ಶುಕ್ರವಾರ ಬೆಳಗ್ಗೆಯಿಂದ ಈವರೆಗೆ 136 ಪ್ರವಾಸಿಗರ ರಕ್ಷಣೆಯಾಗಿದೆ. ನಾಲ್ಕನೇ ದಿನವೂ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ರಕ್ಷಿಸಲಾದ ವ್ಯಕ್ತಿಗಳನ್ನು ಅವರವರ ಸ್ಥಳಗಳಿಗೆ ಕಳುಹಿಸುವುದಕ್ಕಾಗಿ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ಪ್ರವಾಹದಿಂದ ಹಾನಿಗೊಳಗಾದ ನಂತರ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ನಾಲ್ಕನೇ ದಿನವೂ ಮುಂದುವರೆದಿದೆ. ಹರ್ಸಿಲ್ ಮತ್ತು ನೆಲೋಂಗ್‌ನಲ್ಲಿರುವ ಮಿಲಿಟರಿ ಹೆಲಿಪ್ಯಾಡ್ ಕಾರ್ಯನಿರ್ವಹಿಸುತ್ತಿದ್ದು, ಗಂಗೋತ್ರಿಯೊಂದಿಗೆ ರಸ್ತೆ ಮೂಲಕ ಸಂಪರ್ಕ ಹೊಂದಿದೆ. ಎಂಜಿನಿಯರ್‌ಗಳು, ವೈದ್ಯಕೀಯ ತಂಡಗಳು ಮತ್ತು ರಕ್ಷಣಾ ಸಿಬ್ಬಂದಿ ಸೇರಿದಂತೆ 225 ಸೈನಿಕರು ಸ್ಥಳದಲ್ಲಿದ್ದಾರೆ ಎಂದು ಸೇನೆ ತಿಳಿಸಿದೆ. ಇದನ್ನೂ ಓದಿ: ಉತ್ತರಕಾಶಿಯಲ್ಲಿ ಮೇಘಸ್ಫೋಟ – ಈವರೆಗೆ 274 ಮಂದಿ ರಕ್ಷಣೆ, ಪತ್ತೆಯಾಗದ 59 ಜನರು
ಪ್ರವಾಹದ ಎರಡು ದಿನಗಳ ನಂತರ ಇಸ್ರೋದ ಕಾರ್ಟೊಸ್ಯಾಟ್-2S ಉಪಗ್ರಹವು, ಪ್ರವಾಹ ಪೀಡಿತ ವಲಯದ ಚಿತ್ರಗಳನ್ನು ಸೆರೆಹಿಡಿದಿದೆ. ಆ.7 ರಂದು ತೆಗೆದ ಈ ಚಿತ್ರಗಳು, ಖೀರ್ ಗಡ್ ಹೊಳೆ ಭಾಗೀರಥಿ ನದಿಯನ್ನು ಸೇರುವ ಧರಾಲಿ ಗ್ರಾಮದಲ್ಲಿ ಮಣ್ಣು ಮತ್ತು ಕಲ್ಲಿನ ರಾಶಿ ಸುಮಾರು 20 ಹೆಕ್ಟೇರ್‌ಗಳನ್ನು ಆವರಿಸುವುದನ್ನು ತೋರಿಸಿವೆ.
ಕಾಲುವೆ ಹೊಳೆಯಂತೆ ಹರಿದಿರುವುದು, ಮೂಲಸೌಕರ್ಯಗಳ ನಾಶ, ಹಲವಾರು ಮನೆಗಳ ಕಣ್ಮರೆ, ರಸ್ತೆ-ತೋಟ-ಸೇತುವೆಗಳು ನಾಶವಾಗಿರುವುದನ್ನು ಈ ಚಿತ್ರಗಳಲ್ಲಿ ಕಾಣಬಹುದಾಗಿದೆ. ಮನೆಗಳು ಮಣ್ಣು ಮತ್ತು ಅವಶೇಷಗಳಡಿ ಕೊಚ್ಚಿ ಹೋಗಿವೆ. ಪ್ರವಾಹದಿಂದ ಸಾಕಷ್ಟು ಹಾನಿಯಾಗಿದೆ.
ಪ್ರವಾಹಕ್ಕೂ ಹಿಂದಿನ ಚಿತ್ರಣ ಹಾಗೂ ಪ್ರವಾಹ ನಂತರದ ಚಿತ್ರಗಳನ್ನು ಹಂಚಿಕೊಳ್ಳಲಾಗಿದೆ. ಧರಾಲಿ ಮತ್ತು ಭಾಗೀರಥಿ ನದಿಯ 2024 ರ ಜೂನ್ ತಿಂಗಳಲ್ಲಿ ತೆಗೆದ ಚಿತ್ರ ಇದರಲ್ಲಿದೆ. ನದಿಯ ದಡದಲ್ಲಿ ಮನೆಗಳು ಸಾಲಾಗಿ ನಿಂತಿವೆ. ಆದರೆ, ಈಗಿನ ಚಿತ್ರಗಳು ಪ್ರವಾಹದಿಂದಾಗಿ ಎಲ್ಲೆಡೆ ಮಣ್ಣು ಮತ್ತು ಕಲ್ಲಿನ ರಾಶಿ ತುಂಬಿರುವುದು ಕಾಣುತ್ತದೆ. ಜನವಸತಿ ಪ್ರವಾಹಕ್ಕೆ ಸಿಲುಕಿ ನಾಶವಾಗಿವೆ. ಇದನ್ನೂ ಓದಿ: ಮೇಘಸ್ಫೋಟವಲ್ಲ ಉತ್ತರಾಖಂಡದಲ್ಲಿ ಸಂಭವಿಸಿದ್ದು ಹಿಮಕೊಳ ಸ್ಫೋಟ!
ಡೆಹ್ರಾಡೂನ್: ಧರಾಲಿಯಲ್ಲಿ (Dharali) ಸಂಭವಿಸಿದ್ದ ಭೀಕರ ಮೇಘಸ್ಫೋಟದಲ್ಲಿ ಸಿಲುಕಿ ನಾಪತ್ತೆಯಾಗಿದ್ದವರ ಪೈಕಿ 274 ಜನರನ್ನು ಹೆಲಿಕಾಪ್ಟರ್ ಮೂಲಕ ರಕ್ಷಣೆ ಮಾಡಲಾಗಿದೆ. ಇನ್ನೂ 59 ಜನರ ರಕ್ಷಣೆಗಾಗಿ ಶೋಧ ಕಾರ್ಯ ನಡೆದಿದೆ.
ಆ.5ರ ಮಧ್ಯಾಹ್ನ ಉತ್ತರಕಾಶಿಯ ಧರಾಲಿಯಲ್ಲಿ ಖೀರ್ ಗಂಗಾ ನದಿಯ ನೀರು ಭಾರೀ ಪ್ರಮಾಣದಲ್ಲಿ ಹರಿದು ಬಂದು ಮೇಘಸ್ಫೋಟ ಸಂಭವಿಸಿತ್ತು. ಪರಿಣಾಮ ಅಲ್ಲಿದ್ದ ಮನೆಗಳು, ಹೋಟೆಲ್, ಹೋಂಸ್ಟೇಗಳು ಸೇರಿ ಎಲ್ಲವೂ ಕೊಚ್ಚಿಕೊಂಡು ಹೋಗಿ ಸರ್ವನಾಶವಾಗಿತ್ತು. ಜೊತೆಗೆ ಗ್ರಾಮಸ್ಥರು, ಪ್ರವಾಸಿಗರು ಸೇರಿದಂತೆ ಹಲವರು ನಾಪತ್ತೆಯಾಗಿದ್ದರು. ಈವರೆಗೂ 274 ಜನರನ್ನು ಹೆಲಿಕಾಪ್ಟರ್ ಮೂಲಕ ರಕ್ಷಣೆ ಮಾಡಲಾಗಿದೆ. ಈ ಪೈಕಿ ಗಂಗೋತ್ರಿ ಹಾಗೂ ಇತರ ಪ್ರವಾಸಿತಾಣಗಳಲ್ಲಿ ಸಿಲುಕಿಕೊಂಡಿದ್ದ ಗುಜರಾತ್‌ನ 131 ಮತ್ತು ಮಹಾರಾಷ್ಟ್ರದ 123 ಪ್ರವಾಸಿಗರನ್ನು ಉತ್ತರಕಾಶಿ ಹಾಗೂ ಡೆಹ್ರಾಡೂನ್‌ಗೆ ಸ್ಥಳಾಂತರಿಸಲಾಗಿದೆ.ಇದನ್ನೂ ಓದಿ: ಮೇಘಸ್ಫೋಟವಲ್ಲ ಉತ್ತರಾಖಂಡದಲ್ಲಿ ಸಂಭವಿಸಿದ್ದು ಹಿಮಕೊಳ ಸ್ಫೋಟ!
ನಾಪತ್ತೆಯಾದವರ ರಕ್ಷಣೆಗಾಗಿ ಪ್ಯಾರಾಮಿಲಿಟರಿ ಪಡೆ ಹಾಗೂ ವೈದ್ಯಕೀಯ ತಂಡಗಳು ಸರಕು ಸಾಗಾಣೆ ಮಾಡಲು ಬಳಸುವ ಚಿನೂಕ್ ಹೆಲಿಕಾಪ್ಟರ್ ಮತ್ತು ಏರ್-ಲಿಫ್ಟಿಂಗ್‌ನ್ನು ಬಳಸಿಕೊಳ್ಳುತ್ತಿವೆ. ಅದಲ್ಲದೇ ಇಂಡೋ ಟಿಬೆಟಿಯನ್ ಗಡಿ ಪೊಲೀಸರು ಉಪಯೋಗಿಸುವ ಹೆಲಿಕಾಪ್ಟರ್‌ಗಳನ್ನು ಕೂಡ ರಕ್ಷಣಾ ಕಾರ್ಯಾಚರಣೆಗಾಗಿ ಬಳಸಿಕೊಳ್ಳಲಾಗುತ್ತಿದೆ. ಇವುಗಳ ಬಳಕೆಯಿಂದಾಗಿ ರಕ್ಷಣಾ ಕಾರ್ಯ ಸುಗಮವಾಗಿ ಸಾಗುತ್ತಿದ್ದು, 50 ನಾಗರಿಕರು ಹಾಗೂ 9 ಸೈನಿಕರ ಪತ್ತೆಗಾಗಿ ಸದ್ಯ ಶೋಧ ಕಾರ್ಯ ಮುಂದುವರೆದಿದೆ.
ಸದ್ಯ ಘಟನಾ ಸ್ಥಳಕ್ಕೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಭೇಟಿ ನೀಡಿ, ಸಂತ್ರಸ್ತರೊಂದಿಗೆ ಮಾತನಾಡಿದ್ದಾರೆ. ಅಗತ್ಯವಿರುವ ಎಲ್ಲಾ ರೀತಿಯ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿರುವ ಸಿಬ್ಬಂದಿಯೊಂದಿಗೆ ಮಾತನಾಡಿ ಮಾಹಿತಿ ಪಡೆದುಕೊಂಡಿದ್ದಾರೆ.
– ನೇಪಾಳದ ವಲಸೆ ಕಾರ್ಮಿಕರ ಬದುಕಲ್ಲಿ ನಡೆದಿದ್ದೆಂಥಾ ದುರಂತ!
ನವದೆಹಲಿ: ‘ಅಪ್ಪಾ.. ನಾವು ಬದುಕುಳಿಯುವುದಿಲ್ಲ.. ಇಲ್ಲಿ ಬಹಳಷ್ಟು ನೀರು ತುಂಬಿದೆ’.. ಇದು ಸಾವಿಗೂ ಮುನ್ನ ಪುತ್ರ ತನ್ನ ತಂದೆ ಜೊತೆ ನಡೆಸಿದ ಕೊನೆ ಸಂಭಾಷಣೆ. ತುತ್ತಿನ ಚೀಲ ತುಂಬಿಸಲು ದೂರದ ಪ್ರದೇಶಗಳಿಂದ ಬಂದಿದ್ದ ಕಾರ್ಮಿಕ ದಂಪತಿ ಜೀವನದಲ್ಲಿ ನಡೆದ ದುರಂತ ಘೋರ.
ಉತ್ತರಾಖಂಡದ (Uttarakhand) ಉತ್ತರಕಾಶಿಯಲ್ಲಿ (Uttarakashi Flood) ಸಂಭವಿಸಿದ ಮೇಘಸ್ಫೋಟದಿಂದ ಉಂಟಾಗಿ ಪ್ರವಾಹದಲ್ಲಿ ಮಗನನ್ನು ಕಳೆದುಕೊಂಡು ತಂದೆ ರೋಧಿಸಿದ್ದಾರೆ. ಸಾವಿಗೂ ಮುನ್ನ ಪುತ್ರ ತನ್ನ ಜೊತೆ ನಡೆಸಿದ ಸಂಭಾಷಣೆ ನೆನಪಿಸಿಕೊಂಡು ಕಣ್ಣೀರಿಟ್ಟಿದ್ದಾರೆ. ಇದನ್ನೂ ಓದಿ: ಉತ್ತರಾಖಂಡದಲ್ಲಿ ಮೇಘಸ್ಫೋಟ – ಕೇರಳ ಮೂಲದ 28 ಪ್ರವಾಸಿಗರು ನಾಪತ್ತೆ
ನೇಪಾಳದ ವಲಸೆ ಕಾರ್ಮಿಕರಾದ ಕಾಳಿ ದೇವಿ ಮತ್ತು ಆಕೆ ಪತಿ ವಿಜಯ್ ಸಿಂಗ್ ದುರಂತದಲ್ಲಿ ಪಾರಾಗಿ ಬದುಕುಳಿದ ದಂಪತಿಯಾಗಿದ್ದಾರೆ. ಭಟ್ವಾರಿ ಹೆಲಿಪ್ಯಾಡ್‌ನಲ್ಲಿ ಕುಳಿತಿದ್ದ ಸಿಂಗ್, ತನ್ನ ಮಗನೊಂದಿಗಿನ ಕೊನೆಯ ಸಂಭಾಷಣೆಯನ್ನು ನೆನಪಿಸಿಕೊಂಡಿದ್ದಾರೆ. ಮಗನನ್ನು ಕಾಪಾಡಲು ಸಾಧ್ಯವಾಗದ, ಸಾಂತ್ವನ ಹೇಳಲಾಗದ ತಮ್ಮ ಅಸಹಾಯಕ ಸ್ಥಿತಿ ನೆನೆದು ಮರುಗಿದ್ದಾರೆ.
ಕಣಿವೆಯಲ್ಲಿ ರಸ್ತೆ ಮತ್ತು ಸೇತುವೆ ನಿರ್ಮಾಣದಲ್ಲಿ ತೊಡಗಿಸಿಕೊಳ್ಳಲು ನೇಪಾಳದಿಂದ ಆಗಮಿಸಿದ 26 ಜನರ ಗುಂಪಿನಲ್ಲಿ ಈ ಕಾರ್ಮಿಕನೂ ಇದ್ದ. ಮಂಗಳವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಸುಮಾರು 47 ಕಿಲೋಮೀಟರ್ ದೂರದಲ್ಲಿರುವ ಭಟ್ವಾರಿಗೆ ತೆರಳಿದ್ದು ಈ ದಂಪತಿ ಮಾತ್ರ. ಒಂದು ದಿನದ ನಂತರ, ಉಳಿದ 24 ಸದಸ್ಯರಲ್ಲಿ ಯಾರನ್ನೂ ಸಂಪರ್ಕಿಸಲು ಇವರಿಂದ ಸಾಧ್ಯವಾಗಲಿಲ್ಲ. ಇದನ್ನೂ ಓದಿ: ಕಂದಕಕ್ಕೆ ಬಿದ್ದ ಸಿಆರ್‌ಪಿಎಫ್ ವಾಹನ – ಮೂವರು ಹುತಾತ್ಮ, 16 ಮಂದಿಗೆ ಗಾಯ
‘ನಾವು ಕಣಿವೆಯನ್ನು ತೊರೆದಾಗ, ಈ ಪ್ರದೇಶಕ್ಕೆ ಇಂತಹ ವಿಪತ್ತು ಬರುತ್ತದೆ ಎಂದು ಎಂದಿಗೂ ಭಾವಿಸಿರಲಿಲ್ಲ. ಮುಂಬರುವ ಪ್ರವಾಹದ ಬಗ್ಗೆ ನನಗೆ ತಿಳಿದಿದ್ದರೆ, ನಾನು ನನ್ನ ಮಕ್ಕಳನ್ನು ಹಿಂದೆ ಬಿಡುತ್ತಿರಲಿಲ್ಲ’ ಎಂದು ಕಣ್ಣೀರಿಟ್ಟಿದ್ದಾರೆ. ‘ನಮ್ಮನ್ನು ಹರ್ಸಿಲ್ ಕಣಿವೆಗೆ ಕರೆದೊಯ್ಯುವಂತೆ ನಾನು ಸರ್ಕಾರಕ್ಕೆ ಮನವಿ ಮಾಡುತ್ತೇನೆ. ನಮ್ಮ ಮಕ್ಕಳನ್ನು ನಾವೇ ಹುಡುಕುತ್ತೇವೆ’ ಎಂದು ಬೇಡಿಕೊಂಡಿದ್ದಾರೆ.
ಕಾರ್ಮಿಕರಲ್ಲದೆ, ಸೇನಾ ಸಿಬ್ಬಂದಿಯ ತಂಡವೂ ದುರಂತ ಸಂಭವಿಸಿದಾಗ ಕಣಿವೆಯಲ್ಲಿತ್ತು. ಸುಮಾರು 11 ಯೋಧರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಆಸ್ತಿಪಾಸ್ತಿ ಮತ್ತು ಜೀವ ಹಾನಿಯಾಗಿದೆ. ದಿಢೀರ್ ಪ್ರವಾಹ ಮತ್ತು ಭೂಕುಸಿತ ಸಂಭವಿಸಿದೆ. ಮಂಗಳವಾರ ಉತ್ತರಕಾಶಿಯ ಹರ್ಸಿಲ್ ಬಳಿಯ ಧರಾಲಿ ಗ್ರಾಮದಲ್ಲಿ ಭೀಕರ ದುರಂತ ಸಂಭವಿಸಿದ್ದು, ಭಾರೀ ಮೇಘಸ್ಫೋಟದಿಂದಾಗಿ ಮನೆಗಳು, ಮರಗಳು ನೆಲಕ್ಕೆ ಉರುಳಿ ಬಿದ್ದವು. ವಾಹನಗಳು ಕೊಚ್ಚಿ ಹೋದವು. ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ. ಹಲವಾರು ಮಂದಿ ನಾಪತ್ತೆಯಾಗಿದ್ದಾರೆ.
ಡೆಹ್ರಾಡೂನ್: ಉತ್ತರಾಖಂಡದ ( Uttarakhand) ಉತ್ತರಕಾಶಿಯಲ್ಲಿ (Uttarkashi) ಸಂಭವಿಸಿದ ಭೀಕರ ಮೇಘಸ್ಫೋಟದಲ್ಲಿ ಕೇರಳ (Kerala) ಮೂಲದ 28 ಪ್ರವಾಸಿಗರು (Tourists) ನಾಪತ್ತೆಯಾಗಿದ್ದಾರೆ ಎಂದು ನಾಪತ್ತೆಯಾದವರ ಕುಟುಂಬಸ್ಥರು ತಿಳಿಸಿದ್ದಾರೆ.
ಭೀಕರ ಪ್ರವಾಹದಲ್ಲಿ ನಾಪತ್ತೆಯಾದ 28 ಜನರ ಪೈಕಿ 20 ಮಂದಿ ಕೇರಳ ಮೂಲದವರಾಗಿದ್ದು, ಮಹಾರಾಷ್ಟ್ರದಲ್ಲಿ ನೆಲೆಸಿದ್ದರು. ಇನ್ನುಳಿದ 8 ಮಂದಿ ಕೇರಳದ ವಿವಿಧ ಜಿಲ್ಲೆಗಳ ನಿವಾಸಿಯಾಗಿದ್ದರು. ನಾಪತ್ತೆಯಾದವರಲ್ಲಿ ದಂಪತಿ ಕೂಡ ಇದ್ದರು. ಮೇಘಸ್ಫೋಟ ಸಂಭವಿಸುವ ಒಂದು ದಿನದ ಹಿಂದೆ ಅವರ ಮಗ ನಮಗೆ ಕೊನೆಯದಾಗಿ ಫೋನ್ ಮಾಡಿದ್ದರು. ಮರುದಿನ ಬೆಳಗ್ಗೆ 8:30ರ ಸುಮಾರಿಗೆ ಅವರು ಉತ್ತರಕಾಶಿಯಿಂದ ಗಂಗೋತ್ರಿಗೆ ಹೋಗುತ್ತಿದ್ದೇವೆ ಎಂದು ಹೇಳಿದ್ದರು. ಆ ಮಾರ್ಗದಲ್ಲಿ ಭೂಕುಸಿತ ಸಂಭವಿಸಿದೆ. ಬಳಿಕ ನಮಗೆ ಅವರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ ಎಂದು ದಂಪತಿಯ ಸಂಬಂಧಿಯೊಬ್ಬರು ಹೇಳಿದ್ದಾರೆ. ಇದನ್ನೂ ಓದಿ: ಗುರುವಾರದಿಂದ ಲಾಲ್‌ಬಾಗ್‌ನಲ್ಲಿ 218ನೇ ಫಲಪುಷ್ಪ ಪ್ರದರ್ಶನ – ಹೂವಲ್ಲೇ ಕಿತ್ತೂರಿನ ಕೋಟೆ ಸೃಷ್ಟಿ
ಉತ್ತರಕಾಶಿಯ ಧರಾಲೀಯಲ್ಲಿ ಸಂಭವಿಸಿದ ಮೇಘಸ್ಫೋಟದಿಂದ ಪ್ರವಾಹದಲ್ಲಿ ಸಿಲುಕಿಕೊಂಡವರ ರಕ್ಷಣಾ ಕಾರ್ಯವನ್ನ ಭಾರತೀಯ ಸೇನೆ, ಐಟಿಬಿಪಿ ಹಾಗೂ ಎನ್‌ಡಿಆರ್‌ಎಫ್ ತಂಡಗಳು ಆರಂಭಿಸಿವೆ. ಭಾರೀ ಮಳೆಯ ನಡುವೆಯೂ 150 ಮಂದಿಯನ್ನ ರಕ್ಷಿಸಲಾಗಿದೆ. ಇನ್ನೂ 150ಕ್ಕೂ ಹೆಚ್ಚುಮಂದಿಯನ್ನು ಪ್ರವಾಹಪೀಡಿತ ಸ್ಥಳದಿಂದ ರಕ್ಷಿಸಲಾಗಿದೆ. ಅಲ್ಲದೇ ಪ್ರವಾಹದಿಂದಾಗಿ ಈವರೆಗೆ ಐವರು ಸಾವನ್ನಪ್ಪಿರುವುದು ದೃಢವಾಗಿದೆ. ಐವರ ಮೃಹದೇಹಗಳನ್ನೂ ಹೊರತೆಗೆಯಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್ ಸಂಸದೆ ಸರ ಕಳವು ಪ್ರಕರಣ – ಆರೋಪಿಯನ್ನು ಬಂಧಿಸಿದ ದೆಹಲಿ ಪೊಲೀಸ್
– ಕೇಂದ್ರದಿಂದ ಅಗತ್ಯವಿರುವ ಎಲ್ಲಾ ಸಹಾಯ ನೀಡುವುದಾಗಿ ಮೋದಿ ಭರವಸೆ
– ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ; 150 ಮಂದಿ ಸ್ಥಳಾಂತರ
ಡೆಹ್ರಾಡೂನ್: ಉತ್ತರಕಾಶಿಯ ಧರಾಲೀಯಲ್ಲಿ ಸಂಭವಿಸಿದ ಮೇಘಸ್ಫೋಟದಿಂದ (Uttarkashi Cloudburst) ಪ್ರವಾಹದಲ್ಲಿ ಸಿಲುಕಿಕೊಂಡವರ ರಕ್ಷಣಾ ಕಾರ್ಯವನ್ನ ಭಾರತೀಯ ಸೇನೆ (Indian Army), ಐಟಿಬಿಪಿ ಹಾಗೂ ಎನ್‌ಡಿಆರ್‌ಎಫ್ ತಂಡಗಳು ಆರಂಭಿಸಿವೆ. ಭಾರೀ ಮಳೆಯ ನಡುವೆಯೂ 150 ಮಂದಿಯನ್ನ ರಕ್ಷಿಸಲಾಗಿದೆ. ಇನ್ನೂ 150ಕ್ಕೂ ಹೆಚ್ಚುಮಂದಿಯನ್ನು ಪ್ರವಾಹಪೀಡಿತ ಸ್ಥಳದಿಂದ ರಕ್ಷಿಸಲಾಗಿದೆ.
ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ
ಇನ್ನೂ ಮೇಘಸ್ಫೋಟದಿಂದ ಪ್ರವಾಹ ಸಂಭವಿಸಿದ ಸ್ಥಳವನ್ನ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ (Pushkar Singh Dhami) ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಕೂಡ ಹಂಚಿಕೊಂಡಿದ್ದು, ಸಮರೋಪಾದಿಯಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಗಳನ್ನ ಕೈಗೊಳ್ಳಲಾಗುತ್ತಿದೆ. ಸಂತ್ರಸ್ತರಿಗೆ ತ್ವರಿತ ಸಹಾಯವನ್ನೂ ನೀಡುತ್ತಿದ್ದೇವೆ ಎಂದು ಪುಷ್ಕರ್ ಸಿಂಗ್ ಧಾಮಿ ತಿಳಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲಿರುವ 6,291 ಪ್ರಾಥಮಿಕ ಕೃಷಿ ಸಾಲ ಸಂಘಗಳಲ್ಲಿ 125 ಸಂಘಗಳು ದಿವಾಳಿ ಅಂಚಿನಲ್ಲಿವೆ: ಅಮಿತ್ ಶಾ
ಪ್ರಧಾನಿ ಮೋದಿ ಜೊತೆಗೆ ಮಾತುಕತೆ
ಈ ನಡುವೆ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಜೊತೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಧರಾಲಿ ಪ್ರದೇಶದಲ್ಲಿ ಇತ್ತೀಚೆಗೆ ಸಂಭವಿಸಿದ ವಿಪತ್ತು ಮತ್ತು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳ ಮಾಹಿತಿ ಪಡೆದಿದ್ದಾರೆ. ರಾಜ್ಯ ಸರ್ಕಾರವು ಸಂಪೂರ್ಣ ಸಿದ್ಧತೆಯೊಂದಿಗೆ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳಲ್ಲಿ ತೊಡಗಿಸಿಕೊಂಡಿದೆ, ನಿರಂತರ ಭಾರೀ ಮಳೆಯಿಂದಾಗಿ, ಕೆಲವು ಪ್ರದೇಶಗಳಲ್ಲಿ ತೊಂದರೆಗಳಿವೆ ಎಲ್ಲಾ ಸಂಬಂಧಪಟ್ಟ ಸಂಸ್ಥೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿವೆ ಇದರಿಂದ ಸಂತ್ರಸ್ತರಿಗೆ ತ್ವರಿತ ಸಹಾಯ ಸಿಗುತ್ತದೆ ಎಂದು ಮೋದಿ ಅವರಿಗೆ ಧಾಮಿ ಮಾಹಿತಿ ನೀಡಿದ್ದಾರೆ. ಈ ವೇಳೆ ಕೇಂದ್ರ ಸರ್ಕಾರದಿಂದ ಸಾಧ್ಯವಿರುವ ಎಲ್ಲಾ ಸಹಾಯವನ್ನು ಭರವಸೆ ನೀಡಿದ್ದಾರೆ.
ಉತ್ತರಾಖಂಡ ಬಿಜೆಪಿ ಸಂಸದರಿಂದ ಮೋದಿ ಭೇಟಿ
ಈ ಎಲ್ಲ ಬೆಳವಣಿಗೆಗಳ ನಡುವೆ ಉತ್ತರಾಖಂಡದ ಬಿಜೆಪಿ ಸಂಸದರನ್ನು (Uttarakhand BJP MPs) ಭೇಟಿಯಾದ ಪ್ರಧಾನಿ ಮೋದಿ, ಉತ್ತರಕಾಶಿ ಉಂಟಾದ ಮೇಘಸ್ಫೋಟ ಘಟನೆ ಕುರಿತು ಚರ್ಚಿಸಿದ್ದಾರೆ. ಉತ್ತರಾಖಂಡದ ಸಂಸದರಾದ ಅಜಯ್ ಭಟ್, ಮಾಲಾ ರಾಜ್ಯ ಲಕ್ಷ್ಮಿ ಶಾ, ತ್ರಿವೇಂದ್ರ ಸಿಂಗ್ ರಾವತ್ ಮತ್ತು ಅನಿಲ್ ಬಲುನಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಇದನ್ನೂ ಓದಿ: ಉತ್ತರಕಾಶಿಯಲ್ಲಿ ಮೇಘಸ್ಫೋಟ – ಆರ್ಮಿ ಕ್ಯಾಂಪ್‌ನಲ್ಲಿದ್ದ 10ಕ್ಕೂ ಅಧಿಕ ಸೈನಿಕರು ನಾಪತ್ತೆ
100ಕ್ಕೂ ಅಧಿಕ ಮಂದಿ ಮಿಸ್ಸಿಂಗ್
ಇನ್ನೂ ಉತ್ತರಕಾಶಿ ಜಿಲ್ಲೆಯ ಧರಾಲಿ ಗ್ರಾಮ ನೈಸರ್ಗಿಕ ವಿಕೋಪಕ್ಕೆ ಸಿಲುಕಿದ್ದು, ಭಾರೀ ಮೇಘಸ್ಫೋಟದಿಂದ ವಿನಾಶವೇ ಸೃಷ್ಟಿಯಾಗಿದೆ. ಧರಾಲಿ ಗ್ರಾಮದ ಬಳಿಯಿರುವ ಖೀರ್ ಗಡ್ ಪ್ರದೇಶದಲ್ಲಿ ಪ್ರವಾಹದಿಂದಾಗಿ ಹಠಾತ್ ನೀರಿನ ಹರಿವು ಹೆಚ್ಚಾದ ಪರಿಣಾಮ ದಿಢೀರ್ ಪ್ರವಾಹ ಉಂಟಾಗಿದೆ. ನೋಡನೋಡುತ್ತಿದ್ದಂತೆ ನದಿಯಲ್ಲಿ ರೌದ್ರಾವತಾರ ತಾಳಿ ಹರಿದು ಬಂದ ಭಾರೀ ಪ್ರಮಾಣದ ಕಪ್ಪು ಬಣ್ಣದ ನೀರಿನಿಂದ 25ಕ್ಕೂ ಹೆಚ್ಚು ಹೋಟೆಲ್, ಹೋಂಸ್ಟೇಗಳು ಕೊಚ್ಚಿಹೋಗಿವೆ. ಘಟನೆಯಲ್ಲಿ ಸುಮಾರು ಹತ್ತು ಮಂದಿ ಮೃತಪಟ್ಟಿದ್ದು, ನೂರಕ್ಕೂ ಅಧಿಕ ಜನರು ಕಾಣೆಯಾಗಿದ್ದಾರೆ. ಇದನ್ನೂ ಓದಿ: ಉತ್ತಾರಾಖಂಡದಲ್ಲಿ ಪ್ರವಾಹ – ಕಲಬುರಗಿ ಜಿಲ್ಲಾಡಳಿತದಿಂದ ಸಹಾಯವಾಣಿ ಕೇಂದ್ರ ಆರಂಭ
ಈ ಪ್ರದೇಶಗಳಲ್ಲಿ ನಾಪತ್ತೆಯಾದವರ ರಕ್ಷಣಾ ಕಾರ್ಯ ಆರಂಭವಾಗಿದೆ. ಭಾರತೀಯ ಸೇನೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ರಾಜ್ಯ ವಿಪತ್ತು ನಿರ್ವಹಣಾ ಪಡೆ, ಐಟಿಬಿಪಿ ಮತ್ತು ಸ್ಥಳೀಯ ಆಡಳಿತದ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿವೆ. ಇದುವರೆಗೆ 150 ಜನರನ್ನ ರಕ್ಷಿಸಲಾಗಿದೆ. ಸುಮಾರು 150 ಜನರನ್ನ ಸುರಕ್ಷಿತ ಸ್ಥಳಗಳಿಗೆ ಕರೆದೊಯ್ಯಲಾಗಿದೆ.
– ಈವರೆಗೆ 10 ಮಂದಿ ಸಾವು, ನೂರಾರು ಮಂದಿ ನಾಪತ್ತೆ
– 9 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ; ಕೆಸರಿನ ರಾಶಿ.. ಊರೇ ಸರ್ವನಾಶ
ಡೆಹ್ರಾಡೂನ್: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಧರಾಲಿ ಗ್ರಾಮದಲ್ಲಿ ಆ.5ರಂದು ಮೇಘಸ್ಫೋಟ (Uttarkashi Cloudburst) ಸಂಭವಿಸಿದೆ. ಇದರಿಂದ ಹಠಾತ್ ಪ್ರವಾಹ ಸೃಷ್ಠಿಯಾಗಿ ಮನೆಗಳು, ಹೋಟೆಲ್‌ಗಳು ಮತ್ತು ಹೋಂಸ್ಟೇಗಳು ಕೊಚ್ಚಿ ಹೋಗಿವೆ. ಘಟನೆಯಲ್ಲಿ 10ಕ್ಕೂ ಅಧಿಕ ಮಂದಿ ಮೃತಪಟ್ಟರೇ 8-10 ಸೈನಿಕರು ಸೇರಿ ನೂರಾರು ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.
#WATCH | Uttarkashi, Uttarakhand | Blocked roads being cleared with the help of JCB, as landslides hit various places on the Uttarkashi-Harsil road. pic.twitter.com/QZj8nCMSew
9 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ, ರೆಡ್ ಅಲರ್ಟ್
ಭೂಕುಸಿತದ ನಡುವೆ ಭಾರೀ ಮಳೆ (heavy Rain) ಮುಂದುವರಿದ ಕಾರಣ ಭಾರತೀಯ ಹವಾಮಾನ ಇಲಾಖೆ ಇಂದು ಹರಿದ್ವಾರ, ನೈನಿತಾಲ್ ಮತ್ತು ಉಧಮ್ ಸಿಂಗ್ ನಗರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ರಾಜ್ಯದ ಇತರ ಪ್ರದೇಶಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಅಲ್ಲದೇ ಉತ್ತರಾಖಂಡ ಸರ್ಕಾರವು ಡೆಹ್ರಾಡೂನ್, ನೈನಿತಾಲ್, ತೆಹ್ರಿ, ಚಮೋಲಿ, ರುದ್ರಪ್ರಯಾಗ, ಚಂಪಾವತ್, ಪೌರಿ, ಅಲ್ಮೋರಾ ಮತ್ತು ಬಾಗೇಶ್ವರ್ ಒಂಬತ್ತು ಜಿಲ್ಲೆಗಳಲ್ಲಿ ಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಿದೆ. ಇದನ್ನೂ ಓದಿ: ಉತ್ತರಕಾಶಿಯಲ್ಲಿ ಭೀಕರ ಮೇಘಸ್ಫೋಟ – ಸಾವಿನ ಸಂಖ್ಯೆ 4ಕ್ಕೆ ಏರಿಕೆ
ಕೊಚ್ಚಿಹೋದ ಧರಾಲಿ ಗ್ರಾಮ
ಉತ್ತರಾಖಂಡದ ಉತ್ತರ ಕಾಶಿ ಜಿಲ್ಲೆಯ ಧರಾಲಿ (Dharali) ಗ್ರಾಮ ನೈಸರ್ಗಿಕ ವಿಕೋಪಕ್ಕೆ ಸಿಲುಕಿದ್ದು, ಮೇಘಸ್ಫೋಟದಿಂದ ವಿನಾಶವೇ ಸೃಷ್ಟಿಯಾಗಿದೆ. ಧರಾಲಿ ಗ್ರಾಮದ ಬಳಿಯಿರುವ ಖೀರ್ ಗಡ್ ಪ್ರದೇಶದಲ್ಲಿ ಪ್ರವಾಹದಿಂದಾಗಿ ಹಠಾತ್ ನೀರಿನ ಹರಿವು ಹೆಚ್ಚಾದ ಪರಿಣಾಮ ದಿಢೀರ್ ಪ್ರವಾಹ ಉಂಟಾಗಿದೆ. ನೋಡನೋಡುತ್ತಿದ್ದಂತೆ ನದಿಯಲ್ಲಿ ರೌದ್ರಾವತಾರ ತಾಳಿ ಹರಿದುಬಂದ ಹೂಳು ತುಂಬಿಕೊಂಡ ಪರಿಣಾಮ ನೀರಿನಿಂದ 25ಕ್ಕೂ ಹೆಚ್ಚು ಹೋಟೆಲ್, ಹೋಂ ಸ್ಟೇಗಳು ಕೊಚ್ಚಿಹೋಗಿವೆ. ಘಟನೆಯಲ್ಲಿ ಸುಮಾರು 10 ಮಂದಿ ಮೃತಪಟ್ಟಿದ್ದು, 100ಕ್ಕೂ ಅಧಿಕ ಜನರು ಕಾಣೆಯಾಗಿದ್ದಾರೆ. ಅವಶೇಷಗಳಡಿ 12ಕ್ಕೂ ಅಧಿಕ ಜನರು ಸಿಲುಕಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಉತ್ತಾರಾಖಂಡದಲ್ಲಿ ಪ್ರವಾಹ – ಕಲಬುರಗಿ ಜಿಲ್ಲಾಡಳಿತದಿಂದ ಸಹಾಯವಾಣಿ ಕೇಂದ್ರ ಆರಂಭ
ಹೆಬ್ಬಂಡೆ.. ಕೆಸರಿನ ರಾಶಿ.. ಊರೇ ಸರ್ವನಾಶ
ಘಟನೆ ಸಂಭವಿಸಿದ ವೇಳೆ ಬೆಟ್ಟದ ಇಳಿಜಾರಿನಲ್ಲಿ ಭಾರೀ ಪ್ರಮಾಣದ ನೀರು ಹರಿದು ಬರುವ ಈ ದೃಶ್ಯ ಎಂಥವರ ಎದೆಯನ್ನೂ ನಡುಗಿಸುವಂತಿದೆ. ನೀರಿನೊಂದಿಗೆ ಹರಿದು ಬಂದ ದೊಡ್ಡ ಪ್ರಮಾಣದಲ್ಲಿ ಹೂಳು ಧರಾಲಿ ಗ್ರಾಮವನ್ನು ಆವರಿಸಿಕೊಂಡಿದ್ದು ಅವಶೇಷಗಳ ಅಡಿಯಲ್ಲಿ ಜನರು, ವಾಹನಗಳು, ಮನೆಗಳು ಹುದುಗಿ ಹೋಗಿವೆ. ಈ ಶಾಕ್‌ನಿಂದ ಹೊರ ಬರುವ ಮುನ್ನವೇ ಉತ್ತರಕಾಶಿ ಜಿಲ್ಲೆಯ ಸುಖಿ ಗ್ರಾಮದಲ್ಲಿ ಮತ್ತೊಂದು ಮೇಘಸ್ಫೋಟ ಸಂಭವಿಸಿದೆ. ಉತ್ತರಾಖಂಡದ ಉತ್ತರಕಾಶಿಯ ಸುಖಿ ಟಾಪ್‌ನಲ್ಲಿ ತೀವ್ರ ಮೇಘಸ್ಫೋಟ ಸಂಭವಿಸಿದ್ದು, ಹಲವಾರು ಮನೆಗಳಿಗೆ ಹಾನಿಯಾಗಿದೆ. ಇದನ್ನೂ ಓದಿ: ಕಾಲಿಟ್ಟಲ್ಲೆಲ್ಲಾ ಮರಳಿದ್ದರೂ ಸೌದಿ ಅರೇಬಿಯಾ ಮರಳು ಆಮದು ಮಾಡಿಕೊಳ್ಳುವುದು ಏಕೆ?
ಮೂರು ಹೆಲಿಕ್ಯಾಪ್ಟರ್ ನೀಡುವಂತೆ ಕೇಂದ್ರಕ್ಕೆ ಮನವಿ
ಘಟನೆ ಬೆನ್ನಲ್ಲೇ ಸ್ಥಳಕ್ಕೆ ಧಾವಿಸಿದ ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ಮತ್ತು ಭಾರತೀಯ ಸೇನೆಯ ಐಬೆಕ್ಸ್ ಬ್ರಿಗೇಡ್‌ನೊಂದಿಗೆ ರಕ್ಷಣಾ ಕಾರ್ಯಾಚರಣೆಗಳು ನಡೆಸುತ್ತಿವೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರ ರಕ್ಷಣೆ ಮಾಡಲಾಗುತ್ತಿದೆ. ಆದ್ರೆ ದೊಡ್ಡ ಪ್ರಮಾಣದ ಹೂಳು ತುಂಬಿದ ಹಿನ್ನಲೆ ರಕ್ಷಣೆಗೆ ಸಮಸ್ಯೆಯಾಗುತ್ತಿದೆ. ಈ ರಕ್ಷಣೆಗೆ ಅನುಕೂಲವಾಗಲು ಮೂರು ಹೆಲಿಕ್ಯಾಪ್ಟರ್‌ಗಳನ್ನ ನೀಡುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಮಾಡಿದೆ.
10 ಯೋಧರು ನಾಪತ್ತೆ
ಇನ್ನೂ ಗಂಗೋತ್ರಿಯಲ್ಲಿ ಬೀಡುಬಿಟ್ಟಿರುವ ಎಸ್‌ಡಿಆರ್‌ಎಫ್ ತಂಡವು ಇಲ್ಲಿಯವರೆಗೆ ಧರಾಲಿಯಿಂದ 80ಕ್ಕೂ ಹೆಚ್ಚು ಜನರನ್ನು ರಕ್ಷಿಸಿದೆ. ಗಾಯಾಳುಗಳಿಗೆ ಹರ್ಷಿಲ್‌ನಲ್ಲಿರುವ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉತ್ತರಕಾಶಿಯ ಮೇಘಸ್ಫೋಟದಲ್ಲಿ, ಕೆಳ ಹರ್ಸಿಲ್ ಪ್ರದೇಶದ ಶಿಬಿರದಿಂದ 8-10 ಭಾರತೀಯ ಸೇನಾ ಸೈನಿಕರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಸೈನಿಕರ ನಷ್ಟಗಳ ಹೊರತಾಗಿಯೂ, ಬಾಕಿ ಉಳಿದ ಸೇನಾ ಸಿಬ್ಬಂದಿ ಪರಿಹಾರ ಕಾರ್ಯಾಚರಣೆ ಮುನ್ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಲಬುರಗಿ: ಉತ್ತರಾಖಂಡದಲ್ಲಿ (Uttarakhand) ಉಂಟಾದ ಪ್ರವಾಹದಿಂದ ಇದೀಗ ಅಲ್ಲಿಗೆ ತೆರಳಿದ ಕನ್ನಡಿಗರು ಸಹ ಸಂಕಷ್ಟಕ್ಕೆ ಸಿಲುಕಿರುವ ಸಾಧ್ಯತೆ ಹಿನ್ನೆಲೆ ಅವರ ಸಹಾಯಕ್ಕಾಗಿ ಕಲಬುರಗಿ (Kalaburagi) ಜಿಲ್ಲಾಡಳಿತ ಸಹಾಯವಾಣಿ ಕೇಂದ್ರ (Helpline) ಆರಂಭಿಸಿದೆ.
ಕಲಬುರಗಿ ಜಿಲ್ಲೆಯಿಂದ ಉತ್ತರಾಖಂಡದ ಉತ್ತರಕಾಶಿಗೆ (Uttarkashi) ಪ್ರವಾಸಕ್ಕೆ ತೆರಳಿ ಮೇಲ್ಕಂಡ ಘಟನೆಯಲ್ಲಿ ಸಿಲುಕಿಕೊಂಡಿದಲ್ಲಿ, ಅಂಥವರ ಮಾಹಿತಿಯನ್ನು ಸಂಬಂಧಿಸಿದವರು ಜಿಲ್ಲಾ ವಿಪತ್ತು ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ 08472-278677 ಹಾಗೂ ಪೊಲೀಸ್ ಕಂಟ್ರೋಲ್ ಸಂಖ್ಯೆ 9480805500, 9480803500, 08472-263604, 228112ಗೆ ಕರೆ ಮಾಡಿ ಮಾಹಿತಿ ನೀಡಲು ಕೋರಿದೆ. ಇದನ್ನೂ ಓದಿ: ಉತ್ತರಕಾಶಿಯಲ್ಲಿ ಮೇಘಸ್ಫೋಟ – ಆರ್ಮಿ ಕ್ಯಾಂಪ್‌ನಲ್ಲಿದ್ದ 10ಕ್ಕೂ ಅಧಿಕ ಸೈನಿಕರು ನಾಪತ್ತೆ
ಡೆಹ್ರಾಡೂನ್: ದೇವಭೂಮಿ ಉತ್ತರಾಖಂಡ್‌ನಲ್ಲಿ ಭಯಂಕರ ಜಲಪ್ರಳಯವಾಗಿದೆ. ಒಂದರ ಹಿಂದೊಂದರಂತೆ 2 ಬಾರಿ ಮೇಘಸ್ಫೋಟವಾಗಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. 10ಕ್ಕೂ ಅಧಿಕ ಸೈನಿಕರು ಸೇರಿ 50ಕ್ಕೂ ಅಧಿಕ ಜನರು ನಾಪತ್ತೆಯಾಗಿದ್ದಾರೆ.ಇದನ್ನೂ ಓದಿ: ಉತ್ತರ ಕರ್ನಾಟಕದ ಹಲವೆಡೆ ಭಾರೀ ಮಳೆ – ಜನಜೀವನ ಅಸ್ತವ್ಯಸ್ತ
ಖೀರ್ ಗಂಗಾ ನದಿ ರೌದ್ರಾವತಾರಕ್ಕೆ ಉತ್ತರಕಾಶಿಯ ಧರಾಲಿ ಗ್ರಾಮ ಕೇವಲ 34 ಸೆಕೆಂಡ್‌ನಲ್ಲಿ ಸಂಪೂರ್ಣ ನಾಮಾವಶೇಷವಾಗಿದೆ. ಕ್ಷಣಾರ್ಧದಲ್ಲಿ ಹೆಬ್ಬಂಡೆ ಮಿಶ್ರಿತ ಕೆಸರು ನೀರು ಎಲ್ಲವನ್ನೂ ಆಪೋಶನ ಪಡೆದಿದೆ. ಮನೆಗಳು, ಹೊಟೇಲ್‌ಗಳು, ಲಾಡ್ಜ್‌ಗಳು, ಅಂಗಡಿಗಳು ಕೊಚ್ಚಿ ಹೋಗಿವೆ. ಜನರು, ವಾಹನಗಳು ತರಗೆಲೆಯಂತೆ ಜಾರಿ ಹೋಗಿವೆ. ಕೇವಲ ಒಂದೇ ನಿಮಿಷದಲ್ಲಿ ಧರಾಲಿ ಗ್ರಾಮ ಸ್ಮಶಾನವಾಗಿದೆ. ಭಾರಿ ಸದ್ದಿನೊಂದಿಗೆ ಯಮನಂತೆ ಎರಗಿ ಬಂದ ದೃಶ್ಯವನ್ನು ಎತ್ತರದ ಪ್ರದೇಶದಲ್ಲಿದ್ದ ಕೆಲವರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಜೋರಾಗಿ ಕೂಗಿ ಅಲ್ಲಿದ್ದವರನ್ನು ಎಚ್ಚರಿಸುವ ಕೆಲಸ ಮಾಡಿದ್ದಾರೆ. ಆದರೆ, ಊಹಿಸದಂತೆ ಬಂದ `ಹಿಮಾಲಯನ್ ಸುನಾಮಿ’ಗೆ ಜನ ತಲ್ಲಣಗೊಂಡಿದ್ದಾರೆ.
ಕೆಲ ಪ್ರತ್ಯಕ್ಷದರ್ಶಿಗಳು ಪ್ರವಾಹ ತುಂಬಾ ಭೀಕರವಾಗಿತ್ತು. ಏನಾಗ್ತಿದೆ ಅಂತ ಅರಿವಿಗೆ ಬರೋ ಮುನ್ನವೇ ವಿನಾಶ ಸೃಷ್ಟಿಯಾಯ್ತು ಅಂದಿದ್ದಾರೆ. ಇದರ ಮಧ್ಯೆ ಕೆಸರಿನಲ್ಲಿ ಹುದುಗಿ ಹೋಗಿದ್ದ ವ್ಯಕ್ತಿಯೊಬ್ಬ ಎಂಟೆದೆಭಂಟನಂತೆ ಎದ್ದು ಬಂದಿದ್ದಾನೆ. ಮತ್ತೊಂದ್ಕಡೆ, ಸುಕ್ಕಿ ಎಂಬಲ್ಲೂ ಕೂಡ ಮೇಘಸ್ಫೋಟವಾಗಿದೆ. ಸೇನಾ ಕ್ಯಾಂಪ್‌ನಲ್ಲಿದ್ದ 11 ಸೈನಿಕರೂ ನಾಪತ್ತೆಯಾಗಿದ್ದಾರೆ. 4 ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, 3 ಐಟಿಬಿಪಿ ದಳಗಳು ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಿವೆ.ಇದನ್ನೂ ಓದಿ: ಕರ್ನಾಟಕದಲ್ಲಿರುವ 6,291 ಪ್ರಾಥಮಿಕ ಕೃಷಿ ಸಾಲ ಸಂಘಗಳಲ್ಲಿ 125 ಸಂಘಗಳು ದಿವಾಳಿ ಅಂಚಿನಲ್ಲಿವೆ: ಅಮಿತ್ ಶಾ
ಡೆಹ್ರಾಡೂನ್: ಉತ್ತರಾಖಂಡದ (Uttarakhand) ಉತ್ತರಕಾಶಿಯ (Uttarakashi) ಧರಾಲಿಯಲ್ಲಿ ಸಂಭವಿಸಿದ ಭೀಕರ ಮೇಘಸ್ಫೋಟದಿಂದಾಗಿ ನಾಲ್ಕು ಜನರು ಸಾವನ್ನಪ್ಪಿದ್ದು, 60ಕ್ಕೂ ಅಧಿಕ ಮಂದಿ ಜಲಪ್ರಳಯದಲ್ಲಿ ಕೊಚ್ಚಿ ಹೋಗಿ ನಾಪತ್ತೆಯಾಗಿರುವುದಾಗಿ ಮೂಲಗಳು ತಿಳಿಸಿವೆ.
ಖೀರ್ ಗಂಗಾ ನದಿಯ ರೌದ್ರಾವತಾರಕ್ಕೆ ಇಡೀ ಊರಿಗೇ ಊರೇ ಸರ್ವನಾಶವಾಗಿದೆ. ಬೆಟ್ಟದ ಮೇಲಿಂದ ಏಕಾಏಕಿ ನೀರು ಹರಿದು ಬಂದಿದ್ದು, ಗ್ರಾಮವೇ ಕೊಚ್ಚಿಕೊಂಡು ಹೋಗಿದೆ. ಪರಿಣಾಮ 4 ಜನರು ಸಾವನ್ನಪ್ಪಿದ್ದು, ಪ್ರವಾಸಿಗರು, ಅಲ್ಲಿನ ಸ್ಥಳೀಯರು ಸೇರಿದಂತೆ 60ಕ್ಕೂ ಹೆಚ್ಚು ಮಂದಿ ಜಲಪ್ರಳಯದಲ್ಲಿ ಕೊಚ್ಚಿ ಹೋಗಿದ್ದಾರೆ.ಇದನ್ನೂ ಓದಿ: ಹೆಚ್‌ಡಿಕೆ ವಿರುದ್ಧ ಸರ್ಕಾರಿ ಜಮೀನು ಒತ್ತುವರಿ ಆರೋಪ – ಆ.28ಕ್ಕೆ ವಿಚಾರಣೆ ಮುಂದೂಡಿಕೆ
ಸದ್ಯ ಸ್ಥಳದಲ್ಲಿ ಉತ್ತರ ಕಾಶಿ ಪೊಲೀಸ್, ರಾಜ್ಯ ವಿಪತ್ತು ನಿರ್ವಹಣಾ ತಂಡ (ಎಸ್‌ಡಿಆರ್‌ಎಫ್), ಎನ್‌ಡಿಆರ್‌ಎಫ್, ಭಾರತೀಯ ಸೇನೆ ಮತ್ತು ಇಂಡೋ- ಟಿಬೆಟನ್ ಬಾರ್ಡರ್ ಫೋರ್ಸ್ ತಂಡಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿವೆ. ಜೊತೆಗೆ 15 ರಿಂದ 20 ಮಂದಿಯನ್ನು ಈಗಾಗಲೇ ರಕ್ಷಣೆ ಮಾಡಲಾಗಿದೆ. ಈ ಸಂಬಂಧ ಪ್ರಧಾನಿ ಮೋದಿ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರ ಮಾತುಕತೆ ನಡೆಸಿದ್ದು, ದುರಂತದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.
ನೀರಿನ ಪ್ರವಾಹದಿಂದ ಹೋಟೆಲ್‌ಗಳು, ಹೋಂ ಸ್ಟೇಗಳು, ಧರಾಲಿಯಲ್ಲಿನ ಕಟ್ಟಡಗಳು, ಮನೆಗಳು ಕೊಚ್ಚಿ ಹೋಗಿವೆ. ದುರಂತದಿಂದಾಗಿ ರಾಜ್ಯ, ರಾಷ್ಟ್ರೀಯ ಹೆದ್ದಾರಿಗಳ ಭೂಕುಸಿತವಾಗಿದ್ದು, ರಸ್ತೆ ಸಂಪರ್ಕ ಬಂದ್ ಆಗಿದೆ. ಜೊತೆಗೆ ಚಾರ್‌ಧಾಮ್ ಯಾತ್ರೆ ತಾತ್ಕಾಲಿಕ ಸ್ಥಗಿತಗೊಂಡಿದೆ.
ಮೇಘಸ್ಫೋಟದ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಜಲಪ್ರಳಯದ ಭಯಾನಕತೆಯನ್ನು ಬಿಚ್ಚಿಟ್ಟಿದೆ. ಬೆಟ್ಟದ ಮೇಲಿನಿಂದ ಏಕಾಏಕಿ ನದಿಯಂತೆ ನೀರು ಹರಿದು ಬಂದು ಇಡೀ ಗ್ರಾಮವನ್ನೇ ಕೊಚ್ಚಿಕೊಂಡು ಹೋಗಿದೆ. ಪ್ರವಾಹದಲ್ಲಿ ಅನೇಕ ಮನೆಗಳು ಸರ್ವನಾಶವಾಗಿದ್ದು, ವಾಹನಗಳು ಹಾಗೂ ಅಂಗಡಿಗಳು ಸಹ ಧ್ವಂಸವಾಗಿದೆ. ಈ ಭೀಕರ ಪ್ರವಾಹದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಎದೆ ಝಲ್ ಎನ್ನಿಸುವಂತಿದೆ. ಏಕಾಏಕಿ ಜಲಪ್ರಳಯ ಉಂಟಾದ ಪರಿಣಾಮ ಜನರು ಕಿರುಚಾಡುತ್ತಿರುವುದು ವೀಡಿಯೋದಲ್ಲಿ ಸೆರೆಯಾಗಿದೆ.ಇದನ್ನೂ ಓದಿ: ಬಾಗಲಕೋಟೆ | ಬಡ ವಿದ್ಯಾರ್ಥಿನಿಯ ಶಿಕ್ಷಣಕ್ಕೆ ಕ್ರಿಕೆಟಿಗ ರಿಷಭ್ ಪಂತ್ ಆರ್ಥಿಕ ನೆರವು