Tag: V.Somanna

  • ಸೋಮಣ್ಣನ ವಿರುದ್ಧ ಪೊಲೀಸರಿಗೆ ದೂರು ಕೊಡುವಂತೆ ವಿವಿಧ ಸಂಘಟನೆಗಳಿಂದ ಬೆದರಿಕೆ- ಮಹಿಳೆ ಆರೋಪ

    ಸೋಮಣ್ಣನ ವಿರುದ್ಧ ಪೊಲೀಸರಿಗೆ ದೂರು ಕೊಡುವಂತೆ ವಿವಿಧ ಸಂಘಟನೆಗಳಿಂದ ಬೆದರಿಕೆ- ಮಹಿಳೆ ಆರೋಪ

    ಚಾಮರಾಜನಗರ: ಸಚಿವ ವಿ. ಸೋಮಣ್ಣನ (V Somanna) ವಿರುದ್ಧ ಪೊಲೀಸರಿಗೆ (Police) ದೂರು ಕೊಡುವಂತೆ ವಿವಿಧ ಸಂಘಟನೆಗಳಿಂದ ಕೊಲೆ ಬೆದರಿಕೆ ಬರುತ್ತಿದೆ ಎಂದು ಮಹಿಳೆ (Woman) ಆರೋಪಿಸಿದ್ದಾರೆ.

    ಎರಡು ದಿನಗಳ ಹಿಂದೆ ವಿ.ಸೋಮಣ್ಣ ಕಾರ್ಯಕ್ರಮವೊಂದರಲ್ಲಿ ಕೆಂಪಮ್ಮ ಎಂಬ ಮಹಿಳೆಗೆ ಕಪಾಳಮೋಕ್ಷ ಮಾಡಿದ್ದಳು. ಅದಾದ ಬಳಿಕ ಕೆಂಪಮ್ಮ ಮಾತನಾಡಿ, ಸಚಿವರು ನನಗೆ ಹೊಡೆದಿಲ್ಲ. ಅವರ ಮೇಲೆ ತಪ್ಪು ಅಪವಾದ ಹೊರಿಸಲಾಗುತ್ತಿದೆ ಎಂದು ಹೇಳಿದ್ದರು. ಆದರೆ ಇದೀಗ ವಿವಿಧ ಸಂಘಟನೆಗಳು ಸೋಮಣ್ಣ ವಿರುದ್ಧ ದೂರು ನೀಡುವಂತೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಕೆಂಪಮ್ಮ ತಿಳಿಸಿದ್ದಾರೆ.

    ಘಟನೆಗೆ ಸಂಬಂಧಿಸಿ ಗುಂಡ್ಲುಪೇಟೆ ತಾಲೂಕಿನ ರೈತ ಸಂಘ, ತಾಲೂಕು ನಾಯಕ ಹಿತರಕ್ಷಣಾ ಸಮಿತಿ, ತಾಲೂಕು ದಸಂಸ, ತಾಲೂಕು ಕೆಆರ್‌ಎಸ್ ಪಾರ್ಟಿ ವಿರುದ್ಧ ಗುಂಡ್ಲುಪೇಟೆ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ. ಇದನ್ನೂ ಓದಿ: ನಂಗೆ ಎರಡು ಮುಖವಿಲ್ಲ, ಇರೋದು ಒಂದೇ ಮುಖ: ಹೆಚ್‍ಡಿಕೆಗೆ ಸೋಮಣ್ಣ ಟಾಂಗ್

    ಕೆಂಪಮ್ಮ ದೂರಿನಲ್ಲಿ, ಸೋಮಣ್ಣ ಹೊಡೆದಿದ್ದಾರೆಂದು ಹೇಳಿಕೆ ನೀಡು. ಪೊಲೀಸರಿಗೆ ದೂರು ಕೊಡು. ಇಲ್ಲದಿದ್ದರೆ ವಾಸ ಮಾಡಲು ಬಿಡುವುದಿಲ್ಲ ಎಂದು ವಿವಿಧ ಸಂಘಟನೆಗಳಿಂದ ಪ್ರಾಣ ಬೆದರಿಕೆ ಇದೆ. ನನಗೆ ರಕ್ಷಣೆ ನೀಡಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಹಿಳೆಗೆ ಕಪಾಳಮೋಕ್ಷ ಪ್ರಕರಣ- ಸೋಮಣ್ಣ ಕ್ಷಮೆಯಾಚನೆ

    Live Tv
    [brid partner=56869869 player=32851 video=960834 autoplay=true]

  • ನಂಗೆ ಎರಡು ಮುಖವಿಲ್ಲ, ಇರೋದು ಒಂದೇ ಮುಖ: ಹೆಚ್‍ಡಿಕೆಗೆ ಸೋಮಣ್ಣ ಟಾಂಗ್

    ನಂಗೆ ಎರಡು ಮುಖವಿಲ್ಲ, ಇರೋದು ಒಂದೇ ಮುಖ: ಹೆಚ್‍ಡಿಕೆಗೆ ಸೋಮಣ್ಣ ಟಾಂಗ್

    ಚಾಮರಾಜನಗರ: ನನಗೆ ಎರಡು ಮುಖವಿಲ್ಲ, ಇರುವುದು ಒಂದೇ ಮುಖ ಎಂದು ಹೇಳುವ ಮೂಲಕ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ (H.D.Kumarswamy) ಅವರಿಗೆ ಸಚಿವ ವಿ.ಸೋಮಣ್ಣ (V.Somanna) ಟಾಂಗ್ ನೀಡಿದ್ದಾರೆ.

    KUMARASWAMY

    ಮಹಿಳೆಗೆ ಕಪಾಳಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮಣ್ಣಗೆ ಎರಡು ಮುಖವಿದೆ ಎಂದು ಕುಮಾರಸ್ವಾಮಿ ಅವರು ಟೀಕಿಸಿದ್ದರು. ಈ ವಿಚಾರವಾಗಿ ಕೊಳ್ಳೇಗಾಲದಲ್ಲಿ (Kollegala) ಮಾಧ್ಯಮದವರೊಂದಿಗೆ ಮಾತನಾಡಿದ ಸೋಮಣ್ಣ ಅವರು, ಅವರು ದೊಡ್ಡವರು, ನಾನು ಮತ್ತು ಅವರು ಒಟ್ಟಿಗೆ ಕೆಲಸ ಮಾಡಿದವರು. ನನಗೆ ಎರಡು ಮುಖ ಇಲ್ಲ, ನನಗಿರುವುದು ಒಂದೇ ಮುಖ ಎಂದು ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಕಪಾಳಮೋಕ್ಷ ಪ್ರಕರಣಕ್ಕೆ ಟ್ವಿಸ್ಟ್- ಸಚಿವರು ನಂಗೆ ಹೊಡೆದಿಲ್ಲವೆಂದು ಮಹಿಳೆ ಸ್ಪಷ್ಟನೆ

    ನನ್ನ ಜೀವನದಲ್ಲಿ ಬಡವರ ಬಗ್ಗೆ ಮಹಿಳೆಯರ ಬಗ್ಗೆ ಕೆಟ್ಟದಾಗಿ ನಡೆದುಕೊಂಡಿರುವ ಸಣ್ಣ ಉದಾಹರಣೆಯು ಇಲ್ಲ. ಆ ರೀತಿ ನಡೆದು ಕೊಂಡವನು ನಾನಲ್ಲ. ಪಕ್ಷದ ತೀರ್ಮಾನಕ್ಕೆ ನಾನು ಬದ್ದನಾಗಿರುತ್ತೇನೆ. ಸಣ್ಣ ಅಪಚಾರವನ್ನು ಮಾಡಿಲ್ಲ. ಹೆಣ್ಣು ಮಕ್ಕಳ ಬಗ್ಗೆ ಅಪಾರ ಗೌರವವಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಹಿಳೆಗೆ ಕಪಾಳಮೋಕ್ಷ ಮಾಡಿದ ಸಚಿವ ಸೋಮಣ್ಣ

    Live Tv
    [brid partner=56869869 player=32851 video=960834 autoplay=true]

  • ಸ್ತ್ರೀ ನಿಂದನೆ, ಶೋಷಣೆ ಬಿಜೆಪಿಯವರ ಹುಟ್ಟುಗುಣ- ಗುಂಡೂರಾವ್ ಟೀಕೆ

    ಸ್ತ್ರೀ ನಿಂದನೆ, ಶೋಷಣೆ ಬಿಜೆಪಿಯವರ ಹುಟ್ಟುಗುಣ- ಗುಂಡೂರಾವ್ ಟೀಕೆ

    ಬೆಂಗಳೂರು: ಸ್ತ್ರೀ ನಿಂದನೆ, ಸ್ತ್ರೀ ಪೀಡನೆ, ಸ್ತ್ರೀ ಶೋಷಣೆ ಬಿಜೆಪಿಯವರ (BJP) ಹುಟ್ಟುಗುಣ ಎಂದು ಕಾಂಗ್ರೆಸ್ (Congress) ನಾಯಕ ದಿನೇಶ್ ಗುಂಡೂರಾವ್ (Dinesh Gundu Rao) ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

    ಚಾಮರಾಜನಗರದಲ್ಲಿ (Chamarajanagar) ಮಹಿಳೆಯೊಬ್ಬರಿಗೆ ಸಚಿವ ವಿ.ಸೋಮಣ್ಣ (V Somanna) ಕಪಾಳಮೋಕ್ಷ ಮಾಡಿದ ಘಟನೆಗೆ ಸಂಬಂಧಿಸಿದಂತೆ ಟ್ವೀಟ್ ಮೂಲಕ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕಪಾಳಮೋಕ್ಷ ಪ್ರಕರಣಕ್ಕೆ ಟ್ವಿಸ್ಟ್- ಸಚಿವರು ನಂಗೆ ಹೊಡೆದಿಲ್ಲವೆಂದು ಮಹಿಳೆ ಸ್ಪಷ್ಟನೆ

    ಗುಂಡ್ಲುಪೇಟೆಯ ಹಂಗಳದಲ್ಲಿ ಸಮಸ್ಯೆ ಹೇಳಿಕೊಂಡು ಬಂದ ಮಹಿಳೆಯೊಬ್ಬರ ಮೇಲೆ ಸಚಿವ ಸೋಮಣ್ಣ ಕಪಾಳಮೋಕ್ಷ ಮಾಡಿದ್ದಾರೆ. ಸೋಮಣ್ಣ ಒಬ್ಬ ಹಿರಿಯ ಸಚಿವ. ನಾಲ್ಕು ಜನರಿಗೆ ಬುದ್ಧಿ ಹೇಳುವ ಸ್ಥಾನದಲ್ಲಿದ್ದು ಈ ರೀತಿ ವರ್ತಿಸುವುದು ಶೋಭೆಯಲ್ಲ. ಸ್ತ್ರೀಯರೊಂದಿಗೆ ಸಂಸ್ಕಾರಯುತವಾಗಿ ವರ್ತಿಸಬೇಕು ಅನ್ನೋ ಕನಿಷ್ಠ ಜ್ಞಾನವೂ ಸೋಮಣ್ಣರಗಿಲ್ಲವೇ? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಕಾಳಿಂಗ ಸರ್ಪಗೆ ಕಿಸ್ ಕೊಟ್ಟ ಭೂಪ – ವ್ಯಕ್ತಿ ಧೈರ್ಯಕ್ಕೆ ಶಹಬ್ಬಾಸ್‌ ಅಂದ ನೆಟ್ಟಿಗರು

    ಸ್ತ್ರೀ ನಿಂದನೆ, ಸ್ತ್ರೀ ಪೀಡನೆ, ಸ್ತ್ರೀ ಶೋಷಣೆ ಬಿಜೆಪಿಯವರ ಹುಟ್ಟುಗುಣ. ಮಹಿಳೆಯ ಕೆನ್ನೆಗೆ ಹೊಡೆಯುವ ಮೂಲಕ ಸ್ತ್ರೀಯರ ಬಗ್ಗೆ ಬಜೆಪಿಯವರ ಮನಸ್ಥಿತಿಯನ್ನು ಸೋಮಣ್ಣ ಅನಾವರಣ ಮಾಡಿದ್ದಾರೆ. ಸಾರ್ವಜನಿಕವಾಗಿಯೇ ಮಹಿಳೆಯ ಮೇಲೆ ಹಲ್ಲೆ ಮಾಡಿದ್ದಾರೆ. ಸ್ತ್ರೀಯರ ಬಗ್ಗೆ ಗೌರವವಿಲ್ಲದ ವ್ಯಕ್ತಿಗಳಿಂದ ಮಾತ್ರ ಇಂತಹ ವರ್ತನೆ ತೋರಿಸಲು ಸಾಧ್ಯ ಎಂದು ಕಿಡಿಕಾರಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಹಿಳೆಗೆ ಕಪಾಳಮೋಕ್ಷ ಪ್ರಕರಣ- ಸೋಮಣ್ಣ ಕ್ಷಮೆಯಾಚನೆ

    ಮಹಿಳೆಗೆ ಕಪಾಳಮೋಕ್ಷ ಪ್ರಕರಣ- ಸೋಮಣ್ಣ ಕ್ಷಮೆಯಾಚನೆ

    ಚಾಮರಾಜನಗರ: ಮಹಿಳೆಗೆ ಕಪಾಳಮೋಕ್ಷ (Slap) ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ಸಚಿವ ವಿ.ಸೋಮಣ್ಣ (V Somanna) ಕ್ಷಮೆ ಯಾಚಿಸಿದ್ದಾರೆ.

    45 ವರ್ಷ ಹಲವು ಏಳುಬೀಳು ಕಂಡಿದ್ದೇನೆ. ನಿನ್ನೆಯ ಕಾರ್ಯಕ್ರಮದಲ್ಲಿ ಸಣ್ಣ ಅಪಚಾರವನ್ನು ಮಾಡಿಲ್ಲ. ಪ್ರಾಯಶಃ ಯಾರಿಗಾದರೂ ಮನಸ್ಸಿಗೆ ನೋವಾಗಿದ್ದಾರೆ ಕ್ಷಮೆ ಯಾಚಿಸುತ್ತೇನೆ, ವಿಷಾದ ವ್ಯಕ್ತಪಡಿಸುತ್ತೇನೆ. ನಿನ್ನೆಯ ಘಟನೆ ಘಟನೆಯೇ ಅಲ್ಲ ಎಂದು ಹೇಳಿದರು. ಇದನ್ನೂ ಓದಿ: ಕಪಾಳಮೋಕ್ಷ ಪ್ರಕರಣಕ್ಕೆ ಟ್ವಿಸ್ಟ್- ಸಚಿವರು ನಂಗೆ ಹೊಡೆದಿಲ್ಲವೆಂದು ಮಹಿಳೆ ಸ್ಪಷ್ಟನೆ

    ಹೆಣ್ಣು ಮಗಳು ಪದೇಪದೇ ವೇದಿಕೆ ಮೇಲೆ ಬರುತ್ತಿದ್ದಳು. ತಾಯಿ ಎಷ್ಟು ಸರಿ ಬರುತ್ತೀಯಾ ಅಂತ ವಿಚಾರಿಸಿದೆ. ನಿನ್ನ ಸಮಸ್ಯೆ ಬಗೆಹರಿಸುತ್ತೇನೆ ಎಂದು ಕೈಯಲ್ಲಿ ಪಕ್ಕಕ್ಕೆ ಸರಿಸಿದ್ದೇನೆ ಅಷ್ಟೇ ವಿನಃ ಇನ್ನೇನು ಉದ್ದೇಶ ಇರಲ್ಲಿಲ್ಲ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಮಹಿಳೆಗೆ ಕಪಾಳಮೋಕ್ಷ ಮಾಡಿದ ಸಚಿವ ಸೋಮಣ್ಣ

    ಹೆಣ್ಣು ಮಕ್ಕಳ ಬಗ್ಗೆ ಅಪಾರವಾದ ಗೌರವ, ಮಮಕಾರ ಇದೆ. ನಾನು ಕೂಡ ಬಡತನದಿಂದಲೇ ಬಂದವನು. ಆ ಹೆಣ್ಣು ಮಗಳಿಗೆ ಸಹ ಹಕ್ಕು ಪತ್ರ ಕೊಡಿಸಿದ್ದೇನೆ. ಯಾರಿಗಾದರೂ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಸಚಿವರು ತಿಳಿಸಿದರು.

    Live Tv
    [brid partner=56869869 player=32851 video=960834 autoplay=true]

  • ಕಪಾಳಮೋಕ್ಷ ಪ್ರಕರಣಕ್ಕೆ ಟ್ವಿಸ್ಟ್- ಸಚಿವರು ನಂಗೆ ಹೊಡೆದಿಲ್ಲವೆಂದು ಮಹಿಳೆ ಸ್ಪಷ್ಟನೆ

    ಕಪಾಳಮೋಕ್ಷ ಪ್ರಕರಣಕ್ಕೆ ಟ್ವಿಸ್ಟ್- ಸಚಿವರು ನಂಗೆ ಹೊಡೆದಿಲ್ಲವೆಂದು ಮಹಿಳೆ ಸ್ಪಷ್ಟನೆ

    ಚಾಮರಾಜನಗರ: ಸಚಿವ ವಿ. ಸೋಮಣ್ಣ (V Somanna) ಅವರು ಮಹಿಳೆಯೊಬ್ಬರಿಗೆ ಕಪಾಳಮೋಕ್ಷ (Slap) ಮಾಡಿರುವ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ.

    ಈ ಬಗ್ಗೆ ಮಹಿಳೆ ಕೆಂಪಮ್ಮ ಸ್ಪಷ್ಟನೆ ನಿಡಿದ್ದು, ಸಚಿವರು ನನಗೆ ಹೊಡೆದಿಲ್ಲ. ಅವರ ಮೇಲೆ ತಪ್ಪು ಅಪವಾದ ಹೊರಿಸಲಾಗುತ್ತಿದೆ ಎಂದು ಹೇಳಿದ್ದಾರೆ.

    ನನಗೂ ಸೈಟ್ ಕೊಡಿ ಎಂದು ಕಾಲಿಗೆಬಿದ್ದೆ. ಆಗ ಸಚಿವರು ನನ್ನನ್ನು ಎತ್ತಿ ಕ್ಷಮೆ ಕೇಳಿ ಸಮಾಧಾನಪಡಿಸಿದರು. ಸಚಿವರು ನನಗೆ ಹೊಡೆಯಲಿಲ್ಲ. ಆದರೆ ಅವರು ನನಗೆ ಹೊಡೆದರು ಎಂದು ಅವರ ಮೇಲೆ ತಪ್ಪು ಅಪವಾದ ಹೊರಿಸಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದೇಶ-ವಿದೇಶದಲ್ಲಿ ಮಾರ್ದನಿಸ್ತಿರೋ ಗಗ್ಗರ ಶಬ್ಧ- ಅಮೆರಿಕಾದಲ್ಲಿ ಎಂಟೂವರೆ ಕೋಟಿ ಬಾಚಿದ ಕಾಂತಾರ

    ಸೈಟಿಗೆಂದು ಕೊಟ್ಟಿದ್ದ ನಾಲ್ಕು ಸಾವಿರ ರೂಪಾಯಿಯನ್ನು ವಾಪಸ್ ಕೊಡಿಸಿದ್ದಾರೆ. ಪುಣ್ಯಾತ್ಮ ನನಗೆ ಸೈಟ್ ಕೊಡಿಸಿ ನನ್ನ ಮಕ್ಕಳಿಗೆ ದಾರಿ ತೋರಿಸಿ ಒಳ್ಳೆಯದು ಮಾಡಿದ್ದಾರೆ. ಹೀಗಾಗಿ ನಾನು ಅವರ ಫೋಟೋ ಇಟ್ಕೊಂಡು ಪೂಜೆ ಮಾಡ್ತೀನಿ ಎಂದು ಕೆಂಪಮ್ಮ ಹೇಳಿದ್ದಾರೆ.

    ಏನಿದು ಪ್ರಕರಣ..?: ಶನಿವಾರ ಹಂಗಳ ಗ್ರಾಮದ 175 ಜನರಿಗೆ ನಿವೇಶನ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ನಿಗದಿಯಾಗಿತ್ತು. ಮಧ್ಯಾಹ್ನ 3.30ಕ್ಕೆ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ಸಚಿವರು ಸಂಜೆ 6.30ಕ್ಕೆ ಆಗಮಿಸಿದರು. ಈ ವೇಳೆ ನಿವೇಶನದ ಹಕ್ಕುಪತ್ರ ಪಡೆಯಲು ನೂಕುನುಗ್ಗಲು ಉಂಟಾಯಿತು.

    ಇದೇ ವೇಳೆ ಮಹಿಳೆಯೊಬ್ಬರು ತಮ್ಮ ಸಮಸ್ಯೆ ಹೇಳಿಕೊಳ್ಳಲು ಸಚಿವರ ಬಳಿ ತೆರಳಿದರು. ಸಮಸ್ಯೆ ಹೇಳಿಕೊಳ್ಳಲು ತೆರಳಿದ ಮಹಿಳೆಗೆ ಸೋಮಣ್ಣ ಅವರು ಕಪಾಳಮೋಕ್ಷ ಮಾಡಿದರು. ಘಟನೆಯಿಂದ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ನಂತರ ಪೊಲೀಸರು ಮಧ್ಯಪ್ರವೇಶ ಮಾಡಿ ಪರಿಸ್ಥಿತಿ ತಿಳಿಗೊಳಿಸಿದರು.

    Live Tv
    [brid partner=56869869 player=32851 video=960834 autoplay=true]

  • ಮಹಿಳೆಗೆ ಕಪಾಳಮೋಕ್ಷ ಮಾಡಿದ ಸಚಿವ ಸೋಮಣ್ಣ

    ಮಹಿಳೆಗೆ ಕಪಾಳಮೋಕ್ಷ ಮಾಡಿದ ಸಚಿವ ಸೋಮಣ್ಣ

    ಚಾಮರಾಜನಗರ: ಸಚಿವ ವಿ ಸೋಮಣ್ಣ (V Somanna) ಅವರು ಮಹಿಳೆಯೊಬ್ಬರಿಗೆ ಕಪಾಳಮೋಕ್ಷ ಮಾಡಿದ ಘಟನೆ ಚಾಮರಾಜನಗರ (Chamarajanagar) ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ನಡೆದಿದೆ.

    ಶನಿವಾರ ಹಂಗಳ ಗ್ರಾಮದ 175 ಜನರಿಗೆ ನಿವೇಶನ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ನಿಗದಿಯಾಗಿತ್ತು. ಮಧ್ಯಾಹ್ನ 3.30ಕ್ಕೆ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ಸಚಿವರು ಸಂಜೆ 6.30ಕ್ಕೆ ಆಗಮಿಸಿದರು. ಈ ವೇಳೆ ನಿವೇಶನದ ಹಕ್ಕುಪತ್ರ ಪಡೆಯಲು ನೂಕುನುಗ್ಗಲು ಉಂಟಾಯಿತು. ಇದನ್ನೂ ಓದಿ: RSSನವರು ಹೆಚ್ಚು ಮಕ್ಕಳನ್ನು ಹುಟ್ಟಿಸಲಿ ನಾವು ಹುಟ್ಟಿಸಲ್ಲ: ಅಸಾದುದ್ದೀನ್ ಓವೈಸಿ

    ಇದೇ ವೇಳೆ ಮಹಿಳೆ (Woman) ಯೊಬ್ಬರು ತಮ್ಮ ಸಮಸ್ಯೆ ಹೇಳಿಕೊಳ್ಳಲು ಸಚಿವರ ಬಳಿ ತೆರಳಿದರು. ಸಮಸ್ಯೆ ಹೇಳಿಕೊಳ್ಳಲು ತೆರಳಿದ ಮಹಿಳೆಗೆ ಸೋಮಣ್ಣ ಅವರು ಕಪಾಳಮೋಕ್ಷ ಮಾಡಿದರು. ಘಟನೆಯಿಂದ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ನಂತರ ಪೊಲೀಸರು ಮಧ್ಯಪ್ರವೇಶ ಮಾಡಿ ಪರಿಸ್ಥಿತಿ ತಿಳಿಗೊಳಿಸಿದರು.

    Live Tv
    [brid partner=56869869 player=32851 video=960834 autoplay=true]

  • ನಿನ್ಮನೆ ಕಾಯ್ವಾಗ ನಿಂಗೆ NDRF ಯಾವ್ದು, SDRF ಯಾವ್ದು ಗೊತ್ತಿಲ್ಲ – ಅಧಿಕಾರಿ ವಿರುದ್ಧ ಸೋಮಣ್ಣ ಗರಂ

    ನಿನ್ಮನೆ ಕಾಯ್ವಾಗ ನಿಂಗೆ NDRF ಯಾವ್ದು, SDRF ಯಾವ್ದು ಗೊತ್ತಿಲ್ಲ – ಅಧಿಕಾರಿ ವಿರುದ್ಧ ಸೋಮಣ್ಣ ಗರಂ

    ಚಾಮರಾಜನಗರ: ನಿನ್ಮನೆ ಕಾಯ್ವಾಗ ನಿಂಗೆ ಎನ್‍ಡಿಆರ್‌ಎಫ್ (NDRF) ಯಾವುದು, ಎಸ್‍ಡಿಆರ್‌ಎಫ್ (SDRF)ಯಾವುದು ಅಂತ ಗೊತ್ತಿಲ್ಲ ಎಂದು ಅಧಿಕಾರಿಯೊಬ್ಬರ ವಿರುದ್ಧ ಸಚಿವ ವಿ. ಸೋಮಣ್ಣ (V. Somanna) ಕಿಡಿಕಾರಿದ್ದಾರೆ.

    ಚಾಮರಾಜನಗರದಲ್ಲಿ (Chamarajanagara) ಇಂದು ಅಧಿಕಾರಿಗಳ ಸಭೆ ನಡೆಸಿದ ವಿ.ಸೋಮಣ್ಣ ಅವರು, ಮಳೆ ಹಾನಿಗೊಳಗಾದ ತೋಟಗಾರಿಕೆ ಬೆಳೆಗೆ ನೀಡುವ ಪರಿಹಾರದ ಬಗ್ಗೆ ಮಾಹಿತಿ ಕೇಳಿದರು. ಎನ್‍ಡಿಆರ್‌ಎಫ್, ಎಸ್‍ಡಿಆರ್‌ಎಫ್  ಬಗ್ಗೆ ಪ್ರಶ್ನಿಸಿದರು. ಆದರೆ ಇದಕ್ಕೆ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ನಾಗೇಶ್ವರರಾವ್ ಸಮರ್ಪಕ ಉತ್ತರ ನೀಡಲು ತಡಬಡಾಯಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಮೌನವೇಕೆ? – BJPಯಿಂದ ಸೇ-ಸಿದ್ದು ಪೋಸ್ಟರ್ ರಿಲೀಸ್

    ಇದರಿಂದ ಕೋಪಗೊಂಡ ವಿ.ಸೋಮಣ್ಣ, ನಿನ್ಮನೆ ಕಾಯ್ವಾಗ ನಿಂಗೆ ಎನ್‍ಡಿಆರ್‌ಎಫ್ ಯಾವುದು, ಎಸ್‍ಡಿಆರ್‌ಎಫ್ ಯಾವುದು ಅಂತ ಗೊತ್ತಿಲ್ಲ. ನೀನೆಂತಾ ಅಸಿಸ್ಟೆಂಟ್ ಡೈರೆಕ್ಟರ್ ಅಪ್ಪಾ, ರಾಜೀನಾಮೆ ಕೊಟ್ಟು ಮನೆಗೆ ಹೋಗು ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಮಸೀದಿಗಳ ಧ್ವನಿವರ್ಧಕಕ್ಕೆ ಸರ್ಕಾರ ಅನುಮತಿ ಕೊಟ್ಟಿದ್ದು ಸರಿಯಲ್ಲ – ಮುತಾಲಿಕ್ ಕಿಡಿ

    Live Tv
    [brid partner=56869869 player=32851 video=960834 autoplay=true]

  • ಪಾದಯಾತ್ರೆ ಅಂದ್ರೆ ನಮ್ ತಾಯಾಣೆ ಹೀಗೆ ಅಂತ ಗೊತ್ತಿರಲಿಲ್ಲ: ಸೋಮಣ್ಣ ವ್ಯಂಗ್ಯ

    ಪಾದಯಾತ್ರೆ ಅಂದ್ರೆ ನಮ್ ತಾಯಾಣೆ ಹೀಗೆ ಅಂತ ಗೊತ್ತಿರಲಿಲ್ಲ: ಸೋಮಣ್ಣ ವ್ಯಂಗ್ಯ

    ಬೆಂಗಳೂರು:ಪಾದಯಾತ್ರೆ(Padayatra) ಅಂದ್ರೆ ನಮ್ ತಾಯಾಣೆ ಹೀಗೆ ಅಂತ ಗೊತ್ತಿರಲಿಲ್ಲ ಎಂದು ಹೇಳುವ ಮೂಲಕ ವಸತಿ ಸಚಿವ ವಿ. ಸೋಮಣ್ಣ(V Somanna) ರಾಹುಲ್‌ ಗಾಂಧಿ ಪಾದಯಾತ್ರೆಯನ್ನು ವ್ಯಂಗ್ಯಮಾಡಿದ್ದಾರೆ.

    ಭಾರತ್‌ ಜೋಡೋ(Bharat Jodo Yatra) ಪಾದಯಾತ್ರೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸುಲ್ತಾನ್ ಬತ್ತೇರಿ ಇಂದ ಗುಂಡ್ಲುಪೇಟೆ ವರೆಗೂ 60 ಕಿ.ಮೀ ಇದೆ. ಪಾದಯಾತ್ರೆ ಅಂದರೆ ನಡೆದುಕೊಂಡು ಹೋಗುವುದು ಅಂದುಕೊಂಡಿದ್ದೆ. ಆದರೆ ವಾಹನ ಹತ್ತಿ ಓಡಾಡುವುದು ಅಂದುಕೊಂಡಿರಲಿಲ್ಲ.ರಾಹುಲ್ ಗಾಂಧಿ ಪಾದಯಾತ್ರೆ ಹೀಗೆ ಅಂತ ಗೊತ್ತಿಲ್ಲ ಎಂದು ಹೇಳಿದರು.

    ರಾಹುಲ್‌ ಗಾಂಧಿ(Rahul Gandhi) ಅವರ ಭಾರತ್‌ ಜೋಡೋ ಪಾದಯಾತ್ರೆ ಇಂದು ಕರ್ನಾಟಕ ಪ್ರವೇಶಿಸಿದೆ. ಇಂದು ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್‌ ನಾಯಕರು ಸ್ವಾಗತ ಮಾಡಿದರು. ಇದನ್ನೂ ಓದಿ: ಸಿದ್ದು, ಡಿಕೆಶಿ ಮಧ್ಯೆ ಮುಸುಕಿನ ಗುದ್ದಾಟ – ರಾಹುಲ್ ಎದುರೇ ಒಬ್ಬರಿಗೊಬ್ಬರು ಠಕ್ಕರ್

    ಸೆಪ್ಟೆಂಬರ್ 30 ರಿಂದ ಅಕ್ಟೋಬರ್ 14 ರ ವರೆಗೆ ಒಟ್ಟು 15 ದಿನ ರಾಹುಲ್‌ ಪಾದಯಾತ್ರೆ ಕರ್ನಾಟಕದಲ್ಲಿ ನಡೆಯಲಿದೆ.

    Live Tv
    [brid partner=56869869 player=32851 video=960834 autoplay=true]

  • ಚಾಮರಾಜನಗರ ದಸರಾ ಉದ್ಘಾಟನೆಯಲ್ಲಿ ಕಪ್ಪು ಬಾವುಟ ಪ್ರದರ್ಶನ: ವಿ. ಸೋಮಣ್ಣ ಕೆಂಡಾಮಂಡಲ

    ಚಾಮರಾಜನಗರ ದಸರಾ ಉದ್ಘಾಟನೆಯಲ್ಲಿ ಕಪ್ಪು ಬಾವುಟ ಪ್ರದರ್ಶನ: ವಿ. ಸೋಮಣ್ಣ ಕೆಂಡಾಮಂಡಲ

    ಚಾಮರಾಜನಗರ: ಜಿಲ್ಲೆಯ ದಸರಾ (Dasara) ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ ವೇಳೆ ಕಾಂಗ್ರೆಸ್ ನಗರಸಭಾ ಸದಸ್ಯ ಆರ್.ಪಿ.ನಂಜುಂಡಸ್ವಾಮಿ (R.P. Nanjundaswamy)ವೇದಿಕೆಯಲ್ಲೇ ಕಪ್ಪು ಬಾವುಟ ಪ್ರದರ್ಶನ ಮಾಡಿದ್ದರಿಂದ ಸಚಿವ ವಿ. ಸೋಮಣ್ಣನವರು (V. Somanna) ಕೆಂಡಾಮಂಡಲವಾಗಿದ್ದಾರೆ.

    ಚಾಮರಾಜೇಶ್ವರ ದೇವಾಲಯದ (Chamarajeshwara Temple) ಮುಂಭಾಗ ನಿರ್ಮಿಸಿರುವ ಮುಖ್ಯ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಲು ವಿ. ಸೋಮಣ್ಣನವರು ವೇದಿಕೆ ಏರಿ ಕುಳಿತಂತೆ ಅಲ್ಲೇ ಇದ್ದ ನಗರಸಭಾ ಸದಸ್ಯ ಆರ್.ಪಿ.ನಂಜುಂಡಸ್ವಾಮಿ ದೀಪಾಲಂಕಾರದ ಅವ್ಯವಸ್ಥೆ ಖಂಡಿಸಿ ಕಪ್ಪು ಬಾವುಟ ಪ್ರದರ್ಶಿಸಿದರು. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಚಿಕಿತ್ಸೆ ನೀಡಿದ ವೈದ್ಯ – ಆಸ್ಪತ್ರೆಯಲ್ಲಿ ಮಗು ಸಾವು

    ಬಳಿಕ ಅಲ್ಲಿಯೇ ಇದ್ದ ಪೊಲೀಸರು ನಂಜುಂಡಸ್ವಾಮಿ ಅವರನ್ನು ಹೊರಕ್ಕೆ ಎಳೆದೊಯ್ದರು. ಈ ಅನಿರೀಕ್ಷಿತ ಘಟನೆಯಿಂದ ಕೆಂಡಾಮಂಡಲರಾದ ಸೋಮಣ್ಣ ಅವರು, ಪೊಲೀಸರು ಏನು ಮಾಡುತ್ತಿದ್ದೀರಾ, ಯಾವ ರೀತಿ ವ್ಯವಸ್ಥೆ ಮಾಡಿದ್ದೀರಾ ಎಂದು ಕಿಡಿಕಾರಿದ್ದಾರೆ.  ಇದನ್ನೂ ಓದಿ: ನಮ್ಮ ಸಮುದಾಯಕ್ಕೆ ಮೀಸಲಾತಿ ಸಿಕ್ಕಿಲ್ಲ ಅನ್ನೋ ನೋವಿದೆ, ಆದ್ರೆ ನಾನು ಹಿಂದೆ ಸರಿಯಲ್ಲ: ಶ್ರೀರಾಮುಲು

    Live Tv
    [brid partner=56869869 player=32851 video=960834 autoplay=true]

  • 6 ತಿಂಗಳು ರಜೆ ಹಾಕಿ- ಡೀನ್ ವಿರುದ್ಧ ಸಚಿವ ಸೋಮಣ್ಣ ಗರಂ

    6 ತಿಂಗಳು ರಜೆ ಹಾಕಿ- ಡೀನ್ ವಿರುದ್ಧ ಸಚಿವ ಸೋಮಣ್ಣ ಗರಂ

    ಚಾಮರಾಜನಗರ: ತಾಂತ್ರಿಕ ಸಮಸ್ಯೆ ಎಂದು ಕಾರಣ ನೀಡಿದ್ದ ಸಿಮ್ಸ್ ಡೀನ್‍ಗೆ ಆರು ತಿಂಗಳು ರಜೆ ಹಾಕಿಕೊಳ್ಳಿ ಎಂದು ಸಚಿವ ವಿ. ಸೋಮಣ್ಣ(V Somanna) ಎಚ್ಚರಿಕೆ ನೀಡಿದ್ದು, ಇದರಿಂದ ಸಿಮ್ಸ್ ಡೀನ್ ಡಾ. ಸಂಜೀವ್ ತಬ್ಬಿಬ್ಬಾದ ಘಟನೆ ನಡೆಯಿತು.

    ಕೆಡಿಪಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ್ದ ಸಚಿವರು, ಚಾಮರಾಜನಗರ (Chamarajanagar) ಜಿಲ್ಲಾ ಆಸ್ಪತ್ರೆಯನ್ನು(Hospital) ಮತ್ತೆ ಪ್ರಾರಂಭ ಮಾಡಬೇಕು ಎಂದು ಹೇಳಿದಾಗ ಮೆಡಿಕಲ್ ಕಾಲೇಜಿಗೆ 750 ಬೆಡ್ ಆಸ್ಪತ್ರೆ ಬೇಕಿದೆ. ಜಿಲ್ಲಾಸ್ಪತ್ರೆಯು ಸೇರಿದಂತೆ ಅಷ್ಟು ಬೆಡ್ ಇರುವುದರಿಂದ ಮೆಡಿಕಲ್ ಕಾಲೇಜ್ ಸಿಕ್ಕಿದೆ. ಈ ಕಾರಣದಿಂದ ಪ್ರತ್ಯೇಕ ಜಿಲ್ಲಾಸ್ಪತ್ರೆಗೆ ಒಪ್ಪಿಗೆ ಸಿಗುವುದಿಲ್ಲ ಎಂದು ಡೀನ್ ಡಾ.ಸಂಜೀವ್ ತಾಂತ್ರಿಕ ಸಮಸ್ಯೆಯನ್ನು ಹೇಳಿದ್ದಾರೆ. ಇದನ್ನೂ ಓದಿ: ಕರ್ನಾಟಕಕ್ಕೆ 55 ಸಾವಿರ ಕೋಟಿ ಅನುದಾನ ನೀಡಲು ಚಿಂತನೆ – ಸ್ಮೃತಿ ಇರಾನಿ

    ಇದರಿಂದ ಕೋಪಗೊಂಡ ಸಚಿವ ಸೋಮಣ್ಣ, ನಿಮ್ಮ ಬಗ್ಗೆ ಸಾಕಷ್ಟು ಆರೋಪಗಳು ಕೇಳಿಬರುತ್ತಿವೆ. ನಾವು ಜನರಿಗಾಗಿ ಇರೋದು. ನಿಮ್ಮ ಕೈಯಲ್ಲಿ ಆಗದಿದ್ದರೆ ಆರು ತಿಂಗಳು ರಜೆ ಹಾಕಿ, ನನಗೆ ಜಿಲ್ಲಾಸ್ಪತ್ರೆ ಹೇಗೆ ಪುನಾರಂಭ ಮಾಡಬೇಕು ಎಂದು ಗೊತ್ತಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ನೆರೆ ಬಂದಾಗ ಕಾಣೆಯಾಗಿದ್ದ ಸಚಿವರು, ಶಾಸಕರೆಲ್ಲ ದೊಡ್ಡಬಳ್ಳಾಪುರದಲ್ಲಿ ಪತ್ತೆ: ಕಾಂಗ್ರೆಸ್ ಲೇವಡಿ

    Live Tv
    [brid partner=56869869 player=32851 video=960834 autoplay=true]