Tag: V.Somanna

  • ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೂ ಸೋಮಣ್ಣ ಟವೆಲ್? – ಕಾರ್ಯಕರ್ತರ ಸಭೆಯಲ್ಲಿ ಇಂಗಿತ

    ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೂ ಸೋಮಣ್ಣ ಟವೆಲ್? – ಕಾರ್ಯಕರ್ತರ ಸಭೆಯಲ್ಲಿ ಇಂಗಿತ

    ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಎರಡೂ ಕ್ಷೇತ್ರಗಳಲ್ಲಿ ಸೋಲು ಕಂಡ ಮಾಜಿ ಸಚಿವ ವಿ.ಸೋಮಣ್ಣ (V.Somanna) ಮುಂಬರುವ ಲೋಕಸಭಾ ಚುನಾವಣೆ ಸ್ಪರ್ಧೆಗೆ ಕಸರತ್ತು ನಡೆಸುತ್ತಿದ್ದಾರೆ ಎಂಬ ಚರ್ಚೆ ಶುರುವಾಗಿದೆ.

    ಚುನಾವಣೆ ಸೋಲಿನ ಬಳಿಕ ಸೋಮಣ್ಣ ಅವರು ಬೆಂಗಳೂರಲ್ಲೇ ಮುಂದಿನ ರಾಜಕೀಯ ಎಂಬ ಸಂದೇಶ ರವಾನಿಸುವ ಸೂಚನೆ ಕೊಟ್ಟಿದ್ದಾರೆ. ಕಳೆದೆರಡು ದಿನಗಳಿಂದ ನಡೆಯುತ್ತಿರುವ ಗೋವಿಂದರಾಜನಗರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಭೆ ಸಾಕ್ಷಿ ಎಂಬಂತಿದೆ. ಇದನ್ನೂ ಓದಿ: ಅಮೆಜಾನ್ ಕಾಡಲ್ಲಿ 40 ದಿನಗಳ ಬಳಿಕ ಪತ್ತೆಯಾಗಿ ಆಸ್ಪತ್ರೆ ಸೇರಿದ್ದ ಮಕ್ಕಳು ಡಿಸ್ಚಾರ್ಜ್

    ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೂ ಸೋಮಣ್ಣ ಟವೆಲ್ ಹಾಕುತ್ತಿದ್ದಾರಾ ಎಂಬ ಪ್ರಶ್ನೆ ಉದ್ಭವಿಸಿದೆ. ಕಾರ್ಯಕರ್ತರ ಸಭೆಯಲ್ಲಿ ಭಾವುಕರಾಗಿ ತಮ್ಮ ಮನದ ಇಂಗಿತವನ್ನು ಸೋಮಣ್ಣ ವ್ಯಕ್ತಪಡಿಸಿದ್ದಾರೆ.

    ವಿಧಾನಸಭಾ ಚುನಾವಣೆಯಲ್ಲಿ ನನ್ನ ಸೋಲಿಗೆ ಕಾರಣರಾದವರ ಮೇಲೆ ಕ್ರಮ ಆಗಲೇಬೇಕು. ಕಾಟಾಚಾರಕ್ಕೆ ನೋಟಿಸ್ ಕೊಟ್ಟು ಸುಮ್ಮನಾದರೆ ನಾನು ಸಹಿಸೋ ಪ್ರಶ್ನೆಯೇ ಇಲ್ಲ. ಪಕ್ಷಕ್ಕೆ ಮೋಸ ಮಾಡುವವರನ್ನು ಸಹಿಸಿಕೊಳ್ಳುವುದು ತಾಯಿಗೆ ದ್ರೋಹ ಮಾಡಿದಂತೆ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಜು.19 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ – ಲಕ್ಷ್ಮಿ ಹೆಬ್ಬಾಳ್ಕರ್‌


    ಮತ್ತೊಂದು ಬಾರಿ ನಿಮ್ಮನ್ನೆಲ್ಲಾ ಕರೆದು ಚರ್ಚೆ ನಡೆಸುತ್ತೇನೆ. ಮುಂದೇನು ಮಾಡಬೇಕು ಅನ್ನೋದನ್ನು ಕುಳಿತು ಚರ್ಚೆ ಮಾಡೋಣ ಎಂದು ಕಾರ್ಯಕರ್ತರಿಗೆ ಸೋಮಣ್ಣ ತಿಳಿಸಿದ್ದಾರೆ. ನಮ್ಮ ಬೇಡಿಕೆ ಕುರಿತು ಪಕ್ಷದ ನಾಯಕರು ಏನು ತೀರ್ಮಾನ ತೆಗೆದುಕೊಳ್ತಾರೋ ನೋಡೋಣ ಎಂದಿದ್ದಾರೆ.

    ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಹಾಗೂ ಚಾಮರಾಜನಗರ ಕ್ಷೇತ್ರದಲ್ಲಿ ಪುಟ್ಟರಂಗಶೆಟ್ಟಿ ವಿರುದ್ಧ ಸ್ಪರ್ಧಿಸಿ ಎರಡರಲ್ಲೂ ಸೋಮಣ್ಣ ಹೀನಾಯ ಸೋಲನುಭವಿಸಿದ್ದರು. ಪಕ್ಷದಲ್ಲಿರುವವರೇ ನನ್ನ ಸೋಲಿಗೆ ಕಾರಣರಾದರು ಎಂದು ಅಸಮಾಧಾನ ಹೊರಹಾಕಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅವಕಾಶ ಕೊಟ್ಟರೆ ನಾನೂ ಬಿಜೆಪಿ ರಾಜ್ಯಾಧ್ಯಕ್ಷನಾಗ್ತೀನಿ – ರಮೇಶ್‌ ಜಿಗಜಿಣಗಿ

    ಅವಕಾಶ ಕೊಟ್ಟರೆ ನಾನೂ ಬಿಜೆಪಿ ರಾಜ್ಯಾಧ್ಯಕ್ಷನಾಗ್ತೀನಿ – ರಮೇಶ್‌ ಜಿಗಜಿಣಗಿ

    ಬೆಳಗಾವಿ: ಮಾಜಿ ಸಚಿವ ವಿ.ಸೋಮಣ್ಣ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ (BJP State President) ಆಗುವ ಬಯಕೆಯನ್ನು ಸಂಸದ ರಮೇಶ್ ಜಿಗಜಿಣಗಿ (Ramesh Jigajinagi) ಹೊರಹಾಕಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ನಾನೂ ಬಿಜೆಪಿಯ (BJP) ಹಿರಿಯ ನಾಯಕ, ಅವಕಾಶ ಕೊಟ್ಟರೆ ನಾನು ಕೂಡ ರಾಜ್ಯಾಧ್ಯಕ್ಷನಾಗುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಚುನಾವಣೆಯಲ್ಲಿ ಫೋರ್, ಸಿಕ್ಸ್ ಹೊಡೆಯೋಕ್ ಹೋಗಿ ಬೌಲ್ಡ್ ಆಗಿದ್ದೀನಿ – ಸೋಮಣ್ಣ

    ರಾಜ್ಯಾಧ್ಯಕ್ಷ ಯಾರು ಆಗಬೇಕು ಎಂಬುದನ್ನ ಬಹಿರಂಗ ಚರ್ಚೆ ಮಾಡುವುದು ಸರಿಯಲ್ಲ. ನಮ್ಮದು ರಾಷ್ಟ್ರೀಯ ಪಕ್ಷ, ರಾಷ್ಟ್ರೀಯ ನಾಯಕರೇ ಆಯ್ಕೆ ಮಾಡ್ತಾರೆ. ನಳಿನ್‌ ಕುಮಾರ್ ಕಟೀಲ್ (NalinKumar Kateel) ಅವಧಿ ಮುಗಿದಿದೆ. ಎಲ್ಲರಿಗೂ ರಾಜ್ಯಾಧ್ಯಕ್ಷ ಆಗಬೇಕು ಎಂಬ ಆಶಯ ಇರೋದು ಸಹಜ. ನಾನೂ ಬಿಜೆಪಿಯ ಹಿರಿಯ ನಾಯಕ, ಅವಕಾಶ ಕೊಟ್ಟರೆ ರಾಜ್ಯಾಧ್ಯಕ್ಷನಾಗುವೆ. ಬಿಜೆಪಿಯಲ್ಲಿ ದಲಿತರು ರಾಜ್ಯದ ಅಧ್ಯಕ್ಷ ಆಗಬಾರದೇ ಎಂದು ಪ್ರಶ್ನಿಸಿದ್ದಾರೆ.

    ಮೋದಿ ಮೇಲೆ ಗೂಬೆ ಕೂಡಿಸುತ್ತಿದೆ:
    ಅಕ್ಕಿ ವಿಚಾರವಾಗಿ ಮಾತನಾಡಿ, ಅಕ್ಕಿ ವಿಚಾರದಲ್ಲಿ ಕಾಂಗ್ರೆಸ್‌ ಪ್ರಧಾನಿ ನರೇಂದ್ರ ಮೋದಿ (Narendra Modi) ಮೇಲೆ ಗೂಬೆ ಕೂಡಿಸುತ್ತಿದೆ. ಕೋವಿಡ್ ಸಮಯದಲ್ಲಿ ‌ಕೂಡ ದೇಶದ 80 ಕೋಟಿ ಬಡವರಿಗೆ ಮೋದಿ ಸರ್ಕಾರ ಅಕ್ಕಿ ನೀಡಿದೆ. ಜಾರಿಮಾಡುವ ಯೋಗ್ಯತೆ ಇಲ್ಲದಿದ್ರೆ ಗ್ಯಾರಂಟಿ ಯೋಜನೆಗಳನ್ನ ಘೋಷಿಸಿದ್ದೇಕೆ? ಗ್ಯಾರಂಟಿ ಘೋಷಣೆ ಮಾಡುವಾಗ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರನ್ನ ಕೇಳಿದ್ರಾ? ಕೇಂದ್ರ ‌ಸರ್ಕಾರ ಕೇವಲ ರಾಜ್ಯಕ್ಕೆ ಅಷ್ಟೇ ಅಲ್ಲ, ಬೇರೆ ರಾಜ್ಯಗಳಿಗೂ ಅಕ್ಕಿ ವಿತರಣೆ ಮಾಡಬೇಕು. ಬಡ ವರ್ಗದ ಜನರನ್ನು ಕಾಂಗ್ರೆಸ್ ಏನು ಗುತ್ತಿಗೆ ಪಡೆದಿದೆಯೇ? ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಎಲ್ಲಾದರೂ ಇರು.. ಎಂತಾದರೂ ಇರು.. ಎಂದೆಂದಿಗೂ ಬಸಲ್ಲಿ ಫ್ರೀ ಆಗಿ ಪ್ರಯಾಣಿಸ್ತಿರು – ಸಿಂಗರ್‌ ಆದ ಕಂಡಕ್ಟರ್

    ಚುನಾವಣೆ ಸಮಯದಲ್ಲಿ ಸಿದ್ದರಾಮಯ್ಯ 10 ಕೆಜಿ ಅಕ್ಕಿ ಕೊಡ್ತೀನಿ ಅಂದಿದ್ರು. ಆಗ ನೀವೇ ರಾಜ್ಯದ ಜನರಿಗೆ 10 ಕೆಜಿ ಅಕ್ಕಿ ಕೊಡ್ತಿನಿ ಅಂದಿದ್ದೀರಿ, ಹೇಳಿದ ಮೇಲೆ ಕೊಡಬೇಕು. ಕೇಂದ್ರ ಸರ್ಕಾರ ಹೆಚ್ಚುವರಿ ಅಕ್ಕಿ ಕೊಡುತ್ತೆ ಎಂದು ಅಪೇಕ್ಷೆ ಮಾಡುವುದು ಸರಿಯಲ್ಲ. ಗ್ಯಾರಂಟಿ ಯೋಜನೆ ‌ಜಾರಿಗೊಳಿಸುವುದು ಅನುಮಾನ. ಹೀಗೆ ಮಾಡಿದ್ರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ‌ಬಹಳ‌ ದಿನ ಇರುವುದಿಲ್ಲ. ಯಾವುದೇ ಅಭಿವೃದ್ಧಿ ಯೋಜನೆ ಬಗ್ಗೆ ಮಾತನಾಡಲ್ಲ, ಬರೀ ಮೋದಿ ಅವರನ್ನೇ ಟೀಕಿಸುತ್ತಾರೆ. 9 ವರ್ಷಗಳ ಅವಧಿಯಲ್ಲಿ ದೇಶ ಸಾಕಷ್ಟು ಪ್ರಗತಿ ಕಂಡಿದೆ. ಹಿಂದೆ ಕಾಂಗ್ರೆಸ್ ‌ಅಭಿವೃದ್ಧಿಗೆ ಆದ್ಯತೆ ನೀಡಿದ್ದರೆ ಈಗ ಭಾರತ ವಿಶ್ವದಲ್ಲೇ ನಂ.1 ಆಗಿರುತ್ತಿತ್ತು. ಕೋವಿಡ್ ನಿಯಂತ್ರಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ 130 ಕೋಟಿ ಜನರ ಪ್ರಾಣ ರಕ್ಷಿಸಿದ್ದಾರೆ. ಈ ಸಮಯದಲ್ಲಿ ‌ಕಾಂಗ್ರೆಸ್ ಅಧಿಕಾರದಲ್ಲಿ ‌ಇದ್ದಿದ್ರೆ ರಸ್ತೆಯ ಮೇಲೆ ಹೆಣ ಬೀಳುತ್ತಿದ್ವು. ಮೋದಿ ಅವರ ಆಡಳಿತಕ್ಕೆ ಇಡೀ ಜಗತ್ತೆ ಬೆರಗಾಗಿದೆ. ಜಾಗತಿಕ ಮಟ್ಟದಲ್ಲಿ ಮೋದಿಗೆ ಗೌರವ ಹೆಚ್ಚಾಗಿದೆ. ದೇಶದ ಪ್ರಧಾನಿಗೆ ಜಾಗತಿಕ ಮಟ್ಟದಲ್ಲಿ ಗೌರವ ದೊರೆಯುತ್ತಿರುವುದು ಹೆಮ್ಮೆಯ ಸಂಗತಿ ಎಂದು ಶ್ಲಾಘಿಸಿದ್ದಾರೆ.

  • ಚುನಾವಣೆಯಲ್ಲಿ ಫೋರ್, ಸಿಕ್ಸ್ ಹೊಡೆಯೋಕ್ ಹೋಗಿ ಬೌಲ್ಡ್ ಆಗಿದ್ದೀನಿ – ಸೋಮಣ್ಣ

    ಚುನಾವಣೆಯಲ್ಲಿ ಫೋರ್, ಸಿಕ್ಸ್ ಹೊಡೆಯೋಕ್ ಹೋಗಿ ಬೌಲ್ಡ್ ಆಗಿದ್ದೀನಿ – ಸೋಮಣ್ಣ

    ಬೆಂಗಳೂರು: ಈ ಚುನಾವಣೆಯಲ್ಲಿ ಫೋರ್, ಸಿಕ್ಸ್ ಹೊಡೆಯಲು ಹೋಗಿ ಬೌಲ್ಡ್ ಆಗಿದ್ದೇನೆ ಎಂದು ಮಾಜಿ ಸಚಿವ ವಿ. ಸೋಮಣ್ಣ (V.Somanna) ಹೇಳಿದ್ದಾರೆ.

    ಬೆಂಗಳೂರಿನ (Bengaluru) ಬಿಜೆಪಿ (BJP) ಕಚೇರಿಯಲ್ಲಿ ಭಾನುವಾರ ಮಾತಾಡಿದ ಅವರು, ನಾನು ಸನ್ಯಾಸಿ ಅಲ್ಲ. ನಾನು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದೇನೆ. ಪಕ್ಷ ಏನು ತೀರ್ಮಾನ ಮಾಡುತ್ತದೆ ಎಂದು ನೋಡಬೇಕು. ನಾನು ಪಕ್ಷ ಹೇಳಿದ ಕೆಲಸ ಮಾಡಿದ್ದೇನೆ. ಎಂಥಹ ಸಂದರ್ಭದಲ್ಲೂ ವಿಚಲಿತನಾಗಿಲ್ಲ. ಪಕ್ಷ ಜವಾಬ್ದಾರಿ ಕೊಟ್ಟರೆ ನಿಭಾಯಿಸುತ್ತೇನೆ. ಇಲ್ಲದಿದ್ದರೆ ಬೇಸರ ಇಲ್ಲ ಎಂದಿದ್ದಾರೆ. ಇದನ್ನೂ ಓದಿ: 3 ವರ್ಷದ ಹಿಂದಿನ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ – ಮಹಿಳೆಯ ಅಸ್ತಿಪಂಜರ ಸೆಪ್ಟಿಕ್ ಟ್ಯಾಂಕ್‍ನಲ್ಲಿ ಪತ್ತೆ

    ಪಕ್ಷ ಕೊಟ್ಟಿರುವ ಟಾಸ್ಕ್‌ಗಳನ್ನು ತಲೆ ಮೇಲೆ ಹೊತ್ತು ಮಾಡಿದ್ದೇನೆ. ಇಲ್ಲಿಯವರೆಗೂ 12 ಚುನಾವಣೆಗಳನ್ನು ನೋಡಿದ್ದೇನೆ. 7 ರಿಂದ 8 ಉಪಚುನಾವಣೆಗಳಲ್ಲಿ ಕೆಲಸ ಮಾಡುವ ಅವಕಾಶವನ್ನು ಪಕ್ಷ ಕೊಟ್ಟಿದೆ. ಆದರೆ ಕಳೆದ ಒಂದೂವರೆ ತಿಂಗಳಿಂದ ನಿರುದ್ಯೋಗಿಯಾಗಿ ಕುಳಿತಿದ್ದೇನೆ ಎಂದಿದ್ದಾರೆ.

    ನನ್ನ ಕ್ಷೇತ್ರ ಗೋವಿಂದರಾಜನಗರದಲ್ಲಿ ನನ್ನ ಅವಧಿಯಲ್ಲಿ ಮೂಲ ಸೌಕರ್ಯ ನೀಡಿ ಅಭಿವೃದ್ಧಿ ಮಾಡಿದ್ದೇನೆ. ಒಬ್ಬ ರಾಜಕಾರಣಿಯಾಗಿ ಪಕ್ಷದ ಸಂದೇಶವನ್ನು ಕ್ಷೇತ್ರದಲ್ಲಿ ತಲುಪಿಸಿದ್ದೇನೆ. ಪಕ್ಷಕ್ಕಿಂತ ಯಾರೂ ದೊಡ್ಡವರಿಲ್ಲ. ಅದಕ್ಕಾಗಿ ಪಕ್ಷ ಕೊಟ್ಟ ಕೆಲಸ ಚಾಚೂ ತಪ್ಪದೇ ಮಾಡಬೇಕಾಗುತ್ತದೆ. ಚಿಂಚೋಳಿ ಉಪಚುನಾವಣೆ ವೇಳೆ ನೆತ್ತಿ ಸುಡುವ ಬಿಸಿಲಿನಲ್ಲಿ ಕೆಲಸ ಮಾಡಿದ್ದೇನೆ. ನನ್ನ ಜೊತೆ ಎಮ್‍ಎಲ್‍ಸಿ ರವಿಕುಮಾರ್‌ನನ್ನು ಮಾತ್ರ ಪಕ್ಷ ಕಳಿಸಿತ್ತು. ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡಿ, ಅಭ್ಯರ್ಥಿಯನ್ನೂ ಗೆಲ್ಲಿಸಿದೆ ಎಂದಿದ್ದಾರೆ.

    ಚಿಂಚೋಳಿ ಫಲಿತಾಂಶ ರಾಜ್ಯಕ್ಕೆ ಒಂದು ದೊಡ್ಡ ಸಂದೇಶ ತಂದುಕೊಟ್ಟಿತ್ತು. ಅದೇ ಸಂದರ್ಭದಲ್ಲಿ ಕುಂದಗೋಳ ಉಪಚುನಾವಣೆಯಲ್ಲಿ ಸೋತಿದ್ದೆವು. ಪ್ರತಿಫಲ ಬಯಸಿ ಕೆಲಸ ಮಾಡಬಾರದು. ನಮ್ಮೆಲ್ಲರಿಗಿಂತ ದೊಡ್ಡವರು ಈ ದೇಶಕ್ಕೆ ಸಮರ್ಪಣೆ ಮಾಡಿಕೊಂಡಿದ್ದಾರೆ. ಯಾರ ಜೊತೆಗೂ ರಾಜೀ ಮಾಡಿಕೊಳ್ಳದೇ ಪಕ್ಷದ ಕೆಲಸ ಮಾಡಬೇಕು. ಆದರೆ ಕೆಲವು ವಿಚಾರಗಳ ಬಗ್ಗೆ ಮಾತಾಡಿದರೆ ಕೆಲವರಿಗೆ ತಪ್ಪಾಗಿ ಕಾಣಿಸುತ್ತದೆ ಎಂದಿದ್ದಾರೆ.

    ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದ ವಿಚಾರ ಚರ್ಚೆಗೆ ಬರುತ್ತಿದ್ದಂತೆ, ವರಿಷ್ಠರ ಗಮನ ಸೆಳೆಯುವ ಪ್ರಯತ್ನಕ್ಕೆ ಸೋಮಣ್ಣ ಮುಂದಾಗಿದ್ದಾರೆ. ಅದಕ್ಕಾಗಿ ಸಭೆಗಳಲ್ಲಿ ಕಾಣಿಸುತ್ತಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿವೆ. ಇದನ್ನೂ ಓದಿ: ಲೇಡಿಸ್ ಪಿಜಿಗಳೇ ಟಾರ್ಗೆಟ್ – ಸ್ನಾನ ಮಾಡುವುದನ್ನು ಕದ್ದುಮುಚ್ಚಿ ವೀಡಿಯೋ ಮಾಡುತ್ತಿದ್ದಾಗಲೇ ಕಿರಾತಕ ಲಾಕ್

  • ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ: ಕಟೀಲ್ ಸ್ಪಷ್ಟನೆ

    ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ: ಕಟೀಲ್ ಸ್ಪಷ್ಟನೆ

    ಬೆಂಗಳೂರು: ಬಿಜೆಪಿ (BJP) ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ಎಂದು ಸಂಸದ ನಳಿನ್ ಕುಮಾರ್ ಕಟೀಲ್ (Nalinkumar Katil) ಸ್ಪಷ್ಟನೆ ನೀಡಿದ್ದಾರೆ.

    ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಕಟೀಲ್, ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು. ಬಳ್ಳಾರಿಯಲ್ಲಿ ವಿ. ಸೋಮಣ್ಣ (V. Somanna) ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಎಂದು ಪ್ರಕಟಿಸಿದ ಕುರಿತಾದ ಪ್ರಶ್ನೆಗೆ ಉತ್ತರಿಸುವ ವೇಳೆ ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕಾರಣಗಳ ಕುರಿತಂತೆ ಪಕ್ಷದ ಹಿರಿಯರಿಗೆ ಮಾಹಿತಿ ನೀಡಿದ್ದೇನೆ. 4 ವರ್ಷಗಳಿಂದ ನಾನು ಅಧ್ಯಕ್ಷ ಸ್ಥಾನದಲ್ಲಿದ್ದೇನೆ ಎಂದು ತಿಳಿಸಿದ್ದೆ. ಪಕ್ಷದ ರಾಜ್ಯಾಧ್ಯಕ್ಷರ ನೇಮಕ ಕುರಿತಂತೆ ಪಕ್ಷವು ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ಸುದ್ದಿ ಬಿತ್ತರಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಹಸಿದವರ ಕೂಗಿಗೆ ಸಿದ್ದರಾಮಯ್ಯರ ಕಿವಿ ಯಾವಾಗಲೂ ತೆರೆದಿರುತ್ತದೆ: ನಾಡೋಜ ಹಂಪನಾ

    ಈ ಮೂಲಕ ಒಂದೇ ದಿನದಲ್ಲಿ ಎರಡು ರೀತಿಯ ಹೇಳಿಕೆಗಳನ್ನು ಕೊಟ್ಟು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಚರ್ಚೆಗೆ ಗ್ರಾಸವಾಗಿದ್ದಾರೆ. ಶನಿವಾರ ಬೆಳಗ್ಗೆಯಷ್ಟೇ ಬಳ್ಳಾರಿಯಲ್ಲಿ ಮಾತಾಡಿದ್ದ ಅವರು, ವಿಧಾನಸಭೆ ಚುನಾವಣೆ ಸೋಲಿನ ನೈತಿಕ ಹೊಣೆ ಹೊತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ರಾಜೀನಾಮೆ ಪತ್ರ ಬರೆದಿರುವುದಾಗಿಯೂ, ಮೌಖಿಕವಾಗಿಯೂ ತಿಳಿಸಿರುವುದಾಗಿ ಹೇಳಿದ್ದರು. ಆದರೆ ಅವರ ಹೇಳಿಕೆ ಮಾಧ್ಯಮಗಳಲ್ಲಿ ದೊಡ್ಡ ಸುದ್ದಿಯಾಗುತ್ತಿದ್ದಂತೆ ಕಟೀಲ್ ಯೂಟರ್ನ್ ಹೊಡೆದಿದ್ದಾರೆ. ಇದನ್ನೂ ಓದಿ: ವ್ಹೀಲಿಂಗ್ ಮಾಡಿ ಶಾಲಾ – ಕಾಲೇಜು ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಮೂವರ ಬಂಧನ

  • ನನಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಿ: ಹೈಕಮಾಂಡ್‌ಗೆ ಸೋಮಣ್ಣ ಮನವಿ

    ನನಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಿ: ಹೈಕಮಾಂಡ್‌ಗೆ ಸೋಮಣ್ಣ ಮನವಿ

    ಬೆಂಗಳೂರು: ನನಗೂ ಒಂದು ಅವಕಾಶ ಮಾಡಿಕೊಡಿ. ನೂರು ದಿನಗಳ ಕಾಲ ನನಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಿ ಸಾಕು ಎಂದು ಮಾಜಿ ಸಚಿವ ವಿ.ಸೋಮಣ್ಣ (V.Somanna) ಬಿಜೆಪಿ ಹೈಕಮಾಂಡ್‌ಗೆ (BJP High Command) ಮನವಿ ಮಾಡಿದರು.

    ನಗರದಲ್ಲಿ ಮಾತನಾಡಿದ ಅವರು, ಎರಡು ಬಾರಿ ನಾನು ದೆಹಲಿಗೆ ಹೋಗಿ ಬಂದಿದ್ದೇನೆ. ವರಿಷ್ಠರ ಭೇಟಿ ಮಾಡಿ ಕೆಲ ಸಂಗತಿಗಳ ಬಗ್ಗೆ ಹೇಳಿ ಬಂದಿದ್ದೇನೆ. ನಾನು 45 ವರ್ಷ ರಾಜಕಾರಣ ಅನುಭವದ ಆಧಾರದ ಮೇಲೆ ನನ್ನನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿ ಎಂದು ಕೇಳಿದ್ದೇನೆ. ಪತ್ರವನ್ನು ಕೂಡ ನಾನು ಬರೆದಿದ್ದೇನೆ. ಪಕ್ಷ ಕೊಟ್ಟ ಎಲ್ಲ ಟಾಸ್ಕ್‌ಗಳನ್ನು ಸ್ವೀಕಾರ ಮಾಡಿ ಅತ್ಯಂತ ಶ್ರಮಪಟ್ಟು ಎಲ್ಲವನ್ನೂ ನಿರ್ವಹಣೆ ಮಾಡಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಶಾಸಕನ ಅಪ್ಪಿ ಗೆಲುವಿಗೆ ಶುಭಹಾರೈಸಿದ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ – ಗೌಪ್ಯ ಸಭೆ!

    ಮೊನ್ನೆಯ ಚುನಾವಣೆಯಲ್ಲಿ ಸಾಕಷ್ಟು ಹಿನ್ನಡೆ ಆಗಿದೆ. ರಾಜ್ಯಾಧ್ಯಕ್ಷ ಸ್ಥಾನ ನಿಭಾಯಿಸುವ ಶಕ್ತಿ ಇದೆಯಾ ಎಂದು ಕೆಲವರು ಮಾತಾಡಿಕೊಳ್ಳಬಹುದು. ಆದರೆ ನಾನು ಪಕ್ಷದಲ್ಲಿ ಹಿರಿಯನಿದ್ದೇನೆ. ಎಲ್ಲರನ್ನು ನಾನು ಒಟ್ಟಿಗೆ ತೆಗೆದುಕೊಂಡು ಹೋಗುತ್ತೇನೆ. ದೊಡ್ಡವರ ಥರನೇ ನನ್ನದು ಒಂದು ತೆರೆದ ಪುಸ್ತಕ. 43 ದಿನ 50 ಡಿಗ್ರಿ ಬಿಸಿಲಲ್ಲಿ ಓಡಾಡಿ ಉಪ ಚುನಾವಣೆಗಳನ್ನು ಗೆಲ್ಲಿಸಿದ್ದೇನೆ. ಪಕ್ಷದ ಬಹುತೇಕ ನಾಯಕರಿಗೆ ನಾನು ವಿನಂತಿ ಮಾಡಿದ್ದೇನೆ. ನನಗೂ ಒಂದೂವರೆ ತಿಂಗಳಿಂದ ಯಾವುದೇ ಕೆಲಸ ಇಲ್ಲ. ನನಗೂ ಒಂದು ಅವಕಾಶ ಮಾಡಿಕೊಡಿ. ನೂರು ದಿನಗಳ ಕಾಲ ನನಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಿ ಸಾಕು ಎಂದು ಆಗ್ರಹಿಸಿದರು.

    ಪಕ್ಷದ ಸಂಘಟನೆಯಲ್ಲಿ ಯಾವ ರೀತಿ ತೊಡಗಿಸಿಕೊಳ್ಳಬಹುದು ಎಂದು ತೋರಿಸಿಕೊಡ್ತೀನಿ. ಪ್ರಧಾನಿಗಳನ್ನು ಹೊರತುಪಡಿಸಿ ಎಲ್ಲರನ್ನೂ ಭೇಟಿಯಾಗಿದ್ದೇನೆ. ಅಮಿತ್ ಶಾ, ಜೆ.ಪಿ.ನಡ್ಡಾ, ಬಿ.ಎಲ್. ಸಂತೋಷ್ ಸೇರಿ ಎಲ್ಲರನ್ನು ಭೇಟಿ ಮಾಡಿ ಮನವಿ ಮಾಡಿದ್ದೇನೆ ಎಂದರು. ಇದನ್ನೂ ಓದಿ: ಅನ್ನಭಾಗ್ಯ ಯೋಜನೆಗಿಲ್ಲ ಕೇಂದ್ರದ ಅಕ್ಕಿ – ಆಶಾಭಾವನೆಯಿಂದ ಬಂದ ನಮಗೆ ಎರಡನೇ ಬಾರಿ ನಿರಾಸೆ: ಮುನಿಯಪ್ಪ

    ನಾನು ಚುನಾವಣೆಗೆ ಮುನ್ನವೇ ರಾಜ್ಯಾಧ್ಯಕ್ಷ ಸ್ಥಾನ ಕೇಳಿದ್ದೇನೆ. ನನಗೆ ನೂರು ದಿನ ಕೊಡಲಿ. ನಾನೇನು ಹೇಡಿ ಅಲ್ಲ. ನಾನು ಯಾವುದೇ ಹುದ್ದೆ ತೆಗೆದುಕೊಳ್ಳುವುದಾದರೂ ಅದನ್ನು ಚಾಲೆಂಜ್ ಆಗಿ ತೆಗೆದುಕೊಳ್ಳುತ್ತೇನೆ. ಅಶೋಕ್ ರಾಜ್ಯಾಧ್ಯಕ್ಷ ಆದರೆ ಬೇಡ ಅಂತೀವಾ? ನನ್ನ ಕಾರ್ಯವೈಖರಿಯೇ ಬೇರೆ. ನಾನು ತಗೊಂಡಿರುವ ರಿಸ್ಕ್ ಇವರು ಯಾರು ತಗೊಂಡಿಲ್ಲ. ಕನಕಪುರದಲ್ಲಿ ಅಶೋಕ್ ರಿಸ್ಕ್ ತಗೊಂಡಿಲ್ಲ ಎಂದು ಜನರೇ ಮಾತಾಡಿಕೊಳ್ತಿದ್ದಾರೆ. ನಾನು ಪಕ್ಷದಲ್ಲಿ ತಗೊಂಡಿರೋ ಒಂದು ಚಾಲೆಂಜ್‌ನ್ನು ಇವರು ಯಾವುದಾದರೂ ಒಂದು ತಗೊಂಡಿದ್ದೀರಾ ಕೇಳಿ ಎಂದು ಅಶೋಕ್‌ ವಿರುದ್ಧ ಗುಡುಗಿದರು.

    ನಾನು ಉಪಚುನಾವಣೆ ಸೇರಿ ಹಲವು ಚುನಾವಣೆಗಳನ್ನು ಚಾಲೆಂಜ್ ಆಗಿ ತಗೊಂಡಿದ್ದೇನೆ. ಇವರೆಲ್ಲರಿಗಿಂತ ನಾನು ಚೆನ್ನಾಗಿ ಕೆಲಸ ಮಾಡಿದ್ದೇನೆ. ಸಿದ್ದರಾಮಯ್ಯ ವಿರುದ್ಧ ಚುನಾವಣೆಯಲ್ಲಿ ನಿಲ್ಲೋಕೆ ನನಗೇನು ಹುಚ್ಚು ಹಿಡಿದಿತ್ತ? ನಾನು ರಾಜ್ಯಾಧ್ಯಕ್ಷ ಆಗುವುದಕ್ಕೆ ಯಡಿಯೂರಪ್ಪನವರು ಒಪ್ಕೋಬೇಕು. ಬೇರೆಯವರೂ ಒಪ್ಪಬೇಕು. ನಾವು ಇಷ್ಟು ದಿನ ಯಡಿಯೂರಪ್ಪ ಹೇಳಿದ್ದನ್ನು ಕೇಳಿಲ್ವಾ? ಚುನಾವಣೆ ಮುಗಿದ ನಂತರ ಒಂದು ಫೋನ್ ಕೂಡ ಅವರು ಮಾಡಿಲ್ಲ ನನಗೆ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ 3,200 ಕೋಟಿ ಹೂಡಿಕೆ ಮಾಡಲಿದೆ ಸೆಮಿಕಂಡಕ್ಟರ್ ಕಂಪನಿ Applied Materials

    ರಾಜ್ಯದ ಯಾವ ನಾಯಕರ ಜೊತೆಗೂ ನಾನು ಮಾತಾಡಿಲ್ಲ. ಇವರ ಕೈಯಲ್ಲಿ ಕಿಸಿಯಲು ಆಗದೇ ಇರುವ ಕೆಲಸ ನಾನು ಮಾಡಿದ್ದೇನೆ. ಪ್ರಾಣದ ಹಂಗು ತೊರೆದು ಪಕ್ಷಕ್ಕಾಗಿ ಕೆಲಸ ಮಾಡಿದ್ದೇನೆ. ನನ್ನ ಸರ್ವೀಸ್‌ನ್ನು ಉಪಯೋಗಿಸಿ, ಆದರೆ ಕಡೆಗಣಿಸಬೇಡಿ. ನಾನು ಸೋತಿರಬಹುದು, ಆದರೆ ನನಗೆ ಕೊಟ್ಟ ಟಾಸ್ಕ್‌ನಲ್ಲಿ ಸೋತಿಲ್ಲ ಗೆದ್ದಿದ್ದೇನೆ. ಸೋಲಿನ ಬಗ್ಗೆ ಯಾರಿಗೆ ತಿಳಿಸಬೇಕೋ ಅವರಿಗೆ ನಾನು ತಿಳಿಸಿದ್ದೇನೆ. ನಾನು ನಾನೇ, ನನ್ನ ಸ್ಟೈಲೇ ಬೇರೆ ಎಂದರು.

  • ಸೋಮಣ್ಣಗೆ ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್ ಫಿಕ್ಸ್?- ಸಂಚಲನ ಮೂಡಿಸಿದ ಸಂಸದ ಬಸವರಾಜು ಹೇಳಿಕೆ

    ಸೋಮಣ್ಣಗೆ ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್ ಫಿಕ್ಸ್?- ಸಂಚಲನ ಮೂಡಿಸಿದ ಸಂಸದ ಬಸವರಾಜು ಹೇಳಿಕೆ

    ತುಮಕೂರು: ಎರಡು ವಿಧನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋಲು ಅನುಭವಿಸಿರುವ ಮಾಜಿ ಸಚಿವ ವಿ ಸೋಮಣ್ಣಗೆ (V Somanna) ತುಮಕೂರು (Tumkur) ಲೋಕಸಭಾ ಕ್ಷೇತ್ರದ ಬಿಜೆಪಿ (BJP) ಟಿಕೆಟ್ ನೀಡಲು ಚಿಂತಿಸಲಾಗಿದೆ ಎಂಬ ಗುಟ್ಟನ್ನು ಹಾಲಿ ಸಂಸದ ಜಿಎಸ್ ಬಸವರಾಜು (GS Basavaraj) ಬಿಚ್ಚಿಟ್ಟಿದ್ದಾರೆ.

    ತುಮಕೂರು ನಗರದಲ್ಲಿ ನಡೆದ ವೀರಶೈವ ಸಮಾಜದ ಕಾರ್ಯಕ್ರಮವೊಂದರಲ್ಲಿ ಸಂಸದ ಬಸವರಾಜು ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ನನಗೆ ವಯಸ್ಸಾದ ಕಾರಣ ನಾನು ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುತ್ತೇನೆ. ಮುಂದಿನ ಚುನಾವಣೆಗೆ ನಮ್ಮ ಸಮುದಾಯದವರೇ ಆದ ವಿ ಸೋಮಣ್ಣಗೆ ಟಿಕೆಟ್ ಕೊಡುತ್ತಾರೆ. ದೆಹಲಿಗೆ ಹೋದಾಗ ನಾನು ಇದನ್ನು ಹೇಳಿದ್ದೇನೆ. ಹೀಗಾಗಿ ಸಮುದಾಯದ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು, ನಮ್ಮ ನಮ್ಮಲ್ಲಿ ಕಿತ್ತಾಟ ಮಾಡಿಕೊಂಡು ಬೇರೆಯವರಿಗೆ ಅನುಕೂಲ ಮಾಡಿಕೊಡಬಾರದು ಎಂದು ಸಮಾಜದ ಜನರಿಗೆ ಕಿವಿ ಮಾತು ಹೇಳಿದ್ದಾರೆ. ಇದನ್ನೂ ಓದಿ: ರೈಲ್ವೆ ಸಚಿವರು ದಣಿವರಿಯದಂತೆ ಕೆಲಸ ಮಾಡುತ್ತಿದ್ದು, ರಾಜೀನಾಮೆಗೆ ಆಗ್ರಹ ಸರಿಯಲ್ಲ: ಹೆಚ್‌ಡಿಡಿ

    ಸಂಸದ ಜಿಎಸ್ ಬಸವರಾಜು ಅವರ ಈ ಮಾತು ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ. ಲೋಕಸಭಾ ಟಿಕೆಟ್ ಬಯಸಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಬಂದಿದ್ದ ಮಾಜಿ ಸಂಸದ ಮುದ್ದಹನುಮೇಗೌಡ, ಲೋಕಸಭಾ ಕ್ಯಾಂಡಿಡೇಟ್ ಎಂದೇ ಬಿಂಬಿಸಿಕೊಂಡಿದ್ದ ಲೇಔಟ್ ಚಿದಾನಂದರಿಗೆ ಸಂಸದರ ಈ ಹೇಳಿಕೆ ನಿದ್ದೆಗೆಡಿಸಿದೆ. ಅದರ ಜೊತೆಗೆ ಮಾಜಿ ಸಚಿವ ಮಾಧುಸ್ವಾಮಿ ಅವರೂ ಲೋಕಸಭೆಗೆ ಸೂಕ್ತ ಎಂದು ಜಿಲ್ಲಾ ಬಿಜೆಪಿಯಲ್ಲಿ ಚರ್ಚೆ ಮಾಡಿದ್ದಾರೆ. ಈ ನಡುವೆ ಜಿಎಸ್ ಬಸವರಾಜು ಅವರ ಹೊಸ ದಾಳಿ ಗೊಂದಲಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಯಾರೇ ಮಾತಾಡಿದ್ರು ಜೈಲಿಗೆ ಹಾಕ್ತೀವಿ ಎನ್ನೋಕೆ ಇದು ತಾಲಿಬಾನ್ ಅಲ್ಲ: ಎಂಬಿಪಿ ವಿರುದ್ಧ ಯತ್ನಾಳ್ ಕಿಡಿ

  • ಚುನಾವಣೆ ಆದ್ಮೇಲೆ ಬಿಎಸ್‌ವೈ ಒಂದು ಬಾರಿಯೂ ಫೋನ್ ಮಾಡಿಲ್ಲ – ಸೋಮಣ್ಣ ಬೇಸರ

    ಚುನಾವಣೆ ಆದ್ಮೇಲೆ ಬಿಎಸ್‌ವೈ ಒಂದು ಬಾರಿಯೂ ಫೋನ್ ಮಾಡಿಲ್ಲ – ಸೋಮಣ್ಣ ಬೇಸರ

    ಬೆಂಗಳೂರು: ಚುನಾವಣಾ ಸಮಯದಲ್ಲಿ ಯಡಿಯೂರಪ್ಪನವರು (BS Yediyurappa) ಪ್ರತಿದಿನ ಕರೆ ಮಾಡ್ತಿದ್ರು, ಚುನಾವಣೆ ಮುಗಿದ ಮೇಲೆ ಒಂದು ಬಾರಿಯೂ ಫೋನ್ ಮಾಡಿಲ್ಲ ಎಂದು ಮಾಜಿ ಸಚಿವ ವಿ. ಸೋಮಣ್ಣ (V Somanna) ಬೇಸರ ವ್ಯಕ್ತಪಡಿಸಿದರು.

    ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಂದು ವಿ. ಸೋಮಣ್ಣ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ಕೆಲ ಕಾಲ ಪಕ್ಷದ ಸೋಲಿನ ಕುರಿತು ಅವಲೋಕನ ನಡೆಸಿದ ಅವರು, ಬಳಿಕ ಸೋಮಣ್ಣ ಅವರಿಗೆ ಸೋಲಿನ ಬಗ್ಗೆ ದೃತಿಗೆಡಬೇಡಿ, ಪಕ್ಷ ನಿಮಗೆ ಸೂಕ್ತ ಸ್ಥಾನಮಾನ ನೀಡಲಿದೆ ಎಂದು ಅಭಯ ನೀಡಿದರು. ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಗೂಂಡಾ ರಾಜ್ಯ ಆಗಿ ಬದಲಾವಣೆ: ಕಟೀಲ್ ಕಿಡಿ

    ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ವಿ. ಸೋಮಣ್ಣ, ಯಡಿಯೂರಪ್ಪ ಅವರು ಚುನಾವಣಾ ಸಮಯದಲ್ಲಿ ಪ್ರತಿದಿನ ಕರೆ ಮಾಡ್ತಿದ್ರು. ಚುನಾವಣೆ ಮುಗಿದ ಮೇಲೆ ಈವರೆಗೂ ಕರೆ ಮಾಡಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಕಾಶ್ಮೀರಿ ಪ್ರತ್ಯೇಕತಾವಾದಿ ಹತ್ಯೆಗೈದು ತಲೆಮರೆಸಿಕೊಂಡಿದ್ದ ಮುಜಾಹಿದ್ದೀನ್‌ ಉಗ್ರರು 33 ವರ್ಷಗಳ ಬಳಿಕ ಅರೆಸ್ಟ್‌

    ಇದೇ ವೇಳೆ ನಿಮಗೆ ಪಕ್ಷ ಧೈರ್ಯತುಂಬುವ ಕೆಲಸ ಮಾಡಿದೆಯಾ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ನನಗೆ ಏನು ಧೈರ್ಯ ತುಂಬಬೇಕ್ರಿ? 45 ವರ್ಷಗಳಿಂದ ಇದೇ ಕೆಲಸ ಮಾಡಿದ್ದೇನೆ. ನನ್ನ ಚಿನ್ನದಂತಹ ಕ್ಷೇತ್ರ ಬಿಟ್ಟಿದ್ದೇನೆ. ವರಿಷ್ಠರು ಹೇಳಿದ್ರಲ್ಲಾ ಅಂತಾ ಬೇರೆ ಕ್ಷೇತ್ರಕ್ಕೆ ಹೋದೆ. ಅಲ್ಲಿ ಸೋಲಾಯಿತು. ಅದನ್ನು ಅರಗಿಸಿಕೊಳ್ಳುವ ಶಕ್ತಿಯೂ ನನಗಿದೆ. ನಾವೆಲ್ಲರೂ ಮನುಷ್ಯರಲ್ವಾ? ನಾವೇನು ದೆವ್ವನಾ? ಪಕ್ಷ ನನಗಿಂತ ದೊಡ್ಡದು. ಪಕ್ಷ ಹೇಳಿದ್ದನ್ನು ನನ್ನಂತಹವರು ಮಾಡದೇ ಇನ್ಯಾರು ಮಾಡೋಕಾಗುತ್ತೆ ಎಂದು ಹೇಳಿದರು.

  • ನಾನು ಕೆಲಸಗಾರ, ಈಗ ನಿರುದ್ಯೋಗಿ ಆಗಿದ್ದೀನಿ : ಸೋಮಣ್ಣ

    ನಾನು ಕೆಲಸಗಾರ, ಈಗ ನಿರುದ್ಯೋಗಿ ಆಗಿದ್ದೀನಿ : ಸೋಮಣ್ಣ

    – ರಾಜಕೀಯ ನಿವೃತ್ತಿ ಇಲ್ಲ

    ಬೆಂಗಳೂರು: ನಾನು ಕೆಲಸಗಾರ, ಈಗ ನಿರುದ್ಯೋಗಿ ಆಗಿದ್ದೇನೆ. ಒಳ್ಳೆಯವರನ್ನು ಯಾರೂ ಗುರುತಿಸಲ್ಲ ಎಂದು ಬಿಜೆಪಿ (BJP) ಪರಾಜಿತ ಅಭ್ಯರ್ಥಿ ವಿ. ಸೋಮಣ್ಣ (V Somanna) ಬೇಸರ ವ್ಯಕ್ತಪಡಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಸೂಚನೆ ಮೇರೆಗೆ ಹೋಗಿ ಸ್ಪರ್ಧಿಸಿದೆ. ಚಾಲೆಂಜ್ ಆಗಿ ತಗೊಂಡೆ. ಪ್ರತಿಯೊಂದಕ್ಕೂ ಕಾಲ ಅಂತ ಇರುತ್ತದೆ. ನನ್ನ ಈ ಕ್ಷೇತ್ರ ಚಿನ್ನದಂತೆ ಇತ್ತು. ಹೈಕಮಾಂಡ್ ಹೇಳ್ತು ಅಂತ ಹೋದೆ. ಜನ ತೀರ್ಮಾನ ಮಾಡಿದ್ದಾರೆ. ಕ್ಷೇತ್ರಕ್ಕಿಂತ ಪಕ್ಷ ದೊಡ್ಡದು, ಪಕ್ಷದ ಮಾತು ಕೇಳಿದೆ ಅಷ್ಟೇ ಪಕ್ಷಕ್ಕೂ ಹಿನ್ನಡೆ ಆಗಿದ್ದು, ನಮಗೆಲ್ಲ ಒಂದು ಎಚ್ಚರಿಕೆ ಗಂಟೆಯಾಗಿದೆ. ಇನ್ನೇನು ಸೋತಾಗಿದೆ, ಏನ್ ಮಾತಾಡ್ಲಿ, ಸೋತಾಯಿತಲ್ಲ. ಮಾತಾಡೋದು ಅಗತ್ಯ ಇಲ್ಲ ಸೋತಿದ್ದೀನಿ ಅಷ್ಟೇ. ಜನರ ತೀರ್ಮಾನ ಇದು, ಬದ್ಧರಾಗಬೇಕು ಎಂದು ಹೇಳಿದರು.

    ಯಡಿಯೂರಪ್ಪ ಅವರನ್ನು ಪಕ್ಷ ಮೂಲೆಗುಂಪು ಮಾಡಲಿಲ್ಲ. ಅವರ ನಾಯಕತ್ವದಲ್ಲಿ ಚುನಾವಣೆ ಮಾಡಿದ್ದಿವಲ್ಲ. ಯಡಿಯೂರಪ್ಪ ಹೇಳಿದ್ದಾರಾ ಮೂಲೆಗುಂಪು ಮಾಡಿದ್ದಾರೆ ಅಂತ? ಸೋತ ತಕ್ಷಣ ಎಲ್ಲ ಮುಗಿದು ಹೋಯ್ತಾ? ಸೋಲಿಗೆ ಯಡಿಯೂರಪ್ಪ ಫ್ಯಾಕ್ಟರ್ ಕಾರಣ ಅಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಮೈಸೂರು ಜಿಲ್ಲೆಯ ಕ್ಷೇತ್ರಗಳ ಚುನಾವಣಾ ಫಲಿತಾಂಶ

    ಕಾಂಗ್ರೆಸ್‍ನ (Congress) ಗ್ಯಾರಂಟಿ ಯೋಜನೆಗಳೇ ಅವರ ಗೆಲುವಿಗೆ ಕಾರಣವಾಗಿದೆ. ಈ ದೇಶಕ್ಕೆ ಮೋದಿಯವರು ಪ್ರಶ್ನಾತೀತ ನಾಯಕರು. ಅವರ ಕೆಲಸಗಳು ಅವಿಸ್ಮರಣೀಯವಾಗಿದೆ. ನಾನು ಸೋಲನ್ನು ಒಪ್ಕೋಡಿದ್ದೇನೆ. ವರಿಷ್ಠರು ಕರೆ ಮಾಡಿದ್ದರು ಎಂದರು. ಇದನ್ನೂ ಓದಿ: ಚಾಮರಾಜನಗರ ಜಿಲ್ಲೆಯಲ್ಲಿ ಯಾರಿಗೆ ಗೆಲುವು? ಯಾರಿಗೆ ಸೋಲು?

    ರಾಜಕೀಯ ನಿವೃತ್ತಿ ಇಲ್ಲ. ನಾನು ಸಾಯೋತನಕ ಸಕ್ರಿಯ ಆಗಿರ್ತೇನೆ. ನಿವೃತ್ತಿ ಅನ್ನೋ ಪದವೇ ನನಗೆ ಗೊತ್ತಿಲ್ಲ. ನಿವೃತ್ತಿ ಎಷ್ಟು ಜನ ತಗೊಂಡಿದಾರೆ ಹೇಳಿ? ನಿವೃತ್ತಿ ಅನ್ನೋದೆಲ್ಲ ಒಂದು ನಾಟಕ ಎಂದು ಕಿಡಿಕಾರಿದರು. ಇದನ್ನೂ ಓದಿ: ಈ ಫಲಿತಾಂಶ ಲೋಕಸಭಾ ಚುನಾವಣೆಗೆ ದಿಕ್ಸೂಚಿ: ಕೆ. ಹೆಚ್ ಮುನಿಯಪ್ಪ

    ಕಾಂಗ್ರೆಸ್‍ನಲ್ಲಿ ಸಿಎಂ ಪೋಸ್ಟ್ ಕಚ್ಚಾಟ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅದು ಅವರ ಪಕ್ಷದ ನಿರ್ಧಾರವಾಗಿದೆ. ಡಿಕೆಶಿ ನಮ್ಮ ತಾಲೂಕಿನವರು. ಸಿದ್ದರಾಮಯ್ಯ ಹಿರಿಯ ನಾಯಕ. ಸಿದ್ದರಾಮಯ್ಯ ಈಗಾಗಲೇ ಒಮ್ಮೆ ಸಿಎಂ ಆಗಿದ್ದಾರೆ. ಡಿಕೆಶಿ ಸಿಎಂ ಆಗಬೇಕಾಗಿರೋರು. ಯಾರನ್ನ ಸಿಎಂ ಮಾಡಬೇಕು ಅಂತ ಅವರ ಪಕ್ಷ ನಿರ್ಧರಿಸುತ್ತೆ ಎಂದು ತಿಳಿಸಿದರು. ಇದನ್ನೂ ಓದಿ: ಡಿಕೆಶಿ, ಸಿದ್ದು ನಿವಾಸದ ಮುಂದೆ ಬೆಂಬಲಿಗರಿಂದ ಮುಂದಿನ ಮುಖ್ಯಮಂತ್ರಿ ಫ್ಲೆಕ್ಸ್ ಅಳವಡಿಕೆ

  • ಮತ ಎಣಿಕೆ ಆರಂಭಕ್ಕೂ ಮುನ್ನ ನಾಡದೇವತೆ ಮೊರೆ ಹೋದ ಸೋಮಣ್ಣ

    ಮತ ಎಣಿಕೆ ಆರಂಭಕ್ಕೂ ಮುನ್ನ ನಾಡದೇವತೆ ಮೊರೆ ಹೋದ ಸೋಮಣ್ಣ

    ಮೈಸೂರು: ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ (Assembly Election Result) ಆರಂಭಕ್ಕೂ ಮುನ್ನ ಬೆಳ್ಳಂಬೆಳಗ್ಗೆ ಚಾಮರಾಜನಗರ (Chamarajanagar)  ಹಾಗೂ ವರುಣ (Varuna) ಕ್ಷೇತ್ರದ ಅಭ್ಯರ್ಥಿ ವಿ. ಸೋಮಣ್ಣ (V Somanna) ನಾಡದೇವತೆ ಮೊರೆ ಹೋಗಿದ್ದಾರೆ.

    ಮೈಸೂರಿನ (Mysuru) ಚಾಮುಂಡಿ ಬೆಟ್ಟಕ್ಕೆ (Chamundi Hill) ಭೇಟಿ ನೀಡಿದ ಸೋಮಣ್ಣ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಿಯ ಮೊದಲ ಪೂಜೆ ಕಾರ್ಯದಲ್ಲೇ ಸೋಮಣ್ಣ ಭಾಗಿಯಾಗಿದ್ದಾರೆ. ಇದನ್ನೂ ಓದಿ: ಕಾಲಿಗೆ ಮೊಬೈಲ್‌ ಕಟ್ಟಿಕೊಂಡು, ಕೇಸರಿ ಶಾಲು ಹಾಕ್ಕೊಂಡು ಮತ ಎಣಿಕೆಗೆ ಬಂದಿದ್ದ ಏಜೆಂಟ್‌ ವಾಪಸ್‌

    ವರುಣ ರಾಜ್ಯದ ಹೈ ವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾಗಿದ್ದು, ಚಾಮರಾಜನಗರದ ಜೊತೆಗೆ ವರುಣ ಕ್ಷೇತ್ರವನ್ನೂ ಸೋಮಣ್ಣ ಗೆಲ್ಲುವ ವಿಶ್ವಾಸದಲ್ಲಿದ್ದಾರೆ. ಇದೀಗ ಮತ ಎಣಿಕೆ ಪ್ರಕ್ರಿಯೆಗೂ ಮುನ್ನ ನಾಡದೇವತೆಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದಿದ್ದಾರೆ. ಇದನ್ನೂ ಓದಿ: Karnataka Election 2023 Result – ರಾಜ್ಯಾದ್ಯಂತ ಮತ ಎಣಿಕೆ ಆರಂಭ LIVE Updates

  • ವರುಣಾ, ಚಾಮರಾಜನಗರದಲ್ಲಿ ಸ್ಪರ್ಧೆ ವಿಧಿ ನಿಯಮ : ಸೋಮಣ್ಣ

    ವರುಣಾ, ಚಾಮರಾಜನಗರದಲ್ಲಿ ಸ್ಪರ್ಧೆ ವಿಧಿ ನಿಯಮ : ಸೋಮಣ್ಣ

    – ಸಿದ್ದರಾಮಯ್ಯ ಜೊತೆ ಬಹಿರಂಗ ಚರ್ಚೆಗೆ ಸಿದ್ಧ

    ಮೈಸೂರು: ವರುಣಾ (Varuna) ಹಾಗೂ ಚಾಮರಾಜನಗರದಲ್ಲಿ (Chamarajanagar) ಸ್ಪರ್ಧಿಸುತ್ತಿರುವುದು ವಿಧಿನಿಯಮ ಎಂದು ಸಚಿವ ವಿ. ಸೋಮಣ್ಣ (V Somanna) ತಿಳಿಸಿದರು.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ಮಗನಿಗೆ ಒಂದು ಸೀಟ್ ಕೊಡಿ ನನಗೆ ಯಾವ ಟಾಸ್ಕ್ ಬೇಡ ಅಂತಾ ಹೈಕಮಾಂಡ್‍ಗೆ ಹೇಳಿದ್ದೆ. ಹೈಕಮಾಂಡ್ ಇಲ್ಲ ನೀವು ಹೋಗಿ ಎರಡು ಕಡೆ ಸ್ಪರ್ಧೆ ಮಾಡಿ. ನಿಮ್ಮ ಕೈಯಲ್ಲಿ ಇದು ಸಾಧ್ಯ ಅಂತಾ ಹೇಳಿ ನನಗೆ ಎರಡು ಟಿಕೆಟ್ ಕೊಟ್ಟಿದ್ದಾರೆ. ಇದು ವಿಧಿ ನಿಯಮ ಎಂದು ಹೇಳಿದರು.

    ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ಅವರು, ಸಿದ್ದರಾಮಯ್ಯ ಅವರಿಂದ ವರುಣಾದಲ್ಲಿ ಒಂದು ಸಮುದಾಯಕ್ಕೆ ಮಾತ್ರ ಅನುಕೂಲವಾಗಿದೆ. ಸಿದ್ದರಾಮಯ್ಯ ಅವರ ಎದುರು ನನ್ನ ಕೂರಿಸಿ. ನಾನು ಅವರ ಆರೋಪಗಳಿಗೆ ಉತ್ತರ ಕೊಡುತ್ತೇನೆ. ನಿಮ್ಮ ಜೊತೆ ಹೊರಗಿನಿಂದ ಎಷ್ಟು ಜನ ಬಂದಿದ್ದಾರೆ. ಹಣ ಹಂಚಲು ಯಾರು ಯಾರು ಬಂದಿದ್ದಾರೆ ಎಂಬುದು ನನಗೆ ಗೊತ್ತಿದೆ ಎಂದು ವಾಗ್ದಾಳಿ ನಡೆಸಿದರು.

    ಪಟಾಲಂ ಬಿಟ್ಟು ಕ್ಷೇತ್ರವನ್ನು ನಡೆಸುತ್ತಿದ್ದಿರಿ. ನಾನು ಬೇಡ ನೀವು ಬೇಡ. ನಿಮ್ಮ ಬೆಂಬಲಿಗರು ಬೇಡ. ನನ್ನ ಬೆಂಬಲಿಗರು ಬೇಡ. ಎಲ್ಲರೂ ಕ್ಷೇತ್ರದಿಂದ ಹೊರಗೆ ಉಳಿಯೋಣ. ಜನ ಆಗ ತೀರ್ಮಾನ ಮಾಡುತ್ತಾರೆ. ನಿಮ್ಮದೆ ಆದ ಪಾಳೆಗಾರಿಕೆಯಲ್ಲಿ ಕ್ಷೇತ್ರ ನಡೆಸಿದ್ದೀರಿ. ನಾನು ನಿಮ್ಮ ಬಗ್ಗೆ ಕೆಳ ಮಟ್ಟದಲ್ಲಿ ಮಾತಾಡಲ್ಲ. ಹಾಗಂತ ನಾನು ಹೇಡಿಯಲ್ಲ ಎಂದು ಗುಡುಗಿದರು.

    ವೀರಶೈವರು, ಒಕ್ಕಲಿಗರು, ಪ. ಜಾತಿ, ಪ. ಪಂಗಡದ ಮೀಸಲಾತಿ ಮುಟ್ಟಲು ನಿಮಗೆ ಸಾಧ್ಯವಿದೆಯಾ? ಲಿಂಗಾಯತರ ಬಳಿ ಕ್ಷಮೆ ಯಾಕೆ ಈಗ ಕೇಳುತ್ತಿದ್ದೀರಿ ಎಂಬುದು ಜನರಿಗೆ ಗೊತ್ತಿದೆ. ಬಸವಣ್ಣನ ಬಾವುಟ ಹಾಕಿಕೊಂಡು ಈಗ ಪ್ರಚಾರ ಮಾಡುತ್ತಿದ್ದೀರಿ. ಜನ ಇದನ್ನು ನಂಬುತ್ತಾರಾ? ನೀವೇ ದೊಡ್ಡ ನಾಯಕ ಅಂತಿದ್ದೀರಿ. ಈಗ ಯಾಕೆ ಸ್ಟಾರ್‌ಗಳನ್ನು ಕರೆದುಕೊಂಡು ಪ್ರಚಾರ ಮಾಡ್ತಿದ್ದಿರಿ? ಎಲ್ಲಾ ವರ್ಗದ ಜನರಿಗೆ ವಂಚನೆ ಮಾಡಿ ಪೇಪರ್‍ಮೆಂಟ್ ಕೊಟ್ಟು ಇಷ್ಟು ವರ್ಷ ರಾಜಕಾರಣ ಮಾಡಿದ್ದೀರಿ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಕೈ ಅಭ್ಯರ್ಥಿಗೆ ಚುನಾವಣಾ ಅಧಿಕಾರಿಗಳಿಂದ ಶಾಕ್ – ಕೆಎಂ ಉದಯ್ ಬೆಂಬಲಿಗರ ಮನೆಯಲ್ಲಿ 2 ಕೋಟಿ ಹಣ ಪತ್ತೆ

    ವರುಣಾ ಕ್ಷೇತ್ರದ ಅಭಿವೃದ್ಧಿ ನಿಮಗೆ ತೃಪ್ತಿ ಕೊಟ್ಟಿದ್ದಿಯಾ ಹೇಳಿ? ಸಿಎಂ ಆಗಿದ್ದ ನೀವು ವರುಣಾ ಕ್ಷೇತ್ರವನ್ನು ಎಷ್ಟು ಅಭಿವೃದ್ಧಿ ಮಾಡಬಹುದಿತ್ತು ಅಷ್ಟು ಅಭಿವೃದ್ಧಿ ಮಾಡಿದ್ದಿರಾ? ಸಿದ್ದರಾಮಯ್ಯ ಅವರೇ ನಿಮ್ಮಂಥ ಅದೃಷ್ಟವಂತರು ಯಾರು ಇಲ್ಲ. ಏನೂ ಕೆಲಸ ಮಾಡದೆ ಇಷ್ಟು ವರ್ಷ ಇಲ್ಲಿ ಗೆದ್ದು ಬಂದು ಅಧಿಕಾರ ಅನುಭವಿಸಿದ್ದಿರಾ. ಸಿದ್ದರಾಮಯ್ಯ ಅವರೇ ಗೋವಿಂದರಾಜ ನಗರ ಕ್ಷೇತ್ರದ ಅಭಿವೃದ್ಧಿ ಹೇಗಿದೆ ನೋಡಿ. ನಾನು ಯಾವತ್ತೂ ಜಾತಿ ಮಾಡಿಲ್ಲ. ನನ್ನ ಜಾತಿಯರು ಅತ್ಯಂತ ಕಡಿಮೆ ಇರುವ ಕ್ಷೇತ್ರದಲ್ಲಿ ನಾನು ಗೆದ್ದು ಬಂದಿದ್ದೇನೆ ಎಂದರು. ಇದನ್ನೂ ಓದಿ: 2 ದಿನವೂ ಕಮಾಲ್ – ಕರ್ನಾಟಕದಲ್ಲಿ ದಾಖಲೆ ಬರೆದ ಮೋದಿ ರೋಡ್ ಶೋ