Tag: Uzbekistan

  • ಹೆಚ್ಚು ಸಂಬಳದ ಆಸೆಗೆ ಉಜ್ಬೇಕಿಸ್ತಾನಕ್ಕೆ ಹೋದ ಕರ್ನಾಟಕದ ಯುವಕರು – ಅನ್ನ, ನೀರು ಸಿಗದೇ ಪರದಾಟ

    ಹೆಚ್ಚು ಸಂಬಳದ ಆಸೆಗೆ ಉಜ್ಬೇಕಿಸ್ತಾನಕ್ಕೆ ಹೋದ ಕರ್ನಾಟಕದ ಯುವಕರು – ಅನ್ನ, ನೀರು ಸಿಗದೇ ಪರದಾಟ

    – ಸ್ವದೇಶಕ್ಕೆ ಕರೆಸಿಕೊಳ್ಳುವಂತೆ ಸಿಎಂ, ಪಿಎಂಗೆ ಮನವಿ

    ಬೀದರ್: ಲಕ್ಷ ಲಕ್ಷ ಸಂಬಳದ ಆಸೆಗೆ ಕೆಲಸ ಅರಸಿ ಉಜ್ಬೇಕಿಸ್ತಾನಕ್ಕೆ (Uzbekistan) ಹೋಗಿದ್ದ ಬೀದರ್ (Bidar) ಹಾಗೂ ಕಲಬರಗಿ (Kalaburagi) ಮೂಲದ ಯುವಕರಿಗೆ ಸಂಕಷ್ಟ ಎದುರಾಗಿದ್ದು, ಉದ್ಯೋಗ ಹಾಗೂ ಅನ್ನ, ನೀರು ಇಲ್ಲದೆ ಪರದಾಡುತ್ತಿದ್ದಾರೆ.

    ಬೀದರ್ ಹಾಗೂ ಕಲಬರಗಿಯ 14 ಮಂದಿ ಯುವಕರು ಲಕ್ಷಾಂತರ ಸಂಬಳದ ಆಸೆಗೆ ಮಧ್ಯವರ್ತಿಗಳಿಗೆ ಲಕ್ಷ ಲಕ್ಷ ಹಣ ನೀಡಿ ಉಜ್ಬೇಕಿಸ್ತಾನಕ್ಕೆ ತೆರಳಿ ಮೋಸ ಹೋಗಿದ್ದಾರೆ. ಅತ್ತ ಉದ್ಯೋಗವೂ ಇಲ್ಲದೇ ತಿನ್ನಲು ಅನ್ನ ನೀರು ಕೂಡ ಸಿಗದೇ ಇದೀಗ ಯುವಕರು ಪರದಾಡುವಂತಾಗಿದೆ. ಇದನ್ನೂ ಓದಿ: ರಾಗಾ ಹೊಲಿದ ಚಪ್ಪಲಿಗೆ 10 ಲಕ್ಷ ರೂ. ಆಫರ್ ತಿರಸ್ಕರಿಸಿದ ಚಮ್ಮಾರ

    ಉಜ್ಬೇಕಿಸ್ತಾನಕ್ಕೆ ತೆರಳಿದವರ ಪೈಕಿ ಬೀದರ್ ಜಿಲ್ಲೆಯ ಬಸವಕಲ್ಯಾಣ, ಹುಮ್ನಾಬಾದ್ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕಿನ ಯುವಕರು ಸೇರಿದ್ದಾರೆ. ವಿದೇಶದಿಂದ ಸ್ವದೇಶಕ್ಕೆ ವಾಪಸ್ ಕರೆಸಿಕೊಳ್ಳುವಂತೆ ಪ್ರಧಾನಿ ಮೋದಿ ಹಾಗೂ ಸಿಎಂ ಸಿದ್ದರಾಮಯ್ಯಗೆ ಮೋಸ ಹೋದ ಯುವಕರು ವಿಡಿಯೋ ಮೂಲಕ ಮನವಿ ಮಾಡಿದ್ದಾರೆ. ನಾವು ನಮ್ಮ ಮಧ್ಯವರ್ತಿಗಳನ್ನು ನಂಬಿ ಮೋಸ ಹೋಗಿದ್ದೇವೆ. ಇಲ್ಲಿ ಊಟ ಇಲ್ಲದೆ ಹಲವು ಜನ ಸತ್ತಿದ್ದಾರೆ. ಇದರಿಂದ ನಮಗೆ ಭಯವಾಗುತ್ತಿದೆ. ಬೇಗ ನಮ್ಮನ್ನು ಸ್ವದೇಶಕ್ಕೆ ಕರೆಸಿಕೊಳ್ಳಿ ಎಂದು ಯುವಕರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಆಟವಾಡುತ್ತಾ ಮೆಟ್ರೋ ಹಳಿಗೆ ಬಿದ್ದ ಮಗು – ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಪಾರು

  • ಕೆಮ್ಮಿನ ಸಿರಪ್ ರಫ್ತಿಗೂ ಮುನ್ನ ಪರೀಕ್ಷೆ ಕಡ್ಡಾಯಗೊಳಿಸಿದ ಕೇಂದ್ರ

    ಕೆಮ್ಮಿನ ಸಿರಪ್ ರಫ್ತಿಗೂ ಮುನ್ನ ಪರೀಕ್ಷೆ ಕಡ್ಡಾಯಗೊಳಿಸಿದ ಕೇಂದ್ರ

    ನವದೆಹಲಿ: ಕಳೆದ ವರ್ಷ ಭಾರತದ (India) ಕೆಮ್ಮಿನ ಸಿರಪ್ (Cough Syrup) ಸೇವಿಸಿದ ಬಳಿಕ ಗ್ಯಾಂಬಿಯಾ (Gambia) ಹಾಗೂ ಉಜ್ಬೇಕಿಸ್ತಾನದಲ್ಲಿ (Uzbekistan) ಹಲವು ಮಕ್ಕಳ ಸಾವಾಗಿತ್ತು. ಈ ಘಟನೆಯ ಬಳಿಕ ಇದೀಗ ಭಾರತ ಸರ್ಕಾರ ಕೆಮ್ಮಿನ ಸಿರಪ್‌ಗಳನ್ನು ವಿದೇಶಕ್ಕೆ ರಫ್ತು ಮಾಡುವ ಮೊದಲು ಅದನ್ನು ಪರೀಕ್ಷೆಗೆ (Lab Test) ಒಳಪಡಿಸುವುದು ಕಡ್ಡಾಯಗೊಳಿಸಿದೆ.

    ಯಾವುದೇ ಕೆಮ್ಮಿನ ಸಿರಪ್ ಅನ್ನು ರಫ್ತು ಮಾಡುವುದಕ್ಕೂ ಮೊದಲು ಸರ್ಕಾರಿ ಪ್ರಯೋಗಾಲಯ ನೀಡಿದ ವಿಶ್ಲೇಷಣೆಯ ಪ್ರಮಾಣಪತ್ರವನ್ನು ಹೊಂದಿರುವುದು ಕಡ್ಡಾಯವಾಗಿದೆ. ಈ ನಿಯಮ ಜೂನ್ 1 ರಿಂದ ಜಾರಿಗೆ ಬರಲಿದೆ ಎಂದು ಮಂಗಳವಾರ ಆರೋಗ್ಯ ಸಚಿವಾಲಯ ತಿಳಿಸಿದೆ.

    ಭಾರತ ಇಡೀ ವಿಶ್ವದಲ್ಲೇ ಅತಿ ದೊಡ್ಡ ಔಷಧೀಯ ಉದ್ಯಮವನ್ನು ಹೊಂದಿದೆ. ಆದರೆ ಕಳೆದ ವರ್ಷ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಹೆಚ್‌ಒ) ಭಾರತದ 3 ಕಂಪನಿಗಳು ತಯಾರಿಸಿದ ಕೆಮ್ಮಿನ ಸಿರಪ್‌ಗಳಲ್ಲಿ ವಿಷಕಾರಿ ಅಂಶವನ್ನು ಕಂಡು ಹಿಡಿದ ಬಳಿಕ ಅದರ ಖ್ಯಾತಿ ಅಲುಗಾಡುವಂತಾಯಿತು. ಇದನ್ನೂ ಓದಿ: ಭಾರೀ ಏರಿಕೆ ಕಂಡ Adani Enterprises ಷೇರು – ಮತ್ತಷ್ಟು ಹೂಡಿಕೆ ಮಾಡಿದ GQG

    ಕಳೆದ ವರ್ಷ ಗ್ಯಾಂಬಿಯಾದ 70 ಹಾಗೂ ಉಜ್ಬೇಕಿಸ್ತಾನದ 19 ಮಕ್ಕಳ ಸಾವಾಗಿತ್ತು. ಬಳಿಕ ಮಕ್ಕಳ ಸಾವಿಗೆ ಭಾರತದ ಕಂಪನಿಗಳು ತಯಾರಿಸಿದ್ದ ಕೆಮ್ಮಿನ ಸಿರಪ್‌ಗಳ ಸಂಬಂಧವಿದೆ ಎಂಬುದು ತಿಳಿದುಬಂದಿತ್ತು.

    ಸದ್ಯ ವಿದೇಶಗಳಿಗೆ ರಫ್ತು ಮಾಡುವ ಕೆಮ್ಮಿನ ಸಿರಪ್‌ಗಳ ಪರೀಕ್ಷೆಯನ್ನಷ್ಟೇ ಕೇಂದ್ರ ಕಡ್ಡಾಯಗೊಳಿಸಿದೆ. ಆದರೆ ದೇಶೀಯ ಮಾರುಕಟ್ಟೆಯಲ್ಲಿ ಈ ಸಿರಪ್‌ಗಳನ್ನು ಮಾರಾಟ ಮಾಡುವುದಕ್ಕೂ ಮುನ್ನ ಪರೀಕ್ಷೆಯ ಅಗತ್ಯವಿದೆಯೇ ಎಂಬುದಕ್ಕೆ ಆರೋಗ್ಯ ಸಚಿವಾಲಯ ಸ್ಪಷ್ಟನೆ ನೀಡಿಲ್ಲ. ಇದನ್ನೂ ಓದಿ: ಪಾಕಿಸ್ತಾನದಲ್ಲೂ ಜನ ಮೋದಿಯನ್ನು ಇಷ್ಟಪಡುತ್ತಾರೆ: ಅನೂಪ್ ಜಲೋಟಾ

  • ನಿಯಮ ಉಲ್ಲಂಘನೆ ಮಾಡುವ ಕೆಮ್ಮಿನ ಸಿರಪ್ ಕಂಪನಿಗಳ ಮೇಲೆ `ಮಹಾ’ಅಸ್ತ್ರ

    ನಿಯಮ ಉಲ್ಲಂಘನೆ ಮಾಡುವ ಕೆಮ್ಮಿನ ಸಿರಪ್ ಕಂಪನಿಗಳ ಮೇಲೆ `ಮಹಾ’ಅಸ್ತ್ರ

    ಮುಂಬೈ: ನಿಯಮ ಉಲ್ಲಂಘನೆ ಮಾಡಿರುವ ಆರು ಕೆಮ್ಮಿನ ಸಿರಪ್ (Cough Syrup) ತಯಾರಕ ಕಂಪನಿಗಳ ಪರವಾನಗಿ ಅಮಾನತುಗೊಳಿಸಲಾಗಿದೆ ಎಂದು ಮಹಾರಾಷ್ಟ್ರ (Maharashtra) ಸರ್ಕಾರ ವಿಧಾನಸಭೆಯಲ್ಲಿ ಘೋಷಿಸಿದೆ.

    ಬಿಜೆಪಿ ಶಾಸಕ ಆಶಿಕ್ ಶೇಲಾರ್ ಹಾಗೂ ಇತರರ ನೊಟೀಸ್‍ಗೆ ಉತ್ತರಿಸಿದ ಆಹಾರ ಮತ್ತು ಔಷಧ ಆಡಳಿತ (Food and Drugs Administration Minister) ಸಚಿವ ಸಂಜಯ್ ರಾಥೋಡ್ (Sanjay Rathod) ಅವರು ಈ ಮಾಹಿತಿ ಹಂಚಿಕೊಂಡಿದ್ದಾರೆ. ಉತ್ತರ ಪ್ರದೇಶದ ನೋಯ್ಡಾ ಮೂಲದ ಸಂಸ್ಥೆ ತಯಾರಿಸಿದ್ದ ಕೆಮ್ಮಿನ ಸಿರಪ್‍ನಿಂದ ಕಳೆದ ವರ್ಷ ಉಜ್ಬೇಕಿಸ್ತಾನದ (Uzbekistan) 18 ಮಕ್ಕಳು ಸಾವಿಗೀಡಾಗಿದ್ದರು. ಈ ಪ್ರಕರಣದಲ್ಲಿ ಮೂರು ಸಿಬ್ಬಂದಿಯನ್ನು ಬಂಧಿಸಲಾಗಿತ್ತು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಮಾಡಾಳ್ ಕುಟುಂಬದಿಂದ ಖತರ್ನಾಕ್ ಪ್ಲಾನ್- ಲೋಕಾಯುಕ್ತ ಬರುತ್ತೆ ಅಂತ ಸಿಸಿಟಿವಿ ಆಫ್!

    ಸರ್ಕಾರವು 1ಂ8 ಕೆಮ್ಮಿನ ಸಿರಪ್ ತಯಾರಿಕಾ ಕಂಪನಿಗಳಲ್ಲಿ 84 ಕಂಪನಿಗಳ ತನಿಖೆ ಆರಂಭಿಸಿದೆ. ನಿಯಮ ಉಲ್ಲಂಘಿಸಿರುವ 17 ಸಂಸ್ಥೆಗಳಿಗೆ ಶೋಕಾಸ್ ನೋಟೀಸ್ ನೀಡಲಾಗಿದೆ ಎಂದಿದ್ದಾರೆ.

    ಭಾರತದಿಂದ ರಫ್ತಾಗಿದ್ದ ಕೆಮ್ಮಿನ ಸಿರಪ್‍ನಿಂದಾಗಿ ಗ್ಯಾಂಬಿಯಾದ (Gambia) 66 ಮಕ್ಕಳು ಮೃತಪಟ್ಟಿದ್ದರು ಎಂದು ಅವರು ನೆನಪಿಸಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ನಿಯಮ ಉಲ್ಲಂಘನೆ ಆರೋಪ ಎದುರಿಸುತ್ತಿರುವ ಕಂಪನಿ ಹರಿಯಾಣ ಮೂಲದ್ದಾಗಿದ್ದು ರಾಜ್ಯದಲ್ಲಿ ಯಾವುದೇ ಉತ್ಪಾದನಾ ಘಟಕ ಹೊಂದಿಲ್ಲ ಎಂದಿದ್ದಾರೆ.

    ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದೇವೆ. ಬೇರೆ ರಾಜ್ಯಗಳಿಗೆ ಔಷಧಗಳನ್ನು ರಫ್ತು ಮಾಡುವಾಗ ವಿಶ್ವ ಆರೋಗ್ಯ ಸಂಸ್ಥೆಯ ಜಿಎಂಪಿ ನಿಯಮವನ್ನು ಅನುಸರಿಸುತ್ತಿದ್ದೇವೆ. ರಾಜ್ಯದ 996 ಅಲೋಪತಿ ಔಷಧ ತಯಾರಿಕ ಘಟಕದಿಂದ 514 ಉತ್ಪನ್ನಗಳು ರಫ್ತಾಗುತ್ತಿವೆ ಎಂದು ಹೇಳಿದ್ದಾರೆ.

    20% ಕಂಪನಿಗಳು ಸಿರಪ್ ತಯಾರಿಕಾ ನಿಯಮ ಉಲ್ಲಂಘಿಸಿ ದಾಳಿಗಳನ್ನು ಎದುರಿಸುತ್ತಿವೆ. ಜನರ ಜೀವದ ಜೊತೆ ಚೆಲ್ಲಾಟ ಆಡುವವರನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿದೆ ಎಂದು ಎಂದು ಶಾಸಕ ಸಂಜಯ್ ಶಿರ್ಸತ್ (Sanjay Shirsat) ಹೇಳಿದ್ದಾರೆ. ಇದನ್ನೂ ಓದಿ: ಆಸ್ಟ್ರೇಲಿಯಾದ ಹಿಂದೂ ದೇವಾಲಯದಲ್ಲಿ ಮತ್ತೆ ಮೋದಿ ವಿರೋಧಿ ಬರಹ – 2 ತಿಂಗಳಲ್ಲಿ 4ನೇ ಘಟನೆ

  • ಭಾರತದ ಸಂಸ್ಥೆಯ ಕೆಮ್ಮಿನ ಸಿರಪ್‌ ಸೇವಿಸಿ ಉಜ್ಬೇಕಿಸ್ತಾನ ಮಕ್ಕಳ ಸಾವು ಕೇಸ್‌ – ನೋಯ್ಡಾದಲ್ಲಿ ಮೂವರು ಅರೆಸ್ಟ್‌

    ಭಾರತದ ಸಂಸ್ಥೆಯ ಕೆಮ್ಮಿನ ಸಿರಪ್‌ ಸೇವಿಸಿ ಉಜ್ಬೇಕಿಸ್ತಾನ ಮಕ್ಕಳ ಸಾವು ಕೇಸ್‌ – ನೋಯ್ಡಾದಲ್ಲಿ ಮೂವರು ಅರೆಸ್ಟ್‌

    ಲಕ್ನೋ: ಭಾರತದ ಔಷಧೀಯ ಸಂಸ್ಥೆ ಮರಿಯನ್‌ ಬಯೋಟೆಕ್ (Marion Biotech) ತಯಾರಿಸುವ ಕೆಮ್ಮಿನ ಸಿರಪ್‌ (Cough Syrup) ಸೇವಿಸಿ ಉಜ್ಬೇಕಿಸ್ತಾನದ (Uzbekistan) ಕೆಲವು ಮಕ್ಕಳು ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಔಷಧಿ ಮಾರಾಟ ಮಾಡುತ್ತಿದ್ದ ಮೂವರನ್ನು ನೋಯ್ಡಾ ಪೊಲೀಸರು (Noida Police) ಬಂಧಿಸಿದ್ದಾರೆ.

    ಆರೋಪಿಗಳನ್ನು ಅತುಲ್ ರಾವತ್, ತುಹಿನ್ ಭಟ್ಟಾಚಾರ್ಯ ಮತ್ತು ಮೂಲ್ ಸಿಂಗ್ ಎಂದು ಗುರುತಿಸಲಾಗಿದ್ದು, ಮರಿಯನ್ ಬಯೋಟೆಕ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಬಂಧಿಸಲಾಗಿದೆ. 1940ರ ಡ್ರಗ್ಸ್ ಆ್ಯಂಡ್ ಕಾಸ್ಮೆಟಿಕ್ಸ್ ಆಕ್ಟ್‌ನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಗೌತಮ ಬುದ್ಧ ನಗರ 3ನೇ ಹಂತದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಹರಿಯಾಣದ ಪ್ರತ್ಯೇಕ 3 ಕಡೆ ಭೀಕರ ಅಪಘಾತ – 17 ಮಂದಿ ದುರ್ಮರಣ

    ಕಳೆದ ವರ್ಷ ಮರಿಯನ್‌ ಬಯೋಟೆಕ್‌ ತಯಾರಿಸಿದ ಕೆಮ್ಮಿನ ಸಿರಪ್‌ ಸೇವನೆಯಿಂದ ಉಜ್ಬೇಕಿಸ್ತಾನದಲ್ಲಿ 18 ಮಕ್ಕಳು ಮೃತಪಟ್ಟಿದ್ದರು.

    ಪ್ರಕರಣ ವರದಿಯಾದ ಬಳಿಕ, ಮರಿಯನ್‌ ಬಯೋಟೆಕ್‌ ಪ್ರೈವೆಟ್‌ ಲಿಮಿಟೆಡ್‌ ಸಂಸ್ಥೆ ತಯಾರಿಸಿರುವ ಅಬ್ರೊನಾಲ್‌ ಮತ್ತು ಡಾಕ್‌-1 ಮ್ಯಾಕ್ಸ್‌ ಕೆಮ್ಮು ಸಿರಪ್‌ ಅನ್ನು ಮಕ್ಕಳಿಗೆ ನೀಡದಂತೆ ವಿಶ್ವ ಆರೋಗ್ಯ ಸಂಸ್ಥೆ (WHO) ಸೂಚನೆ ನೀಡಿತ್ತು. ಇದನ್ನೂ ಓದಿ: ನನ್ನ ಕ್ರೀಡಾ ಜೀವನದ ಆರಂಭ ಸುಖಕರವಾಗಿರಲಿಲ್ಲ- ಬೆಳ್ಳಿ ಗೆದ್ದ ಸಹಾನಿ

    ಉಜ್ಬೇಕಿಸ್ತಾನದ ಆರೋಗ್ಯ ಸಚಿವಾಲಯದ ಪರೀಶೀಲನೆಯಲ್ಲಿ ಕೆಮ್ಮಿನ ಸಿರಪ್‌ಗಳಲ್ಲಿ ಎಥಿಲೀನ್ ಗ್ಲೈಕೋಲ್‌ನ ವಿಷಕಾರಿ ರಾಸಾಯನಿಕ ಪತ್ತೆಯಾಗಿತ್ತು.

  • ನನ್ನ ಕ್ರೀಡಾ ಜೀವನದ ಆರಂಭ ಸುಖಕರವಾಗಿರಲಿಲ್ಲ- ಬೆಳ್ಳಿ ಗೆದ್ದ ಸಹಾನಿ

    ನನ್ನ ಕ್ರೀಡಾ ಜೀವನದ ಆರಂಭ ಸುಖಕರವಾಗಿರಲಿಲ್ಲ- ಬೆಳ್ಳಿ ಗೆದ್ದ ಸಹಾನಿ

    ಲಕ್ನೋ: ನನ್ನ ಕ್ರೀಡಾ ಜೀವನದ ಆರಂಭ ದಿನಗಳು ಅಷ್ಟೊಂದು ಸುಖಕರವಾಗಿರಲಿಲ್ಲ ಎಂದು ಸ್ಟ್ರಾಂಡ್ಜಾ ಸ್ಮಾರಕ ಬಾಕ್ಸಿಂಗ್ (Strandja Memorial Boxing Tournament) ಚಾಂಪಿಯನ್‍ಶಿಪ್ 48 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಗೋವಿಂದ್ ಕುಮಾರ್ ಸಹಾನಿ ತಮ್ಮ ಕ್ರೀಡಾ ಜೀವನದ ಆರಂಭವನ್ನು ಮೆಲಕು ಹಾಕಿದ್ದಾರೆ.

    ಗೋರಖ್‍ಪುರದ (Gorakhpur) ರೈತನ (Farmer) ಮಗನಾಗಿ ಜನಿಸಿದ ನಾನು ನನ್ನ ತಂದೆ ತಾಯಿಗೆ ನಾಲ್ಕನೆ ಮಗ. ನಾನು ಕರಾಟೆ ಮತ್ತು ಬಾಕ್ಸಿಂಗ್‍ನಲ್ಲಿ ತೊಡಗಿಸಿಕೊಂಡೆ. ಕುಟುಂಬವನ್ನು ನಿರ್ವಹಿಸಿಕೊಂಡು ನನ್ನ ಕ್ರೀಡೆಗೆ ಹಣ ವ್ಯಯಿಸುವುದು ಕುಟುಂಬಕ್ಕೆ ಕಷ್ಟವಾಗುತ್ತಿತ್ತು. ನನ್ನ ಕುಟುಂಬ ಸಂಪಾದನೆಗಾಗಿ ಕಷ್ಟಪಡುತ್ತಿತ್ತು. ನನ್ನ ಕ್ರೀಡೆಯ ಕನಸಿಗೆ ತಾಯಿ ಆಗೆಲ್ಲ ಗದರಿಸುತ್ತಿದ್ದರು ಎಂದರು. ಇದನ್ನೂ ಓದಿ:  ಸಂಚಾರ ನಿಯಮ ಉಲ್ಲಂಘನೆ ದಂಡಕ್ಕೆ 50 ಪರ್ಸೆಂಟ್‌ ಆಫರ್‌ – ದಂಡ ಕಟ್ಟಲು ಮತ್ತೆ 15 ದಿನ ಅವಧಿ ವಿಸ್ತರಣೆ

    ನಾನು ತರಬೇತಿ ಆರಂಭಿಸಿದಾಗ ನನ್ನ ತಾಯಿ ಸಮಯ ಮತ್ತು ಹಣ (Money) ಎರಡನ್ನು ಹಾಳು ಮಾಡುತ್ತಿದ್ದಿಯಾ ಎನ್ನುತ್ತಿದ್ದರು. ಮಧ್ಯಮ ವರ್ಗದ ಕುಟುಂಬದ ಪರಿಸ್ಥಿತಿ ಹೇಗಿರುತ್ತದೆ ಎಂದರೆ ಅದನ್ನೆಲ್ಲ ನಗುತ್ತಾ ಸಹಿಸಿಕೊಳ್ಳಬೇಕಾಗಿತ್ತು ಎಂದು ಹೇಳಿದ್ದಾರೆ.

    ಭಾರತದ ಬಾಕ್ಸರ್‍ಗಳು ಮೂರು ಬೆಳ್ಳಿ ಹಾಗೂ ಐದು ಕಂಚಿನ ಪದಕಗಳೊಂದಿಗೆ ಹಿಂತಿರುಗಿದ್ದಾರೆ. ಉಜ್ಬೆಕಿಸ್ಥಾನದ (Uzbekistan) ಶೋಡಿಯೋರ್ಜಾನ್  ಮೆಲಿಕುಝಿವ್  (Shodiyorjon Melikuziev) ಚಿನ್ನವನ್ನು ಕಳೆದುಕೊಂಡರು.

    ನನ್ನ ತಾಯಿಯ ನಿರಂತರ ನಿಂದನೆಯಿಂದ ತಪ್ಪಿಸಿಕೊಳ್ಳಲು ನಾನು 2011ರಲ್ಲಿ ಮನೆ ತೊರೆದು ಹಾಸ್ಟೆಲ್ ಸೇರಿದೆ. ಹಣ ಕೇಳಲು ಮನೆಗೆ ಹೋಗುತ್ತಿರಲಿಲ್ಲ. ಕೆಲವು ವರ್ಷಗಳು ಕಳೆದ ನಂತರ ನನ್ನ ಸುದ್ದಿ ಹರದಾಡಲು ಆರಂಭಿಸಿತು. ಆಗ ನನ್ನ ಕುಟುಂಬಕ್ಕೆ ಹಣ ವ್ಯರ್ಥ ಮಾಡುತ್ತಿಲ್ಲ ಎಂಬುದು ಮನವರಿಕೆಯಾಯಿತು ಎಂದು ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: CCL 2023 ಬೆಂಗಳೂರಿನಲ್ಲಿ : ಕಿಚ್ಚನ ಟೀಮ್ ಜೊತೆ ತೆಲುಗು ವಾರಿಯರ್ಸ್ ರೋಚಕ ಪಂದ್ಯ

  • ಬಾಂಬ್ ಬೆದರಿಕೆ – ಮಾಸ್ಕೋದಿಂದ ಗೋವಾ ಬರಬೇಕಿದ್ದ ವಿಮಾನ ಉಜ್ಬೇಕಿಸ್ತಾನದಲ್ಲಿ ಲ್ಯಾಂಡ್

    ಬಾಂಬ್ ಬೆದರಿಕೆ – ಮಾಸ್ಕೋದಿಂದ ಗೋವಾ ಬರಬೇಕಿದ್ದ ವಿಮಾನ ಉಜ್ಬೇಕಿಸ್ತಾನದಲ್ಲಿ ಲ್ಯಾಂಡ್

    ಪಣಜಿ: ಸುಮಾರು 240 ಪ್ರಯಾಣಿಕರಿದ್ದ ರಷ್ಯಾದ ರಾಜಧಾನಿ ಮಾಸ್ಕೋದಿಂದ (Moscow) ಗೋವಾಗೆ (Goa) ಹೊರಟಿದ್ದ ವಿಮಾನವೊಂದರಲ್ಲಿ (Flight) ಬಾಂಬ್ ಬೆದರಿಕೆ (Bomb threat) ಕರೆ ಬಂದಿದ್ದು, ವಿಮಾನವನ್ನು ಉಜ್ಬೇಕಿಸ್ತಾನದಲ್ಲಿ (Uzbekistan) ತುರ್ತುಭೂಸ್ಪರ್ಶ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ರಷ್ಯಾದ ಪೆರ್ಮ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಗೋವಾಗೆ ಹೊರಟಿದ್ದ ಅಝುರ್ ಏರ್ ಚಾರ್ಟರ್ಡ್ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ಬಳಿಕ ಅದನ್ನು ಉಜ್ಬೇಕಿಸ್ತಾನದಲ್ಲಿ ಇಳಿಸಲಾಗಿದೆ. ವಿಮಾನದಲ್ಲಿ 2 ಶಿಶುಗಳು, 7 ಸಿಬ್ಬಂದಿ ಸೇರಿದಂತೆ ಒಟ್ಟು 238 ಪ್ರಯಾಣಿಕರು ಇದ್ದರು ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಹೈಟೆನ್ಷನ್ ಕೆಳಗೆ ನಗರದಲ್ಲಿವೆಯಂತೆ 10 ಸಾವಿರ ಮನೆಗಳು- ಖಡಕ್ ನೋಟಿಸ್ ಕೊಡಲು ಬಿಬಿಎಂಪಿ ತಯಾರಿ

    ವರದಿಗಳ ಪ್ರಕಾರ, ವಿಮಾನ ಶನಿವಾರ ಮುಂಜಾನೆ 4:15ರ ವೇಳೆಗೆ ಗೋವಾದ ದಾಬೋಲಿಮ್ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿತ್ತು. ಆದರೆ ಇದಕ್ಕೂ ಮುನ್ನ 2:30ರ ವೇಳೆಗೆ ದಾಬೋಲಿಮ್ ವಿಮಾನ ನಿಲ್ದಾಣದ ನಿರ್ದೇಶಕರು ಬಾಂಬ್ ಬೆದರಿಕೆಯ ಮೇಲ್ ಅನ್ನು ಸ್ವೀಕರಿಸಿದ್ದು, ಅದನ್ನು ಉಜ್ಬೇಕಿಸ್ತಾನಕ್ಕೆ ತಿರುಗಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    2 ವಾರಗಳ ಇಂದಷ್ಟೇ ಇಂತಹುದೇ ಇನ್ನೊಂದು ಹುಸಿ ಬಾಂಬ್ ಬೆದರಿಕೆ ವರದಿಯಾಗಿತ್ತು. ಜನವರಿ 9ರಂದು 244 ಪ್ರಯಾಣಿಕರಿದ್ದ ವಿಮಾನ ಮಾಸ್ಕೋದಿಂದ ಗೋವಾಗೆ ಬರುತ್ತಿದ್ದ ಸಂದರ್ಭ ಬಾಂಬ್ ಬೆದರಿಕೆ ಕರೆ ಬಂದಿದ್ದು, ವಿಮಾನವನ್ನು ಜಾಮ್‌ನಗರದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿತ್ತು. ಇದನ್ನೂ ಓದಿ: ತನ್ನ ಬೆಕ್ಕು ಕದ್ದಿದ್ದಾರೆಂದು ಶಂಕಿಸಿ ನೆರೆಮನೆಯವರ ಪಾರಿವಾಳಗಳಿಗೆ ವಿಷ ಉಣಿಸಿದ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಉಜ್ಬೇಕಿಸ್ತಾನದಲ್ಲಿ ಭಾರತದ ಕೆಮ್ಮಿನ ಸಿರಪ್‌ ಬಳಸಬೇಡಿ: WHO

    ಉಜ್ಬೇಕಿಸ್ತಾನದಲ್ಲಿ ಭಾರತದ ಕೆಮ್ಮಿನ ಸಿರಪ್‌ ಬಳಸಬೇಡಿ: WHO

    ತಾಷ್ಕೆಂಟ್: ನೋಯ್ಡಾ (Noida) ಮೂಲದ ಮರಿಯನ್ ಬಯೋಟೆಕ್ (Marion Biotech) ಕಂಪನಿ ತಯಾರಿಸಿದ 2 ಕೆಮ್ಮಿನ ಸಿರಪ್‍ಗಳನ್ನು ಉಜ್ಬೇಕಿಸ್ತಾನದಲ್ಲಿರುವ (Uzbekistan) ಮಕ್ಕಳಿಗೆ (Child) ಬಳಸಬಾರದು ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಶಿಫಾರಸು ಮಾಡಿದೆ.

    ಮೆರಿಯನ್ ಬಯೋಟೆಕ್‍ನಿಂದ ತಯಾರಿಸಲ್ಪಟ್ಟ ಗುಣ್ಣಮಟ್ಟದ ವೈದ್ಯಕೀಯ ಉತ್ಪನ್ನಗಳನ್ನು ಪೂರೈಸಲು ವಿಫಲವಾಗಿದೆ. ಇದರಿಂದಾಗಿ ಮರಿಯನ್ ಬಯೋಟೆಕ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ತಯಾರಿಸಿರುವ ಅಬ್ರೊನಾಲ್ ಮತ್ತು ಡಾಕ್-1 ಮ್ಯಾಕ್ಸ್ ಕೆಮ್ಮು ಸಿರಪ್ ತೆಗೆದುಕೂಳ್ಳದಂತೆ ಡಬ್ಲ್ಯುಎಚ್‍ಒ ಸೂಚಿಸಿದೆ.

    ಇಲ್ಲಿಯವರೆಗೆ ಔಷಧಿಯ ಗುಣಮಟ್ಟ ಮತ್ತು ಸುರಕ್ಷತೆಗೆ ಸಂಬಂಧಿಸಿದಂತೆ ಮರಿಯನ್ ಬಯೋಟೆಕ್ ಯಾವುದೇ ಖಾತ್ರಿಯನ್ನು ನೀಡಿಲ್ಲ ಎಂದು ಉಲ್ಲೇಖಿಸಿದೆ.

    ಡಿಸೆಂಬರ್‌ನಲ್ಲಿ ಭಾರತದಲ್ಲಿ ತಯಾರಿಸಿದ ಕೆಮ್ಮಿನ ಸಿರಪ್ ಸೇವಿಸಿ ದೇಶದಲ್ಲಿ ಕನಿಷ್ಠ 18 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಉಜ್ಬೇಕಿಸ್ತಾನ ಹೇಳಿಕೊಂಡಿತ್ತು. ಸಾವನ್ನಪ್ಪಿದ 18 ಮಕ್ಕಳು ನೋಯ್ಡಾ ಮೂಲದ ಮರಿಯನ್ ಬಯೋಟೆಕ್ ತಯಾರಿಸಿದ ಕೆಮ್ಮಿನ ಸಿರಪ್ ಡಾಕ್-1 ಮ್ಯಾಕ್ಸ್ ಅನ್ನು ಸೇವಿಸಿದ್ದಾರೆ ಎಂದು ಉಜ್ಬೇಕಿಸ್ತಾನದ ಆರೋಗ್ಯ ಸಚಿವಾಲಯ ತಿಳಿಸಿತ್ತು. ಇದನ್ನೂ ಓದಿ: ಮೀನು ಹಿಡಿಯಲು ಹೋಗಿದ್ದವರ ಮೇಲೆ ಫೈರಿಂಗ್ ಪ್ರಕರಣ- ಮರಳಿನ ವಿಚಾರವೇ ಕೊಲೆಗೆ ಕಾರಣ

    ಸಿರಪ್‍ಗಳನ್ನು ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವುಗಳಲ್ಲಿ ಎಥಿಲೀನ್ ಗ್ಲೈಕೋಲ್ ಎಂಬ ವಿಷಕಾರಿ ಅಂಶ ಪತ್ತೆಯಾಗಿದೆ ಎಂದು ಸಚಿವಾಲಯ ತಿಳಿಸಿತ್ತು. ವೈದ್ಯರ ಸಲಹೆಗಳನ್ನು ತೆಗೆದುಕೊಳ್ಳದೇ ಪೋಷಕರು ಮಕ್ಕಳಿಗೆ ಕೆಮ್ಮಿನ ಸಿರಪ್ ಅನ್ನು ಅಗತ್ಯ ಪ್ರಮಾಣಕ್ಕಿಂತಲೂ ಹೆಚ್ಚಿನ ಡೋಸ್ ನೀಡಿದ್ದಾರೆ ಎಂದು ಆರೋಪಿಸಿತ್ತು. ಇದನ್ನೂ ಓದಿ: NEP ನೇಮಕಾತಿ ಮಾನದಂಡ – ಸರ್ಕಾರದ ವಿರುದ್ಧ ಸಿಡಿದ್ದೆದ್ದ ಅಂಗನವಾಡಿ ಕಾರ್ಯಕರ್ತೆಯರು

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಗ್ಯಾಂಬಿಯಾ ಬಳಿಕ ಈಗ ಉಜ್ಬೇಕಿಸ್ತಾನದಿಂದ ಆರೋಪ – 18 ಮಕ್ಕಳ ಸಾವಿಗೆ ಭಾರತದ ಸಿರಪ್ ಕಾರಣ

    ಗ್ಯಾಂಬಿಯಾ ಬಳಿಕ ಈಗ ಉಜ್ಬೇಕಿಸ್ತಾನದಿಂದ ಆರೋಪ – 18 ಮಕ್ಕಳ ಸಾವಿಗೆ ಭಾರತದ ಸಿರಪ್ ಕಾರಣ

    ತಾಷ್ಕೆಂಟ್: ಕಳೆದ ಕೆಲ ತಿಂಗಳ ಹಿಂದೆ ಗ್ಯಾಂಬಿಯಾ (Gambia) ದೇಶದ ಸುಮಾರು 70 ಮಕ್ಕಳ ಸಾವಿಗೆ ಭಾರತದಲ್ಲಿ ತಯಾರಿಸಿದ ಕೆಮ್ಮಿನ ಸಿರಪ್ (Cough Syrup) ಕಾರಣ ಎಂದು ಆರೋಪ ಹೊರಿಸಲಾಗಿತ್ತು. ಇದೀಗ ಉಜ್ಬೇಕಿಸ್ತಾನವೂ (Uzbekistan) ಕೂಡಾ ತನ್ನ ದೇಶದ ಸುಮಾರು 18 ಮಕ್ಕಳ ಸಾವಿನಲ್ಲಿ ಭಾರತದಲ್ಲಿ ತಯಾರಿಸಲಾದ ಕೆಮ್ಮಿನ ಸಿರಪ್‌ನ ಪಾತ್ರವಿದೆ ಎಂದು ಆರೋಪಿಸಿದೆ.

    ಭಾರತದಲ್ಲಿ ತಯಾರಿಸಿದ ಕೆಮ್ಮಿನ ಸಿರಪ್ ಸೇವಿಸಿ ದೇಶದಲ್ಲಿ ಕನಿಷ್ಠ 18 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಉಜ್ಬೇಕಿಸ್ತಾನ ಹೇಳಿಕೊಂಡಿದೆ. ಸಾವನ್ನಪ್ಪಿದ 18 ಮಕ್ಕಳು ನೋಯ್ಡಾ ಮೂಲದ ಮರಿಯನ್ ಬಯೋಟೆಕ್ ತಯಾರಿಸಿದ ಕೆಮ್ಮಿನ ಸಿರಪ್ ಡಾಕ್-1 ಮ್ಯಾಕ್ಸ್ ಅನ್ನು ಸೇವಿಸಿದ್ದಾರೆ ಎಂದು ಉಜ್ಬೇಕಿಸ್ತಾನದ ಆರೋಗ್ಯ ಸಚಿವಾಲಯ ತಿಳಿಸಿದೆ.

    ಸಿರಪ್‌ಗಳನ್ನು ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವುಗಳಲ್ಲಿ ಎಥಿಲೀನ್ ಗ್ಲೈಕೋಲ್ ಎಂಬ ವಿಷಕಾರಿ ಅಂಶ ಪತ್ತೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ. ವೈದ್ಯರ ಸಲಹೆಗಳನ್ನು ತೆಗೆದುಕೊಳ್ಳದೇ ಪೋಷಕರು ಮಕ್ಕಳಿಗೆ ಕೆಮ್ಮಿನ ಸಿರಪ್ ಅನ್ನು ಅಗತ್ಯ ಪ್ರಮಾಣಕ್ಕಿಂತಲೂ ಹೆಚ್ಚಿನ ಡೋಸ್ ನೀಡಿದ್ದಾರೆ ಎಂದು ಹೇಳಿದೆ. ಇದನ್ನೂ ಓದಿ: ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿ ಹಲವರಿಗೆ T20 ಯಿಂದ ಬ್ರೇಕ್?

    ವರದಿಗಳ ಪ್ರಕಾರ, ಶೀತ ಹಾಗೂ ಜ್ವರ ಇದ್ದ ಮಕ್ಕಳಿಗೆ ಈ ಸಿರಪ್ ನೀಡಲಾಗುತ್ತದೆ. ಇದೀಗ 18 ಮಕ್ಕಳ ಸಾವಿನ ಬಳಿಕ ದೇಶದ ಎಲ್ಲಾ ಔಷಧಾಲಯಗಳಿಂದ ಡಾಕ್-1 ಮ್ಯಾಕ್ಸ್ ಮಾತ್ರೆಗಳು ಹಾಗೂ ಸಿರಪ್‌ಗಳನ್ನು ಹಿಂಪಡೆಯಲಾಗಿದೆ.

     

    ಉಜ್ಬೇಕಿಸ್ತಾನದಲ್ಲಿ 18 ಮಕ್ಕಳ ಸಾವಿಗೆ ನೋಯ್ಡಾ ಮೂಲದ ಡ್ರಗ್ ಮೇಕರ್ ತಯಾರಿಸಿರುವ ಸಿರಪ್‌ನೊಂದಿಗೆ ಸಂಬಂಧವಿರುವ ಶಂಕೆಯ ಮೇಲೆ ಭಾರತ ತನಿಖೆಯನ್ನು ಆರಂಭಿಸಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಅಸೆಂಬ್ಲಿ ಎಲೆಕ್ಷನ್ ಮೇಲೆ ಬಿಜೆಪಿ ಚಾಣಾಕ್ಯನ ಕಣ್ಣು- ಇಂದಿನಿಂದ ಅಮಿತ್ ಶಾ ರಾಜ್ಯ ಪ್ರವಾಸ

    Live Tv
    [brid partner=56869869 player=32851 video=960834 autoplay=true]

  • ಶೀಘ್ರವೇ ಷರೀಫ್-ಮೋದಿ ಭೇಟಿ ಸಾಧ್ಯತೆ

    ಶೀಘ್ರವೇ ಷರೀಫ್-ಮೋದಿ ಭೇಟಿ ಸಾಧ್ಯತೆ

    ನವದೆಹಲಿ: ಅಪರೂಪದ ವರದಿಯಂತೆ ಭಾರತ ಹಾಗೂ ಪಾಕಿಸ್ತಾನದ ಪ್ರಧಾನಿಗಳು ಶೀಘ್ರವೇ ಭೇಟಿಯಾಗಲಿದ್ದಾರೆ. ಉಜ್ಬೇಕಿಸ್ತಾನದಲ್ಲಿ ನಡೆಯಲಿರುವ ಎಸ್‌ಸಿಒ ಶೃಂಗಸಭೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಪಾಲ್ಗೊಳ್ಳಲಿದ್ದಾರೆ ಎಂದು ವರದಿಯಾಗಿದೆ.

    ಶಾಂಘೈ ಸಹಕಾರ ಸಂಸ್ಥೆ (ಎಸ್‌ಸಿಒ) ಪ್ರಧಾನ ಕಾರ್ಯದರ್ಶಿ ಜಾಂಗ್ ಮಿಂಗ್ ಶುಕ್ರವಾರ 3 ದಿನಗಳ ಕಾಲ ಪಾಕಿಸ್ತಾನಕ್ಕೆ ಭೇಟಿ ನೀಡುತ್ತಿದ್ದು, ಸೆಪ್ಟೆಂಬರ್ 15-16 ರಂದು ಉಜ್ಬೇಕಿಸ್ತಾನದ ಸಮರ್‌ಕಂಡ್‌ನಲ್ಲಿ ನಡೆಯಲಿರುವ ಎಸ್‌ಸಿಒ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಅವರನ್ನು ಆಹ್ವಾನಿಸಲಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ದೇಶದಲ್ಲಿ ಮಂಕಿಪಾಕ್ಸ್ ಭೀತಿ – ಆತಂಕ ಹೆಚ್ಚಿಸಿದ ಆಫ್ರಿಕನ್ ಹಂದಿಜ್ವರ

    ಭಾರತದ ಪ್ರಧಾನಿ ನರೇಂದ್ರ ಮೋದಿ ಕೂಡ ಈ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಪಾಕಿಸ್ತಾನ ಮತ್ತು ಭಾರತದ ಪ್ರಧಾನ ಮಂತ್ರಿಗಳು ಮುಖಾಮುಖಿಯಾಗುವ ಅವಕಾಶ ಇಲ್ಲಿ ಒದಗಿಬರುವ ಸಾಧ್ಯತೆಯಿರುತ್ತದೆ. ಒಂದು ವೇಳೆ ಇಬ್ಬರೂ ಪ್ರಧಾನಿಗಳು ಭೇಟಿಯಾದಲ್ಲಿ, ಕಳೆದ 6 ವರ್ಷಗಳಲ್ಲೇ ಮೊದಲ ಬಾರಿಗೆ ಇಬ್ಬರೂ ಪ್ರಧಾನಿಗಳು ಭೇಟಿಯಾದಂತಾಗುತ್ತದೆ. ಇದನ್ನೂ ಓದಿ: ಚೀನಾದಿಂದ ಪಾಲಿಸ್ಟರ್‌ ಧ್ವಜ ಆಮದು ಮಾಡಿಕೊಂಡು ರಾಷ್ಟ್ರಧ್ವಜ, ಖಾದಿಗೆ ಅವಮಾನ: ಕೇಂದ್ರದ ವಿರುದ್ಧ ಸಿದ್ದು ಕಿಡಿ

    ಚೀನಾ, ಪಾಕಿಸ್ತಾನ, ರಷ್ಯಾ, ಭಾರತ, ತಜಕಿಸ್ತಾನ, ಉಜ್ಬೇಕಿಸ್ತಾನ, ಕಿರ್ಗಿಸ್ತಾನ ಮತ್ತು ಕಝಾಕಿಸ್ತಾನ ದೇಶಗಳು ಎಸ್‌ಸಿಒ ಸದಸ್ಯತ್ವ ಹೊಂದಿವೆ. ಈ ಸಂಘಟನೆ ಸಾಮರ್ಥ್ಯ ಹಾಗೂ ಅಧಿಕಾರವನ್ನು ಹೆಚ್ಚಿಸಲು, ದೇಶಗಳಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡಲು, ಬಡತನವನ್ನು ಕಡಿಮೆ ಮಾಡಲು ಹಾಗೂ ಆಹಾರ ಭದ್ರತೆಯನ್ನು ಹೆಚ್ಚಿಸುವ ಪ್ರಯತ್ನಗಳನ್ನು ಮಾಡುತ್ತವೆ.

    Live Tv
    [brid partner=56869869 player=32851 video=960834 autoplay=true]

  • ಕರಡಿ ಬಾಯಿಗೆ 3 ವರ್ಷದ ಮಗಳನ್ನೇ ನೂಕಿದ ತಾಯಿ!

    ಕರಡಿ ಬಾಯಿಗೆ 3 ವರ್ಷದ ಮಗಳನ್ನೇ ನೂಕಿದ ತಾಯಿ!

    ತಾಷ್ಕೆಂಟ್: ರಕ್ಷಿಸಿ ಸಲಹಬೇಕಾದ ತಾಯಿಯೇ ಪ್ರಾಣ ತೆಗೆದುಕೊಳ್ಳಲು ನಿಂತರೆ ಮಕ್ಕಳ ಗತಿ ಏನು? ಇಲ್ಲೊಬ್ಬ ತಾಯಿ ತನ್ನ 3 ವರ್ಷದ ಮಗಳನ್ನು ಕರಡಿ ಬಾಯಿಗೆ ನೂಕಿದ ಆಘಾತಕಾರಿಯಾದ ಘಟನೆ ಉಜ್ಬೇಕಿಸ್ತಾನ್‍ನಲ್ಲಿ ನಡೆದಿದೆ.

    ತಾಯಿ ತನ್ನ ಮೂರು ವರ್ಷದ ಕಂದಮ್ಮನ ಪ್ರಾಣ ತೆಗೆಯಲು ಕರಡಿ ಬಾಯಿಗೆ ನೂಕಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಭಯಾನಕ ವೀಡಿಯೋ ನೋಡಿದ ನೆಟ್ಟಿಗರು ಮಹಿಳೆಯನ್ನು ಶಪಿಸುತ್ತಿದ್ದಾರೆ. ಇದನ್ನೂ ಓದಿ: 3ನೇ ಪತಿಗೆ ನಿಷ್ಠೆ ತೋರಿಸಲು 2ನೇ ಪತಿಯಿಂದ ಪಡೆದ ಮಗುವನ್ನು ಸುಟ್ಟು ಹಾಕಿದ್ಳು!

    ನಡೆದಿದ್ದೇನು?
    ಉಜ್ಬೇಕಿಸ್ತಾನ್‍ನಲ್ಲಿ ತಾಷ್ಕೆಂಟ್ ಮೃಗಾಲಯಕ್ಕೆ ತಾಯಿ ತನ್ನ ಮಗಳೊಂದಿಗೆ ಬಂದಿದ್ದಾಳೆ. ಈ ವೇಳೆ ಬಾಲಕಿ ಕರಡಿ ನೋಡುತ್ತ ಕಂಬಿ ಹಿಡಿದು ನಿಂತಿರುತ್ತಾಳೆ. ಆಗ ತಾಯಿ ಹಿಂದೆಯಿಂದ ಬಾಲಕಿಯ ಕೈಯನ್ನು ಕಂಬಿಯಿಂದ ಬಿಡಿಸಿ ಕರಡಿ ಇದ್ದ ಜಾಗಕ್ಕೆ ನೂಕಿದ್ದಾಳೆ. 3 ವರ್ಷದ ಬಾಲಕಿ 16 ಅಡಿಯಿಂದ ಕೆಳಗೆ ಕರಡಿ ಇದ್ದ ಜಾಗಕ್ಕೆ ಬೀಳುತ್ತಾಳೆ. ಆಗ ಕರಡಿ ಬಾಲಕಿ ಬಿದ್ದ ಜಾಗಕ್ಕೆ ಓಡಿ ಹೋಗುತ್ತೆ.

    ಸುದ್ದಿ ತಿಳಿದ ತಕ್ಷಣ ಸಿಬ್ಬಂದಿ ಬಾಲಕಿಯನ್ನು ರಕ್ಷಣೆ ಮಾಡಲು ಕರಡಿ ಇದ್ದ ಜಾಗಕ್ಕೆ ಧಾವಿಸುತ್ತಾರೆ. ಅದೃಷ್ಟವಶಾತ್ ಬಾಲಕಿಯನ್ನು ಕರಡಿ ಏನು ಮಾಡಿಲ್ಲ. ಮೇಲಿಂದ ಬಿದ್ದ ಕಾರಣ ಬಾಲಕಿಗೆ ಸ್ಪಲ್ಪ ಗಾಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕಳ್ಳತನ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದ ಮಂತ್ರವಾದಿ – ಹಣ, ಚಿನ್ನಾಭರಣ ಮಾಯ ಮಾಡಿದ್ದೇನೆ ಎಂದ!

    ಈ ಘಟನೆಯು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ರೈಲಿಂಗ್‍ನಿಂದ ಸುಮಾರು 16 ಅಡಿ ಕೆಳಗೆ ಬಿದ್ದ ಬಾಲಕಿಯನ್ನು ಮೃಗಾಲಯದ ಸಿಬ್ಬಂದಿ ರಕ್ಷಿಸುತ್ತಿರುವುದನ್ನು ನೋಡಬಹುದು. ಗಾಯವಾಗಿದ್ದ ಪರಿಣಾಮ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

    ಕೊಲೆಗೆ ಯತ್ನಿಸಿದ ಮಹಿಳೆ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.