Tag: Uttarakhand

  • ಅಪಘಾತಕ್ಕೆ 13 ಬಲಿ – ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸಿದ ಮೋದಿ

    ಅಪಘಾತಕ್ಕೆ 13 ಬಲಿ – ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸಿದ ಮೋದಿ

    ಡೆಹ್ರಾಡೂನ್: ಉತ್ತರ ಖಂಡದ ಚಕ್ರತಾ ತಹಸಿಲ್ ಎಂಬಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಸುಮಾರು ಹದಿಮೂರು ಮಂದಿ ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ. ಈ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡುವ ಮೂಲಕ ಮೃತರಿಗೆ ಸಂತಾಪ ಸೂಚಿಸಿದ್ದಾರೆ.

    ಭಾನುವಾರ ಬೆಳಗ್ಗೆ ಚಕ್ರತಾದ ಬುಲ್ಹಾದ್-ಬೈಲಾ ರಸ್ತೆಯಲ್ಲಿ ಯುಟಿಲಿಟಿ ಬಸ್ ಕಮರಿಗೆ ಬಿದ್ದ ಪರಿಣಾಮ ಬಸ್ಸಿನಲ್ಲಿದ್ದ 13 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಅದರಲ್ಲಿಯೂ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ದೆಹಲಿಗೆ ಸಮೀಪವಿರುವ 14 ಜಿಲ್ಲೆಗಳಲ್ಲಿ ಪಟಾಕಿ ನಿಷೇಧಿಸಿದ ಹರಿಯಾಣ

    ಬೈಲದಿಂದ ವಿಕಾಸನಗರಕ್ಕೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದ್ದು, ಇದೀಗ ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ಸ್ಥಳಕ್ಕೆ ಆಗಮಿಸಿ, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಸದ್ಯ ಸಂತ್ರಸ್ತರ ಸಾವಿಗೆ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಇದನ್ನೂ ಓದಿ: ಬಾಲಿವುಡ್‌ ನಟಿ ಊರ್ಮಿಳಾ ಮಾತೋಂಡ್ಕರ್‌ಗೆ ಕೋವಿಡ್‌-19 ದೃಢ

    ಈ ಕುರಿತಂತೆ ಟ್ವಿಟ್ಟರ್‌ನಲ್ಲಿ ಮೋದಿ ಅವರು, ಉತ್ತರಾಖಂಡದ ಚಕ್ರತಾದಲ್ಲಿ ನಡೆದ ರಸ್ತೆ ಅಪಘಾತ ಅತ್ಯಂತ ದುಃಖಕರವಾಗಿದೆ ಸರ್ಕಾರ ಮತ್ತು ಸ್ಥಳೀಯ ಆಡಳಿತವು ಪರಿಹಾರ ಮತ್ತು ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ಈ ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಜೊತೆಗೆ ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಅಂತ ಟ್ವೀಟ್ ಮಾಡಿದ್ದಾರೆ.

  • ಪರ್ವತದ ನೀರು ಕುಡಿದು, ದೇವಾಲಯದ ಪ್ರಸಾದ ಸೇವಿಸಿ ಬದುಕುಳಿದೆವು: ಉತ್ತರಾಖಂಡ್ ಪ್ರವಾಹ ಭೀಕರತೆ ಬಿಚ್ಚಿಟ್ಟ ಕನ್ನಡಿಗರು

    ಪರ್ವತದ ನೀರು ಕುಡಿದು, ದೇವಾಲಯದ ಪ್ರಸಾದ ಸೇವಿಸಿ ಬದುಕುಳಿದೆವು: ಉತ್ತರಾಖಂಡ್ ಪ್ರವಾಹ ಭೀಕರತೆ ಬಿಚ್ಚಿಟ್ಟ ಕನ್ನಡಿಗರು

    ಬೆಂಗಳೂರು: ಉತ್ತರಾಖಂಡ್‍ನಲ್ಲಿ ಸಂಭವಿಸಿದ ಮೇಘ ಸ್ಫೋಟಕ್ಕೆ ನೂರಾರು ಮಂದಿ ಸಾವನ್ನಪ್ಪಿದ್ದಾರೆ. ಈ ನಡುವೆ ಅಲ್ಲಿ ಕರ್ನಾಟಕದವರು ಕೂಡ ಅಪಾಯದಲ್ಲಿದ್ದರು. ಅಲ್ಲಿಂದ ಇದೀಗ ಸುರಕ್ಷಿತವಾಗಿ ಬೆಂಗಳೂರಿಗೆ ಬಂದಿಳಿದ ಕನ್ನಡಿಗರು, ನಾವು ಪರ್ವತದ ನೀರು ಕುಡಿದು ದೇವಾಲಯದಲ್ಲಿ ಕೊಟ್ಟ ಪ್ರಸಾದವನ್ನು ಸೇವಿಸಿ ಬದುಕುಳಿದೆವು ಎಂದು ಉತ್ತರಾಖಂಡ್‍ನ ಪ್ರವಾಹ ಭೀಕರತೆಯನ್ನು ಬಿಚ್ಚಿಟ್ಟಿದ್ದಾರೆ.

    Uttarakhand Flood bengaluru kandigaru

    ಉತ್ತರಾಖಂಡ್‍ನ ಪ್ರವಾಹ ಪರಿಸ್ಥಿತಿಯಿಂದ ಪಾರಾಗಿ ಇದೀಗ ಬೆಂಗಳೂರಿಗೆ ಬಂದ 5 ಜನ ಕನ್ನಡಿಗರಿದ್ದ ಟೆಕ್ಕಿಗಳ ತಂಡ ಪಬ್ಲಿಕ್ ಟಿವಿ ಜೊತೆ ಅಲ್ಲಿನ ಪ್ರವಾಹ ಭೀಕರತೆಯ ಅನುಭವಗಳನ್ನು ಹಂಚಿಕೊಂಡಿದ್ದು, ನಮಗೆ ಅಲ್ಲಿನ ಒಂದೊಂದು ಅನುಭವವೂ ಮೈ ಜುಮ್ಮೆನ್ನಿಸುತ್ತದೆ. ಬದುಕಿ ಬಂದದ್ದೆ ಸಾಹಸ. ಎರಡು ದಿನ ಊಟವಿಲ್ಲ, ನೀರಿಲ್ಲ ಕಾರಿನಲ್ಲೇ ಐದು ಜನ ನಿದ್ದೆ ಮಾಡಿದ್ದೇವು. ಪರ್ವತದಿಂದ ಹರಿಯುತ್ತಿರುವ ನೀರು ಕುಡಿದು, ದೇವಾಲಯದಲ್ಲಿ ಕೊಟ್ಟ ಪ್ರಸಾದವನ್ನು ಸೇವಿಸಿ ಎರಡು ದಿನ ಹಗಲು, ರಾತ್ರಿ ಕಳೆದಿದ್ದೇವು. ಇದನ್ನೂ ಓದಿ: ಉತ್ತರಾಖಂಡ್ ಮೇಘ ಸ್ಫೋಟ – ಸಾವಿನ ಸಂಖ್ಯೆ 52ಕ್ಕೆ ಏರಿಕೆ 5 ಮಂದಿ ನಾಪತ್ತೆ

    60 ಕೀ.ಮೀ ಎತ್ತರದ ಗುಡ್ಡದಲ್ಲಿ ನಾವು ಸಿಲುಕಿಕೊಂಡಿದ್ದೇವು. ಕುಸಿದ ಗುಡ್ಡಗಳು, ಹಾಗೂ ರಸ್ತೆಗಳನ್ನು ದುರಸ್ತಿ ಮಾಡುತ್ತಲೇ ಜೆಸಿಬಿಗಳ ಮೂಲಕ ನಮ್ಮನ್ನು ರಕ್ಷಣೆ ಮಾಡಲಾಗಿದೆ. ನಾಮ್ಮ ತಂಡ ಅಕ್ಟೋಬರ್ 18 ರಂದು ಪಾತಾಳ ಭುವನೇಶ್ವರಿ ದೇವಾಲಯದ ದರ್ಶನಕ್ಕೆ ಹೋಗಿದ್ದೇವು. ನಂತರ ಬರುವಾಗ ಮಳೆ ಶುರುವಾಗಿತ್ತು. ರಸ್ತೆಯಲ್ಲಿ ಮೊದಲು ಕಲ್ಲುಗಳು ಬಿದ್ದಿತ್ತು. ಅದನ್ನು ಸರಿಸಿ ಬರುತ್ತಿದ್ದಂತೆ ಮುಂದೆ ನೂರಾರು ಕಡೆ ಗುಡ್ಡಕುಸಿತವಾಗಿತ್ತು. ನಾವು ಎರಡು ದಿನ ಗುಡ್ಡ ಕುಸಿತಗೊಂಡ ರಸ್ತೆ ಮಧ್ಯೆ ಸಿಲುಕಿದ್ದೇವು. ಬಳಿಕ ಕರ್ನಾಟಕ ರಾಜ್ಯ ಸರ್ಕಾರದ ಸಹಕಾರ ಮತ್ತು ದೇವರ ದಯೆಯಿಂದ ಸೇಫಾಗಿ ಬಂದಿದ್ದೇವೆ ಎಂದು ಸಾವಿನಂಚಿನಿಂದ ಪಾರಾಗಿ ಬಂದ ಕನ್ನಡಿಗರು ನೆನಪಿನ ಬುತ್ತಿ ಬಿಚ್ಚಿಟ್ಟಿದ್ದಾರೆ. ಇದನ್ನೂ ಓದಿ: ಉತ್ತರಾಖಂಡ್ ಮಳೆ- ಮೃತರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ ಘೋಷಿಸಿದ CM

  • ಉತ್ತರಾಖಂಡ್ ಮೇಘ ಸ್ಫೋಟ – ಸಾವಿನ ಸಂಖ್ಯೆ 52ಕ್ಕೆ ಏರಿಕೆ 5 ಮಂದಿ ನಾಪತ್ತೆ

    ಉತ್ತರಾಖಂಡ್ ಮೇಘ ಸ್ಫೋಟ – ಸಾವಿನ ಸಂಖ್ಯೆ 52ಕ್ಕೆ ಏರಿಕೆ 5 ಮಂದಿ ನಾಪತ್ತೆ

    ಡೆಹ್ರಾಡೂನ್: ಉತ್ತರಾಖಂಡ್‍ನಲ್ಲಿ ಭೀಕರ ಮೇಘ ಸ್ಫೋಟ ಸಂಭವಿಸಿದ ಪರಿಣಾಮ ಇದೀಗ ಸಾವಿನ ಸಂಖ್ಯೆ 52ಕ್ಕೆ ಏರಿಕೆ ಕಂಡಿದ್ದು, 5 ಮಂದಿ ನಾಪತ್ತೆಯಾಗಿದ್ದಾರೆ ಎಂದು ಉತ್ತರಾಖಂಡದ ಸರ್ಕಾರ  ಮಾಹಿತಿ ನೀಡಿದೆ.

    ಉತ್ತರಾಖಂಡ್‍ನಲ್ಲಿ ಭಾರೀ ಮಳೆಯಿಂದಾಗಿ ಹಲವು ಕಡೆ ಭೂಕುಸಿತ ಸಂಭವಿಸಿದೆ. ಪರಿಣಾಮ ಗ್ಯಾಂಗ್ಟಾಕ್ ಅನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 10 ಅನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಉತ್ತರಖಂಡದಿಂದ 90 ಕಿ.ಮೀ ದೂರವಿರುವ ಅಲ್ಮೋಡಾ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸುತ್ತಲೇ ಇದ್ದು, ಗುಡ್ಡಗಳ ನಡುವೆ ಸಿಲುಕಿಕೊಂಡಿರುವ ಪ್ರವಾಸಿಗರ ಮತ್ತು ಸ್ಥಳೀಯರ ರಕ್ಷಣಾ ಕಾರ್ಯ ಮುಂದುವರಿಯುತ್ತಿದೆ. ಉತ್ತರಾಖಂಡ್‍ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಉಧಮ್ ಸಿಂಗ್ ನಗರ ಮತ್ತು ಚಂಪಾವತ್ ಜಿಲ್ಲೆಗಳ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ದೇವಭೂಮಿ ಉತ್ತರಾಖಂಡ್‍ನಲ್ಲಿ ಮೇಘಸ್ಫೋಟ – 12 ಮಂದಿ ಸಾವು, 20 ಮಂದಿ ನಾಪತ್ತೆ

    ಉತ್ತರಾಖಂಡಕ್ಕೆ ಪ್ರವಾಸಕ್ಕೆ ತೆರಳಿದ ಪ್ರವಾಸಿಗರ ಸಂಖ್ಯೆ ಹೆಚ್ಚಿದೆ. ಕರ್ನಾಟಕದ ಪ್ರವಾಸಿಗರು ಕೂಡ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಲುಕಿಕೊಂಡಿದ್ದು, ನಿನ್ನೆ ಸಾಕಷ್ಟು ಪ್ರವಾಸಿಗರ ರಕ್ಷಣೆ ಮಾಡಲಾಗಿದೆ. ಕನ್ನಡಿಗರು ಸಿಲುಕಿಕೊಂಡಿರುವ ಪ್ರದೇಶದಲ್ಲಿ ಭಾರೀ ಅನಾಹುತ ನಡೆಯುತ್ತಿದ್ದು, ನೋಡ ನೋಡ್ತಿದ್ದಂತೆ ರಸ್ತೆಗಳು ಬಿರುಕು ಬಿಡಲಾರಂಭಿಸಿದೆ ಜೊತೆಗೆ ಗುಡ್ಡಗಳು ಕುಸಿಯುತ್ತಿವೆ. ಕರ್ನಾಟಕ ಸೇರಿದಂತೆ ಅನ್ಯ ರಾಜ್ಯಗಳ ಪ್ರವಾಸಿಗರು ಕೂಡ ಅಪಾಯದಲ್ಲಿದ್ದಾರೆ. ರಸ್ತೆ ಬಿರುಕುಬಿಟ್ಟ ಹಿನ್ನೆಲೆ, ಸಾಲು, ಸಾಲು ಕಾರುಗಳನ್ನು ಪ್ರವಾಸಿಗರು ನಿಲ್ಲಿಸಿಕೊಂಡಿದ್ದು, ಉತ್ತರಾಖಂಡ್‍ ಸರ್ಕಾರ ರಸ್ತೆ ದುರಸ್ತಿ ಮಾಡಿ ಪ್ರವಾಸಿಗರ ರಕ್ಷಣೆಗೆ ಮುಂದಾಗಿದೆ. ಗುಡ್ಡಗಳ ನಡುವೆ ಸಿಲುಕಿಕೊಂಡಿರುವ ಪ್ರವಾಸಿಗರ ರಕ್ಷಣೆಗಾಗಿ ತಾತ್ಕಾಲಿಕ ರಸ್ತೆ ಮಾರ್ಗ ಪ್ರಾರಂಭಿಸಲಾಗಿದ್ದು, ಉತ್ತರ ಪ್ರದೇಶ, ಸಿಕ್ಕಿಂ ಮತ್ತು ಬಂಗಾಳದಲ್ಲೂ ಭೀಕರ ಮಳೆಯಿಂದಾಗಿ ನೂರಾರು ಜನ ನಿರಾಶ್ರಿತರಾಗಿದ್ದಾರೆ. ಇದನ್ನೂ ಓದಿ: ಉತ್ತರಾಖಂಡ್ ಮಳೆ- ಮೃತರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ ಘೋಷಿಸಿದ CM

  • ಉತ್ತರಾಖಂಡ್ ಮಳೆ- ಮೃತರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ ಘೋಷಿಸಿದ CM

    ಉತ್ತರಾಖಂಡ್ ಮಳೆ- ಮೃತರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ ಘೋಷಿಸಿದ CM

    ಡೆಹ್ರಾಡೂನ್: ವರುಣನ ಆರ್ಭಟಕ್ಕೆ ಉತ್ತರಾಖಂಡ್ ನಲುಗಿ ಹೋಗಿದೆ. ಈ ಪ್ರವಾಹದಲ್ಲಿ ಸಾವನ್ನಪ್ಪಿದ ಕುಟುಂಬ ಹಾಗೂ ಮನೆಕಳೆದುಕೊಂಡವರಿಗೆ ಪರಿಹಾರ ನೀಡುವುದಾಗಿ ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಘೋಷಣೆ ಮಾಡಿದ್ದಾರೆ.

    2-3 ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಉತ್ತರಾಖಂಡ್ ದಲ್ಲಿ ಪ್ರವಾಹ ಉಂಟಾಗಿದೆ. ಪ್ರವಾಹದಿಂದ ಸಾವನ್ನಪ್ಪಿದವರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ ಹಾಗೂ ಮನೆ ಕಳೆದುಕೊಂಡವರಿಗೆ 1.9 ಲಕ್ಷ ರೂ. ಪರಿಹಾರ ನೀಡುವುದಾಗಿ ಉತ್ತರಾಖಂಡ್ ಸಿಎಂ ಪುಷ್ಕರ್ ಸಿಂಗ್ ಧಾಮಿ ಘೋಷಣೆ ಮಾಡಿದ್ದಾರೆ. ಜಾನುವಾರು ಕಳೆದುಕೊಂಡವರಿಗೆ ಅಗತ್ಯ ನೆರವು ಭರವಸೆಯನ್ನೂ ರಾಜ್ಯ ಸರ್ಕಾರ ನೀಡಿದೆ. ಇದನ್ನೂ ಓದಿ:  ಭಾರೀ ಮಳೆಗೆ ಕೊಚ್ಚಿ ಹೋದ ಉತ್ತರಾಖಂಡ್ ರೈಲು ಹಳಿ

    ಪ್ರವಾಹದಿಂದ ಮುಳುಗಡೆಯಾಗಿರುವ ಸ್ಥಳಗಳಿಗೆ ಸಿಎಂ ಪುಷ್ಕರ್ ಸಿಂಗ್ ಧಾಮಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಮೃತರ ಕುಟುಂಬಕ್ಕೆ ಉತ್ತರಾಖಂಡ್ ಸರ್ಕಾರ ಪರಿಹಾರ ನೀಡುವುದಾಗಿ ಹೇಳಿದೆ. ಇದನ್ನೂ ಓದಿ: ದೇವಭೂಮಿ ಉತ್ತರಾಖಂಡ್‍ನಲ್ಲಿ ಮೇಘಸ್ಫೋಟ – 12 ಮಂದಿ ಸಾವು, 20 ಮಂದಿ ನಾಪತ್ತೆ

    ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥವಾಗಿದೆ. ಸಾವಿನ ಸಂಖ್ಯೆ 34ಕ್ಕೆ ಏರಿಕೆಯಾಗಿದೆ. ಪ್ರವಾಹ ಮತ್ತು ಭೂಕುಸಿತದಲ್ಲಿ 5 ಜನರು ನಾಪತ್ತೆಯಾಗಿದ್ದಾರೆ. ಪ್ರಸಿದ್ಧ ಪ್ರವಾಸಿ ಸ್ಥಳವಾಗಿರುವ ನೈನಿತಾಲ್‍ನಲ್ಲಿ ಇಂದು ಮುಂಜಾನೆಯಿಂದ ಸಾಲು ಸಾಲಾಗಿ ಭೂಕುಸಿತವಾಗುತ್ತಿರುವುದರಿಂದ ರಸ್ತೆ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಉತ್ತರಾಖಂಡ ರಾಜ್ಯದ ಉಳಿದ ಭಾಗಕ್ಕೂ ರಸ್ತೆಸಂಪರ್ಕ ಕಡಿತವಾಗಿದೆ. ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಲ್ಲಿ ಸಿಲುಕಿರುವವರನ್ನು ರಕ್ಷಿಸಲು ಮೂರು ಹೆಲಿಕಾಪ್ಟರ್ ಬಳಕೆ ಮಾಡಲಾಗುತ್ತಿದೆ. ಇದನ್ನೂ ಓದಿ: ನಟಿ ಶ್ರೀಲೀಲಾ ನನ್ನ ಮಗಳಲ್ಲ – ವಿವಾದಾತ್ಮಕ ಹೇಳಿಕೆ ಕೊಟ್ಟ ಉದ್ಯಮಿ

  • ಭಾರೀ ಮಳೆಗೆ ಕೊಚ್ಚಿ ಹೋದ ಉತ್ತರಾಖಂಡ್ ರೈಲು ಹಳಿ

    ಭಾರೀ ಮಳೆಗೆ ಕೊಚ್ಚಿ ಹೋದ ಉತ್ತರಾಖಂಡ್ ರೈಲು ಹಳಿ

    ಡೆಹ್ರಾಡೂನ್: ವರುಣ ಆರ್ಭಟ ಉತ್ತರಾಖಂಡ್‍ನಲ್ಲಿ ಮುಂದುವರೆದಿದ್ದು, ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ರಣರಕ್ಕಸ ಮಳೆಗೆ ಉತ್ತರಾಖಂಡ್ ನಲುಗಿ ಹೋಗಿದೆ.

    Nainital

    ಬಿಟ್ಟು ಬಿಡದೇ ಸುರಿಯುತ್ತೀರುವ ಮಳೆಯಿಂದ ಜನಜೀವನ ಅಸ್ತವ್ಯಸ್ಥಗೊಂಡಿದೆ. ಮಳೆಯಾರ ಬಿಡುವಿಲ್ಲದ ನರ್ತನಕ್ಕೆ ನದಿಗಳು ಉಕ್ಕಿ ಹರಿಯುತ್ತಿವೆ . ಇದರಿಂದಾಗಿ ನೆರೆ ಪೀಡಿತ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿ ದಿಕ್ಕು ತಪ್ಪಿದ ದೋಣಿಯಂತಾಗಿದೆ. ಹಲವರು ಪ್ರಾಣವನ್ನು ಕಳೆದುಕೊಂಡಿದ್ದಾರೆ. ಇದನ್ನೂ ಓದಿ: ನಟಿ ಶ್ರೀಲೀಲಾ ನನ್ನ ಮಗಳಲ್ಲ – ವಿವಾದಾತ್ಮಕ ಹೇಳಿಕೆ ಕೊಟ್ಟ ಉದ್ಯಮಿ

    ಪ್ರವಾಸಿಗ ನೆಚ್ಚಿನ ತಾಣವಾಗಿರುವ ನೈನಿತಾಲ್‍ನಲ್ಲಿ ಜಲ ಆರ್ಭಟಕ್ಕೆ ರೈಲು ಹಳಿ ಸಂಪೂರ್ಣವಾಗಿ ಕೊಚ್ಚಿ ಹೋಗಿದೆ. ನೈನಿತಾಲ್‍ನಿಂದಕಥ್‍ಗೋಡಂ ಪ್ರದೇಶವನ್ನು ಸಂಪರ್ಕಿಸುವ ರೈಲು ಮಾರ್ಗದ ಕೆಳಗಿನ ಮಣ್ಣು ಬೀಕರ ಮಳೆಗೆ ಕುಸಿದಿದೆ. ಈ ಪರಿಣಾಮವಾಗಿ ರೈಲು ಹಳಿ ಕೊಚ್ಚಿಕೊಂಡು ಹೋಗಿ ರೈಲು ಸಂಚಾರ ಸಂಪೂರ್ಣ ಬಂದ್ ಆಗಿದೆ. ಸದ್ಯ ಉತ್ತರಾಖಂಡ್ ಸರ್ಕಾರ ಮುಂಜಾಗೃತ ಕ್ರಮವಾಗಿ ಶಾಲಾ ಕಾಲೇಜುಗಳನ್ನ ಬಂದ್ ಮಾಡಿದೆ. ಪ್ರವಾಹ ಪೀಡಿತ ಸ್ಥಳಗಳಲ್ಲಿ ಎನ್‍ಡಿಆರ್‍ಎಫ್ ತಂಡ ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದೆ.ಇದನ್ನೂ ಓದಿ: ದೇವಭೂಮಿ ಉತ್ತರಾಖಂಡ್‍ನಲ್ಲಿ ಮೇಘಸ್ಫೋಟ – 12 ಮಂದಿ ಸಾವು, 20 ಮಂದಿ ನಾಪತ್ತೆ

    Nainital

    ನೀರಿನ ಮಟ್ಟ ನಿರಂತರವಾಗಿ ಹೆಚ್ಚುತ್ತಲೆ ಇದೆ ಮತ್ತು ನದಿಯ ನೀರು ಮಾಲ್ ರಸ್ತೆ, ತಾಲಿಟಾಲ್ ಬಸ್ ನಿಲ್ದಾಣದ ಮೂಲಕ ಭೋವಾಲಿ ಮತ್ತು ಹಲ್ದ್ವಾನಿ ರಸ್ತೆಯ ಕಡೆಗೆ ಹಾದು ಹೋಗುತ್ತಿದೆ. ಇನ್ನೂ ಕೆಲವು ದಿನಗಳ ಕಾಲ ಉತ್ತರಾಖಂಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಉತ್ತರಾಖಂಡದಲ್ಲಿ ರೆಡ್ ಅಲರ್ಟ್ ಘೋಷಿಸಿದೆ ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ನಿಲ್ಲದ ಪುಂಡರ ಕುಚೇಷ್ಟೆ – ಕಾರಿನಲ್ಲಿ ಹೋಗ್ತಿದ್ದ ದಂಪತಿಗೆ ಅಡ್ಡಗಟ್ಟಿ ಧಮ್ಕಿ

  • ದೇವಭೂಮಿ ಉತ್ತರಾಖಂಡ್‍ನಲ್ಲಿ ಮೇಘಸ್ಫೋಟ – 12 ಮಂದಿ ಸಾವು, 20 ಮಂದಿ ನಾಪತ್ತೆ

    ದೇವಭೂಮಿ ಉತ್ತರಾಖಂಡ್‍ನಲ್ಲಿ ಮೇಘಸ್ಫೋಟ – 12 ಮಂದಿ ಸಾವು, 20 ಮಂದಿ ನಾಪತ್ತೆ

    ಡೆಹ್ರಾಡೂನ್: ಕೇರಳದಲ್ಲಿ ಇದೀಗ ಮಳೆ ಕಡಿಮೆಯಾಗುತ್ತಿದ್ದಂತೆಯೇ, ಇತ್ತ ದೇವಭೂಮಿ ಉತ್ತರಾಖಂಡ್‍ನಲ್ಲಿ ಪ್ರವಾಹ ಸೃಷ್ಟಿ ಆಗಿದೆ.

    Nainital

    ನೈನಿತಾಲ್ ಜಿಲ್ಲೆಯ ರಾಮಘರ್‍ನಲ್ಲಿ ಮೇಘಸ್ಫೋಟ ಸಂಭವಿಸಿದ್ದು 12 ಮಂದಿ ಸಾವನ್ನಪ್ಪಿದ್ದಾರೆ. 20ಕ್ಕೂ ಹೆಚ್ಚು ಮಂದಿ ಕಾಣೆಯಾಗಿದ್ದಾರೆ. ಕಳೆದ 40 ಗಂಟೆಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಂದಾಗಿ ನೈನಿತಾಲ್ ನದಿಯ ನೀರಿನ ಮಟ್ಟ ತುಂಬಿ ಹುಕ್ಕಿ ಹರಿಯುತ್ತಿದ್ದು, ನೈನಿತಾಲ್ ಜಿಲ್ಲೆಯ ರಸ್ತೆಗಳು ಜಲಾವೃತಗೊಂಡಿದೆ. ಈ ಪ್ರದೇಶದಲ್ಲಿರುವ ಕಟ್ಟಡ ಹಾಗೂ ಮನೆಯೆಲ್ಲವೂ ನೀರಿನಲ್ಲಿ ಮುಳುಗಿಹೋಗಿದೆ. ಇದನ್ನೂ ಓದಿ: ಮರ್ಯಾದಾ ಹತ್ಯೆ – ಮಗಳು ಪ್ರೀತಿಸಿ ವಿವಾಹವಾಗಿದ್ದಕ್ಕೆ ಇಡೀ ಕುಟುಂಬವನ್ನೇ ಜೀವಂತ ಸುಟ್ಟ ತಂದೆ

    Nainital

    ಕೋಸಿ, ದೌಲಾ ನದಿ ಉಕ್ಕಿ ಹರಿಯುತ್ತಿದೆ. ಮೇಘಸ್ಫೋಟದಿಂದ ಉಂಟಾಗಿರುವ ಪ್ರವಾಹಕ್ಕೆ 12 ಮನೆಗಳು ಕೊಚ್ಚಿಕೊಂಡು ಹೋಗಿವೆ. ಜಿಮ್ ಕಾರ್ಬೆಟ್ ರಾಷ್ಟ್ರೀಯ ಉದ್ಯಾನವನ ರಸ್ತೆಯಲ್ಲಿರುವ ಹೋಟೆಲ್ ಗಳಿಗೆ ನೀರು ನುಗ್ಗಿದ್ದು ಪ್ರವಾಸಿಗಳು ಪರದಾಡುತ್ತಿದ್ದಾರೆ. ರೆಸಾರ್ಟ್‍ನಲ್ಲಿ 100ಕ್ಕೂ ಹೆಚ್ಚು ಪ್ರವಾಸಿಗರು ಸಿಲುಕಿದ್ದು ವಾಹನಗಳು ಮುಳುಗಡೆ ಆಗಿವೆ. ನಿರ್ಮಾಣ ಹಂತದ ಸೇತುವೆಯೊಂದು ಕೊಚ್ಚಿಕೊಂಡು ಹೋಗಿದೆ. ಗೋಲ್ಪಾರ್‍ ನಲ್ಲಿ ಸೇತುವೆ ಬದಿ ಕೊಚ್ಚಿ ಹೋಗಿದ್ದು ಸಂಚಾರ ಸ್ಥಗಿತಗೊಳಿಸಲಾಗಿದೆ. ಇದನ್ನೂ ಓದಿ: ಕಾಲಿನಿಂದ ತಲೆವರೆಗೂ ಬೊಮ್ಮಾಯಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ: ರಣದೀಪ್ ಸಿಂಗ್ ಸುರ್ಜೇವಾಲಾ

    Nainital

    ನದಿಯ ನಾಲ್ಕು ಗೇಟ್‍ಗಳಿಂದ ನೀರನ್ನು ಹೊರಬಿಟ್ಟಿದ್ದರೂ, ನೀರಿನ ಮಟ್ಟ ನಿರಂತರವಾಗಿ ಹೆಚ್ಚುತ್ತಲೆ ಇದೆ ಮತ್ತು ನದಿಯ ನೀರು ಮಾಲ್ ರಸ್ತೆ, ತಾಲಿಟಾಲ್ ಬಸ್ ನಿಲ್ದಾಣದ ಮೂಲಕ ಭೋವಾಲಿ ಮತ್ತು ಹಲ್ದ್ವಾನಿ ರಸ್ತೆಯ ಕಡೆಗೆ ಹಾದು ಹೋಗುತ್ತಿದೆ. ಇನ್ನೂ ಕೆಲವು ದಿನಗಳ ಕಾಲ ಉತ್ತರಾಖಂಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಉತ್ತರಾಖಂಡದಲ್ಲಿ ರೆಡ್ ಅಲರ್ಟ್ ಘೋಷಿಸಿದೆ.

  • ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಗೊಂಡ ಸಚಿವ ಯಶಪಾಲ್ ಆರ್ಯ, ಶಾಸಕ ಸಂಜೀವ್ ಆರ್ಯ

    ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಗೊಂಡ ಸಚಿವ ಯಶಪಾಲ್ ಆರ್ಯ, ಶಾಸಕ ಸಂಜೀವ್ ಆರ್ಯ

    ಡೆಹ್ರಾಡೂನ್: ಉತ್ತರಾಖಂಡದ ಸಾರಿಗೆ ಸಚಿವರಾಗಿದ್ದ ಬಿಜೆಪಿ ನಾಯಕ ಯಶಪಾಲ್ ಆರ್ಯ ಹಾಗೂ ಅವರ ಪುತ್ರ ಸಂಜೀವ್ ಆರ್ಯ ಸೋಮವಾರ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ.

    ಯಶಪಾಲ್ ಆರ್ಯ ಅವರು ಉತ್ತರಾಖಂಡದ ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿದ್ದರೆ, ಅವರ ಮಗ ಸಂಜೀವ್ ನೈನಿತಾಲ್ ಶಾಸಕರಾಗಿದ್ದರು. ದೆಹಲಿ ಕಾಂಗ್ರೆಸ್ ಪಕ್ಷದ ನಾಯಕರಾದ ಹರೀಶ್ ರಾವತ್, ರಣದೀಪ್ ಸುರ್ಜೇವಾಲಾ ಮತ್ತು ಕೆಸಿ ವೇಣುಗೋಪಾಲ್ ಅವರ ಸಮ್ಮುಖದಲಿ ಯಶಪಾಲ್ ಆರ್ಯ ಹಾಗೂ ಸಂಜೀವ್ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಇದನ್ನೂ ಓದಿ: ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ – ಇನ್ನೆರಡು ದಿನ ಜೈಲೇ ಗತಿ

    ಭಾರತೀಯ ಜನತಾ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ನಂತರ ಯಶ್‍ಪಾಲ್ ಅವರನ್ನು ಕಾಂಗ್ರೆಸ್‍ಗೆ ಸೇರಿಸಿಕೊಳ್ಳಲಾಯಿತು. ಅವರು ಉತ್ತರಾಖಂಡದ ಕ್ಯಾಬಿನೆಟ್ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ರಣದೀಪ್ ಸುರ್ಜೆವಾಲ್ ತಿಳಿಸಿದ್ದಾರೆ. ಇದನ್ನೂ ಓದಿ: ಅರಣ್ಯ ಪ್ರದೇಶಕ್ಕೆ ಎಳೆದೊಯ್ದು 55ರ ಮಹಿಳೆ ಮೇಲೆ ಗ್ಯಾಂಗ್ ರೇಪ್

    ಇದೇ ವೇಳೆ ಕೆ.ಸಿ ವೇಣು ಗೋಪಾಲ್ ಅವರು ಈ ಮುನ್ನ 2007 ರಿಂದ 2014ರವರೆಗೆ ಪಿಸಿಸಿ ಮುಖ್ಯಸ್ಥರಾಗಿದ್ದ ಯಶಪಾಲ್ ಆರ್ಯ ನಮ್ಮ ಮನೆಗೆ ಆಗಮಿಸುತ್ತಿದ್ದಾರೆ ಎಂದು ನುಡಿದಿದ್ದಾರೆ.

  • ಏಷ್ಯಾದ ಹಳೆಯ ರಾಷ್ಟ್ರೀಯ ಉದ್ಯಾನವನಕ್ಕೆ ರಾಮಗಂಗಾ ಹೆಸರಿಡುವಂತೆ ಒತ್ತಾಯ

    ಏಷ್ಯಾದ ಹಳೆಯ ರಾಷ್ಟ್ರೀಯ ಉದ್ಯಾನವನಕ್ಕೆ ರಾಮಗಂಗಾ ಹೆಸರಿಡುವಂತೆ ಒತ್ತಾಯ

    ಡೆಹ್ರಾಡೂನ್: ಉತ್ತರಾಖಂಡದ ವಿಶ್ವವಿಖ್ಯಾತ ಹುಲಿ ಸಂರಕ್ಷಿತ ಪ್ರದೇಶವಾದ ಎಡ್ವರ್ಡ್ ಜಿಮ್ ಕಾರ್ಬೆಟ್ ರಾಷ್ಟ್ರೀಯ ಉದ್ಯಾನವನಕ್ಕೆ ರಾಮಗಂಗಾ ರಾಷ್ಟ್ರೀಯ ಉದ್ಯಾನವನ ಎಂದು ಮರು ನಾಮಕರಣ ಮಾಡುವಂತೆ ಕೇಂದ್ರ ಅರಣ್ಯ ಮತ್ತು ಪರಿಸರ ಖಾತೆ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಒತ್ತಾಯಿಸಿದ್ದಾರೆ.

    ಅಶ್ವಿನಿ ಕುಮಾರ್ ಚೌಬೆ ಅವರು ಏಷ್ಯಾದ ಅತ್ಯಂತ ಹಳೆಯ ರಾಷ್ಟ್ರೀಯ ಉದ್ಯಾನವನದ ಹೆಸರನ್ನು ಬದಲಾವಣೆಗೊಳಿಸುತ್ತಿರುವ ಬಗ್ಗೆ ಸುಳಿವು ನೀಡಿದ್ದು, ಈ ಉದ್ಯಾನವನ ಸುಮಾರು 521 ಚದರ ಕಿಲೋಮೀಟರ್‍ಗಳಷ್ಟು ವ್ಯಾಪಿಸಿದೆ. ಇದನ್ನು 1930 ರಲ್ಲಿ ಹೈಲಿ ರಾಷ್ಟ್ರೀಯ ಉದ್ಯಾನವನ ಎಂಬ ಹೆಸರಲ್ಲಿ ಸ್ಥಾಪಿಸಲಾಯಿತು. 1952 ರಲ್ಲಿ ಉದ್ಯಾನವನ್ನು ರಾಮಗಂಗಾ ರಾಷ್ಟ್ರೀಯ ಉದ್ಯಾನವನ ಎಂದು ಮರುನಾಮಕರಣ ಮಾಡಲಾಯಿತು. ಆದರೆ, 1956 ರಲ್ಲಿ ಇದನ್ನು ಎಡ್ವರ್ಡ್ ಜಿಮ್ ಕಾರ್ಬೆಟ್ ಅವರ ಹೆಸರನ್ನಿಡಲಾಯಿತು. ಇದನ್ನೂ ಓದಿ:  ಶಾರೂಖ್ ಮಗನ ಅರೆಸ್ಟ್ ಹಿಂದೆ ಬಿಜೆಪಿ ಉಪಾಧ್ಯಕ್ಷ – NCB ಅಧಿಕಾರಿಗಳಿಂದ್ಲೇ ಪಿತೂರಿ ಆರೋಪ

    jim corbett national park

    ಆದರೀಗಾ ಮತ್ತೆ ಈ ಉದ್ಯಾನವನಕ್ಕೆ ರಾಮಗಂಗಾ ಹೆಸರಿಡುತ್ತಿರುವುದರ ಬಗ್ಗೆ ಅಶ್ವಿನಿ ಕುಮಾರ್ ಚೌಬೆ ತಿಳಿಸಿದ್ದಾರೆ. ಇತ್ತೀಚಿಗೆ ಉದ್ಯಾನವನ ಪ್ರವಾಸದ ಮ್ಯೂಸಿಯಂ ಅತಿಥಿ ಪುಸ್ತಕದಲ್ಲಿ ಎಡ್ವರ್ಡ್ ಜಿಮ್ ಕಾರ್ಬೆಟ್ ರಾಷ್ಟ್ರೀಯ ಉದ್ಯಾನವನದ ಹೆಸರನ್ನು ರಾಮಗಂಗಾ ರಾಷ್ಟ್ರೀಯ ಉದ್ಯಾನವನ ಎಂದು ಬದಲಾಯಿಸಬೇಕು ಎಂದು ಬರೆದಿದ್ದಾರೆ. ಇದನ್ನೂ ಓದಿ:  ಪಾಕಿಸ್ತಾನದಲ್ಲಿ ಭೂಕಂಪ – 20 ಮಂದಿ ಸಾವು

    ಈ ಕುರಿತಂತೆ ರಾಷ್ಟ್ರೀಯ ಉದ್ಯಾನವನದ ನಿರ್ದೇಶಕ ರಾಹುಲ್ ಬುಧವಾರ ಹೇಳಿಕೆ ನೀಡಿದ್ದು, ಈ ಉದ್ಯಾನವನದ ಹೆಸರನ್ನು ಮೊದಲು ಕರೆಯುತ್ತಿದ್ದಂತೆ ರಾಮಗಂಗಾ ರಾಷ್ಟ್ರೀಯ ಉದ್ಯಾನ ಎಂದು ಮರುಸ್ಥಾಪಿಸಬೇಕು ಎಂದು ರಾಜ್ಯ ಸಚಿವಾಲಯ ಹೇಳಿದೆ. ಇದನ್ನೂ ಓದಿ:  ಕೊರೊನಾ ನಡುವೆ ಸಾವಿರಾರು ಬೆಂಬಲಿಗರೊಂದಿಗೆ ಎಂಎಲ್‍ಸಿ ಅದ್ದೂರಿ ಹುಟ್ಟುಹಬ್ಬ

    ಸದ್ಯ ಈ ವಿಚಾರವಾಗಿ ವನ್ಯಜೀವಿ ಪ್ರೇಮಿಗಳು ಅಸಮಾಧಾನ ವ್ಯಕ್ತಪಡಿಸಿದ್ದು, ವನ್ಯಜೀವಿ ಪ್ರೇಮಿ ಪ್ರಕಾಶ್ ಕಿಮೋತಿ, ನಾವು ಹೆಸರನ್ನು ಬದಲಾಯಿಸುವುದಕ್ಕಿಂತ ನಮ್ಮ ಪರಂಪರೆಯನ್ನು ಉಳಿಸಿಕೊಳ್ಳುವತ್ತ ಹೆಚ್ಚು ಗಮನ ಹರಿಸಬೇಕು ಎಂದು ತಿಳಿಸಿದ್ದಾರೆ.

  • ಡೆಹ್ರಾಡೂನ್-ಹೃಷಿಕೇಶ್ ಹೆದ್ದಾರಿಯಲ್ಲಿ ಮುರಿದು ಬಿದ್ದ ಸೇತುವೆ- ಜನಜೀವನ ಅಸ್ತವ್ಯಸ್ತ

    ಡೆಹ್ರಾಡೂನ್-ಹೃಷಿಕೇಶ್ ಹೆದ್ದಾರಿಯಲ್ಲಿ ಮುರಿದು ಬಿದ್ದ ಸೇತುವೆ- ಜನಜೀವನ ಅಸ್ತವ್ಯಸ್ತ

    ಡೆಹ್ರಾಡೂನ್: ಕಳೆದ ಮೂರು ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಲವೆಡೆ ಭೂಕುಸಿತವುಂಟಾಗಿದ್ದು, ಹೃಷಿಕೇಶ್-ದೇವಪ್ರಯಾಗ್, ಹೃಷಿಕೇಶ್-ತೆಹ್ರಿ ಮತ್ತು ಡೆಹ್ರಾಡೂನ್-ಮಸ್ಸೂರಿ ರಸ್ತೆಗಳನ್ನು ಮುಚ್ಚಲಾಗಿದೆ.

    ಡೆಹ್ರಾಡೂನ್-ರಿಷಿಕೇಶ್ ರಸ್ತೆಯ ರಾಣಿ ಪೋಖರಿಯಲ್ಲಿ ಜಖಾನ್ ನದಿಯ ಮೇಲಿನ ಸೇತುವೆಯ ಒಂದು ಭಾಗವು ಭಾರೀ ಮಳೆ ಮತ್ತು ಬಲವಾದ ಪ್ರವಾಹದಿಂದಾಗಿ ಕುಸಿದಿದೆ. ಡೆಹ್ರಾಡೂನ್ ಹೃಷಿಕೇಶ್ ಹೆದ್ದಾರಿಯಲ್ಲಿ ರಾಣಿ ಪೋಖರಿ ಸೇತುವೆ ಕುಸಿದಿದ್ದು ಕಾರುಗಳು ಕೊಚ್ಚಿಕೊಂಡು ಹೋಗಿವೆ. ಸಾರ್ವಜನಿಕರು ದಯವಿಟ್ಟು ಮೇಲಿನ ಮಾರ್ಗವನ್ನು ಬಳಸಬೇಡಿ ಮತ್ತು ಇತರ ಪರ್ಯಾಯ ಮಾರ್ಗಗಳನ್ನು ಬಳಸಿ ಎಂದು ಉತ್ತರಾಖಂಡ್ ಪೊಲೀಸರು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಹೊಲಗಳು ಮರಳು ಆಗಲು ಬಿಡುವುದಿಲ್ಲ: ರಾಹುಲ್ ಗಾಂಧಿ

    ಮಾಲ್ದೇವತಾ-ಸಹಸ್ರಧಾರ ಲಿಂಕ್ ರಸ್ತೆಯು ಡೆಹ್ರಾಡೂನ್‍ನಲ್ಲಿ ನಿರಂತರ ಮಳೆಯಿಂದಾಗಿ ಜಲಾವೃತವಾಗಿದೆ. ಭಾರತ ಹವಾಮಾನ ಇಲಾಖೆ (ಐಎಂಡಿ) ಉತ್ತರಾಖಂಡದಲ್ಲಿ ಆಗಸ್ಟ್ 29 ರವರೆಗೆ ಭಾರೀ ಮಳೆ ಮುಂದುವರಿಯುವ ಸೂಚನೆಯನ್ನು ನೀಡಿದೆ. ಹವಾಮಾನ ಸಹಜ ಸ್ಥಿತಿಗೆ ಬರುವವರೆಗೆ ಈ ಪ್ರದೇಶಗಳಲ್ಲಿ ಓಡಾಡುವುದು ಬೇಡ ಎಂದು ಪೊಲೀಸರು ಪ್ರಯಾಣಿಕರಿಗೆ ಸೂಚಿಸಿದ್ದಾರೆ.ಭಾರೀ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 58 ತಪೋವನದಿಂದ ಮಲೆತಾಗೆ ತೆರಳುವ ಪ್ರದೇಶದ ರಸ್ತೆಯನ್ನು ಮುಚ್ಚಲಾಗಿದೆ.

  • ಕಾಲಿಗೆ ಮಾಸ್ಕ್ ಸಿಕ್ಕಿಸಿಕೊಂಡು ಟ್ರೋಲ್ ಆದ ಸಚಿವ

    ಕಾಲಿಗೆ ಮಾಸ್ಕ್ ಸಿಕ್ಕಿಸಿಕೊಂಡು ಟ್ರೋಲ್ ಆದ ಸಚಿವ

    ಡೆಹ್ರಾಡೂನ್: ಮುಖಕ್ಕೆ ಹಾಕಿಕೊಳ್ಳಬೇಕಾದ ಮಾಸ್ಕ್ ಅನ್ನು ಕಾಲಿನ ಬೆರಳಿಗೆ ಸಿಕ್ಕಿಸಿಕೊಂಡು ಕುಳಿತ ಉತ್ತರಾಖಂಡದ ಸಚಿವರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗಿದ್ದಾರೆ.

    ಉತ್ತರಾಖಂಡದ ಸಚಿವ ಸ್ವಾಮಿ ಯತೀಶ್ವರಾನಂದ ಸಭೆಯಲ್ಲಿ ಸೋಫಾ ಮೇಲೆ ಕಾಲಿನ ಮೇಲೆ ಕಾಲು ಹಾಕಿ ಕುಳಿತಿರುವ ಫೋಟೋವೊಂದು ವೈರಲ್ ಆಗಿದ್ದು, ತಮ್ಮ ಕಾಲಿ ಬೆರಳಿನಲ್ಲಿ ಮಾಸ್ಕ್ ಸಿಕ್ಕಿಸಿಕೊಂಡು ಕುಳಿತಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಕಾಲ ಬೆರಳಲ್ಲಿ ಜೋತಾಡುತ್ತಿರುವ ಮಾಸ್ಕ್ ನೋಡಿದ ನೆಟ್ಟಿಗರು ಸಿಟ್ಟಾಗಿದ್ದಾರೆ. ಉತ್ತರಾಖಂಡ ಸರ್ಕಾರದ ಸಚಿವರೇ ಕೊರೊನಾ ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂದು ವಿರೋಧಪಕ್ಷದ ನಾಯಕರು ಕೂಡ ಟೀಕಿಸಿದ್ದಾರೆ. ಇದನ್ನೂ ಓದಿ:  ಕುಟುಂಬದಲ್ಲಿ ಆದ ಗೊಂದಲ ಬಗೆಹರಿದಿದೆ: ಮೇಘಾ ಶೆಟ್ಟಿ

    ಉತ್ತರಾಖಂಡದ ಬಿಜೆಪಿ ಸರ್ಕಾರದ ಕಬ್ಬು ಕಾರ್ಖಾನೆ ಸಚಿವ ಸ್ವಾಮಿ ಯತೀಶ್ವರಾನಂದ ಈ ರೀತಿ ಟ್ರೋಲ್ ಆದವರು. ಬಿಜೆಪಿ ಪಕ್ಷದ ನಾಯಕರು ಸಭೆ ನಡೆಸುತ್ತಿರುವ ಈ ಫೋಟೋದಲ್ಲಿ ಯಾರೊಬ್ಬರೂ ಮಾಸ್ಕ್ ಧರಿಸಿಲ್ಲ. ಉತ್ತರಾಖಂಡದ ಇನ್ನಿಬ್ಬರು ಸಚಿವರಾದ ಬಿಶನ್ ಸಿಂಗ್ ಚುಪಾಲ್ ಮತ್ತು ಸುಭೋದ್ ಉನಿಯಲ್ ಕೂಡ ಈ ಸಭೆಯಲ್ಲಿ ಭಾಗವಹಿಸಿದ್ದು, ಯಾರೂ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ, ಮಾಸ್ಕ್ ಧರಿಸದಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಅನೇಕರು ಟೀಕೆ ಮಾಡಿದ್ದಾರೆ.