Tag: Uttarakhand

  • ಉಪಚುನಾವಣೆ: ಉತ್ತರಾಖಂಡ್ ಸಿಎಂಗೆ ಧಾಮಿಗೆ ಭರ್ಜರಿ ಗೆಲುವು

    ಉಪಚುನಾವಣೆ: ಉತ್ತರಾಖಂಡ್ ಸಿಎಂಗೆ ಧಾಮಿಗೆ ಭರ್ಜರಿ ಗೆಲುವು

    ಡೆಹ್ರಾಡೂನ್: ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಈ ಬಾರಿ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

    ಈ ವರ್ಷದ ಆರಂಭದಲ್ಲಿ ನಡೆದ ರಾಜ್ಯ ಚುನಾವಣೆಯಲ್ಲಿ ಸೋತ ಬಳಿಕ ಚಂಪಾವತ್‍ನಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದ ಪುಷ್ಕರ್ ಸಿಂಗ್ ಧಮಿ ಅವರು ಕಾಂಗ್ರೆಸ್ ಅಭ್ಯರ್ಥಿ ನಿರ್ಮಲಾ ಗಹ್ತೋಡಿ ಅವರನ್ನು 50 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದ್ದಾರೆ. ಧಾಮಿ 54,000 ಮತಗಳನ್ನು ಪಡೆದರೆ, ಗಹತೋಡಿ ಕೇವಲ 3,607 ಮತಗಳನ್ನು ಪಡೆದಿದ್ದಾರೆ.  ಇದನ್ನೂ ಓದಿ:  ಸೋನಿಯಾ ಗಾಂಧಿ ಬಳಿಕ ಪ್ರಿಯಾಂಕಾ ಗಾಂಧಿಗೂ ಕೊರೊನಾ

    ರಾಜ್ಯದ ಕುಮಾನ್ ಪ್ರದೇಶದಲ್ಲಿ ಕಾಂಗ್ರೆಸ್‍ನ ನಿರ್ಮಲಾ ಗೆಹ್ತೋಡಿ ಅವರೊಂದಿಗೆ ಪುಷ್ಕರ್ ಸಿಂಗ್ ಧಮಿ ನೇರವಾಗಿ ಸ್ಪರ್ಧಿಸಿದ್ದರು. ಮತ್ತೊಂದೆಡೆ ಸಮಾಜವಾದಿ ಪಕ್ಷದ ಮನೋಜ್ ಕುಮಾರ್ ಭಟ್ ಮತ್ತು ಸ್ವತಂತ್ರ ಅಭ್ಯರ್ಥಿ ಹಿಮಶು ಗಡ್ಕೋಟಿ ಚುನಾವಣಾ ಕಣದಲ್ಲಿದ್ದರು. ಇದನ್ನೂ ಓದಿ: ಸೋನಿಯಾ ಗಾಂಧಿ ಶೀಘ್ರವೇ ಗುಣಮುಖರಾಗಲಿ – ಮೋದಿ ಶುಭಹಾರೈಕೆ

    ಸದ್ಯ ಗೆಲುವಿನ ಅಲೆಯಲ್ಲಿರುವ ಪುಷ್ಕರ್ ಸಿಂಗ್ ಅವರು, ಈ ಕುರಿತಂತೆ ಹಿಂದಿಯಲ್ಲಿ ಟ್ವೀಟ್ ಮಾಡಿದ್ದು, ಚಂಪಾವತ್ ಜನರೇ, ನನಗೆ ಮಾತುಗಳೇ ಬರದಂತಾಗಿದೆ. ನಿಮ್ಮ ಮತಗಳ ಮೂಲಕ ನನಗೆ ಸಿಕ್ಕಿರುವ ಪ್ರೀತಿ ಆಶೀರ್ವಾದವನ್ನು ನೋಡಿ ನಾನು ಭಾವುಕನಾಗಿದ್ದೇನೆ ಎಂದು ಧನ್ಯವಾದ ತಿಳಿಸಿದ್ದಾರೆ.

  • ಮೊಮ್ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ – ಉತ್ತರಾಖಂಡದ ಮಾಜಿ ಸಚಿವ ರಾಜೇಂದ್ರ ಬಹುಗುಣ ಆತ್ಮಹತ್ಯೆ

    ಮೊಮ್ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ – ಉತ್ತರಾಖಂಡದ ಮಾಜಿ ಸಚಿವ ರಾಜೇಂದ್ರ ಬಹುಗುಣ ಆತ್ಮಹತ್ಯೆ

    ಜಾರ್ಖಂಡ್: ಮೊಮ್ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಸೊಸೆ ಪ್ರಕರಣ ದಾಖಲಿಸಿದ್ದರಿಂದ ಮನನೊಂದು ಉತ್ತರಾಖಂಡದ ಮಾಜಿ ಸಚಿವ ರಾಜೇಂದ್ರ ಬಹುಗುಣ ತಮ್ಮ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

    ಆತ್ಮಹತ್ಯೆಗೂ ಮುನ್ನ ಪೊಲೀಸರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದ ರಾಜೇಂದ್ರ ಬಹುಗುಣ ಅವರು ಪೊಲೀಸರು ಬರುವಷ್ಟರಲ್ಲಿ ಆತ್ಮಹತ್ಯೆ ಮಾಡಿಕೊಡಿದ್ದಾರೆ. ಅಲ್ಲದೇ ಆತ್ಮಹತ್ಯೆಗೆ ಬಳಸಿದ್ದ ಪಿಸ್ತೂಲ್ ಮೃತ ದೇಹದ ಬಳಿ ಪತ್ತೆಯಾಗಿದೆ. ಇದನ್ನೂ ಓದಿ:  ತಾಂಬೂಲ ಪ್ರಶ್ನೆ ಅಂತಾ ಬರೋರನ್ನು ಒದ್ದು ಒಳಗೆ ಹಾಕ್ಬೇಕು: ಅಬ್ದುಲ್ ವಾಜೀದ್ ವಿವಾದಾತ್ಮಕ ಹೇಳಿಕೆ

    CRIME 2

    ಪೊಲೀಸರು ಬಂದಾಗ ರಾಜೇಂದ್ರ ಬಹುಗುಣ ಅವರು ಟ್ಯಾಂಕ್ ಮೇಲೆ ಏರಿ ಗುಂಡು ಹಾರಿಸಿಕೊಳ್ಳುವುದಾಗಿ ಬೆದರಿಕೆಯೊಡ್ಡಿದ್ದಾರೆ. ನಂತರ ಪೊಲೀಸರು ಧ್ವನಿವರ್ಧಕದ ಮೂಲಕ ಅವರೊಂದಿಗೆ ಮಾತನಾಡಲು ಪ್ರಯತ್ನಿಸಿದ್ದಾರೆ. ಆದರೆ ನನ್ನ ಮೇಲೆ ಸುಳ್ಳು ಆರೋಪ ಹೊರಿಸಲಾಗಿದೆ ಎಂದು ತಿಳಿಸಿದ್ದಾರೆ.

    ಬಳಿಕ ಆತ್ಮಹತ್ಯೆ ನಿರ್ದಾರ ಬಿಟ್ಟು ಕೆಳಗಿಳಿಯುವಂತೆ ಪೊಲೀಸರು ಮನವೊಲಿಸಲು ಪ್ರಯತ್ನಿಸಿದ್ದಾರೆ. ಆದರೆ ಇದ್ದಕ್ಕಿದಂತೆ ಪಿಸ್ತೂಲ್‍ನಿಂದ ಎದೆಗೆ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಪಂಕಜ್ ಭಟ್ ಎನ್‍ಡಿಟಿವಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯಸಭೆ ಚುನಾವಣೆಗೆ ಟಿಕೆಟ್ ನನಗೆ ಕೊಡಬೇಡಿ- ನಡ್ಡಾಗೆ ಸುರಾನಾ ಪತ್ರ

    ರಾಜೇಂದ್ರ ಬಹುಗುಣ ಅವರ ಸೊಸೆ ನೀಡಿದ ದೂರಿನ ಆಧಾರದ ಮೇರೆಗೆ ಲೈಂಗಿಕ ಅಪರಾಧಗಳಿಂದ ಮಕ್ಕಳ ಕಟ್ಟುನಿಟ್ಟಿನ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ರಾಜೇಂದ್ರ ಬಹುಗುಣ ಅವರ ಪುತ್ರ ಅಜಯ್ ಬಹುಗುಣ ಅವರ ದೂರಿನ ಮೇರೆಗೆ ಅವರ ಸೊಸೆ, ಆಕೆಯ ತಂದೆ ಮತ್ತು ನೆರೆಹೊರೆಯವರು ಆತನ ಮೇಲೆ ಹಲ್ಲೆ ಆರೋಪ ಹೊರಿಸಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

    ಕಾಂಗ್ರೆಸ್ ಪಕ್ಷದಲ್ಲಿ ರಾಜೇಂದ್ರ ಬಹುಗುಣ ಅವರಿಗೆ 2004-5ರಲ್ಲಿ ಎನ್‍ಡಿ ತಿವಾರಿ ಸರ್ಕಾರದಲ್ಲಿ ರಾಜ್ಯ ಸಚಿವ ಸ್ಥಾನಮಾನ ನೀಡಲಾಗಿತ್ತು. ರೋಡ್‍ವೇಸ್ ಒಕ್ಕೂಟದ ನಾಯಕರಾಗಿದ್ದ ಅವರು ಹಲ್ದ್ವಾನಿ ಡಿಪೋ ಕಾರ್ಯಾಗಾರದಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ಅಕ್ಟೋಬರ್ 31 ರಂದು ನಿವೃತ್ತರಾದರು.

  • ಭಾರೀ ಮಳೆಯಿಂದಾಗಿ ಕೇದಾರನಾಥ ಯಾತ್ರೆ ಸ್ಥಗಿತ

    ಭಾರೀ ಮಳೆಯಿಂದಾಗಿ ಕೇದಾರನಾಥ ಯಾತ್ರೆ ಸ್ಥಗಿತ

    ಡೆಹರಾಡೂನ್: ಭಾರೀ ಮಳೆಯಿಂದಾಗಿ ಕೇದಾರನಾಥ ಯಾತ್ರೆ ಸ್ಥಗಿತಗೊಳಿಸಲಾಗಿದ್ದು, ದೇಗುಲಕ್ಕೆ ತೆರಳುವ ಭಕ್ತರು ಗೌರಿಕುಂಡ್ ಮತ್ತು ಕೇದಾರನಾಥ ನಡುವೆ ವಿವಿಧ ಸ್ಥಳಗಳಲ್ಲಿ ಸ್ಥಗಿತಗೊಂಡಿರುವ ಘಟನೆ ನಡೆದಿದೆ.

    ಕೇದಾರನಾಥದಲ್ಲಿ ಮಳೆ ಹಾಗೂ ಹಿಮಪಾತ ಅಧಿಕವಾಗುತ್ತಿದೆ. ಇದರಿಂದಾಗಿ ಯಾತ್ರೆಯ ಜೊತೆಗೆ ಫಾಟಾ ಮತ್ತು ಗೌರಿಕುಂಡ್‍ನಿಂದ ಹೆಲಿಕಾಪ್ಟರ್ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

    2013ರ ಕೇದಾರನಾಥ ಪ್ರಳಯದ ದುರಂತದ ಹಿನ್ನೆಲೆಯಲ್ಲಿ ಜಾಗೃತರಾಗಿರುವ ರುದ್ರಪ್ರಯಾಗ ಜಿಲ್ಲಾಡಳಿತವು ಯಾತ್ರಾರ್ಥಿಗಳಿಗೆ ಹವಾಮಾನ ಸುಧಾರಿಸುವವರೆಗೆ ಆಯಾ ನಿಲ್ದಾಣಗಳಲ್ಲಿ ಇರುವಂತೆ ಮನವಿ ಮಾಡಿದ್ದಾರೆ. ಕೇದಾರನಾಥದಲ್ಲಿರುವ ಶಿವನ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಜನರನ್ನು ಹಿಂದಿರುಗುವ ಪ್ರಯಾಣವನ್ನು ನಿಲ್ಲಿಸಲಾಗಿದೆ ಎಂದು ರುದ್ರಪ್ರಯಾಗ ಜಿಲ್ಲಾಧಿಕಾರಿ ಮಾಹಿತಿ ನೀಡಿದರು. ಇದನ್ನೂ ಓದಿ: ವಂದೇ ಮಾತರಂಗೂ ರಾಷ್ಟ್ರಗೀತೆಯಷ್ಟೇ ಗೌರವ ಕೋಡಿ – ದೆಹಲಿ ಹೈಕೋರ್ಟ್‌ಗೆ ಪಿಐಎಲ್

    ಗೌರಿಕುಂಡ್‍ನ ಮೂಲ ಶಿಬಿರದಿಂದ ಕೇದಾರನಾಥಕ್ಕೆ ತೆರಳಲು ಸಿದ್ಧರಾಗಿರುವ ಜನರನ್ನು ದೇಗುಲಕ್ಕೆ ಮುಂದಿನ ಪ್ರಯಾಣವನ್ನು ಕೈಗೊಳ್ಳುವುದನ್ನು ತಡೆಯಲಾಯಿತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಡಳಿತ ಎಲ್ಲ ರೀತಿಯ ಮುನ್ನೆಚ್ಚರಿಕೆ ವಹಿಸುತ್ತಿದೆ ಎಂದರು. ಇದನ್ನೂ ಓದಿ: ಕುತುಬ್ ಮಿನಾರ್ ಬಳಿ ಪೂಜೆ ಮಾಡುವ ಹಕ್ಕು ಯಾರಿಗೂ ಇಲ್ಲ – ASI ಖಡಕ್ ಉತ್ತರ

  • ತಂದೆ ಆಸೆಯಂತೆ ಮುಸ್ಲಿಂ ಸಮುದಾಯಕ್ಕೆ ಭೂಮಿ ದಾನಕೊಟ್ಟ ಹಿಂದೂ ಸಹೋದರಿಯರು

    ತಂದೆ ಆಸೆಯಂತೆ ಮುಸ್ಲಿಂ ಸಮುದಾಯಕ್ಕೆ ಭೂಮಿ ದಾನಕೊಟ್ಟ ಹಿಂದೂ ಸಹೋದರಿಯರು

    ಡೆಹ್ರಾಡೂನ್: ಪ್ರಸ್ತುತ ದೇಶದಲ್ಲಿ ಹಿಂದೂ-ಮುಸ್ಲಿಮರ ನಡುವೆ ವೈಷಮ್ಯ ನಡೆಯುತ್ತಿರುವುದು ಗೊತ್ತೇ ಇದೆ. ಈ ನಡುವೆಯೂ ಸೌಹಾರ್ಧತೆ ಬೆಸೆಯುವ ಅಪರೂಪದ ಘಟನೆಗಳು ಆಗಾಗ್ಗೆ ನಡೆಯುತ್ತಿವೆ. ಹಾಗೆಯೇ ಹಿಂದೂ ಸಹೋದರಿಯರಿಬ್ಬರು ತನ್ನ ತಂದೆಯ ಕೊನೆಯ ಆಸೆಯಂತೆ ಈದ್ಗಾಕ್ಕಾಗಿ ಸುಮಾರು 20,400 ಚದರ ಅಡಿ ಭೂಮಿಯನ್ನು ದಾನ ಮಾಡಿದ್ದಾರೆ.

    Idgah
    ಸಾಂದರ್ಭಿಕ ಚಿತ್ರ

    ಸರೋಜಾ ರಸ್ತೋಗಿ ಹಾಗೂ ಅನಿತಾ ರಸ್ತೋಗಿ ಸಹೋದರಿಯರೇ ಭೂಮಿ ದಾನ ಮಾಡಿರುವುದು. ಇಲ್ಲಿನ ಬೈಲ್ಜುಡಿ ಗ್ರಾಮದ ಧೇಲಾ ನದಿಯ ಸೇತುವೆಯ ಬಳಿಯಿರುವ ಈದ್ಗಾವು ಈಗಾಗಲೇ ಸುಮಾರು 4 ಎಕರೆ ಭೂಮಿಯನ್ನು ಹೊಂದಿದೆ. ನೆನ್ನೆಯಷ್ಟೇ ಈ ಮೈದಾನದಲ್ಲಿ ಈದ್‌ಉಲ್‌ಫ್ರಿತ್ ಆಚರಣೆ ವೇಳೆ 20,000 ಮುಸ್ಲಿಮರು ನಮಾಜ್ ಮಾಡಿದ್ದರು. ಇದನ್ನೂ ಓದಿ: ಮಸೀದಿ ಬಳಿ ನಿಂತು ಜೈ ಶ್ರೀರಾಮ್ ಘೋಷಣೆ ಕೂಗಿ ಹನುಮಾನ್ ಚಾಲೀಸಾ ಪಠಿಸಿದ MNS

    ಇವರ ತಂದೆ ಲಾಲಾ ಬ್ರಿಜ್ನಂದನ್ ಪ್ರಸಾದ್ ರಸ್ತೋಗಿ ಅವರು ಈದ್ಗಾ ಸ್ಥಳದ ಪಕ್ಕದಲ್ಲೇ ಜಮೀನು ಹೊಂದಿದ್ದರು. ಅವರು ಎಲ್ಲಾ ಧರ್ಮವನ್ನು ಗೌರವಿಸುತ್ತಿದ್ದರು. ಹಿಂದೂ -ಮುಸ್ಲಿಮರ ನಡುವೆ ಬಾಂಧವ್ಯ ಬೆಸೆಯಲು ಸಹಾಯ ಮಾಡಲು ಬಯಸಿದ್ದರು. ಈ ಕೆಲಸ ಮಾಡುವುದಕ್ಕೂ ಮುನ್ನವೇ 2033ರಲ್ಲಿ ನಿಧನರಾದರು. ಸಾಯುವ ಮುನ್ನ ತಮ್ಮ ಮೂವರು ಮಕ್ಕಳಿಗೆ ಭೂಮಿ ಹಂಚಿಕೆ ಮಾಡಿದ್ದರು ಎನ್ನಲಾಗಿದೆ.

    Idgah
    ಸಾಂದರ್ಭಿಕ ಚಿತ್ರ

    ಸರೋಜಾ ಉತ್ತರ ಪ್ರದೇಶದ ಮೀರತ್‌ನಲ್ಲಿ ಹಾಗೂ ಅನಿತಾ ದೆಹಲಿಯಲ್ಲಿ ತಮ್ಮ ಕುಟುಂಬದೊಂದಿಗೆ ವಾಸಿಸುತ್ತಿದ್ದರು. ತಮ್ಮ ತಂದೆ ನಿಧನರಾದ 19 ವರ್ಷಗಳ ನಂತರ ತಮ್ಮ ಸ್ವಗ್ರಾಮ ಜಸ್ಪುರಕ್ಕೆ ಬಂದು, ಕಂದಾಯ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದರು. ನಂತರ ತಮ್ಮ ತಂದೆಯ ಆಸೆಯಂತೆ ಇಬ್ಬರು ಸಹೋದರಿಯರೂ ನಿರ್ಧರಿಸಿ ಭೂಮಿ ದಾನ ಮಾಡಿದ್ದಾರೆ. ಇದನ್ನೂ ಓದಿ: 2 ವರ್ಷಗಳ ಬಳಿಕದ ದಾಖಲೆ – ಅಕ್ಷಯ ತೃತೀಯದಂದು ಭರ್ಜರಿ ಸೇಲ್

    ಈ ಕುರಿತು ಮಾತನಾಡಿರುವ ಅವರು, ನಾವಂತು ಏನೂ ಮಾಡಿಲ್ಲ. ನಮ್ಮ ತಂದೆಯ ಆಸೆಯಂತೆ ಭೂಮಿಯನ್ನು ದಾನ ಮಾಡಿದ್ದೇವೆ. ಅವರು ಎಲ್ಲ ಧರ್ಮದ ಬಗ್ಗೆ ಅಪಾರ ಗೌರವ ಹೊಂದಿದ್ದರು. ನಮಾಜ್ ಆಚರಿಸಲು ಪ್ರತಿ ವರ್ಷ ಈದ್ಗಾ ಸಮಿತಿಗೆ ಸ್ವಲ್ಪ ಹಣವನ್ನು ನೀಡುತ್ತಿದ್ದರು ಎಂದು ಭಾವುಕರಾಗಿದ್ದಾರೆ.

    Idgah
    ಸಾಂದರ್ಭಿಕ ಚಿತ್ರ

    ಇದಕ್ಕೆ ಶ್ಲಾಘನೆ ವ್ಯಕ್ತಪಡಿಸಿರುವ ಈದ್ಗಾ ಸಮಿತಿಯ ಮುಖ್ಯಸ್ಥ ಹಸೀನ್ ಖಾನ್, ದೇಶವೇ ಕೋಮುಗಲಭೆಯ ಉನ್ಮಾದದಿಂದ ತತ್ತರಿಸುತ್ತಿರುವಾಗ ಇಂತಹ ಬೆಳವಣಿಗೆ, ಈ ಸಹೋದರಿಯರ ಒಂದು ಕಾರ್ಯ ಶ್ಲಾಘನೀಯವಾಗಿದೆ. ಇದು ಇತರ ಧರ್ಮಗಳಿಗೆ ಗೌರವ ತೋರಿಸುವ ಉತ್ತಮ ಉದಾಹರಣೆ. ನಮ್ಮ ಮುಸ್ಲಿಂ ಸಮುದಾಯವು ರಸ್ತೋಗಿ ಕುಟುಂಬದ ಕೊಡುಗೆಯನ್ನು ಎಂದಿಗೂ ಮರೆಯುವುದಿಲ್ಲ. ಇದು ಎರಡು ಸಮುದಾಯಗಳ ನಡುವೆ ಕೋಮು ಸೌಹಾರ್ದತೆಯನ್ನು ಬಲಪಡಿಸುತ್ತದೆ. ನಾವು ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದ್ದು, ಗಡಿ ಗೋಡೆ ನಿರ್ಮಿಸಲು ಪ್ರಾರಂಭಿಸಿದ್ದೇವೆ ಎಂದು ತಿಳಿಸಿದ್ದಾರೆ.

  • ಹಲವು ವರ್ಷಗಳ ನಂತರ ತವರಿಗೆ ತೆರಳಿ ತಾಯಿ ಭೇಟಿಯಾದ ಯೋಗಿ ಆದಿತ್ಯನಾಥ್‌

    ಹಲವು ವರ್ಷಗಳ ನಂತರ ತವರಿಗೆ ತೆರಳಿ ತಾಯಿ ಭೇಟಿಯಾದ ಯೋಗಿ ಆದಿತ್ಯನಾಥ್‌

    ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ತಮ್ಮ ರಾಜಕೀಯ ಒತ್ತಡದ ನಡುವೆ ಹಲವು ವರ್ಷಗಳ ನಂತರ ತಾಯಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡಿದ್ದಾರೆ.

    ತಾಯಿ ಸಾವಿತ್ರಾ ದೇವಿ ಅವರನ್ನು ಭೇಟಿಯಾಗಿ ಅವರ ಕಾಲುಗಳನ್ನು ಮುಟ್ಟಿ ನಮಸ್ಕರಿಸುತ್ತಿರುವ ಫೋಟೋವನ್ನು ಯೋಗಿ ಆದಿತ್ಯನಾಥ್‌ ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಕೇಂದ್ರ ಸಚಿವ ತೇಲಿ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ನೀಲಿ ಚಿತ್ರ ಪ್ರಸಾರ

    ಉತ್ತರಾಖಂಡದ ತಮ್ಮ ತವರು ನಗರವಾದ ಪೌರಿಯಲ್ಲಿರುವ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ಹಲವು ವರ್ಷಗಳ ನಂತರ ತಮ್ಮ ತಾಯಿಯನ್ನು ಭೇಟಿಯಾಗಿದ್ದಾರೆ. ಬುಧವಾರ ನಿಗದಿಯಾಗಿರುವ ತನ್ನ ಸೋದರಳಿಯನ ಕೇಶಮುಂಡನ ಸಮಾರಂಭಕ್ಕಾಗಿ ಅವರು ತಮ್ಮ ಗ್ರಾಮಕ್ಕೆ ಭೇಟಿ ನೀಡಿದ್ದಾರೆ.

    ಉತ್ತರಾಖಂಡ್‌ಗೆ ಅಧಿಕೃತ ನಿಶ್ಚಿತಾರ್ಥ ಕಾರ್ಯಕ್ರಮ ಹಾಗೂ ಕುಟುಂಬ ಸಮಾರಂಭದಲ್ಲಿ ಭಾಗವಹಿಸಲು ಯೋಗಿ ಆದಿತ್ಯನಾಥ್‌ ತವರಿಗೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. 85ರ ಹರೆಯದ ಸಾವಿತ್ರಾ ದೇವಿ ಅವರಿಗೆ ಯೋಗಿ ಆದಿತ್ಯನಾಥ್ ಅಲ್ಲದೇ ಇನ್ನೂ 6 ಮಕ್ಕಳಿದ್ದಾರೆ. ಇದನ್ನೂ ಓದಿ: ಗೋಹತ್ಯೆ ಮಾಡಿದ್ದೀರೆಂದು ಮನೆಗೆ ನುಗ್ಗಿ ಇಬ್ಬರು ಆದಿವಾಸಿಗಳ ಮೇಲೆ ಹಲ್ಲೆ ನಡೆಸಿ ಕೊಲೆ

  • ಶಾಲೆಗಳಲ್ಲಿ ವೇದ, ರಾಮಾಯಣ, ಗೀತೆಗಳನ್ನು ಕಲಿಸಬೇಕು: ಧನ್ ಸಿಂಗ್ ರಾವತ್

    ಶಾಲೆಗಳಲ್ಲಿ ವೇದ, ರಾಮಾಯಣ, ಗೀತೆಗಳನ್ನು ಕಲಿಸಬೇಕು: ಧನ್ ಸಿಂಗ್ ರಾವತ್

    ಡೆಹ್ರಾಡೂನ್: ರಾಜ್ಯಾದ್ಯಂತ ಶಾಲೆಗಳಲ್ಲಿ ವೇದ, ರಾಮಾಯಣ ಮತ್ತು ಗೀತೆಗಳನ್ನು ಕಲಿಸಬೇಕು ಎಂದು ಉತ್ತರಾಖಂಡ ಶಿಕ್ಷಣ ಸಚಿವ ಧನ್ ಸಿಂಗ್ ರಾವತ್ ಹೇಳಿದ್ದಾರೆ.

    ಹೊಸ ಶಿಕ್ಷಣ ನೀತಿಯ ಪ್ರಕಾರ, ಭಾರತೀಯ ಇತಿಹಾಸ ಮತ್ತು ಸಂಪ್ರದಾಯಗಳನ್ನು ಆಧರಿಸಿ ವಿದ್ಯಾರ್ಥಿಗಳ ಪಠ್ಯಕ್ರಮವನ್ನು ಸಿದ್ಧಪಡಿಸಬೇಕು. ವೇದಪುರಾಣ, ಗೀತೆಯೊಂದಿಗೆ ಸ್ಥಳೀಯ ಜಾನಪದ ಭಾಷೆಗಳನ್ನು ಪ್ರೋತ್ಸಾಹಿಸಬೇಕು. ಹೊಸ ಶಿಕ್ಷಣ ನೀತಿಯನ್ನು ಜಾರಿಗೆ ತಂದ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಉತ್ತರಾಖಂಡ ಪಾತ್ರವಾಗಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅಂಪೈರ್‌ ವಿರುದ್ಧ ಕೋರ್ಟ್‌ನಲ್ಲೇ ಆಕ್ರೋಶ – ಅನ್ಯಾಯದಿಂದ ಸೋತೆ ಎಂದ ಸಿಂಧು

    ಶೀಘ್ರದಲ್ಲೇ ಹೊಸ ಪಠ್ಯಕ್ರಮವನ್ನು ಸಿದ್ಧಪಡಿಸಲಾಗುವುದು ಮತ್ತು ಹೊಸ ಶಿಕ್ಷಣ ನೀತಿಯ ನಿಯಮಗಳಿಗೆ ಸಂಪುಟ ಸಭೆಯಲ್ಲಿ ಅಂಕಿತ ಹಾಕಲಾಗುವುದು. ಅಲ್ಲದೇ ಉತ್ತರಾಖಂಡ ಚಳವಳಿಯ ಇತಿಹಾಸ ಮತ್ತು ಮಹಾನ್ ವ್ಯಕ್ತಿಗಳ ಬಗ್ಗೆಯೂ ಹೊಸ ಪಠ್ಯಕ್ರಮದಲ್ಲಿ ಬೋಧಿಸಲಾಗುವುದು ಎಂದಿದ್ದಾರೆ. ಇದನ್ನೂ ಓದಿ:  ಮೇ 3ರೊಳಗೆ ಧ್ವನಿವರ್ಧಕಗಳನ್ನು ತೆಗೆದುಹಾಕದಿದ್ದರೆ, ಮಹಾರಾಷ್ಟ್ರದ ಶಕ್ತಿಯನ್ನು ತೋರಿಸುತ್ತೇವೆ: ರಾಜ್ ಠಾಕ್ರೆ

  • ಆರೋಪ ಸಾಬೀತಾದರೆ ರಾಜಕೀಯ ತೊರೆಯುವೆ: ಹರೀಶ್ ರಾವತ್

    ಆರೋಪ ಸಾಬೀತಾದರೆ ರಾಜಕೀಯ ತೊರೆಯುವೆ: ಹರೀಶ್ ರಾವತ್

    ಡೆಹ್ರಾಡೂನ್: ರಾಜ್ಯದಲ್ಲಿ ಮುಸ್ಲಿಂ ವಿಶ್ವವಿದ್ಯಾಲಯ ಸ್ಥಾಪನೆ ಕುರಿತು ಹೇಳಿಕೆ ನೀಡಿರುವುದು ನಿಜವಾದರೆ ರಾಜಕೀಯವನ್ನು ತ್ಯಜಿಸುತ್ತೇನೆ ಎಂದು ಉತ್ತರಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ಕೆಲ ಕಾಂಗ್ರೆಸ್ ನಾಯಕರು ತಮ್ಮ ಹೆಸರಿಗೆ ಕಳಂಕ ತರಲು ಯತ್ನಿಸುತ್ತಿದ್ದಾರೆ. ಬಿಜೆಪಿ ಬೆಂಬಲಿಗರ ಹೊರತಾಗಿಯೂ, ನಮ್ಮ ಪಕ್ಷದ ನಾಯಕರೊಬ್ಬರಿಗೆ ಸಂಬಂಧಿಸಿದ ಕೆಲವರು ನನ್ನ ವಿರುದ್ಧ ಆರೋಪ ಹೊರೆಸುತ್ತಿದ್ದಾರೆ ಎಂದು ಆರೋಪಿಸಿದರು.

    ಮುಸ್ಲಿಂ ವಿಶ್ವವಿದ್ಯಾನಿಲಯ ಸ್ಥಾಪನೆಯ ಹೇಳಿಕೆಯನ್ನು ನಾನೇ ಮಾಡಿದ್ದೇನೆ ಎಂಬುದು ಸಾಬೀತಾದ ದಿನ, ನಾನು ಮಹಾತ್ಮ ಗಾಂಧಿಯವರ ಪ್ರತಿಮೆಯ ಕೆಳಗೆ ಕುಳಿತು ರಾಜಕೀಯದಿಂದ ನಿವೃತ್ತಿ ಹೊಂದುತ್ತೇನೆ ಎಂದು ಅವರು, ಸಾಮಾಜಿಕ ಜಾಲತಾಣಗಳ ಮೂಲಕ ತನ್ನ ಬಗ್ಗೆ ಈ ಸುಳ್ಳನ್ನು ಹರಡಲು ಕಾರಣರಾದವರನ್ನು ಬಯಲಿಗೆಳೆಯಲು ಬಯಸುತ್ತೇನೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಸ್ಮಾರ್ಟ್‍ಸಿಟಿ ಕಾಮಗಾರಿಯಿಂದ ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಕಂಟಕ

    ಉತ್ತರಾಖಂಡ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪ್ರಚಾರದ ಮುಖ್ಯಸ್ಥರಾಗಿದ್ದ ರಾವತ್ ಅವರ ಹೇಳಿಕೆಯನ್ನು ಬಿಜೆಪಿಯು ಚುನಾವಣಾ ಪೂರ್ವದಲ್ಲಿ ಪ್ರಮುಖ ವಿಷಯವನ್ನಾಗಿ ಮಾಡಿತ್ತು. ಫೆಬ್ರವರಿ 14ರಂದು ವಿಧಾನಸಭೆ ಚುನಾವಣೆ ನಡೆದಿದ್ದು, 70 ಸ್ಥಾನಗಳಲ್ಲಿ ಬಿಜೆಪಿ 47 ಸ್ಥಾನಗಳನ್ನು ಗೆಲ್ಲುವ ಮೂಲಕ ಸತತ ಎರಡನೇ ಅವಧಿಗೆ ಸರ್ಕಾರವನ್ನು ರಚಿಸಿದೆ. ಇದನ್ನೂ ಓದಿ: ವಿಧಾನಸಭೆಯಲ್ಲಿ ಶಾಸಕರ ನಡುವೆ ಉತ್ತರ ದಕ್ಷಿಣ ವಾಕ್ಸಮರ

  • 2ನೇ ಅವಧಿಗೆ ಪುಷ್ಕರ್ ಸಿಂಗ್ ಧಾಮಿ ಪ್ರಮಾಣವಚನ ಸ್ವೀಕಾರ

    2ನೇ ಅವಧಿಗೆ ಪುಷ್ಕರ್ ಸಿಂಗ್ ಧಾಮಿ ಪ್ರಮಾಣವಚನ ಸ್ವೀಕಾರ

    ಡೆಹ್ರಾಡೂನ್: ಉತ್ತರಾಖಂಡದ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಾಮಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.

    ಪುಷ್ಕರ್ ಸಿಂಗ್ ಧಾಮಿ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರು. ಆದರೆ ಹೈಕಮಾಂಡ್ ಮತ್ತೆ ಅವರಿಗೆ ಸಿಎಂ ಪಟ್ಟವನ್ನು ಕಟ್ಟಿದೆ.

    ಡೆಹ್ರಾಡೂನ್‌ನಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ಪಕ್ಷದ ಇತರ ಮುಖಂಡರು ಉಪಸ್ಥಿತರಿದ್ದರು. ಇದನ್ನೂ ಓದಿ: ದೆಹಲಿ ಪಾಲಿಕೆ ಚುನಾವಣೆ ನಡೆಸಿ ಬಿಜೆಪಿ ಗೆದ್ದರೆ ಎಎಪಿ ರಾಜಕೀಯ ತೊರೆಯಲಿದೆ: ಕೇಜ್ರಿವಾಲ್‌ ಸವಾಲು

    Pushkar Singh Dhami

    ಪ್ರಮಾಣ ವಚನಕ್ಕೂ ಮುನ್ನ ಧಾಮಿ ಬುಧವಾರ ಮುಂಜಾನೆ ತಪಕೇಶ್ವರ ಮಹಾದೇವ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಥಾಮಿ ಟನ್ಸ್ ನದಿಯ ದಡದಲ್ಲಿರುವ ಶಿವ ದೇವಾಲಯದಲ್ಲಿ ಜಲಾಭಿಷೇಕ ಅರ್ಪಿಸಿ, ರಾಜ್ಯದ ಕಲ್ಯಾಣ ಹಾಗೂ ಸಮೃದ್ಧಿಗಾಗಿ ಪ್ರಾರ್ಥಿಸಿದರು. ಇದನ್ನೂ ಓದಿ: ಮಾರ್ಚ್ 31ರ ಬಳಿಕ ಕೋವಿಡ್ ನಿರ್ಬಂಧಗಳು ರದ್ದು

     

  • ರಾಷ್ಟ್ರಪತಿ ಚುನಾವಣೆ – ಬಿಜೆಪಿ ಅಭ್ಯರ್ಥಿಗೆ ಸುಲಭವಾಗಿ ಸಿಗಲಿದೆ ಜಯ

    ರಾಷ್ಟ್ರಪತಿ ಚುನಾವಣೆ – ಬಿಜೆಪಿ ಅಭ್ಯರ್ಥಿಗೆ ಸುಲಭವಾಗಿ ಸಿಗಲಿದೆ ಜಯ

    ನವದೆಹಲಿ: ಉತ್ತರ ಪ್ರದೇಶದಲ್ಲಿ ಗೆಲುವು ಸಾಧಿಸಿದ್ದರಿಂದ ಈ ಬಾರಿಯ ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸುಲಭವಾಗಿ ಗೆಲುವು ಸಾಧಿಸಲಿದ್ದಾರೆ.

    ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರ ಅವಧಿ ಜು.24ಕ್ಕೆ ಅಂತ್ಯಗೊಳ್ಳಲಿದೆ. 75 ವರ್ಷ ಮೇಲ್ಪಟ್ಟವರಿಗೆ ಪಕ್ಷದಿಂದ ನಿವೃತ್ತಿ ನೀಡುವ ಹಿನ್ನೆಲೆಯಲ್ಲಿ 76 ವರ್ಷದ ಕೋವಿಂದ್‌ ಅವರನ್ನು ಎರಡನೇ ಬಾರಿ ಆಯ್ಕೆ ಮಾಡುವುದು ಅನುಮಾನ. ರಾಷ್ಟ್ರಪತಿ ಚುನಾವಣೆಯನ್ನು ಗೆಲ್ಲಬೇಕಾದರೆ ಉತ್ತರ ಪ್ರದೇಶದ ಗೆಲುವು ಬಿಜೆಪಿಗೆ ಅನಿವಾರ್ಯವಾಗಿತ್ತು.

    ಮತ ಲೆಕ್ಕಾಚಾರ ಹೇಗೆ?
    ರಾಷ್ಟ್ರಪತಿ ಚುನಾವಣೆಯಲ್ಲಿ ಲೋಕಸಭೆ ಸದಸ್ಯರು, ರಾಜ್ಯಸಭೆ ಸದಸ್ಯರು, ರಾಜ್ಯ ವಿಧಾನಸಭೆಗಳ ಸದಸ್ಯರು ಮತ್ತು ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭೆ ಸದಸ್ಯರು ಮತ ಹಾಕುತ್ತಾರೆ. ವಿಧಾನಪರಿಷತ್‌ ಸದಸ್ಯರಿಗೆ ಮತ ಇಲ್ಲ.

    543 ಲೋಕಸಭಾ ಸದಸ್ಯರು, 233 ರಾಜ್ಯಸಭಾ ಸದಸ್ಯರು ಮತ್ತು ದೇಶದ ವಿಧಾನಸಭೆಯಲ್ಲಿರುವ 4,120 ಶಾಸಕರು ಮತ ಹಾಕಲಿದ್ದಾರೆ. ರಾಷ್ಟ್ರಪತಿ ಚುನಾವಣೆಯಲ್ಲಿ ಒಟ್ಟು 10,98,903 ಮತಗಳು ಚಲಾವಣೆಯಾಗುತ್ತವೆ. ಶೇ.50ಕ್ಕಿಂತ ಹೆಚ್ಚು ಮತ ಪಡೆದ ಅಭ್ಯರ್ಥಿ ಜಯಗಳಿಸುತ್ತಾರೆ. ಇದನ್ನೂ ಓದಿ: Bulldozer is Back – ಟ್ರೆಂಡ್‌ ಆಯ್ತು ಬುಲ್ಡೋಜರ್‌, ಬುಲ್ಡೋಜರ್‌ ಏರಿ ಬಿಜೆಪಿಯಿಂದ ಸಂಭ್ರಮಾಚರಣೆ

    ಎಲ್ಲ ಸಂಸದರ ವೋಟಿನ ಮೌಲ್ಯ 708. ರಾಜ್ಯದ ಜನಸಂಖ್ಯೆಯ ಆಧಾರದ ಮೇಲೆ ಶಾಸಕನ ಮತವನ್ನು ಲೆಕ್ಕಾಚಾರ ಮಾಡಲಾಗುತ್ತದೆ. ಉತ್ತರ ಪ್ರದೇಶದ ಒಬ್ಬ ಶಾಸಕನ ಮತಕ್ಕೆ ದೇಶದಲ್ಲೇ ಅತಿಹೆಚ್ಚು ಮೌಲ್ಯ 208 ಇದೆ. ದೇಶದಲ್ಲೇ ಕಡಿಮೆ ಇರುವ ಸಿಕ್ಕಿಂ ರಾಜ್ಯದ ಒಬ್ಬ ಶಾಸಕನ ಮತದ ಮೌಲ್ಯ 7 ಇದೆ.

    ಉತ್ತರ ಪ್ರದೇಶದ 403 ಶಾಸಕರ ವೋಟಿನ ಮೌಲ್ಯ ಒಟ್ಟು 83,824. 80 ಸಂಸದರು ಮತ ಸೇರಿದರೆ ಮೌಲ್ಯ 56,640 ಆಗುತ್ತದೆ. ಉತ್ತರ ಪ್ರದೇಶ ಒಂದೇ ರಾಜ್ಯದಿಂದ 1.4 ಲಕ್ಷ ಮೌಲ್ಯದ ಮತಗಳು ಚಲಾವಣೆ ಆಗುತ್ತದೆ. ಉತ್ತರಾಖಂಡ 4,480, ಗೋವಾ 800, ಮಣಿಪುರದಲ್ಲಿ 1,080 ಮತಗಳು ಚಲಾವಣೆ ಆಗುತ್ತದೆ.

    ಪಂಚರಾಜ್ಯಗಳ ಚುನಾವಣೆಗೂ ಮೊದಲು ಬಿಜೆಪಿ ಬಳಿ ರಾಷ್ಟ್ರಪತಿಯನ್ನು ಆಯ್ಕೆ ಮಾಡಿಕೊಳ್ಳಲು ಬೇಕಾದಷ್ಟು ಮತಗಳಿದ್ದವು. ಒಂದು ವೇಳೆ ಉತ್ತರ ಪ್ರದೇಶದಲ್ಲಿ ಸೋತಿದ್ದರೆ ಬಿಜೆಡಿ, ಟಿಆರ್‌ಎಸ್‌, ವೈಎಸ್‌ಆರ್‌ ಪಕ್ಷಗಳ ಬೆಂಬಲವನ್ನು ಬಿಜೆಪಿ ಕೇಳಬೇಕಿತ್ತು.

    ಯಾಕೆ ಮಹತ್ವ?
    ರಾಷ್ಟ್ರಪತಿ ಚುನಾವಣೆಯಲ್ಲಿ ಆಡಳಿತ ಪಕ್ಷದ ಅಭ್ಯರ್ಥಿ ಸೋತರೆ ಸರ್ಕಾರಕ್ಕೆ ಹಿನ್ನಡೆ ಎಂದೇ ಭಾವಿಸಲಾಗುತ್ತದೆ. ಕೇಂದ್ರ ಸರ್ಕಾರದ ಮಸೂದೆಗಳಿಗೆ ಸಹಿ ಹಾಕದೇ ಇದ್ದರೆ ಯೋಜನೆ/ ನಿರ್ಧಾರಗಳು ತಡವಾಗಿ ಜಾರಿಯಾಗಬಹುದು ಅಥವಾ ಜಾರಿ ಆಗದೇ ಇರಬಹುದು. ಹಲವು ಬಾರಿ ಸರ್ಕಾರದ ನಿರ್ಧಾರವನ್ನು ರಾಷ್ಟ್ರಪತಿಗಳು ಪ್ರಶ್ನಿಸುವ ಸಾಧ್ಯತೆ ಇರುತ್ತದೆ. ಸಂಸತ್ತಿನಲ್ಲೂ ಮಸೂದೆ ಪಾಸ್‌ ಆದರೂ ರಾಷ್ಟ್ರಪತಿಗಳು ಅಂಕಿತ ಹಾಕದೇ ಇದ್ದರೆ ಸರ್ಕಾರಕ್ಕೆ ಆದ ದೊಡ್ಡ ಮುಜುಗರ ಎಂದೇ ಭಾವಿಸಲಾಗುತ್ತದೆ.

    2014ರಲ್ಲಿ ಮೋದಿ ಸರ್ಕಾರ ಅಧಿಕಾರ ಬಂದಾಗ ಪ್ರಣಬ್‌ ಮುಖರ್ಜಿ ರಾಷ್ಟ್ರಪತಿ ಆಗಿದ್ದರು. ಈ ಸಂದರ್ಭದಲ್ಲಿ ಹಣಕಾಸಿಗೆ ಸಂಬಂಧಿಸಿದ ವಿಚಾರ ಬಂದಾಗ ಹಣಕಾಸು ಸಚಿವರಾಗಿದ್ದ ಅರುಣ್‌ ಜೇಟ್ಲಿ ಅವರನ್ನು ಹಲವು ಬಾರಿ ಪ್ರಣಬ್‌ ಮುಖರ್ಜಿ ರಾಷ್ಟ್ರಪತಿ ಭವನಕ್ಕೆ ಕರೆಯಿಸಿ ಸ್ಪಷ್ಟನೆ ಕೇಳಿದ್ದರು.

    2017ರ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿದ್ದ ಕೋವಿಂದ್‌ ಶೇ.65.65 ಮತಗಳನ್ನು ಪಡೆದಿದ್ದರೆ ಯುಪಿಎ ಅಭ್ಯರ್ಥಿಯಾಗಿದ್ದ ಮೀರಾ ಕುಮಾರ್‌ ಶೇ.34.35 ಮತಗಳನ್ನು ಪಡೆದಿದ್ದರು. ಕೋವಿಂದ್‌ 2,930 ಮತ(7,02,044 ಮೌಲ್ಯ) ಪಡೆದಿದ್ದರೆ ಮೀರಾ ಕುಮಾರ್‌ 1,844 ಮತ(3,67,314 ಮೌಲ್ಯ) ಪಡೆದಿದ್ದರು. 77 ಮತಗಳು ತಿರಸ್ಕೃತವಾಗಿದ್ದವು.

  • ಸ್ಥಳೀಯ ನಾಯಕತ್ವ ಮುಖ್ಯ ಅಲ್ಲ, ಅಜೆಂಡಾ ಮುಖ್ಯ: ಕರ್ನಾಟಕದ ಮೇಲೆ ಪರಿಣಾಮ ಏನು?

    ಸ್ಥಳೀಯ ನಾಯಕತ್ವ ಮುಖ್ಯ ಅಲ್ಲ, ಅಜೆಂಡಾ ಮುಖ್ಯ: ಕರ್ನಾಟಕದ ಮೇಲೆ ಪರಿಣಾಮ ಏನು?

    ಬೆಂಗಳೂರು: ಸ್ಥಳೀಯ ನಾಯಕತ್ವ ಮುಖ್ಯ ಅಲ್ಲ. ಅಜೆಂಡಾ ಮುಖ್ಯ ಎನ್ನುವುದು ಈ ಚುನಾವಣೆಯಲ್ಲಿ ದೃಢಪಟ್ಟಿದೆ. ಹೀಗಾಗಿ ಕರ್ನಾಟಕ ಬಿಜೆಪಿ ಮೇಲೆ ಹೈಕಮಾಂಡ್ ಹಿಡಿತ ಹೆಚ್ಚಳವಾಗಲಿದೆ.

    ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಕರ್ನಾಟಕ ರಾಜಕಾರಣದ ಮೇಲೆ ಭಾರೀ ಪರಿಣಾಮಗಳು ಉಂಟಾಗಬಹುದು ಎಂಬ ವಿಶ್ಲೇಷಣೆಗಳು ನಡೆದಿವೆ. ಇದನ್ನೂ ಓದಿ: ಯುಪಿಯಲ್ಲಿ ‘ಬುಲ್ಡೋಜರ್ ಬಾಬಾ’ ಅಬ್ಬರ – ಮೋದಿ, ಯೋಗಿ ಆರ್ಭಟಕ್ಕೆ ಧೂಳೀಪಟ

    ಏನು ಪರಿಣಾಮ?
    ಉತ್ತರಾಖಂಡದಲ್ಲಿ ಮೂವರು ಮುಖ್ಯಮಂತ್ರಿಗಳನ್ನು ಬಿಜೆಪಿ ಬದಲಾವಣೆ ಮಾಡಿತ್ತು. ಹೀಗಿದ್ದರೂ ಬಿಜೆಪಿ ಜಯಗಳಿಸಿದೆ. ಸ್ಥಳೀಯ ನಾಯಕತ್ವ ಇಲ್ಲದೇ ಇದ್ದರೂ ಮೋದಿ ಸಾಧನೆಯನ್ನೇ ಮುಂದಿಟ್ಟುಕೊಂಡು ಚುನಾವಣೆಗೆ ಬಿಜೆಪಿ ಹೋಗಿತ್ತು. ಈ ತಂತ್ರಗಾರಿಕೆಯಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಸ್ಥಳೀಯ ನಾಯಕತ್ವ ಮುಖ್ಯ ಅಲ್ಲ. ಅಜೆಂಡಾ ಮುಖ್ಯ ಆದ ಹಿನ್ನೆಲೆಯಲ್ಲಿ ಈ ಮಾಡೆಲ್‌ ಕರ್ನಾಟಕದಲ್ಲೂ ಪ್ರಯೋಗ ಆಗಬಹುದು. ಇದನ್ನೂ ಓದಿ: ಜನರು ರಾಷ್ಟ್ರೀಯತೆ, ಅಭಿವೃದ್ಧಿ ಮತ್ತು ಉತ್ತಮ ಆಡಳಿತವನ್ನ ಗೆಲ್ಲಿಸಿದ್ದಾರೆ: ಯೋಗಿ

    ಕ್ಯಾಬಿನೆಟ್ ಪುನಾಚರಚನೆಯಾದಲ್ಲಿ ಸಂಘ ನಿಷ್ಠ, ಪಕ್ಷ ನಿಷ್ಠ, ಕಠೋರ ಹಿಂದುತ್ವವಾದಿಗಳಿಗೆ ಮಣೆ ಹಾಕುವ ಸಾಧ್ಯತೆಯಿದೆ.

    ಬಿಬಿಎಂಪಿ, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಹೈಕಮಾಂಡ್‌ ನಿರ್ಧಾರವೇ ಅಂತಿಮವಾಗುವ ಸಾಧ್ಯತೆಯಿದೆ. ಅಷ್ಟೇ ಅಲ್ಲದೇ ಉತ್ತರದ ಅಲೆ ನಂಬಿ ಅವಧಿಗೆ ಮುನ್ನವೇ ಚುನಾವಣೆಗೆ ರಾಜ್ಯ ಸರ್ಕಾರ ಮುಂದಾದರೂ ಅಚ್ಚರಿಯಿಲ್ಲ.