Tag: V.Somanna

  • ಸೋಮಣ್ಣ ವಿರುದ್ಧ ಸುದ್ದಿಗೋಷ್ಠಿ ನಡೆಸಿದ್ದ ಬಿಜೆಪಿ ವಕ್ತಾರನಿಗೆ ನೋಟಿಸ್

    ಸೋಮಣ್ಣ ವಿರುದ್ಧ ಸುದ್ದಿಗೋಷ್ಠಿ ನಡೆಸಿದ್ದ ಬಿಜೆಪಿ ವಕ್ತಾರನಿಗೆ ನೋಟಿಸ್

    ಚಾಮರಾಜನಗರ: ಸಚಿವ ವಿ ಸೋಮಣ್ಣ (V Somanna) ವಿರುದ್ಧ ಸುದ್ದಿಗೋಷ್ಠಿ ನಡೆಸಿದ್ದ ಚಾಮರಾಜನಗರ (Chamarajanagar) ಜಿಲ್ಲಾ ಬಿಜೆಪಿ ವಕ್ತಾರನಿಗೆ (BJP Spokesperson) ನೋಟಿಸ್ ನೀಡಲಾಗಿದೆ.

    ಚಾಮರಾಜನಗರ ಜಿಲ್ಲಾ ಬಿಜೆಪಿ ವಕ್ತಾರ ಅಯ್ಯನಪುರ ಶಿವಕುಮಾರ್‌ಗೆ ನೋಟೀಸ್ ಜಾರಿ ಮಾಡಲಾಗಿದೆ. ಸಚಿವ ಸೋಮಣ್ಣ ಅವರಿಗೆ ಮೈಸೂರು ವಿಭಾಗದ ಉಸ್ತುವಾರಿ ಹಾಗೂ ಚಾಮರಾಜನಗರ ಕ್ಷೇತ್ರದಲ್ಲಿ ಟಿಕೆಟ್ ನೀಡುವುದು ಬೇಡ ಎಂದು ಬಿಜೆಪಿ ವಕ್ತಾರ ಶಿವಕುಮಾರ್ ಒತ್ತಾಯ ಮಾಡಿದ್ದರು. ಇದನ್ನೂ ಓದಿ: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಮುನ್ಸೂಚನೆ ನೀಡಿದ ಬೊಂಬೆ ಭವಿಷ್ಯ

    ಚಾಮರಾಜನಗರದಲ್ಲಿ ಟಿಕೆಟ್ ನೀಡಿದರೆ ಗೋ ಬ್ಯಾಕ್ ಚಳವಳಿ ಮಾಡುತ್ತೇವೆ. ಸೋಮಣ್ಣ ಕಳೆದ ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸಹಕರಿಸಿದ್ದಾರೆ. ಪಕ್ಷ ಸಂಘಟನೆಯಲ್ಲಿ ವಿಫಲ ಎಂಬಿತ್ಯಾದಿಯಾಗಿ ಶಿವಕುಮಾರ್ ಬಹಿರಂಗವಾಗಿ ಆರೋಪ ಮಾಡಿದ್ದರು.

    ಇದು ಜಿಲ್ಲಾ ಬಿಜೆಪಿಯ ನಿಲುವಲ್ಲ, ಅವರ ವೈಯಕ್ತಿಕ ಅಭಿಪ್ರಾಯ. ಅವರ ಹೇಳಿಕೆಗೂ ಜಿಲ್ಲಾ ಬಿಜೆಪಿಗೂ ಸಂಬಂಧವಿಲ್ಲ. ಶಿವಕುಮಾರ್ ಹೇಳಿಕೆಗಳನ್ನು ವರಿಷ್ಠರ ಗಮನಕ್ಕೆ ತರಲಾಗಿದೆ. ಶಿವಕುಮಾರ್‌ಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಲಾಗಿದೆ. ಅವರ ವಿರುದ್ಧ ಪಕ್ಷದ ಚೌಕಟ್ಟಿನಲ್ಲಿ ಶಿಸ್ತು ಕ್ರಮ ಜರುಗಿಸಲಾಗುವುದೆಂದು ಬಿಜೆಪಿ ಜಿಲ್ಲಾಧ್ಯಕ್ಷ ನಾರಾಯಣ ಪ್ರಸಾದ್ ತಿಳಿಸಿದರು. ಇದನ್ನೂ ಓದಿ: ಖರ್ಗೆ ತವರು ಜಿಲ್ಲೆಯಲ್ಲಿ ಆಪರೇಷನ್ ಹಸ್ತ- ಹಾಲಿ ಬಿಜೆಪಿ ಶಾಸಕರಿಗೆ ಗಾಳ

  • 2 ತಿಂಗಳಿಂದ ನನ್ನನ್ನು ಉಜ್ಜುತ್ತಾ ಇದ್ದೀರಿ, ಎಷ್ಟು ಉಜ್ಜಬೇಕೋ ಉಜ್ಜಿಕೊಳ್ಳಿ: ಸೋಮಣ್ಣ

    2 ತಿಂಗಳಿಂದ ನನ್ನನ್ನು ಉಜ್ಜುತ್ತಾ ಇದ್ದೀರಿ, ಎಷ್ಟು ಉಜ್ಜಬೇಕೋ ಉಜ್ಜಿಕೊಳ್ಳಿ: ಸೋಮಣ್ಣ

    ಚಾಮರಾಜನಗರ: ಎರಡು ತಿಂಗಳಿಂದ ನನ್ನನ್ನು ಮಾಧ್ಯಮದವರು ಉಜ್ಜುತ್ತಾ ಇದ್ದೀರಿ, ಎಷ್ಟು ಉಜ್ಜಬೇಕೋ ಉಜ್ಜಿಕೊಳ್ಳಿ ಎಂದು ಸಚಿವ ವಿ.ಸೋಮಣ್ಣ (V. Somanna) ವಾಗ್ದಾಳಿ ನಡೆಸಿದರು.

    ಕೊಳ್ಳೇಗಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕಾಂಗ್ರೆಸ್ ಸೇರ್ಪಡೆ ವಿಚಾರ ಮುಗಿದ ಅಧ್ಯಾಯ. ಕಾಂಗ್ರೆಸ್ (Congress) ಸೇರ್ಪಡೆ ನನ್ನ ತಲೆಯಲ್ಲೇ ಇಲ್ಲ. ನಾನೊಬ್ಬ ಡೈರೆಕ್ಟ್ ರಾಜಕಾರಣಿ. ಏನಿದ್ರು ನೇರವಾಗಿ ಹೇಳ್ತೀನಿ ಎಂದರು. ಇದನ್ನೂ ಓದಿ: ನನಗೆ ಉರಿಗೌಡ- ನಂಜೇಗೌಡ ಗೊತ್ತಿಲ್ಲ, ದೇವೇಗೌಡ್ರು ಮಾತ್ರ ಗೊತ್ತು: ಸುಧಾಕರ್

    ಕ್ಷುಲ್ಲಕ ವಿಚಾರಗಳಿಗೆ ಪ್ರತಿಕ್ರಿಯಿಸುವುದಿಲ್ಲ. ಚಾಮರಾಜನಗರ (Chamarajanagar) ಜಿಲ್ಲೆಯ ಸ್ಪರ್ಧಿಸುವ ಬಗ್ಗೆ ಯೋಚನೆ ಮಾಡಿಲ್ಲ. ಚಾಮರಾಜನಗರ ಜಿಲ್ಲೆ ನನ್ನ ಪ್ರೀತಿಯ ಜಿಲ್ಲೆ. ಇಲ್ಲಿ ಸ್ಪರ್ಧಿಸುವ ಬಗ್ಗೆ ಯೋಚನೆ ಮಾಡಿಲ್ಲ. ಪಕ್ಷದ ತೀರ್ಮಾನವೇ ಅಂತಿಮ ಎಂದು ಹೇಳಿದರು.

     

  • ಸಿದ್ದರಾಮಯ್ಯ ರಾಜ್ಯದ ಯಾವ ಕ್ಷೇತ್ರದಲ್ಲೂ ಗೆಲ್ಲುವುದಿಲ್ಲ: ಆರ್.ಅಶೋಕ್

    ಸಿದ್ದರಾಮಯ್ಯ ರಾಜ್ಯದ ಯಾವ ಕ್ಷೇತ್ರದಲ್ಲೂ ಗೆಲ್ಲುವುದಿಲ್ಲ: ಆರ್.ಅಶೋಕ್

    ಬಳ್ಳಾರಿ: ಸಿದ್ದರಾಮಯ್ಯ (Siddaramaiah) ರಾಜ್ಯದ ಯಾವ ಕ್ಷೇತ್ರದಲ್ಲೂ ಗೆಲ್ಲುವುದಿಲ್ಲ. ಅವರು ಪಾಕಿಸ್ತಾನ (Pakistan) ಅಥವಾ ಅಫ್ಘಾನಿಸ್ತಾನ (Afghanistan), ಬಾಂಗ್ಲದೇಶಕ್ಕೆ (Bangladesh) ಹೋದರೆ ಒಳ್ಳೆಯದು ಎಂದು ಪದೇ ಪದೇ ಕ್ಷೇತ್ರ ಹುಡುಕಾಟ ನಡೆಸುತ್ತಿರುವ ಕುರಿತು ಸಚಿವ ಆರ್.ಅಶೋಕ್ (R.Ashok) ಸಿದ್ದರಾಮಯ್ಯನವರ ಕಾಲೆಳೆದರು.

    ಬಳ್ಳಾರಿಯಲ್ಲಿ (Ballari) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 224 ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಮಾಡಲು ಚಾನ್ಸೇ ಇಲ್ಲ. ಯಾಕೆಂದರೆ ಅವರು ಎಲ್ಲಿ ಹೋದರೂ ಸೋಲುತ್ತಾರೆ, ಯಾವುದೇ ಒಂದು ಕ್ಷೇತ್ರದಲ್ಲಿ ನಿಂತಿಲ್ಲ. ಸಿದ್ದರಾಮಯ್ಯ ಈಗಾಗಲೇ ವರುಣ ಹಾಗೂ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತಿದ್ದಾರೆ. ಈಗ ಬಾದಾಮಿ (Badami) ಬಿಟ್ಟು ಓಡಿ ಬಂದಿದ್ದಾರೆ. ಅವರು ಕೋಲಾರದಲ್ಲಿ (Kolar) ಗೆಲ್ಲುವುದೂ ಕಷ್ಟವಿದೆ. ಆದ್ದರಿಂದ ಕರ್ನಾಟಕದ 224 ಕ್ಷೇತ್ರಗಳು ಸಿದ್ದರಾಮಯ್ಯನವರಿಗೆ ಒಳ್ಳೆಯದಲ್ಲ. ಸಿದ್ದರಾಮಯ್ಯ ಬೇರೆ ರಾಜ್ಯ ಅಥವಾ ಬೇರೆ ದೇಶವನ್ನು ನೋಡಿಕೊಂಡರೆ ಒಳ್ಳೆಯದು. ಇಲ್ಲಿ ಅವರನ್ನು ಎಲ್ಲಿಯೂ ನಿಲ್ಲಲು ಬಿಡುವುದಿಲ್ಲ. ಅವರ ಪಕ್ಷದವರೇ ಅವರಿಗೆ ವಿಲನ್. ಡಿ.ಕೆ.ಶಿವಕುಮಾರ್ (D.K.Shivakumar) ಅವರನ್ನು ಸೋಲಿಸುತ್ತಾರೆ ಎಂದು ಟೀಕಿಸಿದರು. ಇದನ್ನೂ ಓದಿ: ಸಿಸ್ಟರ್ ಸಿಟಿ ಹಗರಣ – ನಿತ್ಯಾನಂದನ ನಕಲಿ ದೇಶದೊಂದಿಗೆ ಅಮೆರಿಕದ 30 ನಗರಗಳು ಒಪ್ಪಂದ! 

    ರಾಜ್ಯದಲ್ಲಿ ವಿಜಯ ಸಂಕಲ್ಪ ಯಾತ್ರೆ (Vijaya Sankalpa Yatra) ಮೂಲಕ ಜನ ಜಾಗೃತಿಯನ್ನು ಮಾಡುತ್ತಿದ್ದೇವೆ. 224 ಕ್ಷೇತ್ರಗಳಲ್ಲಿ ರಿಚ್ ಆಗಿರುವ ಪಕ್ಷ ಯಾವುದಾದರೂ ಇದ್ದರೆ ಅದು ಬಿಜೆಪಿ (BJP) ಮಾತ್ರ. ಯಾಕೆಂದರೆ ನಮ್ಮಲ್ಲಿ ಬಹಳಷ್ಟು ಜನ ರಾಜ್ಯ ಹಾಗೂ ಕೇಂದ್ರ ನಾಯಕರಿದ್ದಾರೆ. ಆದರೆ ಕಾಂಗ್ರೆಸ್‌ಗೆ (Congress) ಕೇವಲ ಇಬ್ಬರು ಮಾತ್ರ ನಾಯಕರು. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಬಿಟ್ಟರೆ ಕಾಂಗ್ರೆಸ್ ಪಕ್ಷಕ್ಕೆ ಮೂರನೇ ಲೀಡರಿಲ್ಲ. ಅವರು 224 ಕ್ಷೇತ್ರಕ್ಕೆ ಹೋಗಲಿಲ್ಲ. ಟಿಕೆಟ್ ಹಂಚಿಕೆಯಲ್ಲಿ ನಿರತರಾಗಿದ್ದಾರೆ. ಕಾಂಗ್ರೆಸ್ ಪಕ್ಷದವರು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಮತ್ತೊಮ್ಮೆ ಅಧಿಕಾರದ ರುಚಿ ನೋಡಬೇಕೆಂದು ಕನಸು ಕಾಣುತ್ತಿದ್ದಾರೆ. 50 ವರ್ಷ ಆಡಳಿತ ಮಾಡಿದ್ದಾರೆ. ಆದ್ದರಿಂದ ಜನ ಇವರ 50 ವರ್ಷ ನೋಡಿ ಬದಲಾವಣೆ ಮಾಡುತ್ತಾರೆ ಎಂದರು. ಇದನ್ನೂ ಓದಿ: ಜೆಡಿಎಸ್ ಒಂದು ಪುಟ್ಗೋಸಿ ಪಕ್ಷ – ಮಾಜಿ ಸಚಿವ ನರೇಂದ್ರ ಸ್ವಾಮಿ ಅವಾಜ್ 

    ಸೋಮಣ್ಣನವರ (V.Somanna) ಸಿಟ್ಟು 100 ಪರ್ಸೆಂಟ್ ಶಮನವಾಗಿದೆ. ಯಾವುದೇ ಸಂದರ್ಭದಲ್ಲೂ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ. ಅದೇ ರೀತಿ ಕೂಡ್ಲಿಗಿ ಶಾಸಕ ಗೋಪಾಲಕೃಷ್ಣ (N.Y.Gopalakrishna) ಅವರು ಕೂಡಾ ಪಕ್ಷ ಬಿಡುವುದಿಲ್ಲ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: Bengaluru-Mysuru Expressway ನಲ್ಲಿ ಬೇಸಿಗೆ ಮಳೆಗೇ ಅವಾಂತರ- ವಾಹನ ಸವಾರರ ಪರದಾಟ

  • ವಿಜಯೇಂದ್ರ ಏನಾದ್ರೂ ಮಾತಾಡಲಿ, ಅವರಿಗೆ ದೇವರು ಒಳ್ಳೆಯದನ್ನೇ ಮಾಡಲಿ: ಸೋಮಣ್ಣ

    ವಿಜಯೇಂದ್ರ ಏನಾದ್ರೂ ಮಾತಾಡಲಿ, ಅವರಿಗೆ ದೇವರು ಒಳ್ಳೆಯದನ್ನೇ ಮಾಡಲಿ: ಸೋಮಣ್ಣ

    ಬೆಂಗಳೂರು: ಬಿ.ವೈ ವಿಜಯೇಂದ್ರ (B.Y.Vijayendra) ಏನಾದರೂ ಮಾತಾಡಲಿ ಅವರಿಗೆ ದೇವರು ಒಳ್ಳೆಯದನ್ನೇ ಮಾಡಲಿ ಎಂದು ಸಚಿವ ಸೋಮಣ್ಣ (V.Somanna)ಹೇಳಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ (B.S.Yediyurappa) ನಮ್ಮೆಲ್ಲರಿಗೂ ನಾಯಕರು. ಕೇವಲ ವಿಜಯೇಂದ್ರ ಒಬ್ಬರಿಗೆ ಅವರು ನಾಯಕರಲ್ಲ. ವಿಜಯೇಂದ್ರ ಏನು ಹೇಳಿದ್ದಾರೆ ಎಂಬುದು ನನ್ನ ಗಮನಕ್ಕೆ ಬಂದಿಲ್ಲ. ನಾನು ಕಾಂಗ್ರೆಸ್‍ಗೆ (Congress) ಹೋಗುತ್ತೇನೆ ಎಂದು ಎಲ್ಲೂ ಹೇಳಿಲ್ಲ. ಪಕ್ಷ ತೊರೆಯುವ ಅವಶ್ಯಕತೆ ನನಗಿಲ್ಲ ಎಂದು ಅವರು ತಿಳಿಸಿದ್ದಾರೆ.

    ಯಡಿಯೂರಪ್ಪರ ಹೋರಾಟ ಬೇರೆ. ನನ್ನ ಹೋರಾಟ ಬೇರೆ. ಆದರೆ ವಿಜಯೇಂದ್ರ ಅವರ ಬೆಳವಣಿಗೆಗೆ ಅವರು ಏನು ಮಾಡುತ್ತಾರೆ ಎಂಬುದನ್ನು ಹೇಳಿಕೊಂಡರೆ ಉತ್ತಮ. ನನಗೆ 72 ವರ್ಷ, ವಿಜಯೇಂದ್ರ ಅವರಿಗಿಂತ ದೊಡ್ಡ ಮಗ ಇದ್ದಾನೆ ಎಂದು ನಾನು ಹೇಳಿದ್ದೆ. ಯಡಿಯೂರಪ್ಪ ಹೆಸರು ಬಿಟ್ಟು ತಮ್ಮ ದೂರ ದೃಷ್ಟಿ ಏನು ಎಂದು ವಿಜಯೇಂದ್ರ ಬಹಿರಂಗಪಡಿಸಲಿ ಎಂದಿದ್ದಾರೆ. ಇದನ್ನೂ ಓದಿ: ಡ್ರಮ್‍ನಲ್ಲಿ ಮಹಿಳಾ ಶವ ಪತ್ತೆ ಪ್ರಕರಣ- ಮೂವರ ಬಂಧನ

    ಪಕ್ಷದ ವರಿಷ್ಠರೊಂದಿಗೆ ಮಾತಾಡಿದ್ದೇನೆ. ಎಲ್ಲಾ ಗೊಂದಲಗಳು ಬಗೆಹರಿದಿವೆ. ನಮ್ಮೊಳಗಿನ ಆಂತರಿಕ ಕಲಹಗಳಿಗೆ ತೆರೆ ಎಳೆದು ಪಕ್ಷ ಕಟ್ಟುವಂತೆ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪತನದ ಭೀತಿಯಲ್ಲಿ ಮತ್ತೊಂದು ಬ್ಯಾಂಕ್ – ಕ್ರೆಡಿಟ್ ಸ್ಯೂಸಿ ಸಹಾಯಕ್ಕೆ ನಿಂತ ಸ್ವಿಸ್ ಬ್ಯಾಂಕ್

  • ಸೋಮಣ್ಣ ನಮ್ಮ ಕುಟುಂಬಕ್ಕೆ ಹಿರಿಯ ಸೋದರರಿದ್ದಂತೆ: ಡಿ.ಕೆ ಸುರೇಶ್

    ಸೋಮಣ್ಣ ನಮ್ಮ ಕುಟುಂಬಕ್ಕೆ ಹಿರಿಯ ಸೋದರರಿದ್ದಂತೆ: ಡಿ.ಕೆ ಸುರೇಶ್

    ಬೆಂಗಳೂರು: ವಿ.ಸೋಮಣ್ಣ (V Somanna) ಬಿಜೆಪಿಯಲ್ಲೆ ಉಳಿಯುವುದಾಗಿ ಹೇಳಿದ್ದಾರೆ. ವಿ.ಸೋಮಣ್ಣ ನಮ್ಮ ಕುಟುಂಬಕ್ಕೆ ಹಿರಿಯ ಸೋದರರಿದ್ದಂತೆ. ಅವರ ಬಗ್ಗೆ ಹೆಚ್ಚು ಮಾತನಾಡೋಕೆ ಹೋಗಲ್ಲ ಎಂದು ಸಂಸದ ಡಿಕೆ ಸುರೇಶ್ (D.K Suresh) ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಚುನಾವಣೆ ಪ್ರಯುಕ್ತ ಬೇರೆ ಬೇರೆ ಕಾರ್ಯದಲ್ಲಿ ಬ್ಯುಸಿ ಇದ್ದೇನೆ. ರಾಮನಗರ ಚುನಾವಣೆ (Ramanagar Election) ಸ್ಪರ್ಧೆ ವಿಚಾರದಲ್ಲಿ ರಾಜ್ಯ ನಾಯಕರಾಗಲಿ ರಾಷ್ಟ್ರ ನಾಯಕರಾಗಲಿ ನನ್ನ ಬಳಿ ಮಾತನಾಡಿಲ್ಲ. ನಾನು ಲೋಕಸಭಾ ಸದಸ್ಯನಾಗಿರುವುದರಿಂದ ನನ್ನ ಕ್ಷೇತ್ರ ವ್ಯಾಪ್ತಿಯ ವಿಧಾನಸಭಾ ಚುನಾವಣಾ ಕ್ಷೇತ್ರಗಳಲ್ಲಿ ನಾನೇ ಅಭ್ಯರ್ಥಿ ಅಂತ ಮತ ಕೇಳುತ್ತಿದ್ದೇನೆ ಎಂದರು.

    ನನಗೂ ಬೇರೆ ಬೇರೆ ಕ್ಷೇತ್ರಗಳಿಂದ ಚುನಾವಣೆ ಸ್ಪರ್ಧೆಗೆ ಆಹ್ವಾನ ನೀಡುತ್ತಿದ್ದಾರೆ. ಚನ್ನಪಟ್ಟಣ, ರಾಜರಾಜೇಶ್ವರಿ ನಗರ ಸೇರಿದಂತೆ ನನ್ನ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 6 ಕ್ಷೇತ್ರಗಳು ಹೊರಗಿನ 4 ಕ್ಷೇತ್ರಗಳು ಸೇರಿದಂತೆ ಒಟ್ಟು 10 ಕ್ಷೇತ್ರಗಳಿಂದ ನನ್ನ ಸ್ಪರ್ಧೆಗೆ ಆಹ್ವಾನ ಇದೆ. ಆದರೆ ರಾಜ್ಯ ರಾಜಕಾರಣ ನನಗೆ ಆಸಕ್ತಿ ಇಲ್ಲ. ನಾನು ಚುನಾವಣೆಗೆ ಸ್ಪರ್ಧೆ ಮಾಡುವ ಆಸಕ್ತಿ ಹೊಂದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಆಣೆ-ಪ್ರಮಾಣದ ಪಾಲಿಟಿಕ್ಸ್ ; ಕರ್ಪೂರ ಹಚ್ಚಿ ಪ್ರಮಾಣ ಮಾಡಿದ ಮಾಗಡಿ ಶಾಸಕರ ಪತ್ನಿ

    ರಾಮನಗರದಲ್ಲಿ ನಮ್ಮ ಅಭ್ಯರ್ಥಿ ಈಗಾಗಲೇ ಪ್ರಚಾರ ಆರಂಭಿಸಿದ್ದಾರೆ. ನಾಯಕರು ಹೇಳಿದ ಕೂಡಲೆ ಸ್ಪರ್ಧೆ ಮಾಡುವುದಲ್ಲ ಸ್ಥಳೀಯವಾಗಿ ಕಾರ್ಯಕರ್ತರ ಜೊತೆ ಷರ್ಚೆ ಮಾಡಬೇಕು ಅವರ ಜೊತೆ ಮಾತನಾಡಿ ತೀರ್ಮಾನ ಮಾಡಬೇಕಾಗುತ್ತದೆ. ನಾನು ಏಕೈಕ ಸಂಸದ ಇದ್ದೀನಿ. ಕಳೆದ 20 ವರ್ಷಗಳಲ್ಲಿ ಉಪ ಚುನಾವಣೆಗಳನ್ನು ಮಾಡಿ ರೋಸಿ ಹೋಗಿದ್ದೇನೆ. ಎಲ್ಲಾ ಉಪ ಚುನಾವಣೆಗಳನ್ನು ನಾವು ಮಾಡಿದ್ದೇವೆ ಈಗ ಉಪ ಚುನಾವಣೆ ಬಗ್ಗೆ ಆಸಕ್ತಿ ಇಲ್ಲ ಎಂದು ತಿಳಿಸಿದರು. ಇದನ್ನೂ ಓದಿ: 10 ಕ್ಷೇತ್ರಗಳಿಂದ ನನಗೆ ಆಹ್ವಾನ, ರಾಜ್ಯ ರಾಜಕಾರಣದಲ್ಲಿ ಆಸಕ್ತಿ ಇಲ್ಲ: ಡಿ.ಕೆ.ಸುರೇಶ್

    ಉರಿಗೌಡ ನಂಜೇಗೌಡ ಅಶ್ವಥ್ ನಾರಾಯಣ್‍ಗೆ ಅಸ್ವಸ್ಥರಾದಾಗ ಸಿಕ್ಕಿರಬೇಕು ಅನ್ನಿಸುತ್ತೆ. ಉರಿಗೌಡ, ನಂಜೇಗೌಡರ ವಿಚಾರದಲ್ಲಿ ಒಕ್ಕಲಿಗರು ಜಾಗೃತರಾಗಬೇಕು ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಈ ಚುನಾವಣಾ ಸಂದರ್ಭದಲ್ಲಿ ನಾನು ಯಾವುದೆ ಪ್ರತಿಕ್ರಿಯೆ ನೀಡಲ್ಲ ಎಂದರು.

  • ದಶಪಥ ರಸ್ತೆ ಸರಿಯಿಲ್ಲ, ನಾನು ಬರೋವಾಗ ಶೌಚಾಲಯಕ್ಕೆ ನಿಲ್ಲಿಸಲೂ ಅವಕಾಶ ಇರ್ಲಿಲ್ಲ – ಡಿಕೆಶಿ

    ದಶಪಥ ರಸ್ತೆ ಸರಿಯಿಲ್ಲ, ನಾನು ಬರೋವಾಗ ಶೌಚಾಲಯಕ್ಕೆ ನಿಲ್ಲಿಸಲೂ ಅವಕಾಶ ಇರ್ಲಿಲ್ಲ – ಡಿಕೆಶಿ

    ಬೆಂಗಳೂರು: ದಶಪಥ ರಸ್ತೆಯಲ್ಲಿ (Bengaluru Mysuru Expressway) ಸ್ಥಳೀಯರು ಓಡಾಡೋಕೆ ಸರ್ವೀಸ್ ರಸ್ತೆ ಇರಬೇಕು. ಆದ್ರೆ ಅಲ್ಲಿ ಸರ್ವೀಸ್ ರಸ್ತೆಯೇ ಇಲ್ಲ. ನಾನೇ ಆ ರಸ್ತೆಯಲ್ಲಿ ಬರೋವಾಗ ಶೌಚಾಲಯಕ್ಕೆ ಹೋಗ್ಬೇಕು ಅಂದ್ರೆ, ಅವಕಾಶ ಇರ್ಲಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ವ್ಯಂಗ್ಯವಾಡಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಸ್ತೆ ಉದ್ಘಾಟನೆಯೇ ಸರಿಯಿಲ್ಲ. ರಸ್ತೆಯನ್ನ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ನಿಯಮದ ಅನ್ವಯ ಮಾಡಿಲ್ಲ. ರಸ್ತೆ ಗುತ್ತಿಗೆದಾರನೂ ಸರಿಯಾಗಿ ಕೆಲಸ ಮಾಡಿಲ್ಲ. ಈಗಾಗಲೇ 80ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಎಲ್ಲ ಕಡೆ ಅಂಗಡಿಗಳು ಮುಚ್ಚಿಹೋಗಿವೆ. ಸ್ಥಳೀಯರು ಓಡಾಡೋಕೆ ಸರ್ವೀಸ್ ರಸ್ತೆಯೇ ಇಲ್ಲ. ನಾನೇ ಮೊನ್ನೆ ಬರೋವಾಗ ಶೌಚಾಲಯಕ್ಕೆ ನಿಲ್ಲಿಸಲು ಅವಕಾಶ ಇರಲಿಲ್ಲ ಎಂದು ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: ಮಾರ್ಚ್ 14ರಿಂದಲೇ ದಶಪಥ ರಸ್ತೆಯಲ್ಲಿ ಟೋಲ್ ಸಂಗ್ರಹ ಶುರು

    ಸಚಿವ ವಿ. ಸೋಮಣ್ಣ (V Somanna) ಮತ್ತು ಡಿ.ಕೆ ಶಿವಕುಮಾರ್ ವಿಮಾನದಲ್ಲಿ ಒಟ್ಟಿಗೆ ಕುಳಿತಿದ್ದ ಫೋಟೋ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಹಳಷ್ಟು ವಿಚಾರದಲ್ಲಿ ನಾವಿಬ್ಬರೂ ಒಟ್ಟಿಗೆ ಕೆಲಸ ಮಾಡಿದ್ದೇವೆ. ಸೋಮಣ್ಣ ನಮ್ಮ ತಾಲೂಕಿನವರು. ನಾವು ಅವರಿಗೆ ಗೌರವ ಕೊಡ್ತೀವಿ. ರಾಜಕಾರಣ ಬೇರೆ, ಬಾಂಧವ್ಯ ಬೇರೆ. ಅವರು ಕಾಂಗ್ರೆಸ್‌ಗೆ ಬರ್ತೀನಿ ಅಂತಾ ಹೇಳಿಲ್ಲ, ನಾನೂ ಕರೆದಿಲ್ಲ. ಅಧಿವೇಶನ ಮುಗಿಸಿಕೊಂಡು ಬೆಳಗಾವಿಯಿಂದ ವಿಮಾನದಲ್ಲಿ ಬರ್ತಾ ಇದ್ವಿ ಅಷ್ಟೇ. ಅದರಲ್ಲಿ ಏನಿದೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಭಗವಾನ್ ಶ್ರೀಕೃಷ್ಣನನ್ನೇ ವರಿಸಿದ ಎಲ್‍ಎಲ್‍ಬಿ ಪದವೀಧರೆ!