Tag: Uttarakhand

  • 38 ವರ್ಷಗಳ ನಂತರ ಪತ್ತೆಯಾಯ್ತು ಆಪರೇಷನ್ ಮೇಘದೂತ್‍ನಲ್ಲಿ ಭಾಗಿಯಾಗಿದ್ದ ಯೋಧನ ಅವಶೇಷ

    38 ವರ್ಷಗಳ ನಂತರ ಪತ್ತೆಯಾಯ್ತು ಆಪರೇಷನ್ ಮೇಘದೂತ್‍ನಲ್ಲಿ ಭಾಗಿಯಾಗಿದ್ದ ಯೋಧನ ಅವಶೇಷ

    ಡೆಹ್ರಾಡೂನ್: ದೇಶಕ್ಕೆ ಸ್ವಾತಂತ್ರ್ಯ ದೊರಕಿ ಅಮೃತ ಮಹೋತ್ಸವದ ಸಂದರ್ಭದಲ್ಲಿದ್ದಾಗಲೇ, 38 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಯೋಧರೊಬ್ಬರ ಅವಶೇಷ ಸಿಯಾಚಿನ್‍ನ 16,000 ಅಡಿ ಆಳದಲ್ಲಿ ಪತ್ತೆ ಆಗಿದೆ.

    ಆ ಮೃತದೇಹವನ್ನು ಲ್ಯಾನ್ಸ್ ನಾಯ್ಕ್ ಚಂದ್ರಶೇಖರ್ ಎಂದು ಗುರುತಿಸಲಾಗಿದೆ. ಅವರು ಉತ್ತರಾಖಂಡದ ಹಲ್ದ್ವಾನಿಯಲ್ಲಿನ ನಿವಾಸಿಯಾಗಿದ್ದರು. ಚಂದ್ರಶೇಖರ್‌ಗಾಗಿ ಅವರ ಪತ್ನಿ(65) ಹಾಗೂ ಇಬ್ಬರು ಹೆಣ್ಣುಮಕ್ಕಳು ಸುದೀರ್ಘ 38 ವರ್ಷಗಳಿಂದ ಕಾಯುತ್ತಿದ್ದರು. ಈ ಕಾಯುವಿಕೆ ಇದೀಗ ಅಂತ್ಯಗೊಂಡಿದ್ದು, ಕುಟುಂಬವು ಇಂದು ಚಂದ್ರಶೇಖರ್‌ಗೆ ವಿದಾಯವನ್ನು ಹೇಳುವ ಸಂದರ್ಭ ಎದುರಾಗಿದೆ.

    ಸಿಯಾಚಿನ್‍ನಲ್ಲಿ 1984ರ ಆಪರೇಷನ್ ಮೇಘದೂತ್‍ದಲ್ಲಿ ಲ್ಯಾನ್ಸ್ ನಾಯ್ಕ್ ಚಂದ್ರಶೇಖರ್ ಭಾಗಿಯಾಗಿದ್ದರು. ಪಾಕಿಸ್ತಾನ ಕಣ್ಣಿಟ್ಟಿದ್ದ ಪಾಯಿಂಟ್ 5,965 ವಶದಲ್ಲಿರಿಕೊಳ್ಳುವ ಕಾರ್ಯಾಚರಣೆಯಲ್ಲಿದ್ದ ತಂಡದಲ್ಲಿ ಚಂದ್ರಶೇಖರ್ ಇದ್ದರು. ಅವರಿದ್ದ 19 ಕುಮಾವೊನ್ ರೆಜಿಮೆಂಟ್ 1984 ಮೇ 29ರಂದು ಸಿಯಾಚಿನ್ ಗ್ಲೇಸಿಯರ್‌ನಲ್ಲಿ ನಡೆದ ಆಪರೇಷನ್ ಮೇಘದೂತ್‍ನಲ್ಲಿ ಪಾಲ್ಗೊಂಡಿತ್ತು. ಆದರೆ ಅಂದು ನಡೆದ ಭೀಕರ ಹಿಮಪಾತದಲ್ಲಿ ಒಬ್ಬ ಅಧಿಕಾರಿ ಸೇರಿದಂತೆ 19 ಮಂದಿ ಯೋಧರು ಸಿಲುಕಿದ್ದರು. 14 ಯೋಧರು ಪತ್ತೆ ಆಗಿದ್ದರು. ಇನ್ನುಳಿದ 5 ಮಂದಿ ನಾಪತ್ತೆ ಆಗಿದ್ದರು. ನಾಪತ್ತೆ ಆದವರಲ್ಲಿ ಚಂದ್ರಶೇಖರ್ ಕೂಡ ಇದ್ದರು.

    ನಾಪತ್ತೆ ಆದವರನ್ನು ಎಷ್ಟೇ ಹುಡುಕಿದರೂ ಅವರು ಸಿಕ್ಕಿರಲಿಲ್ಲ. ಇದೀಗ ಆ. 13ರಂದು ಸೈನಿಕರಿಗೆ ಲ್ಯಾನ್ಸ್ ನಾಯ್ಕ್ ಚಂದ್ರಶೇಖರ್ ಅವರ ಅಸ್ಥಿಪಂಜರದ ಅವಶೇಷಗಳು ಹಳೆಯ ಬಂಕರ್‌ನಲ್ಲಿ ಪತ್ತೆ ಆಗಿದೆ. ಆ ಅಸ್ಥಿಪಂಜರದಲ್ಲಿ ಸೈನ್ಯದ ಸಂಖ್ಯೆಯೊಂದಿಗೆ ಡಿಸ್ಕ್ ಇರುವುದು ಕಂಡುಬಂದಿರುವುದರಿಂದ ಚಂದ್ರಶೇಖರ್ ಅವರೇ ಎನ್ನುವುದು ದೃಢವಾಗಿದೆ. ಇದನ್ನೂ ಓದಿ: ಕೊನೆ ಉಸಿರಿರೋವರೆಗೂ ಮಂಡ್ಯದ ಸೊಸೆಯಾಗಿರುವೆ: ಸುಮಲತಾ ಅಂಬರೀಶ್

    ಆಪರೇಷನ್ ಮೇಘದೂತ್‍ದಲ್ಲಿ ಘಟನೆ ನಡೆದಾಗ ಚಂದ್ರಶೇಖರ್‍ನ ಇಬ್ಬರು ಮಕ್ಕಳು ಚಿಕ್ಕವರಾಗಿದ್ದರು. ದುರಂತ ನಡೆದಾಗ ಕಿರಿಯ ಮಗಳಿಗೆ 4 ವರ್ಷ ಹಾಗೂ ಹಿರಿಯವಳಿಗೆ 8 ವರ್ಷ ವಯಸ್ಸಾಗಿತ್ತು. ಇದನ್ನೂ ಓದಿ: ಮಹಾರಾಷ್ಟ್ರ ಸಿಎಂ ಶಿಂದೆ ಸಂಪುಟದಲ್ಲಿ ದೇವೇಂದ್ರ ಫಡ್ನವಿಸ್‌ಗೆ ಗೃಹ, ಹಣಕಾಸು ಖಾತೆ

    Live Tv
    [brid partner=56869869 player=32851 video=960834 autoplay=true]

  • ಜಿಮ್ ಕಾರ್ಬೆಟ್ ಉದ್ಯಾನವನದಲ್ಲಿ ಮೋದಿ ಸರ್ಕ್ಯೂಟ್ ನಿರ್ಮಾಣ

    ಜಿಮ್ ಕಾರ್ಬೆಟ್ ಉದ್ಯಾನವನದಲ್ಲಿ ಮೋದಿ ಸರ್ಕ್ಯೂಟ್ ನಿರ್ಮಾಣ

    ಡೆಹ್ರಾಡೂನ್: ಜಿಮ್ ಕಾರ್ಬೆಟ್ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶೂಟಿಂಗ್‌ನಲ್ಲಿ ಭಾಗಿಯಾಗಿದ್ದ ಸ್ಥಳಗಳಲ್ಲಿ ಮೋದಿ ಸರ್ಕ್ಯೂಟ್ ಅನ್ನು ಅಭಿವೃದ್ಧಿ ಪಡಿಸುವತ್ತ ಉತ್ತರಾಖಂಡದ ಪ್ರವಾಸೋದ್ಯಮ ಇಲಾಖೆಯು ಕಾರ್ಯನಿರ್ವಹಿಸುತ್ತಿದೆ.

    2019ರಲ್ಲಿ ನಡೆದಿದ್ದ ಬೇರ್ ಗ್ರಿಲ್ಸ್ ಅವರೊಂದಿಗೆ ಮ್ಯಾನ್ ವರ್ಸಸ್ ವೈಲ್ಡ್ ಎಂಬ ರಿಯಾಲಿಟಿ ಶೋನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗಿಯಾಗಿದ್ದರು. ಆ ಕಾರ್ಯಕ್ರಮವು ಜಿಮ್ ಕಾರ್ಬೆಟ್ ಪಾರ್ಕ್‌ನಲ್ಲೇ ಶೂಟಿಂಗ್ ನಡೆದಿತ್ತು.

    ಈ ಹಿನ್ನೆಲೆಯಲ್ಲಿ ಉದ್ಯಾನವನದ ಒಳಗೆ ಶೂಟಿಂಗ್ ನಡೆದ ಸಮಯದಲ್ಲಿ ಪ್ರಧಾನಿ ಮೋದಿ ಭೇಟಿ ನೀಡಿದ್ದ ಸ್ಥಳಗಳಲ್ಲಿ ಪ್ರವಾಸಿಗರು ತಂಗಲು ಮತ್ತು ಭೇಟಿ ನೀಡಲು ಅಧಿಕಾರಿಗಳು ಸ್ಥಳವನ್ನು ಗುರುತಿಸಲು ಪ್ರಾರಂಭಿಸಿದ್ದಾರೆ.

    ಉತ್ತರಾಖಂಡದ ಪ್ರವಾಸೋದ್ಯಮ ಸಚಿವ ಸತ್ಪಾಲ್ ಮಹಾರಾಜ್ ಈ ಬಗ್ಗೆ ಮಾಹಿತಿ ನೀಡಿದ್ದು, ವಿದೇಶಿಗರೊಬ್ಬರು ಈ ಸ್ಥಳಕ್ಕೆ ಭೇಟಿ ನೀಡಿದಾಗ ಗೇಮ್ ಆಫ್ ಥ್ರೋನ್ಸ್ ಪ್ರವಾಸದ ಬಗ್ಗೆ ಕೇಳಿದಾಗ ಮೋದಿ ಸರ್ಕ್ಯೂಟ್‌ನ ಕಲ್ಪನೆಯು ಹೊರಹೊಮ್ಮಿತು ಎಂದು ಹೇಳಿದರು. ಇದನ್ನೂ ಓದಿ: ಎಲ್ಲವೂ ಸರಿಯಾಗಿ‌ ನಡೆದ್ರೆ 9 ತಿಂಗಳಲ್ಲಿ ಮಕ್ಕಳಾಗುತ್ತೆ, ನರಗಳ ದೌರ್ಬಲ್ಯ ಇದ್ರೆ ವಿಳಂಬವಾಗುತ್ತೆ: ರಮೇಶ್‌ ಕುಮಾರ್‌

    ಮ್ಯಾನ್ ವರ್ಸಸ್ ವೈಲ್ಡ್ ಸಂಚಿಕೆಯ ಚಿತ್ರೀಕರಣದ ವೇಳೆ ಪ್ರಧಾನಿ ಮೋದಿ ಅವರು ಕೆಲವು ಸಾಹಸ ಚಟುವಟಿಕೆಗಳನ್ನು ಕೈಗೊಂಡಿದ್ದರು. ಚಿತ್ರೀಕರಣದ ವೇಳೆ, ಮೋದಿ ಮತ್ತು ಗ್ರಿಲ್ಸ್ ಅವರು ತಾತ್ಕಾಲಿಕ ತೆಪ್ಪದಲ್ಲಿ ಕೋಸಿ ನದಿಯನ್ನು ದಾಟಿದ್ದರು. ಇದನ್ನೂ ಓದಿ: ಪ್ರವೀಣ್‌ನನ್ನು ಕೊಲೆ ಮಾಡಿದವರು ಕೇರಳದವರಲ್ಲ, ಸ್ಥಳೀಯರು: ಆರಗ ಜ್ಞಾನೇಂದ್ರ

    Live Tv
    [brid partner=56869869 player=32851 video=960834 autoplay=true]

  • ಎಲ್ಲಾ ಜಿಲ್ಲೆಗಳಲ್ಲಿ ಸಂಸ್ಕೃತ ಗ್ರಾಮ ಅಭಿವೃದ್ಧಿಪಡಿಸಲು ಮುಂದಾದ ಉತ್ತರಾಖಂಡ

    ಎಲ್ಲಾ ಜಿಲ್ಲೆಗಳಲ್ಲಿ ಸಂಸ್ಕೃತ ಗ್ರಾಮ ಅಭಿವೃದ್ಧಿಪಡಿಸಲು ಮುಂದಾದ ಉತ್ತರಾಖಂಡ

    ಡೆಹ್ರಾಡೂನ್‌: ಉತ್ತರಾಖಂಡ ಸರ್ಕಾರವು ರಾಜ್ಯದ 13 ಜಿಲ್ಲೆಗಳಲ್ಲಿ ತಲಾ ಒಂದು ಸಂಸ್ಕೃತ ಮಾತನಾಡುವ ಗ್ರಾಮವನ್ನು ಅಭಿವೃದ್ಧಿಪಡಿಸಲು ನಿರ್ಧರಿಸಿದೆ.

    ಈ ಮೂಲಕ ಸಂಸ್ಕೃತವನ್ನು ಉತ್ತೇಜಿಸಲು ಈ ಪ್ರಮಾಣದಲ್ಲಿ ಉಪಕ್ರಮವನ್ನು ಪ್ರಾರಂಭಿಸಿದ ದೇಶದ ಮೊದಲ ರಾಜ್ಯ ಉತ್ತರಾಖಂಡವಾಗಿದೆ. ಸಂಸ್ಕೃತವು ಉತ್ತರಾಖಂಡದ ಎರಡನೇ ಅಧಿಕೃತ ಭಾಷೆಯಾಗಿದೆ.

    ಗ್ರಾಮಗಳ ನಿವಾಸಿಗಳಿಗೆ ಪ್ರಾಚೀನ ಭಾರತೀಯ ಭಾಷೆಯನ್ನು ದೈನಂದಿನ ಸಂವಹನ ಮಾಧ್ಯಮವಾಗಿ ಬಳಸಲು ತಜ್ಞರಿಂದ ತರಬೇತಿ ನೀಡಲಾಗುವುದು ಮತ್ತು ಸಂಸ್ಕೃತ ಶಿಕ್ಷಕರನ್ನು ಕಳುಹಿಸಲಾಗುವುದು ಎಂದು ಉತ್ತರಾಖಂಡದ ಸಂಸ್ಕೃತ ಶಿಕ್ಷಣ ಸಚಿವ ಧನ್ ಸಿಂಗ್ ರಾವತ್ ಹೇಳಿದ್ದಾರೆ.

    ಭಾಷೆಯಲ್ಲಿ ಸಂವಹನ, ಸಂಸ್ಕೃತದಲ್ಲಿ ಪ್ರಾವೀಣ್ಯತೆ ಸಾಧಿಸಲು ಜನರಿಗೆ ವೇದಗಳು ಮತ್ತು ಪುರಾಣಗಳನ್ನು ಕಲಿಸಲಾಗುವುದು ಎಂದು ಅವರು ತಿಳಿಸಿದರು. ಇದನ್ನೂ ಓದಿ: Breaking-ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಕೋಲ್ಡ್ ವಾರ್: ಶಿವಣ್ಣ, ರವಿಚಂದ್ರನ್ ಸನ್ಮಾನ, ಅನುಮಾನ?

    ಸಂಸ್ಕೃತ ಗ್ರಾಮ ಎಂದು ಕರೆಯಲ್ಪಡುವ ಹಳ್ಳಿಗಳು ಪ್ರಾಚೀನ ಭಾರತೀಯ ಸಂಸ್ಕೃತಿಯ ಕೇಂದ್ರವಾಗುತ್ತವೆ. ಯುವ ಪೀಳಿಗೆ ತನ್ನ ಪೂರ್ವಜರ ಭಾಷೆಯಲ್ಲಿ ಮಾತನಾಡುವಂತಿರಬೇಕು. ಯುವ ಪೀಳಿಗೆಯನ್ನು ಅದರ ಬೇರುಗಳಿಗೆ ಹತ್ತಿರಕ್ಕೆ ಕೊಂಡೊಯ್ಯುವುದರ ಜೊತೆಗೆ, ಈ ಗ್ರಾಮಗಳು ದೇಶಾದ್ಯಂತ ಮತ್ತು ವಿದೇಶಗಳಿಂದ ಬರುವ ಪ್ರವಾಸಿಗರಿಗೆ ಭಾರತದ ಪ್ರಾಚೀನ ಸಂಸ್ಕೃತಿಯ ಪರಿಚಯಿಸಲಿದೆ ಎಂದು ತಿಳಿಸಿದರು.

    ತಿವೇಂದ್ರ ಸಿಂಗ್‌ ರಾವತ್‌ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಂಸ್ಕೃತ ಗ್ರಾಮಗಳನ್ನು ಅಭಿವೃದ್ಧಿಪಡಿಸುವ ಕಲ್ಪನೆಯನ್ನು ಮೊದಲು ರೂಪಿಸಲಾಯಿತು. ಆದರೆ ಯೋಜನೆಯು ಪ್ರಾರಂಭವಾಗಿರಲಿಲ್ಲ. ಈ ಹಿಂದೆ ಬಾಗೇಶ್ವರ ಮತ್ತು ಚಮೋಲಿ ಜಿಲ್ಲೆಯ ಎರಡು ಕಡೆ ಪ್ರಾಯೋಗಿಕವಾಗಿ ಜಾರಿಯಾಗಿತ್ತು. ಈಗ ಯೋಜನೆಯನ್ನು ಪೂರ್ಣ ಪ್ರಮಾಣದಲ್ಲಿ ಜಾರಿ ಮಾಡಲು ಸರ್ಕಾರ ಮುಂದಾಗಿದೆ.

    ಪ್ರಸ್ತುತ ಭಾರತದಲ್ಲೇ ಸಂಸ್ಕೃತದಲ್ಲೇ ಸಂವಹನ ನಡೆಸುವ ಏಕೈಕ ಗ್ರಾಮ ಕರ್ನಾಟಕದಲ್ಲಿದೆ. ಶಿವಮೊಗ್ಗದ ನಗರದಿಂದ 10 ಕಿಲೋಮೀಟರ್ ದೂರದಲ್ಲಿರುವ ಮತ್ತೂರು ಗ್ರಾಮದಲ್ಲಿ ಸಂಸ್ಕೃತದಲ್ಲಿ ಸಂವಹನ ನಡೆಯುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಶಾಲೆಯ ಆವರಣದಲ್ಲೇ ತಲೆ ಬಡಿದುಕೊಳ್ಳುತ್ತಾ, ಅಳುತ್ತಾ, ಕಿರುಚಾಡುತ್ತಿದ್ದಾರೆ ವಿದ್ಯಾರ್ಥಿನಿಯರು

    ಶಾಲೆಯ ಆವರಣದಲ್ಲೇ ತಲೆ ಬಡಿದುಕೊಳ್ಳುತ್ತಾ, ಅಳುತ್ತಾ, ಕಿರುಚಾಡುತ್ತಿದ್ದಾರೆ ವಿದ್ಯಾರ್ಥಿನಿಯರು

    ಡೆಹ್ರಾಡೂನ್: ಉತ್ತರಾಖಂಡದ ಬಾಗೇಶ್ವರದ ಸರ್ಕಾರಿ ಶಾಲೆಯ ಮಕ್ಕಳಲ್ಲಿ ಸಮೂಹ ಸನ್ನಿ ಕಾಣಿಸಿಕೊಂಡಿದ್ದು, ಶಿಕ್ಷಕರು ಹಾಗೂ ಸಿಬ್ಬಂದಿ ಭಯಭೀತರಾಗಿದ್ದಾರೆ. ಶಾಲೆಯ ಆವರಣದಲ್ಲಿ ಹಲವಾರು ವಿದ್ಯಾರ್ಥಿನಿಯರು ಜೋರಾಗಿ ಕಿರುಚಾಡುತ್ತಾ, ಅಳುತ್ತಾ, ತಲೆ ಬಡಿದುಕೊಳ್ಳುತ್ತಾ ಭಯಾನಕವಾಗಿ ವರ್ತಿಸುತ್ತಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ಈ ವೀಡಿಯೋ ವೈರಲ್ ಆಗುತ್ತಿದ್ದಂತೆಯೇ ಅಧಿಕಾರಿಗಳು ಹಾಗೂ ವೈದ್ಯರು ಶಾಲೆಗೆ ಭೇಟಿ ನೀಡಿದ್ದಾರೆ. ಕಳೆದ ಒಂದೆರಡು ದಿನಗಳ ಹಿಂದೆ ಕೆಲವು ವಿದ್ಯಾರ್ಥಿನಿಯರು ಈ ರೀತಿ ವರ್ತಿಸುತ್ತಿದ್ದರು. ಆದರೆ ಇದೀಗ ಶಾಲೆಯ ಬಹುಪಾಲು ವಿದ್ಯಾರ್ಥಿಗಳು ಇದೇ ರೀತಿ ವರ್ತಿಸಲಾರಂಭಿಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಹುಲಿಗಳ ಸಂಖ್ಯೆ ಹೆಚ್ಚಳ – ಚೆಲುವ ಚಾಮರಾಜನಗರ ಈಗ ಹುಲಿಗಳ ನಾಡು

    ಈ ಕುರಿತಂತೆ ಪ್ರತಿಕ್ರಿಯಿಸಿದ ಶಾಲೆಯ ಮುಖ್ಯ ಶಿಕ್ಷಕಿ ವಿಮಲಾ ದೇವಿ ಅವರು, ಮಂಗಳವಾರ ಕೆಲವು ಬಾಲಕಿಯರು ಮೊದಲಿಗೆ ಈ ರೀತಿ ವಿಚಿತ್ರವಾಗಿ ವರ್ತಿಸಲು ಆರಂಭಿಸಿದರು. ಅವರು ಜೋರಾಗಿ ಅಳುತ್ತಿದ್ದರು, ಕೂಗುತ್ತಿದ್ದರು, ನಡುಗುತ್ತಿದ್ದರು ಮತ್ತು ಯಾವುದೇ ಕಾರಣವಿಲ್ಲದೆ ತಲೆ ಬಡಿದುಕೊಳ್ಳಲು ಪ್ರಯತ್ನಿಸುತ್ತಿದ್ದರು. ಆಗ ನಾವು ಪೋಷಕರಿಗೆ ತಿಳಿಸಿದೆವು. ಅವರು ಒಬ್ಬ ಪೂಜಾರಿಯನ್ನು ಕರೆದುಕೊಂಡು ಬಂದು ಏನೋ ಮಂತ್ರ ಹಾಕಿಸಿದರು. ನಂತರ ಪರಿಸ್ಥಿತಿ ಕೊಂಚ ನಿಯಂತ್ರಣಕ್ಕೆ ಬಂದಿತು. ಈಗ ಮತ್ತೆ ಇನ್ನಷ್ಟು ಮಕ್ಕಳು ಅದೇ ರೀತಿ ವರ್ತಿಸುತ್ತಿದ್ದಾರೆ ಎಂದು ತಿಳಿದ್ದಾರೆ. ಇದನ್ನೂ ಓದಿ : ಇಡೀ ಬಿಜೆಪಿ ಪಕ್ಷ ಹಾಳಾಗಿ ಹೋಗುತ್ತೆ, ಅಣ್ಣಪ್ಪನ ಶಾಪ ಇದೆ: ಮಹೇಶ್ ಶೆಟ್ಟಿ ತಿಮರೋಡಿ ಕಿಡಿ

    ಇಲ್ಲಿನ ಪಕ್ಕದ ಜಿಲ್ಲೆಗಳಾದ ಅಲ್ಮೋರಾ, ಪಿಥೋರಗಢ್ ಮತ್ತು ಚಮೋಲಿಯ ಸರ್ಕಾರಿ ಶಾಲೆಗಳಲ್ಲಿ ಈ ಹಿಂದೆ ಇದೇ ರೀತಿಯ ಸಮೂಹ ಸನ್ನಿಯ ಘಟನೆಗಳು ವರದಿಯಾಗಿತ್ತು. ನಂತರ ವಿದ್ಯಾರ್ಥಿನಿಯರನ್ನು ವೈದ್ಯಕೀಯ ಪರೀಕ್ಷೆ ಮತ್ತು ಕೌನ್ಸೆಲಿಂಗ್‍ಗೆ ಒಳಪಡಿಸಲಾಯಿತು. ಈ ವೇಳೆ ವಿದ್ಯಾರ್ಥಿನಿಯರು ಕೌನ್ಸೆಲಿಂಗ್‍ನಲ್ಲಿ ಇತ್ತೀಚೆಗೆ ಜಿಲ್ಲೆಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದಲ್ಲಿ ತಮ್ಮ ಸಹಪಾಠಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಳು ಎಂದು ವಿದ್ಯಾರ್ಥಿನಿಯರು ಹೇಳಿರುವುದಾಗಿ ತಿಳಿದುಬಂದಿತ್ತು. ಆದರೆ ಬಾಲಕಿಯರಿಗೆ ಅಪೌಷ್ಟಿಕತೆ ಮತ್ತು ಅತ್ಯಂತ ಉದ್ವಿಗ್ನತೆಯಿಂದ ಈ ರೀತಿಯಾಗಿದೆ ಎಂದು ವೈದ್ಯಕೀಯ ಪರೀಕ್ಷೆಯಲ್ಲಿ ತಿಳಿಸಲಾಗಿತ್ತು.

    ಸಮೂಹ ಸನ್ನಿ ಅಥವಾ ಸಾಮೂಹಿಕ ಹಿಸ್ಟೀರಿಯಾ ಎಂದರೇನು?
    ಸಮೂಹ ಸನ್ನಿ ಅಥವಾ ಸಾಮೂಹಿಕ ಹಿಸ್ಟೀರಿಯಾವು ವಿಚಿತ್ರವಾದ ಮತ್ತು ಅಸಾಧಾರಣವಾದ ನಡವಳಿಕೆಗಳು, ಆಲೋಚನೆಗಳು ಮತ್ತು ಭಾವನೆಗಳನ್ನು ವ್ಯಕ್ತಪಡಿಸುವುದಾಗಿದೆ. ಇದು ಮಾನಸಿಕ ಸಮಸ್ಯೆಯಾಗಿದ್ದು, ಸನ್ನಿಗೊಳಗಾದವರು ಹುಚ್ಚರಂತೆ ವಿಚಿತ್ರವಾಗಿ ವರ್ತಿಸುತ್ತಾರೆ. ಮಾನಸಿಕ ಆರೋಗ್ಯ ಸ್ಥಿತಿ ಸರಿ ಇಲ್ಲದಿರುವಾಗ ಈ ರೀತಿ ಆಗುತ್ತದೆ. ಒಬ್ಬರು ಈ ರೀತಿ ವರ್ತಿಸುವಾಗ ಅದು ಸುತ್ತಮುತ್ತಲಿನವರ ಮೇಲೂ ಪರಿಣಾಮ ಬೀರಿ ಅವರು ಕೂಡ ಅದರ ಪ್ರಭಾವಕ್ಕೊಳಗಾಗುತ್ತಾರೆ. ಇದು ಭಾವನಾತ್ಮಕ ಅಥವಾ ಮಾನಸಿಕ ಒತ್ತಡದಿಂದ ಪ್ರೇರೇಪಿಸಲ್ಪಟ್ಟ ದೈಹಿಕ ಸಮಸ್ಯೆಯಾಗಿಯೂ ಕಾಣಿಸಿಕೊಳ್ಳುತ್ತದೆ.

    Live Tv
    [brid partner=56869869 player=32851 video=960834 autoplay=true]

  • ಭಾರೀ ಮಳೆಯಿಂದಾಗಿ ಕೇದಾರನಾಥ ಯಾತ್ರೆ ಸ್ಥಗಿತ

    ಭಾರೀ ಮಳೆಯಿಂದಾಗಿ ಕೇದಾರನಾಥ ಯಾತ್ರೆ ಸ್ಥಗಿತ

    ಡೆಹ್ರಾಡೂನ್: ಭಾರೀ ಮಳೆಯಿಂದಾಗಿ ಕೇದಾರನಾಥ ಯಾತ್ರೆಯನ್ನು ನಿಲ್ಲಿಸಲಾಗಿದೆ ಎಂದು ರುದ್ರಪ್ರಯಾಗ ಜಿಲ್ಲಾಡಳಿತ ಮಾಹಿತಿ ನೀಡಿದೆ.

    ಅಮರನಾಥದಲ್ಲಿ ನಡೆದ ಘಟನೆ ಬೆನ್ನಲ್ಲೆ ಎಚ್ಚೆತ್ತುಕೊಂಡ ಜಿಲ್ಲಾಡಳಿತವು ಯಾತ್ರಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಿರಲಿ ಎಂದು ಕೇದಾರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದೆ.

    ಜಮ್ಮು ಮತ್ತು ಕಾಶ್ಮೀರದ ಹಿಮಾಲಯ ಭಾಗದಲ್ಲಿ ಮೇಘಸ್ಫೋಟಗೊಂಡಿದ್ದು, ನಿನ್ನೆ ಸಂಜೆ ಅಮರನಾಥದಲ್ಲಿ ಏಕಾಏಕಿ ಸೃಷ್ಟಿಯಾದ ಪ್ರವಾಹದಿಂದ ನದಿ ತಟದಲ್ಲಿ ಹಾಕಲಾಗಿದ್ದ ಶಿಬಿರಗಳು ಕೊಚ್ಚಿ ಹೋಗಿವೆ. ಘಟನೆಯಲ್ಲಿ ಸಾವಿನ ಸಂಖ್ಯೆ ಏರಿಕೆ ಕಾಣುತ್ತಿದೆ. ಇದುವರೆಗೆ 16 ಜನರು ಮೃತಪಟ್ಟಿದ್ದಾರೆ. ಇದನ್ನೂ ಓದಿ: ಆಪರೇಷನ್ ಅಮರನಾಥ ಚಾಲೆಂಜ್ ಆಗಿದೆ: ಕರ್ನಲ್ ವಿ.ಎಂ. ನಾಯಕ್

    ದೇಶಾದ್ಯಂತ ಭಾರಿ ಮಳೆಯಾಗುತ್ತಿದ್ದು ಹಲವೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ನಿನ್ನೆ ಜಮ್ಮು ಮತ್ತು ಕಾಶ್ಮೀರದ ಹಿಮಾಲಯ ಭಾಗದಲ್ಲಿ ಮೇಘಸ್ಫೋಟಗೊಂಡು ಭೀಕರ ಪ್ರವಾಹ ಸೃಷ್ಟಿಯಾಗಿದೆ. ಕಣಿವೆ ತಟದಲ್ಲಿ ಹರಿಯುತ್ತಿದ್ದ ನದಿ ಒಂದೇ ಸಮನೆ ಉಕ್ಕಿ ಹರಿದಿದ್ದು ಅಮರನಾಥ ಯಾತ್ರಾರ್ಥಿಗಳು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಈಗಾಗಲೇ ಘಟನೆಯಲ್ಲಿ 45ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಗಾಯಗೊಂಡ ಹಲವರನ್ನು ಏರ್‌ಲಿಫ್ಟ್ ಮಾಡಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಊರಿಗೆ ವಾಪಾಸಾಗಲು ಅನುಮತಿಗಾಗಿ ಕಾಯುತ್ತಿದ್ದೇವೆ – ಯಾತ್ರೆಯಿಂದಲೇ ಪಬ್ಲಿಕ್ ಟಿವಿಗೆ ಲೈವ್ ಕೊಟ್ಟ ಕನ್ನಡಿಗರು

    Live Tv
    [brid partner=56869869 player=32851 video=960834 autoplay=true]

  • 11 ಪ್ರಯಾಣಿಕರಿದ್ದ ಕಾರು ನದಿಗೆ – 9 ಮಂದಿ ದುರ್ಮರಣ

    11 ಪ್ರಯಾಣಿಕರಿದ್ದ ಕಾರು ನದಿಗೆ – 9 ಮಂದಿ ದುರ್ಮರಣ

    ಡೆಹ್ರಾಡೂನ್: 11 ಪ್ರಯಾಣಿಕರಿದ್ದ ಕಾರು ನದಿಗೆ ಬಿದ್ದ ಪರಿಣಾಮ 9 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ರಾಮನಗರ ಪ್ರದೇಶದಲ್ಲಿ ನಡೆದಿದೆ. ಕಾರಿನಲ್ಲಿದ್ದ ಕೇವಲ ಇಬ್ಬರನ್ನು ರಕ್ಷಿಸಲಾಗಿದೆ.

    ರಾಮನಗರ ಕೋಟ್‌ದ್ವಾರ ರಸ್ತೆಯಲ್ಲಿರುವ ಕಾರ್ಬೆಟ್ ರಾಷ್ಟ್ರೀಯ ಉದ್ಯಾನವನದ ಧೇಲಾ ವಲಯದಲ್ಲಿ ಘಟನೆ ನಡೆದಿದ್ದು, ಪ್ರಯಾಣಿಕರೆಲ್ಲರೂ ಪಂಜಾಬ್ ಮೂಲದವರು ಎಂದು ತಿಳಿದುಬಂದಿದೆ. ಘಟನೆ ನಡೆದ ತಕ್ಷಣ ಪೊಲೀಸರು, ರಾಜ್ಯ ವಿಪತ್ತು ನಿರ್ವಹಣಾ ಪಡೆ(ಎಸ್‌ಡಿಆರ್‌ಎಫ್), ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದೆ. ಇದನ್ನೂ ಓದಿ: ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ – 10 ಮಂದಿಗೆ ಗಾಯ

    ಪ್ರತ್ಯಕ್ಷದರ್ಶಿಯೊಬ್ಬರ ಪ್ರಕಾರ ಮುಂಜಾನೆ 5 ಗಂಟೆಯ ಹೊತ್ತಿಗೆ ಕಾರು ಕಾರ್ಬೆಟ್ ಕಡೆ ಹೋಗುತ್ತಿತ್ತು. ನದಿಯ ನೀರು ರಸ್ತೆಯಲ್ಲಿ ಹರಿಯುತ್ತಿದ್ದ ಕಾರಣ ಕಾರು ಪ್ರವಾಹದೊಂದಿಗೆ ಕೊಚ್ಚಿಕೊಂಡು ಹೋಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮೋದಿ ಕನಸಿನ ಬುಲೆಟ್ ಟ್ರೈನ್ ಯೋಜನೆ ಮುಖ್ಯಸ್ಥ ಸತೀಶ್ ಅಗ್ನಿಹೋತ್ರಿ ವಜಾ

    ಎಲ್ಲಾ ಮೃತರನ್ನು ಗುರುತಿಸುವ ಪ್ರಯತ್ನಗಳು ನಡೆಯುತ್ತಿವೆ. ಘಟನೆಯಲ್ಲಿ ರಕ್ಷಿಸಲ್ಪಟ್ಟವರನ್ನು ರಾನಮಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಹಿಂದೆಯೂ ಆ ಪ್ರದೇಶದಲ್ಲಿ ಇಂತಹ ಘಟನೆಗಳು ನಡೆದಿತ್ತು ಎನ್ನಲಾಗಿದ್ದು, ಸೇತುವೆ ನಿರ್ಮಾಣದ ಕುರಿತು ಹಲವು ಬಾರಿ ಆಡಳಿತದಲ್ಲಿ ಚರ್ಚೆಯಾಗಿದೆ ಎನ್ನಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಅಕ್ರಮ ಆಸ್ತಿ ಪ್ರಕರಣ- ಐಎಎಸ್ ಅಧಿಕಾರಿ ಬಂಧನ

    ಅಕ್ರಮ ಆಸ್ತಿ ಪ್ರಕರಣ- ಐಎಎಸ್ ಅಧಿಕಾರಿ ಬಂಧನ

    ಡೆಹರಾಡೂನ್: ಆದಾಯಕ್ಕಿಂತಲೂ ಅಧಿಕ ಆಸ್ತಿಯನ್ನು ಸಂಪಾದಿಸಿದ್ದ ಹಿನ್ನೆಲೆಯಲ್ಲಿ ಐಎಎಸ್ ಅಧಿಕಾರಿಯನ್ನು ಬಂಧಿಸಿದ ಘಟನೆ ಉತ್ತರಾಖಂಡದಲ್ಲಿ ನಡೆದಿದೆ.

    ಐಎಎಸ್ ಅಧಿಕಾರಿ ರಾಮ್ ವಿಲಾಸ್ ಬಂಧಿತ ಆರೋಪಿ. ಇವರು ಆದಾಯ ಮೂಲಗಳಿಗಿಂತಲೂ ಅಧಿಕ ಆಸ್ತಿಯನ್ನು ಸಂಪಾದಿಸಿದ್ದರು. ಈ ಹಿನ್ನೆಲೆಯಲ್ಲಿ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ರಾಮ್ ವಿಲಾಸ್ ಅವರನ್ನು ಅಮಾನತುಗೊಳಿಸಿ ಬಂಧಿಸಿದ್ದಾರೆ.

    ಐಎಎಸ್ ರಾಮ್ ವಿಲಾಸ್ ಯಾದವ್ ಅವರು ತಮ್ಮ ಆದಾಯಕ್ಕೆ ಮೀರಿದ ಆಸ್ತಿಯನ್ನು ಗಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ತಡರಾತ್ರಿ ವಿಚಾರಣೆಯ ನಂತರ ಬಂಧಿಸಲಾಯಿತು ಎಂದು ರಾಜ್ಯ ವಿಜಿಲೆನ್ಸ್ ನಿರ್ದೇಶಕ ಅಮಿತ್ ಸಿನ್ಹಾ ತಿಳಿಸಿದ್ದಾರೆ.

    ಜೂನ್‍ನಲ್ಲಿ ಉತ್ತರಾಖಂಡ ವಿಜಿಲೆನ್ಸ್ ಇಲಾಖೆಯು ಐಎಎಸ್ ಅಧಿಕಾರಿ ರಾಮ್ ವಿಲಾಸ್ ಯಾದವ್‍ಗೆ ಸಂಬಂಧಿಸಿದ 4 ಸ್ಥಳಗಳ ಮೇಲೆ ದಾಳಿ ನಡೆಸಿತ್ತು. ಅಕ್ರಮ ಆಸ್ತಿ ಪ್ರಕರಣದಲ್ಲಿ ಲಕ್ನೋ ಮತ್ತು ಡೆಹ್ರಾಡೂನ್‍ನಲ್ಲಿ ಅವರ ನಿವೇಶನಗಳು ಸೇರಿವೆ. ಈತನ ವಿರುದ್ಧ ಏಪ್ರಿಲ್ 19ರಂದು ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ಕಾಂಗ್ರೆಸ್ ಪಕ್ಷದಲ್ಲಿ ಇರುವ ನಾಯಕರು ನಕಲಿ ಗಾಂಧಿ ಕುಟುಂಬದ ರಬ್ಬರ್ ಸ್ಟಾಂಪ್: ಬಿಜೆಪಿ

    ರಾಮ್ ವಿಲಾಸ್ ಈ ಹಿಂದೆ ಲಕ್ನೋ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯಾಗಿದ್ದರು. ಪ್ರಸ್ತುತ, ಐಎಎಸ್ ಅಧಿಕಾರಿ ಉತ್ತರಾಖಂಡದ ಗ್ರಾಮೀಣ ಇಲಾಖೆಯಲ್ಲಿ ಹೆಚ್ಚುವರಿ ಕಾರ್ಯದರ್ಶಿಯಾಗಿದ್ದಾರೆ. ಇದನ್ನೂ ಓದಿ: ಕರ್ನಾಟಕದ ಬಿಜೆಪಿಯ ಚಾಳಿ ದೇಶಕ್ಕೆ ಹಬ್ಬಿಸಿದ್ದಾರೆ: ಸಿದ್ದರಾಮಯ್ಯ ಕಿಡಿ

    Live Tv

  • ಹೌಸ್‍ಕೀಪಿಂಗ್ ಮಹಿಳೆ ಮೇಲೆ ಅತ್ಯಾಚಾರವೆಸಗಿದ 15ರ ಬಾಲಕ

    ಹೌಸ್‍ಕೀಪಿಂಗ್ ಮಹಿಳೆ ಮೇಲೆ ಅತ್ಯಾಚಾರವೆಸಗಿದ 15ರ ಬಾಲಕ

    ಡೆಹ್ರಾಡೂನ್: ಪಂಚತಾರ ಹೋಟೆಲ್‍ನಲ್ಲಿ ಹೌಸ್‍ಕೀಪಿಂಗ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಳದ ಮಹಿಳೆ ಮೇಲೆ ಅಪ್ರಾಪ್ತನೊಬ್ಬ ಅತ್ಯಾಚಾರವೆಸಗಿದ ಘಟನೆ ಉತ್ತರಾಖಂಡದ ಡೆಹ್ರಾಡೂನ್‍ನಲ್ಲಿ ನಡೆದಿದೆ.

    ಛತ್ತೀಸ್‍ಗಢ ಮೂಲದ 15 ವರ್ಷದ ಬಾಲಕ ಹೋಟೆಲ್‍ನ ಮಹಿಳೆಯರ ವಾಶ್‍ರೂಮ್‍ನಲ್ಲಿ ಪಶ್ಚಿಮ ಬಂಗಾಳದ 24 ವರ್ಷದ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದಾನೆ.

    RAPE

    ಸಂತ್ರಸ್ತ ಮಹಿಳೆಯು ಲೇಡಿಸ್ ವಾಶ್‍ರೂಮ್‍ನಲ್ಲಿ ತನ್ನ ಮೊಬೈಲ್ ಚಾರ್ಜಿಂಗ್ ಅನ್ನು ಪ್ಲಗ್ ಹಾಕುತ್ತಿದ್ದಾಗ, ಆರೋಪಿಯು ಅಲ್ಲಿಗೆ ಬಂದಿದ್ದಾನೆ. ನಂತರ ಅವಳನ್ನು ಮಾತನಾಡಿಸಲು ಪ್ರಾರಂಭಿಸಿದ್ದಾನೆ. ಆದರೆ ಆಕೆ ನಿರಾಸಕ್ತಿ ತೋರುವುದರ ಜೊತೆಗೆ ಮಹಿಳೆಯರ ವಾಶ್‍ರೂಮ್‍ಗೆ ಪ್ರವೇಶಿಸಿದ್ದಕ್ಕೆ ಆತನನ್ನು ಪ್ರಶ್ನಿಸಿದ್ದಾಳೆ. ನಂತರ ಕೂಡಲೇ ಹೊರ ಹೋಗುವಂತೆ ತಾಕೀತು ಮಾಡಿದ್ದಾಳೆ. ಇದನ್ನೂ ಓದಿ: ಬೆಂಗ್ಳೂರಿನ ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ 34 ಗಂಟೆಗಳ ಬಳಿಕ ಪತ್ತೆ

    POLICE JEEP

    ಆದರೆ ಆತ ಆ ವಾಶ್‍ರೂಂನ ಬಾಗಿಲನ್ನು ಹಾಕಿ ಅತ್ಯಾಚಾರವೆಸಗಿದ್ದಾನೆ. ಅಷ್ಟೇ ಅಲ್ಲದೇ ಸಹಾಯಕ್ಕಾಗಿ ಕೂಗಿದ್ದರೂ, ಬಾಗಿಲು ಮುಚ್ಚಿದ್ದರಿಂದ ಯಾರಿಗೂ ಕೇಳಿರಲಿಲ್ಲ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಘಟನೆ ಸಂಬಂಧಿಸಿ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧಿಸಿ ಅಪ್ರಾಪ್ತ ಬಾಲಕನನ್ನು ಬಾಲಾಪರಾಧಿಗೃಹಕ್ಕೆ ಕಳುಹಿಸಲಾಗಿದೆ. ಇದನ್ನೂ ಓದಿ: ಕಾರು ಪಾರ್ಕಿಂಗ್ ವಿಚಾರಕ್ಕೆ ಗಲಾಟೆ – ವ್ಯಕ್ತಿ ಬರ್ಬರ ಹತ್ಯೆ

    Live Tv

  • ಮುಂಬೈಗೆ 725 ರನ್‍ಗಳ ದಾಖಲೆಯ ಜಯ – ಪ್ರಥಮ ದರ್ಜೆ ಕ್ರಿಕೆಟ್‍ನಲ್ಲಿ 129 ವರ್ಷಗಳ ಬಳಿಕ ರೆಕಾರ್ಡ್ ಬ್ರೇಕ್

    ಮುಂಬೈಗೆ 725 ರನ್‍ಗಳ ದಾಖಲೆಯ ಜಯ – ಪ್ರಥಮ ದರ್ಜೆ ಕ್ರಿಕೆಟ್‍ನಲ್ಲಿ 129 ವರ್ಷಗಳ ಬಳಿಕ ರೆಕಾರ್ಡ್ ಬ್ರೇಕ್

    ಮುಂಬೈ: ಮುಂಬೈ ಮತ್ತು ಉತ್ತರಾಖಂಡ ನಡುವಿನ ರಣಜಿ ಟ್ರೋಫಿ ಕ್ವಾರ್ಟರ್‌ಫೈನಲ್‌ ಪಂದ್ಯದಲ್ಲಿ ಮುಂಬೈ ತಂಡ ದಾಖಲೆಯ 725 ರನ್‍ಗಳ ಜಯ ಸಾಧಿಸಿದೆ.

    ಮುಂಬೈ ನೀಡಿದ 795 ರನ್‍ಗಳ ಬೃಹತ್ ಗುರಿ ಬೆನ್ನಟ್ಟಿದ ಉತ್ತರಾಖಂಡ ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 69 ರನ್‍ಗಳಿಗೆ ಆಲೌಟ್ ಆಯಿತು. ಈ ಮೂಲಕ ಮುಂಬೈ ತಂಡ 725 ರನ್‍ಗಳ ಬೃಹತ್ ಜಯ ದಾಖಲಿಸಿತು. ಈ ಹಿಂದೆ 1953-54ರಲ್ಲಿ ಒಡಿಶಾ ವಿರುದ್ಧ ಬಂಗಾಳ ತಂಡ 540 ರನ್‍ಗಳ ಬೃಹತ್ ಜಯ ದಾಖಲಿಸಿತ್ತು. ಈ ದಾಖಲೆಯನ್ನು ಇದೀಗ ಮುಂಬೈ ತಂಡ ಮುರಿದು ನೂತನ ದಾಖಲೆ ನಿರ್ಮಿಸಿದೆ. ಇದನ್ನೂ ಓದಿ: ಕೊಹ್ಲಿಯ ದಾಖಲೆಯ ರನ್ ಶಿಖರವನ್ನು ಪುಡಿಗಟ್ಟಿದ ಬಾಬರ್ ಅಜಾಮ್‌

    ಇನ್ನೊಂದು ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಜಾರ್ಖಂಡ್ ವಿರುದ್ಧ ಬಂಗಾಳ ತಂಡ ನೂತನ ದಾಖಲೆ ಬರೆದಿದೆ. ಈ ಪಂದ್ಯದಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಬಂಗಾಳ ತಂಡದ ಎಲ್ಲಾ ಒಂಬತ್ತು ಬ್ಯಾಟ್ಸ್‌ಮ್ಯಾನ್‌ಗಳು ಅರ್ಧಶತಕ ಸಿಡಿಸುವ ಮೂಲಕ 129 ವರ್ಷಗಳ ಹಳೆಯ ದಾಖಲೆಯನ್ನು ಮುರಿದು ನೂತನ ದಾಖಲೆ ಬರೆದಿದ್ದಾರೆ. ಇದನ್ನೂ ಓದಿ: ಲಂಕಾ T20, ಏಕದಿನ ಕ್ರಿಕೆಟ್‌ಗೆ ಹರ್ಮನ್ ಪ್ರೀತ್ ಕೌರ್ ನಾಯಕಿ

  • ಅತೀ ಎತ್ತರದಲ್ಲಿ ಯೋಗ ಮಾಡಿ ದಾಖಲೆ ಬರೆದ ಐಟಿಬಿಪಿ ತಂಡ

    ಅತೀ ಎತ್ತರದಲ್ಲಿ ಯೋಗ ಮಾಡಿ ದಾಖಲೆ ಬರೆದ ಐಟಿಬಿಪಿ ತಂಡ

    ಡೆಹರಾಡೂನ್: ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ತಂಡವು ಉತ್ತರಾಖಂಡದ ಮಾಂಟ್ ಅಬಿ ಗಮಿನ್ ಪರ್ವತದ 22,850 ಅಡಿ ಎತ್ತರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಗೂ ಮುನ್ನ ಯೋಗಾಭ್ಯಾಸ ಮಾಡಿ ದಾಖಲೆ ನಿರ್ಮಿಸಿದೆ.

    ಈ ಕುರಿತ ವೀಡಿಯೋವೊಂದನ್ನು ತಂಡವು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಐಟಿಬಿಪಿಯಿಂದ ಎತ್ತರದಲ್ಲಿ ಯೋಗವನ್ನು ಅಭ್ಯಾಸ ಮಾಡುವ ಹೊಸ ದಾಖಲೆ ಎಂದು ಬರೆದುಕೊಂಡಿದ್ದಾರೆ. ಜೂನ್ 2 ರಂದು, ತಂಡವು 24,131 ಅಡಿ ಎತ್ತರದ ಮೌಂಟ್ ಅಬಿ ಗಮಿನ್ ಶಿಖರವನ್ನೇರಿ ‘ಬದ್ರಿ ವಿಶಾಲ್ ಕಿ ಜೈ’ ಎಂದು ಘೋಷಣೆ ಮಾಡಿದೆ. ದನ್ನು ಓದಿ : ವಾಣಿಜ್ಯ ಮಂಡಳಿ ಅಧ್ಯಕ್ಷರ ಕೈಗೆ ಫಿನಾಯಿಲ್ ಮತ್ತು ಪೊರಕೆ ಕೊಟ್ಟ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು

    ಕಳೆದ ತಿಂಗಳು ಡೆಹ್ರಾಡೂನ್‍ನಿಂದ ಹೊರಟಿದ್ದ ತಂಡ ಭಾನುವಾರ ಮರಳಿದೆ. ಉಪ ಕಮಾಂಡೆಂಟ್ ಕುಲದೀಪ್ ಕುಮಾರ್ ನೇತೃತ್ವದಲ್ಲಿ ಈ ಸಾಹಸ ಮಾಡಲಾಗಿದೆ. ಇದನ್ನು ಓದಿ : ಯಶ್ ಮುಂದಿನ ಸಿನಿಮಾ ನರ್ತನ್ ಜೊತೆ ಫಿಕ್ಸ್ : ಘೋಷಣೆಯೊಂದೇ ಬಾಕಿ

    ಐಟಿಬಿಪಿಯ ಉತ್ತರ ಫ್ರಾಂಟಿಯರ್ ಕೈಗೊಂಡ ದಂಡಯಾತ್ರೆಯನ್ನು ಮೇ 9 ರಂದು ಡೆಹ್ರಾಡೂನ್‍ನಿಂದ ಪ್ರಾರಂಭಿಸಲಾಯಿತು. ತಂಡವು ನಿನ್ನೆ ಬೇಸ್ ಕ್ಯಾಂಪ್‍ಗೆ ಮರಳಿದೆ.