Tag: V.Somanna

  • ಆರೋಗ್ಯ ಸರಿಯಿಲ್ಲದೆ ಒದ್ದಾಡುತ್ತಿದ್ದೆ, ಹೀಗಾಗಿ 2 ದಿನ ತಡವಾಗಿದೆ: ವಿ ಸೋಮಣ್ಣ

    ಆರೋಗ್ಯ ಸರಿಯಿಲ್ಲದೆ ಒದ್ದಾಡುತ್ತಿದ್ದೆ, ಹೀಗಾಗಿ 2 ದಿನ ತಡವಾಗಿದೆ: ವಿ ಸೋಮಣ್ಣ

    ಚಾಮರಾಜನಗರ: ತಡವಾಗಿದ್ದಕ್ಕೆ ಆರೋಗ್ಯನೂ ಮುಖ್ಯವಲ್ಲವೇ. ನನಗೆ ಆರೋಗ್ಯ ಸರಿಯಿಲ್ಲದೆ, ಒದ್ದಾಡುತ್ತಿದ್ದೇನೆ. 4-5 ದಿನ ವಿಶ್ರಾಂತಿಗೆ ವೈದ್ಯರು ಸೂಚಿಸಿದ್ದಾರೆ. ಹಾಗಾಗಿ ಎರಡು ದಿನ ತಡವಾಗಿದೆ ಎಂದು ಸಚಿವ ವಿ. ಸೋಮಣ್ಣ ಸಮಜಾಯಿಷಿ ನೀಡಿದ್ದಾರೆ.

    ಚಾಮರಾಜನಗರ ಜಿಲ್ಲೆಯ ಹಲವೆಡೆ ಮಳೆ ಹಾನಿಯಾಗಿದ್ದು, ಇದೀಗ ಐದು ದಿನಗಳ ನಂತರ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಭೇಟಿ ನೀಡಿದ್ದಾರೆ. ಈ ವೇಳೆ ಕೊಳ್ಳೇಗಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆ ಹಾನಿ ಗಾಂಭೀರ್ಯತೆ ಅರ್ಥವಾಗಿದೆ ಎಂದರು. ಇದನ್ನೂ ಓದಿ: ಇಂದು ಸಂಜೆಯೊಳಗೆ ಮುದ್ದಹನುಮೇ ಗೌಡ ಕಾಂಗ್ರೆಸ್‍ಗೆ ಗುಡ್‍ಬೈ

    ಬೆಂಗಳೂರು ಮಳೆ ಬಗ್ಗೆ ಮಾತನಾಡಿದ ಸಚಿವರು, ಮಳೆಯಿಂದ ಆಗಿರುವ ಅನಾಹುತ ಅಪಾರ. 486 ಮಿಲಿಮೀಟರ್ ಮಳೆಯಾಗಿದೆ. ಈಗ ಆಗಿರುವ ಮಳೆ ಹಿಂದೆಂದೂ ಆಗಿಲ್ಲ. ನಾನು ಬೆಂಗಳೂರನ್ನು 45 ವರ್ಷಗಳಿಂದ ಪ್ರತಿನಿಧಿಸುತ್ತಿದ್ದೇನೆ. ಮಹದೇವಪುರ ಸೇರಿದಂತೆ ಇತರ ಹೊಸ ಬಡಾವಣೆಗಳಲ್ಲಿ ಅನಾಹುತ ಆಗಿದೆ. ಹಳೇ ಬೆಂಗಳೂರಿಗೆ ಏನೂ ಆಗಿಲ್ಲ. ಅಂಡರ್ ಪಾಸ್ ಬಳಿ ಮಳೆ ಬಂದಾಗ ದ್ವಿಚಕ್ರ ವಾಹನ ಸವಾರರು ನಿಲ್ಲುತ್ತಾರೆ. ಆಗ ಬೇರೆ ವಾಹನಗಳು ಸಂಚರಿಸಲು ಆಗಲ್ಲ. ಈ ವೇಳೆ ಅಪಘಾತ ಆಗುತ್ತವೆ. ಇದೆಲ್ಲಾ ಆಗಬಾರದು ಅಂತಾ 45 ಕಡೆ ಎಚ್ಚರಿಕೆ ನೀಡಲಾಗಿದೆ ಎಂದು ಹೇಳಿದರು.

    ಮೊದಲಿನ 197 ವಾರ್ಡ್‍ಗಳು ಇವತ್ತಿಗೂ ಹೈ ಕ್ಲಾಸ್ ಆಗಿವೆ. ಮುಖ್ಯಮಂತ್ರಿಗಳು ಆಸಕ್ತಿ ವಹಿಸಿ ಕೆಲಸ ಮಾಡ್ತಿದ್ದಾರೆ. 1500 ಕೋಟಿ ರೂಪಾಯಿ ರಸ್ತೆ ರಿಪೇರಿಗೆ ಕೊಟ್ಟಿದ್ದಾರೆ. ಇಂತಹ ಮಳೆ ಯಾವತ್ತೂ ಆಗಿಲ್ಲ. ಇದನ್ನು ಎದುರಿಸುವುದು ನಮ್ಮ ಕರ್ತವ್ಯ. ಇನ್ನು ರಸ್ತೆ ಗುಂಡಿ ಮುಚ್ಚಲು 210 ಕೋಟಿ ಖರ್ಚು ಮಾಡಿರುವ ವಿಚಾರದ ಬಗ್ಗೆ ಮಾತನಾಡಿ, ಇಷ್ಟು ಮಳೆಯಾದಾಗ ಗುಂಡಿ ಬೀಳುವುದು ಸ್ವಾಭಾವಿಕ. ಎಷ್ಟು ಕೋಟಿ ಖರ್ಚಾಗಿದೆ ಎಂಬ ಮಾಹಿತಿ ನನಗಿಲ್ಲ. ಆದ್ರೆ ಅಧಿಕಾರಿಗಳು ಮೊದಲಿಗಿಂತ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.

    ಇದೇ ವೇಳೆ ಮುರುಘಾ ಶ್ರೀ ಪೋಕ್ಸೋ ಕಾಯ್ದೆ ಪ್ರಕರಣದ ಕುರಿತು ಪ್ರತಿಕ್ರಿಯಿಸಿ, ಕೆಲವಾರು ವಿಚಾರಗಳಲ್ಲಿ ಏನಾಗಿದೆ, ಎತ್ತ ಆಗಿದೆ ಎಂಬುದರ ಕುರಿತು ಮಾಹಿತಿ ಇದೆ. ಎಲ್ಲವೂ ದುರಂತ, ಸತ್ಯಾಸತ್ಯತೆ ಹೊರಬರಲು ಪೊಲೀಸರು ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ. ಕೋರ್ಟ್ ನಲ್ಲಿ ಸ್ಟೆಟಮೆಂಟ್ ಆಗಿದೆ. ಕೋರ್ಟ್ ಅಂಗಳದಲ್ಲಿರುವಾಗ ನಾನು ನೀವು ಮಾತಾಡೊದು ಎಷ್ಟು ಸರಿ ಎಂದು ಪ್ರಶ್ನಿಸಿದರು.

    ಕಾನೂನು ಎಲ್ಲರಿಗೂ ಒಂದೇ ಅದಕ್ಕೆ ತಲೆ ಬಾಗೋಣ, ನಾವು ಮಧ್ಯಸ್ಥಿಕೆ ವಹಿಸಬಾರದು. ಸಮಾಜ ನಿಜ, ಸಮಾಜದಲ್ಲಿ ಎಲ್ಲವೂ ಸರಿ ಇದೆ, ಸರಿ ಇಲ್ಲ ಎಂದು ಹೇಳುವಷ್ಟು ನೀಚ ನಾನಲ್ಲ. ಬಂಧನ ವಿಚಾರವಾಗಿ ಸರ್ಕಾರ ಹಸ್ತಕ್ಷೇಪ ಮಾಡುತ್ತಿಲ್ಲ. ನ್ಯಾಯಾಧೀಶರು ಸ್ಟೇಟಮೆಂಟ್ ಪಡೆದಿದ್ದಾರೆ. ಸರ್ಕಾರದ ಹಸ್ತಕ್ಷೇಪ ಇಲ್ಲವೇ ಇಲ್ಲ ಎಂದರು.

    Live Tv
    [brid partner=56869869 player=32851 video=960834 autoplay=true]

  • ಹುಲಿ ಯೋಜನೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡಲ್ಲ – ವಿ.ಸೋಮಣ್ಣ

    ಹುಲಿ ಯೋಜನೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡಲ್ಲ – ವಿ.ಸೋಮಣ್ಣ

    ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶವನ್ನು ಹುಲಿ ಸಂರಕ್ಷಿತ ಪ್ರದೇಶವಾಗಿ ಘೋಷಣೆ ಮಾಡಲ್ಲ. ಇಲ್ಲಿ ಹುಲಿ ಯೋಜನೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡುವುದಿಲ್ಲ ಎಂದು ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

    ಮಲೆಮಹದೇಶ್ವರ ಬೆಟ್ಟದ ವ್ಯಾಪ್ತಿಯ ಪೊನ್ನಾಚಿಯಲ್ಲಿ ಆಲಂಬಾಡಿ ಮಠದ ಕಟ್ಟಡದ ಭೂಮಿ ಪೂಜೆ ಕಾರ್ಯಕ್ರಮದಲ್ಲಿಂದು ಮಾತನಾಡಿದ ಅವರು, ಮಲೆಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶವನ್ನು ಹುಲಿ ಸಂರಕ್ಷಿತ ಪ್ರದೇಶವಾಗಿ ಘೋಷಣೆ ಮಾಡುವುದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಮುಜರಾಯಿ ದೇಗುಲಗಳಲ್ಲಿ ವರಮಹಾಲಕ್ಷ್ಮಿ ಹಬ್ಬಕ್ಕೆ ಗಿಫ್ಟ್ – ಮಹಿಳೆಯರಿಗೆ ಬಳೆ, ಅರಿಶಿನ-ಕುಂಕುಮ

    ಇಲ್ಲಿ ಹುಲಿ ಯೋಜನೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡುವುದಿಲ್ಲ. ಮಲೆಮಹದೇಶ್ವರ ಬೆಟ್ಟ ಇತಿಹಾಸ ಪ್ರಸಿದ್ಧ ಕ್ಷೇತ್ರ. ಈ ಭಾಗದಲ್ಲಿ ಕಾಡಂಚಿನ ಗ್ರಾಮಗಳು ಹೆಚ್ಚಾಗಿವೆ. ಕಾಡಿನೊಳಗೂ ಗ್ರಾಮಗಳಿವೆ. ಈ ಭಾಗದ ಜನರಿಗೆ, ಬೆಟ್ಟಕ್ಕೆ ಬರುವ ಭಕ್ತರಿಗೆ ತೊಂದರೆಯಾಗಬಾರದು. ಮಲೆಮಹದೇಶ್ವರ ಬೆಟ್ಟಕ್ಕೆ ಈ ಭಾಗದ ರೈತರೇ ವಾರಸುದಾರರು. ಸರ್ಕಾರ ಅನುಷ್ಠಾನಗೊಳಿಸುವ ಯಾವುದೇ ಯೋಜನೆಗಳು ಜನರಿಗೆ ಅನುಕೂಲವೇಗಬೇಕೇ ಹೊರತು ಅನಾನುಕೂಲವಾಗಬಾರದು ಎಂದರು. ಇದನ್ನೂ ಓದಿ: ಮಾಜಿ ಸಚಿವ ಪಾರ್ಥ ಚಟರ್ಜಿ ಮೇಲೆ ಚಪ್ಪಲಿ ಎಸೆದ ಮಹಿಳೆ 

    ಎಸ್‌ಡಿಪಿಐ, ಪಿಎಫ್‌ಐ ಬ್ಯಾನ್ ಆಗ್ಬೇಕು: ಇದೇ ವೇಳೆ ಎಸ್‌ಡಿಪಿಐ ಸಂಘಟನೆ ವಿಚಾರವಾಗಿ ಮಾತನಾಡಿದ ಸಚಿವ ವಿ.ಸೋಮಣ್ಣ, ಎಸ್‌ಡಿಪಿಐ, ಪಿಎಫ್‌ಐ ಸಂಘಟನೆಗಳು ಬ್ಯಾನ್ ಆಗ್ಬೇಕು. ಈ ಸಂಘಟನೆಗಳನ್ನು ನಿಷೇಧಿಸಲು ಸರ್ಕಾರ ಹಂತ-ಹಂತವಾಗಿ ಕ್ರಮ ಕೈಗೊಳ್ಳುತ್ತಿದೆ. ಇದು ಯಾರ ಪಾಪದ ಕೂಸು ಎಂಬುದು ಎಲ್ಲರಿಗೂ ಗೊತ್ತಿದೆ. ಈ ಸಂಘಟನೆಗಳು ಎಲ್ಲರಿಗೂ ತಲೆನೋವಾಗಿದ್ದು, ಇವುಗಳನ್ನು ನಿಷೇಧಿಸಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಆಚರಣೆ, ವೈಭವಗಳನ್ನ ಇಷ್ಟಪಡದ ಸಿದ್ದರಾಮಯ್ಯ ಈಗ ಉತ್ಸವ ಆಚರಿಕೊಳ್ಳುತ್ತಿದ್ದಾರೆ: ವಿ.ಸೋಮಣ್ಣ

    ಆಚರಣೆ, ವೈಭವಗಳನ್ನ ಇಷ್ಟಪಡದ ಸಿದ್ದರಾಮಯ್ಯ ಈಗ ಉತ್ಸವ ಆಚರಿಕೊಳ್ಳುತ್ತಿದ್ದಾರೆ: ವಿ.ಸೋಮಣ್ಣ

    ರಾಯಚೂರು: ಮಹಾತ್ಮರ ಜನ್ಮ ದಿನವನ್ನು ಉತ್ಸವವನ್ನಾಗಿ ನಾವು ಆಚರಿಸಿದ್ದೇವೆ. ತುಮಕೂರಿನ ಶಿವಕುಮಾರ ಸ್ವಾಮಿಜೀಯವರ ಜನ್ಮೋತ್ಸವ ಮಾಡಿದ್ದೇನೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರ ನಡುವಳಿಕೆಗಳು ಈ ಹಿಂದೆ ಭಿನ್ನವಾಗಿದ್ದವು ಎಂದು ವಸತಿ ಸಚಿವ ವಿ.ಸೋಮಣ್ಣ ಸಿದ್ದರಾಮೋತ್ಸವಕ್ಕೆ ಪರೋಕ್ಷವಾಗಿ ಟಾಂಗ್ ಕೊಟ್ಟರು.

    ಮಾನ್ವಿಯಲ್ಲಿ ಶಾಸಕ ಶಿವನಗೌಡ ನಾಯಕ್ ಹುಟ್ಟುಹಬ್ಬ ನಿಮಿತ್ತ ಆಯೋಜಿಸಿರುವ ಶಿವಾಭಿಮಾನ ಕಾರ್ಯಕ್ರಮ ಹಿನ್ನೆಲೆ ವಿ.ಸೋಮಣ್ಣ ಜಿಲ್ಲೆಗೆ ಆಗಮಿಸಿದ್ದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಚರಣೆ, ವೈಭವಗಳನ್ನು ಸಿದ್ದರಾಮಯ್ಯ ಅವರು ಇಷ್ಟ ಪಡುತ್ತಿರಲಿಲ್ಲ. ಈಗ ತಮ್ಮ 75ನೇ ವರ್ಷದ ಜನ್ಮ ದಿನೋತ್ಸವ ಆಚರಣೆಗೆ ಮುಂದಾಗಿದ್ದಾರೆ. ಅವರಿಗೆ ಒಳ್ಳೆಯದಾಗಲಿ ನಾನು ಶುಭ ಕೋರುತ್ತೇನೆ ಎಂದರು. ಇದನ್ನೂ ಓದಿ: ನೋಡ ನೋಡುತ್ತಿದ್ದಂತೆ ಶಿವಮೊಗ್ಗ ಬೀದಿಯಲ್ಲೇ ಬರ್ಬರ ಕೊಲೆ 

    ಸಿದ್ದರಾಮಯ್ಯ ಅವರ ಉತ್ಸವ ಆಗಲಿ ನಮಗೇನು? ಅವರ ಕಾರ್ಯಕರ್ತರು ಬರ್ತಾರೆ, ನಮ್ಮವರು ನಾಲ್ಕು ಜನ ಹೋಗ್ತಾರೆ. ಅಲ್ಲಿ ನೋಡ್ಕೊಂಡು ಬರ್ತಾರೆ. ಯಾರ್ಯಾರನ್ನ ಕರೆದುಕೊಂಡು ಬರಬೇಕೋ ಕರಕೊಂಡಬರ್ತಾರೆ. ಅವರಲ್ಲಿ ಯಾರ್ಯಾರು ಸ್ವಲ್ಪ ಬುದ್ಧಿವಂತರು ಇದಾರೋ ಅವರನ್ನು ಕರೆದುಕೊಂಡು ಬರೋಕೆ ಸ್ಕೀಮ್ ಹಾಕ್ತಿವಿ ಎಂದು ತಿಳಿಸಿದರು.

    ಸಿದ್ದರಾಮಯ್ಯ ಅವರು ಈ ರಾಜ್ಯದ ಒಬ್ಬ ನಾಯಕರು. ಅವರಿಗೆ ಒಳ್ಳೆಯದಾಗಲಿ ಇನ್ನೊಂದು ಸ್ವಲ್ಪ ಸರಿಹೋದರೆ ಎಲ್ಲಾ ಸರಿಹೋಗುತ್ತೆ. ಅವರವರೇ ಮಾತನಾಡಿಕೊಳ್ಳುತ್ತಿದ್ದಾರೆ. ಸಿದ್ದರಾಮೋತ್ಸವಕ್ಕೆ ನಮ್ಮದು ಪರಾನೂ ಇಲ್ಲ, ವಿರೋಧಾನೂ ಇಲ್ಲ ಎಂದು ಹೇಳಿದರು. ಇದನ್ನೂ ಓದಿ: ಡಿಕ್ಕಿ ಹೊಡೆದು ಆಟೋ ಮೇಲೆಯೇ ಬಿತ್ತು ಕಾರು – ಮೂವರು ಸ್ಥಳದಲ್ಲಿಯೇ ಸಾವು

    Live Tv
    [brid partner=56869869 player=32851 video=960834 autoplay=true]

  • RRನಗರ ಗ್ರೇಡ್ ಸೆಪರೇಟರ್ ಕಾಮಗಾರಿಗಳಿಗೆ ಶಂಕುಸ್ಥಾಪನೆ: ಕಾಲಮಿತಿಯಲ್ಲಿ ಪೂರ್ಣ- ಸಿಎಂ ಭರವಸೆ

    RRನಗರ ಗ್ರೇಡ್ ಸೆಪರೇಟರ್ ಕಾಮಗಾರಿಗಳಿಗೆ ಶಂಕುಸ್ಥಾಪನೆ: ಕಾಲಮಿತಿಯಲ್ಲಿ ಪೂರ್ಣ- ಸಿಎಂ ಭರವಸೆ

    ಬೆಂಗಳೂರು: ಅಭಿವೃದ್ಧಿಗೆ ಕೈಗೊಂಡಿರುವ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

    ಇಂದು ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾಕ್ಷೇತ್ರ ವ್ಯಾಪ್ತಿಯ ಆರ್.ಆರ್.ನಗರ ಆರ್ಚ್ ಬಳಿ ಗ್ರೇಡ್ ಸಪರೇಟರ್ ಕಾಮಗಾರಿಗೆ ಬೊಮ್ಮಾಯಿ ಅವರು ಶಂಕುಸ್ಥಾಪನೆ ಮಾಡಿದರು. ಹೊಸಕೇರಹಳ್ಳಿ ಮತ್ತು ಕೆಂಚೇನಹಳ್ಳಿ ಕೆರೆಗಳಲ್ಲಿ ಒಳಚರಂಡಿ ತ್ಯಾಜ್ಯ ನೀರನ್ನು ತಿರುಗಿಸುವ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು. ಇದನ್ನೂ ಓದಿ: ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಬಾಲಕಾರ್ಮಿಕ ಪದ್ಧತಿಯನ್ನು ಹೋಗಲಾಡಿಸೋಣ: ನ್ಯಾಯಾಧೀಶ 

    ವಾಹನ ದಟ್ಟಣೆ ಸಮಸ್ಯೆಗೆ ಪರಿಹಾರ
    ಆರ್.ಆರ್.ನಗರ ಬಹಳ ಪ್ರಮುಖವಾದ, ಜನದಟ್ಟಣೆ ಹಾಗೂ ವಾಹನದಟ್ಟಣೆ ಇರುವ ಜಂಕ್ಷನ್. ಕೆಂಗೇರಿಯಿಂದ ಬೆಂಗಳೂರಿನ ಟೌನ್‍ಹಾಲ್ ವರೆಗೆ ಸಂಚಾರ ದಟ್ಟಣೆ ಇದೆ. ಗ್ರೇಡ್ ಸಪರೇಟರ್ ಕೆಲಸದಿಂದ ಕೇವಲ ಆರ್.ಆರ್.ನಗರಕ್ಕೆ ಮಾತ್ರವಲ್ಲದೇ ಬೆಂಗಳೂರಿನ ವಾಹನ ದಟ್ಟಣೆಯ ಸಮಸ್ಯೆಗೆ ಪರಿಹಾರ ಕೊಡುವ ಕೆಲಸವನ್ನು ಮಾಡಲಾಗಿದೆ.

    ಬೆಂಗಳೂರು-ಮೈಸೂರು ರಸ್ತೆ ಎಂಟು ಪಥದ ರಸ್ತೆಯನ್ನಾಗಿ ಮಾಡುವ ಕಾಮಗಾರಿ 4-5 ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಈ ಜಂಕ್ಷನ್ ಮುಗಿದರೆ ಬೆಂಗಳೂರಿನ ಒಳಗೆ ಪ್ರವೇಶ ಮಾಡಿದರೆ ನೇರವಾಗಿ ಟೌನ್‍ಹಾಲ್ ವರೆಗೆ ಯಾವುದೇ ಆತಂಕವಿಲ್ಲದೇ ಹೋಗಬಹುದಾಗಿದೆ. ಇದು ಅತೀ ಉದ್ದನೆಯ ಸಿಗ್ನಲ್ ಫ್ರೀ ಕಾರಿಡಾರ್ ಆಗಲಿದೆ. ಅತ್ಯುತ್ತಮವಾಗಿ ಯೋಜಿತವಾದ ಕಾರ್ಯಕ್ರಮವಾಗಿದೆ ಎಂದರು.

    ಬೆಂಗಳೂರಿನ ಅಭಿವೃದ್ಧಿಗೆ ವಿಶೇಷ ಒತ್ತು
    ಉತ್ತರಹಳ್ಳಿಯಿಂದ ದಕ್ಷಿಣದವರೆಗೂ ಸಂಪರ್ಕ ಕಲ್ಪಿಸುವ ರಾಜರಾಜೇಶ್ವರಿ ನಗರ ಬೃಹತ್ ಪ್ರಮಾಣದಲ್ಲಿ ಬೆಳೆದು ಅತ್ಯಂತ ಪ್ರತಿಷ್ಠಿತ ಬಡಾವಣೆ ಎನಿಸಿದೆ. ನಿಗದಿತ ಸಮಯದಲ್ಲಿ, ಉತ್ತಮ ಗುಣಮಟ್ಟದ ಕಾಮಗಾರಿಯಾಗಬೇಕು. ನಮ್ಮೆಲ್ಲರ ಯೋಜನೆ ಮೀರಿ ಬೆಂಗಳೂರು ಬೆಳೆಯುತ್ತಿದೆ. ಅದಕ್ಕಾಗಿ ರಸ್ತೆಗಳು ಸಂಚಾರದ ಬಗ್ಗೆ ವಿಶೇಷ ಯೋಜನೆ ಮಾಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ:  ಅನುಮತಿ ಪಡೆಯದೇ ಜಾಹೀರಾತು: ಇಬ್ಬರು ಅಭ್ಯರ್ಥಿಗಳ ವಿರುದ್ಧ FIR ದಾಖಲು 

    ಸ್ಯಾಟಿಲೈಟ್ ಟೌನ್ ರಿಂಗ್ ರೋಡ್‍ಗೂ ಸಹ ಪ್ರಧಾನಮಂತ್ರಿಗಳು ಜೂನ್ 21 ರಂದು ಅಡಿಗಲ್ಲು ಹಾಕುತ್ತಿದ್ದಾರೆ. ಪೆರಿಫೆರಲ್ ರಿಂಗ್ ರೋಡ್, ಸಬ್ ಅರ್ಬನ್ ರೈಲು ಕಾಮಗಾರಿಗಳಿಗೆ ಅಡಿಗಲ್ಲು ಹಾಕಲಾಗುತ್ತಿದೆ. ಇದರಿಂದ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಬಹುದಾಗಿದೆ. ಈ ಬಾರಿಯ ಬಜೆಟ್‍ನಲ್ಲಿ ಪ್ರತಿ ವಾರ್ಡಿಗೆ ಒಂದು ‘ನಮ್ಮ ಕ್ಲಿನಿಕ್’ ಸ್ಥಾಪನೆ, ಬೆಂಗಳೂರಿನ ಶಾಲೆಗಳ ಸಮಗ್ರ ಅಭಿವೃದ್ಧಿ, ನಗರದ ಆರೋಗ್ಯ ಸೇವೆಗಳಿಗೆ ವಿಶೇಷ ಇಲಾಖೆ ರೂಪಿಸಿ ನಿರ್ವಹಿಸಲು ಯೋಜನೆ, ಕೆರೆ, ಉದ್ಯಾನ, ಕೊಳಚೆ ಪ್ರದೇಶದ ಜನರಿಗೆ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದರು.

    ಈ ಸಂದರ್ಭದಲ್ಲಿ ಸಚಿವರಾದ ವಿ.ಸೋಮಣ್ಣ, ಆರ್.ಅಶೋಕ್, ಮುನಿರತ್ನ ಮತ್ತು ಇತರರು ಉಪಸ್ಥಿತರಿದ್ದರು.

     

  • ಒಂದೇ ವೇದಿಕೆಯಲ್ಲಿ ಮತ್ತೆ ಮುಖಾಮುಖಿಯಾದ ಡಿ.ಕೆ.ಸುರೇಶ್, ಅಶ್ವಥ್ ನಾರಾಯಣ

    ಒಂದೇ ವೇದಿಕೆಯಲ್ಲಿ ಮತ್ತೆ ಮುಖಾಮುಖಿಯಾದ ಡಿ.ಕೆ.ಸುರೇಶ್, ಅಶ್ವಥ್ ನಾರಾಯಣ

    ಬೆಂಗಳೂರು: ಇತ್ತೀಚೆಗಷ್ಟೇ ರಾಮನಗರದಲ್ಲಿ ನಡೆದ ಕಾರ್ಯಕ್ರಮವೊಂದರ ವೇದಿಕೆಯಲ್ಲಿ ಸಿಎಂ ಎದುರೇ ಕಿತ್ತಾಡಿಕೊಂಡಿದ್ದ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಹಾಗೂ ಬಿಜೆಪಿ ಸಚಿವ ಅಶ್ವಥ್ ನಾರಾಯಣ ಇಂದು ಮತ್ತೇ ಒಂದೇ ವೇದಿಕೆಯಲ್ಲಿ ಮುಖಾಮುಖಿಯಾದರು.

    ಇತ್ತೀಚೆಗೆ ನಡೆದಿದ್ದ ಸಿಎಂ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರನ್ನು ಕಡೆಗಣಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿ ಡಿ.ಕೆ.ಸುರೇಶ್ ವೇದಿಕೆಯಲ್ಲೇ ಗಲಾಟೆ ಮಾಡಿದ್ದರು. ಸ್ಥಳೀಯ ಪ್ರತಿನಿಧಿಗಳು ಬರುವ ಮೊದಲೇ ಅಂಬೇಡ್ಕರ್ ಪ್ರತಿಮೆ ಅನಾವರಣಗೊಳಿಸಿದ ಸಿಎಂ ನಡೆಯನ್ನು ಸಂಸದ ಡಿ.ಕೆ.ಸುರೇಶ್ ತೀವ್ರವಾಗಿ ವಿರೋಧಿಸಿದ್ದರು. ಸಚಿವ ಅಶ್ವಥ್ ನಾರಾಯಣ ಅವರು ಮಾತನಾಡುತ್ತಿದ್ದಂತೆ ಮೈಕ್ ಕಸಿದುಕೊಂಡು ಗದ್ದಲ ಸೃಷ್ಟಿಸಿದ್ದರು. ಇದೀಗ ಮತ್ತೆ ಒಂದೇ ವೇದಿಕೆ ಹಂಚಿಕೊಂಡಿರುವುದು ರಾಜಕೀಯ ರಂಗದಲ್ಲಿ ಚರ್ಚೆಗೆ ಗ್ರಾಸವಾಗಿದೆ.

    ಸಚಿವ ಮುನಿರತ್ನ ಅವರ ನೇತೃತ್ವದಲ್ಲಿ ನಿರ್ಮಿಸಲಾಗುತ್ತಿರುವ ಜಿ-ಪ್ಲಸ್ ಮನೆಗಳ ನಿರ್ಮಾಣ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಒಂದೇ ವೇದಿಕೆ ಹಂಚಿಕೊಂಡಿದ್ದಾರೆ. ಜೊತೆಗೆ ಡಿ.ಕೆ.ಸುರೇಶ್ ಕೆಲ ಸಮಯ ಸಿಎಂ ಬಸವರಾಜ ಬೊಮ್ಮಾಯಿ ಜೊತೆಗೆ ಮಾತುಕತೆ ನಡೆಸಿದರು. ಇದನ್ನೂ ಓದಿ: ಕಾರ್ಯಕ್ರಮದಲ್ಲಿ ಸಿಎಂ ಎದುರೇ ಡಿಕೆ ಸುರೇಶ್‌, ಅಶ್ವಥ್‌ ನಾರಾಯಣ ನಡುವೆ ಜಟಾಪಟಿ

    ಕಾರ್ಯಕ್ರಮದಲ್ಲಿ ಸಚಿವ ಮುನಿರತ್ನ ಸಿಎಂಗೆ ಬೃಹತ್ ಗುಲಾಬಿ ಹೂವಿನ ಹಾರ ಹಾಕಿ ಸನ್ಮಾನಿಸಿದರು. ಇದೇ ವೇದಿಕೆಯಲ್ಲಿ ಅಶ್ವಥ್ ನಾರಾಯಣ ಅವರಿಗೆ ಬೃಹತ್ ಹಾರ ಹಾಕಿ, ಮೈಸೂರು ಪೇಟ ತೊಡಿಸಿ ಸನ್ಮಾನಿಸಿದರು. ಈ ವೇಳೆ ಅಶ್ವಥ್ ನಾರಾಯಣರ ಕಡೆಯೇ ಡಿ.ಕೆ.ಸುರೇಶ್ ದಿಟ್ಟಿಸಿ ನೋಡುತ್ತಿರುವ ದೃಶ್ಯ ಕಂಡುಬಂತು. ನಂತರ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಅವರಿಗೂ ಶಾಲು ಹೊದಿಸಿ ಹೂಗುಚ್ಛ ನೀಡಿ ಸನ್ಮಾನಿಸಿದ್ದಾರೆ.

    1,588 ಮನೆಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ:
    ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಇಲ್ಲಿನ ಲಕ್ಷ್ಮಿದೇವಿನಗರ ಬಸ್‌ನಿಲ್ದಾಣದ ಎದುರು ಸಚಿವ ಮುನಿರತ್ನ ಅವರ ನೇತೃತ್ವದಲ್ಲಿ ನಿರ್ಮಿಸಲಾಗುತ್ತಿರುವ 1,588 ಜಿ+4 ಮನೆಗಳ ನಿರ್ಮಾಣಕ್ಕೆ ಸಿಎಂ ಬೊಮ್ಮಾಯಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಬಳಿಕ ಸಿಎಂ, ಫಲಾನುಭವಿಗಳಿಗೆ ಮನೆಗಳ ಹಕ್ಕುಪತ್ರಗಳ ವಿತರಣೆ ಮಾಡಿದ್ದಾರೆ. ಇದೇ ಕಾರ್ಯಕ್ರಮದಲ್ಲಿ ಸಚಿವರಾದ ಮುನಿರತ್ನ, ವಿ.ಸೋಮಣ್ಣ, ಸಂಸದ ಡಿ.ಕೆ.ಸುರೇಶ್, ಸಿ.ಎನ್.ಅಶ್ವಥ್ ನಾರಾಯಣ ಸಹ ಭಾಗಿಯಾಗಿದ್ದರು. ಇದನ್ನೂ ಓದಿ: ಖಾಸಗಿ ಶಾಲೆಗಳಿಗೆ ನಮ್ಮ ಶಾಲೆಗಳು ಪೈಪೋಟಿ ಕೊಡುವಂತೆ ಕೆಲಸ ಮಾಡುತ್ತೇವೆ: ಶ್ರೀರಾಮುಲು

    ಶಂಕುಸ್ಥಾಪನೆ ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ವಿ.ಸೋಮಣ್ಣ, ಇನ್ನೊಂದೇ ವರ್ಷದಲ್ಲಿ ಇಲ್ಲಿನ ಮನೆಗಳ ಕಾಮಗಾರಿ ಮುಗಿಸುತ್ತೇವೆ. ಇಲ್ಲಿನ ಸುತ್ತಮುತ್ತಲ ಪ್ರದೇಶದಲ್ಲಿ ವಾಸಿಸುತ್ತಿರುವ 4 ಸಾವಿರ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಲಾಗುವುದು. ಬೊಮ್ಮಾಯಿ ಅವರು ಸಿಎಂ ಆದ್ಮೇಲೆ 40 ಸಾವಿರ ಮನೆಗಳನ್ನು ವಿತರಣೆ ಮಾಡಿದ್ದು, ಜೊತೆಗೆ ಬೆಂಗಳೂರಿನಲ್ಲಿ 52 ಸಾವಿರ ಮನೆಗಳ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಈ ಪೈಕಿ ಮುಂದಿನ ತಿಂಗಳಲ್ಲೇ 5 ಸಾವಿರ ಮನೆಗಳನ್ನು ವಿತರಣೆ ಮಾಡಲಿದ್ದೇವೆ ಎಂದು ಭರವಸೆ ನೀಡಿದ್ದಾರೆ.

    ಮುನಿರತ್ನಗೆ ಹಾಸ್ಯ ಚಟಾಕಿ: ಸಚಿವ ವಿ.ಸೋಮಣ್ಣ ವೇದಿಕೆಯಲ್ಲಿ ಮಾತನಾಡುತ್ತಿದ್ದ ವೇಳೆ ಸಿಎಂ ಹಾಗೂ ಮುನಿರತ್ನ ನಡುವೆ ಮಾತುಕತೆ ನಡೆಯುತ್ತಿತ್ತು. ಆಗ `ಲೋ ಮುನಿ ಸುಮ್ನಿರಪ್ಪ. ಸಿಎಂ ನಿನ್ ಮಾತು ಕೇಳ್ಬೇಕೋ ನನ್ ಮಾತು ಕೇಳ್ಬೇಕೋ?’ ಎಂದು ಸಚಿವ ವಿ ಸೋಮಣ್ಣ ಹಾಸ್ಯ ಮಾಡಿದರು. ಇದನ್ನೂ ಓದಿ: ಸಿದ್ದರಾಮಯ್ಯರ ದಲಿತ ಪರ ಕಾಳಜಿಯ ಪೊರೆ ಕಳಚುತ್ತಿದೆ: ಬಿಜೆಪಿ ಟೀಕೆ

    ಇದಕ್ಕೆ ಪ್ರತಿಯಾಗಿ ಮಾತನಾಡಿದ ಸಚಿವ ಮುನಿರತ್ನ, ಸೋಮಣ್ಣ ಮತ್ತು ನನ್ನ ಸಂಬಂಧ ಒಬ್ಬ ಗುತ್ತಿಗೆದಾರ ಮತ್ತು ಒಬ್ಬ ಪಾಲಿಕೆ ಸದಸ್ಯನ ಸಂಬಂಧ. ಅವರು ನಾನೆಲ್ಲೇ ಇದ್ರೂ ಚೆನ್ನಾಗಿರು ಅನ್ನೋರು. ತಾಯಿ ರಾಜೇಶ್ವರಿ ಆಶೀರ್ವಾದದಿಂದ ಬೊಮ್ಮಾಯಿಯವರ ಸಂಪುಟದಲ್ಲಿ ಅವರ ಜತೆ ಸಚಿವನಾಗಿ ಕೂತಿದೀನಿ ಎಂದು ನೆನೆದಿದ್ದಾರೆ.

    ವೇದಿಕೆಯಲ್ಲಿ ಮಾತನಾಡಿದ ಡಿ.ಕೆ.ಸುರೇಶ್, ಸೋಮಣ್ಣ ಅವರು ಹೊಸ ಮನೆ ಕಟ್ಟಿಸಿಕೊಡ್ತೀವಿ ಅಂತಿದ್ದಾರೆ. ಇಲ್ಲಿದ್ದವರನ್ನು ಖಾಲಿ ಮಾಡಿಸಿದ್ದಾರೆ. ಅವರು ಇಲ್ಲಿ ಹೇಗೋ ಬದುಕುತ್ತಿದ್ರು. ಆದರೀಗ ಅವರಿಗೆ ಎಲ್ಲಿ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ? ಯಾರು ಬಾಡಿಗೆ ಕೊಡ್ತಾರೆ ಎಂದು ಪ್ರಶ್ನಿಸಿದ್ದಾರೆ.

  • ನಾನು ಸುಮ್ಮನೇ ಮೈ ಪರಚಿಕೊಳ್ಳುವ ವ್ಯಕ್ತಿಯಲ್ಲ: ಸಿದ್ದು ವಿರುದ್ಧ ಸೋಮಣ್ಣ ಕಿಡಿ

    ನಾನು ಸುಮ್ಮನೇ ಮೈ ಪರಚಿಕೊಳ್ಳುವ ವ್ಯಕ್ತಿಯಲ್ಲ: ಸಿದ್ದು ವಿರುದ್ಧ ಸೋಮಣ್ಣ ಕಿಡಿ

    ಮೈಸೂರು: ನಾನು ಸುಮ್ಮನೇ ಮೈ ಪರಚಿಕೊಳ್ಳುವ ವ್ಯಕ್ತಿಯಲ್ಲ ಎಂದು ವಸತಿ ಸಚಿವ ವಿ.ಸೋಮಣ್ಣ ವಿಪಕ್ಷ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ತಿರುಗೇಟು ಕೊಟ್ಟರು.

    ವಸತಿ ಇಲಾಖೆಯಿಂದ ಒಂದೇ ಒಂದು ಮನೆ ಆಗಿಲ್ಲ ಎಂಬ ಸಿದ್ದರಾಮಯ್ಯ ಅವರ ಆರೋಪಕ್ಕೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಸತಿ ಇಲಾಖೆಯಿಂದ ಕಟ್ಟಿಸಿರುವ ಮನೆ ನೋಡಲು ಸಿದ್ದರಾಮಯ್ಯ ಅವರಿಗೆ ಬಹಿರಂಗ ಆಹ್ವಾನ ಕೊಟ್ಟರು. ನಾನು ಎಷ್ಟು ಮನೆ ಕಟ್ಟಿದ್ದೇನೆ ಎಂಬುದನ್ನ ಇಡೀ ರಾಜ್ಯ ಸುತ್ತಿ ಸಿದ್ದರಾಮಯ್ಯ ಅವರಿಗೆ ತೋರಿಸಲು ನಾನು ಸಿದ್ಧ ಎಂದು ಸವಾಲು ಹಾಕಿದರು. ಇದನ್ನೂ ಓದಿ: ಸೌತ್‌ ಸಿನಿಮಾದಿಂದ ಬಾಲಿವುಡ್‌ನಲ್ಲಿ ಅಭದ್ರತೆ – ಖಡಕ್‌ ಉತ್ತರ ಕೊಟ್ಟ ನವಾಜುದ್ದೀನ್ ಸಿದ್ದಿಕಿ

    Siddaramaiah

    ನಾನು ಏನೇನು ಅಭಿವೃದ್ಧಿ ಮಾಡಿದ್ದೇನೆ ಎಂದು ಅವರಿಗೆ ತೋರಿಸುತ್ತೇನೆ. ನಾನು ಏನು ಮಾಡಿದ್ದೇನೆ ಎಂಬುದು ಜನರಿಗೆ ಗೊತ್ತಿದೆ. ಸಿದ್ದರಾಮಯ್ಯ ಅವರು ಪದೇ-ಪದೇ ಯಾಕೆ ಈ ಮಾತು ಹೇಳುತ್ತಿದ್ದಾರೆ ಅಂತಾ ಗೊತ್ತಿಲ್ಲ. ನಾನು ಸುಮ್ಮನೇ ಮೈ ಪರಚಿಕೊಳ್ಳುವ ವ್ಯಕ್ತಿಯಲ್ಲ ಎಂದು ಕಿಡಿಕಾರಿದರು.

    ರಾಜ್ಯ ಸರ್ಕಾರ ಸತ್ತು ಹೋಗಿದೆ ಎನ್ನುವ ಸಿದ್ದರಾಮಯ್ಯ ಅವರ ಹೇಳಿಕೆಗೆ ತೀರುಗೇಟು ಕೊಟ್ಟ ಅವರು, ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿ ಆಗಿದ್ದವರು. ಬಹಳ ಜವಾಬ್ದಾರಿಯಿಂದ ಮಾತನಾಡುತ್ತಾರೆ ಎಂದು ನಾವು ತಿಳಿದುಕೊಂಡಿದ್ದೆವು. ಆದರೆ ಅವರ ಮಾತುಗಳಿಂದ ಅವರು ಯಾವ ರೀತಿಯ ಅನುಭವಸ್ಥರು ಎಂಬುದು ಗೊತ್ತಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಸಿಎಂ ಬೊಮ್ಮಯಿ ಅವರ ನೇತೃತ್ವದ ಸರ್ಕಾರ ತಪ್ಪು ಮಾಡಿದವರಿಗೆ ಶಿಕ್ಷೆ ನೀಡುತ್ತಾ, ಉತ್ತಮ ಆಡಳಿತ ನೀಡುತ್ತಿದೆ. ಎಲ್ಲ ಆರೋಪಗಳಿಗೂ ಕಾಲವೇ ಉತ್ತರ ನೀಡಲಿದೆ ಎಂದರು. ಇದನ್ನೂ ಓದಿ:  ಪ್ರೇಯಸಿ ಸಹೋದರನನ್ನು ಸಾಯಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡ 

  • ಧರ್ಮರಾಯ ದೇವಾಲಯ ಆಸ್ತಿ ರಕ್ಷಣೆಗೆ ಸರ್ಕಾರ ಬದ್ಧ: ಸೋಮಣ್ಣ

    ಧರ್ಮರಾಯ ದೇವಾಲಯ ಆಸ್ತಿ ರಕ್ಷಣೆಗೆ ಸರ್ಕಾರ ಬದ್ಧ: ಸೋಮಣ್ಣ

    ಬೆಂಗಳೂರು: ಧರ್ಮರಾಯ ದೇವಾಲಯದ ಜಮೀನು ಒತ್ತುವರಿ ಮಾಡಿಕೊಂಡವರ ಮೇಲೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಅಂತ ಸಚಿವ ಸೋಮಣ್ಣ ಭರವಸೆ ನೀಡಿದ್ದಾರೆ. ಬಿಜೆಪಿ ರವಿಕುಮಾರ್ ಹಾಗೂ ಕಾಂಗ್ರೆಸ್‌ನ ಪಿ.ಆರ್. ರಮೇಶ್ ಪ್ರಶ್ನೋತ್ತರ ಅವಧಿಯಲ್ಲಿ ಪ್ರಶ್ನೆ ಕೇಳಿದರು. ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಪರವಾಗಿ ಸಚಿವ ಸೋಮಣ್ಣ ಉತ್ತರ ನೀಡಿ,ದೇವಾಲಯ ಆಸ್ತಿ ಉಳಿಸೋದು ನಮ್ಮ ಸರ್ಕಾರದ ಬದ್ಧತೆ ಅಂತ ತಿಳಿಸಿದರು.

    ಬಿಜೆಪಿ ರವಿಕುಮಾರ್ ಮಾತನಾಡಿ, ಬೆಂಗಳೂರಿನ ಹಲಸೂರು ನೀಲಸಂದ್ರದ ಧರ್ಮರಾಯ ದೇವಾಲಯದ 15 ಎಕರೆ ಜಾಗ ಒತ್ತುವರಿ ಮಾಡಿಕೊಂಡಿದ್ದಾರೆ. ಜಾಗ ಒತ್ತುವರಿ ಮಾಡಿಕೊಂಡು ಮನೆಗಳ ನಿರ್ಮಾಣ ಮಾಡಿದ್ದಾರೆ. ಈ ಜಾಗ ಶಾಲೆ, ಕಾಲೇಜು ನಿರ್ಮಾಣಕ್ಕೆ ದಾನ ನೀಡಿದ್ದಾರೆ. ಕೂಡಲೇ ಒತ್ತವರಿ ಜಾಗ ತೆರವು ಮಾಡಬೇಕು. ಎಷ್ಟೇ ದೊಡ್ಡವರು ಇದ್ದರು ಕ್ರಮ ತಗೋಬೇಕು ಒತ್ತಾಯ ಮಾಡಿದರು. ಇದನ್ನೂ ಓದಿ: ಬಪ್ಪನಾಡಿನಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ – ಸಾಮರಸ್ಯ ಎತ್ತಿಹಿಡಿದ ಕ್ಷೇತ್ರದ ಆಡಳಿತ ಮಂಡಳಿ

    ಕಾಂಗ್ರೆಸ್‌ನ ಪಿ.ಆರ್. ರಮೇಶ್ ಮಾತನಾಡಿ, 800 ಎಕರೆ ಜಾಗ ಧರ್ಮರಾಯ ದೇವಾಲಯಕ್ಕೆ ಇತ್ತು. ಈಗ ಒಂದಿಂಚು ಜಾಗ ದೇವಾಲಯಕ್ಕೆ ಇಲ್ಲದ ಸ್ಥಿತಿ ನಿರ್ಮಾಣ ಆಗಿದೆ. ವ್ಯವಸ್ಥಿತವಾಗಿ ಈ ಜಾಗ ಒತ್ತುವರಿ ಮಾಡಿಕೊಂಡಿದ್ದಾರೆ. ಎಸಿ ಅವ್ರು ಸಚಿವರು ನಮ್ಮ ಜೇಬಿನಲ್ಲಿ ಇದ್ದಾರೆ ಅಂತಾರೆ.35 ಲಕ್ಷ ಸೆಕ್ಯುರಿಟಿ ಈ ಮನೆಗಳಿಗೆ ಇಟ್ಟಿದ್ದೇವೆ ಅಂತ ಇಲ್ಲಿನ ಮನೆಯವರು ಹೇಳ್ತಾರೆ. 216 ಜನ ಇಲ್ಲಿ ಒತ್ತುವರಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು. ಒತ್ತುವರಿ ತೆರವು ಮಾಡಬೇಕು ಅಂತ ಒತ್ತಾಯ ಮಾಡಿದರು.

    ಸಚಿವೆ ಶಶಿಕಲಾ ಜೊಲ್ಲೆ ಪರವಾಗಿ ಸಚಿವ ಸೋಮಣ್ಣ ಉತ್ತರ ನೀಡಿದರು. ಧರ್ಮರಾಯ ದೇವಾಲಯದ ಜಾಗ ಒತ್ತುವರಿ ಮಾಡಿದವರು ಯಾರು ಉದ್ದಾರ ಆಗಿಲ್ಲ. ಬಿಬಿಎಂಪಿ ಅದಕ್ಕೆ ಕುಂಟುತ್ತಾ ಸಾಗಿದೆ ಅಂತ ಉದಾಹರಣೆ ಕೊಟ್ಟರು.

    ಹಲಸೂರುನಲ್ಲಿ ಧರ್ಮರಾಯ ದೇವಾಲಯ 15 ಎಕರೆ 12 ಗುಂಟೆ ಜಾಗ ಇದೆ. ಇದ್ರಲ್ಲಿ 6 ಎಕರೆ ಜಾಗ ಒತ್ತುವರಿ ಆಗಿದೆ. 8 ಎಕರೆ ಖಾಲಿ ಜಾಗ ಹಾಗೇ ಇದೆ. 229 ಜನ ಒತ್ತುವರಿ ಮಾಡಿಕೊಂಡಿದ್ದಾರೆ. ಒತ್ತುವರಿ ಆಗಿರೋ ಜಾಗ ತೆರವು ಮಾಡೋ ಕೆಲಸ ಸರ್ಕಾರ ಮಾಡುತ್ತೆ. ಯಾರೇ ದೊಡ್ಡವರು ಆದರು ಕ್ರಮ ಗ್ಯಾರಂಟಿ ಅಂತ ತಿಳಿಸಿದರು.

    ಸದ್ಯ ಇಲ್ಲಿನ ಜಮೀನು ಕಾಯೋಕೆ 24 ಗಂಟೆ ಸೆಕ್ಯುರಿಟಿ ಹಾಕಲಾಗಿದೆ. ಒಬ್ಬ ಗನ್ ಮ್ಯಾನ್ ಕೂಡಾ ಸ್ಥಳದಲ್ಲಿ ಹಾಕಲಾಗಿದೆ. ದೇವಾಲಯ ಜಮೀನು ಉಳಿಯಬೇಕು. ಇದಕ್ಕೆ ನಮ್ಮ ಸರ್ಕಾರ ಕ್ರಮ ತೆಗೆದುಕೊಳ್ಳುತ್ತೆ ಅಂತ ತಿಳಿಸಿದರು. ಮಿನಿಸ್ಟರ್ ಜೇಬಲ್ಲಿ ಇದ್ದಾರೆ ಅಂತ ಹೇಳಿದ ಎಸಿ ಮೇಲೆ FIR ಹಾಕಿಸ್ತೇನೆ. ಈಗ ಇವೆಲ್ಲ ಮಾತು ನಡೆಯಲ್ಲ ಅಂತ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

  • ಸಚಿವ ಸೋಮಣ್ಣಗೆ ಸಂಕಷ್ಟ – ಏಪ್ರಿಲ್ 16ಕ್ಕೆ ವಿಚಾರಣೆಗೆ ಬರುವಂತೆ ಕೋರ್ಟ್ ಸಮನ್ಸ್

    ಸಚಿವ ಸೋಮಣ್ಣಗೆ ಸಂಕಷ್ಟ – ಏಪ್ರಿಲ್ 16ಕ್ಕೆ ವಿಚಾರಣೆಗೆ ಬರುವಂತೆ ಕೋರ್ಟ್ ಸಮನ್ಸ್

    ಬೆಂಗಳೂರು: ಅಕ್ರಮ ಆಸ್ತಿ ಆರೋಪದಲ್ಲಿ ಹಾಲಿ ಸಚಿವ ವಿ.ಸೋಮಣ್ಣಗೆ ಸಂಕಷ್ಟ ಎದುರಾಗಿದೆ. ಜನಪ್ರತಿನಿಧಿಗಳ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಎಸಿಬಿಯ ಬಿ ರಿಪೋರ್ಟ್ ತಿರಸ್ಕರಿಸಿದ ಲೋಕಾಯುಕ್ತ ಕೋರ್ಟ್, ಕ್ರಿಮಿನಲ್ ಕೇಸ್ ರಿಜಿಸ್ಟರ್ ಮಾಡಿ ಏಪ್ರಿಲ್ 16ಕ್ಕೆ ಖುದ್ದು ವಿಚಾರಣೆಗೆ ಹಾಜರಾಗುವಂತೆ ಸೋಮಣ್ಣಗೆ ಸಮನ್ಸ್ ನೀಡಿದೆ.

    ಸೋಮಣ್ಣ ಅವರು ಶಾಸಕರಾಗಿದ್ದ ವೇಳೆ ಆದಾಯ ಮೀರಿ ಆಸ್ತಿ ಗಳಿಸಿದ್ದಾರೆ ಎಂದು ಆರೋಪಿಸಿ ರಾಮಕೃಷ್ಣ ಎಂಬವರು 2013 ರಲ್ಲಿ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ಈ ಕುರಿತು ತನಿಖೆ ನಡೆಸುವಂತೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಆದೇಶ ಮಾಡಿದ್ದು, ಅದರಂತೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿದ್ದರು. ಬಳಿಕ ಸೋಮಣ್ಣ ಯಾವುದೇ ರೀತಿಯಲ್ಲಿ ಅಕ್ರಮ ಆಸ್ತಿ ಗಳಿಸಿಲ್ಲ ಎಂದು ಲೋಕಾಯುಕ್ತ ಪೊಲೀಸರು ಕೋರ್ಟ್‌ಗೆ ‘ಬಿ’ ವರದಿ ಸಲ್ಲಿಸಿದ್ದರು. ಇದನ್ನೂ ಓದಿ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ – ಸಂಕಷ್ಟದಲ್ಲಿ ಮುಜರಾಯಿ ಇಲಾಖೆಯ ಶಾಲೆ

    ಲೋಕಾಯುಕ್ತ ಪೊಲೀಸರ ಈ ವರದಿಯನ್ನು ತಿರಸ್ಕರಿಸಿರುವ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಇದೀಗ ಸಮನ್ಸ್ ಜಾರಿ ಮಾಡಿದೆ. ವಿ. ಸೋಮಣ್ಣ ಶಾಸಕರಾಗುವ ಮೊದಲಿನ ಆದಾಯ, ನಂತರದ ಆದಾಯ, ಗಳಿಸಿದ ಆಸ್ತಿಯ ಸೂಕ್ತ ವಿವರಗಳನ್ನು ಲೋಕಾಯುಕ್ತ ಪೊಲೀಸರು ತನಿಖಾ ವರದಿಯಲ್ಲಿ ಉಲ್ಲೇಖಿಸಿಲ್ಲ. ಹೀಗಾಗಿ ಲೋಕಾಯುಕ್ತ ಪೊಲೀಸರು ಅಸಮರ್ಥ ತನಿಖೆ ನಡೆಸಿದ್ದಾರೆ ಎಂದು ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ. ಇದನ್ನೂ ಓದಿ: ಲಾಲೂ ಪ್ರಸಾದ್ ಯಾದವ್ ಆರೋಗ್ಯದಲ್ಲಿ ಏರುಪೇರು – ದೆಹಲಿಯ ಏಮ್ಸ್‌ಗೆ ಶಿಫ್ಟ್‌

    ಶಾಸಕರಾಗಿದ್ದ ವಿ. ಸೋಮಣ್ಣ ವಿರುದ್ಧ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರನ್ನು ಸಲ್ಲಿಸಿದ್ದ ದೂರುದಾರ ವಿಚಾರಣೆಗೆ ಹಾಜರಾಗಿರಲಿಲ್ಲ. ದೂರುದಾರನ ನಡೆ ನೋಡಿ ಅನುಮಾನ ವ್ಯಕ್ತಪಡಿಸಿದ್ದ ನ್ಯಾಯಾಲಯ, ದೂರುದಾರನಿಗೆ ಎಚ್ಚರಿಕೆ ನೀಡಿತ್ತು. ಆ ಬಳಿಕ ರಾಮಕೃಷ್ಣ ಖಾಸಗಿ ದೂರನ್ನು ಸಲ್ಲಿಸಿದ್ದರು. ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು ಬಿ ವರದಿ ಸಲ್ಲಿಸಿ ಕೈ ತೊಳೆದುಕೊಂಡಿದ್ದರು. ಆದರೆ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಲೋಕಾಯುಕ್ತ ಪೊಲೀಸರ ತನಿಖೆಯನ್ನು ತಿರಸ್ಕರಿಸಿ ಸಮನ್ಸ್ ಜಾರಿಗೊಳಿಸಿದೆ.

  • ಆರೋಗ್ಯವಂತ ಮಕ್ಕಳು ದೇಶದ ಸಂಪತ್ತು, ಎರಡು ಹನಿ ಪೋಲಿಯೋ ಲಸಿಕೆ ಮಕ್ಕಳ ಜೀವ ರಕ್ಷಕ:  ವಿ.ಸೋಮಣ್ಣ

    ಆರೋಗ್ಯವಂತ ಮಕ್ಕಳು ದೇಶದ ಸಂಪತ್ತು, ಎರಡು ಹನಿ ಪೋಲಿಯೋ ಲಸಿಕೆ ಮಕ್ಕಳ ಜೀವ ರಕ್ಷಕ:  ವಿ.ಸೋಮಣ್ಣ

    ಬೆಂಗಳೂರು: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ಪಾಲಿಕೆ ಸೌಧ ಅವರಣದಲ್ಲಿ ಪಲ್ಸ್ ಪೋಲಿಯೋ ದಿನಾಚರಣೆ ಅಂಗವಾಗಿ ವಸತಿ ಸಚಿವರಾದ ವಿ.ಸೋಮಣ್ಣ 5 ವರ್ಷದ ಒಳಗಿನ ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆ ಹಾಕುವ ಮೂಲಕ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಿದರು.

    ಗೋವಿಂದರಾಜನಗರ ಮಂಡಲ ಬಿ.ಜೆ.ಪಿ.ಅಧ್ಯಕ್ಷರಾದ ವಿಶ್ವನಾಥಗೌಡ ಮತ್ತು ಆರೋಗ್ಯಾಧಿಕಾರಿ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಅವರು,  ಆರೋಗ್ಯವಂತ ಮಕ್ಕಳು ದೇಶದ ಸಂಪತ್ತು. ಪೋಲಿಯೋ ಒಂದು ಭಯಾನಕ ರೋಗ, ಈ ರೋಗ ಮಕ್ಕಳಲ್ಲಿ ಶಾಶ್ವತ ಅಂಗವಿಕಲತೆಯನ್ನು ಉಂಟುಮಾಡುತ್ತದೆ. 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಈ ರೋಗವು ಹೆಚ್ಚಾಗಿ ಕಂಡುಬರುತ್ತದೆ. ಭಾರತವನ್ನು ಪೋಲಿಯೋ ಮುಕ್ತವನ್ನಾಗಿಸಲು 1995ರಲ್ಲಿ ಪ್ರಾರಂಭವಾದ ಪಲ್ಸ್ ಪೋಲಿಯೋ ಅಭಿಯಾನ ಬಹಳಷ್ಟು ಪ್ರಗತಿಯನ್ನು ಕಂಡಿದ್ದು, ವಿಶ್ವ ಆರೋಗ್ಯ ಸಂಸ್ಥೆಯು 2014ರ ಮಾರ್ಚ್ 27ರಂದು ಭಾರತವನ್ನು ಪೋಲಿಯೋ ಮುಕ್ತ ರಾಷ್ಟ್ರವೆಂದು ಘೋಷಿಸಿದೆ. ದೇಶದಲ್ಲಿ ಹಾಗೂ ರಾಜ್ಯದಲ್ಲಿ ಕಳೆದ 10 ವರ್ಷಗಳಿಂದ ಯಾವುದೇ ಪೋಲಿಯೋ ವೈರಾಣು ಪತ್ತೆಯಾಗದಿರುವುದು ಬಹಳ ಸಂತಸದ ವಿಷಯ ಎಂದಿದ್ದಾರೆ. ಇದನ್ನೂ ಓದಿ: ಬೈಡನ್ ದೌರ್ಬಲ್ಯದಿಂದಲೇ ಈ ಅನಾಹುತವಾಗಿದೆ: ಟ್ರಂಪ್

    ಪೋಲಿಯೋ ಲಸಿಕಾ ಅಭಿಯಾನ ನಡೆಯಲಿದ್ದು, 5 ವರ್ಷದ ಒಳಗಿನ ಎಲ್ಲ ಮಕ್ಕಳಿಗೂ 2 ಹನಿ ಪಲ್ಸ್ ಪೋಲಿಯೋ ಲಸಿಕೆಯನ್ನು ಹಾಕಿಸಬೇಕು. ಈ ಲಸಿಕೆಯನ್ನು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಎಲ್ಲ ಆರೋಗ್ಯ ಕೇಂದ್ರ, ಅಂಗನವಾಡಿ, ಶಾಲೆ, ಆಸ್ಪತ್ರೆ, ಬಸ್ ನಿಲ್ದಾಣ, ಹಾಗೂ ಸಂಚಾರಿ ಘಟಕಗಳಲ್ಲಿ ಇಂದು ಬೆಳಿಗ್ಗೆ ಗಂಟೆ 8 ರಿಂದ ಸಂಜೆ 5ರ ವರೆಗೆ ನೀಡಲಾಗುವುದು.ಇದಾದ ಬಳಿಕ ಸ್ವಯಂಸೇವಕರು ಪ್ರತೀ ಮನೆಗೆ ಭೇಟಿ ಲಸಿಕೆ ಹಾಕಲಾಗುತ್ತದೆ. ಎರಡು ಹನಿ ಪೋಲಿಯೋ ಲಸಿಕೆ ಮಕ್ಕಳಿಗೆ ಹಾಕಿಸುವುದರಿಂದ ಮಕ್ಕಳ ಜೀವ ರಕ್ಷಣೆ ಸಿಗುವುದು ಎಂದು ಹೇಳಿದರು. ಇದನ್ನೂ ಓದಿ: ಮಹಿಳೆಯರ ಸುರಕ್ಷತೆಗೆ ಏನು ಮಾಡದ ಯೋಗಿ ಆದಿತ್ಯನಾಥ ತೀರ್ಥಯಾತ್ರೆಗೆ ಹೊರಡಲಿ: ಜಯಾ ಬಚ್ಚನ್

     

  • ಸರ್ಕಾರದ ಯೋಜನೆಗಳು ಯಶಸ್ವಿಯಾಗಲು ಜನರ, ಅಧಿಕಾರಿಗಳ ಸಹಕಾರ ಮುಖ್ಯ: ವಿ.ಸೋಮಣ್ಣ

    ಸರ್ಕಾರದ ಯೋಜನೆಗಳು ಯಶಸ್ವಿಯಾಗಲು ಜನರ, ಅಧಿಕಾರಿಗಳ ಸಹಕಾರ ಮುಖ್ಯ: ವಿ.ಸೋಮಣ್ಣ

    ಬೆಂಗಳೂರು: ಡಾ.ರಾಜ್‍ಕುಮಾರ್ ವಾರ್ಡ್‍ನ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಭೂಗತ ಕೇಬಲ್ ಆಗಿ ಬದಲಾವಣೆಗೊಂಡಿರುವ ಕೆಪಿಟಿಸಿಎಲ್ ಹೈಟೆನ್ಷನ್ ಲೈನ್‍ನನ್ನು ತೆರವುಗೊಳಿಸುವ ಕಾಮಗಾರಿ ಪೂಜೆಯನ್ನು ದೀಪ  ಬೆಳಗಿಸಿ ವಸತಿ ಸಚಿವರಾದ ವಿ.ಸೋಮಣ್ಣ ಚಾಲನೆ ನೀಡಿದರು.

    ಇದೇ ಸಂದರ್ಭದಲ್ಲಿ ಮಾತನಾಡಿದ ಸೋಮಣ್ಣ ಅವರು, ಸರ್ಕಾರದ ಯೋಜನೆಗಳು ಯಶಸ್ವಿಯಾಗಲು ಅಧಿಕಾರಿಗಳ ಮತ್ತು ಜನರ ಸಹಕಾರ ಮುಖ್ಯ. ಶ್ರೀ ಶಿವಕುಮಾರ ಸ್ವಾಮೀಜಿ, ಬಾಲಗಂಗಾಧರ ಸ್ವಾಮೀಜಿ ಅವರ ಆಶೀರ್ವಾದದಿಂದ ಅಭಿವೃದ್ದಿ ಕೆಲಸ ಮಾಡಲಾಗುತ್ತಿದೆ ಎಂದು ವಿವರಿಸಿದರು. ಇದನ್ನೂ ಓದಿ: ಬೊಮ್ಮಾಯಿ ಹೇಳಿದ್ದೆ ವೇದ ವಾಕ್ಯನಾ? ಬೊಮ್ಮಾಯಿಗಿಂತ ಹಿರಿಯ ನಾನು: ಸಿದ್ದರಾಮಯ್ಯ

    ಜನರ ಸಹಕಾರದಿಂದ 3 ವರ್ಷದಲ್ಲಿ ನೂರಾರು ಅಭಿವೃದ್ಧಿ ಕೆಲಸಗಳು ನಡೆದಿದೆ. 7 ಎಕರೆ ಬಾಳಯ್ಯನ ಕೆರೆ ಭೂಕಬಳಿಕೆದಾರರಿಂದ ಬಿಡಿಸಿ, ಬಾಲಗಂಗಾಧರನಾಥ ಸ್ವಾಮೀಜಿ ಆಶೀರ್ವಾದದಿಂದ ಉಳಿಸಲಾಯಿತು. 2 ಕೋಟಿ ರೂ. ವೆಚ್ಚದಲ್ಲಿ ಎಸ್‍ಟಿಪಿ ಪ್ಲಾಂಟ್ ನಿರ್ಮಾಣ ಮತ್ತು 57 ದೇವಾಲಯಗಳ ನವೀಕರಣ, ಜೀರ್ಣೋದ್ಧಾರ ಮತ್ತು ಖಾಸಗಿ ಶಾಲೆಗೆ ಪೈಪೋಟಿ ನೀಡುವಂತೆ ಮಾನಸನಗರದಲ್ಲಿ 2,000 ಸಾವಿರ ಮಕ್ಕಳ ಪ್ರವೇಶಾವಕಾಶ ಇರುವ ಶಾಲೆ ಆರಂಭವಾಗಲಿದೆ ಎಂದು ತಿಳಿಸಿದರು.

    45 ಉದ್ಯಾನವನ, 24 ಬ್ಯಾಡ್ಮಿಂಟನ್ ಕೋರ್ಟ್‍ಗಳು ಪ್ರತಿ ವಾರ್ಡ್‍ನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ 12 ಕೋಟಿ ರೂ. ವೆಚ್ಚದಲ್ಲಿ ಕನಕಭವನ ನಿರ್ಮಾಣ, 250 ವಿದ್ಯಾರ್ಥಿಗಳ ಉಳಿದುಕೊಳ್ಳುವ ಪಿಜಿ ಸೆಂಟರ್ ಹಾಗೂ ಐಎಎಸ್ ಮತ್ತು IRS ತರಬೇತಿ ಕೇಂದ್ರ, ಉಚಿತ ಡಯಾಲಿಸಿಸ್ ಕೇಂದ್ರ, ದಾಸರಹಳ್ಳಿ ವಾರ್ಡ್‍ನಲ್ಲಿ 200 ಹಾಸಿಗೆ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಪಂತರಪಾಳ್ಯದಲ್ಲಿ ಹೈಟೆಕ್ ಆಸ್ಪತ್ರೆ ಮತ್ತು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಕುಡಿಯುವ ನೀರು, ಒಳಚರಂಡಿ ರಸ್ತೆಗಳು ಸುವ್ಯವಸ್ಥಿತವಾದ ಮಾದರಿ ವಿಧಾನಸಭಾ ಕ್ಷೇತ್ರವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಹಿಜಬ್-ಕೇಸರಿ ವಿವಾದ ಬೆನ್ನಲ್ಲೇ ಶುರುವಾಯ್ತು ಸಿಂಧೂರ ಚಳುವಳಿ

    ಬಿಬಿಎಂಪಿ ವಿಶೇಷ ಆಯುಕ್ತರಾದ ದೀಪಕ್ ಅಧಿಕಾರಿಗಳು ಮತ್ತು ಜಂಟಿ ಆಯುಕ್ತರಾದ ಶ್ರೀನಿವಾಸ್, ಕೆಪಿಟಿಸಿಎಲ್ ಮುಖ್ಯ ಅಭಿಯಂತರಾದ ಜಯಕುಮಾರ್, ಗೋವಿಂದರಾಜನಗರ ಮಂಡಲ ಬಿಜೆಪಿ ಅಧ್ಯಕ್ಷರಾದ ವಿಶ್ವನಾಥಗೌಡ, ಮಾಜಿ ಮಹಾನಗರ ಪಾಲಿಕೆ ಸದಸ್ಯರುಗಳಾದ ರೂಪಲಿಂಗೇಶ್ವರ್, ಗಂಗಭೈರಯ್ಯ, ಕೆ.ಉಮೇಶ್ ಶೆಟ್ಟಿ, ಮೋಹನ್ ಕುಮಾರ್, ವಾಗೇಶ್, ಶಿಲ್ಪ ಶ್ರೀಧರ್, ಪಲ್ಲವಿ, ಬಿಜೆಪಿ ಮುಖಂಡರಾದ ರಾಜಪ್ಪ, ಹೆಚ್.ರಮೇಶ್ ಅವರು ಪಾಲ್ಗೊಂಡಿದ್ದರು.