Tag: Uttarakhand

  • ಉತ್ತರಕಾಶಿಯಲ್ಲಿ ಭೀಕರ ಮೇಘಸ್ಫೋಟ – ಜಲಪ್ರಳಯಕ್ಕೆ ಕೊಚ್ಚಿ ಹೋದ ಗ್ರಾಮ

    ಉತ್ತರಕಾಶಿಯಲ್ಲಿ ಭೀಕರ ಮೇಘಸ್ಫೋಟ – ಜಲಪ್ರಳಯಕ್ಕೆ ಕೊಚ್ಚಿ ಹೋದ ಗ್ರಾಮ

    – 60ಕ್ಕೂ ಹೆಚ್ಚು ಮಂದಿ ಕೊಚ್ಚಿಹೋಗಿರುವ ಶಂಕೆ

    ಡೆಹ್ರಾಡೂನ್: ಉತ್ತರಾಖಂಡದ (Uttarakhand) ಉತ್ತರಕಾಶಿಯಲ್ಲಿ (Uttarkashi) ಭೀಕರ ಮೇಘಸ್ಫೋಟ (Cloudburst) ಸಂಭವಿಸಿದ್ದು, ಹಠಾತ್ ಪ್ರವಾಹಕ್ಕೆ ಧರಾಲಿ (Dharali) ಗ್ರಾಮ ಕೊಚ್ಚಿ ಹೋಗಿದೆ.

    ಖೀರ್ ಗಂಗಾ ರೌದ್ರಾವತಾರಕ್ಕೆ ಇಡೀ ಊರಿಗೇ ಊರೇ ಸರ್ವನಾಶವಾಗಿದ್ದು, 60ಕ್ಕೂ ಹೆಚ್ಚು ಮಂದಿ ಜಲಪ್ರಳಯದಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಇದನ್ನೂ ಓದಿ: ಎಲ್.ಕೆ ಅಡ್ವಾಣಿ ಹಿಂದಿಕ್ಕಿ ದೀರ್ಘಾವಧಿಯ ಗೃಹ ಸಚಿವರಾಗಿ ಸೇವೆ ಸಲ್ಲಿಸಿದ ಅಮಿತ್ ಶಾ

    ಬೆಟ್ಟದ ಮೇಲಿನಿಂದ ಏಕಾಏಕಿ ನದಿಯಂತೆ ನೀರು ಹರಿದು ಬಂದು ಇಡೀ ಗ್ರಾಮವನ್ನೇ ಕೊಚ್ಚಿಕೊಂಡು ಹೋಗಿದೆ. ಪ್ರವಾಹದಲ್ಲಿ ಅನೇಕ ಮನೆಗಳು ಸರ್ವನಾಶವಾಗಿದ್ದು, ವಾಹನಗಳು ಹಾಗೂ ಅಂಗಡಿಗಳು ಸಹ ಧ್ವಂಸವಾಗಿದೆ. ಈ ಭೀಕರ ಪ್ರವಾಹದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಎದೆ ಝಲ್ ಎನ್ನಿಸುವಂತಿದೆ. ಏಕಾಏಕಿ ಜಲಪ್ರಳಯ ಉಂಟಾದ ಪರಿಣಾಮ ಜನರು ಕಿರುಚಾಡುತ್ತಿರುವುದು ವೀಡಿಯೋದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿಧನ

    ಸದ್ಯ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ದುರಂತದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಮೇಘಸ್ಫೋಟದಲ್ಲಿ ದೊಡ್ಡಮಟ್ಟದ ಹಾನಿಯಾಗಿರುವ ಮಾಹಿತಿ ಇದೆ. ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ಪುಷ್ಕರ್ ಸಿಂಗ್ ಧಾಮಿ ತಿಳಿಸಿದ್ದಾರೆ. ಇದನ್ನೂ ಓದಿ: ಟ್ರಂಪ್ ಸುಂಕ ಬೆದರಿಕೆ ನಡ್ವೆ ಅಮೆರಿಕಕ್ಕೆ ತಿವಿದ ಇಂಡಿಯನ್ ಆರ್ಮಿ – ಪಾಕ್‌ಗೆ ಶಸ್ತ್ರಾಸ್ತ್ರ ಪೂರೈಕೆ ಬಗ್ಗೆ 1971ರ ಪೇಪರ್ ಕಟಿಂಗ್‌ ಪೋಸ್ಟ್

  • ಉತ್ತರಾಖಂಡದ ಚಮೋಲಿಯಲ್ಲಿ ಭೂಕುಸಿತ – ಹೈಡೆಲ್ ಪ್ರಾಜೆಕ್ಟ್ ಸೈಟ್‌ನಲ್ಲಿದ್ದ 12 ಕಾರ್ಮಿಕರಿಗೆ ಗಾಯ

    ಉತ್ತರಾಖಂಡದ ಚಮೋಲಿಯಲ್ಲಿ ಭೂಕುಸಿತ – ಹೈಡೆಲ್ ಪ್ರಾಜೆಕ್ಟ್ ಸೈಟ್‌ನಲ್ಲಿದ್ದ 12 ಕಾರ್ಮಿಕರಿಗೆ ಗಾಯ

    ಡೆಹ್ರಾಡೂನ್: ಉತ್ತರಾಖಂಡದ (Uttarakhand) ಚಮೋಲಿ (Chamoli) ಜಿಲ್ಲೆಯ ಹೆಲಾಂಗ್ (Helang) ಬಳಿಯ ಟಿಹೆಚ್‌ಡಿಸಿಯ (THDC) ವಿಷ್ಣುಗಡ್ ಜಲವಿದ್ಯುತ್ ಯೋಜನಾ ಸ್ಥಳದಲ್ಲಿ (Vinshnugad Hydro-Electricity Project) ಶನಿವಾರ ಭೂಕುಸಿತ ಸಂಭವಿಸಿದ ಪರಿಣಾಮ ಹನ್ನೆರಡು ಕಾರ್ಮಿಕರು ಗಾಯಗೊಂಡಿದ್ದಾರೆ.

    ಭೂಕುಸಿತ ಉಂಟಾದ ವೇಳೆ ಸ್ಥಳದಲ್ಲಿ ಸುಮಾರು 300 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಸಂದೀಪ್ ತಿವಾರಿ ಹೇಳಿದ್ದಾರೆ. ಘಟನೆಯಲ್ಲಿ ಎಂಟು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಮಲಯಾಳಂ ನಟ ಕಲಾಭವನ್ ನವಾಸ್ ಹೋಟೆಲ್ ರೂಮ್‌ನಲ್ಲಿ ಶವವಾಗಿ ಪತ್ತೆ – ಹೃದಯಾಘಾತ ಶಂಕೆ

    ಗಾಯಗೊಂಡ ಎಲ್ಲಾ ಕಾರ್ಮಿಕರನ್ನು ಪಿಪಲ್ಕೋಟಿಯ ವಿವೇಕಾನಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಭೂಕುಸಿತ ಸಂಭವಿಸಿದ ಸ್ಥಳದಲ್ಲಿ ಸುಮಾರು 70 ಕಾರ್ಮಿಕರು ಇದ್ದರು. ಯೋಜನಾ ಸ್ಥಳದಲ್ಲಿ ಸದ್ಯಕ್ಕೆ ಕೆಲಸವನ್ನು ಸ್ಥಗಿತಗೊಳಿಸಲಾಗಿದೆ ಎಂದು ಸಂದೀಪ್ ತಿವಾರಿ ತಿಳಿಸಿದ್ದಾರೆ. ಇದನ್ನೂ ಓದಿ: ತೇಜಸ್ವಿ ಯಾದವ್ ಆರೋಪ ಸುಳ್ಳು – ಕರಡು ಮತದಾರರ ಪಟ್ಟಿಯಲ್ಲಿ ಹೆಸರಿದೆ: ಚುನಾವಣಾ ಆಯೋಗ ಸ್ಪಷ್ಟನೆ

    ಭೂಕುಸಿತದ ಬಗ್ಗೆ ಮಾಹಿತಿ ತಿಳಿದ ತಕ್ಷಣವೇ ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ, ಪೊಲೀಸ್ ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಹೋರಾಟಕ್ಕೆ ಟಕ್ಕರ್ – ಆ.5ರಂದು ಗಾಂಧಿ ಪ್ರತಿಮೆ ಬಳಿ ಬಿಜೆಪಿಯೂ ಪ್ರತಿಭಟನೆ: ಬಿವೈವಿ

  • ಕೇದಾರನಾಥ ಮಾರ್ಗದಲ್ಲಿ ಭೂಕುಸಿತ – ಸಿಲುಕಿಕೊಂಡಿದ್ದ 800 ಯಾತ್ರಿಕರ ರಕ್ಷಣೆ

    ಕೇದಾರನಾಥ ಮಾರ್ಗದಲ್ಲಿ ಭೂಕುಸಿತ – ಸಿಲುಕಿಕೊಂಡಿದ್ದ 800 ಯಾತ್ರಿಕರ ರಕ್ಷಣೆ

    ಡೆಹ್ರಾಡೂನ್: ಕೇದಾರನಾಥ (Kedarnath) ಮಾರ್ಗದಲ್ಲಿ ಭಾರೀ ಮಳೆಯಿಂದಾಗಿ ಉಂಟಾದ ಭೂಕುಸಿತದಲ್ಲಿ (Landslide) ಸಿಲುಕಿಕೊಂಡಿದ್ದ ಸುಮಾರು 800 ಯಾತ್ರಿಕರನ್ನು ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಮತ್ತು ಪೊಲೀಸ್ ತಂಡಗಳು ರಕ್ಷಿಸಿವೆ.

    ಕೇದಾರನಾಥ ಯಾತ್ರಾ ಮಾರ್ಗದಲ್ಲಿ ಭಾರೀ ಮಳೆಯಿಂದಾಗಿ (Heavy Rain) ರುದ್ರಪ್ರಯಾಗ-ಕೇದಾರನಾಥ ಸಂಪರ್ಕಿಸುವ 107ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿದೆ. ಪರಿಣಾಮ ಗೌರಿಕುಂಡ್‌ನಿಂದ ಸೋನ್‌ಪ್ರಯಾಗ್‌ಗೆ ಸಂಪರ್ಕಿಸುವ ಪ್ರಮುಖ ರಸ್ತೆಯ 50 ಮೀ. ಭಾಗವು ಸಂಪೂರ್ಣವಾಗಿ ಕೊಚ್ಚಿಕೊಂಡು ಹೋಗಿದೆ.ಇದನ್ನೂ ಓದಿ: ಮುಡಾ ಹಗರಣ ನಿವೃತ್ತ ನ್ಯಾ. ಪಿ.ಎನ್.ದೇಸಾಯಿ ಆಯೋಗದ ವರದಿ ಸಲ್ಲಿಕೆ

    ರುದ್ರಪ್ರಯಾಗ ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ಎನ್.ಕೆ.ರಾಜ್‌ವಾರ್ ಅವರ ಮಾಹಿತಿ ಪ್ರಕಾರ, ಗೌರಿಕುಂಡ್‌ನಿಂದ ಸುಮಾರು 1.5 ಕಿಮೀ ದೂರದಲ್ಲಿರುವ ಮುಂಕಟಿಯಾ ಸ್ಲೈಡಿಂಗ್ ಝೋನ್ ಬಳಿ ಭೂಕುಸಿತ ಸಂಭವಿಸಿದೆ. ಈ ವೇಳೆ ಸಾವಿರಾರು ಯಾತ್ರಿಕರು ಸಿಲುಕಿಕೊಂಡಿದ್ದರು. ಕೂಡಲೇ ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ತಂಡದ ಸಿಬ್ಬಂದಿ ಕಾರ್ಯಪ್ರವೃತ್ತರಾಗಿ, ಯಾತ್ರಿಕರನ್ನು ಸುರಕ್ಷಿತವಾಗಿ ಸೋನ್‌ಪ್ರಯಾಗ್‌ಗೆ ಸ್ಥಳಾಂತರಿಸಿದರು. ಭೂಕುಸಿತದಿಂದಾಗಿ ಕೇದಾರನಾಥ ಯಾತ್ರೆಯು ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು, ರಸ್ತೆಯನ್ನು ಸರಿಪಡಿಸಲು ಕನಿಷ್ಠ 2-3 ದಿನಗಳು ಬೇಕಾಗಬಹುದು ಎಂದು ತಿಳಿಸಿದ್ದಾರೆ.

    ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ (ಎಸ್‌ಇಒಸಿ) ಪ್ರಕಾರ, ಮಳೆಯಿಂದಾಗಿ ಉತ್ತರಾಖಂಡದಾದ್ಯಂತ ಮೂರು ರಾಷ್ಟ್ರೀಯ ಹೆದ್ದಾರಿಗಳು ಸೇರಿ ಒಟ್ಟು 94 ರಸ್ತೆಗಳು ಬಂದ್ ಆಗಿವೆ. ಸದ್ಯ ಎಸ್‌ಡಿಆರ್‌ಎಫ್ ಪರ್ಯಾಯ ಮಾರ್ಗದ ಮೂಲಕ ಯಾತ್ರಿಕರ ಸಂಚಾರವನ್ನು ಸುಗಮಗೊಳಿಸುತ್ತಿದೆ. ಈ ಋತುವಿನಲ್ಲಿ ಇದುವರೆಗೆ 14.4 ಲಕ್ಷಕ್ಕೂ ಅಧಿಕ ಕೇದಾರನಾಥ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಜು.29ರಂದು ಒಂದೇ ದಿನದಲ್ಲಿ 2,253 ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ, ದರ್ಶನ ಪಡೆದಿದ್ದಾರೆ ಎಂದು ಮಾಹಿತಿ ನೀಡಿದೆ.

    ಮಳೆಗಾಲದಲ್ಲಿ ಸಾಮಾನ್ಯವಾಗಿ ಈ ಪ್ರದೇಶದಲ್ಲಿ ಆಗಾಗ್ಗೆ ಭೂಕುಸಿತ ಮತ್ತು ಇತರ ನೈಸರ್ಗಿಕ ವಿಪತ್ತುಗಳು ಸಂಭವಿಸುತ್ತವೆ. ಇದರಿಂದಾಗಿ ಯಾತ್ರಾ ಮಾರ್ಗಗಳಲ್ಲಿ ಸಮಸ್ಯೆ ಉಂಟಾಗುತ್ತದೆ. ಆದರೆ, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಮತ್ತು ಸ್ಥಳೀಯ ಪೊಲೀಸ್ ತಂಡಗಳ ಸಮನ್ವಯದ ಕಾರ್ಯಾಚರಣೆಯಿಂದ ಯಾತ್ರಿಕರ ಸುರಕ್ಷತೆಯನ್ನು ಖಾತ್ರಿಪಡಿಸಿಕೊಳ್ಳಲಾಗಿದೆ.ಇದನ್ನೂ ಓದಿ:ಸಚಿವ ಕೆ.ಎನ್.ರಾಜಣ್ಣಗೆ ಹನಿಟ್ರ್ಯಾಪ್ ಯತ್ನದಲ್ಲಿ ಹುರುಳಿಲ್ಲ – ಐಜಿಪಿಗೆ ಸಿಐಡಿ ವರದಿ

  • ಹರಿದ್ವಾರ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ – 6 ಭಕ್ತರು ಸಾವು

    ಹರಿದ್ವಾರ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ – 6 ಭಕ್ತರು ಸಾವು

    ಡೆಹ್ರಾಡೂನ್: ಹರಿದ್ವಾರದ (Haridwar) ಮಾನಸ ದೇವಿ ದೇವಸ್ಥಾನದಲ್ಲಿ (Mansa Devi Temple) ಕಾಲ್ತುಳಿತ (Stampede) ಸಂಭವಿಸಿದ ಪರಿಣಾಮ 6 ಮಂದಿ ಭಕ್ತರು ಸಾವನ್ನಪ್ಪಿದ್ದಾರೆ.

    ದೇವಸ್ಥಾನಕ್ಕೆ ಹೋಗುವ ಮೆಟ್ಟಿಲುಗಳ ಮೇಲೆ ಭಾರೀ ಜನಸಂದಣಿಯಿಂದ ಕಾಲ್ತುಳಿತ ಉಂಟಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಘಟನೆಯಲ್ಲಿ ಹಲವು ಭಕ್ತರು ಗಾಯಗೊಂಡಿದ್ದಾರೆ. ಇನ್ನೂ ಹಲವರು ಅಸ್ವಸ್ಥಗೊಂಡಿದ್ದಾರೆ.

    ಗಾಯಾಳು ಭಕ್ತರನ್ನು ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಗರ್ವಾಲ್ ವಿಭಾಗದ ಆಯುಕ್ತ ವಿನಯ್ ಶಂಕರ್ ಪಾಂಡೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಚಿನ್ನದಂಗಡಿ ದರೋಡೆ ಕೇಸ್‌ – ಟಾಯ್‌ ಗನ್ ತೋರಿಸಿ ಚಿನ್ನ ರಾಬರಿ

  • ಉತ್ತರಾಖಂಡ | 150 ಅಡಿ ಆಳದ ಕಂದಕಕ್ಕೆ ಬಿದ್ದ ಬೊಲೆರೋ – 8 ಮಂದಿ ದುರ್ಮರಣ, ಐವರು ಗಂಭೀರ

    ಉತ್ತರಾಖಂಡ | 150 ಅಡಿ ಆಳದ ಕಂದಕಕ್ಕೆ ಬಿದ್ದ ಬೊಲೆರೋ – 8 ಮಂದಿ ದುರ್ಮರಣ, ಐವರು ಗಂಭೀರ

    ಡೆಹ್ರಾಡೂನ್: ಬೊಲೆರೋ ವಾಹನವೊಂದು 150 ಮೀಟರ್ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 8 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಐವರು ಗಂಭೀರ ಗಾಯಗೊಂಡ ಘಟನೆ ಉತ್ತರಾಖಂಡದ (Uttarakhand) ಪಿಥೋರಗಢ ( Pithoragarh) ಜಿಲ್ಲೆಯ ಸುನಿ ಸೇತುವೆ (Suni Bridge) ಬಳಿ ನಡೆದಿದೆ.

    13 ಪ್ರಯಾಣಿಕರಿದ್ದ ಬೊಲೆರೋ ವಾಹನವು ಸುತಿ ಸೇತುವೆ ಕಂದಕಕ್ಕೆ ಉರುಳಿದೆ. ಅಪಘಾತದ ಭೀಕರತೆಗೆ ಬೊಲೆರೋ ಸಂಪೂರ್ಣ ನಜ್ಜುಗುಜ್ಜಾಗಿದ್ದು, 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ರಕ್ಷಣಾ ತಂಡಗಳು ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಇದನ್ನೂ ಓದಿ: ಗಂಡನನ್ನು ಕೊಲ್ಲದಿದ್ರೆ ಆತ್ಮಹತ್ಯೆ ಮಾಡ್ಕೋತಿನಿ – ಪ್ರಿಯಕರನನ್ನು ಬ್ಲ್ಯಾಕ್‍ಮೇಲ್ ಮಾಡಿ ಕೊಲೆ ಮಾಡಿಸಿದ್ದ ಲೇಡಿ ಅಂದರ್

    ಅಪಘಾತದಲ್ಲಿ ಮೃತಪಟ್ಟವರಿಗೆ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಸಂತಾಪ ಸೂಚಿಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಅಲ್ಲದೇ ಮೃತರ ಗುರುತು ಸಹ ಪತ್ತೆಯಾಗಿಲ್ಲ. ಈ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

  • ಉತ್ತರಾಖಂಡ ಸರ್ಕಾರದಿಂದ ‘ಆಪರೇಷನ್ ಕಾಲನೇಮಿ’ ಕಾರ್ಯಾಚರಣೆ – 82 ನಕಲಿ ಬಾಬಾಗಳ ಬಂಧನ

    ಉತ್ತರಾಖಂಡ ಸರ್ಕಾರದಿಂದ ‘ಆಪರೇಷನ್ ಕಾಲನೇಮಿ’ ಕಾರ್ಯಾಚರಣೆ – 82 ನಕಲಿ ಬಾಬಾಗಳ ಬಂಧನ

    ಡೆಹ್ರಾಡೂನ್: ಧಾರ್ಮಿಕ ಕ್ಷೇತ್ರಗಳಲ್ಲಿ ನಕಲಿ ಬಾಬಾಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಉತ್ತರಾಖಂಡ (Uttarakhand) ಸರ್ಕಾರ ʼಆಪರೇಷನ್ ಕಾಲನೇಮಿʼ (Operation Kalanemi) ಕಾರ್ಯಾಚರಣೆ ಆರಂಭಿಸಿದ್ದು, 82 ನಕಲಿ ಬಾಬಾಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಚಾರ್ ಧಾಮ್ ಯಾತ್ರೆ ಮತ್ತು ಕನ್ವರ್ ಯಾತ್ರೆ ಹಿನ್ನೆಲೆ ಧಾರ್ಮಿಕ ಕ್ಷೇತ್ರಗಳಲ್ಲಿ ನಕಲಿ ಬಾಬಾಗಳ ಸಂಖ್ಯೆ ಹೆಚ್ಚಿದೆ. ಕಳೆದ ಮೂರು ದಿನಗಳಲ್ಲಿ ಜಿಲ್ಲೆಯ ವಿವಿಧ ಪ್ರದೇಶಗಳಿಂದ ಒಟ್ಟು 82 ಮಂದಿ ನಕಲಿ ಬಾಬಾಗಳನ್ನು ಬಂಧಿಸಲಾಗಿದೆ. ಭಾನುವಾರ ಬಂಧಿಸಿದ 34 ಜನರ ಪೈಕಿ 23 ಮಂದಿ ಇತರ ರಾಜ್ಯಗಳ ನಿವಾಸಿಗಳಾಗಿದ್ದಾರೆ. ಇದನ್ನೂ ಓದಿ: ಶಿರಾಡಿಘಾಟ್‌ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಜಲಪಾತಕ್ಕೆ ಬಿದ್ದ ಕಾರು

    ಬಂಧಿತ ನಕಲಿ ಬಾಬಾಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸಂಬಂಧಿತ ವಿಭಾಗಗಳ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಅಲ್ಲದೇ ಜನರ ಭಾವನೆಗಳ ಜೊತೆ ಆಟವಾಡುವ ಇಂತಹ ವಂಚಕರನ್ನು ಸೆರೆಹಿಡಿಯಲು ತಂಡವನ್ನು ರಚಿಸಲಾಗಿದ್ದು, ನಕಲಿ ಬಾಬಾಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಎಸ್‌ಪಿ ಅಜಯ್ ಸಿಂಗ್ ತಿಳಿಸಿದ್ದಾರೆ. ಇದನ್ನೂ ಓದಿ: ಆಲ್ಕರಜ್‌ ಹ್ಯಾಟ್ರಿಕ್‌ ಕನಸು ಭಗ್ನ- ಚೊಚ್ಚಲ ವಿಂಬಲ್ಡನ್‌ ಗೆದ್ದ ಸಿನ್ನರ್‌ | ನಗದು ಬಹುಮಾನ ಎಷ್ಟು?

  • ಕ್ಯಾಬ್‌ ಚಾಲಕರನ್ನೇ ಟಾರ್ಗೆಟ್‌ ಮಾಡಿ ಹತ್ಯೆ – 24 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಸರಣಿ ಹಂತಕ ಅರೆಸ್ಟ್

    ಕ್ಯಾಬ್‌ ಚಾಲಕರನ್ನೇ ಟಾರ್ಗೆಟ್‌ ಮಾಡಿ ಹತ್ಯೆ – 24 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಸರಣಿ ಹಂತಕ ಅರೆಸ್ಟ್

    ನವದೆಹಲಿ:‌ ಕ್ಯಾಬ್ ಚಾಲಕರನ್ನು ಕೊಲೆಗೈದು ಅವರ ವಾಹನಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಸರಣಿ ಹಂತಕನನ್ನು 24 ವರ್ಷಗಳ ನಂತರ ದೆಹಲಿ (Delhi) ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಆರೋಪಿಯನ್ನು ಅಜಯ್ ಲಂಬಾ ಎಂದು ಗುರುತಿಸಲಾಗಿದೆ. ಈತ ಹಾಗೂ ಇವನ ಸಹಚರರು ಕ್ಯಾಬ್‌ ಬಾಡಿಗೆ ಪಡೆದು, ಉತ್ತರಾಖಂಡಕ್ಕೆ (Uttarakhand) ತೆರಳಿ, ಅಲ್ಲಿ ಚಾಲಕರನ್ನು ಹತ್ಯೆಗೈದು ಶವಗಳನ್ನು ಜನ ಸಂಚಾರ ಇಲ್ಲದ ಬೆಟ್ಟಗಳಲ್ಲಿ ಹೂತುಹಾಕುತ್ತಿದ್ದರು. ಬಳಿಕ ವಾಹನವನ್ನು ನೇಪಾಳಕ್ಕೆ (Nepal) ಕೊಂಡೊಯ್ದು ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: 50ಕ್ಕೂ ಹೆಚ್ಚು ಕೊಲೆ ಮಾಡಿ ಪರಾರಿಯಾಗಿದ್ದ ಸಿರಿಯಲ್‌ ಕಿಲ್ಲರ್‌ ʻಡಾಕ್ಟರ್‌ ಡೆತ್‌ʼ ಅರೆಸ್ಟ್‌!

    ಈತ 2001 ರಲ್ಲಿ ದೆಹಲಿ, ಉತ್ತರ ಪ್ರದೇಶ ಮತ್ತು ಉತ್ತರಾಖಂಡದಾದ್ಯಂತ ಕ್ಯಾಬ್ ಚಾಲಕರನ್ನು ಗುರಿಯಾಗಿಸಿಕೊಂಡು ನಡೆದ ನಾಲ್ಕು ದರೋಡೆ ಮತ್ತು ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಇದರಲ್ಲಿ ಒಬ್ಬ ಕ್ಯಾಬ್ ಚಾಲಕನ ಶವವನ್ನು ಮಾತ್ರ ವಶಪಡಿಸಿಕೊಳ್ಳಲಾಗಿದೆ. ಲಂಬಾ ಗ್ಯಾಂಗ್ ಸದಸ್ಯರಲ್ಲಿ ಇಬ್ಬರನ್ನು ಈಗಾಗಲೇ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    48 ವರ್ಷದ ಲಂಬಾ ದೆಹಲಿಯವನಾಗಿದ್ದು, 6ನೇ ತರಗತಿ ಬಳಿಕ ಶಾಲೆಯಿಂದ ಹೊರಗುಳಿದಿದ್ದ. ನಂತರ ಉತ್ತರ ಪ್ರದೇಶದ ಬರೇಲಿಗೆ ತೆರಳಿ ಅಪರಾಧ ಕೃತ್ಯಗಳಲ್ಲಿ ತೊಡಗಿದ್ದ. ಈತನ ವಿರುದ್ಧ ಹಲವಾರು ಪ್ರಕರಣಗಳು ದಾಖಲಾಗಿವೆ.

    ಲಂಬಾ, 2008 ರಿಂದ 2018 ರವರೆಗೆ ನೇಪಾಳದಲ್ಲಿ ವಾಸಿಸುತ್ತಿದ್ದ. ನಂತರ ತಮ್ಮ ಕುಟುಂಬದೊಂದಿಗೆ ಡೆಹ್ರಾಡೂನ್‌ಗೆ ಬಂದಿದ್ದ. 2020 ರಲ್ಲಿ, ಒಡಿಶಾ, ದೆಹಲಿ ಸೇರಿದಂತೆ ಭಾರತದ ಇತರ ಭಾಗಗಳಿಗೆ ಗಾಂಜಾ ಪೂರೈಕೆಯಲ್ಲಿ ತೊಡಗಿಕೊಂಡಿದ್ದ. 2024 ರಲ್ಲಿ ಒಡಿಶಾದ ಬೆಹ್ರಾಂಪುರದಲ್ಲಿ ಜ್ಯುವೆಲ್ಲರಿ ಅಂಗಡಿಯಲ್ಲಿ ನಡೆದಿದ್ದ ದರೋಡೆ ಪ್ರಕರಣದಲ್ಲಿ ಈತನನ್ನು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗೆ ಬಂದಿದ್ದ. ಈ ವೇಳೆ, ಆತ ಸರಣಿ ಕೊಲೆಯಲ್ಲಿ ಪಾಲ್ಗೊಂಡಿರುವುದನ್ನು ಬಹಿರಂಗಪಡಿಸಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: 19ರ ಯುವತಿ ಮೇಲೆ ಅತ್ಯಾಚಾರ, ಕೊಲೆ – ಕರ್ನಾಟಕ ಸೇರಿ 4 ರಾಜ್ಯಗಳಿಗೆ ಬೇಕಿದ್ದ ಸರಣಿ ಹಂತಕ ಅರೆಸ್ಟ್‌

  • ಉತ್ತರಾಖಂಡದಲ್ಲಿ ಮೇಘಸ್ಫೋಟ, ಹಠಾತ್ ಪ್ರವಾಹ – 9 ಕಾರ್ಮಿಕರು ನಾಪತ್ತೆ

    ಉತ್ತರಾಖಂಡದಲ್ಲಿ ಮೇಘಸ್ಫೋಟ, ಹಠಾತ್ ಪ್ರವಾಹ – 9 ಕಾರ್ಮಿಕರು ನಾಪತ್ತೆ

    – ಚಾರ್‌ಧಾಮ್ ಯಾತ್ರೆ ಸ್ಥಗಿತ

    ಡೆಹ್ರಾಡೂನ್: ಉತ್ತರಾಖಂಡದಲ್ಲಿ (Uttarakhand) ಮೇಘಸ್ಫೋಟಗೊಂಡು (Cloudburst) ಹಠಾತ್ ಪ್ರವಾಹ ಉಂಟಾದ ಪರಿಣಾಮ ಉತ್ತರಕಾಶಿ (Uttarkashi) ಬಳಿ ನಿರ್ಮಾಣ ಹಂತದ ಹೋಟೆಲ್‌ನಲ್ಲಿದ್ದ 9 ಕಾರ್ಮಿಕರು ನಾಪತ್ತೆಯಾಗಿದ್ದಾರೆ.

    ಬಾರ್ಕೋಟ್-ಯಮುನೋತ್ರಿ ರಸ್ತೆಯಲ್ಲಿ ಮೇಘಸ್ಫೋಟಗೊಂಡಿದೆ. ಕಾರ್ಮಿಕರು ಪ್ರಹಾಹದಲ್ಲಿ ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳದಲ್ಲಿ ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ತಂಡ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಇದನ್ನೂ ಓದಿ: Koppal | ಬುರ್ಖಾ ಧರಿಸಿದ ಕಳ್ಳಿಯರಿಂದ ಗೃಹಬಳಕೆಯ ವಸ್ತು ಕಳ್ಳತನ

    ಇನ್ನು ಭಾರೀ ಮೇಘಸ್ಫೋಟದಿಂದ ಚಾರ್‌ಧಾಮ್ (Char Dham Yatra) ಯಾತ್ರೆ ಸ್ಥಗಿತಗೊಳಿಸಲಾಗಿದೆ. ಗಂಗೋತ್ರಿ, ಯಮುನೋತ್ರಿ, ಕೇದಾರನಾಥ, ಭದ್ರಿನಾಥ ಯಾತ್ರೆ ಸ್ಥಗಿತಗೊಂಡಿದೆ. ಭಾರೀ ಮಳೆಯಿಂದಾಗಿ ಯಮುನಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ರುದ್ರಪ್ರಯಾಗ ಜಿಲ್ಲೆಯ ಸೋನ್‌ಪ್ರಯಾಗ್-ಮುಂಕಟಿಯಾ ರಸ್ತೆ ಬಂದ್ ಆಗಿದೆ. ಅಲ್ಲದೇ ಕೇದಾರನಾಥಕ್ಕೆ ಪ್ರಯಾಣಿಸುವ ಯಾತ್ರಾರ್ಥಿಗಳಿಗೆ ಮಾರ್ಗ ಬಂದ್ ಮಾಡಲಾಗಿದೆ. ಇದನ್ನೂ ಓದಿ: ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಕಾಲ್ತುಳಿತ – ಮೂವರು ಸಾವು, 10 ಮಂದಿಗೆ ಗಾಯ

  • ಹನಿಮೂನ್ ಟ್ರಿಪ್‌ನಲ್ಲಿ ವೈಷ್ಣವಿ ಮಸ್ತ್ ಡ್ಯಾನ್ಸ್..ಫುಲ್ ಮಸ್ತಿ!

    ಹನಿಮೂನ್ ಟ್ರಿಪ್‌ನಲ್ಲಿ ವೈಷ್ಣವಿ ಮಸ್ತ್ ಡ್ಯಾನ್ಸ್..ಫುಲ್ ಮಸ್ತಿ!

    ಕಿರುತೆರೆ ಧಾರಾವಾಹಿ ಹಾಗೂ ಬಿಗ್‌ಬಾಸ್ ಖ್ಯಾತಿಯ ವೈಷ್ಣವಿ ಗೌಡ (Vaishnavi Gowda) 2025ರ ಜೂನ್ ತಿಂಗಳು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಅನುಕೂಲ್ ಮಿಶ್ರಾ ಜೊತೆ ಹಸೆಮಣೆ ಏರಿದ್ದ ನಟಿ ವೈಷ್ಣವಿ ಗೌಡ ಸದ್ಯ ಹನಿಮೂನ್ ಟ್ರಿಪ್‌ನಲ್ಲಿದ್ದಾರೆ. ಪತಿ ಜೊತೆ ಇತ್ತೀಚಿಗೆ ಉತ್ತರಾಖಂಡ್ (Uttarakhand) ಋಷಿಕೇಶ್ ಬಳಿಯಿರುವ ಶಿವಪುರಿಯಲ್ಲಿ ಬಂಗೀ ಜಂಪ್ ಮಾಡಿ ಸಂಭ್ರಮಿಸಿದ್ದರು.

    ಉತ್ತರಾಖಂಡ್ ಋಷಿಕೇಶ್ ಬಳಿಯಿರುವ ಶಿವಪುರಿಯಲ್ಲಿ ವೈಷ್ಣವಿ ಗೌಡ ಹಾಗೂ ಪತಿ ಅನುಕೂಲ್ ಮಿಶ್ರಾ ಬರೋಬ್ಬರಿ 117 ಅಡಿ ಎತ್ತರದಿಂದ ಜಿಗಿದು ಸಂಭ್ರಮ ಪಟ್ಟಿದ್ದರು. ಉತ್ತರ ಭಾರತದಲ್ಲಿ ಹನಿಮೂನ್ ಪ್ರವಾಸವನ್ನ ಕೈಗೊಂಡಿರುವ ವೈಷ್ಣವಿ ಗೌಡ ಹಾಗೂ ಅನುಕೂಲ್ ಮಿಶ್ರಾ ಮನಾಲಿಯಲ್ಲಿ ಬಗೆ ಬಗೆಯ ಬಟ್ಟೆತೊಟ್ಟು ಪೋಸ್ ಕೊಟ್ಟಿದ್ದರು. ಆ ಫೋಟೋಗಳನ್ನ ಜಾಲತಾಣದಲ್ಲಿ ಹಂಚಿಕೊಂಡಿದ್ದರು ವೈಷ್ಣವಿ.

    ವೈಷ್ಣವಿ ಗೌಡ ಹನಿಮೂನ್ ಟ್ರಿಪ್ ಅನ್ನ ಸಖತ್ ಎಂಜಾಯ್ ಮಾಡ್ತಿದ್ದು, ಡ್ಯಾನ್ಸ್ ಮಾಡಿರುವ ವಿಡಿಯೋವನ್ನ ಪೋಸ್ಟ್ ಮಾಡಿದ್ದಾರೆ. ವಿಡಿಯೋ ಕ್ರೆಡಿಟ್ ಹಸ್ಬಂಡ್ ಎಂದು ಪೋಸ್ಟ್ ಮಾಡಿದ್ದಾರೆ. ಈ ವಿಡಿಯೋ ನೋಡಿದ ವೈಷ್ಣವಿ ಫ್ಯಾನ್ಸ್ ಕಮೆಂಟ್ ಮಾಡುತ್ತಿದ್ದಾರೆ. ಕೆಲವರು ಖುಷಿಯಿಂದ ಲೈಕ್ ಮಾಡಿದ್ರೆ ಇನ್ನು ಕೆಲವ್ರು ಈ ಆಷಾಡ ಮಾಸದಲ್ಲಿ ಯಾಕೆ ಹನಿಮೂನ್ ಬೇರೆ ಟೈಂ ಇರಲಿಲ್ಲವಾ ಅಂತಾ ಪ್ರಶ್ನೆ ಮಾಡಿದ್ದಾರೆ.

    ವೈಷ್ಣವಿ ಗೌಡ ಮನಾಲಿ, ಉತ್ತರಾಖಂಡ್‌ನ ಶಿವಪುರಿ ಹಾಗೂ ಮುಂತಾದ ಜಾಗಗಳಿಗೆ ಪತಿ ಅನುಕೂಲ್ ಮಿಶ್ರಾ ಜೊತೆ ಭೇಟಿ ನೀಡಿದ್ದಾರೆ. ಅಲ್ಲಿನ ಸುಂದರ ಕ್ಷಣಗಳನ್ನ ಸೆರೆಹಿಡಿದು ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

  • ಅಲಕಾನಂದ ನದಿಗೆ ಉರುಳಿದ 18 ಪ್ರಯಾಣಿಕರಿದ್ದ ಬಸ್‌ – ಇಬ್ಬರು ಸಾವು, 10 ಮಂದಿ ನಾಪತ್ತೆ

    ಅಲಕಾನಂದ ನದಿಗೆ ಉರುಳಿದ 18 ಪ್ರಯಾಣಿಕರಿದ್ದ ಬಸ್‌ – ಇಬ್ಬರು ಸಾವು, 10 ಮಂದಿ ನಾಪತ್ತೆ

    ಡೆಹ್ರಾಡೂನ್: ಉತ್ತರಾಖಂಡದ (Uttarakhand) ರುದ್ರಪ್ರಯಾಗ (Rudraprayag) ಜಿಲ್ಲೆಯಲ್ಲಿ ಅಲಕಾನಂದ ನದಿಗೆ (Alakananda River) 18 ಪ್ರಯಾಣಿಕರಿದ್ದ ಬಸ್‌ ಬಿದ್ದು ಇಬ್ಬರು ಸಾವನ್ನಪ್ಪಿದ್ದು, 10 ಮಂದಿ ನಾಪತ್ತೆಯಾಗಿದ್ದಾರೆ.

    ಏಳು ಜನರನ್ನು ರಕ್ಷಿಸಲಾಗಿದ್ದು ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ನಾಪತ್ತೆಯಾದವರ ಪತ್ತೆ ಕಾರ್ಯ ನಡೆಸುತ್ತಿದೆ.

    ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಸ್ಸು ಬಿದ್ದಿದೆ. ಕೆಲವು ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರಿಂದ ಸಾವು ನೋವು ಕಡಿಮೆಯಾಗಿದೆ.

    ಪೊಲೀಸ್, ಜಿಲ್ಲಾಡಳಿತ ಆಡಳಿತ ಮತ್ತು ವಿಪತ್ತು ನಿರ್ವಹಣಾ ವಿಭಾಗದ ಉನ್ನತ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ವದಂತಿಗಳನ್ನು ಹರಡದಂತೆ ಸರ್ಕಾರ ಜನರಲ್ಲಿ ಮನವಿ ಮಾಡಿದೆ.