ್ ರಾಜ್ ಕುಮಾರ್!

    ಇತ್ತೀಚಿಗೆ ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್ ಮಾಡೋದು, ಲೈಕ್ಸ್ ಪಡೆಯೋದು ಟ್ರೆಂಡ್ ಆಗಿಬಿಟ್ಟಿದೆ. ಇದೀಗ ರೀಲ್ಸ್ ಮಾಡೋಕೆ ಐಫೋನ್‌ಗಾಗಿ ಒಂದು ಕೊಲೆಯೇ ನಡೆದುಬಿಟ್ಟಿದೆ. ಹೌದು. ಉತ್ತರ ಪ್ರದೇಶದ ಇಬ್ಬರು ಅಪ್ರಾಪ್ತರಿಗೆ ರೀಲ್ಸ್ ಮಾಡೋದಕ್ಕೆ ಐಫೋನ್ ಬೇಕಿತ್ತು. ಇದೇ ವೇಳೆ ಮೃತ ಯುವಕ ತಮ್ಮ ಮಾವನ ಮದುವೆಗಾಗಿ ಉತ್ತರ ಪ್ರದೇಶಕ್ಕೆ ತೆರಳಿದ್ದ. ಯುವಕನ ಬಳಿ ಐಫೋನ್ ಇರೋದನ್ನ ಕಂಡ ಅಪ್ರಾಪ್ತರು ಕೊಲೆಗೆ ಸಂಚು ರೂಪಿಸಿದ್ರು.

    ಕೊಲೆ ನಡೆದಿದ್ದು ಹೇಗೆ?
    ಮಾವನ ಮದುವೆಗಾಗಿ ಬೆಂಗಳೂರು ಮೂಲದ ಶಾದಾಬ್ ಬಹ್ರೈಚ್‌ಗೆ ಬಂದಿದ್ದ. ಆತನ ಬಳಿ ಐಫೋನ್ ಇರೋದನ್ನ ಕಂಡ ಅಪ್ರಾಪ್ತರು. ಮಾರನೇ ದಿನ ಮೃತ ಶಾಬಾದ್‌ನನ್ನ ವಿಡಿಯೋ ಶೂಟ್ ಮಾಡ್ಬೇಕು ಅಂತ ಹೇಳಿ, ಗ್ರಾಮದ ಹೊರಗಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದರು. ಅಲ್ಲೇ ಅವನ ಮೇಲೆ ದಾಳಿ ನಡೆಸಿದ್ದಾರೆ. ಕತ್ತು ಸೀಳಿ, ಬಳಿಕ ಇಟ್ಟಿಗೆಯಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾರೆ. ನಂತರ ಅಪ್ರಾಪ್ತರ ಸಂಬಂಧಿಕರು ಚಾಕು ಮುಚ್ಚಿಡಲು ಸಹಾಯ ಮಾಡಿ, ನಾಲ್ವರು ಪರಾರಿಯಾಗಿದ್ದಾರೆ.

    ಜೂ.20ರಂದು ಕೊಳವೆ ಬಾವಿಯ ಬಳಿ ಆತನ ಶವ ಪತ್ತೆಯಾಗಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

    ಸದ್ಯ ಇಬ್ಬರು ಅಪ್ರಾಪ್ತರು ಹಾಗೂ ಅವರ ಸಂಬಂಧಿಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ, ಇಬ್ಬರು ಅಪ್ರಾಪ್ತರು ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಮೃತ ಯುವಕ ಊರಿಗೆ ಬಂದಾಗ ಆತನ ಬಳಿಯಿರುವ ಐಫೋನ್ ನೋಡಿ, ನಾಲ್ಕು ದಿನಗಳ ಹಿಂದೆಯೇ ಕೊಲೆಗೆ ಸಂಚು ಹಾಕಿರುವುದಾಗಿ ತಿಳಿಸಿದ್ದಾರೆ. ಇಬ್ಬರಿಂದ ಐಫೋನ್, ಕೊಲೆಗೆ ಬಳಸಿದ ಚಾಕು ಹಾಗೂ ಇಟ್ಟಿಗೆಯನ್ನು ವಶಪಡಿಸಿಕೊಂಡಿದ್ದಾರೆ.

    ಸದ್ಯ ಇನ್ನೋರ್ವನಿಗಾಗಿ ಹುಡುಕಾಟ ನಡೆಸಿದ್ದು, ನಾಲ್ವರ ವಿರುದ್ಧ ಕೊಲೆ, ಸಾಕ್ಷ್ಯ ನಾಶ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ. ಇಬ್ಬರು ಅಪ್ರಾಪ್ತರನ್ನು ಬಾಲಾಪರಾಧಿ ಸುಧಾರಣಾ ಕೇಂದ್ರಕ್ಕೆ ಕಳುಹಿಸಲಾಗಿದ್ದು, ಓರ್ವ ಸಂಬಂಧಿಯನ್ನ ಜೈಲಿಗೆ ಕಳುಹಿಸಲಾಗಿದೆ.ಇದನ್ನೂ ಓದಿ: ಮೂರು ಮೆಗಾ ಪ್ರಾಜೆಕ್ಟ್ ಒಪ್ಪಿದ ಧ್ರುವ ಸರ್ಜಾ

  • ಯುಪಿನಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ಪ್ರಾದೇಶಿಕ ಕೇಂದ್ರ ಸ್ಥಾಪಿಸಲು ಮೋದಿ ಅಧ್ಯಕ್ಷತೆಯ ಸಂಪುಟ ಅಸ್ತು!

    ಯುಪಿನಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ಪ್ರಾದೇಶಿಕ ಕೇಂದ್ರ ಸ್ಥಾಪಿಸಲು ಮೋದಿ ಅಧ್ಯಕ್ಷತೆಯ ಸಂಪುಟ ಅಸ್ತು!

    – ಆಗ್ರಾದ ಸಿಂಗ್ನಾದಲ್ಲಿ ದಕ್ಷಿಣ ಏಷ್ಯಾ ಪ್ರಾದೇಶಿಕ ಕೇಂದ್ರ ಸ್ಥಾಪನೆಗೆ ಅನುಮೋದನೆ

    ಹುಬ್ಬಳ್ಳಿ: ಕೇಂದ್ರ ಸರ್ಕಾರ, ಉತ್ತರ ಪ್ರದೇಶದಲ್ಲಿ (Uttar Pradesh) ಅಂತಾರಾಷ್ಟ್ರೀಯ ಆಲೂಗಡ್ಡೆ ಕೇಂದ್ರದ ದಕ್ಷಿಣ ಏಷ್ಯಾ ಪ್ರಾದೇಶಿಕ ಕೇಂದ್ರ ಸ್ಥಾಪಿಸಲು ಸಜ್ಜಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ (Prahlad Joshi) ತಿಳಿಸಿದರು.

    ಆಗ್ರಾದ (Agra) ಸಿಂಗ್ನಾದಲ್ಲಿ ಈ ಕೇಂದ್ರ ತೆರೆಯಲು ನಿರ್ಣಯಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಇದಕ್ಕೆ ಅನುಮೋದನೆ ನೀಡಿದೆ. ಉತ್ತರ ಪ್ರದೇಶದ ಆಗ್ರಾದಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ಕೇಂದ್ರದ ದಕ್ಷಿಣ ಏಷ್ಯಾ ಪ್ರಾದೇಶಿಕ ಕೇಂದ್ರ ಸ್ಥಾಪಿಸುವ ಕುರಿತು ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ ಸಲ್ಲಿಸಿದ ಪ್ರಸ್ತಾವನೆಗೆ ಸಚಿವ ಸಂಪುಟ ಸಮ್ಮತಿ ಸೂಚಿಸಿದೆ.ಇದನ್ನೂ ಓದಿ: Rain Alert | ಹಾಸನ ಜಿಲ್ಲೆಯ 3, ಉತ್ತರ ಕನ್ನಡ ಜಿಲ್ಲೆಯ 2 ತಾಲೂಕಿನ ಶಾಲೆಗಳಿಗೆ ಗುರುವಾರ ರಜೆ

    ಆಲೂಗಡ್ಡೆ, ಸಿಹಿಗೆಣಸು ಉತ್ಪಾದನೆ ಹಾಗೂ ಸುಗ್ಗಿ ನಂತರದಲ್ಲೂ ಇವುಗಳ ಆಹಾರೋತ್ಪನ್ನ, ಮೌಲ್ಯವರ್ಧಿತ ಆಹಾರ ಪದಾರ್ಥ, ಪೌಷ್ಟಿಕಾಂಶ ಭರಿತ ಆಹಾರ ಭದ್ರತೆ, ರೈತರ ಆದಾಯ ಹೆಚ್ಚಳ ಹಾಗೂ ಹೆಚ್ಚು ಉದ್ಯೋಗಾವಕಾಶ ಕಲ್ಪಿಸುವಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ಕೇಂದ್ರ ನೆರವಾಗಲಿದೆ.

    ಅಂತಾರಾಷ್ಟ್ರೀಯ ಆಲೂಗಡ್ಡೆ ಪ್ರಾದೇಶಿಕ ಕೇಂದ್ರ ಸ್ಥಾಪನೆಯಿಂದ ಕೃಷಿ ಮತ್ತು ಆಹಾರೋತ್ಪನ್ನ ವಲಯದಲ್ಲಿ ಹೆಚ್ಚು ಹೂಡಿಕೆಯನ್ನೂ ಆಕರ್ಷಿಸಲಿದೆ. ಭಾರತದಲ್ಲಿ ಆಲೂಗಡ್ಡೆ ವಲಯವು ಉತ್ಪಾದನೆ, ಆಹಾರ ಸಂಸ್ಕರಣೆ, ಪ್ಯಾಕೇಜಿಂಗ್, ಸಾರಿಗೆ, ಮಾರುಕಟ್ಟೆ ಇತ್ಯಾದಿಗಳಲ್ಲಿ ಗಮನಾರ್ಹ ಉದ್ಯೋಗಾವಕಾಶ ಸೃಷ್ಟಿಸುವ ಸಾಮರ್ಥ್ಯ ಹೊಂದಿದೆ. ಹಾಗಾಗಿ ಇದನ್ನು ಮತ್ತಷ್ಟು ವಿಸ್ತರಿಸಲು ಕೇಂದ್ರ ಸರ್ಕಾರ ಮುಂದಡಿ ಇಟ್ಟಿದೆ ಎಂದಿದ್ದಾರೆ.

    ಅSAಖಅ ಅಭಿವೃದ್ಧಿಪಡಿಸಿದ ಹೆಚ್ಚಿನ ಇಳುವರಿ ನೀಡುವ, ಪೋಷಕಾಂಶ ಮತ್ತು ಹವಾಮಾನ ಆಧಾರಿತ ತಳಿಗಳ ಆಲೂಗಡ್ಡೆ ಮತ್ತು ಸಿಹಿಗೆಣಸು ಭಾರತದಲ್ಲಿ ಮಾತ್ರವಲ್ಲದೆ ದಕ್ಷಿಣ ಏಷ್ಯಾ ಪ್ರದೇಶದಲ್ಲಿಯೂ ಹೆಚ್ಚು ಉತ್ಪಾದನೆ ಮತ್ತು ಬಳಕೆಯಲ್ಲಿದ್ದು, ವಿಶ್ವದರ್ಜೆ ಮಾರುಕಟ್ಟೆ ಕಲ್ಪಿಸುವಲ್ಲಿ ಈ ಕೇಂದ್ರ ನೆರವಾಗಲಿದೆ.

    ಆಲೂಗಡ್ಡೆ, ಸಿಹಿಗೆಣಸು ಅನ್ವೇಷಣೆ ಮತ್ತು ಅಂತಾರಾಷ್ಟ್ರೀಯ ಆಲೂಗಡ್ಡೆ ಕೇಂದ್ರದ ದಕ್ಷಿಣ ಏಷ್ಯಾ ಪ್ರಾದೇಶಿಕ ಕೇಂದ್ರವನ್ನು ಉತ್ತರ ಪ್ರದೇಶದ ಆಗ್ರಾದ ಸಿಂಗ್ನಾದಲ್ಲಿ ಸ್ಥಾಪಿಸುವುದರಿಂದ ಭಾರತದಲ್ಲಿ ಆಲೂಗಡ್ಡೆ ಮತ್ತು ಸಿಹಿಗೆಣಸು ವಲಯಗಳ ಸುಸ್ಥಿರ ಅಭಿವೃದ್ಧಿಗೂ ಗಮನಾರ್ಹ ಕೊಡುಗೆ ನೀಡಲಿದೆ ಎಂದರು.ಇದನ್ನೂ ಓದಿ: ಲೋಕಸಭಾಧ್ಯಕ್ಷ ಓಂ ಬಿರ್ಲಾರನ್ನು ಭೇಟಿ ಮಾಡಿದ ಯು.ಟಿ.ಖಾದರ್

  • ಮಗನಿಗೆ ನಿಶ್ಚಯವಾಗಿದ್ದ ಹೆಣ್ಣಿನ ಜೊತೆ 6 ಮಕ್ಕಳ ತಂದೆ ಚಕ್ಕಂದ – ಮದುವೆ ಬೇಡ ಎಂದಿದ್ದಕ್ಕೆ ಪತ್ನಿ ಮೇಲೆ ಹಲ್ಲೆ

    ಮಗನಿಗೆ ನಿಶ್ಚಯವಾಗಿದ್ದ ಹೆಣ್ಣಿನ ಜೊತೆ 6 ಮಕ್ಕಳ ತಂದೆ ಚಕ್ಕಂದ – ಮದುವೆ ಬೇಡ ಎಂದಿದ್ದಕ್ಕೆ ಪತ್ನಿ ಮೇಲೆ ಹಲ್ಲೆ

    – ಭಾವಿ ಸೊಸೆ ಜೊತೆ ಏಕಾಂತದಲ್ಲಿ ಇದ್ದಾಗಲೇ ಪತ್ನಿಗೆ ಸಿಕ್ಕಿಬಿದ್ದ ಶಕೀಲ್‌

    ಲಕ್ನೋ: ಉತ್ತರ ಪ್ರದೇಶದ (Uttar Pradesh) ರಾಂಪುರದಲ್ಲಿ ವ್ಯಕ್ತಿಯೊಬ್ಬ ತನ್ನ ಮಗನಿಗೆ ನಿಶ್ಚಯಿಸಿದ್ದ ಹುಡುಗಿಯನ್ನೇ ಪ್ರೀತಿಸಿ ಮದುವೆಯಾಗಿರುವ ಘಟನೆ ನಡೆದಿದೆ.

    ಶಕೀಲ್‌ ಎಂಬ ವ್ಯಕ್ತಿ ತನ್ನ ಮಗನ ಮದುವೆಗೆ ಹೆಣ್ಣನ್ನು ನಿಶ್ಚಯ ಮಾಡಿದ್ದ. ಬಳಿಕ ಆಕೆಯೊಂದಿಗೆ ಫೋನ್‌ನಲ್ಲಿ ಮಾತನಾಡಿ ಸಲುಗೆ ಬೆಳೆಸಿಕೊಂಡ. ಆಕೆಯನ್ನು ಬಲೆಗೆ ಬೀಳಿಸಿ ಸಂಬಂಧ ಬೆಳೆಸಿದ್ದ. ಇದನ್ನೂ ಓದಿ: ಆಸ್ತಿಯ ದುರಾಸೆ, ರೋಗಿಯೊಂದಿಗೇ ಚಕ್ಕಂದ – ʻಪಾರಿತೋಷʼನ ಪ್ರೇಮಕ್ಕೆ ಪತಿಯನ್ನೇ ಕೊಂದ ಫಿಸಿಯೋಥೆರಪಿಸ್ಟ್‌ ಪತ್ನಿ

    ಮಗನಿಗೆ ನಿಶ್ಚಯಿಸಿದ್ದ ಹೆಣ್ಣಿನ ಜೊತೆ ಏಕಾಂತದಲ್ಲಿದ್ದಾಗ ಶಕೀಲ್‌ ತನ್ನ ಪತ್ನಿ ಹಾಗೂ ಮಗನಿಗೆ ಸಿಕ್ಕಿಬಿದ್ದಿದ್ದ. ಪರಿಣಾಮ ಕುಟುಂಬದಲ್ಲಿ ಗಲಾಟೆ ನಡೆದಿತ್ತು. ಕೊನೆಗೆ ಆಕೆಯನ್ನು ತನ್ನ ಮಗನಿಗೆ ಕೊಟ್ಟು ಮದುವೆ ಮಾಡಲು ಶಕೀಲ್‌ ಪತ್ನಿ ಶಬಾನಾ ನಿರಾಕರಿಸಿದಳು. ಇದರಿಂದ ಕೋಪಗೊಂಡು ಆರೋಪಿ ಶಕೀಲ್‌ ತನ್ನ ಪತ್ನಿ ಮೇಲೆ ಹಲ್ಲೆ ನಡೆಸಿದ್ದಾನೆ.

    ಶಕೀಲ್‌ಗೆ ಆರು ಮಕ್ಕಳಿದ್ದಾರೆ. ಮಗನಿಗೆ ನಿಶ್ಚಯಿಸಿದ್ದ ಹೆಣ್ಣಿನ ಜೊತೆ ಶಕೀಲ್‌ ಅಕ್ರಮ ಸಂಬಂಧ ಹೊಂದಿರುವ ಬಗ್ಗೆ ಆತನ ಪತ್ನಿ ಶಬಾಬಾಗೆ ಗುಮಾನಿ ಇತ್ತು. ತನ್ನ ಪತಿ ಹಾಗೂ ಮಗನಿಗೆ ನಿಶ್ಚಯಿಸಿದ್ದ ಹೆಣ್ಣು ಒಟ್ಟಿಗೆ ಇದ್ದಾಗ ಸಾಕ್ಷಿ ಸಮೇತ ಶಬಾನಾ ಹಿಡಿದಿದ್ದರು. ಇದನ್ನೂ ಓದಿ: ಪಾಕಿಸ್ತಾನಕ್ಕೆ 5ನೇ ತಲೆಮಾರಿನ 40 ಸ್ಟೆಲ್ತ್ ಫೈಟರ್ ಜೆಟ್‌ ಪೂರೈಸಲು ಚೀನಾ ಮೆಗಾ ಡೀಲ್‌

    ನನ್ನ ಪತಿ ಆಕೆಗೆ ಇಡೀ ದಿನ ಫೋನ್‌ ಕರೆ ಮಾಡಿ ಮಾತನಾಡುತ್ತಾನೆ. ಮೊದಲಿಗೆ ಯಾರೂ ನನ್ನ ಮಾತನ್ನು ನಂಬಲಿಲ್ಲ. ನಂತರ ನನ್ನ ಮಗ ಮತ್ತು ನಾನು ಅವರ ವಿರುದ್ಧ ಸಾಕ್ಷ್ಯಗಳನ್ನು ಸಂಗ್ರಹಿಸಿದೆವು. ತನ್ನ ತಂದೆಯ ಅಕ್ರಮ ಸಂಬಂಧದ ಬಗ್ಗೆ ತಿಳಿದ ನಂತರ ಆಕೆಯನ್ನು ಮದುವೆಯಾಗಲು ನನ್ನ ಮಗ ನಿರಾಕರಿಸಿದ್ದಾನೆ. ಅವನ ಅಜ್ಜ-ಅಜ್ಜಿಯರಿಗೂ ಅವರಿಬ್ಬರ ನಡುವಿನ ಸಂಬಂಧದ ಬಗ್ಗೆ ತಿಳಿದಿತ್ತು. ಶಕೀಲ್ 2 ಲಕ್ಷ ರೂಪಾಯಿ ನಗದು ಮತ್ತು ಸುಮಾರು 17 ಗ್ರಾಂ ಚಿನ್ನಾಭರಣವನ್ನು ತೆಗೆದುಕೊಂಡು ಹೋಗಿ ಆಕೆಯನ್ನು ಮದುವೆಯಾಗಿದ್ದಾನೆಂದು ಪತ್ನಿ ಆರೋಪಿಸಿದ್ದಾರೆ.

    ಏಪ್ರಿಲ್‌ನಲ್ಲಿ ಉತ್ತರ ಪ್ರದೇಶದ ಮಹಿಳೆಯೊಬ್ಬರು ತನ್ನ ಭಾವಿ ಅಳಿಯನೊಂದಿಗೆ ಓಡಿಹೋಗಿದ್ದರು. ಅಲಿಗಢದ ವಧು ಶಿವಾನಿ ಅವರ ತಾಯಿ ಅನಿತಾ ಮನೆಯಲ್ಲಿದ್ದ 3.5 ಲಕ್ಷ ರೂ.ಗಳಿಗೂ ಹೆಚ್ಚು ನಗದು ಮತ್ತು 5 ಲಕ್ಷ ರೂ.ಗಳಿಗೂ ಹೆಚ್ಚು ಮೌಲ್ಯದ ಆಭರಣಗಳನ್ನು ಸಹ ತೆಗೆದುಕೊಂಡು ಹೋಗಿದ್ದರು ಎಂದು ಆರೋಪಿಸಿದ್ದರು. ಇದೇ ಮಾದರಿಯ ಮತ್ತೊಂದು ಪ್ರಕರಣ ಈಗ ವರದಿಯಾಗಿದೆ.

  • Uttar Pradesh | ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಬೆಂಕಿ – ಐವರು ಸಜೀವ ದಹನ

    Uttar Pradesh | ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಬೆಂಕಿ – ಐವರು ಸಜೀವ ದಹನ

    – ಮದುವೆ ಮುಗಿಸಿ ಬರುತ್ತಿದ್ದ ವೇಳೆ ಘಟನೆ

    ಲಕ್ನೋ: ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮದುವೆ ಮುಗಿಸಿ ಬರುತ್ತಿದ್ದ ಐವರು ಸಜೀವ ದಹನವಾಗಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಬುಲಂದ್‌ಶಹರ್‌ (Bulandshahr) ಜಿಲ್ಲೆಯಲ್ಲಿ ನಡೆದಿದೆ.

    ಬದೌನ್‌ನಲ್ಲಿ ನಡೆದ ಮದುವೆ ಮುಗಿಸಿ ದೆಹಲಿಗೆ ವಾಪಸ್ ಆಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಚಾಲಕ ನಿದ್ದೆ ಮಂಪರಿನಲ್ಲಿದ್ದ ಹಿನ್ನೆಲೆ ಸ್ವಿಫ್ಟ್ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡಿದೆ. ಕಾರು ಲಾಕ್ ಆದ ಕಾರಣ ಹೊರಗೆ ಬರಲಾರದೇ ಐವರು ಸಜೀವ ದಹನವಾಗಿದ್ದಾರೆ. ಇದನ್ನೂ ಓದಿ: `ಥಗ್‌ಲೈಫ್’ ರಿಲೀಸ್‌ಗೆ ಸುಪ್ರೀಂ ಗ್ರೀನ್ ಸಿಗ್ನಲ್ – ಕನ್ನಡ ಪರ ಸಂಘಟನೆಯ ಪ್ರಮುಖರಿಗೆ ಪೊಲೀಸರಿಂದ ನೋಟಿಸ್

    ಮುಂಜಾನೆ 5:50ರ ಸುಮಾರಿಗೆ ಘಟನೆ ನಡೆದಿದೆ. ಘಟನೆಯಲ್ಲಿ ಓರ್ವ ಮಹಿಳೆ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಬೈಕ್‌ಗೆ ಕ್ಯಾಂಟರ್ ಡಿಕ್ಕಿ – ಕೆಲಸಕ್ಕೆ ತೆರಳುತ್ತಿದ್ದ ಸ್ನೇಹಿತರು ಬೈಕ್ ಅಪಘಾತದಲ್ಲಿ ದುರ್ಮರಣ

  • ಖಾಸಗಿ ಅಂಗದ ಮೇಲೆ ಕಾದ ಕಬ್ಬಿಣದಿಂದ ಬರೆ ಹಾಕಿ ಚಿತ್ರಹಿಂಸೆ – ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ

    ಖಾಸಗಿ ಅಂಗದ ಮೇಲೆ ಕಾದ ಕಬ್ಬಿಣದಿಂದ ಬರೆ ಹಾಕಿ ಚಿತ್ರಹಿಂಸೆ – ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ

    ಲಕ್ನೋ: ವರದಕ್ಷಿಣೆಗಾಗಿ (Dowry) ಮಹಿಳೆಯ ಮೇಲೆ ಪತಿ, ಅತ್ತೆ ಮತ್ತು ಮಾವ ಸೇರಿ ಚಿತ್ರಹಿಂಸೆ ನೀಡಿ ಹತ್ಯೆಗೈದಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಅಲಿಗಢದಲ್ಲಿ ನಡೆದಿದೆ.

    ಹತ್ಯೆಯಾದ ಮಹಿಳೆಯನ್ನು ಸಂಗೀತಾ ಎಂದು ಗುರುತಿಸಲಾಗಿದೆ. ಮಹಿಳೆಗೆ ಮದುವೆಯಾಗಿ 10 ವರ್ಷಗಳಾಗಿತ್ತು. ಮದುವೆಯಾದ ಬಳಿಕ ಒಂದು ವರ್ಷ ಚೆನ್ನಾಗಿದ್ದರು. ನಂತರ ಪತಿ ಕುಟುಂಬ ವರದಕ್ಷಿಣೆ ಕಿರುಕುಳ ನೀಡುತ್ತಿತ್ತು. ಬುಲೆಟ್ ಬೈಕ್‌ ಮತ್ತು ಎಮ್ಮೆಯನ್ನು ವರದಕ್ಷಿಣೆಯಾಗಿ ಪತಿ ಕುಟುಂಬ ಬೇಡಿಕೆ ಇಟ್ಟಿತ್ತು. ಕೊಡದ ಕಾರಣ ಪತಿ ಮತ್ತು ಅತ್ತೆ-ಮಾವ ಸೇರಿ ಚಿತ್ರಹಿಂಸೆ ನೀಡುತ್ತಿದ್ದರು ಎಂದು ಮಹಿಳೆಯ ಕುಟುಂಬ ಆರೋಪಿಸಿದೆ. ಇದನ್ನೂ ಓದಿ: ಅಣ್ಣ ಶ್ರೀಮಂತ ಆಗ್ಬಿಟ್ಟ ಅಂತ ತಮ್ಮ ಮಾಡಿದ್ದೆಂತ ನೀಚ ಕೆಲ್ಸ ಗೊತ್ತಾ? – ಹಂತಕ ಸಿಕ್ಕಿಬಿದ್ದಿದ್ದೇ ರೋಚಕ!

    ಇದೇ ಕಾರಣಕ್ಕೆ ಮಹಿಳೆಯ ಪತಿ ಬಂಟಿ, ಅವನ ಪೋಷಕರು ಮತ್ತು ಅವನ ಇಬ್ಬರು ಸಹೋದರಿಯರು ಸಂಗೀತಾಳನ್ನು ಥಳಿಸಿದ್ದಾರೆ. ಅಲ್ಲದೇ ಮಹಿಳೆಯ ಜನನಾಂಗ ಸೇರಿದಂತೆ ದೇಹದ ಮೇಲೆಲ್ಲ ಬಿಸಿ ಕಬ್ಬಿಣದಿಂದ ಬರೆ ಹಾಕಿದ್ದಾರೆ. ಇದರಿಂದ ಮಹಿಳೆ ಸಾವನ್ನಪ್ಪಿದ್ದಾಳೆ. ಮಹಿಳೆಗೆ ಇಬ್ಬರು ಚಿಕ್ಕಮಕ್ಕಳಿದ್ದಾರೆ ಎಂದು ತಿಳಿದು ಬಂದಿದೆ.

    ಮಹಿಳೆಯ ತಾಯಿ ನೀಡಿದ ದೂರಿನ ಅನ್ವಯ ಎಫ್‌ಐಆರ್ ದಾಖಲಿಸಲಾಗಿದೆ.‌ ಮಹಿಳೆಯ ಮೃತದೇಹ ಪರೀಕ್ಷೆಗೆ ಕಳುಹಿಸಲಾಗಿದೆ. ತಲೆಮರೆಸಿಕೊಂಡಿರುವ ಬಂಟಿಯ ಕುಟುಂಬದ ಐವರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಸುಹಾಸ್ ಶೆಟ್ಟಿ ಹತ್ಯೆ ಕೇಸ್ – ಮಂಗಳೂರಿಗೆ ಆಗಮಿಸಿದ ಎನ್‍ಐಎ ತಂಡ