Tag: uttarkannada

  • 1.38 ಕೋಟಿ ತೆರಿಗೆ ಕಟ್ಟುವಂತೆ ಗೋಕರ್ಣದ ದೇಗುಲಕ್ಕೆ ನೋಟಿಸ್

    1.38 ಕೋಟಿ ತೆರಿಗೆ ಕಟ್ಟುವಂತೆ ಗೋಕರ್ಣದ ದೇಗುಲಕ್ಕೆ ನೋಟಿಸ್

    ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ (Gokarna) ಪುರಾಣ ಪ್ರಸಿದ್ಧ ಮಹಾಬಲೇಶ್ವರ ದೇವಸ್ಥಾನದ ಹಣಕಾಸಿನ ವ್ಯವಹಾರಕ್ಕೆ ಸಂಬಂಧಪಟ್ಟಂತೆ 1.38 ಕೋಟಿ ತೆರಿಗೆ ಕಟ್ಟುವಂತೆ ಆದಾಯ ತೆರಿಗೆ (Income Tax) ಇಲಾಖೆ ದೇವಸ್ಥಾನದ ಆಡಳಿತ ಮಂಡಳಿಗೆ ನೋಟಿಸ್ ಜಾರಿ ಮಾಡಿದೆ.

    2015-16ನೇ ಸಾಲಿನಲ್ಲಿ ರಾಮಚಂದ್ರಾಪುರ ಮಠದಿಂದ (Ramachandrapur Mutt) ದೇವಸ್ಥಾನದ ಆಡಳಿತ ನಡೆಸುತ್ತಿದ್ದ ಸಂದರ್ಭದಲ್ಲಿ ಹಣಕಾಸಿನ ವ್ಯವಹಾರದಲ್ಲಿ ವ್ಯತ್ಯಯ ಕಂಡು ಬಂದ ಹಿನ್ನೆಲೆ ಆಡಳಿತ ಮಂಡಳಿಗೆ ಆದಾಯ ತೆರಿಗೆ ಇಲಾಖೆ ನೋಟಿಸ್ ನೀಡಿದೆ. ಈ ಕುರಿತು ಆಡಳಿತ ಮಂಡಳಿಯ ಅಧ್ಯಕ್ಷರಾಗಿರುವ ಸುಪ್ರೀಂ ಕೋರ್ಟ್‍ನ ನಿವೃತ್ತ ನ್ಯಾಯಮೂರ್ತಿ ಬಿ.ಎನ್.ಶ್ರೀಕೃಷ್ಣ (B N Sri Krishna) ಅವರ ನೇತೃತ್ವದಲ್ಲಿ ಇರುವ ದೇವಸ್ಥಾನ ಆಡಳಿತ ಮಂಡಳಿಯು ತುರ್ತಾಗಿ ಆನ್ ಲೈನ್ ಮೂಲಕ ದೇವಸ್ಥಾನ ಉಸ್ತುವಾರಿ ಸಮಿತಿ ಸಭೆ ನಡೆಸಿದೆ. ಈ ಸಭೆಯಲ್ಲಿ ತಕ್ಷಣದಲ್ಲಿ ದಂಡ ಪಾವತಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಲು ತೀರ್ಮಾನಿಸಿದರು.

    ಈ ಕುರಿತು ಮಾತನಾಡಿದ ಕಮಿಟಿ ಸದಸ್ಯರೂ ಆಗಿರುವ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್, ಹಿಂದೆ ಹಲವು ದೋಷಗಳು ಆಗಿದ್ದವು. ಇವುಗಳನ್ನು ಸರಿಪಡಿಸಿ ದೇವಸ್ಥಾನ ಕಾರ್ಯಗಳು ಸುಗಮವಾಗಿ ನಡೆದುಕೊಂಡು ಹೋಗಲು ಬೇಕಾದ ಎಲ್ಲಾ ಕಾರ್ಯವನ್ನು ಮಾಡಲಾಗುತ್ತದೆ. ಜೊತೆಗೆ ಆಡಳಿತದ ಲೆಕ್ಕಪತ್ರ ನಿರ್ವಹಣೆಗೆ ಲೆಕ್ಕಾಧಿಕಾರಿಯನ್ನು ನೇಮಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಉತ್ತರ ಕನ್ನಡದಲ್ಲಿ ಬಂದ್ ಆಗುತ್ತಾ 300ಕ್ಕೂ ಹೆಚ್ಚು ಶಾಲೆ..?

    ಉತ್ತರ ಕನ್ನಡದಲ್ಲಿ ಬಂದ್ ಆಗುತ್ತಾ 300ಕ್ಕೂ ಹೆಚ್ಚು ಶಾಲೆ..?

    ಕಾರವಾರ: ಸರ್ಕಾರಿ ಶಾಲೆ (Government School) ಎಂದಾಕ್ಷಣ ಮೂಗು ಮುರಿಯುವವರೇ ಹೆಚ್ಚು. ಬಡವರ ಪಾಲಿಗೆ ಸರಸ್ವತಿಯ ದೇಗುಲವಾಗಿದ್ದ ಶಾಲೆ ಮಕ್ಕಳ ಕೊರತೆ ಅಧ್ಯಾಪಕರ ಕೊರತೆಯಿಂದ ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲಿ 300 ಕ್ಕೂ ಹೆಚ್ಚು ಶಾಲೆಗಳನ್ನು ಬಂದ್ ಮಾಡಲು ಶಿಕ್ಷಣ ಇಲಾಖೆ (Education Department) ಮುಂದಾಗಿದೆ.

    ಬಹುತೇಕ ಅರಣ್ಯ ಹೊಂದಿದ ಹಾಗೂ ಕರ್ನಾಟಕದ ಗಡಿ ಜಿಲ್ಲೆ ಉತ್ತರಕನ್ನಡ (Uttarkannada). 80%ರಷ್ಟು ಅರಣ್ಯ ಪ್ರದೇಶವನ್ನೇ ಹೊಂದಿರುವ ಜಿಲ್ಲೆಯಲ್ಲಿ ಹಳ್ಳಿಗಳ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಈ ಭಾಗದ ವಿದ್ಯಾರ್ಥಿಗಳ ಅನುಕೂಲಕ್ಕೆ ತಕ್ಕಂತೆ ಗ್ರಾಮ ಗ್ರಾಮಗಳಲ್ಲಿ ಶಾಲೆಗಳನ್ನ ಸ್ಥಾಪಿಸಲಾಗಿತ್ತು. ಕೆಲವೆಡೆ ಗ್ರಾಮಗಳಲ್ಲಿ ಜನಸಂಖ್ಯೆ ಕಡಿಮೆಯಿರುವುದರಿಂದ ಶಾಲೆಗಳಲ್ಲಿ ಮಕ್ಕಳ ಸಂಖ್ಯೆಯೂ ಕಡಿಮೆಯಿದೆ. ಶಾಲೆ ಮಕ್ಕಳ ಕೊರತೆ ಅಧ್ಯಾಪಕರ ಕೊರತೆಯಿಂದ ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲಿ 300 ಕ್ಕೂ ಹೆಚ್ಚು ಶಾಲೆಗಳನ್ನು ಬಂದ್ ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ.

    ಕಾರವಾರದಲ್ಲಿ (Karwar) ಹತ್ತಕ್ಕಿಂತ ಕಡಿಮೆ ವಿದ್ಯಾರ್ಥಿಗಳಿರುವ 148 ಶಾಲೆಗಳಿವೆ. ಶಿರಸಿಯಲ್ಲೂ ಸಹ ಹತ್ತಕ್ಕಿಂತ ಕಡಿಮೆ ವಿದ್ಯಾರ್ಥಿಗಳು ವ್ಯಾಸಂಗ ಮಾಡುವ 149 ಶಾಲೆಗಳನ್ನ ಗುರುತಿಸಲಾಗಿದೆ. ಈ ಶಾಲೆಗಳಲ್ಲಿ ಬಹುಪಾಲು ಖಾಯಂ ಶಿಕ್ಷಕರ ಕೊರತೆಯಿದ್ದು ಅತಿಥಿ ಶಿಕ್ಷಕರನ್ನ ತೆಗೆದುಕೊಂಡು ಶಾಲೆ ನಡೆಸಲಾಗುತ್ತಿದೆ. ಆದರೆ ಇದೀಗ ಶಿಕ್ಷಕರ ಕೊರತೆ ನಿವಾರಿಸುವ ನಿಟ್ಟಿನಲ್ಲಿ ಹತ್ತಕ್ಕಿಂತ ಕಡಿಮೆ ವಿದ್ಯಾರ್ಥಿಗಳಿರುವ ಶಾಲೆಗಳನ್ನ ನೆರೆಯ ಶಾಲೆಗಳೊಂದಿಗೆ ವಿಲೀನಗೊಳಿಸುವ ಚಿಂತನೆಗೆ ಸರ್ಕಾರ ಮುಂದಾಗಿದೆ. ಇದನ್ನೂ ಓದಿ: ಮಂಗಳೂರಿನಲ್ಲಿ ಡ್ರಗ್ಸ್ ಚಾಕ್ಲೇಟ್ ದಂಧೆ- FSL ವರದಿ ಬೆನ್ನಲ್ಲೇ ಇಬ್ಬರ ಬಂಧನ

    ಗುಡ್ಡಗಾಡು ಪ್ರದೇಶ ಹೊಂದಿರುವ ಉತ್ತರಕನ್ನಡ ಜಿಲ್ಲೆಯಲ್ಲೇ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಶಾಲೆ ಸೇರಿ ಮುನ್ನೂರರಷ್ಟು ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಕೊರತೆಯಿದೆ. ಹತ್ತಕ್ಕಿಂತ ಕಡಿಮೆ ವಿದ್ಯಾರ್ಥಿಗಳಿರುವ ಶಾಲೆಗೆ ಒಬ್ಬರೇ ಶಿಕ್ಷಕರನ್ನ ನೇಮಕ ಮಾಡುವುದರಿಂದ ಶಾಲೆಗಳಲ್ಲಿ ವಿಷಯಕ್ಕೆ ತಕ್ಕಂತೆ ಶಿಕ್ಷಕರ ಕೊರತೆ ಆಗಲಿದೆ. ಹೀಗಾಗಿ ಸರ್ಕಾರಿ ಶಾಲೆಗಳಿಗೆ ಪಾಲಕರು ತಮ್ಮ ಮಕ್ಕಳನ್ನ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ. ಆದ್ರೆ, ಬಡ ಕುಟುಂಬಗಳು ದೊಡ್ಡ ಮೊತ್ತದ ಡೊನೇಷನ್ ನೀಡಿ ಖಾಸಗಿ ಶಾಲೆಗೆ ಮಕ್ಕಳನ್ನು ಕಳಿಸೋದು ಕಷ್ಟಕರ. ಹೀಗಿರುವಾಗ ವಿದ್ಯಾರ್ಥಿಗಳು ಕಡಿಮೆಯಿರುವ ಕಾರಣ ನೀಡಿ ಶಾಲೆಯನ್ನ ವಿಲೀನಗೊಳಿಸುವ ಸರ್ಕಾರದ ಕ್ರಮ ಸರಿಯಲ್ಲ ಅಂತ ಸಾಹಿತಿಗಳು ಆಕ್ಷೇಪಿಸಿದ್ದಾರೆ.

    ಶಿಕ್ಷಣದಿಂದ ಯಾರೊಬ್ಬರೂ ವಂಚಿತವಾಗಬಾರದು ಎನ್ನುವ ಉದ್ದೇಶದಿಂದ ಪ್ರತಿ ಗ್ರಾಮದಲ್ಲಿ ತೆರೆದಿರುವ ಸರ್ಕಾರಿ ಶಾಲೆಗಳನ್ನ ವಿದ್ಯಾರ್ಥಿಗಳ ಕೊರತೆ ಹೆಸರಿನಲ್ಲಿ ಸರ್ಕಾರ ಮುಚ್ಚಲು ಮುಂದಾಗುತ್ತಿರೋದು ನಿಜಕ್ಕೂ ದುರಂತ. ಈ ಬಗ್ಗೆ ಶಿಕ್ಷಣ ಸಚಿವರು ತಜ್ಞರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಿ ಅನ್ನೋದೇ ನಮ್ಮ ಆಶಯ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಉತ್ತರಕನ್ನಡದಲ್ಲಿ ಮಳೆಯಬ್ಬರಕ್ಕೆ ನಡೆದುಕೊಂಡು ಹೋಗ್ತಿದ್ದ ಇಬ್ಬರು ನೀರುಪಾಲು

    ಉತ್ತರಕನ್ನಡದಲ್ಲಿ ಮಳೆಯಬ್ಬರಕ್ಕೆ ನಡೆದುಕೊಂಡು ಹೋಗ್ತಿದ್ದ ಇಬ್ಬರು ನೀರುಪಾಲು

    ಕಾರವಾರ: ಉತ್ತರಕನ್ನಡ (Rain in Uttarakannada) ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಭಾರೀ ಮಳೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಇಬ್ಬರು ಕಾಲು ಜಾರಿ ಬಿದ್ದು ಸಾವು ಕಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬರ್ಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಟ್ಕುಳಿ ಗ್ರಾಮದಲ್ಲಿ ನಡೆದಿದೆ.

    ಸತೀಶ ಪಾಂಡುರಂಗ ನಾಯ್ಕ (40), ಉಲ್ಲಾಸ ಗಾವಡಿ (50) ನೀರುಪಾಲಾದ ದುರ್ದೈವಿಗಳಾಗಿದ್ದಾರೆ. ಜಲಾವೃತವಾಗಿದ್ದ ಗದ್ದೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾಲು ಜಾರಿ ನೀರಿನಲ್ಲಿ ಬಿದ್ದು ಅನಾಹುತ ನಡೆದಿದೆ. ಇದನ್ನೂ ಓದಿ: ಕುಮಟಾದಲ್ಲಿ ಅಬ್ಬರದ ಮಳೆ 30 ಮರಗಳು ಧರೆಗೆ

    ನೀರಿನ ಆರ್ಭಟಕ್ಕೆ ಇಬ್ಬರ ಶವ ತೇಲಿಕೊಂಡು ಹೋಗಿದ್ದು ಕೆಲವು ಗಂಟೆಗಳ ಹುಡುಕಾಟದ ಬಳಿಕ ಪತ್ತೆಯಾಗಿದೆ. ಘಟನೆ ಸಂಬಂಧ ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಜಿಲ್ಲೆಯಲ್ಲಿ ಮಳೆಗೆ ಇದು ಮೂರನೇ ಬಲಿಯಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಪಾಯದ ಮಟ್ಟ ಮೀರಿ ಹರಿಯುತ್ತಿರೋ ನದಿಗಳು- ಸೇತುವೆ ಮುಳುಗಡೆ, ಕೃಷಿಭೂಮಿ ಜಲಾವೃತ

    ಅಪಾಯದ ಮಟ್ಟ ಮೀರಿ ಹರಿಯುತ್ತಿರೋ ನದಿಗಳು- ಸೇತುವೆ ಮುಳುಗಡೆ, ಕೃಷಿಭೂಮಿ ಜಲಾವೃತ

    ಕಾರವಾರ: ಸತತವಾಗಿ ಸುರಿಯುತ್ತಿರುವ ಕುಂಭದ್ರೋಣ ಮಳೆಯಿಂದಾಗಿ ಉತ್ತರ ಕನ್ನಡ ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ.

    ಜಿಲ್ಲೆಯ ಜೋಯಿಡಾದ ಪಾಂಡರಿನದಿ ಅಪಾಯ ಮಟ್ಟಕ್ಕಿಂತಲೂ ಹೆಚ್ಚಾಗಿ ಹರಿಯುತ್ತಿದ್ದು ಇಲ್ಲಿನ ಚಾಂದೇವಾಡಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ನದಿಯ ನೀರಿನಿಂದ ಮುಳುಗಡೆಯಾಗಿದೆ.

    ಸಿದ್ದಾಪುರ, ಶಿರಸಿ ಭಾಗದಲ್ಲಿ ಹೆಚ್ಚಿನ ಮಳೆಯಾಗುತಿದ್ದು ಬನವಾಸಿಯಲ್ಲಿ ಹರಿಯುತ್ತಿರುವ ವರದಾನದಿ ತುಂಬಿ ಅಪಾಯದಮಟ್ಟದಲ್ಲಿ ಹರಿಯುತ್ತಿದೆ. ಸಿದ್ದಾಪುರದ 250 ಎಕರೆಗೂ ಹೆಚ್ಚು ಕೃಷಿ ಭೂಮಿ ಜಲಾವೃತವಾಗಿದ್ದು ಪ್ರವಾಹದ ಭೀತಿ ಎದುರಾಗಿದೆ. ಇತ್ತ ಕರಾವಳಿ ಭಾಗದಲ್ಲಿ ಮಳೆಯ ಆರ್ಭಟ ಅಲ್ಪಮಟ್ಟಿಗೆ ಕಮ್ಮಿಯಾಗಿದ್ದರೂ ಸಮುದ್ರದಲ್ಲಿ ನೀರಿನ ಮಟ್ಟ ಹೆಚ್ಚಾಗಿದ್ದು, ಅಲೆಗಳ ಅಬ್ಬರ ಹೆಚ್ಚಾಗಿ ಸಮುದ್ರಕೊರೆತ ಕೂಡ ಪ್ರಾರಂಭವಾಗಿದೆ.