ಡೆಹ್ರಾಡೂನ್: ವಿಧಾನಸಭಾ ಚುನಾವಣೆಗೆ ಮುನ್ನ, ಉತ್ತರಾಖಂಡ ವಿಶೇಷ ಕಾರ್ಯಪಡೆ (ಎಸ್‍ಟಿಎಫ್) ಹರಿದ್ವಾರದಲ್ಲಿ ದಾಳಿ ನಡೆಸಿದೆ. ಈ ವೇಳೆ 4,50,00,000 ರೂ. ಮೌಲ್ಯದ ಹಳೆಯ ಕರೆನ್ಸಿಯೊಂದಿಗೆ 6 ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
70 ಸದಸ್ಯ ಬಲದ ಉತ್ತರಾಖಂಡ ವಿಧಾನಸಭೆಗೆ ಫೆಬ್ರವರಿ 14 ರಂದು ಚುನಾವಣೆ ನಡೆಯಲಿದೆ. ಈ ಹಿನ್ನೆಲೆ ಎಸ್‍ಟಿಎಫ್ ಅವ್ಯಾವಹಾರ ನಡೆಯದಂತೆ ಎಲ್ಲ ಪಕ್ಷದವರ ಮೇಲೆ ಕಣ್ಣಿಟ್ಟಿದೆ. ಈ ವೇಳೆ ಎಸ್‍ಟಿಎಫ್ ಅಧಿಕಾರಿಗಳು ಹರಿದ್ವಾರದಲ್ಲಿ ಹಳೆ ಕರೆನ್ಸಿ ಇರುವುದರ ಮಾಹಿತಿ ಮೇರೆಗೆ ದಾಳಿ ಮಾಡಿದ್ದು, 6 ಜನರು ಹಳೆ ನೋಟುಗಳೊಂದಿಗೆ ಸಿಕ್ಕಿಬಿದ್ದಿದ್ದಾರೆ. ಇದನ್ನೂ ಓದಿ: ಕೆಟ್ಟದಾಗಿ ಮುಟ್ಟಿದ್ದಕ್ಕಾಗಿ ಛೀಮಾರಿ ಹಾಕಿದ ಮಹಿಳೆಯನ್ನೇ ಕೊಲ್ಲಲು ಮುಂದಾದ ವ್ಯಕ್ತಿ ಅರೆಸ್ಟ್
ಎಸ್‍ಟಿಎಫ್ ಹಿರಿಯ ಪೊಲೀಸ್ ಅಧೀಕ್ಷಕ(ಎಸ್‍ಎಸ್‍ಪಿ) ಅಜಯ್ ಸಿಂಗ್ ಈ ಕುರಿತು ಪ್ರತಿಕ್ರಿಯಿಸಿದ್ದು, ಹಳೆಯ ಕರೆನ್ಸಿಯೊಂದಿಗೆ ಸಿಕ್ಕಿಬಿದ್ದಿರುವ ಮೂವರು ಹರಿದ್ವಾರದವರು ಮತ್ತು ಉಳಿದವರು ಉತ್ತರ ಪ್ರದೇಶದವರಾಗಿದ್ದಾರೆ. ಪ್ರಸ್ತುತ ಅವರನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಈ ಕುರಿತು ಹೆಚ್ಚು ಮಾಹಿತಿ ತಿಳಿದುಕೊಳ್ಳಲು ಹೆಚ್ಚಿನ ತನಿಖೆ ಸಹ ನಡೆಸಲಾಗುತ್ತಿದೆ ಎಂದು ತಿಳಿಸಿದರು.
– ಪಂಜಾಬ್‌ನಲ್ಲಿ ಮೊದಲ ಬಾರಿಗೆ ಆಪ್ ಮುನ್ನಡೆ – ಮಣಿಪುರ, ಗೋವಾದಲ್ಲಿ ಅತಂತ್ರ
ನವದೆಹಲಿ: ಉತ್ತರ ಪ್ರದೇಶ ಮತ್ತು ಉತ್ತರಾಖಂಡ್ ನಲ್ಲಿ ಬಿಜೆಪಿ ಜಯಗಳಿಸಲಿದೆ ಎಂದು ಟೈಮ್ಸ್ ನೌ ಸಮೀಕ್ಷೆ ಹೇಳಿದೆ.
ಪಂಚರಾಜ್ಯಗಳ ಚುನಾವಣೆ ದಿನಾಂಕ ಪ್ರಕಟವಾದ ಬೆನಲ್ಲೇ ಈ ಬಾರಿ ಯಾವ ರಾಜ್ಯದಲ್ಲಿ ಯಾರು ಜಯಗಳಿಸಬಹುದು ಎಂಬ ಲೆಕ್ಕಾಚಾರ ಆರಂಭವಾಗಿದೆ. ಹೀಗಾಗಿ ಟೈಮ್ಸ್ ನೌ ಚುನಾವಣಾ ಪೂರ್ವ ಸಮೀಕ್ಷೆ ನಡೆಸಿದ್ದು ಉತ್ತರಾಖಂಡ್, ಉತ್ತರ ಪ್ರದೇಶದಲ್ಲಿ ಬಿಜೆಪಿ ಸ್ಪಷ್ಟ ಬಹಮತ ಪಡೆಯಲಿದೆ ಎಂದು ಹೇಳಿದೆ.
ಗೋವಾ, ಮಣಿಪುರದಲ್ಲಿ ಅತಂತ್ರ ಫಲಿತಾಂಶ ಬರಲಿದ್ದು ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಏರಬಹುದು ಎಂದು ಭವಿಷ್ಯ ನುಡಿದಿದೆ.
ಗೋವಾ:
ಒಟ್ಟು 40 ಕ್ಷೇತ್ರಗಳು ಇರುವ ಗೋವಾದಲ್ಲಿ ಬಹುಮತಕ್ಕೆ 21 ಸ್ಥಾನಗಳ ಅಗತ್ಯವಿದೆ. ಬಿಜೆಪಿ 17-21, ಆಪ್ 08-11, ಕಾಂಗ್ರೆಸ್ 4-6 ಗಳಿಸಬಹುದು.
ಮಣಿಪುರ:
ಒಟ್ಟು 60 ಸ್ಥಾನಗಳಿದ್ದು, ಬಹುಮತಕ್ಕೆ 31 ಸ್ಥಾನಗಳನ್ನು ಗೆಲ್ಲಬೇಕು. ಬಿಜೆಪಿ 23-27, ಕಾಂಗ್ರೆಸ್ 22-27, ಎನ್‌ಸಿಎಫ್ 02-06, ಇತರರು 05-09 ಕ್ಷೇತ್ರಗಳಲ್ಲಿ ಜಯಗಳಿಸಬಹುದು.
ಡೆಹ್ರಾಡೂನ್: ಉತ್ತರಾಖಂಡದಲ್ಲಿ ಡಿಜಿಟಲ್ ರ‍್ಯಾಲಿಗಳಿಗೆ ಬಿಜೆಪಿ ಸಂಪೂರ್ಣ ತಯಾರಿ ನಡೆಸಿದೆ ಎಂದು ಕೇಂದ್ರ ರಕ್ಷಣಾ ಮತ್ತು ಪ್ರವಾಸೋದ್ಯಮ ಸಚಿವ ಅಜಯ್ ಭಟ್ ತಿಳಿಸಿದರು.
ಅಸೆಂಬ್ಲಿ ಚುನಾವಣೆ ಕುರಿತು ಮಾಧ್ಯಮಗಳೊಂದಿಗೆ ಮಾನಾಡಿದ ಅವರು, ಶನಿವಾರ ಚುನಾವಣಾ ಆಯೋಗವು ಉತ್ತರ ಪ್ರದೇಶ, ಗೋವಾ, ಪಂಜಾಬ್, ಮಣಿಪುರ ಮತ್ತು ಉತ್ತರಖಂಡ್ ನಲ್ಲಿ ಅಸೆಂಬ್ಲಿ ಚುನಾವಣೆಯ ದಿನಾಂಕವನ್ನು ಘೋಷಣೆ ಮಾಡಿದೆ. ಪ್ರಸ್ತುತ ಚುನಾವಣೆ ಎಂದು ನೇರವಾಗಿ ಜನರನ್ನು ಭೇಟಿ ಮಾಡುವುದು, ಬೀದಿಯಲ್ಲಿ ಪ್ರಚಾರ ಮಾಡುವುದನ್ನು ನಿಷೇಧಿಸಲಾಗಿದೆ. ಅದಕ್ಕೆ ಬಿಜೆಪಿ ಪಕ್ಷವು ಡಿಜಿಟಲ್ ರ‍್ಯಾಲಿ ಮಾಡಲು ತಯಾರಿ ಮಾಡಿಕೊಳ್ಳುತ್ತಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಹಿಮದಿಂದ ಆವೃತವಾದ ಫೋಟೋ ಶೇರ್ ಮಾಡಿ ‘ಭೂಮಿಯ ಮೇಲಿನ ಸ್ವರ್ಗ’ ಎಂದ ರೈಲ್ವೇ ಸಚಿವ
ಬಿಜೆಪಿ ಕಾರ್ಯಕರ್ತರು ಮತ್ತು ನಾವು ಚುನಾವಣೆಯ ಆಯೋಗದ ಅದೇಶವನ್ನು ಎಂದೂ ಮೀರಿ ನಡೆದುಕೊಳ್ಳುವುದಿಲ್ಲ. ಅದಕ್ಕೆ ನಾವು ಡಿಜಿಟಲ್ ರ‍್ಯಾಲಿ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ. ಈ ರೀತಿ ಹಿಂದೆಯೂ ಸಹ ಮಾಡಿದ್ದೇವೆ. ನಮಗೆ ಜನರು ಸಹಕರಿಸುತ್ತಾರೆ ಎಂಬ ವಿಶ್ವಾಸವಿದೆ. ಸಾರ್ವಜನಿಕರು ಸರ್ಕಾರ ಹೇಳಿದ ರೀತಿ ಕೇಳುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಹೆಚ್ಚು ನೆಟ್‍ವರ್ಕ್ ಇಲ್ಲದೇ ಇರುವ ಏರಿಯಾಗಳನ್ನು ನಾವು ಸಂಪರ್ಕಿಸುತ್ತೇವೆ. ಚಿಕ್ಕ-ಚಿಕ್ಕ ಹಳ್ಳಿಗಳನ್ನು ನಾವು ಸಂಪರ್ಕಿಸುತ್ತೇವೆ. ಒಂದು ವೇಳೆ ನೆಟ್‍ವರ್ಕ್ ತೊಂದರೆಯಿಂದ ಚಿಕ್ಕ ಪ್ರದೇಶಗಳನ್ನು ಸಂಪರ್ಕಿಸಲು ಸಾಧ್ಯವಾಗದೆ ಇದ್ದರೆ ಅದಕ್ಕೆ ಬೇರೆ ಉಪಾಯವನ್ನು ಕಂಡುಕೊಳ್ಳುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಬಿಹಾರ ಸಿಎಂ ನಿತೀಶ್ ಕುಮಾರ್‌ಗೆ ಕೊರೊನಾ ಪಾಸಿಟಿವ್
ಉತ್ತರಾಖಂಡ ಕುರಿತು ಮಾತನಾಡಿದ ಅವರು, ಓಮಿಕ್ರಾನ್ ಸೋಂಕನ್ನು ಸುಲಭವಾಗಿ ತೆಗೆದುಕೊಳ್ಳಲು ಆಗುವುದಿಲ್ಲ. ಬದಲಾಗಿ ಅದಕ್ಕೆ ನಾವು ಸರಿಯಾದ ಕ್ರಮಗಳನ್ನು ತೆಗದುಕೊಳ್ಳಬೇಕು. ಇದೇ ಕಾರಣದಿಂದ ಕೇಂದ್ರ ಸರ್ಕಾರ ಇಂದಿನಿಂದ ಬೂಸ್ಟರ್ ಡೋಸ್ ಅನ್ನು ಜಾರಿ ಮಾಡಿದೆ. ನಮ್ಮ ಪ್ರಧಾನಿ ನರೇಂದ್ರ ಮೊದಿ ಆಡಳಿತದಲ್ಲಿ ಭಾರತದಲ್ಲಿರುವ ಎಲ್ಲ ಕಾರ್ಯಕರ್ತರು, ಉದ್ಯೋಗಿಗಳು, ಜನರು ಸುರಕ್ಷಿತವಾಗಿ ಇರುತ್ತಾರೆ ಎಂದು ಭರವಸೆಯನ್ನು ವ್ಯಕ್ತಪಡಿಸಿದರು.
ನವದೆಹಲಿ: ಮುಂಬರುವ ಉತ್ತರ ಪ್ರದೇಶ, ಪಂಜಾಬ್, ಗೋವಾ, ಮಣಿಪುರ ಮತ್ತು ಉತ್ತರಾಖಂಡ ವಿಧಾನಸಭಾ ಚುನಾವಣೆ ದಿನಾಂಕ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ.
ಕೇಂದ್ರ ಚುನಾವಣಾ ಆಯೋಗ ಶನಿವಾರ ಸುದ್ದಿಗೋಷ್ಠಿಯಲ್ಲಿ ಚುನಾವಣೆಯ ಮಾಹಿತಿ ನೀಡಿತು. ಪಂಚ ರಾಜ್ಯಗಳಿಗೆ 7 ಹಂತಗಳಲ್ಲಿ ಮತದಾನ ನಡೆಯಲಿದೆ. ಫೆಬ್ರವರಿ 10 ರಿಂದ ಮಾರ್ಚ್ 7ರ ವರೆಗೆ ವಿವಿಧ ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10ರಂದು ಫಲಿತಾಂಶ ಹೊರ ಬೀಳಲಿದೆ. ಇದನ್ನೂ ಓದಿ: BJP ಶಾಸಕ ಪಂಕಜ್ ಗುಪ್ತಗೆ ಕಪಾಳಮೋಕ್ಷ ಮಾಡಿದ ರೈತ
ಉತ್ತರ ಪ್ರದೇಶ
ರಾಜ್ಯದ ಒಟ್ಟು 403 ವಿಧಾನಸಭಾ ಕ್ಷೇತ್ರಗಳಿಗೆ 7 ಹಂತಗಳಲ್ಲಿ ಮತದಾನ ನಡೆಯಲಿದೆ. (ಫೆ.10ರಿಂದ ಮಾರ್ಚ್ 7)
ಪಂಜಾಬ್
ರಾಜ್ಯದ ಒಟ್ಟು 117 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. (ಫೆ.14)
ಗೋವಾ
ರಾಜ್ಯದ ಒಟ್ಟು 40 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. (ಫೆ.14)
ಮಣಿಪುರ
ರಾಜ್ಯದ ಒಟ್ಟು 60 ವಿಧಾನಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದೆ. (ಫೆ.27 ಮತ್ತು ಮಾ.3)
ಉತ್ತರಾಖಂಡ
ರಾಜ್ಯದ ಒಟ್ಟು 70 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. (ಫೆ.14)
7 ಹಂತಗಳಲ್ಲಿ ಮತದಾನ
ಮೊದಲ ಹಂತ – ಫೆ.10
ಎರಡನೇ ಹಂತ – ಫೆ.14
ಮೂರನೇ ಹಂತ – ಫೆ.20
ನಾಲ್ಕನೇ ಹಂತ – ಫೆ.23
ಐದನೇ ಹಂತ – ಫೆ.27
ಆರನೇ ಹಂತ – ಮಾ.3
ಏಳನೇ ಹಂತ – ಮಾ.7
ದೇಶದಲ್ಲಿ ಕೊರೊನಾ ಮೂರನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಹೊಸ ಕೋವಿಡ್ ನಿಯಮಾವಳಿಗಳು ಅನ್ವಯವಾಗಲಿವೆ. ಚುನಾವಣೆಯ ಬಹಿರಂಗ ಪ್ರಚಾರಗಳಿಗೆ ಬ್ರೇಕ್ ಬಿದ್ದಿದೆ. ಈ ಬಾರಿಯ ಚುನಾವಣಾ ಪ್ರಚಾರ ಡಿಜಿಟಲ್ ವೇದಿಕೆಗಳ ಮೂಲಕ ರಂಗೇರಲಿದೆ. ಬಹಿರಂಗ ರ‍್ಯಾಲಿ, ಸಭೆ-ಸಮಾರಂಭಗಳನ್ನು ನಡೆಸುವುದಿಲ್ಲ ಎಂದು ಈಗಾಗಲೇ ರಾಜಕೀಯ ಪಕ್ಷಗಳು ನಿರ್ಧರಿಸಿವೆ. ಇದನ್ನೂ ಓದಿ: ಸಶಸ್ತ್ರಪಡೆಗಳಲ್ಲಿ ಮಹಿಳೆಯರಿಗೆ ಅವಕಾಶ ಹೆಚ್ಚಿಸಲು ನೂರು ಸೈನಿಕ ಶಾಲೆಗಳ ಸ್ಥಾಪನೆ: ರಾಜನಾಥ್ ಸಿಂಗ್
ಐದು ರಾಜ್ಯಗಳನ್ನೂ ಒಳಗೊಂಡಂತೆ ಒಟ್ಟು 690 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಒಟ್ಟು 18.34 ಕೋಟಿ ಮತದಾರರಿದ್ದಾರೆ. ಈ ಪೈಕಿ 8.55 ಕೋಟಿ ಮಹಿಳಾ ಮತದಾರರು, 24.09 ಲಕ್ಷ ಹೊಸ ಮತದಾರರಿದ್ದಾರೆ. 2,15,368 ಮತಗಟ್ಟೆಗಳಿವೆ. ಇಂದಿನಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೊಳಿಸಲಾಗಿದೆ.
ಕಠಿಣ ಪರಿಸ್ಥಿತಿಯಲ್ಲೂ ಚುನಾವಣೆ ನಡೆಸುವುದು ನಮ್ಮ ಕರ್ತವ್ಯ. ಮುನ್ನೆಚ್ಚರಿಕೆ ನಿಯಮಗಳೊಂದಿಗೆ ಚುನಾವಣೆ ನಡೆಸಲು ತಿರ್ಮಾನಿಸಲಾಗಿದೆ. ಕೊವೀಡ್ ಸೇಫ್ ಎಲೆಕ್ಷನ್ ನಡೆಸಲಾಗುವುದು. ಹೆಚ್ಚು ಜನರು ಎಲೆಕ್ಷನ್‌ನಲ್ಲಿ ಭಾಗಿಯಾಗುವಂತೆ ಮಾಡಲಾಗುವುದು. ಈಗಾಗಲೇ ಸಾಕಷ್ಟು ಸಭೆಗಳನ್ನು ನಡೆಸಲಾಗಿದೆ. ಗೃಹ ಇಲಾಖೆ, ಆರೋಗ್ಯ ಇಲಾಖೆ, ರಾಜಕೀಯ ಪಕ್ಷಗಳ ಜೊತೆಗೆ ಸಭೆ ನಡೆಸಿದೆ. ರಾಜ್ಯ ಸರ್ಕಾರದ ಹಲವು ಅಧಿಕಾರಿಗಳ ಜೊತೆಗೆ ಸಭೆ ನಡೆದಿದೆ. ಅವರಿಂದ ಹಲವು ಸಲಹೆಗಳನ್ನು ಪಡೆಯಲಾಗಿದೆ ಎಂದು ಚುನಾವಣಾ ಆಯೋಗದ ಸುಶೀಲ್ ಚಂದ್ರ ತಿಳಿಸಿದ್ದಾರೆ. ಇದನ್ನೂ ಓದಿ: ನಿಗದಿತ ಸಮಯಕ್ಕೆ ಎಸ್‍ಎಸ್‍ಎಲ್‍ಸಿ, ಪಿಯುಸಿ ಪರೀಕ್ಷೆ: ಬಿ.ಸಿ.ನಾಗೇಶ್
ಎಲ್ಲ ಮತದಾನ ಕೇಂದ್ರಗಳಲ್ಲಿ ಎಲ್ಲ ರೀತಿಯ ಮೂಲ ಸೌಕರ್ಯಗಳಿಗೆ ಆದ್ಯತೆ ನೀಡಲಾಗುತ್ತಿದೆ. ಕೆಳ ಮಹಡಿಯಲ್ಲಿ ಮತದಾನ ಕೇಂದ್ರಗಳಿರಲಿವೆ. ಸ್ಯಾನಿಟೈಜರ್ ವ್ಯವಸ್ಥೆ ಮಾಡಲಾಗುವುದು. ಕೋವಿಡ್ ಸೋಂಕಿತರು ಅಂಚೆ ಮತದಾನ ಮಾಡಬಹುದು ಎಂದು ಮಾಹಿತಿ ನೀಡಿದ್ದಾರೆ.
ಚುನಾವಣಾ ರ‍್ಯಾಲಿ, ರೋಡ್ ಶೋ ಇಲ್ಲ
ಕೋವಿಡ್ ಮುಕ್ತ ಚುನಾವಣೆ ನಡೆಸುವ ಆಶಯ ವ್ಯಕ್ತಪಡಿಸಿರುವ ಚುನಾವಣಾ ಆಯೋಗವು, ಚುನಾವಣಾ ರ‍್ಯಾಲಿ, ರೋಡ್ ಶೋ, ಪಾದಯಾತ್ರೆ, ಪ್ರಚಾರ ಸಭೆಗಳಿಗೆ ನಿರ್ಬಂಧ ವಿಧಿಸಿದೆ. ನಾಮಪತ್ರ ಸಲ್ಲಿಕೆ ವೇಳೆಯೂ ಮೆರವಣಿಗೆ ನಡೆಸುವಂತಿಲ್ಲ ಎಂದು ಆಯೋಗ ಹೇಳಿದೆ.
ಡೆಹ್ರಾಡೂನ್: ಅಂಕಲ್ ಎಂದು ಕರೆದಿದ್ದಕ್ಕೆ 18 ವರ್ಷದ ಯುವತಿಗೆ 35 ವರ್ಷದ ಅಂಗಡಿ ಮಾಲೀಕನೊಬ್ಬ ಹಿಗ್ಗಾಮುಗ್ಗಾ ಥಳಿಸಿರುವ ಆಘಾತಕಾರಿ ಘಟನೆ ಉಧಮ್ ಸಿಂಗ್ ನಗರ ಜಿಲ್ಲೆಯ ಸಿತಾರ್‌ಗಂಜ್ ಪಟ್ಟಣದಲ್ಲಿ ಘಟನೆ ನಡೆದಿದೆ.
ಈ ಘಟನೆ ಮಂಗಳವಾರ ನಡೆದಿದ್ದು, ತಲೆಗೆ ತೀವ್ರವಾಗಿ ಗಾಯಗೊಂಡಿರುವ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಆರೋಪಿಯನ್ನು ಮೋಹಿತ್ ಕುಮಾರ್ ಎಂದು ಗುರುತಿಸಲಾಗಿದ್ದು, ಐಪಿಸಿ ಸೆಕ್ಷನ್ 354 ಮಹಿಳೆಯೊಬ್ಬಳು ತನ್ನ ನಮ್ರತೆಗೆ ಆಕ್ರೋಶ ವ್ಯಕ್ತಪಡಿಸಲು ಹಲ್ಲೆ, ಸೆಕ್ಷನ್ 323 ಸ್ವಯಂಪ್ರೇರಿತವಾಗಿ ನೋವುಂಟು ಮಾಡುವುದು ಮತ್ತು ಸೆಕ್ಷನ್ 506 ಕ್ರಿಮಿನಲ್ ಬೆದರಿಕೆ ಅಡಿಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: 29 ವರ್ಷದ ಬಳಿಕ ಪಾಕಿಸ್ತಾನದ ಜೈಲಿನಿಂದ ತಾಯಿನಾಡಿಗೆ ಕಾಲಿಟ್ಟ ಕುಲದೀಪ್ ಸಿಂಗ್
ಘಟನೆಯ ಕುರಿತಂತೆ ಪ್ರತಿಕ್ರಿಯಿಸಿದ ಎಸ್‍ಎಚ್‍ಒ, ಯುವತಿ ಡಿಸೆಂಬರ್ 19 ರಂದು ಬ್ಯಾಡ್ಮಿಂಟನ್ ರಾಕೆಟ್ ಖರೀದಿಸಿದ್ದಳು. ಮಂಗಳವಾರ ಅದನ್ನು ಬದಲಾಯಿಸಿಕೊಳ್ಳಲು ಹೋಗಿದ್ದಳು. ರಾಕೆಟ್ ನ ಕೆಲವು ತಂತಿಗಳು ಮುರಿದು ಹೋಗಿದ್ದವು. ಈ ವೇಳೆ ಅಂಗಡಿಯವನನ್ನು ಯುವತಿ ಅಂಕಲ್ ಎಂದು ಕರೆದಿದ್ದಾಳೆ. ಇಷ್ಟಕ್ಕೆ ರೊಚ್ಚಿಗೆದ್ದ ಮೋಹಿತ್ ಯುವತಿಗೆ ಅಮಾನುಷವಾಗಿ ಥಳಿಸಿದ್ದಾನೆ. ಇದೀಗ ಯುವತಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಲ್ಲದೇ ಈ ಘಟನೆ ಸಂಬಂಧ ಯುವತಿ ತಂದೆ ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬರೋಬ್ಬರಿ 10 ಕೋಟಿ ರೂ. ಮೌಲ್ಯದ ತಿಮಿಂಗಿಲ ವಾಂತಿ ವಶ
ಡೆಹ್ರಾಡೂನ್: ಭಾರತದ ವಿಕೆಟ್ ಕೀಪರ್ ಹಾಗೂ ಎಡಗೈ ಬ್ಯಾಟ್ಸ್‌ಮ್ಯಾನ್ ರಿಷಭ್ ಪಂತ್ ಉತ್ತರಾಖಂಡದ ಜನರಲ್ಲಿ ಕ್ರೀಡೆ ಮತ್ತು ಸಾಮಾನ್ಯ ಆರೋಗ್ಯವನ್ನು ಉತ್ತೇಜಿಸಲು ತಮ್ಮಿಂದಾಗುವ ಪ್ರೋತ್ಸಾಹವನ್ನು ನೀಡುತ್ತೇನೆ ಎಂದು ಪ್ರತಿಜ್ಞೆ ಮಾಡಿದ್ದಾರೆ.
ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಭಾನುವಾರ ಪಂತ್ ಅವರನ್ನು ರಾಜ್ಯದ ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿದ್ದಾರೆ. ಇದನ್ನೂ ಓದಿ: 8ನೇ ಆವೃತ್ತಿ ಪ್ರೊ ಕಬಡ್ಡಿಗೆ ಬೆಂಗಳೂರು ಸಜ್ಜು
ಉತ್ತರಾಖಂಡದ ಜನರು, ಜೀವನದ ವಿವಿಧ ಕ್ಷೇತ್ರಗಳಲ್ಲಿ ದೇಶವನ್ನು ಹೆಮ್ಮೆ ಪಡಿಸುವಂತಹ ಸಾಮರ್ಥ್ಯವನ್ನು ಹೊಂದಿದ್ದಾರೆ. ಕ್ರೀಡೆ ಮತ್ತು ಸಾಮಾನ್ಯ ಆರೋಗ್ಯವನ್ನು ಪ್ರೋತ್ಸಾಹಿಸಲು ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿದ ಪುಷ್ಕರ್ ಧಾಮಿ ಸರ್‌ಗೆ ಧನ್ಯವಾದಗಳು ಎಂದು ಟ್ವೀಟ್ ಮಾಡಿ ಸಂತೋಷ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಲಕ್ನೋ ತಂಡದ ಮೆಂಟರ್ ಆಗಿ ಗೌತಮ್ ಗಂಭೀರ್ ನೇಮಕ
Thank you @pushkardhami sir for giving me the opportunity to be the Brand Ambassador of promoting Sports and General Health among the people of Uttarakhand. I’ll do my best to spread this message and feeling happy that you are taking these steps towards a fitter India. https://t.co/xv17rs5bV0
ಪ್ರಸ್ತುತ ರಿಷಭ್ ಪಂತ್ ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್ನಲ್ಲಿದ್ದಾರೆ. ಡಿಸೆಂಬರ್ 26ರಂದು ಆರಂಭವಾಗಲಿರುವ ದಕ್ಷಿಣ ಆಫ್ರಿಕಾದ ಮೊದಲ ಟೆಸ್ಟ್ ಪಂದ್ಯಕ್ಕೆ ತಯಾರಿ ನಡೆಸುತ್ತಿದ್ದಾರೆ.
ಡೆಹ್ರಾಡೂನ್: ಉತ್ತರಾಖಂಡದ ಆರೋಗ್ಯ ಸಚಿವರ ಕಾರು ಅಪಘಾತಕ್ಕೀಡಾದ ಘಟನೆ ಮಂಗಳವಾರ ನಡೆದಿದೆ.
ಸಚಿವ ಧಾನ್ ಸಿಂಗ್ ರಾವತ್ ಅವರು ತಮ್ಮ ಸಿಬ್ಬಂದಿಯೊಂದಿಗೆ ತಲಿಸ್ಮಾನ್ ಪಟ್ಟಣದಿಂದ ಡೆಹ್ರಾಡೂನ್ ಗೆ ಮರಳುವಾಗ ಈ ದುರ್ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Uttarakhand Health Minister Dhan Singh Rawat received minor injuries after his car met with an accident while travelling from Thalisain to Dehradun. Details awaited. pic.twitter.com/2lNgM45inE
ಅಪಘಾತಕ್ಕೀಡಾದ ಕಾರುಗಳ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಫೋಟೋದಲ್ಲಿ ಸಚಿವರಿದ್ದ ಕಾರು ಪಲ್ಟಿಯಾಗಿದೆ. ನಿಂತಿದ್ದ ಇನ್ನೊಂದು ಕಾರಿಗೆ ಒರಗಿದಂತಿರುವುದನ್ನು ಕಾಣಬಹುದಾಗಿದೆ. ಇದನ್ನೂ ಓದಿ: ಪೂಂಚ್‍ನಲ್ಲಿ ಎನ್‍ಕೌಂಟರ್ – ಮೋಸ್ಟ್ ವಾಂಟೆಡ್ ಪಾಕ್ ಉಗ್ರ ಹತ್ಯೆ
ಘಟನೆಯಿಂದ ಸಚಿವರು ಭಾರೀ ಅವಘಡದಿಂದ ಪಾರಾಗಿದ್ದಾರೆ. ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಚಿವರ ಸಿಬ್ಬಂದಿಗೆ ಸ್ವಲ್ಪ ಮಟ್ಟಿನ ಗಾಯಗಳಾಗಿದ್ದು, ಅವರು ಕೂಡ ಚಿಕಿತ್ಸೆ ಪಡೆದುಕೊಂಡಿದ್ದಾರೆ.
Uttarakhand CM Pushkar Singh Dhami spoke with the state's health minister Dhan Singh Rawat, over the telephone, to inquire about his condition following his road accident in which he received minor injuries.
ಡೆಹ್ರಾಡೂನ್: ಉತ್ತರಖಾಂಡ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಅಧಿಕಾರಕ್ಕೆ ಬಂದರೆ, 18 ವರ್ಷ ಮೇಲ್ಪಟ್ಟ ಮಹಿಳೆಯರ ಬ್ಯಾಂಕ್ ಖಾತೆಯಲ್ಲಿ ಪ್ರತಿ ತಿಂಗಳು 1,000 ರೂ. ಠೇವಣಿ ಇರಲಿಸಲಾಗುವುದು ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.
ಉತ್ತರಾಖಂಡದ ಬಜೆಟ್ 55,000 ಕೋಟಿ ರೂಪಾಯಿ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗೆ ಶೇ. 60ರಿಂದ 80ರಷ್ಟು ಕಮಿಷನ್ ಪಡೆಯುತ್ತಾರೆಂದು ಹಲವರು ಹೇಳಿದ್ದಾರೆ. ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಒಂದು ವೇಳೆ ಶೇ. 20ರಷ್ಟು ಕಮಿಷನ್ ಪಡೆದರೂ, ಒಟ್ಟು ಬಜೆಟ್ ಮೊತ್ತದಲ್ಲಿ 11,000 ಕೋಟಿ ರೂಪಾಯಿ ರಾಜಕಾರಣಿಗಳ ಜೇಬು ಸೇರುತ್ತಿದೆ. ಅದನ್ನೆಲ್ಲ ಅವರು ಸ್ವಿಸ್ ಬ್ಯಾಂಕ್‌ನಲ್ಲಿ ಇಟ್ಟುಕೊಳ್ಳುತ್ತಿದ್ದಾರೆ ಎಂದು ಕೇಜ್ರಿವಾಲ್ ಗಂಭೀರ ಆರೋಪ ಮಾಡಿದ್ದಾರೆ.
ಉತ್ತರಾಖಂಡ ರಾಜ್ಯಕ್ಕೆ ಕೇಜ್ರಿವಾಲ್ ಅವರ 5ನೇ ಭೇಟಿ ಇದಾಗಿದೆ. ಈ ಹಿಂದಿನ ಭೇಟಿಗಳಲ್ಲೂ ಪ್ರತಿ ಮನೆಗೆ ಸದಸ್ಯರೊಬ್ಬರಿಗೆ ಸರ್ಕಾರಿ ಉದ್ಯೋಗ, ಆರು ತಿಂಗಳಿಗೊಮ್ಮೆ 1 ಲಕ್ಷ ಸರ್ಕಾರಿ ಉದ್ಯೋಗ ನೇಮಕಾತಿಗೆ ಅರ್ಜಿ ಆಹ್ವಾನ ಸೇರಿದಂತೆ ಹಲವು ಭರವಸೆಗಳನ್ನು ರಾಜ್ಯದ ಜನತೆಗೆ ನೀಡಿದ್ದಾರೆ.
ಡೆಹ್ರಾಡೂನ್: ಪ್ರವಾಸೋದ್ಯಮ ಕ್ಷೇತ್ರದ ಮೂರು ವಿಭಾಗಗಳಲ್ಲಿ ಉತ್ತರಾಖಂಡ ರಾಷ್ಟ್ರೀಯ ಮಟ್ಟದ ಪ್ರಶಸ್ತಿಗಳನ್ನು ಗೆದ್ದಿದೆ.
ಶುಕ್ರವಾರ ಪ್ರವಾಸೋದ್ಯಮ ಸಮೀಕ್ಷೆ ಮತ್ತು ಪ್ರಶಸ್ತಿಗಳನ್ನು ವಿತರಿಸುವ ಕಾರ್ಯಕ್ರಮವನ್ನು ನವದೆಹಲಿಯಲ್ಲಿ ಆಯೋಜಿಸಲಾಯಿತು. ಈ ವೇಳೆ 9 ವಿಭಾಗಗಳಲ್ಲಿ ಭಾರತದ ಅತ್ಯುತ್ತಮ ಪ್ರವಾಸಿ ತಾಣಗಳಿಗೆ ವಿವಿಧ ಪ್ರಶಸ್ತಿಗಳನ್ನು ನೀಡಲಾಯಿತು. ಈ ಪೈಕಿ ಉತ್ತರಾಖಂಡಕ್ಕೆ ಅತ್ಯುತ್ತಮ ವನ್ಯಜೀವಿ ತಾಣ, ಅತ್ಯುತ್ತಮ ಸಾಹಸ ತಾಣ ಮತ್ತು ಅತ್ಯುತ್ತಮ ಆಧ್ಯಾತ್ಮಿಕ ತಾಣಕ್ಕೆ ಅತ್ಯುತ್ತಮ ರಾಷ್ಟ್ರೀಯ ಪ್ರಶಸ್ತಿಯನ್ನು ಲಭಿಸಿದೆ. ಇದನ್ನೂ ಓದಿ: ಬಾಗಿದ ಯೋಗಾನರಸಿಂಹ ಸ್ವಾಮಿ ಗೋಪುರದ ಕಳಶ – ಆತಂಕದಲ್ಲಿ ಭಕ್ತರು
ಈ ಪ್ರಶಸ್ತಿಯನ್ನು ಕೇಂದ್ರ ಪ್ರವಾಸೋದ್ಯಮ ಸಚಿವ ಜಿ.ಕಿಶನ್ ರೆಡ್ಡಿ ಅವರು ಉತ್ತರಾಖಂಡದ ಪ್ರವಾಸೋದ್ಯಮ ಸಚಿವ ಸತ್ಪಾಲ್ ಮಹಾರಾಜ್ ಅವರಿಗೆ ನೀಡಿದರು. ಈ ಕುರಿತು ಕಾರ್ಯಕ್ರಮದಲ್ಲಿ ಮಾತನಾಡಿದ ರೆಡ್ಡಿ ಅವರು, ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ದೇಶೀಯ ಪ್ರವಾಸೋದ್ಯಮವನ್ನು ಉತ್ತೇಜಿಸಲು ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಗುರುತಿಸಿಕೊಳ್ಳಲು ಹಲವು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.
ಈ ವೇಳೆ ಪ್ರಶಸ್ತಿ ಸ್ವೀಕರಿಸಿದ ನಂತರ ಉತ್ತರಾಖಂಡದ ಪ್ರವಾಸೋದ್ಯಮ ಸಚಿವ ಮಹಾರಾಜ್ ಮಾತನಾಡಿದ್ದು, ಕೊರೊನಾದಿಂದ ಉತ್ತರಾಖಂಡ ಪ್ರವಾಸೋದ್ಯಮವು ಕ್ಷೇಮ ಪ್ರವಾಸೋದ್ಯಮ ಮತ್ತು ಆಯುಷ್ ಕ್ಷೇತ್ರದಲ್ಲಿ ಪ್ರಮುಖ ಕೇಂದ್ರವಾಗಿ ಹೊರಹೊಮ್ಮಿದೆ ಎಂದು ಖುಷಿಯನ್ನು ವ್ಯಕ್ತಪಡಿಸಿದರು.
ಉತ್ತರಾಖಂಡವು ತನ್ನ ನೈಸರ್ಗಿಕ ಸೌಂದರ್ಯದಿಂದ ಶತಮಾನಗಳಿಂದಲೂ ಭಾರತ ಮತ್ತು ವಿದೇಶಿ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ನಮ್ಮ ಉತ್ತರಾಖಂಡವು ಸಾಹಸ ಪ್ರವಾಸೋದ್ಯಮಕ್ಕೆ ಅಪಾರ ಸಾಮಥ್ರ್ಯವನ್ನು ಹೊಂದಿದೆ. ಈ ಪರಿಣಾಮ ಉತ್ತರಾಖಂಡ ಸಾಹಸ ಪ್ರಿಯರಿಗೆ ನೆಚ್ಚಿನ ಸ್ಥಳಗಳಲ್ಲಿ ಒಂದಾಗುತ್ತಿದೆ. ಸಾಹಸ ಕ್ರೀಡೆಗಳನ್ನು ಉತ್ತೇಜಿಸಲು ನಾವು ನಿರಂತರವಾಗಿ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಇತಿಹಾಸ ಬರೆದ ಪವರ್ ಸ್ಟಾರ್ ಪುಣ್ಯಸ್ಮರಣೆ- ದಾಖಲೆ ಪ್ರಮಾಣದಲ್ಲಿ ನೇತ್ರದಾನಕ್ಕೆ ಅರ್ಜಿ
ನಾವು ಹೆಚ್ಚು ಪರಿಸರ ಸ್ನೇಹಿ ಪ್ರವಾಸೋದ್ಯಮವನ್ನು ಉತ್ತೇಜಿಸುತ್ತೇವೆ. ನೌಕರರು ಮತ್ತು ಸ್ಥಳೀಯ ಸಮುದಾಯಗಳ ಅಭಿವೃದ್ಧಿಗೆ ಸರ್ಕಾರ ಯಾವಾಗಲೂ ಬದ್ಧವಾಗಿದೆ. ಅದರಲ್ಲಿಯೂ ಕೇದಾರನಾಥಕ್ಕೆ ಭೇಟಿ ನೀಡುವ ಭಕ್ತರಿಗೆ ಭವಿಷ್ಯದಲ್ಲಿ ಸೌಲಭ್ಯಗಳು ಸಿಗುವಂತೆ ಪ್ರಧಾನಿಗಳ ಮಾರ್ಗಸೂಚಿ ನೀಡಿದ್ದು, ಈ ಹಿನ್ನೆಲೆ ಕೇದಾರನಾಥದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುತ್ತಿದೆ ಎಂದರು.
2013ರ ಜಲಪ್ರಳಯದಲ್ಲಿ ಹಾನಿಗೀಡಾದ ಶಂಕರಾಚಾರ್ಯ ಸಮಾಧಿಯನ್ನು ಇದೀಗ ಪುನರ್ ನಿರ್ಮಾಣ ಮಾಡಲಾಗಿದೆ. ಪ್ರಧಾನಿ ಕಾರ್ಯಾಲಯದ ಸೂಚನೆಯ ಮೇರೆಗೆ ಮೈಸೂರಿನ ಖ್ಯಾತ ಶಿಲ್ಪ ಕಲಾವಿದ ಅರುಣ್ ಯೋಗಿರಾಜ್ ಈ ಪ್ರತಿಮೆಯನ್ನು ನಿರ್ಮಿಸಿದ್ದು, ಶಂಕರಾಚಾರ್ಯರ ಪುತ್ಥಳಿ 12 ಅಡಿ ಎತ್ತರವಿದ್ದು, ಕುಳಿತ ಭಂಗಿಯಲ್ಲಿದೆ. 35 ಟನ್ ತೂಕದ ಪುತ್ಥಳಿ ಕೆತ್ತಲು ಹೆಗ್ಗಡದೇವನಕೋಟೆಯಿಂದ ತರಲಾದ 120 ಟನ್‍ನ ಕೃಷ್ಣಶಿಲೆ ಬಳಸಲಾಗಿದೆ. ಇದನ್ನೂ ಓದಿ: ಬಿಹಾರ್: ನಕಲಿ ಮದ್ಯ ಸೇವಿಸಿ 24 ಮಂದಿ ಸಾವು!
Prime Minister Narendra Modi unveils the statue of Shri Adi Shankaracharya at Kedarnath in Uttarakhand pic.twitter.com/7yX0Ft7fOO
ಜೊತೆಗೆ ರೂ.400 ಕೋಟಿ ಮೌಲ್ಯದ ಕೇದಾರಪುರಿ ಮರು ನಿರ್ಮಾಣ ಯೋಜನಗಳು ಸೇರಿ ಇನ್ನಿತರ ಅಭಿವೃದ್ಧಿ ಯೋಜನೆಗಳಿಗೆ ಮೋದಿ ಅವರು ಚಾಲನೆ ನೀಡಲಿದ್ದಾರೆ. ಪುತ್ಥಳಿ ಅನಾವರಣದ ಕಾರ್ಯಕ್ರಮ 12 ಜ್ಯೋತಿರ್ಲಿಂಗಗಳು, 4 ಶಂಕರಾಚಾರ್ಯರ ಮಠಗಳು, ದೇಶದ ಇತರ ದೇವಾಲಯಗಳಲ್ಲಿ ನೇರ ಪ್ರಸಾರವಾಗಲಿದೆ. ಇದನ್ನೂ ಓದಿ: ಪುನೀತ್ ಸಾವಿನ ಬೆನ್ನಲ್ಲೇ ಹೆಚ್ಚಾಯ್ತು ಇಸಿಜಿ, ಹೃದಯಸಂಬಂಧಿ ಟೆಸ್ಟ್‌ಗಳು
Prime Minister Narendra Modi pays obeisance to Lord Shiva at Kedarnath temple in Uttarakhand pic.twitter.com/V9gIdrrgTo
ಕೇದಾರನಾಥದಲ್ಲಿಯೇ ಶಂಕರಾಚಾರ್ಯರು ದೇಹತ್ಯಾಗ ಮಾಡಿದರು ಎಂಬ ನಂಬಿಕೆ ಇದೆ. ಹೀಗಾಗಿ ಪ್ರಧಾನಿ ಮೋದಿ ಶಂಕರಾಚಾರ್ಯರ ಸಮಾಧಿ ಸ್ಥಳವನ್ನು ಭಕ್ತರ ದರ್ಶನಕ್ಕೆ ಅನಾವರಣಗೊಳಿಸಲಿದ್ದಾರೆ. ಈ ವೇಳೆ ಕೇಂದ್ರ ಸಚಿವರು, ಸಂಸದರು ಮತ್ತು ಬಿಜೆಪಿಯ ಹಿರಿಯ ನಾಯಕರು ದೇಶದ 100ಕ್ಕೂ ಹೆಚ್ಚು ಪವಿತ್ರ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದಾರೆ.