ಕಾರವಾರ: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ (Dandeli) ಗಾಂಧಿನಗರದ ಅರ್ಷದ್ ಖಾನ್ ಎಂಬಾತನ ಮನೆಯಲ್ಲಿ 500 ರೂ. ಮುಖಬೆಲೆಯ 14 ಕೋಟಿ ರೂ.ನಷ್ಟು ನಕಲಿ ನೋಟುಗಳು (Duplicate Note) ಪತ್ತೆಯಾಗಿದೆ.
ಸ್ಥಳೀಯರೊಬ್ಬರು ನೀಡಿದ ಮಾಹಿತಿ ಮೇರೆಗೆ ದಾಂಡೇಲಿ ಪೊಲೀಸರು (Dandeli Police) ಅರ್ಷದ್ ಖಾನ್ ಎಂಬಾತನ ಮನೆಗೆ ತೆರಳಿ ಪರಿಶೀಲನೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಪೊಲೀಸರು ಪರಿಶೀಲನೆ ನಡೆಸಿದಾಗ ಭಾರತೀಯ ರಿಸರ್ವ್ ಬ್ಯಾಂಕ್ ಬರಹ ಇಲ್ಲದ, ಗವರ್ನರ್ ಸಹಿ ಇಲ್ಲದ ನೋಟುಗಳು ಪತ್ತೆಯಾಗಿದೆ. ಅಲ್ಲದೇ ನೋಟುಗಳ ಮೇಲೆ ʻಮೂವಿ ಶೂಟಿಂಗ್ ಪರ್ಪಸ್ʼ ಎಂದೂ ಸಹ ಬರೆದಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಮಮತಾ ಬ್ಯಾನರ್ಜಿಯ ಟಿಎಂಸಿಯಲ್ಲಿ ನಾಯಕರ ತಿಕ್ಕಾಟ – ಟಿಎಂಸಿ ವಾಟ್ಸಪ್ ಚಾಟ್ ಬಹಿರಂಗಪಡಿಸಿದ ಬಿಜೆಪಿಯ ಅಮಿತ್ ಮಾಳವೀಯ
ಇನ್ನೂ ನೋಟಿನ ಸಂಖ್ಯೆಯಲ್ಲಿ ಸೊನ್ನೆ ಅಷ್ಟೇ ನಮೂದು ಮಾಡಲಾಗಿದ್ದು ಯಾವ ಉದ್ದೇಶಕ್ಕಾಗಿ ಈ ನೋಟುಗಳನ್ನು ಬಳಸಲಾಗುತ್ತಿದೆ ಅನ್ನೋದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೇ ಮನೆಯ ಮಾಲೀಕ ಅರ್ಷದ್ ಖಾನ್ ಕಳೆದ ಒಂದು ತಿಂಗಳಿಂದ ಘಟನಾ ಸ್ಥಳಕ್ಕೆ ಆಗಮಿಸಿಯೇ ಇಲ್ಲ. ಆದ್ದರಿಂಧ ಇಷ್ಟೊಂದು ನೋಟುಗಳು ಯಾವುದಕ್ಕೆ ಬಳಕೆ ಮಾಡಲು ಸಂಗ್ರಹಿಸಲಾಗಿದೆ ಎಂಬುದು ನಿಗೂಢವಾಗಿದೆ. ಇದನ್ನೂ ಓದಿ: ಚನ್ನಪಟ್ಟಣ ಬೊಂಬೆ ಉದ್ಯಮಕ್ಕೆ ಮರುಜೀವ ನೀಡುವಂತೆ ಡಾ. ಮಂಜುನಾಥ್ ಮನವಿಗೆ ಸ್ಮಂದಿಸಿದ ಕೇಂದ್ರ
ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ, ಈ ನೋಟುಗಳನ್ನು ಸಿನಿಮಾ ಚಿತ್ರೀಕರಣಕ್ಕೆ ತರಿಸಲಾಗಿದೆ ಎನ್ನಲಾಗುತಿದೆ. ಮುಂದಿನ ತನಿಖೆ ನಂತರ ಹೆಚ್ಚಿನ ವಿವರ ಹೊರಬರಲಿದೆ. ಸದ್ಯ ಘಟನೆ ಸಂಬಂಧ ದಾಂಡೇಲಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರನ್ ಹೊಳೆ ಹರಿಸಿ ಈಡನ್ ಗಾರ್ಡನ್‌ನಲ್ಲಿ ದಾಖಲೆ ಬರೆದ ಲಕ್ನೋ
ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಪಶ್ಚಿಮ ಘಟ್ಟ (Western Ghat) ಭಾಗದಲ್ಲಿ ಇದ್ದಕ್ಕಿದ್ದಂತೆ ಭೂಮಿ ನಡುಗಿದ ಅನುಭವ ಕುರಿತು ಸಾರ್ವಜನಿಕರು ಮಾಹಿತಿ ನೀಡಿದ್ದರು. ಈ ಸುದ್ದಿ ʻಪಬ್ಲಿಕ್ ಟಿವಿʼಯಲ್ಲಿ ಪ್ರಕಟವಾಗುತ್ತಿದ್ದಂತೆ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ನೈಸರ್ಗಿಕ ಪ್ರಕೃತಿ ವಿಕೋಪ ಕೇಂದ್ರದಲ್ಲಿ ವಿಚಾರಿಸಿದ್ದೇವೆ. ಯಾವುದೇ ರೀತಿಯ (Earthquakes) ಭೂಕಂಪನವಾಗಿಲ್ಲ. ರಿಕ್ಟರ್ ಮಾಪನದಲ್ಲೂ ದಾಖಲಾಗಿಲ್ಲ. ಹೀಗಾಗಿ ಜನ ಭಯಪಡುವ ಅವಶ್ಯಕತೆ ಇಲ್ಲ. ಈ ಭಾಗದಲ್ಲಿ ಹೆದ್ದಾರಿ ಕಾಮಗಾರಿಗಾಗಿ ಯಾವುದೇ ಸ್ಫೋಟ ನಡೆಸಿಲ್ಲ. ಜನ ಕಳುಹಿಸಿದ ಆಡಿಯೋ ಪರಿಶೀಲನೆ ಮಾಡಿದ್ದೇವೆ. ಭೂ ಕಂಪನವಾದಾಗ ರಿಕ್ಟರ್ ಮಾಪನದಲ್ಲಿ ರೆಕಾರ್ಡ್ ಆಗಬೇಕು, ಯಾವುದೂ ರೆಕಾರ್ಡ್ ಆಗಿಲ್ಲ. ಈ ಬಗ್ಗೆ ಜನರಿಂದ ಮಾಹಿತಿ ಪಡೆಯುತ್ತೇವೆ ಎಂದು ತಿಳಿಸಿದ್ದಾರೆ.
ಶಿರಸಿ ತಾಲೂಕಿನ ಮತ್ತಿಘಟ್ಟಾ, ಸಂಪಖಂಡ, ಹೆಗಡೆಕಟ್ಟಾ, ಯಲ್ಲಾಪುರ ತಾಲೂಕಿನ ಚೌವತ್ತಿ, ಸಿದ್ದಾಪುರ ತಾಲೂಕಿನ ಕಾನಸೂರು, ತಟ್ಟಿಕೈ, ಮಾವಿನಗುಂಡಿ, ಹಲಗೇರಿ, ಕುಮಟಾ ಹಾಗೂ ಶಿರಸಿ ತಾಲೂಕಿನ ಗಡಿ ಭಾಗವಾದ ದೇವಿಮನೆ ಘಟ್ಟ ಭಾಗಗಳಲ್ಲಿ ಭೂಕಂಪನದ ಅನುಭವವಾಗಿತ್ತು ಎಂದು ಜನ ಮಾಹಿತಿ ನೀಡಿದ್ದರು. ಹಲವು ಪ್ರತ್ಯಕ್ಷದರ್ಶಿಗಳು ನಾಲ್ಕೈದು ಬಾರಿ ಭೂಮಿ ಕಂಪಿಸಿದೆ ಎಂದರೆ, ಹಲವರು ಗುಡುಗು ಬಂದಂತೆ ಅನುಭವವಾಗಿ ಭೂಮಿ ಕಂಪಿಸಿದೆ ಎಂದು ಹೇಳಿಕೊಂಡಿದ್ದಾರೆ.
ರಿಕ್ಟರ್ ಮಾಪನದಲ್ಲೂ ದಾಖಲಾಗದೇ ಹೀಗೆ ಕಂಪಿಸಿದ ಅನುಭವ ಆಗಿರುವುದು ಸಾಕಷ್ಟು ಪ್ರಶ್ನೆ ಏಳುವಂತೆ ಮಾಡಿದೆ. ಪಶ್ಚಿಮ ಘಟ್ಟ ಭಾಗದಲ್ಲಿ ನಡೆಯುತ್ತಿರುವ ಕಾಮಗಾರಿ ಪ್ರಭಾವದಿಂದ ಭೂಮಿಯ ಆಳದಲ್ಲಿ ಯಾವುದಾದರೂ ದೊಡ್ಡ ಬಂಡೆಕಲ್ಲು ಜಾರುವಂತೆ ಮಾಡಿದೆಯೇ? ಎಂಬ ಬಗ್ಗೆಯೂ ಪ್ರಶ್ನೆ ಎದ್ದಿದೆ. ಈ ಹಿಂದೆ ಘಟ್ಟ ಭಾಗದಲ್ಲಿ ನಿರಂತರವಾಗಿ ಭೂಕುಸಿತ ಸಹ ಆಗಿದೆ. ಹೀಗಾಗಿ ಮತ್ತೆ ಭೂಮಿ ಕುಸಿಯುವ ಮುನ್ಸೂಚನೆಯಾ ಎಂಬ ಪ್ರಶ್ನೆ ಏಳುವಂತೆ ಮಾಡಿದೆ.
ಕಾರವಾರ: ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲಿ NIA ತಂಡದಿಂದ ದಾಳಿ ನಡೆದಿದ್ದು, ಭಯೋತ್ಪಾದಕ ಸಂಘಟನೆ ಜೊತೆ ಸಂಪರ್ಕ ಹಿನ್ನೆಲೆಯಲ್ಲಿ ಬನವಾಸಿಯ ದಾಸನ ಕೊಪ್ಪ ಮೂಲದ ಅಬ್ದುಲ್ ಶುಕ್ಕೂರ್ (32) ನನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದೆ.
ಇದಲ್ಲದೇ ಶಿವಮೊಗ್ಗದಲ್ಲಿ (Shivamogga) ಮಸೀದಿ ಹಾಗೂ ಇತರ ಪ್ರದೇಶಗಳಲ್ಲಿ ಬಾಂಬ್ ಬ್ಲಾಸ್ಟ್ ಆರೋಪಿಗಳಿಗೆ ಪ್ರಚೋದನೆ ನೀಡಿರುವ ಆರೋಪ ಹೊಂದಿರುವ ಅಬ್ದುಲ್ ಶುಕ್ಕೂರ್ ದುಬೈ ನಲ್ಲಿ ಕೆಲಸ ಮಾಡುತ್ತಿದ್ದಾನೆ. ನಿಷೇಧಿತ ಪಿಎಫ್‌ಐ ಸಂಘಟನೆಯ ಸದಸ್ಯನಾಗಿದ್ದಾನೆ ಎಂಬ ಆರೋಪ ಈತನ ಮೇಲಿದೆ.
ಕೆಲವು ದಿನದ ಹಿಂದೆ ಬಕ್ರೀದ್ ಆಚರಣೆಗಾಗಿ ಬನವಾಸಿಯ ದಾಸನ ಕೊಪ್ಪದ ನಿವಾಸಕ್ಕೆ ಆಗಮಿಸಿದ್ದ ಅಬ್ದುಲ್ ಶುಕ್ಕೂರ್ ನನ್ನು ಆನ್ ಲೈನ್ ಮೂಲಕ ಭಯೋತ್ಪಾದಕ ಸಂಘಟನೆ ಜೊತೆ ಸಂಪರ್ಕ ಹಾಗೂ ಪಾಸ್ ಪೋರ್ಟ್ ನಲ್ಲಿ ನಕಲಿ ದಾಖಲೆ ನೀಡಿದ ಆರೋಪದಡಿ NIA ತನಿಖೆ ಕೈಗೊಂಡಿದೆ.
ಕಾರವಾರ: ಉತ್ತರಕನ್ನಡ ಕ್ಷೇತ್ರದ ಮತ ಎಣಿಕೆ ಮುಕ್ತಾಯವಾಗಿದ್ದು, ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಜಯಗಳಿಸಿದ್ದಾರೆ. ಆದರೆ ಅಧಿಕೃತವಾಗಿ ಇನ್ನಷ್ಟೇ ಘೋಷಣೆ ಮಾಡಬೇಕಿದೆ.
ಹೌದು. ಮತ ಎಣಿಕೆ ಆರಂಭವಾದಾಗಿನಿಂದಲೂ ಕಾಗೇರಿಯವರು ಮುನ್ನಡೆ ಕಾಯ್ದುಕೊಂಡಿದ್ದರು. ಇದೀಗ ನಿಂಬಾಳ್ಕರ್ (Anjali Nimbalkar) ವಿರುದ್ಧ ಕಾಗೇರಿಯವರು ಗೆದ್ದು ಬೀಗಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ವಿರುದ್ಧ ಕಾಗೇರಿಯವರು 7,76,968 ಇವಿಎಂ ಮತ, 3,526 ಪೋಸ್ಟಲ್ ಮತ ಸೇರಿ 7,80,494 ಮತಗಳಿಂದ ಜಯಗಳಿಸಿದ್ದಾರೆ. ನಿಂಬಾಳ್ಕರ್ ಅವರು 4,42,622 ಮತಗಳನ್ನು ಪಡೆದುಕೊಳ್ಳುವ ಮೂಲಕ ಸೋಲನುಭವಿಸಿದರು. ಒಟ್ಟಿನಲ್ಲಿ ಕಾಗೇರಿಯವರು 3,37,872 ಮತಗಳ ಅಂತರದಿಂದ ಅಭೂತಪೂರ್ವ ಗೆಲುವು ತನ್ನದಾಗಿಸಿಕೊಂಡಿದ್ದಾರೆ. 10,139 ನೋಟಾ ಮತಗಳು ದಾಖಲಾಗಿವೆ.
ಬಿಜೆಪಿ ಗೆಲುವು ಸಾಧಿಸುತ್ತಿದ್ದಂತೆಯೇ ಬಿಜೆಪಿ ಕಾರ್ಯಕರ್ತರಲ್ಲಿ ಮುಗಿಲು ಮುಟ್ಟಿದೆ. ಕುಮಟಾ ಬಿಜೆಪಿ ಕಚೇರಿಯಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಸಿಹಿ ತಿನ್ನಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ಇದೇ ವೇಳೆ ಘೋಷಣೆಗಳನ್ನು ಕೂಗುವ ಮೂಲಕ ಕಾರ್ಯಕರ್ತರು, ಮುಖಂಡರು ಗೆಲುವನ್ನ ಸಂಭ್ರಮಿಸಿದರು.
ತಮ್ಮ ಗೆಲುವಿನ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಕಾಗೇರಿಯವರು, ನನ್ನ ಗೆಲುವನ್ನು ಕಾರ್ಯಕರ್ತರು ಮತದಾರಿಗೆ ಅರ್ಪಣೆ ಮಾಡುತ್ತೇನೆ. ನನ್ನ ಸೋಲಿಸಬೇಕು ಎಂದು ಪ್ರಯತ್ನಿಸಿದ ವ್ಯಕ್ತಿಗಳು ಈಗಲಾದರೂ ಆತ್ಮಾವಲೋಕನ ಮಾಡಿಕೊಳ್ಳಲಿ. ವ್ಯಕ್ತಿಗಿಂತ ಪಕ್ಷ ಮುಖ್ಯ ಎಂದು ಜಿಲ್ಲೆಯ ಕಾರ್ಯಕರ್ತರು ತೋರಿಸಿಕೊಟ್ಟಿದ್ದಾರೆ ಎಂದು ಹೇಳುವ ಮೂಲಕ ಮಾಜಿ ಸಂಸದ ಅನಂತಕುಮಾರ್ ಹೆಗಡೆ, ಶಾಸಕ ಶಿವರಾಮ್ ಹೆಬ್ಬಾರ್ ಗೆ ಟಾಂಗ್ ನೀಡಿದರು.
ಕಾರವಾರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರ (Uttara Kannada Loksabha Constituency) ತನ್ನದೇ ಆದ ಮಹತ್ವ ಹೊಂದಿದೆ. ಈ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿಯಿಂದ ಹಿಡಿದು ದೊಡ್ಡ ದೊಡ್ಡ ಸಾಹಿತಿಗಳು, ಖ್ಯಾತ ಚಲನಚಿತ್ರ ನಟರು ಸ್ಪರ್ಧಿಸಿ ಗೆದ್ದು ಸೋತವರಿದ್ದಾರೆ. ಹಾಗಿದ್ರೆ ಇವತ್ತಿನ ಲೋಕಸಭಾ ಇತಿಹಾಸದ ಮಾಹಿತಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಕನ್ನಡದ ಖ್ಯಾತ ನಟ ಅನಂತನಾಗ್ ಹಾಗೂ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತ ಶಿವರಾಮ್ ಕಾರಂತರ ಬಗ್ಗೆ ತಿಳಿದುಕೊಳ್ಳೋಣ.
ಹೌದು. ಉತ್ತರ ಕನ್ನಡ ಜಿಲ್ಲೆಯ ಲೋಕಸಭಾ ಕ್ಷೇತ್ರದಿಂದ ಖ್ಯಾತ ಚಲನಚಿತ್ರ ನಟ ಅನಂತ್ ನಾಗ್ ಹಾಗೂ ಸಾಹಿತಿ ಶಿವರಾಮ್ ಕಾರಂತ್ ಸ್ಪರ್ಧೆ ಮಾಡಿದ್ದರು. ಅದು 1989 ಲೋಕಸಭಾ ಚುನಾವಣೆ. ಹೊನ್ನಾವರ ಮೂಲದ ಖ್ಯಾತ ನಟ ಅನಂತ್ ನಾಗ್ ಚಲನಚಿತ್ರದ ಮೂಲಕ ಖ್ಯಾತಿ ಗಳಿಸಿ ಉತ್ತುಂಗದಲ್ಲಿದ್ದರು. ದಿವಂಗತ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಪ್ರಭಾವದಲ್ಲಿ ಜನತಾದಳದಲ್ಲಿ ಗುರುತಿಸಿಕೊಂಡಿದ್ದ ಅನಂತನಾಗ್ ಮಹತ್ವದ ಆಕಾಂಕ್ಷಿ ಹೊಂದಿದ್ದವರು.
ಸಿನಿಮಾ ಕ್ಷೇತ್ರದಲ್ಲಿ ಖ್ಯಾತಿ ಗಳಿಸಿದ್ದರಿಂದ ರಾಜಕೀಯದಲ್ಲೂ ತನ್ನ ಛಾಪು ಒತ್ತಲು ಜನತಾದಳವನ್ನು ಆಯ್ಕೆ ಮಾಡಿಕೊಂಡಿದ್ದ ಅವರು, ರಾಮಕೃಷ್ಣ ಹೆಗಡೆ ಹಾಗೂ ಜೆ.ಹೆಚ್ ಪಟೇಲ್‌ರ ಅಣತಿಯಂತೆ ಉತ್ತರ ಕನ್ನಡ ಜಿಲ್ಲೆಯಿಂದ ಲೋಕಸಭಾ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಅಲ್ಪ ಮತದಲ್ಲಿ ಸೋತ ಅವರು ದೊಡ್ಡ ಮತಗಳನ್ನು ಗಳಿಸುವಲ್ಲಿ ಯಶಸ್ಸು ಕಂಡಿದ್ದರು. ಒಂದು ವೇಳೆ ಅವರು ಆ ಸಂದರ್ಭದಲ್ಲಿ ಗೆದ್ದಿದ್ದರೇ ಅವರು ಸಕ್ರಿಯ ರಾಜಕಾರಣದಲ್ಲಿ ಈವರೆಗೂ ಇರುತ್ತಿದ್ದರು. ಇದನ್ನೂ ಓದಿ: ಮುಸ್ಲಿಮರ 4% ಮೀಸಲಾತಿ ಮುಂದುವರಿಸೋದಾಗಿ ಬಿಜೆಪಿ ಸುಪ್ರೀಂಗೆ ಹೇಳಿತ್ತು: ಸಿದ್ದರಾಮಯ್ಯ ತಿರುಗೇಟು
ಇನ್ನು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಶಿವರಾಮ್ ಕಾರಂತರು ಸಹ ಆ ಸಮಯದಲ್ಲಿ ಪರಿಸರ ಹೋರಾಟದ ಮೂಲಕ ಜಿಲ್ಲೆಯಲ್ಲಿ ಹೆಸರು ಗಳಿಸಿದ್ದರು. ಕೈಗಾ ಅಣು ಸ್ಥಾವರ ವಿರೋಧಿ ಹೋರಾಟ ಸೇರಿದಂತೆ ಅನೇಕ ಪರಿಸರ ಹೋರಾಟದಲ್ಲಿ ಜಿಲ್ಲೆಯಲ್ಲಿ ಹೆಸರು ಗಳಿಸಿದ್ದ ಅವರು 1989 ರಲ್ಲಿ ಉತ್ತರ ಕನ್ನಡ ಜಿಲ್ಲೆಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಚುನಾವಣಾ ಪ್ರಚಾರಕ್ಕೂ ಬಾರದೇ ದೊಡ್ಡ ಅಂತರದಲ್ಲಿ ಸೋತಿದ್ದರು. ಆದ್ರೆ ರಾಜಕೀಯದಲ್ಲಿ ಸೋತ ಈ ದಿಗ್ಗಜರು ವೃತ್ತಿ ಜೀವನದಲ್ಲಿ ಗೆದ್ದು ಜನಮಣ್ಣನೆ ಗಳಿಸಿದ್ದಾರೆ.
1989 ರ ಲೋಕಸಭಾ ಚುನಾವಣೆಯಲ್ಲಿ ಯಾರು ಎಷ್ಟು ಮತ ಗಳಿಸಿದ್ದರು ವಿವರ ಇಲ್ಲಿದೆ.
1) ಕಾಂಗ್ರೆಸ್ – ದೇವರಾಯ ಜಿ.ನಾಯ್ಕ- 2,40,571
2) ಜನತಾದಳ- ಅನಂತನಾಗ್- 2,09,003
3)ಸ್ವತಂತ್ರ- ಶಿವರಾಮ್ ಕಾರಂತ್- 58,903
ಈ ಚುನಾವಣೆಯಲ್ಲಿ ಈ ಹಿಂದೆ ಸಂಸದರಾಗಿದ್ದ ಕಾಂಗ್ರೆಸ್ ನ ದೇವರಾಯ ನಾಯ್ಕ ಆಯ್ಕೆಯಾಗಿ ಸಂಸತ್ ಪ್ರವೇಶಿಸಿದ್ದರು.
ಕಾರವಾರ: ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿರುವವರು ದೇಶದ್ರೋಹಿಗಳು, ರೈತರೇ (Delhi Chalo) ಅಲ್ಲ ಎಂದು ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತಕುಮಾರ್ ಹೆಗಡೆ (Ananth Kumar Hegde) ಕಿಡಿಕಾರಿದ್ದಾರೆ.
ಜಿಲ್ಲೆಯ ಮುಂಡಗೋಡಿನಲ್ಲಿ ಮಾತನಾಡಿದ ಅವರು, ಅಲ್ಲಿ ಪ್ರತಿಭಟನೆಗೆ ಬರುವವರು ದೊಡ್ಡ ದೊಡ್ಡ ಗಾಡಿ ತೆಗೆದುಕೊಂಡು ಟೊಯೋಟಾ ಕಾರಲ್ಲಿ ಬರುತ್ತಾರೆ, ರೈತರ ಬಳಿ ಅಷ್ಟೆಲ್ಲಾ ದುಡ್ಡಿದೆಯಾ…? ಪ್ರತಿಭಟನೆ ಮಾಡುತ್ತಿರುವವರು ರೈತರೇ ಅಲ್ಲ, ಇದು ರೈತರ ಹೋರಾಟ ಅಲ್ಲ ದೇಶದ್ರೋಹಿಗಳ ಹೋರಾಟ. ಖಲಿಸ್ತಾನಿಗಳ ಹೋರಾಟ, ರೈತರ ಹೆಸರಿಟ್ಟುಕೊಂಡಿದ್ದಾರೆ. ಅಷ್ಟೇ ಅವರಿಗೆ ಬೇರೆ ದೇಶದವರು ಹಣ ನೀಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಕಾರವಾರ: ಉತ್ತರ ಕನ್ನಡ (UttaraKannada) ಜಿಲ್ಲೆಯ ಕರಾವಳಿ ಭಾಗದಲ್ಲಿ ಬಿಸಿಲ ವಾತಾವರಣ ಪ್ರಾರಂಭವಾಗುವ ಮುಂಚೆಯೇ ಎಳನೀರು (Tender Coconut) ಅಬ್ಬರದ ಬೆಲೆ ಏರಿಕೆ ಕಂಡಿದೆ.
ಕರಾವಳಿ ಭಾಗದಲ್ಲಿ ಬಿಸಿಲು ಹೆಚ್ಚಿರುವುದರಿಂದ ಎಳನೀರು, ತಂಪು-ಪಾನಿಯಗಳು ಎಥೇಚ್ಛವಾಗಿ ಮಾರಾಟವಾಗುತ್ತದೆ. ಹೀಗಾಗಿ ತಂಪು ಪಾನಿಯಗಳಿಗಿಂತ ಎಳನೀರು ಹೆಚ್ಚು ಬೇಡಿಕೆ ಪಡೆದುಕೊಂಡಿದ್ದು ಕಾರವಾರದಲ್ಲಿ ಒಂದು ಎಳನೀರಿಗೆ 50 ರೂ. ದಾಟಿದೆ. ಡಿಸೆಂಬರ್ ಅಂತ್ಯದಲ್ಲಿ 80 ರಿಂದ ನೂರು ರುಪಾಯಿ ಏರುವ ಸಾಧ್ಯತೆಗಳಿವೆ ಎಂದು ಎಳನೀರು ಮಾರಾಟಗಾರರು ಹೇಳುತ್ತಾರೆ.
ಕರಾವಳಿಯಲ್ಲಿ ಹೆಚ್ಚು ದರ ಏಕೆ?: ಉತ್ತರ ಕನ್ನಡ ಜಿಲ್ಲೆಗೆ ಶಿವಮೊಗ್ಗ, ತರಿಕೆರೆ, ತುಮಕೂರು ಭಾಗದಿಂದ ಎಳನೀರು ಸರಬರಾಜಾಗುತ್ತದೆ. ಇಲ್ಲಿನ ಸಾಗಾಟ ದರ ಹೆಚ್ಚಾದ್ದರಿಂದ ಗುತ್ತಿಗೆ ಪಡೆದ ವ್ಯಾಪಾರಿಗಳು ಪ್ರತಿ ಎಳನೀರಿನ ದರ 25 ರಿಂದ 28 ವಿಧಿಸುತ್ತಾರೆ. ಆದ್ರೆ ಸ್ಥಳೀಯ ಮಾರಾಟಗಾರರು ಪ್ರತಿ ಎಳನೀರಿಗೆ 50 ರಿಂದ 60 ರಂತೆ ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಾರೆ. ಹೀಗಾಗಿ ಕರಾವಳಿ ಭಾಗದಲ್ಲಿ ಎಳನೀರಿನ ದರ ಹೆಚ್ಚಾಗಿದೆ. ಇನ್ನು ಬಿರುಬೇಸಿಗೆ ಬಂತೆಂದರೆ 80 ರೂ.ವರೆಗೂ ಕಾರವಾರದಲ್ಲಿ ಒಂದು ಎಳನೀರು ಮಾರಾಟವಾಗುತ್ತದೆ. ಈ ಬಾರಿ ಹೆಚ್ಚು ಬೇಡಿಕೆ ಇರುವುದರಿಂದ ಜನವರಿ ಅಂತ್ಯದಲ್ಲಿ 80 ರಿಂದ ನೂರರವರೆಗೆ ದರ ಏರುವ ಸಾಧ್ಯತೆಗಳಿವೆ.
ನೀರಾಕ್ಕೂ ಹೆಚ್ಚಿದ ಬೇಡಿಕೆ: ಜಿಲ್ಲೆಯಲ್ಲಿ ತೆಂಗಿನ ಮರದಿಂದ ತೆಗೆದ ನೀರಾಕ್ಕೂ ಹೆಚ್ಚು ಬೇಡಿಕೆ ಇದ್ದು 250 ಮಿಲಿಗೆ 65 ರೂ ಇದೆ. ಮೊದಲು ಕುಮಟಾ ಭಾಗದಲ್ಲಿ ದೊರಕುತಿದ್ದ ನೀರಾ ಈಗ ಗೋವಾ ಭಾಗದಿಂದ ಜಿಲ್ಲೆಗೆ ಸರಬರಾಜಾಗುತಿದ್ದು ಪ್ರವಾಸಿಗರ ಮೆಚ್ಚಿನ ತಾಣವಾದ ಉತ್ತರ ಕನ್ನಡ ಜಿಲ್ಲೆಯಲ್ಲಿ ಎಳನೀರು ಗ್ರಾಹಕ ಹೊಟ್ಟೆ ತಂಪು ಮಾಡುವ ಬದಲು ಸುಡುತ್ತಿದೆ.
ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ (Uttara Kannada) ಡೆಂಗ್ಯೂಗೆ ಇನ್ನೊಬ್ಬರು ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ.
ಭಟ್ಕಳದ ಮೊಹಮ್ಮದ್ ಮೀರಾನ್ ಸಾದಾ (77) ಡೆಂಗ್ಯೂ ಜ್ವರದಿಂದ (Dengue Fever) ಮೃತಪಟ್ಟಿದ್ದಾರೆ. ಭಟ್ಕಳದ ಖಾಝಿಯಾ ಸ್ಟ್ರೀಟ್ ನಿವಾಸಿಯಾಗಿದ್ದ ಮೀರಾನ್ ಸಾದಾ ಅವರು ಜ್ವರದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಇದೀಗ ಅವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಸಾದಾ ನಿಧನದ ಮೂಲಕ ಜಿಲ್ಲೆಯಲ್ಲಿ ಈವರೆಗೆ ಡೆಂಗ್ಯೂದಿಂದ ಇಬ್ಬರ ಸಾವಾಗಿದೆ.
ಭಾನುವಾರ ಮಾವಿನಕುರ್ವ ಪಂಚಾಯ್ತಿ ವ್ಯಾಪ್ತಿಯ ತಲಗೋಡು ನಿವಾಸಿ ಪ್ರಜ್ವಲ್ ಗೋವಿಂದ ಕಾರ್ವಿ (24) ಬಲಿಯಾಗಿದ್ದರು. ಇಬರು ಸಾಗರಶ್ರೀ ಬೋಟ್‍ನಲ್ಲಿ ಮೀನುಗಾರನಾಗಿ ಕಾರ್ಯನಿರ್ವಹಿಸುತ್ತಿದ್ದು, ಒಂದು ವಾರದಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಿಸದೇ ಭಾನುವಾರ ಮೃತಪಟ್ಟಿದ್ದರು. ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರಕ್ಕೆ ಮೊದಲ ಬಲಿ
ಭಟ್ಕಳದ ಬಂದರಿನಲ್ಲಿ ಮೀನುಗಾರಿಕೆ ವೃತ್ತಿ ಮಾಡುತ್ತಿರುವ ಇನ್ನೂ ಇಬ್ಬರಿಗೆ ಡೆಂಗ್ಯೂ ಜ್ವರ ಕಾಣಿಸಿಕೊಂಡಿದ್ದು, ಅವರು ಸಹ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿತ್ತು. ಭಟ್ಕಳ ಬಂದರಿನಲ್ಲಿ ಶುಚಿತ್ವ ಇಲ್ಲದ ಕಾರಣ ಹೆಚ್ಚು ಸೊಳ್ಳೆಗಳ ಉತ್ಪತ್ತಿಯಾಗುತಿದ್ದು, ಈ ಭಾಗದಲ್ಲಿ ಹಲವರಿಗೆ ಡೆಂಗ್ಯೂ ಜ್ವರ ಕಾಣಿಸಿಕೊಳ್ಳಲು ಕಾರಣವಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಇದನ್ನೂ ಓದಿ: ಡೆಂಗ್ಯೂ ಜ್ವರಕ್ಕೆ ಮನೆ ಮದ್ದು
ಡೆಂಗ್ಯೂ ಜ್ವರದ ಲಕ್ಷಣಗಳು:
* ಅಧಿಕ ಜ್ವರ, ತಲೆನೋವು, ಸುಸ್ತು ಕಾಣಿಸಿಕೊಳ್ಳುತ್ತವೆ.
* ಮಾಂಸಖಂಡಗಳಲ್ಲಿ, ಕೈ, ಕಾಲುಗಳ ಕೀಲುಗಳಲ್ಲಿ ನೋವು ಉಂಟಾಗುತ್ತದೆ.
* ಕಣ್ಣಿನಲ್ಲಿ ಹೇಳಲಾಗದ ನೋವು, ಉರಿಯಾಗುತ್ತದೆ.
* ಕೆಮ್ಮು, ಗಂಟಲು ಕೆರೆತ ಬರುತ್ತದೆ.
* ಕೆಲವರಿಗೆ ವಾಂತಿ, ತಲೆ ಸುತ್ತು ಕಾಣಿಸಿಕೊಳ್ಳುತ್ತವೆ.
ಮುಂಜಾಗ್ರತಾ ಕ್ರಮಗಳೇನು?:
* ಡೆಂಗ್ಯೂ ಹರಡುತ್ತಿದೆ ಎಂಬುದು ಗೊತ್ತಾಗುತ್ತಿದ್ದಂತೆ ನೀವು ಎಚ್ಚರಗೊಳ್ಳಬೇಕು. ನಿಮ್ಮ ಸುತ್ತಮುತ್ತಲಿನ ಪರಿಸರವನ್ನು ಶುಚಿಗೊಳಿಸಬೇಕು.
* ಸೊಳ್ಳೆಗಳಿಗೆ ಸೂಕ್ತವಾದ ತಾಣಗಳನ್ನು ನಾಶಪಡಿಸುವುದು.
* ಮನೆಯ ಸುತ್ತಮುತ್ತ ನಿಂತಿರುವ ನೀರಿನ ನೆಲೆಗಳನ್ನು ನಾಶ ಪಡಿಸಬೇಕು.
* ತೆಂಗಿನ ಚಿಪ್ಪು, ಟಯರ್‍ಗಳು, ಚಿಕ್ಕ ಗುಂಡಿಗಳು, ಬೇಡ ಎಂದು ಬಿಸಾಡಿದ ಪ್ಲಾಸ್ಟಿಕ್ ಬಕೆಟ್, ಜಗ್ ಇತ್ಯಾದಿಗಳ ಸಂಗ್ರಹ ಬೇಡ.
* ನೀರು ನಿಂತಿರುವ ಕಡೆ ಸೂಕ್ತ ಕೀಟನಾಶಕ ಸಿಂಪಡಿಸಿ.
* ಮಕ್ಕಳಿಗೆ ಉದ್ದ ತೋಳಿನ ಬಟ್ಟೆ, ಸಾಕ್ಸ್ ಹಾಕಿರಿ.
* ಸೊಳ್ಳೆಗಳು ಮೊಟ್ಟೆಗಳನ್ನು ಇಡಲು ಅವಕಾಶ ಇರುವ ಕುಂಡಗಳು, ಮತ್ತಿತರ ವಸ್ತುಗಳನ್ನು ಸ್ವಚ್ಛ ಮಾಡಿರಿ.
ಒಟ್ಟಿನಲ್ಲಿ ಡೆಂಗ್ಯೂ ಜ್ವರ ಬಂತೆಂದರೆ ಭಯ ಪಡುವುದು ಬೇಡ. ದಿನ ನಿತ್ಯದ ಆಹಾರ ಕ್ರಮ, ನಾಲಿಗೆ ರುಚಿಯನ್ನು ನಿಯಂತ್ರಣದಲ್ಲಿಡುವುದರಿಂದ ಡೆಂಗ್ಯೂವನ್ನು ಹೊಡೆದೋಡಿಸಬಹುದು. ಜ್ವರ ಕಾಣಿಸಿಕೊಂಡ ತಕ್ಷಣ ವೈದ್ಯರ ಭೇಟಿ ಮಾಡಿ ಸೂಕ್ತ ಔಷಧಿಗಳನ್ನು ತೆಗೆದುಕೊಳ್ಳಿ. ಸಾಕಷ್ಟು ಮನೆ ಮದ್ದು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಿ. ಸಲಹೆಗಳನ್ನೂ ಪಾಲಿಸಿದರೆ ನೀವು ಡೆಂಗ್ಯೂ ಜ್ವರದಿಂದ ಪಾರಾಗಬಹುದು.
ಕಾರವಾರ: ಮೊಬೈಲ್ ನೆಟ್‍ವರ್ಕ್ (Mobile Network) ಸಮಸ್ಯೆ ಹೆಚ್ಚಿರುವ ಉತ್ತರ ಕನ್ನಡ (Uttara Kannada) ಜಿಲ್ಲೆಗೆ ಕೇಂದ್ರ ಸರ್ಕಾರ ದೂರಸಂಪರ್ಕ ಇಲಾಖೆಯಿಂದ 232 ಹೊಸ ಮೊಬೈಲ್ ಟವರ್ ಗಳನ್ನು ಮಂಜೂರು ಮಾಡಲಾಗಿತ್ತು.
232 ಟವರ್ ಗಳ ಪೈಕಿ 18 ಟವರ್ ಗಳನ್ನು 2G ಇಂದ 3G ಮೇಲ್ದರ್ಜೆಗೆ ಏರಿಸಲಾಗಿದ್ದು, ಇದುವರೆಗೂ ಮೊಬೈಲ್ ಸಿಗ್ನಲ್ ಸಿಗದ 196 ಹಳ್ಳಿಗಳನ್ನು ಗುರುತಿಸಿ ಟವರ್ ನಿರ್ಮಾಣಕ್ಕೆ ಅನುಮೋದನೆ ನೀಡಿತ್ತು. ಇವುಗಳಲ್ಲಿ ಕಾರವಾರ-08, ಅಂಕೋಲಾ-12, ಜೋಯಿಡಾ – 42, ಕುಮಟಾ-19, ಹೊನ್ನಾವರ-8, ಭಟ್ಕಳ-13, ಸಿದ್ದಾಪುರ -17, ಶಿರಸಿ -24, ಮುಂಡಗೋಡು- 10 ಹೊಸ ಟವರ್ ಗೆ ಮಂಜೂರು ದೊರಕಿದ ನಂತರ ಜಿಲ್ಲಾಡಳಿತ ಉಚಿತವಾಗಿ ಅರಣ್ಯ ಭೂಮಿಯನ್ನು ಆಯಾ ತಾಲೂಕು ವ್ಯಾಪ್ತಿಯಲ್ಲಿ ಟವರ್ ನಿರ್ಮಾಣಕ್ಕೆ 30 ವರ್ಷದ ಲೀಸ್ ನೊಂದಿಗೆ ನೀಡಿತ್ತು.
ಆದರೆ ಇದೀಗ ಅರಣ್ಯ ಕಾಯ್ದೆ ಅಡ್ಡಿಯಾದ್ದರಿಂದ ಮೊದಲ ಹಂತದಲ್ಲಿ ಶಿರಸಿಯ 06 ಹಾಗೂ ಜಿಲ್ಲೆಯ ಒಟ್ಟು 72 ಸ್ಥಳಗಳಲ್ಲಿ ನೀಡಿದ್ದ ಜಾಗದ ಮಂಜೂರಾತಿ ಆದೇಶವನ್ನು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ರವರು ಹಿಂಪಡೆದುಕೊಂಡಿದ್ದಾರೆ. ಇದರಿಂದ ಹಲವು ವರ್ಷದಿಂದ ನೆಟ್ವರ್ಕ ಸಮಸ್ಯೆ ಎದುರಿಸುತಿದ್ದ ಗ್ರಾಮಗಳಿಗೆ ಟವರ್ ನಿರ್ಮಾಣ ವಾಗುವ ಮುಂಚೆಯೇ ವಿಘ್ನ ಎದುರಾಗಿದೆ. ಇದನ್ನೂ ಓದಿ: ತಮಿಳುನಾಡು ಕೇಳಿದಷ್ಟು ನೀರು ಹರಿಸಲು ಸಾಧ್ಯವಿಲ್ಲ: ಅಫಿಡವಿಟ್‌ನಲ್ಲಿ ಕರ್ನಾಟಕ ಹೇಳಿದ್ದೇನು?
ಶಿರಸಿಯ ಹುಲೇಕಲ್ ಭಾಗದ -3, ಸಂಪಖಂಡ ಭಾಗದ 2, ಬನವಾಸಿ ಭಾಗದ -1 ಟವರ್ ಗಳನ್ನು ಜಿಲ್ಲಾಧಿಕಾರಿ ಆದೇಶದಿಂದ ನಿರ್ಮಾಣ ಹಂತದಲ್ಲೇ ಕೈ ಬಿಡಲಾಗಿದೆ. ಮೊಬೈಲ್ ನೆಟ್‍ವರ್ಕ್ ಇಲ್ಲದ ಜೋಯಿಡಾ ಭಾಗಕ್ಕೂ ಈ ಸಮಸ್ಯೆ ಎದುರಾಗಿದ್ದು, ಜಿಲ್ಲಾಧಿಕಾರಿಗಳು ಆದೇಶ ಹಿಂಪಡೆದಿದ್ದರಿಂದ ಇಲ್ಲಿನ ಜನತೆಗೂ ಮೊಬೈಲ್ ನೆಟ್‍ವರ್ಕ್ ಸಮಸ್ಯೆ ಎದುರಾಗಿದೆ.
ಶಿರಸಿಯಲ್ಲಿ ಮಂಜೂರಾಗಿದ್ದ ಟವರ್ ಗಳನ್ನು ಬಿಎಸ್‍ಎನ್‍ಎಲ್ ಇಲಾಖೆ ಯಿಂದ ಕಾಮಗಾರಿ ಸಹ ಪ್ರಾರಂಭಮಾಡಲಾಗಿತ್ತು. ಆದರೆ ಇದೀಗ ಆದೇಶ ಹಿಂಪಡೆದಿದ್ದರಿಂದ ಬಿಎಸ್‍ಎನ್‍ಎಲ್‍ಗೂ ದೊಡ್ಡ ನಷ್ಟ ಎದುರಾಗುವ ಜೊತೆ ಮೊಬೈಲ್ ನೆಟ್‍ವರ್ಕ್ ಆಗುವ ಆಸೆ ಹೊಂದಿದ್ದ ಜಿಲ್ಲೆಯ ಜನರು ಇದೀಗ ಬೇಸರ ವ್ಯಕ್ತಪಡಿಸುವಂತಾಗಿದೆ.
ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಶಿರಸಿ ನಗರದ ಟಿ.ಎಸ್.ಎಸ್. ರಸ್ತೆಯಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸವಾರರಿಬ್ಬರೂ ಗಂಭೀರ ಗಾಯಗೊಂಡಿದ್ದಾರೆ.
ಮೊಬೈಲ್ (Mobile) ನೋಡುತ್ತಾ ಹೆಲ್ಮೆಟ್ ಧರಸಿದ ವ್ಯಕ್ತಿಯೋರ್ವ ನಡುರಸ್ತೆಯಲ್ಲಿ ಸಂಚರಿಸುತ್ತಿದ್ದ ಇನ್ನೊಂದು ಬೈಕ್‍ಗೆ ನೇರವಾಗಿ ಗುದ್ದಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಗುದ್ದಿದ ರಭಸಕ್ಕೆ ಎರಡು ಬೈಕ್ ಗಳಲ್ಲಿದ್ದ ಸವಾರರು ಹಾರಿ ರಸ್ತೆಯ ಮೇಲೆ ಬಿದ್ದಿದ್ದಾರೆ. ಇದನ್ನೂ ಓದಿ: ಹೊಳೆಹೊನ್ನೂರು ಗಾಂಧಿ ಸರ್ಕಲ್‌ನಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ- ಸ್ಥಳೀಯರ ಪ್ರತಿಭಟನೆ
ಮೊಬೈಲ್ ಅವಾಂತರದಿಂದ ದುರ್ಘಟನೆ ನಡೆದಿದ್ದು, ಗಾಯಾಳುಗಳನ್ನು ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿರಸಿ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನರ ನಡೆದಿದ್ದು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.