Tag: V.Somanna

  • ಚಿಕ್ಕಮಗಳೂರು – ತಿರುಪತಿ ರೈಲಿಗೆ ಸೋಮಣ್ಣ ಚಾಲನೆ

    ಚಿಕ್ಕಮಗಳೂರು – ತಿರುಪತಿ ರೈಲಿಗೆ ಸೋಮಣ್ಣ ಚಾಲನೆ

    • ಕುರ್ಚಿ ಕದನ – ಸಿಎಂ ಪಂಚೆ ಬೇರೆಯವ್ರು ಎಳಿತಿದ್ದಾರೋ ಏನೋ ಗೊತ್ತಿಲ್ಲ

    ಚಿಕ್ಕಮಗಳೂರು: ನಗರದಿಂದ (Chikkamagaluru) ತಿರುಪತಿಗೆ (Tirupati) ಸಂಚರಿಸುವ ರೈಲಿಗೆ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ (V.Somanna) ಚಾಲನೆ ನೀಡಿದರು. ಈ ಮೂಲಕ ಜಿಲ್ಲೆಯ ಜನರ ದಶಕಗಳ ಕನಸು ಇಂದು ನನಸಾಗಿದೆ.

    ಚಿಕ್ಕಮಗಳೂರು ರೈಲ್ವೆ ನಿಲ್ದಾಣದಲ್ಲಿ ಸೋಮಣ್ಣ ಹಸಿರು ನಿಶಾನೆ ತೋರುವ ಮೂಲಕ ರೈಲಿಗೆ ಚಾಲನೆ ನೀಡಿದರು. ಈ ವೇಳೆ, ತಿರುಪತಿಗೆ ಹೊರಟಿದ್ದ ವೃದ್ಧೆಯೊಬ್ಬರು ರೈಲಿಗೆ ಮೂರು ಬಾರಿ ನಮಸ್ಕರಿಸಿದರು. ಇದನ್ನೂ ಓದಿ: ಚಿಕ್ಕಮಗಳೂರು-ತಿರುಪತಿ ನಡುವೆ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಸೇವೆ ಪ್ರಾರಂಭ

    ರೈಲಿಗೆ ಚಾಲನೆ ನೀಡಿ, ಬಳಿಕ ಸಿಎಂ ಕುರ್ಚಿ ಕದನದ ವಿಚಾರವಾಗಿ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಸಿಎಂ ಆಗಿ ನಾನೇ ಇರ್ತೀನಿ, ನಾನೇ ಇರ್ತೀನಿ ಎನ್ನುತ್ತಾರೆ. ನೀವು ಇದ್ದೀರೋ ಇಲ್ವೋ? ನಿಮ್ಮ ಪಂಚೆ ಬೇರೆಯವರು ಎಳೆದಿದ್ದಾರೋ ಏನೋ ಗೊತ್ತಿಲ್ಲ. ಆ ಕೆಲಸ ಮಾಡುತ್ತಿರುವವರು ನಿಮ್ಮವರೇ ಹೊರತು ನಾವಲ್ಲ. ಜನರನ್ನು ದಾರಿ ತಪ್ಪಿಸಲು ಡಿಕೆಶಿ-ಸಿದ್ದು ಇಬ್ಬರು ನಾಟಕ ಮಾಡುತ್ತಿದ್ದಾರೆ. ಇವರ ನಾಟಕಕ್ಕೆ ಕಾಂಗ್ರೆಸ್ ಹೈಕಮಾಂಡ್ ಕೃಪಾಪೋಷಿತ ನಾಟಕ ಮಂಡಳಿ. ಏನಾದ್ರೂ ಆಗಲಿ ಜನಕ್ಕೆ ಒಳ್ಳೆಯದನ್ನ ಮಾಡಲಿ. ರಾಜ್ಯದಲ್ಲಿ ಒಂದಾದರೂ ಕೆಲಸ ಆಗ್ತಿದ್ಯಾ ಎಂದು ಪ್ರಶ್ನಿಸಿದ್ದಾರೆ.

    ಸಿದ್ದರಾಮಯ್ಯ (Siddaramaiah) ಸಾಹೇಬ್ರೆ ಕಳೆದೋಗಿದ್ದೀರಾ? ನಿಮಗೆ ಯಾರು ತೊಂದರೆ ಮಾಡಿರೋದು ನಾವಾ? ನಿಮ್ಮ ಪಕ್ಷದವರೇ ನಿಮಗೆ ತೊಂದರೆ ಮಾಡಿರೋದು. ಗುಂಡಿ ಮುಚ್ಚಲು ಆಗಿಲ್ಲ, ಬೇರೆ ಕೆಲಸಗಳು ಆಗುತ್ತಿಲ್ಲ, ಅದರ ಬಗ್ಗೆ ನೋಡಿ. ಒಳ ಒಪ್ಪಂದ ಮಾಡಿಕೊಂಡು ಜನರನ್ನ ದಾರಿ ತಪ್ಪಿಸುತ್ತಿದ್ದಾರೆ ಎಂದು ವಾಗ್ದಾಳಿ ನೆಡೆಸಿದ್ದಾರೆ. ಇದನ್ನೂ ಓದಿ: ಸಿಎಂ ಉತ್ತರ ಕೊಟ್ಮೇಲೆ ಎಲ್ಲಾ ಮುಗೀತು; ದೆಹಲಿಯಿಂದ ವಾಪಸ್ಸಾದ ಡಿಕೆಶಿ ಫಸ್ಟ್ ರಿಯಾಕ್ಷನ್

  • ತಿರುಪತಿಗೆ ತೆರಳೋ ಭಕ್ತಾದಿಗಳಿಗೆ ಗುಡ್ ನ್ಯೂಸ್ – ನೂತನ ರೈಲು ಸೇವೆ ಆರಂಭ

    ತಿರುಪತಿಗೆ ತೆರಳೋ ಭಕ್ತಾದಿಗಳಿಗೆ ಗುಡ್ ನ್ಯೂಸ್ – ನೂತನ ರೈಲು ಸೇವೆ ಆರಂಭ

    ಬೆಂಗಳೂರು: ಏಳು ಕೊಂಡಲವಾಡ ತಿರುಪತಿಯ (Tirupati) ಶ್ರೀನಿವಾಸನಿಗೆ ವಿಶ್ವದೆಲ್ಲೆಡೆ ಭಕ್ತಗಣವಿದೆ. ರಾಜ್ಯದ ಲಕ್ಷಾಂತರ ಜನ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯುತ್ತಾರೆ. ಈ ಹಿನ್ನೆಲೆಯಲ್ಲಿ ರಾಜ್ಯದಿಂದ ತಿರುಪತಿಗೆ ತೆರಳುವ ಭಕ್ತಾದಿಗಳಿಗೆ ರೈಲ್ವೆ ಇಲಾಖೆ ಗುಡ್ ನ್ಯೂಸ್ ಕೊಟ್ಟಿದೆ.

    ವೆಂಕಟೇಶ್ವರನ ದರ್ಶನಕ್ಕಾಗಿ ರಾಜ್ಯದ ಚಿಕ್ಕಮಗಳೂರಿನಿಂದ (Chikkamagaluru) ನೂತನ ರೈಲು (Train) ಸಂಚಾರ ಆರಂಭವಾಗಿದ್ದು, ಚಿಕ್ಕಮಗಳೂರಿನಿಂದ ತಿರುಪತಿಗೆ ವಾರಕ್ಕೊಮ್ಮೆ ರೈಲು ಸಂಚರಿಸಲಿದೆ. ಪ್ರತಿ ಗುರುವಾರ ತಿರುಪತಿಯಿಂದ ಚಿಕ್ಕಮಗಳೂರಿಗೆ ರೈಲು ಸಂಚರಿಸಲಿದ್ದು, ಪ್ರತಿ ಶುಕ್ರವಾರ ಚಿಕ್ಕಮಗಳೂರಿನಿಂದ ತಿರುಪತಿಗೆ ನೂತನ ರೈಲು ಹೊರಡಲಿದೆ. ಇದನ್ನೂ ಓದಿ: ರಮೇಶ್‌ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿದ್ದೇ ವಿಜಯೇಂದ್ರ: ಮತ್ತೆ ಗುಡುಗಿದ ಯತ್ನಾಳ್

    ಪ್ರಮುಖವಾಗಿ ಈ ರೈಲು ಚಿತ್ತೂರು, ಕಟ್ಪಾಡಿ, ಕುಪ್ಪಂ, ಬಂಗಾರಪೇಟೆ, ವೈಟ್ ಫೀಲ್ಡ್, ಕೆಆರ್ ಪುರಂ, ಬೆಂಗಳೂರು, ಚಿಕ್ಕಬಾಣಾವರ, ತುಮಕೂರು, ತಿಪಟೂರು, ಬಿರೂರು, ಕಡೂರು ಸೇರಿದಂತೆ ಹಲವು ನಿಲ್ದಾಣಗಳನ್ನು ಹೊಂದಿದೆ. ಹೀಗಾಗಿ ಮಲೆನಾಡು, ತುಮಕೂರು, ಬೆಂಗಳೂರು ಹಾಗೂ ಕೋಲಾರ ಭಾಗದ ಭಕ್ತರು ಈ ಸೌಲಭ್ಯ ಬಳಸಿಕೊಳ್ಳುವಂತೆ ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿಗೆ `ಧರ್ಮ ಚಕ್ರವರ್ತಿ’ ಬಿರುದು ಪ್ರದಾನ

  • ಹೇಮಾವತಿ ಲಿಂಕ್ ಕೆನಾಲ್ ಸಭೆ ಮುಂದೂಡಿಕೆ: ಡಿಸಿಎಂ ಡಿ.ಕೆ.ಶಿವಕುಮಾರ್

    ಹೇಮಾವತಿ ಲಿಂಕ್ ಕೆನಾಲ್ ಸಭೆ ಮುಂದೂಡಿಕೆ: ಡಿಸಿಎಂ ಡಿ.ಕೆ.ಶಿವಕುಮಾರ್

    – ಕೇಂದ್ರ ಸಚಿವ ಸೋಮಣ್ಣ ಮನವಿ ಮೇರೆಗೆ ಜು.4-5ಕ್ಕೆ ಮುಂದೂಡಿಕೆ

    ಬೆಂಗಳೂರು: ಕೇಂದ್ರ ಸಚಿವ ಸೋಮಣ್ಣ (V.Somanna) ಅವರ ಮನವಿ ಮೇರೆಗೆ ಇದೇ ತಿಂಗಳು 30ರಂದು ನಡೆಯಬೇಕಿದ್ದ ಹೇಮಾವತಿ ಲಿಂಕ್ ಕೆನಾಲ್ (Hemavathi Link Canal) ಸಭೆಯನ್ನು ಜುಲೈ 4-5ಕ್ಕೆ ಮುಂದೂಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K.Shivakumar) ತಿಳಿಸಿದರು.

    ಸದಾಶಿವನಗರ ನಿವಾಸದ ಬಳಿ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಶಿವಕುಮಾರ್ ಗುರುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಸೋಮಣ್ಣ ಅವರು ಸ್ಥಳೀಯ ಸಂಸದರೂ ಆಗಿರುವ ಕಾರಣ ಅವರಿಗೆ ಅನುಕೂಲವಾಗುವಂತೆ ಸಭೆ ಮುಂದೂಡಲಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ರಾಮನಗರ-ತುಮಕೂರು ಮಧ್ಯೆ ಹೇಮಾವತಿ ಕಲಹ – ಸರ್ವಪಕ್ಷ ಸಭೆ ಕರೆಯಲು ಬಿಜೆಪಿ ಆಗ್ರಹ

    ಎತ್ತಿನಹೊಳೆ ಯೋಜನೆ ಗುತ್ತಿಗೆದಾರರ ಸಭೆ ಮುಂದೂಡಿಕೆ
    ಇಂದು ತುಮಕೂರಿನಲ್ಲಿ ಯೋಜನೆ ಕಾಮಗಾರಿಯ ಗುತ್ತಿಗೆದಾರರ ಸಭೆ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ಪರಮೇಶ್ವರ್ ಅವರ ಅನುಪಸ್ಥಿತಿ ಹಿನ್ನೆಲೆಯಲ್ಲಿ ಈ ಸಭೆಯನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ. ಈ ಸಭೆ ನಾಳೆ ಅಥವಾ ನಾಡಿದ್ದು ನಡೆಯಲಿದೆ ಎಂದು ಹೇಳಿದರು.

    ಆದ್ಯತೆ ಮೇರೆಗೆ ಎತ್ತಿನಹೊಳೆ ಯೋಜನೆಯನ್ನು ನಿಗದಿತ ಸಮಯದ ಒಳಗೆ ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿಗಳ ನಿರ್ದೇಶನ ನೀಡಿದ್ದಾರೆ. ಹೀಗಾಗಿ, ಈ ಯೋಜನೆ ಕಾಮಗಾರಿ ಪರಿಶೀಲನೆ ಮಾಡಲಾಗುತ್ತಿದೆ. ಈ ಯೋಜನೆಗೆ ಎಲ್ಲೆಲ್ಲಿ ಸಮಸ್ಯೆ ಇದೆ ಎಂದು ಪರಿಶೀಲನೆ ಮಾಡಲು ನಾನು ತುಮಕೂರಿಗೆ ಭೇಟಿ ನೀಡಿದ್ದೇನೆ ಎಂದರು. ಇದನ್ನೂ ಓದಿ: ಭುಗಿಲೆದ್ದ ರೈತರ ಆಕ್ರೋಶ – ಹೇಮಾವತಿ ಲಿಂಕ್ ಕೆನಾಲ್ ಯೋಜನೆ ಕಾಮಗಾರಿ ತಾತ್ಕಾಲಿಕ ಸ್ಥಗಿತ

    ನಾನು ಈಗಾಗಲೇ ದೊಡ್ಡಬಳ್ಳಾಪುರ, ಕೊರಟಗೆರೆಗೆ ಭೇಟಿ ನೀಡಿದ್ದೇನೆ. ಸಚಿವ ಸಂಪುಟ ಉಪ ಸಮಿತಿ ಅಧ್ಯಕ್ಷರಾಗಿದ್ದ ಪರಮೇಶ್ವರ್ ಅವರ ಜೊತೆ ಚರ್ಚೆ ಮಾಡಿದ್ದೇನೆ. ಈ ಭಾಗದಲ್ಲಿ ನೀರನ್ನು ಯಾವ ರೀತಿ ಸಂಗ್ರಹಿಸುವುದು ಎಂಬ ತಾಂತ್ರಿಕ ಸಾಧ್ಯತೆಗಳ ಪರಿಶೀಲನೆ ನಡೆಸುತ್ತಿದ್ದೇವೆ. ಈಗಾಗಲೇ ಸ್ಥಳೀಯ ನಾಯಕರು, ಗ್ರಾಮಸ್ಥರ ಜೊತೆ ಚರ್ಚೆ ಮಾಡಿ ಅಭಿಪ್ರಾಯ ಸಂಗ್ರಹಿಸಿದ್ದೇನೆ. ಸಾರ್ವಜನಿಕರು ತಮ್ಮ ನೋವು ಹೇಳಿಕೊಂಡಿದ್ದಾರೆ. ಒಂದು ಕಡೆ ಅಣೆಕಟ್ಟು ನಿರ್ಮಾಣ ಮಾಡಬೇಕೆ, ಎರಡು ಕಡೆ ಮಾಡಬೇಕೆ ಅಥವಾ ಜನರ ಸಲಹೆಯಂತೆ ಕೆರೆಗಳನ್ನು ಬಳಸಿಕೊಂಡು ನೀರು ಸಂಗ್ರಹಿಸಬಹುದೇ ಎಂಬ ಸಾಧ್ಯತೆಗಳನ್ನು ಅಧ್ಯಯನ ಮಾಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಹೇಮಾವತಿ ಲಿಂಕ್ ಕೆನಾಲ್ ಕದನ – ಇಬ್ಬರು ಸ್ವಾಮೀಜಿಗಳು ಸೇರಿ ನೂರಾರು ರೈತರ ವಿರುದ್ಧ FIR

  • ಕೇಂದ್ರ ಸಚಿವ ಸೋಮಣ್ಣ ಕಾಲಿಗೆ ಬಿದ್ದ ಹಾಸನ ಡಿಸಿ

    ಕೇಂದ್ರ ಸಚಿವ ಸೋಮಣ್ಣ ಕಾಲಿಗೆ ಬಿದ್ದ ಹಾಸನ ಡಿಸಿ

    ಹಾಸನ: ಅರಸೀಕೆರೆ (Arasikere) ತಾಲೂಕಿನ ಕೋಡಿಮಠಕ್ಕೆ ಕೇಂದ್ರ ಸಚಿವ ವಿ ಸೋಮಣ್ಣ (V Somanna) ಭೇಟಿ ನೀಡಿದ ವೇಳೆ ಹಾಸನದ ನೂತನ ಡಿಸಿ (Hassan DC) ಸೋಮಣ್ಣ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.

    ಸ್ವಾಮೀಜಿ ಭೇಟಿಗೆ ಸಚಿವರು ಆಗಮಿಸುತ್ತಲೇ ನೂತನ ಡಿಸಿ ಕೆಎಸ್ ಲತಾಕುಮಾರಿ (KS Lathakumari) ಸೋಮಣ್ಣ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ. ಬಳಿಕ ಸರ್ ನಿಮ್ಮನ್ನು ನೋಡಿ ಬಹಳ ಖುಷಿಯಾಯಿತು. ನೀವು ನಮಗೆ ಬಹಳ ಬೇಕಾದವರು ಎಂದು ಹೇಳಿದರು. ಇದನ್ನೂ ಓದಿ: ಕುದಿಯುವ ಸಾಂಬಾರ್ ಮೈಮೇಲೆ ಬಿದ್ದು ಎರಡೂವರೆ ವರ್ಷದ ಬಾಲಕಿ ಸಾವು

    ಈ ವೇಳೆ ಮಾತನಾಡಿದ ಸೋಮಣ್ಣ, ನೀವು ಒಳ್ಳೆಯ ಕೆಲಸಗಾರರು. ಒಳ್ಳೆಯ ಕೆಲಸ ಮಾಡುತ್ತೀರಿ. ಯಾರ ಬಾಯಿಗೂ ಬೀಳೋದು ಬೇಡ. ಬೇಲೂರು-ಹಾಸನ 503 ಎಕರೆ ಭೂ ಸ್ವಾದೀನ ಮಾಡಬೇಕು. ಇದು ನಿಮ್ಮ ಅವಧಿಯಲ್ಲೇ ಆಗಬೇಕು ಎಂದು ಸೂಚನೆ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ನಿಮ್ಮ ಆದೇಶ ಖಂಡಿತಾ ಆಗುತ್ತೆ ಸರ್ ಎಂದರು. ಇದನ್ನೂ ಓದಿ: 14.89 ಲಕ್ಷಕ್ಕೆ ಹೋಂಡಾ ಸಿಟಿ ಸ್ಪೋರ್ಟ್ ಎಡಿಷನ್ ಬಿಡುಗಡೆ – ಕಾರ್‌ನಲ್ಲಿ ಏನು ಬದಲಾವಣೆಯಾಗಿದೆ?

  • ಮನೆಯೊಂದು ಮೂರು ಬಾಗಿಲು – ಶಾ ರಾಜ್ಯ ಭೇಟಿ ಸಂದರ್ಭದಲ್ಲೇ ಬಿಜೆಪಿ ಭಿನ್ನಮತ ತಾರಕಕ್ಕೆ!

    ಮನೆಯೊಂದು ಮೂರು ಬಾಗಿಲು – ಶಾ ರಾಜ್ಯ ಭೇಟಿ ಸಂದರ್ಭದಲ್ಲೇ ಬಿಜೆಪಿ ಭಿನ್ನಮತ ತಾರಕಕ್ಕೆ!

    – ವಿಜಯೇಂದ್ರ ಬದಲಾವಣೆಗೆ ಭಿನ್ನರು ಮತ್ತೆ ಪಟ್ಟು, ಪ್ರತ್ಯೇಕ ಸಭೆ
    – ರೆಬೆಲ್ಸ್ ಜತೆ ಬಹಿರಂಗವಾಗಿ ಗುರುತಿಸಿಕೊಂಡ ವಿ ಸೋಮಣ್ಣ

    ಬೆಂಗಳೂರು: ಬಿಜೆಪಿ (BJP) ಮನೆಯಲ್ಲಿ ಮತ್ತೆ ಭಿನ್ನಮತ ವಿರಾಟ್ ದರ್ಶನ. ಹೌದು, ಬಿಜೆಪಿ ರಾಜ್ಯಾಧ್ಯಕ್ಷರ ಚುನಾವಣೆ ಸುಳಿವು ಸಿಕ್ಕ ಕೂಡಲೇ ಭಿನ್ನರು ಅಲರ್ಟ್ ಆಗಿದ್ದಾರೆ. ಗುರುವಾರ ತಡರಾತ್ರಿ ರೆಬೆಲ್ಸ್ ತಂಡ ವಿಜಯೇಂದ್ರ (BY Vijayendra) ಬದಲಾವಣೆ ಆಗಲೇಬೇಕೆಂಬ ಸಂದೇಶ ರವಾನಿಸಿದೆ. ರೆಬೆಲ್ಸ್‌ ಜತೆ ಕೇಂದ್ರ ಸಚಿವ ವಿ ಸೋಮಣ್ಣ (V Somanna) ಬಹಿರಂಗವಾಗಿಯೇ ಗುರುತಿಸಿಕೊಂಡಿದ್ದು ಗೊಂದಲ ಮತ್ತಷ್ಟು ಸಂಕೀರ್ಣವಾದಂತಿದೆ. ಅಮಿತ್ ಶಾ (Amit Shah) ರಾಜ್ಯ ಭೇಟಿ ಸಂದರ್ಭದಲ್ಲೇ ಗುಂಪುಗಾರಿಕೆ ತಾರಕಕ್ಕೇರಿದೆ.

    ಬಿಜೆಪಿ ಗೊಂದಲ ಮುಗಿದಿದೆ ಎಂದು ಒಂದು ಕಡೆ ಹೈಕಮಾಂಡ್ ರಾಜ್ಯಾಧ್ಯಕ್ಷರ ಚುನಾವಣೆ ನಡೆಸುವ ಸುಳಿವು ಕೊಟ್ಟಿದೆ. ಆದರೆ ಹೋದೆಯಾ ಪಿಶಾಚಿ ಅಂದರೆ ಬಂದೆ ಗವಾಕ್ಷೀಲಿ ಎನ್ನುವಂತೆ ಕಮಲ ಪಾಳಯದಲ್ಲಿ ಮತ್ತೆ ಭಿನ್ನಮತೀಯ ಚಟುವಟಿಕೆ ತೀವ್ರಗೊಂಡಿದೆ. ಯತ್ನಾಳ್ (Basangouda Patil Yatnal) ಉಚ್ಛಾಟನೆ ಬಳಿಕ ಮೌನವಾಗಿದ್ದ ಭಿನ್ನರ ಪಡೆ ಈಗ ಬೇರೊಂದು ರೂಪದಲ್ಲಿ ಪುಟಿದೆದ್ದಿದೆ. ಇದನ್ನೂ ಓದಿ: ನಮ್ಮ ಪಕ್ಷದಲ್ಲಿ ಕೆಲವರಿಗೆ ಅತೃಪ್ತಿ ಇರೋದು ಸತ್ಯ – ಬಿವೈವಿ

    ವಿಜಯೇಂದ್ರ ಬದಲಾವಣೆಗೆ ಪಟ್ಟು ತೀವ್ರಗೊಳಿಸಿರುವ ರೆಬೆಲ್ಸ್ ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ನೇತೃತ್ವದಲ್ಲಿ ತಡರಾತ್ರಿ ಪ್ರತ್ಯೇಕ ಸಭೆ ನಡೆಸಿದೆ. ವಿಶೇಷ ಅಂದ್ರೆ ಈ ಸಭೆಯಲ್ಲಿ ಭಾಗವಹಿಸುವ ಮೂಲಕ ಕೇಂದ್ರ ಸಚಿವ ವಿ ಸೋಮಣ್ಣ ಇದೇ ಮೊದಲ ಬಾರಿಗೆ ಭಿನ್ನರ ಜತೆ ಬಹಿರಂಗವಾಗಿ ಗುರುತಿಸಿಕೊಂಡಿದ್ದಾರೆ. ಮಾಜಿ ಸಂಸದ ಜಿಎಂ ಸಿದ್ದೇಶ್ವರ್ ಅವರ ಬೆಂಗಳೂರಿನ ಫ್ಲ್ಯಾಟ್‌ನಲ್ಲಿ ಸಭೆ ನಡೆಸಿದ್ದ ಭಿನ್ನರು ಶತಾಯಗತಾಯ ವಿಜಯೇಂದ್ರ ಬದಲಾಗಲೇಬೇಕೆಂಬ ಸಂದೇಶ ರವಾನಿಸಿದ್ದಾರೆ. ವಿ ಸೋಮಣ್ಣ ಮೂಲಕ ಅಮಿತ್ ಶಾ ಅವರಿಗೆ ಭಿನ್ನರು ಈ ಸಂದೇಶ ತಲುಪಿಸಿದ್ದಾರೆ ಎನ್ನಲಾಗಿದೆ. ಜತೆಗೆ ಇದೇ ಜೂ.23, 24 ರಂದು ದೆಹಲಿಗೂ ಹೋಗಲು ರೆಬೆಲ್ಸ್ ನಿರ್ಣಯಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಕಚೇರಿಗೆ ದಿಢೀರ್ ಭೇಟಿ – ಅಸಮಾಧಾನಿತರ ಜೊತೆ ಮಾತುಕತೆಗೆ ಸಿದ್ಧ ಎಂದ ಬಿಎಸ್‌ವೈ

    ಗೃಹ ಸಚಿವ ಅಮಿತ್ ಶಾ ಬಿಜಿಎಸ್ ಮೆಡಿಕಲ್ ಕಾಲೇಜು ಉದ್ಘಾಟನೆಗೆ ಬೆಂಗಳೂರಿಗೆ ಬಂದಿದ್ದರು. ಅಮಿತ್ ಶಾ ಬಂದ ಸಂದರ್ಭದಲ್ಲೇ ಭಿನ್ನ ರಾಗ ಮೊಳಗಿದ್ದು ಉದ್ದೇಶಪೂರ್ವಕವಾಗಿಯೇ ಎನ್ನಲಾಗ್ತಿದೆ. ಈ ನಡುವೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ, ಭಿನ್ನರ ಜತೆ ಸಂಧಾನ ಸಭೆ ನಡೆಸಿದರೂ ಅದು ಯಶಸ್ಸಾಗಲಿಲ್ಲ. ಭಿನ್ನರು ತಮ್ಮ ಪಟ್ಟು ಸಡಿಲಿಸಿಲ್ಲ.

     

    ಭಿನ್ನರ ಸಭೆ ಬಗ್ಗೆ ಮಾತಾಡಿರುವ ವಿಜಯೇಂದ್ರ, ಕೆಲವರಿಗೆ ತಮ್ಮ ವಿಚಾರದಲ್ಲಿ ಅತೃಪ್ತಿ ಇದೆ. ಎಲ್ಲವೂ ಶೀಘ್ರದಲ್ಲೇ ಸರಿ ಹೋಗಲಿದೆ. ಪ್ರಮುಖರು ಕೂತು ಸರಿಪಡಿಸ್ತೇವೆ. ಒಳಜಗಳ ಬಿಟ್ಟು ಎಲ್ರೂ ಒಟ್ಟಾಗಬೇಕಿದೆ. ಅವರ ಮನವೊಲಿಕೆ ಮಾಡುತ್ತೇವೆ ಎಂದು ಹೇಳಿದ್ದಾರೆ.

    ವಿಜಯೇಂದ್ರ ವಿರುದ್ಧ ಕಳೆದೊಂದು ವಾರದಿಂದಲೂ ಭಿನ್ನರು,ಬಿಜೆಪಿ ತಟಸ್ಥರು ಹಾಗೂ ಹಿರಿಯರ ಬೆಂಬಲ ಪಡೆಯುವ ಕಸರತ್ತಿಗಿಳಿದಿದ್ರು. ಈಗಾಗಲೇ ಬೊಮ್ಮಾಯಿ, ಆರ್ ಅಶೋಕ್, ಡಿವಿಎಸ್, ವಿ ಸೋಮಣ್ಣ, ಶೋಭಾ ಕರಂದ್ಲಾಜೆ ಭೇಟಿ ಮಾಡಿ ಸಮಾಲೋಚಿಸಿದ್ದಾರೆ. ಈ ಮೂಲಕ ರಾಜ್ಯ ಬಿಜೆಪಿಯೊಳಗೆ ವಿಜಯೇಂದ್ರ ಪರ ಅನೇಕರು ಇಲ್ಲ ಎಂಬ ಸಂದೇಶ ಹೈಕಮಾಂಡ್‌ಗೆ ರವಾನಿಸುವ ಪ್ರಯತ್ನ ನಡೆಸಿದ್ದಾರೆ.

    ಇದೆಲ್ಲದರ ಮಧ್ಯೆ ಮಾಜಿ ಸಿಎಂ ಯಡಿಯೂರಪ್ಪ ಪುತ್ರನ ಪರ ಅಖಾಡಕ್ಕಿಳಿದಿದ್ದಾರೆ. ಗುರುವಾರ ತಡರಾತ್ರಿ ಬೆಂಗಳೂರಿನ ಖಾಸಗಿ ಹೊಟೇಲಿನಲ್ಲಿ ಅಮಿತ್ ಶಾ ಭೇಟಿ ಮಾಡಿದ ಯಡಿಯೂರಪ್ಪ ಪಕ್ಷದ ಆಂತರಿಕ ವಿಚಾರ ಚರ್ಚೆ ಮಾಡಿದ್ದಾರೆ. ವಿಜಯೇಂದ್ರ ಸಾರಥ್ಯ ಸಾಧನೆ ಬಗ್ಗೆಯೂ ಅಮಿತ್ ಶಾಗೆ ಬಿಎಸ್‌ವೈ ಸೂಕ್ಷ್ಮವಾಗಿ ಹೇಳಿದ್ದಾರೆ ಎನ್ನಲಾಗಿದೆ.

  • ತುಮಕೂರನ್ನೂ ಗ್ರೇಟರ್ ಬೆಂಗಳೂರಿಗೆ ಸೇರಿಸಿ – ಪರಮೇಶ್ವರ್

    ತುಮಕೂರನ್ನೂ ಗ್ರೇಟರ್ ಬೆಂಗಳೂರಿಗೆ ಸೇರಿಸಿ – ಪರಮೇಶ್ವರ್

    – ತುಮಕೂರಿಗೆ ಮೆಟ್ರೋ ಅಗತ್ಯವಿದೆ ಎಂದ ಗೃಹಸಚಿವ

    ಬೆಂಗಳೂರು: ತುಮಕೂರನ್ನೂ (Tumkur) ಗ್ರೇಟರ್ ಬೆಂಗಳೂರಿಗೆ ಸೇರಿಸಬೇಕು ಅಂತ ಗೃಹ ಸಚಿವ ಪರಮೇಶ್ವರ್ (G. Parameshwar) ಸರ್ಕಾರವನ್ನ ಒತ್ತಾಯಿಸಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ತುಮಕೂರನ್ನ ಗ್ರೇಟರ್ ಬೆಂಗಳೂರಿಗೆ (Greater Bengaluru) ಸೇರಿಸಬೇಕು. ರಾಮನಗರವನ್ನ ಬೆಂಗಳೂರು ದಕ್ಷಿಣ ಅಂತ ಮಾಡಿ ಗ್ರೇಟರ್ ಬೆಂಗಳೂರಿಗೆ ಸೇರಿಸಿದ್ದಾರೆ. ತುಮಕೂರು ಬೆಂಗಳೂರಿಗೆ 70 ಕಿಮೀ ದೂರ ಇರೋದು. ನಮ್ಮನ್ನು ಬೆಂಗಳೂರಿಗೆ ಸೇರಿಸಿಕೊಂಡ್ರೆ ಅಭಿವೃದ್ಧಿ ದೃಷ್ಟಿಯಿಂದ ಒಳ್ಳೆಯದಾಗುತ್ತದೆ. ಹೀಗಾಗಿ ಗ್ರೇಟರ್ ಬೆಂಗಳೂರಿಗೆ ನಮ್ಮನ್ನ ಸೇರಿಸಬೇಕು ಅಂತ ನಾವು ಪ್ರಸ್ತಾವನೆ ಕೊಡ್ತೀವಿ ಅಂತ ತಿಳಿಸಿದರು. ಇದನ್ನೂ ಓದಿ: ಕಾಲ್ತುಳಿತದಲ್ಲಿ ಗಾಯಗೊಂಡವರಿಗೆ ಡಿಸಿ ನೋಟಿಸ್ – ತನಿಖೆಗೆ ಹಾಜರಾಗುವಂತೆ 45 ಮಂದಿಗೆ ಸೂಚನೆ

    ಇದೇ ವೇಳೆ ಕೇಂದ್ರ ಸಚಿವ ಸೋಮಣ್ಣರನ್ನ ಭೇಟಿಯಾಗಿದ್ದ ಬಗ್ಗೆ ಮಾಹಿತಿ ನೀಡಿದ್ರು. ತುಮಕೂರು ನ್ಯಾಷನಲ್ ಹೈವೆಯಲ್ಲಿ ತುಮಕೂರು ಪ್ರಾರಂಭದಲ್ಲಿ ಆರ್ಚ್ ಹಾಕಬೇಕು ಅಂತ ಸ್ಮಾರ್ಟ್ ಸಿಟಿಯಲ್ಲಿ ಹಣ ಹೊಂದಿಸಿದ್ದೇವೆ. ಇದಕ್ಕೆ ಕೇಂದ್ರ ಸರ್ಕಾರದ ಅನುಮತಿ ಆಗಬೇಕು. ಇದಕ್ಕಾಗಿ ಸೋಮಣ್ಣ (V Sonanna) ಅವರನ್ನ ಭೇಟಿಯಾಗಿ ಗಡ್ಕರಿ ಅವರಿಗೆ ಮಾತಾಡಿ ಅನುಮತಿ ಕೊಡಿಸೋಕೆ ಕೇಳೋಕೆ ಹೋಗಿದ್ದೆ. ಕುಡಿಯೋ ನೀರಿನ ಅನೇಕ ಯೋಜನೆ ಕೇಂದ್ರ ಸರ್ಕಾರಕ್ಕೆ ಹೋಗಿದೆ. ಅದನ್ನು ಕೊಡಿಸಬೇಕು ಅಂತ ಮನವಿ ಮಾಡಿದ್ದೇನೆ ಎಂದರು. ಇದನ್ನೂ ಓದಿ: ಎಕ್ಸ್‌ಪ್ರೆಸ್ ವೇಯಲ್ಲಿ ಕಾರುಗಳ ನಡುವೆ ಅಪಘಾತ – ಇಬ್ಬರು ಸಾವು, ನಾಲ್ವರು ಗಂಭೀರ

    ತುಮಕೂರಿಗೆ ಮೆಟ್ರೋ ಅಗತ್ಯವಿದೆ
    ತುಮಕೂರಿಗೆ ಮೆಟ್ರೋ ಯೋಜನೆ ರಾಜ್ಯದ ತೀರ್ಮಾನ ಏನಾಗುತ್ತೆ ನೋಡಿಕೊಂಡು ಕೇಂದ್ರದವರ ಬಳಿ ಮಾತಾಡ್ತೀವಿ. ಮೆಟ್ರೋ ಅಗತ್ಯವಿದೆ ಅಂತ ಸೋಮಣ್ಣ ಹೇಳಿದ್ದಾರೆ. ಜೊತೆಗೆ ಸಬ್‌ ಅರ್ಬನ್‌ ಕೂಡ ಆಗಬೇಕು ಅಂತ ಇದೆ. ಎರಡೂ ಆಗಲಿ, ತುಮಕೂರು ಅತಿವೇಗವಾಗಿ ಬೆಳೆಯುತ್ತಿದೆ. ಇಂಡಸ್ಟ್ರಿ ಹಬ್ ಬೆಳೆಯುತ್ತಿದೆ. ಬೆಂಗಳೂರು ವಿಸ್ತರಣೆ ಮಾಡಿದಂತೆ ತುಮಕೂರು ವಿಸ್ತರಣೆ ಮಾಡಬೇಕು ಅಂತ ಅನೇಕರು ಹೇಳ್ತಿದ್ದಾರೆ. ಅದರ ಬಗ್ಗೆ ಚರ್ಚೆ ಆಗ್ತಿದೆ ಎಂದರು. ಇದನ್ನೂ ಓದಿ: ವಿಜಯಪುರ | ಭಾರೀ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಗೃಹಿಣಿ ಸಾವು

  • 11 ಅಮಾಯಕ ಜೀವಗಳ ಬಲಿ ಪಡೆದು ಈ ಸರ್ಕಾರ ಪಾಪಕ್ಕೆ ಗುರಿಯಾಗಿದೆ: ಸೋಮಣ್ಣ

    11 ಅಮಾಯಕ ಜೀವಗಳ ಬಲಿ ಪಡೆದು ಈ ಸರ್ಕಾರ ಪಾಪಕ್ಕೆ ಗುರಿಯಾಗಿದೆ: ಸೋಮಣ್ಣ

    ಬೆಂಗಳೂರು: 11 ಅಮಾಯಕ ಜೀವಗಳನ್ನು ಬಲಿ ತೆಗೆದುಕೊಂಡು ಸಿದ್ದರಾಮಯ್ಯ (Siddaramaiah) ಸರ್ಕಾರ ಪಾಪಕ್ಕೆ ಗುರಿಯಾಗಿದೆ ಎಂದು ಕೇಂದ್ರ ಸಚಿವ ಸೋಮಣ್ಣ (V Somanna) ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

    ಚಿನ್ನಸ್ವಾಮಿ ಕಾಲ್ತುಳಿತ (Chinnaswamy Stampede) ಪ್ರಕರಣದ ಬಗ್ಗೆ ಬೆಂಗಳೂರಿನಲ್ಲಿ ಮಾತಾನಾಡಿದ ಅವರು, ಇದೊಂದು ಲಜ್ಜೆಗೇಡಿ ಸರ್ಕಾರ. ಹೆಸರು ಬರುತ್ತೆ ಎಂದು ತರಾತುರಿಯಲ್ಲಿ ಕಾರ್ಯಕ್ರಮ ಮಾಡಿದರು. ಒಂದು ವಾರ ಬಿಟ್ಟು ಮಾಡಿದ್ರೆ ಏನು ಆಗುತ್ತಿತ್ತು. ಇಂತಹ ಕೆಲಸ ಮಾಡಿ ನೀವು ಪಾಪಕ್ಕೆ ಗುರಿಯಾಗಿದ್ದೀರಾ ಎಂದು ಕಿಡಿಕಾರಿದರು. ಇದನ್ನೂ ಓದಿ: ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಘಟನೆ ಸರ್ಕಾರದ ಪ್ರಾಯೋಜಿತ ಕೊಲೆ: ಅರಗ ಜ್ಞಾನೇಂದ್ರ

    ಪೊಲೀಸ್ ಕಮೀಷನರ್ ದಯಾನಂದ್ ಪ್ರಾಮಾಣಿಕ ಅಧಿಕಾರಿ. ಅವರನ್ನು ಅಮಾನತು ಮಾಡ್ತೀರಾ. ಸಿದ್ದರಾಮಯ್ಯ ನೈತಿಕತೆ ಇದ್ದರೆ ರಾಜೀನಾಮೆ ಕೊಡಬೇಕಿತ್ತು. ಸಿದ್ದರಾಮಯ್ಯ ಅವರೇ ಯಾರು ನಿಮ್ಮ ಕಿವಿ ಕಚ್ಚಿದ್ರು ಇವತ್ತು ಮಾಡಿ ಅಂತ. ನಿಮ್ಮ ಅನುಭವ, ಚಿಂತನೆ ಏನಾಯ್ತು? ಮುಗ್ಧರನ್ನ ಸಾಯಿಸಿ ಶಾಪಗ್ರಸ್ತ ಸರ್ಕಾರ ಆಗಿದೆ ಈ ಸರ್ಕಾರ ಎಂದು ಹರಿಹಾಯ್ದರು. ಇದನ್ನೂ ಓದಿ: ಆತುರದ ನಿರ್ಧಾರದಿಂದ ತಪ್ಪು ಮಾಡಿದ್ದೇವೆ, ತಡವಾಗಿ ವಿಜಯೋತ್ಸವ ಆಚರಣೆ ಮಾಡ್ಬೋದಿತ್ತು: ಇಕ್ಬಾಲ್ ಹುಸೇನ್

    ನಿಮಗೆ ಮಾನ ಮರ್ಯಾದೆ ಇದ್ದರೆ ಇದರ ಹೊಣೆ ಹೊರಬೇಕು. ಇಂತಹ ಘಟನೆ ಮಾಡಿ ಇತಿಹಾಸದಲ್ಲಿ ನೀವು ಉಳಿದುಕೊಂಡ್ರಿ. ಈಗ ಕಣ್ಣು ಒರೆಸೋ ತಂತ್ರ ಮಾಡ್ತಿದ್ದೀರಾ. ಒಳ್ಳೆಯ ಅಧಿಕಾರಿಗಳನ್ನು ಅಮಾನತು ಮಾಡಿದ್ರೆ ಅಧಿಕಾರಿಗಳಿಗೆ ನಿಮ್ಮ ಜೊತೆ ಕೆಲಸ ಮಾಡೋಕೆ ಹೇಗೆ ಆಗುತ್ತದೆ. ಸರ್ಕಾರಕ್ಕೆ ಹೆಸರು ಮಾಡೋ ಆತುರದ ಪರಮಾವಧಿ. ಇದಕ್ಕೆ ನಿಮಗೆ ಕೊಡಲಿ ಪೆಟ್ಟಾಗಿದೆ. ಈ ಘಟನೆ ಅಕ್ಷಮ್ಯ ಅಪರಾಧ. ಇದಕ್ಕೆ ನೀವೆ ಬೆಲೆ ತೆರಬೇಕು ಎಂದು ಸರ್ಕಾರದ ವಿರುದ್ಧ ಗುಡುಗಿದರು. ಇದನ್ನೂ ಓದಿ: ಮಹಾರಾಷ್ಟ್ರ ಚುನಾವಣೆಯಲ್ಲಿ ಮ್ಯಾಚ್ ಫಿಕ್ಸಿಂಗ್ – ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ಬಾಂಬ್‌

  • ಡಿಕೆಶಿ ಪಾದಕ್ಕೆ ಕೋಟಿ ನಮಸ್ಕಾರ ಮಾಡ್ತೀನಿ, ಹೇಮಾವತಿ ಕೈ ಬಿಡಿ: ವಿ.ಸೋಮಣ್ಣ

    ಡಿಕೆಶಿ ಪಾದಕ್ಕೆ ಕೋಟಿ ನಮಸ್ಕಾರ ಮಾಡ್ತೀನಿ, ಹೇಮಾವತಿ ಕೈ ಬಿಡಿ: ವಿ.ಸೋಮಣ್ಣ

    ಬೀದರ್: ಡಿ.ಕೆ ಶಿವಕುಮಾರ್ (DK Shivakumar) ಪಾದಕ್ಕೆ ಕೋಟಿ ನಮಸ್ಕಾರ ಮಾಡ್ತೀನಿ, ಹೇಮಾವತಿ ಕೈ ಬಿಡಿ ಎಂದು ಕೇಂದ್ರ ಸಚಿವ ವಿ.ಸೋಮಣ್ಣ (V Somanna) ಹೇಳಿದರು.

    ಬೀದರ್‌ನಲ್ಲಿ (Bidar) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೇಮಾವತಿ ನೀರು (Hemavati) ಹಂಚಿಕೆ ವಿಚಾರದಲ್ಲಿ ಡಿ.ಕೆ ಶಿವಕುಮಾರ್ ಯಾಕೆ ಹೀಗಾದರೋ ಗೊತ್ತಿಲ್ಲ. ರಾಜಕೀಯನೇ ಬೇರೆ, ವಿಶ್ವಾಸನೇ ಬೇರೆ. ಯಾಕೆ ಹೇಮಾವತಿ ಹಿಂದೆ ಬಿದ್ದಿದ್ದಾರೆ ಗೊತ್ತಿಲ್ಲ. ತುಮಕೂರಿನ ಜನ ಬಹಳ ಮುಗ್ಧರಿದ್ದಾರೆ. ನಾನು ಯಾವುದೋ ಊರಿನಿಂದ ಬಂದವನಿಗೆ ವೋಟ್ ಹಾಕಿದ್ದಾರೆ. ನನಗೋಸ್ಕರನಾದರೂ ಆ ಯೋಜನೆ ಕೈ ಬಿಡಿ ಎಂದು ಡಿಕೆಶಿಗೆ ಮನವಿ ಮಾಡುತ್ತೇನೆ ಎಂದರು.ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆಗಳಲ್ಲಿ ಅವ್ಯವಸ್ಥೆ, ಚಿಕಿತ್ಸೆ ಕೊರತೆ ಇದ್ರೆ ದೂರು ಕೊಡಿ – ಆರೋಗ್ಯ ಇಲಾಖೆಯಿಂದ ವಾಟ್ಸಪ್‌ ನಂಬರ್‌ ರಿಲೀಸ್‌

    ಇಪ್ಪತ್ತು ವರ್ಷದ ಹಿಂದೆ ಮಾಡಿದ ಈ ಯೋಜನೆಯಿಂದ ಜನ ನೆಮ್ಮದಿಯಾಗಿದ್ದಾರೆ. ಜನರನ್ನ ನೆಮ್ಮದಿಯಿಂದ ಇರಲು ಬಿಡಿ. 5 ತಾಲೂಕಿನವರು ಒಳ್ಳೆಯ ಜೀವನ ಮಾಡುತ್ತಿದ್ದಾರೆ. ನೀವ್ಯಾಕೆ ಹುಳಿ ಹಿಂಡುವ ಕೆಲಸ ಮಾಡುತ್ತಿದ್ದೀರಿ. ತಿಪ್ಪಗೊಂಡನಹಳ್ಳಿ, ಮಂಚನಬೇಲೆ ಸೇರಿದಂತೆ ಬೇರೆ ಯೋಜನೆಗಳು ನೀವೇ ಮಾಡಿ. ನೀವೇ ಮಹಾರಾಜ, ನೀವೇ ಉಪಮುಖ್ಯಮಂತ್ರಿ ಎಂದು ಹೇಳಿದರು.

    ಇದೇ ವೇಳೆ ಬೆಳಗಾವಿ (Belagavi) ಸಾಮೂಹಿಕ ಅತ್ಯಾಚಾರ, ಕರಾವಳಿಯಲ್ಲಿ ಹತ್ಯೆಗಳು ಸೇರಿದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟ ವಿಚಾರದ ಕುರಿತು ಮಾತನಾಡಿ, ಈಗಾಲಾದರೂ ಸರ್ಕಾರ ಎಚ್ಚೆತ್ತುಕೊಳ್ಳಬೇಕಿದೆ. ಇಲ್ಲವಾದರೆ ಪೂರ್ಣ ದುಷ್ಪರಿಣಾಮವನ್ನು ಸರ್ಕಾರ ಎದುರಿಸಬೇಕಾಗುತ್ತದೆ. ಗೂಬೆ ಕೂರಿಸುವುದನ್ನು ಬಿಟ್ಟು ವಾಸ್ತವದ ಕಡೆ ಗಮನಹರಿಸಬೇಕು. ಕಳ್ಳರನ್ನು ಬಗ್ಗು ಬಡಿಯುವ ಕೆಲಸ ಪೊಲೀಸರು ಮಾಡಬೇಕು. ಪೊಲೀಸರನ್ನು ಫ್ರೀಯಾಗಿ ಬಿಡಬೇಕು, ಫ್ರೀಯಾಗಿ ಬಿಟ್ರೆ ಎಲ್ಲವೂ ಸರಿಹೋಗುತ್ತದೆ. ಈ ಕುರಿತು ಗೃಹ ಮಂತ್ರಿಗಳಿಗೆ ಮನವಿ ಮಾಡುತ್ತೇನೆ ಎಂದು ಹೇಳಿದರು.

    ಇದೇ ವೇಳೆ ಹೆಚ್‌ಎಎಲ್ (HAL Airport) ವಿಮಾನ ನಿಲ್ದಾಣ ಆಂಧ್ರಪ್ರದೇಶಕ್ಕೆ ಶಿಫ್ಟ್ ಮಾಡುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈ ಘಟಕವನ್ನು ನಾವು ಕಬಳಿಸಲ್ಲ. ಇದರ ಅವಶ್ಯಕತೆ ನಮಗಿಲ್ಲ ಎಂದು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಹೇಳಿದ್ದಾರೆ. ಸುಳ್ಳು ಯಾವತ್ತೂ ನಿಜಾ ಆಗೋಕೆ ಸಾಧ್ಯವಿಲ್ಲ ಎಂದು ಸ್ಪಷ್ಟನೆ ನೀಡಿದರು.ಇದನ್ನೂ ಓದಿ: ವಿಜಯಪುರದ ರಸ್ತೆ, ರೈಲು, ವಾಯುಮಾರ್ಗ ಎಲ್ಲವೂ ಅಭಿವೃದ್ಧಿಯಾಗಲಿದೆ: ಎಂ.ಬಿ ಪಾಟೀಲ್

  • ಬೆಂಗಳೂರು – ವಿಜಯಪುರ ರೈಲು ಪ್ರಯಾಣ; ಸೋಮಣ್ಣ ಜೊತೆ ಎಂಬಿಪಿ ಮಾತುಕತೆ

    ಬೆಂಗಳೂರು – ವಿಜಯಪುರ ರೈಲು ಪ್ರಯಾಣ; ಸೋಮಣ್ಣ ಜೊತೆ ಎಂಬಿಪಿ ಮಾತುಕತೆ

    ಬೆಂಗಳೂರು: ರಾಜಧಾನಿಯಿಂದ ವಿಜಯಪುರ ಮತ್ತು ಬಾಗಲಕೋಟೆಗೆ ಈಗಿರುವ 15 ಗಂಟೆಗಳ ಪ್ರಯಾಣದ ಅವಧಿಯನ್ನು 10 ಗಂಟೆಗಳಿಗೆ ಇಳಿಸುವ ಸಂಬಂಧ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ್ (M B Patil), ಕೇಂದ್ರ ರೈಲ್ವೆ ಸಹಾಯಕ ಸಚಿವ ವಿ. ಸೋಮಣ್ಣ (V Somanna) ಅವರೊಂದಿಗೆ ಶನಿವಾರ ದೂರವಾಣಿ ಮಾತುಕತೆ ನಡೆಸಿದ್ದಾರೆ.

    ಈ ಸಂದರ್ಭದಲ್ಲಿ ಸಚಿವರು, ಈಗ ವಿಜಯಪುರ (Vijayapura), ಬಾಗಲಕೋಟೆಗೆ ಹೋಗುವ ರೈಲುಗಳು ಹುಬ್ಬಳ್ಳಿ ಮತ್ತು ಗದಗದಲ್ಲಿ ಇಂಜಿನ್ ಬದಲಿಸಿಕೊಳ್ಳಲು ಗಂಟೆಗಟ್ಟಲೆ ನಿಲ್ಲಬೇಕಾಗಿದೆ. 2 ಕಡೆ ಬೈಪಾಸ್ ಮೂಲಕ ರೈಲುಗಳನ್ನು ಸಾಗಿಹೋಗುವ ವ್ಯವಸ್ಥೆ ಆಗಬೇಕು. ಇದರಿಂದ ಗದಗ ಭಾಗದ ಜನತೆಗೂ ಅನುಕೂಲವಾಗುತ್ತದೆ. ಅಕಸ್ಮಾತ್ ಈಗಾಗಲೇ ಓಡುತ್ತಿರುವ ರೈಲುಗಳನ್ನು ಬೈಪಾಸ್ ಮೂಲಕ ಓಡಿಸುವುದು ಅಸಾಧ್ಯವಾದರೆ, ಹೊಸ ರೈಲುಗಳ ಸೇವೆಯನ್ನಾದರೂ ಆರಂಭಿಸಬೇಕು ಎಂದು ಕೋರಿದ್ದಾರೆ. ಇದನ್ನೂ ಓದಿ: ಮೊಬೈಲ್ ಬಳಕೆದಾರರ ಸೇರ್ಪಡೆ: ಏಪ್ರಿಲ್ ತಿಂಗಳಲ್ಲಿ ಕರ್ನಾಟಕದಲ್ಲಿ ರಿಲಯನ್ಸ್ Jio ನಂ.1

    ಕೇಂದ್ರ ಸಚಿವ ಸೋಮಣ್ಣ ಅವರು ಈ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಸದ್ಯದಲ್ಲೇ ತಾವು ದೆಹಲಿಗೆ ಹೋಗುತ್ತಿದ್ದು, ಈ ಸಂದರ್ಭದಲ್ಲಿ ಸಚಿವರನ್ನೂ ಹಾಗೂ ರೈಲ್ವೆ ಅಧಿಕಾರಿಗಳನ್ನೂ ಕಂಡು ಮಾತುಕತೆ ನಡೆಸುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ಡಿಸಿ, ಸಿಇಓಗಳ ಸಭೆಗೆ ತಡವಾಗಿ ಬಂದ ಡಿಸಿಎಂ, ಸಚಿವರು – ಸಿಎಂ ಸಿದ್ದರಾಮಯ್ಯ ಗರಂ

    ನೈರುತ್ಯ ರೈಲ್ವೆ ಮುಖ್ಯ ಆಡಳಿತಾಧಿಕಾರಿ ಅಜಯ್ ಶರ್ಮಾ ಅವರೊಂದಿಗೂ ಸಚಿವರು ಮಾತನಾಡಿದರು. ಈ ಭಾಗದಲ್ಲಿ ಬಾಕಿ ಇರುವ ರೈಲ್ವೆ ಹಳಿ ವಿದ್ಯುದೀಕರಣ ಜುಲೈ ಹೊತ್ತಿಗೆ ಮುಗಿಯಲಿದೆ ಎಂದು ಶರ್ಮ ಹೇಳಿದ್ದಾರೆ. ಇದಾದ ಮೇಲೆ ಬೆಂಗಳೂರಿನಿಂದ ವಿಜಯಪುರ ಮತ್ತು ಬಾಗಲಕೋಟೆ ನಡುವಿನ ರೈಲು ಪ್ರಯಾಣದ ಅವಧಿ ಗಣನೀಯವಾಗಿ ಕಡಿಮೆ ಆಗಲಿದೆ ಎಂದು ಹೇಳಿದ್ದಾರೆಂದು ತಿಳಿಸಿದ್ದಾರೆ.

  • ನೀಟ್ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದವರ ವಿರುದ್ಧ ಕ್ರಮ: ಬೋಸರಾಜು

    ನೀಟ್ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದವರ ವಿರುದ್ಧ ಕ್ರಮ: ಬೋಸರಾಜು

    ರಾಯಚೂರು: ಸರ್ಕಾರದಿಂದ ನಿರ್ದೇಶನ ಇದ್ದರೂ ಸಹ ಕೆಲವರು ಮಿಸ್ ಲೀಡ್ ಮಾಡ್ತಿದ್ದಾರೆ. ಅಂತಹವರ ವಿರುದ್ಧ ಕ್ರಮವಾಗುತ್ತದೆ ಎಂದು ಸಣ್ಣನೀರಾವರಿ ಸಚಿವ ಎನ್.ಎಸ್.ಬೋಸರಾಜು(N S Bosaraju) ಕಲಬುರಗಿಯಲ್ಲಿ(Kalaburagi) ನೀಟ್ ಪರೀಕ್ಷೆ ವೇಳೆ ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರ ತೆಗೆಸಿದ ಪ್ರಕರಣಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.

    ರಾಯಚೂರಿನಲ್ಲಿ ಮಾತನಾಡಿದ ಅವರು ಅಂತಹವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಅಂತ ಮುಖ್ಯಮಂತ್ರಿಗಳು ಹೇಳಿದ್ದಾರೆ. ತಕ್ಷಣ ಜನಿವಾರ ತೆಗೆಸಿದವರ ಮೇಲೆ ಕ್ರಮ ತೆಗದುಕೊಳ್ಳುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: ನೀಟ್ ಪರೀಕ್ಷೆ ಜನಿವಾರ ಕೇಸ್ – ಇಬ್ಬರು ಪರೀಕ್ಷಾ ಸಿಬ್ಬಂದಿ ವಿರುದ್ಧ ಎಫ್‌ಐಆರ್

    ಇನ್ನೂ ಹಾಲ್ ಟಿಕೆಟ್‌ನಲ್ಲಿ ಧಾರ್ಮಿಕ ಚಿಹ್ನೆ ಇರುವಂತ ಯಾವ ವಸ್ತು ಇಟ್ಟುಕೊಂಡು ಪರೀಕ್ಷೆಗೆ ಹೊಗಬಾರದು ಎಂಬ ಸೂಚನೆ ವಿಚಾರಕ್ಕೆ ಪ್ರತಿಕ್ರಿಯಿಸಿ ಅದು ರಾಜ್ಯ ಸರ್ಕಾರ ಸೂಚನೆ ಅಲ್ಲ. ಕೇಂದ್ರ ಸರ್ಕಾರದ ಸೂಚನೆ. ಹೀಗಾಗಿ ಕೇಂದ್ರ ಸಚಿವರಾದ ವಿ.ಸೋಮಣ್ಣ(V Somanna) ಅದನ್ನ ಹೇಳಿದ್ದಾರೆ. ಮಂಗಳಸೂತ್ರ ಹಾಗೂ ಜನಿವಾರ ತೆಗೆಯಬಾರದು ಎಂದು ಹೇಳಿದ್ದಾರೆ. ಅದೆಲ್ಲಾ ಕೇಂದ್ರ ಸರ್ಕಾರದ ಸೂಚನೆಗಳು ರಾಜ್ಯ ಸರ್ಕಾರದ್ದು ಅಲ್ಲ. ಅದಕ್ಕೆ ಕೇಂದ್ರ ಸರ್ಕಾರ ಉತ್ತರ ಕೊಡಬೇಕು ಎಂದರು.