Tag: uttarpradesh

  • ಹೈಟೆನ್ಷನ್ ತಂತಿ ತಗುಲಿ ಹೊತ್ತಿ ಉರಿದ ಬಸ್ – ಮೂವರು ಕಾರ್ಮಿಕರು ಸಾವು

    ಹೈಟೆನ್ಷನ್ ತಂತಿ ತಗುಲಿ ಹೊತ್ತಿ ಉರಿದ ಬಸ್ – ಮೂವರು ಕಾರ್ಮಿಕರು ಸಾವು

    ಜೈಪುರ: ಉತ್ತರ ಪ್ರದೇಶದ (Uttar Pradesh) ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್‌ನ ಮೇಲ್ಭಾಗವು ಹೈಟೆನ್ಷನ್ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ಸ್ಥಳದಲ್ಲೇ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, ಸುಮಾರು 12 ಮಂದಿಗೆ ಗಂಭೀರ ಸುಟ್ಟು ಗಾಯಗಳಾಗಿವೆ.

    ಜೈಪುರ (Jaipur) ಗ್ರಾಮೀಣ ಜಿಲ್ಲೆಯ ಶಹಪುರ ಉಪವಿಭಾಗದ ಮನೋಹರ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ಅಪಘಾತ ಸಂಭವಿಸಿದೆ. ಟೋಡಿ ಗ್ರಾಮದ ಇಟ್ಟಿಗೆ ಗೂಡಿಗೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್‌ಗೆ 11,000 ವೋಲ್ಟ್ ಸಾಮರ್ಥ್ಯದ ಹೈಟೆನ್ಷನ್ ಲೈನ್ ತಗುಲಿದೆ. ಇದನ್ನೂ ಓದಿ: ಕೀನ್ಯಾ | 12 ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಪತನ – ಎಲ್ಲರೂ ಸಾವನ್ನಪ್ಪಿರುವ ಶಂಕೆ

    ಮನೋಹರಪುರದ ಹಳ್ಳಿಯೊಂದರ ಬಳಿಯ ರಸ್ತೆಯಿಂದ ಬಸ್ ಹಾದು ಹೋಗುವಾಗ ಬಸ್‌ನ ಮೇಲ್ಭಾಗದಲ್ಲಿ ಇರಿಸಲಾಗಿದ್ದ ಗ್ಯಾಸ್ ಸಿಲಿಂಡರ್‌ಗಳು ಮತ್ತು ಇತರ ಗೃಹೋಪಯೋಗಿ ವಸ್ತುಗಳು ಹೈಟೆನ್ಷನ್ ವಿದ್ಯುತ್ ತಂತಿಗೆ ತಾಗಿವೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತೇಜ್‌ಪಾಲ್ ಸಿಂಗ್ ತಿಳಿಸಿದ್ದಾರೆ.

    ಬಸ್‌ನ ಮೇಲ್ಭಾಗವು ಹೈಟೆನ್ಷನ್ ಲೈನ್‌ಗೆ ತಗುಲುತ್ತಿದ್ದಂತೆ, ಜೋರಾದ ಸ್ಫೋಟ ಸದ್ದು ಕೇಳಿತ್ತು. ಕಾರ್ಮಿಕರ ಕಿರುಚಾಟ ಸದ್ದು ಕೇಳಿ ಹತ್ತಿರದ ನಿವಾಸಿಗಳು ಸ್ಥಳಕ್ಕೆ ಧಾವಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ಮನೋಹರ್‌ಪುರ ಪೊಲೀಸರು ಸ್ಥಳಕ್ಕೆ ಆಗಮಿಸಿ, ಗಾಯಾಳುಗಳನ್ನು ತಕ್ಷಣವೇ ಶಹಪುರ ಉಪ-ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ರವಾನಿಸಿದ್ದಾರೆ.

  • ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ – ʻಇದಿನ್ನೂ ಟ್ರೈಲರ್‌ʼ ಗೋಲ್ಡಿ ಬ್ರಾರ್ ಗ್ಯಾಂಗ್ ವಾರ್ನಿಂಗ್‌

    ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ – ʻಇದಿನ್ನೂ ಟ್ರೈಲರ್‌ʼ ಗೋಲ್ಡಿ ಬ್ರಾರ್ ಗ್ಯಾಂಗ್ ವಾರ್ನಿಂಗ್‌

    ಉತ್ತರ ಪ್ರದೇಶದ ಬರೇಲಿಯಲ್ಲಿರುವ ಬಾಲಿವುಡ್ (Bollywood) ನಟಿ ದಿಶಾ ಪಟಾನಿ (Disha Patani) ಅವರ ಮನೆ ಹೊರಗೆ ಶುಕ್ರವಾರ ತಡರಾತ್ರಿ ಗುಂಡಿನ ದಾಳಿ ನಡೆದಿದೆ.

    ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಬೆಳಗ್ಗಿನ ಜಾವ 3:30ರ ಸುಮಾರಿಗೆ, ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ದಿಶಾ ಪಟಾನಿ ಅವರ ಮನೆಯ ಮೇಲೆ ಮೂರರಿಂದ ನಾಲ್ಕು ಸುತ್ತು ಗುಂಡು (Fire) ಹಾರಿಸಿದ್ದಾರೆ. ಗೋಲ್ಡಿ ಬ್ರಾರ್ ಗ್ಯಾಂಗ್ ಗುಂಡಿನ ದಾಳಿ ಹೊಣೆಯನ್ನ ಹೊತ್ತುಕೊಂಡಿದೆ. ಸದ್ಯ ಘಟನೆಯಲ್ಲಿ ಯಾರೊಬ್ಬರೂ ಗಾಯಗೊಂಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಸಾಹಸಸಿಂಹ ವಿಷ್ಣುವರ್ಧನ್‌, ಬಿ.ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಣೆ

    ಈ ಘಟನೆಯು ಪ್ರದೇಶದಲ್ಲಿ ಕೋಲಾಹಲ ಸೃಷ್ಟಿಸಿದ್ದು ಮಾಹಿತಿ ಪಡೆದ ನಂತರ, ದಿಶಾ ಪಟಾನಿ ಅವರ ಮನೆ ಮುಂದೆ ಭಾರೀ ಪೊಲೀಸ್ ಪಡೆ ನಿಯೋಜಿಸಲಾಗಿದೆ.  ಇದನ್ನೂ ಓದಿ: ರಾಮನ ಪಾತ್ರಕ್ಕಾಗಿ ಮಾಂಸಾಹಾರ, ಮದ್ಯ ಸೇವನೆ ಬಿಟ್ಟಿದ್ದರಂತೆ ರಣ್‌ಬೀರ್ ಕಪೂರ್

    ದಾಳಿ ಹೊಣೆ ಹೊತ್ತುಕೊಂಡಿರುವ ಗೋಲ್ಡಿ ಬ್ರಾರ್‌ ಗ್ಯಾಂಗ್‌ ಸೋಷಿಯಲ್‌ ಮೀಡಿಯಾ ಪೋಸ್ಟ್‌ವೊಂದನ್ನು ಹಂಚಿಕೊಂಡಿದೆ. ಹಿಂದಿಯಲ್ಲಿ ಬರೆಯಲಾದ ಪೋಸ್ಟ್‌ನಲ್ಲಿ ಇಬ್ಬರು ಪುರುಷರ ಹೆಸರನ್ನು ಉಲ್ಲೇಖಿಸಲಾಗಿದೆ. ಜೊತೆಗೆ ಇದು ಚಿತ್ರೋದ್ಯಮಕ್ಕೆ ನೀಡಲಾದ ಎಚ್ಚರಿಕೆ ಎಂದೂ ಕೂಡ ಬರೆದುಕೊಂಡಿದೆ.

    ಪತ್ರದಲ್ಲಿ ಏನಿದೆ?
    ಎಲ್ಲಾ ಸಹೋದರರಿಗೆ ರಾಮ್ ರಾಮ್… ನಾನು, ವೀರೇಂದ್ರ ಚರಣ್, ಮಹೇಂದ್ರ ಶರಣ್ (ದೆಲಾನಾ).
    ಸಹೋದರರೇ, ಇಂದು ಖುಷ್ಬೂ ಪಟಾನಿ/ದಿಶಾ ಪಟಾನಿ (ಬಾಲಿವುಡ್ ನಟಿ) ಮನೆಯಲ್ಲಿ (ವಿಲ್ಲಾ ನಂ. 40, ಸಿವಿಲ್ ಲೈನ್ಸ್, ಬರೇಲಿ, ಯುಪಿ) ನಡೆದ ಗುಂಡಿನ ದಾಳಿಯನ್ನು ನಾವು ಮುಗಿಸಿದ್ದೇವೆ. ಅವರು ನಮ್ಮ ಪೂಜ್ಯ ಸಂತರನ್ನು (ಪ್ರೇಮಾನಂದ ಜಿ ಮಹಾರಾಜ್ ಮತ್ತು ಅನಿರುದ್ಧಾಚಾರ್ಯ ಜಿ ಮಹಾರಾಜ್) ಅವಮಾನಿಸಿದ್ದಾರೆ. ಅಲ್ಲದೇ ನಮ್ಮ ಸನಾತನ ಧರ್ಮವನ್ನು ಅವಮಾನಿಸಲು ಪ್ರಯತ್ನಿಸಿದರು. ನಮ್ಮ ದೇವತೆಗಳ ಮೇಲಿನ ಅವಮಾನ ಸಹಿಸಲಾಗದು. ಇದು ಕೇವಲ ಟ್ರೈಲರ್‌ ಅಷ್ಟೇ. ಮುಂದಿನ ಬಾರಿ, ಅವರು ಅಥವಾ ಬೇರೆ ಯಾರಾದರೂ ನಮ್ಮ ಧರ್ಮದ ಬಗ್ಗೆ ಅಗೌರವ ತೋರಿಸಿದ್ರೆ, ಅವರ ಮನೆಯಲ್ಲಿ ಯಾರೂ ಜೀವಂತವಾಗಿ ಉಳಿಯುವುದಿಲ್ಲ ಎಂದು ಎಚ್ಚರಿಕೆ ನೀಡಿದೆ.  ಇದನ್ನೂ ಓದಿ: ಕಾಂತಾರಕ್ಕೆ ಕೈಜೋಡಿಸಿದ ಗಾಯಕ ದಿಲ್ಜಿತ್ ಸಿಂಗ್

    ಇನ್ನೂ ಘಟನೆ ಬಳಿಕ ನೆರೆಹೊರೆಯ ಜನ ಭಯಭೀತರಾಗಿದ್ದಾರೆ. ಕುಟುಂಬಸ್ಥರು ಆತಂಕಗೊಂಡಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದು, ಇಬ್ಬರು ಬೈಕ್ ಸವಾರರು ಸಿಸಿಟಿವಿಯಲ್ಲಿ ಕಾಣಿಸಿಕೊಂಡಿದ್ದಾರೆ.

    ಏತನ್ಮಧ್ಯೆ, ಗುಂಡು ಹಾರಿಸಿದ ಯುವಕರನ್ನು ಹಿಡಿಯಲು ಹಲವಾರು ತಂಡಗಳನ್ನು ರಚಿಸಲಾಗಿದೆ ಎಂದು ಬರೇಲಿ ಎಸ್‌ಎಸ್‌ಪಿ ಅನುರಾಗ್ ಆರ್ಯ ಹೇಳಿದ್ದಾರೆ. ಇದರೊಂದಿಗೆ, ಸುತ್ತಮುತ್ತಲಿನ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಸಹ ಸ್ಕ್ಯಾನ್ ಮಾಡಲಾಗುತ್ತಿದೆ.

  • ಹನಿಮೂನ್‌ಗೆ ತೆರಳಿದ್ದ ದಂಪತಿ ನಾಪತ್ತೆ ಕೇಸ್ – ಪತ್ನಿ ಅರೆಸ್ಟ್

    ಹನಿಮೂನ್‌ಗೆ ತೆರಳಿದ್ದ ದಂಪತಿ ನಾಪತ್ತೆ ಕೇಸ್ – ಪತ್ನಿ ಅರೆಸ್ಟ್

    – ಪತಿಯ ಕೊಲೆಗೆ ಸಂಚು ರೂಪಿಸಿದ್ದ ಆರೋಪದಡಿ ಬಂಧನ

    ಶಿಲ್ಲಾಂಗ್: ಹನಿಮೂನ್‌ಗೆಂದು ಮೇಘಾಲಯಕ್ಕೆ (Meghalaya) ತೆರಳಿದ್ದ ಇಂದೋರ್ ದಂಪತಿ (Indore Couple) ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿಯ ಕೊಲೆಗೆ ಸಂಚು ರೂಪಿಸಿದ ಆರೋಪದಡಿ ಉತ್ತರ ಪ್ರದೇಶದ (Uttar Pradesh) ಗಾಜಿಪುರದಲ್ಲಿ ಪತ್ನಿಯನ್ನು ಬಂಧಿಸಲಾಗಿದೆ.

    ರಾಜಾ ರಘುವಂಶಿ (30) ಹತ್ಯೆಗೆ ಸಂಬಂಧಿಸಿದಂತೆ ಪತ್ನಿ ಸೋನಮ್ ರಘುವಂಶಿ ಸೇರಿ ನಾಲ್ವರನ್ನು ಬಂಧಿಸಲಾಗಿದೆ. ಸೋನಮ್ ಕೊಲೆಗಾರರನ್ನು ನೇಮಿಸಿಕೊಂಡು ಹನಿಮೂನ್ ಸಮಯದಲ್ಲಿ ತನ್ನ ಪತಿಯ ಕೊಲೆಗೆ ಸಂಚು ರೂಪಿಸಿದ್ದಾರೆ ಎಂದು ಮೇಘಾಲಯ ಡಿಜಿಪಿ ಇದಶಿಶಾ ನೊಂಗ್ರಾಂಗ್ ಹೇಳಿದ್ದಾರೆ. ಇದನ್ನೂ ಓದಿ: ಎಕ್ಸ್‌ಪ್ರೆಸ್ ವೇಯಲ್ಲಿ ಕಾರುಗಳ ನಡುವೆ ಅಪಘಾತ – ಇಬ್ಬರು ಸಾವು, ನಾಲ್ವರು ಗಂಭೀರ

    ಮೇ 23ರಂದು ಹನಿಮೂನ್‌ಗೆಂದು ಮೇಘಾಲಯಕ್ಕೆ ಆಗಮಿಸಿದ್ದ ದಂಪತಿ, ಮಳೆಯಲ್ಲಿ ಸಮೃದ್ಧಿಯಾದ ಬೆಟ್ಟದ ಸೌಂದರ್ಯವನ್ನು ಕಣ್ತುಂಬಿಕೊಳ್ಳುವ ಸಲುವಾಗಿ ಚಿರಾಪುಂಜಿಗೆ ಬಂದಿದ್ದರು. ಈ ವೇಳೆ ಇಬ್ಬರೂ ನಾಪತ್ತೆಯಾಗಿದ್ದರು. ಈ ಸಂಬಂಧ ಮಿಸ್ಸಿಂಗ್ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಿದ್ದ ಪೊಲೀಸರಿಗೆ ಆಳವಾದ ಕಂದಕದಲ್ಲಿ ಮೃತದೇಹವೊಂದು ಸಿಕ್ಕಿದ್ದು, ಕೈಯಲ್ಲಿದ್ದ ಟ್ಯಾಟೂ ನೋಡಿ ಇದು ಮೃತ ರಘುವಂಶಿಯದ್ದೇ ಎಂದು ಪತ್ತೆ ಮಾಡಲಾಗಿತ್ತು. ಪತ್ನಿಯ ದೇಹಕ್ಕಾಗಿ ಹುಡುಕಾಟ ನಡೆಸುತ್ತಿದ್ದಾಗಲೇ ಸ್ಥಳೀಯ ಗೈಡ್‌ವೊಬ್ಬರ ಹೇಳಿಕೆ ಪ್ರಕರಣಕ್ಕೆ ರೋಚಕ ತಿರುವು ನೀಡಿತ್ತು. ಇದನ್ನೂ ಓದಿ: ಹಾಸನ| ನಿಲ್ಲಿಸಿದ್ದ ಕಾರಿನ ಡೋರ್‌ ತೆಗೆದು 6.30 ಲಕ್ಷ ಹಣ ಎಗರಿಸಿದ ಕಳ್ಳ

    ಗೈಡ್ ಹೇಳಿದ್ದೇನು?
    ಮೇ 23 ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ನೊಂಗ್ರಿಯಾತ್‌ನಿಂದ ಮಾವ್ಲಾಖಿಯಾತ್‌ಗೆ 3,000 ಮೆಟ್ಟಿಲುಗಳನ್ನು ಹತ್ತುತ್ತಿದ್ದಾಗ ಮೂವರು ಪುರುಷ ಪ್ರವಾಸಿಗರು ದಂಪತಿ ಜೊತೆಗೆ ಇದ್ದುದ್ದನ್ನು ನೋಡಿದೆ. ಮೇ.22ರಂದು ದಂಪತಿಯನ್ನ ನೊಂಗ್ರಿಯಾಟ್‌ಗೆ ಕರೆದೊಯ್ಯಲು ನಾನು ಮುಂದಾದೆ. ಆದರೆ, ಅವರು ನನ್ನ ಗೈಡ್ ಸೇವೆಯನ್ನ ಒಳ್ಳೆಯ ಮಾತುಗಳಿಂದಲೇ ಬೇಡವೆಂದರು. ಇದೇ ವೇಳೆ ಭಾ ವಾನ್ಸಾಯಿ ಎಂಬ ಇನ್ನೊಬ್ಬ ಗೈಡ್‌ನನ್ನು ನೇಮಕ ಮಾಡಿಕೊಂಡ ದಂಪತಿ, ಶಿವಾರಾ ಹೋಂಸ್ಟೇಯಲ್ಲಿ ರಾತ್ರಿ ಕಳೆದು, ಮರುದಿನ ಅವರಿಬ್ಬರೇ ಹೊರಬಂದರು ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಾಲ್ತುಳಿತದಲ್ಲಿ ಗಾಯಗೊಂಡವರಿಗೆ ಡಿಸಿ ನೋಟಿಸ್ – ತನಿಖೆಗೆ ಹಾಜರಾಗುವಂತೆ 45 ಮಂದಿಗೆ ಸೂಚನೆ

    ನಾನು ಅವರನ್ನು ಮತ್ತೆ ನೋಡಿದಾಗ ನಾಲ್ವರು ಪುರುಷರಿದ್ದರು, ಆದ್ರೆ ಅವರು ಹಿಂದಿಯಲ್ಲಿ ಮಾತನಾಡುತ್ತಿದ್ದರು. ಹಾಗಾಗಿ ನನಗೆ ಅದನ್ನು ಸಂಪೂರ್ಣವಾಗಿ ಅರ್ಥ ಮಾಡಿಕೊಳ್ಳಲು ಆಗಲಿಲ್ಲ. ಪುರುಷರು ಮೌಲಖಿಯಾತ್ ತಲುಪಿದಾಗ, ದಂಪತಿಗಳ ಸ್ಕೂಟರ್ ಅಲ್ಲಿ ಇರಲಿಲ್ಲ ಎಂದು ಗೈಡ್ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬಂಡೀಪುರದಲ್ಲಿ ಸಿದ್ಧವಾಯ್ತು ಟೈಗರ್ ರಿಸರ್ಚ್ ಮಾನಿಟರಿಂಗ್ ಸೆಲ್

  • ಮಹಾ ಕುಂಭಮೇಳದಲ್ಲಿ ಕಾಲ್ತುಳಿತ | ರಾಜ್ಯದ ಗಾಯಾಳುಗಳನ್ನು ಕರೆತರಲು ಅಗತ್ಯ ಕ್ರಮ: ಡಿಸಿಎಂ

    ಮಹಾ ಕುಂಭಮೇಳದಲ್ಲಿ ಕಾಲ್ತುಳಿತ | ರಾಜ್ಯದ ಗಾಯಾಳುಗಳನ್ನು ಕರೆತರಲು ಅಗತ್ಯ ಕ್ರಮ: ಡಿಸಿಎಂ

    ಬೆಂಗಳೂರು: ಪ್ರಯಾಗ್‌ರಾಜ್‌ನ (Prayagraj) ಮಹಾ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ (Maha Kumbh Stampede) ಡಿಸಿಎಂ ಡಿ.ಕೆ ಶಿವಕುಮಾರ್‌ (D.K Shivakumar) ವಿಷಾದ ವ್ಯಕ್ತಪಡಿಸಿದ್ದಾರೆ.

    ಈ ವಿಚಾರವಾಗಿ ಅವರು ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ಕಾಲ್ತುಳಿತದ ವಿಚಾರ ತಿಳಿದು ಬೇಸರವಾಗಿದೆ. ಘಟನೆಯಲ್ಲಿ ಹಲವರು ಜೀವಗಳನ್ನು ಕಳೆದುಕೊಂಡಿದ್ದಾರೆ. ಹಲವಾರು ಜನ ಗಾಯಗೊಂಡಿದ್ದಾರೆ. ಪ್ರೀತಿಪಾತ್ರರನ್ನು ಕಳೆದುಕೊಂಡ ದುಃಖಿತ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

    ಮಹಾಕುಂಭದಲ್ಲಿ ಭಾಗವಹಿಸಿರುವ ಕನ್ನಡಿಗರು ಸುರಕ್ಷಿತವಾಗಿರುವಂತೆ ಸಲಹೆ ನೀಡಿದ್ದಾರೆ. ಇನ್ನೂ, ಕರ್ನಾಟಕದ ಗಾಯಾಳುಗಳನ್ನು ಸುರಕ್ಷಿತವಾಗಿ ಕರೆತರಲು ನಮ್ಮ ಸರ್ಕಾರ ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ತಿಳಿಸಿದ್ದಾರೆ.

    ಕಾಲ್ತುಳಿತ ದುರಂತದಲ್ಲಿ ಬೆಳಗಾವಿಯ ತಾಯಿ ಹಾಗೂ ಮಗಳು ಸೇರಿ ನಾಲ್ವರು ಕನ್ನಡಿಗರು ಸಾವಿಗೀಡಾಗಿದ್ದಾರೆ. ಇನ್ನೂ ಕೆಲವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

  • ಕುಂಭಮೇಳದಲ್ಲಿ ಪಾಲ್ಗೊಂಡಿರುವ ಕನ್ನಡಿಗರು ಜಾಗರೂಕತೆಯಿಂದಿರಿ: ಸಿಎಂ

    ಕುಂಭಮೇಳದಲ್ಲಿ ಪಾಲ್ಗೊಂಡಿರುವ ಕನ್ನಡಿಗರು ಜಾಗರೂಕತೆಯಿಂದಿರಿ: ಸಿಎಂ

    ಬೆಂಗಳೂರು: ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳದಲ್ಲಿ ಇಂದು ಮುಂಜಾನೆ ಸಂಭವಿಸಿದ ಕಾಲ್ತುಳಿತದಲ್ಲಿ (Maha Kumbh Stampede) ಹಲವರು ಸಾವಿಗೀಡಾದ ಸುದ್ದಿ ತಿಳಿದು ಸಿಎಂ ಸಿದ್ದರಾಮಯ್ಯ (Siddaramaiah) ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ.

    ಈ ಬಗ್ಗೆ ಎಕ್ಸ್‌ನಲ್ಲಿ ಅವರು ಪೋಸ್ಟ್‌ ಮಾಡಿದ್ದಾರೆ. ಪೋಸ್ಟ್‌ನಲ್ಲಿ ಮೃತರ ಆತ್ಮಗಳಿಗೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

    ಕಾಲ್ತುಳಿತದಲ್ಲಿ ರಾಜ್ಯದ ಕೆಲವರು ಗಾಯಗೊಂಡಿರುವ ಮಾಹಿತಿಯಿದೆ. ಅವರೆಲ್ಲರನ್ನು ಕ್ಷೇಮವಾಗಿ ರಾಜ್ಯಕ್ಕೆ ಕರೆತರಲು ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ನಮ್ಮವರ ರಕ್ಷಣೆಗೆ ಸರ್ಕಾರ ಎಲ್ಲಾ ರೀತಿಯ ಪ್ರಯತ್ನವನ್ನು ನಡೆಸುತ್ತಿದೆ. ಕುಂಭಮೇಳದಲ್ಲಿ ಪಾಲ್ಗೊಂಡಿರುವ ಕನ್ನಡಿಗರು ಸ್ವಲ್ಪ ಜಾಗರೂಕತೆಯಿಂದಿರಿ ಎಂದು ‌ಮನವಿ ಮಾಡಿಕೊಂಡಿದ್ದಾರೆ.

  • ಮಹಾ ಕುಂಭಮೇಳದಲ್ಲಿ ಆರೂವರೆ ಕೋಟಿ ಭಕ್ತರ ಪುಣ್ಯಸ್ನಾನ

    ಮಹಾ ಕುಂಭಮೇಳದಲ್ಲಿ ಆರೂವರೆ ಕೋಟಿ ಭಕ್ತರ ಪುಣ್ಯಸ್ನಾನ

    ಪ್ರಯಾಗ್‌ರಾಜ್‌: ಉತ್ತರಪ್ರದೇಶದ ಪ್ರಯಾಗ್‌ರಾಜ್‌ನ ಗಂಗಾ ತೀರದಲ್ಲಿ ಮಹಾ ಕುಂಭಮೇಳದ (Mahakumbh 2025) ಮೂರನೇ ದಿನವೂ ಭಕ್ತಸಾಗರ (Devotees) ತುಂಬಿ ತುಳುಕಿದೆ.

    ಈವರೆಗೂ ಆರೂವರೆ ಕೋಟಿಗೂ ಅಧಿಕ ಭಕ್ತರು ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ (Holy bath) ಮಾಡಿದ್ದಾರೆ. ಮೊದಲ ದಿನ 1.75 ಕೋಟಿ ಮಂದಿ, 2ನೇ ದಿನ 3.50 ಕೋಟಿ ಮಂದಿ, ಮೂರನೇ ದಿನವಾದ ಇಂದು ಕೂಡ 1 ಕೋಟಿಗೂ ಹೆಚ್ಚು ಮಂದಿ ಕೊರೆವ ಚಳಿ ಲೆಕ್ಕಿಸದೇ ಅಮೃತ ಸ್ನಾನದಲ್ಲಿ ತೊಡಗಿದ್ದು ಕಂಡುಬಂತು.

    ಮಹಾಕುಂಭಮೇಳದಲ್ಲಿ ಪಾಲ್ಗೊಂಡಿರುವ ವಿದೇಶಿ ಭಕ್ತೆಯೊಬ್ಬರು, ಮಡಿಲಲ್ಲಿ ಗಣೇಶನ ವಿಗ್ರಹವನ್ನು ಹೊಂದಿರುವ ಫೋಟೋ ವೈರಲ್ ಆಗಿದೆ. ಬ್ಯೂಟಿ ಆಫ್ ಸನಾತನ್, ಜೈ ಗಣೇಶ್ ಎಂಬ ಕಾಮೆಂಟ್‌ಗಳು ಹೊರಹೊಮ್ಮಿದೆ. ಇನ್ನೂ 2ನೇ ದಿನ ಅಸ್ವಸ್ಥಗೊಂಡಿದ್ದ ಸ್ಟೀವ್ ಜಾಬ್ಸ್ ಪತ್ನಿ ಕಮಲಾ ಚೇತರಿಸಿಕೊಂಡಿದ್ದು, ಗಂಗೆಯಲ್ಲಿ ಮಿಂದೆದ್ದಿದ್ದಾರೆ ಎಂದು ಯುಪಿ ಆಡಳಿತ ತಿಳಿಸಿದೆ.

  • ಉತ್ತರಪ್ರದೇಶದಲ್ಲಿ ಕೂತಿದ್ದ ಕುರ್ಚಿಯಿಂದ ಬಿದ್ದು ಎಚ್‌ಡಿಎಫ್‌ಸಿ ಬ್ಯಾಂಕ್ ಉದ್ಯೋಗಿ ಸಾವು

    ಉತ್ತರಪ್ರದೇಶದಲ್ಲಿ ಕೂತಿದ್ದ ಕುರ್ಚಿಯಿಂದ ಬಿದ್ದು ಎಚ್‌ಡಿಎಫ್‌ಸಿ ಬ್ಯಾಂಕ್ ಉದ್ಯೋಗಿ ಸಾವು

    – ಅಧಿಕ ಕೆಲಸದೊತ್ತಡವೇ ಕಾರಣ ಎಂದು ಅಖಿಲೇಶ್ ಯಾದವ್ ಆರೋಪ

    ಲಕ್ನೋ: ಕೆಲಸ ಮಾಡುವಾಗ ಕೂತಿದ್ದ ಕುರ್ಚಿಯಿಂದ ಬಿದ್ದು ಬ್ಯಾಂಕ್ ಉದ್ಯೋಗಿಯೊಬ್ಬರು ಸಾವನ್ನಪ್ಪಿರುವ ಘಟನೆ ಲಕ್ನೋದ ವಿಭೂತಿಖಂಡದ (VibhutiKhanda) ಹೆಚ್‌ಡಿಎಫ್‌ಸಿ ಬ್ಯಾಂಕ್ (HDFC Bank Branch) ಶಾಖೆಯಲ್ಲಿ ನಡೆದಿದೆ.

    ಇತ್ತಿಚೇಗಷ್ಟೇ ಕೆಲಸದ ಒತ್ತಡದಿಂದಾಗಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದ ಘಟನೆ ದೇಶಾದ್ಯಂತ ಸದ್ದು ಮಾಡಿತ್ತು. ಇದರ ಬೆನ್ನಲ್ಲೇ ಈ ಪ್ರಕರಣ ಬೆಳಕಿಗೆ ಬಂದಿದೆ.ಇದನ್ನೂ ಓದಿ: ಕೊಲೆ ಆರೋಪಿ ತಾಲೂಕು ಕಸಾಪ ಅಧ್ಯಕ್ಷ ಸ್ಥಾನದಿಂದ ತೆರವು – ರಾಜ್ಯಾಧ್ಯಕ್ಷ ಆದೇಶ

    ಮೃತ ಮಹಿಳೆಯನ್ನು 45 ವರ್ಷದ ಸದಾಫ್ ಫಾತಿಮಾ ಎಂದು ಗುರುತಿಸಲಾಗಿದ್ದು, ಲಕ್ನೋದ ವಿಭೂತಿಖಂಡದ ಹೆಚ್‌ಡಿಎಫ್‌ಸಿ ಬ್ಯಾಂಕ್ ಶಾಖೆಯಲ್ಲಿ ಹೆಚ್ಚುವರಿ ಉಪಾಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.

    ವಿಭೂತಿಖಂಡದ ಸಹಾಯಕ ಪೊಲೀಸ್ ಆಯುಕ್ತ ರಾಧಾರಮಣ ಮಾತನಾಡಿ, ಆಕೆಯ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಸಾವಿಗೆ ಕಾರಣ ಏನು ಎಂಬುದು ಪರೀಕ್ಷೆಯ ಬಳಿಕ ಸ್ಪಷ್ಟವಾಗುತ್ತದೆ ಎಂದಿದ್ದಾರೆ. ಈ ಬೆನ್ನಲ್ಲೇ ಆಕೆಯ ಸಹೋದ್ಯೋಗಿ ಪ್ರತಿಕ್ರಿಯಿಸಿ, ಫಾತಿಮಾ ಕೆಲಸದ ಒತ್ತಡದಲ್ಲಿದ್ದಳು ಎಂದು ತಿಳಿಸಿದ್ದಾರೆ.

    ಪ್ರಕರಣದ ಕುರಿತು ಸಮಾಜವಾದಿ ಪಕ್ಷದ (Samajwadi Party) ಮುಖ್ಯಸ್ಥ ಅಖಿಲೇಶ್ ಯಾದವ್ (Akhilesh Yadav) ಎಕ್ಸ್ (X) ಖಾತೆಯಲ್ಲಿ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. ಇದು ಆತಂಕಕಾರಿ ವಿಷಯವಾಗಿದೆ. ದೇಶದ ಪ್ರಸ್ತುತ ಆರ್ಥಿಕ ಒತ್ತಡವನ್ನು ಪ್ರತಿಬಿಂಬಿಸುತ್ತದೆ. ಇದಕ್ಕೆ ಸಂಬಂಧಿಸಿದಂತೆ ಕಂಪನಿಗಳು ಹಾಗೂ ಸರ್ಕಾರಿ ಇಲಾಖೆಗಳು ಗಂಭೀರವಾಗಿ ಯೋಚಿಸಬೇಕು. ಇದು ದೇಶದ ಮಾನವ ಸಂಪನ್ಮೂಲಕ್ಕೆ ತುಂಬಲಾರದ ನಷ್ಟ ಎಂದು ಬರೆದುಕೊಂಡಿದ್ದಾರೆ.ಇದನ್ನೂ ಓದಿ: ನಿನ್ನೆ ಬಂದಿರೋದು ಪೊಲಿಟಿಕಲ್‌ ಜಡ್ಜ್‌ಮೆಂಟ್‌: ಜಮೀರ್‌ ಅಹ್ಮದ್‌

  • Shankh Air | ಭಾರತಕ್ಕೆ ಬರಲಿದೆ ಮತ್ತೊಂದು ವಿಮಾನಯಾನ ಕಂಪನಿ – ಉತ್ತರಪ್ರದೇಶದಿಂದ ಹಾರಾಟ ಆರಂಭ

    Shankh Air | ಭಾರತಕ್ಕೆ ಬರಲಿದೆ ಮತ್ತೊಂದು ವಿಮಾನಯಾನ ಕಂಪನಿ – ಉತ್ತರಪ್ರದೇಶದಿಂದ ಹಾರಾಟ ಆರಂಭ

    ಲಕ್ನೋ: ಶಂಖ್ ಏರ್ ಎಂಬ ಹೊಸ ವಿಮಾನಯಾನ ಸಂಸ್ಥೆ ಗಗನಕ್ಕೇರಲು ಸಿದ್ಧವಾಗಿದ್ದು, ಇದು ಉತ್ತರ ಪ್ರದೇಶದ (Uttar Pradesh) ಮೊದಲ ವಿಮಾನಯಾನ ಸಂಸ್ಥೆಯಾಗಿದೆ.

    ಶಂಖ್ ಏರ್ (Shankh Air) ವಿಮಾನಯಾನ ಸಂಸ್ಥೆಯು ನಾಗರಿಕ ವಿಮಾನಯಾನ ಸಚಿವಾಲಯದಿಂದ (Ministry of Civil Aviation) ಅನುಮೋದನೆ ಪಡೆದುಕೊಂಡಿದ್ದು, ಭಾರತದ ವಾಯುಯಾನ ಕ್ಷೇತ್ರದಲ್ಲಿ ಹೊಸ ಪ್ರವೇಶಕ್ಕಾಗಿ ಸಜ್ಜಾಗಿದೆ.ಇದನ್ನೂ ಓದಿ: ಮೇಲ್ನೋಟಕ್ಕೆ ಸಿಎಂ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಹೈಕೋರ್ಟ್ ಹೇಳಿದೆ – ಪ್ರಹ್ಲಾದ್ ಜೋಶಿ

    ಈ ಮೂಲಕ ಚೊಚ್ಚಲ ಹೆಜ್ಜೆಯನ್ನು ಇಡಲು ಶಂಖ್ ವಿಮಾನಯಾನ ಸಂಸ್ಥೆ ಸಿದ್ಧವಾಗಿದೆ. ಇದು ಉತ್ತರಪ್ರದೇಶದ ಲಕ್ನೋ (Lucknow) ಮತ್ತು ನೋಯ್ಡಾದಲ್ಲಿ (Noida) ಕೇಂದ್ರಗಳನ್ನು ಹೊಂದಿದೆ.

    ಶಂಖ್ ಏರ್ ಇದು ಭಾರತದ ಪ್ರಮುಖ ನಗರಗಳನ್ನು ಸಂಪರ್ಕಿಸುತ್ತದೆ. ಜೊತೆಗೆ ಅಂತರರಾಜ್ಯಗಳಿಗೂ ಸೇವೆ ಸಲ್ಲಿಸಲು ಸಿದ್ಧವಾಗಿದೆ. ಇದು ಪ್ರಮುಖ ನಗರಗಳನ್ನು ಸಂಪರ್ಕಿಸುವುದು, ಕಡಿಮೆ ಪ್ರದೇಶಗಳಲ್ಲಿ ವಾಯು ಸಂಪರ್ಕವನ್ನು ಸುಧಾರಿಸುವ ಉದ್ದೇಶವನ್ನು ಹೊಂದಿದೆ.

    ಈ ವಿಮಾಂನಯಾನ ಸಂಸ್ಥೆಯು ದೇಶದ ಅತಿ ದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋ 63 ಶೇಕಡಾ ಮಾರುಕಟ್ಟೆ ಪಾಲನ್ನು ಹೊಂದಿದೆ ಮತ್ತು ಮತ್ತಷ್ಟು ವಿಸ್ತರಿಸುವ ಗುರಿಯನ್ನು ಹೊಂದಿದೆ ಎಂದು ಮೂಲಗಳು ತಿಳಿಸಿವೆ.

    ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ವಿವರಗಳ ಪ್ರಕಾರ, ಶಂಖ್ ಏರ್ ಹೊಚ್ಚ ಹೊಸ ಬೋಯಿಂಗ್ 737-800 ವಿಮಾನದೊಂದಿಗೆ ತನ್ನ ಕಾರ್ಯಾಚರಣೆಯನ್ನು ಪ್ರಾರಂಭಿಸುತ್ತದೆ.ಇದನ್ನೂ ಓದಿ: 10 ತಿಂಗಳ ಮಗುವನ್ನು ಹೊತ್ತೊಯ್ದು ಅತ್ಯಾಚಾರ – ಆರೋಪಿಯನ್ನು ಬಡಿದು ಪೊಲೀಸರಿಗೊಪ್ಪಿಸಿದ ಜನ

  • ದೆಹಲಿಯಲ್ಲಿ ಮಳೆ ಆರ್ಭಟ: ಮುಂದಿನ ಮೂರು ದಿನಗಳ ಕಾಲ ಹೈಅಲರ್ಟ್ ಘೋಷಣೆ

    ದೆಹಲಿಯಲ್ಲಿ ಮಳೆ ಆರ್ಭಟ: ಮುಂದಿನ ಮೂರು ದಿನಗಳ ಕಾಲ ಹೈಅಲರ್ಟ್ ಘೋಷಣೆ

    – ಉತ್ತರಪ್ರದೇಶ, ಉತ್ತರಾಖಂಡಕ್ಕೂ ಅಲರ್ಟ್

    ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಮುಂದಿನ ಮೂರು ದಿನಗಳ ಕಾಲ ಹೈ-ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (India Meteorological Department) ತಿಳಿಸಿದೆ.

    ಮುಂದಿನ ಮೂರು ದಿನಗಳ ಕಾಲ ದೆಹಲಿ, ಉತ್ತರಪ್ರದೇಶ (Uttarpradesh) ಹಾಗೂ ಉತ್ತರಾಖಂಡದಲ್ಲಿ (Uttarakhand) ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಗುರುವಾರ ಭಾರತೀಯ ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.ಇದನ್ನೂ ಓದಿ: ಮಾಧ್ಯಮಗಳನ್ನು ನೋಡಿ ಅಸಭ್ಯ ಸನ್ನೆ ಮಾಡಿದ ದರ್ಶನ್

    ಹವಾಮಾನ ಇಲಾಖೆಯ ವರದಿ ಪ್ರಕಾರ ಉತ್ತರಾಖಂಡದಲ್ಲಿ ಸೆ.12 ರಿಂದ 14 ರವರೆಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

    ಭಾರೀ ಮಳೆಯಿಂದಾಗಿ ಮಥುರಾದ (Mathura) ರಸ್ತೆಗಳು ಜಲಾವೃತಗೊಂಡಿದ್ದು, ಟ್ರಾಫಿಕ್ ಸಮಸ್ಯೆಯಿಂದ ಜನರು ಪರದಾಡುವಂತಾಗಿದೆ.

    ದೆಹಲಿ, ಉತ್ತರಪ್ರದೇಶ ಹಾಗೂ ಉತ್ತರಾಖಂಡ ಹೊರತುಪಡಿಸಿ, ಮಧ್ಯಪ್ರದೇಶದಲ್ಲಿ (Madhyapradesh)  ಸೆ.14ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ಸೆ.15ರವರೆಗೆ ಪೂರ್ವ ರಾಜಸ್ಥಾನದಲ್ಲಿ (Rajasthan) ಭಾರೀ ಮಳೆಯನ್ನು ನಿರೀಕ್ಷಿಸಲಾಗಿದೆ ಎಂದು ಐಎಂಡಿ (IMD)  ತಿಳಿಸಿದೆ.ಇದನ್ನೂ ಓದಿ: ವಯನಾಡು ದುರಂತದಲ್ಲಿ ಕುಟುಂಬದ 9 ಮಂದಿಯನ್ನು ಕಳೆದುಕೊಂಡ್ಳು, ಈಗ ಮದುವೆಯಾಗಬೇಕಿದ್ದ ಹುಡುಗನೂ ಅಪಘಾತದಲ್ಲಿ ಸಾವು

    ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಮಧ್ಯಪ್ರದೇಶ ವಾಯುವ್ಯ ಹಾಗೂ ಉತ್ತರ ಪ್ರದೇಶದ ನೈಋತ್ಯ ಭಾಗದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

  • ವಿಶ್ವದ ಎಲ್ಲ ಸಾಧನಗಳಲ್ಲಿ ಭಾರತ ನಿರ್ಮಿತ ಚಿಪ್ ಇರಬೇಕೆನ್ನುವುದು ನಮ್ಮ ಕನಸು: ಮೋದಿ

    ವಿಶ್ವದ ಎಲ್ಲ ಸಾಧನಗಳಲ್ಲಿ ಭಾರತ ನಿರ್ಮಿತ ಚಿಪ್ ಇರಬೇಕೆನ್ನುವುದು ನಮ್ಮ ಕನಸು: ಮೋದಿ

    – ಸೆಮಿಕಾನ್ ಇಂಡಿಯಾ ಕಾರ್ಯಕ್ರಮದಲ್ಲಿ ಪ್ರಧಾನಿ ಮಾತು

    ಲಕ್ನೋ: ಜಗತ್ತಿನ ಪ್ರತಿಯೊಂದು ಸಾಧನಗಳಲ್ಲಿಯೂ ಭಾರತ ನಿರ್ಮಿತ ಚಿಪ್ ಇರಬೇಕೆನ್ನುವುದು ನಮ್ಮ ಕನಸು ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ತಿಳಿಸಿದರು.

    ಮೂರು ದಿನಗಳ ಕಾಲ ನಡೆಯಲಿರುವ ಉತ್ತರಪ್ರದೇಶದ (Uttarpradesh) ಗ್ರೇಟರ್ ನೋಯ್ಡಾದ (Greater Noida) ಇಂಡಿಯಾ ಎಕ್ಸ್ಪೋ ಮಾರ್ಟ್‌ನಲ್ಲಿ (India Expo Mart) ನಡೆದ 2024ರ ಸೆಮಿಕಾನ್ ಇಂಡಿಯಾ (Semicon India 2024) ಕಾರ್ಯಕ್ರಮದಲ್ಲಿ ಬುಧವಾರ ಮಾತನಾಡಿದರು.ಇದನ್ನೂ ಓದಿ: ನಿರ್ದೇಶನದತ್ತ ‘ಬಿಗ್ ಬಾಸ್’ ಖ್ಯಾತಿಯ ಚಂದನ್ ಕುಮಾರ್

    ಚಿಪ್‌ಗಳು ಕೇವಲ ತಂತ್ರಜ್ಞಾನದ ರೂಪವಾಗಿರಬಾರದು. ಅದು ಜನರ ಆಸೆಗಳನ್ನು ಈಡೇರಿಸುವ ಮಾಧ್ಯಮವಾಗಬೇಕು ಎಂದು ತಿಳಿಸಿದರು.

    ಈ ಕಾರ್ಯಕ್ರಮ ಭಾರತದ ಸೆಮಿಕಂಡಕ್ಟರ್ (Semiconducter) ಸಾಮರ್ಥ್ಯ ಹಾಗೂ ಪ್ರದರ್ಶಿಸುವ ಗುರಿಯನ್ನು ಹೊಂದಿದೆ. ಸೆಮಿಕಂಡಕ್ಟರ್ ಉತ್ಪಾದನೆಗೆ ದೇಶವನ್ನು ಜಾಗತಿಕ ಕೇಂದ್ರವಾಗಿಸುವ ಉದ್ದೇಶವನ್ನು ಹೊಂದಿದೆ ಎಂದರು.

    ಇಂತಹ ದೊಡ್ಡಮಟ್ಟದ ಕಾರ್ಯಕ್ರಮ ನಿಯೋಜಿಸುವಲ್ಲಿ ಭಾರತ ವಿಶ್ವದಲ್ಲೇ 8ನೇ ಸ್ಥಾನದಲ್ಲಿದೆ. 2028ರ ವೇಳೆಗೆ ಸೆಮಿಕಂಡಕ್ಟರ್ ಮಾರುಕಟ್ಟೆಯು 8,030 ಕೋಟಿ ತಲುಪಲಿದ್ದು, 85,000 ಉದ್ಯೋಗಗಳನ್ನು ಸೃಷ್ಟಿಸುತ್ತದೆ. ಇದಕ್ಕಾಗಿ 1.4 ಲಕ್ಷ ಕೋಟಿಗೂ ಅಧಿಕ ಹೂಡಿಕೆ ಮಾಡಲಾಗಿದ್ದು, ಹಲವು ಯೋಜನೆಗಳು ಪ್ರಗತಿಯಲ್ಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ರಾಜ್ಯಪಾಲರು

    ಇದೇ ವೇಳೆ ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಮಾತನಾಡಿ, ಸೆಮಿಕಂಡಕ್ಟರ್ ವಿಶ್ವಕ್ಕೆ ಶೇ.20ರಷ್ಟು ಕೊಡುಗೆಯನ್ನು ನೀಡುತ್ತವೆ. ಈ ಕಾರಣದಿಂದ ಮುಂದಿನ 10 ವರ್ಷಗಳಲ್ಲಿ 85,000 ಇಂಜಿನಿಯರ್ ಹಾಗೂ ತಂತ್ರಜ್ಞರ ಮೂಲಕ ಅಭಿವೃದ್ಧಿಪಡಿಸಲು ಸರ್ಕಾರ ಸಿದ್ಧವಾಗಿದೆ ಎಂದರು.