Tag: Vaishno Devi pilgrims

  • ಜಮ್ಮು-ಕಾಶ್ಮೀರದಲ್ಲಿ ಭೂ ಕುಸಿತ; ಇಬ್ಬರು ವೈಷ್ಣೋದೇವಿ ಯಾತ್ರಿಕರ ಸಾವು

    ಜಮ್ಮು-ಕಾಶ್ಮೀರದಲ್ಲಿ ಭೂ ಕುಸಿತ; ಇಬ್ಬರು ವೈಷ್ಣೋದೇವಿ ಯಾತ್ರಿಕರ ಸಾವು

    ಕತ್ರಾ/ಜಮ್ಮು: ಜಮ್ಮು (Jammu) ಮತ್ತು ಕಾಶ್ಮೀರದಲ್ಲಿ (Kashmir) ಭೂಕುಸಿತ ಸಂಭವಿಸಿದ್ದು, ಇಬ್ಬರು ವೈಷ್ಣೋದೇವಿ (Vaishnodevi) ಯಾತ್ರಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ.

    ಇಲ್ಲಿನ ರಿಯಾಸಿ (Reasi) ಜಿಲ್ಲೆಯ ವೈಷ್ಣೋದೇವಿ ದೇಗುಲದ ಹೊಸ ಟ್ರ್ಯಾಕ್‌ ನಲ್ಲಿ ಈ ಘಟನೆ ಸಂಭವಿಸಿದ್ದು, ಇಬ್ಬರು ಯಾತ್ರಿಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಉಡುಪಿ ಶ್ರೀ ಕೃಷ್ಣನ ದರ್ಶನ ಪಡೆದ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್

    ಭವನದಿಂದ ಮೂರು ಕಿಮೀ ದೂರದಲ್ಲಿ ಮಧ್ಯಾಹ್ನ 2:30 ಸುಮಾರಿಗೆ ಭೂಕುಸಿತ ಸಂಭವಿಸಿದ್ದು, ಓವರ್‌ಹೆಡ್ ಟ್ಯಾಂಕ್‌ನ ಕಬ್ಬಿಣದ ರಚನೆಯ ಒಂದು ಭಾಗ ಹಾನಿಯಾಗಿದ್ದು, ಅದರ ಕೆಳಗೆ ಯಾತ್ರಿಕರು ಸಿಲುಕಿಕೊಂಡಿದ್ದರು ಎಂದು ಹೇಳಿದರು.

    ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದು, ಓರ್ವ ಬಾಲಕಿಗೆ ತೀವ್ರ ಗಾಯಗಳಾಗಿವೆ ಎಂದು ರಿಯಾಸಿಯ ಉಪ ಆಯುಕ್ತ ವಿಶೇಷ್ ಪೌಲ್ ಮಹಾಜನ್ ಪ್ರಾಥಮಿಕ ವರದಿಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: MUDA Scam | ಸಿಎಂ ಸಿದ್ದರಾಮಯ್ಯಗೆ ಮಧ್ಯಂತರ ರಿಲೀಫ್ –‌ ಸೆ.9ಕ್ಕೆ ಮತ್ತೆ ವಿಚಾರಣೆ ಮುಂದೂಡಿಕೆ!

    ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ನಾಗರೀಕ ಆಡಳಿತ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಟ್ರ್ಯಾಕಿನಿಂದ ಯಾತ್ರಿಕರ ಯಾತ್ರೆ ಸ್ಥಗಿತಗೊಳಿಸಿದ ಕೂಡಲೇ ರಕ್ಷಣಾ ಕಾರ್ಯ ಪ್ರಾರಂಭಿಸಲಾಗಿದೆ. ಘಟನೆಯ ಬಗ್ಗೆ ಸದ್ಯದಲ್ಲೇ ಹೆಚ್ಚಿನ ವಿವರಗಳನ್ನು ತಿಳಿಸುತ್ತೇವೆ ಎಂದು ಹೇಳಿದ್ದಾರೆ.

    2022ರ ಹೊಸ ವರ್ಷದಲ್ಲಿ ಇದೇ ದೇಗುಲದಲ್ಲಿ ಕಾಲ್ತುಳಿತ ಸಂಭವಿಸಿ 12 ಮಂದಿ ಸಾವನ್ನಪ್ಪಿದ್ದು 16 ಮಂದಿ ಗಾಯಗೊಂಡಿದ್ದರು. ಇದನ್ನೂ ಓದಿ: ಎಕ್ಸ್‌ಪ್ರೆಸ್‌ ವೇಯಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಸರ್ವಿಸ್ ರಸ್ತೆಗೆ ಉರುಳಿದ ಕಾರು

  • ಬಸ್‌ನಲ್ಲಿ ಬೆಂಕಿ ದುರಂತ – ವೈಷ್ಣೋದೇವಿ ಯಾತ್ರೆಗೆ ತೆರಳಿದ್ದ ನಾಲ್ವರು ಸಾವು

    ಬಸ್‌ನಲ್ಲಿ ಬೆಂಕಿ ದುರಂತ – ವೈಷ್ಣೋದೇವಿ ಯಾತ್ರೆಗೆ ತೆರಳಿದ್ದ ನಾಲ್ವರು ಸಾವು

    ಶ್ರೀನಗರ: ಇಲ್ಲಿನ ವೈಷ್ಣೋದೇವಿ ಯಾತ್ರೆಗೆ ತೆರಳುತ್ತಿದ್ದ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ನಾಲ್ವರು ಮೃತಪಟ್ಟಿರುವ ಘಟನೆ ಜಮ್ಮುವಿನ ಕತ್ರಾಬಳಿ ನಡೆದಿದೆ. ದುರಂತದಲ್ಲಿ 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ.

    ಕತ್ರಾದಿಂದ ಜಮ್ಮುವಿಗೆ ತೆರಳುತ್ತಿದ್ದ ಬಸ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು 4 ಮಂದಿ ಮೃತಪಟ್ಟಿದ್ದಾರೆ. ಕತ್ರಾದಿಂದ ಸುಮಾರು 3 ಕಿಲೋಮೀಟರ್ ದೂರದಲ್ಲಿರುವ ಪ್ರದೇಶದ ಬಳಿ ಬೆಂಕಿ ಹೊತ್ತಿಕೊಂಡಿದೆ. ಇದನ್ನೂ ಓದಿ; ಚಿನ್ನ, ಬೆಳ್ಳಿಯಲ್ಲ ಈಗ ನಿಂಬೆಹಣ್ಣಿನ ಮೇಲೆ ಕಳ್ಳರ ಕಣ್ಣು- 12 ಮೂಟೆ ನಿಂಬೆಹಣ್ಣು ಕಳವಾಗಿದ್ದೇಗೆ?

    BUS FIRING

    ವೈಷ್ಣೋದೇವಿ ದೇಗುಲಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಕತ್ರಾ ಮೂಲ ಶಿಬಿರವಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ ಠಾಕ್ರೆ ಬೊಗಳುವ ನಾಯಿ – ಪರೋಕ್ಷವಾಗಿ ಅಕ್ಬರುದ್ದೀನ್ ಟಾಂಗ್

    ಸಾವುಗಳನ್ನು ಖಚಿತಪಡಿಸಿದ ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ADGP) ಮುಖೇಶ್ ಸಿಂಗ್, ಯಾವುದೇ ಸ್ಫೋಟಕ ಬಳಸಿರುವುದು ಆರಂಭಿಕ ತನಿಖೆಯಲ್ಲಿ ಕಂಡುಬಂದಿಲ್ಲ. ಅದಕ್ಕಾಗಿ ವಿಧಿವಿಜ್ಞಾನ ತಂಡ ಬೆಂಕಿ ಹೊತ್ತಿಕೊಂಡಿರುವ ನಿಖರ ಕಾರಣ ಪರಿಶೀಲಿಸುತ್ತಿದೆ ಎಂದು ಹೇಳಿದ್ದಾರೆ.

    ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಮೃತರ ಕುಟುಂಬಗಳಿಗೆ ಸಂತಾಂಪ ಸೂಚಿಸಿದ್ದು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡಬೇಕು ಎಂದೂ ಸೂಚಿಸಿದ್ದಾರೆ.

    ವೈಷ್ಣೋದೇವಿ ಯಾತ್ರೆಗೆ ತೆರಳಿದ್ದ ಬಸ್‌ಗಳಲ್ಲಿ ಈಗಾಗಲೇ ಇದು 2ನೇ ದುರಂತವಾಗಿದೆ. ಜನವರಿ 1ರಂದು ಕಾಲ್ತುಳಿತಕ್ಕೆ ಸಿಕ್ಕಿ 12 ಯಾತ್ರಿಕರು ಸಾವನ್ನಪ್ಪಿದರು. 20 ಮಂದಿ ಗಾಯಗೊಂಡಿದ್ದರು.