ಕಾರವಾರ: ಉತ್ತರಾಖಂಡದಲ್ಲಿ (Uttarakhand) ಆದ ಹವಾಮಾನ ವೈಪರೀತ್ಯ ದಿಂದ ಹಿಮಪಾತವಾಗಿ ನಾಪತ್ತೆಯಾದ ಚಾರಣಿಗರಲ್ಲಿ ಶಿರಸಿ ತಾಲೂಕಿನ ಜಾಗನಹಳ್ಳಿಯ ಯುವತಿ ಪದ್ಮಿನಿ ಸಹ ಇದ್ದು, ಅವರು ಮೃತಪಟ್ಟಿರುವ ಬಗ್ಗೆ ಮಾಹಿತಿ ಹೊರಬಿದ್ದಿದೆ.
ಟ್ರೆಕ್ಕಿಂಗ್ ಗೈಡ್‌ಗಳಾಗಿ ಉತ್ತರ ಕಾಶಿಯ (Uttara kashi) ಮೂವರು ನಿವಾಸಿಗಳ ಜೊತೆ ಬೆಂಗಳೂರಿನಿಂದ 18 ಮಂದಿ ಹಾಗೂ ಪುಣೆಯಿಂದ ಒಬ್ಬರ ಜೊತೆ ತೆರಳಿದ್ದರು. ಇವರೊಂದಿಗೆ ಜಾಗನಹಳ್ಳಿ ಮೂಲದ ಬೆಂಗಳೂರು ನಿವಾಸಿ, ಗೂಗಲ್ ಕಂಪನಿಯಲ್ಲಿ ನೌಕರಿ ಮಾಡುತ್ತಿದ್ದ ಪದ್ಮಿನಿ ಹೆಗಡೆ (35) ಅವರು ಒಬ್ಬರಾಗಿದ್ದರು.
ಜೂ. 4ರಂದು ಮಧ್ಯಾಹ್ನದ ಸಮಯಕ್ಕೆ ಹವಾಮಾನ ಸರಿಯಾಗಿಲ್ಲ ಎನ್ನುವುದಾಗಿ ಪದ್ಮಿನಿ ಅವರು ತಮ್ಮ ತಾಯಿಗೆ ಮೆಸೇಜ್ ಹಾಕಿದ್ದರು. ಅವರು ನಾಪತ್ತೆಯಾಗಿದ್ದಾರೆ ಎನ್ನುವ ಮಾಹಿತಿ ನಮಗಿದೆ. ಅವರಿಗೆ ಯಾವುದೇ ಅವಘಡ ಆಗಿದೆ ಎನ್ನುವುದಾಗಿ ನಮಗೆ ಅಧಿಕೃತವಾಗಿ ಮಾಹಿತಿ ಬಂದಿಲ್ಲ ಎನ್ನುವುದಾಗಿ ಪದ್ಮಿನಿ ಅವರ ಕುಟುಂಬದವರು ನಿನ್ನೆ ತಿಳಿಸಿದ್ದರು.
ಪದ್ಮಿನಿ ಅವರ ತಂದೆ ಶ್ರೀಪತಿ ಹೆಗಡೆ ಅವರು ನಿಧನರಾಗಿದ್ದಾರೆ. ತಾಯಿ ಶೈಲಾ ಹೆಗಡೆ ಅವರು ಮುಂಬೈನಲ್ಲಿ ತಮ್ಮ ಮೊದಲ ಮಗಳ ಜತೆ ವಾಸ ಮಾಡುತ್ತಿದ್ದಾರೆ. ಇವರು ಕೂಡ ತಾಯಿ ಹಾಗೂ ಅಕ್ಕನ ಜತೆ ವಾಸವಾಗಿದ್ದರು. ಸದ್ಯ ಬೆಂಗಳೂರಿನಲ್ಲಿ ನೌಕರಿ ಮಾಡುತ್ತಿದ್ದರು ಎನ್ನುವುದಾಗಿ ತಿಳಿದು ಬಂದಿದ್ದು ಇಂದು ಮೃತರಾಗುರುವ ಮಾಹಿತಿಯನ್ನು ವಿಪತ್ತು ನಿರ್ವಹಣಾ ಕೇಂದ್ರದ ಅಧಿಕಾರಿಗಳು ಖಚಿತ ಪಡಿಸಿದ್ದು ಪಸ್ಮಿನಿಯವರ ಮೃತ ದೇಹ ಪತ್ತೆಯಾಗಬೇಕಿದೆ.
ಬೆಂಗಳೂರು: ಹಿಮಪಾತದಿಂದ ಉತ್ತರಾಖಂಡದ (Uttarakhand) ಉತ್ತರಕಾಶಿ (Uttarkashi) ಜಿಲ್ಲೆಯ ಸಹಸ್ತ್ರತಾಲ್ ಚಾರಣಕ್ಕೆ (Trekking) ತೆರಳಿದ್ದ 20 ಜನರ ಪೈಕಿ 9 ಮಂದಿ ಸಾವನ್ನಪ್ಪಿದ್ದು, ಮೃತ ಚಾರಣಿಗರ ಮೃತದೇಹವನ್ನು ಚಾರ್ಟರ್ ಫ್ಲೈಟ್ (Charter Flight) ಮೂಲಕ ಬೆಂಗಳೂರಿಗೆ ರವಾನಿಸುವ ಸಲುವಾಗಿ ಉತ್ತರಾಖಂಡ ಮುಖ್ಯಕಾರ್ಯದರ್ಶಿ ರಾಧಾ ರಾತುರಿ ಅವರ ಜೊತೆ ಕೃಷ್ಣಬೈರೇಗೌಡ (Krishna Byre Gowda) ಮಾತುಕತೆ ನಡೆಸಿದ್ದಾರೆ. ಮಾತುಕತೆ ಬಳಿಕ ಉತ್ತರಾಖಂಡ ಮುಖ್ಯಕಾರ್ಯದರ್ಶಿ ಚಾರ್ಟರ್ ಫ್ಲೈಟ್ ಮೂಲಕ ಮೃತದೇಹವನ್ನು ಸಾಗಿಸಲು ಒಪ್ಪಿಕೊಂಡಿದ್ದಾರೆ ಎಂದು ಕೃಷ್ಣಬೈರೇಗೌಡ ತಿಳಿಸಿದ್ದಾರೆ.
ಉತ್ತರಕಾಶಿಯಲ್ಲಿ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ಬೆಳಗ್ಗೆ 11 ಗಂಟೆಗೆ ಎಲ್ಲಾ 9 ಮೃತದೇಹಗಳನ್ನು ವಿಮಾನದಲ್ಲಿ ಡೆಹ್ರಾಡೂನ್‌ಗೆ ತರಲಾಗುವುದು. ಡೆಹ್ರಾಡೂನ್‌ನಲ್ಲಿ ಎಂಬಾಮಿಂಗ್ ಮಾಡಲಾಗುವುದು. ಎಲ್ಲಾ 9 ಶವಗಳನ್ನು ಬೆಂಗಳೂರಿಗೆ ಸಾಗಿಸಲು ನಾವು ಚಾರ್ಟರ್ ಫ್ಲೈಟ್ ಅನ್ನು ಗುರುತಿಸುತ್ತಿದ್ದೇವೆ. ನಾನೀಗ ಉತ್ತರಾಖಂಡದ ಮುಖ್ಯ ಕಾರ್ಯದರ್ಶಿಯನ್ನು ಭೇಟಿ ಮಾಡಲು ಹೊರಟಿದ್ದೇನೆ. ಮುಖ್ಯ ಕಾರ್ಯದರ್ಶಿಯವರೊಂದಿಗಿನ ನನ್ನ ಸಭೆಯ ನಂತರ ಮೃತದೇಹಗಳ ರವಾನೆಯ ಬಗ್ಗೆ ಸ್ಪಷ್ಟತೆ ನೀಡಬಹುದು ಎಂದು ನಾನು ಭಾವಿಸುತ್ತೇನೆ ಎಂದು ಕೃಷ್ಣಬೈರೇಗೌಡ ಎಕ್ಸ್‌ನಲ್ಲಿ ಟ್ವೀಟ್ ಮಾಡಿ ತಿಳಿಸಿದ್ದರು.
ಉತ್ತರಾಖಂಡದಲ್ಲಿ ಹವಾಮಾನ ವೈಪರೀತ್ಯದಿಂದ ಸಾವನ್ನಪ್ಪಿದ ನಾಲ್ವರ ಮೃತದೇಹಗಳು ಪತ್ತೆಯಾಗಿದ್ದು, ಮೃತರನ್ನು ಪದ್ಮನಾಭ ಕೆ.ಪಿ, ವೆಂಕಟೇಶ್ ಪ್ರಸಾದ್ ಕೆ, ಅನಿತಾ ರಂಗಪ್ಪ, ಪದ್ಮಿನಿ ಹೆಗಡೆ ಎಂದು ಗುರುತಿಸಲಾಗಿದೆ. ಇನ್ನು ಬುಧವಾರ 8 ಜನ ಚಾರಣಿಗರನ್ನು ರಕ್ಷಿಸಿದ್ದು, ಸುರಕ್ಷಿತವಾಗಿ ಡೆಹ್ರಾಡೂನ್‌ಗೆ ಸ್ಥಳಾಂತರಿಸಲಾಗಿದೆ.
Following trekkers were rescued yesterday and shifted to Dehradun.
1. Soumya Canale
2. Smruthi Dolas
3. Sheena Lakshmi
4. S Shiva Jyoti
5. Anil Jamtige Arunachal Bhatt
6. Bharat Bommana Gouder
7. Madhu…
— Krishna Byre Gowda (@krishnabgowda) June 6, 2024
ಎಸ್‌ಡಿಆರ್‌ಎಫ್‌ನಿಂದ ಸುರಕ್ಷಿತವಾಗಿ ರಕ್ಷಿಸಲ್ಪಟ್ಟ 11 ಚಾರಣಿಗರ ವಿವರ:
ಜೈ ಪ್ರಕಾಶ್ ವಿ.ಎಸ್ (61), ಗಿರಿನಗರ ಬೆಂಗಳೂರು ನಿವಾಸಿ
ಭರತ್ ವಿ (53), ಹಂಪಿನಗರ, ಬೆಂಗಳೂರು ನಿವಾಸಿ
ಅನೀಲ್ ಭಟ್ (52), ನಿವಾಸಿ ಜೋಪ್ ನಗರ ಬೆಂಗಳೂರು
ಮಧುಕಿರಣ್ ರೆಡ್ಡಿ (52), ಬೆಂಗಳೂರು ನಿವಾಸಿ
ಶೀನ ಲಕ್ಷ್ಮಿ (48), ಕೆ.ಆರ್.ಪುರಂ ಬೆಂಗಳೂರು ನಿವಾಸಿ
ಶೌಮ್ಯಾ ಕೆ (31), ಬೆಂಗಳೂರು ನಿವಾಸಿ
ಶಿವ ಜ್ಯೋತಿ (45), ಹೆಚ್‌ಎಸ್‌ಆರ್ ಬೆಂಗಳೂರು ನಿವಾಸಿ
ಸ್ಮೂರ್ತಿ ಪ್ರಕಾಶ್ ಡೋಲಾಸ್ (45), ಮಹಾರಾಷ್ಟ್ರದ ಪುಣೆ ನಿವಾಸಿ
ವಿನಾಯಕ್ ಎಂ.ಕೆ (47), ರೆಸಿಡೆಂಟ್ ಪ್ರೆಸ್ಟೀಜ್ ಸಿಟಿ, ಬೆಂಗಳೂರು
ಶ್ರೀರಾಮಲ್ಲು ಸುಧಾಕರ್ (64), ಬೆಂಗಳೂರು ಎಸ್‌ಆರ್‌ಕೆ ನಗರ ನಿವಾಸಿ
ವಿವೇಕ್ ಶ್ರೀಧರ್ (37), ಬೆಂಗಳೂರು,
ಸೌಮ್ಯಾ ಕೆನಾಲೆ, ಸ್ಮೃತಿ ಡೋಲಾಸ್, ಶೀನಾ ಲಕ್ಷ್ಮಿ, ಎಸ್ ಶಿವಜ್ಯೋತಿ, ಅನಿಲ್ ಜಮತಿಗೆ ಅರುಣಾಚಲ ಭಟ್, ಭರತ್ ಬೊಮ್ಮನ ಗೌಡರ್, ಮಧು ಕಿರಣ್ ರೆಡ್ಡಿ, ಜೈಪ್ರಕಾಶ್ ಬಿಎಸ್ ಎಂಬವರನ್ನು ಸುರಕ್ಷಿತವಾಗಿ ಡೆಹ್ರಾಡೂನ್‌ಗೆ ಸ್ಥಳಾಂತರಿಸಲಾಗಿದೆ. ಎಸ್ ಸುಧಾಕರ್, ವಿನಯ್ ಎಂಕೆ, ವಿವೇಕ್ ಶ್ರೀಧರ್, ನವೀನ್ ಎ, ರಿತಿಕಾ ಜಿಂದಾಲ್ ಎಂಬ 5 ಚಾರಣಿಗರನ್ನು ಕೂಡ ರಕ್ಷಿಸಿದ್ದು, ಇಂದು ಬೆಳಗ್ಗೆ 11 ಗಂಟೆಗೆ ಉತ್ತರಕಾಶಿಯಿಂದ ಡೆಹ್ರಾಡೂನ್‌ಗೆ ವಿಮಾನದಲ್ಲಿ ಕಳುಹಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
I met with Chief Secretary of #Uttarakhand Smt Radha Raturi and Secretary of Disaster Management Sri Ranjit Sinha to thank them for their swift response during this calamity.
I requested for their help to arrange an aircraft to transport the bodies to Bengaluru. They have agreed… pic.twitter.com/xB5S0FHCOR
— Krishna Byre Gowda (@krishnabgowda) June 6, 2024
ಬುಧವಾರ ಉತ್ತರಕಾಶಿಗೆ ರವಾನಿಸಿದ ಮೃತದೇಹಗಳು:
ಬುಧವಾರ ನಡೆಸಿದ ಕಾರ್ಯಾಚರಣೆಯಲ್ಲಿ ಐವರು ಚಾರಣಿಗರ ಮೃತದೇಹಗಳನ್ನು ವಿಮಾನದ ಮೂಲಕ ಉತ್ತರಕಾಶಿಗೆ ರವಾನಿಸಲಾಗಿದೆ. ಮೃತರನ್ನು ಸಿಂಧು ವಕೆಲಂ, ಆಶಾ ಸುಧಾಕರ್, ಸುಜಾತಾ ಮುಂಗುರವಾಡಿ, ವಿನಾಯಕ ಮುಂಗುರವಾಡಿ ಹಾಗೂ ಚಿತ್ರಾ ಪ್ರಣೀತ್ ಎಂದು ಗುರುತಿಸಲಾಗಿದೆ.
ಜೂನ್ 3 ರಂದು ಇಬ್ಬರು ಚಾರಣಿಗರು ಮುಖ್ಯ ತಂಡದಿಂದ ಬೇರ್ಪಟ್ಟು ಚಾರಣದಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಅವರು ಅಪಾಯದಿಂದ ಪಾರಾಗಿದ್ದಾರೆ. ಆದರೆ, ಅದೇ ದಿನ ಬೆಳಗ್ಗೆ 20 ಚಾರಣಿಗರು ಮತ್ತು ಆ ತಂಡದ ಮಾರ್ಗದರ್ಶಿಯನ್ನೊಳಗೊಂಡ ತಂಡ ಲ್ಯಾಂಬ್ಟಾಲ್ ಕ್ಯಾಂಪ್ ಸೈಟ್‌ನಿಂದ ಸಹಸ್ರತಾಲ್‌ಗೆ ತೆರಳಿದೆ. ಚಾರಣದ ಗಮ್ಯ ತಲುಪಿ ವಾಪಸ್ ಶಿಬಿರಕ್ಕೆ ಹಿಂತಿರುಗುತ್ತಿದ್ದ ಸಂದರ್ಭದಲ್ಲಿ, ಶಿಬಿರದಿಂದ ಸುಮಾರು ಒಂದೂವರೆ ಅಥವಾ ಎರಡು ಗಂಟೆಗಳ ದೂರದಲ್ಲಿದ್ದಾಗ, ಮಂಗಳವಾರ ಮಧ್ಯಾಹ್ನ 2 ಗಂಟೆಗೆ ಹಿಮಪಾತ ಪ್ರಾರಂಭವಾಗಿದೆ.
– ಹವಾಮಾನ ವೈಪರೀತ್ಯದಿಂದ ಐವರು ಕರ್ನಾಟಕದವರ ಸಾವು: ಸಿಎಂ ಸಂತಾಪ
ಬೆಂಗಳೂರು: ಉತ್ತರಾಖಂಡದ (Uttarakhand) ಶಾಸ್ತ್ರತಾಳ್‌ನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಚಾರಣಕ್ಕೆ ತೆರಳಿದ್ದ ಕರ್ನಾಟಕದ ಐವರು ಮೃತಪಟ್ಟಿದ್ದು, ಇನ್ನೂ ಕೆಲವರು ಅಪಾಯದಲ್ಲಿ ಸಿಲುಕಿದ್ದಾರೆ. ಅವರ ರಕ್ಷಣೆಗೆ ಸಚಿವ ಕೃಷ್ಣಬೈರೇಗೌಡರಿಗೆ (Krishna Byre Gowda) ಉಸ್ತುವಾರಿ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಸಿದ್ದರಾಮಯ್ಯ (Siddaramaiah), ಉತ್ತರಾಖಂಡದ ಶಾಸ್ತ್ರತಾಳ್‌ನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಚಾರಣಕ್ಕೆ ತೆರಳಿದ್ದ ರಾಜ್ಯದ ಐವರು ಚಾರಣಿಗರು ಮೃತಪಟ್ಟ ಸುದ್ದಿ ತಿಳಿದು ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಉತ್ತರಾಖಂಡದಲ್ಲಿ ಚಾರಣಕ್ಕೆ ತೆರಳಿದ್ದ ಕರ್ನಾಟಕದವರು ಸೇರಿ 9 ಮಂದಿ ಸಾವು
ಉತ್ತರಾಖಂಡದ ಶಾಸ್ತ್ರತಾಳ್ ನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಚಾರಣಕ್ಕೆ ತೆರಳಿದ್ದ ರಾಜ್ಯದ ಐವರು ಚಾರಣಿಗರು ಮೃತಪಟ್ಟ ಸುದ್ದಿ ತಿಳಿದು ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
ಈಗಾಗಲೇ ರಕ್ಷಣಾ ಕಾರ್ಯಾಚರಣೆಯ ಮೂಲಕ 11 ಜನರನ್ನು ಸುರಕ್ಷಿತ ಪ್ರದೇಶಕ್ಕೆ ವಾಪಸು ಕರೆತರಲಾಗಿದ್ದು, ಇನ್ನೂ ಕೆಲವು ಚಾರಣಿಗರ… pic.twitter.com/IdfJpqKLpv
ಈಗಾಗಲೇ ರಕ್ಷಣಾ ಕಾರ್ಯಾಚರಣೆಯ ಮೂಲಕ 11 ಜನರನ್ನು ಸುರಕ್ಷಿತ ಪ್ರದೇಶಕ್ಕೆ ವಾಪಸು ಕರೆತರಲಾಗಿದ್ದು, ಇನ್ನೂ ಕೆಲವು ಚಾರಣಿಗರ ರಕ್ಷಣೆ ಆಗಬೇಕಿದೆ. ಪ್ರತಿಕೂಲ ಹವಾಮಾನವು ರಕ್ಷಣಾ ಕಾರ್ಯಕ್ಕೆ ತೀವ್ರ ಅಡಚಣೆ ಉಂಟುಮಾಡುತ್ತಿದ್ದು, ಎಲ್ಲರನ್ನೂ ಸುರಕ್ಷಿತವಾಗಿ ಕರೆತರಲು ನಮ್ಮ ಸರ್ಕಾರವು ಶಕ್ತಿಮೀರಿ ಪ್ರಯತ್ನಿಸುತ್ತಿದೆ ಎಂದು ತಿಳಿಸಿದ್ದಾರೆ.
ಸಚಿವರಾದ ಕೃಷ್ಣಬೈರೇಗೌಡ ಅವರಿಗೆ ಇಂದೇ ಡೆಹ್ರಾಡೂನ್‌ಗೆ ತೆರಳಿ ರಕ್ಷಣಾ ಕಾರ್ಯದ ಉಸ್ತುವಾರಿ ವಹಿಸುವಂತೆ ಸೂಚಿಸಿದ್ದೇನೆ. ಸ್ಥಳೀಯವಾಗಿ ಲಭ್ಯವಿರುವ ಹೆಲಿಕಾಪ್ಟರ್‌ಗಳು ಹಾಗೂ ಸೇನಾ ಹೆಲಿಕಾಪ್ಟರ್‌ಗಳನ್ನು ಬಳಕೆ ಮಾಡಿಕೊಂಡು ಅಪಾಯದಲ್ಲಿ ಸಿಲುಕಿರುವ ಕನ್ನಡಿಗರನ್ನು ಮರಳಿ ಗೂಡು ಸೇರಿಸಲಾಗುವುದು ಎಂದು ಸಿಎಂ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ರಾಜೀನಾಮೆ ಪತ್ರ ವೈರಲ್- ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದೇನು?
ಬೆಂಗಳೂರು: ಉತ್ತರಾಖಂಡದಲ್ಲಿ (Uttarakhand) ಕನ್ನಡಿಗ ಪ್ರವಾಸಿಗರು ನಾಪತ್ತೆ ಪ್ರಕರಣ ಸಂಬಂಧ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಈ ಸಂಬಂಧ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಉತ್ತರಾಖಂಡದ ಉತ್ತರಕಾಶಿಯ ಸಹಸ್ತ್ರ ತಾಲ್‌ಗೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಕರ್ನಾಟಕದ 18 ಮಂದಿ ಪ್ರವಾಸಿಗರು ಸೇರಿ 22 ಜನ ನಾಪತ್ತೆಯಾಗಿರುವ ಸುದ್ದಿ ವರದಿಯಾಗಿದೆ. ಪ್ರತಿಕೂಲ ವಾತಾವರಣದಿಂದ ದಿಕ್ಕು ತಪ್ಪಿರಬಹುದಾದ ಸಾಹಸಿ ಚಾರಣಿಗರು ಸುರಕ್ಷಿತವಾಗಿ ವಾಪಸ್ ಬರುವಂತಾಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.
ಈ ನಿಟ್ಟಿನಲ್ಲಿ ಅವರನ್ನು ಪತ್ತೆ ಹಚ್ಚಲು ನಡೆಯುತ್ತಿರುವ ಕಾರ್ಯಾಚರಣೆ ಯಶಸ್ವಿಯಾಗುವಂತೆ ಹಾಗೂ ಕರ್ನಾಟಕ ಸರ್ಕಾರ ಉತ್ತರಾಖಂಡ ಸರ್ಕಾರದೊಂದಿಗೆ ಈ ಕೂಡಲೇ ಸಂಪರ್ಕ ಬೆಳೆಸಿ 18 ಕನ್ನಡಿಗ ಪ್ರವಾಸಿಗರೂ ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿ ಬರುವಂತಾಗಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಿ ಎಂದು ವಿನಂತಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಗ್ಯಾರಂಟಿ ಪರ ಜನ ನಿಂತಿಲ್ಲ ಅನ್ನಿಸುತ್ತೆ.. ಗ್ಯಾರಂಟಿಗಳಿಗೆ ಹಿನ್ನಡೆಯಾಗಿದೆ: ಸಚಿವ ಚಲುವರಾಯಸ್ವಾಮಿ
ಕನ್ನಡಿಗರು ಸೇರಿ 9 ಮಂದಿ ಸಾವು: ಉತ್ತರಾಖಂಡದಲ್ಲಿ (Uttarakhand) ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ (Karnataka) ನಾಲ್ವರು ಸೇರಿ 9 ಮಂದಿ ಚಾರಣಿಗರು ಮೃತಪಟ್ಟಿದ್ದಾರೆ. ಮೇ 29ರಿಂದ ಜೂನ್ 7ರವರೆಗೆ ಭಟವಾಡಿ ಮಲ್ಲಾ – ಸಿಲ್ಲಾ – ಕುಶಕಲ್ಯಾಣ – ಸಹಸ್ತ್ರತಾಲ್ ಟ್ರೆಕ್ಕಿಂಗ್‌ಗೆ (Trekking) ಅನುಮತಿ ಪಡೆದಿದ್ದರು.
9 ಚಾರಣಿಗರು ಮೃತಪಟ್ಟಿದ್ದನ್ನು ಉತ್ತರಕಾಶಿ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರದ ಅಧಿಕಾರಿ ದೇವೇಂದ್ರ ಪಟವಾಲ್ ಖಚಿತ ಪಡಿಸಿದ್ದಾರೆ.
ಮೃತರನ್ನು ಬೆಂಗಳೂರಿನ ಸುಜಾತ (52), ಪದ್ಮಿನಿ ಹೆಗಡೆ (35), ಚಿತ್ರಾ (48), ಸಿಂಧು (45), ವೆಂಕಟೇಶ್ ಪ್ರಸಾದ್ (52), ಅನಿತಾ (61), ಆಶಾ ಸುಧಾಕರ (72), ಪದ್ಮನಾಭನ್ ಕೆಪಿಎಸ್ (50) ವಿನಾಯಕ್ ಎಂದು ಗುರುತಿಸಲಾಗಿದೆ.
ಬೆಂಗಳೂರಿನಿಂದ 18, ಪುಣೆಯಿಂದ ಒಬ್ಬರು ಜೊತೆ ಟ್ರೆಕ್ಕಿಂಗ್ ಗೈಡ್‌ಗಳಾಗಿ ಉತ್ತರ ಕಾಶಿಯ ಮೂವರು ನಿವಾಸಿಗಳು ತೆರಳಿದ್ದರು. ಉತ್ತರಾಖಂಡದ ಸಹಸ್ತ್ರ ತಾಲ್‌ನಲ್ಲಿ (Sahastra Tal) ಸಿಲುಕಿದ್ದ ಚಾರಣಿಗರ ಪೈಕಿ ಸೌಮ್ಯಾ ಕನಾಲೆ, ಶೀನಾ ಲಕ್ಷ್ಮಿ, ಎಸ್.ಶಿವ ಜ್ಯೋತಿ, ಅನಿಲ್ ಜಮತಿಗೆ ಅರುಣಾಚಲ ಭಟ್, ಭರತ್ ಬೊಮ್ಮನ ಗೌಡರ್, ಮಧು ಕಿರಣ್ ರೆಡ್ಡಿ, ಜಯಪ್ರಕಾಶ್ ಬಿ.ಎಸ್. ಅವರನ್ನು ರಕ್ಷಣೆ ಮಾಡಲಾಗಿದೆ.
STORY | Four trekkers from Karnataka die in Uttarakhand due to extreme weather conditions
VIDEO | “Yesterday around 4:30 PM, the trekking association informed the disaster management (department) that some people died due to bad weather. Upon… pic.twitter.com/ktoaSgrw1I
9 ಚಾರಣಿಗರು ಮೃತಪಟ್ಟಿದ್ದನ್ನು ಉತ್ತರಕಾಶಿ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರದ ಅಧಿಕಾರಿ ದೇವೇಂದ್ರ ಪಟವಾಲ್ ಖಚಿತ ಪಡಿಸಿದ್ದಾರೆ. ಚಾರಣವನ್ನು ಮೌಂಟೇನಿಯರಿಂಗ್ ಫೌಂಡೇಶನ್ ಆಯೋಜಿಸಿತ್ತು. ಗಢವಾಲ್ ಜಿಲ್ಲಾಧಿಕಾರಿ ರಕ್ಷಣಾ ಕಾರ್ಯಾಚರಣೆಯ ಉಸ್ತುವಾರಿ ವಹಿಸಿದ್ದು ಭಾರತೀಯ ವಾಯುಪಡೆಯ ನೆರವನ್ನು ಪಡೆಯಲಾಗುತ್ತಿದೆ.
ನವದೆಹಲಿ: ತಪ್ಪುದಾರಿಗೆಳೆಯುವ ಜಾಹೀರಾತು ಪ್ರಕರಣದಲ್ಲಿ ಪತಂಜಲಿ ಆಯುರ್ವೇದ (Patanjali Ayurveda) ವಿರುದ್ಧ ಕ್ರಮ ಕೈಗೊಳ್ಳದೆ ನಿಷ್ಕ್ರಿಯತೆ ತೋರಿದ ಉತ್ತರಾಖಂಡ್ (Uttarakhand) ರಾಜ್ಯ ಪರವಾನಗಿ ಪ್ರಾಧಿಕಾರಕ್ಕೆ ಸುಪ್ರೀಂ ಕೋರ್ಟ್ (Supreme Court) ಚಾಟಿ ಬೀಸಿದೆ. ನ್ಯಾಯಾಲಯದ ಆದೇಶಗಳನ್ನು ಪರವಾನಗಿ ಪ್ರಾಧಿಕಾರ ಪಾಲಿಸುತ್ತಿಲ್ಲ ಎಂದು ಹೇಳಿದೆ.
ನ್ಯಾ. ಹಿಮಾ ಕ್ಲೊಹಿ ನೇತೃತ್ವದ ದ್ವಿ-ಸದಸ್ಯ ಪೀಠ ಈ ಪ್ರಕರಣದ ವಿಚಾರಣೆ ನಡೆಸಿತು. ಸರ್ಕಾರದ ಪರ ವಾದ ಮಂಡಿಸಿದ ವಕೀಲರು ಪತಂಜಲಿ ಮತ್ತು ಅದರ ಸಹೋದರ ಸಂಸ್ಥೆ ದಿವ್ಯಾ ಫಾರ್ಮಸಿಯ 14 ಉತ್ಪನ್ನಗಳ ಉತ್ಪಾದನಾ ಪರವಾನಗಿಗಳನ್ನು ಏಪ್ರಿಲ್ 15 ರಂದು ‘ತಕ್ಷಣದ ಪರಿಣಾಮ’ ದೊಂದಿಗೆ ಅಮಾನತುಗೊಳಿಸಲಾಗಿದೆ ಎಂದು ವಾದಿಸಿದರು. ಇದನ್ನೂ ಓದಿ: ಜಮ್ಮು, ಕಾಶ್ಮೀರದಲ್ಲಿ ಪ್ರವಾಹ- ಐವರ ದುರ್ಮರಣ
ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಪತಂಜಲಿ ಉತ್ಪನ್ನಗಳನ್ನು ಯಾವಗ ನಿಷೇಧಿಸಲಾಗಿದೆ ಎಂದು ಪ್ರಶ್ನಿಸಿತು. ನಾವು ಆಕ್ಷೇಪ ವ್ಯಕ್ತಪಡಿಸಿದ ಮೇಲೆ ನಿಷೇಧ ಹೇರಲಾಯಿತೆ ಅಥವಾ ಅದಕ್ಕೂ ಮುನ್ನ ನಿಷೇಧ ಮಾಡಲಾಗಿತ್ತೆ ಎಂದು ಸ್ಪಷ್ಟನೆ ಕೇಳಿತು. ಪತಂಜಲಿ ವಿರುದ್ಧ ನಿಷ್ಪಕ್ಷಪಾತವಾಗಿ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿತು. ಇದನ್ನೂ ಓದಿ: ಪ್ರಜ್ವಲ್ ಪ್ರಕರಣವನ್ನು ಕಾಂಗ್ರೆಸ್ ಎನ್‌ಡಿಎ ಅಪರಾಧ ಅನ್ನೋ ಥರ ಬಿಂಬಿಸಲು ಯತ್ನಿಸುತ್ತಿದೆ: ಸಿ.ಟಿ ರವಿ
ಬಳಿಕ ಪತಂಜಲಿ ಬೇಷರತ್ ಕ್ಷಮೆ ಬಗ್ಗೆ ಆಲಿಸಿದ ಕೋರ್ಟ್ ನಮಗೆ ಇ-ಪ್ರತಿಗಳು ಬೇಡ, ಮುದ್ರಣವಾಗಿರುವ ಅಸಲಿ ಪ್ರತಿಗಳನ್ನು ನಮಗೆ ಸಲ್ಲಿಸಬೇಕು ಎಂದು ಸೂಚನೆ ನೀಡಿತು. ಇದೇ ವೇಳೆ ಮುಂದಿನ ವಿಚಾರಣೆಗೆ ಖುದ್ದು ಹಾಜರಾತಿಯಿಂದ ಯೋಗ ಗುರು ಬಾಬಾ ರಾಮದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರಿಗೆ ವಿನಾಯತಿ ನೀಡಲಾಯಿತು. ಇದನ್ನೂ ಓದಿ: ಛತ್ತೀಸ್‍ಗಢದಲ್ಲಿ ಎನ್‍ಕೌಂಟರ್ – ಇಬ್ಬರು ಮಹಿಳೆಯರು ಸೇರಿ 7 ಮಂದಿ ನಕ್ಸಲರ ಹತ್ಯೆ
ಡೆಹ್ರಾಡೂನ್: ಬಾಬಾ ರಾಮ್‌ದೇವ್ (Baba Ramdev) ಅವರ ದಿವ್ಯ ಫಾರ್ಮಸಿ ಮತ್ತು ಪತಂಜಲಿ (Patanjali) ಆಯುರ್ವೇದ್ ಲಿಮಿಟೆಡ್ ವಿರುದ್ಧ ದೂರು ದಾಖಲಿಸಲು ಅನುಮತಿ ನೀಡಿರುವುದಾಗಿ ಉತ್ತರಾಖಂಡ ಸರ್ಕಾರವು ಅಫಿಡವಿಟ್‌ನಲ್ಲಿ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಔಷಧ ಜಾಹೀರಾತು ಕಾನೂನನ್ನು ಪದೇ ಪದೇ ಉಲ್ಲಂಘಿಸಿದ್ದಕ್ಕಾಗಿ ಅವರ 14 ಉತ್ಪನ್ನಗಳ ಉತ್ಪಾದನಾ ಪರವಾನಗಿಯನ್ನು ರದ್ದುಗೊಳಿಸಿದೆ.
ಕಾನೂನಿಗೆ ವಿರುದ್ಧವಾದ ಜಾಹೀರಾತುಗಳನ್ನು ಪ್ರಕಟಿಸಿದರೆ ದಂಡ, ಜೈಲು ಶಿಕ್ಷೆ ಅಥವಾ ಎರಡನ್ನೂ ಒಳಗೊಂಡಂತೆ ಕಠಿಣ ಶಿಸ್ತು ಮತ್ತು ಕಾನೂನು ಕ್ರಮಗಳನ್ನು ರಾಜ್ಯ ಪರವಾನಗಿ ಪ್ರಾಧಿಕಾರವು (ಎಸ್‌ಎಲ್‌ಎ) ತೆಗೆದುಕೊಳ್ಳುತ್ತದೆ ಎಂದು ಉತ್ತರಾಖಂಡ ಸರ್ಕಾರವು ಅಫಿಡವಿಟ್‌ನಲ್ಲಿ ತಿಳಿಸಿದೆ. ಇದನ್ನೂ ಓದಿ: ತೀವ್ರವಾದ ಬಿಸಿ ಗಾಳಿ- ಜಾರ್ಖಂಡ್‌ನಲ್ಲಿ 8 ತರಗತಿವರೆಗೆ ಇಂದಿನಿಂದ ರಜೆ ಘೋಷಣೆ
ಎಸ್‌ಎಲ್‌ಎ ಏ.15 ರಂದು ದಿವ್ಯ ಫಾರ್ಮಸಿ ಮತ್ತು ಪತಂಜಲಿ ಆಯುರ್ವೇದ್ ಲಿಮಿಟೆಡ್‌ಗೆ ಆದೇಶ ಹೊರಡಿಸಿದ್ದು, ಅದರಲ್ಲಿ ಅವರ 14 ಉತ್ಪನ್ನಗಳಾದ ಸ್ವಸರಿ ಗೋಲ್ಡ್, ಸ್ವಸರಿ ವಟಿ, ಬ್ರಾಂಕೋಮ್, ಸ್ವಸರಿ ಪ್ರವಾಹಿ, ಸ್ವಸರಿ ಅವಳೇಹ್, ಮುಕ್ತಾವತಿ ಎಕ್ಸ್‌ಟ್ರಾ ಪವರ್, ಲಿಪಿಡೋಮ್, ಬಿಪಿ ಗ್ರಿಟ್, ಮಧುಗ್ರಿತ್, ಮಧುನಾಶಿನಿವತಿ ಎಕ್ಸ್‌ಟ್ರಾ ಪವರ್, ಲಿವಾಮೃತ್ ಅಡ್ವಾನ್ಸ್, ಲಿವೋಗ್ರಿಟ್, ಐಗ್ರಿಟ್ ಗೋಲ್ಡ್ ಮತ್ತು ಪತಂಜಲಿ ದೃಷ್ಟಿ ಐ ಡ್ರಾಪ್ ಅನ್ನು ದಿ ಡ್ರಗ್ಸ್ ಅಂಡ್ ಕಾಸ್ಮೆಟಿಕ್ಸ್ ರೂಲ್ಸ್, 1945 ರ ನಿಯಮ 159 (1) ರ ಅಡಿಯಲ್ಲಿ ತಕ್ಷಣವೇ ಜಾರಿಗೆ ಬರುವಂತೆ ಪರವಾನಗಿ ರದ್ದುಗೊಳಿಸಲಾಗಿದೆ ಎಂದು ತಿಳಿಸಿದೆ.
ದಿವ್ಯ ಫಾರ್ಮಸಿ ಮತ್ತು ಪತಂಜಲಿ ಆಯುರ್ವೇದ್ ಲಿಮಿಟೆಡ್ ವಿರುದ್ಧ ಕಾನೂನಿನಲ್ಲಿ ಸೂಚಿಸಲಾದ ಕಾರ್ಯವಿಧಾನ ಮತ್ತು ಸುಪ್ರೀಂ ಕೋರ್ಟ್ ನೀಡಿದ ನಿರ್ದೇಶನಗಳ ಪ್ರಕಾರ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳುವುದನ್ನು ಮುಂದುವರಿಸುವುದಾಗಿ SLA ಹೇಳಿದೆ. ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಭಾರೀ ಮಳೆ; ಕೊಚ್ಚಿ ಹೋದ ಮನೆಗಳು, ರಸ್ತೆಗಳಿಗೂ ಹಾನಿ
ಕನ್ನಡ ಸಿನಿಮಾ ರಂಗದ ಹಿರಿಯ ನಟಿ, ಉಮಾಶ್ರೀ (Umashree) ಉತ್ತರಕಾಂಡ ಟೀಮ್ ಸೇರಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಅವರು ಪಂಢರಿಬಾಯಿ (Pandharibai) ಪಾತ್ರವನ್ನು ನಿರ್ವಹಿಸಲಿದ್ದಾರೆ. ಉಮಾಶ್ರೀಯ ಪೋಸ್ಟರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಈ ಸಿನಿಮಾದಲ್ಲಿ ಸಾಕಷ್ಟು ಅನುಭವಿ ಕಲಾವಿದರು ನಟಿಸುತ್ತಿರುವುದು ವಿಶೇಷ.
ಈಗಾಗಲೇ ಎಲ್ಲೆಡೆ ಸಂಚಲನ ಮೂಡಿಸಿರುವ ಬಹು ನಿರೀಕ್ಷಿತ ‘ಉತ್ತರಕಾಂಡ’ ಚಿತ್ರದಲ್ಲಿ ಅಭಿನಯಾಸುರ ರಂಗಾಯಣ ರಘು (Rangayana Raghu) ನಟಿಸಲಿದ್ದಾರೆ. ಬಂಡೆ ಕಾಕಾ (Bandekaka) ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಖ್ಯಾತ ನಿರ್ದೇಶಕ ಯೋಗರಾಜ್ ಭಟ್ (Yogaraj Bhat) ಕೂಡ ಉತ್ತರಾಕಾಂಡದಲ್ಲಿ(Uttarkanda) ನಟಿಸಲಿದ್ದಾರೆ. ಪಾಟೀಲ್ ಎಂಬ ಪಾತ್ರಕ್ಕಾಗಿ ಬಣ್ಣ ಹಚ್ಚಲಿದ್ದಾರೆ. ನಿರ್ದೇಶಕರಾಗಿ ಆಕ್ಷನ್ ಕಟ್ ಹೇಳುತ್ತಿದ್ದ ಭಟ್ಟರು,ಇದೀಗ ವಿಭಿನ್ನವಾಗಿ ಆಕ್ಷನ್ ಕಟ್ ಹೇಳಿಸಿಕೊಳ್ಳಲಿದ್ದಾರೆ. ಭಟ್ಟರು ಪಾತ್ರ ಮಾಡುವುದು ಹೊಸದೇನೂ ಅಲ್ಲ. ಅವರಿಗೆ ಉತ್ತರ ಕರ್ನಾಟಕ ಭಾಷೆ ಚೆನ್ನಾಗಿಯೇ ಬರುತ್ತದೆ.
ಮೊನ್ನೆಯಷ್ಟೇ ನಟ ದೂದ್ ಪೇಡಾ ದಿಗಂತ್ (Diganth) ಉತ್ತರಕಾಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಮಿರ್ಚಿ ಮಲ್ಲಿಗೆ ಎಂಬ ಪಾತ್ರದಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಪೋಸ್ಟರ್ ನಲ್ಲಿನ ಅವರ ಖಡಕ್ ಲುಕ್ ಮೂಲಕ ಕುತೂಹಲ ಕೆರಳಿಸಿದ್ದಾರೆ.
ಈ ಸಿನಿಮಾದಲ್ಲಿ ಚೈತ್ರಾ ಆಚಾರ್ಯ್ (Chaitra Acharya) ಕೂಡ ನಟಿಸುತ್ತಿದ್ದಾರೆ. ಚೈತ್ರ ಆಚಾರ್ ಉತ್ತರಕಾಂಡ ತಾರಾಬಳಗಕ್ಕೆ ಸೇರ್ಪಡೆ ಆಗಿದ್ದು, ಇಂದು ಚಿತ್ರೀಕರಣದಲ್ಲೂ ಪಾಲ್ಗೊಳ್ಳಲಿದ್ದಾರೆ. ಈ ಸಿನಿಮಾದಲ್ಲಿ ಅವರು ಲಚ್ಚಿ (Lacchi) ಎಂಬ ಒಂದು ಮುಖ್ಯ ಪಾತ್ರಕ್ಕಾಗಿ ಬಣ್ಣ ಹಚ್ಚಲಿದ್ದಾರೆ.
ಡಾಲಿ ಧನಂಜಯ್ (Dolly Dhananjay) ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ಉತ್ತರಕಾಂಡ ಸಿನಿಮಾದ ಶೂಟಿಂಗ್ ಏಪ್ರಿಲ್ 15ರಿಂದ ಶುರುವಾಗಲಿದೆ. ಈ ಮಾಹಿತಿಯನ್ನು ನಿರ್ಮಾಣ ಸಂಸ್ಥೆಯೇ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದೆ. ಏಪ್ರಿಲ್ 15ರಿಂದ ಚಿತ್ರೀಕರಣ (Shooting) ನಡೆಯಲಿದೆ ಎಂದು ಕೆ.ಆರ್.ಜಿ ಸ್ಟುಡಿಯೋಸ್ ನ ಕಾರ್ತಿಕ್ ಮಾಹಿತಿ ಹಂಚಿಕೊಂಡಿದ್ದಾರೆ.
ನಾನಾ ಕಾರಣಗಳಿಂದಾಗಿ ಉತ್ತರಕಾಂಡ ಸಿನಿಮಾ ಸುದ್ದಿಯಲ್ಲಿದೆ. ಈ ಸಿನಿಮಾದ ಮೂಲಕ ರಮ್ಯಾ (Ramya) ಮತ್ತೆ ಬೆಳ್ಳಿಪರದೆಗೆ ಕಮ್‌ಬ್ಯಾಕ್ ಆಗುತ್ತಿದ್ದಾರೆ ಎಂಬ ಸುದ್ದಿ ಕೇಳಿಯೇ ಫ್ಯಾನ್ಸ್ ಖುಷಿಪಟ್ಟಿದ್ದರು. ಇದೀಗ ಅಭಿಮಾನಿಗಳಿಗೆ ರಮ್ಯಾ ನಿರಾಸೆ ಮೂಡಿಸಿದ್ದಾರೆ. ಬಹುನಿರೀಕ್ಷಿತ ‘ಉತ್ತರಕಾಂಡ’ ಚಿತ್ರಕ್ಕೆ ನಟಿ ಕೈಕೊಟ್ಟಿದ್ದಾರೆ.
ಡೇಟ್ಸ್ ಹೊಂದಾಣಿಕೆ ಆಗದ ಕಾರಣ, ನಾನು ಉತ್ತರಕಾಂಡ (Uttarakanda Film) ಸಿನಿಮಾದಲ್ಲಿ ನಟಿಸುತ್ತಿಲ್ಲ. ನನ್ನ ಸಿನಿಮಾ ಮತ್ತು ರಾಜಕೀಯ ಕೆಲಸಗಳನ್ನು ಸದ್ಯ ಕಾಯ್ದಿರಿಸಿದ್ದೇನೆ. ಆದರೆ ಚಿತ್ರತಂಡಕ್ಕೆ ಶುಭವಾಗಲಿ ಎಂದು ರಮ್ಯಾ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ.
ಡಾಲಿ ಧನಂಜಯ್‌ಗೆ ನಾಯಕಿಯಾಗಿ ರಮ್ಯಾ ಕಾಣಿಸಿಕೊಳ್ಳುವುದಾಗಿ ಕಳೆದ ವರ್ಷ ಘೋಷಣೆಯಾಗಿತ್ತು. ಅದ್ಧೂರಿಯಾಗಿ ಮುಹೂರ್ತ ಕೂಡ ನೆರವೇರಿತ್ತು. ಚಿತ್ರದಲ್ಲಿ ಶಿವಣ್ಣ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಚಿತ್ರೀಕರಣ ಆರಂಭಕ್ಕೂ ಮುನ್ನ ರಮ್ಯಾ ಚಿತ್ರದಿಂದ ಹೊರನಡೆದಿದ್ದಾರೆ.
ಡಾಲಿ ಧನಂಜಯ್ (Dolly Dhananjay), ಶಿವರಾಜ್ ಕುಮಾರ್ (Shivaraj Kumar) ಕಾಂಬಿನೇಷನ್ ನ ಉತ್ತರ ಕಾಂಡ ಸಿನಿಮಾದ ಶೂಟಿಂಗ್ (Shooting) ಏಪ್ರಿಲ್ 15ರಿಂದ ಉತ್ತರ ಕರ್ನಾಟಕ ವಿವಿಧ ಸ್ಥಳಗಳಲ್ಲಿ ನಡೆಯಲಿದೆ. ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡುವ ದೃಷ್ಟಿಯಿಂದ ಉತ್ತರ ಕರ್ನಾಟಕದಲ್ಲೇ ಆಡಿಷನ್ ಮಾಡಿ ಕೆಲವು ಕಲಾವಿದರನ್ನು ಆಯ್ಕೆ ಮಾಡಿಕೊಂಡಿದೆ ಚಿತ್ರತಂಡ.
ಒಂದು ಕಡೆ ಶೂಟಿಂಗ್ ಖುಷಿ ವಿಚಾರವಾದರೆ, ಮತ್ತೊಂದು ಕಡೆ ಹೆಸರಾಂತ ನಟಿಯೇ ಈ ಚಿತ್ರಕ್ಕೆ ಕೈ ಕೊಟ್ಟಿದ್ದಾರೆ. ಸ್ಯಾಂಡಲ್‌ವುಡ್ ನಟಿ ರಮ್ಯಾ (Ramya) ಮತ್ತೆ ಬೆಳ್ಳಿಪರದೆಗೆ ಕಮ್‌ಬ್ಯಾಕ್ ಆಗುತ್ತಿದ್ದಾರೆ ಎಂಬ ಸುದ್ದಿ ಕೇಳಿಯೇ ಫ್ಯಾನ್ಸ್ ಖುಷಿಪಟ್ಟಿದ್ದರು. ಇದೀಗ ಅಭಿಮಾನಿಗಳಿಗೆ ರಮ್ಯಾ ನಿರಾಸೆ ಮೂಡಿಸಿದ್ದಾರೆ. ಬಹುನಿರೀಕ್ಷಿತ ‘ಉತ್ತರಕಾಂಡ’ ಚಿತ್ರಕ್ಕೆ ನಟಿ ಕೈಕೊಟ್ಟಿದ್ದಾರೆ.
ಡೇಟ್ಸ್ ಹೊಂದಾಣಿಕೆ ಆಗದ ಕಾರಣ, ನಾನು ಉತ್ತರಕಾಂಡ (Uttarakanda Film) ಸಿನಿಮಾದಲ್ಲಿ ನಟಿಸುತ್ತಿಲ್ಲ. ನನ್ನ ಸಿನಿಮಾ ಮತ್ತು ರಾಜಕೀಯ ಕೆಲಸಗಳನ್ನು ಸದ್ಯ ಕಾಯ್ದಿರಿಸಿದ್ದೇನೆ. ಆದರೆ ಚಿತ್ರತಂಡಕ್ಕೆ ಶುಭವಾಗಲಿ ಎಂದು ರಮ್ಯಾ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ.
ಡಾಲಿ ಧನಂಜಯ್‌ಗೆ ನಾಯಕಿಯಾಗಿ ರಮ್ಯಾ ಕಾಣಿಸಿಕೊಳ್ಳುವುದಾಗಿ ಕಳೆದ ವರ್ಷ ಘೋಷಣೆಯಾಗಿತ್ತು. ಅದ್ಧೂರಿಯಾಗಿ ಮುಹೂರ್ತ ಕೂಡ ನೆರವೇರಿತ್ತು. ಚಿತ್ರದಲ್ಲಿ ಶಿವಣ್ಣ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಆದರೆ ಈಗ ರಮ್ಯಾ ಚಿತ್ರದಿಂದ ಹೊರನಡೆದಿದ್ದಾರೆ.