Tag: V Senthil Balaji

  • ತಮಿಳುನಾಡು ಮಾಜಿ ಸಚಿವ ಸೆಂಥಿಲ್ ಬಾಲಾಜಿಗೆ ಸುಪ್ರೀಂ ಜಾಮೀನು

    ತಮಿಳುನಾಡು ಮಾಜಿ ಸಚಿವ ಸೆಂಥಿಲ್ ಬಾಲಾಜಿಗೆ ಸುಪ್ರೀಂ ಜಾಮೀನು

    ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇ.ಡಿಯಿಂದ ಬಂಧನಕ್ಕೊಳಪಟ್ಟಿದ್ದ ತಮಿಳುನಾಡು ಮಾಜಿ ಸಚಿವ ವಿ ಸೆಂಥಿಲ್ ಬಾಲಾಜಿಗೆ (V Senthil Balaji) ಸುಪ್ರೀಂ ಕೋರ್ಟ್ (Supreme Court) ಷರತ್ತುಬದ್ಧ ಜಾಮೀನು (Bail) ಮಂಜೂರು ಮಾಡಿದೆ. ನ್ಯಾ.ಎಎಸ್ ಓಕಾ ಮತ್ತು ಎಜಿ ಮಸಿಹ್ ಅವರನ್ನೊಳಗೊಂಡ ಪೀಠವು ಜಾಮೀನು ಮಂಜೂರು ಮಾಡಿದೆ.

    ಫೆಬ್ರವರಿ 28 ರಂದು ಮದ್ರಾಸ್ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿದ ನಂತರ ಸೆಂಥಿಲ್ ಬಾಲಾಜಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಇ.ಡಿ ಪರವಾಗಿ ಮತ್ತು ಹಿರಿಯ ವಕೀಲರಾದ ಮುಕುಲ್ ರೋಹಟಗಿ, ಸಿದ್ಧಾರ್ಥ್ ಲೂತ್ರಾ ಸೆಂಥಿಲ್ ಬಾಲಾಜೀ ಪರ ವಾದ ಮಂಡಿಸಿದ್ದರು. ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಆಗಸ್ಟ್ 12ರಂದು ಕಾಯ್ದಿರಿಸಿತ್ತು. ಇದನ್ನೂ ಓದಿ: ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು: ಕಾಂಗ್ರೆಸ್ ನಾಯಕ ಕೆ.ಬಿ.ಕೋಳಿವಾಡ

    ಬಾಲಾಜಿ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್, ಈ ರೀತಿಯ ಪ್ರಕರಣದಲ್ಲಿ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದರೆ ಅದು ತಪ್ಪು ಸಂಕೇತವನ್ನು ನೀಡುತ್ತದೆ. ಸಾರ್ವಜನಿಕ ಹಿತಾಸಕ್ತಿ ವಿರುದ್ಧವಾಗಿರುತ್ತದೆ. ಅರ್ಜಿದಾರರು ಎಂಟು ತಿಂಗಳಿಗೂ ಹೆಚ್ಚು ಕಾಲ ಕಸ್ಟಡಿಯಲ್ಲಿರುವುದರಿಂದ ಕಾಲಮಿತಿಯೊಳಗೆ ಪ್ರಕರಣವನ್ನು ವಿಲೇವಾರಿ ಮಾಡುವಂತೆ ವಿಶೇಷ ನ್ಯಾಯಾಲಯಕ್ಕೆ ನಿರ್ದೇಶನ ನೀಡುವುದು ಸೂಕ್ತ ಎಂದು ಹೇಳಿತ್ತು. ಇದನ್ನೂ ಓದಿ: ‘ಗೋ ಬ್ಯಾಕ್ ಹಿಂದೂ’: ಅಮೆರಿಕದ ಸ್ವಾಮಿನಾರಾಯಣ ದೇವಸ್ಥಾನ ಆವರಣದಲ್ಲಿ ಆಕ್ಷೇಪಾರ್ಯ ಬರವಣಿಗೆ

    ಎಐಎಡಿಎಂಕೆ ಆಡಳಿತದಲ್ಲಿ ಸಾರಿಗೆ ಸಚಿವರಾಗಿದ್ದಾಗ ಬಸ್ ಕಂಡಕ್ಟರ್‌ಗಳ ನೇಮಕಾತಿ ಮತ್ತು ಚಾಲಕರು ಮತ್ತು ಜೂನಿಯರ್ ಎಂಜಿನಿಯರ್‌ಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎನ್ನಲಾಗಿದ್ದು, ಉದ್ಯೋಗಕ್ಕಾಗಿ ನಗದು ಪಡೆದು ಅಕ್ರಮ ಹಣ ವರ್ಗಾವಣೆ ಮಾಡಿದ ಆರೋಪದಲ್ಲಿ ಬಾಲಾಜಿ ಅವರನ್ನು ಇ.ಡಿ ಬಂಧಿಸಿತ್ತು. ಬಂಧನಕ್ಕೊಳಗಾದ ಎಂಟು ತಿಂಗಳ ನಂತರ ಫೆಬ್ರವರಿ 13ರಂದು ತಮಿಳುನಾಡು ಸಚಿವ ಸಂಪುಟಕ್ಕೆ ಬಾಲಾಜಿ ರಾಜೀನಾಮೆ ನೀಡಿದರು. ಇದನ್ನೂ ಓದಿ: ಬಿಜೆಪಿ ನಾಯಕನ ಪತ್ನಿ ವಿರುದ್ಧ ಮಾನಹಾನಿ ಹೇಳಿಕೆ – ಸಂಜಯ್ ರಾವತ್‍ಗೆ 15 ದಿನಗಳ ಜೈಲು!

    ಉದ್ಯೋಗ ಆಕಾಂಕ್ಷಿಗಳಿಂದ ಲಂಚ ಸ್ವೀಕರಿಸಲು ಮಾಜಿ ಸಚಿವರು ತಮ್ಮ ಸಹೋದರ ಮತ್ತು ಸಾರಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿ ಇ.ಡಿ ಸೆಂಥಿಲ್ ಬಾಲಾಜಿ ವಿರುದ್ಧ 3,000 ಪುಟಗಳ ಆರೋಪಪಟ್ಟಿ ಸಲ್ಲಿಸಿತ್ತು. ಇದನ್ನೂ ಓದಿ: MUDA Case; ಪ್ರಕರಣದ ಆದೇಶವನ್ನೇ ರದ್ದು ಮಾಡಿಸುವ ಅವಕಾಶ ಕಾನೂನಿನಲ್ಲಿದೆ: ಹಿರಿಯ ವಕೀಲ ವೇಣುಗೋಪಾಲ್

  • ಅಕ್ರಮ ಹಣ ವರ್ಗಾವಣೆ – ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿಗೆ ನ್ಯಾಯಾಂಗ ಬಂಧನ

    ಅಕ್ರಮ ಹಣ ವರ್ಗಾವಣೆ – ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿಗೆ ನ್ಯಾಯಾಂಗ ಬಂಧನ

    ಚೆನ್ನೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇ.ಡಿ (ಜಾರಿ ನಿರ್ದೇಶನಾಲಯ) ವಶದಲ್ಲಿದ್ದ ತಮಿಳುನಾಡು (Tamil Nadu) ಸಚಿವ ವಿ ಸೆಂಥಿಲ್ ಬಾಲಾಜಿ  (V.Senthil Balaji) ಅವರನ್ನು ಆ.25 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಲಯ (Court) ಆದೇಶ ಹೊರಡಿಸಿದೆ.

    ಸೆಂಥಿಲ್ ಬಾಲಾಜಿ ಅವರ ಕಸ್ಟಡಿ ಅವಧಿ ಮುಗಿದ ಬಳಿಕ ಜಾರಿ ನಿರ್ದೇಶನಾಲಯ (Enforcement Directorate) ಇಲ್ಲಿನ ಸೆಷನ್ಸ್ ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು. ಈ ವೇಳೆ ವಿಚಾರಣೆ ನಡೆಸಿದ ಕೋರ್ಟ್, ಅವರನ್ನು ನ್ಯಾಯಾಂಗ ಬಂಧನದಲ್ಲಿ ಇರಿಸುವಂತೆ ಆದೇಶ ನೀಡಿದೆ. ಇದನ್ನೂ ಓದಿ: ಎಷ್ಟೇ ಕಷ್ಟವಾದರೂ ಸಂವಿಧಾನ ಉಳಿಸಿಕೊಳ್ಳುವ ಅಗತ್ಯವಿದೆ: ಸಿದ್ದರಾಮಯ್ಯ

    ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಸೆಂಥಿಲ್ ಬಾಲಾಜಿಯನ್ನು 5 ದಿನಗಳ ಕಾಲ ಕಸ್ಟಡಿಗೆ ತೆಗೆದುಕೊಳ್ಳಲು ನ್ಯಾಯಾಧೀಶರು ಆಗಸ್ಟ್ 7 ರಂದು ಇ.ಡಿಗೆ ಅನುಮತಿ ನೀಡಿದ್ದರು. ಕಸ್ಟಡಿ ಅವಧಿ ಶನಿವಾರ ಅಂತ್ಯಗೊಂಡಿದ್ದರಿಂದ ಇ.ಡಿ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿತ್ತು.

    ಹಿಂದಿನ ಎಐಎಡಿಎಂಕೆ ಆಡಳಿತದಲ್ಲಿ ಸಾರಿಗೆ ಸಚಿವರಾಗಿದ್ದಾಗಿನ ಹಗರಣಕ್ಕೆ ಸಂಬಂಧಿಸಿದಂತೆ ಬಾಲಾಜಿ ಅವರನ್ನು ಜೂ.14 ರಂದು ಬಂಧಿಸಲಾಗಿತ್ತು. ಇದನ್ನೂ ಓದಿ: 7 ವರ್ಷ ಕಳೆದರೂ ಉದ್ಘಾಟನೆ ಭಾಗ್ಯ ಕಾಣದ ಚಿಕ್ಕೋಡಿ ಆಸ್ಪತ್ರೆ – ಜನರ ಗೋಳು ಕೇಳೋರಿಲ್ಲ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಮಿಳುನಾಡು ಅಬಕಾರಿ ಸಚಿವರ ಬಂಧನ; ಇದು BJP ಸೇಡಿನ ರಾಜಕಾರಣ – ಎಂ.ಕೆ ಸ್ಟಾಲಿನ್‌

    ತಮಿಳುನಾಡು ಅಬಕಾರಿ ಸಚಿವರ ಬಂಧನ; ಇದು BJP ಸೇಡಿನ ರಾಜಕಾರಣ – ಎಂ.ಕೆ ಸ್ಟಾಲಿನ್‌

    – ಆಸ್ಪತ್ರೆಗೆ ಭೇಟಿ ಮಾಡಿ ಸೆಂಥಿಲ್ ಬಾಲಾಜಿ ಆರೋಗ್ಯ ವಿಚಾರಿಸಿದ ಸಿಎಂ
    – ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಂಡನೆ

    ಚೆನ್ನೈ: ಅಕ್ರಮ ಹಣ ವರ್ಗಾವಣೆ ಕೇಸ್‌ನಲ್ಲಿ ಇಡಿ ಬಂಧನಕ್ಕೊಳಗಾದ ತಮಿಳುನಾಡು ಸಚಿವ ವಿ.ಸೆಂಥಿಲ್ ಬಾಲಾಜಿ (V Senthil Balaji) ಅವರನ್ನ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್‌ (MK Stalin) ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.‌ ಇಡಿ ಬಂಧಿಸಿ ಆಸ್ಪತ್ರೆಗೆ ದಾಖಲಿಸಿದ ಕೆಲ ಗಂಟೆಗಳಲ್ಲೇ ಭೇಟಿ ಮಾಡಿ ಆರೋಗ್ಯ ಸ್ಥಿತಿಗತಿಯನ್ನ ವೀಕ್ಷಿಸಿದ್ದಾರೆ. ಅಲ್ಲದೇ ಇದು ಬಿಜೆಪಿ ಸೇಡಿನ ರಾಜಕಾರಣ ಎಂದು ಕಿಡಿ ಕಾರಿದ್ದಾರೆ.

    ಸಚಿವ ವಿ.ಸೆಂಥಿಲ್ ಬಾಲಾಜಿ ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಬುಧವಾರ ಶೋಧ ನಡೆಸಿದ ನಂತರ ಮನಿ ಲಾಂಡರಿಂಗ್ ತಡೆ ಕಾಯ್ದೆ (PMLA) ಅಡಿಯಲ್ಲಿ ಬಂಧಿಸಲು ಮುಂದಾಯಿತು. ಸತತ 24 ಗಂಟೆಗಳ ಕಾರ್ಯಾಚರಣೆ ನಡೆಸಿದ ಇಡಿ ತಂಡ ಮಧ್ಯರಾತ್ರಿ 1:30ರ ಸುಮಾರಿಗೆ ಸಚಿವರನ್ನ ಬಂಧಿಸಲು ಮುಂದಾದಾಗ ತಕ್ಷಣವೇ ಎದು ನೋವು ಕಾಣಿಸಿಕೊಂಡಿತ್ತು. ಕಾರಿನಲ್ಲೇ ಎದೆ ಬಿಗಿಹಿಡಿದುಕೊಂಡು ಅತ್ತು ಗೋಗರೆದಿದ್ದರು. ಆ ನಂತರ ಅವರನ್ನ ಚೆನ್ನೈನ ಒಮಂದೂರಾರ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

    ಆಸ್ಪತ್ರೆಗೆ ದಾಖಲಿಸಿದ ಕೆಲ ಗಂಟೆಗಳ ನಂತರ ಸಿಎಂ ಎಂ.ಕೆ ಸ್ಟಾಲಿನ್‌, ಸಚಿವರನ್ನ ಭೇಟಿ ಮಾಡಿದರು. ಇತರ ಸಚಿವರಾದ ಐ.ಪೆರಿಯಸಾಮಿ, ಪೊನ್ಮುಡಿ, ಅನ್ಬಿಲ್ ಮಹೇಶ್ ಪೊಯ್ಯಮೊಳಿ ಮತ್ತು ಆರ್.ಗಾಂಧಿ ಸೇರಿದಂತೆ ಇತರ ಗಣ್ಯರೂ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಇದನ್ನೂ ಓದಿ: EDಯಿಂದ ತಮಿಳುನಾಡು ಅಬಕಾರಿ ಸಚಿವ ಅರೆಸ್ಟ್ – ಕಾರಿನಲ್ಲಿ ಭಾರೀ ಹೈಡ್ರಾಮಾ, ಆಸ್ಪತ್ರೆಗೆ ಶಿಫ್ಟ್

    ಇದೇ ವೇಳೆ ಆಸ್ಪತ್ರೆ ಮುಂಭಾಗ ನೆರೆದಿದ್ದ ಕಾರ್ಯಕರ್ತರು, ತನಿಖಾ ಸಂಸ್ಥೆಯೊಂದಿಗೆ ಸಹಕರಿಸಿದರೂ ಸೆಂಥಿಲ್ ಬಾಲಾಜಿ ಅವರ ಮೇಲೆ ಒತ್ತಡ ಹೇರಲಾಗಿತ್ತು. ಇದೇ ಅವರ ಎದೆ ನೋವಿಗೆ ಕಾರಣ ಎಂದು ರಾಜ್ಯಪಾಲ ಆರ್.ಎನ್ ರವಿ ವಿರುದ್ಧ ದೂರಿದರು. ಸೆಂಥಿಲ್ ಬಾಲಾಜಿ ವಕೀಲರು ಮತ್ತು ಡಿಎಂಕೆ ನಾಯಕ ಎನ್.ಆರ್ ಎಲಾಂಗೋ ಸಹ ಇದು ಸಂಪೂರ್ಣ ಅಸಾಂವಿಧಾನಿಕ ಹಾಗೂ ಕಾನೂನು ಬಾಹಿರವಾದ ಬಂಧನ. ನಾವು ಕಾನೂನಿನ ಮೂಲಕವೇ ಹೋರಾಡುತ್ತೇವೆ ಎಂದು ಗುಡುದರು.

    ಮತ್ತೋರ್ವ ಸಚಿವ ಉದಯನಿಧಿ ಸ್ಟಾಲಿನ್, ಏನೇ ಬಂದರೂ ನಾವು ಕಾನೂನಾತ್ಮಕವಾಗಿ ಎದುರಿಸುತ್ತೇವೆ. ಬಿಜೆಪಿ (BJP) ನೇತೃತ್ವದ ಕೇಂದ್ರ ಸರ್ಕಾರದ ಬೆದರಿಕೆ ರಾಜಕೀಯಕ್ಕೆ ನಾವು ಹೆದರುವುದಿಲ್ಲ ಎಂದು ತಿರುಗೇಟು ನೀಡಿದರು. ಈ ಬೆನ್ನಲ್ಲೇ ಸಿಎಂ ತಮ್ಮ ನಿವಾಸದಲ್ಲಿ ಹಿರಿಯ ಸಚಿವರು ಮತ್ತು ಕಾನೂನು ತಂಡದೊಂದಿಗೆ ಸಮಾಲೋಚನೆ ನಡೆಸಿದರು. ಇದನ್ನೂ ಓದಿ: ಹಿಮಾಚಲದಲ್ಲಿ ಆರ್ಥಿಕ ಸಂಕಷ್ಟ – 15 ಸಾವಿರ ಮಂದಿಗೆ ಇನ್ನೂ ಪಾವತಿಯಾಗಿಲ್ಲ ಸಂಬಳ

    ತನಿಖಾ ಸಂಸ್ಥೆ ನಡೆಸಿದ ದಾಳಿ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಮತ್ತು ಹಲವಾರು ವಿರೋಧ ಪಕ್ಷಗಳಿಂದ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕೇಂದ್ರದ ತ ನಿಖಾ ಏಜೆನ್ಸಿಗಳನ್ನ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಈ ದಾಳಿಗಳು ಕೇವಲ ರಾಜಕೀಯ ಪ್ರೇರಿತವಲ್ಲ, ಸೇಡಿನ ರಾಜಕಾರಣದ ಕ್ರಮ. ಇದರಿಂದ ಒಕ್ಕೂಟ ವ್ಯವಸ್ಥೆಗೆ ಅಪಮಾನವಾಗಿದೆ. ಪಶ್ಚಿಮ ಬಂಗಾಳ, ದೆಹಲಿಯಂತ ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳ ವಿರುದ್ಧ ಕೇಂದ್ರ ಸರ್ಕಾರ ದಾಳಿ ಮಾಡುತ್ತಿದೆ. ಮೋದಿ (Narendra Modi) ಸರ್ಕಾರವನ್ನು ವಿರೋಧಿಸುವವರ ವಿರುದ್ಧ ಸೇಡು ತೀರಿಸಿಕೊಳ್ಳುತ್ತಿದೆ ಎಂದು ವಿಪಕ್ಷ ನಾಯಕರು ಬಿಜೆಪಿ ವಿರುದ್ಧ ಮುಗಿಬಿದ್ದಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಹ ಸೆಂಥಿಲ್‌ ಅವರನ್ನ ಇಡಿ ಬಂಧಿಸಿರುವುದನ್ನ ಖಂಡಿಸಿದ್ದಾರೆ.

  • EDಯಿಂದ ತಮಿಳುನಾಡು ಅಬಕಾರಿ ಸಚಿವ ಅರೆಸ್ಟ್ – ಕಾರಿನಲ್ಲಿ ಭಾರೀ ಹೈಡ್ರಾಮಾ, ಆಸ್ಪತ್ರೆಗೆ ಶಿಫ್ಟ್

    EDಯಿಂದ ತಮಿಳುನಾಡು ಅಬಕಾರಿ ಸಚಿವ ಅರೆಸ್ಟ್ – ಕಾರಿನಲ್ಲಿ ಭಾರೀ ಹೈಡ್ರಾಮಾ, ಆಸ್ಪತ್ರೆಗೆ ಶಿಫ್ಟ್

    ಚೆನ್ನೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ತಮಿಳುನಾಡು ವಿದ್ಯುತ್ ಮತ್ತು ಅಬಕಾರಿ ಸಚಿವ ವಿ.ಸೆಂಥಿಲ್ ಬಾಲಾಜಿ (V Senthil Balaji) ಅವರನ್ನ ಬಂಧಿಸಿದೆ. ಸೆಂಥಿಲ್ ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಶೋಧಕಾರ್ಯ ನಡೆಸಿದ ನಂತರ ಬಂಧಿಸಲಾಗಿದೆ.

    ಇಡಿ ಸಚಿವರನ್ನ ಬಂಧಿಸುತ್ತಿದ್ದಂತೆ ಎದೆನೋವು ಎಂದು ಹೇಳಿ ಕಾರಿನಲ್ಲಿ ಕಣ್ಣೀರಿಟ್ಟಿದ್ದಾರೆ. ಭಾರೀ ಹೈಡ್ರಾಮಾದ ಬಳಿಕ ಬುಧವಾರ ಮುಂಜಾನೆ ಅವರನ್ನ ಚೆನ್ನೈನ ಒಮಂದೂರಾರ್ ಸರ್ಕಾರಿ ಆಸ್ಪತ್ರೆಗೆ (Omandurar Government Hospital) ದಾಖಲಿಸಲಾಗಿದೆ. ಇದನ್ನೂ ಓದಿ: ಕರಾವಳಿಯಲ್ಲಿ ಬಿಪರ್‌ಜಾಯ್‌ ಅಬ್ಬರ – ತೀರಕ್ಕೆ ಅಪ್ಪಳಿಸುತ್ತಿದೆ ರಕ್ಕಸ ಅಲೆಗಳು, ಆತಂಕದಲ್ಲಿ ನಿವಾಸಿಗಳು

    ಭಾರೀ ಹೈಡ್ರಾಮ: ಡಿಎಂಕೆ ನಾಯಕನನ್ನ ಆಸ್ಪತ್ರೆಗೆ ಕರೆತರುತ್ತಿದ್ದಂತೆ ಆಸ್ಪತ್ರೆ ಹೊರಗೂ ಜಮಾಯಿಸಿದ್ದ ಬೆಂಬಲಿಗರು ಭಾರೀ ಹೈಡ್ರಾಮಾ ಮಾಡಿದ್ದಾರೆ. ಇಡಿ ಕ್ರಮ ವಿರೋಧಿಸಿ ಸೆಂಥಿಲ್ ಅವರ ಬಿಡುಗಡೆಗೆ ಒತ್ತಾಯಿಸಿದ್ದಾರೆ. ಕಾರಿನಲ್ಲಿ ಮಲಗಿದ್ದಾಗಲೇ ಎದೆಯನ್ನು ಹಿಡಿದುಕೊಂಡು ನೋವು ಅಂತಾ ಕಣ್ಣೀರಿಟ್ಟಿದ್ದಾರೆ. ಈ ಕುರಿತ ವೀಡಿಯೋ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ.

    ಸದ್ಯ ಚೆನ್ನೈನ ಓಮಂದೂರರ್ ಸರ್ಕಾರಿ ಆಸ್ಪತ್ರೆಯಲ್ಲಿ ಕ್ಷಿಪ್ರ ಕಾರ್ಯಾಚರಣೆ ಪಡೆ ನಿಯೋಜಿಸಲಾಗಿದ್ದು, ಸೆಂಥಿಲ್ ಬಾಲಾಜಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಮುಸ್ಲಿಂ ಹುಡುಗಿಯನ್ನು ಪ್ರೀತಿಸಿದ್ದಕ್ಕೆ 7 ತುಂಡು – ಮೃತದೇಹ ಚರಂಡಿಯಲ್ಲಿ ಪತ್ತೆ