Tag: uv creations

  • ಸ್ಯಾಂಡಲ್‌ವುಡ್‌ಗೆ ಕನ್ನಡತಿ ಅನುಷ್ಕಾ ಶೆಟ್ಟಿ ಪಾದಾರ್ಪಣೆ

    ಸ್ಯಾಂಡಲ್‌ವುಡ್‌ಗೆ ಕನ್ನಡತಿ ಅನುಷ್ಕಾ ಶೆಟ್ಟಿ ಪಾದಾರ್ಪಣೆ

    ರಾವಳಿ ಚೆಲುವೆ (Karavali Beauty) ಅನುಷ್ಕಾ ಶೆಟ್ಟಿ ಅವರು ತಮ್ಮ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಇದೀಗ 3 ವರ್ಷಗಳ ನಂತರ ಮತ್ತೆ ತೆರೆಯ ಮೇಲೆ ಅಬ್ಬರಿಸಲು ಸ್ವೀಟಿ ಅನುಷ್ಕಾ ರೆಡಿಯಾಗಿದ್ದಾರೆ. ಹೊಸ ಚಿತ್ರದ ಟೈಟಲ್ ಜೊತೆ ಫಸ್ಟ್ ಲುಕ್ ರಿವೀಲ್ ಮಾಡುವ ಮೂಲಕ ನಟಿ ಸುದ್ದಿಯಲ್ಲಿದ್ದಾರೆ.

    `ಬಾಹುಬಲಿ’ (Bahubali) ನಟಿ ಅನುಷ್ಕಾ ಶೆಟ್ಟಿ ಅವರು ಕಡೆಯದಾಗಿ 2020ರಲ್ಲಿ `ನಿಶಬ್ಧಂ’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಈಗ ಮತ್ತೆ ಸಿನಿಮಾಗೆ ಕಮ್‌ಬ್ಯಾಕ್ ಆಗಿರುವ ನಟಿ ಕನ್ನಡಿಗರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಅನುಷ್ಕಾ ಶೆಟ್ಟಿ(Anushka Shetty) ಅವರು ಮೂಲತಃ ಕರ್ನಾಟಕದವರು ಹಾಗಾಗಿ ನಮ್ಮ ಕನ್ನಡದ ಹುಡುಗಿ ಕನ್ನಡ ಸಿನಿಮಾದಲ್ಲಿ ನಟಿಸಬೇಕು ಎಂಬುದು ಅಪಾರ ಅಭಿಮಾನಿಗಳ ಆಸೆಯಾಗಿತ್ತು. ಇದೀಗ ಆ ಆಸೆ ಈಡೇರಿದೆ. ನವೀನ್ ಪೋಲಿಶೆಟ್ಟಿ (Naveen Polishetty) ಜೊತೆಗಿನ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಅನುಷ್ಕಾ ಶೆಟ್ಟಿ ಪಾದಾರ್ಪಣೆ ಮಾಡ್ತಿದ್ದಾರೆ.  ಇದನ್ನೂ ಓದಿ: ಸಾಲು ಸಾಲು ಸಿನಿಮಾಗಳ ಸೋಲಿನ ಬಗ್ಗೆ ಮೌನ ಮುರಿದ ಕನ್ನಡದ `ಗಿಲ್ಲಿ’ ನಟಿ ರಾಕುಲ್

    ಹ್ಯಾಪಿ ಸಿಂಗಲ್ ಎನ್ನುತ್ತ ನವೀನ್ ಪೋಲಿಶೆಟ್ಟಿಗೆ ಜೋಡಿಯಾಗಿ ಅನುಷ್ಕಾ ಶೆಟ್ಟಿ ಬರುತ್ತಿದ್ದಾರೆ. ಅನ್ವಿತಾ ರಾವಾಲಿ ಶೆಟ್ಟಿಯಾಗಿ ಸ್ವೀಟಿ ಶೆಫ್ ಪಾತ್ರಕ್ಕೆ ಜೀವ ತುಂಬಿದ್ದಾರೆ. ಯುವಿ ಕ್ರಿಯೇಷನ್ ನಿರ್ಮಾಣದಲ್ಲಿ `Miss Shetty Mrs Polishetty’ ಟೈಟಲ್‌ ಮೂಲಕ ಅನುಷ್ಕಾ ಹೊಸ ಚಿತ್ರ ಮೂಡಿ ಬಂದಿದ್ದು, ಈ ವರ್ಷವೇ ಸಿನಿಮಾ ತೆರೆಗೆ ಬರುತ್ತಿದೆ.

    ಹ್ಯಾಪಿ ಸಿಂಗಲ್ (Happy Single) ಮತ್ತು ರೆಡಿ ಟು ಮಿಂಗಲ್ (Ready To Mingle) ಎನ್ನುವ ಅನುಷ್ಕಾ ಮತ್ತು ನವೀನ್ ಅವರ ಚಿತ್ರದ ಫಸ್ಟ್ ಲುಕ್ ಈಗ ಅಭಿಮಾನಿಗಳ ಗಮನ ಸೆಳೆಯುತ್ತಿದೆ. ಈ ಸಿನಿಮಾ ಕನ್ನಡ, ತೆಲುಗು, ತಮಿಳು, ಮಲಯಾಳಂ ಭಾಷೆಗಳಲ್ಲಿ ತೆರೆ ಕಾಣಲಿದೆ. ಈ ಮೂಲಕ ಕನ್ನಡತಿ ಅನುಷ್ಕಾ ಶೆಟ್ಟಿ ಸ್ಯಾಂಡಲ್‌ವುಡ್‌ಗೆ (Sandalwood) ಪಾದಾರ್ಪಣೆ ಮಾಡ್ತಿದ್ದಾರೆ.

  • `ಬಾಹುಬಲಿ’ ಪ್ರಭಾಸ್‌ಗೆ ಶಾಕ್ ಕೊಟ್ಟ ಜಿಎಸ್‌ಟಿ ಅಧಿಕಾರಿಗಳು

    `ಬಾಹುಬಲಿ’ ಪ್ರಭಾಸ್‌ಗೆ ಶಾಕ್ ಕೊಟ್ಟ ಜಿಎಸ್‌ಟಿ ಅಧಿಕಾರಿಗಳು

    ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚ್ತಿರುವ ಪ್ರಭಾಸ್‌ಗೆ(Darling Prabhas) ಜಿಎಸ್‌ಟಿ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ಪ್ರಭಾಸ್ ಅವರ ಕಂಪನಿ ಮೇಲೆ ಜಿಎಸ್‌ಟಿ ಅಧಿಕಾರಿಗಳು ರೇಡ್ ಮಾಡಿದ್ದಾರೆ.

    `ಬಾಹುಬಲಿ’ (Bahubali) ಸೂಪರ್ ಸಕ್ಸಸ್ ನಂತರ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಿರುವ ನಟ ಪ್ರಭಾಸ್ ಇದೀಗ ಪ್ಯಾನ್ ಇಂಡಿಯಾ ಸ್ಟಾರ್ ಗುರುತಿಸಿಕೊಂಡಿದ್ದಾರೆ. ಇದೀಗ ಪ್ರಭಾಸ್ ಸಿನಿಮಾ ಅಷ್ಟೇ ಅಲ್ಲ, ಅವರದ್ದೇ ನಿರ್ಮಾಣ ಸಂಸ್ಥೆ ಕೂಡ ಇದೆ. ಯುವಿ ಕ್ರಿಯೇಷನ್ಸ್ ನಿರ್ಮಾಣ ಸಂಸ್ಥೆಗೆ ಪ್ರಭಾಸ್ ಕೂಡ ಪಾರ್ಟ್‌ನರ್ ಆಗಿ ಸಾಥ್ ನೀಡಿದ್ದಾರೆ. ಇದೀಗ ಸಂಸ್ಥೆಯ ಮೇಲೆ ರೇಡ್ ಆಗಿದೆ.

    ಹೆಸರಾಂತ ನಿರ್ಮಾಣ ಸಂಸ್ಥೆಗಳಲ್ಲಿ ಒಂದಾಗಿರುವ ಯುವಿ ಕ್ರಿಯೇಷನ್ಸ್(Uv Creations) ಮೇಲೆ ದಾಳಿ ನಡೆದಿರುವ ವಿಚಾರ ಸೌತ್‌ನಲ್ಲಿ ಸಂಚಲನ ಮೂಡಿಸಿದೆ. ತೆರಿಗೆ ವಂಚಿಸಿರುವ ಶಂಕೆಯಿಂದ ಮಂಗಳವಾರ ಜಿಎಸ್‌ಟಿ ಅಧಿಕಾರಿಗಳು ಪ್ರಭಾಸ್ ಕಂಪನಿಯ ಮೇಲೆ ಶೋಧ ನಡೆಸಿದ್ದಾರೆ. ಯುವಿ ಸಂಸ್ಥೆಯ ಆದಾಯಕ್ಕೂ ಜಿಎಸ್‌ಟಿ ಲೆಕ್ಕಾಚಾರಕ್ಕೂ ಸಾಕಷ್ಟು ವ್ಯತ್ಯಾಸ ಇದೆ ಎಂದು ಅಧಿಕಾರಿಗಳು ಆರೋಪಿಸಿದ್ದಾರೆ. ಇದನ್ನೂ ಓದಿ:ಡಯಟ್ ಕಾರಣದಿಂದಾಗಿ ಖ್ಯಾತ ನಟ ಕಲ್ಯಾಣ್ ಕುಮಾರ್ ಸೊಸೆ ನಿಧನ?

    ಹೈದರಾಬಾದ್‌ನ ಕಪುರಿ ಹಿಲ್ಸ್ನಲ್ಲಿರುವ ಯುವಿ ಕ್ರಿಯೇಷನ್ಸ್ ಕಂಪನಿಯಲ್ಲಿ ಶೋಧ ನಡೆಸಿದ್ದ ವೇಳೆ ೬ ಕೋಟಿಗೂ ಹೆಚ್ಚು ಜಿಎಸ್‌ಟಿ ಬಾಕಿ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನೂ ಯುವಿ ಸಂಸ್ಥೆಗೆ ಸಂಬAಧಿಸಿದ ದಾಖಲೆಗಳನ್ನು ಅಧಿಕಾರಿಗಳು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

    Live Tv
    [brid partner=56869869 player=32851 video=960834 autoplay=true]