Tag: V.Somanna

  • ‘ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಕಾಣೆಯಾಗಿದ್ದಾರೆ’ – 10 ದಿನಗಳಲ್ಲಿ ಹುಡುಕಿಕೊಡಿ ಎಂದ ಜೆಡಿಎಸ್ ಕಾರ್ಯಕರ್ತರು

    ‘ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಕಾಣೆಯಾಗಿದ್ದಾರೆ’ – 10 ದಿನಗಳಲ್ಲಿ ಹುಡುಕಿಕೊಡಿ ಎಂದ ಜೆಡಿಎಸ್ ಕಾರ್ಯಕರ್ತರು

    – ನ್ಯಾಯಾಲಯದ ಮೊರೆ ಹೋಗುವುದಾಗಿ ಎಚ್ಚರಿಕೆ

    ಮಡಿಕೇರಿ: ಕಳೆದ ಎರಡು ತಿಂಗಳಿಂದ ಜಿಲ್ಲೆಗೆ ಬಾರದಿರುವ ಉಸ್ತುವಾರಿ ಸಚಿವರು ಮತ್ತು ಕೊಡಗು ಸಂಸದರನ್ನು ಹುಡುಕಿಕೊಡುವಂತೆ ಕೊಡಗು ಜೆಡಿಎಸ್ ಜಿಲ್ಲಾ ಘಟಕದ ಮುಖಂಡರು ಎಸ್‍ಪಿಗೆ ದೂರು ನೀಡಿದ್ದಾರೆ.

    ಉಸ್ತುವಾರಿ ಸಚಿವ ವಿ. ಸೋಮಣ್ಣ ಮತ್ತು ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ಅವರು ಕಳೆದ ಎರಡು ತಿಂಗಳಿಂದ ಜಿಲ್ಲೆಗೆ ಆಗಮಿಸಿಲ್ಲ. ರಾಜ್ಯದಲ್ಲಿ ಕೊರೊನಾ ಆತಂಕ ತೀವ್ರವಾಗಿದ್ದು, ಜಿಲ್ಲೆಯಲ್ಲಿಯೂ ಈಗಾಗಲೇ ನಾಲ್ಕು ಸೋಂಕಿತ ಪ್ರಕರಣಗಳು ದಾಖಲಾಗಿವೆ. ಮತ್ತೊಂದೆಡೆ ನೆರೆಯ ಕೇರಳದಲ್ಲಿ ಮತ್ತು ಪಕ್ಕದ ಜಿಲ್ಲೆ ಮೈಸೂರಿನಲ್ಲಿ ಹಕ್ಕಿ ಜ್ವರ ಕೂಡ ತೀವ್ರಗೊಂಡಿದೆ. ಇಷ್ಟೆಲ್ಲಾ ಆದರೂ ಉಸ್ತುವಾರಿ ಸಚಿವರು ಮತ್ತು ಸಂಸದರು ಕನಿಷ್ಠ ಸೌಜನ್ಯಕ್ಕಾದರೂ ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ ಎಂದು ಜೆಡಿಎಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಜಿಲ್ಲೆಯಲ್ಲಿ ಕೊರೊನಾ ಸೋಂಕು ಎದುರಿಸುವುದಕ್ಕೆ ಅಗತ್ಯ ಔಷಧಿಗಳಿವೆಯಾ? ಅಥವಾ ಸೌಲಭ್ಯಗಳಿವೆಯಾ ಎಂದು ಪರಿಶೀಲನೆಯನ್ನೂ ಮಾಡಿಲ್ಲ. ಈ ಇಬ್ಬರನ್ನು ಯಾರಾದರೂ ಅಪಹರಣ ಮಾಡಿದ್ದಾರಾ? ಇಲ್ಲಾ ಕೊರೊನಾ ರೋಗವೇನಾದರೂ ಬಂದಿದೆಯಾ? ಇವೆಲ್ಲವನ್ನೂ ಪರಿಶೀಲಿಸಿ ಹುಡುಕಿಕೊಡಬೇಕು ಎಂದು ಎಸ್‍ಪಿಗೆ ಜೆಡಿಎಸ್ ಕಾರ್ಯಕರ್ತರು ದೂರು ನೀಡಿದ್ದಾರೆ. 10 ದಿನಗಳಲ್ಲಿ ಉಸ್ತವಾರಿ ಸಚಿವ ಹಾಗೂ ಸಂಸದರನ್ನು ಹುಡುಕಿಕೊಡಬೇಕು ಇಲ್ಲದಿದ್ದರೆ ರಾಜ್ಯ ಉಚ್ಛನ್ಯಾಯಾಲಯದ ಮೊರೆ ಹೋಗಲಾಗುವುದು ಎಂದು ಎಸ್‍ಪಿ ಸುಮನ್ ಡಿ.ಪಿ ಅವರಿಗೆ ಕೊಟ್ಟ ದೂರಿನಲ್ಲಿ ಉಲ್ಲೇಖಿಸಲಾಗಿದೆ.

  • ಬಜೆಟ್‍ನಲ್ಲಿ ಚಾಮುಂಡಿಗೆ ಚಿನ್ನದ ರಥ ಘೋಷಣೆ ಸಾಧ್ಯತೆ: ಸಚಿವ ಸೋಮಣ್ಣ

    ಬಜೆಟ್‍ನಲ್ಲಿ ಚಾಮುಂಡಿಗೆ ಚಿನ್ನದ ರಥ ಘೋಷಣೆ ಸಾಧ್ಯತೆ: ಸಚಿವ ಸೋಮಣ್ಣ

    – ನೆರೆ ಸಂತ್ರಸ್ತರಿಗೆ ಮನೆ ವಿತರಣೆ ವಿಚಾರಕ್ಕೆ ಸಚಿವರ ಪ್ರತಿಕ್ರಿಯೆ
    – ಕೃಷ್ಣನ ಲೆಕ್ಕ ಹೋಗಿ ರಾಮನ ಲೆಕ್ಕ ಮಾತ್ರ ಉಳಿದಿದೆ

    ಮೈಸೂರು: ಚಾಮುಂಡಿಬೆಟ್ಟದ ಚಾಮುಂಡಿ ತಾಯಿಗೆ ಚಿನ್ನದ ರಥ ನಿರ್ಮಾಣ ವಿಚಾರ ಈ ಬಾರಿಯ ಬಜೆಟ್‍ನಲ್ಲಿ ನಿರ್ಧಾರವಾಗುವ ವಿಶ್ವಾಸ ಇದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರೊಂದಿಗೆ ಮಾತನಾಡಿದ್ದೇನೆ. ಚಿನ್ನದ ರಥ ನಿರ್ಮಾಣ ಮಾಡುವುದಕ್ಕೆ ಬಜೆಟ್‍ನಲ್ಲಿ ಅನುದಾನ ಕೊಡಿಸುವ ಭರವಸೆಯನ್ನು ಅವರು ನೀಡಿದ್ದಾರೆ. ಸಪ್ತಪದಿ ಯೋಜನೆ ಅನುಷ್ಠಾನಕ್ಕೂ ನಮ್ಮ ಸರ್ಕಾರ ಸಿದ್ಧವಾಗಿದೆ. ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಯೋಜನೆ ಅನುಷ್ಠಾನಕ್ಕೆ ಜಿಲ್ಲಾಡಳಿತ ಕ್ರಮವಹಿಸಲಿದೆ ಎಂದರು.

    ಇನ್ನೊಂದು ತಿಂಗಳಲ್ಲಿ ಚಾಮುಂಡಿಬೆಟ್ಟ ಕಾಮಗಾರಿ ಪೂರ್ಣವಾಗಲಿದೆ. ಬೀದಿ ಬದಿ ವ್ಯಾಪಾರಿಗಳಿಗೆ ಅಂಗಡಿ ಮಳಿಗೆ ನೀಡುತ್ತೇವೆ. ಶೌಚಾಲಯ ಸೇರಿದಂತೆ ಎಲ್ಲ ಮೂಲಭೂತ ವ್ಯವಸ್ಥೆ ಮಾಡುತ್ತೇವೆ. ಚಾಮುಂಡಿಬೆಟ್ಟದ ಸಮಗ್ರ ಅಭಿವೃದ್ಧಿ ಶ್ರಮ ಹಾಕಿ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದರು.

    ರಾಜ್ಯದ ನೆರೆ ಸಂತ್ರಸ್ತರಿಗೆ ಮನೆ ವಿತರಣೆ ವಿಚಾರದಲ್ಲಿ ಕೃಷ್ಣನ ಲೆಕ್ಕ ಹೋಗಿ ರಾಮನ ಲೆಕ್ಕ ಮಾತ್ರ ಉಳಿದಿದೆ. ರಾಜ್ಯದಲ್ಲಿ 3.5. ಲಕ್ಷ ಮನೆ ವಿತರಣೆಗೆ ಎಲ್ಲ ಸಿದ್ಧತೆ ನಡೆದಿದೆ. ಮೊದಲ ಹಂತದಲ್ಲಿ 15 ಲಕ್ಷ ಮನೆಗಳ ವಿತರಣೆ ಅರ್ಜಿ ಬಂದಿತ್ತು. ಆಧಾರ್, ಬಿಪಿಎಲ್, ಎಪಿಎಲ್ ಕಾರ್ಡುಗಳನ್ನ ಲಿಂಕ್ ಮಾಡಿದ್ವಿ. ಆ ನಂತರ 15 ಲಕ್ಷದಿಂದ 6 ಲಕ್ಷಕ್ಕೆ ಬಂತು. ಇದೀಗ 3.5 ಲಕ್ಷ ನಿಜವಾದ ಸಂತ್ರಸ್ತರಿಗೆ ಮನೆ ವಿತರಣೆ ಸಿದ್ಧತೆ ನಡೆದಿದೆ. ಜೂನ್ ಅಂತ್ಯದ ಒಳಗೆ ಎಲ್ಲರಿಗೂ ಮನೆ ವಿತರಣೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

    ಕಾಮಗಾರಿ ಪರಿಶೀಲನೆ:
    ಸಚಿವ ವಿ.ಸೋಮಣ್ಣ ಅವರು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ನೆರವೇರಿಸಿದರು. ಬಳಿಕ ಚಾಮುಂಡಿಬೆಟ್ಟದಲ್ಲಿ ಜಿಲ್ಲಾಡಳಿತ ನಿರ್ಮಾಣ ಮಾಡುತ್ತಿರುವ ಅಂಗಡಿ ಮಳಿಗೆ ಕಾಮಗಾರಿ ಪರಿಶೀಲನೆ ಮಾಡಿದರು. ಬಹುಮಹಡಿ ಪಾರ್ಕಿಂಗ್ ಸಮೀಪದಲ್ಲೇ ಸಾಮೂಹಿಕ ಅಂಗಡಿ ಮಳಿಗೆ ನಿರ್ಮಾಣವಾಗುತ್ತಿದ್ದು, ಈ ಕಾಮಗಾರಿ ತುರ್ತಾಗಿ ಪೂರ್ಣಗೊಳಿಸುವಂತೆ ಸಚಿವರು ಸೂಚಿಸಿದರು. ಸಂಸದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ, ಪಾಲಿಕೆ ಆಯುಕ್ತರ ಸಮ್ಮುಖದಲ್ಲಿ ಈ ಪರಿಶೀಲನೆ ನಡೆಯಿತು. ಇನ್ನೊಂದು ತಿಂಗಳಲ್ಲಿ ಕೆಲಸ ಮುಗಿಸುವಂತೆ ಸಚಿವ ವಿ.ಸೋಮಣ್ಣ ಸೂಚನೆ ನೀಡಿದ್ದಾರೆ.

  • ಯತ್ನಾಳ್, ಸೋಮಣ್ಣ ವಿರುದ್ಧ ಬಿಜೆಪಿ ಉಗ್ರ ಕ್ರಮ ತೆಗೆದುಕೊಳ್ಳಲು ಎಎಪಿ ಆಗ್ರಹ

    ಯತ್ನಾಳ್, ಸೋಮಣ್ಣ ವಿರುದ್ಧ ಬಿಜೆಪಿ ಉಗ್ರ ಕ್ರಮ ತೆಗೆದುಕೊಳ್ಳಲು ಎಎಪಿ ಆಗ್ರಹ

    – ಕ್ರಮಕ್ಕೆ ಒತ್ತಾಯಿಸಿ ಎಎಪಿಯಿಂದ ಪತ್ರಿಕಾ ಪ್ರಕಟಣೆ

    ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ದೊರೆಸ್ವಾಮಿ ಅವರ ಬಗ್ಗೆ ಬಿಜೆಪಿಗರು ಇತ್ತೀಚಿಗೆ ನೀಡಿದ ಅವಹೇಳನಕಾರಿ ಹೇಳಿಕೆಗಳನ್ನು ಆಮ್ ಆದ್ಮಿ ಪಕ್ಷವು ತೀವ್ರವಾಗಿ ಖಂಡಿಸುತ್ತದೆ.

    ಈ ನಾಡು ಕಂಡ ಹಿರಿಯ ಜೀವಿ ದೊರೆಸ್ವಾಮಿ ಅವರ ಸ್ವಾತಂತ್ರ್ಯ ಹೋರಾಟಗಳನ್ನು ಅನುಮಾನಿಸುವ ಹಾಗೂ ಪ್ರಶ್ನಿಸುವ ಮಟ್ಟಿನ ಧಾಷ್ಟ್ರ್ಯ ತನವನ್ನು ತೋರಿಸುತ್ತಿರುವ, ನಕಲಿ ಹೋರಾಟಗಾರರು ಎಂದು ಹೇಳುತ್ತಿರುವ ಬಿಜೆಪಿ ಶಾಸಕ ಬಸವರಾಜ್ ಪಾಟೀಲ್ ಯತ್ನಾಳ್ ನಿಜಕ್ಕೂ ಮತಿಗೆಟ್ಟರುವ ಮತ್ತು ಬುದ್ಧಿಹೀನವಾಗಿರುವಂತೆ ಕಂಡುಬರುತ್ತಿದೆ.

    ಇವರ ಹೇಳಿಕೆಗಳಿಗೆ ಪ್ರಚೋದನೆ ಹಾಗೂ ಬೆಂಬಲವನ್ನು ನೀಡಿರುವ ರಾಜ್ಯದ ಸಚಿವ ವಿ. ಸೋಮಣ್ಣನವರ ಹೇಳಿಕೆಯನ್ನು ಸಹ ಆಮ್ ಆದ್ಮಿ ಪಕ್ಷವು ಕಟುವಾಗಿ ಖಂಡಿಸುತ್ತದೆ. ಈ ರೀತಿ ಸ್ವಾತಂತ್ರ್ಯ ಹೋರಾಟಗಾರರನ್ನು ನಿಂದಿಸುವುದು ಪರಿಪಾಠ ಬಿಜೆಪಿಗರಿಗೆ ಇದೇ ಮೊದಲೇನಲ್ಲ.

    ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ದೊರೆಸ್ವಾಮಿಯವರು ಅನೇಕ ದಶಕಗಳಿಂದ ಆಳುವ ಸರ್ಕಾರಗಳ ನಿರ್ಲಜ್ಜ ನಡೆಗಳನ್ನು ಪಕ್ಷಾತೀತವಾಗಿ ವಿರೋಧಿಸುತ್ತಲೇ ಬಂದಿರುವವರು. ಇಂತಹ ಹಿರಿಯ ಮುತ್ಸದ್ದಿಗಳನ್ನು ಒಂದು ಪಕ್ಷಕ್ಕೆ ಮಾತ್ರ ಸೀಮಿತಗೊಳಿಸಿ ಕಾಂಗ್ರೆಸ್ ಏಜೆಂಟ್, ಪಾಕಿಸ್ತಾನ ಏಜೆಂಟ್ ಎಂದು ಸಂಬೋಧಿಸುತ್ತಿರುವ ಬಿಜೆಪಿಗರ ಈ ಪರಿಯನ್ನು ರಾಜ್ಯದ್ಯಂತ ಜನತೆ ಒಕ್ಕೊರಲಿನಿಂದ ವಿರೋಧಿಸುತ್ತಿದೆ ಹಾಗೂ ಖಂಡಿಸುತ್ತದೆ.

    ಇನ್ನಾದರೂ ಈ ಇಬ್ಬರು ಮತಿಹೀನ ಮಹನೀಯರುಗಳ ವಿರುದ್ಧ ಭಾರತೀಯ ಜನತಾ ಪಕ್ಷ ಕ್ರಮ ಕೈಗೊಳ್ಳಲೇಬೇಕು ಹಾಗೂ ಇವರಿಬ್ಬರೂ ನಾಡಿನ ಜನತೆಯ ಮುಂದೆ ಕ್ಷಮೆ ಕೋರಬೇಕು ಎಂದು ಆಮ್ ಆದ್ಮಿ ಪಕ್ಷವು ಒತ್ತಾಯಿಸುತ್ತದೆ.

  • ಅಮೂಲ್ಯ ಲಿಯೋನಾ ಇನ್ನೂ ಕಣ್ಣೇ ಬಿಟ್ಟಿಲ್ಲ: ಸೋಮಣ್ಣ

    ಅಮೂಲ್ಯ ಲಿಯೋನಾ ಇನ್ನೂ ಕಣ್ಣೇ ಬಿಟ್ಟಿಲ್ಲ: ಸೋಮಣ್ಣ

    ಕೊಪ್ಪಳ: ಪಾಕಿಸ್ತಾನ ಜಿಂದಾಬಾದ್ ಎಂದು ದೇಶದ್ರೋಹದ ಘೋಷಣೆ ಕೂಗಿರುವ ಅಮೂಲ್ಯ ಲಿಯೋನಾ ಅವಳಿನ್ನೂ ಕಣ್ಣೇ ಬಿಟ್ಟಿಲ್ಲ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

    ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಯಾರೋ ಹೇಳಿಕೊಟ್ಟಿದ್ದಾರೆ. ಅದನ್ನು ಅವಳು ಹೇಳಿದ್ದಾಳೆ. ಇದು ಬಯಲಾಗಲಿದೆ. ಇದರ ಹಿಂದೆ ಷಡ್ಯಂತ್ರ ಮಾಡುವವರ ವಿರುದ್ಧ ತನಿಖೆ ಆರಂಭವಾಗಿದ್ದು, ಸರ್ಕಾರ ಇದನ್ನು ಗಂಭೀರವಾಗಿ ತೆಗೆದುಕೊಂಡಿದೆ. ಕೆಲವರು ಇನ್ನೊಬ್ಬರನ್ನು ತೃಪ್ತಿಪಡಿಸಲು ಹೇಳುತ್ತಿರಬಹುದು. ಇಂತಹ ಹೇಳಿಕೆ ನೀಡುವವರು ಈ ದೇಶದಲ್ಲಿ ಇರಲು ಅರ್ಹತೆ ಕಳೆದುಕೊಂಡಿದ್ದು, ಈ ದೇಶದಲ್ಲಿರಲು ಅವರು ನಾಲಾಯಕ್ ಎಂದು ಕಿಡಿಕಾರಿದರು.

    ಗೌರವಸ್ಥರು ಈ ದೇಶದ ಭಾವನೆ ಅರ್ಥ ಮಾಡಿಕೊಂಡವರು ಈ ರೀತಿ ಮಾತನಾಡೋದಿಲ್ಲ. ಇಂತಹ ಹೇಳಿಕೆ ನೀಡೋರು ಅಲ್ಲಿಯೇ ಹೋಗಲಿ. ಈ ದೇಶದ ಭಾವನೆ ಅರ್ಥ ಮಾಡಿಕೊಂಡು ಗೌರವದಿಂದ ಬದುಕಬೇಕು. ಇಲ್ಲದಿದ್ದರೆ ಜನ ಬಡಿಗೆ ತೆಗೆದುಕೊಳ್ತಾರೆ ಎಂದು ಎಚ್ಚರಿಸಿದರು. ಇದನ್ನೂ ಓದಿ: ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿ ಅಮೂಲ್ಯ ಲಿಯೋನಾ ಯಾರು?

    ಇದೇ ವೇಳೆ ಅಮೂಲ್ಯ ಲಿಯೋನಾಳನ್ನು ಮಾತನಾಡಲು ಬಿಡಬೇಕಿತ್ತು ಎಂದು ಡಿಕೆಶಿ ಹೇಳಿರುವ ವಿಷಯದ ಕುರಿತು ಪ್ರತಿಕ್ರಿಯಿಸಿದ ಸಚಿವರು, ಡಿ.ಕೆ ಶಿವಕುಮಾರ್ ಗಂಟೆಗೊಮ್ಮೆ ಬಣ್ಣ ಬದಲಾಯಿಸುತ್ತಾರೆ. ಡಿಕೆಶಿ ಮಾತನಾಡಿದ್ದು ಗೊತ್ತಿಲ್ಲ. ಯಾರೇ ಮಾತಾನಡಲಿ. ಇದು ತಪ್ಪು ಎಂದರು.

    ಅಮೂಲ್ಯ ಲಿಯೋನಾ ಹೇಳಿದ್ದೇನು?
    ಸಿಎಎ ಹಾಗೂ ಎನ್‍ಸಿಆರ್ ವಿರೋಧಿಸಿ ಗುರುವಾರ ಬೆಂಗಳೂರಿನ ಪ್ರೀಡಂ ಪಾರ್ಕಿನಲ್ಲಿ ಆಯೋಜಿಸಿದ್ದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಆಸಾದುದ್ದೀನ್ ಓವೈಸಿ ಭಾಗವಹಿಸಿದ್ದರು. ಈ ಕಾರ್ಯಕ್ರಮದ ವೇದಿಕೆಯಲ್ಲೇ ಚಿಕ್ಕಮಗಳೂರಿನ ಕೊಪ್ಪ ಮೂಲದ ಅಮೂಲ್ಯ ಲಿಯೋನಾ ಪಾಕಿಸ್ತಾನ ಜಿಂದಾಬಾದ್ ಎಂದು ಜೈಕಾರ ಕೂಗಿದ್ದು, ಸದ್ಯ ಜೈಲುಪಾಲಾಗಿದ್ದಾಳೆ. ಇದನ್ನೂ ಓದಿ: ನಂಗೆ ಚಿಕನ್ ಪಾಪ್ ಕಾರ್ನ್ ಬೇಕು, ಚಿತ್ರಾನ್ನ ಉಪ್ಪಿಟ್ಟು ಬೇಡ: ಅಮೂಲ್ಯ ಬೇಡಿಕೆ

  • ಸಿದ್ದರಾಮಯ್ಯರದ್ದು ಎಲುಬಿಲ್ಲದ ನಾಲಿಗೆ: ಸೋಮಣ್ಣ ಕಿಡಿ

    ಸಿದ್ದರಾಮಯ್ಯರದ್ದು ಎಲುಬಿಲ್ಲದ ನಾಲಿಗೆ: ಸೋಮಣ್ಣ ಕಿಡಿ

    ಕೊಪ್ಪಳ: ಮಾಜಿ ಸಿಎಂ ಸಿದ್ದರಾಮಯ್ಯ ಅವರದ್ದು ಎಲುಬಿಲ್ಲದ ನಾಲಿಗೆ ಎಂದು ಸಚಿವ ವಿ. ಸೋಮಣ್ಣ ವಾಗ್ದಾಳಿ ನಡೆಸಿದ್ದಾರೆ.

    ಕೊಪ್ಪಳದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮಾಜಿ ಆದ ಮೇಲೆ ಅವರ ಭಾಷೆ ಮುಖ್ಯ. ಸಿದ್ದರಾಮಯ್ಯ ಬೈ ಎಲೆಕ್ಷನ್ ಅಲ್ಲಿ ಇದ್ದಾಗ ಸೋಮಣ್ಣ ಪಾತ್ರ ಏನು ಅಂತ ಕೇಳಿ ಅವರನ್ನ ಎಂದು ಕಿಡಿಕಾರಿದರು. ಸಿದ್ದರಾಮಯ್ಯ ಏನಾದರೂ ಮಾತಾಡಲಿ, ನಾನು ಟೀಕೆ ಮಾಡಲ್ಲ. ಐದು ವರ್ಷ ಮುಖ್ಯಮಂತ್ರಿ ಆಗಿದ್ದವರಿಗೆ ಗಾಂಭೀರ್ಯತೆ ಮುಖ್ಯವಾಗಿದ್ದು ಎಂದು ಕಿಡಿಕಾರಿದರು.

    ಸಿದ್ದರಾಮಯ್ಯ ಮುಖ್ಯಮಂತ್ರಿಯಾಗೋ ಸಮಯದಲ್ಲಿ ಅರ್ಹತೆ ಇದ್ದವರು ಬಹಳ ಜನ ಇದ್ದರು. ಆದರೆ ಹಣೆ ಬರಹದಿಂದ ಸಿದ್ದರಾಮಯ್ಯ ಮುಖ್ಯಮಂತ್ರಿ ಆದರು. ದೇವರು ಹಣೆಬರದಲ್ಲಿ ಬರೆದಿದ್ದ ಹೀಗಾಗಿ ಅವರು ಸಿಎಂ ಆದರು ಎಂದು ಟಾಂಗ್ ಕೊಟ್ಟರು. ಬಳಿಕ ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ನಾನೇ ಅಂತಾರೆ, ಆದರೆ ನಿವೃತ್ತಿ ಪಡೆಯುತ್ತೇನೆ ಅಂತ ಅವರೇ ಬಹಳ ಸಲ ಹೇಳಿದ್ದಾರೆ ಎಂದು ಸೋಮಣ್ಣ ಹರಿಹಾಯ್ದರು.

    ಈ ಹಿಂದೆ ಕೂಡ ಸಿದ್ದರಾಮಯ್ಯ ಅವರ ಹೇಳಿಕೆಗೆ ಸೋಮಣ್ಣ ಕಿಡಿಕಾರಿದ್ದರು. ಭಾರತಕ್ಕೆ ಡೊನಾಲ್ಡ್ ಟ್ರಂಪ್ ಭೇಟಿಯಿಂದ ಯಾವುದೇ ಪ್ರಯೋಜನವಿಲ್ಲ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಸೋಮಣ್ಣ ತಿರುಗೇಟು ನೀಡಿದ್ದರು. ಈ ವಿಚಾರದಲ್ಲಿ ಸಿದ್ದರಾಮಯ್ಯ ಸಾಹೇಬ್ರಿಗೆ ಏನ್ ಗೊತ್ತು ಟ್ರಂಪ್ ಎಲ್ಲಿ, ಸಿದ್ದರಾಮಯ್ಯ ಎಲ್ಲಿ. ಅಮೆರಿಕ ದೇಶ ಎಲ್ಲಿ, ಸಿದ್ದರಾಮಯ್ಯ ಎಲ್ಲಿ. ಸಿದ್ದರಾಮಯ್ಯ ಸಿದ್ದರಾಮಯ್ಯನೇ, ಟ್ರಂಪ್ ಟ್ರಂಪ್ ಅವರೇ, ಮೋದಿ ಮೋದಿಯವರೇ ಎಂದು ಟೀಕೆಗೆ ತಿರುಗೇಟು ನೀಡಿದ್ದರು.

    ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿ, ಚಿಂತನೆಯಿಂದ ಅವರ ರಾಷ್ಟ್ರಕ್ಕೆ ಕೊಡಬೇಕಾದ ದೊಡ್ಡ ಸಂದೇಶ ಕೊಡುತ್ತಾರೆ. ಆದರೆ ಟ್ರಂಪ್ ಏನು ಮಾಡುತ್ತಾರೆ ಅನ್ನೊದಕ್ಕಿಂತ ಅವರು ಹಿರಿಯಣ್ಣ. ನಮ್ಮ ಭಾರತಕ್ಕೆ ಬಂದಿರುವುದು ನಮಗೆ ಸಂತೋಷ ಉಂಟುಮಾಡಿದೆ. ಆದರೆ ಸಿದ್ದರಾಮಯ್ಯ ಎಲ್ಲವನ್ನ ಕಾಮಾಲೆ ಕಣ್ಣಿನಲ್ಲಿ ನೋಡೋದನ್ನ ಬಿಡಬೇಕು ಎಂದು ಸೋಮಣ್ಣ ಅವರು ಮಾತಿನ ಚಾಟಿ ಬೀಸಿದ್ದರು.

    ಅಲ್ಲದೇ ತಾವು ದೂರ ದೃಷ್ಟಿಯಲ್ಲಿ ನೋಡಬೇಕು. ರಾಜ್ಯದ 5 ವರ್ಷ ಮುಖ್ಯಮಂತ್ರಿಯಾಗಿದ್ದವರು ನೀವು, ಈ ರೀತಿಯಲ್ಲಿ ಮಾತನಾಡೋದು ಬೇಡ. ನೀವು ಎತ್ತರಕ್ಕೆ ಬೆಳೆದ ವ್ಯಕ್ತಿ ಎಂದು ನಗುಮುಖದಲ್ಲಿಯೇ ಸಿದ್ದರಾಮಯ್ಯರ ವಿರುದ್ಧ ಸೋಮಣ್ಣ ಟಾಂಗ್ ಕೊಟ್ಟಿದ್ದರು.

  • ಬಡವರಿಗಾಗಿ ಈ ವರ್ಷದಲ್ಲಿ 50 ಸಾವಿರ ಮನೆಗಳ ನಿರ್ಮಾಣ – ಸೋಮಣ್ಣ ಭರವಸೆ

    ಬಡವರಿಗಾಗಿ ಈ ವರ್ಷದಲ್ಲಿ 50 ಸಾವಿರ ಮನೆಗಳ ನಿರ್ಮಾಣ – ಸೋಮಣ್ಣ ಭರವಸೆ

    ಬೆಂಗಳೂರು: ಬಡವರಿಗೆ ಸೂರು ಕಲ್ಪಿಸುವ ಸಲುವಾಗಿ ವರ್ಷಾಂತ್ಯದ ವೇಳೆಗೆ 50 ಸಾವಿರ ಮನೆಗಳನ್ನು ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

    ನೆಲಮಂಗಲ ಸಮೀಪದ ದಾಸನಪುರ ಹೋಬಳಿಯ ಅಗ್ರಹಾರಪಾಳ್ಯದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಸೋಮಣ್ಣ ಅವರು ಈ ಬಗ್ಗೆ ಭರವಸೆ ನೀಡಿದರು. ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ ವತಿಯಿಂದ 1 ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆಯಡಿ ಜಿ+3 ಮಾದರಿಯಲ್ಲಿ ನಿರ್ಮಿಸುತ್ತಿರುವ ವಸತಿ ಸಮುಚ್ಚಯ ಕಾಮಗಾರಿಗೆ ಸೋಮಣ್ಣ ಅವರು ಶಂಕುಸ್ಥಾಪನೆ ನೆರವೇರಿಸಿದರು.

    ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೇಂದ್ರದಿಂದ 600 ಕೋಟಿ ರೂ. ಅನುದಾನ ನೀಡಿದ್ದರೂ ಕಾಂಗ್ರೆಸ್ ಹಾಗೂ ಸಮ್ಮಿಶ್ರ ಸರ್ಕಾರಗಳ ಅವಧಿಯಲ್ಲಿ ಚಾಲನೆ ಸಿಗದೆ, ಈ ಯೋಜನೆಯು ಕಳೆದ ನಾಲ್ಕು ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ. ವಸತಿ ಯೋಜನೆಯ ಭಾಗವಾಗಿ ಇಂದು 843 ಬಹುಮಹಡಿ ಮನೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿದ್ದು, ಒಂದು ವರ್ಷದ ಅವಧಿಯಲ್ಲಿ ಕನಿಷ್ಟ 50 ಸಾವಿರ ಮನೆ ನಿರ್ಮಾಣ ಮಾಡಿ ಬಡವರಿಗೆ ಹಸ್ತಾಂತರ ಮಾಡಲಾಗುವುದು. ಯಲಹಂಕ ಕ್ಷೇತ್ರದಲ್ಲಿ 3 ಸಾವಿರ ಮನೆಗಳ ನಿರ್ಮಾಣ ಮಾಡಲಾಗುವುದು ಎಂದು ಭರವಸೆ ನೀಡಿದರು.

    ಸರ್ಕಾರದಿಂದ ಕಟ್ಟುತ್ತಿರುವ ಆಸ್ಪತ್ರೆ, ಆಟದ ಮೈದಾನ, ಕೊಳಚೆ ನೀರು ಸಂಸ್ಕರಣಾ ಘಟಕ ಸೇರಿ ಅಗತ್ಯ ಮೂಲಸೌಲಭ್ಯಗಳನ್ನು ಸಮುಚ್ಚಯಗಳಲ್ಲಿ ಒದಗಿಸುವ ಮೂಲಕ ಪ್ರಧಾನಿ ಮೋದಿ ಹಾಗೂ ಸಿಎಂ ಯಡಿಯೂರಪ್ಪ ಅವರ ಮಹತ್ವಾಕಾಂಕ್ಷಿ ವಸತಿ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುವುದು ಎಂದರು.

    ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ವಸತಿ ಯೋಜನೆಗಳಲ್ಲಿ ಲಭ್ಯವಿರುವ ಸುಮಾರು 4 ಲಕ್ಷ ರೂ. ಅನುದಾನ ಹಾಗೂ ಬ್ಯಾಂಕ್‍ಗಳಲ್ಲಿ 2 ಲಕ್ಷ ರೂ. ಸಾಲ ಸೌಲಭ್ಯ ಒದಗಿಸುವ ಮೂಲಕ ಸುಮಾರು 6 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಿಸಿ ಬಡವರ ಕನಸನ್ನು ನನಸು ಮಾಡಲು ಬದ್ಧವಿರುವುದಾಗಿ ತಿಳಿಸಿದರು.

    ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್.ಆರ್ ವಿಶ್ವನಾಥ್ ಮಾತನಾಡಿ, ಯಲಹಂಕವನ್ನು ಗುಡಿಸಲು ರಹಿತ ಮಾದರಿ ಕ್ಷೇತ್ರವನ್ನಾಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಹಿಂದಿನ ಸರ್ಕಾರಗಳ ಆಡಳಿತದ ಅವಧಿಯಲ್ಲಿ ಕಾರಣಾಂತರಗಳಿಂದ ಮನೆ ಬಡವರಿಗೆ ನೀಡಲು ಸಾಧ್ಯವಾಗಿರಲಿಲ್ಲ. ಪ್ರಧಾನ ಮಂತ್ರಿ ಅವಾಸ್ ಯೋಜನೆಯಡಿ ಮನೆ ನಿರ್ಮಾಣ ಮಾಡಲಾಗುತ್ತಿದೆ. ಕ್ಷೇತ್ರದ, ಕುಕ್ಕನಹಳ್ಳಿ, ತೋಟಗೆರೆ, ಪಿಳ್ಳಹಳ್ಳಿ, ಲಕ್ಷ್ಮಿಪುರ, ಬಿಳಿಜಾಜಿ, ದಾಸನಪುರ ಸೇರಿದಂತೆ ಇನ್ನಿತರ ಗ್ರಾಮಗಳಲ್ಲಿ ಮನೆ ನಿರ್ಮಾಣ ಮಾಡಲಾಗುವುದು. ಕ್ಷೇತ್ರದಲ್ಲಿ 10 ಸಾವಿರ ಮನೆ ನಿರ್ಮಾಣ ಮಾಡುವ ಗುರಿ ಇದೆ. ಸರ್ಕಾರದಿಂದ ಸಿಗುವ ಎಲ್ಲಾ ಯೋಜನೆಗಳನ್ನು ಕ್ಷೇತ್ರಕ್ಕೆ ತರುವುದಾಗಿ ಭರವಸೆ ನೀಡಿದರು.

    ಜಿಲ್ಲಾಧಿಕಾರಿ ಶಿವಮೂರ್ತಿ, ರಾಜೀವ್ ಗಾಂಧಿ ವಸತಿ ನಿಗಮ ನಿ. ಎಂಡಿ ಡಾ.ರಾಮ ಪ್ರಸಾದ್ ಮನೋಹರ್, ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ಬೆಂಗಳೂರು ನಗರ ಜಿಲ್ಲಾ ಪಂಚಾಯತಿ ಅಧ್ಯಕ್ಷ ಜಿ.ಮರಿಸ್ವಾಮಿ, ಜಿ.ಪಂ ಸದಸ್ಯ ರವಿಕುಮಾರ್, ಬೆಂಗಳೂರು ಉತ್ತರ ತಾಲೂಕು ತಹಶೀಲ್ದಾರ್ ಶಿವರಾಜ್, ಗೋಪಾಲಪುರ ಗ್ರಾ.ಪಂ ಅಧ್ಯಕ್ಷ ಟಿ.ಎಂ ಬಸವೇಗೌಡ ಸೇರಿ ಯಲಹಂಕ ಕ್ಷೇತ್ರ ಬಿಜೆಪಿ ಅಧ್ಯಕ್ಷ ಹನುಮಯ್ಯ ಇನ್ನಿತರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

    ಮನೆಗಳು ಹೇಗಿರಲಿವೆ?
    ಸುಮಾರು 5 ಎಕ್ರೆ ಜಮೀನಿನಲ್ಲಿ ಜಿ+3 ಮಾದರಿಯಲ್ಲಿ ನಿರ್ಮಿಸುತ್ತಿರುವ ವಸತಿ ಸಮುಚ್ಚಯದಲ್ಲಿ 836 ಮನೆಗಳನ್ನು ನಿರ್ಮಿಸಲಾಗುತ್ತಿದೆ. ಪ್ರತಿ ಮನೆಯನ್ನು 30 ಚ.ಮೀ ವಿಸ್ತೀರ್ಣದಲ್ಲಿ ಒಂದು ಹಾಲ್, ಬೆಡ್ ರೂಂ, ಅಡುಗೆಮನೆ ಸೇರಿದಂತೆ ಪ್ರತ್ಯೇಕ ಸ್ಥಾನದ ಮನೆ, ಶೌಚಾಲಯ, ಕಾಂಕ್ರೀಟ್ ಗೋಡೆಗಳು, ನೆಲಹಾಸಿಗೆಗೆ ವೆಟ್ರಿಫೈಡ್ ಟೈಲ್ಸ್, ಗ್ರಾನೈಟ್ ಬಳಸಿ ಸುಸಜ್ಜಿತವಾಗಿ ನಿರ್ಮಿಸಲಾಗುತ್ತಿದೆ. ಜೊತೆಗೆ ಮೂಲಭೂತ ಸೌಕರ್ಯಗಳಾದ ರಸ್ತೆ, ಚರಂಡಿ, ಕುಡಿಯುವ ನೀರು, ಪಂಪ್ ರೂಂ, ಮಳೆ ನೀರು ಕೊಯ್ಲು ಮುಂತಾದ ವ್ಯವಸ್ಥೆಯನ್ನು ಕೂಡ ಒದಗಿಸಲಾಗುತ್ತಿದೆ.

  • ಸಿದ್ದರಾಮಯ್ಯ ಸಾಹೇಬ್ರಿಗೆ ಏನ್ ಗೊತ್ತು, ಎಲ್ಲವನ್ನ ಕಾಮಾಲೆ ಕಣ್ಣಿನಲ್ಲಿ ನೋಡೋದು ಬಿಡಿ: ಸೋಮಣ್ಣ ಟಾಂಗ್

    ಸಿದ್ದರಾಮಯ್ಯ ಸಾಹೇಬ್ರಿಗೆ ಏನ್ ಗೊತ್ತು, ಎಲ್ಲವನ್ನ ಕಾಮಾಲೆ ಕಣ್ಣಿನಲ್ಲಿ ನೋಡೋದು ಬಿಡಿ: ಸೋಮಣ್ಣ ಟಾಂಗ್

    ಬೆಂಗಳೂರು: ಇಂದು ಭಾರತಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ವಸತಿ ಸಚಿವ ವಿ.ಸೋಮಣ್ಣ ಗೇಲಿ ಮಾಡಿದ್ದಾರೆ.

    ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ಅಗ್ರಹಾರ ಪಾಳ್ಯದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಭಾರತಕ್ಕೆ ಡೊನಾಲ್ಡ್ ಟ್ರಂಪ್ ಭೇಟಿಯಿಂದ ಯಾವುದೇ ಪ್ರಯೋಜನವಿಲ್ಲ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ತಿರುಗೇಟು ನೀಡಿದರು. ಈ ವಿಚಾರದಲ್ಲಿ ಸಿದ್ದರಾಮಯ್ಯ ಸಾಹೇಬ್ರಿಗೆ ಏನ್ ಗೊತ್ತು ಟ್ರಂಪ್ ಎಲ್ಲಿ, ಸಿದ್ದರಾಮಯ್ಯ ಎಲ್ಲಿ. ಅಮೆರಿಕ ದೇಶ ಎಲ್ಲಿ, ಸಿದ್ದರಾಮಯ್ಯ ಎಲ್ಲಿ. ಸಿದ್ದರಾಮಯ್ಯ ಸಿದ್ದರಾಮಯ್ಯನೇ, ಟ್ರಂಪ್ ಟ್ರಂಪ್ ಅವರೇ, ಮೋದಿ ಮೋದಿಯವರೇ ಎಂದು ಟೀಕೆಗೆ ತಿರುಗೇಟು ನೀಡಿದರು.

    ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿ, ಚಿಂತನೆಯಿಂದ ಅವರ ರಾಷ್ಟ್ರಕ್ಕೆ ಕೊಡಬೇಕಾದ ದೊಡ್ಡ ಸಂದೇಶ ಕೊಡುತ್ತಾರೆ. ಆದರೆ ಟ್ರಂಪ್ ಏನು ಮಾಡುತ್ತಾರೆ ಅನ್ನೊದಕ್ಕಿಂತ ಅವರು ಹಿರಿಯಣ್ಣ. ನಮ್ನ ಭಾರತಕ್ಕೆ ಬಂದಿರುವುದು ನಮಗೆ ಸಂತೋಷ ಉಂಟುಮಾಡಿದೆ. ಆದರೆ ಸಿದ್ದರಾಮಯ್ಯ ಎಲ್ಲವನ್ನ ಕಾಮಾಲೆ ಕಣ್ಣಿನಲ್ಲಿ ನೋಡೋದನ್ನ ಬಿಡಬೇಕು ಎಂದು ಸೋಮಣ್ಣ ಅವರು ಕಿಡಿಕಾರಿದರು.

    ಅಲ್ಲದೇ ತಾವು ದೂರ ದೃಷ್ಟಿಯಲ್ಲಿ ನೋಡಬೇಕು. ರಾಜ್ಯದ 5 ವರ್ಷ ಮುಖ್ಯಮಂತ್ರಿಯಾಗಿದ್ದವರು ನೀವು, ಈ ರೀತಿಯಲ್ಲಿ ಮಾತನಾಡೋದು ಬೇಡ. ನೀವು ಎತ್ತರಕ್ಕೆ ಬೆಳೆದ ವ್ಯಕ್ತಿ ಎಂದು ನಗುಮುಖದಲ್ಲಿಯೇ ಸಿದ್ದರಾಮಯ್ಯರ ವಿರುದ್ಧ ಸೋಮಣ್ಣ ಮಾತಿನ ಚಾಟಿ ಬೀಸಿದರು.

  • ಬೆಳ್ಳಂಬೆಳಗ್ಗೆ ಲಾಲ್ ಬಾಗ್‍ನಲ್ಲಿ ಸೋಮಣ್ಣ ರೌಂಡ್ಸ್

    ಬೆಳ್ಳಂಬೆಳಗ್ಗೆ ಲಾಲ್ ಬಾಗ್‍ನಲ್ಲಿ ಸೋಮಣ್ಣ ರೌಂಡ್ಸ್

    ಬೆಂಗಳೂರು: ಬೆಳ್ಳಂಬೆಳಗ್ಗೆ ಲಾಲ್ ಬಾಗ್ ಉದ್ಯಾನವನಕ್ಕೆ ವಸತಿ ತೋಟಗಾರಿಕಾ ಮತ್ತು ರೇಷ್ಮೆ ಸಚಿವರಾದ ವಿ. ಸೋಮಣ್ಣ ಭೇಟಿ ಕೊಟ್ಟಿದ್ದಾರೆ. ಮುಂಜಾನೆ ಲಾಲ್ ಬಾಗ್‍ನಲ್ಲಿ ವಾಯು ವಿಹಾರ ಮಾಡಿ, ಲಾಲ್ ಬಾಗ್‍ಗೆ ವಾಯು ವಿಹಾರಕ್ಕೆ ಬಂದಿದ್ದ ನಾಗರಿಕರ ಜೊತೆ ಸಂವಾದ ನಡೆಸಿದ್ದಾರೆ.

    ಲಾಲ್ ಬಾಗ್ ರೌಂಡ್ಸ್ ಹಾಕಿ ಗ್ಲಾಸ್ ಹೌಸ್, ರೋಜ್ ಗಾರ್ಡನ್, ಲಾಲ್ ಬಾಗ್ ಕೆರೆ ಮತ್ತು ಫಾಲ್ಸ್ ಅನ್ನು ಸಚಿವರು ವೀಕ್ಷಣೆ ಮಾಡಿದರು. ನಾಗರಿಕರ ಜೊತೆ ಮಾತನಾಡಿ ನಿಮಗೆ ಏನಾದರೂ ಸಮಸ್ಯೆ ಇದ್ದರೆ ಹೇಳಿ, ಉದ್ಯಾನವನದಲ್ಲಿ ಏನೇ ಕೆಲಸ ಆಗಬೇಕಾದರು ತಿಳಿಸಿ ಎಂದರು.

    ಲಾಲ್ ಬಾಗ್ ರೌಂಡ್ಸ್ ಹಾಕಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಗಣರಾಜ್ಯೋತ್ಸವದ ಬಳಿಕ ನಾವು ಇಲ್ಲಿಗೆ ಭೇಟಿ ನೀಡಿದ್ದೇವೆ. ಮೊನ್ನೆಯಷ್ಟೇ ಕಬ್ಬನ್ ಪಾರ್ಕ್‍ಗೆ ಹೋಗಿದ್ದೆ. ವಾಕರ್ಸ್ ಆರೋಗ್ಯ ತಪಾಸಣೆಗೆ ಆಸ್ಪತ್ರೆಯನ್ನು ಮಾಡಲಾಗಿದೆ. ಸಾರ್ವಜನಿಕರು ನೆಮ್ಮದಿಯಿಂದ ವಾಕ್ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ. ಮುಂದಿನ ತಿಂಗಳು ಆಯವ್ಯಯ ಮಂಡನೆ ಮಾಡಲಾಗುತ್ತದೆ. ಇದರಲ್ಲಿ ತೋಟಗಾರಿಕೆ ಇಲಾಖೆ ಅಭಿವೃದ್ಧಿಗೆ ಹಣ ಇಡುವಂತೆ ಮನವಿ ಮಾಡಲಾಗಿದೆ. ಫೆ. 3ರಂದು ಸಿಎಂ ಚರ್ಚೆಗೆ ಕರೆದಿದ್ದಾರೆ. ಇದನ್ನು ಇನ್ನೂ ಮೇಲ್ದರ್ಜೆಗೆ ಕೊಂಡೊಯ್ಯಲು ಚಿಂತನೆ ಮಾಡಲಾಗಿದೆ. ಕೆಂಪೇಗೌಡರ ಚಿಂತನೆಗೆ ಮೀರಿ ಬೆಂಗಳೂರು ಬೆಳೆಯುತ್ತಿದೆ ಎಂದು ತಿಳಿಸಿದರು.

    ಸಂಪುಟ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಸೋಮಣ್ಣ, ಹೈಕಮಾಂಡ್ ಇದೆ, ಅನುಭವಿ ಸಿಎಂ ಇದ್ದಾರೆ. ತಿಂಗಳ ಕೊನೆಯಲ್ಲಿ ಸಂಪುಟ ವಿಸ್ತರಣೆ ಮಾಡ್ತಿನಿ ಅಂತ ಹೇಳಿದ್ದಾರೆ. ಅವರು ಸ್ಪಷ್ಟವಾಗಿ ಹೇಳಿದ್ದಾರೆ ತಿಂಗಳ ಕೊನೆಯಲ್ಲಿ ಸಂಪುಟ ವಿಸ್ತರಣೆ ಅಂತ. ಯಡಿಯೂರಪ್ಪ ನಿಂತ ನೀರಲ್ಲ, ಅವರು ಹೈಕಮಾಂಡ್ ಬಳಿ ಏನು ಮಾತನಾಡಿದ್ದಾರೆ ಎಂದು ಗೊತ್ತಿಲ್ಲ. ಹೈಕಮಾಂಡ್ ಕೂಡ ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡಿದೆ. ನಾನು ಊಹಾಪೋಹದವನಲ್ಲ ಹಿರಿಯ ಸಚಿವರಿಗೆ ಕೋಕ್ ನೀಡುವ ಬಗ್ಗೆ ಖಂಡಿತವಾಗಿಯೂ ಗೊತ್ತಿಲ್ಲ ಎಂದು ಹೇಳಿದರು.

  • ದೇವೇಗೌಡ್ರು ಕುಮಾರಸ್ವಾಮಿಗೆ ಸರಿಯಾಗಿ ಟ್ರೈನಿಂಗ್ ಕೊಟ್ಟಿಲ್ಲ – ವಿ ಸೋಮಣ್ಣ

    ದೇವೇಗೌಡ್ರು ಕುಮಾರಸ್ವಾಮಿಗೆ ಸರಿಯಾಗಿ ಟ್ರೈನಿಂಗ್ ಕೊಟ್ಟಿಲ್ಲ – ವಿ ಸೋಮಣ್ಣ

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಗೆ ದೇವೇಗೌಡರು ಸರಿಯಾದ ರೀತಿಯಲ್ಲಿ ತರಬೇತಿ ನೀಡಿಲ್ಲ ಅನಿಸುತ್ತದೆ ಎಂದು ವಸತಿ ಸಚಿವ ವಿ. ಸೋಮಣ್ಣ ಹೆಚ್‍ಡಿಕೆ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.

    ಇಂದು ಮುಂಜಾನೆ ಕಬ್ಬನ್ ಪಾರ್ಕಿನಲ್ಲಿ ಮಾತನಾಡಿದ ಸೋಮಣ್ಣ ಮಂಗಳೂರು ಬಾಂಬ್ ಪ್ರಕರಣದ ಬಗ್ಗೆ ಹೆಚ್‍ಡಿಕೆ ಟೀಕೆಗೆ ಖಾರವಾಗಿ ತಿರುಗೇಟು ನೀಡಿದರು. ಹೆಚ್‍ಡಿ ಕುಮಾರಸ್ವಾಮಿ ಎರಡು ಬಾರಿ ರಾಜ್ಯಕ್ಕೆ ಮುಖ್ಯಮಂತ್ರಿಯಾಗಿದ್ದವರು ಅವರ ಬಾಯಿಯಲ್ಲಿ ಇಂತಹ ಮಾತುಗಳು ಸಲ್ಲದು. ಕುಮಾರಸ್ವಾಮಿಗೆ ಇಂತಹ ಕೀಳುಮಟ್ಟದ ಹೇಳಿಕೆಗಳು ಶೋಭೆ ತರುವುದಿಲ್ಲ ಎಂದು ಹೇಳಿದರು.

    ದಕ್ಷ ಪೊಲೀಸ್ ಅಧಿಕಾರಿಗಳ ದಕ್ಷತೆಯನ್ನ ಕುಗ್ಗಿಸುತ್ತವೇ ಇಂತಹ ಹೇಳಿಕೆಗಳು. ಕುಮಾರಸ್ವಾಮಿಯರು ಕೆಲವೊಮ್ಮೆ ಹಿಟ್ ಅಂಡ್ ರನ್ ಮಾಡುತ್ತಾರೆ. ಇದು ಅವರಿಗೂ ಒಳ್ಳೆಯದಲ್ಲ. ಕುಮಾರಸ್ವಾಮಿಯರವರ ಈ ಹೇಳಿಕೆಯನ್ನು ದೇವೇಗೌಡರು ಸಿರಿಯಸ್ ಆಗಿ ತಗೆದುಕೊಂಡಿಲ್ಲ ಅನ್ನಿಸುತ್ತೆ. ಕುಮಾರಸ್ವಾಮಿ ಗಂಟೆಗೊಂದು ಹೇಳಿಕೆ ನೀಡಿ ನಾನು ಮಾತನಾಡಿಲ್ಲ ಅಂತಾರೆ ಎಂಧು ವ್ಯಂಗ್ಯವಾಡಿದರು.

    ಮಂಗಳೂರಿನಲ್ಲಿ ಗಣರಾಜ್ಯೋತ್ಸವ ಸ್ವಾತಂತ್ರ್ಯ ದಿನಾಚಾರಣೆಗೂ ಮುನ್ನ ಪೊಲೀಸ್ರು ಅಣಕು ಪ್ರದರ್ಶನ ಮಾಡುವ ರೀತಿಯಲ್ಲಿ, ಮಂಗಳೂರು ಕಮಿಷನರ್ ಹರ್ಷ ಅಣಕು ಪ್ರದರ್ಶನ ಮಾಡಿ ಜನರಲ್ಲಿ ಆತಂಕ ಹುಟ್ಟಿಸಿದ್ದಾರೆ ಎಂದು ಕುಮಾರಸ್ವಾಮಿಯವರು ವ್ಯಂಗ್ಯವಾಡಿದರು.

  • ಪಂಚಶೀಲನಗರದ ಕೆಂಪೇಗೌಡ ಬಿಲ್ಡಿಂಗ್ ಕೆಡವಿಸಿದಕ್ಕೆ ಸೋಮಣ್ಣ ವಿರುದ್ಧ ಪ್ರತಿಭಟನೆ

    ಪಂಚಶೀಲನಗರದ ಕೆಂಪೇಗೌಡ ಬಿಲ್ಡಿಂಗ್ ಕೆಡವಿಸಿದಕ್ಕೆ ಸೋಮಣ್ಣ ವಿರುದ್ಧ ಪ್ರತಿಭಟನೆ

    ಬೆಂಗಳೂರು: ನಾಡ ಪ್ರಭು ಕೆಂಪೇಗೌಡರು ಕಟ್ಟಿದ ನಾಡು ಬೆಂಗಳೂರಿನಲ್ಲಿ ಕೆಂಪೇಗೌಡರ ಯುವಕ ಸಂಘದ ಕಟ್ಟಡವನ್ನ ಸ್ಥಳೀಯ ಶಾಸಕರು ಉದ್ದೇಶ ಪೂರ್ವಕವಾಗಿ ಕೆಡವಿದ್ದಾರೆ ಎಂದು ಆರೋಪಿಸಿ ಇಂದು ಪ್ರತಿಭಟನೆ ಮಾಡಿದರು.

    ಬೆಂಗಳೂರಿನ ಕಾವೇರಿಪುರಂ ವಾರ್ಡ್ ನ ಪಂಚಶೀಲನಗರದಲ್ಲಿ ಕೆಂಪೇಗೌಡ ಕಟ್ಟಡ ಇತ್ತು. ಅಲ್ಲಿನ ಯುವಕರು ನಾಡ ಪ್ರಭು ಕೆಂಪೇಗೌಡ ಯುವಕರ ಸಂಘದ ಕಚೇರಿಯನ್ನ ಮಾಡಿಕೊಂಡಿದ್ದರು. ಸಂಘದ ಯುವಕರು ಕಳೆದ ಚುನಾವಣಾ ಸಮಯದಲ್ಲಿ ಪ್ರಿಯಾಕೃಷ್ಣಗೆ ಸಪೋರ್ಟ್ ಮಾಡಿದ್ದರು ಎಂದು ಈ ಕಟ್ಟಡವನ್ನು ಸಚಿವ ವಿ.ಸೋಮಣ್ಣ ಅವರೇ ಬಿಬಿಎಂಪಿಗೆ ಹೇಳಿ ಹೊಡೆದಾಕಿಸಿದ್ದಾರೆ ಎಂದು ಆರೋಪಿಸಿ ಇಂದು ಮೂಡಲಪಾಳ್ಯ ವೃತ್ತದಲ್ಲಿ ಸಂಘದ ಕಾರ್ಯಕರ್ತರು ಪ್ರತಿಭಟನೆ ಮಾಡಿದರು.

    ಸಚಿವ ಸೋಮಣ್ಣರ ವಿರುದ್ಧ ದಿಕ್ಕಾರ ಕೂಗಿ ಇದು ನಾಡಪ್ರಭು ಕೆಂಪೇಗೌಡರಿಗೆ ಮಾಡಿದ ಅಪಮಾನ ಎಂದು ಆಕ್ರೋಶ ವ್ಯಕ್ತಪಡಿಸಿದರು. ವಿ.ಸೋಮಣ್ಣ ಉದ್ದೇಶಪೂರ್ವಕವಾಗಿ ನಮ್ಮ ಸಂಘದ ಕಟ್ಟಡವನ್ನ ಕೆಡೆವಿಸಿದ್ದಾರೆ. ಇದು ಒಕ್ಕಲಿಗರ ಮೇಲೆ ಸೋಮಣ್ಣ ಮಾಡುತ್ತಿರೋ ದೌರ್ಜನ್ಯ. ಈ ಸಂಬಂಧ ಶ್ರೀ ನಿರ್ಮಾಲನಂದನಾಥ ಸ್ವಾಮೀಜಿಗಳಿಗೆ ದೂರು ನೀಡುತ್ತೇವೆ ಎಂದು ತಿಳಿಸಿದರು.

    ನಮ್ಮ ಕಟ್ಟಡದ ಜಾಗ ನಮಗೆ ಬಿಟ್ಟು ಕೊಡಬೇಕು ಜೊತೆಗೆ ಸಚಿವರು ಕ್ಷಮೆ ಕೇಳಬೇಕು ಇಲ್ಲವಾದರೇ ಉಗ್ರ ಹೋರಾಟ ಮಾಡುತ್ತೇವೆ ಎಂದು ಕೆಂಪೇಗೌಡ ಯುವಕರ ಸಂಘದವರು ಎಚ್ಚರಿಕೆ ನೀಡಿದರು. ಈ ಕಟ್ಟಡದ ಕೆಡೆವಿದ ಬಗ್ಗೆ ಸ್ಥಳೀಯ ಬಿಬಿಎಂಪಿ ಸದಸ್ಯರು ಪ್ರತಿಕ್ರಿಯೆ ನೀಡಿದ್ದು, ಅದು ಬಿಬಿಎಂಪಿ ಜಾಗ, ಕಳೆದ 15 ವರ್ಷದಿಂದ ಅಲ್ಲಿ ಸಂಘದ ಕಟ್ಟಡವಿತ್ತು. ಈಗ ಅಲ್ಲಿ ಬಸ್ ನಿಲ್ದಾಣ ಮಾಡಲು ಕಟ್ಟಡವನ್ನ ತೆರವುಗೊಳಿಸಿದ್ದೇವೆ. ಬಸ್ ನಿಲ್ದಾಣ ಜೊತೆ ಆಸ್ಪತ್ರೆ, ಜಿಮ್ ಹಾಗೂ ಸಂಘಕ್ಕೆ ಒಂದು ಕೊಠಡಿ ಕಟ್ಟಿಸಿ ಕೊಡುಲು ನಿರ್ಧಾರ ಮಾಡಿದ್ದೇವೆ. ಈ ಕುರಿತು ಸಂಘದ ಸದಸ್ಯರೊಂದಿಗೆ ಮಾತುಕತೆ ಸಹ ಆಗಿದೆ ಎಂದರು.

    ಸುಮಾರು 8 ಕೋಟಿ ರೂಪಾಯಿಗಳನ್ನ ಹೊಸ ಬಸ್ ನಿಲ್ದಾಣದ ನಿರ್ಮಾಣಕ್ಕೆ ಮೀಸಲಿಟ್ಟಿದ್ದೇವೆ ಇದು ಅಭಿವೃದ್ಧಿ ಕಾರ್ಯ. ಸಚಿವರು ಮತ್ತು ನಾವೂ ಸೇರಿಕೊಂಡು ಅಭಿವೃದ್ಧಿ ಕಾರ್ಯ ಮಾಡಲು ಮುಂದಾಗಿದ್ದೇವೆ. ಸಚಿವರು ಅಭಿವೃದ್ಧಿ ಕಾರ್ಯಕ್ಕಾಗಿ ಅಲ್ಲಿನ ಹಳೆಯ ಕಟ್ಟದವನ್ನು ಕೆಡವಿಸಿ ಹೊಸ ಕಟ್ಟಡದ ಕಾಮಗಾರಿಗೆ ಮುಂದಾಗಿದ್ದಾರೆ. ಯಾಕೇ ಹೀಗೆ ಪ್ರತಿಭಟನೆ ಮಾಡುತ್ತಿದ್ದಾರೆ ಅನ್ನೋದು ಗೊತ್ತಿಲ್ಲ ಎಂದು ಬಿಬಿಎಂಪಿ ಸದಸ್ಯೆ ಪಲ್ಲವಿ ಚನ್ನಪ್ಪ ಹೇಳಿದ್ದಾರೆ.

    ಒಟ್ಟಿನಲ್ಲಿ ಸಂಘದ ಕೆಲ ಕಾರ್ಯಕರ್ತರು ಇದು ರಾಜಕೀಯ ದುರದ್ದೇಶದಿಂದ ಮಾಡಿದ ಕಾರ್ಯ ಅಂದರೆ ಬಿಬಿಎಂಪಿ ಸದಸ್ಯರು ಇದು ಅಭಿವೃದ್ಧಿ ಕಾರ್ಯ ಯಾವ ದುರುದ್ದೇಶವೂ ಇಲ್ಲ ಅಂತಿದ್ದಾರೆ. ಮುಂದೇನಾಗುತ್ತೋ ಕಾದುನೋಡಬೇಕು.