Tag: Vacation

  • ಬೇಸಿಗೆಯಲ್ಲಿ ಪ್ರವಾಸ ಮಾಡುವವರು ಅನುಸರಿಸಬೇಕಾದ ಸಲಹೆಗಳು

    ಬೇಸಿಗೆಯಲ್ಲಿ ಪ್ರವಾಸ ಮಾಡುವವರು ಅನುಸರಿಸಬೇಕಾದ ಸಲಹೆಗಳು

    ಬೇಸಿಗೆ ರಜೆ ಬಂತೆಂದರೆ ಸಾಕು, ಪೋಷಕರು ತಮ್ಮ ಮಕ್ಕಳು, ಕುಟುಂಬದೊಂದಿಗೆ ಪ್ರವಾಸ ಕೈಗೊಂಡು ಎಂಜಾಯ್ ಮಾಡುತ್ತಾರೆ. ಆದರೆ ಈ ಬಾರಿ ಬಿಸಿಲಿನ ತಾಪಮಾನ ಹೆಚ್ಚಾಗಿರುವುದರಿಂದ ಮನೆಯಿಂದ ಹೊರಹೋಗುವುದು ಸ್ವಲ್ಪ ಕಷ್ಟಕರವಾಗಿದೆ. ಅದರಲ್ಲೂ ಬಿಸಿಲಿನ ತಾಪದಿಂದ ಮಕ್ಕಳು ಮಾತ್ರವಲ್ಲದೇ ದೊಡ್ಡವರೂ ಸಹ ಅನಾರೋಗ್ಯಕ್ಕೆ ತುತ್ತಾಗುವ ಸಾಧ್ಯತೆ ಇದೆ. ಕೆಲವೊಂದು ಟಿಪ್ಸ್ ಅನುಸರಿಸುವುದರಿಂದ ನಿಮ್ಮ ಟ್ರಿಪ್ ಅನ್ನು ಆನಂದಿಂದ ಅನುಭವಿಸುವುದರ ಜೊತೆಗೆ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಹಾಗಿದ್ರೆ ಬೇಸಿಗೆಯಲ್ಲಿ ಹೊರಹೋಗುವವರು ಅನುಸರಿಸಬೇಕಾದ ಸಲಹೆಗಳು ಯಾವುವು? ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳಬಹುದು ಎಂಬ ಬಗ್ಗೆ ಇಲ್ಲಿ ವಿವರಿಸಲಾಗಿದೆ.

    ಹೋಗಬೇಕಾದ ಸ್ಥಳಗಳ ಬಗ್ಗೆ ತಿಳಿದುಕೊಳ್ಳಿ:
    ಪ್ರವಾಸ ಹೋಗುವುದಕ್ಕೂ ಮೊದಲು ನೀವು ಹೋಗಾಬೇಕಾದ ಸ್ಥಳದ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡರೆ ಉತ್ತಮ. ಅಲ್ಲಿನ ವಾತಾವರಣ ಹೇಗಿದೆ? ಯಾವ ಸಮಯದಲ್ಲಿ ಹೋದರೆ ಉತ್ತಮ ಎಂಬುದರ ಬಗ್ಗೆ ಮೊದಲು ಅರಿತುಕೊಳ್ಳಿ. ಎಲ್ಲಾ ಸ್ಥಳದಲ್ಲೂ ಬಿಸಿಲು ಒಂದೇ ರೀತಿಯಾಗಿ ಇರುವುದಿಲ್ಲ. ಆದ್ದರಿಂದ ನೀವು ಹೋಗಬೇಕೆಂದಿರುವ ಸ್ಥಳದಲ್ಲಿ ಬಿಸಿಲು ಯಾವ ರೀತಿಯಾಗಿದೆ ಎಂಬುದರ ಬಗ್ಗೆ ಮಾಹಿತಿ ಪಡೆದು ಬಿಸಿಲು ಕಡಿಮೆ ಇರುವ ಜಾಗವನ್ನು ಆಯ್ದುಕೊಂಡರೆ ನಿಮ್ಮ ಪ್ರವಾಸವನ್ನು ಆನಂದಿಸಬಹುದು.

    ಬಿರುಬಿಸಿಲಿನಲ್ಲಿ ಸುತ್ತಾಟ ಒಳ್ಳೆಯದಲ್ಲ:
    ಬಿರುಬಿಸಿಲು ಅಂದರೆ ಬಿಸಿಲು ಹೆಚ್ಚಾಗಿರುವ ಸಮಯದಲ್ಲಿ ಸುತ್ತಾಟ ನಿಮಗೆ ಮತ್ತು ನಿಮ್ಮ ಮನಸ್ಸಿಗೆ ಮುದ ನೀಡುವುದಿಲ್ಲ. ಆದ್ದರಿಂದ ಆದಷ್ಟು ಬೆಳಗ್ಗೆ 11 ಗಂಟೆಯ ಒಳಗೆ ಹಾಗೂ ಸಂಜೆ 5 ಗಂಟೆಯ ಮೇಲೆ ಹೊರಹೋಗುವುದು ಒಳ್ಳೆಯದು. ಆದಷ್ಟು ಮಧ್ಯಾಹ್ನ 12-4 ಗಂಟೆಯವರೆಗಿನ ಬಿಸಿಲಿನಲ್ಲಿ ಒಡಾಡುವುದನ್ನು ಕಡಿಮೆ ಮಾಡಿ. ಇದರಿಂದ ನಿಮ್ಮ ದೇಹದಲ್ಲಿ ಚೈತನ್ಯ ಹಾಗೇ ಇರುತ್ತದೆ ಮತ್ತು ನಿಮ್ಮ ಪ್ರವಾಸವನ್ನು ಎಂಜಾಯ್‌ ಮಾಡಬಹುದಾಗಿದೆ.

    ಹೆಚ್ಚಿನ ನೀರು ಸೇವನೆ:
    ಬೇಸಿಗೆಯಲ್ಲಿ ಹೆಚ್ಚಿನ ನೀರು ಸೇವಿಸುವುದರಿಂದ ನಮ್ಮ ದೇಹದಲ್ಲಿ ನಿರ್ಜಲೀಕರಣ ಆಗುವುದನ್ನು ತಡೆಯಬಹುದು. ಪ್ರವಾಸದ ಸಂದರ್ಭದಲ್ಲಿ ಹೆಚ್ಚಿನ ನೀರನ್ನು ಸೇವಿಸುವುದರ ಜೊತೆಗೆ ತಂಪು ಪಾನೀಯಗಳು, ಎಳನೀರು, ಫ್ರೆಶ್‌ ಜ್ಯೂಸ್‌ ಸೇವಿಸಿ. ಇದರಿಂದ ದಣಿವಾರುವುದಲ್ಲದೇ ದೇಹದಲ್ಲಿನ ಶಕ್ತಿ ಹೆಚ್ಚಿಸಲು ಸಹಾಯವಾಗುತ್ತದೆ. ಅಲ್ಲದೇ ಶುದ್ಧವಾದ ನೀರನ್ನೇ ಸೇವಿಸಿ.

    ಬೀದಿಬದಿ ಆಹಾರ ಸೇವನೆಯನ್ನು ಕಡಿಮೆ ಮಾಡಿ:
    ಪ್ರವಾಸದ ಸಮಯದಲ್ಲಿ ಎಲ್ಲೆಂದರಲ್ಲಿ ತಿನ್ನುವುದರಿಂದ ಆರೋಗ್ಯ ಹದಗೆಡಬಹುದು. ಆದ್ದರಿಂದ ಬೀದಿಬದಿ ತಿನ್ನುವುದನ್ನು ಆದಷ್ಟು ಕಡಿಮೆ ಮಾಡಿ ಶುಚಿತ್ವದ ಕಡೆ ಗಮನಹರಿಸಿ. ಧೂಳು, ಮಾಲಿನ್ಯ ಇರುವ ಕಡೆ ಆಹಾರ ಸೇವನೆ ಒಳ್ಳೆಯದಲ್ಲ. ಇದರಿಂದ ನಿಮ್ಮ ಹಾಗೂ ನಿಮ್ಮ ಮಕ್ಕಳು ಅನಾರೋಗ್ಯಕ್ಕೆ ತುತ್ತಾಗುವ ಸಾಧ್ಯತೆ ಇದೆ. 

    ಎಮರ್ಜೆನ್ಸಿ ಕಿಟ್‌ ನಿಮ್ಮ ಬಳಿ ಇರಲಿ:
    ಪ್ರವಾಸ ತೆರಳುವುದಕ್ಕೂ ಮೊದಲು ನಿಮ್ಮ ಬ್ಯಾಗ್‌ನಲ್ಲಿ ಎಮರ್ಜೆನ್ಸಿ ಕಿಟ್‌ ಇಟ್ಟುಕೊಳ್ಳಲೇಬೇಕು. ಪ್ರವಾಸ ತೆರಳಿದ ಸಂದರ್ಭ ನಿಮಗೆ ಮತ್ತು ನಿಮ್ಮ ಮಕ್ಕಳಿಗೆ  ಅನಾರೋಗ್ಯ ಉಂಟಾದರೆ ಅದಕ್ಕೆ ಬೇಕಾದ ಸಿದ್ಧತೆಗಳನ್ನು ಮೊದಲೇ ಮಾಡಿಕೊಳ್ಳಿ. ಗ್ಲುಕೋಸ್‌, ಒಆರ್‌ಎಸ್‌, ಪ್ಲಾಸ್ಟರ್‌, ನೋವಿನ ಔಷಧಿಗಳು ಸೇರಿದಂತೆ ಅಗತ್ಯ ವಸ್ತುಗಳು ನಿಮ್ಮ ಬ್ಯಾಗ್‌ನಲ್ಲಿರಲಿ.

    ಸನ್‌ಸ್ಕ್ರೀನ್‌ ಬಳಸಿ:
    ಬಿಸಿಲಿಗೆ ಹೋಗುವ ಮೊದಲು ಸನ್‌ಸ್ಕ್ರೀನ್‌ ಹಾಗೂ ಬಾಡಿ ಲೋಶನ್ ಬಳಸುವುದು ಅತಿ ಅಗತ್ಯ. ಇದನ್ನು ಬಳಸುವ ಮೊದಲು ವೈದ್ಯರ ಬಳಿ ನಿಮ್ಮ ದೇಹಕ್ಕೆ ಯಾವರೀತಿಯ ಸನ್‌ಸ್ಕ್ರೀನ್‌ ಹೊಂದಿಕೊಳುತ್ತದೆ ಎಂಬುದನ್ನು ಪರಿಶೀಲಿಸಿ ಅವರ ಸಲಹೆಯ ಮೇರೆಗೆ ಸನ್‌ಸ್ಕ್ರೀನ್‌ಗಳನ್ನು ಬಳಸಿ. ಅಂತೆಯೇ ನಿಮ್ಮ ಮಕ್ಕಳಿಗೂ ವೈದ್ಯರ ಸಲಹೆಯಂತೆ ಸನ್‌ಸ್ಕ್ರೀನ್‌ ಕ್ರೀಮ್‌ಗಳನ್ನು ಹಚ್ಚಿ. ಇದರಿಂದ ನಿಮ್ಮ ತ್ವಚೆಯನ್ನು ಬಿಸಿಲಿನಿಂದ ಕಾಪಾಡಿಕೊಳ್ಳಬಹುದು. ಸನ್‌ಸ್ಕ್ರೀನ್‌ ಹಾಗೂ ಬಾಡಿ ಲೋಶನ್‌ಗಳನ್ನು ಬಳಸುವುದರಿಂದ ಚರ್ಮ ಒಣಗುವುದು, ಬಿರುಕು ಬಿಡುವುದನ್ನು ತಡೆಯಬಹುದು.  ‌

    ಬಿಸಿಲಿನಿಂದ ರಕ್ಷಣೆ ಪಡೆಯಲು ಇವುಗಳನ್ನು ಬಳಸಿ:
    ಬೇಸಿಗೆಯಲ್ಲಿ ಬಿಸಿಲು ಹೆಚ್ಚಾಗಿ ಇರುವುದರಿಂದ ಬಿಸಿಲಿನಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಬೇಕು. ಛತ್ರಿ, ಟೋಪಿ, ಸನ್‌ಗ್ಲಾಸ್‌ ಮುಂತಾದ ವಸ್ತುಗಳನ್ನು ಬಳಸುವುದರಿಂದ ಬಿಸಿಲಿನಿಂದ ನಿಮ್ಮ ದೇಹವನ್ನು ಹಾಗೂ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ನೆತ್ತಿ ಸುಡುವ ಬಿಸಿಲು ತಲೆನೋವು ಸೇರಿದಂತೆ ಇನ್ನಿತರ ಸಮಸ್ಯೆಗಳನ್ನು ಉಂಟು ಮಾಡಬಹುದು. ಜೊತೆಗೆ ಸೂರ್ಯನ ಕಿರಣಗಳಿಂದ ಕಣ್ಣುಗಳಿಗೂ ಹಾನಿಯಾಗಬಹುದು. ಆದ್ದರಿಂದ ಛತ್ರಿ, ಟೋಪಿಯಂತಹ ವಸ್ತುಗಳನ್ನು ಬಳಸಿ ನೆರಳನ್ನು ಪಡೆದುಕೊಳ್ಳಿ.

    ಯಾವ ರೀತಿಯ ಬಟ್ಟೆ ಧರಿಸಿದರೆ ಉತ್ತಮ?
    ಬೇಸಿಗೆಯಲ್ಲಿ ಆದಷ್ಟು ತಿಳಿಬಣ್ಣದ ಬಟ್ಟೆ ಧರಿಸಿದರೆ ಉತ್ತಮ. ಕಪ್ಪು ಬಣ್ಣದ ಬಟ್ಟೆಯನ್ನು ಆದಷ್ಟು ದೂರವಿರಿಸಿ. ಅದರಲ್ಲೂ ತೆಳ್ಳನೆಯ ಹತ್ತಿ ಬಟ್ಟೆಗೆ ಆದ್ಯತೆ ನೀಡಿ. ತುಂಬು ತೋಳಿನ, ಪಾದದವರೆಗೆ ಮುಚ್ಚಿರುವ ಬಟ್ಟೆ ಧರಿಸಿ. ಇದರಿಂದ ಚರ್ಮ ಟ್ಯಾನ್‌ ಆಗುವುದನ್ನು ತಡೆಯಬಹುದು.

  • ತಮಿಳುನಾಡಿನಲ್ಲಿ ವರುಣನ ಅಬ್ಬರ – ಶಾಲಾ ಕಾಲೇಜುಗಳಿಗೆ ರಜೆ

    ತಮಿಳುನಾಡಿನಲ್ಲಿ ವರುಣನ ಅಬ್ಬರ – ಶಾಲಾ ಕಾಲೇಜುಗಳಿಗೆ ರಜೆ

    ಚೆನ್ನೈ: ದಕ್ಷಿಣ ಭಾರತದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರಿಂದ ಸಾಕಷ್ಟು ಹಾನಿಯುಂಟಾಗುತ್ತಿದೆ. ಈ ಹಿನ್ನೆಲೆ ತಮಿಳುನಾಡು ಮತ್ತು ಪುದುಚೇರಿ ಸರ್ಕಾರಗಳು ತಮಿಳುನಾಡು (Tamil Nadu) ಮತ್ತು ಪುದುಚೇರಿಯ (Puducherry) ಹಲವಾರು ಜಿಲ್ಲೆಗಳಲ್ಲಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿವೆ.

    ಶುಕ್ರವಾರ ತಮಿಳುನಾಡಿನ ಚೆನ್ನೈ, ತಿರುವಳ್ಳೂರು, ಕಲ್ಲಕುರಿಚಿ, ಸೇಲಂ, ವೆಲ್ಲೂರು, ತಿರುಪತ್ತೂರು, ರಾಣಿಪೇಟ್, ತಿರುವಣ್ಣಾಮಲೈ ಮತ್ತು ಪುದುಚೇರಿ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (Indian Metrological Department) ರೆಡ್ ಅಲರ್ಟ್ ಘೋಷಿಸಿದೆ. ಇದನ್ನೂ ಓದಿ: ಬೆಂಗ್ಳೂರಿಗೆ ಮೋದಿ ಆಗಮನ – BMTC, KSRTC ಬಸ್ ಸಂಚಾರ 2 ಗಂಟೆ ಸ್ಥಗಿತ

    weather

    ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ತಮಿಳುನಾಡಿನ ಚೆನ್ನೈ, ಕಾಂಚೀಪುರಂ, ತಿರುವಳ್ಳೂರು, ಚೆಂಗಲ್ಪಟ್ಟು, ರಾಣಿಪೇಟ್, ವೆಲ್ಲೂರು, ಕಡಲೂರು, ಮೈಲಾಡುತುರೈ, ತಿರುವಾರೂರ್, ನಾಗಪಟ್ಟಿಣಂ, ತಂಜಾವೂರು, ವಿಲ್ಲುಪುರಂ ಮತ್ತು ಅರಿಯಲೂರು ಜಿಲ್ಲೆಗಳಲ್ಲಿನ ಶಾಲಾ-ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಲಾಗಿದೆ. ಇದನ್ನೂ ಓದಿ: ಭಯಂಕರವಾಗಿ ಆಡಿದ್ರೂ ಭಾರತ ಸೋಲೋದಕ್ಕೆ ಅರ್ಹವಾಗಿತ್ತು- ಅಖ್ತರ್ ಟೀಕೆ

    ರಾಣಿಪ್ಪೆಟ್ಟೈ ತಿರುವಣ್ಣಾಮಲೈ, ತಿರುವಳ್ಳೂರು, ಚೆನ್ನೈ, ಕಾಂಚೀಪುರಂ, ಚೆಂಗಲ್‍ಪಟ್ಟು, ವಿಲ್ಲುಪುರಂ, ಕಲ್ಲಕ್ಕುರಿಚಿ, ಕಡಲೂರು, ಅರಿಯಲೂರ್, ಪೆರಂಬಲೂರ್, ತಂಜಾವೂರು, ಮೈಲಾಡು, ತಿರುವರುರೈ, ತಿರುವರುರೈ, ರಾಣಿಪ್ಪೆಟ್ಟೈ ತಿರುವಣ್ಣಾಮಲೈನಲ್ಲಿ ಭಾಗಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಮಾಪನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

    Live Tv
    [brid partner=56869869 player=32851 video=960834 autoplay=true]

  • ವರುಣನ ಅಬ್ಬರ – ದಕ್ಷಿಣ ಕನ್ನಡ, ಮೈಸೂರು, ಶಿವಮೊಗ್ಗದಲ್ಲಿ ಶಾಲೆಗಳಿಗೆ ರಜೆ

    ವರುಣನ ಅಬ್ಬರ – ದಕ್ಷಿಣ ಕನ್ನಡ, ಮೈಸೂರು, ಶಿವಮೊಗ್ಗದಲ್ಲಿ ಶಾಲೆಗಳಿಗೆ ರಜೆ

    ಬೆಂಗಳೂರು: ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಯಾದ್ಯಂತ ಇಂದು (ಮೇ 19) ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

    ರಾಜ್ಯದ ಕರಾವಳಿ ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ಇಂದು ಒಂದು ದಿನ ರಜೆ ನೀಡುವುದಾಗಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಜನಸಾಮಾನ್ಯರಿಗೆ ಮತ್ತೆ ಬೆಲೆ ಏರಿಕೆ ಶಾಕ್ – 1,000 ರೂ. ದಾಟಿದ LPG ಸಿಲಿಂಡರ್ ದರ

    ಮೈಸೂರು ಜಿಲ್ಲೆಯಲ್ಲಿ ಮಳೆಯ ಆರ್ಭಟ ಹಿನ್ನೆಲೆ 1ರಿಂದ 10ನೇ ತರಗತಿಯವರಗೆ ಇಂದು ಒಂದು ದಿನದ ಮಟ್ಟಿಗೆ ಷರತ್ತು ಬದ್ಧ ರಜೆಯನ್ನು ಮೈಸೂರಿನ ಡಿಡಿಪಿಐ ರಾಮಚಂದ್ರರಾಜೇ ಅರಸ್ ಅವರು ಘೋಷಿಸಿದ್ದಾರೆ. ಆದರೆ ಮುಂದಿನ ರಜಾದಿನಗಳಲ್ಲಿ ಒಂದು ದಿನ ಕಾರ್ಯ ನಿರ್ವಹಿಸಲು ಸೂಚಸಿದ್ದಾರೆ. ಇದನ್ನೂ ಓದಿ: ಅಸ್ಸಾಂನಲ್ಲಿ ಭೀಕರ ಪ್ರವಾಹ – 9 ಮಂದಿ ಸಾವು, ಸಂಕಷ್ಟದಲ್ಲಿ ಲಕ್ಷಾಂತರ ಜನ

    ಶಿವಮೊಗ್ಗದಲ್ಲೂ ವರುಣನ ಅಬ್ಬರ ಜೋರಾಗಿದ್ದು, ತಡರಾತ್ರಿಯಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಹೊಸನಗರ ತಾಲೂಕಿನಲ್ಲಿ ಅತಿಹೆಚ್ಚು ಮಳೆಯಾಗುತ್ತಿದ್ದು, ಇನ್ನೆರಡು ದಿನಗಳ ಕಾಲ ಹೀಗೆ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಈ ಹಿನ್ನೆಲೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಜಿಲ್ಲೆಯಾದ್ಯಂತ ಶಾಲೆಗಳಿಗೆ ಇಂದು ರಜೆ ಘೋಷಿಸಿದ್ದಾರೆ.

  • ಹಾಸನ ಜಿಲ್ಲೆಯಲ್ಲಿ ಇಂದು 1 ರಿಂದ 10ನೇ ತರಗತಿವರೆಗೆ ರಜೆ ಘೋಷಣೆ

    ಹಾಸನ ಜಿಲ್ಲೆಯಲ್ಲಿ ಇಂದು 1 ರಿಂದ 10ನೇ ತರಗತಿವರೆಗೆ ರಜೆ ಘೋಷಣೆ

    ಹಾಸನ: ರಾತ್ರಿಯಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಒಂದರಿಂದ ಹತ್ತನೇ ತರಗತಿವರೆಗೆ ಹಾಸನ ಜಿಲ್ಲೆಯಾದ್ಯಂತ ರಜೆ ಘೋಷಣೆ ಮಾಡಲಾಗಿದೆ.

    ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಹಾಸನ ಡಿಡಿಪಿಐ ಪ್ರಕಾಶ್ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಬೇಸಿಗೆ ರಜೆ ಮುಗಿದು ಎರಡು ದಿನಗಳ ಹಿಂದೆಯಷ್ಟೇ ಶಾಲೆಗಳು ಆರಂಭವಾಗಿದ್ದವು. ಆದರೆ ಮಂಗಳವಾರ ರಾತ್ರಿಯಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಮಕ್ಕಳು ಶಾಲೆಗಳಿಗೆ ಬರಲು ಸಮಸ್ಯೆಯಾಗುತ್ತೆ. ಈ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ಆಸ್ಪತ್ರೆಗೆ ಹೊರಟ ಆಂಬ್ಯುಲೆನ್ಸ್ ಅಡ್ಡಗಟ್ಟಿದ ಗಜರಾಜ

    ಈ ದಿನದ ನಷ್ಟವನ್ನು ಬೇರೆ ರಜಾ ದಿನಗಳಲ್ಲಿ ತರಗತಿ ನಡೆಸುವ ಮೂಲಕ ಸರಿದೂಗಿಸಿಕೊಳ್ಳಲು ಸೂಚನೆ ನೀಡಲಾಗಿದೆ. ಹಾಸನ ಜಿಲ್ಲೆಯಾದ್ಯಂತ ನಿರಂತರ ಜೋರು ಮಳೆಯಾಗುತ್ತಿರುವುದರಿಂದ ಜನಜೀವನ ಅಸ್ತವ್ಯಸ್ತವಾಗಿದೆ. ವಾಹನ ಸವಾರರು ಪರದಾಡುವಂತಾಗಿದೆ.

  • ಅಪ್ರಾಪ್ತ ಬಾಲಕಿ ಮೇಲೆ ಮಲತಂದೆಯಿಂದಲೇ ಅತ್ಯಾಚಾರ

    ಅಪ್ರಾಪ್ತ ಬಾಲಕಿ ಮೇಲೆ ಮಲತಂದೆಯಿಂದಲೇ ಅತ್ಯಾಚಾರ

    ನವದೆಹಲಿ: ಅಪ್ರಾಪ್ತ ಬಾಲಕಿ ಮೇಲೆ ಮಲತಂದೆಯೇ ಅತ್ಯಾಚಾರವೆಸಗಿರುವ ಪ್ರಕರಣ ದೆಹಲಿಯಲ್ಲಿ ಬೆಳಕಿಗೆ ಬಂದಿದೆ.

    ಈ ಪ್ರಕರಣ ಸಂಬಂಧಿಸಿದಂತೆ ಶನಿವಾರ ದೂರು ದಾಖಲಿಸಲಾಗಿದ್ದು, ದೂರಿನಲ್ಲಿ ಬಾಲಕಿ ಉತ್ತರಾಖಂಡದ ಡೆಹ್ರಾಡೂನ್‍ನಲ್ಲಿ ಬಡಮಕ್ಕಳಿಗಾಗಿಯೇ ಇರುವ ಸಂಸ್ಥೆಯೊಂದರಲ್ಲಿ ಉಳಿದುಕೊಂಡಿದ್ದಳು. ಆದರೆ ರಜೆಗೆಂದು ದೆಹಲಿಗೆ ಬಂದಿದ್ದಳು ಎಂದು ತಿಳಿಸಲಾಗಿದೆ. ದನ್ನೂ ಓದಿ: #MeToo ಪ್ರಕರಣ – ಧರ್ಮೋ ರಕ್ಷತಿ ರಕ್ಷಿತಃ ಎಂದ ಧ್ರುವ, ಜಂಟಲ್ ಮ್ಯಾನ್ ಅಂದ ಮೇಘನಾ

    ಬಾಲಕಿಯ ತಾಯಿ ಮತ್ತು ಮಲತಂದೆ ಚಿರಾಗ್ ದೆಹಲಿಯ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಈ ವೇಳೆ ರಜೆಗೆಂದು ಬಂದಿದ್ದ ಬಾಲಕಿ ಮೇಲೆ ಮಲತಂದೆ ನಿರಂತರ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿರುವುದಾಗಿ ಉಪ ಪೊಲೀಸ್ ಆಯುಕ್ತ(ದಕ್ಷಿಣ)ಬೆನಿಟಾ ಮೇರಿ ಜೈಕರ್ ತಿಳಿಸಿದ್ದಾರೆ. ದನ್ನೂ ಓದಿ: ನಾಳೆಯಿಂದ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ಅನುಮತಿ- ವೀಕ್‍ಡೇಸ್‍ನಲ್ಲಿ ಅವಕಾಶ, ವೀಕೆಂಡ್‍ನಲ್ಲಿ ನಿರ್ಬಂಧ

    ಇದೀಗ ಮಲತಂದೆಯ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಡಿಸಿಪಿ ಹೇಳಿದ್ದಾರೆ.

  • ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ ಸುಳ್ಳು: ಸುರೇಶ್ ಕುಮಾರ್

    ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ ಸುಳ್ಳು: ಸುರೇಶ್ ಕುಮಾರ್

    ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿನ ಶಾಲೆಗಳಲ್ಲಿ ಕಲಿಯುತ್ತಿರುವ ಒಂದರಿಂದ ಆರನೇ ತರಗತಿ ವಿದ್ಯಾರ್ಥಿಗಳಿಗೆ ಇಂದಿನಿಂದ ಬೇಸಿಗೆ ರಜೆ ಘೋಷಣೆ, ಪರೀಕ್ಷೆ ಇಲ್ಲದೇ ಮುಂದಿನ ತರಗತಿಗೆ ಪಾಸ್ ಎಂಬ ಸುದ್ದಿ ಹರಿದಾಡುತ್ತಿದ್ದು, ಇದು ಸತ್ಯಕ್ಕೆ ದೂರವಾದ ಸಂಗತಿ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

    ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳ ಪರ್ಯಾಯ ಕಲಿಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಬಗ್ಗೆ ಮುಕ್ತ ನಿಲುವನ್ನು ಹೊಂದಿದೆ. ಖಾಸಗಿ ಶಾಲೆಗಳು ಆನ್‍ಲೈನ್ ಮೂಲಕ ಕಲಿಕೆಗೆ ಮುಂದಾಗಿವೆ. ಒಂದರಿಂದ ಐದನೇ ತರಗತಿ ಸರ್ಕಾರಿ ಶಾಲಾ ಮಕ್ಕಳಿಗೆ ಆಕಾಶವಾಣಿಯಲ್ಲಿ ಕಲಿಯೋಣ- ನಲಿಯೋಣ ಕಾರ್ಯಕ್ರಮ ಬಿತ್ತರ ಮಾಡಲಾಗುತ್ತಿದೆ. ದೂರದರ್ಶನದಲ್ಲಿ ಸಂವೇದಾ ಕಾರ್ಯಕ್ರಮ ಪ್ರಸಾರಗೊಂಡಿದೆ ಎಂದರು.

    ಶಿಕ್ಷಕರು ವಿದ್ಯಾರ್ಥಿಗಳ ಕಲಿಕೆಯ ಪ್ರಗತಿಯನ್ನು ತಮ್ಮದೇ ಸ್ಥಳೀಯ ಸಂಪನ್ಮೂಲಗಳ ನೆರವಿನಲ್ಲಿ ಪರಾಮರ್ಶೆ ಮಾಡುತ್ತಿದ್ದಾರೆ. ಇದು ರಾಜ್ಯಾದ್ಯಂತ ಜಾರಿಯಲ್ಲಿದ್ದು, ಈ ಹಂತದಲ್ಲಿ ಬೇಸಿಗೆ ರಜೆಯನ್ನು ಘೋಷಿಸುವ ಪ್ರಸ್ತಾಪ ಇಲಾಖೆಯ ಮುಂದಿಲ್ಲ. ಇಂತಹ ಸುಳ್ಳು ಸುದ್ದಿಗಳನ್ನು ಹರಡುವ ಮೂಲಕ ಜನರ ದಾರಿ ತಪ್ಪಿಸುವ ಕೆಲಸ ಮಾಡಬಾರದು ಎಂದು ಅವರು ಮನವಿ ಮಾಡಿದ್ದಾರೆ.

  • 4 ದಿನ ರಜೆ – ಬ್ಯಾಂಕ್ ಕೆಲಸ ಇಂದೇ ಮುಗಿಸಿಕೊಳ್ಳಿ

    4 ದಿನ ರಜೆ – ಬ್ಯಾಂಕ್ ಕೆಲಸ ಇಂದೇ ಮುಗಿಸಿಕೊಳ್ಳಿ

    ನವದೆಹಲಿ: ಸಾರ್ವಜನಿಕ ವಲಯದ ಬ್ಯಾಂಕ್‍ಗಳ ಖಾಸಗೀಕರಣ ವಿರೋಧಿಸಿ ಯುನೈಟೆಡ್ ಫೆÇೀರಂ ಆಫ್ ಬ್ಯಾಂಕ್ ಯೂನಿಯನ್ಸ್(ಯುಎಫ್‍ಬಿಯು) ಮಾರ್ಚ್ 15 ಮತ್ತು 16ರಂದು ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ಹೀಗಾಗಿ ಬ್ಯಾಂಕ್‍ಗಳಿಗೆ ನಾಲ್ಕು ದಿನ ರಜೆ ಇರಲಿದೆ.

    ಬ್ಯಾಂಕಿಂಗ್ ಕೆಲಸ ಕಾರ್ಯಗಳನ್ನು ಮುಗಿಸಿಕೊಳ್ಳುವುದಕ್ಕೆ ಗ್ರಾಹಕರಿಗೆ ಉಳಿದಿರುವುದು ಇಂದು ಒಂದು ಮಾತ್ರ. ಶುಕ್ರವಾರ ಕೈ ತಪ್ಪಿದರೆ ಇನ್ನೂ ನಾಲ್ಕು ದಿನಗಳ ಕಾಲ ಯಾವುದೇ ಬ್ಯಾಂಕಿಂಗ್ ಸೇವೆಗಳು ಸಿಗುವುದು ಅನುಮಾನವಾಗಿದೆ.

    ಮಾರ್ಚ್ 15 ಮತ್ತು 16ರಂದು ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಲಾಗಿದೆ. ಆದರೆ ಅದಕ್ಕೂ ಎರಡು ದಿನಕ್ಕೆ ಮೊದಲೇ ಬ್ಯಾಂಕಿಂಗ್ ಸೇವೆಗಳು ಅಲಭ್ಯವಾಗಲಿವೆ. ಏಕೆಂದರೆ ಮಾರ್ಚ್ 13 ಎರಡನೇ ಶನಿವಾರವಾಗಿದ್ದು, ಮಾರ್ಚ್ 14 ಭಾನುವಾರದ ಕಾರಣ ಬ್ಯಾಂಕ್ ರಜೆ ಇರುತ್ತದೆ. ಅದಾಗಿ ಎರಡು ದಿನಗಳವರೆಗೂ ಬ್ಯಾಂಕ್ ನೌಕರರ ಒಕ್ಕೂಟ ಮುಷ್ಕರಕ್ಕೆ ಕರೆ ಕೊಟ್ಟಿವೆ.

    ಮುಷ್ಕರಕ್ಕೆ ಕಾರಣ ಏನು?
    ಕಳೆದ ಫೆಬ್ರವರಿಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2021-22ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದರು. ದೇಶದಲ್ಲಿ 1.75 ಲಕ್ಷ ಕೋಟಿ ರೂ. ಗಳಿಸುವ ಸರ್ಕಾರದ ಹೂಡಿಕೆಯ ಭಾಗವಾಗಿ ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವುದಾಗಿ ಘೋಷಿಸಿದ್ದರು. ಕೇಂದ್ರವು ಕಳೆದ ವರ್ಷ 10 ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ನಾಲ್ಕು ಬ್ಯಾಂಕ್‍ಗಳೊಂದಿಗೆ ವಿಲೀನಗೊಳಿಸಿತ್ತು. 2017ರಲ್ಲಿ 27 ಇದ್ದ ಸಾರ್ವಜನಿಕರ ಬ್ಯಾಂಕ್ ಗಳ ಸಂಖ್ಯೆಯು ಮಾರ್ಚ್ ವೇಳೆಗೆ 12ಕ್ಕೆ ಇಳಿಸಿತು.

  • ಮಹಿಳೆಯರಿಗೆ ಬಂಪರ್‌ – 6 ತಿಂಗಳು ಪ್ರಸೂತಿ ರಜೆಯ ಜೊತೆ 6 ತಿಂಗಳು ಮಕ್ಕಳ ಆರೈಕೆ ರಜೆ

    ಮಹಿಳೆಯರಿಗೆ ಬಂಪರ್‌ – 6 ತಿಂಗಳು ಪ್ರಸೂತಿ ರಜೆಯ ಜೊತೆ 6 ತಿಂಗಳು ಮಕ್ಕಳ ಆರೈಕೆ ರಜೆ

    ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದೇ ಬಜೆಟ್‌ ಮಂಡಿಸುತ್ತಿರುವ ಸಿಎಂ ಯಡಿಯೂರಪ್ಪ ಮಹಿಳೆಯರಿಗೆ ಬಂಪರ್‌ ಯೋಜನೆಗಳನ್ನ ಪ್ರಕಟಿಸಿದ್ದಾರೆ.

    ಸಂಜೀವಿನಿ ಯೋಜನೆಯ ಅಡಿ ಮಹಿಳಾ ಸ್ವಸಹಾಯ ಸಂಘಗಳಿಗೆ 60 ಸಾವಿರ ಮಹಿಳೆಯರಿಗೆ ಸ್ವಯಂ ಉದ್ಯೋಗದ ಅವಕಾಶ
    ಸಣ್ಣ ಸಣ್ಣ ಆಹಾರ ಪದಾರ್ಥಗಳ ಮಾರುಕಟ್ಟೆ ಸೌಲಭ್ಯ
    ಉದ್ಯೋಗಸ್ಥ ಮಹಿಳೆಯರ ಮಕ್ಕಳ ಪಾಲನೆಗೆ ಜಿಲ್ಲಾ ಮಟ್ಟದಲ್ಲಿ 2 ಶಿಶುಪಾಲನಾ ಕೇಂದ್ರ ಸ್ಥಾಪನೆ
    ಮಹಿಳಾ ಉದ್ಯಮಿಗಳಿಗೆ ಪ್ರೋತ್ಸಾಹಿಸಲು ಶೇ.4ರಷ್ಟು ಬಡ್ಡಿ ದರದಲ್ಲಿ ಸಾಲ ಸೌಲಭ್ಯ
    ವನಿತಾ ಸಂಗಾತಿ – ಗಾರ್ಮೆಂಟ್ಸ್ ಕಾರ್ಮಿಕರಿಗೆ ಉಚಿತ ಬಸ್ ಪಾಸ್

    ಎಲ್ಲಾ ಪೊಲೀಸ್ ಠಾಣೆಗಳಲ್ಲಿ ನಿರ್ಭಯ ಸಹಾಯ ಕೇಂದ್ರ
    ಮಹಿಳಾ ಸುರಕ್ಷತೆಗೆ ಬೆಂಗಳೂರಿನ 7.500 ಸಿಸಿಟಿವಿ ಅಳವಡಿಕೆ,ಮಹಿಳಾ ಸುರಕ್ಷತೆಗೆ ಇ-ಬೀಟ್ ವ್ಯವಸ್ಥೆ
    ಎಪಿಎಂಸಿಗಳಲ್ಲಿ ಮಹಿಳೆಯರಿಗೆ ಗೋದಾಮು-ಅಂಗಡಿ ನೀಡುವಲ್ಲಿ ಶೇ.10 ರಷ್ಟು ಮೀಸಲು
    ಮಹಿಳಾ ಸರ್ಕಾರಿ ನೌಕರರಿಗೆ ಚಾಲ್ತಿಯಲ್ಲಿರುವ ಪ್ರಸೂತಿ ರಜೆ 6 ತಿಂಗಳು ಜೊತೆಗೆ ಸೇವಾವಧಿಯಲ್ಲಿ 6 ತಿಂಗಳು ಮಕ್ಕಳ ಆರೈಕೆ ರಜೆ
    ಮಹಿಳಾ ಪರ ಚಿಂತನೆ ಜಾರಿಗೊಳಿಸಲು ಸಿಎಂ ಮೇಲ್ವಿಚಾರಣೆಯಲ್ಲಿ ಮಹಿಳಾ ಸಬಲೀಕರಣ ಅಭಿಯಾನ

  • ಎತ್ತಿಗೆ ಜ್ವರ ಬಂದ್ರೆ ಕೋಣಕ್ಕೆ ಬರೆ ಎಂಬಂತೆ ಸರ್ಕಾರ ವರ್ತಿಸ್ತಿದೆ- ಶಿಕ್ಷಕರಿಗೆ ರಜೆ ನೀಡದ್ದಕ್ಕೆ ಎಚ್‍ಡಿಕೆ ಆಕ್ರೋಶ

    ಎತ್ತಿಗೆ ಜ್ವರ ಬಂದ್ರೆ ಕೋಣಕ್ಕೆ ಬರೆ ಎಂಬಂತೆ ಸರ್ಕಾರ ವರ್ತಿಸ್ತಿದೆ- ಶಿಕ್ಷಕರಿಗೆ ರಜೆ ನೀಡದ್ದಕ್ಕೆ ಎಚ್‍ಡಿಕೆ ಆಕ್ರೋಶ

    ಬೆಂಗಳೂರು: ಎತ್ತಿಗೆ ಜ್ವರ ಬಂದರೆ ಕೋಣಕ್ಕೆ ಬರೆ ಎಂಬಂತೆ ಸರ್ಕಾರ ವರ್ತಿಸುತ್ತಿದೆ ಎಂದು ಶಿಕ್ಷಕರಿಗೆ ಮಧ್ಯಂತರ ರಜೆಯನ್ನು ನೀಡದ್ದಕ್ಕೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಕುಮಾರಸ್ವಾಮಿ ಶಿಕ್ಷಕರ ಪರ ಸರಣಿ ಟ್ವೀಟ್ ಮಾಡುವ ಮೂಲಕ ರಜೆ ನೀಡದ ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ. “ಎತ್ತಿಗೆ ಜ್ವರ ಬಂದರೆ ಕೋಣಕ್ಕೆ ಬರೆ ಎಂಬಂತೆ ಸರ್ಕಾರ ವರ್ತಿಸುತ್ತಿದೆ. ಕೊರೊನಾದ ಸಂಕಷ್ಟದ ಸಮಯದಲ್ಲೂ ರಾಜ್ಯದ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಶಿಕ್ಷಕರು ಶಾಲೆಗಳಿಗೆ ತೆರಳಿ ಕೆಲಸ ಮಾಡುತ್ತಿದ್ದಾರೆ” ಎಂದರು.

    “ಸರ್ಕಾರಿ ಶಾಲೆ ಶಿಕ್ಷಕರು ಕೋವಿಡ್ ಕರ್ತವ್ಯ ಹಾಗೂ ವಿದ್ಯಾಗಮ ಯೋಜನೆಯಡಿ ಈ ದಿನದ ತನಕ ಕೆಲಸ ಮಾಡಿದ್ದಾರೆ. ಆದರೆ ರಾಜ್ಯ ಸರ್ಕಾರ ಈ ವರ್ಷ ಶೈಕ್ಷಣಿಕ ವರ್ಷದ ಮಧ್ಯಂತರ ರಜೆಯನ್ನು ರದ್ದುಗೊಳಿಸಿ ಶಿಕ್ಷಕರನ್ನು ನಿಕೃಷ್ಟವಾಗಿ ನಡೆಸಿಕೊಳ್ಳುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    “ಈ ವರ್ಷದ ಅಕ್ಟೋಬರ್ 3 ರಿಂದ 26 ರವರೆಗೆ ನೀಡಬೇಕಿದ್ದ ಮಧ್ಯಂತರ ರಜೆಯನ್ನು ಸರ್ಕಾರ ರದ್ದು ಮಾಡಿರುವುದಕ್ಕೆ ಆಧಾರ ಏನು? ಶಿಕ್ಷಕರೆಂದರೆ ಸರ್ವಾಧಿಕಾರದ ಕೆಳಗೆ ದುಡಿಯುವ ದಿನಗೂಲಿ ನೌಕರರೆ? ಎಂದಿದ್ದಾರೆ.

    ಕೊರೊನಾ ಕಾರಣಕ್ಕೆ ಮಕ್ಕಳು ಶಾಲೆಗೆ ಬಾರದಿದ್ದರೂ ಶಿಕ್ಷಕರನ್ನು ಅನ್ಯ ಸೇವೆಗೆ ಯಥೇಚ್ಛವಾಗಿ ಬಳಸಲಾಗುತ್ತಿದೆ. ಆದಾಗ್ಯೂ ಮಧ್ಯಂತರ ರಜೆ ರದ್ದುಪಡಿಸಿ ಸರ್ಕಾರ ಯಾವ ಪುರುಷಾರ್ಥ ಸಾಧನೆಗೆ ಹೊರಟಿದೆ? ಎಂದು ಎಚ್‍ಡಿಕೆ ಪ್ರಶ್ನೆ ಮಾಡಿದ್ದಾರೆ.

    ಶಿಕ್ಷಕ ಸಮೂಹವನ್ನು ಗೌರವದಿಂದ ನಡೆಸಿಕೊಳ್ಳಬೇಕಾದ ಸರ್ಕಾರ, ದರ್ಪದ ಆದೇಶಗಳನ್ನು ಜಾರಿ ಮಾಡಿ ಶಾಪಕ್ಕೆ ಗುರಿಯಾಗುತ್ತಿದೆ. ‘ಹರ ಮುನಿದರೂ ಗುರು ಕಾಯ್ವನು’ ಎಂಬುದನ್ನು ಸರ್ಕಾರ ಮರೆಯಬಾರದು. ರಾಜ್ಯ ಸರ್ಕಾರ ಅಕ್ಟೋಬರ್ 1ರಂದು ಮಧ್ಯಂತರ ರಜಾ ರದ್ದುಪಡಿಸಿ ಹೊರಡಿಸಿರುವ ಆದೇಶವನ್ನು ಕೂಡಲೇ ವಾಪಸ್ ಪಡೆದು ಶಿಕ್ಷಕರಿಗೆ ಮಧ್ಯಂತರ ರಜೆ ಘೋಷಿಸಬೇಕು” ಎಂದು ಕುಮಾರಸ್ವಾಮಿ ಸರ್ಕಾರಕ್ಕೆ ಆಗ್ರಹಿಸಿದರು.

  • ಮುನ್ನೆಚ್ಚರಿಕಾ ಕ್ರಮವಾಗಿ ಅರಸೀಕೆರೆಯಲ್ಲಿ ಗಾರ್ಮೆಂಟ್ಸ್‌ಗಳಿಗೆ ರಜೆ

    ಮುನ್ನೆಚ್ಚರಿಕಾ ಕ್ರಮವಾಗಿ ಅರಸೀಕೆರೆಯಲ್ಲಿ ಗಾರ್ಮೆಂಟ್ಸ್‌ಗಳಿಗೆ ರಜೆ

    ಹಾಸನ: ಜಿಲ್ಲೆಯ ಅರಸೀಕೆರೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಕೆಲವೊಂದು ಗಾರ್ಮೆಂಟ್ಸ್‌ನವರು ಇಂದಿನಿಂದ ತಮ್ಮ ನೌಕರರಿಗೆ ಕೆಲವು ದಿನಗಳ ಕಾಲ ರಜೆ ನೀಡಿ ಮನೆಗೆ ಕಳುಹಿಸಿದ್ದಾರೆ.

    ಅಷ್ಟೇ ಅಲ್ಲದೇ ಅರಸೀಕೆರೆ ಡಿಪೋದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕೆಲವು ಕೆಎಸ್‌ಆರ್‌ಟಿಸಿ ಸಿಬ್ಬಂದಿಗೂ ಕೊರೊನಾ ಪಾಸಿಟಿವ್ ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಅರಸೀಕೆರೆ ಡಿಪೋದಿಂದ ಸಂಚರಿಸುತ್ತಿದ್ದ ಬಸ್‍ಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.

    ಈ ಬಗ್ಗೆ ಶುಕ್ರವಾರ ರಾತ್ರಿಯಷ್ಟೇ ಸಭೆ ನಡೆಸಿದ್ದ ಅರಸೀಕೆರೆ ಶಾಸಕ ಶಿವಲಿಂಗೇಗೌಡ ಕೊರೊನಾ ವಿರುದ್ಧದ ಹೋರಾಟಕ್ಕೆ ಸ್ವಯಂಪ್ರೇರಿತವಾಗಿ ಸಹಕರಿಸುವಂತೆ ಮನವಿ ಮಾಡಿದ್ದರು. ಇದೀಗ ಕೆಲವು ಗಾರ್ಮೆಂಟ್ಸ್ ಮಾಲೀಕರು ಮತ್ತು ಅರಸೀಕೆರೆ ಡಿಪೋ ಅಧಿಕಾರಿಗಳು ಶಾಸಕರ ಮನವಿಗೆ ಸ್ಪಂದಿಸಿ ತಮ್ಮ ಕೆಲಸಗಾರರಿಗೆ ತಾತ್ಕಾಲಿಕವಾಗಿ ರಜೆ ನೀಡಿದ್ದಾರೆ.