Tag: V D Savarkar

  • ವೀರ್ ಸಾವರ್ಕರ್ ಎಂದರೆ ಆನೆ, ನಾಯಿ ನರಿ ಮಾತಿಗೆಲ್ಲ ಅದು ತಲೆಕೆಡಿಸಿಕೊಳ್ಳಲ್ಲ: ಕಾಂತೇಶ್

    ವೀರ್ ಸಾವರ್ಕರ್ ಎಂದರೆ ಆನೆ, ನಾಯಿ ನರಿ ಮಾತಿಗೆಲ್ಲ ಅದು ತಲೆಕೆಡಿಸಿಕೊಳ್ಳಲ್ಲ: ಕಾಂತೇಶ್

    ಹಾವೇರಿ: ಕೆಲವರು ವೀರ್ ಸಾವರ್ಕರ್ (V.D Savarkar) ಅವರನ್ನು ರಾಷ್ಟ್ರದ್ರೋಹಿ ಎಂದು ಕರೆಯುತ್ತಿದ್ದಾರೆ. ಸಾವರ್ಕರ್ ಎಂದರೆ ಆನೆ ಇದ್ದಂತೆ, ಆನೆ ನಡೆಯುವಾಗ ನಾಯಿ ನರಿ ಮಾತನಾಡುತ್ತವೆ. ಅದಕ್ಕೆಲ್ಲಾ ಆನೆ ತಲೆ ಕೆಡೆಸಿಕೊಳ್ಳುವುದಿಲ್ಲ ಎಂದು ಮಾಜಿ ಸಚಿವ ಈಶ್ವರಪ್ಪ ಅವರ ಪುತ್ರ ಕೆ.ಈ ಕಾಂತೇಶ್ (K.E Kantesh) ವ್ಯಂಗ್ಯವಾಡಿದ್ದಾರೆ.

    ಹಾವೇರಿಯಲ್ಲಿ (Haveri) ಸಾವರ್ಕರ್ ಸಂಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ವೇಳೆ ಸಾವರ್ಕರ್ ವಿಚಾರವಾಗಿ ಇತ್ತೀಚಿನ ಬೆಳವಣಿಗೆ ಕುರಿತಾಗಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ನಾವೆಲ್ಲಾ ಆನೆಗೆ ಹೂವು ಕೊಡ್ತೀವಿ. ಹಾಗೇ ನಾಯಿ ನರಿಗಳ ಮಾತಿಗೆ ತಲೆ ಕೆಡೆಸಿಕೊಳ್ಳಬೇಕಿಲ್ಲ. ಸಾವರ್ಕರ್ ಎಂದರೆ ಆನೆ ಇದ್ದಂತೆ. ಆನೆ ಸಂಚರಿಸುವಾಗ ಇದೆಲ್ಲ ಸಹಜ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ವಸತಿ ಶಾಲೆಯಲ್ಲಿ ಬಾಲಕಿಯರ ಬಟ್ಟೆ ಬದಲಿಸುವ ವೀಡಿಯೋ ತೆಗೆದ ಸಿಬ್ಬಂದಿ – ಪೋಷಕರ ಆಕ್ರೋಶ

    ನಮ್ಮ ದೇಶ ಹಿಂದೂರಾಷ್ಟ್ರ ಆಗುವುದರಲ್ಲಿ ಯಾವುದೇ ಅನುಮಾನ ಇಲ್ಲ. ನಮ್ಮ ದೇಶಕ್ಕಾಗಿ ರಾಷ್ಟ್ರಭಕ್ತರ ಸಂಖ್ಯೆ ಹೆಚ್ಚಾಗಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

    ಇತ್ತೀಚೆಗೆ ಸಚಿವ ಪ್ರಿಯಾಂಕ್ ಖರ್ಗೆಯವರು, ಸಾವರ್ಕರ್ ಫೋಟೋವನ್ನು ವಿಧಾನಸೌಧ ಸಭಾಂಗಣದಲ್ಲಿರುವ ಸಾವರ್ಕರ್ ಫೋಟೋ ತೆರವುಗೊಳಿಸಬೇಕು ಎಂದಿದ್ದರು. ಬಳಿಕ ತೀವ್ರ ಟೀಕೆಗಳು ವ್ಯಕ್ತವಾದ ಬಳಿಕ, ನನ್ನ ಸಿದ್ಧಾಂತ ಬಸವ ತತ್ವ, ನಾರಾಯಣ ಗುರು, ಡಾ.ಬಿ.ಆರ್.ಅಂಬೇಡ್ಕರ್ ಅವರ ಸಿದ್ಧಾಂತ. ಹೀಗಾಗಿ ಸಾವರ್ಕರ್ ಸಿದ್ಧಾಂತವನ್ನು ನಾನು ಒಪ್ಪುವುದಿಲ್ಲ. ವಿಧಾನಸೌಧ ಸಭಾಂಗಣದಲ್ಲಿ ವಿ.ಡಿ. ಸಾವರ್ಕರ್ ಅವರ ಭಾವಚಿತ್ರ ತೆರವು ಮಾಡುವ ಕುರಿತು ನನ್ನ ಹೇಳಿಕೆಗೆ ನಾನು ಈಗಲೂ ಬದ್ಧವಾಗಿದ್ದೇನೆ. ಸಾವರ್ಕರ್ ಅವರು ಬ್ರಿಟೀಷರಿಂದ ಪಿಂಚಣಿ ಪಡೆಯುತ್ತಿದ್ದರು ಎಂದು ಸಮರ್ಥಿಸಿಕೊಂಡಿದ್ದರು. ಇದನ್ನೂ ಓದಿ: ಆಟವಾಡುತ್ತಾ ನದಿಗೆ ಬಿದ್ದ ಮಗುವಿನ ರಕ್ಷಣೆಗಾಗಿ ಧುಮುಕಿದ ಐವರು ಸಾವು!

  • ಗೋಲ್ವಾಳ್ಕರ್, ಸಾವರ್ಕರ್ ಇತ್ಯಾದಿ ಹುಸಿ ದೇಶ ಭಕ್ತರ ಪಾಠ ತೆಗೆಯಬೇಕು: ಸಾಹಿತಿ ಕುಂ.ವೀರಭದ್ರಪ್ಪ

    ಗೋಲ್ವಾಳ್ಕರ್, ಸಾವರ್ಕರ್ ಇತ್ಯಾದಿ ಹುಸಿ ದೇಶ ಭಕ್ತರ ಪಾಠ ತೆಗೆಯಬೇಕು: ಸಾಹಿತಿ ಕುಂ.ವೀರಭದ್ರಪ್ಪ

    ಚಾಮರಾಜನಗರ: ಗೋಲ್ವಾಳ್ಕರ್ (Golwalkar), ಸಾವರ್ಕರ್ (Savarkar) ಇತ್ಯಾದಿ ಹುಸಿ ದೇಶ ಭಕ್ತರ ಪಾಠ ತೆಗೆಯಬೇಕು. ಈ ಪಾಠಗಳನ್ನು ಮಕ್ಕಳಿಗೆ ಬೋಧಿಸಬಾರದು. ಸರ್ಕಾರ ಈ ಬಗ್ಗೆ ಸುತ್ತೋಲೆ ಹೊರಡಿಸಬೇಕು ಎಂದು ಸಾಹಿತಿ ಕುಂ.ವೀರಭದ್ರಪ್ಪ (Kum Veerabhadrappa) ಆಗ್ರಹಿಸಿದರು.

    ಚಾಮರಾಜನಗರದಲ್ಲಿ (Chamarajanagara) ಮಾತನಾಡಿದ ಅವರು, ಹಿಂದಿನ ಸರ್ಕಾರ ಮನುಷ್ಯ ವಿರೋಧಿ, ದೇಶ ವಿರೋಧಿ, ಸಮಾಜ ವಿರೋಧಿ ಪಠ್ಯ ಅಳವಡಿಸಿದ್ದು ತಪ್ಪು. ಇದು ನಮ್ಮ ಸಂವಿಧಾನಕ್ಕೆ ಮಾಡಿದ ಅಪಮಾನ. ಹೊಸ ಸರ್ಕಾರ ಇದನ್ನು ಬದಲಿಸಲಿ ಎಂದು ಒತ್ತಾಯಿಸಿದರು. ಇದನ್ನೂ ಓದಿ: ಕೋಲಾರ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

    ಬರಗೂರು ರಾಮಚಂದ್ರಪ್ಪ ನೇತೃತ್ವ ಸಮಿತಿಯ ಪಠ್ಯಕ್ರಮ ಮುಂದುವರಿಸಲಿ. ಭಾರತ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಬಸವಣ್ಣನ ತತ್ವ ಪಾಲಿಸಬೇಕು. ಇದು ಸರ್ಕಾರದ ಕರ್ತವ್ಯ ಎಂದು ಅವರು ಹೇಳಿದರು.

    ನನಗೆ ಈಗ್ಲೂ ಬೆದರಿಕೆ ಪತ್ರ ಬರುತ್ತಿವೆ. ಇದೀಗ 16 ನೇ ಬೆದರಿಕೆ ಪತ್ರ ಬಂದಿದೆ. ಸನಾತನ ಮೌಲ್ಯ, ಹಿಂದುತ್ವ ವಿರೋಧಿಸಿದಾಗ ಈ ರೀತಿಯ ಪ್ರೇಮ ಪತ್ರಗಳು ಬರುತ್ತವೆ. ನಾನು ಇವುಗಳನ್ನು ಬೆದರಿಕೆ ಪತ್ರ ಅಂದುಕೊಂಡಿಲ್ಲ, ಪ್ರೇಮ ಪತ್ರ ಅಂದ್ಕೊಡಿದ್ದೀನಿ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಬಹುಕೋಟಿ ವೆಚ್ಚದ BRTS ಬಸ್‌ಗಳಲ್ಲಿ ಇಲ್ಲ ಮಹಿಳೆಯರಿಗೆ ಉಚಿತ ಪ್ರಯಾಣ

    ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿ ಜಾರಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮೋದಿ ಸರ್ಕಾರ ಕಾರ್ಪೋರೇಟ್ ಕುಳಗಳಿಗೆ 10 ಲಕ್ಷ ಕೋಟಿ ಸಾಲವನ್ನು ಮನ್ನಾ ಮಾಡಿದೆ. ಬಡವರಿಗೆ 10 ಕೆಜಿ ಅಕ್ಕಿ ಕೊಟ್ರೆ ಪ್ರಳಯವಾಗುತ್ತಾ? ರಾಜ್ಯದಲ್ಲಿ ಬಡವರಿಗೆ 50 ಸಾವಿರ ಕೋಟಿ ಅಷ್ಟೇ ಖರ್ಚಾಗುತ್ತೆ. ಇದು ದೊಡ್ಡದಲ್ಲ. ಬಡವರು, ಮಹಿಳೆಯರಿಗೆ ಕೊಡ್ತಿದ್ದಾರೆ. ಎಲ್ಲಾ ಲೇಖಕರು ಕೂಡಾ ಇದನ್ನು ಬೆಂಬಲಿಸಬೇಕು ಎಂದರು.

  • ಸಾವರ್ಕರ್‌ಗೆ ಅವಮಾನ ಮಾಡಿದ್ರೆ ಮೈತ್ರಿಯಲ್ಲಿ ಬಿರುಕು – ರಾಹುಲ್‍ಗೆ ಉದ್ಧವ್ ನೇರ ಎಚ್ಚರಿಕೆ

    ಸಾವರ್ಕರ್‌ಗೆ ಅವಮಾನ ಮಾಡಿದ್ರೆ ಮೈತ್ರಿಯಲ್ಲಿ ಬಿರುಕು – ರಾಹುಲ್‍ಗೆ ಉದ್ಧವ್ ನೇರ ಎಚ್ಚರಿಕೆ

    ಮುಂಬೈ: ಸಾವರ್ಕರ್ ಅವರನ್ನು ಅವಮಾನಿಸದಂತೆ ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿಗೆ (Rahul Gandhi) ಶಿವಸೇನೆ (Shiv Sena) (ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಭಾನುವಾರ ಎಚ್ಚರಿಕೆ ನೀಡಿದ್ದಾರೆ. ಸಾವರ್ಕರ್ ಅವರನ್ನು ಕೀಳಾಗಿ ಬಿಂಬಿಸಿದರೆ ಪ್ರತಿಪಕ್ಷಗಳ ಮೈತ್ರಿಯಲ್ಲಿ ಬಿರುಕು ಉಂಟಾಗಲಿದೆ ಎಂದಿದ್ದಾರೆ.

    ಹಿಂದುತ್ವ (Hindutva) ಸಿದ್ಧಾಂತವಾದಿ ವಿಡಿ ಸಾವರ್ಕರ್ (V D Savarkar) ಅವರನ್ನು ಮಾದರಿಯಾಗಿ ಪರಿಗಣಿಸುತ್ತೇವೆ. ಅವರನ್ನು ಅವಮಾನಿಸುವುದನ್ನು ಸಹಿಸುವುದಿಲ್ಲ ಎಂದು ಅವರು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಅಡ್ಜಸ್ಟ್‌ಮೆಂಟ್‌ ಪಾಲಿಟಿಕ್ಸ್‌ ಬೇಡ – ಬೆಂಗಳೂರಿನಲ್ಲಿ ಗೆಲ್ಲೋ ಕ್ಷೇತ್ರಗಳ ಟಾರ್ಗೆಟ್‍ಗೆ ಶಾ ಸೂತ್ರ

    ಸಾವರ್ಕರ್ ಅಂಡಮಾನ್ ಜೈಲಿನಲ್ಲಿ (Andaman cellular jail) 14 ವರ್ಷಗಳ ಕಾಲ ಸೆರೆವಾಸದಲ್ಲಿ ಚಿತ್ರಹಿಂಸೆ ಅನುಭವಿಸಿದ್ದನ್ನು ನಾವು ಓದಬಹುದು. ಇದು ಅವರ ತ್ಯಾಗಕ್ಕೆ ಇದ್ದ ಸಾಕ್ಷಿಯಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

    ಕಾಂಗ್ರೆಸ್ ಹಾಗೂ ಎನ್‍ಸಿಪಿ ಮೈತ್ರಿ ಪ್ರಜಾಪ್ರಭುತ್ವ ರಕ್ಷಣೆಗಾಗಿ ಮಾಡಲ್ಪಟ್ಟಿದೆ. ರಾಹುಲ್ ಅವರನ್ನು ಅನಗತ್ಯ ಪ್ರಚೋದಿಸಲಾಗುತ್ತಿದೆ. ಪ್ರಜಾಪ್ರಭುತ್ವ ಉಳಿಯಬೇಕಾದರೆ ಈ ಮೈತ್ರಿ ಮುಂದುವರೆಯಬೇಕು ಎಂದಿದ್ದಾರೆ.

    ಪ್ರಧಾನಿ ವಿರುದ್ಧದ ರಾಹುಲ್ ಗಾಂಧಿ ಟೀಕೆಗೆ ಬಿಜೆಪಿ ನಿಲುವನ್ನು ತೀವ್ರವಾಗಿ ಖಂಡಿಸಿರುವ ಅವರು ಮೋದಿ ಎಂದರೆ ಭಾರತವಲ್ಲ. ಮೋದಿಯನ್ನು ಪ್ರಶ್ನಿಸುವುದು ಭಾರತಕ್ಕೆ (India) ಮಾಡುವ ಅಪಮಾನವಲ್ಲ ಎಂದಿದ್ದಾರೆ.

    ಮೋದಿ (Modi) ಉಪನಾಮ ಬಳಕೆಯ ಮಾನನಷ್ಟ ಮೊಕದ್ದಮೆಯಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಯವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು. ಈ ವೇಳೆ ಸುದ್ದಿಗೋಷ್ಠಿ ಕ್ಷಮೆಯನ್ನು ಯಾಕೆ ಕೇಳಿಲ್ಲ ಎಂಬ ಪ್ರಶ್ನೆಗೆ ಕ್ಷಮೆಯಾಚಿಸಲು ನಾನು ಸಾವರ್ಕರ್ ಅಲ್ಲ. ನಾನು ಗಾಂಧಿ ಕುಟುಂಬದವನು. ಗಾಂಧಿ ಕ್ಷಮೆ ಯಾಚಿಸುವುದಿಲ್ಲ ಎಂದು ಉತ್ತರಿಸಿದ್ದರು. ಇದನ್ನೂ ಓದಿ: ರಾಜ್ಯದಲ್ಲಿ ಇಂದಿನಿಂದ 3 ದಿನ ಗುಡುಗು ಸಹಿತ ಮಳೆ ಸಾಧ್ಯತೆ