Tag: Uttarakhand

  • ಹಿಮಾಚಲ, ಉತ್ತರಾಖಂಡದಲ್ಲಿ ವರುಣನ ಆರ್ಭಟ – 54 ಮಂದಿ ಸಾವು

    ಹಿಮಾಚಲ, ಉತ್ತರಾಖಂಡದಲ್ಲಿ ವರುಣನ ಆರ್ಭಟ – 54 ಮಂದಿ ಸಾವು

    ನವದೆಹಲಿ: ಹಿಮಾಚಲ ಪ್ರದೇಶ (Himachal) ಮತ್ತು ಉತ್ತರಾಖಂಡ (Uttarakhand) ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದ್ದು (Rain), ಈವರೆಗೂ 54 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಹಿಮಾಚಲ ಪ್ರದೇಶ ಒಂದರಲ್ಲಿ 51 ಜನ ಸಾವನ್ನಪ್ಪಿದ್ದು, ಉತ್ತರಾಖಂಡದಲ್ಲಿ 3 ಜನ ಮೃತಪಟ್ಟಿದ್ದಾರೆ.

    ಶಿಮ್ಲಾದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಭೂ ಕುಸಿತದಲ್ಲಿ (Landslide) ಈವರೆಗೂ 14 ಶವಗಳನ್ನು ಹೊರತೆಗೆಯಲಾಗಿದೆ. ಸಮ್ಮರ್ ಹಿಲ್ ಪ್ರದೇಶದ ಶಿವ ದೇವಾಲಯದ ಅವಶೇಷಗಳ ಅಡಿಯಲ್ಲಿ ಇನ್ನೂ ಹೆಚ್ಚಿನ ಜನರು ಸಿಲುಕಿರುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮಕ್ಕಳಾಗಿಲ್ಲ ಅಂತ ದೇವರ ಮೊರೆ ಹೋಗಿದ್ದ 24ರ ವಿವಾಹಿತೆ 54ರ ಪೂಜಾರಿ ಜೊತೆಯೇ ಜೂಟ್!

    ಮಂಡಿ ಜಿಲ್ಲೆಯಲ್ಲಿ ಮಳೆ ಸಂಬಂಧಿತ ಅವಘಡಗಳಲ್ಲಿ 19 ಮಂದಿ ಸಾವನ್ನಪ್ಪಿದ್ದಾರೆ. ಸೋಲನ್ ಜಿಲ್ಲೆಯಲ್ಲಿ ಒಂದು ಕುಟುಂಬದ ಏಳು ಸದಸ್ಯರು ಸೇರಿದಂತೆ 11 ಜನರು ಸಾವನ್ನಪ್ಪಿದ್ದಾರೆ. ಕುಲು, ಕಿನ್ನೌರ್, ಲಾಹೌಲ್ ಮತ್ತು ಸ್ಪಿತಿ ಹೊರತುಪಡಿಸಿ ರಾಜ್ಯದ 12 ಜಿಲ್ಲೆಗಳ ಪೈಕಿ ಒಂಬತ್ತು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಎಂದು ಜಿಲ್ಲಾಧಿಕಾರಿ ಅರಿಂದಮ್ ಚೌಧರಿ ತಿಳಿಸಿದ್ದಾರೆ.

    ಯುನೆಸ್ಕೋ ವಿಶ್ವ ಪರಂಪರೆಯ ಶಿಮ್ಲಾ-ಕಲ್ಕಾ ರೈಲು ಮಾರ್ಗವು ಶಿಮ್ಲಾದ ಸಮ್ಮರ್ ಹಿಲ್ ಬಳಿ 50 ಮೀಟರ್ ಸೇತುವೆ, ಭೂಕುಸಿತದಿಂದ ಹಾನಿಗೊಳಗಾಗಿದೆ. ಟ್ರ್ಯಾಕ್‍ನ ಒಂದು ಭಾಗ ನೇತಾಡುತ್ತಿದೆ. ಈ ಭಾಗದಲ್ಲಿ ಸೇನೆ, ಎಸ್‍ಡಿಆರ್‍ಎಫ್, ಎನ್‍ಡಿಆರ್‍ಎಫ್, ಐಟಿಬಿಪಿ ಮತ್ತು ರಾಜ್ಯ ಪೊಲೀಸ್ ಸಿಬ್ಬಂದಿ ಪರಿಹಾರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಅಲ್ಲದೇ ಉತ್ತರಾಖಂಡದಲ್ಲಿ 10 ಮಂದಿ ನಾಪತ್ತೆಯಾಗಿದ್ದಾರೆ. ಭೂಕುಸಿತ ಸಹ ಸಂಭವಿಸಿದ್ದು ಬದರಿನಾಥ್, ಕೇದಾರನಾಥ ಮತ್ತು ಗಂಗೋತ್ರಿ ದೇಗುಲಗಳಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಗಳ ಸಂಪರ್ಕ ಕಡಿತವಾಗಿದೆ. ಇದರ ಬೆನ್ನಲ್ಲೇ ಚಾರ್ಧಾಮ್ ಯಾತ್ರೆಯನ್ನು ಎರಡು ದಿನಗಳ ಕಾಲ ಸ್ಥಗಿತಗೊಳಿಸಲಾಗಿದೆ.

    ಕೇದಾರನಾಥ ಟ್ರೆಕ್ ಮಾರ್ಗದಲ್ಲಿ ಲಿಂಚೋಲಿಯಲ್ಲಿ ಕ್ಯಾಂಪ್‍ಗೆ ಭೂಕುಸಿತ ಸಂಭವಿಸಿದ್ದು, ನಾಲ್ಕು ಅಂಗಡಿಗಳಿಗೆ ಹಾನಿಯಾಗಿದೆ. ಇದರಲ್ಲಿ ನೇಪಾಳದ ಒಬ್ಬ ಪ್ರಜೆ ಸಾವನ್ನಪ್ಪಿದ್ದಾರೆ. ಒಬ್ಬ ವ್ಯಾಪಾರಿ ನಾಪತ್ತೆಯಾಗಿದ್ದಾರೆ. ಋಷಿಕೇಶದ ಶಿವ ದೇವಾಲಯ ಮತ್ತು ಮೀರಾನಗರ ಪ್ರದೇಶಗಳ ಬಳಿ ಹೊಳೆಗಳಿಂದಲೂ ಎರಡು ಮೃತದೇಹಗಳನ್ನು ಮೇಲೆತ್ತಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಋಷಿಕೇಶ-ಕರ್ಣಪ್ರಯಾಗ ರೈಲು ಮಾರ್ಗ ಯೋಜನೆಯ `ಎಡಿಟ್ II’ ಎಂಬ ಹೆಸರಿನ ಸುರಂಗದಲ್ಲಿ ನೀರು ನುಗ್ಗಿ 114 ಕಾರ್ಮಿಕರು ಸಿಲುಕಿಕೊಂಡಿದ್ದರು. ಪೊಲೀಸರು ಸ್ಥಳಕ್ಕೆ ಧಾವಿಸಿ ಸುರಂಗದೊಳಗೆ ಸಂಗ್ರಹವಾದ ನೀರನ್ನು ಹೊರಹಾಕಿದ್ದಾರೆ. ಬಳಿಕ ಎಲ್ಲಾ 114 ಕಾರ್ಮಿಕರನ್ನು ಹಗ್ಗಗಳ ಸಹಾಯದಿಂದ ರಕ್ಷಿಸಲಾಗಿದೆ.

    ತೆಹ್ರಿ, ಹರಿದ್ವಾರ ಮತ್ತು ಋಷಿಕೇಶದಲ್ಲಿ ಗಂಗಾ (Ganga River) ಸೇರಿದಂತೆ ಬಹುತೇಕ ನದಿಗಳು ತುಂಬಿ ಹರಿಯುತ್ತಿವೆ. ಹರಿದ್ವಾರದಲ್ಲಿ ಗಂಗಾ ನದಿಯು 295.60 ಮೀಟರ್, ಅಪಾಯದ ಮಟ್ಟಕ್ಕಿಂತ 1.60 ಮೀಟರ್ ಎತ್ತರದಲ್ಲಿ ಹರಿಯುತ್ತಿರುವುದರಿಂದ ಪರಿಸ್ಥಿತಿ ಆತಂಕಕಾರಿಯಾಗಿದೆ. ಗಂಗಾ ನದಿಯಿಂದ ಹರಿದ್ವಾರದ ಬೈರಾಗಿ ಶಿಬಿರಕ್ಕೂ ನೀರು ನುಗ್ಗಿದೆ. ರುದ್ರಪ್ರಯಾಗ, ಶ್ರೀನಗರ, ದೇವಪ್ರಯಾಗದ ಅಲಕನಂದಾ, ಮಂದಾಕಿನಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ ಎಂದು ಡೆಹ್ರಾಡೂನ್‍ನ ವಿಪತ್ತು ನಿಯಂತ್ರಣಾಲಯ ತಿಳಿಸಿದೆ. ಇದನ್ನೂ ಓದಿ: ತಾಯಿ, ಸಹೋದರಿಯರಿಗೆ ಅವಮಾನ – ದೇಶವೇ ಮಣಿಪುರದೊಂದಿಗೆ ನಿಂತಿದೆ: ಮೋದಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಉತ್ತರಾಖಂಡದಲ್ಲಿ ಎರಡು ದಿನ ರೆಡ್ ಅಲರ್ಟ್ – ಚಾರ್ ಧಾಮ್ ಯಾತ್ರೆ ತಾತ್ಕಾಲಿಕ ಸ್ಥಗಿತ

    ಉತ್ತರಾಖಂಡದಲ್ಲಿ ಎರಡು ದಿನ ರೆಡ್ ಅಲರ್ಟ್ – ಚಾರ್ ಧಾಮ್ ಯಾತ್ರೆ ತಾತ್ಕಾಲಿಕ ಸ್ಥಗಿತ

    ಡೆಹ್ರಾಡೂನ್: ಆಗಸ್ಟ್ 14 ಮತ್ತು 15ರಂದು ಹವಾಮಾನ ಇಲಾಖೆಯು (Meteorological Department) ಉತ್ತರಾಖಂಡದಲ್ಲಿ (Uttarakhand) ರೆಡ್ ಅಲರ್ಟ್ ಘೋಷಿಸಿದ ಹಿನ್ನೆಲೆ ಚಾರ್ ಧಾಮ್ ಯಾತ್ರೆಯನ್ನು (Char Dham Yatra) ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

    ಉತ್ತರಾಖಂಡದಲ್ಲಿ ಎಡೆಬಿಡದೆ ಮಳೆ (Rain) ಸುರಿಯುತ್ತಿರುವ ಪರಿಣಾಮ ಹಲವು ಕಡೆ ಭೂಕುಸಿತ ಉಂಟಾಗಿದ್ದು, ಪ್ರಮುಖ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದೆ. ಇದರಿಂದಾಗಿ ಬದರಿನಾಥ, ಕೇದಾರನಾಥ, ಗಂಗೋತ್ರಿಯಂತಹ ಪವಿತ್ರ ಕ್ಷೇತ್ರಗಳಿಗೆ ಹೋಗುವ ರಾಷ್ಟ್ರೀಯ ಹೆದ್ದಾರಿಗಳಿಗೆ ಅಡಚಣೆ ಉಂಟಾಗಿದೆ. ರುದ್ರಪ್ರಯಾಗ, ದೇವಪ್ರಯಾಗ ಮತ್ತು ಶ್ರೀನಗರದಲ್ಲಿ ಗಂಗಾ, ಮಂದಾಕಿನಿ ಮತ್ತು ಅಲಕಾನಂದ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಭಾರೀ ಮಳೆಯಿಂದ ಭೂಕುಸಿತ ಉಂಟಾಗಿ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಹಲವು ರಸ್ತೆಗಳು ಬಂದ್ ಆಗಿದೆ. ಇದನ್ನೂ ಓದಿ: ಭಾರೀ ಮಳೆಗೆ ಶಿಮ್ಲಾದಲ್ಲಿ ದೇವಾಲಯ ಕುಸಿತ – 9 ಸಾವು, ಹಲವರು ಸಿಲುಕಿರುವ ಶಂಕೆ

    ಡೆಹ್ರಾಡೂನ್ ಮತ್ತು ನೈನಿತಾಲ್ ಸೇರಿದಂತೆ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಸತತವಾಗಿ ಸುರಿಯುತ್ತಿರುವ ಮುಂಗಾರು ಮಳೆಯಿಂದ ಗುಡ್ಡಗಾಡು ರಾಜ್ಯಗಳು ತೀವ್ರವಾಗಿ ನಲುಗಿದ್ದು, 60 ಮಂದಿ ಸಾವನ್ನಪ್ಪಿದ್ದು, 17 ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಗಳು ತಿಳಿಸಿದೆ. ಇದನ್ನೂ ಓದಿ: 10,000 ಪೊಲೀಸರು.. ಆ್ಯಂಟಿ ಡ್ರೋನ್‌ ಸಿಸ್ಟಮ್‌, ಅತ್ಯಾಧುನಿಕ ಕ್ಯಾಮೆರಾ – ಸ್ವಾತಂತ್ರ್ಯೋತ್ಸವಕ್ಕೆ ಕೆಂಪು ಕೋಟೆಯಲ್ಲಿ ಬಿಗಿ ಭದ್ರತೆ

    ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯು ಪಾಶ್ಚಿಮಾತ್ಯ ಪ್ರಕ್ಷ್ಯುಬ್ಧತೆಯ ಪರಿಣಾಮವಾಗಿದೆ. ಮಾನ್ಸೂನ್ ಟ್ರಫ್‌ನ (Mansoon Trough) ಸ್ಥಳವು ಹಿಮಾಲಯದ ತಪ್ಪಲಿನಲ್ಲಿರುವುದರಿಂದ ನೈಋತ್ಯ ಅರೇಬಿಯನ್ ಸಮುದ್ರದ ಮಾನ್ಸೂನ್ ಮಾರುತಗಳು ಹಿಮಾಲಯದ ತಪ್ಪಲನ್ನು ಹೊಡೆಯುತ್ತಿವೆ ಎಂದು ಭಾರತೀಯ ಹವಾಮಾನ ಇಲಾಖೆ ತನ್ನ ವರದಿಯಲ್ಲಿ ತಿಳಿಸಿದೆ. ಇದನ್ನೂ ಓದಿ: ಹಿಮಾಚಲದಲ್ಲಿ ಮೇಘಸ್ಫೋಟಕ್ಕೆ 7 ಬಲಿ – ಕೊಚ್ಚಿ ಹೋದ ಮನೆಗಳು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಉತ್ತರಾಖಂಡದಲ್ಲಿ ಭಾರೀ ಮಳೆ – ಮನೆಯೊಳಗೆ ಸಿಲುಕ್ಕಿದ್ದ 50 ಜನರ ರಕ್ಷಣೆ

    ಉತ್ತರಾಖಂಡದಲ್ಲಿ ಭಾರೀ ಮಳೆ – ಮನೆಯೊಳಗೆ ಸಿಲುಕ್ಕಿದ್ದ 50 ಜನರ ರಕ್ಷಣೆ

    ಡೆಹ್ರಾಡೂನ್: ಉತ್ತರಾಖಂಡದಲ್ಲಿ (Uttarakhand) ಭಾರೀ ಮಳೆಯಾಗುತ್ತಿದ್ದು, ಮಳೆಯ (Rain) ಪರಿಣಾಮ ಋಷಿಕೇಶದ (Rishikesh) ಧಲ್ವಾಲ (Dhalwala) ಮತ್ತು ಖಾರಾ (Khara) ಪ್ರದೇಶಗಳು ಜಲಾವೃತವಾಗಿದೆ.

    ಬುಧವಾರ ರಾತ್ರಿ ಸುರಿದ ತೀವ್ರ ಮಳೆಯ ಪರಿಣಾಮ ಅನೇಕ ಮನೆಗಳು ಮುಳುಗಡೆಯಾಗಿದ್ದು, ಧಲ್ವಾಲ ಮತ್ತು ಖಾರದಲ್ಲಿ ನೀರಿನಲ್ಲಿ ಮುಳುಗಿರುವ ಮನೆಗಳಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ರಾಜ್ಯ ವಿಪತ್ತು ನಿರ್ವಹಣಾ ಪಡೆಯನ್ನು (SDRF) ಕರೆಸಲಾಗಿದೆ. ಇದನ್ನೂ ಓದಿ: ನಾವು ಕಾಶ್ಮೀರಿಗಳೊಂದಿಗೆ ಮಾತನಾಡುತ್ತೇವೆ ಹೊರತು ಪಾಕಿಸ್ತಾನಿಗಳೊಂದಿಗಲ್ಲ: ಅಮಿತ್ ಶಾ

    ಎಸ್‌ಡಿಆರ್‌ಎಫ್ ತಂಡ ರಾತ್ರಿಯೇ ಸ್ಥಳಕ್ಕೆ ಆಗಮಿಸಿ ಮುಳುಗಿದ್ದ ಮನೆಗಳಿಂದ ಸುಮಾರು 50 ಜನರನ್ನು ರಕ್ಷಿಸಿ ತೆಪ್ಪದ ಮೂಲಕ ಸುರಕ್ಷಿತ ಸ್ಥಳಕ್ಕೆ ಕರೆದೊಯ್ದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಋಷಿಕೇಶ ಪ್ರದೇಶದಲ್ಲಿ ನೀರಿನ ಮಟ್ಟ ಏರಿಕೆಯಾಗಿರುವುದರಿಂದ ಜನರ ಮನೆಗಳಿಗೆ ನೀರು ನುಗ್ಗಿದ್ದು, ಮನೆಯೊಳಗೆ ಸಿಲುಕಿದವರ ರಕ್ಷಣೆಗೆ ಎಸ್‌ಡಿಆರ್‌ಎಫ್ ತಂಡದ ಅಗತ್ಯವಿದೆ ಎಂದು ಎಸ್‌ಡಿಆರ್‌ಎಫ್‌ಗೆ ಮನವಿ ಮಾಡಿದ ಹಿನ್ನೆಲೆ ಎಸ್‌ಡಿಆರ್‌ಎಫ್ ತಂಡ ಸ್ಥಳದಲ್ಲಿ ರಕ್ಷಣಾ ಕಾರ್ಯ ಕೈಗೊಂಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬಿಜೆಪಿ ಮಣಿಪುರದಲ್ಲಿ ಭಾರತವನ್ನ, ಭಾರತ ಮಾತೆಯನ್ನ ಹತ್ಯೆ ಮಾಡಿದೆ: ಮೋದಿ ವಿರುದ್ಧ ರಾಹುಲ್‌ ಕಿಡಿ

    ವಿಪತ್ತು ನಿರ್ವಹಣಾ ಕೇಂದ್ರವು ರಾಜ್ಯದ ಮಳೆ ಪರಿಸ್ಥಿತಿಯನ್ನು ಪರಿಶೀಲಿಸಿದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ (Pushkar Singh Dhami) ಬುಧವಾರ ತಿಳಿಸಿದ್ದಾರೆ. ಅಲ್ಲದೇ ಚಾರ್‌ಧಾಮ್ ಯಾತ್ರಾರ್ಥಿಗಳು ಹವಾಮಾನದ ಬಗ್ಗೆ ಮಾಹಿತಿಯನ್ನು ಪಡೆದ ಬಳಿಕ ಪ್ರಯಾಣವನ್ನು ಮುಂದುವರಿಸಲು ಸಲಹೆ ನೀಡಿದರು. ಇದನ್ನೂ ಓದಿ: 4ರ ಬಾಲಕಿ ಮೇಲೆ ಅತ್ಯಾಚಾರ: ಇದು ಮಾನವೀಯತೆ ಮೀರಿದ ಕ್ರೌರ್ಯ, ಕಾಮುಕರಿಗೆ ಕ್ಷಮೆಯಿಲ್ಲವೆಂದ ಸಚಿನ್‌ ಪೈಲಟ್‌

    ಭಾರೀ ಮಳೆಯ ಪರಿಣಾಮ ಕಳೆದ 24 ಗಂಟೆಗಳಲ್ಲಿ ಪ್ರತ್ಯೇಕ ಘಟನೆಗಳಲ್ಲಿ 9 ಮಂದಿ ಸಾವನ್ನಪಿದ್ದು, ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಆಗಮಿಸಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಸಂಸದರಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೇದಾರನಾಥ ಮಾರ್ಗದಲ್ಲಿ ಭಾರಿ ಭೂಕುಸಿತ – ಹಲವರ ಸಮಾಧಿ ಶಂಕೆ

    ಕೇದಾರನಾಥ ಮಾರ್ಗದಲ್ಲಿ ಭಾರಿ ಭೂಕುಸಿತ – ಹಲವರ ಸಮಾಧಿ ಶಂಕೆ

    ಡೆಹ್ರಾಡೂನ್: ಉತ್ತರಾಖಂಡದ (Uttarakhand) ಗೌರಿಕುಂಡ್‌ನ ಕೇದಾರನಾಥ (Kedarnath) ಮಾರ್ಗದಲ್ಲಿ ಭೂಕುಸಿತ ಸಂಭವಿಸಿ ಹಲವು ಜನ ಸಮಾಧಿಯಾಗಿರುವ ಶಂಕೆ ವ್ಯಕ್ತವಾಗಿದೆ. ಭೂಕುಸಿತದಲ್ಲಿ (Landslide) ಸಿಲುಕಿದ್ದವರನ್ನು ರಕ್ಷಿಸಲು ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಗೌರಿಕುಂಡ್ ಪೋಸ್ಟ್ ಸೇತುವೆ ಬಳಿ ಗುರುವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಈ ಅವಘಡ ಸಂಭವಿಸಿದೆ. ದೊಡ್ಡ ಭೂಕುಸಿತದಿಂದಾಗಿ ಅವಶೇಷಗಳಲ್ಲಿ 10-12 ಮಂದಿ ಹೂತುಹೋಗಿದ್ದಾರೆ ಎನ್ನಲಾಗಿದೆ. ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆಯ ತಂಡ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದೆ. ಇದನ್ನೂ ಓದಿ: ಟೈಟ್‌ ಸೆಕ್ಯುರಿಟಿಯೊಂದಿಗೆ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಸಮೀಕ್ಷೆ ಆರಂಭ

    ಭೂಕುಸಿತ ಸಂಭವಿಸಿದ ತಕ್ಷಣ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಸುಮಾರು 10-12 ಜನರು ಅಲ್ಲಿದ್ದರು ಎಂದು ಹೇಳಲಾಗಿದೆ. ಆದರೆ ಇಲ್ಲಿಯವರೆಗೆ ಒಬ್ಬರು ಪತ್ತೆಯಾಗಿಲ್ಲ ಎಂದು ವಿಪತ್ತು ನಿರ್ವಹಣಾ ಅಧಿಕಾರಿ ದಲೀಪ್ ಸಿಂಗ್ ರಾಜ್ವರ್ ತಿಳಿಸಿದ್ದಾರೆ.

    ನಾಪತ್ತೆಯಾದವರನ್ನು ವಿನೋದ್ (26), ಮುಲಾಯಂ (25), ಆಶು (23), ಪ್ರಿಯಾಂಶು ಚಮೋಲಾ (18), ರಣಬೀರ್ ಸಿಂಗ್ (28), ಅಮರ್ ಬೋಹ್ರಾ, ಅನಿತಾ ಬೊಹ್ರಾ, ರಾಧಿಕಾ ಬೋಹ್ರಾ ಮತ್ತು ಪಿಂಕಿ ಬೊಹ್ರಾ, ಪೃಥ್ವಿ ಬೋಹ್ರಾ (7), ಜತಿಲ್ (6) ಮತ್ತು ವಕೀಲ್ (3) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಕವಾಡಿಗರಹಟ್ಟಿ ಕಲುಷಿತ ನೀರು ಪ್ರಕರಣ – ಸಾವಿನ ಸಂಖ್ಯೆ 5ಕ್ಕೆ ಏರಿಕೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಡ್ಯಾಂ ಬಳಿ ವಿದ್ಯುತ್ ಅವಘಡ – 16 ಮಂದಿ ದಾರುಣ ಸಾವು

    ಡ್ಯಾಂ ಬಳಿ ವಿದ್ಯುತ್ ಅವಘಡ – 16 ಮಂದಿ ದಾರುಣ ಸಾವು

    ಡೆಹ್ರಾಡೂನ್: ವಿದ್ಯುತ್ ಅವಘಡದಿಂದ (Electric Shock) ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಮತ್ತು ಐವರು ಗೃಹ ರಕ್ಷಕರು ಸೇರಿದಂತೆ ಕನಿಷ್ಠ 16 ಜನ ಸಾವನ್ನಪ್ಪಿದ ಘಟನೆ ಉತ್ತರಾಖಂಡದ (Uttarakhand) ಚಮೋಲಿಯಲ್ಲಿ (Chamoli)‌ ಬುಧವಾರ ನಡೆದಿದೆ.

    ಅಲ್ಕಾನಂದ ನದಿಯ ದಡದ ನಮಾಮಿ ಗಂಗೆ ಯೋಜನೆಯ ಸ್ಥಳದಲ್ಲಿ ಟ್ರಾನ್ಸ್‌ಫಾರ್ಮರ್ ಸ್ಫೋಟಗೊಂಡಿದ್ದು, ಈ ಅವಘಡಕ್ಕೆ ಕಾರಣವಾಗಿದೆ. ಸ್ಥಳದಲ್ಲಿ ಹಲವಾರು ಜನ ಸಿಲುಕಿದ್ದಾರೆ. ಅವರನ್ನು ರಕ್ಷಿಸುವ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು (Police) ತಿಳಿಸಿದ್ದಾರೆ. ಇದನ್ನೂ ಓದಿ: ಮಸೂದೆಗಳ ಪ್ರತಿ ಹರಿದು ಡೆಪ್ಯುಟಿ ಸ್ಪೀಕರ್‌ನತ್ತ ತೂರಿದ ವಿಪಕ್ಷಗಳು – ಬಿಜೆಪಿಯ 10 ಶಾಸಕರು ಅಮಾನತು

    ನದಿ ಅಣೆಕಟ್ಟಿನ ಮೇಲೆ ವಿದ್ಯುತ್ ತಂತಿ ಹಾದು ಹೋಗಿತ್ತು. ಇದನ್ನು ಸ್ಪರ್ಶಿಸಿ ಬಹುತೇಕರು ಮೃತಪಟ್ಟಿದ್ದಾರೆ. ಯೋಜನೆಯ ಉಸ್ತುವಾರಿ ಗಣೇಶ್ ಲಾಲ್ ಮೊದಲು ಸಾವನ್ನಪ್ಪಿದರು. ಬಳಿಕ ಉಳಿದವರು ಇದನ್ನು ಸ್ಪರ್ಶಿಸಿದ್ದಾರೆ. ಇದು ಟ್ರಾನ್ಸ್‌ಫಾರ್ಮರ್ ಸ್ಫೋಟಕ್ಕೆ ಕಾರಣವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಘಟನೆಯಲ್ಲಿ 7 ಜನ ಗಾಯಗೊಂಡಿದ್ದು, ಅವರನ್ನು ಹೆಲಿಕಾಪ್ಟರ್ ಮೂಲಕ ರಿಷಿಕೇಶದ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಬಗ್ಗೆ ಮ್ಯಾಜಿಸ್ಟ್ರೇಟ್ ತನಿಖೆ ನಡೆಸಲು ಆದೇಶ ನೀಡಲಾಗಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ. ಇದನ್ನೂ ಓದಿ: ತಂದೆಯನ್ನ ಕೊಂದು 15 ದಿನಗಳ ಬಳಿಕ ಪೊಲೀಸರಿಗೆ ಶರಣಾದ ಪಾಪಿ ಮಗ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಾವು ಕಚ್ಚಿಸಿ ಉದ್ಯಮಿಯ ಕೊಲೆ – ಸಹಜ ಸಾವೆಂದು ಬಿಂಬಿಸಿದ ಹಾವಾಡಿಗ ಅರೆಸ್ಟ್

    ಹಾವು ಕಚ್ಚಿಸಿ ಉದ್ಯಮಿಯ ಕೊಲೆ – ಸಹಜ ಸಾವೆಂದು ಬಿಂಬಿಸಿದ ಹಾವಾಡಿಗ ಅರೆಸ್ಟ್

    ಡೆಹ್ರಾಡೂನ್: ಉದ್ಯಮಿಯೊಬ್ಬರನ್ನು (Businessman) ನಾಗರ ಹಾವಿನಿಂದ ಕಚ್ಚಿಸಿ ಕೊಲೆಗೈದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಉತ್ತರಾಖಂಡ (Uttarakhand) ಪೊಲೀಸರು (Police) ಬಂಧಿಸಿದ್ದಾರೆ. ಅಲ್ಲದೇ ಇನ್ನೂ ನಾಲ್ಕು ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

    ಉತ್ತರ ಪ್ರದೇಶದ (Uttar Pradesh) ಹಾವಾಡಿಗ ರಮೇಶ್‍ನಾಥ್ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಡಾಲಿ ಆರ್ಯ ಹಾಗೂ ಆಕೆಯ ಸ್ನೇಹಿತ ದೀಪ್ ಕಂಡ್ಪಾಲ್ ಎಂಬುವವರು ಆರೋಪಿಗಳಾಗಿದ್ದು ಇವರಿಗೆ ಕುಟುಂಬಸ್ಥರು ಸಹಕರಿಸಿದ್ದಾರೆ. ಈಗ ಉಳಿದ ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ರೌಡಿಗಳಾಗಿ ಜೈಲು ಸೇರಿದ್ದವರಿಗೆ ಸಿಕ್ಕಿತು ಉಗ್ರರ ಪಾಠ!

    ಜು.15 ರಂದು ತೀನ್‍ಪಾನಿ ಪ್ರದೇಶದ ಬಳಿ ಅಂಕಿತ್ ಚೌಹಾಣ್ (30) ಎಂಬಾತನ ಶವ ಕಾರಿನೊಳಗೆ ಪತ್ತೆಯಾಗಿತ್ತು. ಆತನ ದೇಹವನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಹಾವಿನ ವಿಷ ಸೇರಿ ಮೃತಪಟ್ಟಿದ್ದು ತಿಳಿದು ಬಂದಿತ್ತು. ಬಳಿಕ ಆತನ ಮೊಬೈಲ್ ಪರಿಶೀಲಿಸಿದಾಗ ಡಾಲಿ ಎಂಬ ಮಹಿಳೆಯೊಂದಿಗೆ ಸಂಪರ್ಕದಲ್ಲಿರುವುದು ಪತ್ತೆಯಾಗಿತ್ತು.

    ಬಳಿಕ ಮಹಿಳೆಯ ಕರೆಯ ವಿವರಗಳನ್ನು ಆಧರಿಸಿ ಆಕೆಯ ಫೋನ್‍ನ್ನು ಟ್ರ್ಯಾಕ್ ಮಾಡಲಾಗಿದೆ. ಈ ವೇಳೆ ಮಹಿಳೆ ಹಾವಾಡಿಗನೊಂದಿಗೆ ಸಂಪರ್ಕಿಸಿರುವುದು ತಿಳಿದು ಬಂದಿದೆ. ಅಲ್ಲದೇ ಆರಂಭದಲ್ಲಿ ಕಾರಿನಲ್ಲಿ ವಿಷಾನಿಲ ಹೊರ ಸೂಸುವಿಕೆಯಿಂದ ಈ ಸಾವು ಸಂಭವಿಸಿದೆ ಎಂದು ಊಹಿಸಲಾಗಿತ್ತು. ಆದರೆ ಮರಣೋತ್ತರ ಪರೀಕ್ಷೆಯ ನಂತರ ತನಿಖೆಯ ದಾರಿ ಬದಲಾಯಿತು ಎಂದು ಹಿರಿಯ ಪೆÇಲೀಸ್ ವರಿಷ್ಠಾಧಿಕಾರಿ (ಎಸ್‍ಎಸ್‍ಪಿ) ನೈನಿತಾಲ್ ಪಂಕಜ್ ಭಟ್ ತಿಳಿಸಿದ್ದಾರೆ.

    ಡಾಲಿಗೆ ಅಂಕಿತ್ ಮದ್ಯಪಾನದ ಅಮಲಿನಲ್ಲಿ ನಿಂದಿಸುತ್ತಿದ್ದ ಇದಕ್ಕಾಗಿ ಕೊಲೆಗೈಯಲಾಗಿದೆ. ಅಲ್ಲದೇ ಆತ ಅಮಲಿನಲ್ಲಿದ್ದಾಗ ಈ ಕೃತ್ಯ ಎಸಗಿದ್ದಾಗಿ ಬಂಧಿತ ಆರೋಪಿ ಹೇಳಿದ್ದಾನೆ. ಉಳಿದ ಆರೋಪಿಗಳ ಮೊಬೈಲ್ ಸ್ವಿಚ್ ಆಫ್ ಆಗಿದ್ದು ಅವರ ಪತ್ತೆಗೆ ಬಲೆ ಬೀಸಲಾಗಿದೆ. ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲಿಸರು ತಿಳಿಸಿದ್ದಾರೆ.

    ಈ ಸಂಬಂಧ ಹಲ್ದ್ವಾನಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 302 (ಕೊಲೆ ಆರೋಪ) ಅಡಿಯಲ್ಲಿ ಐವರು ಆರೋಪಿಗಳ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಇದನ್ನೂ ಓದಿ: ಬೇಟೆಗಾಗಿ ಸಂಗ್ರಹಿಸಿದ್ದ 81 ನಾಡಬಾಂಬ್ ವಶ – ಇಬ್ಬರು ಅರೆಸ್ಟ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಉತ್ತರಾಖಂಡದಲ್ಲಿ ಭಾರೀ ಮಳೆ – ಕೇದಾರನಾಥ ಯಾತ್ರೆ ರದ್ದು

    ಉತ್ತರಾಖಂಡದಲ್ಲಿ ಭಾರೀ ಮಳೆ – ಕೇದಾರನಾಥ ಯಾತ್ರೆ ರದ್ದು

    ಡೆಹ್ರಾಡೂನ್: ಭಾರೀ ಮಳೆ (Rain) ಸುರಿಯುತ್ತಿರುವ ಕಾರಣ ಉತ್ತರಾಖಂಡದ (Uttarakhand) ಸೋನ್‌ಪ್ರಯಾಗ ಮತ್ತು ಗೌರಿಕುಂಡ್‌ನಲ್ಲಿ ಕೇದಾರನಾಥ (Kedarnath) ಯಾತ್ರೆಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಸೋನ್‌ಪ್ರಯಾಗ್ (Sonprayag) ಮತ್ತು ಗೌರಿಕುಂಡ್‌ನಲ್ಲಿ (Gourikund) ಪ್ರತಿಕೂಲ ಹವಾಮಾನ ಇರುವ ಕಾರಣ ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ. ಭಾರೀ ಮಳೆಯ ಪರಿಣಾಮ 4 ರಾಜ್ಯ ರಸ್ತೆ ಮತ್ತು 10 ಸಂಪರ್ಕ ರಸ್ತೆಗಳು ಮುಚ್ಚಿವೆ. ಅಲ್ಲದೇ ಧಾರಾಕಾರ ಮಳೆಯ ಪರಿಣಾಮ ಮಂದಾಕಿನಿ ಮತ್ತು ಅಲಕಾನಂದ ನದಿಗಳು ಉಕ್ಕಿ ಹರಿಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಹಾರಾಟ ನಿಲ್ಲಿಸಿದ ʻತೇಜಸ್‌ʼ- 4 ತಿಂಗಳಲ್ಲಿ 7ನೇ ಚೀತಾ ಸಾವು!

    ಭಾರೀ ಮಳೆ ಸುರಿಯುತ್ತಿರುವ ಕಾರಣ ಭಾರತೀಯ ಹವಾಮಾನ ಇಲಾಖೆ (IMD) ಉತ್ತರಾಖಂಡದಲ್ಲಿ ಜುಲೈ 12ರಂದು ಆರೆಂಜ್ ಅಲರ್ಟ್ ಘೋಷಿಸಿದೆ. ಅಲ್ಲದೇ ಈ ಕುರಿತು ಟ್ವಿಟ್ಟರ್‌ನಲ್ಲಿ ಟ್ವೀಟ್ ಕೂಡಾ ಮಾಡಿದೆ. ಮಂಗಳವಾರ ಉತ್ತರಾಖಂಡದ ಗಂಗ್ನಾನಿ ಬಳಿಯ ಗಂಗೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅವಶೇಷಗಳು ಬಿದ್ದು ನಾಲ್ವರು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಭಾರತ ಇಡೀ ಜಗತ್ತಿಗೆ ಶಾಂತಿಯ ಸಂದೇಶ ಸಾರಬಲ್ಲದು – ವಿಶ್ವ ಮುಸ್ಲಿಂ ಲೀಗ್‌ ಮುಖ್ಯಸ್ಥ

    ರಾಜ್ಯದಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮದ ಕುರಿತು ಮಾತನಾಡಿದ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ ಧಾಮಿ, ಪ್ರತಿವರ್ಷ ಇಲ್ಲಿ ಮಳೆಗಾಲದಲ್ಲಿ ಉಂಟಾಗುವ ಪ್ರಕೃತಿ ವಿಕೋಪಗಳನ್ನು ಎದುರಿಸಬೇಕಾಗುತ್ತದೆ. ಅತಿಯಾದ ಮಳೆಯಿಂದ ಭೂಕುಸಿತಗಳು ಉಂಟಾಗುತ್ತವೆ. ಅಲ್ಲದೇ ನದಿಗಳಲ್ಲಿ ನೀರಿನ ಮಟ್ಟವು ಹೆಚ್ಚಾಗುತ್ತದೆ. ನಾವು ಸಂಪೂರ್ಣ ಅಲರ್ಟ್ ಮೋಡ್‌ನಲ್ಲಿದ್ದು, ಎಲ್ಲಾ ಜಿಲ್ಲಾಡಳಿತ ಅಧಿಕಾರಿಗಳು ಮತ್ತು ವಿಪತ್ತು ನಿರ್ವಹಣಾ ಅಧಿಕಾರಿಗಳು ತಮ್ಮ ಕೆಲಸವನ್ನು ಮಾಡುತ್ತಿದ್ದಾರೆ. ಯಾವುದೇ ಪರಿಸ್ಥಿತಿ ಬಂದರೂ ಎದುರಿಸಲು ಅವರಿಗೆ ಅಲರ್ಟ್ ಮೋಡ್‌ನಲ್ಲಿರಲು ತಿಳಿಸಲಾಗಿದೆ ಎಂದರು. ಇದನ್ನೂ ಓದಿ: ಭಾರೀ ಮಳೆಗೆ ಹಿಮಾಚಲದಲ್ಲಿ 20 ಮಂದಿ ಬಲಿ – 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

    ಅಲ್ಲದೇ ನಮ್ಮ ಇತರ ಸಂಸ್ಥೆಗಳು ಸಹ ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ. ಎನ್‌ಡಿಆರ್‌ಎಫ್, ಸೇನೆ ಮತ್ತು ನಮ್ಮ ಪಿಡಬ್ಲ್ಯೂಡಿ ಇಲಾಖೆಯು ಯಾವುದೇ ಪರಿಸ್ಥಿತಿ ಬಂದರೂ ಅದನ್ನು ಎದುರಿಸಲು ಸಿದ್ಧವಾಗಿದೆ. ಯಾವುದೇ ಪರಿಸ್ಥಿತಿಯಲ್ಲಾದರೂ ಜನರಿಗೆ ಸಹಾಯ ಮಾಡುವ ಸಲುವಾಗಿ ನಿರಂತರ ಜನರ ಸಂಪರ್ಕದಲ್ಲಿರುತ್ತೇವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: Rain Alert: ಭಾರೀ ಮಳೆಗೆ ದೆಹಲಿ ತತ್ತರ – ನರ್ಸರಿಯಿಂದ 5ನೇ ತರಗತಿವರೆಗಿನ ಶಾಲೆಗಳಿಗೆ ರಜೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಮರನಾಥ ಯಾತ್ರೆ ಪುನರಾರಂಭ – ಯಾತ್ರಾರ್ಥಿಗಳಿಗೆ ಹೆಲಿಕಾಪ್ಟರ್ ಸೌಲಭ್ಯವೂ ಲಭ್ಯ

    ಅಮರನಾಥ ಯಾತ್ರೆ ಪುನರಾರಂಭ – ಯಾತ್ರಾರ್ಥಿಗಳಿಗೆ ಹೆಲಿಕಾಪ್ಟರ್ ಸೌಲಭ್ಯವೂ ಲಭ್ಯ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಮಳೆಯ (Rain) ಪ್ರಮಾಣ ತಗ್ಗಿ, ಹವಾಮಾನ ಪರಿಸ್ಥಿತಿ ಸುಧಾರಿಸಿದ್ದು ಈ ಹಿನ್ನೆಲೆ ಬಾಲ್ಟಾಲ್ ಬೇಸ್‌ನಿಂದ ಮತ್ತೆ ಅಮರನಾಥ ಯಾತ್ರೆ (Amarnath Yatra) ಪುನರಾರಂಭಗೊಳಿಸಲಾಗಿದೆ. ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಹೆಲಿಕಾಪ್ಟರ್ ಸೇವೆಯನ್ನು ಆರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಭಾನುವಾರ ಮಧ್ಯಾಹ್ನದಿಂದ ಪಹಲ್ಗಾಮ್ ಬೇಸ್‌ನಿಂದ ಯಾತ್ರೆಯನ್ನು ಪುನರಾರಂಭ ಮಾಡಲಾಗಿತ್ತು. ಹವಾಮಾನ ಪರಿಸ್ಥಿತಿ ಸೂಕ್ತವಾಗಿದ್ದ ಹಿನ್ನೆಲೆ 6491 ಮಂದಿ ಯಾತ್ರಾರ್ಥಿಗಳು ಪವಿತ್ರ ಗುಹೆಯ ದರ್ಶನ ಪಡೆದರು. ಈಗ ಬಾಲ್ಟಾಲ್ ಭಾಗದಲ್ಲೂ ಪರಿಸ್ಥಿತಿ ಸುಧಾರಿಸಿದ ಹಿನ್ನೆಲೆ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

    116 ಸಾಧುಗಳು, 6 ಸಾಧ್ವಿಗಳು ಸೇರಿ ಈವರೆಗೂ 93,929 ಯಾತ್ರಾರ್ಥಿಗಳು ಪವಿತ್ರ ಗುಹೆಯ ದರ್ಶನ ಪಡೆದಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹಿರಿಯ ಅಧಿಕಾರಿಗಳು ಮತ್ತು ಅಮರನಾಥ ಯಾತ್ರಾ ಆಡಳಿತ ಮಂಡಳಿಯ ಜೊತೆಗೆ ಸಭೆ ನಡೆಸಿದ್ದು, ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಮತ್ತು ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸುವ ಬಗ್ಗೆ ಚರ್ಚಿಸಿದ್ದಾರೆ. ಇದನ್ನೂ ಓದಿ: ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಜುಲೈ 16ರವರೆಗೆ ಭಾರೀ ಮಳೆ ಸಾಧ್ಯತೆ

    ಅಮರನಾಥ ಯಾತ್ರೆ ರದ್ದು ಹಿನ್ನೆಲೆ ಗೃಹ ಸಚಿವ ಅಮಿತ್ ಶಾ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಜೊತೆಗೆ ಮಾತುಕತೆ ನಡೆಸಿದ್ದರು. ಈ ವೇಳೆ ಯಾತ್ರಾರ್ಥಿಗಳು ಸುರಕ್ಷತೆ, ಮೂಲ ಸೌಕರ್ಯಗಳ ಪೂರೈಕೆ ಮತ್ತು ಊಟ ವಸತಿ ನೀಡಿರುವ ಬಗ್ಗೆ ಸಿನ್ಹಾ ಮಾಹಿತಿ ನೀಡಿದರು. ಜುಲೈ 1 ರಿಂದ ಆರಂಭವಾಗಿರುವ ಅಮರನಾಥ ಯಾತ್ರೆ ಅಗಸ್ಟ್ 31 ರವರೆಗೂ ನಡೆಯಲಿದೆ. ಇದನ್ನೂ ಓದಿ: ಉತ್ತರ ಭಾರತದಲ್ಲಿ ಮಳೆಯಿಂದ ಜಲಪ್ರಳಯ – ಈವರೆಗೆ 19 ಬಲಿ, ಇಂದೂ ಭಾರೀ ಮಳೆ ಸಾಧ್ಯತೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಉತ್ತರಾಖಂಡದಲ್ಲಿ ಮೇಘಸ್ಫೋಟ – ಸಂಕಷ್ಟದಲ್ಲಿ ರಾಜ್ಯದ 83 ಅಮರನಾಥ ಯಾತ್ರಿಕರು

    ಉತ್ತರಾಖಂಡದಲ್ಲಿ ಮೇಘಸ್ಫೋಟ – ಸಂಕಷ್ಟದಲ್ಲಿ ರಾಜ್ಯದ 83 ಅಮರನಾಥ ಯಾತ್ರಿಕರು

    ಬೆಂಗಳೂರು/ ನವದೆಹಲಿ: ಉತ್ತರಾಖಂಡ್‍ನಲ್ಲಿ (Uttarakhand Rain) ಭಾರೀ ಮಳೆಯಾಗುತ್ತಿದ್ದು ಹವಾಮಾನ ವೈಪರಿತ್ಯದಿಂದಾಗಿ ಅಮರನಾಥ ಯಾತ್ರಿಕರು (Amarnath Yatra Pilgrims) ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರಲ್ಲಿ ಗದಗ್‍ನ 23 ಮಂದಿ ಸೇರಿದಂತೆ 83 ಕನ್ನಡಿಗರು ಪರದಾಡುತ್ತಿದ್ದಾರೆ.

    ಗದಗ್‍ನ 23 ಯಾತ್ರಿಕರು ಅಮರನಾಥನ ದರ್ಶನ ಪಡೆದು ವಾಪಸ್ ಬರುವಾಗ ಮಾರ್ಗ ಮಧ್ಯೆ ಗುಡ್ಡ ಕುಸಿದಿದೆ. ಅಮರನಾಥ ಮಂದಿರದಿಂದ 6 ಕಿ.ಮೀ. ದೂರದ ಪಂಚತಾರ್ನಿ ಟೆಂಟ್‍ನಲ್ಲಿ ಸಿಲುಕಿದ್ದಾರೆ.

    ಈ ಬಗ್ಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಪ್ರತಿಕ್ರಿಯಿಸಿದ್ದು, ಉತ್ತರಾಖಂಡ್ ಪ್ರಾದೇಶಿಕ ಆಯುಕ್ತರು, ಡಿಸಿಗಳು, ಪೊಲೀಸರ ಜೊತೆ ಮಾತನಾಡಿದ್ದೇನೆ. ಕರ್ನಾಟಕದ ಯಾತ್ರಿಕರು ಸುರಕ್ಷಿತವಾಗಿದ್ದಾರೆ. ನೆರವಿಗೆ ಐಎಎಸ್ ಅಧಿಕಾರಿ ರಶ್ಮಿ ನಿಯೋಜಿಸಿದ್ದೇನೆ ಎಂದು ಹೇಳಿದ್ದಾರೆ.

    ಸರ್ಕಾರ ಈಗಾಗಲೇ 1070 ಸಹಾಯವಾಣಿ ಆರಂಭಿಸಿದೆ. ವಿಪತ್ತು ನಿರ್ವಹಣಾ ಇಲಾಖೆ ಕಮಿಷನರ್ ಸತೀಶ್ ಕೂಡ ಅಲ್ಲಿನ ಕನ್ನಡಿಗರಿಗೆ ಕರೆ ಧೈರ್ಯ ತುಂಬಿದ್ದಾರೆ. ಉಳಿದವರು ಯಾವ್ಯಾವ ಜಿಲ್ಲೆಯವರು ಎಂಬುದನ್ನು ಪತ್ತೆ ಮಾಡಲಾಗುತ್ತಿದೆ.  ಇದನ್ನೂ ಓದಿ: ಕೊಲೆಗಡುಕರಿಗೆ ಶಿಕ್ಷೆ; ಸರ್ಕಾರ ಲಿಖಿತ ಭರವಸೆ ಕೊಡೋವರೆಗೆ ಅನ್ನಾಹಾರ ತ್ಯಾಗ – ಜೈನಮುನಿ ಗುಣಧರ ನಂದಿ ಮಹಾರಾಜ

    ಸದ್ಯಕ್ಕೆ ಎಲ್ಲರೂ ಮಿಲಿಟರಿ ಕ್ಯಾಂಪ್‍ನಲ್ಲಿ ಸೇಫ್ ಆಗಿದ್ದಾರೆ. ಪ್ರತಿಕೂಲ ಹವಾಮಾನ ಹಿನ್ನೆಲೆಯಲ್ಲಿ ಬಾಲ್ತಾಲ್, ಪಹಲ್ಗಾಮ್ ಅವಳಿ ಮಾರ್ಗಗಳಲ್ಲಿ ಅಮರನಾಥ ಯಾತ್ರೆ ರದ್ದು ಮಾಡಲಾಗಿದೆ.

     

    ಉತ್ತರಾಖಂಡ್‍ನ ಪಿಥೋರ್‍ಗಡ್‍ನಲ್ಲಿ ಮೇಘಸ್ಫೋಟ ಸಂಭವಿಸಿ ಸಿಲುಕಿದ್ದ 300ಕ್ಕೂ ಹೆಚ್ಚು ಯಾತ್ರಿಕರನ್ನು ರಕ್ಷಿಸಲಾಗಿದೆ. ಎನ್‍ಡಿಆರ್‍ಎಫ್ ಮತ್ತು ಎಸ್‍ಡಿಆರ್‌ಎಫ್ ತಂಡಗಳಿಂದ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆತಂಡ ಭಾಗಿಯಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಉತ್ತರಾಖಂಡದಲ್ಲಿ 250 ರೂ. ತಲುಪಿದ ಟೊಮೆಟೋ ದರ- ಗ್ರಾಹಕರು ಕಂಗಾಲು

    ಉತ್ತರಾಖಂಡದಲ್ಲಿ 250 ರೂ. ತಲುಪಿದ ಟೊಮೆಟೋ ದರ- ಗ್ರಾಹಕರು ಕಂಗಾಲು

    ಡೆಹ್ರಾಡೂನ್: ದೇಶದಲ್ಲಿ ಟೊಮೆಟೋ (Tomato)  ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಅದೇ ರೀತಿ ಉತ್ತರಾಖಂಡದಲ್ಲಿ (Uttarakhand) ಟೊಮೆಟೋ ಕೆಜಿಗೆ 200-250 ರೂ. ಆಗಿದ್ದು, ಬೆಲೆ ಏರಿಕೆಯಿಂದ ಗ್ರಾಹಕರು ಹೈರಾಣಾಗಿದ್ದಾರೆ.

    ಉತ್ತರಕಾಶಿಯಲ್ಲಿ ಟೊಮೆಟೋ ಅತ್ಯಂತ ದುಬಾರಿಯಾಗಿದ್ದು, ಗಂಗೋತ್ರಿ (Gangotri) ಮತ್ತು ಯಮುನೋತ್ರಿಯಲ್ಲಿ (Yamunotri) ಕೆಜಿಗೆ 200-250 ರೂ. ಇದೆ. ಇದರಿಂದ ಗ್ರಾಹಕರು (Customers) ಸಂಕಷ್ಟಕ್ಕೆ ಸಿಲುಕಿದ್ದು, ಟೊಮೆಟೋ ಖರೀದಿಸಲು ಮುಂದಾಗುತ್ತಿಲ್ಲ ಎಂದು ತರಕಾರಿ ಮಾರಾಟಗಾರ ರಾಕೇಶ್ ತಿಳಿಸಿದ್ದಾರೆ. ಇದನ್ನೂ ಓದಿ: ಧಾರಾಕಾರ ಮಳೆಗೆ ಉಡುಪಿಯಲ್ಲಿ ಮತ್ತೊಂದು ಬಲಿ

    ಕಳೆದ ವರ್ಷ ಸುರಿದ ಭಾರೀ ಮಳೆಯ ಪರಿಣಾಮ ಹಲವೆಡೆ ಟೊಮೆಟೋ ಬೆಳೆಗಳು ನಾಶವಾಗಿದ್ದವು. ಇದರಿಂದ ಪೂರೈಕೆ ಸರಪಳಿಯಲ್ಲಿ ಅಡಚಣೆಗಳು ಉಂಟಾಗಿದ್ದು, ತರಕಾರಿಗಳ ದರ ತೀವ್ರ ಏರಿಕೆಯಾಗಿದೆ ಎಂದು ಹಲವರು ಹೇಳುತ್ತಾರೆ. ಅಲ್ಲದೇ ಟೊಮೆಟೋ ಅಲ್ಪಾವಧಿಯ ತರಕಾರಿಯಾದ್ದರಿಂದ ಪ್ರತಿ ವರ್ಷ ಈ ಸಮಯದಲ್ಲಿ ಬೆಲೆ ಏರಿಕೆಯಾಗುತ್ತದೆ. ಇದನ್ನೂ ಓದಿ: ರಾಯಚೂರಿನಲ್ಲಿ ಮಳೆಯಿಲ್ಲದೆ ಒಣಗುತ್ತಿರೋ ಬೆಳೆ- ಜಾನುವಾರು ಬಿಟ್ಟು ಬೆಳೆ ತಿನ್ನಿಸಿದ ರೈತರು

    ಚೆನ್ನೈನಲ್ಲಿ (Chennai) ಟೊಮೆಟೋ ಬೆಲೆ ಕೆಜಿಗೆ 110-130 ರೂ. ಇದೆ. ಬೆಲೆ ಏರಿಕೆಯ ನಡುವೆ ತಮಿಳುನಾಡು (Tamil Nadu) ಸರ್ಕಾರ ಗ್ರಾಹಕರಿಗೆ ಸಹಾಯ ಮಾಡುವ ಸಲುವಾಗಿ ಚೆನ್ನೈನ ಪಡಿತರ ಅಂಗಡಿಗಳಲ್ಲಿ ಪ್ರತಿ ಕೆಜಿಗೆ 60 ರೂ. ಸಬ್ಸಿಡಿ ದರದಲ್ಲಿ ಟೊಮೆಟೋ ಮಾರಾಟ ಮಾಡಲು ಪ್ರಾರಂಭಿಸಿದೆ. ಇದನ್ನೂ ಓದಿ: ಉತ್ತರಕನ್ನಡದಲ್ಲಿ ಮಳೆಯಬ್ಬರಕ್ಕೆ ನಡೆದುಕೊಂಡು ಹೋಗ್ತಿದ್ದ ಇಬ್ಬರು ನೀರುಪಾಲು

    ಕರ್ನಾಟಕದಲ್ಲೂ (Karnataka) ಟೊಮೆಟೋ ಬೆಲೆ ಏರಿಕೆಯಾಗಿದ್ದು, ಬೆಂಗಳೂರಿನಲ್ಲಿ (Bengaluru) ಪ್ರಸ್ತುತ ಟೊಮೆಟೋ ದರ ಕೆಜಿಗೆ 101-121 ರೂ.ಗೆ ಮಾರಾಟವಾಗುತ್ತಿದೆ. ಮಾರ್ಚ್ ಮತ್ತು ಏಪ್ರಿಲ್ ತಿಂಗಳಿನಲ್ಲಿ ತಾಪಮಾನ ಏರಿಕೆಯಾಗುವುದರಿಂದ ತರಕಾರಿಗಳ ದರ ಹೆಚ್ಚಾಗುತ್ತದೆ. ಅಲ್ಲದೇ ಟೊಮೆಟೋ ಬೆಳೆಗಳನ್ನು ಕ್ರಿಮಿ ಕೀಟಗಳು ನಾಶಪಡಿಸಿದರೆ ಸಾಮಾನ್ಯವಾಗಿ ಬೆಲೆ ಏರಿಕೆಯಾಗುತ್ತದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಟೊಮೆಟೊ ಆಯ್ತು.. ಈಗ ಶುಂಠಿ, ಹಸಿರು ಮೆಣಸಿನಕಾಯಿ ಬೆಲೆಯಲ್ಲೂ ಏರಿಕೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]