Tag: uttarapradesh election

  • ಸಕಾರಾತ್ಮಕ ರಾಜಕಾರಣಕ್ಕಾಗಿ ಕಾಂಗ್ರೆಸ್ ಸ್ಪರ್ಧೆ: ಪ್ರಿಯಾಂಕ ಗಾಂಧಿ

    ಸಕಾರಾತ್ಮಕ ರಾಜಕಾರಣಕ್ಕಾಗಿ ಕಾಂಗ್ರೆಸ್ ಸ್ಪರ್ಧೆ: ಪ್ರಿಯಾಂಕ ಗಾಂಧಿ

    ಲಕ್ನೋ: ಸಕಾರಾತ್ಮಕ ರಾಜಕಾರಣಕ್ಕಾಗಿ ಕಾಂಗ್ರೆಸ್ ಈ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ ಹೇಳಿದರು.

    ನೋಯ್ಡಾದಲ್ಲಿ ಮನೆ-ಮನೆ ಪ್ರಚಾರ ನಡೆಸುತ್ತಿರುವಾಗ ಸ್ಲಂ ಪ್ರದೇಶಗಳ ಜನರೊಂದಿಗೆ ಸಂವಾದ ನಡೆಸಿದ ಅವರು, ಸಕಾರಾತ್ಮಕ ರಾಜಕಾರಣಕ್ಕಾಗಿ ನಮ್ಮನ್ನು ಗೆಲ್ಲಿಸಿ ಪ್ರತಿಸ್ಪರ್ಧಿಗಳಿಗೆ ತಕ್ಕ ಉತ್ತರ ನೀಡಬೇಕು ಎಂದು ಮನವಿ ಮಾಡಿದರು.

    ನೋಯ್ಡಾದ ಬಿಜೆಪಿ ಶಾಸಕ ಪಂಕಜ್ ಸಿಂಗ್‍ರಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗಿಲ್ಲ. ಇಲ್ಲಿಯ ಜನರಿಗೆ ಯಾವುದೇ ಮೂಲಭೂತ ಸೌಕರ್ಯವನ್ನು ನೀಡಿಲ್ಲ. ಈ ಬಾರಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಅಡಿಪಾಯ ಹಾಕಿ ಎಂದು ತಿಳಿಸಿದರು.

    ಇದೇ ವೇಳೆ ಉತ್ತರಪ್ರದೇಶದಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಸಿಗದಿದ್ದರೆ ಕಾಂಗ್ರೆಸ್ ಕಾರ್ಯತಂತ್ರ ವಿಚಾರಕ್ಕೆ ಪ್ರತಿಕ್ರಿಯಿಸಿ, ಚುನಾವಣೆ ನಂತರದಲ್ಲಿ ರಾಜಕೀಯ ಸನ್ನಿವೇಶಕ್ಕೆ ಅನುಗುಣವಾಗಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಉತ್ತರಿಸಿದರು.

    ಪ್ರಚಾರದ ಸಂದರ್ಭದಲ್ಲಿ ಲಡ್ಕಿ ಹೂಂ, ಲಡ್ ಸಕ್ತಿ ಹೂಂ ಘೋಷಣೆಯ ಅಡಿಯಲ್ಲಿ ಪ್ರತ್ಯೇಕವಾಗಿ ಮಹಿಳೆಯರ ಗುಂಪಿನೊಂದಿಗೆ ಸಂವಾದ ನಡೆಸಿದರು. ಜೊತೆಗೆ ವಿಶೇಷಚೇತನರ ಸಮಸ್ಯೆಗಳನ್ನು ಆಲಿಸಿದರು. ಇದನ್ನೂ ಓದಿ: ರೈತರು ದೀರ್ಘ ಹೋರಾಟಕ್ಕೆ ಸಿದ್ಧರಾಗಿ: ರಾಕೇಶ್ ಟಿಕಾಯತ್

    ಚುನಾವಣಾ ಪ್ರಚಾರದ ವೇಳೆ ಪ್ರಿಯಾಂಕಾ ಗಾಂಧಿ ಅವರ ಮೊದಲ ಭೇಟಿ ಎಂಬುದು ಗಮನಾರ್ಹ ವಿಷಯವಾಗಿದೆ. ಈ ಹಿಂದೆ ಅವರು ಫೇಸ್‍ಬುಕ್ ಮತ್ತು ಯೂಟ್ಯೂಬ್ ಮುಂತಾದ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ನೇರ ಸಂವಾದಗಳನ್ನು ನಡೆಸುತ್ತಿದ್ದರು. ಇದನ್ನೂ ಓದಿ: ಬಿಜೆಪಿ ತನ್ನ ಬೊಕ್ಕಸ ತುಂಬಲು ಬಡವರ ಜೇಬಿಗೆ ಕತ್ತರಿ ಹಾಕ್ತಿದೆ: ಚರಣ್ ಸಿಂಗ್ ಸಪ್ರಾ

    ಉತ್ತರ ಪ್ರದೇಶದಲ್ಲಿ ಮೊದಲ ಹಂತದ ಮತದಾನ ಫೆಬ್ರವರಿ 10, ಎರಡನೇ ಹಂತದ ಮತದಾನ ಫೆಬ್ರವರಿ 14, ಮೂರನೇ ಹಂತದ ಮತದಾನ ಫೆಬ್ರವರಿ 20, ನಾಲ್ಕನೇ ಹಂತ ಫೆಬ್ರವರಿ 23, ಐದನೇ ಹಂತ ಫೆಬ್ರವರಿ 27, ಆರನೇ ಹಂತ ಮಾರ್ಚ್ 3 ಮತ್ತು ಏಳನೇ ಹಂತ ಮಾರ್ಚ್ 7 ರಂದು ನಡೆಯಲಿದೆ.

  • ಮತ ಎಣಿಕೆಯವರೆಗೆ ಮಾತ್ರ ಸಮಾಜವಾದಿ, ರಾಷ್ಟ್ರೀಯ ಲೋಕದಳದ ಮೈತ್ರಿ: ಅಮಿತ್ ಶಾ

    ಮತ ಎಣಿಕೆಯವರೆಗೆ ಮಾತ್ರ ಸಮಾಜವಾದಿ, ರಾಷ್ಟ್ರೀಯ ಲೋಕದಳದ ಮೈತ್ರಿ: ಅಮಿತ್ ಶಾ

    ಲಕ್ನೋ: ಸಮಾಜವಾದಿ ಪಕ್ಷ ಹಾಗೂ ರಾಷ್ಟ್ರೀಯ ಲೋಕದಳದ ಮೈತ್ರಿಯು ಮತ ಎಣಿಕೆಯವರೆಗೆ ಮಾತ್ರ ಇರುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.

    ಉತ್ತರಪ್ರದೇಶದ ವಿಧಾನಸಭೆ ಚುನಾವಣೆಯ ನಿಮಿತ್ತ ಮುಜಾಫರ್‌ನಗರದಲ್ಲಿ ಮತದಾರರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಬಾರಿ ಎಸ್‍ಪಿ ಸರ್ಕಾರ ರಚಿಸಿದರೆ, ಅಜಂಖಾನ್ ಸಂಪುಟದ ಭಾಗವಾಗಲಿದ್ದಾರೆ. ಆರ್‌ಎಲ್‍ಡಿ ಅಧ್ಯಕ್ಷ ಜಯಂತ್ ಚೌಧರಿ ಅವರು ಹೊರಹೋಗುತ್ತಾರೆ ಎಂದು ವ್ಯಂಗ್ಯವಾಡಿದರು.

    ಶುಕ್ರವಾರ ಅಖಿಲೇಶ್ ಯಾದವ್ ಮತ್ತು ಜಯಂತ್ ಚೌಧರಿ ಜಂಟಿ ಪತ್ರಿಕಾಗೋಷ್ಠಿ ನಡೆಸಿ ತಾವು ಒಟ್ಟಿಗೆ ಇದ್ದೇವೆ ಎಂದು ಹೇಳಿದ್ದರು. ಯುಪಿಯಲ್ಲಿ ಎಸ್‍ಪಿ ಸರ್ಕಾರ ರಚಿಸಿದರೆ, ಜಯಂತ್ ಭಾಯ್ ಅವರನ್ನು ತೆಗೆದುಹಾಕಲಾಗುತ್ತದೆ. ಅಜಂ ಖಾನ್ ಅವರು ಹಿಂತಿರುಗುತ್ತಾರೆ. ಮುಂದೆ ಏನಾಗುತ್ತದೆ ಎಂಬುದನ್ನು ಟಿಕೆಟ್ ಹಂಚಿಕೆಯಿಂದ ರಾಜ್ಯದ ಜನತೆ ಅರ್ಥ ಮಾಡಿಕೊಳ್ಳಬೇಕು ಎಂದರು.

    ಉತ್ತರ ಪ್ರದೇಶದಲ್ಲಿ ಜಾಟ್ ಸಮುದಾಯದ ಬೆಂಬಲವನ್ನು ಮರಳಿ ಪಡೆಯಲು ಬಿಜೆಪಿ ಪ್ರಯತ್ನಿಸುತ್ತಿದೆ. ಜನವರಿ 26ರಂದು ಜಾಟ್ ನಾಯಕರೊಂದಿಗೆ ಅಮಿತ್ ಶಾ ಸಭೆ ನಡೆಸಿ ಜಯಂತ್ ಚೌಧರಿ ಅವರು ತಪ್ಪು ದಾರಿ ಹಿಡಿದಿದ್ದಾರೆ. ಆರ್‍ಎಲ್‍ಡಿ ಅಧ್ಯಕ್ಷರಿಗೆ ತನ್ನ ಬಾಗಿಲು ಯಾವಾಗಲೂ ತೆರೆದಿರುತ್ತದೆ ಎಂದು ಹೇಳಿದ್ದರು.

    ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಉತ್ತರ ಪ್ರದೇಶದಿಂದ ಮಾಫಿಯಾವನ್ನು ನಿರ್ಮೂಲನೆ ಮಾಡಿದೆ. ಬೇರೆ ಪಕ್ಷಗಳು ಮತ್ತೆ ಸರ್ಕಾರ ರಚಿಸಿದರೆ ಉತ್ತರಪ್ರದೇಶದಲ್ಲಿ ಮಾಫಿಯಾ ಮತ್ತೆ ಬರಲಿದೆ ಎಂದು ಎಚ್ಚರಿಸಿದರು. ಇದನ್ನೂ ಓದಿ: ಇನ್ನು ಮುಂದೆ ಮಾಸ್ಕ್ ಹಾಕಿಕೊಂಡೇ ಐಫೋನ್ ಫೇಸ್ ಐಡಿ ಅನ್‍ಲಾಕ್ ಮಾಡ್ಬೋದು!

    ಉತ್ತರ ಪ್ರದೇಶದಲ್ಲಿ 403 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮಾರ್ಚ್ 7 ರಂದು ಅಂತಿಮ ಹಂತದ ಮತದಾನ ನಡೆಯಲಿದೆ. ಮಾರ್ಚ್ 10 ರಂದು  ಫಲಿತಾಂಶ ಘೋಷಣೆಯಾಗಲಿದೆ. ಇದನ್ನೂ ಓದಿ: ಸ್ವಘೋಷಿತ ದೇವಮಾನವನಿಗೆ ಮಗಳನ್ನೇ ದಾನ ಮಾಡಿದ ತಂದೆ -ಛೀಮಾರಿ ಹಾಕಿದ ಕೋರ್ಟ್

  • ಪ್ರತಿಪಕ್ಷಗಳು ಮಾಫಿಯಾವನ್ನು ರಕ್ಷಿಸುತ್ತಿದೆ: ಮಾಯಾವತಿ

    ಪ್ರತಿಪಕ್ಷಗಳು ಮಾಫಿಯಾವನ್ನು ರಕ್ಷಿಸುತ್ತಿದೆ: ಮಾಯಾವತಿ

    ಲಕ್ನೋ: ಪ್ರತಿಪಕ್ಷಗಳು ಅಪರಾಧವನ್ನು ರಾಜಕೀಯಗೊಳಿಸಿ, ಮಾಫಿಯಾವನ್ನು ರಕ್ಷಿಸುತ್ತದೆ ಎಂದು ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ವಾಗ್ದಾಳಿ ನಡೆಸಿದರು.

    ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಬಿಎಸ್‍ಪಿ ಹೊರತುಪಡಿಸಿ ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಅವರು ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದಾರೆ. ಇದರಿಂದಾಗಿ ರಾಜಕೀಯ ಪ್ರತಿಸ್ಪರ್ಧಿಗಳು ರಾಜ್ಯವನ್ನು ಹಿಂದುಳಿಸಿದ್ದಾರೆ ಎಂದು ಆರೋಪಿಸಿದರು.

    ಟ್ವೀಟ್‍ನಲ್ಲಿ ಏನಿದೆ?: ಬಿಎಸ್‍ಪಿ ಹೊರತುಪಡಿಸಿ ಎಲ್ಲಾ ಪಕ್ಷಗಳ ಸರ್ಕಾರಗಳು ರಾಜಕೀಯವನ್ನು ಅಪರಾಧೀಕರಿಸುವ ಮೂಲಕ ಮತ್ತು ಅಪರಾಧವನ್ನು ರಾಜಕೀಯಗೊಳಿಸುವುದರ ಮೂಲಕ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದಾರೆ. ಕಾನೂನಿನೊಂದಿಗೆ ಆಟವಾಡುವುದು ಮತ್ತು ತಮ್ಮ ಪಕ್ಷದ ಗೂಂಡಾಗಳನ್ನು ಹಾಗೂ ಮಾಫಿಯಾವನ್ನು ರಕ್ಷಿಸುತ್ತಿದ್ದಾರೆ. ಉತ್ತರ ಪ್ರದೇಶವನ್ನು ಬಡ ಮತ್ತು ಹಿಂದುಳಿಯುವಂತೆ ಮಾಡುವ ಮೂಲಕ ಜಂಗಲ್ ರಾಜ್‍ಗೆ ತಳ್ಳುತ್ತಿದ್ದಾರೆ ಎಂದು ಟ್ವೀಟ್‍ನಲ್ಲಿ ಕಿಡಿಕಾರಿದರು. ಇದನ್ನೂ ಓದಿ: ಬೊಮ್ಮಾಯಿ ಸರ್ಕಾರಕ್ಕೆ 6 ತಿಂಗಳು – ರಿಪೋರ್ಟ್ ಕಾರ್ಡ್ ತರಿಸಿಕೊಂಡ ಹೈಕಮಾಂಡ್!

    ಉತ್ತರಪ್ರದೇಶದ ಚುನಾವಣೆಗೆ ಇನ್ನೇನು ಕೆಲವೇ ವಾರಗಳು ಬಾಕಿ ಇದ್ದು, ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕೈ ತಪ್ಪಿದ್ದಕ್ಕೆ ಅಸಮಾಧಾನ ಇಲ್ಲ, ತುಮಕೂರು ಸಿಕ್ಕಿದ್ರೆ ಖುಷಿಯಾಗ್ತಿತ್ತು: ಮಾಧುಸ್ವಾಮಿ