Tag: V. Srinivas Prasad

  • ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದ ಯಡಿಯೂರಪ್ಪ

    ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದ ಯಡಿಯೂರಪ್ಪ

    – ಸಂಸದ ಶ್ರೀನಿವಾಸ ಪ್ರಸಾದ್‌ರನ್ನು ಸ್ಮರಿಸಿದ ಹಾಲಿ, ಮಾಜಿ ಸಿಎಂಗಳು

    ಮೈಸೂರು: ಸಂಸದ ವಿ.ಶ್ರೀನಿವಾಸ ಪ್ರಸಾದ್ (V.Srinivas Prasad) ಅವರ ಶ್ರದ್ಧಾಂಜಲಿ ಸಭೆಯ ವೇದಿಕೆಯಲ್ಲಿ ಹಾಲಿ ಮತ್ತು ಮಾಜಿ ಮುಖ್ಯಮಂತ್ರಿಗಳು ಒಟ್ಟಿಗೆ ಕಾಣಿಸಿಕೊಂಡು ಗಮನ ಸೆಳೆದರು. ಸಮಾರಂಭದಲ್ಲಿ ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರೇ ಎಂದು ಬಿ.ಎಸ್.ಯಡಿಯೂರಪ್ಪ (Yediyurappa) ಅವರು ಸಂಬೋಧಿಸಿದರು.

    ಸ್ವಾಭಿಮಾನಿಗೆ ಸಾವಿರದ ನುಡಿನಮನ ಶೀರ್ಷಿಕೆಯಡಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಮಾರಂಭದಲ್ಲಿ ಸಿದ್ದರಾಮಯ್ಯ ಮತ್ತು ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು. ಈ ವೇಳೆ ಇಬ್ಬರೂ ಹಿರಿಯ ನಾಯಕರು ವೇದಿಕೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡರು. ಸಿಎಂ ಸಿದ್ದರಾಮಯ್ಯಗೆ ಯಡಿಯೂರಪ್ಪ ಚೀಟಿ ಕೊಟ್ಟರು. ಜೇಬಿನಿಂದ ಬಿಳಿ ಪೇಪರ್‌ನಲ್ಲಿ ಬರೆದಿದ್ದ ಚೀಟಿಯನ್ನ ಸಿಎಂ ಸಿದ್ದರಾಮಯ್ಯ ನೀಡಿದರು. ನಂತರ ಕೈ ಹಿಡಿದು ಆತ್ಮೀಯವಾಗಿ ಯಡಿಯೂರಪ್ಪನವರ ಜೊತೆ ಕೆಲ ಹೊತ್ತು ಸಿಎಂ ಮಾತನಾಡಿದರು. ಇದನ್ನೂ ಓದಿ: ವಕೀಲ ದೇವರಾಜೇಗೌಡ ಬಂಧನಕ್ಕೆ ಆರ್‌ ಅಶೋಕ್‌ ಖಂಡನೆ

    ಈ ವೇಳೆ ಮಾತನಾಡಿದ ಯಡಿಯೂರಪ್ಪ, ಸಿದ್ದರಾಮಯ್ಯರನ್ನು ಜನಪ್ರಿಯ ಮುಖ್ಯಮಂತ್ರಿ ಎಂದು ಸಂಬೋಧಿಸಿದರು. ಮನುಷ್ಯ ಹುಟ್ಟಿದ್ದಾಗ ಉಸಿರು ಇರುತ್ತೆ ಹೆಸರು ಇರಲ್ಲ. ಸತ್ತಾಗ ಉಸಿರು ಇರಲ್ಲ ಹೆಸರು ಇರುತ್ತೆ. ಶ್ರೀನಿವಾಸ ಪ್ರಸಾದ್ ಅವರದು ಸಾರ್ಥಕ ಬದುಕು. ಪ್ರಸಾದ್ ಅವರ ಸಾವು ನನಗೆ ಆಘಾತ ಉಂಟು ಮಾಡಿತ್ತು. ಪ್ರಸಾದ್ ಪಕ್ಷಾಂತರಿ ಆಗಿದ್ದರೂ, ತತ್ವಾಂತರಿ ಆಗಿರಲಿಲ್ಲ. ದಲಿತ ವರ್ಗಕ್ಕೆ ಮಾತ್ರವಲ್ಲ. ಎಲ್ಲಾ ವರ್ಗದ ನಾಯಕರಾಗಿದ್ದರು. ಪ್ರಸಾದ್ ಸಾಮಾಜಿಕ ನ್ಯಾಯದ ಚಾಂಪಿಯನ್ ಆಗಿದ್ದರು ಎಂದು ಸ್ಮರಿಸಿದರು.

    ಸಿಎಂ ಸಿದ್ದರಾಮಯ್ಯ ಮಾತನಾಡಿ, ಶ್ರೀನಿವಾಸ ಪ್ರಸಾದ್ ಸ್ವಾಭಿಮಾನಿ, ಸಜ್ಜನ ರಾಜಕಾರಣಿ. ನಾವಿಬ್ಬರು ವಯಸ್ಸಿನಲ್ಲಿ ಹೆಚ್ಚು ಕಡಿಮೆ ಒಂದೇ ಕಾಲದವರು. ನನಗಿಂತಾ ಮುಂಚೆ ಚುನಾವಣಾ ರಾಜಕಾರಣಕ್ಕೆ ಬಂದರು. ಪ್ರಸಾದ್ ಮೊದಲಿಂದ ಕಾಂಗ್ರೆಸ್‌ಗೆ ವಿರುದ್ಧವಾಗಿದ್ದರು. ನಂತರದಲ್ಲಿ ಕೆಲವು ಸ್ನೇಹಿತರ ಸಲಹೆಯಂತೆ ಕಾಂಗ್ರೆಸ್ ಸೇರಿದರು ಅಷ್ಟೆ. ನಾವಿಬ್ಬರು ಪರಸ್ಪರ ಬೇರೆ ಪಕ್ಷದಲ್ಲಿ ಇದ್ದಾಗಲೂ ಇಬ್ಬರ ನಡುವೆ ಒಳ್ಳೆಯ ಸ್ನೇಹವಿತ್ತು. ಮನುಷ್ಯತ್ವದ ಬಗ್ಗೆ ಶ್ರೀನಿವಾಸ ಪ್ರಸಾದ್ ಬಹಳ ಗೌರವ ಇಟ್ಟು ಕೊಂಡಿದ್ದರು. ಮನುಷ್ಯತ್ವ ಧರ್ಮದಿಂದ, ಜಾತಿಯಿಂದ ಬರಲ್ಲ. ರಾಜಕೀಯವಾಗಿ ನಾವು ಟೀಕೆ ಮಾಡ್ತಿದ್ದೆವು. ಆದರೆ ನಮ್ಮ ಅವರ ಸ್ನೇಹಕ್ಕೆ ಯಾವತ್ತೂ ಧಕ್ಕೆ ಬಂದಿರಲಿಲ್ಲ. ನಾನು ಅವರನ್ನು ಭೇಟಿ ಮಾಡೋದೋ ಬೇಡವೋ ಅಂದುಕೊಂಡಿದ್ದೆ. ಮಹಾದೇವಪ್ಪ ಭೇಟಿ ಮಾಡಿ ಅಂದರು. ಅದಕ್ಕೆ ಹೋಗಿ ಭೇಟಿ ಮಾಡಿದೆ. ಅರ್ಧ ಗಂಟೆ ಕಾಲ ಇಬ್ಬರು ಉಭಯ ಕುಶಲೋಪರಿ ಮಾತಾಡಿ ಕೊನೆಗೆ ಕಾಂಗ್ರೆಸ್‌ಗೆ ಬೆಂಬಲ ಕೊಡಿ ಅಂತಾ ಕೇಳಿದ್ದೆ ಎಂದು ಹಿಂದಿನ ದಿನಗಳನ್ನು ನೆನಪಿಸಿಕೊಂಡಿರು. ಇದನ್ನೂ ಓದಿ: ವೀಡಿಯೋ ವೈರಲ್ ಮಾಡಿದವರನ್ನು ಟ್ರೇಸ್ ಮಾಡೋದು ಕಷ್ಟ: ಪ್ರಿಯಾಂಕ್ ಖರ್ಗೆ

    ನಮ್ಮ ಸ್ನೇಹ ಕೆಟ್ಟು ಹೋಗಿದ್ದರೆ ನಾನು ಭೇಟಿ ಮಾಡಿದ್ದಾಗ ಮುಖ ಕೊಟ್ಟು ಮಾತಾಡ್ತಾ ಇರಲಿಲ್ಲ. ಆದರೆ ಬಹಳ ಪ್ರೀತಿಯಿಂದ ಅವರು ಮಾತಾಡಿದ್ರು. ಕೊನೆಯಲ್ಲಿ ಅವರಿಗೆ ಸ್ವಾಭಿಮಾನಕ್ಕೆ ಧಕ್ಕೆ ಬಂದ ರೀತಿಯಲ್ಲಿ ಮಾತಾಡ್ತಿದ್ದರು. ಶ್ರೀನಿವಾಸ ಪ್ರಸಾದ್‌ಗೆ ಗುಲಾಮಗಿರಿ ಕೀಳರಿಮೆ ಇರಲಿಲ್ಲ. ಒಬ್ಬ ಸಜ್ಜನ, ಮನುಷ್ಯತ್ವ ಜೀವಿ. ಹಳೆ ತಲೆಮಾರಿನ ಕೊಂಡಿ ಕಳಚಿದೆ. ನಾವು ಎಷ್ಟು ವರ್ಷ ಬದುಕಿದ್ದೆವು ಎಂಬುದು ಮುಖ್ಯವಲ್ಲ. ನಾವು ಎಷ್ಟು ಸಾರ್ಥಕವಾಗಿ ಬದುಕಿದ್ದೆವು ಎಂಬುದು ಮುಖ್ಯ. ಶ್ರೀನಿವಾಸ ಪ್ರಸಾದ್ ಅವರದು ಸಾರ್ಥಕ ಬದುಕು ಎಂದರು.

    ಶ್ರೀನಿವಾಸ ಪ್ರಸಾದ್ ಪತ್ನಿ ಭಾಗ್ಯಲಕ್ಷ್ಮಿ ಶ್ರೀನಿವಾಸ ಪ್ರಸಾದ್ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಿತು. ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ.ಮಹದೇವಪ್ಪ, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ದರ್ಶನ್ ಧ್ರುವನಾರಾಯಣ್, ಹರೀಶ್‌ಗೌಡ, ಟಿ.ಎಸ್.ಶ್ರೀವತ್ಸ, ಡಾ.ತಿಮ್ಮಯ್ಯ, ಮಾಜಿ ಶಾಸಕರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಪಿ.ಜಿ.ಆರ್.ಸಿಂಧ್ಯಾ, ಚಿಂತಕ ಡಾ.ದ್ವಾರಕಾನಾಥ್ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದರು.

  • ಬೌದ್ಧ ಸಂಪ್ರದಾಯದಂತೆ ಇಂದು ಸಂಸದ ಶ್ರೀನಿವಾಸ್‌ ಪ್ರಸಾದ್‌ ಅಂತ್ಯಕ್ರಿಯೆ

    ಬೌದ್ಧ ಸಂಪ್ರದಾಯದಂತೆ ಇಂದು ಸಂಸದ ಶ್ರೀನಿವಾಸ್‌ ಪ್ರಸಾದ್‌ ಅಂತ್ಯಕ್ರಿಯೆ

    ಮೈಸೂರು: ಬಿಜೆಪಿ ಸಂಸದ, ದಲಿತ ನಾಯಕ ವಿ.ಶ್ರೀನಿವಾಸ್‌ ಪ್ರಸಾದ್‌ (Srinivas Prasad) ಅವರ ಅಂತ್ಯಕ್ರಿಯೆ ಬೌದ್ಧ ಧರ್ಮದ ವಿಧಿವಿಧಾನದಂತೆ ಮೈಸೂರಿನಲ್ಲಿ (Mysuru) ಇಂದು ನಡೆಯಲಿದೆ.

    ನಗರದ ಅಶೋಕಪುರಂ ಡಾ. ಬಿ.ಆರ್.ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಇದಕ್ಕೂ ಮುನ್ನ ಅಶೋಕಪುರಂನ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಗುವುದು. ಇದನ್ನೂ ಓದಿ: ಮರೆಯಾದ ನಿಷ್ಕಳಂಕ ರಾಜಕಾರಣಿ – ಸಿಎಂ, ಡಿಸಿಎಂ ಸೇರಿದಂತೆ ಗಣ್ಯರಿಂದ ಶ್ರೀನಿವಾಸ್ ಪ್ರಸಾದ್ ಅಂತಿಮ ದರ್ಶನ

    ಇಂದು ಮಧ್ಯಾಹ್ನ 1 ಗಂಟೆಗೆ ಅಂತ್ಯಕ್ರಿಯೆ ಮಾಡಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಹಿತಕರ ಘಟನೆ ಜರುಗದಂತೆ ಪೊಲೀಸ್ ಇಲಾಖೆ ಮುಂಜಾಗ್ರತೆ ಕ್ರಮವಹಿಸಿದೆ.

    ಬೆಂಗಳೂರಿನ ಮಹಾಬೋದಿಯ ಆನಂದ ಬಂತೇಜಿ, ಮೈಸೂರಿನ ವಿಶ್ವಮೈತ್ರಿ ಬುದ್ಧ ವಿಹಾರದ ಕಲ್ಯಾಣಸಿರಿ ಬಂತೇಜಿ ನೇತೃತ್ವದಲ್ಲಿ ವಿಧಿವಿಧಾನ ನಡೆಯಲಿದೆ. ಅಂತ್ಯಕ್ರಿಯೆ ವೇಳೆ ಸುಮಾರು 15ಕ್ಕೂ ಹೆಚ್ಚು ಬೌದ್ಧ ಬಿಕ್ಕುಗಳು ಪ್ರಾರ್ಥನೆ ಸಲ್ಲಿಸಲಿದ್ದಾರೆ. ಇದನ್ನೂ ಓದಿ: ಶ್ರೀನಿವಾಸ್‌ ಪ್ರಸಾದ್‌ ವಿಧಿವಶ – ಪ್ರಭಾವಿ ದಲಿತ ನಾಯಕನ ರಾಜಕೀಯ ಏಳು-ಬೀಳಿನ ಹಾದಿ ಹೇಗಿತ್ತು?

  • ಬಿಜೆಪಿ ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಸ್ಥಿತಿ ಗಂಭೀರ

    ಬಿಜೆಪಿ ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಸ್ಥಿತಿ ಗಂಭೀರ

    ಬೆಂಗಳೂರು: ವಯೋಸಹಜ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ಸಂಸದ ವಿ.ಶ್ರೀನಿವಾಸ್‌ ಪ್ರಸಾದ್‌ (V.Srinivas Prasad) ಅವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

    ಅನಾರೋಗ್ಯ ಕಾರಣಕ್ಕೆ ಶ್ರೀನಿವಾಸ್‌ ಪ್ರಸಾದ್‌ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಂಸದರ ಆರೋಗ್ಯ ಕುರಿತು ವೈದ್ಯ ಸುದರ್ಶನ್‌ ಬಲ್ಲಾಳ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಬೆಳಗಾವಿಗೆ ಬಂದಿಳಿದ ಪ್ರಧಾನಿ ಮೋದಿ

    ಸುದರ್ಶನ್‌ ಬಲ್ಲಾಳ ಮಾತನಾಡಿ, ಶ್ರೀನಿವಾಸ್‌ ಪ್ರಸಾದ್‌ ಅವರು 25 ವರ್ಷದಿಂದ ನಮ್ಮ ಬಳಿ ಚಿಕಿತ್ಸೆಗೆ ಬರ್ತಾ ಇದ್ದಾರೆ. ಎಪ್ರಿಲ್ 22 ರಂದು ಇನ್‌ಫೆಕ್ಷನ್‌ ಅಂತಾ ಬಂದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶುಗರ್, ಬಿಪಿ ವ್ಯತ್ಯಾಸ ಇರುವುದರಿಂದ ಐಸಿಯುನಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

  • ಮೋದಿ ಸಮಾವೇಶಕ್ಕೆ ಬರಲ್ಲ: ಬಿಎಸ್‌ವೈ ಮನವಿ ನಿರಾಕರಿಸಿದ ಸಂಸದ ಶ್ರೀನಿವಾಸ್ ಪ್ರಸಾದ್

    ಮೋದಿ ಸಮಾವೇಶಕ್ಕೆ ಬರಲ್ಲ: ಬಿಎಸ್‌ವೈ ಮನವಿ ನಿರಾಕರಿಸಿದ ಸಂಸದ ಶ್ರೀನಿವಾಸ್ ಪ್ರಸಾದ್

    ಮೈಸೂರು: ಕಾಂಗ್ರೆಸ್ ನಾಯಕರ ಸಾಲು ಸಾಲು ಭೇಟಿ ಬೆನ್ನಲ್ಲೇ ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಮನೆಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ (B.S.Yediyurappa) ಭಾನುವಾರ ಭೇಟಿ ನೀಡಿದರು. ಈ ವೇಳೆ, ಮೋದಿ ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ಬಿಎಸ್‌ವೈ ಮಾಡಿದ ಮನವಿಗೆ ಪ್ರಸಾದ್, ಆಗಲ್ಲ ಎಂದು ನಿರಾಕರಿಸಿದ್ದಾರೆ.

    ಲೋಕಸಭಾ ಚುನಾವಣೆ ಹೊತ್ತಲ್ಲಿ ಬಿಜೆಪಿಯಿಂದ ಶ್ರೀನಿವಾಸ್ ಪ್ರಸಾದ್ (Srinivas Prasad) ಅಂತರ ಕಾಯ್ದುಕೊಂಡಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಇದೇ ಹೊತ್ತಿನಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಪ್ರಸಾದ್ ಅವರನ್ನು ಭೇಟಿಯಾಗುತ್ತಿರುವುದು ಸಹಜವಾಗಿ ಬಿಜೆಪಿಗೆ ತಲೆನೋವಾಗಿ ಪರಿಣಮಿಸಿದೆ. ಇದನ್ನೂ ಓದಿ: ಸಿಎಂ ತವರಲ್ಲಿಂದು ನಮೋ ಘರ್ಜನೆ – ಮೈಸೂರಲ್ಲಿ ಎಲ್ಲೆಲ್ಲಿ ಮಾರ್ಗ ಬದಲಾವಣೆ?

    ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಮೈಸೂರಿನಲ್ಲಿ ನಡೆಯುವ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಅದರಲ್ಲಿ ಭಾಗವಹಿಸುವಂತೆ ಆಹ್ವಾನಿಸಲು ಶ್ರೀನಿವಾಸ್ ಪ್ರಸಾದ್ ಅವರ ನಿವಾಸಕ್ಕೆ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿದ್ದರು. ಈ ವೇಳೆ ಪ್ರಸಾದ್ ಆರೋಗ್ಯವನ್ನು ಬಿಎಸ್‌ವೈ ವಿಚಾರಿಸಿದರು.

    ಇಂದಿನ ಬಿಜೆಪಿ ಸಮಾವೇಶದಲ್ಲಿ ನರೇಂದ್ರ ಮೋದಿ ಜೊತೆ ವೇದಿಕೆ ಹಂಚಿಕೊಳ್ಳುವಂತೆ ಪ್ರಸಾದ್‌ಗೆ ಬಿಎಸ್‌ವೈ ಮನವಿ ಮಾಡಿದರು. ಇದಕ್ಕೆ ಪ್ರಸಾದ್ ಸ್ಪಷ್ಟವಾಗಿ ನಿರಾಕರಿಸಿದರು. ನಾನು ಸಕ್ರಿಯ ರಾಜಕಾರಣದಿಂದ ನಿವೃತ್ತನಾಗಿದ್ದೇನೆ. ಹಾಗಾಗಿ ಸಮಾವೇಶದಲ್ಲಿ ಭಾಗಿಯಾಗುವುದಿಲ್ಲ. ಮೋದಿ ಜಾಗತಿಕ ನಾಯಕರು. ಅವರ ಜೊತೆ ಐದು ವರ್ಷ ಸಂಸದನಾಗಿ ಸೇವೆ ಸಲ್ಲಿಸಿದ್ದೇನೆ. ಮೋದಿ ನಾನು ಕಂಡ ಅತ್ಯಂತ ಒಳ್ಳೆಯ ಪ್ರಧಾನ ಮಂತ್ರಿ. ಮೋದಿ, ಬಿಜೆಪಿ ವಿರುದ್ಧ ನಾನು ಏನನ್ನೂ ಮಾತನಾಡುವುದಿಲ್ಲ ಎಂದು ಶ್ರೀನಿವಾಸ್ ಪ್ರಸಾದ್ ಪ್ರತಿಕ್ರಿಯಿಸಿದರು. ಇದನ್ನೂ ಓದಿ: ಹಾಲಿ, ಮಾಜಿ ಪ್ರಧಾನಿಗಳ ಸಮಾಗಮದಿಂದ ದೊಡ್ಡ ಸಂದೇಶ ರವಾನೆ: ಯದುವೀರ್‌

    ಹೂಗುಚ್ಛ ನೀಡಿ ಆತ್ಮೀಯವಾಗಿ ಇಬ್ಬರೂ ಮಾತುಕತೆ ನಡೆಸಿದರು. ಕಾರ್ಯಕ್ರಮಕ್ಕೆ ಬಂದು ಸ್ವಲ್ಪಹೊತ್ತು ಕುಳಿತು ಹೋಗಬೇಕು ಎಂದು ಶ್ರೀನಿವಾಸ್ ಪ್ರಸಾದ್‌ಗೆ ಯಡಿಯೂರಪ್ಪ ಮನವಿ ಮಾಡಿದರು. ಕೈ ಮುಗಿತೀನಿ ಆಗೋದಿಲ್ಲ. ನನಗೆ ಆರೋಗ್ಯ ಸ್ಪಂದಿಸಲ್ಲ. ನಾನು ಬಿಜೆಪಿಯಿಂದಲೇ ನಿವೃತ್ತಿ ಆಗಿದ್ದೇನೆ. ಯಾವುದೇ ರಾಜಕೀಯ ಕಾರ್ಯಕ್ರಮಗಳಿಗೆ ಭಾಗವಹಿಸುತ್ತಿಲ್ಲ ಎಂದರು ಪ್ರಸಾದ್. ಆಗ ಬಿಎಸ್‌ವೈ, ಪ್ರಧಾನಿ ಬರ್ತಿದ್ದಾರೆ ಬನ್ನಿ ಎಂದು ಮನವಿ ಮಾಡಿದರು.

    ನಾನು ನಿವೃತ್ತಿ ಆಗಿರೋದ್ರಿಂದ ಸಿಎಂ ಸೇರಿ ಎಲ್ಲ ಬರ್ತಾರೆ. ಬಂದು ಆರೋಗ್ಯ ವಿಚಾರಿಸಿದ್ದಾರೆ. ವಿಜಯೇಂದ್ರ ಎರಡು ಬಾರಿ ಬಂದಿದ್ರು. ನಮ್ಮ ಅಳಿಯ ಹರ್ಷ ಅವರು ಬಹಳ ಸಂಪರ್ಕದಲ್ಲಿ ಇದ್ದಾರೆ. ನೀವು ಬಹಳ ಬ್ಯುಸಿ ಇದ್ದೀರ. ಚಿತ್ರದುರ್ಗದಿಂದ ಬಂದ್ರ? ನಿಮ್ಮ ಆರೋಗ್ಯ ಚೆನ್ನಾಗಿದೆ, ಬಹಳಾ ಚೆನ್ನಾಗಿ ಕಾಪಾಡಿಕೊಂಡಿದ್ದೀರಾ ಎಂದು ಯಡಿಯೂರಪ್ಪಗೆ ಕಾಂಪ್ಲಿಮೆಂಟರಿ ಕೊಟ್ಟರು. ಮೋದಿ ಜೊತೆ ತುಂಬಾ ಸಾರಿ ವೇದಿಕೆ ಹಂಚಿಕೊAಡಿದ್ದೇನೆ. ಈಗ ಸ್ವಲ್ಪ ದೂರವೂ ನಡೆಯಲು ಆಗಲ್ಲ ಎಂದು ಮಾತನಾಡುತ್ತಲೇ ನಯವಾಗಿ ಯಡಿಯೂರಪ್ಪ ಆಹ್ವಾನ ತಿರಸ್ಕರಿಸಿದರು.

    ಶ್ರೀನಿವಾಸ್ ಪ್ರಸಾದ್ ನಿವಾಸದಿಂದ ಹೊರಟ ಯಡಿಯೂರಪ್ಪ ಸುದ್ದಿಗಾರರೊಂದಿಗೆ ಮಾತನಾಡಿ, ಮೋದಿ ಕಾರ್ಯಕ್ರಮಕ್ಕೆ ಬರಲು ಪ್ರಸಾದ್ ಒಪ್ಪಿಕೊಂಡಿದ್ದಾರೆ. ನಮ್ಮ ಸಂಸತ್ ಸದಸ್ಯರು ಬಹಳ ಹಿರಿಯವರು. ಮೋದಿ ಅವರ ಬಗ್ಗೆ ಬಹಳ ಗೌರವ ಇಟ್ಟುಕೊಂಡಿರುವ ನಾಯಕರು. ನಾನು ಅವರಿಗೆ ಮನವಿ ಮಾಡಿಕೊಂಡಿದ್ದೇನೆ. ಮೋದಿ ಭೇಟಿ ಮಾಡಿ ಐದು ನಿಮಿಷ ಇದ್ದು ಹೋಗಿ ಎಂದು ಕೇಳಿಕೊಂಡಿದ್ದೇನೆ. ಈಗ ಅವರು ಬರಲು ಒಪ್ಪಿಕೊಂಡಿದ್ದಾರೆ. ಇದಕ್ಕೆ ಚಿರಋಣಿಯಾಗಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: 6 ವರ್ಷಗಳ ಮುನಿಸು ಮರೆತು ಶ್ರೀನಿವಾಸ್ ಪ್ರಸಾದ್ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ

    ಆಹ್ವಾನ ಕುರಿತು ಮಾತನಾಡಿದ ಶ್ರೀನಿವಾಸ್ ಪ್ರಸಾದ್, ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನ ಕೊಟ್ಟಿದ್ದಾರೆ. ಮನೆಗೆ ಬಂದಿದ್ದಾರೆ, ಮನೆಗೆ ಬಂದವರನ್ನ ಸೌಜನ್ಯದಿಂದ ಬರಮಾಡಿಕೊಳ್ಳುವುದು ಕರ್ತವ್ಯ. ಕಾರ್ಯಕ್ರಮಕ್ಕೆ ಬರುವಂತೆ ಯಡಿಯೂರಪ್ಪ ಕರೆದಿದ್ದಾರೆ. ಕಡು ಖಂಡಿತವಾಗಿ ಬರಲು ಆಗಲ್ಲ ಅಂತ ಹೇಳಲು ಆಗಲ್ಲ. ಸೌಜನ್ಯದಿಂದ ಬಂದಾಗ ಪ್ರೀತಿಯಿಂದ ಮಾತನಾಡಿದ್ದೇನೆ. ಕಾರ್ಯಕ್ರಮಕ್ಕೆ ಹೋಗುವುದು ಬಿಡುವುದು ನಮ್ಮ ತೀರ್ಮಾನ ಎಂದು ಸ್ಪಷ್ಟಪಡಿಸಿದರು.

  • 6 ವರ್ಷಗಳ ಮುನಿಸು ಮರೆತು ಶ್ರೀನಿವಾಸ್ ಪ್ರಸಾದ್ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ

    6 ವರ್ಷಗಳ ಮುನಿಸು ಮರೆತು ಶ್ರೀನಿವಾಸ್ ಪ್ರಸಾದ್ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ

    – ಮೈಸೂರಿಗೆ ಮೋದಿ ಆಗಮನದ ಹೊತ್ತಲ್ಲೇ ತವರಲ್ಲಿ ಬಿಜೆಪಿಗೆ ಸಿಎಂ ಮಾಸ್ಟರ್ ಸ್ಟ್ರೋಕ್

    ಮೈಸೂರು: ಲೋಕಸಭಾ ಚುನಾವಣೆ (Lok Sabha Election 2024) ಹೊತ್ತಲ್ಲಿ ಮೈಸೂರು (Mysuru) ಭಾಗದಲ್ಲಿ ಕಾಂಗ್ರೆಸ್ ಪಕ್ಷ ಬಲಪಡಿಸಲು ಸಿಎಂ ಸಿದ್ದರಾಮಯ್ಯ ಮುಂದಾಗಿರುವಂತೆ ಕಾಣುತ್ತಿದೆ. ರಾಜಕೀಯ ಕಾರಣಕ್ಕೆ 6 ವರ್ಷಗಳಿಂದ ಇದ್ದ ಮುನಿಸನ್ನು ಮರೆತು ಬಿಜೆಪಿ ಸಂಸದ ವಿ.ಶ್ರೀನಿವಾಸ್‌ ಪ್ರಸಾದ್ (V.Srinivas Prasad) ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದಾರೆ.

    ನಾಳೆ (ಭಾನುವಾರ) ಪ್ರಧಾನಿ ಮೋದಿ ಅವರು ಮೈಸೂರಿಗೆ ಪ್ರಚಾರಕ್ಕಾಗಿ ಆಗಮಿಸಲಿದ್ದಾರೆ. ಈ ಹೊತ್ತಿನಲ್ಲೇ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಅವರನ್ನು ಸಿಎಂ ಭೇಟಿಯಾಗಿರುವುದು ಅಚ್ಚರಿ ಮೂಡಿಸಿದೆ. ಆರು ವರ್ಷಗಳಿಂದ ದಿಗ್ಗಜ ನಾಯಕರು ಪರಸ್ಪರ ಭೇಟಿಯಾಗಿರಲಿಲ್ಲ. ಮಾತುಕತೆಯೂ ಇರಲಿಲ್ಲ. ಈಗ ಚುನಾವಣೆ ಹೊಸ್ತಿಲಲ್ಲಿ ಪ್ರಸಾದ್ ಮನೆಗೆ ಸಿದ್ದರಾಮಯ್ಯ (Siddaramaiah) ಅವರು ಭೇಟಿ ನೀಡಿರುವುದು ಕುತೂಹಲ ಮೂಡಿಸಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಮೂಲ ನಮ್ಮ ಪಕ್ಷದವರಲ್ಲ, ಬೇರೆ ಪಕ್ಷದಿಂದ ಬಂದವರು: ಡಿಕೆ ಸುರೇಶ್

    ಇದು ಸೌಹಾರ್ದಯುತ ಭೇಟಿಯೋ ಅಥವಾ ರಾಜಕೀಯ ಭೇಟಿಯೋ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಶುರುವಾಗಿದೆ. ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಶ್ರೀನಿವಾಸ್ ಪ್ರಸಾದ್ ಅವರ ಮನೆಗೆ ಭೇಟಿ ನೀಡಿದ್ದರು. ಈ ವೇಳೆ, ಬನ್ರಿ ಪ್ರಸಾದ್ ಎಂದು ಸಿಎಂ ಕುಶಲೋಪರಿ ವಿಚಾರಿಸಿದರು.

    ಶ್ರೀನಿವಾಸ ಪ್ರಸಾದ್ ಬಂದ ಕೂಡಲೇ ಸಿಎಂ ಎದ್ದು ನಿಲ್ಲಲು ಮುಂದಾದರು. ಆಗ ಶ್ರೀನಿವಾಸ್ ಪ್ರಸಾದ್, ಬೇಡ ಬೇಡ.. ಕೂತುಕೊಳ್ಳಿ ಎಂದರು. ಈ ವೇಳೆ ಸಿಎಂ ಬಳಿ ಪ್ರಸಾದ್ ಆರೋಗ್ಯ ಸಮಸ್ಯೆ ಹೇಳಿಕೊಂಡರು. ‘ಆರೋಗ್ಯ ನಿರ್ಲಕ್ಷ್ಯ ಮಾಡಬೇಡಿ’ ಎಂದು ಸಿಎಂ ಸಲಹೆ ನೀಡಿದರು. ಇದನ್ನೂ ಓದಿ: ತುಮಕೂರು ಕ್ಷೇತ್ರ ಗೆಲ್ಲಲು ಬಿಜೆಪಿ ಪ್ಲ್ಯಾನ್‌; ಮಾಧುಸ್ವಾಮಿ ಮುನಿಸು ಶಮನಕ್ಕೆ ಆಫರ್ – ಸೋಮಣ್ಣ ಪರ ಪ್ರಚಾರಕ್ಕಿಳಿತಾರಾ?

    2013 ರಲ್ಲಿ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಕಂದಾಯ ಸಚಿವರಾಗಿದ್ದ ವಿ.ಶ್ರೀನಿವಾಸ್ ಪ್ರಸಾದ್ ಅವರನ್ನು ತಮ್ಮ ಸಂಪುಟದಿಂದ ಕೈಬಿಟ್ಟಿದ್ದರು. ಇದರಿಂದ ಕುಪಿತಗೊಂಡಿದ್ದ ಪ್ರಸಾದ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿ ಚುನಾವಣೆ ಎದುರಿಸಿದ್ದರು. ಆಗ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದರು. ನಂತರ ಚಾಮರಾಜನಗರ ಕ್ಷೇತ್ರದಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಪ್ರಸಾದ್ ಗೆಲುವು ಸಾಧಿಸಿದ್ದರು.

    ಸಂಪುಟದಿಂದ ಕೈಬಿಟ್ಟಾಗಿನಿಂದ ಸಿದ್ದರಾಮಯ್ಯ ವಿರುದ್ಧ ಪ್ರಸಾದ್ ಅಸಮಾಧಾನ ಹೊಂದಿದ್ದರು. ಆದರೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹಲವು ಕುತೂಹಲಕಾರಿ ಬೆಳವಣಿಗೆಗಳು ನಡೆಯುತ್ತಿವೆ. ಪ್ರಸಾದ್ ಅನಾರೋಗ್ಯ ಹಾಗೂ ವಯಸ್ಸಿನ ಕಾರಣ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಬಿಜೆಪಿಯಿಂದ ಬಾಲರಾಜ್ ಕಣಕ್ಕಿಳಿದಿದ್ದಾರೆ. ಇತ್ತ ಕಾಂಗ್ರೆಸ್‌ನಿಂದ ಹೆಚ್.ಸಿ.ಮಹದೇವಪ್ಪ ಅವರ ಪುತ್ರ ಸುನೀಲ್ ಬೋಸ್ ಸ್ಪರ್ಧಿಸಿದ್ದಾರೆ. ಪುತ್ರನ ಗೆಲುವಿಗಾಗಿ ಕ್ಷೇತ್ರದಲ್ಲಿ ಮಹದೇವಪ್ಪ ಕಸರತ್ತು ನಡೆಸುತ್ತಿದ್ದಾರೆ. ಹೀಗಾಗಿ ಬಿಜೆಪಿಯ ಶ್ರೀನಿವಾಸ್ ಪ್ರಸಾದ್ ಮನೆಗೆ ಭೇಟಿ ನೀಡಿ ರಾಜಕೀಯ ದಾಳ ಉರುಳಿಸಿದ್ದರು.

  • ಸಿಎಂ ಆಪರೇಷನ್ ಹಸ್ತ ಸಕ್ಸಸ್ – ಶ್ರೀನಿವಾಸ್ ಪ್ರಸಾದ್ ಅಳಿಯ ಧೀರಜ್ ಕಾಂಗ್ರೆಸ್ ಸೇರ್ಪಡೆ

    ಸಿಎಂ ಆಪರೇಷನ್ ಹಸ್ತ ಸಕ್ಸಸ್ – ಶ್ರೀನಿವಾಸ್ ಪ್ರಸಾದ್ ಅಳಿಯ ಧೀರಜ್ ಕಾಂಗ್ರೆಸ್ ಸೇರ್ಪಡೆ

    ಮೈಸೂರು: ಕೊನೆಗೂ ಸಿಎಂ ಸಿದ್ದರಾಮಯ್ಯ (Siddaramaiah) ಅವರ ಆಪರೇಷನ್ ಹಸ್ತ ಸಕ್ಸಸ್ ಆಗಿದ್ದು, ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ (V Srinivas Prasad) ಅವರ ಅಳಿಯ ಧೀರಜ್ ಪ್ರಸಾದ್ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.

    ಬೆಂಗಳೂರಿನಲ್ಲಿರುವ ಪಕ್ಷದ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ನೇತೃತ್ವದಲ್ಲಿ ಧೀರಜ್ (Dheeraj Prasad) ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಈ ವೇಳೆ ಡಿಕೆಶಿ ಅವರಿಗೆ ಹೂಗುಚ್ಛ ನೀಡಿ, ಹಾರ ಹಾಕಿ ಸನ್ಮಾನಿಸಿದ್ದಾರೆ. ಧೀರಜ್ ಬಿಜೆಪಿ ರಾಜ್ಯ ಯುವ ಮೋರ್ಚ ಉಪಾಧ್ಯಕ್ಷರಾಗಿದ್ದರು. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ಗೆ ಮತ್ತೊಂದು ಶಾಕ್‌ – ‘ಕೈ’ ನಾಯಕನ ಸೊಸೆ ಬಿಜೆಪಿ ಸೇರ್ಪಡೆ

    ತಮ್ಮ ಅಳಿಯನಿಗೆ ಬಿಜೆಪಿಯಿಂದ ಲೋಕಸಭಾ ಚುನಾವಣೆಗೆ ಟಿಕೆಟ್ ಕೊಡಿಸುವ ಶ್ರೀನಿವಾಸ್ ಪ್ರಸಾದ್ ಪ್ರಯತ್ನ ವಿಫಲವಾಗಿದೆ. ಹೀಗಾಗಿ ಪಕ್ಷದ ನಡೆಗೆ ಪ್ರಸಾದ್ ಬೇಸರಗೊಂಡಿದ್ದಾರೆ. ಮೈಸೂರು, ಚಾಮರಾಜನಗರ ಕ್ಷೇತ್ರಗಳನ್ನು ಗೆಲ್ಲಲು ಪ್ರಯತ್ನಿಸುತ್ತಿರುವ ಕಾಂಗ್ರೆಸ್, ಇದನ್ನೇ ಬಂಡವಾಳ ಮಾಡಿಕೊಂಡಿದೆ ಎನ್ನಲಾಗಿದೆ. ಇದನ್ನೂ ಓದಿ: ಚುನಾವಣೆ ಬಂದ್ರೆ ಸಾಕು ಆಸ್ಪತ್ರೆ ಸೇರ್ತಾರೆ: ಹೆಚ್‌ಡಿಕೆ ಹೃದಯ ಶಸ್ತ್ರಚಿಕಿತ್ಸೆ ಬಗ್ಗೆ ‘ಕೈ’ ಶಾಸಕ ಅನುಮಾನ

    ಪ್ರಸಾದ್‌ ಕಟ್ಟಪ್ಪಣೆ: ಚುನಾವಣೆ ಹೊತ್ತಿನಲ್ಲಿ ಕಾಂಗ್ರೆಸ್‌ಗೆ ಬೆಂಬಲ ಕೊಡುವ ವಿಚಾರದಲ್ಲಿ ಸದ್ಯಕ್ಕೆ ಗೌಪ್ಯತೆ ಕಾಪಾಡಿ. 15 ದಿನ ಸುಮ್ಮನ್ನಿರಿ, ಮತದಾನದ ಕೊನೆ ವಾರದಲ್ಲಿ ನನ್ನ ನಿರ್ಧಾರವನ್ನ ನಮ್ಮ ಅಭಿಮಾನಿಗಳಿಗೆ ಖಚಿತವಾಗಿ ಹೇಳುತ್ತೇನೆ ಎಂದು ಪ್ರಸಾದ್ ಗುಟ್ಟು ಬಿಟ್ಟು ಕೊಡದಂತೆ ಕಾಂಗ್ರೆಸ್ ನಾಯಕರಿಗೆ ಕಟ್ಟಪಣೆ ಮಾಡಿದ್ದಾರೆ. ಶ್ರೀನಿವಾಸ ಪ್ರಸಾದ್ ಮಾತು ಕೇಳಿ ಕಾಂಗ್ರೆಸ್ ನಾಯಕರು ಖುಷಿಯಾಗಿದ್ದಾರೆ. ಪ್ರಸಾದ್ ಜೊತೆ ನಡೆದ ಎಲ್ಲಾ ಮಾತುಕತೆಗಳನ್ನ ಸ್ಥಳೀಯ ನಾಯಕರು ಸಿಎಂ ಸಿದ್ದರಾಮಯ್ಯ ಅವರಿಗೆ ತಿಳಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

    ಆಫರ್‌ ನೀಡಿದ್ರಾ ಸಿಎಂ? ಮೈಸೂರು ಕ್ಷೇತ್ರದಲ್ಲಿ ತಾವೇ ಖುದ್ದು ಅಖಾಡಕ್ಕಿಳಿದಿದ್ದ ಸಿಎಂ ಕುಟುಂಬದವರೆಲ್ಲ ಪಕ್ಷ ಸೇರ್ಪಡೆಯಾಗಲಿ ಎಂದು ಆಹ್ವಾನ ನೀಡಿದರು. ಕುಟುಂಬದಲ್ಲಿ ಯಾರೆ ಸೇರ್ಪಡೆಯಾದರು ಎಲ್ಲರಿಗೂ ಪಕ್ಷದಲ್ಲಿ ಸ್ಥಾನಮಾನ ಕೊಡುವುದಾಗಿ ಭರವಸೆಯನ್ನೂ ನೀಡಿದ್ದರು. ಇದೀಗ ಧೀರಜ್ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಶೀಘ್ರದಲ್ಲೇ ಶ್ರೀನಿವಾಸ್ ಪ್ರಸಾದ್ ಸಹ ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ಎಂದು ಸಿಎಂ ಆಪ್ತ ಮೂಲಗಳು ತಿಳಿಸಿವೆ.

  • ಬಿಜೆಪಿ ನಡೆಗೆ ಬೇಸರ; ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಶ್ರೀನಿವಾಸ್‌ ಪ್ರಸಾದ್‌ ಬೆಂಬಲ?

    ಬಿಜೆಪಿ ನಡೆಗೆ ಬೇಸರ; ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಶ್ರೀನಿವಾಸ್‌ ಪ್ರಸಾದ್‌ ಬೆಂಬಲ?

    ಮೈಸೂರು: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಸಂಸದ ವಿ.ಶ್ರೀನಿವಾಸ್‌ ಪ್ರಸಾದ್‌ ಅವರನ್ನು ತನ್ನತ್ತ ಸೆಳೆಯುವ ಕಾಂಗ್ರೆಸ್‌ ತಂತ್ರ ಫಲಿಸಿದೆ ಎನ್ನಲಾಗುತ್ತಿದೆ.

    ಅಳಿಯನಿಗೆ ಲೋಕಸಭಾ ಚುನಾವಣೆಗೆ ಟಿಕೆಟ್‌ ಕೊಡಿಸುವ ಶ್ರೀನಿವಾಸ್‌ ಪ್ರಸಾದ್‌ ಪ್ರಯತ್ನ ವಿಫಲವಾಗಿದೆ. ಹೀಗಾಗಿ ಪಕ್ಷದ ನಡೆಗೆ ಪ್ರಸಾದ್‌ ಬೇಸರಗೊಂಡಿದ್ದಾರೆ. ಮೈಸೂರು, ಚಾಮರಾಜನಗರ ಕ್ಷೇತ್ರ ಗೆಲ್ಲಲು ಪ್ರಯತ್ನಿಸುತ್ತಿರುವ ಕಾಂಗ್ರೆಸ್‌, ಇದನ್ನೇ ಬಂಡವಾಳ ಮಾಡಿಕೊಳ್ಳಲು ಮುಂದಾಗಿದೆ.

    ಟಿಕೆಟ್‌ ನೀಡದಿದ್ದರೂ ಪರವಾಗಿಲ್ಲ. ಸೌಜನ್ಯಕ್ಕಾದರೂ ಬಿಜೆಪಿ ನಾಯಕರು ನನಗೆ ಕರೆ ಮಾಡಿ ಮಾತನಾಡಬೇಕಿತ್ತು ಎಂದು ಆಪ್ತರ ಬಳಿ ಪಕ್ಷದ ನಡೆಗೆ ಪ್ರಸಾದ್‌ ಅಸಮಾಧಾನ ಹೊರಹಾಕಿದ್ದಾರೆ. ಇದೇ ಬೇಸರದಲ್ಲಿರುವ ಅವರು ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಬೆಂಬಲಿಸಲು ನಿರ್ಧಾರಿಸಿದ್ದಾರೆ ಎನ್ನಲಾಗುತ್ತಿದೆ.

    ಚುನಾವಣೆ ಹೊತ್ತಿನಲ್ಲಿ ಕಾಂಗ್ರೆಸ್‌ಗೆ ಬೆಂಬಲ‌ ಕೊಡುವ ವಿಚಾರದಲ್ಲಿ ಸದ್ಯಕ್ಕೆ ಗೌಪ್ಯತೆ ಕಾಪಾಡಿ. 15 ದಿನ ಸುಮ್ಮನ್ನಿರಿ, ಮತದಾನದ ಕೊನೆ ವಾರದಲ್ಲಿ ನನ್ನ ನಿರ್ಧಾರವನ್ನ ನಮ್ಮ ಅಭಿಮಾನಿಗಳಿಗೆ ಖಚಿತವಾಗಿ ಹೇಳುತ್ತೇನೆ ಎಂದು ಪ್ರಸಾದ್‌ ಗುಟ್ಟು ಬಿಟ್ಟು ಕೊಡದಂತೆ ಕಾಂಗ್ರೆಸ್ ನಾಯಕರಿಗೆ ಕಟ್ಟಾಪಣೆ ಮಾಡಿದ್ದಾರೆ ಎಂದು ಹೇಳಲಾಗಿದೆ.

    ಶ್ರೀನಿವಾಸ ಪ್ರಸಾದ್‌ ಮಾತು ಕೇಳಿ ಕಾಂಗ್ರೆಸ್‌ ನಾಯಕರು ಖುಷಿಯಾಗಿದ್ದಾರೆ. ಪ್ರಸಾದ್‌ ಜೊತೆ ನಡೆದ ಎಲ್ಲಾ ಮಾತುಕತೆಗಳನ್ನ ಸ್ಥಳೀಯ ನಾಯಕರು ಸಿಎಂ ಸಿದ್ದರಾಮಯ್ಯ ಅವರಿಗೆ ತಿಳಿಸಿದ್ದಾರೆ.

    ಚಾಮರಾಜನಗರ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ತಮ್ಮ ಹೆಸರು ಘೋಷಣೆಯಾಗುತ್ತಿದ್ದಂತೆ ಸುನೀಲ್‌ ಬೋಸ್‌ ಅಲರ್ಟ್‌ ಆಗಿದ್ದಾರೆ. ಎಲ್ಲಾ ನಾಯಕರನ್ನು ಭೇಟಿಯಾಗಿ ಗೆಲುವಿಗೆ ಸಹಕಾರ ಕೋರುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಬಿಜೆಪಿ ಸಂಸದ ಶ್ರೀನಿವಾಸ್‌ ಪ್ರಸಾದ್‌ ಅವರನ್ನು ಭೇಟಿಯಾಗಿದ್ದು ಕುತೂಹಲ ಮೂಡಿಸಿತ್ತು. ಸಚಿವ ಹೆಚ್‌.ಸಿ.ಮಹದೇವಪ್ಪ, ಯತೀಂದ್ರ ಸಿದ್ದರಾಮಯ್ಯ ಕೂಡ ಪ್ರಸಾದ್‌ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದರು.

  • ರಾಜಕೀಯಕ್ಕೆ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಗುಡ್‌ ಬೈ

    ರಾಜಕೀಯಕ್ಕೆ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಗುಡ್‌ ಬೈ

    ಚಾಮರಾಜನಗರ: ಬಿಜೆಪಿ (BJP) ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ (V Srinivas Prasad) ರಾಜಕೀಯಕ್ಕೆ ಗುಡ್‌ ಬೈ ಹೇಳಿದರು.

    ಗುಂಡ್ಲುಪೇಟೆಯಲ್ಲಿ ನಡೆದ ಚುನಾವಣಾ (Election) ಪ್ರಚಾರದಲ್ಲಿ ಮಾತನಾಡಿದ ಅವರು, ಇದು ನನ್ನ ರಾಜಕೀಯ ಜೀವನದ ಕೊನೆ ಚುನಾವಣೆಯಾಗಿದೆ. ಮುಂದಿನ ವರ್ಷ ನಡೆಯುವ ಲೋಕಸಭಾ ಚುನಾವಣೆಗೆ ನಾನು ಸ್ಪರ್ಧೆ ಮಾಡಲ್ಲ. ನನಗೆ ರಾಜಕೀಯ ಸಾಕಾಗಿದೆ ಎಂದರು. ಇದನ್ನೂ ಓದಿ: ಬಿಜೆಪಿ 2 ನೇ ಪಟ್ಟಿ ರಿಲೀಸ್-‌ 23 ಅಭ್ಯರ್ಥಿಗಳ ಹೆಸರು ಬಿಡುಗಡೆ

    ನನಗೆ ನಿಂತುಕೊಂಡು‌ ಭಾಷಣ ಮಾಡಲು ಆಗುತ್ತಿಲ್ಲ. ಎಳ್ಳಷ್ಟು ಅಪಾದನೆಯಿಲ್ಲದೇ ರಾಜಕೀಯ ಜೀವನ ಸಾಗಿಸಿದ್ದೇನೆ. ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಅಷ್ಟೇ ಅಲ್ಲದೇ ಏಳು ಜನ ಪ್ರಧಾನಮಂತ್ರಿ ನೋಡಿದ್ದೇನೆ. ನನಗೆ ಇನ್ನು ರಾಜಕೀಯ ಸಾಕು‌ ಎಂದು ಹೇಳಿದರು. ಇದನ್ನೂ ಓದಿ: ಹಾವೇರಿಯಲ್ಲಿ ಎಷ್ಟು ಸೀಟು ಗೆಲ್ಲಿಸ್ತಾನೋ ನೋಡೋಣ: ಸೇಡಿನ ರಾಜಕಾರಣಿ – ಸಿಎಂ ವಿರುದ್ಧ ನೆಹರೂ ಓಲೇಕಾರ್ ಕಿಡಿ

  • ಸಿದ್ದರಾಮಯ್ಯ, ಹೆಚ್‍ಡಿಡಿ ಇಬ್ಬರು ಬೆನ್ನಿಗೆ ಚೂರಿ ಹಾಕುವವರೇ: ವಿ.ಶ್ರೀನಿವಾಸ್ ಪ್ರಸಾದ್

    ಸಿದ್ದರಾಮಯ್ಯ, ಹೆಚ್‍ಡಿಡಿ ಇಬ್ಬರು ಬೆನ್ನಿಗೆ ಚೂರಿ ಹಾಕುವವರೇ: ವಿ.ಶ್ರೀನಿವಾಸ್ ಪ್ರಸಾದ್

    – ಸಿದ್ದರಾಮಯ್ಯ ಬೆನ್ನಿಗೆ ಚೂರಿ ಹಾಕಿಯೇ ಮೇಲೆ ಬಂದಿದ್ದು

    ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಮಾಜಿ ಪ್ರಧಾನಿ ದೇವೇಗೌಡ ಇಬ್ಬರು ಬೆನ್ನಿಗೆ ಚೂರಿ ಹಾಕುವವರೇ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ವಾಗ್ದಾಳಿ ಮಾಡಿದ್ದಾರೆ.

    ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಬೆನ್ನಿಗೆ ಚೂರಿ ಹಾಕಿಯೇ ಮೇಲೆ ಬಂದಿದ್ದು. ದೇವೇಗೌಡರು ಸಹ ಬೆನ್ನಿಗೆ ಚೂರಿ ಹಾಕಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಬಾಯಿಗೆ ಬಂದಂತೆ ಅಪ್ಪನಾಣೆ ಇಟ್ಟುಕೊಂಡು ಮಾತನಾಡಿದರು. ಆದರೆ ಲೋಕಸಭೆಯಲ್ಲಿ ಭಾಯಿ, ಭಾಯಿ ಎಂದು ಅಕ್ಕಪಕ್ಕದಲ್ಲಿ ಕುಳಿತುಕೊಂಡರು ಎಂದು ವ್ಯಂಗ್ಯವಾಡಿದರು.

    ಕಳೆದ ಮೂರು ದಿನದಿಂದ ಒಬ್ಬರ ಮೇಲೋಬ್ಬರು ಆರೋಪ ಪ್ರತ್ಯಾರೋಪ ಮಾಡುತ್ತಿದ್ದಾರೆ. ಜನ ಎಲ್ಲವನ್ನು ನೋಡುತ್ತಿದ್ದಾರೆ. ಇವರನ್ನು ನೋಡಿ ಜನ ಅಸಹ್ಯ ಪಡುತ್ತಿದ್ದಾರೆ. ವಿರೋಧ ಪಕ್ಷದಲ್ಲಿದ್ದೀರಾ. ಈಗಲಾದರೂ ಗಂಭೀರವಾಗಿ ಇರುವುದನ್ನು ಕಲಿಯಿರಿ ಎಂದು ದೇವೇಗೌಡರು ಹಾಗೂ ಸಿದ್ದರಾಮಯ್ಯಗೆ ಹೆಸರನ್ನು ಹೇಳಿ ವಿ.ಶ್ರೀನಿವಾಸ್ ಪ್ರಸಾದ್ ಸಲಹೆ ನೀಡಿದರು.

    ಮಾನಸಿಕವಾಗಿ ಅವರು ಮೈತ್ರಿಯಾಗಿರಲಿಲ್ಲ. ದೈಹಿಕವಾಗಿ ಬಂದು ಒಟ್ಟಿಗೆ ಕುಳಿತುಕೊಳ್ಳುತ್ತಿದ್ದರು. ಸದನದಲ್ಲಿ ಪಾಯಿಂಟ್ ಆಫ್ ಆರ್ಡರ್ ಎತ್ತಿ ಆಗಿನ ಸಿಎಂ ಕುಮಾರಸ್ವಾಮಿಯನ್ನು ಸಮರ್ಥಿಸಿಕೊಂಡಿದ್ದು ಸಿದ್ದರಾಮಯ್ಯನೇ ಅಲ್ವಾ. ಈಗ ಏಕೆ ಅವರ ವಿರುದ್ಧ ಮಾತನಾಡುತ್ತಿದ್ದಾರೆ. ಇವರ ಹೇಳಿಕೆಗಳನ್ನು ನೋಡುತ್ತಿದ್ದರೆ ಜನರಿಗೆ ಅಸಹ್ಯವಾಗುತ್ತದೆ ಎಂದು ಕಿಡಿಕಾರಿದರು.